Tag: celebration

  • ದೋಸೆಗೆ ಫೇಮಸ್ಸಾಗಿರೋ ವಿದ್ಯಾರ್ಥಿ ಭವನಕ್ಕೆ 75 ವರ್ಷದ ಸಂಭ್ರಮ

    ದೋಸೆಗೆ ಫೇಮಸ್ಸಾಗಿರೋ ವಿದ್ಯಾರ್ಥಿ ಭವನಕ್ಕೆ 75 ವರ್ಷದ ಸಂಭ್ರಮ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಲವು ವರ್ಷಗಳಿಂದ ಹೆಸರು ಮಾಡಿರುವ ವಿದ್ಯಾರ್ಥಿ ಭವನಕ್ಕೆ ಈಗ 75 ವರ್ಷದ ಸಂಭ್ರಮ.

    ವಿದ್ಯಾರ್ಥಿ ಭವನ್‍ನಲ್ಲಿ ದೋಸೆ ಫೇಮಸ್ ಆಗಿದ್ದು, ಇಲ್ಲಿನ ದೋಸೆ ತಿನ್ನಲು ಜನರು ಮುಗಿ ಬೀಳುತ್ತಾರೆ. ತ್ರಿಕೋನ ಆಕಾರದಲ್ಲಿ ಮಸಾಲೆ ದೋಸೆ ಮಾಡಿ ಅದರೊಳಗೆ ಆಲೂಗಡ್ಡೆ ಪಲ್ಯ ಹಾಕಿ ಸಪ್ಲೈಯರ್ ಕೈಯಲ್ಲಿ 20-25 ಪ್ಲೇಟ್ ದೋಸೆ, ಕೂತ ಜಾಗದಲ್ಲಿ ನಿಮಿಷ ನಿಮಿಷಕ್ಕೂ ಗ್ರಾಹಕರಿಗೆ ನೀಡುತ್ತಾರೆ.

    ಬೆಂಗಳೂರಿನ ಗಾಂಧಿ ಬಜಾರ್ ನಲ್ಲಿರುವ ವಿದ್ಯಾರ್ಥಿ ಭವನ ಹೋಟೆಲ್‍ನಲ್ಲಿ ಈ ದೋಸೆ ಸಿಗುತ್ತದೆ. ಇಲ್ಲಿನ ಮಸಾಲಾ ದೋಸೆ ಬರೀ ಈ ತಲೆಮಾರಿನ ಬಾಯಿರುಚಿ ಮಾತ್ರವಲ್ಲದೇ ಮೂರು ತಲೆಮಾರಿನ ಜನರ ಬಾಯಿ ರುಚಿ ತಣಿಸಿದೆ. ಡಿವಿಜಿ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ಪಿ.ಲಂಕೇಶ್, ನಿಸಾರ್ ಅಹ್ಮದ್ ಹೀಗೆ ಎಷ್ಟೋ ಸಾಹಿತಿಗಳ ಪಾಲಿಗೂ ಈ ಹೋಟೆಲ್ ಅಚ್ಚುಮೆಚ್ಚು. ಅದರಲ್ಲೂ ನಿಸಾರ್ ಅಹ್ಮದ್‍ರ ಮನಸು ಗಾಂಧಿ ಬಜಾರು ಎಂಬ ಕವಿತೆಯಲ್ಲಿ ಮಸಾಲೆ ದೋಸೆ ರುಚಿ ಪಡೆದಿದೆ.

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್, ಸಿಹಿಕಹಿ ಚಂದ್ರು, ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಯೊಬ್ಬರು ಇಲ್ಲಿನ ದೋಸೆ ಟೇಸ್ಟ್ ಮಾಡಿದ್ದಾರೆ. ಈ ವಿದ್ಯಾರ್ಥಿ ಭವನ ಈಗ 75 ವರ್ಷದ ಸಂಭ್ರಮದಲ್ಲಿದೆ. ಹಿರಿಯ ವ್ಯಕ್ತಿಗಳು ವಿದ್ಯಾರ್ಥಿ ಭವನ್ ಹೋಟೆಲ್‍ಗೆ ಹೋಗಿ ಅಲ್ಲಿನ ಮಸಾಲೆ ದೋಸೆ ಸವಿಯುತ್ತಾ ವಯಸ್ಸಾಗುತ್ತಿರುವುದೇ ಗೊತ್ತಾಗುತ್ತಿಲ್ಲ ಎನ್ನುವವರ ಮಧ್ಯೆ, ನ್ಯೂ ಟ್ರೆಂಡ್ ಜನರೇಷನ್ ಹುಡುಗ-ಹುಡುಗಿಯರು ಮಸಾಲೆ ದೋಸೆಯ ರುಚಿ ಸವಿಯುತ್ತಾ ಎಂಜಾಯ್ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ರಮ್ಯಾ

    36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ರಮ್ಯಾ

    ಬೆಂಗಳೂರು: ಸ್ಯಾಂಡಲ್‍ವುಡ್ ಕ್ವೀನ್ ನಟಿ ರಮ್ಯಾ ಅವರು ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

    ರಮ್ಯಾ ಅವರು ಸಿನಿಮಾದಿಂದ ದೂರ ಉಳಿದುಕೊಂಡು ರಾಜಕಾರಣದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. 2003ರಲ್ಲಿ ತೆರೆಕಂಡ ಅಭಿ ಸಿನಿಮಾ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ನೀಡಿದ ರಮ್ಯಾ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ಸ್ಯಾಂಡಲ್‍ವುಡ್ ಕ್ವೀನ್ ಎಂಬ ಬಿರುದನ್ನು ಪಡೆದುಕೊಂಡಿದ್ದಾರೆ. ಬರೋಬ್ಬರಿ ಒಂದು ದಶಕ ರಮ್ಯಾ ಬೇಡಿಕೆಯ ನಟಿಯಾಗಿದ್ದರು. ರಾಜಕಾರಣದಲ್ಲಿ ಗುರುತಿಸಿಕೊಂಡ ಬಳಿಕ ಸಿನಿಮಾದಿಂದ ರಮ್ಯಾ ಅಂತರವನ್ನು ಕಾಯ್ದುಕೊಂಡಿದ್ದಾರೆ.

    2013ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಸಂಸದೆಯಾಗಿ ಆಯ್ಕೆಯಾಗಿದ್ದರು. 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎದುರು ಕಡಿಮೆ ಮತಗಳ ಅಂತರದಿಂದ ಸೋಲು ಕಂಡರು. ಇದಾದ ಬಳಿಕ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿ ರಮ್ಯಾ ಕಾರ್ಯನಿರ್ವಹಿಸುತ್ತಿದ್ದಾರೆ.

    ಸದ್ಯ ರಮ್ಯಾ ಅವರು ಆಸ್ಟಿಯೋಕ್ಲ್ಯಾಟೋಮಾ(Osteoclastoma) ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆಸ್ಟಿಯೋಕ್ಲ್ಯಾಟೋಮಾ ಎನ್ನುವುದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ. ರಮ್ಯಾ ಅವರ ಕಾಲಿನ ಎಲುಬುಗಳ ನಡುವೆ ಉಂಟಾಗಿರುವ ಸಮಸ್ಯೆ ಇದಾಗಿದ್ದು, ಕೊಂಚ ನಿರ್ಲಕ್ಷ್ಯ ವಹಿಸಿದ್ರು ಮಾರಕ ಕಾಯಿಲೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ರಂತೆ. ಹೀಗಾಗಿ ಅವರು ಚಿಕಿತ್ಸೆ ಪಡೆದು ಅಕ್ಟೋಬರ್ ನಿಂದ ವಿಶ್ರಾಂತಿ ಪಡೆಯುತ್ತಿದ್ದಾರಂತೆ. ಈ ಕುರಿತು ಸ್ವತಃ ರಮ್ಯಾ ಅವರೇ ತಮ್ಮ ಇನ್ ಸ್ಟಾಗ್ರಾಂನಲ್ಲಿ ಕಾಲಿನ ಚಿತ್ರ ಹಾಕಿ ಬರೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನಟ ಅಂಬರೀಶ್ ಅವರ ಅಂತ್ಯಕ್ರಿಯೆಯಲ್ಲಿ ರಮ್ಯಾ ಅವರು ಭಾಗಿಯಾಗಲಿಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದರು.

