Tag: central budget 2024

  • ಕುಡಿಯುವ ನೀರಿಗಾಗಿ ಜನ ಮತ ಹಾಕಿದ್ದಾರೆ; ಬೆಂಗಳೂರಿಗೆ ನೀರು ಕೊಡಿ – ರಾಜ್ಯಸಭೆಯಲ್ಲಿ ಹೆಚ್‌ಡಿಡಿ ಮನವಿ

    ಕುಡಿಯುವ ನೀರಿಗಾಗಿ ಜನ ಮತ ಹಾಕಿದ್ದಾರೆ; ಬೆಂಗಳೂರಿಗೆ ನೀರು ಕೊಡಿ – ರಾಜ್ಯಸಭೆಯಲ್ಲಿ ಹೆಚ್‌ಡಿಡಿ ಮನವಿ

    ನವದೆಹಲಿ: ಹಳೇ ಮೈಸೂರು ಭಾಗ ಮತ್ತು ಬೆಂಗಳೂರಿಗೆ ಕಾವೇರಿಯೇ ಆಧಾರ, ಕುಡಿಯುವ ನೀರು ಕೊಡುವ ಭರವಸೆಯ ಮೇಲೆ ಜನರು ಎನ್‌ಡಿಎಗೆ ಮತ ಹಾಕಿದ್ದಾರೆ. ಹಣಕಾಸು ಸಚಿವರು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಇಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ. ಬೆಂಗಳೂರು ಕುಡಿಯುವ ನೀರಿನ (Bengaluru Drinking Water) ಸಮಸ್ಯೆ ಬಗೆಹರಿಸಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ಪ್ರಶ್ನಿಸಿದ್ದಾರೆ.

    ಬಜೆಟ್ ಮೇಲೆ ರಾಜ್ಯಸಭೆಯಲ್ಲಿ (Rajyasabha) ಮಾತನಾಡಿದ ಅವರು, ಬೆಂಗಳೂರು ಬೆಳೆಯುತ್ತಿರುವ ನಗರ ಅದಕ್ಕೆ ಕುಡಿಯುವ ನೀರಿನ ಅಗತ್ಯವಿದೆ. ಜನರು ಕುಡಿಯುವ ನೀರಿಲ್ಲದೇ (Drinking Water) ಸಂಕಷ್ಟದಲ್ಲಿದ್ದಾರೆ, ನೀರಿಲ್ಲದೇ ತತ್ತರಿದ್ದ ವೇಳೆ ಒಂದು ಟಿಎಂಸಿ ನೀರು ಹರಿಸಲು CWRC (ಕಾವೇರಿ ನೀರು ನಿಯಂತ್ರಣ ಸಮಿತಿ) ಹೇಳಿತ್ತು, ಮಳೆಯಿಂದ ಈಗ ಎಲ್ಲವೂ ಸುಗಮವಾಗಿದೆ. ಮಳೆ ಬರದಿದ್ದರೇ ನಮ್ಮ ಪರಿಸ್ಥಿತಿ ಏನು ಹೇಳಿ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ – ಸಿದ್ದರಾಮಯ್ಯ ಪರ ಸಚಿವ ಜಮೀರ್ ಬ್ಯಾಟಿಂಗ್‌

    ನಾನು ಸಾಕಷ್ಟು ನೀರಿನ ವ್ಯಾಜ್ಯ ಬಗೆಹರಿಸಿದ್ದೇನೆ, ಮುಂದಿನ ಬಜೆಟ್ ಬಗ್ಗೆ ಮಾತನಾಡಲು ಇರ್ತಿನೊ ಇಲ್ವೊ ಗೊತ್ತಿಲ್ಲ. ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಜನರು ಎನ್‌ಡಿಎ ಬೆಂಬಲಿಸಿದ್ದಾರೆ. ಹಳೇ ಮೈಸೂರು ಭಾಗ ಮತ್ತು ಬೆಂಗಳೂರಿಗೆ ಕಾವೇರಿಯೇ ಆಧಾರ, ಕುಡಿಯುವ ನೀರು ಕೊಡುವ ಭರವಸೆ ಮೇಲೆ ಜನರು ಎನ್‌ಡಿಎಗೆ ಮತ ಹಾಕಿದ್ದಾರೆ. ಹಣಕಾಸು ಸಚಿವರು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಇಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ. ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದರು.

