Tag: central cabinet

  • ಕಲ್ಲಿದ್ದಲು ಅನೀಲಿಕರಣ ಯೋಜನೆ ಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ಮಂಡನೆ – ಪ್ರಹ್ಲಾದ್‌ ಜೋಶಿ

    ಕಲ್ಲಿದ್ದಲು ಅನೀಲಿಕರಣ ಯೋಜನೆ ಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ಮಂಡನೆ – ಪ್ರಹ್ಲಾದ್‌ ಜೋಶಿ

    – ಭೂಗತ ಕಲ್ಲಿದ್ದಲು ಗಣಿಗಾರಿಕೆಗೆ ಶೇ.50ರಷ್ಟು ರಿಯಾಯಿತಿ – ಜೋಶಿ ಭರವಸೆ

    ಬೆಂಗಳೂರು: ಕಲ್ಲಿದ್ದಲು (Coal) ಅನಿಲೀಕರಣ ಯೋಜನೆಯನ್ನು ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟದ ಮುಂದಿಡಲಾಗುವುದು. ನಂತರ ಔಪಚಾರಿಕವಾಗಿ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಭೂಗತ ಕಲ್ಲಿದ್ದಲು ಅನೀಲಿಕರಣ ಯೋಜನೆಗೆ ಶೇ.50 ರಷ್ಟು ರಿಯಾಯಿತಿ ನೀಡಲಾಗುವುದು. ವಾಣಿಜ್ಯ ಗಣಿಗಳಲ್ಲಿ ಭೂಗತ ಗಣಿಗಾರಿಕೆ (Mining) ಮಾಡುವವರಿಗೆ ಕೇಂದ್ರ ಸರ್ಕಾರ ಆಯಾ ರಾಜ್ಯಗಳೊಂದಿಗೆ ಆದಾಯ ಹಂಚಿಕೆಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡುತ್ತದೆ ಎಂದಿದ್ದಾರೆ. ಇದನ್ನೂ ಓದಿ: Ayodhya Ram Mandir: ಕಾಶಿ ಯಜ್ಞಶಾಲೆಯಲ್ಲಿ 40 ದಿನ ವಿಶೇಷ ಪೂಜೆ – ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ

    ವಾಣಿಜ್ಯ ಕಲ್ಲಿದ್ದಲು ಗಣಿಗಾರಿಕೆ ಮೂಲಕ ಭೂಗತ ಗಣಿಗಾರಿಕೆಗೆ ಪ್ರವೇಶಿಸುವವರಿಗೆ ಈ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. ಮೇಲ್ಮೈ ಗಣಿಗಾರಿಕೆಗೆ ಹೋಲಿಸಿದರೆ ಭೂಗತ ಗಣಿಗಾರಿಕೆ ಕಡಿಮೆ ಮಾಲಿನ್ಯಕಾರಕವಾಗಿದೆ. ಹಾಗಾಗಿ ಇದನ್ನು ಪ್ರೋತ್ಸಾಹಿಸಲು ಭವಿಷ್ಯದಲ್ಲಿ ಈ ಸಬ್ಸಿಡಿ (ಸಹಾಯಧನ) ಹೆಚ್ಚಿಸಲೂ ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದ್ದಾರೆ.