    2017ರಲ್ಲಿ ರಮ್ಯಾ ಅವರ ಹೆಸರಿನಲ್ಲಿ ಹುಟ್ಟುಹಬ್ಬದಂದು ಮಂಡ್ಯ ಜನರು ಅವರಿಗಾಗಿ ವಿಶೇಷ ಪೂಜೆ, ಪುನಸ್ಕಾರ ಮಾಡಿಸಿದ್ದರು. ರಮ್ಯಾ ಮಂಡ್ಯಕ್ಕೆ ಬರುತ್ತಾರೆಂದು ಸಾವಿರಾರು ಜನ ಕಾಯುತ್ತಿದ್ದರು. ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು, ರಾಜಕೀಯ ಬೆಂಬಲಿಗರು ಬ್ಯಾನರ್ ಹಾಕಿ ಶುಭಾಶಯವನ್ನು ಕೋರಿದ್ದರು. ಅಷ್ಟೇ ಅಲ್ಲದೇ ಅವರ ಭಾವಚಿತ್ರ ಇರುವ ಕ್ಯಾಲೆಂಡರ್ ಕೂಡ ಬಿಡುಗಡೆ ಮಾಡಿದ್ದರು. ಆದರೆ ರಮ್ಯಾ ಮಂಡ್ಯ ಜನತೆಯನ್ನು ಲೆಕ್ಕಿಸದೇ ಕಳೆದ ವರ್ಷ ದೆಹಲಿಯಲ್ಲಿ ದೋಸ್ತ್‍ಗಳ ಜೊತೆ ರಮ್ಯಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಈದ್ ಮಿಲಾದ್ ಆಚರಣೆಯ ವಿಶೇಷತೆ ಇಲ್ಲಿದೆ

    ಈದ್ ಮಿಲಾದ್ ಆಚರಣೆಯ ವಿಶೇಷತೆ ಇಲ್ಲಿದೆ

    ಮುಸ್ಲಿಂ ಸಮುದಾಯದ ಜನರಿಗೆ ಈದ್ ಉಪ್ ಫಿತ್ರ ಮತ್ತು ಈದ್ ಉಲ್ ಅಧಾ ಬಳಿಕ ಪ್ರಮಖವಾದ ಮತ್ತೊಂದು ದಿನ ಈದ್ ಮಿಲಾದ್. ಇದನ್ನೂ ಮಿಲಾದುನ್ನಬೀ ಎಂದು ಸಹ ಕರೆಯಲಾಗುತ್ತದೆ. ಈ ದಿನವನ್ನು ಪ್ರವಾದಿ ಮೊಹಮ್ಮದರ ಜನ್ಮ ದಿನ ಆಚರಣೆ ಮಾಡಲಾಗುತ್ತಿದೆ. ಇದನ್ನು ಕೆಲವರು ಜನ್ಮ ದಿನವಾಗಿ ಸಂತೋಷ ಸಂಭ್ರಮದಿಂದ ಆಚರಣೆ ಮಾಡಿದ್ರೆ, ಕೆಲವರು ಪ್ರವಚನ, ದಾನ ಧರ್ಮ, ಉಪವಾಸ ಮಾಡುವ ಮೂಲಕ ಆಚರಿಸುತ್ತಾರೆ.

    ಈ ದಿನವನ್ನು ಇಸ್ಲಾಮಿಕ್ ತಿಂಗಳಾದ ರಬಿ ಉಲ್ ಅವ್ವಲ್ ನಲ್ಲಿ ಬರುವ ತಿಂಗಳಲ್ಲಿ ಸುನ್ನಿಗಳು ಮತ್ತು ಶಿಯಾಗಳು ಬೇರೆ ಬೇರೆ ದಿನಗಳಂದು ಆಚರಣೆ ಮಾಡುತ್ತಾರೆ. ಶಿಯಾ ಮುಸ್ಲಿಂರುವ ರಬಿ ಉಲ್ ಅವ್ವಲ್ ತಿಂಗಳ 17ರಂದು ಮತ್ತು ಸುನ್ನಿಗಳು 12 ದಿನಾಂಕದಂದು ಆಚರಣೆ ಮಾಡುತ್ತಾರೆ.

    ರಬಿ ಉಲ್ ಅವ್ವಲ್ ತಿಂಗಳ ಆರಂಭದಿಂದ ತಿಂಗಳ ಕೊನೆಯವರೆಗೂ ಒಂದು ತಿಂಗಳ ಕಾಲ ವಿಶ್ವದಾದ್ಯಂತ ಈದ್ ಮಿಲಾದ್ ಆಚರಣೆಗಳು ನಡೆಯುತ್ತವೆ. ಭಾರತದಲ್ಲಿ ಈದ್ ಮಿಲಾದ್ ಆಚರಣೆಯನ್ನು ಎಲ್ಲಾ ಪಂಗಡದ ಮುಸಲ್ಮಾನರು ಆಚರಿಸುತ್ತಾರೆ. ಈದ್ ಮಿಲಾದ್ ದಿನದಂದು ವಿವಿಧ ಸಾಂಸ್ಕೃತಿಕ, ಪ್ರತಿಭಾ ಕಾರ್ಯಕ್ರಮಗಳನ್ನು ನಡೆಸುವುದು. ಮೌಲೀದ್ ಪಾರಾಯಣ ಮಾಡುವುದು, ಅನ್ನಸಂತರ್ಪಣೆ ಮಾಡುವುದು, ಮೆರವಣಿಗೆ ಮಾಡುವುದು ಈದ್ ಮಿಲಾದ್ ಆಚರಣೆಯ ಒಂದು ಭಾಗವಾಗಿದೆ. ಈದ್ ಮಿಲಾದ್ ಆಚರಣೆಯ ರಬಿ ಉಲ್ ಅವ್ವಲ್ ತಿಂಗಳಲ್ಲಿ ಮುಸಲ್ಮಾನರ ಎಲ್ಲಾ ಧಾರ್ಮಿಕ ಕೇಂದ್ರಗಳು ಮತ್ತು ವಿದ್ಯಾ ಸಂಸ್ಥೆಗಳನ್ನು ಬಣ್ಣದ ದೀಪಗಳು, ಮತ್ತು ಕಾಗದಗಳಿಂದ ಅಲಂಕರಿಸಲಾಗುತ್ತದೆ.

    ಈದ್ ಮಿಲಾದ್ ಆಚರಣೆಯ ಪ್ರಮುಖ ಕಾರ್ಯಕ್ರಮಗಳಲ್ಲಿ ಮೆರವಣಿಗೆಯೂ ಒಂದು. ರಬಿ ಉಲ್ ಅವ್ವಲ್ ತಿಂಗಳ ಹನ್ನೆರಡನೆಯ ದಿನ ಅಂದರೆ ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿವಸಲ್ಲಮ್ ಜನಿಸಿದ ದಿನದಂದು ಜಗತ್ತಿನ ಎಲ್ಲಾ ಕಡೆಗಳಲ್ಲೂ ಆಯ ಪ್ರದೇಶದ ಸಮಯಕ್ಕೆ ಹೊಂದಿಕೊಂಡು ಮೆರವಣಿಗೆಯನ್ನು ಆಯೋಜಿಸಲಾಗುತ್ತದೆ. ಪ್ರವಾದಿಯ ಮುಹಮ್ಮದರ ಜನ್ಮ ದಿನದ ಖುಷಿಗಾಗಿ ಮೆರವಣಿಗೆಯನ್ನು ಆಯೋಜಿಸಲಾಗುತ್ತದೆ. ಮೆರವಣಿಗೆಯಲ್ಲಿ ವಿವಿಧ ಇಸ್ಲಾಮಿಕ್ ಕಲಾ ತಂಡಗಳು ಭಾಗವಹಿಸುತ್ತವೆ. ವಾಹನ ಮೆರವಣಿಗೆ, ಕಾಲ್ನಡಿಗೆ ಜಾಥಾ ಇವುಗಳಲ್ಲಿ ಪ್ರಮುಖವಾದವು. ಈದ್ ಮಿಲಾದ್ ಮೆರವಣಿಗೆಯ ದಾರಿಯುದ್ದಕ್ಕೂ ಸಿಹಿ ತಿಂಡಿಗಳನ್ನು ವಿತರಿಸಿವುದು ಮೆರವಣಿಗೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದು. ಈದ್ ಮಿಲಾದ್ ಮೆರವಣಿಗೆಯಲ್ಲಿ ಕೇವಲ ಮುಸಲ್ಮಾನರಲ್ಲದೆ ಇತರ ಧರ್ಮೀಯರು ಪಾಲ್ಗೊಳ್ಳೊತ್ತಾರೆ.

