Tag: Central Government

  • ಕೇಂದ್ರ ಸರ್ಕಾರ ಅವರಪ್ಪನ ಮನೆ ಆಸ್ತಿನಾ? – ಸಂಸದ ಅನಂತಕುಮಾರ್‌ ವಿರುದ್ಧ ಯತೀಂದ್ರ ಗುಡುಗು

    ಕೇಂದ್ರ ಸರ್ಕಾರ ಅವರಪ್ಪನ ಮನೆ ಆಸ್ತಿನಾ? – ಸಂಸದ ಅನಂತಕುಮಾರ್‌ ವಿರುದ್ಧ ಯತೀಂದ್ರ ಗುಡುಗು

    ಗದಗ: ಕೇಂದ್ರ ಸರ್ಕಾರ ಅವರಪ್ಪನ ಮನೆ ಆಸ್ತಿನಾ? ಕರ್ನಾಟಕ ಜನರು ಕಟ್ಟಿದ ತೆರಿಗೆ ಹಣ ಅದು ಎಂದು ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ (Yathindra Siddaramaiah), ಸಂಸದ ಅನಂತಕುಮಾರ್‌ ಹೆಗಡೆ ವಿರುದ್ಧ ಗುಡುಗಿದ್ದಾರೆ.

    ʻಕೇಂದ್ರ ಸರ್ಕಾರದ ಹಣ ಅವರಪ್ಪನ ಮನೆ ಆಸ್ತೀನಾ?ʼ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ವಾಗ್ದಾಳಿ ನಡೆಸಿದ್ದ ಸಂಸದ ಅನಂತಕುಮಾರ್‌ ಹೆಗಡೆ (AnanthKumar Hegde) ವಿರುದ್ಧ ಯತೀಂದ್ರ ಹರಿಹಾಯ್ದಿದ್ದಾರೆ. ಕರ್ನಾಟಕದ ಜನರು ಕಟ್ಟಿದ ತೆರಿಗೆ ಹಣ ಅದು, ಕೇಂದ್ರ ಸರ್ಕಾರ ಎಲ್ಲರಿಗೂ‌ ನ್ಯಾಯವಾಗಿ ಹಂಚಿಕೆ ಮಾಡಲಿ ಅಂತ ಕೇಳ್ತಿದ್ದೇವೆ. ಹಿಂದುಳಿದ ರಾಜ್ಯಗಳಿಗೆ ಹೆಚ್ಚಿನ ಅನುದಾನ ಕೊಡಿ, ನಾವು ಬೇಡ ಅನ್ನೊದಿಲ್ಲ. ಆದ್ರೆ ನಮಗೆ ಅನ್ಯಾಯ ಆಗ್ತಿದೆ, ಅದನ್ನ ಸರಿಪಡಿಸಿಕೊಡಿ. ನಾವು 1 ರೂಪಾಯಿ ಕೊಟ್ರೆ, ನಮಗೆ 12 ಅಥವಾ 13 ಪೈಸೆ ಅಷ್ಟೇ ಬರ್ತಿದೆ, 25 ಪೈಸೆಯನ್ನಾದ್ರೂ ಕೊಡಿ ಅಂತ ಕೇಳ್ತಿದ್ದೇವೆ ಅಂತ ಹೇಳಿದ್ದಾರೆ.

    ಅಲ್ಲದೇ ಹಿಂದೂ ದೇವಾಲಯಗಳ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಅಂತಾ ಸುಳ್ಳು ಆರೋಪ ಮಾಡ್ತಿದ್ದಾರೆ. ಅದು ಫೇಕ್ ನ್ಯೂಸ್ ಅಂತ ಸರ್ಕಾರ ಸ್ಪಷ್ಟೀಕರಣ ಕೊಟ್ಟಿದೆ. ಸಚಿವ ರಾಮಲಿಂಗಾರೆಡ್ಡಿ ಅವರು ಫೇಸ್ಬುಕ್, ಎಕ್ಸ್‌ ಖಾತೆಗಳಲ್ಲಿ ಈ ಬಗ್ಗೆ ಸಂದೇಶ ಹಂಚಿಕೊಂಡಿದ್ದಾರೆ. ದೇವಾಲಯಗಳ ಹಣ ದೇವಾಲಯಗಳಿಗೇ ಉಪಯೋಗಿಸುತ್ತೇವೆ. ಬೇರೆ ಯಾವ ಸಂಸ್ಥೆಗೆ ಉಪಯೋಗಿಸುವುದಿಲ್ಲ ಅಂತ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಆದ್ರೂ ಬಿಜೆಪಿಯವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಅಂತಹವರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಅಂತ ಆಗ್ರಹಿಸಿದ್ದಾರೆ. ದನ್ನೂ ಓದಿ: ಇತರರ ಗ್ಯಾರಂಟಿಗಳು ಎಲ್ಲಿ ಕೊನೆಗೊಳ್ಳುತ್ತೆ, ಅಲ್ಲಿಂದ ಮೋದಿ ಗ್ಯಾರಂಟಿ ಆರಂಭವಾಗುತ್ತೆ: ಪ್ರಧಾನಿ ಅಭಯ

    ವಿಧಾನ ಪರಿಷತ್ ನಲ್ಲಿ ಬಹುಮತ ಇರಲಿಲ್ಲ. ಹಾಗಾಗಿ ಧಾರ್ಮಿಕ ತಿದ್ದುಪಡಿ ಮಸೂದೆ ಅಂಗೀಕಾರ ಆಗಲಿಲ್ಲ. ಸಿ-ದರ್ಜೆ ದೇವಾಲಯಗಳಿಗೆ ಹೆಚ್ಚಿನ ಹಣ ಬರಬೇಕು. ಯಾವ ದೇವಸ್ಥಾನದಲ್ಲಿ ಆದಾಯ ಹೆಚ್ಚಿರುತ್ತೋ ಆ ದೇವಾಲಯಗಳ ಹಣ ಸಿ-ದರ್ಜೆಯ ದೇವಾಲಯಗಳಿಗೆ ಬಳಕೆ ಮಾಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿತ್ತು. ತಮ್ಮ ರಾಜಕೀಯಕ್ಕೋಸ್ಕರ ನಿಜವಾಗಿಯೂ ಹಿಂದೂಗಳಿಗೆ ನೋವುಂಟು ಮಾಡ್ತಿರೋದು ಬಿಜೆಪಿ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಈಗ ನಡೆಯುವುದು ಗ್ಯಾರಂಟಿ ಬೇಕಾ? ಬೇಡವಾ? ಎನ್ನುವ ಚುನಾವಣೆ: ಹೆಚ್.ಸಿ.ಬಾಲಕೃಷ್ಣ

    ಇನ್ನೂ ಮೈಸೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ಸಿಗುತ್ತಾ ಅನ್ನೋ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಮೈಸೂರು ಕ್ಷೇತ್ರದಿಂದ ಟಿಕೆಟ್‌ ಕೊಡಿ ಅಂತ ಕೇಳಿಕೊಂಡಿಲ್ಲ. ಲೋಕಸಭಾ ಆಕಾಂಕ್ಷಿ ನಾನಲ್ಲ, ಮೈಸೂರಿಗೆ ಯಾರು ಸೂಕ್ತ ಅಭ್ಯರ್ಥಿ ಅಂತ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಹೇಳಿದ್ದಾರೆ.

  • ನಡು ರಸ್ತೆಯಲ್ಲಿ ನೂರಾರು ಕಾಂಡೋಮ್‌ ಬಾಕ್ಸ್‌ಗಳು ಪತ್ತೆ!

    ನಡು ರಸ್ತೆಯಲ್ಲಿ ನೂರಾರು ಕಾಂಡೋಮ್‌ ಬಾಕ್ಸ್‌ಗಳು ಪತ್ತೆ!

    -ಸರ್ಕಾರಿ ಆಸ್ಪತ್ರೆಗಳಿಗೆ ವಿತರಣೆಯಾಗಬೇಕಿದ್ದ ಕಾಂಡೋಮ್ ಬಾಕ್ಸ್‌

    ಯಾದಗಿರಿ: ಕೇಂದ್ರ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳಿಗೆ (Government Hospitals) ವಿತರಣೆಯಾಗಬೇಕಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ನೂರಾರು ಕಾಂಡೋಮ್‌ ಬಾಕ್ಸ್‌ಗಳು (Condom Box) ಪತ್ತೆಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಖಾನಾಪುರ ಸಮೀಪದಲ್ಲಿ ನಡೆದಿದೆ.

    ನೂರಾರು ನಿರೋಧ್‌ (ಕಾಂಡೋಮ್) ಬಾಕ್ಸ್‌ಗಳು ಖಾನಾಪುರ ಸಮೀಪದ ಇಬ್ರಾಹಿಂಪುರ ಕ್ರಾಸ್ ಮುಖ್ಯರಸ್ತೆಯಲ್ಲಿ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳೇ (Health Officers) ಬೇಕಾಬಿಟ್ಟಿಯಾಗಿ ರಸ್ತೆ ಬದಿ ಇಳಿಸಿ ಹೋದ್ರಾ ಅನ್ನೋ ಸಂಶಯವೂ ವ್ಯಕ್ತವಾಗಿದೆ. ಇದನ್ನೂ ಓದಿ: ಕುವೆಂಪು ಘೋಷವಾಕ್ಯ ತೆಗೆದುಹಾಕಲು ಸರ್ಕಾರ ಆದೇಶಿಸಿಲ್ಲ: ಸಚಿವ ಮಹದೇವಪ್ಪ

    ಬಾಕ್ಸ್‌ಗಳಲ್ಲಿ ತುಂಬಿದ ಕಾಂಡೋಮ್‌ ಸರ್ಕಾರಿ ಆಸ್ಪತ್ರೆಗೆ ಪೂರೈಕೆ ಆಗಬೇಕಿತ್ತು. 2026ರ ವರೆಗೆ ಅವಧಿ ಇರೋದು ಬಾಕ್ಸ್‌ ಮೇಲೆ ನಮೂದಾಗಿದೆ. ಆದ್ರೆ ಏಕಾಏಕಿ ಇಷ್ಟೊಂದು ಬಾಕ್ಸ್‌ಗಳನ್ನ ರಸ್ತೆ ಮಧ್ಯೆ ಇಳಿಸಿ ಹೋಗಿದ್ದು ಯಾರು ಅನ್ನೋದು ಪತ್ತೆಯಾಗಿಲ್ಲ.

    ಇಷ್ಟೊಂದು ಬಾಕ್ಸ್‌ಗಳು ಎಲ್ಲಿಂದ ತಂದಿದ್ದು? ಯಾವ ಆಸ್ಪತ್ರೆಗಳಿಗೆ ವಿತರಣೆಯಾಗಬೇಕು ಅನ್ನೋದರ ಬಗ್ಗೆ ಇನ್ನಷ್ಟೇ ತನಿಖೆಯಾಗಬೇಕಿದೆ. ಇದನ್ನೂ ಓದಿ: ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲು; ಅಧಿಕಾರಿಯ ವಿರುದ್ಧ ಕ್ರಮ ವಹಿಸಿ: ಅಶೋಕ್ ಒತ್ತಾಯ

  • ದಾವಣಗೆರೆಯಲ್ಲಿ ಡಿ.ಕೆ ಸುರೇಶ್ ವಿರುದ್ಧ ಬಿಜೆಪಿ ದೂರು – ಕಾನೂನು ಕ್ರಮಕ್ಕೆ ಆಗ್ರಹ

    ದಾವಣಗೆರೆಯಲ್ಲಿ ಡಿ.ಕೆ ಸುರೇಶ್ ವಿರುದ್ಧ ಬಿಜೆಪಿ ದೂರು – ಕಾನೂನು ಕ್ರಮಕ್ಕೆ ಆಗ್ರಹ

    ದಾವಣಗೆರೆ: ಕೇಂದ್ರ ಸರ್ಕಾರದ (Central Governmen) ಮಧ್ಯಂತರ ಬಜೆಟ್‌ ವಿರುದ್ಧ ಅಸಮಾಧಾನ ಹೊರಹಾಕುವ ವೇಳೆ ಸಂಸದ ಡಿ.ಕೆ ಸುರೇಶ್‌ (DK Suresh) ಪ್ರತ್ಯೇಕ ರಾಷ್ಟ್ರದ ಬಗ್ಗೆ ದನಿ ಎತ್ತಿದ್ದರು. ಈ ಹೇಳಿಕೆಯನ್ನು ವಿರೋಧಿಸಿ ದಾವಣಗೆರೆ ಜಿಲ್ಲಾ ಬಿಜೆಪಿ ಯುವಮೋರ್ಚಾ ಘಟಕ ದೂರು ನೀಡಿದೆ.

    ಸಂಸದ ಡಿ.ಕೆ ಸುರೇಶ್‌ ಅವರ ಹೇಳಿಕೆಯಿಂದ ದೇಶದ ಗೌರವಕ್ಕೆ ಮತ್ತು ಜನರ ಭಾವನೆಗಳಿಗೆ ಧಕ್ಕೆಯಾಗಿದೆ. ಇದು ಅಸಾಂವಿಧಾನಿಕ ಹೇಳಿಕೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಮೂಲಕ ಎಸ್ಪಿ ಅವರಿಗೆ ಬಿಜೆಪಿ ಘಟಕ ದೂರು ನೀಡಿದೆ. ಮಹಾನಗರ ಪಾಲಿಕೆಯ ಸದಸ್ಯ ಶಿವಪ್ರಕಾಶ ನೇತೃತ್ವದಲ್ಲಿ ದೂರು ನೀಡಲಾಗಿದೆ.

    ಡಿ.ಕೆ ಸುರೇಶ್‌ ಹೇಳಿದ್ದೇನು?
    ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ನಲ್ಲಿ ಹೊಸತೇನು ಇಲ್ಲ. ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿದೆ. ಹೀಗೆ ಅನ್ಯಾಯ ಆದ್ರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಸಂಸದ ಡಿಕೆ ಸುರೇಶ್‌ ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: Loksabha Election: ಮಾಧುಸ್ವಾಮಿ ಬಳಿಕ ಮತ್ತೊಬ್ಬರಿಂದ ಸೋಮಣ್ಣ ಸ್ಪರ್ಧೆಗೆ ವಿರೋಧ!

    ಕೇಂದ್ರದವರು ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದಂಥವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ಸಂಸದರು ಗರಂ ಆಗಿದ್ದರು. ಇದನ್ನೂ ಓದಿ: ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಫುಲ್ ಆಕ್ಟೀವ್- ದಿಶಾ ಸಭೆಯಲ್ಲಿ ಸಂಸದ ಕ್ಷಮೆ

    ಹೊಸ ಪದಗಳನ್ನು ಬಳಸಿ, ಹೊಸ ಹೆಸರಿಟ್ಟು ಒಂದಷ್ಟು ಯೋಜನೆ ಘೋಷಿಸಿದ್ದಾರೆ. ನಮಗೆ ಬರಬೇಕಾದ ಹಣವೇ ಸರಿಯಾಗಿ ಬರುತ್ತಿಲ್ಲ. ಇನ್ನೂ 75,000 ಕೋಟಿ ಬಡ್ಡಿ ರಹಿತ ಸಾಲ ಕೊಡುವ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಜೆಟ್‌ನಲ್ಲಿ ನಾಮಫಲಕ ಮಾತ್ರ ಬದಲಾಯಿಸಲಾಗಿದೆ. ಬೇರೆ ಬೇರೆ ದೇಸಿ ಹೆಸರುಗಳನ್ನ ಇಡಲಾಗಿದೆ. ಆರ್ಥಿಕ ಸಮೀಕ್ಷೆ ಅವರು ಇಟ್ಟಿದ್ದಿದ್ರೆ ಇವರ ಪರಿಸ್ಥಿತಿ ಏನಾಗುತ್ತಿತ್ತು? ಯಾವ ರೀತಿ ದೇಶ ಕಳೆದ ಸಾಲಿನಲ್ಲಿ ಸಾಧನೆಯನ್ನು ಸಾಧಿಸಿದೆ ಅನ್ನೋ ಅನುಮಾನಗಳು ಪ್ರಾರಂಭವಾಗಿದೆ. ಚುನಾವಣೆಗೆ ಸಂಬಂಧಪಟ್ಟಂತೆ ಒಂದಷ್ಟು ಘೋಷಣೆಗಳು, ಒಂದಷ್ಟು ಹೇಳಿಕೆಗಳನ್ನು ಕೂಡಿರುವ ಬಜೆಟ್‌ ಇದಾಗಿದೆ ಎಂದು ವಾಗ್ದಾಳಿ ನಡೆಸಿದ್ದರು.

  • ರೋಗಿ, ಕುಟುಂಬಸ್ಥರು ಒಪ್ಪದಿದ್ದರೆ ICUಗೆ ದಾಖಲಿಸುವಂತಿಲ್ಲ- ಕೇಂದ್ರದಿಂದ ಆಸ್ಪತ್ರೆಗಳಿಗೆ ಹೊಸ ರೂಲ್ಸ್‌

    ರೋಗಿ, ಕುಟುಂಬಸ್ಥರು ಒಪ್ಪದಿದ್ದರೆ ICUಗೆ ದಾಖಲಿಸುವಂತಿಲ್ಲ- ಕೇಂದ್ರದಿಂದ ಆಸ್ಪತ್ರೆಗಳಿಗೆ ಹೊಸ ರೂಲ್ಸ್‌

    ನವದೆಹಲಿ: ಆಸ್ಪತ್ರೆಗಳಲ್ಲಿ ರೋಗಿಗಳನ್ನು ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸುವ ಕುರಿತು ಕೇಂದ್ರ ಸರ್ಕಾರವು (Central Government) ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

    ಸಾಮಾನ್ಯವಾಗಿ ರೋಗಿಯ ಸ್ಥಿತಿ ಗಂಭಿರ ಇದ್ದರೆ ವೈದ್ಯರು ಐಸಿಯುನಲಿ ಚಿಕಿತ್ಸೆ ಕೊಡಿಸುತ್ತಾರೆ. ಆದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯಲ್ಲಿ ಇನ್ನು ಮುಂದೆ ಈ ರೀತಿ ಮಾಡುವಂತಿಲ್ಲ. ರೋಗಿ ಅಥವಾ ಆತನ ಕುಟುಂಬಸ್ಥರು ಒಪ್ಪಿಗೆ ನೀಡಿದರೆ ಮಾತ್ರ ಆತನಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಬಹುದಾಗಿದೆ. ಬಲವಂತವಾಗಿ ಯಾವುದೇ ರೋಗಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುವಂತಿಲ್ಲ.

    ಕೇಂದ್ರದ ಆರೋಗ್ಯ ಸಚಿವಾಲಯ ಹೊರಡಿಸಿರುವ ಈ ಮಾರ್ಗಸೂಚಿಗಳನ್ನು 24 ಮಂದಿ ತಜ್ಞರು ಚರ್ಚಿಸಿ ಬಿಡುಗಡೆ ಮಾಡಿದ್ದಾರೆ. ರೋಗಿಗೆ ಹೆಚ್ಚಿನ ಚಿಕಿತ್ಸೆ ಪ್ರಯೋಜನವಿಲ್ಲದಿದ್ದಲ್ಲಿ ಅಥವಾ ಯಾವುದೇ ಚಿಕಿತ್ಸೆಯಿಂದ ರೋಗಿಯ ಆರೋಗ್ಯದಲ್ಲಿ ಚೇತರಿಕೆ ಕಾಣಲು ಸಾಧ್ಯವಾಗದಿದ್ದಲ್ಲಿ ಆತ ಅಥವಾ ಆಕೆಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸುವುದು ವ್ಯರ್ಥ ಎಂದು ಹೇಳಲಾಗಿದೆ.

    ಸಾಂಕ್ರಾಮಿಕ ರೋಗಗಳು, ವಿಪತ್ತು ಸಂದರ್ಭಗಳಲ್ಲಿ ರೋಗಿಯನ್ನು ಐಸಿಯುಗೆ ದಾಖಲಿಸಬಹುದು. ರೋಗಿಯ ಅಂಗಾಂಗ ವೈಫಲ್ಯ, ಅಂಗಾಂಗ ಕಸಿ ಅಥವಾ ಹದಗೆಡುತ್ತಿರುವ ವೈದ್ಯಕೀಯ ಸ್ಥಿತಿಯನ್ನು ಅವಲೋಕಿಸಿ ಐಸಿಯುಗೆ ಪ್ರವೇಶ ನೀಡಬೇಕು. ಅಲ್ಲದೆ ರೋಗಿಯ ಪ್ರಜ್ಞಾಹೀನತೆ, ಹೆಮೊಡೈನಮಿಕ್ ಅಸ್ಥಿರತೆ, ಉಸಿರಾಟದ ಸಮಸ್ಯೆ ಹೀಗೆ ತೀವ್ರವಾಗಿ ಅನಾರೋಗ್ಯ ಪೀಡಿತರಾಗಿದ್ದರೆ ಮಾತ್ರ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಬಹುದು ಎಂದು ರೂಲ್ಸ್‌ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ನಾನು ಸತ್ತೇ ಹೋದೆ ಅಂದ್ಕೊಂಡೆ – ಅವಘಡಕ್ಕೀಡಾದ ವಿಮಾನದೊಳಗಿದ್ದ ಪ್ರಯಾಣಿಕ