    ಕಲ್ಲಿದ್ದಲು ಸಚಿವಾಲಯದ ಪಿಎಸ್‌ಯುಗಳು ಒಟ್ಟಾಗಿ 2030ರ ವೇಳೆಗೆ 12 GW ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಹೊಂದಲು ಯೋಜಿಸಲಾಗಿದೆ. ಭಾರತವು ಪ್ರಸ್ತುತ ತೆರೆದ ಗಣಿಗಾರಿಕೆ ವಿಧಾನದ ಮೇಲೆ ಹೆಚ್ಚು ಅವಲಂಬಿತವಾಗಿದೆ. ಭೂಗತ ಗಣಿಗಾರಿಕೆ ಪ್ರಸ್ತುತ ಭಾರತದ ಒಟ್ಟು ಕಲ್ಲಿದ್ದಲು ಗಣಿಗಾರಿಕೆ ಉತ್ಪಾದನೆಯಲ್ಲಿ ಕೇವಲ 4 ಪ್ರತಿಶತದಷ್ಟಿದ್ದು ಇದನ್ನು ಹೆಚ್ಚಿಸಲು ಯೋಜಿಸಲಾಗುತ್ತಿದೆ. ಇದನ್ನೂ ಓದಿ: ಪ್ರಿಯಕರನೊಂದಿಗೆ ಸರಸಕ್ಕೆ ಅಡ್ಡಿಯಾದ ಪತಿ – ಕ್ಷಣಮಾತ್ರದಲ್ಲೇ ಸ್ಕೆಚ್‌ ಹಾಕಿ ಪ್ರಿಯಕರನಿಂದ್ಲೇ ಕೊಲೆ ಮಾಡಿಸಿದ್ಲು ಪತ್ನಿ

    ಮೇಲ್ಮೈ ಕಲ್ಲಿದ್ದಲು ಗಣಿಗಾರಿಕೆ ವಿಧಾನದಲ್ಲಿ ಉತ್ತಮ ಗುಣಮಟ್ಟದ ಹಾಗೂ ಒಂದೇ ಬಾರಿಗೆ ಹೆಚ್ಚಿನ ಪ್ರಮಾಣದಲ್ಲಿ ಕಲ್ಲಿದ್ದಲು ಹೊರ ತೆಗೆಯಲಿದ್ದು, ಅಷ್ಟೇ ಅನಾನುಕೂಲತೆ ಸಹ ಹೊಂದಿದೆ. ಅತಿಯಾದ ಹೊರತೆಗೆಯುವಿಕೆಯಿಂದಾಗಿ ಹೆಚ್ಚಿನ ಮಾಲಿನ್ಯ, ಪುನರ್ವಸತಿ ಮತ್ತು ಭೂ ಸ್ವಾಧೀನದ ವೆಚ್ಚಗಳು ಹಾಗೂ ಅರಣ್ಯದ ಸ್ಥಳಾಂತರ ಸಮಸ್ಯೆಗಳು ಅಧಿಕವಾಗಿವೆ ಎಂದು ಸಚಿವ ಜೋಶಿ ವಿವರಿಸಿದ್ದಾರೆ.

    ದೇಶದ ಅತಿದೊಡ್ಡ ಕಲ್ಲಿದ್ದಲು ಗಣಿಗಾರಿಕೆ ಸಂಸ್ಥೆ ಕೋಲ್ ಇಂಡಿಯಾ ಲಿಮಿಟೆಡ್ (Coal India Limited) ತನ್ನ ಭೂಗತ ಗಣಿಗಾರಿಕೆ ಉತ್ಪಾದನೆಯನ್ನು 2030ರ ವೇಳೆಗೆ 100 ಮಿಲಿಯನ್ ಟನ್‌ಗಳಿಗೆ (MT) 4 ಪಟ್ಟು ಹೆಚ್ಚಿಸಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ರೇಸ್‌ಕೊರ್ಸ್ ಬುಕ್ಕಿಂಗ್‌ ಕೌಂಟರ್‌ ಮೇಲೆ CCB ದಾಳಿ – 3.47 ಕೋಟಿ ರೂ. ಸೀಜ್

