Tag: CD

  • ಅದೇಷ್ಟೋ ಸಿಡಿ ಪ್ರಕರಣಗಳು ನಮ್ಮ ಕುಟುಂಬಕ್ಕೆ ಬಂದಿವೆ: ಹೆಚ್‍ಡಿಕೆ

    ಅದೇಷ್ಟೋ ಸಿಡಿ ಪ್ರಕರಣಗಳು ನಮ್ಮ ಕುಟುಂಬಕ್ಕೆ ಬಂದಿವೆ: ಹೆಚ್‍ಡಿಕೆ

    – ಜಾರಕಿಹೊಳಿಗೆ ಈಗ ರಿಯಲೈಸ್ ಆಗಿರಬೇಕು
    – ವಿಶ್ವನಾಥ್, ಎಸ್.ಟಿ ಸೋಮಶೇಖರ್ ವಿರುದ್ಧ ವ್ಯಂಗ್ಯ

    ಮೈಸೂರು: ಸಿಡಿ ಕೇಸ್ ಎಸ್‍ಐಟಿ ತನಿಖೆಗೆ ಒಪ್ಪಿಸಿರುವುದು ತಿಪ್ಪೆ ಸಾರಿಸುವ ಕೆಲಸ ಎಂದಿರುವ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ, ಇದೀಗ ಇಂತಹ ಅದೆಷ್ಟೋ ಸಿಡಿ ಪ್ರಕರಣಗಳು ನಮ್ಮ ಕುಟುಂಬಕ್ಕೆ ಬಂದಿವೆ ಎಂದು ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಡಿ ವಿಷಯಗಳನ್ನು ಇಟ್ಟುಕೊಂಡು ರಾಜಕಾರಣ ಮಾಡಬೇಡಿ. ಇಂತಹ ಅದೇಷ್ಟೋ ಸಿಡಿ ಪ್ರಕರಣಗಳು ನಮ್ಮ ಕುಟುಂಬಕ್ಕೆ ಬಂದಿವೆ. ಇಂತಹ ಪ್ರಕರಣ ತಂದವರಿಗೆ ಬುದ್ಧಿ ಹೇಳಿ ಕಳುಹಿಸಿದ್ದೇವೆ ಎಂದರು.

    ಇಂತಹ ಪ್ರಕರಣಗಳನ್ನ ಮುಂದಿಟ್ಟುಕೊಂಡು ರಾಜಕಾರಣ ಮಾಡಬಾರದು. ಅದರಿಂದ ಜನರಿಗೆ ಏನು ಸಂದೇಶ ಕೊಡಲು ಸಾಧ್ಯ?. ರಮೇಶ್ ಜಾರಕಿಹೊಳಿಯವರಿಗೆ ಈಗ ಮನವರಿಕೆ ಆಗಿರಬಹುದು. ಕುಮಾರಸ್ವಾಮಿ ಇದ್ದಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲವೇನೋ ಅಂತ ರಿಯಲೈಸ್ ಆಗಿರಬೇಕು ಎಂದು ಹೆಚ್‍ಡಿಕೆ ಅಭಿಪ್ರಾಯಪಟ್ಟರು.

    ಇದೇ ವೇಳೆ ಹೆಚ್.ವಿಶ್ವನಾಥ್ ಕುರಿತು ವ್ಯಂಗ್ಯವಾಡಿದ ಹೆಚ್‍ಡಿಕೆ, ಯಾರ್ಯಾರ ಸಿಡಿ ಇದೆಯೋ ಇಲ್ವೋ ನನಗೇನು ಗೊತ್ತು. ಆ ಯತ್ನಾಳ್ ಹೇಳ್ತಾರೆ ಇನ್ನೂ 26 ಜನರ ಸಿಡಿ ಇದೆ ಅಂತ. 6 ಮಹಾನುಭಾವರು ಕೋರ್ಟಿಗೆ ಸಲ್ಲಿಸಿರುವ ಅರ್ಜಿ ನೋಡಿ ನಮಗೆ ಆಶ್ಚರ್ಯವಾಯ್ತು. ಸಚಿವರಾದವರು ನಮ್ಮ ತೇಜೋವಧೆ ಮಾಡುವಂತಹ ಅಪಪ್ರಚಾರಗಳಿಗೆ ಅವಕಾಶ ಕೊಡಬೇಡಿ ಅಂತ ಕೇಳಿಕೊಳ್ಳಬಹುದಿತ್ತು. ಆದರೆ ನಮಗೆ ಸಂಬಂಧಪಟ್ಟ ಸಿಡಿ ವಿಚಾರ ಪ್ರಸಾರ ಮಾಡಬಾರದು ಅಂತ ಕೋರಿದ್ದಾರೆ. ಈ ವಿಚಾರವನ್ನು ವಕೀಲರಿಂದ ಕೇಳಿ ಆಶ್ವರ್ಯವಾಯ್ತು ಎಂದು ಹೇಳಿದರು.

    ಆರು ಮಹಾನುಭಾವರು ತಮಗೆ ರಕ್ಷಣೆ ನೀಡುವಂತೆ ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ. ಸಚಿವರಾಗಿದ್ದುಕೊಂಡು ತಮಗೆ ತಾವೇ ರಕ್ಷಣೆ ಮಾಡಿಕೊಳ್ಳಲಾರದವರು ರಾಜ್ಯದ ಜನರನ್ನು ಹೇಗೆ ರಕ್ಷಣೆ ಮಾಡ್ತಾರೆ ಎಂದು ಹೆಚ್‍ಡಿಕೆ ಪ್ರಶ್ನಿಸಿದರು.

    ಸಿಡಿ ವಿಚಾರವನ್ನ ಎಸ್‍ಐಟಿಗೆ ಕೊಟ್ಟ ವಿಚಾರಕ್ಕೆ ಪ್ರತಿಕ್ರಿಯಸಿ, ಇದೊಂದು ತಿಪ್ಪೆ ಸಾರಿಸುವ ತನಿಖೆ ಆಗಲಿದೆ. ಯಾರ ಮೇಲೆ ತನಿಖೆ ಮಾಡ್ತೀರಾ ಹೇಳಿ. ಇಂತಹ ತನಿಖಾ ಸಂಸ್ಥೆಗಳಿಂದ ಸ್ವಾತಂತ್ರ್ಯದ ನಂತರ ಯಾರಿಗೆ ಶಿಕ್ಷೆಯಾಗಿದೆ. ಹಾಗೇನಾದ್ರು ಶಿಕ್ಷೆ ಆಗಿದ್ರೆ ಅದು ಅಮಾಯಕರಿಗೆ ಆಗಿದೆ ಅಷ್ಟೆ ಎಂದರು.