    ಒಟ್ಟಾರೆಯಾಗಿ ರೋಗಿಯ ಸಂಬಂಧಿಕರು ಐಸಿಯುನಲ್ಲಿ ಚಿಕಿತ್ಸೆ ಬೇಡ ಎಂದು ಹೇಳಿದರೆ ಅಂತಹ ರೋಗಿಗಳನ್ನು ಐಸಿಯುಗೆ ದಾಖಲಿಸಿಕೊಳ್ಳುವಂತಿಲ್ಲ. ಇನ್ನು ಮಾರ್ಗಸೂಚಿ ಪ್ರಕಾರ, ಐಸಿಯುಗೆ ಸೇರಿಸುವ ಮೊದಲು ರಕ್ತದೊತ್ತಡ, ನಾಡಿ ಬಡಿತ, ಹೃದಯ ಬಡಿತ, ಆಮ್ಲಜನಕ ಹೀರಿಕೊಳ್ಳುವ ಸಾಮರ್ಥ್ಯ, ಮೂತ್ರ ವಿಸರ್ಜನೆಯ ಪ್ರಮಾಣ, ನರದ ಸ್ಥಿತಿಗತಿ ಮೊದಲಾದವುಗಳ ಪರಿಶೀಲನೆಯ ಬಳಿಕವೇ ರೋಗಿಯನ್ನು ಐಸಿಯುಗೆ ದಾಖಲಿಸಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

  • ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಸಲಿಂಗಕಾಮ, ವ್ಯಭಿಚಾರ ಸೇರಿಸುವ ಶಿಫಾರಸಿಗೆ ಕೇಂದ್ರ ಕ್ಯಾಬಿನೆಟ್‌ ಅಸಮ್ಮತಿ

    ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಸಲಿಂಗಕಾಮ, ವ್ಯಭಿಚಾರ ಸೇರಿಸುವ ಶಿಫಾರಸಿಗೆ ಕೇಂದ್ರ ಕ್ಯಾಬಿನೆಟ್‌ ಅಸಮ್ಮತಿ

    ನವದೆಹಲಿ: ಹಳೆಯ ವಸಾಹತುಶಾಹಿ ಪೂರ್ವ ಕ್ರಿಮಿನಲ್ ಕಾನೂನುಗಳನ್ನು ( New Criminal Law) ಬದಲಿಸಲು ಸಿದ್ಧವಾಗಿರುವ ಕ್ರಿಮಿನಲ್ ಕಾನೂನು ತಿದ್ದುಪಡಿ ಮಸೂದೆಗಳನ್ನು ಮಂಡಿಸಲು ಕೇಂದ್ರ ಸಂಪುಟವು ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ. ಆದ್ರೆ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಶಿಫಾರಸು ಮಾಡಿದ 2 ಸಲಹೆಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi), ಅವರ ಕಚೇರಿ (PMO) ಹಾಗೂ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನಿರಾಕರಿಸಿದೆ.

    ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಸಲಿಂಗಕಾಮಿ ಸಂಬಂಧಗಳು ಮತ್ತು ವ್ಯಭಿಚಾರ (Adultery) ಸೇರಿಸುವ ಸಮಿತಿ ಶಿಫಾರಸಿಗೆ ಅಸಮ್ಮತಿ ಸೂಚಿಸಿದೆ. ಏಕೆಂದರೆ ಸಂಸದೀಯ ಸ್ಥಾಯಿ ಸಮಿತಿ ಶಿಫಾರಸು ಮಾಡಿದ ಎರಡೂ ಕಾನೂನು ಸಲಹೆಗಳು ದೂರಗಾಮಿ ಪರಿಣಾಮ ಉಂಟು ಮಾಡಲಿದೆ. ಜೊತೆಗೆ ಸುಪ್ರೀಂ ಕೋರ್ಟ್‌ಗೆ (Supreme Court) ಮತ್ತು ಅದರ ತೀರ್ಪುಗಳಿಗೆ ವಿರುದ್ಧವಾಗಿವೆ ಎಂಬ ಕಾರಣಕ್ಕಾಗಿ ಒಪ್ಪಿಗೆ ನಿರಾಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಈ ಎರಡು ಸಲಹೆಗಳ ಪೈಕಿ ಒಂದು ವ್ಯಭಿಚಾರದ ಅಪರಾಧಕ್ಕೆ ಸಂಬಂಧಿಸಿದ್ದಾಗಿದ್ದರೆ, ಇನ್ನೊಂದು ಸಲಿಂಗ ಕಾಮ ಅಪರಾಧ ಎಂದು ಪರಿಣಿಸುವುದಾಗಿದೆ. 2023ರ ಭಾರತೀಯ ನ್ಯಾಯ ಸಂಹಿತಾ ಮಸೂದೆಯಲ್ಲಿ ವ್ಯಭಿಚಾರದ ಅಪರಾಧವನ್ನು ಉಳಿಸಿಕೊಳ್ಳಬೇಕೆಂದು ಸಮಿತಿಯು ಶಿಫಾರಸು ಮಾಡಿತ್ತು. ಆದ್ರೆ 2018 ರಲ್ಲಿ ಸುಪ್ರೀಂ ಕೋರ್ಟ್ ವ್ಯಭಿಚಾರವನ್ನು ಅಪರಾಧವೆಂದು ಪರಿಗಣಿಸುವುದನ್ನ ತಳ್ಳಿಹಾಕಿದೆ, ಇದು ಮಹಿಳೆಯರ ವಿರುದ್ಧದ ತಾರತಮ್ಯಕ್ಕೆ ಎಡೆಮಾಡಿಕೊಡುತ್ತದೆ. ಮಾತ್ರವಲ್ಲದೇ ಮಹಿಳೆಯರ ಘನತೆಯನ್ನು ಕುಗ್ಗಿಸುತ್ತದೆ ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ನವರು ನೀರಿನಿಂದ ತೆಗೆದ ಮೀನಿನ ರೀತಿ ಒದ್ದಾಡುತ್ತಿದ್ದಾರೆ: ಸಿದ್ದರಾಮಯ್ಯ

    ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 377ರ ಅಡಿಯಲ್ಲಿ ಒಮ್ಮತವಿಲ್ಲದ ಕಾರ್ಯಗಳಿಗೆ ದಂಡ ವಿಧಿಸುವುದು ಸ್ಥಾಯಿ ಸಮಿತಿಯ ಮತ್ತೊಂದು ಶಿಫಾರಸು ಆಗಿದೆ. ವಯಸ್ಕರ ನಡುವಿನ ಒಪ್ಪಿತ ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವುದನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದರೂ ಹೊಸ ಮಸೂದೆಯಲ್ಲಿ ಈ ನಿಬಂಧನೆಯನ್ನು ಉಳಿಸಿಕೊಳ್ಳಲು ಸ್ಥಾಯಿ ಸಮಿತಿ ಸಲಹೆ ನೀಡಿತ್ತು. ಪುರುಷ, ಮಹಿಳೆ, ತೃತೀಯಲಿಂಗಿ ಮತ್ತು ಪ್ರಾಣಿಗಳ ವಿರುದ್ಧ ಸಮ್ಮತಿಯಿಲ್ಲದ ಲೈಂಗಿಕ ಅಪರಾಧಕ್ಕೆ ಯಾವುದೇ ನಿಬಂಧನೆ ಇಲ್ಲ ಎಂದು ಸಮಿತಿ ಹೇಳಿತ್ತು. ಆದರೆ, ಈ ಎರಡೂ ಶಿಫಾರಸುಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಪ್ರಧಾನಿ, ಅವರ ಕಚೇರಿ (ಪಿಎಂಒ) ಮತ್ತು ಕೇಂದ್ರ ಸಂಪುಟ ತಿಳಿಸಿದೆ.