    ಬಜೆಟ್ ಬಗ್ಗೆ ಮಾತನಾಡಿದ ಅವರು, ನಾನು ಹೃದಯಪೂರ್ವಕವಾಗಿ ಬಜೆಟ್ ಬೆಂಬಲಿಸುತ್ತೇನೆ. ನಾನು 1991 ರಲ್ಲಿ ಸಂಸತ್‌ಗೆ ಬಂದೆ ಈಗ ನನಗೆ 92 ವರ್ಷ ಮುಂದಿನ ಬಜೆಟ್ ಬಗ್ಗೆ ಮಾತಮಾಡ್ತಿನೋ ಇಲ್ಲವೊ ಗೊತ್ತಿಲ್ಲ, ನಾನು ಹಿಂದೆ ಮೋದಿ ಅವರನ್ನ ವಿರೋಧಿಸಿದ್ದೆ. ಆದರೆ ಈಗ ನಾನು ಎನ್‌ಡಿಎ ಭಾಗವಾಗಿದ್ದೇನೆ ಅದಕ್ಕಾಗಿ ಜೆ.ಪಿ ನಡ್ಡಾ ಅವರಿಗೆ ಧನ್ಯವಾದಗಳು ಎಂದರು. ಇದನ್ನೂ ಓದಿ: ಅಭಿಮನ್ಯುವಿಗೆ ಮಾಡಿದಂತೆ ಇಡೀ ಭಾರತಕ್ಕೆ ಚಕ್ರವ್ಯೂಹ ರಚಿಸಿದ್ದಾರೆ, ದೇಶವನ್ನ ಧ್ವಂಸಗೊಳಿಸುತ್ತಾರೆ – ರಾಗಾ ಆತಂಕ

    ನಾನು ಕೃಷಿ ಮತ್ತು ನಿರುದ್ಯೋಗ ಸಮಸ್ಯೆ ಬಗ್ಗೆ ಮಾತನಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಬದ್ಧತೆ ಇರುವ ವ್ಯಕ್ತಿಯನ್ನು ಕೃಷಿಗೆ ಸಚಿವರನ್ನಾಗಿ ಮಾಡಿದ್ದಾರೆ. ಉತ್ತಮ ಅನುಭವ ಇರುವ ತಂಡವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹತ್ತು ವರ್ಷ ಸಿಎಂ ಆಗಿದ್ದಾಗ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಅತ್ಯುತ್ತಮ ಮಾದರಿ ರಾಜ್ಯ ಗುಜರಾತ್ ಆಗಿದೆ. ಮೈತ್ರಿ ಸರ್ಕಾರವನ್ನು ನಡೆಸುವುದು ತುಂಬಾ ಕಷ್ಟ, ನಾನು ಮೈತ್ರಿ ಸರ್ಕಾರವನ್ನ ನಡೆಸಿದ್ದೇನೆ. ಆದರೆ ನರೇಂದ್ರ ಮೋದಿ ಎಲ್ಲೂ ಹೊಂದಾಣಿಕೆ ಮಾಡಿಕೊಳ್ಳದೇ ಜವಾಬ್ದಾರಿ ನಿಭಾಯಿಸಿದ್ದಾರೆ. ಸ್ಪೀಕರ್ ಆಯ್ಕೆಯಿಂದ ಹಿಡಿದು ಅವರ ಪ್ರಮುಖ ನಿರ್ಧಾರಗಳಲ್ಲಿ ಯಾರು ಆಕ್ಷೇಪ ವ್ಯಕ್ತಪಡಿಸಿಲ್ಲ. ಕರ್ನಾಟಕದಲ್ಲಿ ಎರಡು ಸೀಟು ಮಾತ್ರ ನಮ್ಮ ಶಕ್ತಿ ಆದಾಗ್ಯೂ ಪರಿಗಣಿಸಿ ಒಂದು ಸಂಪುಟ ದರ್ಜೆ ಸ್ಥಾನ ನೀಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

