Tag: Central Government

  • ಎರಡು ದಿನ ಭಾರತ್ ಬಂದ್ – ಏನಿರುತ್ತೆ? ಏನಿರಲ್ಲ?

    ಎರಡು ದಿನ ಭಾರತ್ ಬಂದ್ – ಏನಿರುತ್ತೆ? ಏನಿರಲ್ಲ?

    ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಎರಡು ದಿನಗಳ ಬಂದ್‍ಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಹಾಗೂ ಆಟೋ ಚಾಲಕರು ಬೆಂಬಲ ನೀಡಿದ್ದು, ಎಂದಿನಂತೆ ಓಲಾ, ಊಬರ್ ಸಂಚಾರ ಆಗಲಿದೆ.

    ನಗರದ ಖಾಸಗಿ ಶಾಲೆಗಳ ಸಂಘ ಬಂದ್ ಕಾರಣ ಎಲ್ಲಾ ಶಾಲಾ ಕಾಲೇಜುಗಳಿಗೆ 2 ದಿನಗಳ ರಜೆ ಘೋಷಣೆ ಮಾಡಿದೆ. ಉಳಿದಂತೆ ಸರ್ಕಾರಿ ಶಾಲೆ ಕಾಲೇಜುಗಳ ರಜೆ ಬಗ್ಗೆ ತೀರ್ಮಾನ ಕೈಗೊಳ್ಳಬೇಕಿದೆ. ಉಳಿದಂತೆ ಬಹುತೇಕ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ.

    ಏನಿರುತ್ತೆ?
    ಚಿತ್ರ ಮಂದಿರ, ಮಾಲ್, ಮೆಟ್ರೋ, ಎಸ್‍ಬಿಐ ಬ್ಯಾಂಕ್, ಹೋಟೆಲ್, ಆಸ್ಪತ್ರೆ, ಆಂಬುಲೆನ್ಸ್, ಹಾಲು-ತರಕಾರಿ, ಸರ್ಕಾರಿ ಕಚೇರಿ.

    ಏನಿರಲ್ಲ?
    ಸರ್ಕಾರಿ ಬಸ್, ಆಟೋ ಸಂಚಾರ, ಖಾಸಗಿ ಶಾಲಾ-ಕಾಲೇಜು, ಬ್ಯಾಂಕ್ ಸೇವೆ, ಎಪಿಎಂಸಿ ಮಾರುಕಟ್ಟೆ

    ಬಂದ್‍ಗೆ ಯಾರ್ಯಾರ ಬೆಂಬಲ?
    ಎಐಟಿಯುಸಿ, ಎನ್‍ಐಡಿಯುಸಿ, ಸಿಐಟಿಯು ಸಂಘಟನೆ ಬೆಂಬಲ ನೀಡಿದ್ದು, ಇತ್ತ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ನೌಕರರ ಸಂಘ, ಬಾಷ್ ಕಾರ್ಮಿಕ ಸಂಘಟನೆ, ಬ್ಯಾಂಕ್ ಫೆಡರೇಷನ್ ಆಫ್ ಇಂಡಿಯಾ, ಪೀಣ್ಯ ಕೈಗಾರಿಕಾ ಕಾರ್ಮಿಕ ಸಂಘಟನೆ, ಟಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಸಂಘ, ಗಾರ್ಮೆಂಟ್ಸ್ ಸಂಘಟನೆ, ಅಂಗನವಾಡಿ ನೌಕರರು, ಕಟ್ಟಡ ಕಾರ್ಮಿಕ ಸಂಘಟನೆ, ಎಸ್‍ಎಫ್‍ಐ ವಿದ್ಯಾರ್ಥಿ ಸಂಘಟನೆ, 50ಕ್ಕೂ ಹೆಚ್ಚು ರೈತ ಸಂಘಟನೆಗಳು, ಎಪಿಎಂಸಿ ಸಂಘ ಬಂದ್ ಗೆ ಬೆಂಬಲ ನೀಡಿದೆ.

    ಉಳಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳದ ಬೆಳಗಾವಿ, ಹಾಸನ, ಮಂಗಳೂರು, ಹುಬ್ಬಳ್ಳಿ, ಕಲಬುರಗಿ, ಉಡುಪಿ, ದಕ್ಷಿಣ ಕನ್ನಡ, ಹುಬ್ಬಳ್ಳಿಯಲ್ಲಿ ಸರ್ಕಾರಿ ಸಾರಿಗೆ ವ್ಯವಸ್ಥೆ ಲಭ್ಯವಿರುವುದಿಲ್ಲ. ಉಳಿದಂತೆ ಆಟೋ, ಟ್ಯಾಕ್ಸಿ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಅಲ್ಲದೇ ಸರ್ಕಾರಿ ಶಾಲೆಗೆ ರಜೆ ನೀಡುವ ನಿರ್ಧಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಬಳ್ಳಾರಿ, ಚಾಮರಾಜನಗರ, ಮೈಸೂರಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದ್ದು, 2 ದಿನಗಳ ಬದಲಾಗಿ ಶನಿವಾರ ಹಾಗೂ ಭಾನುವಾರ ತರಗತಿಗಳು ನಡೆಯಲಿದೆ. ಧಾರವಾಡದಲ್ಲಿ 8 ರಂದು ಮಾತ್ರ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ.

    ದಕ್ಷಿಣ ಕನ್ನಡದಲ್ಲಿ ಖಾಸಗಿ ಬಸ್ ಮಾಲೀಕರು ಬಂದ್ ಗೆ ಬೆಂಬಲ ನೀಡಿಲ್ಲ. ಆದರೆ ಉಡುಪಿ ಜಿಲ್ಲೆಯಲ್ಲಿ ಬಂದ್ ಗೆ ಮಾಲೀಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

    ತುಮಕೂರು ಜಿಲ್ಲೆಯಲ್ಲಿ ಶಾಲೆ ಕಾಲೇಜುಗಳು ಸರ್ಕಾರಿ ಕಚೇರಿಗಳು ಯಥಾಸ್ಥಿತಿ ಇರಲಿದೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಹಾಸನದಲ್ಲಿಯೂ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಹಿತಿ ನೀಡಿದ್ದಾರೆ.

    ನಾಳೆ ಯಾವ ಪರೀಕ್ಷೆಗಳು ಇರಲ್ಲ?
    ಬೆಳಗಾವಿ ರಾಣಿ ಚೆನ್ನಮ್ಮ ವಿವಿ, ಧಾರವಾಡ ಕರ್ನಾಟಕ ವಿ.ವಿ, ಶಿವಮೊಗ್ಗ ಕುವೆಂಪು ವಿವಿ, ತುಮಕೂರು ವಿವಿ ಮಂಗಳವಾರ ಮತ್ತು ಬುಧವಾರ ನಡೆಯಬೇಕಿದ್ದ ಎಲ್ಲ ಪರೀಕ್ಷೆಗಳು ಮುಂದೂಡಿಕೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾಳೆಯ ಬಂದ್‍ಗೆ ನಮ್ಮ ಬೆಂಬಲವೂ ಇದೆ: ದಿನೇಶ್ ಗುಂಡೂರಾವ್

    ನಾಳೆಯ ಬಂದ್‍ಗೆ ನಮ್ಮ ಬೆಂಬಲವೂ ಇದೆ: ದಿನೇಶ್ ಗುಂಡೂರಾವ್

    ಬೆಂಗಳೂರು: ಕಾರ್ಮಿಕರ ಕಾನೂನು ಹಾಗೂ ವಿವಿಧ ಬೇಡಿಕೆ ಈಡೇರಿಕೆ ಸಂಬಂಧವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬಂದ್‍ಗೆ ನಮ್ಮ ಬೆಂಬಲವೂ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಆದ್ದರಿಂದ ಕಾರ್ಮಿಕ ಸಂಘಟನೆಗಳು ಕೇಂದ್ರದ ಧೋರಣೆ ವಿರುದ್ಧ ಬಂದ್‍ಗೆ ಕರೆ ನೀಡಿದೆ. ಆದ್ದರಿಂದ ನಮ್ಮ ಬೆಂಬಲವೂ ಬಂದ್‍ಗೆ ಇದೆ ಎಂದು ತಿಳಿಸಿದರು.

    ಬೀದಿ ರಂಪಾಟವಲ್ಲ: ಇದೇ ವೇಳೆ ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಎರಡು ಪಕ್ಷದ ಮುಖಂಡರು ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿದೆ. ಇದನ್ನು ಬಹಿರಂಗವಾಗಿ ಮಾಧ್ಯಮಗಳ ಮೂಲಕ ಚರ್ಚೆ ಮಾಡಿ ಬೀದಿ ರಂಪಾಟ ಮಾಡುವ ವಿಷಯವಲ್ಲ ಎಂದರು. ಇದನ್ನು ಓದಿ: ಮೈತ್ರಿ ಮಾಡೋದ್ರಲ್ಲಿ ಜೆಡಿಎಸ್ ಅವರೇ ಬೆಸ್ಟ್: ಸುಧಾಕರ್ ವ್ಯಂಗ್ಯ

    ನಮ್ಮ ಪಕ್ಷದ ತೀರ್ಮಾನವನ್ನು ಈಗಾಗಲೇ ನಾವು ಹೇಳಿದ್ದೇವೆ. ಮುಂದಿನ ಹಂತದಲ್ಲಿ ಈ ಬಗ್ಗೆ ಸಮನ್ವಯದಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು. ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ವಿಚಾರ ಜನರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ವಿಷಯವಲ್ಲ. ಇದು ಎರಡು ಪಕ್ಷಗಳ ವಿಚಾರವಾಗಿದ್ದು, ಕುಳಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುತ್ತೇವೆ. ಆದರೆ ಇದರಿಂದ ಮೈತ್ರಿ ಧರ್ಮಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಸಮ್ಮಿಶ್ರ ಸರ್ಕಾರ 5 ವರ್ಷ ಪೂರ್ಣಗೊಳಿಸುತ್ತದೆ. ಕಾಂಗ್ರೆಸ್ ಪಕ್ಷ ಮೈತ್ರಿ ಧರ್ಮ ಪಾಲನೆ ಮಾಡದ ಪಕ್ಷವಲ್ಲ. ಸಿಎಂ ಕುಮಾರಸ್ವಾಮಿ ಅವರಿಗೆ ಸಂಪೂರ್ಣ ಬೆಂಬಲ ನೀಡಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಗೂ ಕೂಡ ಮೈತ್ರಿ ಧರ್ಮದ ಮೂಲವೇ ಸಾಗಿ ಹೋರಾಟ ನಡೆಸಬೇಕಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಲ್ಪೆ ಮೀನುಗಾರರ ನಾಪತ್ತೆ ಪ್ರಕರಣ – ಭಾನುವಾರ ಬಂದರುಗಳು ಬಂದ್!

    ಮಲ್ಪೆ ಮೀನುಗಾರರ ನಾಪತ್ತೆ ಪ್ರಕರಣ – ಭಾನುವಾರ ಬಂದರುಗಳು ಬಂದ್!

    ಉಡುಪಿ: ಜಿಲ್ಲೆಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ 7 ಮಂದಿ ಮೀನುಗಾರರು ನಾಪತ್ತೆಯಾಗಿ 20 ದಿನಗಳು ಕಳೆದಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸದ್ಯ ಕರಾವಳಿಯ ಮೀನುಗಾರರು ಅನಾಥರಾಗಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಾವು ನಿರ್ಧರಿಸಿದ್ದೇವೆ ಎಂದು ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

