Tag: CEO

  • ಮಗುವಿಗೆ ಹೈಡೋಸ್ ಕೊಟ್ಟು, ಎಚ್ಚರ ತಪ್ಪಿಸಿ ಹತ್ಯೆ- ಸೇಠ್ ರೂಮಲ್ಲಿ ಕೆಮ್ಮಿನ ಔಷಧಿ ಬಾಟ್ಲಿ ಪತ್ತೆ

    ಮಗುವಿಗೆ ಹೈಡೋಸ್ ಕೊಟ್ಟು, ಎಚ್ಚರ ತಪ್ಪಿಸಿ ಹತ್ಯೆ- ಸೇಠ್ ರೂಮಲ್ಲಿ ಕೆಮ್ಮಿನ ಔಷಧಿ ಬಾಟ್ಲಿ ಪತ್ತೆ

    ಪಣಜಿ: ಸ್ಟಾರ್ಟ್‌ಅಪ್ ಕಂಪನಿಯ ಸಿಇಒ ತನ್ನ ನಾಲ್ಕು ವರ್ಷದ ಮಗನನ್ನು ಹತ್ಯೆಗೈದ ರೂಮಿನಲ್ಲಿ ಕೆಮ್ಮಿನ ಸಿರಪ್‍ನ ಖಾಲಿ ಬಾಟ್ಲಿಗಳನ್ನು ಗೋವಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮಹಿಳೆ ಮಗುವಿಗೆ ಹೆಚ್ಚಿನ ಪ್ರಮಾಣದ ಔಷಧಿಯನ್ನು ನೀಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

    ಕೆಮ್ಮಿನ ಔಷಧಿ ಕುಡಿಸಿ ಎಚ್ಚರ ತಪ್ಪಿದ ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕೊಲ್ಲಲಾಗಿದೆ. ಉಸಿರುಗಟ್ಟಿಸಿ ಕೊಂದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಈಗಾಗಲೇ ತಿಳಿದುಬಂದಿದೆ. ಇದೊಂದು ಪೂರ್ವ ನಿಯೋಜಿತ ಕೊಲೆ ಎಂದು ಗೋವಾ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪತಿಗೆ ಮಗು ತೋರಿಸಲು ಇಷ್ಟವಿಲ್ಲದಿದ್ದರಿಂದ ಪ್ರಜ್ಞೆ ತಪ್ಪಿಸಲು ದಿಂಬಿನಿಂದ ಒತ್ತಿ ಹಿಡಿದೆ: ತಪ್ಪೊಪ್ಪಿಕೊಂಡ ಸೇಠ್

    ಮಹಿಳೆ ಉಳಿದುಕೊಂಡಿದ್ದ ಕೊಠಡಿಯ ತಪಾಸಣೆಯ ವೇಳೆ ಕೆಮ್ಮಿನ ಸಿರಪ್‍ನ ಎರಡು ಖಾಲಿ ಬಾಟಲಿಗಳು (ಒಂದು ದೊಡ್ಡದು ಮತ್ತು ಇನ್ನೊಂದು ಚಿಕ್ಕವು) ಪತ್ತೆಯಾಗಿದೆ. ಅಲ್ಲದೇ ಮಗು ಸಾಯುವ ವೇಳೆ ಯಾವುದೇ ಹೋರಾಟ ಮಾಡಿಲ್ಲ. ಮಗುವಿಗೆ ಹೆಚ್ಚಿನ ಡೋಸ್ ಔಷಧ ನೀಡಿರುವ ಸಾಧ್ಯತೆ ಇದರಿಂದ ಎದ್ದು ಕಾಣುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕೆಮ್ಮಿನ ಔಷಧದ ಬಗ್ಗೆ ಹೋಟೆಲ್ ಸಿಬ್ಬಂದಿಯನ್ನು ವಿಚಾರಿಸಿದಾಗ ಮಹಿಳೆ ತನಗೆ ಕೆಮ್ಮಿದೆ, ಎಂದು ಹೇಳಿಕೊಂಡು ಕೆಮ್ಮಿನ ಸಿರಪ್‍ನ ಬಾಟ್ಲಿಯನ್ನು ಕೇಳಿದ್ದಳು ಎಂದು ತಿಳಿದು ಬಂದಿದೆ.