    ವ್ಯಭಿಚಾರದ ಅಪರಾಧದಲ್ಲಿ, ಮಹಿಳೆಯ ಸ್ವಾಯತ್ತತೆಯನ್ನು ಕಡೆಗಣಿಸಿ ಪುರುಷನಿಗೆ ಮಾತ್ರ ದಂಡ ವಿಧಿಸುವ ಮೂಲಕ ಹೆಂಡತಿಯನ್ನು ಗಂಡನ ಆಸ್ತಿಯಂತೆ ಪರಿಗಣಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಮದುವೆಯನ್ನು ಪವಿತ್ರವೆಂದು ಪರಿಗಣಿಸಲಾಗಿದ್ದು, ಭಾರತೀಯ ಸಮಾಜದಲ್ಲಿ ಇದನ್ನು ರಕ್ಷಿಸಬೇಕು. ಅಲ್ಲದೆ, ಲಿಂಗ-ತಟಸ್ಥಗೊಳಿಸಬೇಕು ಎಂದು ಸಂಸದೀಯ ಸಮಿತಿಯು ಅಭಿಪ್ರಾಯಪಟ್ಟಿದೆ. ಈ ಶಿಫಾರಸಿಗೆ ಒಪ್ಪಿಗೆ ಸೂಚಿಸದಿರಲು ಪಿಎಂಒ, ಪ್ರಧಾನಿ ಮತ್ತು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಧ್ಯಪ್ರದೇಶ ಸಿಎಂ ಹುದ್ದೆಗೆ ಮೋಹನ್ ಯಾದವ್ ಅಚ್ಚರಿ ಆಯ್ಕೆ – ಇಬ್ಬರಿಗೆ ಡಿಸಿಎಂ ಸ್ಥಾನ

    ಸಂಘಟಿತ ಅಪರಾಧ ಮತ್ತು ಭಯೋತ್ಪಾದನೆಯ ವ್ಯಾಖ್ಯಾನವನ್ನು 21ನೇ ಶತಮಾನಕ್ಕೆ ಅನುಗುಣವಾಗಿ ಇರುವಂತೆ ಮಾಡಲು ಕೆಲವು ಬದಲಾವಣೆಗಳನ್ನು ಮಸೂದೆಯಲ್ಲಿ ಮಾಡಲಾಗಿದೆ. ಈ ಮೂರು ಮಸೂದೆಗಳನ್ನು ರಾಜ್ಯಸಭೆಯಲ್ಲಿ ಬುಧವಾರ ಮಂಡಿಸಿ, ಮುಂದಿನ ವಾರದಲ್ಲಿ ಅಂಗೀಕರಿಸುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Article 370 Verdict: ಸುಪ್ರೀಂ ಆದೇಶವನ್ನು ಗೌರವಯುತವಾಗಿ ಒಪ್ಪುವುದಿಲ್ಲ: ಪಿ ಚಿದಂಬರಂ

  • ಚುನಾವಣಾ ಬಾಂಡ್‌ಗಳ ಕೊಡುಗೆ ಆಡಳಿತ ಪಕ್ಷಕ್ಕೆ ಹೆಚ್ಚು – ಸುಪ್ರೀಂಗೆ ಕೇಂದ್ರ ಹೇಳಿಕೆ

    ನವದೆಹಲಿ: ಚುನಾವಣಾ ಬಾಂಡ್‌ಗಳ (Electoral Bond) ಮೂಲಕ ಆಡಳಿತದಲ್ಲಿರುವ ರಾಜಕೀಯ ಪಕ್ಷಕ್ಕೆ (Political Parties) ಹೆಚ್ಚಿನ ಕೊಡುಗೆ ಹೋಗುವುದು ರೂಢಿಯಾಗಿದೆ ಎಂದು ಕೇಂದ್ರ ಸರ್ಕಾರ (Central Government) ಹೇಳಿದೆ. ಈ ಮೂಲಕ ಅದು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಸರ್ಕಾರದ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಸಮರ್ಥಿಸಿಕೊಂಡಿದೆ.

    ಕಳೆದ ಮಂಗಳವಾರದಿಂದ ಚುನಾವಣಾ ಬಾಂಡ್‌ಗಳ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ಸಿಜೆಐ ಡಿ.ವೈ ಚಂದ್ರಚೂಡ್ (DY Chandrachud) ನೇತೃತ್ವದ ಸಾಂವಿಧಾನಿಕ ಪೀಠ ವಿಚಾರಣೆ ನಡೆಸುತ್ತಿದೆ. ಗುರುವಾರದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ (Tushar Mehta) ವಾದ ಮಂಡಿಸಿದರು. ಇದನ್ನೂ ಓದಿ: Breaking: ಲಂಚ ಪಡೆಯುವಾಗಲೇ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ED ಅಧಿಕಾರಿಗಳು ಅರೆಸ್ಟ್‌

    ಈ ಯೋಜನೆಯಲ್ಲಿ ಹಸ್ತಕ್ಷೇಪ ಮಾಡುವುದರಿಂದ ಈ ಕ್ಷೇತ್ರದಲ್ಲಿ ಸಾಧಿಸಿದ ಪ್ರಗತಿಗೆ ಹಿನ್ನಡೆಯಾಗಬಹುದು. ಯೋಜನೆಯನ್ನು ರದ್ದುಗೊಳಿಸಿದರೆ ಸಂಭವನೀಯ ಪರಿಣಾಮಗಳ ಬಗ್ಗೆ ಸಾಲಿಸಿಟರ್ ಜನರಲ್ ಕಳವಳವನ್ನು ವ್ಯಕ್ತಪಡಿಸಿದರು. ಎಡಿಆರ್ ವರದಿಯಲ್ಲಿನ ಅಂಕಿ ಅಂಶಗಳನ್ನು ರಾಜಕೀಯ ಪಕ್ಷಗಳು ಸ್ವಯಂಪ್ರೇರಿತವಾಗಿ ಬಹಿರಂಗಪಡಿಸಿವೆ, ಆದರೆ ಎಲ್ಲವನ್ನೂ ಘೋಷಿಸಲಾಗಿಲ್ಲ ಎಂದು ಒಪ್ಪಿಕೊಂಡರು. ಇದನ್ನೂ ಓದಿ: 7ನೇ ತರಗತಿ ವಿದ್ಯಾರ್ಥಿಯಿಂದ ಕೇರಳ ಸಿಎಂಗೆ ಬೆದರಿಕೆ ಕರೆ

