Tag: Central Forces

  • West Bengal Violence: ಭುಗಿಲೆದ್ದ ಹಿಂಸಾಚಾರಕ್ಕೆ 11 ಮಂದಿ ಬಲಿ

    West Bengal Violence: ಭುಗಿಲೆದ್ದ ಹಿಂಸಾಚಾರಕ್ಕೆ 11 ಮಂದಿ ಬಲಿ

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತಿ ಚುನಾವಣೆಗೆ (Panchayat Polls) ಮತದಾನ ನಡೆಯುತ್ತಿದ್ದು, ಈ ವೇಳೆ ಹಿಂಸಾಚಾರ (West Bengal Violence) ಭುಗಿಲೆದ್ದಿದೆ. ಈ ಹಿಂಸಾಚಾರಕ್ಕೆ 11 ಮಂದಿ ಬಲಿಯಾಗಿದ್ದಾರೆ.

    ಹತ್ಯೆಗೀಡಾದವರಲ್ಲಿ 6 ಮಂದಿ ತೃಣಮೂಲ ಕಾಂಗ್ರೆಸ್‌ ಸದಸ್ಯರಿದ್ದು, ಬಿಜೆಪಿ (BJP), ಎಡ, ಕಾಂಗ್ರೆಸ್‌ (Congress) ಮತ್ತು ಐಎಸ್‌ಎಫ್‌ನ ತಲಾ ಒಬ್ಬೊಬ್ಬರು ಹಾಗೂ ಮತ್ತೊಬ್ಬ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌, ಭದ್ರತೆಗೆ ನಿಯೋಜಿಸಲಾದ ಕೇಂದ್ರ ಪಡೆಗಳಿಂದ (Central Forces) ಅತಿದೊಡ್ಡ ಭದ್ರತಾ ವೈಫಲ್ಯ ಸಂಭವಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಇದನ್ನೂ ಓದಿ: ಅಚ್ಚರಿಯಾದ್ರೂ ಸತ್ಯ- ಅದಾನಿಗೆ ಸೇರಿದ 6 ಸಾವಿರ ಕೆ.ಜಿಯ ಸೇತುವೆ ಕಳ್ಳತನ!

    ಚುನಾವಣೆಗೆ ನಾಮಪತ್ರ (Nomination) ಸಲ್ಲಿಕೆ ವೇಳೆ ರಾಜ್ಯದ ಹಲವೆಡೆ ತೀವ್ರ ಹಿಂಸಾಚಾರದ ಘಟನೆಗಳು ವರದಿಯಾಗಿದ್ದವು. ಇದಾದ ನಂತರ ಮತದಾನ ದಿನವಾದ ಇಂದೂ ಕೂಡ ಅಂಥದ್ದೇ ಘಟನೆಗಳು ನಡೆದಿವೆ. ಮತದಾನ ಆರಂಭಕ್ಕೂ ಕೆಲವೇ ಗಂಟೆಗಳ ಮೊದಲು ಮುರ್ಷಿದಾಬಾದ್‌ನಲ್ಲಿ ತಡರಾತ್ರಿ ಟಿಎಂಸಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದು, ಮನೆಯೊಂದನ್ನು ಧ್ವಂಸಮಾಡಿದ್ದಾರೆ.

    ಕೂಚ್‌ಬೆಹಾರ್ ಜಿಲ್ಲೆಯ ಫಲಿಮಾರಿ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಮತಗಟ್ಟೆ ಏಜೆಂಟ್ ಮಾಧಬ್ ಬಿಸ್ವಾಸ್ ಅವರನ್ನು ಹತ್ಯೆ ಮಾಡಲಾಗಿದೆ. ಬಿಸ್ವಾಸ್ ಮತಗಟ್ಟೆಗೆ ಪ್ರವೇಶಿಸಲು ಪ್ರಯತ್ನಿಸಿದಾಗ ಅವರನ್ನು ಟಿಎಂಸಿ ಬೆಂಬಲಿಗರು ತಡೆದಿದ್ದಾರೆ. ನಂತರ ಪರಿಸ್ಥಿತಿ ಉಲ್ಬಣಗೊಳ್ಳುತ್ತಿದ್ದಂತೆ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಟಿಎಂಸಿ ಈ ಆರೋಪಗಳನ್ನ ತಳ್ಳಿಹಾಕಿದೆ.