    ಈದ್ ಮಿಲಾದ್ ಆಚರಣೆಯ ಬಗ್ಗೆ ಕೆಲ ಚರ್ಚೆಗಳು ಸಹ ನಡೆದಿವೆ. ಪ್ರವಾದಿ ಮೊಹಮ್ಮದ್ ಅವರು ಎಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿಲ್ಲ. ಹದೀಸ್, ಖುರಾನ್ ಎಲ್ಲಿಯೂ ಜಯಂತಿ ಆಚರಿಸಿ ಎಂದು ಹೇಳಿಲ್ಲ. ಹಾಗಾಗಿ ಇಸ್ಲಾಂನಲ್ಲಿ ಹುಟ್ಟುಹಬ್ಬ ಆಚರಣೆ ನಿಷಿದ್ಧ ಎಂಬುವುದು ಕೆಲವರ ವಾದ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ವಿರೋಧ ಪಕ್ಷದಲ್ಲಿದ್ದು ಸರ್ಕಾರಕ್ಕೆ ಒಳ್ಳೆಯ ಸಲಹೆ ನೀಡಲಿ: ಡಿಕೆಶಿ

    ವಿರೋಧ ಪಕ್ಷದಲ್ಲಿದ್ದು ಸರ್ಕಾರಕ್ಕೆ ಒಳ್ಳೆಯ ಸಲಹೆ ನೀಡಲಿ: ಡಿಕೆಶಿ

    ಬೆಂಗಳೂರು: ಬಿಜೆಪಿಯವರು ವಿರೋಧ ಪಕ್ಷದಲ್ಲಿ ಇದ್ದು ಸರ್ಕಾರಕ್ಕೆ ಒಳ್ಳೆಯ ಸಲಹೆ ನೀಡಲಿ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

    ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಹಾಗೂ ದೇಶದಲ್ಲಿ ಬಿಜೆಪಿ ಅವರು ಅಶಾಂತಿ ಮೂಡಿಸಬೇಕು. ಅಶಾಂತಿ ಮೂಡಿಸುವುದು ಬಿಟ್ಟರೆ ಅವರಿಗೆ ಏನೂ ಗೊತ್ತಿಲ್ಲ, ಜನರಿಗೆ ಸುಮ್ಮನೆ ಕನ್ಫ್ಯೂಸ್ ಮಾಡುತ್ತಿದ್ದಾರೆ. ಇದು ದೇಶದ ದೊಡ್ಡ ಸ್ವಾಭಿಮಾನದ ವಿಚಾರ. ಟಿಪ್ಪು ದೇಶಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ತ್ಯಾಗ ಮಾಡಿದವರು. ಈಗಾಗಲೇ ರಾಷ್ಟ್ರಪತಿ ಇದೇ ವಿಧಾನಸೌಧಕ್ಕೆ ಬಂದು ಟಿಪ್ಪು ಅವರನ್ನು ಶ್ಲಾಘನೆ ಮಾಡಿ ಯಾಕೆ ಇದನ್ನು ಮಾಡುತ್ತಿದ್ದೇವೆ ಅಂತ ಇಲ್ಲಿ ಪ್ರತಿಪಾದನೆ ಮಾಡಿದ್ದಾರೆ. ಇದು ದೇಶದ ಇತಿಹಾಸ ವಿಚಾರದಲ್ಲಿ ಇಂತಹ ರಾಜಕಾರಣ ಮಾಡುವುದು ಸರಿಯಲ್ಲ. ಶಾಂತಿ, ಪಾಲನೆ ಈ ದೇಶದ ಐಕ್ಯತೆ ಹಾಗೂ ಅಹಜತೆ. ಬಿಜೆಪಿ ಅವರು ಇದನ್ನು ಕಾಪಾಡಿಕೊಂಡು ಹೋಗಬೇಕು ಎಂದರು.

    ಕುಮಾರಸ್ವಾಮಿ ಆರೋಗ್ಯದಲ್ಲಿ ಸರಿಯಿಲ್ಲ. ವೈದ್ಯರು ವಿಶ್ರಾಂತಿ ಪಡೆಯಲು ತಿಳಿಸಿದ್ದಾರೆ ಎಂದು ಅವರು ಮೊದಲೇ ಹೇಳಿದ್ದರು. ಡಿಸಿಎಂ ಪರಮೇಶ್ವರ್ ಅವರ ವಿಮಾನದಲ್ಲಿ ಹೆಚ್ಚು ಕಡಿಮೆಯಾಗಿದೆ. ಇಲ್ಲದಿದ್ದರೆ ಅವರು ಕಾರ್ಯಕ್ರಮಕ್ಕೆ ಬರುತ್ತಿದ್ದರು. ಸದ್ಯ ಸರ್ಕಾರದ ಒಬ್ಬ ವ್ಯಕ್ತಿಯಾಗಿ ನಾನು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಇಲ್ಲಿ ಕಾರ್ಯಕ್ರಮ ಮುಗಿದ ನಂತರ ರಾಮನಗರಕ್ಕೆ ಹೋಗಬೇಕಿದೆ. ಬಿಜೆಪಿ ಅವರು ಈ ರಾಜ್ಯದಲ್ಲಿ ಶಾಂತಿ ಭಂಗ ಉಂಟು ಮಾಡಬೇಡಿ ಎಂದು ಕೈಮುಗಿದು ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿಕೊಂಡರು.

    ಚುನಾವಣೆಯಲ್ಲಿ ಒಬ್ಬರು ಗೆದ್ದರೆ, ಮತ್ತೊಬ್ಬರು ಸೋಲಲೇಬೇಕು. ನಾನು ಗೆದಿದ್ದೇನೆ ಎಂದು ಹಿಗ್ಗುವುದಕ್ಕೆ ತಯಾರಿಲ್ಲ. ನಾನು ಚುನಾವಣೆಯಲ್ಲಿ ಸೋತಿದ್ದೇನೆ. ನಾವು ಸ್ಪೋಟಿವ್ ಆಗಿ ಇರಬೇಕು. ವಿರೋಧ ಪಾರ್ಟಿಯವರು ಸರ್ಕಾರಕ್ಕೆ ಸಲಹೆ ನೀಡಬೇಕು. ಬಡವರಿಗೆ, ಜನರಿಗೆ ಇರುವ ಎಲ್ಲ ಸಮಸ್ಯೆಯನ್ನು ಬಗೆಹರಿಸಲು ಸಹಾಯ ಮಾಡಬೇಕು. ಜನರು ಆಶೀರ್ವಾದ ಮಾಡಿದಾಗ ಅವರು ಅಧಿಕಾರಕ್ಕೆ ಬರಲಿ. ನಾವು ಅವರಿಗೆ ಸಹಕಾರ ನೀಡುತ್ತೇವೆ. ಬೆಳಗ್ಗೆ, ಸಂಜೆ ರಾಜಕಾರಣ ಮಾಡುತ್ತಾ ಕುಳಿತರೆ ಇದರಿಂದ ಉಪಯೋಗ ಏನಿದೆ. ನಾವು ಏನಾದರೂ ತಪ್ಪು ಮಾಡಿದ್ದರೆ ಅವರು ಹೇಳಲಿ, ಬೇಕಾದರೆ ಗಲ್ಲು ಶಿಕ್ಷೆ ನೀಡಲಿ. ಎರಡೂ ಪಕ್ಷದ ಎಲ್ಲ ಶಾಸಕರಿಗೆ, ಸಂಸದರಿಗೆ ಜವಾಬ್ದಾರಿ ಇದೆ. ಜನರ ಹಿತವನ್ನು ಕಾಪಾಡಬೇಕು ಎಂದು ಸಚಿವರು ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಯೋಧರ ಮನೆಯಲ್ಲಿ ಬೆಳಗಿದ ದೀಪ- ಮೂಡಬಿದಿರೆಯಲ್ಲಿ ವಿಭಿನ್ನ ರೀತಿಯ ದೀಪಾವಳಿ ಆಚರಣೆ