    2024ರ ಬಜೆಟ್ ಕುರಿತು ಮಾತನಾಡಿದ ಗೌಡರು, ವೈಜ್ಞಾನಿಕ ಬಜೆಟ್ ಇದು, ಮಹಿಳೆಯರು, ಬಡವರು, ಯುವಕರು, ರೈತರ ಪರವಾಗಿ ಬಜೆಟ್ ಮಂಡಿಸಿದೆ. ಕೃಷಿಯಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಒತ್ತು ನೀಡಿದೆ. ಹಂಚಿಕೆ ಸರಪಳಿ ಬಲಿಷ್ಠಗೊಳಿಸಲು ಕ್ರಮ ತೆಗೆದುಕೊಂಡಿದೆ. ಯುವಕರಿಗೆ ಇಂರ್ಟನಶಿಪ್ ನಲ್ಲಿ ಮೊದಲ ತಿಂಗಳ ಸಂಬಂಳ ನೀಡಲಾಗುತ್ತಿದೆ. ಉದ್ಯೋಗ ಹೆಚ್ಚಿಸಲು ಸರ್ಕಾರ ಆದ್ಯತೆ ನೀಡಿದೆ. ಯುವಕರಲ್ಲಿ ಕೌಶಲ್ಯಯುತರಾಗಿ ಮಾಡಲು ವ್ಯಯ ಮಾಡುತ್ತಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ದೇವೇಗೌಡರ ಕುಟುಂಬಕ್ಕೆ ಎಷ್ಟು ಸೈಟು ಬರೆಸಿಕೊಂಡಿದ್ದಾರೆ ಪಟ್ಟಿ ಕೊಡ್ಲಾ? – ಸಿದ್ದರಾಮಯ್ಯ

  • ಜು.22ರಿಂದ ಲೋಕಸಭೆ ಮುಂಗಾರು ಅಧಿವೇಶನ – 6 ಹೊಸ ಮಸೂದೆ ಮಂಡನೆಗೆ ಕೇಂದ್ರ ಸಜ್ಜು!

    ಜು.22ರಿಂದ ಲೋಕಸಭೆ ಮುಂಗಾರು ಅಧಿವೇಶನ – 6 ಹೊಸ ಮಸೂದೆ ಮಂಡನೆಗೆ ಕೇಂದ್ರ ಸಜ್ಜು!

    ನವದೆಹಲಿ: ಜುಲೈ 22ರಿಂದ (ಸೋಮವಾರ) ಲೋಕಸಭೆ ಮುಂಗಾರು ಅಧಿವೇಶನ (Monsoon Session 2024) ಆರಂಭವಾಗಲಿದ್ದು, ಆಗಸ್ಟ್ 12ರ ವರೆಗೂ ಅಧಿವೇಶನ ನಡೆಯಲಿದೆ.

    ಜುಲೈ 23ರಂದು ಪ್ರಧಾನಿ ನರೇಂದ್ರ ಮೋದಿ (PM Modi) ನೇತೃತ್ವದ ಸರ್ಕಾರದ 3ನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಲಿದ್ದು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ (Nirmala Sitharaman) ಅವರು ಬಜೆಟ್ ಮಂಡಿಸಲಿದ್ದಾರೆ. ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ವಿಪತ್ತು ನಿರ್ವಹಣಾ ಕಾನೂನನ್ನು ತಿದ್ದುಪಡಿ ಮಾಡುವುದು ಸೇರಿದಂತೆ 6 ಹೊಸ ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ. ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಂಟಿ, ದ್ವೇಷದಿಂದ ಬಿಜೆಪಿ ವಿರುದ್ಧ ಹಗರಣ ಆರೋಪ: ಕಾರಜೋಳ ಕಿಡಿ

