ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ಮತ್ತು ಕ್ರಿಮಿನಲ್ ಮೊಕದ್ದಮೆಯನ್ನು (Criminal Prosecution) ಪ್ರಾರಂಭಿಸಲು ರಾಜಸ್ಥಾನದ ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡುವಂತೆ ಬಿಜೆಪಿ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ಮತದಾನದ (Voting) ದಿನವಾದ ಇಂದು ಬೆಳಗ್ಗೆ ರಾಹುಲ್ ಗಾಂಧಿ ಎಕ್ಸ್ ಮಾಡಿದ್ದರು. ಉಚಿತ ಚಿಕಿತ್ಸೆ, ಕಡಿಮೆ ದರದಲ್ಲಿ ಸಿಲಿಂಡರ್, ಇಂಗ್ಲಿಷ್ ಶಿಕ್ಷಣ, ಹಳೆ ಪಿಂಚಣಿ ವ್ಯವಸ್ಥೆ ಜಾರಿ ಸೇರಿ ಹಲವು ಯೋಜನೆಗಳಿಗಾಗಿ ಕಾಂಗ್ರೆಸ್‌ಗೆ ಮತದಾನ ಮಾಡುವಂತೆ ಮನವಿ ಮಾಡಿದ್ದರು. ಇದನ್ನೂ ಓದಿ: ಹಲಾಲ್ ಉತ್ಪನ್ನ ನಿಷೇಧಿಸುವ ನಿರ್ಧಾರ ತೆಗೆದುಕೊಂಡಿಲ್ಲ – ಅಮಿತ್ ಶಾ
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ರಾಹುಲ್ ಗಾಂಧಿ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ (BJP) ಕೇಂದ್ರ ಚುನಾವಣಾ ಆಯೋಗಕ್ಕೆ (Central Election Commission) ದೂರು ನೀಡಿದೆ. ರಾಹುಲ್ ಗಾಂಧಿ ಮಾಡಿದ ಪೋಸ್ಟ್ ಡಿಲಿಟ್ ಮಾಡಬೇಕು. ಅವರ ಖಾತೆಯನ್ನು ಅಮಾನತು ಮಾಡಬೇಕು ಹಾಗೂ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಪ್ರಾರಂಭಿಸಲು ಬಿಜೆಪಿ ಆಗ್ರಹಿಸಿದೆ. ಇದನ್ನೂ ಓದಿ: 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮತ್ತೆ ಸ್ಥಗಿತ
ಈ ಹಿಂದೆ ರಾಜಸ್ಥಾನ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಭಾರತ ವಿಶ್ವಕಪ್ ಸೋಲಿಗೆ ಪ್ರಧಾನಿ ನರೇಂದ್ರ ಮೋದಿ ಕಾಲ್ಗುಣ ಕಾರಣ. ಅವರು ಅಪಶಕುನ ಎಂದು ಅವಹೇಳನಾಕಾರಿ ಹೇಳಿಕೆ ನೀಡಿದ್ದರು. ಇದರ ವಿರುದ್ಧವೂ ಬಿಜೆಪಿ ಆಯೋಗಕ್ಕೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿತ್ತು. ಬಿಜೆಪಿ ದೂರು ಹಿನ್ನೆಲೆ ರಾಗಾಗೆ ಆಯೋಗ ನೋಟಿಸ್ ನೀಡಿತ್ತು. ಇದನ್ನೂ ಓದಿ: ಸುರಂಗದಲ್ಲಿ ಸಿಲುಕಿರೋ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ವಿಳಂಬ
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಕೇಂದ್ರ ಚುನಾವಣಾ ಆಯೋಗದಿಂದ (Central Election Commission) ನೋಟಿಸ್ ನೀಡಲಾಗಿದೆ.