    ಡಿಸೆಂಬರ್ 13ರಿಂದ ಈವರೆಗೆ ನಾಪತ್ತೆಯಾದ ಮೀನುಗಾರರು ಮತ್ತು ಬೋಟನ್ನು ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಗೋವಾ ಮತ್ತು ಮಹಾರಾಷ್ಟ್ರ ಸಮುದ್ರದ ಗಡಿಯಲ್ಲಿ ಮೀನುಗಾರರು ಕಣ್ಮರೆಯಾಗಿರುವ ವಿಚಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ಬಂದರೂ ಈವರೆಗೆ ಯಾವುದೇ ಫಲಿತಾಂಶ ಸಿಕ್ಕಿಲ್ಲ. 7 ಮಂದಿ ಕಡಲ ಮಕ್ಕಳು ಏನಾದರು ಎನ್ನುವುದು ಇನ್ನು ನಿಗೂಢವಾಗಿದೆ. ಈ ಹಿನ್ನೆಲೆಯಲ್ಲಿ ಎರಡೂ ಸರ್ಕಾರಗಳ ವಿರುದ್ಧ ಜನವರಿ 6 ರಂದು ಕಡಲ ಮಕ್ಕಳು ಬೀದಿಗಿಳಿದು ಹೋರಾಟ ಮಾಡಲಿದ್ದಾರೆ ಎಂದರು.

    ಪ್ರತಿಭಟನೆ ಭಾಗವಾಗಿ ಮಲ್ಪೆಯಿಂದ ಉಡುಪಿಯ ಕರಾವಳಿ ಬೈಪಾಸ್ ವರೆಗೆ ಪಾದಯಾತ್ರೆ ಮಾಡಲಾಗುವುದು. ಈ ಪ್ರತಿಭಟನೆಯಲ್ಲಿ ಸುಮಾರು 50 ಸಾವಿರ ಮಂದಿ ಮೀನುಗಾರರು ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ರಸ್ತೆಗಿಳಿಯಲಿದ್ದು ಹೆದ್ದಾರಿ ಬಂದ್ ಮಾಡಲಿದ್ದಾರೆ. ಇದನ್ನು ಓದಿ: ಕಸುಬಿಗಾಗಿ ಕಡಲಿಗಿಳಿದವರು 17 ದಿನದಿಂದ ಕಣ್ಮರೆ- ಇದು ಮಿಸ್ಸಿಂಗ್ ಸೆವೆನ್ ಮಿಸ್ಟರಿ

    ಘಟನೆ ನಡೆದು ತಿಂಗಳಾದರೂ ಸಿಎಂ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಹಾಗೂ ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಈ ಕುರಿತು ಒಂದೇ ಒಂದು ಹೇಳಿಕೆ ನೀಡದಿರುವುದು ಕರಾವಳಿಯ ಪ್ರಬಲ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಭಾನುವಾರ ಮೂರೂ ಜಿಲ್ಲೆಯ ಬಂದರುಗಳನ್ನು ಬಂದ್ ಮಾಡುವ ಎಚ್ಚರಿಕೆಯನ್ನೂ ಮೀನುಗಾರ ಮುಖಂಡರು ಕೊಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೊಸ ವರ್ಷಕ್ಕೆ ಗಿಫ್ಟ್ – ಎಲ್‍ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ

    ಹೊಸ ವರ್ಷಕ್ಕೆ ಗಿಫ್ಟ್ – ಎಲ್‍ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ

    ನವದೆಹಲಿ: ಗೃಹ ಬಳಕೆ ಸಬ್ಸಿಡಿ ಸಹಿತ ಅಡುಗೆ ಅನಿಲ ಸಿಲಿಂಡರ್ ದರ 5.91 ರೂ. ಇಳಿಕೆಯಾಗಿದೆ. ಬೆಲೆ ಇಳಿಕೆಯಾಗುವ ಮೂಲಕ ಜನರಿಗೆ ಹೊಸ ವರ್ಷಕ್ಕೆ ಗಿಫ್ಟ್ ಸಿಕ್ಕಿದಂತಾಗಿದೆ.

    ಡಿಸೆಂಬರ್ ತಿಂಗಳಲ್ಲಿ ಕೇಂದ್ರ ಸರ್ಕಾರ ಅಡುಗೆ ಅನಿಲ ದರವನ್ನು 2ನೇ ಬಾರಿ ಇಳಿಕೆ ಮಾಡಿದ್ದು, ಡಿಸೆಂಬರ್ 1 ರಂದು 6.52 ರೂ. ಕಡಿತಗೊಳಿಸಿತ್ತು. ಇದರೊಂದಿಗೆ 12.43 ರೂ. ಒಂದೇ ತಿಂಗಳಿನಲ್ಲಿ ಕಡಿಮೆ ಆಗಿದೆ. ಜೂನ್ ನಿಂದ ನವೆಂಬರ್ ತಿಂಗಳ ಅವಧಿಯಲ್ಲಿ ತಿಂಗಳಿನಿಂದ ಸತತ 6 ಬಾರಿ 14.13 ರೂ. ಹೆಚ್ಚಳವಾಗಿತ್ತು.

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್‍ಪಿಜಿ ಅನಿಲದ ಬೆಲೆ ಇಳಿಕೆಯಾಗಿರುವ ಕಾರಣ ಬೆಲೆಯನ್ನು ಕಡಿತಗೊಳಿಸಲಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮಾಹಿತಿ ನೀಡಿದ್ದು, ಸಬ್ಸಿಡಿ ರಹಿತ ಸಿಲಿಂಡರ್ ದರದಲ್ಲಿ ಬರೋಬ್ಬರಿ 120.50 ರೂ. ಕಡಿತಗೊಳಿಸಿದೆ.

    ಡಿಸೆಂಬರ್ 1 ರಂದು ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 133 ರೂ. ಕಡಿತಗೊಳಿಸಲಾಗಿತ್ತು. ಇದರೊಂದಿಗೆ ಡಿಸೆಂಬರ್ ತಿಂಗಳಿನಲ್ಲಿ 253.50 ರೂ. ದರ ಕಡಿತವಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷೃತ ದರ ಜಾರಿ ಬರಲಿದ್ದು, ದೆಹಲಿಯಲ್ಲಿ 500.90 ರೂ. ಇದ್ದ 14.2 ಕೆಜಿ ಸಬ್ಸಿಡಿ ಸಿಲಿಂಡರ್ ಬೆಲೆ ದರ ಕಡಿತದಿಂದ 494.99 ರೂ. ಆಗಲಿದೆ.

    ಇದರೊಂದಿಗೆ ಜನವರಿ ತಿಂಗಳಿನಲ್ಲಿ ಸಬ್ಸಿಡಿ ಸಿಲಿಂಡರ್ ಪಡೆಯುವ ಗ್ರಾಹಕರ ಖಾತೆಗೆ ಪ್ರತಿ ಸಿಲಿಂಡರ್ ಗೆ 94.01 ರೂ. ಜಮೆ ಆಗಲಿದೆ. ನವೆಂಬರ್ ನಲ್ಲಿ ಸಬ್ಸಿಡಿ ಸಿಲಿಂಡರ್ ಗ್ರಾಹಕರಿಗೆ ನೀಡುತ್ತಿದ್ದ ಹಣವನ್ನು 433.66 ರೂ.ಗೆ ಇಳಿಸಲಾಗಿತ್ತು. ಬಳಿಕ ಡಿಸೆಂಬರ್ ತಿಂಗಳಿನಲ್ಲಿ 308.60 ರೂ.ಗೆ ಕಡಿತಗೊಳಿಸಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇನ್ನುಮುಂದೆ ಏರ್‌ಪೋರ್ಟ್‌ಗಳಲ್ಲಿ ಸ್ಥಳೀಯ ಭಾಷೆಯಲ್ಲೇ ಅನೌನ್ಸ್‌ಮೆಂಟ್‌

    ಇನ್ನುಮುಂದೆ ಏರ್‌ಪೋರ್ಟ್‌ಗಳಲ್ಲಿ ಸ್ಥಳೀಯ ಭಾಷೆಯಲ್ಲೇ ಅನೌನ್ಸ್‌ಮೆಂಟ್‌

    ನವದೆಹಲಿ: ದೇಶದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಸ್ಥಳೀಯ ಭಾಷೆಯಲ್ಲೇ ಮಾಹಿತಿ ಪ್ರಕಟಿಸುವಂತೆ ಕೇಂದ್ರ ಸರ್ಕಾರ ಆದೇಶ ನೀಡಿದೆ.

    ದೇಶದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಇಲ್ಲಿಯವರೆಗೂ ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ವಿಮಾನಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿತ್ತು. ಆದರೆ ಇನ್ನುಮುಂದಿನ ದಿನಗಳಲ್ಲಿ ಆಯಾ ಪ್ರದೇಶಗಳ ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಹೊರಡಿಸುವಂತೆ ಕೇಂದ್ರ ವಿಮಾನಯಾನ ಸಚಿವಾಲಯ ಆದೇಶ ನೀಡಿದೆ.

    ನಾಗರೀಕ ವಿಮಾನಯಾನ ಸಚಿವ ಸುರೇಶ್ ಪ್ರಭುರವರ ಸೂಚನೆಯನ್ವಯ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ(ಎಎಐ) ದೇಶದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳಿಗೆ ಈ ಬಗ್ಗೆ ಮಾಹಿತಿ ರವಾನಿಸಿದೆ. ಅಲ್ಲದೇ ನೂತನ ಆದೇಶವು ಸೈಲೆಂಟ್ ವಿಮಾನ ನಿಲ್ದಾಣಗಳಿಗೆ ಅನ್ವಯಿಸುವುದಿಲ್ಲವೆಂದು ತಿಳಿಸಿದೆ.

    ಶೀಘ್ರವೇ ವಿಮಾನ ಪ್ರಯಾಣ ಶುಲ್ಕ ಏರಿಕೆ ಸಾಧ್ಯತೆ?
    ವಿಮಾನ ಪ್ರಯಾಣ ಶುಲ್ಕವು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸದ್ಯ ಪ್ರಯಾಣಿಕ ಸೇವಾ ಶುಲ್ಕವನ್ನು(ಪಿಎಸ್‍ಎಫ್) 130 ರೂ.ನಿಂದ 170 ರೂ.ಗೆ ಏರಿಸಲು ಕೇಂದ್ರ ಸರ್ಕಾರ ಸಜ್ಜಾಗಿದ್ದು, ಸದ್ಯದಲ್ಲಿಯೇ ಜಾರಿಗೆ ಬರಲಿದೆ. ಭದ್ರತಾ ವ್ಯವಸ್ಥೆಗಳಿಗಾಗಿ ಶುಲ್ಕ ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಳಗಾವಿ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಚೆನ್ನಮ್ಮ, ರಾಯಣ್ಣ ಹೆಸರಿಡಲು ಸಿಎಂ ಶಿಫಾರಸು

    ಬೆಳಗಾವಿ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಚೆನ್ನಮ್ಮ, ರಾಯಣ್ಣ ಹೆಸರಿಡಲು ಸಿಎಂ ಶಿಫಾರಸು

    ಬೆಂಗಳೂರು: ರಾಜ್ಯದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲು ಕೇಂದ್ರ ವಿಮಾನಯಾನ ಇಲಾಖೆಗೆ ಸಿಎಂ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

    ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿರುವ ಸುರೇಶ್ ಪ್ರಭು ಅವರಿಗೆ ಪತ್ರ ಬರೆದಿರುವ ಸಿಎಂ ಕುಮಾರಸ್ವಾಮಿ ಅವರು, ಶಿಫಾರಸ್ಸು ಮಾಡಿರುವ ಹೆಸರು ನಾಮಕರಣ ಮಾಡಲು ಮನವಿ ಮಾಡಿದ್ದಾರೆ.

    ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಾಗಿ ನಾಡಿನ ಜನತೆಯ ಮನಸ್ಸಿನಲ್ಲಿ ಸ್ಥಾನ ಪಡೆದಿದ್ದು, ಆದ್ದರಿಂದ ಈ ಹೆಸರುಗಳನ್ನೇ ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಅಚಲ ನಿರ್ಧಾರ : ಉಮೇಶ್ ಕತ್ತಿ

    ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಅಚಲ ನಿರ್ಧಾರ : ಉಮೇಶ್ ಕತ್ತಿ

    ಬೆಳಗಾವಿ: ರಾಜ್ಯ ಸರ್ಕಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನೆಪ ಮಾತ್ರಕ್ಕೆ ಅಧಿವೇಶನ ನಡೆಸಿದ್ದು, ಉತ್ತರ ಕರ್ನಾಟಕ ಅಭಿವೃದ್ಧಿಗೆ ಯಾವುದೇ ಚರ್ಚೆ ನಡೆಸದೆ ಅನಗತ್ಯವಾಗಿ ಅಧಿವೇಶನ ನಡೆಸಿದ್ದಾರೆ. ಸಿಎಂ ಅವರಿಗೆ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ, ಆದ್ದರಿಂದ ನಾನು ಈಗಾಗಲು ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಅಚಲನಾಗಿದ್ದೇನೆ ಎಂದು ಬಿಜೆಪಿ ಮುಖಂಡ ಉಮೇಶ್ ಕತ್ತಿ ಸ್ಪಷ್ಟಪಡಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಉಮೇಶ್ ಕತ್ತಿ ಅವರು, ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಕಳೆದ 10 ವರ್ಷಗಳಿಂದ ಹೋರಾಟ ನಡೆಸುತ್ತಿದ್ದು, ಅಭಿವೃದ್ಧಿ ಮಾಡದಿದ್ದರೆ ಪ್ರತ್ಯೇಕ ರಾಜ್ಯ ಮಾಡಿ ಎಂದು ಹೇಳಿದ್ದೆ. ಈ ನಿರ್ಧಾರದಿಂದ ನಾನು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಅಭಿವೃದ್ಧಿ ಮಾಡಿಲ್ಲ, ಉತ್ತರ ಕರ್ನಾಟಕ ಪ್ರತ್ಯೇಕ ಮಾಡಿ ಎಂದು ಒತ್ತಾಯ ಮಾಡುತ್ತೇವೆ ಎಂದರು.

    ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಿರಿ: ರಾಜ್ಯದ ಉಸ್ತುವಾರಿ ವಹಿಸಿರುವ ಸಿಎಂ ಅವರಿಗೆ ಉತ್ತರ ಕರ್ನಾಟಕ ಅಗತ್ಯವಿಲ್ಲದಿದ್ದರೆ ದಯಾ ಮಾಡಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಿರಿ. ಆ ಮೂಲಕ ರಾಜ್ಯ ಇಬ್ಭಾಗ ಮಾಡುವ ಬಗ್ಗೆ ಸ್ಪಷ್ಟಪಡಿಸಿ. ಕಳೆದ ಐದು ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ಅವರ ಸರ್ಕಾರ ಹಾಗೂ ಹೊಸ ಸರ್ಕಾರವೂ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿಲ್ಲ. ಮಠಾಧೀಶರು ಕೂಡ ಅಭಿವೃದ್ಧಿ ಕುರಿತು ಒಳ್ಳೆ ಸಲಹೆ ಕೊಟ್ಟಿದ್ದರು ಅದರ ಬಗ್ಗೆ ಕೂಡ ಸಿಎಂ ಮಾತನಾಡಿಲ್ಲ. ರಾಜ್ಯ ರೈತರ ಸಾಲಮನ್ನಾ ಬಗ್ಗೆಯೂ ಸ್ಪಷ್ಟನೆ ಇಲ್ಲ ಆರೋಪಿಸಿದರು.

    ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸಕ್ಕರೆ ಕಾರ್ಖಾನೆಗಳು ಇದ್ದು, ಅಭಿವೃದ್ಧಿಯ ವಿಚಾರವಾಗಿ ಕೆಲ ಸರ್ಕಾರ ಇಲಾಖೆಯನ್ನು ಸುವರ್ಣ ಸೌಧಕ್ಕೆ ವರ್ಗಾವಣೆ ಮಾಡಲು ಮನವಿ ಮಾಡಲಾಗಿತ್ತು. ಆದರೆ ಇದು ಯಾವುದು ಆಗಿಲ್ಲ. ರಾಜ್ಯದಲ್ಲಿ ಸರ್ಕಾರವಿದ್ದರು ಸರಿಯಾದ ಅಭಿವೃದ್ಧಿ ಯೋಜನೆಗಳು ಜಾರಿ ಆಗುತ್ತಿಲ್ಲ. ಆದ್ದರಿಂದ ಮತ್ತೆ ಪ್ರತ್ಯೇಕ ಉತ್ತರ ಕರ್ನಾಟಕ ಬಗ್ಗೆ ಒತ್ತಾಯ ಮಾಡುತ್ತಿರುವುದಾಗಿ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಮಿಳುನಾಡು ವಿರೋಧದ ನಡುವೆಯೂ ಕರ್ನಾಟಕ ಪರ ಕೇಂದ್ರ ಬ್ಯಾಟಿಂಗ್

