Tag: central goverment

  • ಸೈನಿಕರಿಗೆ ಅಂಗವೈಕಲ್ಯ ಪಿಂಚಣಿ ನೀಡುವುದು ಔದಾರ್ಯಕ್ಕಲ್ಲ, ರಾಷ್ಟ್ರಕ್ಕಾಗಿ ಮಾಡಿದ ಸೇವೆಗೆ – ದೆಹಲಿ ಹೈಕೋರ್ಟ್

    ಸೈನಿಕರಿಗೆ ಅಂಗವೈಕಲ್ಯ ಪಿಂಚಣಿ ನೀಡುವುದು ಔದಾರ್ಯಕ್ಕಲ್ಲ, ರಾಷ್ಟ್ರಕ್ಕಾಗಿ ಮಾಡಿದ ಸೇವೆಗೆ – ದೆಹಲಿ ಹೈಕೋರ್ಟ್

    ನವದೆಹಲಿ: ಸೈನಿಕರಿಗೆ ಅಂಗವೈಕಲ್ಯ ಪಿಂಚಣಿ (Disability Pension) ನೀಡುವುದನ್ನು ಪ್ರಶ್ನಿಸಿ ರಕ್ಷಣಾ ಸಚಿವಾಲಯ ಸಲ್ಲಿಸಿದ್ದ ಸುಮಾರು 300 ಅರ್ಜಿಗಳನ್ನು ದೆಹಲಿ ಹೈಕೋರ್ಟ್ (Delhi High Court) ಇತ್ತೀಚೆಗೆ ವಜಾಗೊಳಿಸಿದೆ. ಸಶಸ್ತ್ರ ಪಡೆಗಳ ನ್ಯಾಯಮಂಡಳಿ ಹೊರಡಿಸಿದ್ದ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾ. ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್ ಅವರಿದ್ದ ವಿಭಾಗೀಯ ಪೀಠವು ಸಶಸ್ತ್ರ ಪಡೆಗಳ ಸಿಬ್ಬಂದಿ ಅಂಗವೈಕಲ್ಯ ಪಿಂಚಣಿಗೆ ಅರ್ಹರು ಎಂದಿದೆ.

    ಸಶಸ್ತ್ರ ಪಡೆಗಳ ಸಿಬ್ಬಂದಿಗೆ ಅಂಗವೈಕಲ್ಯ ಪಿಂಚಣಿ ನೀಡುವುದು ಔದಾರ್ಯಕ್ಕಲ್ಲ, ಬದಲಿಗೆ ರಾಷ್ಟ್ರಕ್ಕಾಗಿ ಅವರು ಮಾಡಿದ ತ್ಯಾಗಕ್ಕೆ ಸಲ್ಲಿಸಬೇಕಾದ ಗೌರವ ಎಂದು ನ್ಯಾಯಾಲಯ ಬುದ್ಧಿವಾದ ಹೇಳಿದೆ. ಇದನ್ನೂ ಓದಿ: ಅರ್ಜೆಂಟೀನಾದಲ್ಲಿ ಪ್ರಧಾನಿ ಮೋದಿಗೆ ಹಲೋ ಹೇಳಲು 400 ಕಿಮೀ ಪ್ರಯಾಣಿಸಿದ ಭಾರತೀಯ

    ಇಂತಹ ಪಿಂಚಣಿಯಿಂದ ಸೇವೆಯ ಕಾರಣಕ್ಕೆ ಅಂಗವೈಕಲ್ಯಕ್ಕೆ ತುತ್ತಾದ ಯೋಧನಿಗೆ ನೆರವು, ಆರ್ಥಿಕ ಭದ್ರತೆ ಹಾಗೂ ಘನತೆಯಿಂದ ಬದುಕಲು ಸಾಧ್ಯವಾಗುತ್ತದೆ. ಇದು ಧೈರ್ಯ ಮತ್ತು ಶ್ರದ್ಧೆಯಿಂದ ದೇಶಕ್ಕಾಗಿ ದುಡಿದ ಸೈನಿಕರೆಡೆಗೆ ಪ್ರಭುತ್ವ ನಿರ್ವಹಿಸಬೇಕಾದ ಜವಾಬ್ದಾರಿಯುತ ಕ್ರಮ ಎಂದು ತಿಳಿಸಿದೆ. ಇದನ್ನೂ ಓದಿ: ಫಾರ್ಮ್‌ ಹೌಸ್‌ನಲ್ಲಿ ಚಾಮುಂಡಿ ಪೂಜೆ ನೆರವೇರಿಸಿದ ದರ್ಶನ್

    ಅಂಗವೈಕಲ್ಯಕ್ಕೆ ತುತ್ತಾದ ಸೇನಾ ಸಿಬ್ಬಂದಿಯು ಸಂಘರ್ಷ ರಹಿತ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದರು ಎಂಬ ಒಂದೇ ಕಾರಣಕ್ಕೆ ಅವರಿಗೆ ಅಂಗವೈಕಲ್ಯ ಪಿಂಚಣಿ ನಿರಾಕರಿಸುವಂತಿಲ್ಲ. ಅತ್ಯಂತ ಕಠಿಣ ಹವಾಮಾನ ಮತ್ತು ಪರಿಸ್ಥಿತಿಗಳಲ್ಲಿ ಕರ್ತವ್ಯ ನಿರ್ವಹಿಸುವ ಸೈನಿಕರಲ್ಲಿ ಕಾಣಿಸಿಕೊಂಡ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ನ್ಯೂನತೆಗಳು ಸೇನಾ ಸೇವೆಯಿಂದ ಬಂದಿಲ್ಲ ಎಂದು ಸಾಬೀತುಪಡಿಸುವ ಜವಾಬ್ದಾರಿ ವೈದ್ಯಕೀಯ ಮಂಡಳಿಯ (RMB) ಮೇಲಿದೆ ಎಂದು ಹೇಳಿದೆ. ಇದನ್ನೂ ಓದಿ: ಕೊಡವ ಕಮ್ಯೂನಿಟಿಯಿಂದ ಇಂಡಸ್ಟ್ರಿಗೆ ಬಂದಿದ್ದು ನಾನೇ ಫಸ್ಟ್ – ರಶ್ಮಿಕಾ ಮತ್ತೊಂದು ಯಡವಟ್ಟು 

    ಸೇನಾ ಸಿಬ್ಬಂದಿಯ ನಿಯೋಜನೆಯ ಸ್ಥಳವನ್ನು ಆಧರಿಸಿ ಅವರ ಹಕ್ಕನ್ನು ಸಂಪೂರ್ಣವಾಗಿ ತಿರಸ್ಕರಿಸುವಂತಿಲ್ಲ ಎಂದ ನ್ಯಾಯಾಲಯ, ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿತು. ಇದನ್ನೂ ಓದಿ: ಅಮರನಾಥ ಯಾತ್ರೆಗೆ ತೆರಳುತ್ತಿದ್ದ 5 ಬಸ್‌ಗಳ ನಡುವೆ ಸರಣಿ ಅಪಘಾತ – 30ಕ್ಕೂ ಹೆಚ್ಚು ಮಂದಿಗೆ ಗಾಯ

    ಸೇನೆಗೆ ಸಲ್ಲಿಸಿದ ಸೇವೆಯಿಂದಾಗಿ ಅರ್ಜಿದಾರ ಸೈನಿಕರಿಗೆ ಅಂಗವೈಕಲ್ಯ ಉಂಟಾಗಿಲ್ಲ. ಅವರು ಅಂಗವೈಕಲ್ಯ ಪಿಂಚಣಿಗೆ ಅರ್ಹರಲ್ಲ ಎಂದು ರಕ್ಷಣಾ ಸಚಿವಾಲಯ ನ್ಯಾಯಾಲಯದ ಮೆಟ್ಟಿಲೇರಿತ್ತು. ಕೇಂದ್ರ ಸರ್ಕಾರದ ಅತ್ಯುನ್ನತ ಕಾನೂನು ಅಧಿಕಾರಿ ಅಟಾರ್ನಿ ಜನರಲ್ ಆರ್ ವೆಂಟಕರಮಣಿ ಸಚಿವಾಲಯದ ಪರವಾಗಿ ವಾದ ಮಂಡಿಸಿದ್ದರು.