ಪ್ರಧಾನಿ ವಿರುದ್ಧ ನೀಡಿರುವ ಹೇಳಿಕೆ ಸಂಬಂಬಂಧ ಬಿಜೆಪಿ ಕೇಂದ್ರ ಚುನಾವಣಾ ಆಯೋಗದ ಮೆಟ್ಟಿಲೇರಿತ್ತು. ಪ್ರಧಾನಿಯೊಬ್ಬರನ್ನು ಜೇಬುಗಳ್ಳ ಮತ್ತು ಅಪಶಕುನಕ್ಕೆ ಹೋಲಿಸುವುದು ಸರಿಯಲ್ಲ. ಇದು ರಾಜಕೀಯ ಚರ್ಚೆಯ ಮಟ್ಟ ಹದಗೆಡುತ್ತಿರುವುದರ ಸಂಕೇತವಾಗಿದೆ. ಯಾವುದೇ ವ್ಯಕ್ತಿಯನ್ನು ಜೇಬುಗಳ್ಳರೆಂದು ಕರೆಯುವುದು ಕೆಟ್ಟ ನಿಂದನೆ ಮತ್ತು ವೈಯಕ್ತಿಕ ದಾಳಿಗೆ ಸಮವಾಗಿರುತ್ತದೆ. ಅವರ ಪ್ರತಿಷ್ಠೆಗೆ ಹಾನಿ ಮಾಡುವ ಮತ್ತು ಸಾರ್ವಜನಿಕರನ್ನು ತಪ್ಪುದಾರಿಗೆಳೆಯುವ ಸ್ಪಷ್ಟ ಉದ್ದೇಶದಿಂದ ಅಂತಹ ಹೇಳಿಕೆಯನ್ನು ನೀಡಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
Election Commission of India issues notice to Congress MP Rahul Gandhi on his 'panauti' and 'pickpocket' jibes at PM Modi, asks him to respond by 25th November pic.twitter.com/CcrIlU6I9o
ರಾಹುಲ್ ಹೇಳಿದ್ದೇನು..?; ರಾಜಸ್ಥಾನ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ರಾಹುಲ್ ಗಾಂಧಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಮೋದಿ ಪನೋತಿ (ಅಪಶಕುನ) ಮತ್ತು ಜೇಬುಗಳ್ಳ ಎಂದಿದ್ದರು. ನಮ್ಮ ಹುಡುಗರು ಬಹುತೇಕ ವಿಶ್ವಕಪ್ ಗೆಲ್ಲುತ್ತಿದ್ದರು. ವಿಶ್ವಕಪ್ ಗೆಲ್ಲುವ ಹುಮ್ಮಸ್ಸಿನಲ್ಲಿಯೇ ಅಖಾಡಕ್ಕಿಳಿದಿದ್ದರು. ಆದರೆ ಕೆಟ್ಟ ಶಕುನವೊಂದು ಮೈದಾನ ಪ್ರವೇಶಿಸಿದ ಪರಿಣಾಮ ಕಪ್ ಕಳೆದುಕೊಳ್ಳುವಂತೆ ಮಾಡಿದೆ. ಅಲ್ಲದೇ ರಾಹುಲ್ ಗಾಂಧಿಯವರು ಜನರಿಂದಲೂ ಅಪಶುಕುನ ಎನ್ನುವ ಪದ ಹೇಳಿಸಿದ್ದರು. ರಾಹುಲ್ ಗಾಂಧಿಯವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು.
ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಕ್ರಿಕೆಟ್ ವರ್ಲ್ಡ್ ಕಪ್ (World Cup 2023) ನಲ್ಲಿ ಆಸ್ಟ್ರೇಲಿಯಾ (Australia) ಮುಂದೆ ಭಾರತ ಫೈನಲ್ ಪಂದ್ಯವಿತ್ತು. ಈ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಸಿನಿ ತಾರೆಯರು ಕೂಡ ಭಾಗಿಯಾಗಿದ್ದರು. ಈ ಮ್ಯಾಚ್‍ನಲ್ಲಿ ಆಸೀಸ್ ಮುಂದೆ ಭಾರತ ಸೋಲು ಕಂಡಿತ್ತು. ಇದಾದ ಬಳಿಕ ಟೀಂ ಇಂಡಿಯಾ ಆಟಗಾರರಿದ್ದ ಡ್ರೆಸ್ಸಿಂಗ್ ರೂಮ್‍ಗೆ ತೆರಳಿದ್ದ ಮೋದಿ ಅವರನ್ನು ಸಮಾಧಾನ ಪಡಿಸಿದ್ದರು. ಅಲ್ಲದೆ ನಿಮ್ಮ ಜೊತೆ ನಾವು ಇರುತ್ತೇವೆ ಎಂದು ಧೈರ್ಯ ತುಂಬಿದ್ದರು.
– ಕಾಂಗ್ರೆಸ್ಗೆ 115-127 ಸ್ಥಾನ ಕೊಟ್ಟ ಎಬಿಪಿ ಸಿ- ವೋಟರ್ – ಝೀ ನ್ಯೂಸ್ ಸಮೀಕ್ಷೆಯಲ್ಲಿ ಅತಂತ್ರ ತೀರ್ಪು
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಈಗಾಗಲೇ ಪ್ರಕಟವಾಗಿದ್ದು, ವಿಧಾನಸಭೆ ಗದ್ದುಗೆ ಏರಲು ಮೂರೂ ಪಕ್ಷಗಳು ನಾನಾ ರಣತಂತ್ರಗಳನ್ನು ರೂಪಿಸುತ್ತಿದೆ. ಇದರ ಬೆನ್ನಲ್ಲೇ ಎಬಿಪಿ ಸಿ- ವೋಟರ್ ಸಮೀಕ್ಷೆ ಪಟ್ಟಿ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದೆ.