    ಇನ್ನೂ ಕಲ್ಲಿದ್ದಲು ಅನಿಲೀಕರಣಕ್ಕಾಗಿ, ಅನಿಯಂತ್ರಿತ ವಲಯಕ್ಕೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗಾಗಿ ಹೊಸ ಉಪವಿಭಾಗವನ್ನು ಸರ್ಕಾರ ಸೇರಿಸಿದೆ. ಭಾರೀ ಗಣಿಗಾರಿಕೆ ಉಪಕರಣಗಳಿಗೆ ಯಾವುದೇ ಉತ್ಪಾದನಾ-ಸಂಯೋಜಿತ ಪ್ರೋತ್ಸಾಹವನ್ನು (PLI) ಯೋಜಿಸಿಲ್ಲ. ಭಾರೀ ಗಣಿಗಾರಿಕೆ ಮತ್ತು ನಿರ್ಮಾಣ ಉಪಕರಣಗಳ ಉತ್ಪಾದನೆಗೆ ಪಿಎಲ್‌ಐ ನೀಡಲು ಸರ್ಕಾರ ಯಾವುದೇ ಯೋಜನೆ ಹೊಂದಿಲ್ಲ. ನಮ್ಮ PSU ಗಳಿಗೆ ಮತ್ತು ಕಲ್ಲಿದ್ದಲು ಬ್ಲಾಕ್‌ಗಳಲ್ಲಿ ಭಾಗವಹಿಸುವ ಖಾಸಗಿ ಕಂಪನಿಗಳಿಗೆ ಖನಿಜ ಹರಾಜಿನಲ್ಲಿ ಖರೀದಿಸಲು ಹೇಳುತ್ತಿದ್ದೇವೆ ಎಂದಿದ್ದಾರೆ.

    ಎನ್‌ಎಲ್‌ಸಿ ಇಂಡಿಯಾ ಮತ್ತು ಕೋಲ್ ಇಂಡಿಯಾದ ಮಾಲೀಕತ್ವವನ್ನು ಸರ್ಕಾರ ಯಾವಾಗಲೂ ಉಳಿಸಿಕೊಳ್ಳುತ್ತದೆ ಎಂದು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

  • ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಸಲಿಂಗಕಾಮ, ವ್ಯಭಿಚಾರ ಸೇರಿಸುವ ಶಿಫಾರಸಿಗೆ ಕೇಂದ್ರ ಕ್ಯಾಬಿನೆಟ್‌ ಅಸಮ್ಮತಿ

    ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಸಲಿಂಗಕಾಮ, ವ್ಯಭಿಚಾರ ಸೇರಿಸುವ ಶಿಫಾರಸಿಗೆ ಕೇಂದ್ರ ಕ್ಯಾಬಿನೆಟ್‌ ಅಸಮ್ಮತಿ

    ನವದೆಹಲಿ: ಹಳೆಯ ವಸಾಹತುಶಾಹಿ ಪೂರ್ವ ಕ್ರಿಮಿನಲ್ ಕಾನೂನುಗಳನ್ನು ( New Criminal Law) ಬದಲಿಸಲು ಸಿದ್ಧವಾಗಿರುವ ಕ್ರಿಮಿನಲ್ ಕಾನೂನು ತಿದ್ದುಪಡಿ ಮಸೂದೆಗಳನ್ನು ಮಂಡಿಸಲು ಕೇಂದ್ರ ಸಂಪುಟವು ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ. ಆದ್ರೆ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಶಿಫಾರಸು ಮಾಡಿದ 2 ಸಲಹೆಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi), ಅವರ ಕಚೇರಿ (PMO) ಹಾಗೂ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನಿರಾಕರಿಸಿದೆ.

    ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಸಲಿಂಗಕಾಮಿ ಸಂಬಂಧಗಳು ಮತ್ತು ವ್ಯಭಿಚಾರ (Adultery) ಸೇರಿಸುವ ಸಮಿತಿ ಶಿಫಾರಸಿಗೆ ಅಸಮ್ಮತಿ ಸೂಚಿಸಿದೆ. ಏಕೆಂದರೆ ಸಂಸದೀಯ ಸ್ಥಾಯಿ ಸಮಿತಿ ಶಿಫಾರಸು ಮಾಡಿದ ಎರಡೂ ಕಾನೂನು ಸಲಹೆಗಳು ದೂರಗಾಮಿ ಪರಿಣಾಮ ಉಂಟು ಮಾಡಲಿದೆ. ಜೊತೆಗೆ ಸುಪ್ರೀಂ ಕೋರ್ಟ್‌ಗೆ (Supreme Court) ಮತ್ತು ಅದರ ತೀರ್ಪುಗಳಿಗೆ ವಿರುದ್ಧವಾಗಿವೆ ಎಂಬ ಕಾರಣಕ್ಕಾಗಿ ಒಪ್ಪಿಗೆ ನಿರಾಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಈ ಎರಡು ಸಲಹೆಗಳ ಪೈಕಿ ಒಂದು ವ್ಯಭಿಚಾರದ ಅಪರಾಧಕ್ಕೆ ಸಂಬಂಧಿಸಿದ್ದಾಗಿದ್ದರೆ, ಇನ್ನೊಂದು ಸಲಿಂಗ ಕಾಮ ಅಪರಾಧ ಎಂದು ಪರಿಣಿಸುವುದಾಗಿದೆ. 2023ರ ಭಾರತೀಯ ನ್ಯಾಯ ಸಂಹಿತಾ ಮಸೂದೆಯಲ್ಲಿ ವ್ಯಭಿಚಾರದ ಅಪರಾಧವನ್ನು ಉಳಿಸಿಕೊಳ್ಳಬೇಕೆಂದು ಸಮಿತಿಯು ಶಿಫಾರಸು ಮಾಡಿತ್ತು. ಆದ್ರೆ 2018 ರಲ್ಲಿ ಸುಪ್ರೀಂ ಕೋರ್ಟ್ ವ್ಯಭಿಚಾರವನ್ನು ಅಪರಾಧವೆಂದು ಪರಿಗಣಿಸುವುದನ್ನ ತಳ್ಳಿಹಾಕಿದೆ, ಇದು ಮಹಿಳೆಯರ ವಿರುದ್ಧದ ತಾರತಮ್ಯಕ್ಕೆ ಎಡೆಮಾಡಿಕೊಡುತ್ತದೆ. ಮಾತ್ರವಲ್ಲದೇ ಮಹಿಳೆಯರ ಘನತೆಯನ್ನು ಕುಗ್ಗಿಸುತ್ತದೆ ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ನವರು ನೀರಿನಿಂದ ತೆಗೆದ ಮೀನಿನ ರೀತಿ ಒದ್ದಾಡುತ್ತಿದ್ದಾರೆ: ಸಿದ್ದರಾಮಯ್ಯ

    ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 377ರ ಅಡಿಯಲ್ಲಿ ಒಮ್ಮತವಿಲ್ಲದ ಕಾರ್ಯಗಳಿಗೆ ದಂಡ ವಿಧಿಸುವುದು ಸ್ಥಾಯಿ ಸಮಿತಿಯ ಮತ್ತೊಂದು ಶಿಫಾರಸು ಆಗಿದೆ. ವಯಸ್ಕರ ನಡುವಿನ ಒಪ್ಪಿತ ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವುದನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದರೂ ಹೊಸ ಮಸೂದೆಯಲ್ಲಿ ಈ ನಿಬಂಧನೆಯನ್ನು ಉಳಿಸಿಕೊಳ್ಳಲು ಸ್ಥಾಯಿ ಸಮಿತಿ ಸಲಹೆ ನೀಡಿತ್ತು. ಪುರುಷ, ಮಹಿಳೆ, ತೃತೀಯಲಿಂಗಿ ಮತ್ತು ಪ್ರಾಣಿಗಳ ವಿರುದ್ಧ ಸಮ್ಮತಿಯಿಲ್ಲದ ಲೈಂಗಿಕ ಅಪರಾಧಕ್ಕೆ ಯಾವುದೇ ನಿಬಂಧನೆ ಇಲ್ಲ ಎಂದು ಸಮಿತಿ ಹೇಳಿತ್ತು. ಆದರೆ, ಈ ಎರಡೂ ಶಿಫಾರಸುಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಪ್ರಧಾನಿ, ಅವರ ಕಚೇರಿ (ಪಿಎಂಒ) ಮತ್ತು ಕೇಂದ್ರ ಸಂಪುಟ ತಿಳಿಸಿದೆ.

    ವ್ಯಭಿಚಾರದ ಅಪರಾಧದಲ್ಲಿ, ಮಹಿಳೆಯ ಸ್ವಾಯತ್ತತೆಯನ್ನು ಕಡೆಗಣಿಸಿ ಪುರುಷನಿಗೆ ಮಾತ್ರ ದಂಡ ವಿಧಿಸುವ ಮೂಲಕ ಹೆಂಡತಿಯನ್ನು ಗಂಡನ ಆಸ್ತಿಯಂತೆ ಪರಿಗಣಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಮದುವೆಯನ್ನು ಪವಿತ್ರವೆಂದು ಪರಿಗಣಿಸಲಾಗಿದ್ದು, ಭಾರತೀಯ ಸಮಾಜದಲ್ಲಿ ಇದನ್ನು ರಕ್ಷಿಸಬೇಕು. ಅಲ್ಲದೆ, ಲಿಂಗ-ತಟಸ್ಥಗೊಳಿಸಬೇಕು ಎಂದು ಸಂಸದೀಯ ಸಮಿತಿಯು ಅಭಿಪ್ರಾಯಪಟ್ಟಿದೆ. ಈ ಶಿಫಾರಸಿಗೆ ಒಪ್ಪಿಗೆ ಸೂಚಿಸದಿರಲು ಪಿಎಂಒ, ಪ್ರಧಾನಿ ಮತ್ತು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಧ್ಯಪ್ರದೇಶ ಸಿಎಂ ಹುದ್ದೆಗೆ ಮೋಹನ್ ಯಾದವ್ ಅಚ್ಚರಿ ಆಯ್ಕೆ – ಇಬ್ಬರಿಗೆ ಡಿಸಿಎಂ ಸ್ಥಾನ

    ಸಂಘಟಿತ ಅಪರಾಧ ಮತ್ತು ಭಯೋತ್ಪಾದನೆಯ ವ್ಯಾಖ್ಯಾನವನ್ನು 21ನೇ ಶತಮಾನಕ್ಕೆ ಅನುಗುಣವಾಗಿ ಇರುವಂತೆ ಮಾಡಲು ಕೆಲವು ಬದಲಾವಣೆಗಳನ್ನು ಮಸೂದೆಯಲ್ಲಿ ಮಾಡಲಾಗಿದೆ. ಈ ಮೂರು ಮಸೂದೆಗಳನ್ನು ರಾಜ್ಯಸಭೆಯಲ್ಲಿ ಬುಧವಾರ ಮಂಡಿಸಿ, ಮುಂದಿನ ವಾರದಲ್ಲಿ ಅಂಗೀಕರಿಸುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Article 370 Verdict: ಸುಪ್ರೀಂ ಆದೇಶವನ್ನು ಗೌರವಯುತವಾಗಿ ಒಪ್ಪುವುದಿಲ್ಲ: ಪಿ ಚಿದಂಬರಂ

  • ನಾಳೆ ಮೋದಿ ಸಂಪುಟ ಪುನಾರಚನೆ – ಕರ್ನಾಟಕದ ಈ ಮೂವರಿಗೆ ಮಂತ್ರಿ ಭಾಗ್ಯ ಸಾಧ್ಯತೆ

    ನಾಳೆ ಮೋದಿ ಸಂಪುಟ ಪುನಾರಚನೆ – ಕರ್ನಾಟಕದ ಈ ಮೂವರಿಗೆ ಮಂತ್ರಿ ಭಾಗ್ಯ ಸಾಧ್ಯತೆ

    ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಇದೀಗ ಕೇಂದ್ರ ಸಚಿವ ಸಂಪುಟ ಕೂಡ ಪುನಾರಚನೆಯಾಗುತ್ತಿದೆ. ನಾಳೆ ಭಾನುವಾರ ಬೆಳಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ಸಂಪುಟ ಪುನಾರಚನೆ ಆಗ್ತಿದೆ.

    9 ಸಚಿವರು ಸಂಪುಟದಿಂದ ಔಟ್ ಆಗಲಿದ್ದಾರೆ. ಹೊಸದಾಗಿ ಸುಮಾರು 15 ಮಂದಿ ಸಂಪುಟ ಸೇರುತ್ತಿದ್ದು, 16 ಸಚಿವರ ಖಾತೆ ಬದಲಾಗುತ್ತಿದೆ. 6 ರಾಜ್ಯ ಸಚಿವರಿಗೆ ಬಡ್ತಿ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಸಂಪುಟದಿಂದ ಕೈಬಿಡುವ ಸಚಿವರ ಜೊತೆ ಅಮಿತ್ ಶಾ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ರಾಜೀನಾಮೆ ನೀಡಲು ಸೂಚಿಸಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿ: ಸಿದ್ದು ಸಂಪುಟಕ್ಕೆ ಫೈನಲ್ ಸರ್ಜರಿ: ಮೂವರಿಗೆ ಸಚಿವ ಸ್ಥಾನ ಸಿಗೋದರ ಹಿಂದೆ ಇರೋ ಲೆಕ್ಕಾಚಾರ ಏನು?

    ಹಾಗಿದ್ರೆ ಕರ್ನಾಟಕದಿಂದ ಯಾರಿಗೆಲ್ಲಾ ಸಚಿವ ಸ್ಥಾನ ಸಿಗಬಹುದು ಅನ್ನೋ ಲೆಕ್ಕಾಚಾರವನ್ನ ನೋಡೋದಾದ್ರೆ ಧಾರವಾಡ ಸಂಸದ ಪ್ರಹ್ಲಾದ್ ಜೋಷಿ,
    ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿಗೆ ಮೋದಿ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ. ಈ ಹಿಂದೆ ಬಳ್ಳಾರಿ ಸಂಸದ ಶ್ರೀರಾಮುಲುಗೆ ಸ್ಥಾನ ಸಿಗಬಹುದು ಎಂದು ಹೇಳಲಾಗಿತ್ತು ಆದ್ರೆ ಈಗ ಶ್ರೀರಾಮುಲು ಹೆಸರಿಲ್ಲ ಎನ್ನಲಾಗ್ತಿದೆ.

  • ಇನ್ನೊಂದು ವಾರದಲ್ಲಿ ಕೇಂದ್ರ ಸಚಿವಸಂಪುಟ ವಿಸ್ತರಣೆ ಸಾಧ್ಯತೆ- ಕರ್ನಾಟಕದ ಇಬ್ಬರು ಸಂಸದರಿಗೆ ಮೋದಿ ಸಂಪುಟದಲ್ಲಿ ಸ್ಥಾನ?

    ಇನ್ನೊಂದು ವಾರದಲ್ಲಿ ಕೇಂದ್ರ ಸಚಿವಸಂಪುಟ ವಿಸ್ತರಣೆ ಸಾಧ್ಯತೆ- ಕರ್ನಾಟಕದ ಇಬ್ಬರು ಸಂಸದರಿಗೆ ಮೋದಿ ಸಂಪುಟದಲ್ಲಿ ಸ್ಥಾನ?

    ನವದೆಹಲಿ: ಕೇಂದ್ರ ಸಚಿವ ಸಂಪುಟ ಇನ್ನೊಂದು ವಾರದೊಳಗೆ ಪುನಾರಚನೆಯಾಗುವ ಸಾಧ್ಯತೆ ಹೆಚ್ಚಿದೆ. 2019ರ ಲೋಕಸಭೆ ಚುನಾವಣೆ ಮತ್ತು ಮುಂಬರುವ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಂಪುಟ ಪುನಾರಚನೆ ನಡೆಯಲಿದೆ.

    ಮೊನ್ನೆಯಷ್ಟೇ ಎನ್‍ಡಿಎ ಸೇರಿದ ಜೆಡಿಯು ಮತ್ತು ಅಣ್ಣಾಡಿಎಂಕೆ ಪಕ್ಷಗಳ ತಲಾ ಇಬ್ಬರು ಸಂಸದರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನ ಮಾನ ಕಲ್ಪಿಸಲು ಸಿದ್ಧತೆ ನಡೆಸಲಾಗಿದೆ. ಶಿವಸೇನೆಯ ಒಬ್ಬರಿಗೆ ಮಂತ್ರಿಸ್ಥಾನ ನೀಡುವ ಮೂಲಕ ಅವರ ಕೋಪ ತಣ್ಣಗಾಗಿಸುವ ಪ್ರಯತ್ನ ಕೂಡ ನಡೆದಿದೆ. ಇನ್ನು ಕರ್ನಾಟಕದ ಇಬ್ಬರು ಸಂಸದರು ಮೋದಿ ಸಂಪುಟ ಸೇರುವ ನಿರೀಕ್ಷೆ ಇದೆ.

    ಯಡಿಯೂರಪ್ಪ ಆಪ್ತರಾದ ಶೋಭಾ ಕರಂದ್ಲಾಜೆ, ಶ್ರೀರಾಮುಲು, ಶಿವಕುಮಾರ್ ಉದಾಸಿ, ಸುರೇಶ್ ಅಂಗಡಿ ಪೈಕಿ ಇಬ್ಬರಿಗೆ ಮಂತ್ರಿಗಿರಿಯ ಯೋಗವಿದೆ ಎನ್ನಲಾಗ್ತಿದೆ. ಕರಂದ್ಲಾಜೆ ಸೇರ್ಪಡೆ ಮೂಲಕ ಕರಾವಳಿ ಜಿಲ್ಲೆಗಳ ಮೇಲೆ ಮತ್ತಷ್ಟು ಹಿಡಿತ ಸಾಧಿಸಬಹುದು. ಶ್ರೀರಾಮುಲು ಮೂಲಕ ಎಸ್‍ಟಿ ಮತಗಳನ್ನು ಗಟ್ಟಿ ಮಾಡಿಕೊಳ್ಳಬಹುದು. ಶಿವಕುಮಾರ್ ಉದಾಸಿ ಅಥವಾ ಸುರೇಶ್ ಅಂಗಡಿ ಮೂಲಕ ಲಿಂಗಾಯತ ಮತಗಳ ಕ್ರೋಢೀಕರಣ ಮಾಡಬಹುದು ಎಂಬ ಲೆಕ್ಕಾಚಾರ ಮೋದಿ ಪಾಳಯದಲ್ಲಿ ನಡೆಯುತ್ತಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರ್ತಿವೆ.

    ಪುನಾರಚನೆ ವೇಳೆ ಕಲ್‍ರಾಜ್ ಮಿಶ್ರಾ ಸೇರಿದಂತೆ ಹಲವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ. ಈ ನಡುವೆ ರೈಲ್ವೆ ದುರಂತಗಳ ಬಳಿಕ ನೈತಿಕ ಹೊಣೆ ಹೊತ್ತು ಸುರೇಶ್ ಪ್ರಭು ರಾಜೀನಾಮೆಗೆ ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಹೆದ್ದಾರಿ ಸಾರಿಗೆ ಸಚಿವರಾಗಿರುವ ನಿತಿನ್ ಗಡ್ಕರಿಗೆ ರೈಲ್ವೆ ಖಾತೆಯ ಜವಾಬ್ದಾರಿಯನ್ನು ನೀಡುವ ಸಾಧ್ಯತೆ ಇದೆ.