Tag: Central Water Resources Department

  • ಕೃಷ್ಣಾ ನದಿ ನೀರು ಹಂಚಿಕೆ ವಿವಾದ – ಮೇ 7ರಂದು ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಸಭೆ

    ಕೃಷ್ಣಾ ನದಿ ನೀರು ಹಂಚಿಕೆ ವಿವಾದ – ಮೇ 7ರಂದು ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಸಭೆ

    – ಕೃಷ್ಣಾ ನ್ಯಾಯಾಧಿಕರಣ ತೀರ್ಪಿನ ನೀರು ಬಳಕೆಗೆ ಅಧಿಸೂಚನೆ ಹೊರಡಿಸಲು ರಾಜ್ಯದಿಂದ ಒತ್ತಡ: ಡಿಕೆಶಿ

    ಬೆಂಗಳೂರು: ಕೃಷ್ಣಾ ನದಿ (Krishna River) ನೀರಿನ ಹಂಚಿಕೆ ವಿಚಾರವಾಗಿ ನ್ಯಾಯಾಧಿಕರಣದ ತೀರ್ಪಿನ ಅನ್ವಯ ರಾಜ್ಯದ ಪಾಲಿನ ನೀರು ಬಳಕೆಗೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಇದೇ ತೀಂಗಳು 7ರಂದು ಕೇಂದ್ರ ಜಲಶಕ್ತಿ ಸಚಿವರು (Department Of Water Resources) ಕರೆದಿರುವ ಸಭೆಯಲ್ಲಿ ಒತ್ತಡ ಹಾಕಲಾಗುವುದು. ಈ ಸಭೆಯ ನಂತರ ರಾಜ್ಯದಲ್ಲಿ ಸರ್ವಪಕ್ಷ ಸಭೆ ಕರೆದು ಚರ್ಚಿಸಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದರು.

    ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2010ರಲ್ಲಿ ಕೃಷ್ಣಾ ನದಿ ನ್ಯಾಯಾಧಿಕರಣ ತೀರ್ಪಿನ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸುವ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಒತ್ತಡ ಹಾಕಿದ್ದೇವೆ. ಹೀಗಾಗಿ ಕೇಂದ್ರ ಸಚಿವರು ಕರ್ನಾಟಕ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳ ಸಚಿವರ ಸಭೆ ಕರೆದಿದ್ದು, ಈ ಸಭೆಯಲ್ಲಿ ರಾಜ್ಯದ ನಿಲುವನ್ನು ಮಂಡಿಸುವ ಮುನ್ನ ಇಂದು ಪೂರ್ವಭಾವಿ ಸಭೆ ನಡೆಸಿದ್ದೇವೆ ಎಂದರು. ಇದನ್ನೂ ಓದಿ: ಬಳ್ಳಾರಿ | ಪಿಯುಸಿ ಟಾಪರ್‌ಗಳಿಗೆ ಸ್ಕೂಟಿ ಜೊತೆ 5 ಲಕ್ಷ ಸಹಾಯ ಮಾಡಿದ ಜಮೀರ್

    ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಇಂದಿನ ಸಭೆಯಲ್ಲಿ ಕಾನೂನು ಸಚಿವರು, ಸಂಬಂಧಪಟ್ಟ ಎಲ್ಲಾ ಜಿಲ್ಲಾ ಸಚಿವರುಗಳಾದ ಆರ್.ಬಿ ತಿಮ್ಮಾಪುರ, ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್, ದರ್ಶನಾಪುರ ಅವರ ಜೊತೆ ಚರ್ಚೆ ಮಾಡಿದ್ದೇವೆ. ಸಚಿವರು ಅನೇಕ ಸಲಹೆಗಳನ್ನು ನೀಡಿದ್ದಾರೆ. ಈ ಮಧ್ಯೆ ದೆಹಲಿ ವಕೀಲರ ತಂಡ ಕೂಡ ಸಭೆಯಲ್ಲಿ ಇದ್ದರು. ಮೇ 7ರ ಸಭೆಯಲ್ಲಿ ನಮ್ಮ ನಿಲುವು ಏನು, ನಮ್ಮ ತಂತ್ರಗಾರಿಕೆ ಏನು ಎಂದು ಚರ್ಚೆ ಮಾಡಲಾಗಿದೆ. ಕೇಂದ್ರದ ಸಭೆಯಲ್ಲಿ ಇಡೀ ತಂಡ ರಾಜ್ಯವನ್ನು ಪ್ರತಿನಿಧಿಸಿ ರಾಜ್ಯದ ನಿಲುವು ಮಂಡಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ತುಮಕೂರಲ್ಲಿ ಎರಡು ದಿನಗಳ ಕಾಲ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್ ಘೋಷಣೆ

    ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ಬೆಳಗಾವಿ ಅಧಿವೇಶನದಲ್ಲೇ ತೀರ್ಮಾನ ಮಾಡಿದ್ದೇವೆ. 2010ರಲ್ಲಿ ನ್ಯಾಯಾಧಿಕರಣದ ತೀರ್ಪು ಬಂದಿದ್ದು, ಈವರೆಗೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿಲ್ಲ. ಕಳೆದ 15 ವರ್ಷಗಳಲ್ಲಿ ನಮ್ಮ ರಾಜ್ಯಕ್ಕೆ ಭಾರಿ ನಷ್ಟವಾಗಿದೆ. ಹೀಗಾಗಿ ಈ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ. ಪ್ರತಿ ವರ್ಷ ಯೋಜನಾ ವೆಚ್ಚದ ಪ್ರಮಾಣವೂ ಏರಿಕೆಯಾಗುತ್ತಿದೆ. ನೀರು ಅನಗತ್ಯವಾಗಿ ಪೋಲಾಗುತ್ತಿದ್ದು, ಇದನ್ನು ಬಳಸಿಕೊಳ್ಳಲು ಒತ್ತಡ ಹಾಕುತ್ತಿದ್ದೇವೆ. ಕೇಂದ್ರ ಸರ್ಕಾರ ನಮ್ಮ ಪರಿಸ್ಥಿತಿ ಅರಿತಿದ್ದು ಸಭೆ ಕರೆದಿರುವುದು ಸ್ವಾಗತಾರ್ಹ ಎಂದರು. ಇದನ್ನೂ ಓದಿ:  ದಾವಣಗೆರೆ | ಬ್ಲಡ್‌ ಕ್ಯಾನ್ಸರ್‌ನೊಂದಿಗೆ ಹೋರಾಡಿ ಎಸ್ಎಸ್ಎಲ್‌ಸಿಯಲ್ಲಿ ಶಾಲೆಗೆ ಫಸ್ಟ್ ಬಂದ ವಿದ್ಯಾರ್ಥಿನಿ

  • ಐದು ನದಿಗಳ ಜೋಡಣೆ – ನಾಳೆ ಕೇಂದ್ರ ಜಲ ಸಂಪನ್ಮೂಲ ಇಲಾಖೆ ನೇತೃತ್ವದಲ್ಲಿ ರಾಜ್ಯಗಳ ಸಭೆ

    ಐದು ನದಿಗಳ ಜೋಡಣೆ – ನಾಳೆ ಕೇಂದ್ರ ಜಲ ಸಂಪನ್ಮೂಲ ಇಲಾಖೆ ನೇತೃತ್ವದಲ್ಲಿ ರಾಜ್ಯಗಳ ಸಭೆ

    ನವದೆಹಲಿ: ಐದು ನದಿಗಳ ಜೋಡಣೆಗೆ ಬಜೆಟ್ ಘೋಷಣೆಯಾದ ಬೆನ್ನಲ್ಲೇ ಕೇಂದ್ರ ಜಲ ಸಂಪನ್ಮೂಲ ಸಚಿವಾಲಯ ಕಾರ್ಯಪ್ರವೃತ್ತವಾಗಿದೆ. ನದಿ ಜೋಡಣೆ ಸಂಬಂಧ ಚರ್ಚಿಸಲು ದಕ್ಷಿಣ ರಾಜ್ಯಗಳ ಮೊದಲ ಸಭೆ ಕರೆದಿದೆ.

    ನಾಳೆ ಕೇಂದ್ರ ಜಲ ಸಂಪನ್ಮೂಲ ಸಚಿವಾಲಯದ ನೇತೃತ್ವದಲ್ಲಿ ಮೊದಲ ಸಭೆ ನಡೆಯಲಿದ್ದು, ಸಭೆಯಲ್ಲಿ ಕಾವೇರಿ-ಗೋದಾವರಿ, ಕೃಷ್ಣಾ-ಪೆನ್ನಾರು ಸೇರಿದಂತೆ ನದಿ ಜೋಡಣೆ ಯೋಜನೆಗಳ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ:  ಕಸ ಹಾಕೋ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ – ವೀಡಿಯೋ ವೈರಲ್

    ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಲಿದ್ದು, ಸಭೆಯಲ್ಲಿ ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ಮಾಡಲಿದ್ದಾರೆ. ಅಲ್ಲದೇ ನದಿ ಜೋಡಣೆ ಬಗ್ಗೆ ರಾಜ್ಯಗಳ ಅಭಿಪ್ರಾಯವನ್ನು ಜಲ ಸಂಪನ್ಮೂಲ ಇಲಾಖೆ ಪಡೆಯಲಿದೆ. ಇದನ್ನೂ ಓದಿ: ಆಮ್ ಆದ್ಮಿ, ಕಾಂಗ್ರೆಸ್ ಪಕ್ಷದ Xerox Copy: ಮೋದಿ ವ್ಯಂಗ್ಯ

    ಬಜೆಟ್‍ನಲ್ಲಿ ಐದು ನದಿಗಳ ಜೋಡಣೆಗೆ ಘೋಷಣೆ ಮಾಡಲಾಗಿದ್ದು, ರಾಜ್ಯಗಳ ಒಪ್ಪಿಗೆ ಮೇರೆಗೆ ಕೇಂದ್ರ ಸರ್ಕಾರ ನದಿಗಳನ್ನು ಜೋಡಿಸಲಿದ್ದು, ನೀರು ಹರಿವು ಹೆಚ್ಚು ಮಾಡಲಿದೆ ಎಂದು ಹೇಳಲಾಗಿತ್ತು. ಇದಕ್ಕೆ ಆರಂಭಿಕವಾಗಿ ಪ್ರತಿಕ್ರಿಯಿಸಿದ ಕರ್ನಾಟಕ ಕಾವೇರಿ ಪೆನ್ನಾರ್ ನದಿ ಜೋಡಣೆ ವಿಚಾರದಲ್ಲಿ ಮೊದಲು ನೀರಿನ ಹಂಚಿಕೆ ನಿರ್ಧಾರವಾಗಬೇಕು ಎಂದು ಹೇಳಿತ್ತು.