ಎಬಿಪಿ ಸಿ- ವೋಟರ್ ಸಮೀಕ್ಷೆ ಈ ಕೆಳಗಿನಂತಿದೆ: ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ 115-127 ಸೀಟ್ ಬರುವ ನಿರೀಕ್ಷೆಯಿದೆ. ಅದೇ ರೀತಿ ಬಿಜೆಪಿಗೆ 68-80, ಜೆಡಿಎಸ್‍ಗೆ 23-35 ಹಾಗೂ ಇತರೆ 0-02 ಸೀಟ್ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.
ಇನ್ನೂ ಝೀ ನ್ಯೂಸ್ ಕೂಡ ಸಮೀಕ್ಷೆ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿ ರಾಜ್ಯದಲ್ಲಿ ಯಾರಿಗೂ ಬಹುಮತವಿಲ್ಲ ಎಂದು ತಿಳಿಸಿದೆ. ಝೀ ನ್ಯೂಸ್‍ನ ಸಮೀಕ್ಷೆ ಈ ರೀತಿಯಿದೆ. ಬಿಜೆಪಿ 96 -106 ಸೀಟ್ ಪಡೆದರೆ, ಕಾಂಗ್ರೆಸ್ 88-98 ಸೀಟ್, ಜೆಡಿಎಸ್ – 23-33 ಹಾಗೂ ಇತರೆ 02-07 ಸೀಟ್ ಪಡೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ. Karnataka Election 2023- ಮೇ 10 ರಂದು ಮತದಾನ, ಮೇ 13ಕ್ಕೆ ಫಲಿತಾಂಶ
ಬಿಎಸ್‌ವೈ ಪ್ರಭಾವ ಬೀರುತ್ತಾರಾ?: ಈ ಬಾರಿ ಕರ್ನಾಟಕ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬಿಜೆಪಿಗೆ ಬಹುಮತ ತಂದುಕೊಡಲು ಪ್ರಭಾವ ಬೀರುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಜೀ ನ್ಯೂಸ್ ನಡೆಸಿದ್ದ ಸಮೀಕ್ಷೆಯಲ್ಲಿ ರಾಜ್ಯದ ಜನತೆಗೆ ಬಿ.ಎಸ್. ಯಡಿಯೂರಪ್ಪ ಅವರ ಬದಲಿಗೆ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು ಪಕ್ಷಕ್ಕೆ ಅಧಿಕಾರವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಕೇಳಿತ್ತು. ಇದಕ್ಕೆ ಶೇ.31ರಷ್ಟು ಮಂದಿ ಕೇಸರಿ ಪಾಳಯಕ್ಕೆ ಇದರಿಂದ ಲಾಭವಾಗಲಿದೆ ಎಂದು ಹೇಳಿದರೆ, ಶೇ.21ರಷ್ಟು ಮಂದಿ ಬಿಜೆಪಿಗೆ ನಷ್ಟ ಎಂದು ಹೇಳಿದ್ದಾರೆ.
ಚುನಾವಣಾ ಆಯೋಗದ (Election Commission) ಮುಖ್ಯಸ್ಥ ರಾಜೀವ್ ಕುಮಾರ್ ಕರ್ನಾಟಕ ವಿಧಾನಸಭಾ ಚುನಾವಣಾ (Karnataka Vidhanasabha Election 2023) ದಿನಾಂಕವನ್ನು ಪ್ರಕಟಿಸಿದ್ದಾರೆ. ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ. ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಅಲ್ಲದೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.
ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣಾ (Karnataka Vidhanasabha Election 2023) ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 10 ರಂದು ಚುನಾವಣೆ ನಡೆಯಲಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ (Election Commission) ಮುಖ್ಯಸ್ಥ ರಾಜೀವ್ ಕುಮಾರ್, ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ. ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಅಲ್ಲದೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ ಎಂದರು.
ಕರ್ನಾಟಕ ಎಲೆಕ್ಷನ್ ಮತ್ತು ಉಪಚುನಾವಣೆ ದಿನಾಂಕ ಪ್ರಕಟಿಲಿದ್ದೇವೆ. ಇತ್ತೀಚೆಗೆ ಈಶಾನ್ಯ ರಾಜ್ಯದ ಚುನಾವಣೆಗಳನ್ನು ಯಶಸ್ವಿಯಾಗಿ ಮುಗಿಸಿದ್ದೇವೆ. ಸದ್ಯ ಕರ್ನಾಟಕ ಚುನಾವಣೆಗೆ ಎಲ್ಲಾ ಸಿದ್ಧತೆಗಳು ನಡೆದಿವೆ. ಕರ್ನಾಟಕದಲ್ಲಿ 5,21,73579 ಒಟ್ಟು ಮತದಾರರಿದ್ದು, 2, 62,42, 561 ಪುರುಷರು, 2,59,26,319 ಮಹಿಳೆಯರು, 4,699 ತೃತೀಯ ಲಿಂಗಿ ಹಾಗೂ 5.55 ಲಕ್ಷ ದಿವ್ಯಾಂಗ ಮತದಾರರಿದ್ದಾರೆ. 9.17.241 ಮಂದಿ ಮೊದಲ ಸಲ ಮತದಾನ ಮಾಡುತ್ತಿದ್ದಾರೆ ಎಂದು ಹೇಳಿದರು.
2023ರ ಮೇ 23ರ ಒಳಗೆ ವಿಧಾನಸಭೆ ಅಂತ್ಯವಾಗಬೇಕು. ಅದಕ್ಕೂ ಮುನ್ನ ಹೊಸ ಸರ್ಕಾರ ರಚನೆ ಆಗಬೇಕು. ಮೇ 24ಕ್ಕೆ ವಿಧಾನಸಭೆ 15ನೇ ವಿಧಾನಸಭೆ ಅವಧಿ ಮುಕ್ತಾಯವಾಗಲಿದೆ. ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತ ಚಲಾಯಿಸುವ ಅವಕಾಶ ನೀಡಲಾಗುತ್ತಿದೆ. ಸಾಕಷ್ಟು ಚಾಲೆಂಜ್ ಗಳಿವೆ, ಅವುಗಳನ್ನು ಸುಧಾರಿಸಿದೆ. ಬುಡಕಟ್ಟು ಸಮುದಾಯ ಮತದಾನಕ್ಕೂ ವ್ಯವಸ್ಥೆ ಮಾಡಲಾಗಿದೆ. ತೃತೀಯ ಲಿಂಗಿಗಳು ಮತದಾರರ ಸೇರ್ಪಡೆಗೆ ಹಿಂದೇಟು ಹಾಕುತ್ತಾರೆ. ಅವರಿಗೆ ನೋಂದಣಿ ಮಾಡಿಕೊಳ್ಳಲು ಮನವಿ ಮಾಡಲಾಗಿದೆ ಎಂದರು.
58,282 ಒಟ್ಟು ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತಿದೆ. ಒಂದೊಂದು ಮತಗಟ್ಟೆಗೆ 883 ಮಂದಿ ಮತದಾರರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ನಗರ ಪ್ರದೇಶದಲ್ಲಿ 24,063, ಗ್ರಾಮೀಣ ಭಾಗದಲ್ಲಿ 34,219 ಹಾಗೂ 1320 ಮಹಿಳಾ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಇನ್ನು ಯುವಕರಿಗಾಗಿ 224 ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಇತರೆ ಮಹಾನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಉತ್ತಮವಾಗಿದೆ. ಕಳೆದ ಬಾರಿ ಬೆಂಗಳೂರಿನಲ್ಲಿ ಕಡಿಮೆ ಮತದಾನವಾಗಿದೆ. ಹೀಗಾಗಿ ಈ ಬಾರಿ ಮತದಾನ ಹೆಚ್ಚಿಸಲು ಪ್ರಯತ್ನ ಮಾಡುತ್ತಿದ್ದು, ಮತದಾನ ಹೆಚ್ಚಿಸಲು ಜಾಗೃತಿ ಮೂಡಿಸಲಾಗುತ್ತಿದೆ. ಬಹಳಷ್ಟು ಐಟಿ ಕಂಪನಿಗಳು ಇದಕ್ಕೆ ಸಹಕಾರ ನೀಡುತ್ತಿವೆ.