    ಸಿಡಿ ಕೇಸಿನಲ್ಲಿ ಕೈವಾಡ ವಿಚಾರದ ಸಂಬಂಧ ಮಾತನಾಡಿ, ಅವರು ಕಾಂಗ್ರೆಸ್ಸಿನಲ್ಲೇ ಇದ್ದವರಲ್ಲವೇ..? ಆ ಪಕ್ಷದಿಂದ ಅವರು ಹೊರಗೆ ಬಂದಿದ್ದಾರೆ. ಇದನ್ನ ಯಾರು ಸಿಡಿ ಮಾಡಿದ್ದಾರೆಂದು ಹೇಳಿದ್ದಾರೋ ಅವರಿಗೆ ಕೇಳಿ. ಅವರಿಗೆ ಆ ಬಗ್ಗೆ ಚೆನ್ನಾಗಿ ಗೊತ್ತಿರಬೇಕು. ನನಗಂತು ಈ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ಸಚಿವ ಎಸ್‍ಟಿ ಸೋಮಶೇಖರ್ ಹೇಳಿಕೆಗೆ ಹೆಚ್ಡಿಕೆ ವ್ಯಂಗ್ಯವಾಡಿದರು.

  • ಸಿಡಿ ಕೇಸ್ ಎಸ್‍ಐಟಿ ತನಿಖೆಗೆ ವಹಿಸಿರುವುದು ತಿಪ್ಪೆ ಸಾರಿಸುವ ಕೆಲಸ ಅಷ್ಟೇ: ಹೆಚ್‍ಡಿಕೆ

    ಸಿಡಿ ಕೇಸ್ ಎಸ್‍ಐಟಿ ತನಿಖೆಗೆ ವಹಿಸಿರುವುದು ತಿಪ್ಪೆ ಸಾರಿಸುವ ಕೆಲಸ ಅಷ್ಟೇ: ಹೆಚ್‍ಡಿಕೆ

    ಮೈಸೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‍ಐಟಿ)ಕ್ಕೆ ಒಪ್ಪಿಸಲಾಗಿದ್ದು, ಇದು ತಿಪ್ಪೆ ಸಾರಿಸುವ ಕೆಲಸ ಅಷ್ಟೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಎಸ್‍ಐಟಿಗೆ ತನಿಖೆ ಜವಾಬ್ದಾರಿ ವಹಿಸಿರುವ ಬಗ್ಗೆ ಪ್ರತಿಕ್ರಿಯಿಸಿದರು. ಇದು ತಿಪ್ಪೆ ಸಾರಿಸುವ ಕೆಲಸ ಅಷ್ಟೇ. ಇದರಿಂದ ಯಾವುದೇ ಪ್ರಯೋಜನವಿಲ್ಲ. ತನಿಖಾ ವರದಿಯಲ್ಲಿ ಯಾರು ಇದುವರೆಗೂ ಜೈಲಿಗೆ ಹೋಗಿಲ್ಲ ಎಂದರು.

    ರಾಜಕಾರಣದಲ್ಲಿ ನೇರವಾಗಿ ಯುದ್ಧ ಮಾಡೋಣ. ಪ್ರತಿ ದಿನ ಜನರ ಮುಂದೆ ಬರುವವರು, ಜನರಿಗೆ ಏನು ಸಂದೇಶ ಕೊಡುತ್ತೀರಾ ಎಂದು ಮಾಜಿ ಸಿಎಂ ಗರಂ ಆದರು.

    ರಮೇಶ್ ಜಾರಕಿಹೊಳಿ ಸಿ.ಡಿ. ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು, ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶದಿಂದ ಈ ಷಡ್ಯಂತ್ರ ರೂಪಿಸಲಾಗಿದೆ ಎಂದು ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಈ ವಿಶೇಷ ತನಿಖಾ ತಂಡವನ್ನು ರಚಿಸಿ ಅದರ ನೇತೃತ್ವವನ್ನು ಸೌಮೇಂದು ಮುಖರ್ಜಿ ಅವರಿಗೆ ನೀಡಲಾಗಿದೆ. ಎಸ್‍ಐಟಿ ತಂಡ ವಿಚಾರಣೆ ನಡೆಸಿ ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ಸೂಚಿಸಿದ್ದಾರೆ.

    ಬೊಮ್ಮಾಯಿ ಪತ್ರದಲ್ಲೇನಿತ್ತು..?
    ದಿನಾಂಕ 9-3-2021 ರಂದು ಮಾಜಿ ಮಂತ್ರಿಗಳಾದ ಶ್ರೀ ರಮೇಶ್ ಲ ಜಾರಕಿಹೊಳಿರವರು ನನಗೆ ಪತ್ರ ಬರೆದು, ಅವರ ವಿರುದ್ಧ ದಿನಾಂಕ 2-3-2021ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಒಂದು ಅರ್ಜಿ ನೀಡಿದ್ದು, ಅದರಲ್ಲಿ ಅವರ ವಿರುದ್ಧ ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶವಿದ್ದು ಇದರಲ್ಲಿ ಹಲವಾರು ಜನ ಸೇರಿ ಷಡ್ಯಂತ್ರ ರೂಪಿಸಿರುವಂಥದ್ದು ಬಹಳ ಸ್ಪಷ್ಟವಾಗಿರುತ್ತದೆ ಎಂದು ತಿಳಿಸಿರುತ್ತಾರೆ.

    ಈ ಹಿನ್ನೆಲೆಯಲ್ಲಿ ಈ ಷಡ್ಯಂತ್ರವನ್ನು ರೂಪಿಸಿರುವ ಹಾಗೂ ಇದರ ಹಿಂದಿರುವ ವ್ಯಕ್ತಿಗಳ ಬಗ್ಗೆ ಕೂಲಂಕುಶವಾಗಿ ವಿಚಾರಣೆಯನ್ನು ಮಾಡಲು ಒಂದು ವಿಶೇಷ ತನಿಖಾ ತಂಡವನ್ನು ರಚನೆ ಮಾಡಲು ಹಾಗೂ ಅದರ ನೇತೃತ್ವವನ್ನು ಶ್ರೀ ಸೌಮೇಂದು ಮುಖರ್ಜಿ, ಐಜಿಪಿ ಇವರಿಗೆ ವಹಿಸುವುದು ಮತ್ತು ಈ ಬಗ್ಗೆ ಸಂಪೂರ್ಣ ವರದಿಯನ್ನು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ನೀಡುವಂತೆ ಸೂಚಿಸಿದೆ.

