Tag: CCB police

  • ಖಾಸಗಿ ವಿಡಿಯೋ ತೋರಿಸಿ ಹೈಸ್ಕೂಲ್‌ ಗೆಳತಿಗೆ ಬ್ಲ್ಯಾಕ್‌ಮೇಲ್‌ – 2.57 ಕೋಟಿ ಸುಲಿಗೆ!

    ಖಾಸಗಿ ವಿಡಿಯೋ ತೋರಿಸಿ ಹೈಸ್ಕೂಲ್‌ ಗೆಳತಿಗೆ ಬ್ಲ್ಯಾಕ್‌ಮೇಲ್‌ – 2.57 ಕೋಟಿ ಸುಲಿಗೆ!

    ಬೆಂಗಳೂರು: ತನ್ನ ಹೈಸ್ಕೂಲ್‌ ಗೆಳತಿಗೆ ಖಾಸಗಿ ವೀಡಿಯೋ (Private video) ತೋರಿಸಿ ಬ್ಲ್ಯಾಕ್‌ ಮೇಲ್‌ ಮಾಡಿ 2.57 ಕೋಟಿ ರೂ. ಹಣ ಸುಲಿಗೆ ಮಾಡಿದ್ದ ಖತರ್ನಾಕ್‌ನನ್ನ ಸಿಸಿಬಿ ಪೊಲೀಸರು (CCB Police) ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಬ್ಲಾಕ್ ಮೇಲರ್ (Black Mailer) ಪ್ರಿಯತಮ ಮೋಹನ್ ಕುಮಾರ್ ಬಂಧಿತ ಆರೋಪಿ. ಬೆಂಗಳೂರಿನ ಚಾಮರಾಜಪೇಟೆಯ 19 ವರ್ಷದ ಯುವತಿಗೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ‘ನೋಡಿದವರು ಏನಂತಾರೆ’ ಎನ್ನುತ್ತಾ ಫ್ಯಾನ್ಸ್‌ಗೆ ಸಿನಿಮಾ ಅಪ್‌ಡೇಟ್‌ ಕೊಟ್ಟ ನವೀನ್‌ ಶಂಕರ್

    ಬೆಂಗಳೂರಿನ (Bengaluru) ಚಾಮರಾಜಪೇಟೆಯ 19 ವರ್ಷದ ಯುವತಿಗೆ 2019ರಿಂದಲೇ ಆರೋಪಿ ಪರಿಚಯವಾಗಿದ್ದ. ದೇವನಹಳ್ಳಿಯ ಖಾಸಗಿ ಬೋರ್ಡಿಂಗ್ ಸ್ಕೂಲ್ ನಲ್ಲಿ ಓದುತ್ತಿದ್ದಾಗ ಪರಸ್ಪರ ಪರಿಚಯವಾಗಿದ್ದರು. ಆಗ ಇಬ್ಬರಿಗೆ ಪರಿಚಯವಾಗಿ ಬಳಿಕ ಪ್ರೀತಿ ಶುರುವಾಗಿತ್ತು. ರಜೆಯಲ್ಲಿ ಮನೆಯವರಿಗೆ ತಿಳಿಯದಂತೆ ಗೋವಾ ಸೇರಿ ಹಲವು ಕಡೆಗೆ ಇಬ್ಬರೂ ಟ್ರಿಪ್ ಹೋಗ್ತಿದ್ರು. ಮೋಹನ್ ಕುಮಾರ್ ಹಾಗೂ ಆತನ ಗೆಳೆಯರೊಂದಿಗೆ ಯುವತಿ ಟ್ರಿಪ್ ಹೋಗ್ತಿದ್ದಳು. ಆಗ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಬಳಿಕ ಅದನ್ನ ವಿಡಿಯೋ ಚಿತ್ರೀಕರಣ ಸಹ ಮಾಡಿಕೊಂಡಿದ್ದಾನೆ. ಕೆಲ ದಿನಗಳ ನಂತರ ಖಾಸಗಿ ವಿಡಿಯೋ ಹಾಗೂ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್‌ ಮಾಡೋದಕ್ಕೆ ಶುರು ಮಾಡಿದ್ದಾನೆ.

    ಖಾಸಗಿ ವೀಡಿಯೋ ತೋರಿಸಿ, ಹಣಕ್ಕೆ ಡಿಮ್ಯಾಂಡ್‌ ಮಾಡಿದ್ದಾನೆ. ಹಣ ಕೊಡದಿದ್ದರೆ, ವಿಡಿಯೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಗ ಯುವತಿ ತನ್ನ ಅಜ್ಜಿ ಅಕೌಂಟ್‌ನಿಂದ ಹಣ ವರ್ಗಾವಣೆ ಮಾಡಿದ್ದಾಳೆ. ಆರೋಪಿ ಮೋಹನ್‌ ಹೇಳಿದಂತೆ ಆತನ ಕುಟುಂಸ್ಥರು ಹಾಗೂ ಆತನ ಗೆಳಯರ ಖಾತೆಗೆ ಹಂತ ಹಂತವಾಗಿ 1.25 ಕೋಟಿ ರೂ. ಗಣ ವರ್ಗಾವಣೆ ಮಾಡಿದ್ದಾಳೆ, ಜೊತೆಗೆ ಬರೋಬ್ಬರಿ 1.32 ಕೋಟಿ ರೂ. ನಗದು ಹಣ ನೀಡಿದ್ದಾಳೆ. ಇದನ್ನೂ ಓದಿ: ಗಮನಿಸಿ, ಭಾನುವಾರ ಪಿಡಿಒ ಪರೀಕ್ಷೆ – ಬೆಳಗ್ಗೆ 5:30 ರಿಂದ ಮೆಟ್ರೋ ಸಂಚಾರ ಆರಂಭ

    ಪೊಲೀಸರಿಗೆ ದೂರು ನೀಡಿದ್ರೆ ಆಕೆ ಹಾಗೂ ಕುಟುಂಬಸ್ಥರನ್ನು ಕೊಲ್ಲುವುದಾಗಿಯೂ ಬೆದರಿಕೆ ಹಾಕಿದ್ದಾನೆ. ಇದರಿಂದ ಬೆದರಿದ ಯುವತಿ ಹೇಳಿದಂತೆ ದುಡ್ಡುಕೊಟ್ಟಿದ್ದಾಳೆ. ಇದಾದ ನಂತರವೂ ಆರೋಪಿ ಮೋಹನ್‌ ಕಿರುಕುಳ ನೀಡಲು ಶುರು ಮಾಡಿದ್ದಾನೆ. ಕೊನೆಗೆ ರೋಸಿಹೋಗಿ ಮೋಹನ್ ಮತ್ತು ಆತನ ಕುಟುಂಸ್ಥರ ವಿರುದ್ಧ ಯುವತಿ ದೂರು ನೀಡಿದ್ದಾಳೆ. ದೂರಿನ ಆಧಾರದ ಮೇಲೆ ಮೋಹನ್, ತಂದೆ ಆಶ್ವತ್ಥ್ ನಾರಾಯಣ ಹಾಗೂ ಕುಟುಂಸ್ಥರಾದ ಪ್ರೀತಿ, ಲಿಖಿತಾ, ಲವಕುಮಾರ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.