    ಈ ನಡುವೆ ಸ್ವತಂತ್ರ ಅಭ್ಯರ್ಥಿಯ ಬೆಂಬಲಿಗರೊಬ್ಬರನ್ನು ಥಳಿಸಿ ಉತ್ತರ 24 ಪರಗಣ ಜಿಲ್ಲೆಯ ಕದಂಬಗಚಿ ಪ್ರದೇಶದಲ್ಲಿ ಹತ್ಯೆ ಮಡಾಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ವ್ಯಕ್ತಿಯನ್ನು 41 ವರ್ಷದ ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಹಲ್ಲೆ ಬಳಿಕ ಅಬ್ದುಲ್ಲಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆಂದು ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ಮುಖರ್ಜಿ ತಿಳಿಸಿದ್ದಾರೆ. ಇದನ್ನೂ ಓದಿ: Delhi Metro: ಮೈಬಿಸಿ ಏರಿಸುವ ಬಟ್ಟೆ ತೊಟ್ಟು ಯುವತಿಯರ ಡಾನ್ಸ್‌ – ನೆಟ್ಟಿಗರಿಂದ ಫುಲ್‌ ಕ್ಲಾಸ್‌!

    ಈ ನಡುವೆ ಕೇಂದ್ರ ಪಡೆಗಳ ಭದ್ರತೆ ಮಧ್ಯೆಯೂ ಸಾವಿನ ಸಂಖ್ಯೆ ಹೆಚ್ಚುತ್ತಿವೆ. ಮಾಲ್ಡಾದ ಮಾಣಿಕ್‌ಚಕ್‌ನಲ್ಲಿ ಬಾಂಬ್ ದಾಳಿಯ ನಡೆಸಲಾಗಿದೆ. ಇದು ನಮ್ಮ ಪಕ್ಷದ ಕಾರ್ಯಕರ್ತನನ್ನು ಬಲಿ ತೆಗೆದುಕೊಂಡಿದೆ. ನಾಡಿಯಾದ ನಾರಾಯಣಪುರ ಗ್ರಾಮ ಪಂಚಾಯತಿ ಅಭ್ಯರ್ಥಿ ಹಸೀನಾ ಸುಲ್ತಾನ್​ ಅವರ ಪತಿಯ ಮೇಲೆ ಗುಂಡು ಹಾರಿಸಲಾಗಿದೆ. ಮತದಾನ ಆರಂಭವಾಗುವ ಕೆಲವೇ ಕ್ಷಣಗಳ ಮೊದಲು ಕಚ್ಚಾ, ದೇಶಿ ನಿರ್ಮಿತ ಬಾಂಬ್‌ಗಳನ್ನು ನಮ್ಮ ಕಾರ್ಯಕರ್ತರ ಮೇಲೆ ಎಸೆಯಲಾಗಿದೆ’ ಎಂದು ​​ಆರೋಪಿಸಿದೆ.

    ಮತಗಟ್ಟೆಗಳ ಬಳಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಹಲವೆಡೆ ಮತದಾನ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿಯವರು ಭದ್ರತಾ ಪಡೆ ಸಮವಸ್ತ್ರದಲ್ಲಿ ರಾಜ್ಯಕ್ಕೆ ಬಂದಿದ್ದಾರೆ: ದೀದಿ ಆರೋಪ

    ಬಿಜೆಪಿಯವರು ಭದ್ರತಾ ಪಡೆ ಸಮವಸ್ತ್ರದಲ್ಲಿ ರಾಜ್ಯಕ್ಕೆ ಬಂದಿದ್ದಾರೆ: ದೀದಿ ಆರೋಪ

    ಕೋಲ್ಕತ್ತಾ: ಬಿಜೆಪಿ, ಆರ್‌ಎಸ್‌ಎಸ್ ಕಾರ್ಯಕರ್ತರು ಭದ್ರತಾ ಪಡೆ ಸಮವಸ್ತ್ರದಲ್ಲಿ ರಾಜ್ಯಕ್ಕೆ ಬಂದಿದ್ದಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

    ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಸಂತಿ ಪ್ರದೇಶದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸುವ ಮೂಲಕ ಬಿಜೆಪಿ ತನ್ನ ಕಾರ್ಯಕರ್ತರು ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರನ್ನು ರಾಜ್ಯಕ್ಕೆ ಕಳುಹಿಸಿದೆ. ಈ ಮೂಲಕ ಭದ್ರತಾ ಪಡೆಯ ಸಮಸ್ತ್ರದಲ್ಲಿರುವ ಆರ್‍ಎಸ್‍ಎಸ್ ಕಾರ್ಯಕರ್ತರು ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ಸಂದೇಹ ಎದುರಾಗಿದೆ ಎಂದು ದೂರಿದ್ದಾರೆ.

    ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ನಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ ನಿಯೋಜನೆಯಾಗಿರುವ ಭದ್ರತಾ ಪಡೆಯ ಕೆಲವು ಸಿಬ್ಬಂದಿ ಬಿಜೆಪಿಗೆ ಮತ ಹಾಕುವಂತೆ ಮತದಾರರಿಗೆ ಹೇಳಿದ್ದಾರೆ. ಅವರು ಹೀಗೆ ಮತದಾರರಿಗೆ ಸೂಚನೆ ನೀಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೆಲವು ನಿವೃತ್ತ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದೆ. ಅವರು ಬಿಜೆಪಿಗೆ ಮತ ಹಾಕುವಂತೆ ಮತದಾರರಿಗೆ ಹೇಳುತ್ತಿದ್ದಾರೆ. ಅಂತಹ ಅಧಿಕಾರಿಗಳಿಗೆ ನಾಚಿಕೆಯಾಗಬೇಕು. ಸದ್ಯ ನೀವು ಬಿಜೆಪಿ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರಬಹುದು. ಆದರೆ ನಾಳೆ ಮತ್ತೊಬ್ಬರ ಆಡಳಿತದಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ ಎನ್ನುವುದನ್ನು ಮರೆಯಬೇಡಿ ಎಂದು ಅಧಿಕಾರಿಗಳ ವಿರುದ್ಧ ಗುಡುಗಿದರು.

    ಪಶ್ಚಿಮ ಬಂಗಾಳ, ದೆಹಲಿ, ಹರ್ಯಾಣ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಹಾಗೂ ಮಧ್ಯಪ್ರದೇಶದಲ್ಲಿ ಇಂದು ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನವು ನಡೆಯಿತು. ಪಶ್ಚಿಮ ಬಂಗಾಳದಲ್ಲಿ ಶೇ.80.16, ದೆಹಲಿ ಶೇ.56.11, ಹರ್ಯಾಣ ಶೇ.62.91, ಉತ್ತರ ಪ್ರದೇಶ ಶೇ.53.37, ಬಿಹಾರ ಶೇ.59.29, ಜಾರ್ಖಂಡ್ ಶೇ.64.46 ಹಾಗೂ ಮಧ್ಯಪ್ರದೇಶ ಶೇ.60.40 ರಷ್ಟು ಮತದಾನವಾಗಿದೆ.

    ಕೊನೆ ಹಂತದ ಮತದಾನವು ಮೇ 19ರಂದು ನಡೆಯಲಿದ್ದು, ಮೇ 23ರಂದು ಫಲಿತಾಂಶ ಹೊರಬೀಳಲಿದೆ.