    ಈ ಯೋಜನೆಯು ಪ್ರಾಥಮಿಕವಾಗಿ ಆಡಳಿತ ಪಕ್ಷಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಅರ್ಜಿದಾರರು ಮಾಡಿದ ವಾದಗಳನ್ನು ಉದ್ದೇಶಿಸಿ ವಾದಿಸಿದ ಮೆಹ್ತಾ, ಈ ಪ್ರವೃತ್ತಿಯು ಸ್ಥಿರವಾಗಿದೆ ಎಂದು ಪ್ರತಿಪಾದಿಸಿದರು. ಆಡಳಿತ ಪಕ್ಷಕ್ಕೆ ಹೆಚ್ಚಿನ ಕೊಡುಗೆಗಳು ಹೋಗುವುದು ರೂಢಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಾಜಕೀಯ ಪ್ರೇರಿತವಾಗಿ ನೀಡಿರುವ ನೋಟಿಸ್‌ ಹಿಂಪಡೆಯಿರಿ: EDಗೆ ಕೇಜ್ರಿವಾಲ್‌ ಪ್ರತಿಕ್ರಿಯೆ

    ವಿಚಾರಣೆ ಅವಧಿಯಲ್ಲಿ ಮಾರ್ಚ್ 2023 ರವರೆಗೆ ರಾಜಕೀಯ ಪಕ್ಷಗಳಿಗೆ ದೇಣಿಗೆಗಳ ಡೇಟಾವನ್ನು ಪ್ರಸ್ತುತಪಡಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ. ನಾವು ಮಾರ್ಚ್ 2023 ರವರೆಗೆ ಡೇಟಾವನ್ನು ಬಯಸುತ್ತೇವೆ ಎಂದು ಪೀಠ ಹೇಳಿತು. ನಾವು ಒಂದು ದಿನ ಮುಂಚೆಯೇ ಅದನ್ನು ಸ್ಪಷ್ಟಪಡಿಸಿದ್ದೇವೆ. ನೀವು ನವೀಕರಿಸಿದ ಡೇಟಾದೊಂದಿಗೆ ಬರಬೇಕಿತ್ತು. ರಾಜಕೀಯ ಪಕ್ಷಗಳು ಯಾವ ಸಮಯದ ಮಿತಿಯನ್ನು ಸಲ್ಲಿಸಬೇಕು? ಎಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ಪ್ರಶ್ನಿಸಿದರು. ಇದನ್ನೂ ಓದಿ: ಐಬ್ರೋಸ್ ಮಾಡಿಸಿದ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ

    ಚುನಾವಣಾ ಆಯೋಗದ ಪರ ಹಾಜರಾದ ಅಮಿತ್ ಶರ್ಮಾ, ಹೌದು, ನಾವು ಡೇಟಾವನ್ನು ಕಂಪೈಲ್ ಮಾಡಬಹುದು. ಹಣಕಾಸು ವರ್ಷ ಮುಗಿದ ಆರು ತಿಂಗಳ ನಂತರ ಪಕ್ಷಗಳು ಮಾಹಿತಿ ಸಲ್ಲಿಸಬೇಕು ಎಂದು ಹೇಳಿದರು. ಮುಂದುವರಿದು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಸ್ವೀಕರಿಸಿದ ಚುನಾವಣಾ ಬಾಂಡ್‌ಗಳ ಒಟ್ಟು ಪ್ರಮಾಣವನ್ನು ಮಾತ್ರ ಮಾಹಿತಿ ಆಯೋಗ ಹೊಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬಜರಂಗ ಬಲಿ ಗದೆಯೇ ತಾಲಿಬಾನ್‍ಗಳಿಗೆ ಪರಿಹಾರ: ಯೋಗಿ ಆದಿತ್ಯನಾಥ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜಕೀಯ ಪಕ್ಷಗಳ ಹಣದ ಬಗ್ಗೆ ತಿಳಿದುಕೊಳ್ಳುವ ಹಕ್ಕು ಮತದಾರರಿಗೆ ಇಲ್ಲ- ಸುಪ್ರೀಂಗೆ ಕೇಂದ್ರ ಸರ್ಕಾರದ ಹೇಳಿಕೆ

    ರಾಜಕೀಯ ಪಕ್ಷಗಳ ಹಣದ ಬಗ್ಗೆ ತಿಳಿದುಕೊಳ್ಳುವ ಹಕ್ಕು ಮತದಾರರಿಗೆ ಇಲ್ಲ- ಸುಪ್ರೀಂಗೆ ಕೇಂದ್ರ ಸರ್ಕಾರದ ಹೇಳಿಕೆ

    ನವದೆಹಲಿ: ಸಂವಿಧಾನದ (Constitution) ಪ್ರಕಾರ ರಾಜಕೀಯ ಪಕ್ಷಗಳ ಹಣದ ಬಗ್ಗೆ ತಿಳಿದುಕೊಳ್ಳುವ ಹಕ್ಕು ಮತದಾರರಿಗೆ (Voters) ಇಲ್ಲ ಎಂದು ಕೇಂದ್ರ ಸರ್ಕಾರ (Central Government) ಸುಪ್ರೀಂ ಕೋರ್ಟಿಗೆ (Supreme Court) ತಿಳಿಸಿದೆ.

    ಚುನಾವಣಾ ಬಾಂಡ್ ಯೋಜನೆಯನ್ನು (Electoral Bond Scheme) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಗೆ ಮುಂಚಿತವಾಗಿ ಸುಪ್ರೀಂಕೋರ್ಟಿಗೆ ಸಲ್ಲಿಸಿದ ಹೇಳಿಕೆಯಲ್ಲಿ ಸರ್ಕಾರ ತನ್ನ ಅಭಿಪ್ರಾಯ ತಿಳಿಸಿದೆ. ಕೋರ್ಟಿಗೆ ಹೇಳಿಕೆ ನೀಡಿದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ (R Venkataramani) ಅವರು ಸಂವಿಧಾನದ 19 (1) (ಎ) ವಿಧಿಯು ಅಭ್ಯರ್ಥಿಗಳ ಪೂರ್ವಾಪರಗಳನ್ನು ತಿಳಿದುಕೊಳ್ಳುವ ಹಕ್ಕನ್ನು ನಾಗರಿಕರಿಗೆ ನೀಡುತ್ತದೆ. ಆದರೆ ಎಲ್ಲವನ್ನೂ ತಿಳಿದುಕೊಳ್ಳುವ ಸಾಮಾನ್ಯ ಹಕ್ಕು ಚುನಾವಣಾ ಬಾಂಡ್‌ಗಳ ಮಾಹಿತಿಯು ಸಾರ್ವಜನಿಕ ಡೊಮೇನ್‌ನಲ್ಲಿ ಇರುವಂತಿಲ್ಲ ಎಂದು ಸೂಚಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತೀವ್ರ ಕೋವಿಡ್‌ ಸಮಸ್ಯೆ ಎದುರಿಸಿದವರು ಹೃದಯಾಘಾತದಿಂದ ಪಾರಾಗಲು ಕಠಿಣ ವ್ಯಾಯಾಮ ಬಿಡಿ: ಮನ್ಸುಖ್ ಮಾಂಡವಿಯಾ

    ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಮಂಗಳವಾರ (ಅಕ್ಟೋಬರ್ 31) ಚುನಾವಣಾ ಬಾಂಡ್‌ಗಳ ಯೋಜನೆಯನ್ನು ‘ಅಪಾರದರ್ಶಕ ಮತ್ತು ಪ್ರಜಾಪ್ರಭುತ್ವ ವಿರೋಧಿ’ ಎಂದು ಪ್ರಶ್ನಿಸುವ ಅರ್ಜಿಗಳನ್ನು ವಿಚಾರಣೆ ನಡೆಸಲಿದೆ. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಹಗರಣ- ಮನೀಶ್ ಸಿಸೋಡಿಯಾ ಜಾಮೀನು ನಿರಾಕರಿಸಿದ ಸುಪ್ರೀಂ

    ಈ ಹಿನ್ನೆಲೆ ವಿಚಾರಣೆಗೂ ಮುನ್ನ ಕೋರ್ಟಿಗೆ ಕೇಂದ್ರ ಸರ್ಕಾರ ತನ್ನ ಅಭಿಪ್ರಾಯ ತಿಳಿಸಿದೆ. ಮತದಾರರು ಚುನಾವಣಾ ಅಭ್ಯರ್ಥಿಗಳ ಮಾಹಿತಿಯನ್ನು ತಿಳಿದುಕೊಳ್ಳಬಹುದು. ನಿರ್ದಿಷ್ಟ ನ್ಯಾಯಸಮ್ಮತ ಅಭಿವ್ಯಕ್ತಿಗಾಗಿ ಈ ಹಕ್ಕನ್ನು ಕಲ್ಪಿಸಲಾಗಿದೆ. ರಾಜಕೀಯ ಪಕ್ಷಕ್ಕೆ ನಿಧಿಯ ಬಗ್ಗೆ ಆರ್ಟಿಕಲ್ 19 (1) (ಎ) ಅಡಿಯಲ್ಲಿ ನಾಗರಿಕರಿಗೆ ಮಾಹಿತಿಯ ಹಕ್ಕನ್ನು ಹೊಂದಿದೆ ಎಂದು ಸೂಚಿಸಲು ತೀರ್ಪುಗಳಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕತಾರ್‌ನಲ್ಲಿ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಮರಣದಂಡನೆ; ಕುಟುಂಬಸ್ಥರ ಭೇಟಿಯಾದ ವಿದೇಶಾಂಗ ಸಚಿವ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೆರರ್ ಫಂಡಿಂಗ್‍ಗೆ ಕಡಿವಾಣ – ವಿದೇಶಿ ವ್ಯವಹಾರದ ಮೇಲೆ ಕೇಂದ್ರ ಕಣ್ಣು

    ಟೆರರ್ ಫಂಡಿಂಗ್‍ಗೆ ಕಡಿವಾಣ – ವಿದೇಶಿ ವ್ಯವಹಾರದ ಮೇಲೆ ಕೇಂದ್ರ ಕಣ್ಣು

    ನವದೆಹಲಿ: ವಿದೇಶದಿಂದ ಭಯೋತ್ಪಾದಕ ಸಂಘಟನೆಗಳಿಗೆ ಬರುವ ಹಣವನ್ನು (Terror Funding) ತಡೆಯಲು ಕೇಂದ್ರ ಸರ್ಕಾರ (Central Government) ದಿಟ್ಟ ಹೆಜ್ಜೆ ಇಟ್ಟಿದೆ. ವಿದೇಶದಿಂದ ರವಾನೆಯಾಗುವ 50,000 ರೂ. ಮೇಲ್ಪಟ್ಟ ವಹಿವಾಟಿನ ಮೇಲೆ ನಿಗಾವಹಿಸಲು ಕೇಂದ್ರ ಮುಂದಾಗಿದೆ. ಹಣ ಕಳಿಸಿದವರು ಹಾಗೂ ಸ್ವೀಕರಿಸಿದವರ ಮಾಹಿತಿ ಸಂಗ್ರಹಿಸಲು ನಿರ್ಧರಿಸಲಾಗಿದೆ.

    ಉಗ್ರ ಸಂಘಟನೆಗಳಿಗೆ ವಿದೇಶಗಳಿಂದ ಹಣ ರವಾನೆ (International Transactions) ಪ್ರಕರಣಗಳು ಹೆಚ್ಚಾದ ಬೆನ್ನಲ್ಲೇ ಸರ್ಕಾರ ಕ್ರಮಕ್ಕೆ ಮುಂದಾಗಿದೆ. 50 ಸಾವಿರ ರೂ.ಗಳಿಗೂ ಮೀರಿದ ಎಲ್ಲಾ ಅಂತಾರಾಷ್ಟ್ರೀಯ ಹಣಕಾಸು ವ್ಯವಹಾರದ ಮೇಲೆ ಭಾರೀ ನಿಗಾ ವಹಿಸಲು ಸಂಬಂಧಪಟ್ಟ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಈ ಕುರಿತು ಈಗಾಗಲೇ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ಇದನ್ನೂ ಓದಿ: ಡಿಕೆಶಿ ಹಸ್ತಕ್ಷೇಪಕ್ಕೆ ಸತೀಶ್ ಕಿಡಿ – ಕಾಂಗ್ರೆಸ್‌ಗೂ ಬೆಳಗಾವಿ ರಾಜಕೀಯ ಕಂಟಕನಾ?

    2005ರ ಹಣ ವರ್ಗವಾಣೆ ನಿಯಮಗಳಿಗೆ ತಿದ್ದುಪಡಿ ತಂದಿದ್ದು, ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಹಣಕಾಸು ವ್ಯವಹಾರಗಳಲ್ಲಿ ಕಳುಹಿಸಿದವರು ಮತ್ತು ಸ್ವೀಕರಿಸಿದವರ ಅಗತ್ಯ ಮಾಹಿತಿ ಸಂಗ್ರಹಿಸುವಂತೆ ತಿಳಿಸಲಾಗಿದೆ. ಇದನ್ನೂ ಓದಿ: ಮಂಗಳೂರಿನ ಲೇಡಿಹಿಲ್‌ನಲ್ಲಿ ಕಾರು ಹಿಟ್ & ರನ್ – ಓರ್ವ ಯುವತಿ ಸಾವು, ನಾಲ್ವರಿಗೆ ಗಾಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪದವಿ ಮುಗಿದವರಿಗೆ ಮಿಲ್ಟ್ರಿ ತರಬೇತಿ ಕೊಡಿ : ನಟಿ ಕಂಗನಾ ರಣಾವತ್ ಸಲಹೆ

    ಪದವಿ ಮುಗಿದವರಿಗೆ ಮಿಲ್ಟ್ರಿ ತರಬೇತಿ ಕೊಡಿ : ನಟಿ ಕಂಗನಾ ರಣಾವತ್ ಸಲಹೆ

    ಭಾರತ ಸರಕಾರಕ್ಕೆ (Central Government) ಮತ್ತು ಶಿಕ್ಷಣ ಇಲಾಖೆಗೆ ಅತ್ಯಂತ ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ ಬಾಲಿವುಡ್ ನಟಿ ಕಂಗನಾ ರಣಾವತ್. ಯಾವ ಶತ್ರು, ಯಾವಾಗ ದೇಶದ ಮೇಲೆ ಆಕ್ರಮಣ ಮಾಡುತ್ತಾನೋ ಗೊತ್ತಿಲ್ಲ. ದೇಶವನ್ನು ರಕ್ಷಣೆ ಮಾಡುವ ಹಿತದೃಷ್ಟಿಯಿಂದ ಪದವಿ ಮುಗಿಯುತ್ತಿದ್ದಂತೆಯೇ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಮಿಲ್ಟ್ರಿ  (Military)ತರಬೇತಿ ಕೊಡುವಂತೆ ಕಂಗನಾ ಸಲಹೆ ನೀಡಿದ್ದಾರೆ.

    ಕಂಗನಾ ಅವರ ಸಲಹೆಗೆ ನೆಟ್ಟಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಯೊಬ್ಬರ ಹೃದಯದಲ್ಲೂ ಇದು ದೇಶ ಭಕ್ತಿ ತುಂಬಲಿದೆ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ. ಕಂಗನಾ ಅವರ ದೇಶಭಕ್ತಿಯ ಬಗ್ಗೆ ಕೊಂಡಾಡಿದ್ದಾರೆ. ಈ ಸಲಹೆಯನ್ನು ಕೇಂದ್ರ ಸರಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹಲವರು ರಿಯ್ಯಾಕ್ಟ್ ಮಾಡಿದ್ದಾರೆ.

    ಇದರ ಜೊತೆಗೆ ಕಂಗನಾ ರಣಾವತ್  (Kangana Ranaut)ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಮಹದೇವ್ ಬೆಟ್ಟಿಂಗ್ ಆಪ್ ಮಾಲೀಕರ ಮದುವೆಯಲ್ಲಿ ಪಾಲ್ಗೊಂಡಿರುವ ಮತ್ತು ಆ ಆಪ್ ಗೆ ಪ್ರಮೋಟ್ ಮಾಡಿದವರ ವಿರುದ್ಧ ಇಡಿ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಕರೆಯುತ್ತಿದೆ. ಈ ಕುರಿತು ಕಂಗನಾ ಮಾತನಾಡಿದ್ದಾರೆ. ಈ ಬೆಟ್ಟಿಂಗ್ ಆಪ್ ನವರು ನನ್ನನ್ನೂ ಅದರ ಭಾಗವಾಗುವಂತೆ ಕೇಳಿದ್ದರು. ನಾನು ಹೋಗಲಿಲ್ಲ ಎಂದಿದ್ದಾರೆ ಕಂಗನಾ.

     

    ಖ್ಯಾತ ನಟ ರಣಬೀರ್ ಕಪೂರ್, ಹಾಸ್ಯ ನಿರೂಪಕ ಕಪಿಲ್ ಶರ್ಮಾ (Kapil Sharma) ಸೇರಿದಂತೆ ಬಿಟೌನ್‍ನ ಒಟ್ಟು 34 ಸೆಲೆಬ್ರಿಟಿಗಳಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿದೆ. ಮಹದೇವ್ ಆನ್ ಲೈನ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ (Notice) ಜಾರಿ ಮಾಡಿದ್ದು, ಮೊನ್ನೆಯಿಂದಲೇ ಹಲವರಿಗೆ ವಿಚಾರಣೆಗೆ ಕರೆದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇನ್ಮುಂದೆ ಚುನಾವಣಾ ಸಿಬ್ಬಂದಿಗೆ ಬೂತಲ್ಲೇ ಅಂಚೆ ಮತದಾನ ಕಡ್ಡಾಯ

    ಇನ್ಮುಂದೆ ಚುನಾವಣಾ ಸಿಬ್ಬಂದಿಗೆ ಬೂತಲ್ಲೇ ಅಂಚೆ ಮತದಾನ ಕಡ್ಡಾಯ

    ನವದೆಹಲಿ: ಚುನಾವಣಾ (Election) ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ನಿಗದಿಪಡಿಸಿದ ಚುನಾವಣಾ ಕೇಂದ್ರದಲ್ಲಿ ನಿರ್ದಿಷ್ಟ ಮಾದರಿಯಲ್ಲೇ ಅಂಚೆ ಮತ (Postal Voting) ಚಲಾವಣೆ ಮಾಡುವುದನ್ನು ಕೇಂದ್ರ ಸರ್ಕಾರ (Central Government)  ಕಡ್ಡಾಯ ಮಾಡಿದೆ.

    ಅಂಚೆ ಮತದಾನದ ದುರ್ಬಳಕೆ ತಡೆಯಲು ಕೇಂದ್ರ ಚುನಾವಣಾ ಆಯೋಗ ಪ್ರಸ್ತಾಪಿಸಿದ್ದ ಶಿಫಾರಸ್ಸನ್ನು ಕೇಂದ್ರ ಕಾನೂನು ಸಚಿವಾಲಯ ಅಂಗೀಕರಿಸಿ ಅಧಿಸೂಚನೆ ಹೊರಡಿಸಿದೆ. ಇದನ್ನೂ ಓದಿ: ತಮಿಳುನಾಡಿಗೆ ನೀರು – ಇಂದು ಸರ್ವಪಕ್ಷ ಸಭೆ ಕರೆದ ಸರ್ಕಾರ

    ನಿಯೋಜಿಸಲಾದ ಅಧಿಕಾರಿಗಳಿಗೆ ಚುನಾವಣೆಯ ದಿನ ರಾತ್ರಿ 8ರ ವರೆಗೂ ಮತ ಚಲಾವಣೆಗೆ ಅವಕಾಶವಿದೆ. ಈ ವೇಳೆ ಅದನ್ನು ಮತಗಟ್ಟೆ ಹೊರಗೆ ಒಯ್ದು ನಂತರ ಚುನಾವಣಾಧಿಕಾರಿಗೆ ನೀಡುತ್ತಿದ್ದರು. ಆದರೆ ಹೆಚ್ಚಿನ ಸಮಯ ಮತ ಚೀಟಿ ಅವರ ಬಳಿ ಇದ್ದಷ್ಟೂ ಅವರು ರಾಜಕೀಯ ಪಕ್ಷಗಳ ಅಥವಾ ಅಭ್ಯರ್ಥಿಗಳ ಬೆದರಿಕೆ, ಲಂಚ ಅಥವಾ ಒತ್ತಡಕ್ಕೆ ಒಳಗಾಗಿ ಮತ ಚಲಾವಣೆ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಇದಕ್ಕಾಗಿ ಈ ಬದಲಾವಣೆ ತರಲಾಗಿದೆ. ಇದನ್ನೂ ಓದಿ: ದೊಡ್ಡಗೌಡರ ಕಾಲಿಗೆ ಮಂಡಿಯೂರಿ ನಮಸ್ಕರಿಸಿದ ಸಂಸದ ಪ್ರತಾಪ್‌ಸಿಂಹ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]