Tag: central minister

  • ಮಾಯಾವತಿ-ಕಾಂಗ್ರೆಸ್ ಯಾವತ್ತೂ ಒಟ್ಟಿಗೆ ಹೋಗಲ್ಲ, ಮೋದಿ ಮಣಿಸಲು ಯಾರಿಂದ್ಲೂ ಸಾಧ್ಯವಿಲ್ಲ- ಡಿವಿಎಸ್

    ಮಾಯಾವತಿ-ಕಾಂಗ್ರೆಸ್ ಯಾವತ್ತೂ ಒಟ್ಟಿಗೆ ಹೋಗಲ್ಲ, ಮೋದಿ ಮಣಿಸಲು ಯಾರಿಂದ್ಲೂ ಸಾಧ್ಯವಿಲ್ಲ- ಡಿವಿಎಸ್

    ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸಲು ಯಾರಿಂದಲೂ ಸಾಧ್ಯವಿಲ್ಲ. ಮಾಯಾವತಿ-ಕಾಂಗ್ರೆಸ್ ಯಾವತ್ತೂ ಒಟ್ಟಿಗೆ ಹೋಗುವುದಿಲ್ಲ ಅಂತ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿವಿ ಸದಾನಂದ ಗೌಡ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕ್ಷಣದಲ್ಲಿ ಸಮ್ಮಿಶ್ರ ಸರಕಾರ ಪತನವಾಗಬಹುದು. ಇವರು ಪ್ರತಿನಿತ್ಯ ಕುರ್ಚಿಗಾಗಿ ಕಚ್ಚಾಟ ನಡೆಸುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ. ಸಮ್ಮಿಶ್ರ ಸರಕಾರ ಯಾವಾಗ ಬೀಳುತ್ತೆ ಎಂದು ಜನ ಕಾಯುತ್ತಿದ್ದಾರೆ ಅಂತ ಹೇಳಿದ್ದಾರೆ.

    ಕಾಂಗ್ರೆಸ್- ಜೆಡಿಎಸ್ ಎರಡೂ ಪಕ್ಷಗಳು ಕುರ್ಚಿ ಉಳಿಸಿಕೊಳ್ಳಲು ಹೋರಾಡುತ್ತಿವೆ. ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಅಧಿಕಾರಿಗಳ ಹಿಡಿತ ಕಳಕೊಂಡಿದ್ದು ತಮಗೆ ಇಷ್ಟ ಬಂದಂತೆ ಆಡಳಿತ ನಡೆಸುತ್ತಿದ್ದಾರೆ. ಈ ಸರಕಾರ ಹೆಚ್ಚು ಕಾಲ ಬಾಳುವುದಿಲ್ಲ ಅನ್ನೋದು ನಿಶ್ಚಿತ ಅಂತ ಡಿವಿಎಸ್ ರಾಜ್ಯ ಸರಕಾರದ ಬಗ್ಗೆ ಭವಿಷ್ಯ ನುಡಿದ್ರು.

    ರಾಜ್ಯದಲ್ಲಿ ಇಷ್ಟು ಮಳೆಯಾಗುತ್ತಿದ್ದರೂ ಸರಕಾರ ಎಚ್ಚೆತ್ತುಕೊಂಡಿಲ್ಲ. ಜನರು ನೀರಿನಲ್ಲಿ ಮುಳುಗುತ್ತಿದ್ದಾರೆ. ಆದ್ರೆ ಇವರಿಗೆ ಕ್ಯಾರೇ ಇಲ್ಲ. ಇವರಿಗೆ ಇವರೇ ನಾಳೆ ಮುಳುಗಿ ಹೋಗುತ್ತಾರೆ ಎಂದು ಗೊತ್ತಿದೆ ಅದಕ್ಕೆ ಇವರು ಏನೂ ಮಾಡುತ್ತಿಲ್ಲ ಅನಿಸುತ್ತೆ. ದೇಶದಲ್ಲಿ ತೃತೀಯ ರಂಗ ಹರಿದ ಬಟ್ಟೆಯ ಹಾಗಾಗಿದೆ. ಒಬ್ಬರನ್ನು ನೋಡಿದರೆ ಇನ್ನೊಬ್ಬರಿಗೆ ಆಗುವುದಿಲ್ಲ ಅಂದ್ರು.

  • ಹೂಹಾರ ಹಾಕಿ ಆರೋಪಿಗಳನ್ನು ಸ್ವಾಗತಿಸಿದ್ದ ಮಗನ ವಿರುದ್ಧ ಮಾಜಿ ಕೇಂದ್ರ ಸಚಿವ ಗರಂ!

    ಹೂಹಾರ ಹಾಕಿ ಆರೋಪಿಗಳನ್ನು ಸ್ವಾಗತಿಸಿದ್ದ ಮಗನ ವಿರುದ್ಧ ಮಾಜಿ ಕೇಂದ್ರ ಸಚಿವ ಗರಂ!

    ರಾಂಚಿ: ಗೋ ರಕ್ಷಣೆಯ ಹೆಸರಿನಲ್ಲಿ ಕೊಲೆಗೈದ 7 ಆರೋಪಿಗಳಿಗೆ ಹೂಹಾರ ಹಾಕಿ ಆಕ್ರೋಶಕ್ಕೆ ಒಳಗಾಗಿದ್ದ ಜಯಂತ್ ಸಿನ್ಹಾ ವಿರುದ್ಧ ಇದೀಗ ತಂದೆ, ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಗರಂ ಆಗಿದ್ದಾರೆ.

    ಈ ಕುರಿತು ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸಿನ್ಹಾ, ಮಗನ ಈ ಕಾರ್ಯವನ್ನು ಯಾವುದೇ ಕಾರಣಕ್ಕೂ ನಾನು ಒಪ್ಪಲು ಸಿದ್ಧನಿಲ್ಲ. ಈ ಹಿಂದೆ ನಾನು ಒಬ್ಬ ನಾಲಾಯಕ್ ಮಗನ ಅಪ್ಪನಾಗಿದ್ದೆ. ಆದ್ರೆ ಇದೀಗ ಪಾತ್ರಗಳು ಬದಲಾಗಿವೆ. ಇದು ಟ್ವಿಟ್ಟರ್ ಮಹಿಮೆ ಅಂತ ಹೇಳೋ ಮೂಲಕ ಮಗನ ವಿರುದ್ಧ ಕೆಂಡಾಮಂಡಲಾಗಿದ್ದಾರೆ.