ಅಭ್ಯರ್ಥಿಗಳ ಮಾಹಿತಿ, ಪ್ರಮಾಣ ಪತ್ರ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ. ಈ ಮೂಲಕ ಜನರು ತಮ್ಮ ಅಭ್ಯರ್ಥಿಯ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು. ಅಫಿಡೆವಿಟ್ APPನಲ್ಲಿ ಅಪ್ಲೋಡ್ ಮಾಡಲಾಗುವುದು. ಆ್ಯಪ್ ಸಹಾಯದಿಂದ ಚುನಾವಣಾ ಅಕ್ರಮಗಳನ್ನು ಜನರು ದೂರು ನೀಡಬಹುದು. ಈ ಹಿಂದೆ ನಡೆದ ಐದು ರಾಜ್ಯಗಳ ಚುನಾವಣೆಯಲ್ಲಿ 1028 ಕೋಟಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಕರ್ನಾಟಕದಲ್ಲಿ ಅಕ್ರಮ ತಡೆಯಲು 2400 ತಂಡಗಳನ್ನು ರಚಿಸಿದೆ. ವಿಮಾನ ನಿಲ್ದಾಣಗಳಲ್ಲಿ ಪರಿಶೀಲನೆಗಳನ್ನು ನಡೆಸಲಾಗುತ್ತದೆ ಎಂದರು.
ರಾಜೀವ್ ಕುಮಾರ್ ಜೊತೆಗೆ ಚುನಾವಣಾ ಆಯುಕ್ತರಾದ ಅರುಣ್ ಗೋಯಲ್, ಅನುಪ್ ಚಂದ್ರ ಪಾಂಡೆ, ನಿತೇಶ್ ವೈಷ್ಯ, ಧರ್ಮೇಂದ್ರ ಶರ್ಮಾ ಮತ್ತಿತರರು ಭಾಗಿಯಾಗಿದ್ದಾರೆ.
ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ 118, ಕಾಂಗ್ರೆಸ್ 69, ಜೆಡಿಎಸ್ ಶಾಸಕರ ಬಲಾಬಲ 31, ಇತರೆ 3, ಹಾಗೂ ಖಾಲಿ 3 ಇದೆ. ರಾಜ್ಯದಲ್ಲಿ ಈಗಾಗಲೇ ಪ್ರಮುಖ ರಾಜಕೀಯ ಪಕ್ಷಗಳಾದ ಭಾರತೀಯ ಜನತಾ ಪಕ್ಷ (BJP), ಕಾಂಗ್ರೆಸ್ (Congress) ಮತ್ತು ಜನತಾ ದಳ (JDS) ಹಾಗೂ ಆಮ್ ಆದ್ಮಿ (AAP) ಪಕ್ಷಗಳುಕರ್ನಾಟಕ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿವೆ. ಇದನ್ನೂ ಓದಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗ್ತಿದೆ, ನನ್ನೆಲ್ಲ ಪ್ರವಾಸ ರದ್ದು ಮಾಡಿದ್ದೇನೆ: ಸಿಎಂ
ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಆದರೆ ಬಿಜೆಪಿಯು ಚುನಾವಣಾ ದಿನಾಂಕ ಘೋಷಣೆಯ ನಂತರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.
ನವದೆಹಲಿ: 2020-2021 ರ ಹಣಕಾಸು ವರ್ಷದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಆದಾಯವು 58% ಕ್ಕಿಂತಲೂ ಕಡಿಮೆಯಾಗಿದೆ. ಹಿಂದಿನ ಹಣಕಾಸು ವರ್ಷದಲ್ಲಿ ರೂ. 682 ಕೋಟಿಯಷ್ಟಿದ್ದ ಆದಾಯವು ರೂ. 285 ಕೋಟಿಗೆ ಕುಸಿದಿದೆ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ನೀಡಿದ ಮಾಹಿತಿಯಲ್ಲಿ ಕಾಂಗ್ರೆಸ್ ಹೇಳಿಕೊಂಡಿದೆ.
ಆದಾಯವೂ ಕಡಿಮೆಯಾಗಿರುವಂತೆ ಪಕ್ಷದ ಖರ್ಚು ವೆಚ್ಚಗಳು ಕಡಿಮೆಯಾಗಿದ್ದು, 2019 ರಲ್ಲಿ 998 ಕೋಟಿ ರೂ. ಹಣ ವ್ಯಯ ಮಾಡಿದ್ದ ಕಾಂಗ್ರೆಸ್ 2021 ರಲ್ಲಿ 209 ಕೋಟಿ ರೂ. ಖರ್ಚು ಮಾಡಿದೆ ಎಂದು ಚುನಾವಣಾ ಆಯೋಗಕ್ಕೆ ಲೆಕ್ಕ ನೀಡಿದೆ.
2018-19 ರಲ್ಲಿ 918 ಕೋಟಿ ರೂ. ಆದಾಯ ಕಾಂಗ್ರೆಸ್‍ಗೆ ಬಂದಿತ್ತು. ಇದಾದ ಬಳಿಕ ಆದಾಯ ನಿರಂತರವಾಗಿ ಕಡಿಮೆಯಾಗಿದೆ ಎಂದು ಮಾರ್ಚ್ 30 ರಂದು ಸಲ್ಲಿಸಿದ್ದ ಅಫಿಡೆವಿಟ್‍ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ : ‘ಸಲಾರ್’ ಸಿನಿಮಾದಲ್ಲಿ ‘ಉಗ್ರಂ’ ಛಾಯೆ ಇದೆ: ಪ್ರಶಾಂತ್ ನೀಲ್
ಆಡಿಟ್ ರಿಪೋರ್ಟ್ ಪ್ರಕಾರ ಕಾಂಗ್ರೆಸ್‍ಗೆ ಬಹುಪಾಲು ಆದಾಯ ಕೂಪನ್‍ಗಳನ್ನು ನೀಡುವುದರಿಂದ ಬಂದಿದೆ. ಕೂಪನ್‍ಗಳಿಂದ 156.9 ಕೋಟಿ ರೂ. ಸಂಗ್ರಹವಾಗಿದ್ದು, ಇದು ಅನುದಾನ ದೋಣಿಗಳನ್ನು ಒಳಗೊಂಡಿದೆ. 95 ಕೋಟಿ ರೂ. ಕೊಡುಗೆಗಳಿಂದ, 20.7 ಕೋಟಿ ರೂ. ಶುಲ್ಕವು ಚಂದಾದಾರಿಕೆಯಿಂದ ಬಂದಿದೆ.
ಎನ್‍ಸಿಪಿ ಮತ್ತು ಜೆಡಿಯು ಪಕ್ಷಗಳು ಆಡಿಟ್ ರಿಪೋರ್ಟ್ ಸಲ್ಲಿಸಿದ್ದು, ವರದಿಯ ಪ್ರಕಾರ, ಹಣಕಾಸು ವರ್ಷ 2020 ರಲ್ಲಿ ಎನ್‍ಸಿಪಿ ಆದಾಯವು ರೂ. 85 ಕೋಟಿಯಿಂದ ಹಣಕಾಸು ವರ್ಷ 2021 ರಲ್ಲಿ 34.9 ಕೋಟಿ ರೂಪಾಯಿಗೆ ಇಳಿಕೆ ಕಂಡಿದೆ. ವೆಚ್ಚವು 109 ಕೋಟಿ ರೂಪಾಯಿಯಿಂದ 2020-21ರಲ್ಲಿ 12-17 ಕೋಟಿ ರೂ. ಗೆ ಕುಸಿತ ಕಂಡಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ತವರಿಗೇ ಲಗ್ಗೆಯಿಟ್ಟ XE ಕೊರೊನಾ ರೂಪಾಂತರಿ
ಭಾರತೀಯ ಜನತಾ ಪಾರ್ಟಿಯ ಮಿತ್ರಪಕ್ಷ ಜೆಡಿಯು ಆದಾಯದಲ್ಲಿ ಏರಿಕೆ ಕಂಡಿದ್ದು, 2020 ರಲ್ಲಿ ರೂ. 23.25 ಕೋಟಿಯಷ್ಟಿದ್ದ ಆದಾಯ 2021ರಲ್ಲಿ ರೂ. 65.31 ಕೋಟಿಗೆ ಏರಿದೆ.
ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತೋ ಇಲ್ವಾ ಎಂಬ ಅನುಮಾನಕ್ಕೆ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.
ನಿಗದಿಯಂತೆ ಸಕಾಲಕ್ಕೆ ಲೋಕಸಭಾ ಚುನಾವಣೆ ನಡೆಯಲಿದೆ. ದೇಶದಲ್ಲಿ ಸದ್ಯ ನಡೆಯುತ್ತಿರುವ ಬೆಳವಣಿಗೆ ಲೋಕಸಭೆ ಚುನಾವಣಾ ವೇಳಾಪಟ್ಟಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹಠಾತ್ ಉದ್ವಿಗ್ನತೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಶುಕ್ರವಾರ ದೃಢಪಡಿಸಿದ್ದಾರೆ. ಕಳೆದ ಎರಡು ದಿನಗಳಿಂದ ಮತದಾನದ ಸಿದ್ಧತೆಗಳನ್ನು ಪರಿಶೀಲಿಸಲು ಲಕ್ನೋಗೆ ಸುನಿಲ್ ಆಗಮಿಸಿದ್ದರು.
ಚುನಾವಣಾ ಆಯೋಗದ ಹೊಸ ಅಧಿಸೂಚನೆಯ ಪ್ರಕಾರ, ಈ ಭಾರಿ ಅಭ್ಯರ್ಥಿಗಳು ವಿದೇಶದಲ್ಲಿ ತಮ್ಮ ಆಸ್ತಿಗಳ ವಿವರಗಳನ್ನು ನೀಡಬೇಕು. ಐ-ಟಿ ಇಲಾಖೆ ಇದನ್ನು ಪರಿಶೀಲಿಸುತ್ತದೆ. ಇದರಲ್ಲಿ ಯಾವುದಾದರೂ ವ್ಯತ್ಯಾಸಗಳು ಕಂಡು ಬಂದರೆ ಬಳಿಕ ಅದನ್ನು ಚುನಾವಣಾ ಆಯೋಗದ ಅಧಿಕೃತ ವೆಬ್ ಸೈಟ್‍ನಲ್ಲಿ ಪ್ರಕಟಿಸಲಾಗುತ್ತದೆ. ಇಲ್ಲದಿದ್ದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಿದೆ ಆಯೋಗ ತಿಳಿಸಿದೆ.
ನವದೆಹಲಿ: ಮುಂಬರುವ ಲೋಕಸಭಾ ಚುನಾವಣಾ ದಿನಾಂಕದ ವೇಳಾ ಪಟ್ಟಿ ಫೆಬ್ರವರಿ ಕೊನೆಯಲ್ಲಿ ಪ್ರಕಟವಾಗುವ ಸಾಧ್ಯತೆಯಿದೆ. ಕೇಂದ್ರ ಚುನಾವಣಾ ಆಯೋಗ ಫೆ.27 ರ ಸಂಜೆ 5 ಗಂಟೆಗೆ ಪತ್ರಿಕಾಗೋಷ್ಠಿಯನ್ನು ಕರೆದಿದ್ದು ಈ ದಿನ ಚುನಾವಣಾ ದಿನಾಂಕಗಳು ಪ್ರಕಟವಾಗುವ ಸಾಧ್ಯತೆಯಿದೆ.
ಸೂಕ್ಷ್ಮ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು 6 ರಿಂದ 7 ಹಂತಗಳಲ್ಲಿ ಚುನಾವಣೆ ನಡೆಸಲು ಚಿಂತನೆ ನಡೆದಿದೆ. ಇದರಿಂದಾಗಿ ಏಪ್ರಿಲ್ 15 ಅಥವಾ 20ರೊಳಗೆ ಮೊದಲ ಹಂತದ ಚುನಾವಣೆ ಆರಂಭವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಮೇ ಮೊದಲ ವಾರ ಅಥವಾ 2ನೇ ವಾರದಲ್ಲಿ ಕರ್ನಾಟಕದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಕಳೆದ ಬಾರಿಯಂತೆ ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ ಎನ್ನಲಾಗಿದೆ. ದೇಶಾದ್ಯಂತ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ದಿನಾಂಕ ಘೋಷಣೆ ಆಗುವ ದಿನಾಂಕದಿಂದ ಚುನಾವಣಾ ಫಲಿತಾಂಶ ಬರುವ ವೇಳೆಗೆ ಸುಮಾರು 2 ತಿಂಗಳ ಸಮಯವಕಾಶ ಬೇಕಾಗುತ್ತದೆ.
ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ತಮ್ಮ ಗುರುವಾರದ ಪ್ರವಾಸವನ್ನು ರದ್ದು ಮಾಡಿದ್ದಾರೆ. ನಿಗದಿತ ವೇಳಾಪಟ್ಟಿಯ ಪ್ರಕಾರ ನಾಳೆ ಮೋದಿ ಅವರು ಉತ್ತರ ಪ್ರದೇಶದ ಅಮೇಥಿಗೆ ತೆರಳಬೇಕಿತ್ತು. ಆದರೆ ಈಗ ದಿನಾಂಕವನ್ನು ಮುಂದೂಡಿ ಫೆ.27ಕ್ಕೆ ಫಿಕ್ಸ್ ಮಾಡಿದ್ದಾರೆ. ರಾಹುಲ್ ಗಾಂಧಿ ಅವರ ಸ್ವಕ್ಷೇತ್ರ ಆಗಿರುವ ಹಿನ್ನೆಲೆಯಲ್ಲಿ ಅಮೇಥಿಗೆ ತೆರಳಿ ಅಲ್ಲಿಂದಲೇ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದರಾ ಎನ್ನುವ ಪ್ರಶ್ನೆ ಎದ್ದಿದೆ.
ನವದೆಹಲಿ: ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪ್ಯಾಟ್) ಯಂತ್ರವನ್ನು ಖಾಸಗಿ ಕಂಪೆನಿಗಳಿಂದ ಖರೀದಿಸುವ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ.
ಖಾಸಗಿ ಕಂಪೆನಿಗಳಿಂದ ಖರೀದಿಸಿದರೆ ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆ ಮೇಲೆ ಪ್ರಶ್ನೆ ಮಾಡಲು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಆಯೋಗ ಆರ್ ಟಿ ಐ ಅಡಿ ಕೇಳಿದ ಪ್ರಶ್ನೆಗೆ ಉತ್ತರಿಸಿದೆ.
ಖಾಸಗಿ ಕಂಪೆನಿಗಳು ವಿವಿಪ್ಯಾಟ್ ನ ಸುರಕ್ಷತಾ ಕ್ರಮಗಳನ್ನು ಹೇಗೆ ಅಳವಡಿಸುತ್ತವೆ ಅನ್ನುವುದರ ಕುರಿತು ಸ್ಪಷ್ಟ ಮಾಹಿತಿ ಇಲ್ಲ. ಇದರಿಂದ ಮತದಾರರ ನಂಬಿಕೆ ತಗ್ಗಲಿದೆ ಎಂದು ಆಯೋಗದ ತಾಂತ್ರಿಕ ತಜ್ಞ ಸಮಿತಿ (ಟಿಇಸಿ) ವಾದಿಸಿದೆ.
ಸುಪ್ರಿಂ ಕೋರ್ಟ್ ಚುನಾವಣಾ ಆಯೋಗದ ನಿರ್ಧಾರವನ್ನು ಸಮ್ಮತಿಸಿದೆ. ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) ಮತ್ತು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಕಂಪೆನಿಗಳು ಸದ್ಯಕ್ಕೆ ಇವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ತಯಾರಿಸುತ್ತಿವೆ.
ಇತ್ತೀಚೆಗಷ್ಟೆ ಮತಯಂತ್ರಗಳ ಮೇಲೆ ಎಎಪಿ ಮತ್ತು ಬಿಎಸ್‍ಪಿ ಪಕ್ಷಗಳು ಅನುಮಾನ ವ್ಯಕ್ತಪಡಿಸಿದ್ದವು. ಇದಾದ ನಂತರ ಕೇಂದ್ರ ಚುನಾವಣಾ ಆಯೋಗವು ಮತಯಂತ್ರಗಳನ್ನು ಪರೀಕ್ಷೆಗೆ ಒಳಪಡಿಸಿ ಎಲ್ಲಾ ಪಕ್ಷಗಳಿಗೆ ಅಕ್ರಮ ಸಾಬೀತು ಮಾಡಲು ಅವಕಾಶ ಕಲ್ಪಿಸಿತ್ತು. ಯಾವ ಪಕ್ಷದವರು ಕೂಡ ಸಾಬೀತು ಮಾಡಿಲ್ಲ.
ವಿವಿಪಿಎಟಿ ಅಂದ್ರೇನು?: ಕಳೆದ ವರ್ಷ ಕರ್ನಾಟಕದಲ್ಲಿ ನಡೆದ ಎರಡು ಉಪಚುನಾವಣೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್(ವಿವಿಪಿಎಟಿ) ವ್ಯವಸ್ಥೆಯನ್ನು ಜಾರಿ ಮಾಡಲಾಗಿತ್ತು. ಈ ವ್ಯವಸ್ಥೆಯಲ್ಲಿ ಯಾರಿಗೆ ವೋಟ್ ಬಿದ್ದಿದೆ ಎನ್ನುವುದನ್ನು ತಿಳಿದುಕೊಳ್ಳಲು ವೋಟ್ ಹಾಕಿದ ಬಳಿಕ ಅಭ್ಯರ್ಥಿಯ ಚಿಹ್ನೆ 7 ಸೆಕೆಂಡ್ ಕಾಲ ಪರದೆಯಲ್ಲಿ ಕಾಣುತ್ತದೆ. ಇವಿಎಂ ಬಗ್ಗೆ ಹಲವು ಮಂದಿ ಆಕ್ಷೇಪ ಎತ್ತಿದ್ದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ವ್ಯವಸ್ಥೆಯನ್ನು ಅಳವಡಿಸುವಂತೆ ಚುನಾವಣಾ ಆಯೋಗಕ್ಕೆ 2016ರಲ್ಲಿ ಸಲಹೆ ನೀಡಿತ್ತು. ಪ್ರಸ್ತುತ ಈ ಬಾರಿ ಎಲ್ಲ ಮತದಾನ ಕೇಂದ್ರಗಳಲ್ಲಿ ವಿವಿಪ್ಯಾಟ್ ಇರಲಿದೆ.