    ಲೋಕಸಭೆಯ ಸೆಕ್ರೆಟರಿಯೇಟ್ ಮಾಹಿತಿ ಪ್ರಕಾರ ಹಣಕಾಸು ಮಸೂದೆ, ವಿಪತ್ತು ನಿರ್ವಹಣಾ ಮಸೂದೆ, ಬಾಯ್ಲರ್‌ಗಳ ಮಸೂದೆ, ಭಾರತೀಯ ವಾಯುಯಾನ ವಿಧೇಯಕ ಮಸೂದೆ, ಕಾಫಿ (ಪ್ರಚಾರ ಮತ್ತು ಅಭಿವೃದ್ಧಿ) ಮಸೂದೆ, ರಬ್ಬರ್ (ಪ್ರಚಾರ ಮತ್ತು ಅಭಿವೃದ್ಧಿ) ಮಸೂದೆ ಮಂಡನೆಯಾಗಲಿದೆ. ನೀಟ್ ಪರೀಕ್ಷೆ ಅಕ್ರಮ, ಕನ್ವರ್ ಯಾತ್ರೆ, ಮಣಿಪುರ ಸಂಘರ್ಷ, ರೈಲ್ವೆ ಸುರಕ್ಷತೆ ಸೇರಿ ಹಲವು ವಿಚಾರಗಳೊಂದಿಗೆ ಆಡಳಿತ ಪಕ್ಷವನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾ ಸನ್ನದ್ಧವಾಗಿದೆ. ಇದಕ್ಕಾಗಿ ತಯಾರಿ ನಡೆಸಿದ್ದು ಅಧಿವೇಶನಕ್ಕೂ ಮುನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದೆ ಎನ್ನಲಾಗಿದೆ. ಇದನ್ನೂ ಓದಿ: ರಾಜಕೀಯ ದ್ವೇಷಕ್ಕಾಗಿ ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಾರದು: ಬಸವರಾಜ ಬೊಮ್ಮಾಯಿ

    ಮುಂಗಾರು ಅಧಿವೇಶನದ ಹಿನ್ನಲೆ ಭಾನುವಾರ ಸರ್ಕಾರ ಸರ್ವಪಕ್ಷ ಸಭೆ ಕರೆದಿತ್ತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವರಾದ ಜೆ.ಪಿ ನಡ್ಡಾ ಮತ್ತು ಕಿರಣ್ ರಿಜಿಜು ಉಪಸ್ಥಿತರಿದ್ದರು. ಕಾಂಗ್ರೆಸ್‌ನಿಂದ ಗೌರವ್ ಗೊಗೊಯ್, ಜೈರಾಮ್ ರಮೇಶ್, ಕೆ. ಸುರೇಶ್ ಉಪಸ್ಥಿತರಿದ್ದರು. ಸಭೆಯಲ್ಲಿ ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್, ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ಎಐಎಂಐಎಂನ ಅಸಾದುದ್ದೀನ್ ಓವೈಸಿ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಪ್ರಫುಲ್ ಪಟೇಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

    ಸಭೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಎಎಪಿಯು ಕನ್ವರ್ ಯಾತ್ರೆಯ ಮಾರ್ಗದಲ್ಲಿರುವ ತಿನಿಸುಗಳಿಗೆ ಮಾಲೀಕರ ಹೆಸರನ್ನು ಪ್ರದರ್ಶಿಸಲು ಉತ್ತರ ಪ್ರದೇಶ ಸರ್ಕಾರದ ವಿವಾದಾತ್ಮಕ ನಿರ್ದೇಶನದ ವಿಷಯವನ್ನು ಪ್ರಸ್ತಾಪಿಸಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್‌ನ ಗೌರವ್ ಗೊಗೊಯ್ ಅವರು ಲೋಕಸಭೆಯ ಉಪಸಭಾಪತಿ ಸ್ಥಾನವನ್ನು ಪ್ರತಿಪಕ್ಷಕ್ಕಾಗಿ ಕೋರಿದರು, ಆ ಸ್ಥಾನ ಖಾಲಿಯಾಗಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಜಾನ್ವಿ- ಆರೋಗ್ಯದ ಬಗ್ಗೆ ಮಾಹಿತಿ ಕೊಟ್ಟ ಬೋನಿ ಕಪೂರ್

