Tag: Central govt

  • ಬೆಂ-ಮೈ ಹೆದ್ದಾರಿಯಲ್ಲಿ ರಸ್ತೆ ಸುರಕ್ಷತಾ ಕ್ರಮಗಳಿಗಾಗಿ 688 ಕೋಟಿ ವ್ಯಯಿಸಲು ಕೇಂದ್ರ ನಿರ್ಧಾರ

    ಬೆಂ-ಮೈ ಹೆದ್ದಾರಿಯಲ್ಲಿ ರಸ್ತೆ ಸುರಕ್ಷತಾ ಕ್ರಮಗಳಿಗಾಗಿ 688 ಕೋಟಿ ವ್ಯಯಿಸಲು ಕೇಂದ್ರ ನಿರ್ಧಾರ

    ನವದೆಹಲಿ: ಸರಣಿ ಅಪಘಾತಗಳ ಬಳಿಕ ಎಚ್ಚೆತ್ತುಕೊಂಡಿರುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಪ್ರಾಧಿಕಾರ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Bengaluru- Mysuru Highway) ರಸ್ತೆ ಸುರಕ್ಷತಾ ಕ್ರಮಗಳಿಗಾಗಿ 688 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲು ನಿರ್ಧರಿಸಿದೆ. ಇತ್ತಿಚೇಗೆ ನಡೆದ ಸಮೀಕ್ಷಾ ವರದಿ ಆಧರಿಸಿ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರದಿಂದ ಬಿಡ್ ಕೂಡಾ ಕರೆಯಲಾಗಿದೆ.

    ಸಮೀಕ್ಷೆಯ ಸಮಯದಲ್ಲಿ ಕಂಡುಬಂದಿರುವ ಅಪಾಯಕಾರಿ ತಾಣಗಳು, ಗ್ರೇಡಿಯಂಟ್ ಸಮಸ್ಯೆಗಳನ್ನು ಸರಿಪಡಿಸಲು, ರಸ್ತೆಯಲ್ಲಿ ಹೆಚ್ಚಿನ ಬೆಳಕಿಗಾಗಿ ಲೈಟಿಂಗ್ ವ್ಯವಸ್ಥೆ, ಪಾದಾಚಾರಿಗಳಿಗೆ ಮೇಲ್ಸೇತುವೆಗಳು, ಎಚ್ಚರಿಕೆ ಫಲಕಗಳು, ಹೆಡ್‍ಲೈಟ್ ಪ್ರತಿಫಲಕಗಳು, ರಸ್ತೆ ಗುರುತುಗಳು, ಗಾರ್ಡ್ ರೈಲ್‍ಗಳು ಮತ್ತು ಕ್ರ್ಯಾಶ್ ಬ್ಯಾರಿಯರ್ ಗಳನ್ನು ಅವಳವಡಿಸಲು ಬಿಡ್ ಕರೆಯಲಾಗಿದೆ.

    ಬೆಂಗಳೂರು-ಮೈಸೂರು ಹೆದ್ದಾರಿಯ ಸುರಕ್ಷತಾ ತಪಾಸಣೆ ನಡೆಸಲು NHI ಕಳೆದ ವರ್ಷ ರಸ್ತೆ ಸುರಕ್ಷತಾ ತಜ್ಞರ ಸಮಿತಿಯನ್ನು ರಚಿಸಿತ್ತು. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿ ಮಾಡಿ ರಸ್ತೆಯಲ್ಲಿ ಸುರಕ್ಷತೆ ಹೆಚ್ಚಿಸಲು ಹಾಗೂ ದೋಷಗಳನ್ನು ಸರಿಪಡಿಸಲು ಮನವಿ ಮಾಡಿದ್ದರು. ಇದನ್ನೂ ಓದಿ: ಏಳು ಸುತ್ತಿನ ಕೋಟೆಯಾದ ಅಯೋಧ್ಯೆ – 30,000 ಯೋಧರು, AI ಕಣ್ಗಾವಲು – ಭದ್ರತೆಗೆ ವಿಶೇಷ ತಂಡಗಳ‌ ನಿಯೋಜನೆ

     

    ಕಳೆದ ಜುಲೈನಲ್ಲಿ ಲೋಕಸಭೆಯಲ್ಲಿ (Loksabha) ಕೇಂದ್ರ ಸರ್ಕಾರ ನೀಡಿದ ಮಾಹಿತಿಗಳ ಪ್ರಕಾರ, ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಜನವರಿ 2023 ರಲ್ಲಿ ಸಂಚಾರಕ್ಕೆ ತೆರೆಯಲಾಯಿತು. ಜುಲೈ ಅಂತ್ಯದ ವೇಳೆಗೆ 121 ಸಾವುಗಳು ಮತ್ತು 400 ಅಪಘಾತಗಳನ್ನು ಕಂಡಿದೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಅಪಘಾತಕ್ಕೆ ಕಾರಣವಾಗಿವೆ ಮತ್ತು ಜುಲೈನಿಂದ ಸಾವುಗಳು ಮತ್ತು ಅಪಘಾತಗಳು ಕಡಿಮೆಯಾಗಿದೆ ಎನ್ನಲಾಗಿದೆ.

  • ಹಿಂದಿನ ಚುನಾವಣೆಯಲ್ಲಿ ಪುಲ್ವಾಮಾ, ಈಗ ರಾಮನ ಫೋಟೋ ಹಿಡಿದಿದ್ದಾರೆ- ಕೇಂದ್ರದ ವಿರುದ್ಧ ಸುಧಾಕರ್‌ ಕಿಡಿ

    ಹಿಂದಿನ ಚುನಾವಣೆಯಲ್ಲಿ ಪುಲ್ವಾಮಾ, ಈಗ ರಾಮನ ಫೋಟೋ ಹಿಡಿದಿದ್ದಾರೆ- ಕೇಂದ್ರದ ವಿರುದ್ಧ ಸುಧಾಕರ್‌ ಕಿಡಿ

    ಚಿತ್ರದುರ್ಗ: ಈ ಹಿಂದಿನ ಚುನಾವಣೆ ವೇಳೆ ಪುಲ್ವಾಮಾ (Pulwama) ಘಟನೆ ತೋರಿಸಿದ್ದರು. ಈಗ ರಾಮನ (Rama) ಫೋಟೋ ಹಿಡಿದಿದ್ದಾರೆ ಎಂದು ಸಾಂಖಿಕ ಸಚಿವ ಡಿ.ಸುಧಾಕರ್ (D Sudhakar) ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

    ಚಿತ್ರದುರ್ಗದ ಡಿಸಿಸಿ ಬ್ಯಾಂಕ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ (Ayodhya Ram Mandir) ಉದ್ಘಾಟನೆ ಒಂದು ಸ್ಟಂಟ್. ಜನರು ದಡ್ಡರಿಲ್ಲ, ಎರಡು ಸಲ ಮೂರ್ಖರಾಗಿದ್ದೀವಿ. ಮತ್ತೆ ಮೂರನೇ ಸಲ ಮೂರ್ಖರಾಗಲ್ಲ ಆಗಲ್ಲ ಎಂಬ ಭರವಸೆಯಿದೆ ಎಂದರು.