    ತಮಿಳುನಾಡು ವಿರೋಧದ ನಡುವೆಯೂ ಕರ್ನಾಟಕ ಪರ ಕೇಂದ್ರ ಬ್ಯಾಟಿಂಗ್

    ನವದೆಹಲಿ: ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಕರ್ನಾಟಕದ ಪರ ಬ್ಯಾಟ್ ಬಿಸಿದೆ.

    ಮೇಕೆದಾಟು ಅಣೆಕಟ್ಟು ನಿರ್ಮಾಣ ಸಂಬಂಧ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಜಲ ಆಯೋಗವು ಕರ್ನಾಟಕ ಸರಕಾರಕ್ಕೆ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಎಂದು ಕೇಂದ್ರ ಜಲಸಂಪನ್ಮೂಲ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ ಹೇಳಿದ್ದಾರೆ.

    ಸಂಸದರಾದ ಡಿ.ಕೆ. ಸುರೇಶ್ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವ ಮೇಘವಾಲ್, ಕುಡಿಯುವ ಹಾಗೂ ವಿದ್ಯುತ್ ಉತ್ಪಾದನೆ ಉದ್ದೇಶದ ಮೇಕೆದಾಟು ಅಣೆಕಟ್ಟೆ ಯೋಜನೆ ಸಂಬಂಧ ಕರ್ನಾಟಕ ಸರಕಾರವು ಸಾಧ್ಯತಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಿತ್ತು. ಇದನ್ನು ಪರಿಶೀಲಿಸಿ ಸಮಗ್ರ ಯೋಜನಾ ವರದಿ(ಡಿಪಿಆರ್) ಸಿದ್ಧಪಡಿಸಲು ಅವಕಾಶ ನೀಡುವಂತೆಯೂ ಮನವಿ ಮಾಡಿಕೊಂಡಿತ್ತು. ಕೇಂದ್ರ ಜಲ ಆಯೋಗದ ಪರಿಶೀಲನಾ ಸಮಿತಿಯು ಕರ್ನಾಟಕಕ್ಕೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.

    ಈ ಬೆಳವಣಿಗೆ ನಡುವೆ ಎಂದಿನಂತೆ ಇಂದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮೇಕೆದಾಟು ಆಣೆಕಟ್ಟು ವಿಚಾರ ಪ್ರತಿಧ್ವನಿಸಿತು. ಕಲಾಪ ಆರಂಭದಿಂದಲೂ ತಮಿಳುನಾಡಿದ ಸಂಸದರು ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡದಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

    ಲೋಕಸಭೆ ಮಾತನಾಡಿದ್ದ ತಮಿಳುನಾಡು ಸಂಸದ ಪಿ ವೇಣುಗೋಪಾಲ್ ಮೇಕೆದಾಟು ಯೋಜನೆ ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿ ನಿರ್ಮಿಸಲಾಗುತಿದೆ. ಮೇಕೆದಾಟು ಆಣೆಕಟ್ಟು ಕೇವಲ ಕುಡಿಯುವ ನೀರಿನ ದೃಷ್ಟಿಯಿಂದ ಮಾತ್ರವಲ್ಲ ಇದನ್ನು ನೀರಾವರಿಗೂ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದರಿಂದ ತಮಿಳುನಾಡು ರೈತರ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಿದರು. ತಮಿಳುನಾಡಿನ ಆರೋಪಕ್ಕೆ ಪ್ರತ್ಯತ್ತರ ನೀಡಿದ ಸಂಸದ ಪ್ರಹ್ಲಾದ್ ಜೋಶಿ ಎಲ್ಲ ಆರೋಪಗಳನ್ನು ನಿರಾಕರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv