ನವದೆಹಲಿ: ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆ ಮತ್ತು ಹಿಂಸಾಚಾರಗಳಿಂದ ರೈಲ್ವೆ ಇಲಾಖೆಗೆ 259.44 ಕೋಟಿ ರೂ. ನಷ್ಟವಾಗಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.
ಈ ಮಧ್ಯೆ ಅಗ್ನಿಪಥ್ ಯೋಜನೆ ಕುರಿತಾಗಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ರಕ್ಷಣಾ ವಿಭಾಗದ ಸಂಸದೀಯ ಸ್ಥಾಯಿ ಸಮಿತಿಯ ಮೂವರು ಸಭೆಯಿಂದ ಮಧ್ಯದಲ್ಲೇ ನಿರ್ಗಮಿಸಿದ್ದಾರೆ. ಕಾಂಗ್ರೆಸ್‌ನ ಕೆ.ಸಿ.ವೇಣುಗೋಪಾಲ್, ಉತ್ತಮ್‌ಕುಮಾರ್ ರೆಡ್ಡಿ ಹಾಗೂ ಬಿಎಸ್‌ಪಿ ಸಂಸದ ಡ್ಯಾನಿಶ್ ಆಲಿ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸ್ವಾತಂತ್ರ್ಯ ಅಮೃತಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ ʼಹರ್ ಘರ್ ತಿರಂಗಾʼ ಅಭಿಯಾನಕ್ಕೆ ಕರೆ ನೀಡಿದೆ. ಸ್ವಾತಂತ್ರ್ಯ ದಿನದಂದು ಖಾದಿ ಬಟ್ಟೆಯ ಬದಲು ಪಾಲಿಸ್ಟರ್ ಧ್ವಜಗಳಿಗೆ ಅನುಮತಿ ನೀಡಿರುವುದಕ್ಕೆ ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕೇಸರಿ,ಬಿಳಿ ಹಸಿರು ಬಣ್ಣಗಳ ತ್ರಿವರ್ಣ ಧ್ವಜವನ್ನು 1947ರಲ್ಲಿ ಇದೇ ದಿನ ಸಂವಿಧಾನ ರಚನಾ ಸಭೆ ರಾಷ್ಟ್ರಧ್ವಜವಾಗಿ ಅಂಗೀಕರಿಸಿತ್ತು.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಷ್ಟ್ರಗೀತೆಯಷ್ಟೇ ಪವಿತ್ರವಾದ ರಾಷ್ಟ್ರಧ್ವಜ ದೇಶದ ಅಸ್ಮಿತೆ ಮತ್ತು ಸ್ವಾಭಿಮಾನದ ಸಂಕೇತ. ಕೇಂದ್ರ ಸರ್ಕಾರ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವುದು ರಾಷ್ಟ್ರಧ್ವಜ ಮತ್ತು ಖಾದಿ ಬಟ್ಟೆಗೆ ಮಾಡಿರುವ ಅಗೌರವವಾಗಿದೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಹೈಕಮಾಂಡ್‍ಗೆ ಸೆಡ್ಡು ಹೊಡೆದ ಬಿಎಸ್‍ವೈ – ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟಿರುವ ಹಿಂದಿದೆ ಹಲವು ಲೆಕ್ಕಾಚಾರ
ರಾಷ್ಟ್ರಗೀತೆಯಷ್ಟೇ ಪವಿತ್ರವಾದ ರಾಷ್ಟ್ರಧ್ವಜ ದೇಶದ ಅಸ್ಮಿತೆ ಮತ್ತು ಸ್ವಾಭಿಮಾನದ ಸಂಕೇತ.
ಕೇಂದ್ರ ಸರ್ಕಾರ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವುದು ರಾಷ್ಟ್ರಧ್ವಜ ಮತ್ತು ಖಾದಿ ಬಟ್ಟೆಗೆ ಮಾಡಿರುವ ಅಗೌರವವಾಗಿದೆ. 2/4#nationalflagdaypic.twitter.com/tpgHBHZvUJ
ಟ್ವೀಟ್‌ನಲ್ಲಿ ಏನಿದೆ?
ಕೇಸರಿ, ಬಿಳಿ, ಹಸಿರು ಬಣ್ಣಗಳ ತ್ರಿವರ್ಣ ಧ್ವಜವನ್ನು 1947ರಲ್ಲಿ ಇದೇ ದಿನ ಸಂವಿಧಾನ ರಚನಾ ಸಭೆ ರಾಷ್ಟ್ರಧ್ವಜವಾಗಿ ಅಂಗೀಕರಿಸಿತ್ತು. ಈ ಬಣ್ಣಗಳು ಸಾರುವ ಶಾಂತಿ, ತ್ಯಾಗ, ಧೈರ್ಯ, ಸಾಮರ್ಥ್ಯ, ಭರವಸೆ ಮತ್ತು ಸರ್ವಸಮಾನ ಅಭಿವೃದ್ದಿಯ ಸಂದೇಶವನ್ನು ನಾವೆಲ್ಲರೂ ಗೌರವಿಸೋಣ.
ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುವ@BJP4India ಸರ್ಕಾರದ ನಿರ್ಧಾರದಿಂದಾಗಿ, ದಶಕಗಳಿಂದ ರಾಷ್ಟ್ರಧ್ವಜವನ್ನು ತಯಾರಿಸಿ ದೇಶಕ್ಕೆ ಹಂಚುತ್ತಿದ್ದ ನಮ್ಮ ಹುಬ್ಬಳ್ಳಿಯ 'ಕರ್ನಾಟಕ ಖಾದಿ ಗ್ರಾಮದ್ಯೋಗ ಸಂಯುಕ್ತ ಸಂಘ' ಬಾಗಿಲು ಹಾಕುವ ಪರಿಸ್ಥಿತಿ ಎದುರಾಗಿದೆ. 3/4#nationalflagdaypic.twitter.com/d97JWHwFyn
ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರದಿಂದಾಗಿ, ದಶಕಗಳಿಂದ ರಾಷ್ಟ್ರಧ್ವಜವನ್ನು ತಯಾರಿಸಿ ದೇಶಕ್ಕೆ ಹಂಚುತ್ತಿದ್ದ ನಮ್ಮ ಹುಬ್ಬಳ್ಳಿಯ ‘ಕರ್ನಾಟಕ ಖಾದಿ ಗ್ರಾಮದ್ಯೋಗ ಸಂಯುಕ್ತ ಸಂಘ’ ಬಾಗಿಲು ಹಾಕುವ ಪರಿಸ್ಥಿತಿ ಎದುರಾಗಿದೆ. ಇದನ್ನೂ ಓದಿ: ವಿ ಆರ್ ನಾಟ್ ಎ ಸೆಕೆಂಡ್ ಕ್ಲಾಸ್ ಸಿಟಿಜನ್ಸ್: ಎಂ.ಬಿ.ಪಾಟೀಲ್
.@PMOIndia ಸರ್ಕಾರ ಪಾಲಿಸ್ಟರ್ ಧ್ವಜಗಳ ಬಳಕೆಯ ಆದೇಶವನ್ನು ತಕ್ಷಣ ವಾಪಸು ಪಡೆದು ಖಾದಿ ಬಟ್ಟೆಯ ರಾಷ್ಟ್ರಧ್ವಜಗಳ ತಯಾರಿಕೆಗಷ್ಟೇ ಅವಕಾಶ ನೀಡಬೇಕು.
ಸರ್ಕಾರ ಪಾಲಿಸ್ಟರ್ ಧ್ವಜಗಳ ಬಳಕೆಯ ಆದೇಶವನ್ನು ತಕ್ಷಣ ವಾಪಸು ಪಡೆದು ಖಾದಿ ಬಟ್ಟೆಯ ರಾಷ್ಟ್ರಧ್ವಜಗಳ ತಯಾರಿಕೆಗಷ್ಟೇ ಅವಕಾಶ ನೀಡಬೇಕು. ಈ ಮೂಲಕ ರಾಷ್ಟ್ರಧ್ವಜದ ಗೌರವವನ್ನು ಎತ್ತಿಹಿಡಿಯಬೇಕು ಮತ್ತು ಖಾದಿ ಗ್ರಾಮದ್ಯೋಗದ ಅಭಿವೃದ್ದಿಗೆ ನೆರವಾಗಬೇಕು ಎಂದು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರವು ಧ್ವಜ ಸಂಹಿತೆ-2002ಕ್ಕೆ ತಿದ್ದುಪಡಿ ತಂದು ಖಾದಿ ಬಟ್ಟೆಯ ಬದಲು ಪಾಲಿಸ್ಟರ್ ಧ್ವಜಗಳಿಗೆ ಅನುಮತಿ ನೀಡಿದೆ. ಇದು ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿದ್ದು, ಕಾಂಗ್ರಸ್ ಕೂಡ ಕೇಂದ್ರದ ವಿರುದ್ಧ ಹರಿಹಾಯ್ದಿತ್ತು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ತನ್ನ ಖಾಸಗಿ ವಾರ್ಡ್ ಕೊಠಡಿಗಳ ಶುಲ್ಕವನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿರುವುದರಿಂದ ಶೇ.5 ರಷ್ಟು ಜಿಎಸ್‌ಟಿ ಹೆಚ್ಚಿಸಲಿದ್ದು ದಿನದ ಕೊಠಡಿ ಶುಲ್ಕ 5 ಸಾವಿರಕ್ಕೂ ಹೆಚ್ಚಾಗಿದೆ ಎಂದು ಹೇಳಿದೆ.
ಸರ್ಕಾರದ ಅಧಿಸೂಚನೆಯ ಪ್ರಕಾರ, 5 ಸಾವಿರಕ್ಕೂ ಅಧಿಕ ಶುಲ್ಕ ವಿಧಿಸುವ ಕೊಠಡಿಗಳ ಮೇಲೆ ಶೇ.5 ರಷ್ಟು ಜಿಎಸ್‌ಟಿ ಸುಂಕ ಬೀಳುತ್ತಿದೆ. ಹಾಗಾಗಿ ಆಸ್ಪತ್ರೆಯ ಎ-ಕ್ಲಾಸ್ ಕೊಠಡಿಗಳ (ಡೀಲಕ್ಸ್ ರೂಂ) ಶುಲ್ಕವನ್ನು ದಿನಕ್ಕೆ 6,200 ರೂ.ಗಳಿಗೆ ಹೆಚ್ಚಿಸಲಾಗಿದೆ. ಇಲ್ಲಿಗೆ ದಾಖಲಾಗುವ ರೋಗಿಗಳು 10 ದಿನಗಳ ಮುನ್ನವೇ 66 ಸಾವಿರ ರೂ.ಗಳ ಮುಂಗಡ ಹಣ ಪಾವತಿಸಬೇಕು. ಇದರಲ್ಲೇ ಶೇ.5 ರಷ್ಟು ಜಿಎಸ್‌ಟಿ ಹಾಗೂ ಆಹಾರ ಶುಲ್ಕಗಳೂ ಒಳಗೊಂಡಿರಲಿದೆ ಎಂದು ವೈದ್ಯಕೀಯ ಅಧೀಕ್ಷಕ ಹಾಗೂ ಆಸ್ಪತ್ರೆಯ ಆರ್ಥಿಕ ಸಲಹೆಗಾರ ನರೀಂದರ್ ಭಾಟಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಲಯಾಳಂ ಸ್ಟಾರ್ ನಟನ ಚಿತ್ರಕ್ಕೆ ಕನ್ನಡಿಗ ರವಿ ಬಸ್ರೂರು ಸಂಗೀತ
ಜಿಎಸ್‌ಟಿ ಮಂಡಳಿಯು ಐಸಿಯು, ಹೃದಯ ಶಸ್ತ್ರಚಿಕಿತ್ಸಾ ಕೊಠಡಿ ಹಾಗೂ ಮಕ್ಕಳ ಐಸಿಯು ಘಟಕಗಳನ್ನು ಹೊರತುಪಡಿಸಿ ಉಳಿದೆಲ್ಲ ಕೊಠಡಿಗಳಿಗೆ ಹಾಗೂ ಕ್ಲಿನಿಕಲ್ ಸಂಸ್ಥೆಗಳು ಒದಗಿಸುವ ಸೇವೆಗಳಿಗೆ, ದಿನಕ್ಕೆ 5 ಸಾವಿರಕ್ಕಿಂತ ಹೆಚ್ಚು ಬಾಡಿಗೆ ವಿಧಿಸುವ ಕೊಠಡಿಗಳಿಗೆ ಜಿಎಸ್‌ಟಿ ವಿಧಿಸಲಾಗಿದೆ. ಇದರಿಂದ ಹೆಚ್ಚುವರಿ ಶುಲ್ಕವನ್ನು ವಿಧಿಸಲಾಗಿದೆ ಎಂದು ಭಾಟಿಯಾ ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ದೇಶದಲ್ಲೂ ಆತಂಕ ಸೃಷ್ಟಿಸಿರುವ ಮಂಕಿಪಾಕ್ಸ್ ಸೋಂಕಿನ ಭೀತಿಯಿಂದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ವಿಮಾನ ನಿಲ್ದಾಣಗಳಲ್ಲೂ ಹೈ ಅಲರ್ಟ್ ಘೋಷಿಸಿದೆ. ವಿದೇಶಗಳಿಂದ ಬರುವವರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸುವಂತೆ ಸೂಚಿಸಿದೆ.
ದುಬೈನಿಂದ ಬಂದಿದ್ದ ಕೇರಳದ ಕಣ್ಣೂರಿನ ವ್ಯಕ್ತಿಯೊಬ್ಬರಿಗೆ ನಿನ್ನೆಯಷ್ಟೇ `ಮಂಕಿಪಾಕ್ಸ್’ ತಗುಲಿರುವುದು ಪತ್ತೆಯಾಗಿತ್ತು. ಇದು ದೇಶದಲ್ಲಿ ಪತ್ತೆಯಾದ 2ನೇ ಪ್ರಕರಣವಾಗಿತ್ತು. ಇದಕ್ಕೂ ಮುನ್ನ ಕೇರಳದ ಕೊಲ್ಲಂ ಜಿಲ್ಲೆಯ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ದೃಢಪಟ್ಟಿತ್ತು.
31 ವರ್ಷದ ವ್ಯಕ್ತಿಯೊಬ್ಬರು ಜುಲೈ 13ರಂದು ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಅವರಲ್ಲಿ ಮಂಕಿಪಾಕ್ಸ್‌ನ ಲಕ್ಷಣಗಳು ಕಂಡುಬಂದಿದ್ದವು. ಹೀಗಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಂದ ಸಂಗ್ರಹಿಸಲಾಗಿದ್ದ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಗೆ ರವಾನಿಸಲಾಗಿತ್ತು. ವ್ಯಕ್ತಿಗೆ ರೋಗ ತಗುಲಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಸುಮ್ಮನೆ ವಾಹನ ತಡೆ ಹಿಡಿಯುತ್ತಿದ್ದ ಟ್ರಾಫಿಕ್ ಪೊಲೀಸ್ ಅಮಾನತು
ಈ ಬೆನ್ನಲ್ಲೇ ರಾಜ್ಯದ ಆರೋಗ್ಯ ಇಲಾಖೆಯೊಂದಿಗೆ ಕೇಂದ್ರದ ವಿಶೇಷ ತಂಡವು ಪರಿಸ್ಥಿತಿ ಅವಲೋಕಿಸಿತ್ತು. ಬಳಿಕ ಮಂಕಿಪಾಕ್ಸ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಪ್ರಕರಣ ಪತ್ತೆಯಾದಲ್ಲಿ, ಅದನ್ನು ತಡೆಯಲು ರಾಜ್ಯಗಳಿಗೆ ಎಲ್ಲ ರೀತಿಯ ಸಹಕಾರಗಳನ್ನು ನೀಡಲಾಗುತ್ತದೆ. ಮಂಕಿಪಾಕ್ಸ್ ಅಷ್ಟೇನೂ ಗಂಭೀರವಾದ ಕಾಯಿಲೆಯಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಹೀಗಾಗಿ ಯಾರೂ ಆತಂಕಕ್ಕೆ ಒಳಗಾಗಬಾರದು ಧೈರ್ಯ ಹೇಳಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ದೇಶದಲ್ಲಿ ಮಂಕಿಪಾಕ್ಸ್ ಸೋಂಕಿನ ಎರಡನೇ ಪ್ರಕರಣ ಪತ್ತೆಯಾಗಿದ್ದು, ಜನತೆಯಲ್ಲಿ ಭೀತಿ ಸೃಷ್ಟಿಸಿದೆ. ಇದರಿಂದ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದ್ದು, ಹೊರ ದೇಶಗಳಿಂದ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ಸೂಚನೆ ನೀಡಿದೆ.
ಮಂಕಿಪಾಕ್ಸ್ ಸೋಂಕಿನ ಕುರಿತು ಸಭೆ ನಡೆಸಲಾಯಿತು. ವಿಮಾನ ನಿಲ್ದಾಣ ಮತ್ತು ಬಂದರು ಆರೋಗ್ಯ ಅಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಪ್ರಾದೇಶಿಕ ಕಚೇರಿಗಳ ನಿರ್ದೇಶಕರು ಈ ಸಭೆಯಲ್ಲಿ ಭಾಗವಹಿಸಿದ್ದರು.
ಆರೋಗ್ಯ ತಪಾಸಣೆ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ಅಂತಾರಾಷ್ಟ್ರೀಯ ಬಂದರುಗಳು ಮತ್ತು ವಿಮಾನ ನಿಲ್ದಾಣಗಳಲ್ಲಿನ ಇತರೆ ಮಧ್ಯಸ್ಥಗಾರರ ಏಜೆನ್ಸಿಗಳೊಂದಿಗೆ ಸಮನ್ವಯಗೊಳಿಸಲು ಆರೋಗ್ಯಾಧಿಕಾರಿಗಳಿಗೆ ಕೇಂದ್ರ ಸಲಹೆ ನೀಡಿದೆ.
Live Tv
[brid partner=56869869 player=32851 video=960834 autoplay=true]
ದಿಸ್ಪುರ್: ಅಸ್ಸಾಂನ ದಿಬ್ರುಗಢ್‌ನ ಭೋಗಾಲಿ ಪಥ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ (ASF) ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅಸ್ಸಾಂ ಸರ್ಕಾರ ಹಂದಿ ಮಾಂಸ ಸೇವಿಸದಂತೆ ಸೂಚಿಸಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ದಿಬ್ರುಗಢ್ ಪಶುಸಂಗೋಪನೆ ಮತ್ತು ಪಶುವೈದ್ಯಾಧಿಕಾರಿ ಡಾ.ಹಿಮಂದು ಬಿಕಾಶ್ ಬರುವಾ, ಇಲ್ಲಿನ ಹಂದಿಯೊಂದರಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆಯಾಗಿದ್ದು, ಆ ಪ್ರದೇಶದ 1 ಕಿಮೀ ವ್ಯಾಪ್ತಿಯಲ್ಲಿರುವ ಎಲ್ಲಾ ಹಂದಿಗಳನ್ನು ಕೊಲ್ಲಲಾಗಿದೆ. ಜೊತೆಗೆ ವ್ಯಾಪ್ತಿ ಪ್ರದೇಶವನ್ನು ಸೋಂಕಿತ ಪ್ರದೇಶವೆಂದು ಘೋಷಿಸಿದ್ದು ಕೊಂದ ಹಂದಿಗಳನ್ನು ಹೂಳಲಾಗಿದೆ. ಅದೇ ಸಮಯದಲ್ಲಿ, ನಾವು ಇಡೀ ಪ್ರದೇಶವನ್ನು ಸ್ಯಾನಿಟೈಸ್ ಮಾಡಿ, ಏಕಕಾಲದಲ್ಲಿ ಶುಚಿಗೊಳಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಆಫ್ರಿಕನ್ ಹಂದಿ ಜ್ವರವು ಹಂದಿಗಳಿಗೆ ಮಾರಣಾಂತಿಕ ಅಷ್ಟೇ, ಹೆಚ್ಚು ಸಾಂಕ್ರಾಮಿಕವಾಗಿದ್ದರೂ ಮನುಷ್ಯರಿಗೆ ಸೋಂಕು ಹರಡುವುದಿಲ್ಲ. ಹೀಗಾಗಿ ಆತಂಕಕೊಳ್ಳಕಾಗಬಾರದೆಂದು ತಜ್ಞರು ತಿಳಿಸಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – ಇಲಿ ಪಾಷಾಣ ಸೇವಿಸಿ ಗೃಹಿಣಿ ಆತ್ಮಹತ್ಯೆ
ಸರ್ಕಾರದ ಅಂಕಿ-ಅಂಶಗಳ ಪ್ರಕಾರ 2020 ರಿಂದ 2022ರ ಜುಲೈ 11ರ ವರೆಗೆ ರಾಜ್ಯದಲ್ಲಿ ಸುಮಾರು 40,159 ಹಂದಿಗಳು ಜ್ವರದಿಂದ ಸಾವನ್ನಪ್ಪಿವೆ. 1,181 ಹಂದಿಗಳನ್ನು ಕೊಲ್ಲಲಾಗಿದೆ ಎಂದಿದ್ದಾರೆ.
ಎಲ್ಲೆಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ?
ಅಸ್ಸಾಂ, ಮಿಜೋರಾಂ, ಸಿಕ್ಕಿಂ, ನಾಗಾಲ್ಯಾಂಡ್, ತ್ರಿಪುರಾ, ಉತ್ತರಾಖಂಡ ಹಾಗೂ ಬಿಹಾರ ರಾಜ್ಯಗಳಲ್ಲಿ ಆಫ್ರಿಕನ್ ಹಂದಿ ಜ್ವರ (ಎಎಸ್‌ಎಫ್) ಪ್ರಕರಣಗಳು ವರದಿಯಾಗಿವೆ.
ಕೇಂದ್ರ ಸರ್ಕಾರವು ಆಫ್ರಿಕನ್ ಹಂದಿ ಜ್ವರದ ಕ್ರಿಯಾ ಯೋಜನೆ ರೂಪಿಸಿದ್ದು, ಇದನ್ನು ಎಲ್ಲಾ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ಅನುಸರಿಸಬೇಕು, ಆರೋಗ್ಯ ಸಂಸ್ಥೆಗಳು ಮುನ್ನೆಚ್ಚರಿಕೆ ವಹಿಸಬೇಕು. ಹಂದಿ ಸಾಕಾಣಿಕೆ ಕೇಂದ್ರಗಳಲ್ಲಿ ಜ್ವರ ಅಥವಾ ಜ್ವರದಿಂದ ಸಾವನ್ನಪ್ಪಿದ ಪ್ರಕರಣಗಳ ಬಗ್ಗೆ ನಿಗಾ ವಹಿಬೇಕು ಎಂದು ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: 18ರಿಂದ 59 ವಯೋಮಾನದವರಿಗೆ ಕೋವಿಡ್ ಬೂಸ್ಟರ್ ಡೋಸ್‌ನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ತುಂಬಿದೆ. 75ನೇ ಸ್ವಾತಂತ್ರ್ಯ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಭಾಗವಾಗಿ ಬೂಸ್ಟರ್ ಡೋಸ್‌ನ್ನು ದೇಶದ ಜನತೆಗೆ ಉಚಿತವಾಗಿ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಜು.15ರಿಂದ 75 ದಿನಗಳ ವರೆಗೆ ಉಚಿತವಾಗಿ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಕಾನೂನು ಸುವ್ಯವಸ್ಥೆಯನ್ನು ಹಾಳುಮಾಡಲು RSS, SDPIನಿಂದ ಸಾಧ್ಯವಿಲ್ಲ: ಪಿಣರಾಯಿ ವಿಜಯನ್
18-59 ವಯೋಮಾನದ 77 ಕೋಟಿ ಜನಸಂಖ್ಯೆ ದೇಶದಲ್ಲಿದ್ದು, ಈ ಪೈಕಿ ಕೇವಲ ಶೇ.1 ಕ್ಕಿಂತ ಕಡಿಮೆ ಮಂದಿ ಬೂಸ್ಟರ್ ಡೋಸ್ ಪಡೆದುಕೊಂಡಿದ್ದಾರೆ. 60 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಅಂದಾಜು 16 ಕೋಟಿ ಜನರ ಪೈಕಿ ಶೇ.26 ಮಂದಿ ಸೇರಿದಂತೆ ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರು ಬೂಸ್ಟರ್ ಡೋಸ್ ಸ್ವೀಕರಿಸಿದ್ದಾರೆ.
ಸರ್ಕಾರವು 75 ದಿನಗಳ ಕಾಲ ಲಸಿಕೆ ನೀಡಿಕೆಯ ವಿಶೇಷ ಆಂದೋಲನವನ್ನು ಪ್ರಾರಂಭಿಸಲು ಯೋಜಿಸಿದೆ. ಈ ಅವಧಿಯಲ್ಲಿ 18 ರಿಂದ 59 ವರ್ಷ ವಯಸ್ಸಿನವರಿಗೆ ಜುಲೈ 15 ರಿಂದ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್‌ನ್ನು ಉಚಿತವಾಗಿ ನೀಡಲಾಗುವುದು. ಇದನ್ನೂ ಓದಿ: ಉತ್ತರ ಪ್ರದೇಶ ಒತ್ತುವರಿ ತೆರವು ಕಾರ್ಯಾಚರಣೆ – ತಡೆ ನೀಡಲ್ಲ ಎಂದ ಸುಪ್ರೀಂ
ಕೋವಿಡ್ ಲಸಿಕೆಯ ಎರಡನೇ ಡೋಸ್ ಮತ್ತು ಬೂಸ್ಟರ್ ಡೋಸ್ ನಡುವಿನ ಅಂತರವನ್ನು 9ರಿಂದ 6 ತಿಂಗಳಿಗೆ ಇಳಿಸಲಾಗಿದೆ. ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯ (ಎನ್‌ಟಿಎಜಿಐ) ಶಿಫಾರಸನ್ನು ಆಧರಿಸಿ ಅಂತರವನ್ನು ಕಡಿತಗೊಳಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
ಬೆಲೆ ಇಳಿಕೆಗೆ ಈ ಹಿಂದೆಯೇ ಕೇಂದ್ರ ಸರ್ಕಾರ ಸೂಚಿಸಿತ್ತು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ಇಳಿಕೆ ಹಿನ್ನೆಲೆ ದೇಶದಲ್ಲೂ ಬೆಲೆ ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿತ್ತು. ಇದಕ್ಕೆ ಕಂಪನಿಗಳು ಒಪ್ಪಿಗೆ ಸೂಚಿಸಿರುವ ಕಾರಣ ಬೆಲೆ ಇಳಿಕೆ ಮಾಡಲಾಗಿದೆ.