  • ರಮೇಶ್ ಜಾರಕಿಹೊಳಿ ಸಿ.ಡಿ. ಕೇಸ್ ತನಿಖೆಗೆ SIT

    ರಮೇಶ್ ಜಾರಕಿಹೊಳಿ ಸಿ.ಡಿ. ಕೇಸ್ ತನಿಖೆಗೆ SIT

    ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‍ಐಟಿ)ಕ್ಕೆ ಒಪ್ಪಿಸಲಾಗಿದೆ. ಐಜಿಪಿ ಸೌಮೇಂದು ಮುಖರ್ಜಿ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ಎಸ್‍ಐಟಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಸಿ.ಡಿ. ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಪತ್ರ ಬರೆದಿದ್ದು, ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶದಿಂದ ಈ ಷಡ್ಯಂತ್ರ ರೂಪಿಸಲಾಗಿದೆ ಎಂದು ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಈ ವಿಶೇಷ ತನಿಖಾ ತಂಡವನ್ನು ರಚಿಸಿ ಅದರ ನೇತೃತ್ವವನ್ನು ಸೌಮೇಂದು ಮುಖರ್ಜಿ ಅವರಿಗೆ ನೀಡಲಾಗಿದೆ. ಎಸ್‍ಐಟಿ ತಂಡ ವಿಚಾರಣೆ ನಡೆಸಿ ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಬೊಮ್ಮಾಯಿ ಅವರು ಸೂಚಿಸಿದ್ದಾರೆ.

     

    ಬೊಮ್ಮಾಯಿ ಪತ್ರದಲ್ಲೇನಿದೆ.?
    ದಿನಾಂಕ 9-3-2021 ರಂದು ಮಾಜಿ ಮಂತ್ರಿಗಳಾದ ಶ್ರೀ ರಮೇಶ್ ಲ ಜಾರಕಿಹೊಳಿರವರು ನನಗೆ ಪತ್ರ ಬರೆದು, ಅವರ ವಿರುದ್ಧ ದಿನಾಂಕ 2-3-2021ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಒಂದು ಅರ್ಜಿ ನೀಡಿದ್ದು, ಅದರಲ್ಲಿ ಅವರ ವಿರುದ್ಧ ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶವಿದ್ದು ಇದರಲ್ಲಿ ಹಲವಾರು ಜನ ಸೇರಿ ಷಡ್ಯಂತ್ರ ರೂಪಿಸಿರುವಂಥದ್ದು ಬಹಳ ಸ್ಪಷ್ಟವಾಗಿರುತ್ತದೆ ಎಂದು ತಿಳಿಸಿರುತ್ತಾರೆ.

    ಈ ಹಿನ್ನೆಲೆಯಲ್ಲಿ ಈ ಷಡ್ಯಂತ್ರವನ್ನು ರೂಪಿಸಿರುವ ಹಾಗೂ ಇದರ ಹಿಂದಿರುವ ವ್ಯಕ್ತಿಗಳ ಬಗ್ಗೆ ಕೂಲಂಕುಶವಾಗಿ ವಿಚಾರಣೆ ಯನ್ನು ಮಾಡಲು ಒಂದು ವಿಶೇಷ ತನಿಖಾ ತಂಡವನ್ನು ರಚನೆ ಮಾಡಲು ಹಾಗೂ ಅದರ ನೇತೃತ್ವವನ್ನು ಶ್ರೀ ಸೌಮೇಂದು ಮುಖರ್ಜಿ, ಐಜಿಪಿ ಇವರಿಗೆ ವಹಿಸುವುದು ಮತ್ತು ಈ ಬಗ್ಗೆ ಸಂಪೂರ್ಣ ವರದಿಯನ್ನು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ನೀಡುವಂತೆ ಸೂಚಿಸಿದೆ.

  • ರಾಜಕಾರಣಕ್ಕೆ ಸೇರಿಕೊಳ್ಳುವ ಇಚ್ಛೆ ಇಲ್ಲ: ದಿನೇಶ್ ಕಲ್ಲಹಳ್ಳಿ

    ರಾಜಕಾರಣಕ್ಕೆ ಸೇರಿಕೊಳ್ಳುವ ಇಚ್ಛೆ ಇಲ್ಲ: ದಿನೇಶ್ ಕಲ್ಲಹಳ್ಳಿ

    ರಾಮನಗರ: ನಾನು ಯಾವುದೇ ಕಾರಣಕ್ಕೂ ರಾಜಕಾರಣಕ್ಕೆ ಸೇರಿಕೊಳ್ಳಲ್ಲ. ಅಲ್ಲದೆ ನಾನು ಯಾವುದೇ ಒತ್ತಡಗಳಿಗೆ ಮಣಿದಿಲ್ಲ ಎಂದು ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ.

    ಸಿಡಿ ದೂರು ವಾಪಸ್ ಪಡೆದ ನಂತರ ಕನಕಪುರದ ಕಲ್ಲಹಳ್ಳಿ ನಿವಾಸದಲ್ಲಿ ಸುದ್ದಿಗಾರರಿಗೆ ಮೊದಲ ಪ್ರತಿಕ್ರಿಯೆ ನೀಡಿದ ದಿನೇಶ್, ನನ್ನ ವಕೀಲರು ಹೇಳಿದ ಬಳಿಕ ನಾನು ಠಾಣೆಗೆ ಹೋಗಿ ದೂರು ವಾಪಸ್ ಪಡೆದಿದ್ದೇನೆ. ಐದು ಪುಟಗಳ ಸುದೀರ್ಘವಾಗಿ ಪತ್ರ ಬರೆದಿದ್ದೇನೆ. ದೂರು ವಾಪಸ್ ಪಡೆಯಲು ಹಲವಾರು ಕಾರಣಗಳಿವೆ ಎಂದರು.

    ವಿಚಾರಣೆಗೆ ಕರೆದರೆ ಮತ್ತೆ ಠಾಣೆಗೆ ಕಾನೂನಾತ್ಮಕವಾಗಿ ಹೋಗುತ್ತೇನೆ. ಸುಮೊಟೊ ಕೇಸ್ ದಾಖಲು ಬಗ್ಗೆ ತನಿಖಾಧಿಕಾರಿಗೆ ಬಿಟ್ಟಿದ್ದು. ಗುರುತರ ಆರೋಪಗಳಿಂದ ನಾನು ಮೊದಲು ಮುಕ್ತನಾಗಬೇಕು. ಹಲವು ಜನ ನನ್ನ ಮೇಲೆ ಟೀಕೆಗಳನ್ನು ಮಾಡುತ್ತಿದ್ದಾರೆ. ಯಾರಾದರೂ ದಾಖಲೆಗಳನ್ನು ಇಟ್ಟು ಆರೋಪ ಮಾಡಿದರೆ ನಾನು ಯಾವುದೇ ಹೋರಾಟ ಮಾಡುವುದಿಲ್ಲ ಎಂದು ತಿಳಿಸಿದರು.

    ಕೆಲವರು ತೆವಲಿಗೆ ಮಾತನಾಡ್ತಿದ್ದಾರೆ ಅಷ್ಟೇ, ಮಾತನಾಡೋದು ಸುಲಭ. ಆದರೆ ಮಾತಿನಂತೆ ಹೋರಾಟ ಮಾಡಲು ಕಷ್ಟ ಇದೆ. ತೆವಲಿಗೆ ಮಾತನಾಡಬಾರದು ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್‍ಡಿಕೆ ಹೆಸರು ಬಳಸದೇ ದಿನೇಶ್ ಟಾಂಗ್ ನೀಡಿದರು.

    ನನ್ನ ಘನತೆಗೆ ಧಕ್ಕೆಯಾದ್ದರಿಂದ ಪ್ರಕರಣದಿಂದ ಹಿಂದೆ ಸರಿದಿದ್ದೇನೆ. ಮಾಹಿತಿಗಳನ್ನ ಮಾತ್ರ ಅಧಿಕಾರಿಗಳಿಗೆ ಕೊಟ್ಟು ಸತ್ಯ ಇದ್ರೆ ತನಿಖೆ ಮಾಡಿ ಎಂದು ಕೊಟ್ಟಿದ್ದೇನೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಹಾನಾಯಕ ಇದ್ದಾರೆ ಎಂಬ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ಯಾರು ಮಹಾ ನಾಯಕ ಎಂಬುದು ನನಗೆ ಗೊತ್ತಿಲ್ಲ ಎಂದರು.

    ನನ್ನ ವಿರುದ್ಧ ಷಡ್ಯಂತ್ರ ಮಾಡಿದವರನ್ನ ಜೈಲಿಗೆ ಕಳುಹಿಸುವೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ಮಾತನಾಡಿ, ಕಾನೂನಾತ್ಮಕವಾಗಿ ಹೋರಾಟ ಮಾಡಲು ಎಲ್ಲರಿಗೂ ಅವಕಾಶವಿದೆ. ಅವರು ಹೋರಾಟ ಮಾಡಲಿ, ನಾನು ಕಾನೂನಾತ್ಮಕವಾಗಿ ಹೋರಾಟ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದರು.

  • ಸಿಡಿ ತನಿಖೆ ನಡೆಯಲೇಬೇಕು – ಜಾರಕಿಹೊಳಿ ಪಟ್ಟು

    ಸಿಡಿ ತನಿಖೆ ನಡೆಯಲೇಬೇಕು – ಜಾರಕಿಹೊಳಿ ಪಟ್ಟು

    ಬೆಂಗಳೂರು: ಮಾಜಿ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸಿಡಿ ವಿವಾದದ ತನಿಖೆಗೆ ನಡೆಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಿದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಜೊತೆ ದೂರವಾಣಿ ಕರೆ ಮೂಲಕ ಮಾತನಾಡಿರುವ ಜಾರಕಿಹೊಳಿ ತನಿಖೆ ಆಗಲೇಬೇಕು ಎಂದು ಪಟ್ಟು ಹಿಡಿದು ಶೀಘ್ರ ತನಿಖೆಗೆ ಆದೇಶಿಸುವಂತೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸುವ ಬಹುತೇಕ ಸಾಧ್ಯತೆ ಇದೆ.

    ಈ ಬಗ್ಗೆ ಬೆಳಗ್ಗೆ ಸಿಎಂ ಬಿಎಸ್‍ವೈ ಪ್ರತಿಕ್ರಿಯಿಸಿದ್ದು, ತನಿಖೆ ಬಗ್ಗೆ ನಿನ್ನೆ ಮನವಿ ಕೊಟ್ಟಿದ್ದಾರೆ. ಗೃಹ ಸಚಿವ ಬೊಮ್ಮಾಯಿ ಅವರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

    ಅಣ್ಣನ ಬೆನ್ನಿಗೆ ಜಾರಕಿಹೊಳಿ ಸಹೋದರರು ನಿಂತಿದ್ದಾರೆ. ನಿನ್ನೆ ಜಾರಕಿಹೊಳಿ ಭೇಟಿಯಾಗಿದ್ದ ಸತೀಶ್ ಜಾರಕಿಹೊಳಿ, ಯಾವುದನ್ನೂ ಬಚ್ಚಿಡಬೇಡ. ಬಹಿರಂಗಗೊಳಿಸು ಎಂದು ಸಲಹೆ ಕೊಟ್ಟಿದ್ದಾರೆ. ಇಡೀ ಪ್ರಕರಣದ ನಿರ್ಧಾರ ಕೈಗೊಳ್ಳಲು ಬಾಲಚಂದ್ರಗೆ ರಮೇಶ್ ಜಾರಕಿಹೊಳಿ ಜವಾಬ್ದಾರಿ ನೀಡಿದ್ದಾರೆ ಎನ್ನಲಾಗಿದೆ.

  • ಸಚಿವ ಎಸ್‍ಟಿ ಸೋಮಶೇಖರ್‌ಗೆ ಡಿಕೆಶಿ ಚಾಲೆಂಜ್

    ಸಚಿವ ಎಸ್‍ಟಿ ಸೋಮಶೇಖರ್‌ಗೆ ಡಿಕೆಶಿ ಚಾಲೆಂಜ್

    ಬೆಂಗಳೂರು: ಸಚಿವ ಎಸ್. ಟಿ ಸೋಮಶೇಖರ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸವಾಲೆಸೆದಿದ್ದಾರೆ.

    ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಡಿ ವಿಚಾರದಲ್ಲಿ ಕಾಂಗ್ರೆಸ್ ಕೈವಾಡವಿದೆ ಎಂಬ ಎಸ್‍ಟಿಎಸ್ ಹೇಳಿಕೆಗೆ ಗರಂ ಆದ ಡಿಕೆಶಿ, ಬಿಜೆಪಿಯವರಗಿಂತ ಜಾಸ್ತಿ ಹತ್ತಿರವಾಗಿ ನಾನು ಎಸ್ ಟಿ ಸೋಮಶೇಖರ್ ನನ್ನ ನಾನು ನೋಡಿದ್ದೇನೆ. ನಾವು ಜೊತೆಯಲ್ಲಿ ರಾಜಕಾರಣ ಮಾಡಿದ್ದೇವೆ. 20 ವರ್ಷದಿಂದ ಎಸ್ ಟಿ ಸೋಮಶೇಖರ್ ಏನೇನು ಮಾಡಿದ್ದಾರೆ ಅದನ್ನ ಹೇಳಲಿ ಎಂದು ಚಾಲೆಂಜ್ ಹಾಕಿದರು.

    ಸೋಮಶೇಖರ್ ಹೇಳಿಕೆ ನಾನು ನೋಡಿದ್ದೇನೆ, ಅವರು ನನ್ನ ಸ್ನೇಹಿತ. ಅವರು ಹೇಳಿದ್ದಾರೋ, ಹೇಳಿಸಿದ್ದಾರೋ ಏನೋ ಅವರ ಪಕ್ಷದ ತೀರ್ಮಾನ. ಕಾಂಗ್ರೆಸ್ ಪಕ್ಷಕ್ಕೆ ಇವರು 20 ವರ್ಷ ಭಾಗವಾಗಿದ್ದರು. ಏನೇನು ಮಾಡಿದ್ದಾರೆ ಅಂತ ಅವರೇ ಸಾಕ್ಷಿ ಕೊಟ್ಟರೆ ಸಂತೋಷ. ಬಾಂಬೆಯಲ್ಲಿ ನಡಿತೋ ಬೆಂಗಳೂರಲ್ಲಿ ನಡಿತೋ ಬಿಜೆಪಿ ಸರ್ಕಾರ ಇತ್ತೋ ಶಿವಸೇನೆ ಸರ್ಕಾರ ಇತ್ತೋ..? ಏನು ಮಾಡೋಕೆ ಆಗುತ್ತೆ ಎಂದರು.

    ಸೋಮಶೇಖರ್ ಜೊತೆಯಲ್ಲಿ ಇರುವವರು ಎಲ್ಲರೂ ಸೇರಿಕೊಂಡು ಒಂದು ಸುದ್ದಿಗೋಷ್ಠಿ ಮಾಡಲಿ. ಸುದ್ದಿಗೋಷ್ಟಿ ಮಾಡಿ ಎಲ್ಲವನ್ನೂ ಬಿಚ್ಚಡಲಿ. ಕಾಂಗ್ರೆಸ್ ಪಕ್ಷದ ಜೊತೆ 20 ವರ್ಷ ಏನ್ ಮಾಡಿದ್ದಾರೋ ಅದನ್ನ ಹೇಳಲಿ. ಇಂತಹ ಕೆಲಸನೇ ಮಾಡಿದ್ದಾರೆ ಎಂದು ಅದನ್ನ ಹೇಳಲಿ ಎಂದು ಒತ್ತಾಯಿಸಿದರು.

    ಮುಖ್ಯಮಂತ್ರಿ ಸಿಡಿ ಎಂದ ಯತ್ನಾಳ್, ವಿಶ್ವನಾಥ್ ಹೇಳಿದ್ದರು. ಬ್ಲಾಕ್ ಮೇಲ್ ಮಾಡಿ ಮಂತ್ರಿಯಾಗಿದ್ದಾರೆ ಅವರು ಹೇಳಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಲು ಯೋಗೇಶ್ವರ್ 9 ಕೋಟಿ ಸಾಲ ಮಾಡಿದ್ದಾರೆ ಒಬ್ಬರು ಹೇಳ್ತಾರೆ. ಅದರ ಬಗ್ಗೆ ತನಿಖೆಯಾಗಲಿ ಎಂದು ಡಿಕೆಶಿ ಆಗ್ರಹಿಸಿದರು.

    ಎಸ್‍ಟಿಎಸ್ ಹೇಳಿದ್ದೇನು..?: ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಚಿವ ಎಸ್.ಟಿ.ಸೋಮಶೇಖರ್, ನಮ್ಮ ಜೊತೆ ಹಲವರು ಕೋರ್ಟಿಗೆ ಬರಲು ಸಿದ್ಧರಿದ್ರು. ಆದ್ರೆ ಮಾಧ್ಯಮಗಳಲ್ಲಿ ಸುದ್ದಿ ನೋಡಿ ಹಿಂದೆ ಸರಿದ್ರು. ನಾನು 20 ವರ್ಷ ಕಾಂಗ್ರೆಸ್ಸಿನಲ್ಲಿದ್ದು ಬಂದಿದ್ದೇನೆ. ಇವರ ಅನೈತಿಕತೆ ಏನು ಅನ್ನೋದು ರಾಜ್ಯಕ್ಕೂ ಮತ್ತು ನನಗೂ ಗೊತ್ತು. ಅಸೆಂಬ್ಲಿಯಲ್ಲಿ ನಮ್ಮ ವಿರುದ್ಧ ಎಷ್ಟು ಮಾತನಾಡಿದ್ರೂ ಗೊತ್ತಿಲ್ವಾ? ಆದ್ರೆ ಅನೈತಿಕ ರಾಜಕಾರಣಕ್ಕೆ ಮುಂದಾಗಿದ್ದಕ್ಕೆ ಕೋರ್ಟ್ ರಕ್ಷಣೆ ಪಡೆದಿದ್ದೇವೆ. ನೂರಕ್ಕೆ ನೂರರಷ್ಟು ಈ ಮನೆಹಾಳು ಕೆಲಸವನ್ನ ಕಾಂಗ್ರೆಸ್ಸಿನವರೇ ಮಾಡಿದ್ದಾರೆ ಎಂದು ಆರೋಪಿಸಿದ್ದರು.

  • ನಮ್ಮ ಶರ್ಟ್, ನಮ್ಮ ಪ್ಯಾಂಟ್ ನಾವೇ ಹಾಕೋಬೇಕು: ಡಿಕೆಶಿ ಹೀಗಂದಿದ್ಯಾಕೆ..?

    ನಮ್ಮ ಶರ್ಟ್, ನಮ್ಮ ಪ್ಯಾಂಟ್ ನಾವೇ ಹಾಕೋಬೇಕು: ಡಿಕೆಶಿ ಹೀಗಂದಿದ್ಯಾಕೆ..?

    – ಕನ್ನಡಿಗರು ಯಾಕೆ ಇನ್ನೂ ಸುಮ್ಮನಿದ್ದಾರೆ
    – ಹಾಲು ಕುಡಿಸಿ ನಾವು ಅವರಿಗೆ ಸ್ಕ್ರಿಪ್ಟ್ ಕೊಟ್ಟಿಲ್ಲ

    ಬೆಂಗಳೂರು: ನಮ್ಮ ಶರ್ಟ್ ನಾವೇ ಹಾಕೋಬೇಕು, ನಮ್ಮ ಪ್ಯಾಂಟ್ ನಾವೇ ಹಾಕೋಬೇಕು. ರಾಜಕಾರಣದಲ್ಲಿ ಎಲ್ಲ ಇರುತ್ತೆ. ಆದರೆ ನಮ್ಮ ಎಚ್ಚರಿಕೆಯಲ್ಲಿ ನಾವಿರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

    ಸದಾಶಿವ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಷಡ್ಯಂತ್ರ ಅಂತಾರೆ. ಷಡ್ಯಂತ್ರ ಮಾಡೋರು ಮಾಡ್ತಾರೆ. ನಮ್ಮ ಎಚ್ಚರಿಕೆಯಲ್ಲಿ ನಾವಿರಬೇಕು. 24 ವರ್ಷ ಶಾಸಕರಾದವರು ಅಷ್ಟು ಗೊತ್ತಾಗಲ್ವಾ ದಡ್ಡರಾ…? ನಮ್ಮ ಶರ್ಟ್ ನಾವೇ ಹಾಕೋಬೇಕು, ನಮ್ಮ ಪ್ಯಾಂಟ್ ನಾವೇ ಹಾಕೋಬೇಕು ಎಂದು ಡಿಕೆಶಿ ವ್ಯಂಗ್ಯವಾಡಿದ್ದಾರೆ.

    ಕಾಂಗ್ರೆಸ್ಸಿನವರು ನೀಚರು ಅಂದರೆ ಕಾಂಗ್ರೆಸ್ಸಿನವರು ಬಂದು ಶರ್ಟ್ ಹಾಕೋದು, ಪ್ಯಾಂಟ್ ಬಿಚ್ಚೋದು ಹೇಳಿ ಕೊಟ್ಟಿದ್ದಾರಾ..? ಸಚಿವರಾಗಿದ್ದ ರಮೇಶ್ ಜಾರಕಿಹೋಳಿ ಅವರೇ ಸಿಎಂ ಭ್ರಷ್ಟ ಅಂದಿದ್ದಾರೆ. ತನಿಖೆ ನಡೆಯಬೇಕಲ್ಲ. ಎಸಿಬಿಯವರು ಸ್ವಯಂ ಪ್ರೇರಿತ ದೂರು ದಾಖಲಿಸಬೇಕು. ವೀಡಿಯೋ ಫೇಕ್ ಅಂದಿದ್ದಾರೆ.  ಏನೋ ಡಿಪ್ರೆಶನ್ ನಲ್ಲಿ ಇದ್ದಾರೆ. ಹೀಗಾಗಿ ಏನೋ ಹೇಳಿದ್ದಾರೆ ಎಂದು ತಿಳಿಸಿದರು.

    ನಾನು ರಮೇಶ್ ಜಾಕಿಹೊಳಿಗೆ ಒಳ್ಳೆಯದನ್ನೇ ಬಯಸಿದವನು. ಆದರೆ ಹುಚ್ಚರ ತರ ಮಾತನಾಡೋಕೆ ಶುರು ಮಾಡಿದ ಮೇಲೆ ನಾನು ಮಾತಾಡೋದು ಬಿಟ್ಟೆ. ಅವರು ಬಿಟ್ಟು ಹೋದ ಮೇಲೆ ಮಾತನಾಡಿಲ್ಲ. ಮದುವೆಗೆ ಬಂದಾಗ ಮಾತನಾಡಿಸಿದ್ದೇನೆ ಅಷ್ಟೆ ಎಂದು ಡಿಕೆಶಿ ಹೇಳಿದರು.

    ಯಡಿಯೂರಪ್ಪ ಭ್ರಷ್ಟಾಚಾರಿ ಅಂತ ಹೇಳಿದ್ದಾರೆ. ಮಾಧ್ಯಮಗಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಕನ್ನಡಿಗರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದಾರೆ. ನಾನೊಬ್ಬ ಕನ್ನಡಿಗನಾಗಿ ಆ ಮಾತುಗಳು ಹೇಳಲ್ಲ. ಕನ್ನಡಿಗರು ಯಾಕೆ ಇನ್ನೂ ಸುಮ್ನೆ ಇದ್ದಾರೆ ಗೊತ್ತಿಲ್ಲ. ಬೆಳಗಾವಿ ಒಂದು ರಾಜ್ಯ ಅಂತ ಹೇಳಿದ್ದಾರೆ ಎಂದು ಡಿಕೆಶಿ ರಮೇಶ್ ಜಾರಕಿಹೊಳಿ ಹೆಸರು ಹೇಳದೇ ಕಿಡಿಕಾರಿದರು.

    ಸ್ವಯಂಪ್ರೇರಿತ ದೂರು ದಾಖಲಾಗಬೇಕಿತ್ತು. ಕಾಂಗ್ರೆಸ್ಸಿನವರು ಶರ್ಟ್, ಪ್ಯಾಂಟು ಬಿಚ್ಚಿ ಎಂದು ಹೇಳಿ ಕೊಟ್ಟಿದ್ರಾ….?. ಕನ್ನಡಿಗರ ಬಗ್ಗೆ ಮಾತಾಡಿ ಎಂದು ಹೇಳಿಕೊಟ್ವಾ…? ನಾವೇನು ಸ್ಕ್ರಿಪ್ಟ್ ಕೊಟ್ವಾ. ಅವರ ಬಾಯಲ್ಲಿ ಬಂದಂತಹ ನುಡಿಮುತ್ತುಗಳು ಅದು. ಮಾಧ್ಯಮಗಳ ಬಗ್ಗೆ ಮಾತನಾಡಿ ಎಂದು ಹೇಳಿಕೊಟ್ವಾ..? ಯಡಿಯೂರಪ್ಪ ಭ್ರಷ್ಟಾಚಾರಿ ಎಂದು ಹಾಲಿ ಮಂತ್ರಿಗಳು ಆಗ ಹೇಳಿದ್ರು. ಹಾಲು ಕುಡಿಸಿ ಅವರಿಗೆ ನಾವು ಸ್ಕ್ರಿಪ್ಟ್ ಕೊಟ್ಟಿದ್ವಾ? ಇದೊಂದು ಫೇಕ್ ಆಗಿದ್ರೆ ತನಿಖೆ ಏಕೆ ಬೇಕು…? ರಾಜ್ಯದ ಜನರು ಡಡ್ಡರೇನ್ರಿ ಎಂದು ಡಿಕೆಶಿ ಸಿಡಿಮಿಡಿಗೊಂಡರು.

  • ನಮಗೆ ಸಿಡಿ ಅಂದ್ರೆ ಏನು ಅಂತ ಗೊತ್ತಿಲ್ಲ: ಹೆಚ್.ಡಿ ರೇವಣ್ಣ

    ನಮಗೆ ಸಿಡಿ ಅಂದ್ರೆ ಏನು ಅಂತ ಗೊತ್ತಿಲ್ಲ: ಹೆಚ್.ಡಿ ರೇವಣ್ಣ

    ಬೆಂಗಳೂರು: ನಮಗೆ ಸಿಡಿ ಅಂದ್ರೆ ಏನು ಅಂತ ಗೊತ್ತಿಲ್ಲ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.

    ರಾಜ್ಯದಲ್ಲಿ ಪ್ರಸ್ತುತ ಮಾಜಿ ಸಚಿವರ ಸಿಡಿ ವಿಚಾರವೇ ಚರ್ಚೆಯಾಗುತ್ತಿದೆ. ಈ ಸಂಬಂಧ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ ರೇವಣ್ಣ ಅವರು ನಮಗೆ ಸಿಡಿ ಬಗ್ಗೆ ಗೊತ್ತಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳಾಗಿದ್ದು ನಮ್ಮನ್ನು ಯಾರು ಕೇಳುತ್ತಾರೆ. ಅವರ ಮೇಲೆ ಇವರು ಹೇಳ್ತಾರೆ, ಇವರ ಮೇಲೆ ಅವರು ಹೇಳ್ತಾರೆ. ಇವೆಲ್ಲವನ್ನು ಜನ ನೋಡುತ್ತಿದ್ದಾರೆ. ನಾವೇನು ಹೇಳೋಣ ಎಂದರು.

    ನಿನ್ನೆ ಸದನದಲ್ಲಿ ಸಿಡಿ ಪ್ರದರ್ಶಿಸಿದ ವಿಚಾರದ ಕುರಿತು ಮಾತನಾಡಿದ ರೇವಣ್ಣ, ಒಬ್ಬ ಅಧಿಕಾರಿ ಪರಿಶಿಷ್ಟ ಜಾತಿ ಹುಡುಗನನ್ನ ಗುಂಡಿಕ್ಕಿ ಕೊಲ್ಲೋದಾಗಿ ಹೇಳಿದ್ದು, ಇನ್ನೊಂದು ಶಿವಲಿಂಗೇ ಗೌಡರನ್ನ ಅವಹೇಳನಕಾರಿಯಾಗಿ ಮಾತನಾಡಿರುವ ಸಿಡಿಯನ್ನು ಕೊಟ್ಟು ಅದನ್ನ ಸ್ಪೀಕರ್ ಗಮನಕ್ಕೆ ತಂದಿದ್ದೇವೆ. ಅವರು ಕ್ರಮ ಕೈಗೊಳ್ಳೋದಾಗಿ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

    ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಚಿವ ಎಸ್.ಟಿ.ಸೋಮಶೇಖರ್, ನಮ್ಮ ಜೊತೆ ಹಲವರು ಕೋರ್ಟಿಗೆ ಬರಲು ಸಿದ್ಧರಿದ್ರು. ಆದ್ರೆ ಮಾಧ್ಯಮಗಳಲ್ಲಿ ಸುದ್ದಿ ನೋಡಿ ಹಿಂದೆ ಸರಿದ್ರು. ನಾನು 20 ವರ್ಷ ಕಾಂಗ್ರೆಸ್ಸಿನಲ್ಲಿದ್ದು ಬಂದಿದ್ದೇನೆ. ಇವರ ಅನೈತಿಕತೆ ಏನು ಅನ್ನೋದು ರಾಜ್ಯಕ್ಕೂ ಮತ್ತು ನನಗೂ ಗೊತ್ತು. ಅಸೆಂಬ್ಲಿಯಲ್ಲಿ ನಮ್ಮ ವಿರುದ್ಧ ಎಷ್ಟು ಮಾತನಾಡಿದ್ರೂ ಗೊತ್ತಿಲ್ವಾ? ಆದ್ರೆ ಅನೈತಿಕ ರಾಜಕಾರಣಕ್ಕೆ ಮುಂದಾಗಿದ್ದಕ್ಕೆ ಕೋರ್ಟ್ ರಕ್ಷಣೆ ಪಡೆದಿದ್ದೇವೆ. ನೂರಕ್ಕೆ ನೂರರಷ್ಟು ಈ ಮನೆಹಾಳು ಕೆಲಸವನ್ನ ಕಾಂಗ್ರೆಸ್ಸಿನವರೇ ಮಾಡಿದ್ದಾರೆ ಎಂದು ಆರೋಪಿಸಿದ್ದರು.

  • ಸಿಡಿ ಪ್ರಕರಣದ ತನಿಖೆಗೆ ಸರ್ಕಾರ ಸಿದ್ಧ: ಬಿ.ಎಸ್ ಯಡಿಯೂರಪ್ಪ

    ಸಿಡಿ ಪ್ರಕರಣದ ತನಿಖೆಗೆ ಸರ್ಕಾರ ಸಿದ್ಧ: ಬಿ.ಎಸ್ ಯಡಿಯೂರಪ್ಪ

    ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

    ಇಂದು ಬಜೆಟ್ ಬಳಿಕ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ ಸಿಡಿ ವಿಚಾರವನ್ನಿ ಸಿಎಂ ಪ್ರಸ್ತಾಪ ಮಾಡಿದರು. ವಿಪಕ್ಷದವರು ಯಾವ ತನಿಖೆಗೆ ಹೇಳಿದರೂ ತನಿಖೆ ಮಾಡಿಸಲು ಸಿದ್ಧ ಎಂದು ತಿಳಿಸಿದರು.

    ಸಿಡಿ ಬಗ್ಗೆ ತನಿಖೆ ವಿಚಾರ ವಿಧಾನಸಭೆಯಲ್ಲಿ ಚರ್ಚೆಯಾಗಲಿ. ಆಗ ಅವರು ಏನು ಸಲಹೆ ಕೊಡ್ತಾರೆ ಅದರ ಆಧಾರದ ಮೇಲೆ ತನಿಖೆ ಬಗ್ಗೆ ತೀರ್ಮಾನ ಮಾಡ್ತೇವೆ ಎಂದು ಹೇಳಿದರು.

    ಮಾಜಿ ಸಚಿವ ರಾಸಲೀಲೆ ಸಿಡಿ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ಆದರೆ ಈ ಮಧ್ಯೆ ಸಂತ್ರಸ್ತ ಯುವತಿ ಪೊಲೀಸರ ಮುಂದೆ ಯಾವುದೇ ಹೇಳಿಕೆ ನೀಡಿಲ್ಲ. ಹೀಗಾಗಿ ಪೊಲೀಸರು ಇನ್ನೂ ಎಫ್‍ಐಆರ್ ದಾಖಲಿಸಿಕೊಂಡಿರಲಿಲ್ಲ. ಈ ಮಧ್ಯೆ ಪ್ರಕರಣ ಸಂಬಂಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆಯುವುದಾಗಿ ತಿಳಿಸಿದ್ದರು.

    ಮಾಜಿ ಸಿಎಂ ಕುಮಾರಸ್ವಾಮಿ ಡೀಲ್ ಆರೋಪದ ಹೇಳಿಕೆ ಬೇಸರ ತಂದಿದೆ. ದೂರು ನೀಡಿದ್ದವರನ್ನ ಟಾರ್ಗೆಟ್ ಮಾಡಲಾಗ್ತಿದೆ ಎಂದು ದಿನೇಶ್ ಆರೋಪಿಸಿದ್ದರು. ದಿನೇಶ್ ಕಲ್ಲಹಳ್ಳಿ ಪೊಲೀಸರಿಗೆ ಬರೆದ ಪತ್ರ ಸಹ ಪಬ್ಲಿಕ್ ಟಿವಿಗೆ ಕೂಡ ಲಭ್ಯವಾಗಿತ್ತು. ದೂರು ಹಿಂಪಡೆಯುವ ಬಗ್ಗೆ ವಕೀಲರ ಜೊತೆ ಚರ್ಚಿಸಿದ್ದೇನೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ನಮ್ಮ ವಕೀಲರು ಹೋಗಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ದೂರುದಾರ 5 ಕೋಟಿ ತೆಗೆದುಕೊಂಡು ಡೀಲ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಕುಮಾರಸ್ವಾಮಿ ಅವರ ಹೇಳಿಕೆಯಿಂದ ಜನರು ನನ್ನನ್ನು ಸಂಶಯದಿಂದ ನೋಡುತ್ತಿದ್ದಾರೆ. ಈ ಆರೋಪ ನನ್ನ ಸಾಮಾಜಿಕ ಹೋರಾಟಕ್ಕೆ ಹಿನ್ನಡೆ ಅಂತ ನಾನು ಅರ್ಥೈಸಿಕೊಂಡಿದ್ದೇನೆ. ಮಾಹಿತಿ ನೀಡುವವರನ್ನ ಟಾರ್ಗೆಟ್ ಮಾಡೋದು ಬಹಳ ನೋವಿನ ಸಂಗತಿ ಎಂದು ಬೇಸರ ಹೊರಹಾಕಿದ್ದರು.

  • ಕುಮಾರಸ್ವಾಮಿ ಡೀಲ್ ಹೇಳಿಕೆಯಿಂದ ಬೇಸರ: ದಿನೇಶ್ ಕಲ್ಲಹಳ್ಳಿ

    ಕುಮಾರಸ್ವಾಮಿ ಡೀಲ್ ಹೇಳಿಕೆಯಿಂದ ಬೇಸರ: ದಿನೇಶ್ ಕಲ್ಲಹಳ್ಳಿ

    – ಮಾಹಿತಿ ನೀಡಿದ್ದರವನ್ನೇ ಟಾರ್ಗೆಟ್

    ಬೆಂಗಳೂರು: ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಹಿಂಪಡೆದ ಬಗ್ಗೆ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಪ್ರತಿಕ್ರಿಯಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಡೀಲ್ ಆರೋಪದ ಹೇಳಿಕೆ ಬೇಸರ ತಂದಿದೆ. ದೂರು ನೀಡಿದ್ದವರನ್ನ ಟಾರ್ಗೆಟ್ ಮಾಡಲಾಗ್ತಿದೆ ಎಂದು ದಿನೇಶ್ ಆರೋಪಿಸಿದ್ದಾರೆ. ದಿನೇಶ್ ಕಲ್ಲಹಳ್ಳಿ ಪೊಲೀಸರಿಗೆ ಬರೆದ ಪತ್ರ ಸಹ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ದೂರು ಹಿಂಪಡೆಯುವ ಬಗ್ಗೆ ವಕೀಲರ ಜೊತೆ ಚರ್ಚಿಸಿದ್ದೇನೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ನಮ್ಮ ವಕೀಲರು ಹೋಗಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ದೂರುದಾರ 5 ಕೋಟಿ ತೆಗೆದುಕೊಂಡು ಡೀಲ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಕುಮಾರಸ್ವಾಮಿ ಅವರ ಹೇಳಿಕೆಯಿಂದ ಜನರು ನನ್ನನ್ನು ಸಂಶಯದಿಂದ ನೋಡುತ್ತಿದ್ದಾರೆ. ಈ ಆರೋಪ ನನ್ನ ಸಾಮಾಜಿಕ ಹೋರಾಟಕ್ಕೆ ಹಿನ್ನಡೆ ಅಂತ ನಾನು ಅರ್ಥೈಸಿಕೊಂಡಿದ್ದೇನೆ. ಮಾಹಿತಿ ನೀಡುವವರನ್ನ ಟಾರ್ಗೆಟ್ ಮಾಡೋದು ಬಹಳ ನೋವಿನ ಸಂಗತಿ ಎಂದು ಬೇಸರ ಹೊರ ಹಾಕಿದರು.

    ದಿನೇಶ್ ಪತ್ರ: ಮಾಜಿ ನೀರಾವರಿ ಮಂತ್ರಿ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನಿಡಿದ್ದು ಸರಿಯಷ್ಟೇ. ಬಟ್ಟೆಯ ಮೇಲೆ ಮುಳ್ಳು ಬಿದ್ದರೂ ಮುಳ್ಳಿನ ಮೇಲೆ ಬಟ್ಟೆ ಬಿದ್ದರೂ ಹರಿಯುವುದು ಬಟ್ಟೆಯ ಎಂಬ ನಾಣ್ಣುಡಿಯನ್ನು ಈ ಹಿಂದೆ ಮಹಿಳೆಯರ ವಿಷಯದಲ್ಲಿ ಬಳಕೆ ಮಾಡಲಾಗುತ್ತಿತ್ತು. ದುರಾದೃಷ್ಟವಶಾತ್ ಈಗಿನ ಸುಸಂಸ್ಕೃತ ನಾಗರಿಕ ಸಮಾಜದಲ್ಲಿ ಮಹಿಳೆಯರ ವಿಚಾರದಲ್ಲಿ ಈ ನಾಣ್ಣುಡಿಯಂತೆ ನಡೆಯುತ್ತಿದೆ. ಸಚಿವರದ್ದೆನ್ನಲಾದ ಲೈಂಗಿಕ ದೌರ್ಜನ್ಯ ಸಿಡಿಯನ್ನು ಪೊಲೀಸರಿಗೆ ದೂರಿನ ಜೊತೆಗೆ ಒಪ್ಪಿಸಿದ್ದೆ. ಆದರೆ ಈಗ ಇಡೀ ಸಮಾಜದಲ್ಲಿ ಮಹಿಳೆಯ ಚಾರಿತ್ಯ ಹರಣ ನಡೆಯುತ್ತಿದೆ.

    ಮಾರ್ಚ್ 2ರಂದು ಮಾಜಿ ಸಚಿವರ ವಿರುದ್ಧ ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಶುಕ್ರವಾರ ಪೊಲೀಸರ ಮುಂದೆ ಹಾಜರಾಗಿ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಇತ್ತ ವೀಡಿಯೋ ಸಂಚಲನ ಸೃಷ್ಟಿಸಿ ಮಾಜಿ ಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ದಿನೇಶ್ ಕಲ್ಲಹಳ್ಳಿ, ಇನ್ನೂ ಮೂವರ ವೀಡಿಯೋಗಳು ತಮ್ಮ ಬಳಿಯಲ್ಲಿರುವ ಬಗ್ಗೆ ಹೇಳಿದ್ದರು.