Tag: CC Patel

  • ಕೇಂದ್ರದಿಂದ ರಾಜ್ಯದ ರೈಲ್ವೆಗೆ ಬಂಪರ್ ಕೊಡುಗೆ: ಸಿ.ಸಿ. ಪಾಟೀಲ್ ಅಭಿನಂದನೆ

    ಕೇಂದ್ರದಿಂದ ರಾಜ್ಯದ ರೈಲ್ವೆಗೆ ಬಂಪರ್ ಕೊಡುಗೆ: ಸಿ.ಸಿ. ಪಾಟೀಲ್ ಅಭಿನಂದನೆ

    ಬೆಂಗಳೂರು: ನೈರುತ್ಯ ರೈಲ್ವೆ ವಲಯಕ್ಕೆ ಪ್ರಸಕ್ತ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಅತೀ ಹೆಚ್ಚು ಅಂದರೆ 6,900 ಕೋಟಿ ರೂ.ಗಳ ಅನುದಾನವನ್ನು ಘೋಷಿಸಿ ಕರ್ನಾಟಕಕ್ಕೆ ಸಿಂಹಪಾಲು ನೀಡಿರುವುದರಿಂದ ನಮ್ಮ ರಾಜ್ಯದ ರೈಲ್ವೆ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಬಹುದೊಡ್ಡ ಉಡುಗೊರೆ ನೀಡಿದಂತಾಗಿದೆ ಎಂದು ಲೋಕೋಪಯೋಗಿ ಸಚಿವರಾದ ಸಿ.ಸಿ. ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.

    ಇಷ್ಟು ದೊಡ್ಡ ಪ್ರಮಾಣದ ಅನುದಾನ ದೊರೆತಿರುವುದು ನೈರುತ್ಯ ರೈಲ್ವೆಯ ಇತಿಹಾಸದಲ್ಲೇ ಹೊಸ ದಾಖಲೆಯಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಶೇಕಡ 43ರಷ್ಟು ಹೆಚ್ಚಿನ ಅನುದಾನ ಘೋಷಣೆಯಾಗಿದ್ದು, ಈ ಬಗ್ಗೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವರು ಹಾಗೂ ವಿಶೇಷ ಪರಿಶ್ರಮ ವಹಿಸಿರುವ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದಿಸಿದ್ದಾರೆ. ಇದನ್ನೂ ಓದಿ: ನಕ್ಸಲ್ ನಿಗ್ರಹ ದಳ ಸಿಬ್ಬಂದಿಗೆ ವಿಶೇಷ ಆಹಾರ ಭತ್ಯೆ ಹೆಚ್ಚಿಸಿದ ಸರ್ಕಾರ

    ಈ ಹೆಚ್ಚಿನ ಅನುದಾನದಿಂದಾಗಿ ನೂತನ ರೈಲ್ವೆ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ, ರೈಲ್ವೆ ಮಾರ್ಗಗಳ ಸಾಮರ್ಥ್ಯ ವೃದ್ಧಿಗೆ, ಹೊಸ ರೈಲುಗಳ ಸಂಚಾರಕ್ಕೆ ಮತ್ತು ಮಾರ್ಗಗಳ ವಿದ್ಯುದೀಕರಣಕ್ಕೆ ಅನುಕೂಲವಾಗಲಿದೆ. ಉತ್ತರ ಕರ್ನಾಟಕಕ್ಕೆ ಸೂಪರ್ ಕೊಡುಗೆ ಈ ಬಾರಿ ಉತ್ತರ ಕರ್ನಾಟಕ ಭಾಗದ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸಲು ಆದ್ಯತೆ ನೀಡಿರುವುದು ವಿಶೇಷವಾಗಿದೆ ಎಂದು ಪ್ರಶಂಸಿಸಿದ್ದಾರೆ.

    ಧಾರವಾಡ ಕಿತ್ತೂರು ಬೆಳಗಾವಿ ಹೊಸ ಮಾರ್ಗಕ್ಕೆ ರೂ. 20 ಕೋಟಿ, ಗದಗ – ವಾಡಿ ಹೊಸ ಮಾರ್ಗಕ್ಕೆ ರೂ.187 ಕೋಟಿ, ಬಾಗಲಕೋಟೆ – ಕುಡಚಿ, ತುಮಕೂರು-ದಾವಣಗೆರೆ, ಶಿವಮೊಗ್ಗ-ರಾಣೆಬೆನ್ನೂರು ಈ 3 ಹೊಸ ಮಾರ್ಗಗಳಿಗೆ ತಲಾ 50 ಕೋಟಿ ರೂ.ಗಳನ್ನು ಹಂಚಿಕೆ ಮಾಡಿರುವುದು, ಗದಗ್ – ಹೂಟಗಿ ಡಬ್ಲಿಂಗ್ ಲೈನ್‍ಗಾಗಿ 200 ಕೋಟಿ ರೂ. ಹಾಗೂ ಹುಬ್ಬಳ್ಳಿ- ಚಿಕ್ಕಜಾಜೂರು ಡಬ್ಲಿಂಗ್ ಲೈನ್‍ಗಾಗಿ 210 ಕೋಟಿ ರೂಪಾಯಿ ಅನುದಾನ ದೊರೆತಿರುವುದು ಸೇರಿದಂತೆ ಅನೇಕ ಯೋಜನೆಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಕೇಂದ್ರ ಸರ್ಕಾರವು ಕರ್ನಾಟಕದ ಮೇಲಿನ ತನ್ನ ಮಮತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಶ್ಲಾಘಿಸಿದ್ದಾರೆ.

    train

    ಇದಲ್ಲದೇ ದೇಶಾದ್ಯಂತ 400 ವಂದೇ ಭಾರತ ರೈಲುಗಳ ಸಂಚಾರ ಪ್ರಾರಂಭವಾಗಲಿದ್ದು, ಇವುಗಳಲ್ಲಿ ಒಂದು ರೈಲನ್ನು ಧಾರವಾಡ ಮತ್ತು ಬೆಂಗಳೂರು ನಡುವೆ ಸಂಚರಿಸಲು ಅವಕಾಶ ಮಾಡಿಕೊಡಬೇಕೆಂದು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಈಗಾಗಲೇ ಮನವಿ ಮಾಡಿಕೊಂಡಿದ್ದು, ಇದಕ್ಕೆ ಕೇಂದ್ರವು ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದ ಇದು ನಮ್ಮ ರಾಜ್ಯಕ್ಕೆ ದೊಡ್ಡ ವರದಾನವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ನಾಳೆಯಿಂದ ಥಿಯೇಟರ್‌ ಹೌಸ್‌ ಫುಲ್‌- ಸರ್ಕಾರದಿಂದ ಅನುಮತಿ

  • ಸಿ.ಸಿ.ಪಾಟೀಲ್, ಎಚ್.ಕೆ.ಪಾಟೀಲ್ ನಡುವೆ ತಾರಕಕ್ಕೇರಿದ ವಾಕ್ ಸಮರ

    ಸಿ.ಸಿ.ಪಾಟೀಲ್, ಎಚ್.ಕೆ.ಪಾಟೀಲ್ ನಡುವೆ ತಾರಕಕ್ಕೇರಿದ ವಾಕ್ ಸಮರ

    – ಟ್ರ್ಯಾಕ್ಟರ್  ರ‍್ಯಾಲಿ ಬಗ್ಗೆ ನಾಯಕರ ನಡುವೆ ಮಾತಿನ ಚಕಮಕಿ

    ಗದಗ: ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹಾಗೂ ಕಾಂಗ್ರೆಸ್ ನಾಯಕ ಎಚ್.ಕೆ.ಪಾಟೀಲ್ ನಡುವಿನ ವಾಕ್ ಸಮರ ತಾರಕಕ್ಕೇರಿದೆ.

    ಟ್ರ್ಯಾಕ್ಟರ್ ರ‍್ಯಾಲಿಯೊಂದಿಗೆ ಡಿಸಿ ಕಚೇರಿಗೆ ನುಗ್ಗಿರುವ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ.ಪಾಟೀಲ್ ವಿರುದ್ಧ ಸಚಿವ ಸಿ.ಸಿ.ಪಾಟೀಲ್ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದರು. ಇಬ್ಬರೂ ಉತ್ತರಕ್ಕೆ, ಪ್ರತ್ಯುತ್ತರ ನೀಡುವುದು ಜೋರಾಗಿಯೇ ನಡೆಯುತ್ತಿತ್ತು. ಸಿ.ಸಿ.ಪಾಟೀಲ್ ಅವರಿಂದ ಹೆದರಿಸುವ ಪ್ರವೃತ್ತಿ ಆರಂಭವಾಗಿದೆ. ದೆಹಲಿಯಲ್ಲಿ ರೈತರನ್ನು ಪಾಕಿಸ್ತಾನಿ, ಖಲಿಕಿಸ್ತಾನಿ ಅಂದರು. ಅದೇ ಆರೋಪವನ್ನು ಇಲ್ಲಿ ಮಾಡುವ ಪ್ರಯತ್ನವನ್ನು ಸರ್ಕಾರದ ಸಚಿವರು ಮಾಡುತ್ತಿದ್ದಾರೆ ಎಂದು ಎಚ್.ಕೆ.ಪಾಟೀಲ್ ಆರೋಪಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಟ್ರ್ಯಾಕ್ಟರ್ ರ‍್ಯಾಲಿಯಿಂದ ಗದಗವನ್ನು ದೆಹಲಿ ಆಗಲು ಬಿಡಲ್ಲ: ಸಿ.ಸಿ ಪಾಟೀಲ್

    ಮನವಿ ನೀಡಲು ಬಂದ ವೇಳೆ ಡಿಸಿ ಇರಲಿಲ್ಲ. ಆ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವ ಬದಲು, ಪೊಲೀಸರಿಗೆ, ಪ್ರತಿಭಟನಾ ನಿರತ ರೈತರನ್ನು ಹೆದರಿಸುತ್ತಿದ್ದಾರೆ. ನಾವು ರೈತರು ಹೆದರಲ್ಲ. ಗದಗಿನ ಗಂಡು ಭೂಮಿಯಿಂದ ಬಂದವರು ಹೆದರಿ ಓಡಿ ಹೋಗುತ್ತಾರೆ ಎಂದುಕೊಂಡಿದ್ದೀರಾ? ಟ್ರ್ಯಾಕ್ಟರ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದರೆ ತಪ್ಪಾ? ಮರಳು ದಂಧೆಕೋರರು, ಮದ್ಯ ಮಾರಾಟಗಾರರು, ಇನ್ಯಾರೋ ಕಾರ್ ತೆಗೆದುಕೊಂಡು ಡಿಸಿ ಕಚೇರಿ ಒಳಗೆ ಬರುತ್ತಾರೆ. ಅದೇ ರೈತರು ಡಿಸಿ ಕಚೇರಿಗೆ ಬರುವುದು ತಪ್ಪಾ ಎಂದು ತಿರುಗೇಟು ನೀಡಿದರು.

    ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಸಹ ಹರಿಹಾಯ್ದು, ನನ್ನ ಟೀಕೆಗೆ ಸ್ಪಂದಿಸಿದ್ದಾರೆ ಎಂಬ ಸಮಾಧಾನವಿದೆ. ಆದರೆ ಅರ್ಧ ಟೀಕೆಗೆ ಸ್ಪಂದಿಸುವುದು, ಇನ್ನು ಅರ್ಧ ಟೀಕೆಗೆ ಸ್ಪಂದಿಸದೇ ಇರುವುದು ಸರಿಯಲ್ಲ. ನಿಮ್ಮ ಸರ್ಕಾರ ನುಡಿದಂತೆ ನಡೆಯಲಿಲ್ಲಾ, ಮೋದಿ ಅವರು ವಚನ ಭ್ರಷ್ಠರು ಎಂಬ ಆರೋಪದ ಬಗ್ಗೆ ಸ್ಪಷ್ಟನೆ ನೀಡಲಿಲ್ಲ. ಇದನ್ನು ನೋಡಿದರೆ ನಿಮ್ಮ ಸರ್ಕಾರ ಮಾತು ತಪ್ಪಿದ ಭ್ರಷ್ಠ ಸರ್ಕಾರ ಎಂದು ಒಪ್ಪಿಕೊಂಡಂತೆ ಎಂದು ಹರಿಹಾಯ್ದರು.