    ಲೋಕಸಭಾ ಚುನಾವಣೆಯ (Loksabha Election) ಹಿನ್ನೆಲೆಯಲ್ಲಿ ರಾಮಮಂದಿರ ಉದ್ಘಾಟನೆ ಎಂಬುದು ಸತ್ಯ. ರಾಮಮಂದಿರಕ್ಕೆ ನಾನು, ಶಾಸಕ ರಘುಮೂರ್ತಿ ದುಡ್ಡು ಕೊಟ್ಟಿದ್ದೇವೆ. ಹಿಂದೆಲ್ಲಾ ಇಟ್ಟಿಗೆ ಸಹ ನಾವೆಲ್ಲಾ ನೀಡಿದ್ದೇವೆ. ರಾಮ ಎಲ್ಲರಿಗೂ ದೇವರು, ಚುನಾವಣೆ ವೇಳೆ ದೇಗುಲ ಉದ್ಘಾಟನೆ ಗಿಮಿಕ್ ಎಂದು ವಾಗ್ದಾಳಿ ನಡೆಸಿದರು.

    ಭಾರತ ದೇಶದ ಧಾರ್ಮಿಕ ನಂಬಿಕೆ ಬಳಸಿ ಬಿಜೆಪಿಯಿಂದ (BJP) ಮತ ಗಾಳ ಹಾಕಲಾಗುತ್ತಿದೆ. ಕಳೆದ ಚುನಾವಣೆಯಲ್ಲಿ ಎಲ್ಲಿತ್ತು ರಾಮ ಮಂದಿರ?, ಸುಮ್ಮ ಸುಮ್ಮನೆ ಯಾವುದೋ ಫ್ಲೈಟ್ ತೋರಿಸಿದ್ದರು. ಪಾಪ ಜನ ದೇಶ ಕಾಪಾಡುತ್ತಾರೆಂದು ನಂಬಿದರು. ಪುಲ್ವಾಮಾ ಘಟನೆಯಲ್ಲಿ ಎಷ್ಟು ಜನರು ಸತ್ತರು?, ಪುಲ್ವಾಮಾ ಘಟನೆ ಕ್ರಿಯೇಟೆಡ್ ಎಂದು ಪೈಲೆಟ್ ಹೇಳಿಲ್ವಾ?, ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಆಗಿದೆ, ಸೆಕ್ಯುಲರ್ ತತ್ವ ಎಲ್ಲಿ ಹೋಯಿತು ಎಂದು ಪ್ರಶ್ನಿಸುವ ಮೂಲಕ ಹೆಚ್‌ಡಿಕೆಗೆ ಸುಧಾಕರ್‌ ಟಾಂಗ್‌ ನೀಡಿದರು.

    ಇದೇ ವೇಳೆ ಬಿಜೆಪಿ ಆಡಳಿತಲ್ಲಿ ಭ್ರಷ್ಟಾಚಾರ ಎಂದು ಶಾಸಕ ಯತ್ನಾಳ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಶಾಸಕ ಯತ್ನಾಳ್ ಎಲ್ಲಿವರೆಗೆ ನೋಡಿಕೊಂಡಿರುತ್ತಾರೆ. 40% ಸರ್ಕಾರ ಎಂದೇ ಕುಖ್ಯಾತಿ ಗಳಿಸಿದ್ದು ಸತ್ಯ. ಬೆಲೆ ಏರಿಕೆ, ಭ್ರಷ್ಟಾಚಾರ ನೋಡಿಯೇ ಜನ ಕಾಂಗ್ರೆಸ್‌ ಕೈ ಹಿಡಿದಿದ್ದಾರೆ ಎಂದರು. ಇದನ್ನೂ ಓದಿ: ಅಯೋಧ್ಯೆಯನ್ನು ಮತ್ತೆ ಬೆಳಕಿಗೆ ತರಲು ಮೋದಿಯಿಂದ ಮಾತ್ರ ಸಾಧ್ಯವಾಯ್ತು: ಮಾರಿಷಸ್‌ ಸಂಸದ

    ಶಾಲೆಯಲ್ಲಿ ಮಕ್ಕಳಿಂದ ಶೌಚಗುಂಡಿ ಕ್ಲೀನ್ ವಿಚಾರ ಸರ್ಕಾರದ ಬೇಜವಬ್ದಾರಿಯಿಂದ ಪ್ರಕರಣ ಎಂದ ಮಾಜಿ ಸಿಎಂ ಹೆಚ್‌ಡಿಕೆಗೆ ತಿರುಗೇಟು ನೀಡಿದರು. ನಾವು ಸಹ ಶಾಲಾ ವಿದ್ಯಾರ್ಥಿ ಆಗಿದ್ದಾಗ ಕಸ ಗುಡಿಸಿದ್ದೇವೆ. ಆದರೆ ಮಕ್ಕಳಿಂದ ಶೌಚಗುಂಡಿ ಕ್ಲೀನ್ ಮಾಡಿಸುವುದು ಸರಿಯಲ್ಲ. ಮಕ್ಕಳಿಂದ ಶೌಚಗುಂಡಿ ಕ್ಲೀನ್ ವಿಚಾರ ತಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

  • ಮುಂಬರುವ ಹಬ್ಬಗಳ ಮೇಲೆ ನಿಗಾ ವಹಿಸಿ: ಕೋವಿಡ್‌ ಹೆಚ್ಚಳ ಹಿನ್ನೆಲೆ ರಾಜ್ಯಗಳಿಗೆ ಕೇಂದ್ರ ಸಲಹೆ

    ಮುಂಬರುವ ಹಬ್ಬಗಳ ಮೇಲೆ ನಿಗಾ ವಹಿಸಿ: ಕೋವಿಡ್‌ ಹೆಚ್ಚಳ ಹಿನ್ನೆಲೆ ರಾಜ್ಯಗಳಿಗೆ ಕೇಂದ್ರ ಸಲಹೆ

    – ಇನ್ಫ್ಲುಯೆನ್ಸ ತರಹದ ಕಾಯಿಲೆಗಳ ಬಗ್ಗೆ ಎಚ್ಚರವಹಿಸಲು ಸೂಚನೆ

    ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್‌-19 (Covid-19) ಹೊಸ ತಳಿ (JN.1) ಆರ್ಭಟ ಶುರುವಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆಗಳನ್ನು ನೀಡಿದೆ.

