Tag: CCB police

  • ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್

    ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್

    ಸ್ಯಾಂಡಲ್‌ವುಡ್ ಕ್ವೀನ್ಗೆ ರಮ್ಯಾ (Actress Ramya) ಅಶ್ಲೀಲ ಮೆಸೇಜ್ ಹಾಕಿದ್ದವರ ಪೈಕಿ ಸದ್ಯ ಸಿಸಿಬಿ ಪೊಲೀಸರು (CCB Police) ಮತ್ತಿಬ್ಬರನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 4ಕ್ಕೆ ಏರಿದೆ.

    ಸಿಸಿಬಿ ಪೊಲೀಸರು ರಾಜೇಶ್ ಹಾಗೂ ಭುವನ್‌ ಗೌಡ ಎಂಬುವವರನ್ನು ಬಂಧಿಸಿದ್ದಾರೆ. ಇದಕ್ಕೂ ಮುನ್ನ ಓಬಣ್ಣ ಮತ್ತು ಗಂಗಾಧರ್‌ನ್ನು ಬಂಧಿಸಿದ್ದರು.ಇದನ್ನೂ ಓದಿ: ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್

    ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಮೆಸೇಜ್ ಕಳುಹಿಸಿದ್ದರು. ಇದರ ಬೆನ್ನಲ್ಲೇ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆದ ನಟಿ ಅಶ್ಲೀಲ ಮೆಸೇಜ್ ಕಳುಹಿಸಿದ್ದವರ ಖಾತೆಗಳನ್ನು ಬಹಿರಂಗಗೊಳಿಸಿದ್ದರು. ಜೊತೆಗೆ 43 ಅಕೌಂಟ್‌ಗಳ ವಿರುದ್ಧ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಕಿಡಿಗೇಡಿಗಳ ಪತ್ತೆಗಾಗಿ 6 ತಂಡವನ್ನ ರಚನೆ ಮಾಡಲಾಗಿತ್ತು.

    ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿಗೆ ನ್ಯಾಯ ಸಿಗುವ ಬಗ್ಗೆ ರಮ್ಯಾ ಪೋಸ್ಟ್ ಹಾಕಿದ್ದಕ್ಕೆ ಅಶ್ಲೀಲ ಕಾಮೆಂಟ್ ಮಾಡಿರುವುದು ಪೊಲೀಸರ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರು, ಮೈಸೂರು, ಹಾವೇರಿ, ಚಿಕ್ಕಮಗಳೂರು ಸೇರಿದಂತೆ ಹಲವು ಕಡೆ ಕಿಡಿಗೇಡಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇತ್ತೀಚಿಗೆ ಬಂಧಿಸಿದ್ದ ಇಬ್ಬರ ಪೈಕಿ ಓರ್ವ ದರ್ಶನ್ ಅಭಿಮಾನಿ ಹಾಗೂ ಇನೋರ್ವ ಧನ್ವೀರ್ ಅಭಿಮಾನಿ ಎಂದು ತಿಳಿದು ಬಂದಿದೆ.ಇದನ್ನೂ ಓದಿ: ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆ – ರೈತರ ಮೊಗದಲ್ಲಿ ಮಂದಹಾಸ

  • ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ – ನಿಷೇಧಿತ ವಸ್ತುಗಳು ಪತ್ತೆ

    ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ – ನಿಷೇಧಿತ ವಸ್ತುಗಳು ಪತ್ತೆ

    ಬೆಂಗಳೂರು: ಪರಪ್ಪನ ಅಗ್ರಹಾರ (Parappana Agrahara) ಜೈಲು ಅಕ್ರಮದ ಅಡ್ಡೆಯಾಗಿ ಪರಿವರ್ತನೆ ಆಗುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಷೇಧಿತ ವಸ್ತುಗಳ ಹೆಚ್ಚಾಗಿ ಬಳಕೆಯಾಗುತ್ತಿವೆ. ಅಕ್ರಮವಾಗಿ ನಿಷೇಧಿತ ವಸ್ತು ಬಳಕೆಯಾಗುತ್ತಿರುವ ಮಾಹಿತಿ ತಿಳಿದ ಸಿಸಿಬಿ ಪೊಲೀಸರು ಸೋಮವಾರ ದಾಳಿ ಮಾಡಿದ್ದಾರೆ.

    ಜೂನ್ 16ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೂ ಜೈಲಿನಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಸಿಸಿಬಿ ದಾಳಿ (CCB Raid) ವೇಳೆ ಅಪಾರ ಪ್ರಮಾಣದ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಪರಪ್ಪನ ಅಗ್ರಹಾರ ಕಾರಾಗೃಹದ ಸಜಾಬಂಧಿ ಬ್ಯಾರಕ್ ಹಾಗೂ ವಿಐಪಿ ಬ್ಯಾರಕ್‌ನಲ್ಲಿ ಸಿಸಿಬಿಯ ಐವತ್ತಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಶೋಧ ಕಾರ್ಯ ನಡೆಸಿದ್ದರು. ಇದನ್ನೂ ಓದಿ: ಕನ್ನಡಿಗರಿಗೆ ಅಪಮಾನ ಪ್ರಕರಣ – ಹೇಳಿಕೆ ಕೊಡಲು ಪೊಲೀಸರನ್ನು ಸತಾಯಿಸುತ್ತಿರುವ ಸೋನು ನಿಗಮ್

    ದಾಳಿ ವೇಳೆ ಕಸೂರಿ ಮೇತಿ ಸೊಪ್ಪು, ಬೀಡಿ ಪ್ಯಾಕೆಟ್ಸ್, ಗಾಂಜಾ ಚಿಲ್ಲಂಸ್, ಮೊಳೆಗಳು, ಹರಿತವಾದ ವಸ್ತುಗಳು, ಗುಟ್ಕಾ ತಂಬಾಕು ಪ್ಯಾಕೆಟ್ಸ್, ಸುಣ್ಣದ ಡಬ್ಬಿ, ಡೈರಿಗಳು, ಚಾಕುಗಳು, ನಗದು ಹಣ, ಮೊಬೈಲ್ ಚಾರ್ಜರ್, ಕತ್ತರಿ, ಕಬ್ಬಿಣದ ರಾಡ್ ಪತ್ತೆಯಾಗಿದೆ. ಇದನ್ನೂ ಓದಿ: EXCLUSIVE | ಲೋಕಾಯುಕ್ತ ಲಂಚ ಪ್ರಕರಣಕ್ಕೆ ಡೈರಿ ಮಿಸ್ಟರಿ – ನಿಂಗಪ್ಪ ಮನೆಯಲ್ಲಿದ್ದ 2 ಡೈರಿ ರಿಕವರಿ

    ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಷೇಧಿತ ವಸ್ತುಗಳ ಬಳಕೆಯಾಗುತ್ತಿರುವ ಬಗ್ಗೆ ಸಿಸಿಬಿ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

  • Bengaluru | ಅಕ್ರಮವಾಗಿ ನಾಡ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ರೌಡಿಶೀಟರ್ ಬಂಧನ

    Bengaluru | ಅಕ್ರಮವಾಗಿ ನಾಡ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ರೌಡಿಶೀಟರ್ ಬಂಧನ

    ಬೆಂಗಳೂರು: ಅಕ್ರಮವಾಗಿ ನಾಡ ಪಿಸ್ತೂಲ್ (Countrymade Pistol) ತಂದು ಮಾರಾಟ ಮಾಡುತ್ತಿದ್ದ ರೌಡಿಶೀಟರ್‌ನನ್ನು ಬೆಂಗಳೂರಿನಲ್ಲಿ (Bengaluru) ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ.

    ಕೆಜಿ ಹಳ್ಳಿ ರೌಡಿಶೀಟರ್ ಸಮೀರ್ ಬಂಧಿತ ಆರೋಪಿ. ಸಮೀರ್ ದೆಹಲಿಯಿಂದ ಕಡಿಮೆ ಬೆಲೆಗೆ ಪಿಸ್ತೂಲ್ ತಂದು ಬೆಂಗಳೂರಿನಲ್ಲಿ ಹೆಚ್ಚು ಹಣಕ್ಕೆ ಮಾರಾಟ ಮಾಡುತ್ತಿದ್ದ. ಅಲ್ಲದೇ ರೌಡಿಶೀಟರ್‌ಗಳಿಗೂ ಪಿಸ್ತೂಲ್ ಮಾರಾಟ ಮಾಡುತ್ತಿದ್ದ. ಈ ಹಿನ್ನೆಲೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿ ಸಮೀರ್‌ನನ್ನು ಅರೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಪಾಕ್‌ ಶೆಲ್‌ ದಾಳಿಗೆ ಒಳಗಾಗಿದ್ದ ಪೂಂಚ್‌ ಗುರುದ್ವಾರಕ್ಕೆ ರಾಹುಲ್‌ ಗಾಂಧಿ ಭೇಟಿ

    ಬಂಧಿತ ಆರೋಪಿಯಿಂದ 2 ನಾಡ ಪಿಸ್ತೂಲ್‌ನನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಆರೋಪಿಗೆ ಪಿಸ್ತೂಲ್ ಹೇಗೆ ಸಿಕ್ಕಿತು ಎಂಬುದರ ತನಿಖೆಗೆ ಸಿಸಿಬಿ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: 2025ರ UG-CET ಫಲಿತಾಂಶ ಪ್ರಕಟ – 2,75,677 ವಿದ್ಯಾರ್ಥಿಗಳಿಗೆ ರ‍್ಯಾಂಕ್‌

  • 59 ಬಾರಿ ಡ್ರಗ್ಸ್‌ ಸಾಗಾಟ ಮಾಡಿದ್ರೂ ವಿಮಾನ ನಿಲ್ದಾಣದಲ್ಲಿ ಸಿಕ್ಕಿ ಬಿದ್ದಿಲ್ಲ ಹೇಗೆ?

    59 ಬಾರಿ ಡ್ರಗ್ಸ್‌ ಸಾಗಾಟ ಮಾಡಿದ್ರೂ ವಿಮಾನ ನಿಲ್ದಾಣದಲ್ಲಿ ಸಿಕ್ಕಿ ಬಿದ್ದಿಲ್ಲ ಹೇಗೆ?

    – ದೆಹಲಿಯಿಂದ ಮುಂಬೈ, ಬೆಂಗಳೂರಿಗೆ ಪ್ರಯಾಣ
    – ಬೆಂಗಳೂರಿನಲ್ಲಿ ಮಂಗಳೂರು ಪೊಲೀಸರ ಕಾರ್ಯಾಚರಣೆ

    ಮಂಗಳೂರು: ರಾಜ್ಯದ ಅತೀ ದೊಡ್ಡ ಡ್ರಗ್ಸ್ (Drugs) ಜಾಲವನ್ನು ಭೇದಿಸಿ ಇಬ್ಬರು ವಿದೇಶಿ ಮಹಿಳೆಯರನ್ನು ಮಂಗಳೂರು ಪೊಲೀಸರು (Mangaluru Police) ಬಂಧಿಸಿದ್ದಾರೆ. ಬಂಧಿತ ಇಬ್ಬರು ಮಹಿಳೆಯರು ಕಳೆದ ಒಂದು ವರ್ಷದಲ್ಲಿ ದೆಹಲಿ ವಿಮಾನ ನಿಲ್ದಾಣದ (Delhi Aiprport) ಮೂಲಕ ಬೆಂಗಳೂರು ಹಾಗೂ ಮುಂಬೈ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 59 ಬಾರಿ ಡ್ರಗ್ಸ್ ಸಮೇತ ಬಂದಿದ್ದಾರೆ. ಆದರೂ ಮೂರು ವಿಮಾನ ನಿಲ್ದಾಣದಲ್ಲಿ ಇವರು ಸಿಕ್ಕಿಬೀಳಿಲ್ಲ ಹೇಗೆ ಎನ್ನುವುದೇ ದೊಡ್ಡ ಪ್ರಶ್ನೆ ಎದ್ದಿದೆ.

    ಮಂಗಳೂರು ಸಿಸಿಬಿ ಪೊಲೀಸರು (CCB Police) ರಾಜ್ಯದ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಭೇದಿಸಿ ಇಬ್ಬರು ವಿದೇಶಿ ಮಹಿಳೆಯರನ್ನು ಬಂಧಿಸಿ ಅವರಿಂದ ಬರೋಬ್ಬರಿ 75 ಕೋಟಿ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಈ ಮೂಲಕ ರಾಜ್ಯಕ್ಕೆ ಬರುತ್ತಿದ್ದ ಡ್ರಗ್ಸ್ ಬುಡವನ್ನೇ ಅಲುಗಾಡಿಸಿದ್ದಾರೆ.

    ದೇಶದೆಲ್ಲೆಡೆ ಡ್ರಗ್ಸ್‌ ಸಾಗಾಟ ಮಾಡುವ ಈ ಇಬ್ಬರು ಮಹಿಳಾ ಡ್ರಗ್ ಪೆಡ್ಲರ್‌ಗಳು ದೆಹಲಿ ವಿಮಾನ ನಿಲ್ದಾಣದಿಂದ ದೇಶದ ಇತರೆಡೆ ವಿಮಾನದಲ್ಲೇ ಡ್ರಗ್ಸ್ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಮಂಗಳೂರು ಸಿಸಿಬಿ ಪೊಲೀಸರು ಮಾರ್ಚ್ 14ರ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಾದು ಕುಳಿತ್ತಿದ್ದರು.

    ರಾತ್ರಿ 12:30‌ರ ಸುಮಾರಿಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ಎರಡು ಟ್ರಾಲಿಗಳ ಮೂಲಕ ಹೊರ ಬಂದ ದಕ್ಷಿಣ ಆಫ್ರಿಕಾ ಪ್ರಜೆಗಳಾದ 31 ವರ್ಷದ ಬಂಬಾ ಫಾಂಟಾ ಹಾಗೂ 30 ವರ್ಷದ ಅಬಿಗಾಲ್ ಅಡೋನಿಸ್ ಪ್ರತ್ಯೇಕ ಎರಡು ಕಾರುಗಳ ಮೂಲಕ ಹೊರಡುತ್ತಾರೆ. ಇಬ್ಬರಲ್ಲೂ ಒಂದೊಂದು ಟ್ರಾಲಿ ಬ್ಯಾಗ್ ಗಳಿದ್ದು ವಿಮಾನ ನಿಲ್ದಾಣಗಳಿಂದ ಎಲೆಕ್ಟ್ರಾನಿಕ್ ಸಿಟಿಯತ್ತ ಕಾರಿನಲ್ಲಿ‌ ಸಂಚರಿಸುತ್ತಿದ್ದ ವೇಳೆ ಮಂಗಳೂರು ಸಿಸಿಬಿ ಪೊಲೀಸರು ಕಾರನ್ನು‌ ಹಿಂಬಾಲಿಸಿ ಅಡ್ಡಗಟ್ಟಿ ಸಿನಿಮೀಯ ರೀತಿಯಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಇಬ್ಬರಲ್ಲಿದ್ದ ಎರಡು ಟ್ರಾಲಿ ಬ್ಯಾಗ್‌ನಲ್ಲಿ ಒಟ್ಟು 75 ಕೋಟಿ ಮೌಲ್ಯದ 37.878 ಕೆಜಿ‌ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದ್ದು ಎಲ್ಲವನ್ನ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: 5 ವರ್ಷದಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನಿಂದ 400 ಕೋಟಿ ರೂ. ತೆರಿಗೆ ಪಾವತಿ!

    ಮಂಗಳೂರು ಪೊಲೀಸರು ಬೆಂಗಳೂರಿಗೆ ಹೋಗಿ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರ ಬಂದ ಈ ಡ್ರಗ್ ಪೆಡ್ಲರ್‌ಗಳನ್ನು ಹಿಡಿದ್ದಾರೆ. ಆದರೆ ಅವರು ವಿಮಾನ ನಿಲ್ದಾಣದಿಂದ ಡ್ರಗ್ಸ್‌ ಸಮೇತ ಹೊರ ಬಂದಿದ್ದು ಹೇಗೆ ಎನ್ನುವುದೇ ದೊಡ್ಡ ಪ್ರಶ್ನೆ.

    ಈ ಇಬ್ಬರು ಮಹಿಳೆಯರು ಇದೇ ಮೊದಲ ಬಾರಿಗೆ ಈ ರೀತಿ ವಿಮಾನದಲ್ಲಿ ಡ್ರಗ್ಸ್ ಸಾಗಾಟ ಮಾಡಿಲ್ಲ. ಕಳೆದ ಒಂದು ವರ್ಷದಲ್ಲಿ ಬರೋಬ್ಬರಿ 59 ಬಾರಿ ವಿಮಾನದಲ್ಲೇ ಈ ಡ್ರಗ್ಸ್ ಸಾಗಾಟ ಮಾಡಿದ್ದಾರೆ. ದೆಹಲಿಯಿಂದ 37 ಬಾರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹಾಗೂ ದೆಹಲಿಯಿಂದ 22 ಬಾರಿ‌ ಮುಂಬೈ ವಿಮಾನ ನಿಲ್ದಾಣ ಡ್ರಗ್ಸ್‌ ಸಾಗಿಸಿದ್ದಾರೆ. ಪ್ರತೀ ಬಾರಿಯೂ ದೆಹಲಿಯಿಂದ ಲೇಟ್ ನೈಟ್ ಫ್ಲೈಟ್ ಗಳನ್ನೇ ಬುಕ್ ಮಾಡಿಕೊಂಡು ಬರುತ್ತಿದ್ದ ಈ ಇಬ್ಬರು ಮಹಿಳೆಯರು ಅದ್ಯಾವ ರೀತಿ ತಪಾಸಣೆಗೆ ಒಳಗಾಗದೇ ಅಲ್ಲಿನ ಭದ್ರತಾ ಸಿಬ್ಬಂದಿಗೆ ಸಿಕ್ಕಿ ಬೀಳದೇ ವಿಮಾನ ನಿಲ್ದಾಣದಿಂದ ಹೊರ ಬಂದಿದ್ದಾರೆ ಎನ್ನುವುದೇ ಅನುಮಾನ ಹುಟ್ಟಿಸಿದೆ.

    ವಿಮಾನ ನಿಲ್ದಾಣಗಳಲ್ಲಿ ಸಣ್ಣಪುಟ್ಟ ವಸ್ತುಗಳನ್ನು ತಪಾಸಣೆ ನಡೆಸಿ ಬಳಿಕ ಸ್ಕ್ಯಾನರ್ ಮೂಲಕ ಸ್ಕ್ಯಾನ್ ಮಾಡಿಯೇ ಪ್ರತಿ ಪ್ರಯಾಣಿಕರನ್ನು ಒಳಗೆ ಹಾಗೂ ಹೊರಗೆ ಬಿಡಲಾಗುತ್ತದೆ. ಎಲ್ಲವನ್ನೂ‌ ಬಹಳ‌ ಕಟ್ಟು ನಿಟ್ಟಾಗಿ ತಪಾಸಣೆ ಮಾಡುವ ಭದ್ರತಾ ಸಿಬ್ಬಂದಿಗಳು ಈ ಡ್ರಗ್ ಪೆಡ್ಲರ್ ಗಳನ್ನ ಇಷ್ಟೊಂದು ಬಾರಿ ಸಲೀಸಾಗಿ ಹೇಗೆ ಬಿಟ್ಟು ಕಳಿಸಿದ್ದಾರೆ ಎನ್ನುವುದು ಅನುಮಾನದ ವಿಚಾರ.

    ಒಟ್ಟಿನಲ್ಲಿ ಮಂಗಳೂರು ಪೊಲೀಸರ ಈ ಕಾರ್ಯಾಚರಣೆಯಿಂದಾಗಿ ರಾಜ್ಯ ಹಾಗೂ ದೇಶಕ್ಕೆ ಸಾಗಾಟ ಆಗುತ್ತಿದ್ದ ದೊಡ್ಡ ಡ್ರಗ್ಸ್ ಜಾಲ ಪತ್ತೆಯಾಗಿದೆ. ಮಂಗಳೂರು ಪೊಲೀಸರ ಈ ಬೃಹತ್ ಕಾರ್ಯಾಚರಣೆಗೆ ಸಿಎಂ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ಮುಖಂಡರುಗಳು ಸೇರಿ ರಾಜ್ಯಾದ್ಯಂತ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಇಷ್ಟಕ್ಕೇ ಸುಮ್ಮನಾಗದ ಮಂಗಳೂರು ಪೊಲೀಸರು ಈ‌ ಜಾಲದಲ್ಲಿ ಇರೋ‌ ಇನ್ನಷ್ಟು ಪೆಡ್ಲರ್ ಗಳ ಪತ್ತೆಗೆ ಬಲೆ ಬೀಸಿದ್ದಾರೆ.

     

  • ಕರಾವಳಿಯಲ್ಲಿ ನಿಷೇಧಿತ PFI ಮತ್ತೆ ಆಕ್ಟಿವ್‌? – ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು

    ಕರಾವಳಿಯಲ್ಲಿ ನಿಷೇಧಿತ PFI ಮತ್ತೆ ಆಕ್ಟಿವ್‌? – ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು

    ಮಂಗಳೂರು: ಬೃಹತ್‌ ಅಕ್ರಮ ಪಿಸ್ತೂಲ್‌ ಮಾರಾಟ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದು, ಕರಾವಳಿಯಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆ ಮತ್ತೆ ಆಕ್ಟಿವ್‌ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

    ಕೇರಳ ಮೂಲದ ನಟೋರಿಯಸ್ ವೆಪೆನ್ ಡೀಲರ್‌ ಸೇರಿದಂತೆ ಐವರನ್ನು ಮಂಗಳೂರು ಸಿಸಿಬಿ ಬಂಧಿಸಿದೆ. ಕೇರಳದ ಮೂಲದ ಕ್ರಿಮಿನಲ್‌ಗಳಾದ ಅಬ್ದುಲ್ ಲತೀಫ್, ಮನ್ಸೂರು, ನೌಫಾಲ್, ಮಹಮ್ಮದ್ ಅಸ್ಗರ್, ಮಹಮ್ಮದ್ ಸಾಲಿ ಬಂಧಿತರು.

    ಬಂಧಿತರಿಂದ ಮೂರು‌ ಪಿಸ್ತೂಲ್ ಹಾಗೂ 6 ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಮುಂಬೈನಿಂದ ಬೃಹತ್ ಅಕ್ರಮ ಪಿಸ್ತೂಲ್ ಸರಬರಾಜು ನಡೆಯುತ್ತಿತ್ತು. ಸಮಾಜಘಾತುಕ ಶಕ್ತಿಗಳಿಗೆ ಶಸ್ತ್ರಾಸ್ತ್ರ ಸರಬರಾಜಾಗುತ್ತಿತ್ತು.

    ನಿಷೇಧಿತ ಪಿಎಫ್‌ಐ ಮುಖಂಡರಿಗೆ ಅಬ್ದುಲ್ ಲತೀಫ್ ಯಾನೆ ತೋಕ್ ಲತೀಫ್ ಪಿಸ್ತೂಲ್ ನೀಡಿದ್ದ. ಪಿಎಫ್‌ಐ ಕ್ಯಾಡರ್‌ಗಳಿಗೆ ಶಸ್ತ್ರಾಸ್ತ್ರ ಸರಬರಾಜು ಮಾಡಿದ್ದ. ವಾಮಂಜೂರುನಲ್ಲಿ ಜ.6‌ರಂದು ನಡೆದಿದ್ದ ಮಿಸ್ ಫೈಯರ್ ಪ್ರಕರಣದಲ್ಲಿ ಬಂಧಿತರಿಗೆ ಈತನೇ ಪಿಸ್ತೂಲ್ ನೀಡಿದ್ದ. ಮಿಸ್ ಫೈಯರ್ ಪ್ರಕರಣದಲ್ಲಿ ಬಂಧಿತ ಬದ್ರುದ್ದೀನ್ ಮತ್ತು ಇಮ್ರಾನ್ ಇಬ್ಬರೂ ನಿಷೇಧಿತ PFI ಮುಖಂಡರು. ಕೇರಳದಲ್ಲಿ ನಿಷೇಧಿತ PFI ಸಂಘಟನೆಯೊಂದಿಗೆ ಆರೋಪಿಗಳು ನೇರ‌ ಸಂಬಂಧ ಹೊಂದಿದ್ದಾರೆ.

    ನಿಷೇಧಿತ PFI ಮುಖಂಡರ ಕೈಗೆ ಪಿಸ್ತೂಲ್ ಬಂದಿದ್ದಾದರೂ ಏಕೆ? ಮಂಗಳೂರು PFI ಮುಖಂಡರ ಅಸಲಿ ಟಾರ್ಗೆಟ್ ಯಾರು? ಕೇರಳದಿಂದ ಪಿಸ್ತೂಲ್ ಮಂಗಳೂರಿಗೆ ಬಂದಿದ್ದಾದರೂ ಏಕೆ? ಅಬ್ದುಲ್‌ ಲತೀಫ್‌ ಇನ್ನೂ ಹಲವೆಡೆ ಪಿಸ್ತೂಲ್‌ ಸರಬರಾಜು ಮಾಡಿದ್ದಾನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಮೈಸೂರಿನ ಉದಯಗಿರಿ ಠಾಣೆ ಗಲಭೆ ಕೇಸ್‌ – ಪ್ರಚೋದನೆ ನೀಡಿದ್ದ ಮೌಲ್ವಿ 11 ದಿನಗಳ ಬಳಿಕ ಅರೆಸ್ಟ್‌

    ಮೈಸೂರಿನ ಉದಯಗಿರಿ ಠಾಣೆ ಗಲಭೆ ಕೇಸ್‌ – ಪ್ರಚೋದನೆ ನೀಡಿದ್ದ ಮೌಲ್ವಿ 11 ದಿನಗಳ ಬಳಿಕ ಅರೆಸ್ಟ್‌

    ಮೈಸೂರು: ಉದಯಗಿರಿ ಪೊಲೀಸ್ ಠಾಣೆ (Udayagiri Police Station) ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಮಕ್ಬೋಲಿಯನ್ನ ಸಿಸಿಬಿ ಪೊಲೀಸರು (CCB Police) ಕೊನೆಗೂ ಬಂಧಿಸಿದ್ದಾರೆ.

    ಗಲಭೆ ನಡೆದ 11 ದಿನಗಳ ಬಳಿಕ ಮೌಲ್ವಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಮುಂಜಾಗ್ರತ ಕ್ರಮವಾಗಿ ಉದಯಗಿರಿ ಪೊಲೀಸ್ ಠಾಣೆಗೆ ಬಿಗಿ ಬಂದೂಬಸ್ತ್ ನಿಯೋಜಿಸಲಾಗಿದೆ. ಇದನ್ನೂ ಓದಿ: ಚಿನ್ನದಂಗಡಿ ದೋಚಿ ಸಲೀಸಾಗಿ ನಾಕಬಂದಿ ದಾಟಿದ ಕಳ್ಳರು – ಮೂವರು ಪೊಲೀಸರು ಸಸ್ಪೆಂಡ್

    ಉದ್ರಿಕ್ತ ಭಾಷಣ ಮಾಡಿದ್ದ ಮೌಲ್ವಿ:
    ಇದೇ ಫೆ.10ರಂದು ಉದಯಗಿರಿ (Udayagiri) ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸುವುದಕ್ಕೂ ಮುನ್ನವೇ ಮೌಲ್ವಿ (Moulvi) ಮುಫ್ತಿ ಮುಷ್ತಾಕ್ ಮಕ್ಬೋಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು. ಈತನ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಇದನ್ನೂ ಓದಿ: ಮುಡಾ ಕೇಸ್‌, ಸಿಎಂಗೆ ಕ್ಲೀನ್‌ ಚಿಟ್‌ – 11,200 ಪುಟಗಳ ತನಿಖಾ ವರದಿ ಸಲ್ಲಿಕೆ

    ಮೌಲ್ವಿ ಭಾಷಣದಲ್ಲಿ ಹೇಳಿದ್ದೇನು?
    ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ. ಧರ್ಮ ರಕ್ಷಣೆಯ ಬದ್ಧತೆ ನಿನ್ನೆನೂ ಇತ್ತು, ಇವತ್ತೂ ಇದೆ. ಎಲ್ಲಾ ಘೋಷಣೆ ಕೂಗಿ ನಾವು ಪ್ರಾಣ ಬೇಕಾದರೂ ಕೊಡುತ್ತೇವೆ. ಸದಾ ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಸುರೇಶ್ ಹೆಸರಿನ ನಾಯಿ, ಸುರೇಶ್ ಹೆಸರಿನ ಹರಾಮಿ. ನನ್ನ ಮಾಲೀಕನ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾನೆ. ಆತನನ್ನು ಕೂಡಲೇ ಬಂಧಿಸಿ. ಆತನನ್ನು ನೇಣಿಗೆ ಹಾಕಬೇಕು, ಮರಣದಂಡನೆ ವಿಧಿಸಬೇಕು ಎಂದು ಮೌಲ್ವಿ ಮಾತನಾಡಿದ್ದ.

    ನಿಮ್ಮ ಇಚ್ಚೆ ಏನು? ಆತನಿಗೆ ಮರಣದಂಡನೆಯಾಗಬೇಕು ಎಂಬುದು. ಮೈಸೂರಿನ ಎಲ್ಲಾ ಮುಸ್ಲಿಮರು ಒಂದಾಗಿ. ಇದಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ. ಅವಶ್ಯಕತೆ ಬಂದರೆ ನಮ್ಮ ತಲೆ ಬೇಕಾದರೂ ಕತ್ತರಿಸಿಕೊಳ್ಳುತ್ತೇವೆ. ನಮ್ಮ ಮಕ್ಕಳನ್ನ ಬೇಕಾದ್ರೂ ಬಲಿಕೊಡುತ್ತೇವೆ ಎಂದು ಪ್ರಚೋದನಕಾರಿಯಾಗಿ ಮಾತನಾಡಿದ್ದ. ಇದನ್ನೂ ಓದಿ: ಚಿನ್ನದಂಗಡಿ ದೋಚಿ ಸಲೀಸಾಗಿ ನಾಕಬಂದಿ ದಾಟಿದ ಕಳ್ಳರು – ಮೂವರು ಪೊಲೀಸರು ಸಸ್ಪೆಂಡ್

  • ಲಕ್ಕಿ ಬಾಸ್ಕರ್ ಸಿನಿಮಾ ಸ್ಟೈಲ್‌ನಲ್ಲಿ 24 ಕೋಟಿ ವಂಚನೆ – ಸಿಸಿಬಿ ತನಿಖೆ ವೇಳೆ ಬಟಾಬಯಲು

    ಲಕ್ಕಿ ಬಾಸ್ಕರ್ ಸಿನಿಮಾ ಸ್ಟೈಲ್‌ನಲ್ಲಿ 24 ಕೋಟಿ ವಂಚನೆ – ಸಿಸಿಬಿ ತನಿಖೆ ವೇಳೆ ಬಟಾಬಯಲು

    ಬೆಂಗಳೂರು: ಲಕ್ಕಿ ಬಾಸ್ಕರ್ (Lucky Bhaskhar) ಸಿನಿಮಾ ಸ್ಟೈಲ್‌ನಲ್ಲಿ 24 ಕೋಟಿ ರೂ. ವಂಚನೆ ಮಾಡಿರುವ ಘಟನೆಯೊಂದು ಸಿಸಿಬಿ ಅಧಿಕಾರಿಗಳ ತನಿಖೆ ವೇಳೆ ಬೆಳಕಿಗೆ ಬಂದಿದೆ.

    ವಂಚಕಿ ರೇಖಾ ದಂಪತಿ, ಆರೋಪಿ ಚೇತನ್ ಎಂಬ ಆಡಿಟರ್‌ನ ಜೊತೆಯಲ್ಲಿ ಸೇರಿಕೊಂಡು ಹಲವರಿಗೆ ಆಮಿಷವೊಡ್ಡಿ ವಂಚನೆ ಮಾಡಿದ್ದಾರೆ. ತನಿಖೆ ವೇಳೆ 14 ಬೇರೆ ಬೇರೆ ಬ್ಯಾಂಕ್ ಅಕೌಂಟ್‌ನಿಂದ 24 ಕೋಟಿ ರೂ. ಹಣ ವಹಿವಾಟು ಆಗಿರುವುದು ಪತ್ತೆಯಾಗಿದೆ.ಇದನ್ನೂ ಓದಿ: ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ಗೆ ಮಾತೃವಿಯೋಗ

    ಲಕ್ಕಿ ಬಾಸ್ಕರ್ ಸಿನಿಮಾದಲ್ಲಿ ನಟ ದುಲ್ಕರ್‌ ಸಲ್ಮಾನ್‌ ಹೇಗೆ ಬ್ಯಾಂಕ್ ಹಣ ಬಳಸಿಕೊಂಡು ಲಾಟರಿಯಲ್ಲಿ ಬರುವ ಹಣವನ್ನ ಬ್ಯಾಂಕ್‌ಗೆ ಜಮೆ ಮಾಡಿ ಲಾಭ ಮಾಡಿಕೊಳ್ಳುತ್ತಾನೆ. ಹಾಗೆಯೇ ಆರೋಪಿ ರೇಖಾ ದಂಪತಿ ಲಾಟರಿ ಹೆಸರಿನಲ್ಲಿ ಬಂದ ಹಣವನ್ನು 14 ಬೇರೆ ಬೇರೆ ಅಕೌಂಟ್‌ಗಳಿಗೆ ಹಾಕಿ ಲಾಭ ಪಡೆದುಕೊಂಡಿದ್ದಾರೆ. ಇನ್ನೂ ರೇಖಾ ದಂಪತಿ ಕಂಪನಿಯಲ್ಲಿ ಆಡಿಟರ್ ಆಗಿ ಕೆಲಸ ಮಾಡುತ್ತಿರೋದಾಗಿ ತಿಳಿಸಿ ಚೇತನ್ ಹಲವರಿಗೆ ಅಪ್ರೋಚ್ ಮಾಡಿ ಹಣ ಪಡೆದು ಪಂಗನಾಮ ಹಾಕಿದ್ದಾನೆ.