    ಏನಿದು ಘಟನೆ?:
    ಕಳೆದ ವರ್ಷ ಜೂನ್ ತಿಂಗಳಲ್ಲಿ ಜಾರ್ಖಂಡ್ ನ ರಾಮ್ ಗ್ರಹ್ ನಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ದನದ ಮಾಂಸವನ್ನು ಸಾಗಾಟ ಮಾಡುತ್ತಿದ್ದಾರೆಂದು ಆರೋಪಿಸಿ ಅವರನ್ನ ಕಾರಿನಿಂದ ಎಳೆದು ಹಲ್ಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ಮುಖಂಡ ಸೇರಿ 11 ಮಂದಿ ಜೈಲು ಪಾಲಾಗಿದ್ದರು. ಇದೀಗ ಒಂದು ವರ್ಷದ ನಂತರ ಜೂನ್ 29ರಂದು ಜಾರ್ಖಂಡ್ ಹೈಕೋರ್ಟ್ 8 ಆರೋಪಿಗಳ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿತ್ತು.ಹೀಗಾಗಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಇವರೆಲ್ಲರೂ ರಾಂಚಿಯಲ್ಲಿರೋ ಜಯಂತ್ ಸಿನ್ಹಾ ಅವರ ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ಸಚಿವರು ಎಲ್ಲರನ್ನೂ ಹಾರ ಹಾಕಿ ಸ್ವಾಗತಿಸಿದ್ದಾರೆ.

    ಈ ಕುರಿತ ಭಾವಚಿತ್ರಗಳು ಇದೀಗ ವೈರಲ್ ಆಗಿದ್ದು, ಇದೀಗ ಮಗ ಜಯಂತ್ ಸಿನ್ಹಾ ವಿರುದ್ಧ ತಂದೆ ಯಶ್ವಂತ್ ಸಿಂಗ್ ಕಿಡಿಕಾರಿದ್ದಾರೆ.

  • ಬಿಜೆಪಿ ಒಂದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ- ಅನಂತ್ ಕುಮಾರ್

    ಬಿಜೆಪಿ ಒಂದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ- ಅನಂತ್ ಕುಮಾರ್

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕವಾಗಿ ಹೊರಬಿದ್ದಿದ್ದು, ಬಿಜೆಪಿ ಒಂದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಅಂತ ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.

    ಸುದ್ದಿಗಾರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿದ್ದಾರೆ. ಸಿದ್ದರಾಮಯ್ಯನವರು ಚಾಮುಂಡೇಶ್ವರಿಯಲ್ಲಿ ಹೀನಾಯವಾಗಿ ಸೋತಿದ್ದಾರೆ. ಅಂದ್ರೆ ಕಾಂಗ್ರೆಸ್ ಮುಕ್ತ ಕರ್ನಾಟಕ ಅನ್ನೋದು ಮೋದಿಯವರ ಉಚ್ಛಾರ, ಅಮಿತ್ ಶಾ ಅವರ ಒಂದು ಮುಂದಾಳತನ ಹಾಗೂ ಯಡಿಯೂರಪ್ಪನವರ ನೇತೃತ್ವದಲ್ಲಿ ಕರ್ನಾಟಕದ ಜನ ಸಂಪೂರ್ಣವಾಗಿ ಆಶೀರ್ವಾದ ಮಾಡಿದ್ದಾರೆ ಅಂದ್ರು.

    ಜನ ಕಾಂಗ್ರೆಸ್ಸನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಭಾರತೀಯ ಜನತಾ ಪಾರ್ಟಿ ಒಂದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಜೆಡಿಎಸ್ ಕೂಡ ಗಣನೀಯವಾಗಿ ಗೆದ್ದಿದೆ. ಆದ್ರೆ ಕಾಂಗ್ರೆಸ್ ವಿರೋಧಿ ಮತ ಇಂದು ಜನ ಕೊಟ್ಟಿರುವುದರಿಂದ ಇಲ್ಲಿ ಮುಂದಿನ ಹೆಜ್ಜೆ ಏನಾಗಬೇಕು ಅಂತ ನಾವು ನಮ್ಮ ಕೇಂದ್ರೀಯ ನಾಯಕರುಗಳ ಜೊತೆಯಲ್ಲಿ ಚರ್ಚೆ ಮಾಡಿ ತಿಳಿಸುತ್ತೇವೆ ಅಂತ ಹೇಳಿದ್ರು.

  • ಸಿಎಂ ನಮ್ಮನ್ನು ಒಡೀತಾನೆ, ದೇವಸ್ಥಾನ, ಮಠದ ಆದಾಯದ ಮೇಲೆ ಕಣ್ಣಾಕಿದ್ದಾನೆ- ಸಿಎಂ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ವಾಗ್ದಾಳಿ

    ಸಿಎಂ ನಮ್ಮನ್ನು ಒಡೀತಾನೆ, ದೇವಸ್ಥಾನ, ಮಠದ ಆದಾಯದ ಮೇಲೆ ಕಣ್ಣಾಕಿದ್ದಾನೆ- ಸಿಎಂ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ವಾಗ್ದಾಳಿ

    ಬೆಳಗಾವಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ನಾಲಗೆ ಹರಿಯಬಿಟ್ಟಿದ್ದು, ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

    ಬೆಳಗಾವಿ ಜಿಲ್ಲೆಯ ಕಿತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತಯಾಚಣೆ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯ ನಮ್ಮನ್ನು ಒಟ್ಟಾಗಿರೋಕೆ ಬಿಡಲ್ಲ. ನಮ್ಮನ್ನು ಒಡೀತಾನೆ, ದೇಶವನ್ನು ಹಾಳು ಮಾಡ್ತಾನೆ. ದೇವಸ್ಥಾನ, ಮಠದ ಆದಾಯದ ಮೇಲೆ ಕಣ್ಣಾಕಿದ್ದಾನೆ. ನಾವೆಲ್ಲಾ ಒಟ್ಟಾಗಿ ನಿಲ್ಲಲ್ಲ ಅನ್ನೋದು ನಮ್ಮ ವೀಕ್ನೆಸ್. ದೇಶದಲ್ಲಿ ಕಾಂಗ್ರೆಸ್ ಕೇವಲ ಸೋಲಬಾರದು. ಆತ್ಮಹತ್ಯೆ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಹೀನಾಯವಾಗಿ ಸೋತು ಇನ್ನೆಂದೂ ಮತ ಕೇಳೋಕೆ ಬರಬಾರದು ಅಂತ ಕಿಡಿಕಾರಿದ್ದಾರೆ.


    ಹಿಂದೂಗಳಲ್ಲಿ ಇರೋ ಜಾತಿ ಪದ್ಧತಿಯಲ್ಲಿ ನಾವು ಒಡೆದು ಸಾಯುತ್ತಿದ್ದೇವೆ. ನಾವೆಲ್ಲ ನಮ್ಮ ದೇಶ, ಧರ್ಮ ಎಂದು ಒಟ್ಟಾದ್ರೆ ಸಿದ್ದರಾಮಯ್ಯನಂತಹ ಕುತಂತ್ರಿಗಳು ಈ ದೇಶದಲ್ಲಿ ಬದುಕಲು ಸಾಧ್ಯವಿಲ್ಲ.  70 ವರ್ಷದಿಂದ ಪಾಪ ಮಾಡಿರುವ ಕಾಂಗ್ರೆಸ್ ಗೆ ಇಲ್ಲಿ ಬದುಕಲು ಅಧಿಕಾರವಿಲ್ಲ. ನೀವೇನಾದ್ರೂ ಕಾಂಗ್ರೆಸ್ಸಿಗರನ್ನ ಒಡೆದ್ರೆ ನಿಮ್ಮ ಕೈ ಕೊಳೆಯಾಗುತ್ತೆ. ಹೀಗಾಗಿ ಅವರೇ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿ. ಕಾಂಗ್ರೆಸ್ ಗೆ ನೈತಿಕತೆ ಇದ್ರೆ, ದೇಶದ ಬಗ್ಗೆ ಕಳಕಳಿ ಇದ್ರೆ, ಇನ್ನೂ ಮುಂದೆ ಸುಳ್ಳು ಹೇಳುವುದಿಲ್ಲ ಎಂದು ಹೇಳಿ ಮುಖಕ್ಕೆ ಮಸಿ ಬಡಿದುಕೊಂಡು ಹೋಗಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ ನ ಆತ್ಮಹತ್ಯೆ ಸಿದ್ಧತೆ ನಡೆದಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಎಲ್ಲವೂ ವ್ಯವಸ್ಥಿತವಾಗಿ ನಡೆಯುತ್ತಿದೆ ಅಂತ ಹೇಳಿದ್ರು.

    ಕಾಂಗ್ರೆಸ್ ನ ದೊಡ್ಡ ದೊಡ್ಡ ನೇತಾರರು ಆ ಮನೆ ಖಾಲಿ ಮಾಡಿ ಬಿಜೆಪಿಗೆ ಬರುತ್ತಿದ್ದಾರೆ. ದೆವ್ವ ಹೊಕ್ಕಿರುವ ಮನೆಯಲ್ಲಿ ಯಾರು ಇರುವುದಿಲ್ಲ. ಸಿದ್ದರಾಮಯ್ಯ ಇರುವ ಕಡೆ ಯಾರು ನಿಲ್ಲುವುದಿಲ್ಲ. ಕರ್ನಾಟಕದ ಜನ ತೀರ್ಮಾನ ಮಾಡಿದ್ದಾರೆ. ಸಿದ್ದರಾಮಯ್ಯನ ಮನೆಗೆ ಕಳುಹಿಸಬೇಕು ಯಡಿಯೂರಪ್ಪನ ಸಿಎಂ ಮಾಡಬೇಕೆಂದು. ಮೋದಿಯವರ ಯೋಜನೆ ಇಲ್ಲಿನ ಹಳ್ಳಿಗಳಿಗೆ ಬಂದಿಲ್ಲ. ಇದಕ್ಕೆ ಕಾರಣ ಕರ್ನಾಟಕದಲ್ಲಿ ರಾವಣ ರಾಜ್ಯ ಇದೆ ಎಂದು ಕಿಡಿಕಾರಿದ್ರು.

    ಪಡಿತರ ಅಕ್ಕಿಗೆ ಮೋದಿ 29ರೂ. ಕೋಡ್ತಾರೆ. ರಾಜ್ಯ ಸರ್ಕಾರ 3ರೂ. ಕೊಡ್ತಾರೆ. ಆದ್ರೇ ಬಿಕನಾಸಿ ಸಿದ್ದರಾಮಯ್ಯ ಗೆ ಮೋದಿ ಫೋಟೋ ಹಾಕುವ ಯೋಗ್ಯತೆ ಇಲ್ಲ. ಮೋದಿ ಕರ್ನಾಟಕ ಸರ್ಕಾರಕ್ಕೆ 1.63 ಸಾವಿರ ಕೋಟಿ ಅಭಿವೃದ್ಧಿಗೆ ಕೊಟ್ಟಿದ್ದಾರೆ. ಆದ್ರೆ ಈ ಹಣವನ್ನ ಕಾಂಗ್ರೆಸ್ ನವರು ಮೊದಲನೇ ಮನೆಯಲ್ಲಿ ಇಡ್ತಾರೋ, ಎರಡನೇ ಮನೆಯಲ್ಲಿ ಇಡ್ತಾರೋ ಗೊತ್ತಾಗುವುದಿಲ್ಲ ಅಂತ ವಾಗ್ದಾಳಿ ನಡೆಸಿದ್ದಾರೆ.

  • ಧರ್ಮ ಒಡೆಯುವವರು ಯಾರೇ ಆದ್ರೂ ನಾವು ಕ್ಷಮಿಸಲ್ಲ- ಸಿಎಂ ವಿರುದ್ಧ ಹೆಗ್ಡೆ ವಾಗ್ದಾಳಿ

    ಧರ್ಮ ಒಡೆಯುವವರು ಯಾರೇ ಆದ್ರೂ ನಾವು ಕ್ಷಮಿಸಲ್ಲ- ಸಿಎಂ ವಿರುದ್ಧ ಹೆಗ್ಡೆ ವಾಗ್ದಾಳಿ

    ಯಾದಗಿರಿ: ರಾಜ್ಯ ಸರ್ಕಾರವು ಜಾತಿ ಒಡೆಯುವ ಕೆಲಸ ಮಾಡುತ್ತಿದೆ ಅಂತ ಕೇಂದ್ರ ಸಚಿವ ಅನಂತ್ ಕುಮಾರ ಹೆಗ್ಡೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಶ್ರೀರಾಮ ನವಮಿ ಪ್ರಯುಕ್ತ ಹಿಂದೂ ವಿರಾಟ್ ಸಮಾವೇಶವನ್ನು ನಗರದ ವಣಿಕೇರಿ ಲೇಔಟ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಸಚಿವರು, ಕಾಂಗ್ರೆಸ್ ಸರ್ಕಾರವು ಹಿಂದೂ ಕಾರ್ಯಕರ್ತರ ಬಗ್ಗೆ ಚರ್ಚೆ ಮಾಡುತ್ತಿದೆ. ಸಮಾಜ ಒಡೆಯುವರು ಯಾರೆ ಇದ್ರು ಅವರಿಗೆ ತಕ್ಕ ಪಾಠವನ್ನು ಕಲಿಸಬೇಕು. ನಮ್ಮ ಅಪ್ಪ-ಅಮ್ಮನೇ ಆದ್ರೂ ಅವರನ್ನೂ ಕೂಡ ನಾನು ಕ್ಷಮಿಸುವುದಿಲ್ಲ ಅಂತ ಗುಡುಗಿದ್ದಾರೆ.

    ದೇಶಕ್ಕೆ ಮೋದಿಯಂತಹ ಒಳ್ಳೆ ನಾಯಕ ಸಿಕ್ಕಿದ್ದಾರೆ, ಇಷ್ಟು ವರ್ಷ ದೇಶ ಆಡಳಿತ ನಡೆಸಿ ದೇಶ ಕೊಳ್ಳೆ ಹೊಡೆದಿರುವ ಕಾಂಗ್ರೆಸ್‍ನವರಿಗೆ ನಾಚಿಕೆಯಾಗಬೇಕು. ಈ ದೇಶವನ್ನು ತುಂಡು ಮಾಡಿದ ಕಾಂಗ್ರೆಸ್ ಈಗ ಒಡೆದಾಳುವ ನೀತಿಯಿಂದ ಸಮಾಜ ವಿಭಜನೆ ಮಾಡುತ್ತಿದೆ ಅಂತ ಕಿಡಿಕಾರಿದ್ದಾರೆ.

  • ಸಚಿವರ ಹೆಸ್ರಲ್ಲಿ ಫೇಸ್‍ಬುಕ್‍ನಲ್ಲಿ ಪೋಸ್ಟ್- ಅನಂತ್ ಕುಮಾರ್ ಹೆಗ್ಡೆ ಪಿಎಯಿಂದ ದೂರು

    ಸಚಿವರ ಹೆಸ್ರಲ್ಲಿ ಫೇಸ್‍ಬುಕ್‍ನಲ್ಲಿ ಪೋಸ್ಟ್- ಅನಂತ್ ಕುಮಾರ್ ಹೆಗ್ಡೆ ಪಿಎಯಿಂದ ದೂರು

    ಕಾರವಾರ: ಕೇಂದ್ರ ಕೌಶಾಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದು ಪೋಸ್ಟ್ ಮಾಡಿದ ವ್ಯಕ್ತಿಗಳ ವಿರುದ್ಧ ಸಚಿವರ ಆಪ್ತ ಕಾರ್ಯದರ್ಶಿ ದೂರು ದಾಖಲಿಸಿದ್ದಾರೆ.

    ಸಚಿವರ ಫೋಟೋದೊಂದಿಗೆ ಕೆಂಪೇ ಗೌಡ ಅವರ ವಿರುದ್ಧ ವಿವಾದಿತ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರ್ಕೆಟ್ ಠಾಣೆಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ದೂರು ದಾಖಲಿಸಿದ್ದಾರೆ.

    ಚುನಾವಣೆಯ ಸಂದರ್ಭದಲ್ಲಿ ಈ ರೀತಿಯ ಆಕ್ಷೇಪಾರ್ಹ ಸಂದೇಶಗಳನ್ನು ಹರಿಯಬಿಟ್ಟಿರುವುದು ಸಮಾಜದಲ್ಲಿ ಗೊಂದಲ ನಿರ್ಮಿಸಿ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡ ಭಾವನೆಯನ್ನು ಕೆರಳಿಸಿ, ಜಾತಿ ಗಲಭೆಗಳನ್ನು ಸೃಷ್ಟಿಸಲು ಪಿತೂರಿ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಅಲ್ಲದೇ ಅನಂತ್ ಕುಮಾರ್ ಹೆಗ್ಡೆಯವರ ಹೆಸರನ್ನು ತೇಜೋವಧೆ ಮಾಡುವ ಉದ್ದೇಶದಿಂದಲೇ ಸಂದೆಶಗಳನ್ನು ಹಾಕಿರುತ್ತಾರೆ. ಈ ಹಿನ್ನೆಲೆಯಲ್ಲಿ ಫೇಸ್ ಬುಕ್ ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಯುಆರ್ ಎಲ್ ಲಿಂಕ್ ಗಳನ್ನು ನೀಡಿ ಮನವಿ ಮಾಡಿದ್ದಾರೆ.

    ಫೇಸ್ ಬುಕ್ ಪೋಸ್ಟ್ ನಲ್ಲೇನಿದೆ?
    `ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಕೆಂಪೇಗೌಡರ ಪ್ರತಿಮೆ ಉರುಳಿಸ್ತೇವೆ. ಅಲ್ಲದೇ ಕೆಂಪೇಗೌಡರ ಪ್ರತಿಮೆ ಉರುಳಿಸಿ ಶಿವಾಜಿ ಪ್ರತಿಮೆಯನ್ನು ಸ್ಥಾಪಿಸುತ್ತೇವೆ’ ಅಂತ ಸಚಿವರ ಫೋಟೋದೊಂದಿಗೆ ಈ ಹೇಳಿಕೆಯನ್ನು ಬರೆಯಲಾಗಿದೆ.

    ಪ್ರಜಾಕೀಯ ಸಪೋರ್ಟರ್ಸ್ ಹೆಸರಿನ ಫೇಸ್‍ಬುಕ್ ಖಾತೆಯಲ್ಲಿ ಈ ಪೋಸ್ಟ್ ಹಾಕಲಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಚಿವ ಅನಂತ್ ಕುಮಾರ್ ಹೆಗಡೆ ಈ ಹೇಳಿಕೆ ನೀಡಿದ್ದಾರೆ ಎಂದು ಎಂದು ಜನ ಭಾವಿಸಿ ಅವರ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದಾರೆ.

  • ಮಾತೃಭಾಷೆಯನ್ನು ಕಡೆಗಣಿಸಿ ಮಕ್ಕಳಿಗೆ ಬಲವಂತದ ಮಾಘ ಸ್ನಾನ ಮಾಡೋದು ಅವಮಾನದ ಲಕ್ಷಣ: ಹೆಗ್ಡೆ

    ಮಾತೃಭಾಷೆಯನ್ನು ಕಡೆಗಣಿಸಿ ಮಕ್ಕಳಿಗೆ ಬಲವಂತದ ಮಾಘ ಸ್ನಾನ ಮಾಡೋದು ಅವಮಾನದ ಲಕ್ಷಣ: ಹೆಗ್ಡೆ

    ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಭಾಷೆಯ ಕುರಿತಂತೆ ನೀಡಿದ್ದ ಹೇಳಿಕೆ ಸುದ್ದಿಯಾಗುತ್ತಿದ್ದಂತೆಯೇ ಕೌಶಾಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆಯವರು ಸ್ಪಷ್ಟನೆ ನೀಡಿದ್ದಾರೆ.

    ಭಾಷೆಯ ಕುರಿತು ಮಾತನಾಡಿದರ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಸ್ಪಷ್ಟನೆ ನಿಡಿದ್ದಾರೆ. ಅಲ್ಲದೇ ಅದರ ಜೊತೆಗೆ ಒಂದು ವಿಡಿಯೋ ಕೂಡ ಅಪ್ಲೋಡ್ ಮಾಡಿದ್ದಾರೆ.

    ಫೇಸ್‍ಬುಕ್ ನಲ್ಲಿ ಬರೆದುಕೊಂಡಿರೋದೇನು?: ಮಾತೃ ಭಾಷೆಯ ಉಳಿವು ಪ್ರಶ್ನೆಯಲ್ಲ. ಬದಲಿಗೆ ಇಂದು ಅವು ಗಟ್ಟಿಯಾಗಿ ಇನ್ನು ಹಲವಾರು ತಲೆಮಾರಿಗೆ ಶ್ರೀಮಂತವಾಗಿ ಧಾರೆಯೆರೆಯುವ ಒಂದು ಸುವ್ಯವಸ್ಥೆಯನ್ನು ನಿರ್ಮಾಣ ಮಾಡಬೇಕಿದೆ. ಇಂದು ಬಹುತೇಕ ಭಾಷೆಯ ಬಗ್ಗೆ ಹೋರಾಟ ಕೇವಲ ವೈಯಕ್ತಿಕ ಮತ್ತು ರಾಜಕೀಯ ಕೀಳು ದೊಂಬರಾಟವಾಗಿ ಮಾರ್ಪಟ್ಟಾಗಿರುವುದು ಪ್ರಸ್ತುತ ನಮ್ಮ ಸಮಾಜದ ಒಂದು ದೊಡ್ಡ ದುರಂತ. ಆಂಗ್ಲ ಮಾಧ್ಯಮದ ಪ್ರಭಾವ ನಮ್ಮ ಶಾಲಾ ಶಿಕ್ಷಣ ವ್ಯವಸ್ಥೆಯನ್ನೇ ಬುಡಮೇಲುಗೊಳಿಸಿದೆ. ಶುದ್ಧವಾಗಿ ಕನ್ನಡ ಭಾಷೆ ಮಾತನಾಡುವುದು ಸಹ ಇಂದು ಒಂದು ಅಪರೂಪದ ಕಲೆಯಾಗಿ ನೋಡಲಾಗುತ್ತಿದೆ ಮತ್ತು ಇಂದಿನ ತಲೆಮಾರಿನ ಹಲವರಿಗೆ ಶುದ್ಧ ಕನ್ನಡ ಅರ್ಥವಾಗದಿರುವ ಭಾಷೆಯು ಹೌದು. ಕನ್ನಡ ಸಂಭಾಷಣೆಯಲ್ಲಿ ಆಂಗ್ಲ ಮತ್ತು ಇನ್ನಿತರ ಭಾಷೆಯ ಕಲಸು ಮಿಶ್ರಿತ ಮಾಡದಿದ್ದರೆ ಸಂವಹನ ಪೂರ್ಣಗೊಳ್ಳುವುದಿಲ್ಲ ಮತ್ತು ಅದು ಒಂದು sಣಚಿಣus ನಿರ್ಮಾಣ ಮಾಡುವುದಿಲ್ಲವೆನ್ನುವುದು ಸಹ ಇಂದಿನ ಹದೆಗೆಟ್ಟ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ಇದು ಹೆಚ್ಚಾಗಿ ಬೆಂಗಳೂರು ನಗರದಲ್ಲಿ ಕಂಡು ಬರುತ್ತಿದ್ದ ಒಂದು ನಕಾರಾತ್ಮಕ ಬೆಳವಣಿಗೆ. ಇಂದು ಬೇರೆ ಗ್ರಾಮಾಂತರ ಹಳ್ಳಿ- ಪಟ್ಟಣಗಳಿಗೆ ಸಹ ದಟ್ಟವಾಗಿ ವ್ಯಾಪಿಸುತ್ತಿದೆ. ಇದನ್ನೂ ಓದಿ: ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ತಿರುಗಿ ಬಿದ್ದ ಶಾಸಕ ಸುರೇಶ್ ಕುಮಾರ್

    ಭಾಷೆಯ ಶ್ರೀಮಂತಿಕೆಯನ್ನು ಹೆಮ್ಮೆಯಿಂದ ಮೆರೆಯಬೇಕಾದವರು ಇಂದು ಅದನ್ನು ಕಡೆಗಣಿಸುತ್ತಿದ್ದೇವೆ. ಇಂದು ಹಲವಾರು ಭಾರತೀಯರ ಮನೆಮಾತು ಆಂಗ್ಲ ಭಾಷೆಯಾಗಿ ಬದಲಾಗಿದೆ. ಹಾಗಾದರೆ ನಮ್ಮ ಎಲ್ಲ ಭಾರತೀಯ ಭಾಷೆಗಳು ನಮ್ಮ ಇಂದಿನ ಸ್ಥಿತಿ-ಗತಿಗೆ ಸಮರ್ಥವಲ್ಲವೇ? ನಮ್ಮ ಕನ್ನಡದಷ್ಟು ವೈವಿಧ್ಯ ಚೆಲುವನ್ನು ಇನ್ನೆಲ್ಲಿ ಕಾಣಲು ಸಾಧ್ಯ? ನಗರಗಳಲ್ಲಿ ಇಂದು ಅಂತರರಾಷ್ಟ್ರೀಯ ಶಾಲೆಗಳಲ್ಲಿ ನಮ್ಮ ಮಾತೃ ಭಾಷೆಯನ್ನು ಸಂಪೂರ್ಣವಾಗಿ ಕಡೆಗಣಿಸಿ, ಐರೋಪ್ಯ ಭಾಷೆಗಳ ಹೇರಿಕೆ ನಡೆಯುತ್ತಿದೆ. ಈ ಭಾಷೆಗಳು ಇಂದು ಯುರೋಪ್ ಖಂಡದ ಆಯಾ-ಪ್ರದೇಶ ದೇಶಗಳಲ್ಲೇ ಅವನತಿಯತ್ತ ಸಾಗುತ್ತಿದೆ. ಮೂಲ ಜನಸಂಖ್ಯೆ ಕುಸಿತ, ವಲಸೆ ಭಾಷೆಯ ಬೆಳೆಯುತ್ತಿರುವ ಪ್ರಭಾವ, ಬದಲಾಗುತ್ತಿರುವ ಜನಸಂಖ್ಯೆ ಪರಿವರ್ತನೆ, ಇಂದು ಈ ಖಂಡದ ಪ್ರಮುಖ ಸವಾಲಾಗಿದೆ. ಆದರೆ ನಾವು ಇಂದು, ಅರ್ಥವಾಗದ ಮತ್ತು ನಮ್ಮ ಪರಂಪರೆಗೆ ಯಾವುದೇ ಸಂಬಂಧವಿಲ್ಲದ ಈ ವಿದೇಶಿ ಭಾಷೆಗಳಿಗೆ ಮನ್ನಣೆ ನೀಡುತ್ತಿದ್ದೇವೆ. ಹಾಗೂ ನಮ್ಮ ಮಾತೃಭಾಷೆಯನ್ನು ಕಡೆಗಣಿಸಿ ಮಕ್ಕಳಿಗೆ ಬಲವಂತದ ಮಾಘಸ್ನಾನ ಮಾಡಿಸುತ್ತಿರುವುದು ಅವಮಾನದ ಲಕ್ಷಣವೆಂದೇ ಪರಿಗಣಿಸುತ್ತೇನೆ. ಇದನ್ನೂ ಓದಿ: ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗೆ ನಟ ಜಗ್ಗೇಶ್ ಟಾಂಗ್

    ಭಾಷೆ ನಮ್ಮ ಸಂಸ್ಕೃತಿಯನ್ನು ಸೂಚಿಸುತ್ತದೆ. ಇಂದು ಕನ್ನಡಿಗರಿಗೆ ಸಿಗುತ್ತಿರುವ ಸ್ಥಾನ-ಮಾನ, ಮರ್ಯಾದೆ ಎಲ್ಲವೂ ನಮ್ಮ ಶ್ರೀಮಂತ ಪರಂಪರೆಯ ಬಳುವಳಿಯಿಂದ ಬಂದದ್ದು. ಅದನ್ನು ನಾವು ಹೆಮ್ಮೆಯಿಂದ ಬಳಸಿ, ಉಳಿಸಿ ಇನ್ನಷ್ಟು ಮೆರುಗುಗೊಳಿಸುವುದು ನಮ್ಮನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುತ್ತದೆ. ಶುದ್ಧ ಕನ್ನಡ ಬಳಕೆ ನಮ್ಮ ವ್ಯಕ್ತಿತ್ವ ನಿರ್ಮಾಣ ಮಾಡುವುದು ಹಾಗೂ ಸಂವಹನದಲ್ಲಿ ಹೆಚ್ಚಿನ ಆಲೋಚನೆಯ ನಿಖರತೆಯನ್ನು ತಲುಪಬಹುದಾಗಿದೆ.

    ವಿಡಿಯೋದಲ್ಲೇನಿದೆ?: ಇದಷ್ಟು ಹೇಳಲು ಕಾರಣ ನಮ್ಮ ಕೆಲವು ದೃಶ್ಯ ಮಾಧ್ಯಮದವರು ಭಾಷೆಗೆ ಸಂಬಂಧಿಸಿದಂತೆ ಪುತ್ತೂರಿನ ಕಾರ್ಯಕ್ರಮ ಒಂದರಲ್ಲಿ ನನ್ನ ಮಾತು ಮತ್ತು ಆಲೋಚನೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿರುವುದ್ದಕ್ಕೆ ಹೃದಯಪೂರ್ವಕ ಸ್ವಾಗತ. ಹೀಗೆ ಕಳೆದ 2 ದಶಕಕ್ಕೂ ಹೆಚ್ಚಿನ ನನ್ನ ರಾಜಕಾರಣದ ಜೀವನದ ಉದ್ದಕ್ಕೂ ಸದಾ ನನ್ನ ಬಗ್ಗೆ ವಿಷಕಾರುತ್ತಲೇ ನನ್ನನ್ನು ಅನಾವರಣಗೊಳಿಸಿದ ಈ ಕೆಲವು ಮಾಧ್ಯಮದ ಮಂದಿಗೆ ಈ ವಿಷಯವನ್ನು ಇನ್ನು ಹೆಚ್ಚಾಗಿ ನಿಮ್ಮ ಅಪ್ರಬುದ್ಧ ಭಾಷೆಯಲ್ಲೇ ಚರ್ಚೆ ಮುಂದುವರಿಸುವಂತೆ ಶುಭ ಕೋರುತ್ತೇನೆ. ಅನಂತ ಧನ್ಯವಾದಗಳು ಅಂತ ಹೇಳಿದ್ದಾರೆ.

    https://www.youtube.com/watch?v=tlNDCv9myi4&feature=youtu.be

    https://www.youtube.com/watch?v=jE4xn6DpZhY

    https://www.youtube.com/watch?v=24frMpm0HGY

  • ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ತಿರುಗಿ ಬಿದ್ದ ಶಾಸಕ ಸುರೇಶ್ ಕುಮಾರ್

    ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ತಿರುಗಿ ಬಿದ್ದ ಶಾಸಕ ಸುರೇಶ್ ಕುಮಾರ್

    ಬೆಂಗಳೂರು: ಕೇಂದ್ರ ಕೌಶಾಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಇದೀಗ ಶಾಸಕ ಸುರೇಶ್ ಕುಮಾರ್ ತಿರುಗಿ ಬಿದ್ದಿದ್ದಾರೆ.

    ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಕನ್ನಡ ಯೋಗ್ಯ ಎಂಬ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿಕೆಯನ್ನು ನಾನು ವಿರೋಧಿಸುತ್ತೇನೆ. ಕೇಂದ್ರ ಸಚಿವರಾಗಿ ಆ ಕನ್ನಡ, ಈ ಕನ್ನಡ, ಯೋಗ್ಯ ಕನ್ನಡ ಅನ್ನಬಾರದು. ಚಾಮರಾಜನಗರದಿಂದ ಬೀದರ್ ತನಕವೂ ಯೋಗ್ಯ ಕನ್ನಡ ಇದೆ. ಬೆಂಗಳೂರಿಗನಾಗಿ ನಾನು ಯೋಗ್ಯ ಕನ್ನಡ ಮಾತಾಡ್ತೀನಿ. ಜವಾಬ್ದಾರಿಯುತ ಕೇಂದ್ರ ಸಚಿವರಾಗಿ ಅನಂತಕುಮಾರ್ ಹೆಗಡೆ ಈ ರೀತಿ ಮಾತನಾಡಬಾರದಿತ್ತು. ಹೀಗಾಗಿ ಕೂಡಲೇ ತಮ್ಮ ಹೇಳಿಕೆ ವಾಪಸ್ ಪಡೆಯಬೇಕೆಂದು ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ.

    ಹೆಗ್ಡೆ ನೀಡಿದ್ದ ಹೇಳಿಕೆಯೇನು?: ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಧಾನ ಮಂತ್ರಿ ಕೌಶಲ್ಯ ಯೋಜನೆ ಅಡಿಯಲ್ಲಿ ಆರಂಭಿಸಲಾದ ಉಚಿತ ತಾಂತ್ರಿಕ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ದ ಹೆಗ್ಡೆಯವರು, ಇಂಗ್ಲಿಷ್ ಅನ್ನು ಶುದ್ಧ ಕನ್ನಡಕ್ಕೆ ಭಾಷಾಂತರ ಮಾಡುವುದೇ ಇಂದಿನ ಸವಾಲು. ಶುದ್ಧ ಕನ್ನಡ ಯಾರಲ್ಲೂ ಇಲ್ಲ. ಎಲ್ಲೋ ಒಂದು ಕಡೆ ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಪ್ರದೇಶದವರನ್ನು ಹೊರತುಪಡಿಸಿದರೆ ಇತರರಿಗೆ ಸರಿಯಾಗಿ ಕನ್ನಡ ಮಾತನಾಡುವ ಯೋಗ್ಯತೆಯೇ ಇಲ್ಲ ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದರು. ಇದನ್ನೂ ಓದಿ: ಸುಳ್ಳು ಸುದ್ದಿ ಹರಡಿದವರ ವಿರುದ್ಧ ಸಚಿವ ಹೆಗ್ಡೆ ಯಿಂದ ಕೇಸ್ ದಾಖಲು

    ಬೆಂಗಳೂರಿನ ಪರಿಸ್ಥಿತಿಯಂತೂ ಕೇಳುವುದೇ ಬೇಡ. ಅಲ್ಲಿನ ಸ್ಥಿತಿ ಚಿಂತಾಜನಕವಾಗಿದೆ. ಬೇಸಿಕ್ ಸ್ಕಿಲ್ ಇಲ್ಲದ ಸಿದ್ದಣ್ಣ ಸರಕಾರ ಇದೆ. ರೀಜನಲ್ ಸ್ಕಿಲ್ ಗ್ಯಾಪ್ ಎನಾಲಿಸಿಸ್ ಮಾಡಲು ಕೇಂದ್ರ ಸರಕಾರ ನಮ್ಮ ರಾಜ್ಯ ಸರಕಾರಕ್ಕೆ ಅನುದಾನ ನೀಡಿದೆ. ಅದನ್ನು ನಮ್ಮ ಸಿದ್ದಣ್ಣ ಸರಕಾರ ಹೇಗೆ ಬಳಸುತ್ತದೋ ನೋಡಬೇಕು. ಬೇಸಿಕ್ ಸ್ಕಿಲ್ ಇಲ್ಲದವರು ಏನು ಮಾಡುತ್ತಾರೆ ಎಂದು ಲೇವಡಿ ಮಾಡಿದ್ದರು.

    https://www.youtube.com/watch?v=24frMpm0HGY

    https://www.youtube.com/watch?v=jE4xn6DpZhY

  • ಸಾಧನಾ ಸಮಾವೇಶಕ್ಕೆ ಕೊಲ್ಲೂರಿನಿಂದ ಊಟ- ಆಡಳಿತ ಮಂಡಳಿ ವಿರುದ್ಧ ಡಿವಿಎಸ್ ಕಿಡಿ

    ಸಾಧನಾ ಸಮಾವೇಶಕ್ಕೆ ಕೊಲ್ಲೂರಿನಿಂದ ಊಟ- ಆಡಳಿತ ಮಂಡಳಿ ವಿರುದ್ಧ ಡಿವಿಎಸ್ ಕಿಡಿ

    ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಕಿಡಿಕಾರಿದ್ದಾರೆ.

    ಈ ಬಗ್ಗೆ ಟ್ವಟ್ಟರ್ ನಲ್ಲಿ ಪ್ರತಿಕ್ರಿಯಿಸಿರೋ ಅವರು, ಭಕ್ತಾದಿಗಳು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹುಂಡಿಗೆ ಹಾಕಿದ ಹಣದಿಂದ ಕಲ್ಲಡ್ಕದ ಶ್ರೀರಾಮ ವಿದ್ಯಾಲಯದ ಬಡ ಮಕ್ಕಳಿಗೆ ಬರುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಕಿತ್ತುಕೊಂಡ ಕಾಂಗ್ರೆಸ್ ಸರ್ಕಾರ, ಅದೇ ದುಡ್ಡಲ್ಲಿ ರಾಜಕೀಯ ಕಾರ್ಯಕ್ರಮದ ಊಟಕ್ಕೆ ಉಪಯೋಗಿಸಿದ್ದು ವಿಪರ್ಯಾಸ. ಅದಕ್ಕೆ ಸಮರ್ಥನೆ ಬೇರೆ ಕೇಡು ಅಂತ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಅಂದು ಕಲ್ಲಡ್ಕ ಶಾಲೆ ಮಕ್ಕಳಿಗೆ ಬಿಸಿಯೂಟ ಕಟ್- ಈಗ ಕಾಂಗ್ರೆಸ್ ಸಮಾವೇಶಕ್ಕೆ ಕೊಲ್ಲೂರು ದೇಗುಲದ ಆಹಾರ, ಜನರ ಆಕ್ರೋಶ

    ಜಿಲ್ಲೆಯ ಬೈಂದೂರಿನಲ್ಲಿ ಸೋಮವಾರ ನಡೆದಿದ್ದ ಸಾಧನಾ ಸಮಾವೇಶಕ್ಕೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು. ಇದಕ್ಕೆ ರಾಜ್ಯಾದ್ಯಂತ ಭಾರೀ ವಿವಾದ ವ್ಯಕ್ತವಾಗಿದ್ದು, ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿತ್ತು. ಇದನ್ನೂ ಓದಿ: ಊಟ ಎಲ್ಲಿಂದ ಬಂದ್ರೂ ಊಟನೇ ಅಲ್ವಾ: ಸಿಎಂ ಸಮರ್ಥನೆ

    ದೇವಸ್ಥಾನದ ಊಟವನ್ನು ಸಮಾವೇಶಕ್ಕೆ ನೀಡಬಹುದು. ಇದು ದೇವಸ್ಥಾನದ ಪ್ರಸಾದ. ಸರ್ಕಾರಿ ಕಾರ್ಯಕ್ರಮಕ್ಕೆ ನೀಡಲು ಅವಕಾಶ ಇದೆ. ಆದಾಗ್ಯೂ ಹೊರೆಯಾಗಬಾರದೆಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಎರಡು ದಿನದ ಹಿಂದೆಯೇ 1 ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿತ್ತು. ಇದನ್ನೂ ಓದಿ: ಬೂಟಾಟಿಕೆಗೆ ಖಾವಿ ಹಾಕ್ತಾನೆ, ಯೋಗಿ ಯಾವತ್ತಾದ್ರೂ ಸಗಣಿ ಹೊತ್ತಿದ್ದಾನಾ: ಸಿಎಂ ಸಿದ್ದರಾಮಯ್ಯ

     

     

     

     

  • ಪಂಚರ್ ಹಾಕುತ್ತಿದ್ದ ವ್ಯಕ್ತಿ ಈಗ ಮೋದಿ ಸಂಪುಟದಲ್ಲಿ ಸಚಿವ!

    ಪಂಚರ್ ಹಾಕುತ್ತಿದ್ದ ವ್ಯಕ್ತಿ ಈಗ ಮೋದಿ ಸಂಪುಟದಲ್ಲಿ ಸಚಿವ!

    ಭೋಪಾಲ್: ನೂತನ ಕೇಂದ್ರ ಸಚಿವರಾಗಿ ಆಯ್ಕೆಯಾಗಿರೋ 63 ವರ್ಷದ ವಿರೇಂದ್ರ ಕುಮಾರ್ ಖಟಿಕ್ ಅವರು ಬೆಳೆದು ಬಂದ ದಾರಿಯ ಬಗ್ಗೆ ಕೇಳಿದ್ರೆ ನೀವೂ ಅಚ್ಚರಿ ಪಡುತ್ತೀರಾ.

    ಹೌದು. ತೀವ್ರ ಕುತೂಹಲದ ಬಳಿಕ ಕೇಂದ್ರ ಸಚಿವ ಸಂಪುಟ ಭಾನುವಾರ ಪುನರಾಚನೆಯಾಗಿದ್ದು, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವರಾಗಿ ವಿರೇಂದ್ರ ಕುಮಾರ್ ಖಟಿಕ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

    ಆದರೆ ಬಡಕುಟುಂಬದಿಂದ ಬಂದಿರೋ ಇವರು ಬಾಲ್ಯದಿಂದಲೇ ತನ್ನ ತಂದೆಯ ಶಾಪ್ ನಲ್ಲಿ ಸೈಕಲ್ ರಿಪೇರಿ ಮಾಡುತ್ತಿದ್ದರು. ಇದೀಗ ಮೋದಿ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

    ವಿರೇಂದ್ರ ಕುಮಾರ್ ಖಟಿಕ್ ಅವರು, 2014ರ ಲೋಕಸಭಾ ಚುನಾವಣೆಯಲ್ಲಿ ಸ್ಫರ್ಧಿಸಿ ಮಧ್ಯಪ್ರದೇಶದ ಟಿಕಮಗಡನ್ ಸಂಸದರಾಗಿ ಆಯ್ಕೆಯಾಗಿದ್ದರು. ಆ ಬಳಿಕ 1996ರ ವರೆಗೆ ಸಂಸದರಾಗಿ ತನ್ನ ಜವಾಬ್ದಾರಿ ನಿರ್ವಹಿಸಿದ್ದರು.

    ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ತಾನು ಬೆಳದು ಬಂದ ಕಷ್ಟದ ಹಾದಿಯನ್ನು ಹೇಳಿಕೊಳ್ಳುವ ಮೂಲಕ ತಮ್ಮ ಮನದಾಳದ ಮಾತುಗಳನ್ನು ಹೊರಹಾಕಿದ್ರು. ಬಡ ಕುಟುಂಬವಾಗಿದ್ದರಿಂದ ಜೀವನ ನಡೆಸಲು ತಂದೆ ಸೈಕಲ್ ರಿಪೇರಿ ಮಾಡೋ ಶಾಪ್ ಒಂದನ್ನು ಆರಂಭಿಸಿದ್ದರು. 5ನೇ ತರಗತಿ ಓದುತ್ತಿರೋ ಸಂದರ್ಭದಲ್ಲೇ ತಾನೂ ಅಂಗಡಿಯಲ್ಲಿ ಕುಳಿತು ಅಪ್ಪನಿಗೆ ಸಹಾಯ ಮಾಡುತ್ತಿದ್ದೆ. ಬಳಿಕ ಸೈಕಲ್ ರಿಪೇರಿ ಮಾಡುವುದನ್ನು ಬೇಗನೆ ಕಲಿತು ಇಡೀ ಅಂಗಡಿಯ ಜವಾಬ್ದಾರಿಯನ್ನು ತೆಗೆದುಕೊಂಡೆ. ಅದರಲ್ಲೇ ಕೆಲಸ ಮಾಡಿಕೊಂಡು ಸಾಗರದ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸವನ್ನು ಕೂಡ ಪೂರ್ಣಗೊಳಿಸಿರುವುದಾಗಿ ಹೇಳಿದ್ರು.

    ಇದನ್ನೂಓದಿ: ನೂತನ ಸಚಿವರಿಗೆ ಯಾವ ಖಾತೆ? ಬದಲಾವಣೆಗೊಂಡ ಖಾತೆ ಯಾರಿಗೆ ಸಿಕ್ಕಿದೆ? ಇಲ್ಲಿದೆ ಪೂರ್ಣ ಮಾಹಿತಿ

    ಬಳಿಕ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು `ಬಾಲಕಾರ್ಮಿಕ’ ವಿಷಯಕ್ಕೆ ಸಂಬಂಧಿಸಿದಂತೆ ಪಿಎಚ್ ಡಿ ಪದವಿ ಪಡೆದ್ರು. ಆರ್‍ಎಸ್‍ಎಸ್ ಕಾರ್ಯಕರ್ತರ ಮಗನಾಗಿರೋ ವಿರೇಂದ್ರ ಕುಮಾರ್ ಬಾಲ್ಯದಿಂದಲೇ ಆರ್‍ಎಸ್‍ಎಸ್, ಎಬಿವಿಪಿ, ಬಿಜೆವೈಎಂ ಮುಂತಾದವುಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಚುನಾವಣಾ ಅಭಿಯಾನದ ಸಂದರ್ಭದಲ್ಲೂ ಕೂಡ ಇವರು ಮೊದಲು ಮಾರ್ಗದ ಬದಿಯಲ್ಲಿರೋ ಸೈಕಲ್ ರಿಪೇರಿ ಮಾಡೋ ಅಂಗಡಿಗಳಿಗೆ ತೆರಳಿ ವ್ಯವಹಾರದ ಬಗ್ಗೆ ಮಾತುಕತೆ ನಡೆಸುತ್ತಿದ್ದರು. ಈ ಮೂಲಕ ಜನರ ಪ್ರೀತಿಗೆ ಪಾತ್ರರಾಗಿದ್ದರು.

    ಇದನ್ನೂ ಓದಿ: ನಿರ್ಮಲಾ ಸೀತಾರಾಮನ್ ಹೆಗಲಿಗೆ ದೇಶದ ರಕ್ಷಣೆಯ ಹೊಣೆ

    ಒಟ್ಟಿನಲ್ಲಿ ಸ್ಕೂಟರ್ ನಲ್ಲೇ ಪ್ರಯಾಣಿಸುತ್ತಿರುವ ಇವರ ಸರಳ ವ್ಯಕ್ತಿತ್ವ, ಸಾಮಾನ್ಯರಲ್ಲಿ ಸಾಮಾನ್ಯನಾಗೋ ಇವರ ಗುಣ ಜನಸಾಮಾನ್ಯರನ್ನು ಆಕರ್ಷಿಸಿದ್ದು, ಇದೀಗ ಪ್ರಧಾನಿ ಮೋದಿಯವರ ಸಚಿವ ಸಂಪುಟದಲ್ಲೂ ಸ್ಥಾನ ಪಡೆದಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜನರು ಮೆಚ್ಚುಗೆ ಸೂಚಿಸಿದ್ದಾರೆ.

    ಇದನ್ನೂ ಓದಿ: ಮೋದಿ ಸಂಪುಟ ಸೇರಿದ ಸಚಿವರ ಸಾಧನೆ ಏನು? ಇಷ್ಟೊಂದು ಮಹತ್ವ ಯಾಕೆ?