Tag: CCB officers

  • ಬೆಳ್ಳಂಬೆಳಗ್ಗೆ ತುಪ್ಪದ ಬೆಡಗಿಗೆ ಶಾಕ್ – ರಾಗಿಣಿ ಮನೆಗೆ ಸಿಸಿಬಿ ದಾಳಿ

    ಬೆಳ್ಳಂಬೆಳಗ್ಗೆ ತುಪ್ಪದ ಬೆಡಗಿಗೆ ಶಾಕ್ – ರಾಗಿಣಿ ಮನೆಗೆ ಸಿಸಿಬಿ ದಾಳಿ

    ಬೆಂಗಳೂರು: ಬೆಳ್ಳಂಬೆಳಗ್ಗೆ ತುಪ್ಪದ ಬೆಡಗಿ ನಟಿ ರಾಗಿಣಿ ಮನೆಯ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

    ಸರ್ಚ್ ವಾರೆಂಟ್ ಪಡೆದು ಯಲಹಂಕದಲ್ಲಿರುವ ನಟಿ ರಾಗಿಣಿ ಮನೆ ಮೇಲೆ ಪೊಲೀಸರು ಮತ್ತು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐದರಿಂದ ಆರು ಮಂದಿ ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಕೇಸ್ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ. ರಾಗಿಣಿ ಮನೆಯಲ್ಲಿಯೇ ಇದ್ದು, ಸಿಸಿಬಿ ಕೋರ್ಟಿನಿಂದ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ವಿಚಾರಣೆಗೆ ಹಾಜರಾಗದಿರಲು ಪೊಲೀಸರಿಗೆ ರಾಗಿಣಿ ನೀಡಿದ ಕಾರಣ

    ನಟಿ ರಾಗಿಣಿ ಮನೆ ಮೇಲೆ ರೈಡ್ ಮಾಡಿರೋದಾಗಿ ಅಪರಾಧ ವಿಭಾಗದ ಜಂಟಿ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಗುರುವಾರ ರಾಗಿಣಿ ಆಪ್ತ ರವಿಶಂಕರ್ ನನ್ನ ಸಿಸಿಬಿ ಬಂಧಿಸಿದ್ದರು. ಆತ ನೀಡಿದ ಮಾಹಿತಿ ಆಧಾರದ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ರಾಗಿಣಿಗೆ ಮನೆಗೆ ಸಿಸಿಬಿ ಅಧಿಕಾರಿಗಳು ಆಗಮಿಸಿದ್ದಾರೆ. ಇದನ್ನೂ ಓದಿ: ಸಿಸಿಬಿ ನೋಟಿಸ್ ನೀಡಿದ್ದು ನಿಜ: ರಾಗಿಣಿ ದ್ವಿವೇದಿ

    ಸಿಸಿಬಿ ಅಧಿಕಾರಿಗಳು ನಟಿ ರಾಗಿಣಿಯ ಇಡೀ ಮನೆಯನ್ನು ತಪಾಸಣೆ ನಡೆಸುತ್ತಿದ್ದಾರೆ. ಇದೇ ವೇಳೆ ರಾಗಿಣಿಗೆ ಸೇರಿದ ಬರೋಬ್ಬರಿ ನಾಲ್ಕು ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಚಲಾವಣೆ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಮನೆ ತಪಾಸಣೆ ಮಾಡುತ್ತಿದ್ದಾರೆ. ಇದೀಗ ನಟಿ ರಾಗಿಣಿ ಬಂಧನದ ಭೀತಿಯಲ್ಲಿದ್ದಾರೆ.

    ಗುರುವಾರವೇ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿದ್ದರು. ಆದರೆ ಕೊರೊನಾ ರೋಗಿಗಳಿಗೆ ಸಹಾಯ ಮಾಡುತ್ತಿದ್ದು, ಪ್ಲಾಸ್ಮಾ ಥೆರಪಿ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇನೆ. ಈ ಕಾರ್ಯಕ್ರಮ ಮೊದಲೇ ನಿಗದಿಯಾಗಿದ್ದು, ಬಿಟ್ಟು ಬಂದ್ರೆ ತೊಂದರೆ ಆಗಲಿದೆ. ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ ಎಂದು ವಕೀಲರ ಮೂಲಕ ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದರು. ಆದರೆ ಸೋಮವಾರ ಬೇಡ, ನಾಳೆಯ ಬನ್ನಿ ಅನ್ನೋ ಸಂದೇಶವನ್ನು ಸಿಸಿಬಿ ಅಧಿಕಾರಿಗಳು ರವಾನಿಸಿದ್ದರು.

  • ಔಷಧಿ ಅಂಗಡಿ ಮೇಲೆ ದಾಳಿ- 10 ಲಕ್ಷದ ನಕಲಿ ಸ್ಯಾನಿಟೈಸರ್, ಥರ್ಮೋ ಮೀಟರ್ ವಶಕ್ಕೆ

    ಔಷಧಿ ಅಂಗಡಿ ಮೇಲೆ ದಾಳಿ- 10 ಲಕ್ಷದ ನಕಲಿ ಸ್ಯಾನಿಟೈಸರ್, ಥರ್ಮೋ ಮೀಟರ್ ವಶಕ್ಕೆ

    – ಇಬ್ಬರನ್ನು ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳು

    ಬೆಂಗಳೂರು: ನಕಲಿ ಥರ್ಮೋ ಮೀಟಸ್ ಹಾಗೂ ಸ್ಯಾನಿಟೈಸರ್ ಸಂಗ್ರಹಿಸಿಟ್ಟುಕೊಂಡಿದ್ದ ಔಷಧಿ ಅಂಗಡಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, 10 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ನಗರದ ರಾಜಾಜಿನಗರದ ಔಷಧಿ ಅಂಗಡಿಯೊಂದರಲ್ಲಿ ನಕಲಿ ಥರ್ಮೋ ಮೀಟರ್ ಹಾಗೂ ಸ್ಯಾನಿಟೈಸರ್ ಗಳನ್ನು ಸಂಗ್ರಹಿಸಿಡಲಾಗಿದ್ದ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯವಸ್ಥಾಪಕ ಶಿವಕುಮಾರ್ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

    ಐದು ಸಾವಿರ ಸ್ಯಾನಿಟೈಸರ್ ಮತ್ತು ಹತ್ತು ಸಾವಿರ ಥರ್ಮೋ ಮೀಟರ್ ಸೇರಿ ಒಟ್ಟು 10 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಗ್ಯ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಥರ್ಮೋ ಮೀಟರ್ ಹಾಗೂ ಸ್ಯಾನಿಟೈಸರ್ ಅವಶ್ಯವಿರುವ ಸಂದರ್ಭವನ್ನು ಬಳಸಿಕೊಂಡ ದುಷ್ಕರ್ಮಿಗಳು ನಕಲಿ ವಸ್ತುಗಳ ತಯಾರಿಕೆಗೆ ಮುಂದಾಗಿದ್ದಾರೆ.

  • ಜಿಲ್ಲೆಯ ಎಲ್ಲ ಮಸೀದಿ, ಮದರಸಾಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ- ಪೊಲೀಸರ ಸೂಚನೆ

    ಜಿಲ್ಲೆಯ ಎಲ್ಲ ಮಸೀದಿ, ಮದರಸಾಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ- ಪೊಲೀಸರ ಸೂಚನೆ

    – ಒಂದು ವಾರ ಗಡುವು ನೀಡಿದ ಪೊಲೀಸರು
    – ಮತ್ತೆ ವಿಚಾರಣೆಗೆ ಮೌಲ್ವಿ ಬೆಂಗಳೂರಿಗೆ

    ಚಾಮರಾಜನಗರ: ಶಂಕಿತ ಉಗ್ರ ಮೆಹಬೂಬ್ ಪಾಷಾಗೆ ಮೌಲ್ವಿ ಆಶ್ರಯ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಚ್ಚೆತ್ತುಕೊಂಡಿದ್ದು, ಎಲ್ಲ ಮಸೀದಿ ಹಾಗೂ ಮದರಸಾಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಸೂಚಿಸಿದ್ದಾರೆ.

    ಗುಂಡ್ಲುಪೇಟೆ ಪಟ್ಟಣದ ಹೊಸೂರು ಬಡಾವಣೆಯಲ್ಲಿ ಉಗ್ರರಿಗೆ ಆಶ್ರಯ ನೀಡಿದ ಮೌಲ್ವಿ ಸದಾಖತ್ ಉಲ್ಲಾ ಖಾನ್ ಬಂಧನದಿಂದ ಜಿಲ್ಲಾ ಪೋಲಿಸ್ ಇಲಾಖೆ ಎಚ್ಚೆತ್ತುಕೊಂಡಿದೆ. ಇದೀಗ ಜಿಲ್ಲೆಯ ಎಲ್ಲ ಮಸೀದಿ, ಮದರಸಾಗಳಲ್ಲಿ ಒಂದು ವಾರದೊಳಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಸೂಚನೆ ನೀಡಿ ನೋಟಿಸ್ ನೀಡಿದೆ.

    ಅಲ್ಲದೆ ಮುಂದಿನ ದಿನಗಳಲ್ಲಿ ಅಪರಿಚಿತರು ಕಾಣಿಸಿಕೊಂಡರೆ ಕೂಡಲೇ ಪೋಲಿಸರಿಗೆ ಮಾಹಿತಿ ನೀಡಬೇಕು. ಇಲ್ಲವಾದರೆ ಮಸೀದಿ, ಮದರಸಾಗಳ ಹೊಣೆ ಹೊತ್ತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಶಂಕಿತ ಉಗ್ರ ಮೆಹಬೂಬ್ ಪಾಷನಿಗೆ ಆಶ್ರಯ ನೀಡಿದ ಆರೋಪದಡಿ ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ಮೌಲ್ವಿ ಸದಾಖತ್ ಉಲ್ಲಾ ಖಾನ್ ಹಾಗೂ ಆತನ ಸ್ನೇಹಿತ ಅಯೂಬ್ ಖಾನ್‍ನನ್ನ ಪೋಲಿಸರು, ಆಂತರಿಕ ಭದ್ರತಾ ವಿಭಾಗ, ಭಯೋತ್ಪಾದಕ ನಿಗ್ರಹ ಪಡೆ ವಶಕ್ಕೆ ಪಡೆದು ಬೆಂಗಳೂರಿನಲ್ಲಿ ವಿಚಾರಣೆ ನಡೆಸಿದ್ದರು. ನಂತರ ಕರೆದಾಗ ಮತ್ತೆ ಹಾಜರಾಗುವಂತೆ ತಿಳಿಸಿ ಮೌಲ್ವಿ ಹಾಗೂ ಆತನ ಸ್ನೇಹಿತನನ್ನು ಬಿಡುಗಡೆ ಮಾಡಿದ್ದರು.

    ಮತ್ತೆ ವಿಚಾರಣೆಗೆ ಮೌಲ್ವಿ
    ಉಗ್ರರಿಗೆ ಆಶ್ರಯ ನೀಡಿದ ಆರೋಪದಲ್ಲಿ ಬಂಧಿತನಾಗಿದ್ದ ಮೌಲ್ವಿ ಸದಾಖತ್ ಉಲ್ಲಾ ಖಾನ್ ಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಮೌಲ್ವಿ ಬೆಂಗಳೂರಿಗೆ ತೆರಳುತ್ತಿದ್ದು ಇಂದು ಕೂಡ ವಿಚಾರಣೆಯಲ್ಲಿ ಭಾಗವಹಿಸಿ ಉಗ್ರರ ಬಗ್ಗೆ ಮತ್ತಷ್ಟು ವಿಚಾರ ಬಾಯ್ಬಿಡುವ ಸಾಧ್ಯತೆಯಿದೆ.

    ಈಗಾಗ್ಲೇ ಸಿಸಿಬಿ ಅಧಿಕಾರಿಗಳು ಕೂಡ ಎರಡು ದಿನ ವಿಚಾರಣೆ ನಡೆಸಿ ಭಾನುವಾರ ರಾತ್ರಿ ಮೌಲ್ವಿಯನ್ನು ಬಿಡುಗಡೆ ಮಾಡಿದ್ದರು. ಈ ಸಂದರ್ಭದಲ್ಲಿ ಮೊಬೈಲ್ ಸೇರಿದಂತೆ ಕೆಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದು, ಇಂದು ಕೂಡ ತೀವ್ರ ವಿಚಾರಣೆ ನಡೆಸುವ ಸಾಧ್ಯತೆಯಿದೆ.