    ಉಳಿದಂತೆ ಆರೋಪಿಗಳ ವಿರುದ್ಧ ಮತ್ತಷ್ಟು ಪ್ರಕರಣಗಳು ದಾಖಲಾಗುವ ಸಾಧ್ಯತೆಯಿದ್ದು, ಆರೋಪಿಗಳ ವಿರುದ್ಧ ದೂರು ದಾಖಲಿಸಲು ಹಲವರು ಬರುತ್ತಿರುವುದಾಗಿ ತಿಳಿದು ಬಂದಿದೆ. ಸದ್ಯ ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.ಇದನ್ನೂ ಓದಿ:ಬಿಹಾರ ಬಜೆಟ್ ಕನ್ನಡಿಗರಿಗೆ ಅನ್ಯಾಯ ಮಾಡಿದೆ: ಪ್ರಿಯಾಂಕ್ ಖರ್ಗೆ

     

  • ಪತಿ ಇಲ್ಲ ಅಂತ ಹೇಳಿ ಹೈಫೈ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ – ಇಬ್ಬರು ಅರೆಸ್ಟ್‌

    ಪತಿ ಇಲ್ಲ ಅಂತ ಹೇಳಿ ಹೈಫೈ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ – ಇಬ್ಬರು ಅರೆಸ್ಟ್‌

    ಬೆಂಗಳೂರು: ಉದ್ಯೋಗದಾಸೆ ತೋರಿಸಿ ಯುವತಿಯರನ್ನು ವೇಶ್ಯಾವಟಿಕೆಗೆ (Prostitution) ಬಳಕೆ ಮಾಡುತ್ತಿದ್ದ ಇಬ್ಬರು ಮಹಿಳೆಯನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ.

    ಉಮಾ, ಪುಷ್ಪಲತಾ ಬಂಧಿತ ಆರೋಪಿಗಳು. ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಬಿಇಎಲ್ ಬಡವಾಣೆಯಲ್ಲಿ ಹೈ ಫೈ ಮನೆ ಬಾಡಿಗೆ ಪಡೆದಿದ್ದ ಆರೋಪಿಗಳು ಈ ಕೃತ್ಯ ನಡೆಸುತ್ತಿದ್ದರು.

    ಮನೆ ಮಾಲೀಕರ ಬಳಿ ಪತಿ ಇಲ್ಲಎಂದು ಮನೆಯನ್ನು ಬಾಡಿಗೆಗೆ ಪಡೆಯುತ್ತಿದ್ದ ಇವರು ಹೊರ ರಾಜ್ಯದಿಂದ ಬರುವ ಯುವತಿಯರಿಗೆ ಉದ್ಯೋಗದ (Job) ಆಸೆ ತೋರಿಸಿ ವೇಶ್ಯವಾಟಿಕೆ ದಂಧೆಗೆ ದೂಡುತ್ತಿದ್ದರು. ಗಿರಾಕಿಗಳನ್ನ ಫೋನ್ ಮೂಲಕ ಸಂಪರ್ಕ ಮಾಡಿ ಫೋಟೋಗಳನ್ನು ಕಳುಹಿಸಿ ಡೀಲ್ ಮಾಡುತ್ತಿದ್ದರು. ಇದನ್ನೂ ಓದಿ: ಹಾಸನದಲ್ಲಿ ಪುಡಿ ರೌಡಿಯ ಕಾಟ | ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ

    ಖಚಿತ ಮಾಹಿತಿ ಪಡೆದ ಸಿಸಿಬಿ ಮಹಿಳಾ ಸಂರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ಓರ್ವ ಯುವತಿಯನ್ನು ರಕ್ಷಿಸಿ ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ.

    ಬೆಂಗಳೂರಿನ ಅನೇಕ ಭಾಗಗಳಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ ನಡೆಸಿದೆ. ಸಂಪಿಗೇಹಳ್ಳಿ, ಕೆಆರ್ ಪುರಂ, ರಾಮಮೂರ್ತಿ ನಗರ, ಹನುಮಂತ ನಗರ ಠಾಣಾ ವ್ಯಾಪ್ತಿಯ ಐಷಾರಾಮಿ ಹೋಟೆಲ್, ಅಪಾರ್ಟ್‌ಮೆಂಟ್‌ ಮನೆಗಳಲ್ಲಿ ದಂಧೆ ನಡೆಸುತ್ತಿದ್ದ 4 ಆರೋಪಿಗಳನ್ನು ಬಂಧಿಸಿ 9 ಮಹಿಳೆಯರನ್ನು ರಕ್ಷಿಸಿದ್ದಾರೆ.

  • ನಕಲಿ ಅಡ್ರೆಸ್ ಕೊಟ್ಟು ಮಾದಕ ವಸ್ತು ಕೊರಿಯರ್ – 2 ತಿಂಗಳಾದ್ರೂ ಪತ್ತೆಯಾಗಿಲ್ಲ ವಿಳಾಸ

    ನಕಲಿ ಅಡ್ರೆಸ್ ಕೊಟ್ಟು ಮಾದಕ ವಸ್ತು ಕೊರಿಯರ್ – 2 ತಿಂಗಳಾದ್ರೂ ಪತ್ತೆಯಾಗಿಲ್ಲ ವಿಳಾಸ

    ಬೆಂಗಳೂರು: ನ್ಯೂ ಇಯರ್ (New Year) ಹತ್ತಿರವಾಗುತ್ತಿದ್ದಂತೆ ಮಾದಕ ವಸ್ತುಗಳ ಮೂಲಗಳ ಬಗ್ಗೆ ಹಲವು ಕುತೂಹಲಕಾರಿ ವಿಚಾರಗಳು ಬೆಳಕಿಗೆ ಬರುತ್ತಿವೆ.

    ವಿದೇಶಗಳಿಂದ ವಿವಿಧ ಬಗೆಯ ಡ್ರಗ್ಸ್ ಬೆಂಗಳೂರಿಗೆ ಕೊರಿಯರ್‌ಗಳ ಮೂಲಕ ಬರುತ್ತಿವೆ ಎಂಬ ಮಾಹಿತಿ ಸಿಕ್ಕಿತ್ತು. ಈ ಮಾಹಿತಿ ಆಧರಿಸಿದ ಸಿಸಿಬಿ ಪೊಲೀಸರು (CCB Police) ಕಳೆದ ಅಕ್ಟೋಬರ್ 20ರಂದು ಬೆಂಗಳೂರಿನ (Bengaluru) ಚಾಮರಾಜಪೇಟೆಯ (Chamarajpet) ಫಾರಿನ್ ಪೋಸ್ಟ್ ಆಫೀಸ್ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಅನುಮಾನಾಸ್ಪದ 3,500 ಕೊರಿಯರ್‌ಗಳನ್ನು ಪರಿಶೀಲಿಸಿದ ವೇಳೆ 606 ಕೊರಿಯರ್‌ಗಳಲ್ಲಿ ಬರೋಬ್ಬರಿ 21 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿತ್ತು. ಇದನ್ನೂ ಓದಿ: ಸಿರಿಯಾದಲ್ಲಿ ಭಾರತೀಯ ಪ್ರಜೆಗಳು ಸೇಫ್‌ – ರಾಯಭಾರ ಕಚೇರಿಯಿಂದ ಮಾಹಿತಿ

    ಡ್ರಗ್ಸ್ ಪತ್ತೆಯಾದ 606 ಕೊರಿಯರ್‌ಗಳ ಬೆನ್ನತ್ತಿದ ಪೊಲೀಸರಿಗೆ ಶಾಕ್ ಕಾದಿತ್ತು. ಯಾಕಂದರೆ ಅಷ್ಟೂ ಕೊರಿಯರ್‌ಗಳ ಅಡ್ರೆಸ್‌ಗಳು ನಕಲಿಯಾಗಿದ್ದವು. ಕಳೆದ ಎರಡು ತಿಂಗಳಲ್ಲಿ ಒಂದೇ ಒಂದು ಅಡ್ರೆಸ್ ಕೂಡ ಪೊಲೀಸರಿಗೆ ಪತ್ತೆಯಾಗಿಲ್ಲ. ಈ ನಡುವೆ ನ್ಯೂ ಇಯರ್ ಕೂಡ ಹತ್ತಿರ ವಾಗುತ್ತಿದ್ದು, ಶನಿವಾರವಷ್ಟೇ ಪೋಸ್ಟ್ ಆಫೀಸ್‌ಗಳು, ಖಾಸಗಿ ಕೋರಿಯರ್ ಆಫೀಸ್‌ಗಳು, ಟ್ರಾವೆಲ್ ಏಜೆನ್ಸಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ.  ಇದನ್ನೂ ಓದಿ: ಸರ್ಕಾರದ ಬೊಕ್ಕಸ ಬರಿದಾಗಿ ಕಳಪೆ ಔಷಧ ಖರೀದಿ, ಬಾಣಂತಿಯರ ಸಾವಿಗೆ ಇದೇ ಕಾರಣ: ಜೋಶಿ

    ತಪ್ಪು ಅಡ್ರೆಸ್ ಇರುವ ಕೊರಿಯರ್‌ಗಳು ಅಡ್ರೆಸ್‌ಗೆ ಹೋಗಿ ವಾಪಸ್ ಬರುತ್ತವೆ. ನಂತರ ಕೊರಿಯರ್ ಆಫೀಸ್‌ಗಳಿಗೆ ಬಂದು ಬಳಕೆದಾರರು, ಅಥವಾ ಪೆಡ್ಲರ್‌ಗಳು ಡ್ರಗ್ಸ್ ಇರುವ ಕೋರಿಯರ್ ತೆಗೆದುಕೊಂಡು ಹೋಗುತ್ತಿದ್ದಾರೆ. ಇನ್ನೂ ಕೆಲ ಕಡೆಗಳಲ್ಲಿ ಅಲ್ಲಿನ ಸಿಬ್ಬಂದಿಗಳೇ ಈ ದಂಧೆಯಲ್ಲಿ ಭಾಗಿಯಾಗಿದ್ದು, ತಲುಪಿಸಬೇಕಾದ ಕಡೆಗೆ ತಲುಪಿಸುತ್ತಿದ್ದಾರೆ. ಸದ್ಯ ಇನ್ನೂ ತನಿಖೆ ಮುಂದುವರೆದಿದ್ದು, ಇನ್ನೂ ಯಾವೆಲ್ಲಾ ರೀತಿಯ ಪೆಡ್ಲಿಂಗ್ ನಡೆಯುತ್ತಿದೆ ಎಂಬುದು ತನಿಖೆ ನಂತರವೇ ಗೊತ್ತಾಗಬೇಕಿದೆ. ಇದನ್ನೂ ಓದಿ: ಬಳ್ಳಾರಿ ಬಳಿಕ ಬೆಳಗಾವಿಯಲ್ಲೂ ಬಾಣಂತಿಯರು, ಶಿಶುಗಳ ಸಾವು!