    ಸಭೆಯಲ್ಲಿ ವಿಶೇಷ ಸ್ಥಾನಮಾನದ ಬೇಡಿಕೆಯೂ ವ್ಯಕ್ತವಾಯಿತು. ಬಿಜೆಪಿಯ ಮಿತ್ರಪಕ್ಷಗಳಾದ ಜನತಾ ದಳ (ಯುನೈಟೆಡ್) ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ಮತ್ತು ರಾಷ್ಟ್ರೀಯ ಜನತಾ ದಳ ಬಿಹಾರದ ಬೇಡಿಕೆಯನ್ನು ಎತ್ತಿದವು. ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ಕೂಡ ಆಂಧ್ರಪ್ರದೇಶಕ್ಕೆ ವಿಶೇಷ ವರ್ಗದ ಸ್ಥಾನಮಾನಕ್ಕೆ ಒತ್ತಾಯಿಸಿದೆ. ಇದನ್ನೂ ಓದಿ: ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್‌ನಿಂದ ವೈಭವದ ಗುರುಪೂರ್ಣಿಮೆ ಆಚರಣೆ – ಹೂವು, ಹಣ್ಣುಗಳಿಂದ ಅದ್ಧೂರಿ ಅಲಂಕಾರ!

  • ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ ಸಂಸದ ಡಿಕೆ ಸುರೇಶ್‌

    ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ ಸಂಸದ ಡಿಕೆ ಸುರೇಶ್‌

    ನವದೆಹಲಿ: ಇಂದಿನ ಬಜೆಟ್‌ನಲ್ಲಿ ಹೊಸತೇನು ಇಲ್ಲ. ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿದೆ. ಹೀಗೆ ಅನ್ಯಾಯ ಆದ್ರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಸಂಸದ ಡಿಕೆ ಸುರೇಶ್‌ (DK Suresh) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ದೆಹಲಿಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್‌ (Union Budget 2024) ಕುರಿತು ಪ್ರತಿಕ್ರಿಯಿಸಿದ ಅವರು, ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇಂದು ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದಂತವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ಸಂಸದರು ಗರಂ ಆದರು.

    ಹೊಸ ಪದಗಳನ್ನು ಬಳಸಿ, ಹೊಸ ಹೆಸರಿಟ್ಟು ಒಂದಷ್ಟು ಯೋಜನೆ ಘೋಷಿಸಿದ್ದಾರೆ. ನಮಗೆ ಬರಬೇಕಾದ ಹಣವೇ ಸರಿಯಾಗಿ ಬರುತ್ತಿಲ್ಲ. ಇನ್ನೂ 75,000 ಕೋಟಿ ಬಡ್ಡಿ ರಹಿತ ಸಾಲ ಕೊಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡುವ ಗುರಿ: ವಿತ್ತ ಮಂತ್ರಿ

    ಈ  ಬಜೆಟ್‌ ನಲ್ಲಿ ನಾಮಫಲಕ ಮಾತ್ರ ಬದಲಾಯಿಸಲಾಗಿದೆ. ಬೇರೆ ಬೇರೆ ದೇಸಿ ಹೆಸರುಗಳನ್ನ ಇಡಲಾಗಿದೆ. ಎಕನಾಮಿಕ್ ಸರ್ವೆ ಅವರು ಇಟ್ಟಿದ್ದಿದ್ರೆ ಇವರ ಪರಿಸ್ಥಿತಿ ಏನಾಗುತ್ತಿತ್ತು?. ಯಾವ ರೀತಿ ದೇಶ ಕಳೆದ ಸಾಲಿನಲ್ಲಿ ಸಾಧನೆಯನ್ನು ಸಾಧಿಸಿದೆ ಅನ್ನೋ ಅನುಮಾನಗಳು ಪ್ರಾರಂಭವಾಗಿದೆ. ಚುನಾವಣೆಗೆ ಸಂಬಂಧಪಟ್ಟಂತೆ ಒಂದಷ್ಟು ಘೋಷಣೆಗಳು, ಒಂದಷ್ಟು ಹೇಳಿಕೆಗಳನ್ನು ಕೂಡಿರುವ ಬಜೆಟ್‌ ಇದಾಗಿದೆ ಎಂದರು.