  • ಸಚಿವರ ಅಭಿಮಾನಿಗಳಿಂದ ಸುಳ್ಳು ಸುದ್ದಿ- ಆತಂಕದಲ್ಲಿ ಜನ

    ಸಚಿವರ ಅಭಿಮಾನಿಗಳಿಂದ ಸುಳ್ಳು ಸುದ್ದಿ- ಆತಂಕದಲ್ಲಿ ಜನ

    – ಸರ್ಕಾರ ಪ್ರಕಟಿಸುವ ಮುನ್ನವೇ, ಮಾಹಿತಿ ಬಹಿರಂಗ

    ಗದಗ: ಬುಧವಾರ ಜಿಲ್ಲೆನಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ಧೃಢಪಟ್ಟಿಲ್ಲ. ಆದರೂ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಫೇಸ್‌ಬುಕ್ ಫಾಲೋವರ್ಸ್ ಪಾಸಿಟಿವ್ ಕೇಸ್ ಇದೆ ಎಂದು ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ.

    ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲೆಯ ಜನತೆ ತೀವ್ರ ಆತಂಕಕ್ಕೊಳಗಾಗಿದ್ದು, ಭಯಭೀತರಾಗಿದ್ದಾರೆ. ಕೊರೊನಾ ವೈರಸ್ ಪ್ರಕರಣದ ಕುರಿತು ಇಂದಿನ ಮೀಡಿಯಾ ಬುಲೆಟಿನ್ ನಲ್ಲಿಪ್ರಕಟವಾಗಿಲ್ಲ. ಆದರೆ ಫೇಸ್‌ಬುಕ್ ನಲ್ಲಿ ಹಾಕಿದ್ದಾರೆ. ಇದು ಸುಳ್ಳು ಸುದ್ದಿಯಾಗಿದ್ದು, ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ.

    ಫೇಸ್‌ಬುಕ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಅವರನ್ನು ಟ್ಯಾಗ್ ಮಾಡಿ, ಕನಿಷ್ಠ 6 ಜನ ಅವರ ಅಭಿಮಾನಿಗಳು ಕೊರೊನಾ ಪಾಸಿಟಿವ್ ಪತ್ತೆ ಎಂದು ಬರೆದಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನರಗುಂದ ತಾಲೂಕಿನ ಕಲಕೇರಿ ವ್ಯಕ್ತಿಯೋರ್ವನಿಗೆ ಸೋಂಕು ಪತ್ತೆ ಆಗಿದೆ. ಸಚಿವರು ಹೋಗಿ ಪರಶೀಲಿಸಿ ಅಧಿಕಾರಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚಿಸಿದ್ದಾರೆ. ಇನ್ನಾದರೂ ತಾಲೂಕಿನ ಜನ ಅಲರ್ಟ್ ಆಗಿರಿ ಎಂದು ಸಚಿವರ ಹಿಂಬಾಲಕರು ಪೊಸ್ಟ್ ಮಾಡಿದ್ದಾರೆ.

    ಇದು ಕಲಕೇರಿ ಜನರಿಗೆ ಮಾತ್ರವಲ್ಲ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ. ಯಾರಿಗೂ ಗೊತ್ತಾಗದ ಮಾಹಿತಿ ಸಚಿವ ಸಿ.ಸಿ.ಪಾಟೀಲ್ ಅವರ ಅಭಿಮಾನಿಗಳಿಗೆ ಹೇಗೆ ಗೊತ್ತಾಗುತ್ತದೆ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

    ಈ ಕುರಿತು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಪ್ರತಿಕ್ರಿಯಿಸಿದ್ದು, ಕೊರೊನಾ ಕುರಿತು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಈ ಹಿಂದೆಯೇ ಸಾಕಷ್ಟು ಬಾರಿ ಈ ಕುರಿತು ಅರಿವು ಮೂಡಿಸಲಾಗಿದೆ. ಅದರೂ ಸಚಿವರ ಅಭಿಮಾನಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.

  • ಅಕ್ರಮ ಮರಳುಗಾರಿಕೆಗೆ ಎಸ್.ಪಿ, ಡಿ.ಸಿಗಳೇ ಹೊಣೆ: ಸಚಿವ ಸಿಸಿ ಪಾಟೀಲ್

    ಅಕ್ರಮ ಮರಳುಗಾರಿಕೆಗೆ ಎಸ್.ಪಿ, ಡಿ.ಸಿಗಳೇ ಹೊಣೆ: ಸಚಿವ ಸಿಸಿ ಪಾಟೀಲ್

    ರಾಯಚೂರು: ರಾಜ್ಯದಲ್ಲಿ ಮರಳಿನ ಸಮಸ್ಯೆ ಕಾಡುತ್ತಿದೆ. ಎಲ್ಲರಿಗೂ ಮರಳು ಸಿಗುವಂತೆ ಮರಳು ನೀತಿ ಜಾರಿಗೆ ತರಲಾಗುವುದು ಅಂತ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ ಸಿ ಪಾಟೀಲ್ ಹೇಳಿದ್ದಾರೆ.

    ರಾಯಚೂರಿನಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ಬಂದಿದ್ದ ವೇಳೆ ಮಾತನಾಡಿದ ಸಿಸಿ ಪಾಟೀಲ್, ಗಣಿ ಇಲಾಖೆಗೆ ಮರಳಿನ ಸಮಸ್ಯೆ ಕಾಡುತ್ತಿದೆ. ಅಕ್ರಮ ಮರಳುಗಾರಿಕೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ಯತ್ನಿಸುತ್ತಿದ್ದು, ಇದಕ್ಕೆ ಇಲ್ಲಿನ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಅಕ್ರಮ ತಡೆಗೆ ವಿಶೇಷ ತಂಡ ರಚಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಮರಳುಗಾರಿಕೆ ಬಗ್ಗೆ ಅಧ್ಯಯನಕ್ಕೆ ಅಧಿಕಾರಿಗಳ ತಂಡವನ್ನ ತೆಲಂಗಾಣಕ್ಕೆ ಕಳುಹಿಸಲಾಗುವುದು ಎಂದರು.

    ಮಾನ್ವಿಯಲ್ಲಿ ಮರಳು ಲಾರಿ ತಡೆಯಲು ಹೋದ ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಸಾವು ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ. ಜಿಲ್ಲಾಧಿಕಾರಿಯಿಂದ ಹೆಚ್ಚಿನ ಮಾಹಿತಿ ಪಡೆದು ಕ್ರಮ ತೆಗೆದುಕೊಳ್ಳುತ್ತೇನೆ. ಹಟ್ಟಿ ಚಿನ್ನದ ಗಣಿ ಹಾಗು ರಾಯಚೂರಿನಲ್ಲಿನ ಮರಳುಗಾರಿಕೆ ಬಗ್ಗೆ ಪ್ರವಾಸ ಮಾಡಲಿದ್ದೇನೆ ಅಂತ ತಿಳಿಸಿದರು.

    ಇನ್ನೂ ರಾಜ್ಯದಲ್ಲಿ ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಮುಖ್ಯಮಂತ್ರಿಗಳು ಹಾಗು ಕೋರ್ ಕಮಿಟಿ ನಿರ್ಧಾರ ಕೈಗೊಳ್ಳುತ್ತೆ. ಸಂಪುಟ ವಿಸ್ತರಣೆ ಬಗ್ಗೆ ನಾನು ಮಾತನಾಡುವುದಿಲ್ಲ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಅಂತ ಕೈ ಮುಗಿದರು.