    ಯುವತಿಯಿಂದ ಹಣ ಮಾತ್ರವಲ್ಲದೇ ಬಲವಂತವಾಗಿ ಚಿನ್ನ, ಗಾಡಿ, ದುಬಾರಿ ವಾಚ್ ಪಡೆದುಕೊಂಡಿರುವ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಶಾಸಕರ ಭರ್ಜರಿ ಆಫರ್‌ – ಮದ್ವೆಯಾಗಲು ಅಪ್ರಾಪ್ತರಿಂದಲೂ ಅರ್ಜಿ!

  • ನ್ಯೂಇಯರ್‌ಗೆ ಪೊಲೀಸರು ಅಲರ್ಟ್; ರೆಸಾರ್ಟ್‌, ಏರ್ಪೋರ್ಟ್‌, ರೈಲ್ವೆ ನಿಲ್ದಾಣಗಳ ಮೇಲೆ ಹದ್ದಿನ ಕಣ್ಣು

    ನ್ಯೂಇಯರ್‌ಗೆ ಪೊಲೀಸರು ಅಲರ್ಟ್; ರೆಸಾರ್ಟ್‌, ಏರ್ಪೋರ್ಟ್‌, ರೈಲ್ವೆ ನಿಲ್ದಾಣಗಳ ಮೇಲೆ ಹದ್ದಿನ ಕಣ್ಣು

    ಬೆಂಗಳೂರು: ಹೊಸ ವರ್ಷಕ್ಕೆ (New Year 2025) ಇನ್ನೇನು ಒಂದು ತಿಂಗಳಷ್ಟೇ ಬಾಕಿ ಇದೆ. ಆದ್ರೆ ಸಿಸಿಬಿ ಪೊಲೀಸರು ಈಗಾಗಲೇ ಅಲರ್ಟ್ ಆಗಿದ್ದಾರೆ. ಮಹಾನಗರಿ ಬೆಂಗಳೂರಿಗೆ ದೊಡ್ಡ ಮಟ್ಟದಲ್ಲಿ ಮಾದಕ ವಸ್ತುಗಳು ಬರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿದೆ.

    ಈ ಮಾಹಿತಿ ಆಧರಿಸಿ ಬೆಂಗಳೂರು ಸಿಸಿಬಿ ಪೊಲೀಸರು (Bengaluru CCB Police), ನಗರದ ಪ್ರತಿಷ್ಟಿತ ಹೋಟೆಲ್‌ಗಳು, ಹೊರವಲಯದ ಫಾರಂ ಹೌಸ್‌ಗಳು, ರೆಸಾರ್ಟ್‌ಗಳ ಮೇಲೆ ತೀವ್ರ ನಿಗಾವಹಿಸಿದ್ದಾರೆ. ಇದನ್ನೂ ಓದಿ: QR ಕೋಡ್‌ ಇಲ್ಲದ ಪಾನ್‌ ಕಾರ್ಡ್‌ ಮಾನ್ಯವೇ? ಪಾನ್‌ 2.0 ಯೋಜನೆ ಏನು? ಹೊಸ ಪಾನ್‌ ಪಡೆಯುವುದು ಹೇಗೆ?

    ಅಷ್ಟೇ ಅಲ್ಲದೇ, ಏರ್‌ಪೋರ್ಟ್‌ಗಳು, ರೈಲ್ವೇ ನಿಲ್ದಾಣಗಳು, ಬಸ್ ನಿಲ್ದಾಣಗಳು, ಬೇರೆ ರಾಜ್ಯಗಳಿಂದ ನಗರಕ್ಕೆ ಬರುವ ರಾಷ್ಟೀಯ ಹೆದ್ದಾರಿಗಳಲ್ಲಿ ಗಮನ ಹರಿಸುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ. ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿಗೆ ಬೆದರಿಕೆ ಕೇಸ್‌ – 9 ಕೈದಿಗಳ ವಿರುದ್ಧ ಎಫ್‌ಐಆರ್‌

    ಇದರ ಜೊತೆಗೆ ಹೊಸ ವರ್ಷಾಚರಣೆಗೆ ಈಗಾಗಲೇ ಬುಕ್ಕಿಂಗ್ ಕೂಡ ಓಪನ್ ಆಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ನ್ಯೂ ಇಯರ್ ವೇಳೆ ಯಾವುದೇ ನಿಯಮ ಉಲ್ಲಂಘನೆ ಆಗದಂತೆ ಗೈಡ್‌ಲೈನ್ಸ್‌ ಬಿಡುಗಡೆಗೆ ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್‌ ಮೇಲೆ ನಿಗೂಢ ದ್ರವ ಎಸೆತ – ದಾಳಿ ಹಿಂದೆ ಬಿಜೆಪಿ ಕೈವಾಡ ಎಂದು ಆರೋಪ

  • ಮಾಜಿ ಸಚಿವರಿಗೆ ಕಾಂಗ್ರೆಸ್ ನಾಯಕಿ ಹನಿಟ್ರ್ಯಾಪ್‌; 20 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮಹಿಳೆ ಪೊಲೀಸರಿಗೆ ಲಾಕ್

    ಮಾಜಿ ಸಚಿವರಿಗೆ ಕಾಂಗ್ರೆಸ್ ನಾಯಕಿ ಹನಿಟ್ರ್ಯಾಪ್‌; 20 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮಹಿಳೆ ಪೊಲೀಸರಿಗೆ ಲಾಕ್

    ಬೆಂಗಳೂರು/ಕಲಬುರಗಿ: ಪ್ರಭಾವಿ ಮಾಜಿ ಸಚಿವರೊಬ್ಬರಿಗೆ ಹನಿಟ್ರ್ಯಾಪ್ (Honey Trap) ವಿಡಿಯೊ ತುಣುಕು ತೋರಿಸಿ 20 ಲಕ್ಷ ರೂ. ನೀಡುವಂತೆ ಬ್ಲ್ಯಾಕ್‌ಮೇಲ್‌ ಮಾಡಲು ಯತ್ನಿಸಿದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಮಂಜುಳಾ ಪಾಟೀಲ್‌ ಹಾಗೂ ಆಕೆಯ ಪತಿ ಬೆಂಗಳೂರು ಸಿಸಿಬಿ ಪೊಲೀಸ್ (Bengaluru CCP Police) ಅತಿಥಿಯಾಗಿದ್ದಾರೆ.

    ಹನಿಟ್ರ್ಯಾಪ್ ನೆಪದಲ್ಲಿ ತಮಗೆ 20 ಲಕ್ಷ ರೂ. ನೀಡುವಂತೆ ಬೆದರಿಕೆ ಹಾಕುತ್ತಿರುವ ಬಗ್ಗೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ನೀಡಿದ ದೂರು ಆಧರಿಸಿ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಪೊಲೀಸರು ನಲಪಾಡ್ ಬ್ರಿಗೇಡ್ ಕಲಬುರಗಿ ಘಟಕದ ಅಧ್ಯಕ್ಷೆ, ಆಳಂದ ಕಾಲೋನಿ ನಿವಾಸಿ ಮಂಜುಳಾ ಪಾಟೀಲ್ (32) ಹಾಗೂ ಆಕೆಯ ಪತಿ ಶಿವರಾಜ್ ಪಾಟೀಲನನ್ನು (39) ಬಂಧಿಸಿದ್ದಾರೆ. ಬಂಧನದ ಬಳಿಕ ದಂಪತಿಯನ್ನು ನ್ಯಾಯಾಲಯದ ಎದುರು ಹಾಜರುಪಡಿಸಿದ ಬಳಿಕ ಕೋರ್ಟ್ 8 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದು, ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.

    ಆರೋಪಿ ಮಂಜುಳಾ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರ ಮೊಬೈಲ್ ನಂಬರ್ ಪಡೆದು ವಾಟ್ಸಪ್‌ನಲ್ಲಿ ಪರಿಚಯ ಮಾಡಿಕೊಂಡು ನಂತರ, ವಾಟ್ಸಪ್‌ನಲ್ಲಿ ಚಾಟ್ ಮಾಡಿದ್ದಾಳೆ. ಆಗಾಗ ಸಲುಗೆಯಿಂದ ಚಾಟಿಂಗ್ ಮಾಡುತ್ತಾ, ತೀರಾ ಸಲುಗೆ ಬೆಳೆಸಿಕೊಂಡಿದ್ದಾಳೆ. ಈ ಮಧ್ಯೆ ತನ್ನೊಂದಿಗೆ ಖಾಸಗಿಯಾಗಿ ಕಾಣಿಸಿಕೊಂಡ ಮಾಜಿ ಸಚಿವರ ದೃಶ್ಯಗಳನ್ನು ವಿಡಿಯೋ, ಫೋಟೋಗಳನ್ನು ಇಟ್ಟುಕೊಂಡು, ಆ ವಿಡಿಯೋ ತುಣುಕು ಮಾಜಿ ಸಚಿವರಿಗೆ ಕಳುಹಿಸಿ ಬೆದರಿಕೆ ಹಾಕಲು ಶುರು ಮಾಡಿದ್ದಾಳೆ.

    20 ಲಕ್ಷ ರೂ. ನೀಡದೆ ಹೋದರೆ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ. ಈ ಬೆಳವಣಿಗೆಯಿಂದ ಕಂಗಾಲಾದ ಮಾಜಿ ಸಚಿವರು ಈ ಕುರಿತು ತಮ್ಮ ಪುತ್ರನೊಂದಿಗೆ ಎಲ್ಲವನ್ನೂ ಹಂಚಿಕೊಂಡಿದ್ದಾರೆ. ಪುತ್ರ ತಮ್ಮ ತಂದೆಗೆ ಧೈರ್ಯ ತುಂಬಿ ಮಹಿಳೆಯ ವಿರುದ್ಧ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಜೊತೆಗೆ, ಹಣ ಕೊಡುವುದಾಗಿ ಮಹಿಳೆಯನ್ನು ಬೆಂಗಳೂರಿಗೆ ಕರೆಸಿ, ಆಕೆ ಪತಿಯೊಂದಿಗೆ ಹಣ ಪಡೆಯಲು ಬಂದಾಗ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

  • ಬೆಳಗಾವಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ಹಣ ಜಪ್ತಿ

    ಬೆಳಗಾವಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ಹಣ ಜಪ್ತಿ

    ಬೆಳಗಾವಿ: ಇಲ್ಲಿನ ಸಿಸಿಬಿ ಪೊಲೀಸರು (Belagavi CCB Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ರೂ. ಹಣ ಜಪ್ತಿ ಮಾಡಲಾಗಿದೆ.

    ಮಹಾರಾಷ್ಟ್ರದ ಸಾಂಗಲಿ‌ಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಗೂಡ್ಸ್ ವಾಹನದಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಾಹನ ಚಾಲಕನನ್ನು ವಶಕ್ಕೆ ಪಡೆದು ಹಣ ಜಪ್ತಿ (Money seized) ಮಾಡಿದ್ದಾರೆ. ಇದನ್ನೂ ಓದಿ: Chattisgarh | ಅಬುಜ್ಮಾರ್ ಎನ್‌ಕೌಂಟರ್‌ನಲ್ಲಿ 38 ಮಾವೋವಾದಿಗಳ ಹತ್ಯೆ

    ಮಹಾರಾಷ್ಟ್ರದ ಸಾಂಗಲಿ ಪಟ್ಟಣದ ಸಚೀನ ಮೇನಕುದುಳೆ, ಮಾರುತಿ ಮಾರಗುಡೆ ಎಂಬ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ತಲೆ ಸೀಳಿದ ಬುಲೆಟ್‌, ಬೆರಳು ಕಟ್‌; ಭೀಕರ ಹತ್ಯೆಯಾದ ಹಮಾಸ್‌ ಮುಖ್ಯಸ್ಥನ ದೇಹ ಸ್ಥಿತಿ ಹೇಗಿತ್ತು?

    ಹಣ ಸಾಗಾಟ ಮಾಡಲು ಗೂಡ್ಸ್ ವಾಹನದ ಕ್ಯಾಬಿನನ್ನೇ ಮಾಡಿಫೈ ಮಾಡಿದ್ದಾರೆ. ಜಪ್ತಿಯಾದ ಹಣದ ಮೂಲ ಯಾವುದು ಎಂದು ತನಿಖೆ ನಡೆಸುತ್ತಿರುವುದಾಗಿ ಡಿಸಿಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ. ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಕುರಿತು ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದೆ. ಇದನ್ನೂ ಓದಿ: ಮತ್ತೆ 3 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ – ಬೆಂಗಳೂರಿಂದ ಮುಂಬೈಗೆ ಹೊರಟಿದ್ದ ಫ್ಲೈಟ್‌ಗೂ ಥ್ರೆಟ್ ಕಾಲ್

  • ಪರಪ್ಪನ ಅಗ್ರಹಾರಕ್ಕೆ ಏಕಾಏಕಿ ಸಿಸಿಬಿ ದಾಳಿ: 18 ಮೊಬೈಲ್, ಮಾದಕ ವಸ್ತು, ಹಣ ಸೀಜ್

    ಪರಪ್ಪನ ಅಗ್ರಹಾರಕ್ಕೆ ಏಕಾಏಕಿ ಸಿಸಿಬಿ ದಾಳಿ: 18 ಮೊಬೈಲ್, ಮಾದಕ ವಸ್ತು, ಹಣ ಸೀಜ್

    – ವಿಲ್ಸನ್‌ಗಾರ್ಡನ್ ನಾಗನದ್ದು ಸೇರಿದಂತೆ 18 ಮೊಬೈಲ್ ಸೀಜ್
    – ಡಿಸಿಪಿ ಸ.ರಾ ಫಾತಿಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸರಿಂದ ದಾಳಿ

    ಬೆಂಗಳೂರು: ದರ್ಶನ್ (Actor Darshan) ರಾಜಾತಿಥ್ಯ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿಗೆ (Parappana Agrahara Jail) ಪೊಲೀಸರು ಏಕಾಏಕಿ ದಾಳಿ ನಡೆಸಿದ್ದು, ಮೊಬೈಲ್ ಸೇರಿದಂತೆ ಮಾದಕ ವಸ್ತು ಹಾಗೂ ಹಣವನ್ನು ವಶಕ್ಕೆ ಪಡೆದಿದ್ದಾರೆ.

    ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದ ದರ್ಶನ್ ಹಾಗೂ ವಿಲ್ಸನ್‌ಗಾರ್ಡನ್ ನಾಗನ ಫೋಟೋ ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರು ಹದ್ದಿನ ಕಣ್ಣಿದ್ದರು. ಜೊತೆಗೆ ಜೈಲಾಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿದ್ದವು. ಆದರೆ ಇದೀಗ ಏಕಾಏಕಿ ದಾಳಿ ನಡೆಸಿದ್ದಾರೆ.ಇದನ್ನೂ ಓದಿ: Breaking – ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌!

    ಪರಪ್ಪನ ಅಗ್ರಹಾರ ಜೈಲಿನ ಮೇಲೆ ಆಗ್ನೇಯ ಪೊಲೀಸರಿಂದ ದಾಳಿ ನಡೆದಿದ್ದು, ರಾತ್ರಿ ಏಕಾಏಕಿ ಡಿಸಿಪಿ ಸರಾ ಫಾತಿಮಾ (DCP Sarah Fathima) ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸರಿಂದ ದಾಳಿ ನಡೆಸಲಾಗಿದೆ. ಜೈಲಿನಲ್ಲಿ ಮೊಬೈಲ್ ಬಳಕೆಗೆ ಬಲವಾದ ಪುರಾವೆಗಳು ಲಭ್ಯವಾಗಿದ್ದು, ಜೈಲಾಧಿಕಾರಿಗಳ ಕಳ್ಳಾಟ ಮುಂದುವರೆದಿರುವುದು ದಾಳಿ ವೇಳೆ ಸಾಬೀತಾಗಿದೆ.

    ಕುಖ್ಯಾತ ರೌಡಿ ವಿಲ್ಸನ್‌ಗಾರ್ಡನ್ ನಾಗನ (Wilson Garden Naga) ಬ್ಯಾರಕ್ ಅಕ್ಕಪಕ್ಕದಲ್ಲಿ ಮೊಬೈಲ್‌ಗಳು ಪತ್ತೆಯಾಗಿದ್ದು, ಸುಮಾರು 17 ಆಂಡ್ರಾಯ್ಡ್ ಫೋನ್‌ಗಳು ಸಿಕ್ಕಿವೆ. ವಿಲ್ಸನ್ ಗಾರ್ಡನ್ ನಾಗನ ಮೊಬೈಲ್ ಸೇರಿದಂತೆ ಸಹಚರರ ಸುಮಾರು 18 ಮೊಬೈಲ್ ಸೀಜ್ ಮಾಡಿದ್ದಾರೆ. ಜೊತೆಗೆ ಮಾದಕ ವಸ್ತು ಹಾಗೂ ಹಣವನ್ನು ವಶಕ್ಕೆ ಪಡೆದಿದ್ದಾರೆ. ಇದನ್ನು ಕಂಡು ಖುದ್ದು ಪೊಲೀಸರೇ ಶಾಕ್ ಆಗಿದ್ದಾರೆ. ಇಷ್ಟೆಲ್ಲಾ ಇದ್ದರೂ ವಿಲ್ಸನ್‌ಗಾರ್ಡನ್ ನಾಗನನ್ನು ಬೇರೆ ಕಡೆ ಏಕೆ ವರ್ಗಾವಣೆ ಮಾಡಲಿಲ್ಲ. ಅವನ ಹಿಂದೆ ಯಾರಿದ್ದಾರೆ? ಅವನಿಗೆ ಇಲಾಖೆಯಲ್ಲಿ ಇಷ್ಟೊಂದು ಪ್ರಭಾವವಿದೇಯಾ? ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.ಇದನ್ನೂ ಓದಿ: ಶಾಸಕ ಮುನಿರತ್ನ ಬಂಧನ ಪ್ರಕರಣ – ತಪ್ಪು ಮಾಡಿರೋದು ಸಾಮಾನ್ಯ ವ್ಯಕ್ತಿಯಲ್ಲ ಒಬ್ಬ ಮಾಜಿ ಮಂತ್ರಿ: ಡಿಕೆ ಸುರೇಶ್‌

  • ಕೋರ್ಟ್‍ನಲ್ಲಿ ಕೆಲಸ ಕೊಡಿಸೋದಾಗಿ ಲಕ್ಷ ಲಕ್ಷ ವಂಚನೆ – ಸಿಸಿಬಿ ಠಾಣೆಯಲ್ಲಿ ಕೇಸ್ ದಾಖಲು

    ಕೋರ್ಟ್‍ನಲ್ಲಿ ಕೆಲಸ ಕೊಡಿಸೋದಾಗಿ ಲಕ್ಷ ಲಕ್ಷ ವಂಚನೆ – ಸಿಸಿಬಿ ಠಾಣೆಯಲ್ಲಿ ಕೇಸ್ ದಾಖಲು

    -ನ್ಯಾಯಮೂರ್ತಿಗಳ ಸಹಿಯನ್ನೇ ನಕಲಿ ಮಾಡಿ ನೇಮಕಾತಿ ಪತ್ರ ಹಂಚಿಕೆ!

    ಕೊಪ್ಪಳ: ನ್ಯಾಯಾಲಯದಲ್ಲಿ (Court) ಕೆಲಸ ಕೊಡಿಸೋದಾಗಿ ಹಲವಾರು ಜನರಿಗೆ ಲಕ್ಷಾಂತರ ರೂ. ಹಣ ವಂಚಿಸಿರುವ ಪ್ರಕರಣ ಕೊಪ್ಪಳದಲ್ಲಿ (Koppal) ನಡೆದಿದೆ.

    ಸಿದ್ದಲಿಂಗಯ್ಯ ಹಿರೇಮಠ ಎಂಬವನ ವಿರುದ್ಧ ವಂಚನೆ ಆರೋಪ ಮಾಡಲಾಗಿದೆ. ನ್ಯಾಯಾಲಯದಲ್ಲಿ ಪ್ರೋಸೆಸ್ ಸರ್ವರ್, ಜವಾನ ಹುದ್ದೆ ಖಾಲಿ ಇದೆ ಎಂದು ಜನರಿಗೆ ನಂಬಿಸುತ್ತಿದ್ದ. ಅಲ್ಲದೇ ಉದ್ಯೋಗ ಕೊಡಿಸುತ್ತೇನೆ ಎಂದು ಪ್ರತಿಯೊಬ್ಬರ ಬಳಿ 7 ಲಕ್ಷ ರೂ. ಹಣ ವಸೂಲಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

    ಆರೋಪಿ ಹಣ ಪಡೆದವರಿಗೆ ನಕಲಿ ನೇಮಕಾತಿ ಪತ್ರ ಕೊಟ್ಟಿದ್ದಾನೆ. ಅಲ್ಲದೇ ನೇಮಕಾತಿ ಪತ್ರದಲ್ಲಿ ನ್ಯಾಯಮೂರ್ತಿಗಳ ಸಹಿಯನ್ನು ನಕಲಿ ಮಾಡಿದ್ದಾನೆ. ರಾಜ್ಯದ ಹಲವೆಡೆ ಇಂತಹ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

    ಈ ಸಂಬಂಧ ಬೆಂಗಳೂರು (Bengaluru) ಮೂಲದ ಅಬ್ದುಲ್ ರಜಾಕ್ ಎಂಬವರು ಸಿದ್ದಲಿಂಗಯ್ಯ ವಿರುದ್ಧ ಸಿಸಿಬಿ (CCB) ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

  • ಕಾಸಿಗಾಗಿ ಸಿಡಿಆರ್ ಸೇಲ್‌ ಮಾಡ್ತಿದ್ದ ಪೊಲೀಸಪ್ಪ ಅರೆಸ್ಟ್ – ಎಸ್‌ಐ ಸಿಡಿಆರ್ ತೆಗೆದು ಪತ್ನಿಗೆ ನೀಡಿರೊ ಆರೋಪ?

    ಕಾಸಿಗಾಗಿ ಸಿಡಿಆರ್ ಸೇಲ್‌ ಮಾಡ್ತಿದ್ದ ಪೊಲೀಸಪ್ಪ ಅರೆಸ್ಟ್ – ಎಸ್‌ಐ ಸಿಡಿಆರ್ ತೆಗೆದು ಪತ್ನಿಗೆ ನೀಡಿರೊ ಆರೋಪ?

    – ʻಇರುಂಬು ತಿರೈʼ ಸಿನಿಮಾ ಶೈಲಿಯ ಸೈಬರ್‌ ಜಾಲ ಪತ್ತೆ

    ಬೆಂಗಳೂರು: 2018ರಲ್ಲಿ ತೆರೆ ಕಂಡ ತಮಿಳಿನ ʻಇರುಂಬು ತಿರೈʼ ಸಿನಿಮಾ (Irumbu Thirai Cinema) ಸೈಬರ್‌ ಜಗತ್ತನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು. ಇದೀಗ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಈ ಸಿನಿಮಾ ಶೈಲಿಯಲ್ಲೇ ನಡೆಯುತ್ತಿದ್ದ ಅಪರಾಧ ಕೃತ್ಯವೊಂದನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಪತಿ ಪತ್ನಿಯರ, ಪ್ರೇಮಿಗಳ ಕಾಲ್ ಡಿಟೈಲ್ಸ್‌ಗಳನ್ನ (Call Details) ಹಣಕ್ಕಾಗಿ ಅಕ್ರಮವಾಗಿ ನೀಡ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಪ್ರೈವೆಟ್ ಡಿಟೆಕ್ಟೀವ್ ಏಜೆನ್ಸಿಯ ಕಿಂಗ್‌ಪಿನ್‌ನನ್ನು ಸಿಸಿಬಿ ಪೊಲೀಸರು (CCB Police) ಅರೆಸ್ಟ್ ಮಾಡಿದ್ದಾರೆ.

    ಹೌದು. ಅರ್ಜುನ್‌ ಸರ್ಜಾ, ವಿಶಾಲ್‌, ಸಮಂತಾ ನಟನೆಯ ಈ ಸಿನಿಮಾ ಇಡೀ ಸೈಬರ್‌ ಜಗತ್ತಿನ (Cyber World) ಕುಕೃತ್ಯಗಳನ್ನ ಬಿಚ್ಚಿಟ್ಟಿತ್ತು. ನಾವು ಬಳಸುವ ಮೊಬೈಲ್‌ಗಳೇ ನಮಗೆ ಎಷ್ಟು ಅಪಾಯಕಾರಿಯಾಗುತ್ತೆ? ನಾವು ಸೈಬರ್‌ ಸೆಂಟರ್‌, ಅಪ್ಲಿಕೇಷನ್‌ಗಳಿಗೆ ಬಳಸುವ ದಾಖಲಾತಿಗಳು, ಕೆಲ ಮಳಿಗೆಗಳಲ್ಲಿ ಜೆರಾಕ್ಸ್‌ ಮಾಡಿಸಲು ಮುಂದಾದಾಗ ನಮಗೇ ಗೊತ್ತಿಲ್ಲದೇ ನಮ್ಮ ದಾಖಲಾತಿಗಳನ್ನು ಕದ್ದು, ಮಾರಾಟ ಮಾಡುವುದು. ಕಂಡ ಕಂಡ ಆಫರ್‌ಗಳಿಗಾಗಿ ನೀಡುವ ದಾಖಲಾತಿ ಕೊನೆಗೆ ನಮಗೆ ಕುತ್ತು ತರುತ್ತದೆ ಎಂಬೆಲ್ಲಾ ರಹಸ್ಯಗಳನ್ನ ಈ ಸಿನಿಮಾ ಕಣ್ಣ ಮುಂದಿಟ್ಟಿತ್ತು. ಇದೀಗ ಬೆಂಗಳೂರಿನಲ್ಲಿ ಅದೇ ಮಾದರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮಾತೃತ್ವದ ರಜೆ ವೇಳೆ ಬೇರೆಯವರ ನೇಮಕ – ಹುದ್ದೆಯಲ್ಲಿ ಮುಂದುವರೆಯುವಂತೆ ಹೈಕೋರ್ಟ್ ತೀರ್ಪು

    ಏನಿದು ಥ್ರಿಲ್ಲಿಂಗ್‌ ಕ್ರೈಂ ಸ್ಟೋರಿ?
    ಕಳೆದ ಮೇ ತಿಂಗಳಲ್ಲಿ ಸಿಸಿಬಿ ಹಾಗೂ ವಿಜಯನಗರ ಉಪವಿಭಾಗದ ಪೊಲೀಸರು ಖಾಸಗಿ ಡಿಟೆಕ್ಟಿವ್‌ ಏಜೆನ್ಸಿಗಳ ಕಳ್ಳಾಟವನ್ನ ಬಯಲಿಗೆಳೆದಿದ್ದರು. ಇದೇ ಕೇಸ್‌ನಲ್ಲಿ ಇದೀಗ ಸಿಸಿಬಿ ಪೊಲೀಸ್ರು ಸಿಐಡಿ ಪೊಲೀಸ್ ಸಿಬ್ಬಂದಿಯನ್ನ ಬಂಧಿಸಿದ್ದಾರೆ. ಅನಧಿಕೃತವಾಗಿ ಸಿಡಿಆರ್ ಪಡೆಯುತ್ತಿದ್ದ ಆರೋಪದ ಮೇಲೆ ಮಹಾನಗರಿ ಡಿಟೆಕ್ಟಿವ್‌ ಮತ್ತು ಸೆಕ್ಯುರಿಟಿ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್, ರಾಜಧಾನಿ ಕಾರ್ಪೊರೇಟ್ ಸರ್ವಿಸ್ ಹೆಸರಿನ ಕಚೇರಿಗಳ ಮೇಲೆ ದಾಳಿ ನಡೆಸಿ ಪುರುಷೋತ್ತಮ ಕುಮಾರ್, ತಿಪ್ಪೇಸ್ವಾಮಿ, ಮಹಾಂತಗೌಡ, ರೇವಂತ, ಗುರುಪಾದಸ್ವಾಮಿ, ಶ್ರೀನಿವಾಸ ಮತ್ತು ಭರತ್ ಎಂಬುವವರನ್ನ ಬಂಧಿಸಲಾಗಿತ್ತು.  ಇದನ್ನೂ ಓದಿ: ವಿನೇಶ್‌ ಫೋಗಟ್‌ಗೆ 4 ಕೋಟಿ ರೂ. ಬಹುಮಾನ – ಬೆಳ್ಳಿ ಪದಕ ವಿಜೇತೆ ಮಾದರಿಯಲ್ಲಿ ಗೌರವಿಸಲು ಸಕಲ ಸಿದ್ಧತೆ

    ಇದೀಗ ಈ ತಂಡದ ಕಿಂಗ್ ಪಿನ್ ಆಂಧ್ರದ ಪುಲಿವೆಂದುಲು ಮೂಲದ ನಾಗೇಶ್ವರ ರೆಡ್ಡಿಯನ್ನ ಬಂಧಿಸಲಾಗಿದೆ. ಇನ್ನೂ ಈ ನಾಗೇಶ್ವರ ರೆಡ್ಡಿಗೆ ಸಿಡಿಆರ್ ನೀಡ್ತಿದ್ದ ಸಿಐಡಿ ಪೊಲೀಸ್ ಸಿಬ್ಬಂದಿ ಮುನಿರತ್ನ ಎಂಬಾತನನ್ನು ಸಹ ಬಂಧಿಸಲಾಗಿದೆ. ಮುನಿರತ್ನ ಹಲವು ವರ್ಷಗಳಿಂದ ಸಿಐಡಿ ಟೆಕ್ನಿಕಲ್ ಸೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ಹಿರಿಯ ಅಧಿಕಾರಿಗಳು ಕೇಸ್ ಸಂಬಂಧ ಅಧಿಕೃತವಾಗಿ ಸಿಡಿಆರ್ ಪಡೆಯಲು ಸರ್ವಿಸ್ ಪ್ರೊವೈಡರ್ ಗಳಿಗೆ ನೀಡುವ ಪತ್ರದಲ್ಲಿ ತನಗೆ ಬೇಕಾದ ಫೋನ್ ನಂಬರ್‌ಗಳನ್ನ ಸೇರಿಸಿ ಸಿಡಿಆರ್ ಪಡೆದು ಹಣಕ್ಕಾಗಿ ನಾಗೇಶ್ವರ್ ರಾವ್ ಗೆ ಮಾರಾಟ ಮಾಡ್ತಿದ್ದ.  ಇದನ್ನೂ ಓದಿ: ಬೆಳಗ್ಗೆ ಮದುವೆ, ಮಧ್ಯಾಹ್ನ ಮಚ್ಚಿನಿಂದ ಹೊಡೆದಾಟ – ನಿನ್ನೆ ವಧು, ಇಂದು ವರ ಸಾವು!

    ಇನ್ನು ಗಂಡ ಹೆಂಡತಿ, ಪ್ರೇಮಿಗಳ ನಡುವಿನ ಅನುಮಾನಕ್ಕೆ ಸಿಡಿಆರ್ ಗಳು ಹೆಚ್ಚು ಬಳಕೆಯಾಗಿರೊ ಸಾಧ್ಯತೆಯಿದೆ. ಸಿಡಿಆರ್‌ ಪಡೆಯುತ್ತಿದ್ದವರು ಯಾರು ಅಂತ ನೋಡೊದಾದ್ರೆ ಹೆಚ್ಚಾಗಿ ಗಂಡ ಅಥವಾ ಹೆಂಡತಿ‌ ಮತ್ತು ಪ್ರೇಮಿಗಳು ಸಂಬಂಧದಲ್ಲಿ ಅನುಮಾನ ಮೂಡಿ ತಮ್ಮ ಪ್ರೀತಿ ಪಾತ್ರರ ಯಾರು ಸಂಪರ್ಕದಲ್ಲಿದ್ದಾರೆ ಅನ್ನೋದನ್ನ ತಿಳಿದುಕೊಳ್ಳಲು ಈ ಕಾಲ್ ಡಿಟೈಲ್ಸ್‌ನ ಅನಧಿಕೃತವಾಗಿ ಪಡೆದುಕೊಳ್ಳುತ್ತಿದ್ದರಂತೆ. ಅಷ್ಟೇ ಅಲ್ಲದೇ ಬ್ಯುಸಿನೆಸ್ ಮೆನ್‌ಗಳು ಕೆಲ ರಾಜಕೀಯ ವ್ಯಕ್ತಿಗಳು ತಮ್ಮ ಎದುರಾಳಿಗಳ ಸಿಡಿಆರ್ ಪಡೆದಿರೋ ಶಂಕೆ ವ್ಯಕ್ತವಾಗಿದೆ. ಇದ್ರಲ್ಲಿ ಕೆಲ ಪೊಲೀಸ್ ಅಧಿಕಾರಿಗಳ ಪತ್ನಿಯರು ತಮ್ಮ ಪತಿಯ ಕಾಲ್ ಡಿಟೈಲ್ ಪಡೆದಿದ್ದಾರಂತೆ. ಸದ್ಯ ನಾಗೇಶ್ವರ ರೆಡ್ಡಿ ಮತ್ತು ಪೊಲೀಸ್ ಸಿಬ್ಬಂದಿ ಮುನಿರತ್ನ ಬಂಧಿಸಿರೋ ಸಿಸಿಬಿ ಹೆಚ್ಚಿನ ವಿಚಾರಣೆಗೆ ಒಳಪಡಿಸ್ತಿದೆ.

  • ಬಿಡಿಎ ಅಕ್ರಮ ಕೇಸ್ ಮುಚ್ಚಿಹಾಕಲು ಲಂಚ ಪಡೆದ ಆರೋಪ – ಸಿಸಿಬಿ ಅಧಿಕಾರಿ ಯತೀಶ್ ಅಮಾನತು

    ಬಿಡಿಎ ಅಕ್ರಮ ಕೇಸ್ ಮುಚ್ಚಿಹಾಕಲು ಲಂಚ ಪಡೆದ ಆರೋಪ – ಸಿಸಿಬಿ ಅಧಿಕಾರಿ ಯತೀಶ್ ಅಮಾನತು

    ಬೆಂಗಳೂರು: ಬಿಡಿಎ (BDA) ಅಕ್ರಮ ಪ್ರಕರಣವನ್ನ ಮುಚ್ಚಿಹಾಕಲು ಲಂಚ ಪಡೆದ ಆರೋಪದ ಹಿನ್ನೆಲೆ ಸಿಸಿಬಿ ಪೊಲೀಸ್ (CCB Police) ಸಿಬ್ಬಂದಿ ಯತೀಶ್ ಅವರನ್ನು ಅಮಾನತು (Suspend) ಮಾಡಲಾಗಿದೆ.

    ಸಿಸಿಬಿ ಮುಖ್ಯಸ್ಥರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಬಿಡಿಎ ಸೈಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಶೇಷಾದ್ರಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ಕಮಿಷನರ್ ಗಂಭೀರವಾಗಿ ಪರಿಗಣಿಸಿ ಎಲ್ಲಾ ಕೇಸ್‌ಗಳನ್ನು ಸಿಸಿಬಿ ತನಿಖೆಗೆ ವರ್ಗಾವಣೆ ಮಾಡಿದ್ದರು.  ಇದನ್ನೂ ಓದಿ: ʻಮಹಾʼ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಗೆಲುವು; 11ರ ಪೈಕಿ 9 ಸ್ಥಾನಗಳಲ್ಲಿ ಜಯ!

    ಕೇಸ್ ಕ್ಲೋಸ್ ಮಾಡಿಸಲು ಸಿಬ್ಬಂದಿ ಯತೀಶ್ ಬಿಡಿಎ ಕೇಸ್‌ನಲ್ಲಿರುವ ಆರೋಪಿಯಿಂದ 55 ಲಕ್ಷ ರೂ. ಲಂಚ ಪಡೆದಿದ್ದರು. ಈ ಬಗ್ಗೆ ಸಿಸಿಬಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ಬಂದಿತ್ತು.  ಇದನ್ನೂ ಓದಿ: ಕಂಬಳದಲ್ಲಿ ಅಪರ್ಣಾ ಜಾಣ ನಿರೂಪಣೆ – ನೆನಪಿನ ಬುತ್ತಿ ಬಿಚ್ಚಿಟ್ಟ ಸಂಸದ ಕೋಟ

    ವಿಚಾರಣೆ ವೇಳೆ ಆರೋಪಿಯಿಂದ ಸಿಸಿಬಿ ಸಿಬ್ಬಂದಿ ಯತೀಶ್ ಹಣ ಪಡೆದಿರೋದು ಸಾಬೀತಾಗಿದೆ. ಹೀಗಾಗಿ ಸಿಸಿಬಿ ಸಿಬ್ಬಂದಿ ಯತೀಶ್ ಅವರನ್ನು ಅಮಾನತು ಮಾಡಿ ಆದೇಶಿಸಿದೆ. ಸದ್ಯ ಸಿಸಿಬಿ ಹಿರಿಯ ಅಧಿಕಾರಿಗಳು ಇಲಾಖಾ ತನಿಖೆಗೆ ಕೂಡ ಆದೇಶಿಸಿದ್ದಾರೆ. ಇದನ್ನೂ ಓದಿ: Dengue Alert: ರಾಜ್ಯದಲ್ಲಿ ಒಂದೇ ದಿನ 400ಕ್ಕೂ ಹೆಚ್ಚು ಕೇಸ್‌ ಪತ್ತೆ!

     

  • ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಕೇಸ್‌ ತನಿಖೆ ಸಿಸಿಬಿ ಹೆಗಲಿಗೆ

    ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಕೇಸ್‌ ತನಿಖೆ ಸಿಸಿಬಿ ಹೆಗಲಿಗೆ

    ಬೆಂಗಳೂರು: ಇತ್ತೀಚೆಗೆ ಸಂಜಯನಗರ ಪೊಲೀಸ್ (Sanjaynagar Police) ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೆಐಡಿಬಿ ಅಧಿಕಾರಿ ಶಿವಕುಮಾರ್ ಪತ್ನಿ ಹಾಗೂ ಹೈಕೋರ್ಟ್ ವಕೀಲೆ ಚೈತ್ರಾಗೌಡ (High Court lawyer Chaitra Gowda) ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಈ ಪ್ರಕರಣ ತನಿಖೆಯನ್ನು ಸಿಸಿಬಿ (CCB) ವರ್ಗಾಯಿಸಿದ್ದಾರೆ.

    ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗುತ್ತಿದ್ದಂತೆ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಚೈತ್ರಾ ಜೊತೆಗೆ ಮಾತನಾಡಿರುವ ವ್ಯಕ್ತಿಗಳ ಕಾಲ್ ಲಿಸ್ಟ್ ತೆಗೆಯಲು ಅಧಿಕಾರಿಗಳು ಮುಂದಾಗಿದ್ದಾರೆ. ಚೈತ್ರಾ ಮೊಬೈಲ್ ಲಾಕ್ ಆಗಿದ್ದು, ಅದನ್ನು ಓಪನ್ ಮಾಡಲು ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ. ಅಲ್ಲದೇ ಚೈತ್ರಾ ಸಾವಿಗೂ ಹಿಂದಿನ 15 ದಿನಗಳ ಸಿಸಿಟಿವಿ ಫೂಟೇಜ್ ಪರಿಶೀಲನೆಗೆ ನಡೆಸುತ್ತಿದ್ದಾರೆ. ಸಧ್ಯ ಚೈತ್ರಾ ಮರಣೋತ್ತರ ಪರೀಕ್ಷೆಯ ವರದಿಗಾಗಿ ಸಿಸಿಬಿ ಅಧಿಕಾರಿಗಳು ಕಾಯುತ್ತಿದ್ದಾರೆ. ಇದನ್ನೂ ಓದಿ: ಗೃಹ ಸಚಿವರ ನಿವಾಸದ ಮುಂದೆ ಪ್ರತಿಭಟನೆ – ಮಾಜಿ ಸಚಿವ ಸೇರಿ ಇಬ್ಬರು ಪೊಲೀಸರ ವಶಕ್ಕೆ

    ಮೇ 11 ರಂದು ಚೈತ್ರಾಗೌಡ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ ನೋಟ್‍ನಲ್ಲಿ ಖಿನ್ನತೆಗೆ ಒಳಗಾಗಿದ್ದು, ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿತ್ತು. ಅವರ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿತ್ತು. ಬೆಂಗಳೂರು ವಕೀಲರ ಸಂಘದಿಂದ ಪೊಲೀಸ್ ಕಮಿಷನರ್ ಹಾಗೂ ಉತ್ತರ ವಿಭಾಗದ ಡಿಸಿಪಿಗೆ ಪತ್ರ ಬರೆದು ಚೈತ್ರಾ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

    ಚೈತ್ರಾ ಕೇವಲ ವಕೀಲೆ ಅಷ್ಟೇ ಆಗಿರದೆ ಒಳ್ಳೆಯ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿದ್ದರು. ಅಲ್ಲದೇ ಅತ್ಯಂತ ದಿಟ್ಟ ಮಹಿಳೆ ಹಾಗೂ ಧೈರ್ಯವಂತೆಯಾಗಿದ್ದರು ಎಂಬ ಮಾತುಗಳು ಅವರ ಬಗ್ಗೆ ಕೇಳಿಬಂದಿತ್ತು. ಇದನ್ನೂ ಓದಿ: ಭಾರತ vs ಪಾಕಿಸ್ತಾನ T20 ವಿಶ್ವಕಪ್ ಪಂದ್ಯಕ್ಕೆ ಬೆದರಿಕೆ ಕರೆ – ಕ್ರೀಡಾಂಗಣದಲ್ಲಿ ಭದ್ರತೆ ಹೆಚ್ಚಳ

  • ಬಿಟ್‌ಕಾಯಿನ್‌ ಕೇಸ್‌ ತನಿಖೆ IPS ಅಧಿಕಾರಿ ಬುಡಕ್ಕೆ – ಸಂದೀಪ್ ಪಾಟೀಲ್‌ಗೆ ನೋಟಿಸ್!

    ಬಿಟ್‌ಕಾಯಿನ್‌ ಕೇಸ್‌ ತನಿಖೆ IPS ಅಧಿಕಾರಿ ಬುಡಕ್ಕೆ – ಸಂದೀಪ್ ಪಾಟೀಲ್‌ಗೆ ನೋಟಿಸ್!

    ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೊಲೀಸರೇ ಹಗರಣದ ದಿಕ್ಕು ತಪ್ಪಿಸಿದ್ದಲ್ಲದೇ ಬಿಟ್‌ಕಾಯಿನ್ ಹಗರಣದಲ್ಲಿ (Bit Coin Case) ಭಾಗಿಯಾಗಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಕಾಂಗ್ರೆಸ್ ಸರ್ಕಾರ (Congress Government) ಬಿಟ್‌ಕಾಯಿನ್‌ ತನಿಖೆಯ ಹೊಣೆಯನ್ನು ಎಸ್‌ಐಟಿ ವಹಿಸಿದ್ದು, ಇದೀಗ ಬಿಟ್‌ಕಾಯಿನ್‌ ತನಿಖೆ ಹಿರಿಯ ಐಪಿಎಸ್ ಅಧಿಕಾರಿಯ ವಿಚಾರಣೆ ಹಂತಕ್ಕೆ ತಲುಪಿದೆ.

    ಬಿಟ್‌ಕಾಯಿನ್ (Bit Coin) ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ. ಈತನನ್ನು ಸಿಸಿಬಿ ಅಧಿಕಾರಿಗಳು (CCB Officers) ಪದೇ ಪದೇ ವಿಚಾರಣೆ ನಡೆಸಿದ್ದಾರೆ. ಎಸ್‌ಐಟಿ ಸಹ ತನಿಖೆಯ ಜವಾಬ್ದಾರಿ ವಹಿಸಿದ ಮೇಲೆ ಶ್ರೀಕಿಯ ವಿಚಾರಣೆಯನ್ನು ಮಾಡಿತ್ತು. ಇದೀಗ ಬಿಟ್‌ಕಾಯಿನ್ ಹಗರಣ ತನಿಖೆಗೆ ಹಾಜರಾಗುವಂತೆ ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್‌ಗೆ ಎಸ್‌ಐಟಿ ನೊಟೀಸ್ ನೀಡಿದೆ.

    ಇನ್ನೂ ಬಿಟ್‌ಕಾಯಿನ್ ಹಗರಣದ ತನಿಖೆ ಎಸ್‌ಐಟಿ ಕೈಗೊಳ್ಳುತ್ತಿದ್ದಂತೆ ಇನ್ಸ್‌ಪೆಕ್ಟರ್ ಪ್ರಶಾಂತ್ ಬಾಬು, ಸಂತೋಷ್‌ರನ್ನು ವಿಚಾರಣೆ ಮಾಡಿ ಬಂಧಿಸಲಾಗಿತ್ತು. ಈ ಹಗರಣ ನಡೆದ ವೇಳೆ ಸಿಸಿಬಿಯ ಮುಖ್ಯಸ್ಥರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್‌ಗೂ ಹಲವು‌ ಮಾಹಿತಿಗಳು ನೀಡಲಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾದವ್ಳು ಪರಪುರುಷನ ಜೊತೆ ಡೇಟಿಂಗ್- ರೊಚ್ಚಿಗೆದ್ದ ಪತಿ ಮಚ್ಚಿನಿಂದ ಅಟ್ಯಾಕ್

    ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್‌ ಅವರ ಹೇಳಿಕೆ ಪಡೆಯುವ ಉದ್ದೇಶದಿಂದ ನೊಟೀಸ್ ನೀಡಲಾಗಿದೆ. ಬಿಟ್‌ಕಾಯಿನ್‌ನ ಸತ್ಯಾಂಶ ಏನು ಅನ್ನೋದು ಹೊರಬರಬೇಕಿದೆ. ಇದನ್ನೂ ಓದಿ: 84,000 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದು ಕಣ್ಣೀರಿಟ್ಟ ಮಹಿಳಾ ಅಧಿಕಾರಿ