    ಯೋಧರ ಮನೆಯಲ್ಲಿ ಬೆಳಗಿದ ದೀಪ- ಮೂಡಬಿದಿರೆಯಲ್ಲಿ ವಿಭಿನ್ನ ರೀತಿಯ ದೀಪಾವಳಿ ಆಚರಣೆ

    ಮಂಗಳೂರು: ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಗಡಿಕಾಯುವ ಯೋಧರೊಂದಿಗೆ ದೀಪಾವಳಿಯನ್ನು ಆಚರಿಸಿ ಯೋಧರಿಗೂ ಶಕ್ತಿ ತುಂಬುವ ಕಾರ್ಯ ಮಾಡಿದರೆ ಇತ್ತ ಮೂಡಬಿದಿರೆಯ ಪುಟ್ಟ ಸಂಘಟನೆಯೊಂದು ಯೋಧರ ಮನೆಯಲ್ಲಿ ದೀಪಾವಳಿ ಆಚರಿಸುವ ಮೂಲಕ ಹೃದಯ ವೈಶಾಲ್ಯತೆಯನ್ನು ಮೆರೆದ ಘಟನೆ ಗುರುವಾರ ನಡೆದಿದೆ.

    ಮೂಡಬಿದಿರೆಯ ಜವನೆರ್ ಬೆದ್ರ ಸಂಘಟನೆ ಈ ಮಹತ್ಕಾರ್ಯ ಮಾಡುವ ಮೂಲಕ ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾಗಿದೆ. ಮೂಡಬಿದಿರೆಯ ಮಾಸ್ತಿಕಟ್ಟೆ ನಿವಾಸಿಗಳಾದ ಶಾಂತಿರಾಜ ಹೆಗ್ಡೆ ಮತ್ತು ಐರಾವತಿದೇವಿ ಅವರ ಇಬ್ಬರು ಮಕ್ಕಳು ದೇಶದ ಗಡಿಕಾಯುವ ಮಹತ್ಕಾರ್ಯ ಮಾಡುತ್ತಿದ್ದಾರೆ. ನಮ್ಮ ಮಕ್ಕಳನ್ನು ದೇಶ ಸೇವೆಗೆ ಕಳುಹಿಸಿದ ಮಹಾನ್ ಪೋಷಕರ ಮನೆಯನ್ನೇ ಆರಿಸಿ ಅಲ್ಲಿ ಸಂಘಟನೆಯ ಸರ್ವ ಸದಸ್ಯರ ಸಮ್ಮುಖದಲ್ಲಿ ಆದರಣೀಯ ದಂಪತಿ ಸನ್ಮಾನ ನಡೆಸಿ ಗೋ ಪೂಜೆಗೈದು, ಸುಡುಮದ್ದಿನೊಂದಿಗೆ ಸಿಹಿಭಕ್ಷ್ಯ ಹಂಚಿ ಸಂಭ್ರಮೋಲ್ಲಾಸದಿಂದ ದೀಪಾವಳಿ ಆಚರಿಸುವ ಮೂಲಕ ಜವನೆರ್ ಬೆದ್ರ ಸಂಘಟನೆ ಮಾದರಿಯೆನಿಸಿತು.

    ಜವನೆರ್ ಬೆದ್ರ ಸಂಘಟನೆ ಹೇಳಿದ್ದೇನು ಗೊತ್ತೇ?
    ದೀಪಾವಳಿ ಬಂತೆಂದರೆ ಬೋನಸ್ ಹಿಡಿದುಕೊಂಡು ಪಟಾಕಿ ಸಿಡಿಸಿ, ದೋಸೆ ತಿಂದು ಸಖತ್ತಾಗಿ 3 ದಿನಗಳ ಕಾಲ ಕುಟುಂಬ ಸ್ನೇಹಿತರೊಂದಿಗೆ ನಾವು ಸಂಭ್ರಮಿಸುತ್ತೇವೆ. ಆದರೆ ತಮ್ಮ ಕಣ್ಣಿಗೆ ಎಣ್ಣೆ ಬಿಟ್ಟು, ನಮ್ಮನ್ನು ಕಣ್ಣಲ್ಲಿ ಕಣ್ಣಿಟ್ಟು, ಗಡಿಯಲ್ಲಿ ಶತ್ರುದೇಶದ ನರಿಗಳನ್ನು ತಮ್ಮ ಬಂದೂಕಿನ ತುದಿಯಿಂದ ದಿಟ್ಟಿಸಿ ನಮ್ಮನ್ನು ರಕ್ಷಿಸುತ್ತಿರುವ ಕಣ್ಣಿಗೆ ಕಾಣುವ ದೇವರುಗಳು ನಮ್ಮ ದೇಶದ ಯೋಧರಿಗೆ ಮಾತ್ರ ಹಬ್ಬದ ವಾತಾವರಣವೇ ಇಲ್ಲ. ಛೇ, ಈ ಹಬ್ಬಕ್ಕೂ ನಮ್ಮ ಮಕ್ಕಳೊಂದಿಗೆ ದೀಪಾವಳಿ ಆಚರಿಸೋದಕ್ಕೆ ಆಗ್ತಾ ಇಲ್ವಲ್ಲಾ ಎಂಬ ಕೊರಗು ಅವರ ಹೆತ್ತವರದ್ದು. ಇದಕ್ಕಾಗಿಯೇ ಜವನೆರ್ ಬೆದ್ರ ಸಂಘಟನೆ ಈ ಬಾರಿಯ ದೀಪಾವಳಿಯನ್ನು ಯೋಧರ ಮನೆಯಲ್ಲಿ ಆಚರಿಸಿದೆ.