    ಕೇಂದ್ರ ಆರೋಗ್ಯ ಇಲಾಖೆ ಕೊರೊನಾ ನಿಯಂತ್ರಣಕ್ಕೆ ರಾಜ್ಯಗಳಿಗೆ ಸಲಹೆ ನೀಡಿದೆ. ಮುಂಬರುವ ಹಬ್ಬಳ ಬಗ್ಗೆ ನಿಗಾ ವಹಿಸಿ. ಅಲ್ಲದೇ ಜಾಗೃತಿ ಮೂಡಿಸುವ ಕ್ರಮವಹಿಸಿ ಎಂದು ಸೂಚಿಸಿದೆ. ಇದನ್ನೂ ಓದಿ: ಕೋವಿಡ್ ಉಲ್ಬಣವಾಗುತ್ತಿದೆ ಎಂದು ಆತಂಕಗೊಳ್ಳುವುದು ಬೇಡ: ಡಿ.ಕೆ ಶಿವಕುಮಾರ್

    ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ನಿಗಾ ವಹಿಸಬೇಕು. ನಿಯಮಿತವಾಗಿ ಇನ್ಫ್ಲುಯೆನ್ಸ ತರಹದ ಕಾಯಿಲೆಗಳ ಬಗ್ಗೆ ಎಚ್ಚರವಹಿಸಬೇಕು. ತೀವ್ರತರವಾದ ಉಸಿರಾಟದ ಕಾಯಿಲೆ ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡಬೇಕು ಎಂದು ತಿಳಿಸಿದೆ.

    ರೋಗ ಲಕ್ಷಣಗಳಿದ್ದರೆ ಪರೀಕ್ಷೆ ಮಾಡಬೇಕು. ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಮಾದರಿ ಪರೀಕ್ಷೆ ಮಾಡಬೇಕು. ಆಸ್ಪತ್ರೆಗಳು ಸುಸಜ್ಜಿತವಾಗಿರುವಂತೆ ನೋಡಿಕೊಳ್ಳಬೇಕು. ಐಎಲ್‌ಐ, ಸಾರಿ ಕೇಸ್‌ಗಳ ಮೇಲೆ ನಿಗಾ ವಹಿಸಬೇಕು. ಚಿಕಿತ್ಸೆಗೆ ಬೇಕಾದ ಮೂಲಸೌಕರ್ಯ ಕ್ರೋಢೀಕರಿಸಿಕೊಳ್ಳಬೇಕು ಎಂದು ಸಲಹೆ ನೀಡಿದೆ. ಇದನ್ನೂ ಓದಿ: ಹೆಚ್ಚಾಗ್ತಿದೆ ಕೋವಿಡ್ ಉಪತಳಿ JN.1 ಭೀತಿ – ಕ್ರಿಸ್‌ಮಸ್, ಹೊಸವರ್ಷ ಸಂಭ್ರಮಕ್ಕೆ ಬೀಳುತ್ತಾ ಬ್ರೇಕ್?

    ಪ್ರತಿ ಜಿಲ್ಲೆ ಮತ್ತು ನಗರಗಳಲ್ಲಿ ಆರ್‌ಟಿಪಿಸಿಆರ್‌, ರ‍್ಯಾಪಿಡ್‌ ಆ್ಯಂಟಿಜನ್ ಟೆಸ್ಟ್ ಮಾಡಬೇಕು. ಆರ್‌ಟಿಪಿಸಿಆರ್‌ ಪಾಸಿಟಿವ್ ಆದರೆ ಜೆನೆಮಿಕ್ ಸೀಕ್ವೆನ್ಸ್‌ಗೆ ಸ್ಯಾಂಪಲ್ ಕಳಿಸಬೇಕು. ಕೊವಿಡ್ ರೂಲ್ಸ್‌ಗಳನ್ನ ಸ್ಥಳೀಯವಾಗಿ ಜಾರಿ ಮಾಡಲು ರಾಜ್ಯಗಳಿಗೆ ಜವಾಬ್ದಾರಿ ನೀಡಲಾಗಿದೆ.

    ಭಾರತದ ಕೋವಿಡ್-19 ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೂ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,828 ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ ಒಂದು ಸಾವು ವರದಿಯಾಗಿದೆ. ಈ ರಾಜ್ಯದಲ್ಲಿ ಇತ್ತೀಚೆಗೆ ಕೊರೊನಾ ವೈರಸ್‌ನ ಜೆಎನ್.1 ಉಪತಳಿ ಪತ್ತೆಯಾಗಿದೆ. ಇದನ್ನೂ ಓದಿ: ಇಂದಿನಿಂದ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ದಿನೇಶ್ ಗುಂಡೂರಾವ್

  • Article 370 Verdict: ಸುಪ್ರೀಂ ಆದೇಶವನ್ನು ಗೌರವಯುತವಾಗಿ ಒಪ್ಪುವುದಿಲ್ಲ: ಪಿ ಚಿದಂಬರಂ

    Article 370 Verdict: ಸುಪ್ರೀಂ ಆದೇಶವನ್ನು ಗೌರವಯುತವಾಗಿ ಒಪ್ಪುವುದಿಲ್ಲ: ಪಿ ಚಿದಂಬರಂ

    ನವದೆಹಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು (Jammu and Kashmir Special Status) ರದ್ದು ಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರ ಸರಿ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್‌ (Supreme Court) ಐತಿಹಾಸಿಕ ತೀರ್ಪು ನೀಡಿದ್ದು, ಈ ಆದೇಶವನ್ನು ಗೌರವಯುತವಾಗಿ ಒಪ್ಪುವುದಿಲ್ಲ ಎಂದು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹೇಳಿದ್ದಾರೆ.

    ಆರ್ಟಿಕಲ್‌ 370 ರದ್ದತಿ ಆದೇಶದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಭಾರತದ ಸಂವಿಧಾನಕ್ಕೆ ಅನುಗುಣವಾಗಿ ಕಟ್ಟುನಿಟ್ಟಾಗಿ ತಿದ್ದುಪಡಿ ಮಾಡುವವರೆಗೆ 370 ಗೌರವಕ್ಕೆ ಅರ್ಹವಾಗಿದೆ. ರಾಜ್ಯವನ್ನು ವಿಭಜಿಸುವ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಿಗೆ ಅದರ ಸ್ಥಾನಮಾನವನ್ನು ಕಡಿಮೆ ಮಾಡುವ ಪ್ರಶ್ನೆಯನ್ನು ಗೌರವಾನ್ವಿತ ಸುಪ್ರೀಂ ಕೋರ್ಟ್ ನಿರ್ಧರಿಸದಿರುವುದು ನಮಗೆ ನಿರಾಶೆಯಾಗಿದೆ ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್ (Congress) ಯಾವಾಗಲೂ ಜಮ್ಮು-ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾಗಿ ಮಾರ್ಪಟ್ಟಿರುವ ಸಂಪೂರ್ಣ ರಾಜ್ಯತ್ವವನ್ನು ಮರುಸ್ಥಾಪಿಸಲು ಒತ್ತಾಯಿಸುತ್ತದೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಕೂಡಲೇ ಸಂಪೂರ್ಣ ರಾಜ್ಯ ಸ್ಥಾನಮಾನ ಮರುಸ್ಥಾಪಿಸಬೇಕು, ಲಡಾಖ್ ಜನರ ಆಶೋತ್ತರಗಳನ್ನೂ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: Article 370 Verdict – ಇಂದಿನ ತೀರ್ಪು ಕೇವಲ ತೀರ್ಪಲ್ಲ, ಭರವಸೆಯ ದಾರಿದೀಪ: ಮೋದಿ ಸಂತಸ

    ವಿಧಾನಸಭೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ನಾವು ಸ್ವಾಗತಿಸುತ್ತೇವೆ. ಅದಾಗ್ಯೂ, ಚುನಾವಣೆಗಳನ್ನು ತಕ್ಷಣವೇ ನಡೆಸಬೇಕು, ಒಂದು ವರ್ಷ ಕಾಯಲು ನಿಖರ ಕಾರಣಗಳಿಲ್ಲ ಎಂದು ಚಿದಂಬರಂ (P Chidambaram) ಹೇಳಿದ್ದಾರೆ.

    2019ರ ಆಗಸ್ಟ್‌ 6 ರಂದು ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಲವು ಮಂದಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಶೇಷ ಸ್ಥಾನವನ್ನು ರದ್ದು ಪಡಿಸಿದ ಕೇಂದ್ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠ ಸರ್ವಾನುಮತದ ತೀರ್ಪು ಪ್ರಕಟಿಸಿ ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದಿದೆ.

  • ಸ್ವಾತಂತ್ರ್ಯೋತ್ಸವಕ್ಕೆ ಗುಡ್‌ ನ್ಯೂಸ್‌ – ಆ.15 ರಿಂದ ಕೆಜಿ ಟೊಮೆಟೋ 50 ರೂ.ಗೆ ಮಾರಾಟ

    ಸ್ವಾತಂತ್ರ್ಯೋತ್ಸವಕ್ಕೆ ಗುಡ್‌ ನ್ಯೂಸ್‌ – ಆ.15 ರಿಂದ ಕೆಜಿ ಟೊಮೆಟೋ 50 ರೂ.ಗೆ ಮಾರಾಟ

    ನವದೆಹಲಿ: 77ನೇ ಸ್ವಾತಂತ್ರೋತ್ಸವಕ್ಕೆ (77th Independence Day) ಜನತೆಗೆ ಕೇಂದ್ರ ಸರ್ಕಾರ ಗುಡ್‌ ನ್ಯೂಸ್‌ ಕೊಟ್ಟಿದೆ. ಆಗಸ್ಟ್‌ 15 ರಿಂದ ಟೊಮೆಟೋವನ್ನು (Tomato) ಕೆಜಿಗೆ 50 ರೂ.ಗೆ ಚಿಲ್ಲರೆ ಮಾರಾಟ ಮಾಡುವಂತೆ ನಿರ್ದೇಶನ ನೀಡಿದೆ.

    ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (NCCF) ಮತ್ತು ರಾಷ್ಟ್ರೀಯ ಕೃಷಿ ಸಹಕಾರ ಮಾರಾಟ ಒಕ್ಕೂಟ (NAFED)ಕ್ಕೆ ಕೇಂದ್ರ ಸರ್ಕಾರ ಈ ನಿರ್ದೇಶನ ನೀಡಿದೆ. ಸಗಟು ಮಾರುಕಟ್ಟೆಯಲ್ಲಿ ಟೊಮೆಟೋ ಬೆಲೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಹಕ ವ್ಯವಹಾರಗಳ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: 10,000 ಪೊಲೀಸರು.. ಆ್ಯಂಟಿ ಡ್ರೋನ್‌ ಸಿಸ್ಟಮ್‌, ಅತ್ಯಾಧುನಿಕ ಕ್ಯಾಮೆರಾ – ಸ್ವಾತಂತ್ರ್ಯೋತ್ಸವಕ್ಕೆ ಕೆಂಪು ಕೋಟೆಯಲ್ಲಿ ಬಿಗಿ ಭದ್ರತೆ

    NCCF ಮತ್ತು NAFED, ಜೈಪುರ ಮತ್ತು ರಾಜಸ್ಥಾನದ ಕೋಟಾ, ದೆಹಲಿ-NCR, ಲಕ್ನೋ, ಕಾನ್ಪುರ, ವಾರಣಾಸಿ ಮತ್ತು ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಮತ್ತು ಬಿಹಾರದ ಪಾಟ್ನಾ, ಮುಜಾಫರ್‌ಪುರ, ಅರ್ರಾ ಮತ್ತು ಬಕ್ಸರ್‌ನಲ್ಲಿ ಟೊಮೆಟೋ ಮಾರಾಟ ಮಾಡುತ್ತವೆ.

    ಎನ್‌ಸಿಸಿಎಫ್ ಮತ್ತು ಎನ್‌ಎಎಫ್‌ಇಡಿ ಖರೀದಿಸಿದ ಟೊಮೆಟೋ ಚಿಲ್ಲರೆ ಬೆಲೆಯನ್ನು ಆರಂಭದಲ್ಲಿ ಕೆಜಿಗೆ 90 ರೂ.ಗೆ ನಿಗದಿಪಡಿಸಲಾಗಿತ್ತು. ನಂತರ ಕೆಜಿಗೆ 80 ರೂ.ಗೆ ಇಳಿಸಲಾಗಿತ್ತು. ಜುಲೈ 20 ರಿಂದ ಪ್ರತಿ ಕೆಜಿಗೆ 70 ರೂ.ಗೆ ಇಳಿಕೆ ಮಾಡಲಾಗಿತ್ತು. ಇದನ್ನೂ ಓದಿ: ಉತ್ತರಾಖಂಡದಲ್ಲಿ ಎರಡು ದಿನ ರೆಡ್ ಅಲರ್ಟ್ – ಚಾರ್ ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ

    ಗ್ರಾಹಕ ವ್ಯವಹಾರಗಳ ಇಲಾಖೆಯ ನಿರ್ದೇಶನವನ್ನು ಅನುಸರಿಸಿ, NCCF ಮತ್ತು NAFED ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದ ಮಾರುಕಟ್ಟೆಗಳಿಂದ ಬಳಕೆ ಕೇಂದ್ರಗಳಲ್ಲಿ ಚಿಲ್ಲರೆ ಮಾರಾಟಕ್ಕಾಗಿ ಟೊಮೆಟೋ ಸಂಗ್ರಹಿಸಲು ಪ್ರಾರಂಭಿಸಿವೆ. ಇದು ಬೆಲೆ ಇಳಿಕೆಗೆ ಸಹಕಾರಿಯಾಗಿತ್ತು. ಆಗಸ್ಟ್ 13 ರವರೆಗೆ, ಎನ್‌ಸಿಸಿಎಫ್ ಮತ್ತು ಎನ್‌ಎಎಫ್‌ಇಡಿ ಏಜೆನ್ಸಿಗಳು ಒಟ್ಟು 15 ಲಕ್ಷ ಕೆಜಿ ಟೊಮೆಟೋ ಖರೀದಿಸಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೈಲೆಂಟಾಗಿ ಇರದಿದ್ರೆ ನಿಮ್ಮ ಮನೆ ಮೇಲೆ ಇಡಿ ರೇಡ್- ಕೇಂದ್ರ ಸಚಿವೆ ಬೆದರಿಕೆ

    ಸೈಲೆಂಟಾಗಿ ಇರದಿದ್ರೆ ನಿಮ್ಮ ಮನೆ ಮೇಲೆ ಇಡಿ ರೇಡ್- ಕೇಂದ್ರ ಸಚಿವೆ ಬೆದರಿಕೆ

    ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ತಿದೆ ಎಂಬ ವಿಪಕ್ಷಗಳ ಆರೋಪ ಹೊಸದಲ್ಲ. ಗುರುವಾರ ಸಂಸತ್ ಸಾಕ್ಷಿಯಾಗಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ (Meenakshi Lekhi) ಆಡಿದ ಮಾತುಗಳು ಇದಕ್ಕೆ ಪೂರಕವಾಗಿವೆ.

    ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ವಿಧೇಯಕ ವಿರೋಧಿಸಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದ ಸಂದರ್ಭದಲ್ಲಿ ಸಿಟ್ಟಿಗೆದ್ದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ, ವಿಪಕ್ಷ ನಾಯಕರು ಸೈಲೆಂಟಾಗಿ ಇರದಿದ್ರೆ ಅವರ ಮನೆಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬರುತ್ತಾರೆ ಎಂದು ನೇರವಾಗಿ ಎಚ್ಚರಿಕೆ ನೀಡಿದ್ದಾರೆ.

    ಮೀನಾಕ್ಷಿ ಲೇಖಿಯ ಮಾತುಗಳು ರಾಷ್ಟ್ರ ರಾಜಕೀಯದಲ್ಲೀಗ ಸಂಚಲನ ಮೂಡಿಸಿವೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ತಿದೆ ಎಂಬ ನಮ್ಮ ಮಾತು ನಿಜ ಎಂದು ಕೇಂದ್ರ ಸಚಿವರೇ ಈಗ ಒಪ್ಕೊಂಡಿದ್ದಾರೆ. ಆವೇಶದಲ್ಲಿ ಮೀನಾಕ್ಷಿ ಲೇಖಿ ವಿಪಕ್ಷಗಳನ್ನು ಬೆದರಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಎನ್‍ಸಿಪಿ ಹೇಳಿದೆ. ಇದನ್ನೂ ಓದಿ: ಏನೇ ಬಂದರೂ ನನ್ನ ಕರ್ತವ್ಯ ಹಾಗೆಯೇ ಇರಲಿದೆ: ಸುಪ್ರೀಂ ತೀರ್ಪಿಗೆ ರಾಗಾ ಪ್ರತಿಕ್ರಿಯೆ

    ಈ ಸಂಬಂಧ ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ಟ್ವೀಟ್ ಮಾಡಿ, ಇದು ಎಚ್ಚರಿಕೆನಾ? ಬೆದರಿಕೆನಾ ಎಂದು ಕೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟಿಎಂಸಿ ಸೇರಿ ಹಲವು ಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಮುಗಿಬಿದ್ದಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾವು ಯಾರನ್ನೂ ಪುಕ್ಸಟ್ಟೆ ಅಕ್ಕಿ ಕೇಳ್ತಿಲ್ಲ; ಬೇರೆ ಆಪ್ಷನ್‌ ನೋಡ್ತಿದ್ದೇವೆ: ಡಿಕೆಶಿ

    ನಾವು ಯಾರನ್ನೂ ಪುಕ್ಸಟ್ಟೆ ಅಕ್ಕಿ ಕೇಳ್ತಿಲ್ಲ; ಬೇರೆ ಆಪ್ಷನ್‌ ನೋಡ್ತಿದ್ದೇವೆ: ಡಿಕೆಶಿ

    ಬೆಂಗಳೂರು: ನಾವು ಯಾರನ್ನೂ ಪುಕ್ಸಟ್ಟೆ ಅಕ್ಕಿ ಕೇಳುತ್ತಿಲ್ಲ. ಬೇರೆ ಆಪ್ಷನ್‌ ನೋಡ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿದರು.

    ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಡಿಕೆಶಿ, ನಾವು ಯಾರನ್ನೂ ಪುಕ್ಸಟ್ಟೆ ಅಕ್ಕಿ ಕೇಳ್ತಿಲ್ಲ. ಫೆಡರಲ್ ಸ್ಟ್ರಕ್ಚರ್‌ನಲ್ಲಿ ಇದ್ದೇವೆ. ಆಪ್ಷನ್ ನೋಡ್ತಿದ್ದೇವೆ. ಅಕ್ಕಿಯನ್ನ ಬೇರೆ ರಾಜ್ಯದಿಂದ ತರುವ ಬಗ್ಗೆ ಮಾತುಕತೆ ನಡೆದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೇವಲ 2 ಬಲ್ಬ್ ಇದ್ದ ತಗಡಿನ ಮನೆಗೆ 1 ಲಕ್ಷ ರೂ. ಬಿಲ್ – ಶಾಕ್ ಆಗಿ ವೃದ್ಧೆ ಮನೆಗೆ ಅಧಿಕಾರಿ ದೌಡು!

    ನಿಮ್ಮ ಪಕ್ಷಕ್ಕಿಂತ ನಮ್ಮ ಪಕ್ಷ ವಿಭಿನ್ನವಾಗಿದೆ. ನಾವು ಕೊಟ್ಟ ಮಾತು ಉಳಿಸಿಕೊಳ್ತೇವೆ. ಸಿಎಂ, ಸಚಿವರು ದೆಹಲಿಗೆ ಹೋಗಿ ಯಾರನ್ನ ಭೇಟಿರಾಗಿದ್ದಾರೆ, ಏನು ಮಾಡಿದ್ದಾರೆ ಗೊತ್ತಿಲ್ಲ. ನಾನು ದೆಹಲಿಗೆ ಹೋಗಿಲ್ಲ. ಹೋಗುವ ಟೈಮ್ ಬರುತ್ತೆ. ಆಗ ಹೋಗ್ತೇನೆ ಎಂದರು.

    ಶೋಭಾ ಕರಂದ್ಲಾಜೆ ಮೆದುಳು ಇರಲಿಲ್ವ ಎಂದು ಮಾತನಾಡಿದ್ದಾರೆ. ಅವರು ಉದ್ಯೋಗ ಸೃಷ್ಟಿ ಮಾಡ್ತೀನಿ, 15 ಲಕ್ಷ ಕೊಡ್ತೀನಿ, ಕಪ್ಪು ಹಣ ತರ್ತೀನಿ ಅಂತ ಏಕೆ ಮಾತಾಡಿದ್ರು? 5 ವರ್ಷದಲ್ಲಿ ಅವರ ಪ್ರಣಾಳಿಕೆ ಪೂರ್ಣ ಮಾಡಲಿಲ್ಲ. ನಾವು ಮಾಡ್ತಿದ್ದೇವೆ. ನಮಗೆ ಬಡವರ ಬಗ್ಗೆ ಕಾಳಜಿ ಇದೆ ಎಂದು ಟಾಂಗ್‌ ಕೊಟ್ಟರು. ಇದನ್ನೂ ಓದಿ: ಅಕ್ರಮವಾಗಿ ಸಾಗಿಸ್ತಿದ್ದ 16,200 KG ಅಕ್ಕಿ ವಶಕ್ಕೆ

    ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರಿಗೆ ಜ್ಞಾನ ಇರಲಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಮಾತನಾಡಿ, ನಮಗೆ ಖಂಡಿತ ಜ್ಞಾನ ಇರಲಿಲ್ಲ. ಕುಮಾರಣ್ಣಗೆ ಜ್ಞಾನ ಇದೆಯಲ್ಲಾ ಸಾಕು. ಪ್ರಧಾನಿ ತಮ್ಮ ಬಳಿ ಅಲ್ಲದಿದ್ರೂ, ವಿದೇಶಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ನೀವೂ ಖುಷಿ ಪಡಿ ಎಂದು ಲೇವಡಿ ಮಾಡಿದ್ದಾರೆ.

  • ಕೊಲ್ಲೂರು ದೇಗುಲದಿಂದ ಬರ್ತಿದ್ದ ಒಂದು ಹಿಡಿ ಅಕ್ಕಿಯನ್ನೂ ನಿಲ್ಲಿಸಿರಲಿಲ್ಲ, ಆದ್ರೂ ಪ್ರತಿಭಟಿಸಿದ್ರು: ರಮಾನಾಥ ರೈ

    ಕೊಲ್ಲೂರು ದೇಗುಲದಿಂದ ಬರ್ತಿದ್ದ ಒಂದು ಹಿಡಿ ಅಕ್ಕಿಯನ್ನೂ ನಿಲ್ಲಿಸಿರಲಿಲ್ಲ, ಆದ್ರೂ ಪ್ರತಿಭಟಿಸಿದ್ರು: ರಮಾನಾಥ ರೈ

    – ಬಿಜೆಪಿ ಸರ್ಕಾರ ಮಕ್ಕಳಿಗೆ ನೀಡಿದ್ದು ಪೊಟ್ಟು ಸೈಕಲ್

    ಮಂಗಳೂರು: ಅಂದು ನಾವು ಮಕ್ಕಳಿಗೆ ಕೊಡುವ ಅನ್ನವನ್ನ ನಿಲ್ಲಿಸಿರಲಿಲ್ಲ. ದೇವಸ್ಥಾನದ ಹಣ ದುರುಪಯೋಗ ಆಗಬಾರದೆಂದು ತಡೆದಿದ್ವಿ. ನಾನು ಕೊಲ್ಲೂರು ದೇವಸ್ಥಾನ (Kolluru Temple) ದಿಂದ ಬರುತ್ತಿದ್ದ ಒಂದು ಹಿಡಿ ಅಕ್ಕಿಯನ್ನ ನಿಲ್ಲಿಸಿರಲಿಲ್ಲ. ಆದರೂ ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ರು ಎಂದು ಮಾಜಿ ಸಚಿವ ರಮಾನಾಥ ರೈ (Ramanatha Rai) ಯವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

    ರಾಜ್ಯ ಸರ್ಕಾರದ ಪ್ರತಿಷ್ಠಿತ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರದ ಅಸಹಕಾರ ವಿರೋಧಿಸಿ ನಗರದ ಕ್ಲಾಕ್ ಟಾವರ್ ಸರ್ಕಲ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಯುತ್ತಿದೆ. ಊಟದ ತಟ್ಟೆಗಳನ್ನು ಹಿಡಿದುಕೊಂಡು ತಟ್ಟೆ ಬಡಿಯುತ್ತಾ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ನಾಯಕರು, ಅಕ್ಕಿ ಪೂರೈಕೆ ಮಾಡಲು ನಿರಾಕರಿಸಿದ ಕೇಂದ್ರ ಬಿಜೆಪಿ ಸರ್ಕಾರ (BJP Government) ಬಡವರಿಗೆ ದ್ರೋಹ ಮಾಡುತ್ತಿದೆ ಎಂದು ಆರೋಪ ಮಾಡಿದರು. ಇದನ್ನೂ ಓದಿ; ಸರ್ಕಾರದಿಂದ ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ಬರುತ್ತಿದ್ದ ಅನುದಾನ ಕಟ್: ರಮಾನಾಥ ರೈ ಹೀಗಂದ್ರು!

    ಈ ವೇಳೆ ಮಾತನಾಡಿದ ರಮಾನಾಥ ರೈ, ಈ ಹಿಂದೆ ನಾನು ಅಧಿಕಾರದಲ್ಲಿದ್ದಾಗ ಮಕ್ಕಳಿಗೆ ಕೊಡುವ ಅನ್ನ ನಿಲ್ಲಿಸಿದ್ದೇನೆಂದು ಬಿಜೆಪಿಯವರು ಪ್ರತಿಭಟಿಸಿದ್ದರು. ನನ್ನ ವಿರುದ್ಧ ಅನ್ನದ ಬಟ್ಟಲು ತಟ್ಟಿ ಪ್ರತಿಭಟಿಸಿದ್ರು. ಅಂದು ನಾವು ಮಕ್ಕಳಿಗೆ ಕೊಡುವ ಅನ್ನವನ್ನೂ ನಿಲ್ಲಿಸಿರಲಿಲ್ಲ. ದೇವಸ್ಥಾನದ ಹಣ ದುರುಪಯೋಗ ಆಗಬಾರದೆಂದು ತಡೆದಿದ್ದೆವು. ನಾನು ಕೊಲ್ಲೂರು ದೇವಸ್ಥಾನದಿಂದ ಬರುತ್ತಿದ್ದ ಒಂದು ಹಿಡಿ ಅಕ್ಕಿಯನ್ನ ಕೂಡ ನಿಲ್ಲಿಸಿರಲಿಲ್ಲ. ಆದರೂ ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ರು. ಈಗ ನಮ್ಮ ಸರ್ಕಾರದ ಅನ್ನ ಭಾಗ್ಯ ಯೋಜನೆಗೆ ವಿರೋಧ ಮಾಡಲಾಗಿದೆ. ಕೇಂದ್ರ ಸರ್ಕಾರ (Central Government) ಈ ಯೋಜನೆಯನ್ನ ತಡೆದು ಬಡವರಿಗೆ ದ್ರೋಹ ಮಾಡುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಿಸಿಯೂಟ, ಶರತ್ ಮಡಿವಾಳ ಹತ್ಯೆ ಕುರಿತ ಆರೋಪಕ್ಕೆ ರಮಾನಾಥ ರೈ ಬೇಸರ

    ನಮಗೆ 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕಾಗಿದೆ. ನಮ್ಮ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕೆಂದೆ ಈ ರೀತಿ ಮಾಡಲಾಗಿದೆ. ಯಡಿಯೂರಪ್ಪ ನೇತೃತ್ವದ ಸರ್ಕಾರ ಶಾಲಾ ಮಕ್ಕಳಿಗೆ ಸೈಕಲ್ ನೀಡಿತ್ತು. ಆದರೆ ಒಂದು ವರ್ಷದಲ್ಲಿ ಸೈಕಲ್ (Cycle) ಮೂಲೆ ಸೇರಿತ್ತು. ಬಿಜೆಪಿ ಸರ್ಕಾರ ಮಕ್ಕಳಿಗೆ ನೀಡಿದ್ದು ಪೊಟ್ಟು ಸೈಕಲ್. ಬಿಜೆಪಿ ನಾಯಕರು ನೀಡಿದ್ದ ಭರವಸೆಯನ್ನು ಈವರೆಗೆ ಈಡೇರಿಸಲು ಸಾಧ್ಯವಾಗಿಲ್ಲ. ಹೊರ ದೇಶದಲ್ಲಿರುವ ಕಪ್ಪು ಹಣವನ್ನು ಈವರೆಗೂ ತರಲು ಇವರಿಗೆ ಸಾಧ್ಯವಾಗಿಲ್ಲ. ಈ ಬಿಜೆಪಿ ನಾಯಕರು ಆತ್ಮಹತ್ಯೆ ಮಾಡಿಕೊಳ್ಳಬೇಕು. ಬಿಜೆಪಿ ನಾಯಕರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ – ಸರ್ಕಾರದ ವಿರುದ್ಧ ಅಶೋಕ್‌ ಕಿಡಿ

  • ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ಮಾಡಿದರೂ ಅಕ್ಕಿ ಗ್ಯಾರಂಟಿ: ಸಿದ್ದರಾಮಯ್ಯ

    ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ಮಾಡಿದರೂ ಅಕ್ಕಿ ಗ್ಯಾರಂಟಿ: ಸಿದ್ದರಾಮಯ್ಯ

    – ತೆರೆದ ಮಾರುಕಟ್ಟೆ ಮಾರಾಟ ಯೋಜನೆಯಡಿ ರಾಜ್ಯಗಳಿಗೆ ಅಕ್ಕಿ ಮಾರಾಟ ಸ್ಥಗಿತಗೊಳಿಸಿ ಕೇಂದ್ರ ಪತ್ರ

    ಬೆಂಗಳೂರು: ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಶಕ್ತಿ ಭವನದಲ್ಲಿ ಬುಧವಾರ ಅನ್ನಭಾಗ್ಯ ಯೋಜನೆಗೆ (Anna Bhagya Scheme) ಸಂಬಂಧಿಸಿದಂತೆ ಕರೆಯಲಾಗಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆಟ್ರಿಕ್‌ ಟನ್ ಅಗತ್ಯವಿದೆ ಎಂದು ಕೋರಿ ಜೂ.9 ರಂದು ಪತ್ರ ಬರೆಯಲಾಗಿತ್ತು. ಇದಕ್ಕೆ ಜೂ.12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್‌ಗೆ 3,400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ತಿಂಗಳಿಗೆ 2.28 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿ ಬೇಕು, ಕೇಂದ್ರ ಕೊಡಲ್ಲ ಅಂತಾ ಹೇಳ್ತಿದೆ – ಸಿಎಂ ಕಿಡಿ

    ಜೂ.13 ರಂದು ಭಾರತ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯವು ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆದು 15 ಲಕ್ಷ ಮೆ. ಟನ್ ಗೋಧಿ ಹಾಗೂ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಮಾರಾಟ ಯೋಜನೆಯಡಿ (ಒಎಂಎಸ್‌ಎಸ್‌ಡಿ) ಮಾರಾಟ ಮಾಡಲು ಸೂಚಿಸಿದೆ. ಅಲ್ಲದೇ ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿ, ಇತರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿರುವ ಪತ್ರದ ವಿವರಗಳನ್ನು ಓದಿ ಹೇಳಿದ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರ ರಾಜಕೀಯವಾಗಿ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿದರು.

    ಎಫ್‌ಸಿಐ ಒಪ್ಪಿಗೆ ಪತ್ರದ ಆಧಾರದ ಮೇಲೆ ಜು.1 ರಿಂದ ಜಾರಿ ಮಾಡಲಾಗುವುದು ಎಂದು ಘೋಷಿಸಿದೆವು. ಎಫ್‌ಸಿಐನ ಪ್ರಧಾನ ವ್ಯವಸ್ಥಾಪಕ ಹರೀಶ್ ಎಂಬವರು 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸದೇ ಇರುವಂತೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ ಎಂದು ಸಿಎಂ ಆರೋಪ ಮಾಡಿದರು. ಇದನ್ನೂ ಓದಿ: ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲ ಭಾಗಿ ವಿವಾದ : ಕಾಂಗ್ರೆಸ್ ವಿರುದ್ಧ ಫೀಲ್ಡಿಗಿಳಿದ ವಿಪಕ್ಷಗಳು

    ಭತ್ತ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತೀಸ್‍ಗಢ, ಹರಿಯಾಣದವರಿಗೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಅಕ್ಕಿ ಸಂಗ್ರಹವಿಲ್ಲದಿರುವುದರಿಂದ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದಿದ್ದಾರೆ. ನಾಳೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ. ಅಂತೆಯೇ ಛತ್ತೀಸ್‌ಗಢ ರಾಜ್ಯದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಇಂದು ಸಂಜೆಯೊಳಗೆ ಲಭಿಸಲಿದೆ. ನಾಳೆ ಸಂಜೆಯೊಳಗೆ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಆಶಾಭಾವ ವ್ಯಕ್ತಪಡಿಸಿದರು.

    ಅಕ್ಕಿ ಇಟ್ಟುಕೊಂಡು ಕೊಡಲಾಗುವುದಿಲ್ಲ ಎಂದರೆ ಇವರನ್ನು ಬಡವರ ವಿರೋಧಿಗಳು ಎಂದು ಕರೆಯಬೇಕು. ಕೇಂದ್ರ ಸರ್ಕಾರ ಉಚಿತವಾಗಿಯೇನೂ ಅಕ್ಕಿ ನೀಡುವುದಿಲ್ಲ. ನಾವು ಹಣ ನೀಡಿ ಪಡೆಯುವುದು. ಇತರರಿಗೆ ಕೊಡುವ ರೀತಿಯಲ್ಲಿ ನಮಗೂ ಕೊಡುತ್ತಿದ್ದರು. ಆದರೆ ಈಗ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಅವರು ಬಂದಿದ್ದಾರೆ. ಈಗಲೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಪುನಃ ಮನವಿ ಮಾಡುವುದು ಇದ್ದೇ ಇರುತ್ತದೆ. ಆದರೆ ಈ ರೀತಿ ಮಾಡಿರುವುದರಿಂದ ಇದೊಂದು ಷಡ್ಯಂತ್ರ ಎಂದೇ ಪರಿಗಣಿಸಬೇಕಾಗುತ್ತದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಉಪಸ್ಥಿತರಿದ್ದರು.

  • ಎರಡು ತಿಂಗಳ GST ಪಾಲು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ- ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?

    ಎರಡು ತಿಂಗಳ GST ಪಾಲು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ- ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?

    ನವದೆಹಲಿ: ರಾಜ್ಯಗಳಲ್ಲಿ ವಿವಿಧ ಯೋಜನೆಗಳಿಗೆ ಹಣ ಹೂಡಿಕೆ ತ್ವರಿತಗೊಳ್ಳಲೆಂಬ ಉದ್ದೇಶದ ಹಿನ್ನೆಲೆಯಲ್ಲಿ ಮುಂದಿನ ತಿಂಗಳ ಸರಕು ಮತ್ತು ಸೇವಾ ತೆರಿಗೆ (GST) ಪಾಲನ್ನು ಸೇರಿಸಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ತಿಂಗಳಿಗೆ 59,140 ಕೋಟಿ ರೂ. ನೀಡಬೇಕಿದ್ದ ಕೇಂದ್ರ ಸರ್ಕಾರ (Central Government) ಈ ಬಾರಿ 1,18,280 ಕೋಟಿ ರೂ. ಹಣವನ್ನು ಸೋಮವಾರ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವರ್ಗಾಯಿಸಿದೆ.

    ವಿವಿಧ ರಾಜ್ಯಗಳಿಗೆ ನೀಡಲಾಗಿರುವ 1,18,280 ಕೋಟಿ ರೂ. ಪೈಕಿ ಕರ್ನಾಟಕ (Karnataka) ಕ್ಕೆ 4,314 ಕೋಟಿ ರೂ. ಬಿಡುಗಡೆ ಮಾಡಿದೆ. ಮಹಾರಾಷ್ಟ್ರ (Maharastra) ಕ್ಕೆ 7,472 ಕೋಟಿ ರೂ. ಬಿಡುಗಡೆಯಾಗಿದ್ದು ಮಹಾರಾಷ್ಟ್ರ ಮತ್ತು ಕರ್ನಾಟಕ ದೇಶದಲ್ಲಿ ಅತಿ ಹೆಚ್ಚು ಜಿಎಸ್‍ಟಿ ಸಂಗ್ರಹ ಮಾಡಿ ಕೇಂದ್ರಕ್ಕೆ ತಲುಪಿಸುವ ರಾಜ್ಯಗಳಾಗಿವೆ.

    ಜಿಎಸ್‍ಟಿ ಪಾಲಿನಲ್ಲಿ ಉತ್ತರಪ್ರದೇಶ (Uttarpradesh) ಕ್ಕೆ ದೊಡ್ಡ ಪಾಲು ದೊರಕಿದೆ. ಉತ್ತರ ಪ್ರದೇಶಕ್ಕೆ 21,218 ಕೋಟಿ ರೂ. ಬಿಡುಗಡೆಯಾಗಿದ್ದು, ಬಿಹಾರ (Bihar), ಮಧ್ಯಪ್ರದೇಶ (Madhyapradesh), ಪಶ್ಚಿಮ ಬಂಗಾಳ (West Bengal) ರಾಜ್ಯಗಳಿಗೆ 8,000 ಕೋಟಿ ರೂ.ಗಿಂತ ಹೆಚ್ಚು ಜಿಎಸ್‍ಟಿ ಪಾಲು ಜೂನ್ ತಿಂಗಳಲ್ಲಿ ಸಿಕ್ಕಿದೆ. ಇದನ್ನೂ ಓದಿ: ಅಮ್ಮ ಸಾಯುವ ಮುನ್ನ ನಮಗೆ ಈ ಮಾತು ಹೇಳಿದ್ದಳು..; ಅಮೆಜಾನ್‌ ಕಾಡಲ್ಲಿ ಸಿಲುಕಿದ್ದ ಮಕ್ಕಳ ಕರುಣಾಜನಕ ಕಥೆ ತೆರೆದಿಟ್ಟ ರಕ್ಷಣಾ ತಂಡ

    ಗುಜರಾತ್‍ಗೆ 4,114 ರೂ., ಛತ್ತೀಸ್‍ಗಡಗೆ 4,030 ರೂ., ಜಾರ್ಖಂಡ್‍ಗೆ 3,912 ರೂ., ಅಸ್ಸಾಂಗೆ 3,700 ರೂ., ತೆಲಂಗಾಣಕ್ಕೆ 2,486 ರೂ., ಕೇರಳಕ್ಕೆ 2,277 ರೂ., ಪಂಜಾಬ್‍ಗೆ 2,137 ರೂ., ಅರುಣಾಚಲಪ್ರದೇಶಕ್ಕೆ 2,078 ರೂ., ಉತ್ತರಾಖಂಡ್‍ಗೆ 1,322 ರೂ., ಹರಿಯಾಣಕ್ಕೆ 1,293 ರೂ. ಬಿಡುಗಡೆಯಾಗಿದೆ. ಹಿಮಾಚಲಪ್ರದೇಶ, ಮೇಘಾಲಯ, ಮಣಿಪುರ, ತ್ರಿಪುರಾ, ಗೋವಾ, ನಾಗಾಲ್ಯಾಂಡ್ ಹಾಗೂ ಸಿಕ್ಕಿಂಗೆ 800-900 ಕೋಟಿ ರೂ. ಬಿಡುಗಡೆಯಾಗಿದೆ. ರಾಜ್ಯಗಳ ಆರ್ಥಿಕ ಸ್ಥಿತಿಗಳಿಗೆ ಅನುಸಾರವಾಗಿ ಜಿಎಸ್‍ಟಿ ಪಾಲು ಹಂಚಿಕೆಯನ್ನು ಕೇಂದ್ರ ಸರ್ಕಾರ ಮುಂದುವರಿದ ರಾಜ್ಯಗಳಿಗೆ ಕಡಿಮೆ ಮತ್ತು ಹಿಂದುಳಿದ ರಾಜ್ಯಗಳಿಗೆ ಹೆಚ್ಚಿನ ಪಾಲು ನೀಡುತ್ತದೆ.