ನವದೆಹಲಿ: ಕೇಂದ್ರ ಸರ್ಕಾರವು ಸಾಮಾಜಿಕ ಮಾಧ್ಯಮವಾದ ಟ್ವಿಟ್ಟರ್‌ನಲ್ಲಿನ ಕೆಲವು ಅಂಶಗಳನ್ನು ತೆಗದುಹಾಕುವಂತೆ ನೀಡಿರುವ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಟ್ವಿಟ್ಟರ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ.
24 ಮಿಲಿಯನ್ ಬಳಕೆದಾರರನ್ನು ಹೊಂದಿರುವ ಟ್ವಿಟ್ಟರ್ ಹಾಗೂ ಕೇಂದ್ರ ಸರ್ಕಾರದ ನಡುವೆ ಕೆಲ ದಿನಗಳಿಂದ ಈಚೆಗೆ ಕಾನೂನು ಸಮರ ನಡೆಯುತ್ತಿದೆ. ಈ ನಡುವೆ ಅಧಿಕಾರಿಗಳಿಂದಲೇ ಟ್ವಿಟ್ಟರ್ ದುಬಳಕೆಯಾಗುತ್ತಿರುವುದಾಗಿ ಟ್ವಿಟ್ಟರ್ ಆರೋಪಿಸಿದೆ. ಕೇಂದ್ರ ಸರ್ಕಾರದ ಆದೇಶವನ್ನು ರದ್ದುಗೊಳಿಸುವಂತೆ ರಾಜ್ಯ ಹೈಕೋರ್ಟ್‌ಗೆ ಮನವಿ ಮಾಡಿದೆ. ಇದನ್ನೂ ಓದಿ: ಬಂಡಿ ಎಳೆಯುವವನಿಗೆ ಹೊಸ ಚಪ್ಪಲಿ ಗಿಫ್ಟ್ ಕೊಟ್ಟ ಪೊಲೀಸ್ – ವೀಡಿಯೋ ನೋಡಿ ನೆಟ್ಟಿಗರು ಫುಲ್ ಖುಷ್
ಕೇಂದ್ರಸರ್ಕಾರವು ಸ್ವತಂತ್ರ ಸಿಖ್ ದೇಶವನ್ನು ಬೆಂಬಲಿಸುವ ಖಾತೆಗಳು, ರೈತರ ಪ್ರತಿಭಟನೆ ಕುರಿತಾಗಿ ಸುಳ್ಳು ಮಾಹಿತಿ ಹರಡುವ ಪೋಸ್ಟ್‌ಗಳು ಹಾಗೂ ಕೋವಿಡ್ 19 ಸಾಂಕ್ರಾಮಿಕವನ್ನು ಸರ್ಕಾರ ನಿರ್ವಹಣೆ ಮಾಡಿರುವ ರೀತಿಯನ್ನು ಟೀಕಿಸುವ ಟ್ವೀಟ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಳೆದ ಒಂದು ವರ್ಷದಿಂದ ಒತ್ತಡ ಹೇರುತ್ತಲೇ ಇದೆ. ಕೇಂದ್ರ ಸರ್ಕಾರದ ಆದೇಶದಿಂದ ವಿನಾಯಿತಿ ಪಡೆಯಲು ಟ್ವಿಟ್ಟರ್ ಕೋರ್ಟ್ ಮೊರೆ ಹೋಗಿದೆ.
ಸಾಂದರ್ಭಿಕ ಚಿತ್ರ
ಐಟಿ ಸಚಿವಾಲಯವು ಕೆಲವು ಆದೇಶಗಳನ್ನು ಸರಿಯಾಗಿ ಪಾಲಿಸದೆ ಇದ್ದರೆ ಕ್ರಿಮಿನಲ್ ಪ್ರಕ್ರಿಯೆ ಎದುರಿಸಬೇಕಾಗುತ್ತದೆ ಎಂದು ಕಳೆದ ತಿಂಗಳು ಟ್ವಿಟ್ಟರ್‌ಗೆ ಎಚ್ಚರಿಕೆ ನೀಡಿತ್ತು. ಆದರೆ ಭಾರತದ ಐಟಿ ಕಾಯ್ದೆಯ ಪ್ರಕ್ರಿಯಾ ಅಗತ್ಯಗಳಿಗೆ ಒಳಪಡದ ಕಾರಣ ಕೆಲವು ಆದೇಶಗಳು ನ್ಯಾಯಾಂಗದ ಪರಾಮರ್ಶೆಗೆ ಒಳಪಡಬೇಕು ಎಂದು ಟ್ವಿಟ್ಟರ್ ವಾದಿಸಿತು. ಅಲ್ಲದೆ ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿ ಹಾಗೂ ಇತರೆ ಕಾರಣಗಳಿಂದ ಕೆಲವು ಅಂಶಗಳಿಗೆ ಪ್ರವೇಶ ನಿರ್ಬಂಧಿಸುವ ಹಕ್ಕನ್ನು ಸರ್ಕಾರಕ್ಕೆ ಐಟಿ ಕಾಯ್ದೆ ಒದಗಿಸಿದೆ. ಕೆಲವು ಆದೇಶಗಳು ಆ ಬರಹದ ಬರಹಗಾರರಿಗೆ ನೋಟಿಸ್‌ಗಳನ್ನು ನೀಡಲು ವಿಫಲವಾಗಿವೆ ಎಂದು ಟ್ವಿಟ್ಟರ್ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿದೆ.
ದೇಶದಲ್ಲಿ 24 ಮಿಲಿಯನ್ ಟ್ವಿಟ್ಟರ್ ಬಳಕೆದಾರರಿದ್ದಾರೆ. ಕೆಲವು ರಾಜಕೀಯ ವಿಷಯಗಳು ರಾಜಕೀಯ ಪಕ್ಷಗಳ ಅಧಿಕೃತ ಖಾತೆಗಳಿಂದ ಪೋಸ್ಟ್ ಆಗಿರುವುದಕ್ಕೆ ಸಂಬಂಧಿಸಿವೆ. ಇವುಗಳನ್ನು ಬ್ಲಾಕ್ ಮಾಡುವುದು ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ಉಲ್ಲಂಘಿಸಿದಂತೆ ಆಗುತ್ತದೆ ಎಂದು ಟ್ವಿಟ್ಟರ್ ಹೇಳಿದೆ.
Live Tv
[brid partner=56869869 player=32851 video=960834 autoplay=true]
ಈಗಾಗಲೇ ಮೊದಲ ಹಂತದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಬಹುತೇಕ ಪೂರ್ಣಗೊಂಡಿದೆ. 2ನೇ ಹಂತದಲ್ಲಿ ಅರ್ಜಿಗಳನ್ನು ಸಲ್ಲಿಸಲು ಜುಲೈ 15 ರಿಂದ 30ರ ವರೆಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಅಗ್ನಿಪಥ್ ಯೋಜನೆಯಲ್ಲಿ 3 ಸಾವಿರ ಮಹಿಳೆಯರು ಸೇರಲು ಅವಕಾಶವಿದ್ದು, ಇನ್ನೂ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿಲ್ಲ ಎಂದು ಹೇಳಲಾಗಿದೆ. ಇದನ್ನೂ ಓದಿ: ಆಪರೇಷನ್ ದಕ್ಷಿಣ್ ಮೂಲಕ ಪ್ರಜಾಪ್ರಭುತ್ವ ಮುಕ್ತ ಭಾರತ ನಿರ್ಮಾಣವೇ ಬಿಜೆಪಿ ಗುರಿ: HDK
1990ರಿಂದಲೂ ಪ್ರಬಲ ಸಶಸ್ತ್ರ ಪಡೆಗಳಿಗೆ 14 ಲಕ್ಷ ಮಹಿಳೆಯರನ್ನು ಸೇರ್ಪಡೆ ಮಾಡಲಾಗಿದೆ. 20019-20ರಲ್ಲಿ ಈ ಬೆಳವಣಿಗೆ ಕೊಂಚ ಬದಲಾಗಿದ್ದು, ಅಧಿಕಾರಿ ಸ್ಥಾನಗಳನ್ನೂ ಅವರು ಅಲಂಕರಿಸಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
Live Tv
[brid partner=56869869 player=32851 video=960834 autoplay=true]