  • ಭಾರತದಲ್ಲಿ ಕೋವಿಡ್‌ನಿಂದ 47 ಲಕ್ಷ ಮಂದಿ ಸಾವು – WHO ವರದಿ

    ಭಾರತದಲ್ಲಿ ಕೋವಿಡ್‌ನಿಂದ 47 ಲಕ್ಷ ಮಂದಿ ಸಾವು – WHO ವರದಿ

    ನವದೆಹಲಿ: ಭಾರತದಲ್ಲಿ ಕೋವಿಡ್‌ನಿಂದಾಗಿ 47 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ವರದಿ ಮಾಡಿದೆ.

    ಕೋವಿಡ್‌ನಿಂದಾಗಿ ಮೃತಪಟ್ಟವರ ಅಂಕಿ-ಅಂಶದ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಪ್ರತಿಪಕ್ಷಗಳ ನಾಯಕರ ನಡುವೆ ನಡೆಯುತ್ತಿತ್ತು. ವಿಶ್ವ ಆರೋಗ್ಯ ಸಂಸ್ಥೆಯ ಈ ವರದಿಯು ಕೇಂದ್ರ ಸರ್ಕಾರದ ಅಂಕಿ-ಅಂಶಕ್ಕಿಂತಲೂ 10 ಪಟ್ಟು ಹೆಚ್ಚು ಮರಣ ಪ್ರಕರಣಗಳು ದಾಖಲಿಸಲಾಗಿದೆ. ಇದನ್ನೂ ಓದಿ: ಬೇಡ ಎಂದರೂ ಬಿಡ್ಲಿಲ್ಲ, ನೆಲಕ್ಕೆ ಕೆಡವಿ ಮಹಿಳೆಗೆ ಕೋವಿಡ್ ಪರೀಕ್ಷೆ – ವೀಡಿಯೋ ವೈರಲ್

    corona who

    ಕೋವಿಡ್ ಸಾವುಗಳಿಗೆ ಸಂಬಂಧಿಸಿದ ಡಬ್ಲ್ಯೂಎಚ್‌ಒ ವರದಿಯನ್ನು ಕೇಂದ್ರ ಸರ್ಕಾರ ಆಕ್ಷೇಪಿಸಿದೆ. ಸಾವಿನ ಪ್ರಮಾಣ ಅಂದಾಜಿಸುವ ಡಬ್ಲ್ಯೂಎಚ್‌ಒ ಮಾದರಿಯನ್ನು ಭಾರತ ನಿರಂತರವಾಗಿ ಆಕ್ಷೇಪಿಸುತ್ತಿದ್ದು, ಈ ನಡುವೆಯೂ ವಿಶ್ವ ಆರೋಗ್ಯ ಸಂಸ್ಥೆ ವರದಿ ಬಿಡುಗಡೆ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿಕೆ ನೀಡಿದೆ.

    ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಮರಣ ಪ್ರಮಾಣವನ್ನು ಅಂದಾಜಿಸಲು ಡಬ್ಲ್ಯೂಎಚ್‌ಒ ಅನುಸರಿಸಿರುವ ಮಾದರಿ ಹಾಗೂ ಅಂಕಿ-ಅಂಶಗಳ ಸಂಗ್ರಹ ಕ್ರಮವು ಪ್ರಶ್ನಾರ್ಹವಾಗಿದೆ. ಅಲ್ಲದೆ, ಸಾವಿಗಳಿಗೆ ಸಂಬಂಧಿಸಿದಂತೆ ನಾಗರಿಕ ನೋಂದಣಿ ವ್ಯವಸ್ಥೆಯಡಿ (CRS) ಅಧಿಕೃತ, ವಿಶ್ವಾಸನೀಯ ಅಂಕಿ ಅಂಶಗಳು ಲಭ್ಯವಿವೆ. ಹೀಗಾಗಿ, ಹೆಚ್ಚುವರಿ ಸಾವುಗಳನ್ನು ಬಿಂಬಿಸುವ ಮಾದರಿಯನ್ನು ಅನುಸರಿಸಬಾರದು ಎಂದು ವಾದಿಸಿದೆ. ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಆರ್ಭಟ – GRPA ಆ್ಯಕ್ಷನ್ ಪ್ಲಾನ್‌ನಂತೆ ರೆಡ್‌ಅಲರ್ಟ್ ಘೋಷಣೆ

    ಜನವರಿ 2020ರಿಂದ ಡಿಸೆಂಬರ್ 2021ರ ವರೆಗೂ ಭಾರತದಾದ್ಯಂತ ಕೋವಿಡ್ ಕಾರಣಗಳಿಂದ ಸಾವಿಗೀಡಾದವರ ಸಂಖ್ಯೆ 47,40,894 ಮುಟ್ಟಿತ್ತು. ಆರೋಗ್ಯ ಇಲಾಖೆಯ ದಾಖಲೆಯ ಪ್ರಕಾರ 2021ರ ಅಂತ್ಯಕ್ಕೆ ಸುಮಾರು 4,81,000 ಪ್ರಕರಣ ದಾಖಲಾಗಿತ್ತು. ಪ್ರಸ್ತುತ ದೇಶದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,23,000 ದಾಟಿದೆ. ಇದನ್ನೂ ಓದಿ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು 2 ವರ್ಷ ಸಹಿಸಿಕೊಳ್ಳಬೇಕು: ಹಣಕಾಸು ಸಚಿವ

    ಜಗತ್ತಿನಾದ್ಯಂತ ಎರಡು ವರ್ಷಗಳಲ್ಲಿ ಕೋವಿಡ್ ಮತ್ತು ಅದಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಸುಮಾರು 1.5 ಕೋಟಿ ಮಂದಿ ಮೃತಪಟ್ಟಿದ್ದಾರೆ ಎಂದು WHO ವರದಿ ಹೇಳಿದೆ. ಸುಮಾರು 60 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿತ್ತು ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

  • ಇಲ್ಲಿ ಬಟನ್ ಒತ್ತಿದರೆ ಉಕ್ರೇನ್‍ನಲ್ಲಿ ವಿಮಾನ ಇಳಿಸಲು ಸಾಧ್ಯವಿಲ್ಲ: ಸುಮಲತಾ ಅಂಬರೀಷ್

    ಇಲ್ಲಿ ಬಟನ್ ಒತ್ತಿದರೆ ಉಕ್ರೇನ್‍ನಲ್ಲಿ ವಿಮಾನ ಇಳಿಸಲು ಸಾಧ್ಯವಿಲ್ಲ: ಸುಮಲತಾ ಅಂಬರೀಷ್

    ಮೈಸೂರು: ಉಕ್ರೇನ್‍ನಿಂದ ಭಾರತೀಯ ಪ್ರಜೆಗಳನ್ನು ಕರೆದುಕೊಂಡು ಬರುವುದು ಸುಲಭದ ಪರಿಸ್ಥಿತಿ ಆಗಿರಲಿಲ್ಲ. ಇಲ್ಲಿ ಬಟನ್ ಒತ್ತಿದರೆ ಅಲ್ಲಿ ವಿಮಾನ ಇಳಿಸಲು ಸಾಧ್ಯವಿಲ್ಲ. ಈ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು ಸಂಸದೆ ಸುಮಲತಾ ಅಂಬರೀಷ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಷ್ಯಾ ಉಕ್ರೇನ್ ಯುದ್ಧದ ಪರಿಸ್ಥಿತಿ ಅರ್ಥ ಮಾಡಿಕೊಂಡ ಮಾತನಾಡಬೇಕು. ವಿದೇಶಾಂಗ ಇಲಾಖೆ ಯಾವ ರೀತಿ ಕೆಲಸ ಮಾಡುತ್ತದೆ ಅನ್ನೋದು ಗೊತ್ತಿದೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ಪ್ರಾಮಾಣಿಕವಾದ ಪ್ರಯತ್ನ ಮಾಡಿದೆ. ಬಹುತೇಕ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರಲಾಗಿದೆ ಎಂದು ಪ್ರಶಂಸಿದರು.

    ಜನ ವಿಶ್ವಾಸ ಇಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ಕ್ರೆಡಿಟ್ ತೆಗೆದುಕೊಳ್ಳಲು ನಾನು ಯಾವ ಕೆಲಸವನ್ನು ಮಾಡಲ್ಲ. ನಿಜ ಹೇಳಲು ಭಯ ಏಕೆ. ಕ್ರೆಡಿಟ್ ವಾರ್ ಯಾರು ಆರಂಭಿಸುತ್ತಾರೋ ಅವರು ಅವರ ಜವಾಬ್ದಾರಿ ಬಗ್ಗೆ ನೋಡಿಕೊಳ್ಳಬೇಕು. ಸಂಸದರ ಕ್ರೆಡಿಟ್ ಪಡೆಯುವುದಕ್ಕೆ ಏಕೆ ಬರುತ್ತಿದ್ದಾರೋ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಊಟಕ್ಕೆ ಹೊರಗೆ ಹೋದರೆ ವಾಪಸ್ ಬದುಕಿ ಬರುವ ನಂಬಿಕೆ ಇರಲಿಲ್ಲ: ಹಾಸನದ ವಿದ್ಯಾರ್ಥಿ

    ಶಿಂಷಾ ಸೇತುವೆ ವಿಚಾರ ನಾನು ಪ್ರತಿಭಟನಾ ಸ್ಥಳಕ್ಕೆ ಹೋಗಿದ್ದೇನೆ. ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ನಾಲ್ಕು ಬಾರಿ ಅವರನ್ನು ಭೇಟಿ ಮಾಡಿದ್ದೇನೆ. ಆಯಾ ಕ್ಷೇತ್ರದ ಸಂಸದ ಆಯಾ ಕ್ಷೇತ್ರದ ಬಗ್ಗೆ ಕೇಳಿದರೆ ಪ್ರತಿಕ್ರಿಯೆ ಸಿಗುತ್ತದೆ. ಯಾರು ಬೇಕಾದರೂ ಪತ್ರ ಬರೆದಿರಬಹುದು. ಮಾಜಿ ಪ್ರಧಾನಿ ಅಥವಾ ಬೇರೆಯವರು ಬರೆದಿರಬಹುದು. ಅವರು ಏನು ಬರೆದಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮತ್ತೆ 4 ಸಾವಿರ ಉದ್ಯೋಗಿಗಳನ್ನು ವಜಾ ಮಾಡಲಿದ್ದಾರಾ ವಿಶಾಲ್ ಗಾರ್ಗ್?

    Nitin Gadkari

    ನನ್ನ ಕ್ಷೇತ್ರದ ವಿಚಾರವಾಗಿ ನಾನು ಕೆಲಸ ಮಾಡುತ್ತೇನೆ. ನಾನು ಮಾಡಿದ ಕೆಲಸ ಮಾಡಿಲ್ಲ ಎಂದು ಹೇಳಿದರೆ ನಾನು ಸುಮ್ಮನಿರಲ್ಲ. ಟಾರ್ಗೆಟ್ ಮಾಡುವುದು ಮೊದಲ ದಿನದಿಂದಲೂ ನಡೆದಿದೆ. ನನ್ನ ಜಿಲ್ಲೆಗೆ ಸಂಬಂಧಪಟ್ಟ ವಿಚಾರ ಮಾತ್ರ ನಾನು ಮಾತನಾಡುತ್ತೇನೆ. ನಾನು ಏನೇ ಮಾಡಿದರು ವಿರೋಧ ಮಾಡಬೇಕೆಂದು ಅವರು ನಿರ್ಧರಿಸಿದ್ದಾರೆ. ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ನಾನು ಕೆಲಸ ಮಾಡುತ್ತೇನೆ ಜನ ನನ್ನ ಪರ ಮಾತನಾಡುತ್ತಾರೆ ಎನ್ನುವ ಭಯ ಎಂದು ಕಿಡಿಕಾರಿದರು.

  • ದ್ವಿಚಕ್ರವಾಹನದಲ್ಲಿ ಸವಾರಿ ಮಾಡುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ

    ದ್ವಿಚಕ್ರವಾಹನದಲ್ಲಿ ಸವಾರಿ ಮಾಡುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ

    ನವದೆಹಲಿ: ಭಾರತದಲ್ಲಿ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರಿ ಮಾಡುವ ಮಕ್ಕಳಿಗೆ ಹೆಲ್ಮೆಟ್ ಬಳಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ.

    ಮಕ್ಕಳ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್‍ಗಳನ್ನು ತಯಾರಿಸುವಂತೆ ಹೆಲ್ಮೆಟ್ ತಯಾರಕರಿಗೆ ಸರ್ಕಾರ ಸೂಚಿಸಿದೆ. ಹೊಸ ನಿಯಮದ ಪ್ರಕಾರ ಉಲ್ಲಂಘನೆಗೆ 1,000 ರೂ. ದಂಡ ಮತ್ತು 3 ತಿಂಗಳ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲಾಗುತ್ತದೆ.

    ಹೊಸ ನಿಯಮಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅಡಿಯಲ್ಲಿ 1989ರ ತಿದ್ದುಪಡಿಯ ಮೂಲಕ ಪ್ರಸ್ತಾಪಿಸಲಾಗಿದೆ. ಪ್ರಸ್ತಾವಣೆಯು ನಾಲ್ಕು ವರ್ಷ ವಯಸ್ಸಿನ ಮಕ್ಕಳನ್ನು ಒಳಗೊಂಡಿರುತ್ತದೆ. ಮಗುವನ್ನು ಹೊಂದಿರುವ ಯಾವುದೇ ದ್ವಿಚಕ್ರ ವಾಹನವು ಗಂಟೆಗೆ ಗರಿಷ್ಠ 40-ಕಿಮೀ ವೇಗದ ಮಿತಿಯಲ್ಲಿ ಪ್ರಯಾಣಿಸಬೇಕಾಗುತ್ತದೆ. ಇದನ್ನೂ ಓದಿ: ಹಿಜಬ್‍ಗಾಗಿ ಪಟ್ಟು ಹಿಡಿದ ವಿದ್ಯಾರ್ಥಿನಿಯರ ಮನವೊಲಿಸಿದ ಅಧಿಕಾರಿಗಳು

    ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಕುಳಿತುಕೊಳ್ಳುವ ಮಕ್ಕಳಿಗೆ ಹೆಲ್ಮೆಟ್ ಬಳಕೆಯನ್ನು ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರವು ಈ ಹಿಂದೆ ಪ್ರಸ್ತಾಪಿಸಿತ್ತು. ಈ ವಿಷಯದ ಬಗ್ಗೆ ನಾಗರಿಕರ ಅಭಿಪ್ರಾಯವನ್ನು ಕೇಳಲು ಅಕ್ಟೋಬರ್ 2021ರಲ್ಲಿ ಕರಡು ಅಧಿಸೂಚನೆಯನ್ನು ಹೊರಡಿಸಿತ್ತು.

    ಮಕ್ಕಳ ಹೆಲ್ಮೆಟ್‍ಗಳನ್ನು ತಯಾರಿಸಲು ಸರ್ಕಾರವು ಭಾರತೀಯ ಹೆಲ್ಮೆಟ್ ತಯಾರಕರಿಗೆ ಸೂಚಿಸಿದೆ. ಮಕ್ಕಳ ಗಾತ್ರಕ್ಕೆ ಅನುಗುಣವಾಗಿ, ಸುರಕ್ಷತಾ ಜಾಕೆಟ್‌ಗಳಿಗೆ ಭುಜದ ಕುಣಿಕೆಗಳನ್ನು ರೂಪಿಸುವ ಒಂದು ಜೋಡಿ ಪಟ್ಟಿಗಳೊಂದಿಗೆ ತಯಾರಿಸಲಾಗುತ್ತದೆ. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡಡ್ರ್ಸ್(ಬಿಐಎಸ್) ಪ್ರಕಾರ, ಹೆಲ್ಮೆಟ್ ಕಡಿಮೆ ತೂಕ, ಹೊಂದಾಣಿಕೆ, ಜಲನಿರೋಧಕ ಹಾಗೂ ಬಾಳಿಕೆ ಬರುವಂತಹದ್ದಾಗಿರಬೇಕು. ಇದನ್ನೂ ಓದಿ: ಚೆಂಬೆಳಕಿನ ಕವಿಯನ್ನು ಸಿನಿಮಾ ರಂಗ ಅಪ್ಪಿಕೊಳ್ಳಲಿಲ್ಲ

    ಜಾಕೆಟ್ ಹೆವಿ ನೈಲಾನ್ ಅಥವಾ ಮಲ್ಟಿಫಿಲೆಮೆಂಟ್ ನೈಲಾನ್ ವಸ್ತುಗಳನ್ನು ಬಳಸಿ ನಿರ್ಮಿಸಬೇಕು. 30 ಕೆಜಿ ತೂಕವನ್ನು ಹೊರುವ ಸಾಮಥ್ರ್ಯವನ್ನು ಹೊಂದಿರಬೇಕು. ನಾಲ್ಕು ವರ್ಷದೊಳಗಿನ ಮಕ್ಕಳು ಕ್ರ್ಯಾಶ್ ಹೆಲ್ಮೆಟ್ ಅಥವಾ ಬೈಸಿಕಲ್ ಹೆಲ್ಮೆಟ್ ಅನ್ನು ಧರಿಸಬೇಕು. ಸರ್ಕಾರವು ನಿರ್ದಿಷ್ಟಪಡಿಸಿದ ಮಾನದಂಡಗಳನ್ನು ಅನುಸರಿಸಬೇಕು ಎಂದು ಸೂಚಿಸಿದೆ.

  • ಜ್ವರ, ಕೆಮ್ಮು, ತಲೆನೋವು ಇದ್ದರೂ ಕೋವಿಡ್ ಟೆಸ್ಟ್ ಮಾಡಿಸಿ: ಕೇಂದ್ರ ಸೂಚನೆ

    ಜ್ವರ, ಕೆಮ್ಮು, ತಲೆನೋವು ಇದ್ದರೂ ಕೋವಿಡ್ ಟೆಸ್ಟ್ ಮಾಡಿಸಿ: ಕೇಂದ್ರ ಸೂಚನೆ

    ನವದೆಹಲಿ: ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು ಎಂದು ಜನರಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

    ಯಾವುದೇ ವ್ಯಕ್ತಿಯಲ್ಲಿ ಜ್ವರ, ಕೆಮ್ಮು, ತಲೆ ನೋವು , ಗಂಟಲು ನೋವು, ಉಸಿರಾಟ ಸಮಸ್ಯೆ, ಮೈಕೈ ನೋವು, ರುಚಿ ಅಥವಾ ವಾಸನೆ ಗ್ರಹಿಕೆ ಸಾಧ್ಯವಾಗದ ಲಕ್ಷಣಗಳಿದ್ದಲ್ಲಿ ಅಂಥವರನ್ನು ಶಂಕಿತ ಕೋವಿಡ್ ಸೋಂಕಿತರು ಎಂದು ಪರಿಗಣಿಸಬೇಕು. ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಸೂಚನೆ ನೀಡಲಾಗಿದೆ.

    ಅಲ್ಲದೆ ರಾಜ್ಯದ ವಿವಿಧೆಡೆ 24 ಗಂಟೆಯೂ ಕೋವಿಡ್ ಪರೀಕ್ಷಾ ಕೇಂದ್ರ ತೆರೆದಿರಬೇಕು. ವೈದ್ಯಕೀಯ ಸಿಬ್ಬಂದಿಯನ್ನು ಅಲ್ಲಿ ನಿಯೋಜಿಸಬೇಕು. ಮನೆಯಲ್ಲೇ ಕೋವಿಡ್ ಪರೀಕ್ಷೆ ಮಾಡುವ ಕಿಟ್ ಬಳಕೆಗೆ ಪ್ರೋತ್ಸಾಹ ನೀಡಬೇಕು ಎಂದು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು

    ಭಾರತದಲ್ಲಿ ಕೋವಿಡ್‍ನ 2ನೇ ಅಲೆಗೆ ಕಾರಣವಾಗಿದ್ದ ಡೆಲ್ಟಾ ತಳಿಯ ಸ್ಥಾನವನ್ನು ಓಮಿಕ್ರಾನ್ ಆವರಿಸಲು ಆರಂಭಿಸಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

  • ಕೇಂದ್ರ ಸರ್ಕಾರದ ಅತ್ಯುತ್ತಮ ತನಿಖಾಧಿಕಾರಿ ಪ್ರಶಸ್ತಿಗೆ ಮಾನ್ವಿ ಸಿಪಿಐ ಆಯ್ಕೆ

    ಕೇಂದ್ರ ಸರ್ಕಾರದ ಅತ್ಯುತ್ತಮ ತನಿಖಾಧಿಕಾರಿ ಪ್ರಶಸ್ತಿಗೆ ಮಾನ್ವಿ ಸಿಪಿಐ ಆಯ್ಕೆ

    ರಾಯಚೂರು: ಕೇಂದ್ರ ಸರ್ಕಾರದ ಗೃಹ ಸಚಿವಾಲಯ ಕೊಡುವ 2018ನೇ ಸಾಲಿನ ಅತ್ಯುತ್ತಮ ತನಿಖಾಧಿಕಾರಿ ಪ್ರಶಸ್ತಿಗೆ ಜಿಲ್ಲೆಯ ಮಾನ್ವಿ ಸಿಪಿಐ ಚಂದ್ರಶೇಖರ್ ಆಯ್ಕೆಯಾಗಿದ್ದಾರೆ.

    ದೇಶದ ಒಟ್ಟು 101 ಜನ ಪೊಲೀಸ್ ಅಧಿಕಾರಿಗಳನ್ನು 2018ನೇ ಸಾಲಿನ ಅತ್ಯುತ್ತಮ ತನಿಖಾಧಿಕಾರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಿಪಿಐ ಚಂದ್ರಶೇಖರ ಸೇರಿದಂತೆ ಒಟ್ಟು ಆರು ಜನ ಕರ್ನಾಟಕದ ಪೊಲೀಸ್ ಅಧಿಕಾರಿಗಳು ಪದಕಕ್ಕೆ ಭಾಜನರಾಗಿದ್ದಾರೆ.

    ರಾಜ್ಯದ ಎಸ್.ಪಿ. ಚನ್ನಬಸವಮ್ಮ.ಎಸ್.ಲಂಗೋಟಿ, ಡಿವೈಎಸ್ಪಿ ಬಿ.ಬಾಲರಾಜು, ಡಿವೈಎಸ್ಪಿ ಎಂ.ಡಿ.ಶರತ್, ಸಿಪಿಐ ಬಿ.ರಾಮಚಂದ್ರ, ಸಿಪಿಐ ಎಲ್.ವೈ.ರಾಜೇಶ್ ಹಾಗೂ ಸಿಪಿಐ ಚಂದ್ರಶೇಖರ್ ಅತ್ಯುತ್ತಮ ತನಿಖಾಧಿಕಾರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು 2018ರಲ್ಲಿ ತನಿಖಾಧಿಕಾರಿಗಳು ಕೈಗೆತ್ತಿಕೊಂಡ ಪ್ರಕರಣಗಳಲ್ಲಿ ಎಷ್ಟು ಕೇಸ್‍ಗಳನ್ನು ಯಶಸ್ವಿಯಾಗಿ ಬೇಧಿಸಿದ್ದಾರೆ ಎನ್ನುವ ಆಧಾರದ ಮೇಲೆ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸದ್ಯ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿಯನ್ನು ಮಾತ್ರ ಕೇಂದ್ರದಿಂದ ಪ್ರಕಟಿಸಲಾಗಿದ್ದು, ಶೀಘ್ರದಲ್ಲೇ ಪ್ರಶಸ್ತಿ ಪ್ರದಾನ ದಿನಾಂಕವನ್ನು ಘೋಷಿಸಲಾಗುತ್ತದೆ ಎಂದು ಮಾಹಿತಿ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv