Tag: Central Government

  • 1,545 ಕೋಟಿ ನೆರೆ ಪರಿಹಾರ ಕೇಳಲು ಕೇಂದ್ರಕ್ಕೆ ಮನವಿ: ಕ್ಯಾಬಿನೆಟ್ ಸಭೆ ನಿರ್ಧಾರ

    1,545 ಕೋಟಿ ನೆರೆ ಪರಿಹಾರ ಕೇಳಲು ಕೇಂದ್ರಕ್ಕೆ ಮನವಿ: ಕ್ಯಾಬಿನೆಟ್ ಸಭೆ ನಿರ್ಧಾರ

    ಬೆಂಗಳೂರು: ಮುಂಗಾರು ಮಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲು ಕ್ಯಾಬಿನೆಟ್ (Cabinet) ತೀರ್ಮಾನಿಸಿದೆ.

    ಮೂಲಭೂತ ಸೌಕರ್ಯಗಳ ಹಾನಿಗೆ ಎನ್‌ಡಿಆರ್‌ಎಫ್ ಅಡಿ 1,545 ಕೋಟಿ ರೂ. ಆರ್ಥಿಕ ಸಹಾಯ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಸರ್ಕಾರ ವರದಿ ಸಿದ್ಧಪಡಿಸಿದೆ. ಆದರೆ ಬೆಳೆ ನಷ್ಟದ ಬಗ್ಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿ ಪರಿಹಾರ ಕೇಳುತ್ತಿದ್ದೇವೆ ಅಂತಾ ಕಾನೂನು ಸಚಿವ ಹೆಚ್.ಕೆ.ಪಾಟೀಲ್ (H K Patil) ಸ್ಪಷ್ಟಪಡಿಸಿದ್ದಾರೆ.

    ಇನ್ನು ಒಳ ಮೀಸಲಾತಿ ವಿಚಾರವಾಗಿ ಶೀಘ್ರದಲ್ಲೇ ಮಸೂದೆಗೆ ಕ್ರಮ ವಹಿಸುತ್ತೇವೆ. ಮುಂದಿನ ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

  • ಆನ್‌ಲೈನ್  ಗೇಮಿಂಗ್ ನಿಷೇಧ ಕಾಯ್ದೆ ಬಗ್ಗೆ ನಿಮಗೆಷ್ಟು ಗೊತ್ತು?

    ಆನ್‌ಲೈನ್ ಗೇಮಿಂಗ್ ನಿಷೇಧ ಕಾಯ್ದೆ ಬಗ್ಗೆ ನಿಮಗೆಷ್ಟು ಗೊತ್ತು?

    ಗಿನ ತಂತ್ರಜ್ಞಾನ ಯುಗದಲ್ಲಿ ಜನರು ಕಷ್ಟಪಟ್ಟು ದುಡಿದು ಹಣ ಗಳಿಸುವುದಕ್ಕಿಂತ ಹೆಚ್ಚಾಗಿ ಆನ್ಲೈನ್ ಮೂಲಕ ಹಣ ಗಳಿಸುವಲ್ಲಿ ತೊಡಗಿದ್ದಾರೆ. ಅದರಲ್ಲಿ ಎಷ್ಟೋ ಜನ ಹಣದಾಸೆಗೆ ಬಿದ್ದು ಕೋಟ್ಯಂತರ ರೂಪಾಯಿ ನಷ್ಟ ಮಾಡಿಕೊಂಡವರು ಇದ್ದಾರೆ. ಜೊತೆಗೆ ಹಣ ಗಳಿಸುವ ಆಮೀಷವನ್ನು ತೋರಿಸಿ ಅಥವಾ ಹಣವನ್ನು ಹೂಡಿಕೆ ಮಾಡುವಂತೆ ಕೆಲವು ಆನ್ಲೈನ್ ಗೇಮ್ಗಳು ಜನರನ್ನ ಪ್ರಚೋದನೆ ಮಾಡುತ್ತವೆ. ಹೀಗಾಗಿ ಈ ಸಂಬಂಧ ಕೇಂದ್ರ ಸರ್ಕಾರ ಆನ್ಲೈನ್ ಗೇಮ್ ಗಳನ್ನು ನಿಷೇಧಿಸುವ ಕಾಯಿದೆಯೊಂದನ್ನು ಜಾರಿ ಮಾಡಿದೆ.

    ಹೌದು, ಈ ಬಾರಿಯ ಲೋಕಸಭೆಯ ಅಧಿವೇಶನದಲ್ಲಿ ಹಣ ಕಟ್ಟಿ ಆಡಲಾಗುವ ಆನ್ಲೈನ್ ಗೇಮ್ ಗಳನ್ನು ನಿಷೇಧಿಸುವ ಮಸೂದೆಯು ಅಂಗೀಕಾರಗೊಂಡಿತ್ತು. 2025ರ ಆಗಸ್ಟ್ 20ರಂದು ಲೋಕಸಭೆಯಲ್ಲಿ ಈ ಮಸೂದೆ ಅಂಗೀಕಾರವಾಗಿ, ಆಗಸ್ಟ್ 21ರಂದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿ ಕೊನೆಗೆ ಆಗಸ್ಟ್ 22ರಂದು ಈ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಅಂಕಿತ ಹಾಕಿದ್ದಾರೆ. ಈ ಮೂಲಕ ಈ ಕಾನೂನು ಹಣ ಕಟ್ಟಿ ಆಡಲಾಗುವ ಎಲ್ಲಾ ಆನ್ಲೈನ್ ಗೇಮ್ ಗಳನ್ನು ನಿಷೇಧಿಸುತ್ತದೆ.

    ಇದರ ಹಿಂದಿನ ಕಾರಣವೇನು?
    ಆನ್ಲೈನ್ ಗೇಮ್ ಒಂದು ವ್ಯಸನ ವಾಗಿ ಮಾರ್ಪಟ್ಟಿದೆ. ಇದಕ್ಕೆ ಮಾರುಹೋಗುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅದಲ್ಲದೆ ಗೇಮಿಂಗ್ ಆಪ್ ಗಳ ಮೂಲಕ ಹಣ ಅಕ್ರಮ ವರ್ಗಾವಣೆ ಆಗುತ್ತಿದೆ. ಜೊತೆಗೆ ಹಣಕಾಸು ವಂಚನೆ ಪ್ರಕರಣಗಳು ಕೂಡ ಹೆಚ್ಚುತ್ತಿವೆ. ಹೀಗಾಗಿ ಇವುಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಮಸೂದೆಯನ್ನು ರೂಪಿಸಿದೆ.

    ಈ ಕಾನೂನಿನಲ್ಲಿ ಏನಿದೆ?
    * ಆನ್ಲೈನ್ ಗೇಮ್ ಗಳಂತಹ ಚಟುವಟಿಕೆಗಳನ್ನ ಇದು ನಿಷೇಧಿಸುತ್ತದೆ. ಜೊತೆಗೆ ಈ ಗೇಮ್ ಗಳನ್ನು ಉತ್ತೇಜಿಸುವ ಹಾಗೂ ಜಾಹೀರಾತುಗಳನ್ನ ಪ್ರಕಟಿಸುವುದನ್ನು ಇದು ನಿಷೇಧಿಸುತ್ತದೆ.
    * ಆನ್ಲೈನ್ ಗೇಮ್ ಗಳಲ್ಲಿ ಕೆಲವು ಆಟಗಳು ಮನರಂಜನೆ ನೀಡುತ್ತವೆ. ಇವುಗಳನ್ನು ಸೇರಿಸಿ ಆನ್ಲೈನ್ ಜೂಜಾಟ ಹಾಗೂ ಲಾಟರಿಗಳಂತಹ ಆಟಗಳನ್ನು ಕೂಡ ಇದು ನಿಷೇಧಿಸುತ್ತದೆ
    * ಈ ಕಾನೂನಿನಡಿಯಲ್ಲಿ ಆನ್ಲೈನ್ ಗೇಮ್ ಆಡುವುದಕ್ಕೆ ಅವಕಾಶ ಹಾಗೂ ಪ್ರೋತ್ಸಾಹ ನೀಡುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಒಂದು ಕೋಟಿ ರೂ. ದಂಡ ವಿಧಿಸಲಾಗುವುದು.
    * ಜೊತೆಗೆ ಇಂತಹ ಆಟಗಳ ಕುರಿತು ಜಾಹೀರಾತು ಪ್ರಕಟಿಸಿದರೆ ಎರಡು ವರ್ಷಗಳವರೆಗೆ ಶಿಕ್ಷೆ ಮತ್ತು ಐವತ್ತು ಲಕ್ಷ ರೂ. ದಂಡ ವಿಧಿಸಲಾಗುವುದು.
    * ಇನ್ನು ಅಪರಾಧಗಳ ಪುನರಾವರ್ತನೆಯ ಆದರೆ ಮೂರರಿಂದ ಐದು ವರ್ಷ ಜೈಲು ಹಾಗೂ ಎರಡು ಕೋಟಿ ರೂ. ವರೆಗೆ ದಂಡ ವಿಧಿಸಲಾಗುವುದು

    * ಮೂಲಗಳ ಪ್ರಕಾರ, ಆನ್ಲೈನ್ ಗೇಮ್ಗಳಿಂದಾಗಿ ಭಾರತೀಯರು ಪ್ರತಿ ವರ್ಷ 15,000 ಕೋಟಿ ರೂ. ಯನ್ನು ಕಳೆದುಕೊಳ್ಳುತ್ತಿದ್ದಾರೆ. ಇನ್ನು ಕಳೆದ 31 ತಿಂಗಳಲ್ಲಿ ಈ ಆನ್ಲೈನ್ ಗೇಮ್ ವ್ಯಸನದಿಂದಾಗಿ ಕರ್ನಾಟಕದಲ್ಲಿ 32 ಜನರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಈ ಆನ್ಲೈನ್ ಗೇಮ್ ನಿಷೇಧದಿಂದಾಗಿ 400ಕ್ಕೂ ಅಧಿಕ ಕಂಪನಿಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

    ಆನ್ಲೈನ್ ಗೇಮ್ ಗಳಲ್ಲಿ ಮೂರು ವಿಭಾಗಗಳಿವೆ:
    – ರಿಯಲ್ ಮನಿ ಗೇಮ್ಸ್
    – ಇ ಸ್ಪೋರ್ಟ್ಸ್
    – ಸೋಶಿಯಲ್ ಗೇಮಿಂಗ್

    ಈ ಆಟಗಳ ಪೈಕಿ ನಿಜವಾದ ಹಣ ಹೂಡಿಕೆ ಮಾಡಿ ಆಡುವ ಆಟಗಳನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ನಿಷೇಧಿಸಿದೆ. ಇನ್ನು ಇ-ಸ್ಪೋರ್ಟ್ಸ್ ಗಳಂತಹ ಆಟಗಳನ್ನು ಅನುಮತಿ ಪಡೆದು ಆಡಲು ಅವಕಾಶ ನೀಡಲಾಗಿದೆ. ಇದರ ಹೊರತಾಗಿ ಸೋಶಿಯಲ್ ಗೇಮ್ಸ್ ಗಳು ಹಣವಿಲ್ಲದೆ ಆಡುವ ಆಟಗಳಿಗೆ ಅನುಮತಿ ನೀಡಲಾಗಿದೆ. ಜೊತೆಗೆ ಈ ಆಟಗಳನ್ನು ಆಡುವಾಗ ಬ್ಯಾಂಕ್ ಅಥವಾ ಪೇಮೆಂಟ್ ಆಪ್ ಮೂಲಕ ಹಣ ಕಳಿಸುವುದನ್ನು ನಿಷೇಧಿಸಲಾಗಿದೆ. ಗೂಗಲ್ ಜಾಹೀರಾತುಗಳು, ಮೆಟಾ ಜಾಹೀರಾತುಗಳ ಮೂಲಕ ಇಂತಹ ಗೇಮ್ ಗಳನ್ನ ಪ್ರಚಾರ ಮಾಡುವುದಕ್ಕೆ ನಿಷೇಧಿಸಲಾಗಿದೆ.

    ಇನ್ನು ಈ ಕಾಯ್ದೆಯು ಕೇಂದ್ರ ಸರ್ಕಾರಕ್ಕೆ ಆನ್ಲೈನ್ ಗೇಮ್ ಗಳನ್ನು ಗುರುತಿಸಲು, ವರ್ಗಿಕರಿಸಲು ಸಹಾಯಮಾಡುತ್ತದೆ. ಇದರಿಂದ ಸರ್ಕಾರವು ಅನಧಿಕೃತ ಆಪ್ ಗಳನ್ನು ಬ್ಲಾಕ್ ಮಾಡುವ ಹಾಗೂ ಸರ್ವರ್ ಗಳನ್ನು ಬ್ಲಾಕ್ ಮಾಡುವ ಅಧಿಕಾರವಿರುತ್ತದೆ. ಒಂದು ವೇಳೆ ಅಗತ್ಯವಿದ್ದರೆ ವಾರೆಂಟ್ ಇಲ್ಲದೆಯೂ ಕೂಡ ಬಂಧಿಸುವ ಅಧಿಕಾರವಿರುತ್ತದೆ.

    ಇನ್ನುಳಿದಂತೆ ಗೇಮಿಂಗ್ ಕಂಪನಿಗಳು ಕೆಲವು ಕಡ್ಡಾಯ ನಿಯಮಗಳನ್ನು ಜಾರಿಗೆ ತರುವಂತೆ ಸೂಚನೆ ನೀಡಲಾಗಿದೆ. ಈ ಪೈಕಿ 18 ವರ್ಷಕ್ಕಿಂತ ಕಡಿಮೆ ಕಡಿಮೆ ಇರುವವರು ಈ ಗೇಮ್ ಗಳನ್ನು ಆಡುವುದಕ್ಕೆ ಪೋಷಕರ ಅನುಮತಿ ಪಡೆಯಬೇಕು. ದೀರ್ಘಕಾಲ ಆಡುವುದಕ್ಕೆ ತಡೆ ಹಿಡಿಯಲಾಗಿದೆ ಮತ್ತು ಬಳಕೆದಾರರು ದೂರು ಸಲ್ಲಿಸಲು ಅವಕಾಶ ನೀಡುವಂತೆ ಸೂಚಿಸಲಾಗಿದೆ.

    ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಗೇಮಿಂಗ್ ಉದ್ಯಮ ತೀವ್ರವಾಗಿ ಬೆಳೆಯುತ್ತಿದ್ದು, 2025ರ ಹೊತ್ತಿಗೆ ಎಂಟು ಬಿಲಿಯನ್ ಡಾಲರ್ ನಷ್ಟು ಆಗುವ ಸಾಧ್ಯತೆ ಇದೆ. ಹೀಗಾಗಿ ಇವುಗಳಿಂದ ಜನರಲ್ಲಿ ಆರ್ಥಿಕ ಸಮಸ್ಯೆ, ಸಾಲ, ಆತ್ಮಹತ್ಯೆ, ಮೋಸ, ಕ್ರಮ ಹಣ ಹೂಡಿಕೆಯಂತಹ ತೊಂದರೆಗಳನ್ನು ತಂದು ಹಾಕುತ್ತದೆ. ಇಂತಹ ಸಮಸ್ಯೆಗಳಿಂದ ಜನರನ್ನ ರಕ್ಷಿಸಲು, ಯುವಕರನ್ನ ಸರಿದಾರಿಯತ್ತ ಕರೆದುಕೊಂಡು ಹೋಗುವುದು ಹಾಗೂ ಇಂತಹ ಆಟಗಳಲ್ಲಿ ಸ್ಪಷ್ಟ ನಿಯಮಗಳನ್ನ ರೂಪಿಸುವ ಮೂಲ ಉದ್ದೇಶವನ್ನು ಈ ಕಾನೂನು ಹೊಂದಿದೆ.

    ಈ ಕಾನೂನು ಜಾರಿ ಬಳಿಕ ಕೆಲವು ವಿಷಯಗಳು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಗೇಮ್ಗಳ ನಿಷೇಧದಿಂದಾಗಿ ಸಾವಿರಾರು ಜನರು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ. ಅದಲ್ಲದೆ ಸದ್ಯಕ್ಕೆ ಆನ್ಲೈನ್ ಗೇಮ್ ಗಳನ್ನು ನಿಷೇಧದಿಂದಾಗಿ ಕೆಲವರು ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

  • ಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಸಿಎಂ ವಜಾಕ್ಕೆ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ

    ಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಸಿಎಂ ವಜಾಕ್ಕೆ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ

    – ವಶ, ಬಂಧನದ 30 ದಿನದಲ್ಲಿ ರಾಜೀನಾಮೆ ಕಡ್ಡಾಯ

    ನವದೆಹಲಿ: ಕ್ರಿಮಿನಲ್ ಪ್ರಕರಣಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವರನ್ನು ತನಿಖಾ ಸಂಸ್ಥೆಗಳು ವಶಕ್ಕೆ ಪಡೆದರೆ ಅಥವಾ ಶಿಕ್ಷೆಗೆ ಬಂಧಿಸಿದರೆ, ಅವರನ್ನು ಆ ಹುದ್ದೆಯಿಂದ ವಜಾಗೊಳಿಸಲು ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ (Lok Sabha) ಮಂಡನೆ ಮಾಡಲು ಕೇಂದ್ರ ಸಿದ್ಧತೆ ಮಾಡಿಕೊಂಡಿದೆ.

    ಮಂಗಳವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕರಡು ಮಸೂದೆಗೆ ಅನುಮೋದನೆ ನೀಡಿದೆ. 1963ರ ಕೇಂದ್ರಾಡಳಿತ ಪ್ರದೇಶಗಳ ಕಾಯ್ದೆ ಅನ್ವಯ ಕೇಂದ್ರಾಡಳಿತ ಪ್ರದೇಶದ ಸಿಎಂ, ಸಚಿವರ ವಜಾಕ್ಕೆ ಯಾವುದೇ ಅವಕಾಶ ಇಲ್ಲ. ಅದೇ ರೀತಿ ಪ್ರಧಾನಿ, ಕೇಂದ್ರ ಸಚಿವರ ವಜಾಕ್ಕೂ ಕಾಯ್ದೆಯಲ್ಲಿ ಅವಕಾಶ ಇರದ ಕಾರಣ ಈ ಹಿನ್ನೆಲೆಯಲ್ಲಿ ಹೊಸ ತಿದ್ದುಪಡಿ ಕಾಯ್ದೆ ಮೂಲಕ ಅವಕಾಶವನ್ನು ಕಲ್ಪಿಸಲಾಗುತ್ತಿದೆ. ಇದನ್ನೂ ಓದಿ: ರಷ್ಯಾ ಮೇಲೆ ಒತ್ತಡ ಹೇರಲು ಭಾರತದ ಮೇಲೆ ಸುಂಕ – ವೈಟ್‌ ಹೌಸ್‌

    ಪ್ರಧಾನಿ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿ, ಕೇಂದ್ರ ಸಚಿವರು, ರಾಜ್ಯಗಳ ಸಚಿವರನ್ನು ಬಂಧಿಸಿದರೆ, ನಂತರದ 30 ದಿನಗಳ ಒಳಗೆ ಅವರನ್ನು ಹುದ್ದೆಯಿಂದ ತೆಗೆದು ಹಾಕುವ ಮಸೂದೆ ಇದಾಗಿದೆ.

    5 ಅಥವಾ ಅದಕ್ಕಿಂತ ಹೆಚ್ಚಿನ ಶಿಕ್ಷೆಗೆ ಒಳಗಾಗುವ ಕ್ರಿಮಿನಲ್ ಅಪರಾಧ ಪ್ರಕರಣಗಳಿಗೆ ಈ ನಿಯಮ ಅನ್ವಯವಾಗಲಿದೆ. ಈಗಿರುವ ನಿಯಮಗಳ ಪ್ರಕಾರ, ಯಾವುದೇ ಜನಪ್ರತಿನಿಧಿ ಕ್ರಿಮಿನಲ್ ಪ್ರಕರಣಗಳಲ್ಲಿ 2 ವರ್ಷಕ್ಕಿಂತ ಹೆಚ್ಚಿನ ಶಿಕ್ಷೆಗೆ ಗುರಿಯಾದರೆ ಮಾತ್ರವೇ ಜನಪ್ರತಿನಿಧಿ ಸ್ಥಾನ ಕಳೆದುಕೊಳ್ಳುತ್ತಾರೆ. ಅಲ್ಲದೇ ಶಿಕ್ಷೆಯ ಬಳಿಕ ಮತ್ತೆ 5 ವರ್ಷ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಇಲ್ಲ ಎಂದಿದೆ. ಇದನ್ನೂ ಓದಿ: 12 ದಿನಗಳ ಹಿಂದೆ ರೈಲಿನಲ್ಲಿ ನಾಪತ್ತೆಯಾಗಿದ್ದ ಹೈಕೋರ್ಟ್‌ ತರಬೇತಿ ವಕೀಲೆ ನೇಪಾಳ ಗಡಿಯಲ್ಲಿ ಪತ್ತೆ!

    ಸಂಪುಟ ಸಭೆಯಲ್ಲಿ ಈ ಕರಡು ಮಸೂದೆಗೆ ಅನುಮೋದನೆ ಸಿಕ್ಕಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲಾ ಸಚಿವರಿಗೂ ಹೊಸ ಕಾನೂನು ಅನ್ವಯವಾಗಲಿದೆ. ಈ ಹಿಂದೆಯಿದ್ದ ಕಾನೂನಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರ ವಜಾಕ್ಕೆ ಅವಕಾಶವಿರಲಿಲ್ಲ. ಆದರೆ ಹಾಲಿ ನಿಯಮಗಳ ಪ್ರಕಾರ ಯಾವುದೇ ಸಚಿವರಿಗೆ 2 ವರ್ಷಕ್ಕಿಂತ ಹೆಚ್ಚು ಶಿಕ್ಷೆಯಾದರೆ ಅವರು ಸಚಿವ ಸ್ಥಾನದಿಂದ ವಜಾಗೊಳ್ಳುತ್ತಾರೆ.

  • ಸಾಕು ಪ್ರಾಣಿಗಳಿಗಾಗಿ ಬ್ಲಡ್‌ ಬ್ಯಾಂಕ್‌ ನೆಟ್‌ವರ್ಕ್ – ಏನಿದು ಕೇಂದ್ರದ ಹೊಸ ಯೋಜನೆ?

    ಸಾಕು ಪ್ರಾಣಿಗಳಿಗಾಗಿ ಬ್ಲಡ್‌ ಬ್ಯಾಂಕ್‌ ನೆಟ್‌ವರ್ಕ್ – ಏನಿದು ಕೇಂದ್ರದ ಹೊಸ ಯೋಜನೆ?

    ಭಾರತದಲ್ಲಿ ಜನ ಸಾಕು ಪ್ರಾಣಿಗಳನ್ನು ತಮ್ಮ ಕುಟುಂಬದ ಸದಸ್ಯರಂತೇ ಭಾವಿಸಿ ಸಾಕುತ್ತಾರೆ. ಮನುಷ್ಯರಂತೆ ಹೆಸರಿಟ್ಟು, ಮಗನೇ ಅಂತ ಕರೆಯೋದನ್ನ ನಾವೆಲ್ಲ ನೋಡಿದ್ದೇವೆ ಅಲ್ವಾ..?! ಅಷ್ಟೊಂದು ಮುದ್ದಾಗಿ ಸಾಕು ಪ್ರಾಣಿಗಳನ್ನು ನಮ್ಮ ಜನ ನೋಡಿಕೊಳ್ಳುತ್ತಾರೆ. ಇಷ್ಟೊಂದು ಮುದ್ದಾಗಿ ನೋಡಿಕೊಳ್ಳುವ ಪ್ರಾಣಿಗಳ ಆರೋಗ್ಯ ಸಹ ಮುಖ್ಯ ಅಲ್ವಾ..? ಇದೇ ಕಾರಣಕ್ಕೆ ಕೇಂದ್ರ ಸರ್ಕಾರ (Central Government) ಸಾಕುಪ್ರಾಣಿಗಳಿಗಾಗಿ ಬ್ಲಡ್‌ ಬ್ಯಾಂಕ್‌ (Pet Blood Banks), ರಕ್ತದ ಲಭ್ಯತೆಯ ಬಗ್ಗೆ ಸುಲಭವಾಗಿ ಮಾಹಿತಿ ಸಿಗುವಂತೆ ಮಾಡಲು ಚಿಂತನೆ ನಡೆಸುತ್ತಿದೆ. 

    ಅಂದ ಹಾಗೆ ಭಾರತದಲ್ಲಿ (India) ಇತ್ತೀಚೆಗೆ ಜನ ಅತೀ ಹೆಚ್ಚು ಸಾಕುಪ್ರಾಣಿಗಳನ್ನು ಸಾಕುತ್ತಿದ್ದಾರೆ. ಸುಮಾರು 53.6 ಕೋಟಿ ಜಾನುವಾರುಗಳು ಭಾರತದಲ್ಲಿವೆ! ಅವುಗಳಿಗೆ ಅಗತ್ಯ ಚಿಕಿತ್ಸೆಗಾಗಿ, ವ್ಯವಸ್ಥಿತವಾದ ಪ್ರಮಾಣೀಕೃತ ರಕ್ತನಿಧಿಗಳು ಇಲ್ಲ. ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ಸಾಕು ಪ್ರಾಣಿಗಳಿಗಾಗಿ ಸುಲಭವಾಗಿ ಹಾಗೂ ಪ್ರಮಾಣಿಕೃತವಾದ ರಕ್ತನಿಧಿಗಳನ್ನು ಸ್ಥಾಪಿಸಿ, ಅದರ ಮಾಹಿತಿಗಳು, ರಕ್ತದ ಲಭ್ಯತೆ ಜನರಿಗೆ ಸುಲಭವಾಗಿ ಸಿಗುವಂತೆ ಮಾಡಲು ಮುಂದಾಗಿದೆ. ಇದಕ್ಕಾಗಿ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ (Department of Animal Husbandry & Dairying under the Ministry of Fisheries) ಸಾರ್ವಜನಿಕರ ಅಭಿಪ್ರಾಯವನ್ನೂ ಸಹ ಕೇಳಿದೆ. ಅಲ್ಲದೇ ರಕ್ತದಾನಕ್ಕೆ ಪ್ರಾಣಿಗಳಿಗೆ ಇರಬೇಕಾದ ಅರ್ಹತೆ ಹಾಗೂ ಮಾನದಂಡವನ್ನು ಮಾರ್ಗಸೂಚಿಯಲ್ಲಿ ಸರ್ಕಾರ ಪ್ರಕಟಿಸಿದೆ. 

    ಸಾಕುಪ್ರಾಣಿಗಳಿಗೆ ರಕ್ತ ನಿಧಿಯ ಅಗತ್ಯವೇನು?

    2019 ರಲ್ಲಿ ನಡೆಸಿದ 20ನೇ ಜಾನುವಾರು ಜನಗಣತಿಯ ಪ್ರಕಾರ ಭಾರತದಲ್ಲಿ 53.6 ಕೋಟಿ ಜಾನುವಾರುಗಳಿವೆ. ಈಗ ಅದು ಮತ್ತಷ್ಟು ಜಾಸ್ತಿಯಾಗಿರುವ ಸಾಧ್ಯತೆ ಇದೆ. ಸಾಕು ಪ್ರಾಣಿಗಳಲ್ಲಿ ದನಗಳು, ಎಮ್ಮೆಗಳು, ಮೇಕೆಗಳು ಮತ್ತು ಕುರಿಗಳು, ಹಾಗೆಯೇ ಕುದುರೆಗಳು, ಕತ್ತೆಗಳು, ಒಂಟೆಗಳು ಮತ್ತು ಹಂದಿಗಳಂತಹ ಪ್ರಾಣಿಗಳು ಸೇರಿವೆ. 

    ಜಾನುವಾರುಗಳು ದೇಶದ ಕೃಷಿ ಆರ್ಥಿಕತೆ ಮತ್ತು ಗ್ರಾಮೀಣ ಜನರ ಉದ್ಯೋಗದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಪಶುಸಂಗೋಪನೆ ಮತ್ತು ಹೈನುಗಾರಿಕೆ ವಲಯವು ಕೃಷಿ ವಲಯದ ಸುಮಾರು 30% ಆದಾಯ ನೀಡುತ್ತದೆ. ಇದೇ ಕಾರಣಕ್ಕೆ ಸಾಕು ಪ್ರಾಣಿಗಳ ಆರೋಗ್ಯ ಸಹ ಮುಖ್ಯವಾಗಿದೆ. ಅವುಗಳಿಗೆ ಉಂಟಾಗುವ ರಕ್ತ ಹೀನತೆ, ಗಾಯ, ರಕ್ತ ಹೆಪ್ಪುಗಟ್ಟುವಿಕೆ, ಸಾಂಕ್ರಾಮಿಕ ರೋಗ, ಅಸ್ವಸ್ಥತೆಯ ಸಂದರ್ಭದಲ್ಲಿ ಚಿಕಿತ್ಸೆಗಾಗಿ ರಕ್ತದ ಅಗತ್ಯ ಇರುತ್ತದೆ.  

    ಯಾವ ಸಾಕು ಪ್ರಾಣಿಗಳಲ್ಲಿ ಎಷ್ಟು ರಕ್ತ ಇರುತ್ತೆ? 

    ಪ್ರಾಣಿಗಳಲ್ಲಿ ರಕ್ತದ ಪ್ರಮಾಣ ದೇಹದ ತೂಕದ 7% ರಿಂದ 9% ವರೆಗೆ ಇರುತ್ತದೆ. ರಕ್ತದ ಪ್ರಮಾಣವು ಈ ಮಟ್ಟಕ್ಕಿಂತ ಕಡಿಮೆಯಾದಾಗ ರಕ್ತ ನೀಡುವ ಅಗತ್ಯ ಇರುತ್ತದೆ. 

    ದನಗಳು ದೇಹದ ತೂಕದ ಪ್ರತಿ ಕೆಜಿಗೆ 55 ml ರಕ್ತವನ್ನು ಹೊಂದಿರುತ್ತವೆ. ಸರಾಸರಿ 300 ಕೆಜಿ ತೂಕದ ದನ 16.5 ಲೀಟರ್ ರಕ್ತವನ್ನು ಹೊಂದಿರುತ್ತದೆ. ನಾಯಿಗಳು 86 ml/kg, ಕುದುರೆಗಳು 76 m;/kg, ಮೇಕೆಗಳು, ಕುರಿಗಳು,  ಹಂದಿಗಳು  66 ml/kg ಮತ್ತು, ಹಂದಿಗಳು  65  ml /kg ಮತ್ತು ಬೆಕ್ಕುಗಳು 55ml / kg, ರಕ್ತದ ಪ್ರಮಾಣವನ್ನು ಹೊಂದಿರುತ್ತವೆ. 

    ಪ್ರಾಣಿಗಳಲ್ಲೂ ರಕ್ತದ ಗುಂಪುಗಳಿವೆ 

    ಮಾನವರಂತೆ, ಪ್ರಾಣಿಗಳಲ್ಲಿ ಹೆಚ್ಚಿನ ಸಂಖ್ಯೆಯ ರಕ್ತ ಗುಂಪುಗಳಿವೆ, ದನಗಳಲ್ಲಿ 11, ನಾಯಿಗಳಲ್ಲಿ 9, ಕುದುರೆಗಳಲ್ಲಿ 8 ಮತ್ತು ಬೆಕ್ಕುಗಳಲ್ಲಿ 4 ರಕ್ತ ಗುಂಪುಗಳಿವೆ.

    ಪ್ರಾಣಿಗಳ ರಕ್ತ ದಾನಕ್ಕಿರೋ ಮಾನದಂಡಗಳೇನು?

    ರಕ್ತ ದಾನ ಮಾಡುವ ಪ್ರಾಣಿಗಳು ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸಬೇಕು. ಅವುಗಳಲ್ಲಿ ಅನಾರೋಗ್ಯದ ಸಮಸ್ಯೆಗಳಿರಬಾರದು. ಉಣ್ಣೆ, ಇನ್ನಿತರೆ ಕೀಟಗಳ ಸಮಸ್ಯೆಯಿಂದ ಅವು ಮುಕ್ತವಾಗಿರಬೇಕು.

    ವಯಸ್ಸು & ತೂಕ

    ನಾಯಿಗಳು 1 ರಿಂದ 8 ವರ್ಷ ವಯಸ್ಸಿನದ್ದಾಗಿರಬೇಕು, ಕನಿಷ್ಠ 25 ಕೆಜಿ ತೂಕ ಹೊಂದಿರಬೇಕು. ಬೆಕ್ಕುಗಳು 1 ರಿಂದ 5 ವರ್ಷ ವಯಸ್ಸಿನವಗಿರಬೇಕು, ಕನಿಷ್ಠ 4 ಕೆಜಿ ತೂಕ ಹೊಂದಿರಬೇಕು. ಅವುಗಳಿಗೆ ಬೊಜ್ಜು ಇರಬಾರದು.  

    ವ್ಯಾಕ್ಸಿನೇಷನ್

    ದಾನಿ ಪ್ರಾಣಿಗೆ ವಿಶೇಷವಾಗಿ ರೇಬೀಸ್‌ ನಿರೋಧಕ ಲಸಿಕೆ ಹಾಕಿಸಬೇಕು. ನಿಯಮಿತವಾಗಿ ಜಂತುಹುಳು ನಿವಾರಣ ಔಷಧಿ ನೀಡಿರಬೇಕು. ಹೆಣ್ಣು ದಾನಿ ಪ್ರಾಣಿಗಳು ಗರ್ಭ ಧರಿಸಿರಬಾರದು. ಮರಿಗಳಿಗೆ ಹಾಲುಣಿಸುವ ಪ್ರಾಣಿಗಳಾಗಿರಬಾರದು. 

    ಎಷ್ಟು ದಿನಕ್ಕೊಮ್ಮೆ ದಾನ ಮಾಡ್ಬಹುದು? 

    ನಾಯಿಗಳು ಪ್ರತಿ 4-6 ವಾರಗಳಿಗೊಮ್ಮೆ, ಬೆಕ್ಕುಗಳು ಪ್ರತಿ 8-12 ವಾರಗಳಿಗೊಮ್ಮೆ ರಕ್ತ ದಾನಕ್ಕೆ ಅರ್ಹವಾಗಿವೆ.  

    ಪಶುವೈದ್ಯಕೀಯ ರಕ್ತನಿಧಿಗಳು ಎಲ್ಲಿವೆ?

    ಪಶುವೈದ್ಯಕೀಯ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು, ಉಲ್ಲೇಖಿತ ಆಸ್ಪತ್ರೆಗಳು ಮತ್ತು ಪಾಲಿಕ್ಲಿನಿಕ್‌ಗಳು, ದೊಡ್ಡ ಪಶುವೈದ್ಯಕೀಯ ರೋಗನಿರ್ಣಯ ಕೇಂದ್ರಗಳು ಮತ್ತು ಸರ್ಕಾರದಿಂದ ನಿರ್ವಹಿಸಲ್ಪಡುವ ಬಹು-ವಿಶೇಷ ಪ್ರಾಣಿ ಆಸ್ಪತ್ರೆಗಳಲ್ಲಿ ಪಶುವೈದ್ಯಕೀಯ ರಕ್ತನಿಧಿಗಳನ್ನು ನಿರ್ಮಾಣ ಮಾಡಲಾಗುತ್ತದೆ. ಪಶುವೈದ್ಯಕೀಯ ರಕ್ತನಿಧಿಗಳು 24/7 ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲಾಗುತ್ತದೆ. 

    ಡಿಜಿಟಲ್ ತಂತ್ರಜ್ಞಾನ ಬಳಕೆ

    * ಡಿಜಿಟಲ್ ತಂತ್ರಜ್ಞಾನ ಬಳಸಿಕೊಂಡು ಸಂಯೋಜಿತ ದಾನಿಗಳ ನೋಂದಣಿ ಮಾಡಲಾಗುತ್ತದೆ. ಇದು ಪ್ರಾಣಿಗಳ ಜಾತಿಗಳು, ತಳಿ, ಸ್ಥಳ ಮತ್ತು ರಕ್ತದ ವಿಧದ ಮಾಹಿತಿಯನ್ನು ಒಳಗೊಂಡಿರುತ್ತದೆ. 

    * ರಕ್ತನಿಧಿಯಲ್ಲಿ ಘಟಕಗಳ ನಕ್ಷೆ, ನೈಜ-ಸಮಯದ ದಾಸ್ತಾನು, ನಿರ್ವಹಣಾ ವ್ಯವಸ್ಥೆಯ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತದೆ. 

    * ತುರ್ತು ಸಂದರ್ಭಗಳಲ್ಲಿ ಪಶುವೈದ್ಯಕೀಯ ಚಿಕಿತ್ಸಾಲಯಗಳು, ಆಸ್ಪತ್ರೆಗಳು ಮತ್ತು ದಾನಿಗಳನ್ನು ಸಂಪರ್ಕಿಸಲು ಸಹಾಯವಾಣಿ ಮತ್ತು ಆನ್‌ಲೈನ್ ಪೋರ್ಟಲ್ ವ್ಯವಸ್ಥೆ ಮಾಡಲಾಗುತ್ತದೆ.

    * ಭವಿಷ್ಯದಲ್ಲಿ ದಾನ ಮಾಡುವ – ಸ್ವೀಕರಿಸುವವರ ಮೊಬೈಲ್ ಅಪ್ಲಿಕೇಶನ್‌ ಅಭಿವೃದ್ಧಿ ಪಡಿಸುವ ಗುರಿ ಇದೆ. 

    ಜಾನುವಾರುಗಳಿಂದ ಮಾಡಿದ ರಕ್ತದಾನಕ್ಕೆ ಹಣ ಪಡೆಯಬಹುದೇ?

    ಸಾಕುಪ್ರಾಣಿಗಳ ಮಾಲೀಕರು ಅಥವಾ ಜಾನುವಾರು ಮಾಲೀಕರಿಗೆ ಪ್ರಾಣಿಗಳ ರಕ್ತದಾನಕ್ಕಾಗಿ ಹಣ ನೀಡಲಾಗುವುದಿಲ್ಲ. ಸಾಕುಪ್ರಾಣಿ ಮಾಲೀಕರು ಅಥವಾ ಜಾನುವಾರು ಸಾಕಣೆದಾರರಿಗೆ ಯಾವುದೇ ಹಣಕಾಸಿನ ಪ್ರೋತ್ಸಾಹವನ್ನು ನೀಡಬಾರದು ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ. ಪ್ರತಿ ದಾನಕ್ಕೂ ಮಾಲೀಕರ ಒಪ್ಪಿಗೆ ಕಡ್ಡಾಯವಾಗಿರುತ್ತದೆ.

  • ಕೇಂದ್ರದಿಂದ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ: ಚಲುವರಾಯಸ್ವಾಮಿ

    ಕೇಂದ್ರದಿಂದ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ: ಚಲುವರಾಯಸ್ವಾಮಿ

    ಬೆಂಗಳೂರು: ಕೇಂದ್ರ ಸರ್ಕಾರದಿಂದ (Central Government) ಯೂರಿಯಾ ಪೂರೈಕೆಯಲ್ಲಿ ಕೊರತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿತರಣೆಯಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿಭಾಯಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗೊಂದಲಗಳು ಬಗೆಹರಿಯಲಿವೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ (N Chaluvarayaswamy) ಸ್ಪಷ್ಟಪಡಿಸಿದ್ದಾರೆ.

    ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ 3 ಮುಂಗಾರು ಹಂಗಾಮಿನಲ್ಲಿ ಇದೇ ಸರ್ಕಾರ ಅಧಿಕಾರದಲ್ಲಿದೆ. ನಾನೇ ಕೃಷಿ ಸಚಿವನಾಗಿ ಇದ್ದೇನೆ. ಈವರೆಗೆ ಉಂಟಾಗದ ಸಮಸ್ಯೆ ಈಗೇಕೆ ಎಂಬುದನ್ನು ವಿಶ್ಲೇಷಿಸಬೇಕಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸಿ: ಜೋಶಿ ಮನವಿ

    ರಾಜ್ಯಕ್ಕೆ ಪೂರೈಕೆಯಾಗಬೇಕಾಗಿದ್ದ ಯೂರಿಯಾ ರಸಗೊಬ್ಬರದಲ್ಲಿ ಈ ಬಾರಿ 1.36 ಲಕ್ಷ ಮೆಟ್ರಿಕ್ ಟನ್ ಕೊರತೆಯಾಗಿದೆ. ಇದೇ ಈ ಎಲ್ಲಾ ಸಮಸ್ಯೆ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ನ್ಯಾ. ವರ್ಮಾ ನಡೆ ವಿಶ್ವಾಸ ಮೂಡಿಸುವುದಿಲ್ಲ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

    ಈ ಬಾರಿ ಮುಂಗಾರು ಬೇಗ ಪ್ರಾರಂಭವಾಗಿ ಉತ್ತಮ ಮಳೆಯಾಗಿದ್ದು, 2 ಲಕ್ಷ ಹೆಕ್ಟೇರ್ ಹೆಚ್ಚುವರಿ ಮುಸುಕಿನ ಜೋಳ ಬಿತ್ತನೆ ಕೂಡ ಯೂರಿಯಾ ಬೇಡಿಕೆಯ ಹಠಾತ್ ಏರಿಕೆಗೆ ಕಾರಣವಾಗಿದೆ ಎಂದಿದ್ದಾರೆ.

    ರಾಜ್ಯದಲ್ಲಿ ಅಕ್ರಮ ಸಾಗಾಟ, ಯೂರಿಯಾ (Urea) ದುರ್ಬಳಕೆ ಬಗ್ಗೆ ವಿಲಕ್ಷಣ ದಳ ಚುರುಕಾಗಿ ಕಾರ್ಯನಿರ್ವಹಿಸುತ್ತಿದ್ದು, ಅಕ್ರಮಗಳಿಗೆ ಕಡಿವಾಣ ಹಾಕಿದೆ. ವಿರೋಧ ಪಕ್ಷದ ಮುಖಂಡರು ಮಾಧ್ಯಮಕ್ಕೆ ತಿಳಿಸಿರುವಂತೆ ಕರ್ನಾಟಕ ರಾಜ್ಯವು ನೆರೆ ದೇಶಗಳಾದ ಶ್ರೀಲಂಕಾ ಮತ್ತು ಬಾಂಗ್ಲಾದೇಶದೊಂದಿಗೆ ಯಾವುದೇ ಗಡಿಯನ್ನು ಹಂಚಿಕೊಂಡಿರುವುದಿಲ್ಲ. ಈ ಹೇಳಿಕೆಯು ಹಾಸ್ಯಾಸ್ಪದವಾಗಿದೆ. ವಿರೋಧ ಪಕ್ಷದ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದ ಮೇಲೆ ಟ್ರಂಪ್‌ ತೆರಿಗೆ ಸಮರ : ಆ.1 ರಿಂದಲೇ 25% ಸುಂಕ

    ರಸಗೊಬ್ಬರಗಳ ಪೂರೈಕೆ ಕಾಪು ದಾಸ್ತಾನಿಗೆ ಇರಿಸಲಾಗಿದ್ದ ಗ್ಯಾರಂಟಿ ಹಣ ಕಡಿತಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಆದರೆ ಈ ಹಿಂದೆ ಇದ್ದದ್ದು ಬಿಜೆಪಿ ಸರ್ಕಾರ, ಅವರೇ ನಿಗದಿಪಡಿಸಿದ್ದ 400 ಕೋಟಿ ರೂ. ಹಣವನ್ನು ನಾವು ಯಥಾಸ್ಥಿತಿಯಲ್ಲಿ ಮುಂದುವರೆಸಿದ್ದೇವೆ. ಇನ್ನೂ 600 ಕೋಟಿ ರೂ. ಹೆಚ್ಚುವರಿ ಹಣ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ. ಪ್ರತಿಯಾಗಿ ಬಿಜೆಪಿ ನಾಯಕರು ಗೊಬ್ಬರ ಒದಗಿಸಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

    ರಾಜ್ಯದಲ್ಲಿ ದಾವಣಗೆರೆ, ಗದಗ, ಕೊಪ್ಪಳ, ಧಾರವಾಡ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಯೂರಿಯಾ ಕೊರತೆ ಸ್ವಲ್ಪ ಕಂಡುಬಂದಿರುವುದು ನಿಜ. ಆದರೆ ಅದನ್ನು ನಿಭಾಯಿಸಲಾಗುತ್ತಿದೆ. ಹೆಚ್ಚುವರಿ ದಾಸ್ತಾನು ಬೇರೆ ಜಿಲ್ಲೆಗಳಿಂದ ವರ್ಗಾವಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ದೀಪಾವಳಿ ಧಮಾಕ, ಕಾಂಗ್ರೆಸ್‌ನಲ್ಲಿ ಕ್ರಾಂತಿ : ವಿಜಯೇಂದ್ರ

    ರಸಗೊಬ್ಬರ ಅದರಲ್ಲೂ ಮುಖ್ಯವಾಗಿ ಯೂರಿಯಾ ಮತ್ತು ಡಿಎಪಿ ಪೂರೈಕೆ ಕೋರಿ ಜುಲೈ 7ರಂದು ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಆ ನಂತರ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸಹ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಲಾಗಿದೆ ಎಂದಿದ್ದಾರೆ.

    ಕೇಂದ್ರ ರಸಗೊಬ್ಬರ ಖಾತೆ ಸಚಿವರ ಭೇಟಿಗಾಗಿ ಸಮಯಾವಕಾಶ ಕೋರಿ ಪತ್ರ ಬರೆಯಲಾಗಿದೆ. ಅವಕಾಶ ಸಿಕ್ಕರೆ ಭೇಟಿ ಮಾಡಿ, ರಾಜ್ಯದ ಪರಿಸ್ಥಿತಿ ವಿವರಿಸಿ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

  • ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ವ್ಯವಸ್ಥೆ ಸರಿಪಡಿಸಲು ಕರ್ನಾಟಕ ಸಿಎಸ್‌ಗೆ ಸೂಚಿಸಿ – ಕೇಂದ್ರಕ್ಕೆ ಡಾ.ಕೆ.ಸುಧಾಕರ್ ಆಗ್ರಹ

    ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ವ್ಯವಸ್ಥೆ ಸರಿಪಡಿಸಲು ಕರ್ನಾಟಕ ಸಿಎಸ್‌ಗೆ ಸೂಚಿಸಿ – ಕೇಂದ್ರಕ್ಕೆ ಡಾ.ಕೆ.ಸುಧಾಕರ್ ಆಗ್ರಹ

    ನವದೆಹಲಿ: ಕರ್ನಾಟಕದಲ್ಲಿ (Karnataka) ದುರಾಡಳಿತ ನಡೆಸುತ್ತಿರುವ ಕಾಂಗ್ರೆಸ್ (Congress) ಸರ್ಕಾರ ರೈತರಿಗೆ ಸರಿಯಾಗಿ ರಸಗೊಬ್ಬರ ಪೂರೈಸಿಲ್ಲ. ಆದ್ದರಿಂದ ಕಾಳಸಂತೆಯಲ್ಲಿರುವ ಹಾಗೂ ದಾಸ್ತಾನುಗಳಲ್ಲಿರುವ ರಸಗೊಬ್ಬರವನ್ನು ರೈತರಿಗೆ ತಲುಪುವಂತೆ ಮಾಡಲು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಬೇಕೆಂದು ಸಂಸದ ಡಾ.ಕೆ.ಸುಧಾಕರ್ (K Sudhakar) ಕೇಂದ್ರ ಸರ್ಕಾರಕ್ಕೆ (Central Government) ಆಗ್ರಹಿಸಿದ್ದಾರೆ.

    ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಕನ್ನಡದಲ್ಲಿ ಮಾತನಾಡಿದ ಅವರು, ಮುಂಗಾರು ಖಾರಿಫ್ ಋತುಮಾನವು ಕೃಷಿಗೆ ನಿರ್ಣಾಯಕ ಅವಧಿಯಾಗಿದೆ. ಈ ಸಮಯದಲ್ಲಿ ರೈತರು ಭತ್ತ, ಜೋಳ, ನೆಲಗಡಲೆ, ಸೋಯಾಬೀನ್, ದ್ವಿದಳ ಧಾನ್ಯಗಳನ್ನು ಬೆಳೆಯುತ್ತಾರೆ. ದುರದೃಷ್ಟವಶಾತ್ ಜಾಗತಿಕ ಮಟ್ಟದಲ್ಲಿ ದೇಶಗಳ ನಡುವೆ ಸಂಘರ್ಷ ನಡೆಯುತ್ತಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 8.13 ಲಕ್ಷ ಟನ್‌ಗಳಷ್ಟು ಯೂರಿಯಾವನ್ನು ಕರ್ನಾಟಕ ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ.ಇದನ್ನೂ ಓದಿ: ಧರ್ಮಸ್ಥಳ ಫೈಲ್ಸ್‌| ಎರಡನೇ ಜಾಗದಲ್ಲಿ ಸಿಗಲಿಲ್ಲ ಯಾವುದೇ ಕಳೇಬರ

    ಭ್ರಷ್ಟಾಚಾರದಲ್ಲಿ ಮುಳುಗಿರುವ, ಸೊರಗಿ ಹೋಗಿರುವ, ದುರಾಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಅಸಮರ್ಪಕ ಆಡಳಿತದಿಂದಾಗಿ ದಾಸ್ತಾನುಗಳಲ್ಲಿರುವ ರಸಗೊಬ್ಬರವನ್ನು ಸರಿಯಾಗಿ ಹಂಚಿಕೆ ಮಾಡಲು ಸಾಧ್ಯವಾಗಿಲ್ಲ. ಈ ಮೂಲಕ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡಿದೆ ಎಂದು ದೂರಿದ್ದಾರೆ.

    ಕರ್ನಾಟಕದಲ್ಲಿ 258 ರೂ.ಗೆ ಸಬ್ಸಿಡಿ ದರದಲ್ಲಿ ಯೂರಿಯಾ ಸಿಗಬೇಕಿದ್ದರೂ, ಕಾಳಸಂತೆಯಲ್ಲಿ 500 ರೂ.ಗೆ ದೊರೆಯುತ್ತಿದೆ. ಡಿಎಪಿ 1,200 ರೂ. ಸಿಗಬೇಕಿದ್ದರೂ, 2,000 ರೂ.ಗೆ ಸಿಗುತ್ತಿದೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿಯವರ ನೇತೃತ್ವದಲ್ಲಿ ಎಲ್ಲ ಸಂಸದರು ಹಾಗೂ ರಾಜ್ಯಸಭಾ ಸದಸ್ಯರ ನಿಯೋಗದೊಂದಿಗೆ ರಸಗೊಬ್ಬರ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಈ ಸಮಸ್ಯೆ ಬಗ್ಗೆ ಚರ್ಚಿಸಿದ್ದೇವೆ. ಆದ್ದರಿಂದ ಈಗಾಗಲೇ ಕಾಳಸಂತೆಯಲ್ಲಿರುವ ಹಾಗೂ ದಾಸ್ತಾನುಗಳಲ್ಲಿರುವ ರಸಗೊಬ್ಬರ ಸರಿಯಾದ ದರದಲ್ಲಿ ಸಮರ್ಪಕವಾಗಿ ರೈತರನ್ನು ತಲುಪುವಂತೆ ಮಾಡಬೇಕಿದೆ. ಅದಕ್ಕಾಗಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಸರ್ಕಾರದಿಂದ ಮಾಹಿತಿ ಹಾಗೂ ಸೂಚನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಅನುಭವ ಮಂಟಪ ಕಾಮಗಾರಿ ಒಂದು ವರ್ಷದಲ್ಲಿ ಮುಗಿಸಲು ಸಿಎಂ ಸೂಚನೆ – ಈಶ್ವರ್ ಖಂಡ್ರೆ

  • ಕೇಂದ್ರ ಶಿಷ್ಟಾಚಾರ ಪಾಲನೆ ಮಾಡದಿದ್ರೆ ಗಣತಂತ್ರ ವ್ಯವಸ್ಥೆಗೆ ಕಪ್ಪು ಚುಕ್ಕಿ – ಮಹದೇವಪ್ಪ

    ಕೇಂದ್ರ ಶಿಷ್ಟಾಚಾರ ಪಾಲನೆ ಮಾಡದಿದ್ರೆ ಗಣತಂತ್ರ ವ್ಯವಸ್ಥೆಗೆ ಕಪ್ಪು ಚುಕ್ಕಿ – ಮಹದೇವಪ್ಪ

    ಬೆಂಗಳೂರು: ಕೇಂದ್ರ ಸರ್ಕಾರ (Central Government) ರಾಜ್ಯಗಳ ಜೊತೆ ಫೈಟ್ ಮಾಡದೇ ಶಿಷ್ಟಾಚಾರ ಪಾಲನೆ ಮಾಡಬೇಕು ಎಂದು ಕೇಂದ್ರದ ವಿರುದ್ಧ ಸಚಿವ ಮಹದೇವಪ್ಪ (HC Mahadevappa) ವಾಗ್ದಾಳಿ ನಡೆಸಿದರು.

    ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ ಹಿನ್ನೆಲೆ ಪ್ರಧಾನಿ ಮೋದಿಗೆ ಸಿಎಂ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಶಿಷ್ಟಾಚಾರ ಪಾಲನೆ ಮಾಡಬೇಕು. ಸಿಗಂದೂರು ಸೇತುವೆ ಮಾಡಿರುವುದು ಐತಿಹಾಸಿಕ ಕೆಲಸ. ಇದನ್ನು ಸ್ವಾಗತ ಮಾಡಬೇಕು. 2013-18ವರೆಗೆ ನಾನು ಲೋಕೋಪಯೋಗಿ ಇಲಾಖೆಯ ಸಚಿವನಾಗಿದ್ದೆ. ಆಗ ಯಡಿಯೂರಪ್ಪ ನನಗೆ ಸೇತುವೆ ಮಾಡಿಕೊಡಿ ಅಂತ ಕೇಳಿದ್ದರು. ಕಾಗೋಡು ತಿಮ್ಮಪ್ಪ ಕೂಡ ಮನವಿ ಮಾಡಿದ್ದರು. 2013-18ರ ನಡುವೆ ಕರ್ನಾಟಕ ರೋಡ್ ಡೆವಲಪ್ಮೆಂಟ್ ಕಾರ್ಪೋರೇಷನ್‌ನಿಂದ ಡಿಪಿಆರ್‌ನ್ನು (ಯೋಜನೆಯ ವಿವರವಾದ ವರದಿ) ತಯಾರಿ ಮಾಡಿದ್ದೆವು. ಬಳಿಕ ಗಡ್ಕರಿ ಅವರನ್ನು ಭೇಟಿ ಮಾಡಿ, ನ್ಯಾಷನಲ್ ಹೈವೆ ಅಥವಾ ಸಾಗರಮಾಲ ಯೋಜನೆ ಮಾಡಿ ಕೊಡಿ ಎಂದು ಕೇಳಿದ್ದೆ ಎಂದು ಇತಿಹಾಸ ತಿಳಿಸಿದರು.ಇದನ್ನೂ ಓದಿ: ವಿದ್ಯಾರ್ಥಿನಿ ಮೇಲೆ ರೇಪ್‌,ಬ್ಲ್ಯಾಕ್‌ಮೇಲ್‌ – ಮೂಡುಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು, ಸ್ನೇಹಿತ ಅರೆಸ್ಟ್‌

    ರಾಜ್ಯ ಸರ್ಕಾರವೇ ನಿರ್ಧಾರ ಮಾಡಿ, ಸೇತುವೆ ಆಗಬೇಕು ಎಂದಿದ್ದರು. ನಮ್ಮ ಮನವಿ ಮೇಲೆ ಕೇಂದ್ರ ಕೆಲಸ ಮಾಡಲು ಒಪ್ಪಿಗೆ ನೀಡಿತ್ತು. ಸೇತುವೆ ಆಗಬೇಕು ಅಂತ ನಿರ್ಧಾರ ಮಾಡಿದ್ದೇ ಸಿದ್ದರಾಮಯ್ಯ ಸರ್ಕಾರ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ಅಭಿವೃದ್ಧಿ ವಿಷಯದಲ್ಲಿ ಫೈಟ್ ಮಾಡೋ ಅವಶ್ಯಕತೆ ಇಲ್ಲ. ನಾವೇ ಕ್ರೆಡಿಟ್ ತಗೋಬೇಕು ಅಂತ ಮಾಡಬಾರದು ಎಂದು ಕಿಡಿಕಾರಿದರು.

    ಕಾರ್ಯಕ್ರಮಗಳನ್ನ ಶಿಷ್ಟಾಚಾರದ ಪ್ರಕಾರ ಮಾಡಬೇಕು. ಸಿಎಸ್‌ಗೆ ಪತ್ರ ಬರೆದು ಸಿಎಂ ಸಮಯ ಪಡೆದು ಕಾರ್ಯಕ್ರಮ ಮಾಡಬೇಕಿತ್ತು. ಸಿಎಂ ಬೇಡ ನಾವೇ ಕಾರ್ಯಕ್ರಮ ಮಾಡ್ತೀವಿ ಅಂದ್ರೆ ಅದು ಗಣತಂತ್ರ ವ್ಯವಸ್ಥೆಗೆ ಕಪ್ಪು ಚುಕ್ಕಿ. ಸಿಎಂ ಸಮಯ ನೋಡಿಕೊಂಡು ಸಮನ್ವಯದಿಂದ ಕೆಲಸ ಮಾಡಬೇಕು. ಫೈಟ್ ಮಾಡೋದ್ರಿಂದ ಏನು ಪ್ರಯೋಜನ ಇಲ್ಲ. ಇದು ಪ್ರಜಾಪ್ರಭುತ್ವ ಅಲ್ಲ ಎಂದು ಆಕ್ರೋಶ ಹೊರಹಾಕಿದರು.

    ಸಮಾಜ ಕಲ್ಯಾಣ ಇಲಾಖೆಯಲ್ಲಿನ ಬ್ಯಾಗ್ ಲಾಗ್ ಹುದ್ದೆ ಮುಂಬಡ್ತಿ ನೀಡಲು ನಿಯಮಗಳು ಪಾಲನೆ ಆಗ್ತಿಲ್ಲ ಅಂತ ಎಐಸಿಸಿ ಅಧ್ಯಕ್ಷರು ಸಿಎಂಗೆ ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಐಸಿಸಿ ಅಧ್ಯಕ್ಷರು ಸಿಎಂಗೆ ಪತ್ರ ಬರೆದಿರೋದು ನನಗೆ ಗೊತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆಯಲ್ಲಿ ಒಂದು ವಿಜಿಲೆನ್ಸ್ ವಿಂಗ್ ಇದೆ. ಏನೇ ದೂರು ಬಂದರು ಈ ವಿಂಗ್ ಪರಿಶೀಲನೆ ಮಾಡಲಿದೆ. ಅದನ್ನ ಪರಿಶೀಲನೆ ಮಾಡಿ ಕಮೀಷನರ್ ಅವರು ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯುತ್ತಾರೆ ಅಂತ ಸ್ಪಷ್ಟಪಡಿಸಿದರು.

    ನಮಗೆ ಪ್ರಾಂಶುಪಾಲರು, ಪೊಲೀಸ್ ಇಲಾಖೆ, ಡಿಹೆಚ್‌ಓಗಳ ಪ್ರಮೋಷನ್ ಸಂಬಂಧ ನನ್ನ ಗಮನಕ್ಕೆ ಬಂದಿತ್ತು. ನಾನು ಸಿಎಂ ಗಮನಕ್ಕೆ ತಂದು. ಸಮಸ್ಯೆ ಪರಿಹಾರಕ್ಕೆ ಸಿಎಂ ಸೂಚನೆ ನೀಡಿದ್ದಾರೆ. ನಾನೂ ಕೂಡಾ ಸಿಎಸ್ ಮತ್ತು ಸಂಬಂಧಪಟ್ಟ ಸಚಿವರಿಗೆ ಪತ್ರ ಬರೆದಿದ್ದೇನೆ ಎಂದರು.ಇದನ್ನೂ ಓದಿ: ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

  • ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ

    ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ

    ನವದೆಹಲಿ: ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣ (Hate Speech) ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ (Supreme Court) ಸೋಮವಾರ ಸೂಚಿಸಿದೆ.

    ಇನ್‌ಸ್ಟಾಗ್ರಾಮ್ (Instagram) ಇನ್‌ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ರೀತಿಯ ಸೂಚನೆ ನೀಡಿದೆ. ದ್ವೇಷದ ಭಾಷಣವನ್ನು ʻಅಭಿವ್ಯಕ್ತಿ ಸ್ವಾತಂತ್ರ‍್ಯʼ ಎಂದು ಹೇಳುವುದಕ್ಕೆ ವಿಷಾದ ವ್ಯಕ್ತಪಡಿಸಿದ ನ್ಯಾ. ಬಿ.ವಿ ನಾಗರತ್ನ (BV Nagrathna) ಮತ್ತು ನ್ಯಾ. ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಅದನ್ನ ನಿಯಂತ್ರಿಸಲು ರಾಜ್ಯವು ಮುಂದಾಗುವುದನ್ನು ಯಾರೂ ಬಯಸುವುದಿಲ್ಲ. ಹೀಗಾಗಿ ವಾಕ್ ಸ್ವಾತಂತ್ರ‍್ಯದ ಮೌಲ್ಯದ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಸಲಹೆ ನೀಡಿತು.

    ದ್ವೇಷ ಮೂಡಿಸುವ ಭಾಷಣಗಳು ಅಸಮರ್ಪಕ ಅಂತ ಜನರಿಗೆ ಯಾಕೆ ಕಾಣಿಸುತ್ತಿಲ್ಲ? ಎಂದು ಪ್ರಶ್ನಿಸಿದ ನ್ಯಾಯಪೀಠ, ಇಂತಹ ಕೆಲವು ಭಾಷಣಗಳಿಗೆ ನಿಯಂತ್ರಣ ಇರಬೇಕು. ಜನರು ಅಂತಹ ದ್ವೇಷದ ಭಾಷಣ ಹಂಚಿಕೊಳ್ಳುವುದು ಮತ್ತು ಲೈಕ್ ಮಾಡುವುದನ್ನ ನಿರ್ಬಂಧಿಸಬೇಕು ಎಂದು ಹೇಳಿತು. ಇದನ್ನೂ ಓದಿ: ಡಿವೋರ್ಸ್‌ ಕೇಸ್‌| ಸಂಗಾತಿ ರೆಕಾರ್ಡ್ ಮಾಡಿದ ಕರೆಯನ್ನು ಸಾಕ್ಷಿಯಾಗಿ ಪರಿಗಣಿಸಬಹುದು – ಸುಪ್ರೀಂ

    ದ್ವೇಷ ಮತ್ತು ಕೋಮು ಸೌಹಾರ್ದತೆಯನ್ನ ಪ್ರಚೋದಿಸುವ ವಿಷಯವನ್ನ ಸೋಷಿಯಲ್‌ ಮೀಡಿಯಾದಲ್ಲಿ (Social Media) ಪೋಸ್ಟ್ ಮಾಡಿದ ಆರೋಪದ ಮೇಲೆ ವಜಾಹತ್ ಖಾನ್ ವಿರುದ್ಧ ವಿವಿಧ ರಾಜ್ಯಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರು ಈಗಾಗಲೇ ಒಂದು ಎಫ್‌ಐಆರ್‌ನಲ್ಲಿ (FIR) ಪೊಲೀಸ್ ಕಸ್ಟಡಿಯಲ್ಲಿದ್ದಾರೆ ಮತ್ತು ಇನ್ನೊಂದರಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ, ಇಬ್ಬರ ವಿರುದ್ಧವೂ ಪಶ್ಚಿಮ ಬಂಗಾಳದಲ್ಲಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್‌ | ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್‌

    ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣವನ್ನ ನಿಯಂತ್ರಿಸುವ ಮಾರ್ಗಗಳನ್ನ ಸೂಚಿಸುವಂತೆ ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ವಜಾಹತ್ ಖಾನ್ ಪರ ಹಾಜರಿದ ವಕೀಲರಿಗೆ ಸುಪ್ರೀಂ ಸೂಚಿಸಿತು. ಪಶ್ಚಿಮ ಬಂಗಾಳದ ಹೊರಗೆ ಅವರ ವಜಾಹತ್ ಖಾನ್ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳಲ್ಲಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದ ಮೂರು ವಾರಗಳ ನಂತರ ಈ ಬಗ್ಗೆ ವಿಚಾರಣೆ ನಡೆಸಿತು. ಅವರಿಗೆ ಈ ಪರಿಹಾರವನ್ನು ಮುಂದುವರೆಸಿದ ನ್ಯಾಯಾಲಯ, ಇನ್ನಷ್ಟು ಎಫ್‌ಐಆರ್‌ಗಳನ್ನು ಹಾಕಿ ವ್ಯಕ್ತಿಯನ್ನು ಜೈಲಿಗೆ ಹಾಕುವುದರಲ್ಲಿ ಏನು ಪ್ರಯೋಜನ? ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಖಾನ್ ಅವರ ವಕೀಲರು, ತಮ್ಮ ಕಕ್ಷಿದಾರರು ಹಿಂದಿನ ಟ್ವೀಟ್‌ಗಳಿಗೆ ಕ್ಷಮೆಯಾಚಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕೇರಳದ ನರ್ಸ್‌ಗೆ ಜು.16ರಂದು ಯೆಮೆನ್‌ನಲ್ಲಿ ನೇಣು; ಮರಣದಂಡನೆ ತಡೆಯಲು ಸಾಧ್ಯವಿಲ್ಲ – ಸುಪ್ರೀಂಗೆ ಕೇಂದ್ರ ಮಾಹಿತಿ

  • ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ – ರಾಜ್ಯದಲ್ಲಿ 2 ಡಿಫೆನ್ಸ್ ಕಾರಿಡಾರ್‌ಗೆ ಮನವಿ

    ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ – ರಾಜ್ಯದಲ್ಲಿ 2 ಡಿಫೆನ್ಸ್ ಕಾರಿಡಾರ್‌ಗೆ ಮನವಿ

    ಬೆಂಗಳೂರು/ನವದೆಹಲಿ: ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ನಿಯೋಗವು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಎರಡು ಡಿಫೆನ್ಸ್ ಕಾರಿಡಾರ್‌ಗೆ (Defence Corridor) ಮನವಿ ಸಲ್ಲಿಸಿದ್ದಾರೆ.

    ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ-ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರ್ಕಾರವು ಎರಡು ಪ್ರತ್ಯೇಕ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಬೇಕೆಂದು ಕೋರಿ ರಾಜ್ಯ ಸರ್ಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದೆ.

    ನಿಯೋಗದಲ್ಲಿ ಸಿಎಂ ಸೇರಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಇಂಧನ ಸಚಿವ ಕೆ.ಜೆ ಜಾರ್ಜ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಇದ್ದರು.ಇದನ್ನೂ ಓದಿ: ರಾಮಾಯಣದಲ್ಲಿ ಯಶ್ ಪಾತ್ರ ಬರೀ 15 ನಿಮಿಷ?

    2018ರಲ್ಲಿ ಕೇಂದ್ರ ಸರ್ಕಾರವು ಉತ್ತರಪ್ರದೇಶ ಮತ್ತು ತಮಿಳುನಾಡಿಗೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಿದೆ. ಆದರೆ, ದೇಶದ ರಕ್ಷಣಾ ಮತ್ತು ವೈಮಾಂತರಿಕ್ಷ ವಲಯದಲ್ಲಿ ಕರ್ನಾಟಕವು ಶೇ.75ರಷ್ಟು ಪಾಲು ಹೊಂದಿದ್ದು, ಜಾಗತಿಕವಾಗಿ ಮೂರನೇ ಅತ್ಯುತ್ತಮ ಕಾರ್ಯಪರಿಸರ ಹೊಂದಿರುವ ಹೆಗ್ಗಳಿಕೆ ಸಂಪಾದಿಸಿದೆ. ಹೀಗಾಗಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಿಗೆ ಒಂದೊಂದು ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಿದರೆ, ಇದು ಮೇಕ್ ಇನ್ ಇಂಡಿಯಾ ಉಪಕ್ರಮಕ್ಕೂ ಬಲ ತುಂಬುತ್ತದೆ ಎಂದು ಸಿದ್ದರಾಮಯ್ಯ ಮನದಟ್ಟು ಮಾಡಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರು ಕೂಡ ಪೂರಕ ಮಾಹಿತಿ ಒದಗಿಸಿದರು.

    ಉತ್ತರ ಕರ್ನಾಟಕದ ಮೂರು ಜಿಲ್ಲೆಗಳಾದ ಹುಬ್ಬಳ್ಳಿ-ಧಾರವಾಡ-ಬೆಳಗಾವಿ-ವಿಜಯಪುರದಲ್ಲಿ ರಕ್ಷಣಾ ವಲಯದ ಉತ್ಪಾದನಾ ಕಂಪನಿಗಳಾದ ಬಾಲೂ ಫೋರ್ಜ್, ಏಕಸ್, ಬಿಕಾರ್ ಏರೋಸ್ಪೇಸ್, ವಾಲ್‌ಚಂದ್ ನಗರ್ ಇಂಡಸ್ಟ್ರೀಸ್ ಮುಂತಾದವು ನೆಲೆಯೂರಿವೆ. ಜೊತೆಗೆ ಬೆಳಗಾವಿಯಲ್ಲಿ 250 ಎಕರೆಯಲ್ಲಿ ದೇಶದ ಪ್ರಪ್ರಥಮ ಪ್ರಿಸಿಶನ್ ಉತ್ಪಾದನೆಯ ವಿಶೇಷ ಆರ್ಥಿಕ ವಲಯವು ಸಕ್ರಿಯವಾಗಿದೆ. ಇಲ್ಲಿ 31 ಘಟಕಗಳಿದ್ದು, 5 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿವೆ ಎಂದು ಗಮನಕ್ಕೆ ತಂದರು.

    ದಕ್ಷಿಣ ಕರ್ನಾಟಕದ ಮೂರು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರದಲ್ಲಿ ರಕ್ಷಣಾ ಸಾಮಗ್ರಿ ಮತ್ತು ವೈಮಾಂತರಿಕ್ಷ ಕಂಪನಿಗಳಾದ ಸಾರ್ವಜನಿಕ ವಲಯದ ಹೆಚ್‌ಎಎಲ್, ಕಾಲಿನ್ಸ್ ಏರೋಸ್ಪೇಸ್, ಡೈನಮ್ಯಾಟಿಕ್ ಟೆಕ್ನಾಲಜೀಸ್, ಸೆಂಟಮ್, ಸಾಸ್ಮೋಸ್, ಬೆಲ್ಲಾಟ್ರಿಕ್ಸ್ ಮುಂತಾದವು ಇವೆ. ಇವುಗಳೊಂದಿಗೆ ಟಿಎಎಸ್‌ಎಲ್ ತನ್ನ ಅಂತಿಮ ಜೋಡಣಾ ಘಟಕವನ್ನು ಆರಂಭಿಸುತ್ತಿದೆ. ಏರ್ ಇಂಡಿಯಾ ಮತ್ತು ಇಂಡಿಗೋ ಸಾವಿರಾರು ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ತಮ್ಮ ಎಂಆರ್‌ಒ ಘಟಕಗಳನ್ನು ಬೆಂಗಳೂರಿನ ಸಮೀಪದಲ್ಲಿ ಸ್ಥಾಪಿಸುತ್ತಿವೆ. ದೇವನಹಳ್ಳಿಯಲ್ಲಿ 2 ಸಾವಿರ ಎಕರೆ ವಿಸ್ತಾರದ ಹೈಟೆಕ್ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್ ಇದೆ. ಈ ಭಾಗದಲ್ಲಿ ದೇಶದ ಏರ್‌ಕ್ರಾಫ್ಟ್ ಮತ್ತು ಸ್ಪೇಸ್‌ಕ್ರಾಫ್ಟ್ ವಲಯದ ಶೇಕಡ 25ರಷ್ಟು ತಯಾರಿಕೆ ನಡೆಯುತ್ತಿದೆ. ವಿಮಾನ ಮತ್ತು ಹೆಲಿಕಾಪ್ಟರ್ ತಯಾರಿಕೆಯಲ್ಲಿ ರಾಜ್ಯದ ಕೊಡುಗೆ ಶೇ.67ರಷ್ಟಿದೆ. ಇವೆಲ್ಲವನ್ನೂ ಪರಿಗಣಿಸಿ, ಎರಡು ಡಿಫೆನ್ಸ್ ಕಾರಿಡಾರ್‌ಗಳನ್ನು ಮಂಜೂರು ಮಾಡಬೇಕೆಂದು ನಿಯೋಗವು ಒತ್ತಾಯಿಸಿದೆ.

    ಮನವಿ ಸ್ವೀಕರಿಸಿದ ರಾಜನಾಥ್ ಸಿಂಗ್, ಈ ಬಗ್ಗೆ ಸೂಕ್ತವಾಗಿ ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ಕೇಂದ್ರ ಒಪ್ಪಿಗೆ

  • ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ಕೇಂದ್ರ ಒಪ್ಪಿಗೆ

    ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ಕೇಂದ್ರ ಒಪ್ಪಿಗೆ

    -6 ನೀರಾವರಿ ಯೋಜನೆಗಳಿಗೆ 11.122 ಕೋಟಿ ಅನುದಾನಕ್ಕಾಗಿ ಮನವಿ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಈ ಬಾರಿ 11 ದಿನಗಳ ಕಾಲ ನಡೆಯಲಿದ್ದು, ಇದೇ ವೇಳೆ ಏರ್ ಶೋ (Air Show) ನಡೆಸಲು ಕೇಂದ್ರ ಸರ್ಕಾರ (Central Govt) ಒಪ್ಪಿಗೆ ನೀಡಿದೆ.

    ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದ ನಿಯೋಗ ರಾಜನಾಥ್ ಸಿಂಗ್ (Rajanath Singh) ಅವರನ್ನು ಭೇಟಿಯಾಗಿ ಏರ್‌ಶೋಗೆ ಮನವಿ ಸಲ್ಲಿಸಿತ್ತು. ರಾಜ್ಯ ಸರ್ಕಾರದ ಕೋರಿಕೆ ಬೆನ್ನಲ್ಲೇ ರಾಜನಾಥ್ ಸಿಂಗ್ ಮನವಿಗೆ ಒಪ್ಪಿಗೆ ಸೂಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಇದನ್ನೂ ಓದಿ: ಹೊಂಬಾಳೆ ಫಿಲಂಸ್ ಪ್ರಸ್ತುತಿ: ಮಹಾವತಾರ್ ನರಸಿಂಹ ಟ್ರೈಲರ್ ರಿಲೀಸ್

    ಭೇಟಿ ವೇಳೆ ಬೆಂಗಳೂರಿನ (Bengaluru) ಟನಲ್ ಯೋಜನೆ, ಲಿಂಕ್ ರೋಡ್ ಹಾಗೂ ಏರ್‌ಪೋರ್ಟ್ ರಸ್ತೆಯಲ್ಲಿ ಡಬಲ್ ಡೆಕ್ಕರ್ ರಸ್ತೆಗೆ ರಕ್ಷಣಾ ಇಲಾಖೆಗೆ ಜಾಗ ಕೇಳಲಾಗಿತ್ತು. ಇದಕ್ಕೂ ಸರ್ಕಾರ ಸ್ಪಂದಿಸಿದೆ ಹಾಗೂ ನಾಳೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಭೇಟಿಗೂ ಅವಕಾಶ ಕೇಳಲಾಗಿದೆ ಎಂದು ತಿಳಿಸಿದ್ದಾರೆ.

    ಇನ್ನೂ ಇದೇ ವೇಳೆ ಡಿಕೆಶಿ ಮಾತನಾಡಿ, ರಾಜ್ಯದ ಆರು ನೀರಾವರಿ ಯೋಜನೆಗಳಿಗೆ 11,122.76 ಕೋಟಿ ರೂ. ಅನುದಾನಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕುಡಿಯುವ ನೀರಿನ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಶೇ.25ರಷ್ಟು ಆರ್ಥಿಕ ಸಹಾಯ, ಕಳಸಾ ಬಂಡೂರಿ ಯೋಜನೆ, ಕೃಷ್ಣಾ ನದಿ ನೀರಿನ ವಿಚಾರವಾಗಿ ಕೇಂದ್ರ ಜಲಶಕ್ತಿ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಿ, ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

    ಬೆಂಗಳೂರಿನ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ ಸುರಂಗ ಮಾರ್ಗ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಛೇಡಿಸಿದ್ದಾರೆ. ಟನಲ್ ನಿರ್ಮಾಣಕ್ಕಾಗಿ ಕುಮಾರಸ್ವಾಮಿ ನೆರವು ಕೇಳಿರುವ ಡಿಕೆ ಶಿವಕುಮಾರ್, ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ ಎಂದು ಟೀಕಿಸಿದ್ದಾರೆ. ಟನಲ್ ನಿರ್ಮಾಣದಲ್ಲಿ ಹೆಚ್‌ಡಿಕೆ ಸಲಹೆ ಪಡೆಯಲಾಗುವುದು. ಅವರು ಗಡ್ಕರಿ ಭೇಟಿಯಾಗಿದ್ದು ಗೊತ್ತು. ಕೇಂದ್ರದಿಂದ ದುಡ್ಡು ಕೊಡಿಸಲಿ ಸಾಕು. ಕ್ರೇಡಿಟ್ ಯಾರು ಬೇಕಾದರೂ ತೆಗೆದುಕೊಳ್ಳಲಿ ಎಂದಿದ್ದಾರೆ.ಇದನ್ನೂ ಓದಿ: ಕಾಡಾನೆ ದಾಳಿಗೆ ಮಾಜಿ ಶಾಸಕ ಬಲಿ