    ಮೂಡುಬಿದಿರೆಯ ಮಾಸ್ತಿಕಟ್ಟೆ ಸಮೀಪದ ನಿವಾಸಿಗಳಾದ ಮಹಾವೀರ್ ಜೈನ್ ಹಾಗೂ ಮಹೇಂದ್ರ ಜೈನ್ ಎಂಬವರು ಹಲವಾರು ವರ್ಷಗಳಿಂದ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಾವೀರ್ ಜೈನ್ ಎಂಬವರು ಕಳೆದ 20 ವರ್ಷದಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಜಮ್ಮು-ಕಾಶ್ಮೀರ, ಪಠಾಣ್ ಕೋಟ್, ಗ್ವಾಲಿಯರ್, ಅಸ್ಸಾಂ, ಹಾಗೂ ಎಟಿಸಿಯಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ. ಆಪರೇಷನ್ ಪರಾಕ್ರಮ್ ವೇಳೆಯಲ್ಲಿ ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಈಗ ಬೆಂಗಳೂರಿನಲ್ಲಿ ಎನ್‍ಸಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸಹೋದರ ಮಹೇಂದ್ರ ಜೈನ್ ಎಂಬವರು ಭಾರತೀಯ ಸೇನೆಯಲ್ಲಿ 14 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅರುಣಾಚಲ, ರಾಜಸ್ಥಾನ, ನಸಿರಾಬಾದ್, ಜಮ್ಮುವಿನ ಅಕ್ನೋರ್, ಮಿರಾಟ್, ಕಾಶ್ಮೀರ್, ಬಾರಮುಲ್ಲ ಸಹಿತ ಅನೇಕ ಕಡೆಗಳಲ್ಲಿ ಸೇವೆ ಸಲ್ಲಿಸಿ ಇದೀಗ ಉತ್ತರ ಪ್ರದೇಶದ ಮಿರಾಟ್ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಇಬ್ಬರು ಮಕ್ಕಳನ್ನೂ ತಾಯಿ ಭಾರತೀಯ ಸೇವೆಗಾಗಿ ಗಡಿಗೆ ಕಳಿಸಿರುವ ದೇಶಭಕ್ತ ಕುಟುಂಬದೊಂದಿಗೆ ನಾವು ದೀಪಾವಳಿಯನ್ನು ಆಚರಿಸುತ್ತಿದ್ದೇವೆ ಎಂದು ಈ ಸಂಘಟನೆ ಹೇಳಿದೆ.

    ಕಳಂಕರಹಿತ ಪೀಳಿಗೆ: ಇಬ್ಬರು ಮಕ್ಕಳನ್ನು ಸೇನೆಗೆ ಕಳುಹಿಸುವ ಮೂಲಕ ದೇಶಸೇವೆಯ ಕನಸು ನನಸಾಗಿದೆ. ಈ ಮಕ್ಕಳೇ ನನ್ನ ಆಸ್ತಿ. ಕಳಂಕರಹಿತ ಪೀಳಿಗೆ ಮುಂದುವರಿದಿದೆ ಎಂಬ ಹೆಮ್ಮೆ ನನಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿನ್ನಲೆಯಿಂದಾಗಿ ದೇಶಪ್ರೇಮಿ ಕುಟುಂಬ ನಮ್ಮದಾಯಿತು ಎಂದು ಶಾಂತಿರಾಜ ಹೆಗ್ಡೆ ಹೇಳಿದರು. ಸಮಾಜವನ್ನು ಸನ್ಮಾರ್ಗದತ್ತ ಕೊಂಡೊಯ್ಯುವ ಮಹತ್ಕಾಯ ಇಂದಾಗುವ ಅನಿವಾರ್ಯತೆಯಿದೆ ಎಂದು ನಿವೃತ್ತ ಯೋಧ ರಾಜೇಂದ್ರ.ಜಿ ಅಭಿಪ್ರಾಯಿಸಿದರು. ಜವನೆರ್ ಬೆದ್ರ ಸಂಘಟನೆ ಸಮಾಜಮುಖೀ ಚಿಂತನೆಯೊಂದಿಗೆ, ಸಮಾಜದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡುತ್ತಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಜವನೆರ್ ಬೆದ್ರ ಸಂಘಟನೆಯ ಅಧ್ಯಕ್ಷ ಅಮರ್ ಕೋಟೆ ಅಭಿಪ್ರಾಯಿಸಿದರು. ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಪಣಪಿಲ ಕಾರ್ಯಕ್ರಮ ನಿರ್ವಹಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಗೋಲ್ಡನ್ ಸ್ಟಾರ್ ಮನೆಯಲ್ಲಿ ದೀಪಾವಳಿ ಆಚರಿಸಿದ ಸ್ಯಾಂಡಲ್‍ವುಡ್ ಸ್ಟಾರ್ಸ್: ಫೋಟೋಗಳಲ್ಲಿ ನೋಡಿ

    ಗೋಲ್ಡನ್ ಸ್ಟಾರ್ ಮನೆಯಲ್ಲಿ ದೀಪಾವಳಿ ಆಚರಿಸಿದ ಸ್ಯಾಂಡಲ್‍ವುಡ್ ಸ್ಟಾರ್ಸ್: ಫೋಟೋಗಳಲ್ಲಿ ನೋಡಿ

    ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರ ಮನೆಯಲ್ಲಿ ಸ್ಯಾಂಡಲ್‍ವುಡ್ ಕಲಾವಿದರು ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

    ನಟ ಗಣೇಶ್ ಶೂಟಿಂಗ್ ನಿಂದ ಸ್ವಲ್ಪ ಬಿಡುವು ಮಾಡಿಕೊಂಡು ಸ್ಯಾಂಡಲ್‍ವುಡ್ ಕಲಾವಿದರ ಜೊತೆ ತಮ್ಮ ಮನೆಯಲ್ಲೇ ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಗಣೇಶ್ ಅವರ ಮನೆಯಲ್ಲಿ ನಟ ರವಿಶಂಕರ್ ಗೌಡ, ಗೋಲ್ಡನ್ ಕ್ವೀನ್ ಅಮೂಲ್ಯ ಹಾಗೂ ಹಲವು ಕಲಾವಿದರು ಭಾಗಿಯಾಗಿದ್ದರು.

    ದೀಪಾವಳಿ ಹಬ್ಬಕ್ಕೆ ಗಣೇಶ್ ಕುರ್ತಾ ಹಾಕಿದ್ದರೆ, ಅವರ ಪತ್ನಿ ಶಿಲ್ಪಾ ಗಣೇಶ್ ಸಾಂಸ್ಕೃತಿಕ ಉಡುಗೆ ತೊಟ್ಟು ಮಿಂಚಿದ್ದಾರೆ. ಗಣೇಶ್ ಮಕ್ಕಳಾದ ಚಾರಿತ್ರ್ಯ ಹಾಗೂ ವಿಹಾನ್ ಕೂಡ ಹೊಸ ಬಟ್ಟೆ ಧರಿಸಿ ದೀಪಾವಳಿ ಸಂಭ್ರದಲ್ಲಿ ಭಾಗಿಯಾಗಿದ್ದರು.

    ಸದ್ಯ ಗಣೇಶ್ ಅವರ ಮನೆಯಲ್ಲಿ ದೀಪಾವಳಿ ಹಬ್ಬದ ದಿನ ಕ್ಲಿಕಿಸಿದ ಫೋಟೋವನ್ನು ಶಿಲ್ಪಾ ಗಣೇಶ್ ಹಾಗೂ ನಟಿ ಅಮೂಲ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದರ ಮೂಲಕ ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.

    ಇತ್ತ ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ್ ಅವರು ತಮ್ಮ ಕುಟುಂಬದ ಜೊತೆ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ರಮೇಶ್ ನರಕ ಚತುರ್ದಶಿಯಂದು ತಮ್ಮ ಮಕ್ಕಳ ಜೊತೆ ಪಟಾಕಿ ಸಿಡಿಸಿದ್ದಾರೆ. ತಮ್ಮ ಮಕ್ಕಳ ಜೊತೆ ಪಟಾಕಿ ಹೊಡೆದ ಫೋಟೋವನ್ನು ರಮೇಶ್ ಟ್ವೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೇಶ ಕಾಯೋ ಯೋಧರೊಂದಿಗೆ ಮೋದಿ ದೀಪಾವಳಿ ಆಚರಣೆ

    ದೇಶ ಕಾಯೋ ಯೋಧರೊಂದಿಗೆ ಮೋದಿ ದೀಪಾವಳಿ ಆಚರಣೆ

    ನವದೆಹಲಿ: ದೀಪಾವಳಿ ಸಂಭ್ರಮಾಚರಣೆಯನ್ನು ಭಾರತೀಯ ಸೇನಾ ತಂಡದೊಂದಿಗೆ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

    ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ್ ನೇತನ್ಯಾಹು ಅವರ ಟ್ವಿಟ್ಟರ್ ಮೂಲಕ ದೀಪಾವಳಿ ಶುಭಾಶಯ ಕೋರಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಮೋದಿ ಅವರು ಪ್ರತಿ ವರ್ಷ ನಮ್ಮ ಗಡಿ ಕಾಯುವ ಯೋಧರನ್ನು ಭೇಟಿ ಮಾಡುತ್ತೇವೆ. ಈ ಬಾರಿಯೂ ಕೂಡ ಅವರನ್ನು ಭೇಟಿ ಮಾಡಿ ಅವರೊಂದಿಗೆ ದೀಪಾವಳಿ ಸಂಭ್ರಮಾಚರಣೆಯನ್ನು ಮಾಡುತ್ತೇನೆ. ಅಷ್ಟೇ ಅಲ್ಲದೇ ಅವರೊಂದಿಗಿನ ಸಂಭ್ರಮಾಚರಣೆಯ ಫೋಟೋಗಳನ್ನು ಹಂಚಿಕೊಳ್ಳುವುದಾಗಿಯೂ ಹೇಳಿದ್ದಾರೆ. ದೀಪಾವಳಿ ಶುಭಾಶಯವನ್ನು ಕೋರಿದ ಶ್ರೀ ನೇತನ್ಯಾಹು ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

    ಇಸ್ರೇಲ್ ಜನರ ಪರವಾಗಿ, ನನ್ನ ಪ್ರೀಯ ಸ್ನೇಹಿತ ನರೇಂದ್ರ ಮೋದಿ ಮತ್ತು ಭಾರತದ ಜನರು ಸಂತೋಷದ ದೀಪಾವಳಿಗಳನ್ನು ಬಯಸಬೇಕೆಂದು ನಾನು ಬಯಸುತ್ತೇನೆ. ಈ ಪ್ರಕಾಶಮಾನವಾದ ಹಬ್ಬದ ದೀಪಗಳು ನಿಮಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತವೆ ಎಂದು ಇಸ್ರೇಲ್ ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದರು.

    2014 ರಲ್ಲಿ ಪ್ರಧಾನ ಮಂತ್ರಿಯಾಗಿದ್ದ ಮೋದಿ ಅವರು ದೀಪಾವಳಿಯನ್ನು ಸಿಯಾಚಿನ್‍ನ ಸೇನಾ ಯೋಧರೊಂದಿಗೆ ಕಳೆದಿದ್ದರು. 2015 ರಲ್ಲಿ ಅವರು ದೀಪಾವಳಿಯ ಹಬ್ಬದಂದು ಪಂಜಾಬ್ ಗಡಿಗೆ ಭೇಟಿ ನೀಡಿದ್ದರು. ಅವರ ಭೇಟಿಯು 1965 ರ ಇಂಡೋ-ಪಾಕ್ ಯುದ್ಧದ 50 ವರ್ಷಗಳ ಕಾಕತಾಳೀಯವಾಗಿತ್ತು.

    2016 ರಲ್ಲಿ ಹಿಮಾಚಲ ಪ್ರದೇಶದ ಟಿಬೆಟಿಯನ್ ಬಾರ್ಡರ್ ಪೋಲಿಸ್ ಸಿಬ್ಬಂದಿಯೊಂದಿಗೆ ಕಳೆದಿದ್ದರು. ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದ ಗುರೆಜ್‍ನ ಸೈನಿಕರೊಂದಿಗೆ ತಮ್ಮ ನಾಲ್ಕನೇ ದೀಪಾವಳಿಯನ್ನು ಪ್ರಧಾನಿಯಾಗಿ ಕಳೆದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ: ಸಿದ್ದರಾಮಯ್ಯ

    ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ: ಸಿದ್ದರಾಮಯ್ಯ

    ಬೆಂಗಳೂರು: ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಪಚುನಾವಣೆಯಲ್ಲಿ ಉಗ್ರಪ್ಪ ಜಯ ಸಾಧಿಸಿದ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ ಎಂದು ಟ್ವೀಟ್ ಮಾಡಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಟ್ವಿಟ್ಟರಿನಲ್ಲಿ, “ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ. ಕತ್ತಲೆಯಿಂದ ಬೆಳಕಿನ ಕಡೆಗೆ ಜನಪಯಣ. ನಾಡಬಾಂಧವರಿಗೆ ದೀಪಾವಳಿಯ ಶುಭಾಶಯಗಳು” ಎಂದು ಟ್ವೀಟ್ ಮಾಡಿ ಗೆಲುವನ್ನು ಸಂಭ್ರಮಿಸಿದ್ದಾರೆ.

    ಇತ್ತ ಉಪಚುನಾವಣೆಯಲ್ಲಿ ಗೆದ್ದ ಆನಂದ ನ್ಯಾಮಗೌಡ ಅವರನ್ನು ಸಿದ್ದರಾಮಯ್ಯ ಟ್ವಿಟ್ಟರಿನಲ್ಲಿ ಶುಭಾಶಯ ತಿಳಿಸಿದ್ದಾರೆ. ಸಿದ್ದರಾಮಯ್ಯ ತಮ್ಮ ಟ್ವಿಟ್ಟರಿನಲ್ಲಿ, “ಜಮಖಂಡಿ ವಿಧಾನಸಭಾ ಉಪಚುನಾವಣೆಯಲ್ಲಿ ಜಯಗಳಿಸಿರುವ ಆನಂದ ನ್ಯಾಮಗೌಡ ಅವರಿಗೆ ಅಭಿನಂದನೆಗಳು. ಪಕ್ಷದ ಜಯಕ್ಕಾಗಿ ಶ್ರಮಿಸಿದ ನಾಯಕರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು. ನಮ್ಮ ಅಭ್ಯರ್ಥಿಯನ್ನು ಆಶೀರ್ವದಿಸಿದ ಕ್ಷೇತ್ರದ ಮತದಾರರಿಗೆ ಕೃತಜ್ಞತೆಗಳು” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

    ಸಿದ್ದರಾಮಯ್ಯ ತಮ್ಮ ಮತ್ತೊಂದು ಟ್ವೀಟ್‍ನಲ್ಲಿ ಬಳ್ಳಾರಿ ಜನತೆಗೆ ಧನ್ಯವಾದ ತಿಳಿಸಿದ್ದಾರೆ. ಬಳ್ಳಾರಿಯ ಜನತಾ ಜನಾರ್ದನರಿಗೆ ಧನ್ಯವಾದಗಳು. ಜನಾರ್ದನ ರೆಡ್ಡಿಯವರ ಅಮಾನವೀಯ ನಡೆ-ನುಡಿಗೆ ಬಳ್ಳಾರಿ ಜನರೇ ಶಾಪ ನೀಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೀಪಾವಳಿ ಹಬ್ಬದ ಆಚರಣೆ ಹಾಗೂ ಅದರ ಮಹತ್ವ ಏನು?

    ದೀಪಾವಳಿ ಹಬ್ಬದ ಆಚರಣೆ ಹಾಗೂ ಅದರ ಮಹತ್ವ ಏನು?

    ತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಮುಂಗಾರು ಬೆಳೆ ಕೊಯ್ಲಿಗೆ ಬರುವ ಸಮಯದಲ್ಲಿ ಈ ಹಬ್ಬ ಬರುವುದು ವಿಶೇಷ. ಕೆಲ ಕಡೆ ಆಶ್ವಯುಜ ಮಾಸದ ಕೊನೆಯ ಎರಡು ದಿನಗಳು ಹಾಗೂ ಕಾರ್ತಿಕ ಮಾಸದ ಮೊದಲನೆಯ ದಿನ ಈ ಹಬ್ಬವನ್ನು ಆಚರಿಸಿದರೆ ಇನ್ನು ಕೆಲ ಕಡೆ ಮುಂದಿನ ಎರಡು ದಿನಗಳನ್ನು ಸೇರಿಸಿ 5 ದಿನ ವಿಜೃಂಭಣೆಯಿಂದ ಈ ಹಬ್ಬವನ್ನು ಆಚರಿಸಲಾಗುತ್ತದೆ.

    ಹಿಂದೂ ಕ್ಯಾಲೆಂಡರ್ ಪ್ರಕಾರ ಈ ಹಬ್ಬ ಕಾರ್ತಿಕ ಮಾಸದಲ್ಲಿ ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಕೆಲವರು ಮನೆಗೆ ಹೊಸ ವಸ್ತುಗಳನ್ನು ತರುತ್ತಾರೆ.

    ದೀಪಾವಳಿ ಹಬ್ಬದ ಮಹತ್ವ:
    ದೀಪಾವಳಿ ‘ದೀಪಾ’ ಎಂದರೆ ಮಣ್ಣಿನ ದೀಪ ಹಾಗೂ ‘ವಲಿ’ ಎಂದು ಯಾವುದಾದರು ವಸ್ತು ಸರಣಿಯಾಗಿಯಿಡುವುದು. ದೀಪಾವಳಿಯ ಅಮವಾಸ್ಯೆಯನ್ನು ದೀವಾಳಿ ಅಮಾವಾಸ್ಯೆಯೆಂದು ಕರೆಯುತ್ತಾರೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಆ ದಿನ ಕತ್ತಲೆಯಿಂದ ಕೂಡಿರುತ್ತದೆ. ದೀಪಾವಳಿ ಹಬ್ಬವನ್ನು ಹಿಂದೂಗಳ ಹಬ್ಬ ಮಾತ್ರ ಆಗಿರದೇ ಈ ಹಬ್ಬವನ್ನು ಜೈನ್, ಸಿಖ್‍ಗಳು ಹಾಗೂ ಬೌದ್ಧರು ಕೂಡ ಈ ಹಬ್ಬವನ್ನು ಆಚರಿಸುತ್ತಾರೆ.

    ಭಾರತದ ಬೇರೆ ಬೇರೆ ಪ್ರದೇಶಗಳಲ್ಲಿ ದೀಪಾವಳಿಗೆ ಅದರದ್ದೇ ಆದ ಮಹತ್ವವಿದೆ ಹಾಗೂ ಅವರದ್ದೆ ಆದ ಕೆಲವು ಸಂಪ್ರದಾಯಗಳು ಇರುತ್ತದೆ. ಕೆಲವರು ತಮ್ಮ ಸಂಪ್ರದಾಯಕ್ಕೆ ತಕ್ಕಂತೆ ತಮ್ಮ ಹಬ್ಬವನ್ನು ಆಚರಿಸುತ್ತಾರೆ. ಆದರೆ ಎಲ್ಲರ ಪ್ರಕಾರ ದೀಪಾವಳಿ ಹಬ್ಬ ರಾಮಾಯಣದ ಕಥೆಗೆ ಹೊಂದಿಕೊಂಡಿದೆ.

    ರಾವಣನನ್ನು ಸಂಹಾರ ಮಾಡಿ ರಾಮ, ಸೀತಾ, ಲಕ್ಷ್ಮಣ ಹಾಗೂ ಹನುಮಂತ ಲಂಕೆಯಿಂದ ಆಯೋಧ್ಯೆಗೆ ಹಿಂದಿರುಗಿದ ದಿನ. ಅಲ್ಲದೇ ರಾಮ ಪಟ್ಟಾಭಿಷೇಕಗೊಂಡ ದಿನ. ಹಾಗಾಗಿ ಜನರು ಆ ದಿನ ಆನಂದದಿಂದ ದೀಪಗಳನ್ನು ಬೆಳಗಿಸಿ ರಾಮನನ್ನು ಸ್ವಾಗತಿಸಿದ್ದರು. ಅಲ್ಲದೇ ಪಾಂಡವರು ಕೂಡ ಅದೇ ದಿನ ತಮ್ಮ ಅಜ್ಞಾತವಾಸವನ್ನು ಮುಗಿಸಿದ ದಿನ ಎನ್ನುವ ಕಥೆಯು ಇದೆ.

    ದೀಪಾವಳಿಯ ಐದು ಹಬ್ಬಗಳು ಹಾಗೂ ಅದರ ಮಹತ್ವಗಳು;

    1. ದನ್ತೇರಸ್: ದನ್ತೇರಸ್ ಹಬ್ಬವನ್ನು ನವೆಂಬರ್ 5ರಂದು ಆಚರಿಸುತ್ತಾರೆ. ಈ ದಿನ ಜನರು ತಮ್ಮ ಮನೆಗೆ ಅಡುಗೆ ಪಾತ್ರೆಗಳು, ಚಿನ್ನದ ನಾಣ್ಯ ಹಾಗೂ ಆಭರಣಗಳನ್ನು ಖರೀದಿಸಲು ಹೋಗುತ್ತಾರೆ. ಅಲ್ಲದೇ ತಮ್ಮ ಮನೆ ಹಾಗೂ ಕಚೇರಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಮಣ್ಣಿನ ದೀಪವನ್ನು ಹಚ್ಚಿ ಅಲಂಕರಿಸುತ್ತಾರೆ.

    2. ನರಕ ಚತುರ್ದಶಿ: ನರಕ ಚತುರ್ದಶಿಯನ್ನು ಚೋಟಾ ದೀಪಾವಳಿ ಎಂದು ಕರೆಯುತ್ತಾರೆ. ನವೆಂಬರ್ 6 ರಂದು ಈ ಹಬ್ಬವನ್ನು ಆಚರಿಸುತ್ತಾರೆ. ಶ್ರೀಕೃಷ್ಣನು ನರಕಾಸುರನನ್ನು ಕೊಂದ ನೆನಪನ್ನು ಈ ಹಬ್ಬ ತರುತ್ತದೆ. ನರಕಾಸುರನನ್ನು ಆಶ್ವಯುಜ ಕೃಷ್ಣ ಚತುರ್ದಶಿಯ ಕತ್ತಲೆಯಲ್ಲಿ ಕೃಷ್ಣ ಸಂಹಾರ ಮಾಡುತ್ತಾನೆ. ಈ ಹಬ್ಬದಂದು ಸಿಹಿ ತಿನುಸುಗಳನ್ನು ಖರೀದಿಸಿ ಕುಟುಂಬದವರಿಗೆ, ಸ್ನೇಹಿತರಿಗೆ ಹಾಗೂ ಸಂಬಂಧಿಕರಿಗೆ ಹಂಚುತ್ತಾರೆ. ಸಿಹಿ ತಯಾರಿಸುವವರು ನರಕ ಚತುರ್ದಶಿದಂದು ಹೆಚ್ಚು ಸಮಯ ಕೆಲಸ ಮಾಡುತ್ತಾರೆ.

    3. ದೀಪಾವಳಿ: ದೀಪಾವಳಿಯಂದು ಲಕ್ಷ್ಮಿ ಪೂಜೆ ಮಾಡುತ್ತಾರೆ. ಲಕ್ಷ್ಮೀ ಎಂದರೆ ಕೇವಲ ಧನಾಧಿದೇವತೆ ಎಂಬ ಪ್ರತೀತಿಯಿದೆ. ಲಕ್ಷ್ಮೀ ಕೇವಲ ಧನಲಕ್ಷ್ಮೀ ಮಾತ್ರವಲ್ಲ. ಸಕಲ ಶ್ರೇಯಸ್ಸುಗಳಿಗೆ ಲಕ್ಷ್ಮೀ ಕಾರಣ ಎಂದು ಹೇಳುತ್ತಾರೆ. ಈ ಹಬ್ಬದಂದು ಎಲ್ಲರೂ ತಮ್ಮ ಕುಟುಂಬದವರೊಂದಿಗೆ ಸೇರಿ ಒಬ್ಬರಿಗೊಬ್ಬರು ಸಿಹಿ ಹಂಚಿ ಉಡುಗೊರೆ ನೀಡುತ್ತಾರೆ.

    4. ಗೋಪೂಜೆ: ದೀಪಾವಳಿಯ ನಾಲ್ಕನೇ ದಿನ ಗೋ ಪೂಜೆ ಮಾಡುತ್ತಾರೆ. ಈ ದಿನದಂದು ಗೋವುಗಳನ್ನು ಅಲಂಕರಿಸಿ, ಹಾಲು ಹಿಡಿಯುವ ಪಾತ್ರೆ, ಕುಡಗೋಲುಗಳನ್ನು ಪೂಜಿಸಿ, ಗೋಶಾಲೆಯನ್ನು ದೀಪದಿಂದ ಬೆಳಗಿ, ಹಸುಗಳಿಗೆ ಅಕ್ಕಿ, ಬೆಲ್ಲ, ತಿಂಡಿ ತಿನಿಸುಗಳನ್ನು ನೀಡುತ್ತಾರೆ. ಉತ್ತರ ಭಾರತದಲ್ಲಿ ಅಥವಾ ಕೆಲವರ ಸಂಪ್ರದಾಯದಲ್ಲಿ ಈ ದಿನದಂದು ಪತಿ ತಮ್ಮ ಪತ್ನಿಯರಿಗೆ ಉಡುಗೊರೆ ನೀಡುತ್ತಾರೆ. ಅಲ್ಲದೇ ಹೊಸದಾಗಿ ಮದುವೆಯಾದ ಜೋಡಿಯನ್ನು ಮನೆಗೆ ಔತಣಕ್ಕೆ ಕರೆದು ಉಡುಗೊರೆ ನೀಡಲಾಗುತ್ತದೆ.

    5. ಬಾಯ್ ದೂಜ್: ಬಾಯ್ ದೂಜ್ ಅನ್ನು ಬಯ್ಯಾ ದೂಜ್ ಎಂದು ಕರೆಯುತ್ತಾರೆ. ದೀಪಾವಳಿಯ ಐದನೇ ದಿನದಂದು ಈ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬ ಅಣ್ಣ-ತಂಗಿಯರ ಹಬ್ಬವಾಗಿದ್ದು, ಅಣ್ಣಂದಿರು ತಮ್ಮ ತಂಗಿಯ ಮನೆಗೆ ಊಟಕ್ಕೆ ಹೋಗುತ್ತಾರೆ. ಅಲ್ಲದೇ ತಿಲಕ ಶಾಸ್ತ್ರ ಮಾಡುತ್ತಾರೆ. ಸಹೋದರಿಯರು ತಮ್ಮ ಸಹೋದರನಿಗೆ ತಿಲಕ ಶಾಸ್ತ್ರ ಮಾಡುತ್ತಾರೆ. ಇದನ್ನು ಮತ್ತೊಂದು ರಕ್ಷಾ ಬಂಧನ ಎಂದೂ ಕರೆಯಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಾಲಿವುಡ್ ಬಾದ್‍ಶಾ ಮನೆಯಲ್ಲಿ ದೀಪಾವಳಿ ಸಂಭ್ರಮ: ಫೋಟೋಗಳಲ್ಲಿ ನೋಡಿ

    ಬಾಲಿವುಡ್ ಬಾದ್‍ಶಾ ಮನೆಯಲ್ಲಿ ದೀಪಾವಳಿ ಸಂಭ್ರಮ: ಫೋಟೋಗಳಲ್ಲಿ ನೋಡಿ

    ಮುಂಬೈ: ಬಾಲಿವುಡ್ ಬಾದ್‍ಶಾ ಶಾರೂಕ್ ಖಾನ್ ಶನಿವಾರ ತಮ್ಮ ಮನೆಯಲ್ಲಿ ಬಾಲಿವುಡ್‍ನ ಎಲ್ಲ ಕಲಾವಿದರ ಜೊತೆ ಸೇರಿ ದೀಪಾವಳಿ ಹಬ್ಬದ ಪಾರ್ಟಿ ಆಯೋಜಿಸಿ ಸಂಭ್ರಮಿಸಿದ್ದಾರೆ. ಈಗ ದೀಪಾವಳಿ ಪಾರ್ಟಿಯಲ್ಲಿ ಭಾಗಿಯಾಗಿದ್ದ ಕಲಾವಿದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಶಾರೂಕ್ ಖಾನ್ ಹಾಗೂ ಅವರ ಪತ್ನಿ ಗೌರಿ ಖಾನ್ ಶನಿವಾರ ರಾತ್ರಿ ದೀಪಾವಳಿ ಪಾರ್ಟಿಗೆ ನಿರೂಪಕರಾಗಿ ಮಿಂಚಿದ್ದಾರೆ. ಈ ಪಾರ್ಟಿಯಲ್ಲಿ ನಟಿ ಕತ್ರಿನಾ ಕೈಫ್, ಕರೀನಾ ಕಪೂರ್ ಸಾಂಸ್ಕೃತಿಕ ಉಡುಗೆಯಲ್ಲಿ ಮಿಂಚಿದ್ದಾರೆ. ಇನ್ನೂ ಬಾಲಿವುಡ್ ಮಿ. ಪರ್ಫೆಕ್ಟ್ ಅಮಿರ್ ಖಾನ್ ಕ್ಯಾಶುಯಲ್ ಉಡುಪಿನಲ್ಲಿ ಮಿಂಚಿದ್ದಾರೆ.

    ಶಾರೂಕ್ ಅವರ ದೀಪಾವಳಿ ಪಾರ್ಟಿಯಲ್ಲಿ ಶಾಹಿದ್ ಕಪೂರ್ ಕೂಡ ಕಾಣಿಸಿಕೊಂಡಿದ್ದಾರೆ. ಶಾಹಿದ್ ತಮ್ಮ ಪತ್ನಿ ಮೀರಾ ರಜ್‍ಪುತ್ ಹಾಗೂ ತಮ್ಮ ಸಹೋದರ ಇಶಾನ್ ಕತ್ತರ್ ಬಿಳಿ ಶರ್ಟ್ ಧರಿಸಿದ್ದರು. ಶಾರೂಕ್ ಹಾಗೂ ಅವರ ಪತ್ನಿ ಗೌರಿ ಈ ಪಾರ್ಟಿಯಲ್ಲಿ ಕಪ್ಪು ಹಾಗೂ ಗೋಲ್ಡನ್ ಬಣ್ಣದ ಔಟ್‍ಫಿಟ್ ಧರಿಸಿದ್ದರು.

    ಗೌರಿ ಖಾನ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ತಮ್ಮ ಪತಿ ಜೊತೆಯಿರುವ ಫೋಟೋ ಹಾಕಿ ಅದಕ್ಕೆ, “ಆಕಾಶದಲ್ಲಿ ನಕ್ಷತ್ರಗಳು. ದೀಪಾವಳಿಯ ಶುಭವಾಗಲಿ” ಎಂದು ಪೋಸ್ಟ್ ಮಾಡಿದ್ದಾರೆ. ಶಾರೂಕ್ ಅವರ ಸ್ನೇಹಿತರಾದ ಕರಣ್ ಜೋಹರ್, ಅಲಿಯಾ ಭಟ್, ಕಾಜೋಲ್, ಶಿಲ್ಪಾ ಶೆಟ್ಟಿ, ಜೂಹಿ ಚಾವ್ಲಾ, ವಿದ್ಯಾ ಬಾಲನ್ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

     

    View this post on Instagram

     

    Stars in the sky… Happy Diwali!

    A post shared by Gauri Khan (@gaurikhan) on

     

    View this post on Instagram

     

    Abundant love and affection always….

    A post shared by Kajol Devgan (@kajol) on

     

    View this post on Instagram

     

    How does this get any better!?? ???????? ♥️Sandwiched between the 2 SRKs ♥️!! #SiddharthRoyKapur & @iamsrk

    A post shared by Vidya Balan (@balanvidya) on