    ಆರಂಭದಲ್ಲಿ ಆರೋಪಿಯ ವಿಚಾರಣೆ ವೇಳೆ ಕೊಲೆ ಆರೋಪವನ್ನು ನಿರಾಕರಿಸಿದ್ದಳು. ಅಲ್ಲದೇ ನಿದ್ರೆಯಿಂದ ಎದ್ದಾಗಾ ಮಗು ಮೃತಪಟ್ಟಿತ್ತು ಎಂದು ಮಗು ಮೃತಪಟ್ಟಿತ್ತು ಎಂದು ತಿಳಿಸಿದ್ದಳು. ಬಳಿಕ ಮಗುವನ್ನು ಉಸಿರುಗಟ್ಟಿಸಿ ಹತ್ಯೆಗೈದಿರುವುದಾಗಿ ಒಪ್ಪಿಕೊಂಡಿದ್ದಳು.

    ಏನಿದು ಪ್ರಕರಣ?: ಸ್ವಂತ ಮಗುವನ್ನೇ ಸ್ಟಾರ್ಟ್ ಅಪ್ ಫೌಂಡರ್ ಮತ್ತು ಸಿಇಓ ಸುಚನಾ ಸೇಠ್ ಹತ್ಯೆಗೈದು ಸೂಟ್‍ಕೇಸ್‍ನಲ್ಲಿ ಶವ ತುಂಬಿಕೊಂಡು ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಸುಚನಾ ಸೇಠ್ ಶನಿವಾರ ತನ್ನ ಮಗನೊಂದಿಗೆ ಉತ್ತರ ಗೋವಾದ ಕ್ಯಾಂಡೋಲಿಮ್‍ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆಗೆ ಭೇಟಿ ನೀಡಿದ್ದಳು. ಸೋಮವಾರ ಹೋಟೆಲ್ ತೊರೆಯುವಾಗ ಒಬ್ಬಂಟಿಯಾಗಿದ್ದು, ತಾನು ಬೆಂಗಳೂರಿಗೆ ಟ್ಯಾಕ್ಸಿ ಕಾಯ್ದಿರಿಸುವಂತೆ ಹೋಟೆಲ್ ಸಿಬ್ಬಂದಿಯನ್ನು ಕೇಳಿದ್ದಾಳೆ. ಅವರು ವಿಮಾನ ಸೌಲಭ್ಯ ಇರುವ ಸಲಹೆ ನೀಡಿದರೂ ಟ್ಯಾಕ್ಸಿ ತೆಗೆದುಕೊಳ್ಳುವಂತೆ ಆಕೆ ಒತ್ತಾಯಿಸಿದ್ದಾಳೆ ಎಂದು ಸಿಬ್ಬಂದಿ ತಿಳಿಸಿದ್ದರು.

    ಆಕೆ ಹೋಟೆಲ್‍ನಿಂದ ಹೊರಗೆ ಹೋದ ಬಳಿಕ ಮಗು ಇಲ್ಲದಿದ್ದನ್ನು ಸಿಬ್ಬಂದಿ ಗಮನಿಸಿದ್ದರು. ಅಲ್ಲದೇ ಆಕೆ ತಂಗಿದ್ದ ಹೋಟೆಲ್ ಶುಚಿಗೊಳಿಸಲು ಹೋದಾಗ ರಕ್ತದ ಕಲೆಗಳು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಗೋವಾ ಪೊಲೀಸರು ಹೋಟೆಲ್ ಸಿಬ್ಬಂದಿ ಕರೆಸಿದ್ದ ಟ್ಯಾಕ್ಸಿ ಡ್ರೈವರ್ ಸಂಪರ್ಕಿಸಿ ಆಕೆಯೊಂದಿಗೆ ಮಾತನಾಡಲು ಹೇಳಿದ್ದಾರೆ. ಆಕೆಯ ಮಗನ ಬಗ್ಗೆ ಕೇಳಿದಾಗ ಅವನು ಸ್ನೇಹಿತನೊಂದಿಗೆ ಇರುವುದಾಗಿ ಹೇಳಿಕೊಂಡಿದ್ದಳು. ಆತನ ವಿಳಾಸವನ್ನೂ ನೀಡಿದ್ದಳು. ಪೊಲೀಸರು ಆ ವಿಳಾಸವನ್ನ ಪರಿಶೀಲಿಸಿದಾಗ ಅದು ನಕಲಿಯಾಗಿತ್ತು. ನಂತರ ಟ್ಯಾಕ್ಸಿ ಡ್ರೈವರ್‍ಗೆ ಹೈವೇ ಬಳಿ ಪೊಲೀಸರು ಕಂಡಾಕ್ಷಣ ಟ್ಯಾಕ್ಸಿ ನಿಲ್ಲಿಸುವಂತೆ ತಿಳಿಸಿದ್ದಾಳೆ.

    ನಂತರ ಟ್ಯಾಕ್ಸಿ ಚಾಲಕ ರಾಷ್ಟ್ರೀಯ ಹೆದ್ದಾರಿ-4ರ ಬಳಿಯ ಐಮಂಗಲ ಠಾಣೆ ಪೊಲೀಸರಿಗೆ ಆಕೆಯನ್ನ ಒಪ್ಪಿಸಿದ್ದ. ಬಳಿಕ ಟ್ಯಾಕ್ಸಿ ತಪಾಸಣೆ ಮಾಡಿದ ಐಮಂಗಲ ಪೊಲೀಸರಿಗೆ ಟ್ಯಾಕ್ಸಿ ಡಿಕ್ಕಿಯಲ್ಲಿದ್ದ ಸೂಟ್‍ಕೇಸ್‍ನಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಈ ಸಂಬಂಧ ಗೋವಾ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

    ಈ ಹಿಂದೆ ಕೌಟುಂಬಿಕ ಕಲಹದ ಹಿನ್ನೆಲೆ ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆವಾಗಿನಿಂದಲೂ ಗಂಡ-ಹೆಂಡತಿ ಅನ್ಯೋನ್ಯವಾಗಿರಲಿಲ್ಲ. ಬಳಿಕ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿಕೊಂಡಿದ್ದರು. ವಾರಕ್ಕೊಮ್ಮೆ ವೆಂಕಟರಮಣ ಅವರಿಗೆ ಮಗುವನ್ನು ತೋರಿಸುವಂತೆ ನ್ಯಾಯಾಲಯ ಈ ವೇಳೆ ಹೇಳಿತ್ತು. ಮಗುವನ್ನು ತೋರಿಸಲು ಇಷ್ಟವಿಲ್ಲದೇ ಹತ್ಯೆಗೈದಿರುವುದು ವಿಚಾರಣೆಯ ವೇಳೆ ಬಯಲಾಗಿದೆ. ಇದನ್ನೂ ಓದಿ: ಪುತ್ರನ ಹತ್ಯೆಗೈದ ಬೆಂಗ್ಳೂರು CEO ಪ್ರಕರಣ- ತಂದೆಯಿಂದ ಮಗುವಿನ ಅಂತ್ಯಸಂಸ್ಕಾರ

  • ಪುತ್ರನ ಹತ್ಯೆಗೈದ ಬೆಂಗ್ಳೂರು CEO ಪ್ರಕರಣ- ತಂದೆಯಿಂದ ಮಗುವಿನ ಅಂತ್ಯಸಂಸ್ಕಾರ

    ಪುತ್ರನ ಹತ್ಯೆಗೈದ ಬೆಂಗ್ಳೂರು CEO ಪ್ರಕರಣ- ತಂದೆಯಿಂದ ಮಗುವಿನ ಅಂತ್ಯಸಂಸ್ಕಾರ

    ಬೆಂಗಳೂರು: ಗೋವಾದಲ್ಲಿ (Goa) ತಾಯಿಯಿಂದ ಹತ್ಯೆಯಾಗಿದ್ದ ಮಗುವಿನ ಅಂತ್ಯಸಂಸ್ಕಾರವನ್ನು ತಂದೆ ವೆಂಕಟರಮಣ ಹಾಗೂ ಕುಟುಂಬಸ್ಥರು ಹರಿಶ್ಚಂದ್ರಘಾಟ್‍ನಲ್ಲಿ ನೆರವೇರಿಸಿದ್ದಾರೆ.

    ಕಂಪನಿಯೊಂದರ ಸಿಇಓ ಸುಚನಾ ಸೇಠ್ (Suchana Seth) ತನ್ನದೇ ಮಗುವನ್ನು ಗೋವಾದ ಹೋಟೆಲ್‍ನಲ್ಲಿ ಹತ್ಯೆಗೈದು ಸೂಟ್‍ಕೇಸ್‍ನಲ್ಲಿ ತರುವಾಗ ಚಿತ್ರದುರ್ಗ (Chitradurga) ಪೊಲೀಸರಿಗೆ ಸಿಕ್ಕಿಬಿದ್ದಿದ್ದಳು. ಬಳಿಕ ಹಿರಿಯೂರಿನ ತಾಲೂಕು ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ನಂತರ ಐಮಂಗಲ ಪೊಲೀಸ್ ಠಾಣೆಯಿಂದ ಬೆಂಗಳೂರಿಗೆ (Bengaluru) ಮಗುವಿನ ಮೃತದೇಹ ಮಧ್ಯರಾತ್ರಿ 1:45ಕ್ಕೆ ರವಾನಿಸಲಾಗಿತ್ತು. ಯಶವಂತಪುರ ಬಳಿ ಇರುವ ಬ್ರಿಗೇಡ್ ಗೇಟ್‍ವೇ ರೆಸಿಡೆನ್ಸಿಯಲ್ಲಿರುವ ನಿವಾಸದಿಂದ ಇದೀಗ ಹರಿಶ್ಚಂದ್ರ ಘಾಟ್‍ಗೆ ಮೃತದೇಹ ಕೊಂಡೊಯ್ದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು ಸಿಇಓನಿಂದ ಮಗನ ಹತ್ಯೆ ಪ್ರಕರಣ- ಮಗುವಿನ ಅಂತ್ಯಸಂಸ್ಕಾರಕ್ಕೆ ಸಿದ್ಧತೆ

    ಸುಚನಾ ಸೇಠ್ ಗೋವಾದ ಹೋಟೆಲ್ ಒಂದರಲ್ಲಿ ತನ್ನ ಮಗುವನ್ನು ಹತ್ಯೆಗೈದು ಸೂಟ್‍ಕೇಸ್‍ನಲ್ಲಿ ತರುವಾಗ ಹೊಟೇಲ್ ಸಿಬ್ಬಂದಿ ಹಾಗೂ ಕಾರು ಚಾಲಕನ ಸಮಯ ಪ್ರಜ್ಞೆಯಿಂದ ಚಿತ್ರದುರ್ಗ (Chitradurga) ಪೊಲೀಸರಿಗೆ (Police) ಒಪ್ಪಿಸಲಾಗಿತ್ತು. ಮಹಿಳೆಯ ಸೂಟ್‍ಕೇಸ್ ಪರಿಶೀಲಿಸಿದಾಗ ಮಗುವಿನ ಮೃತದೇಹ ಪತ್ತೆಯಾಗಿತ್ತು. ಬಳಿಕ ಪೊಲೀಸರು ಆಕೆಯನ್ನು ಬಂಧಿಸಿ ಗೋವಾ ಪೊಲೀಸರಿಗೆ ಒಪ್ಪಿಸಿದ್ದರು.

    ಏನಿದು ಪ್ರಕರಣ?: ಸ್ವಂತ ಮಗುವನ್ನೇ ಸ್ಟಾರ್ಟ್ ಅಪ್ ಫೌಂಡರ್ ಮತ್ತು ಸಿಇಓ ಸುಚನಾ ಸೇಠ್ ಹತ್ಯೆಗೈದು ಸೂಟ್‍ಕೇಸ್‍ನಲ್ಲಿ ಶವ ತುಂಬಿಕೊಂಡು ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಸುಚನಾ ಸೇಠ್ ಶನಿವಾರ ತನ್ನ ಮಗನೊಂದಿಗೆ ಉತ್ತರ ಗೋವಾದ ಕ್ಯಾಂಡೋಲಿಮ್‍ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆಗೆ ಭೇಟಿ ನೀಡಿದ್ದಳು. ಸೋಮವಾರ ಹೋಟೆಲ್ ತೊರೆಯುವಾಗ ಒಬ್ಬಂಟಿಯಾಗಿದ್ದು, ತಾನು ಬೆಂಗಳೂರಿಗೆ ಟ್ಯಾಕ್ಸಿ ಕಾಯ್ದಿರಿಸುವಂತೆ ಹೋಟೆಲ್ ಸಿಬ್ಬಂದಿಯನ್ನು ಕೇಳಿದ್ದಾಳೆ. ಅವರು ವಿಮಾನ ಸೌಲಭ್ಯ ಇರುವ ಸಲಹೆ ನೀಡಿದರೂ ಟ್ಯಾಕ್ಸಿ ತೆಗೆದುಕೊಳ್ಳುವಂತೆ ಆಕೆ ಒತ್ತಾಯಿಸಿದ್ದಾಳೆ ಎಂದು ಸಿಬ್ಬಂದಿ ತಿಳಿಸಿದ್ದರು.

    ಆಕೆ ಹೋಟೆಲ್‍ನಿಂದ ಹೊರಗೆ ಹೋದ ಬಳಿಕ ಮಗು ಇಲ್ಲದಿದ್ದನ್ನು ಸಿಬ್ಬಂದಿ ಗಮನಿಸಿದ್ದರು. ಅಲ್ಲದೇ ಆಕೆ ತಂಗಿದ್ದ ಹೋಟೆಲ್ ಶುಚಿಗೊಳಿಸಲು ಹೋದಾಗ ರಕ್ತದ ಕಲೆಗಳು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಗೋವಾ ಪೊಲೀಸರು ಹೋಟೆಲ್ ಸಿಬ್ಬಂದಿ ಕರೆಸಿದ್ದ ಟ್ಯಾಕ್ಸಿ ಡ್ರೈವರ್ ಸಂಪರ್ಕಿಸಿ ಆಕೆಯೊಂದಿಗೆ ಮಾತನಾಡಲು ಹೇಳಿದ್ದಾರೆ. ಆಕೆಯ ಮಗನ ಬಗ್ಗೆ ಕೇಳಿದಾಗ ಅವನು ಸ್ನೇಹಿತನೊಂದಿಗೆ ಇರುವುದಾಗಿ ಹೇಳಿಕೊಂಡಿದ್ದಳು. ಆತನ ವಿಳಾಸವನ್ನೂ ನೀಡಿದ್ದಳು. ಪೊಲೀಸರು ಆ ವಿಳಾಸವನ್ನ ಪರಿಶೀಲಿಸಿದಾಗ ಅದು ನಕಲಿಯಾಗಿತ್ತು. ನಂತರ ಟ್ಯಾಕ್ಸಿ ಡ್ರೈವರ್‌ಗೆ ಹೈವೇ ಬಳಿ ಪೊಲೀಸರು ಕಂಡಾಕ್ಷಣ ಟ್ಯಾಕ್ಸಿ ನಿಲ್ಲಿಸುವಂತೆ ತಿಳಿಸಿದ್ದಾಳೆ.

    ನಂತರ ಟ್ಯಾಕ್ಸಿ ಚಾಲಕ ರಾಷ್ಟ್ರೀಯ ಹೆದ್ದಾರಿ-4ರ ಬಳಿಯ ಐಮಂಗಲ ಠಾಣೆ ಪೊಲೀಸರಿಗೆ ಆಕೆಯನ್ನ ಒಪ್ಪಿಸಿದ್ದ. ಬಳಿಕ ಟ್ಯಾಕ್ಸಿ ತಪಾಸಣೆ ಮಾಡಿದ ಐಮಂಗಲ ಪೊಲೀಸರಿಗೆ ಟ್ಯಾಕ್ಸಿ ಡಿಕ್ಕಿಯಲ್ಲಿದ್ದ ಸೂಟ್‍ಕೇಸ್‍ನಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಈ ಸಂಬಂಧ ಗೋವಾ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

    ಈ ಹಿಂದೆ ಕೌಟುಂಬಿಕ ಕಲಹದ ಹಿನ್ನೆಲೆ ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆವಾಗಿನಿಂದಲೂ ಗಂಡ-ಹೆಂಡತಿ ಅನ್ಯೋನ್ಯವಾಗಿರಲಿಲ್ಲ. ಬಳಿಕ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿಕೊಂಡಿದ್ದರು. ವಾರಕ್ಕೊಮ್ಮೆ ವೆಂಕಟರಮಣ ಅವರಿಗೆ ಮಗುವನ್ನು ತೋರಿಸುವಂತೆ ನ್ಯಾಯಾಲಯ ಈ ವೇಳೆ ಹೇಳಿತ್ತು. ಮಗುವನ್ನು ತೋರಿಸಲು ಇಷ್ಟವಿಲ್ಲದೇ ಹತ್ಯೆಗೈದಿರುವುದು ವಿಚಾರಣೆಯ ವೇಳೆ ಬಯಲಾಗಿದೆ. ಇದನ್ನೂ ಓದಿ: ಪತಿಗೆ ಮಗು ತೋರಿಸಲು ಇಷ್ಟವಿಲ್ಲದಿದ್ದರಿಂದ ಪ್ರಜ್ಞೆ ತಪ್ಪಿಸಲು ದಿಂಬಿನಿಂದ ಒತ್ತಿ ಹಿಡಿದೆ: ತಪ್ಪೊಪ್ಪಿಕೊಂಡ ಸೇಠ್

  • ಬೆಂಗಳೂರು ಸಿಇಓನಿಂದ ಮಗನ ಹತ್ಯೆ ಪ್ರಕರಣ- ಮಗುವಿನ ಅಂತ್ಯಸಂಸ್ಕಾರಕ್ಕೆ ಸಿದ್ಧತೆ

    ಬೆಂಗಳೂರು ಸಿಇಓನಿಂದ ಮಗನ ಹತ್ಯೆ ಪ್ರಕರಣ- ಮಗುವಿನ ಅಂತ್ಯಸಂಸ್ಕಾರಕ್ಕೆ ಸಿದ್ಧತೆ

    – ಗೋವಾ ಪೊಲೀಸರಿಂದ ಮಗುವಿನ ತಂದೆ ವಿಚಾರಣೆ ಸಾಧ್ಯತೆ

    ಬೆಂಗಳೂರು: ಸಿಇಓ (CEO) ಸುಚನಾ ಸೇಠ್ ಮಗುವಿನ ಹತ್ಯೆ ಪ್ರಕರಣವನ್ನು ಗೋವಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೂ ಮಗುವಿನ ಮೃತದೇಹವನ್ನು ಈಗಾಗಲೇ ರಾಜಾಜಿನಗರದಲ್ಲಿರುವ ಅಪಾರ್ಟ್‍ಮೆಂಟ್‍ಗೆ ತರಲಾಗಿದ್ದು, ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ.

    ಮಗುವಿನ ಮೃತದೇಹದ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಆತನ ಮೃತದೇಹವನ್ನು ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ತರಲಾಗಿದೆ. ಮಗುವಿನ ಹತ್ಯೆ ಸುದ್ದಿ ತಿಳಿದ ಆತನ ತಂದೆ ವೆಂಕಟರಮಣ ಅವರು, ಈಗಾಗಲೇ ಇಂಡೋನೇಷ್ಯಾದಿಂದ ಬೆಂಗಳೂರಿಗೆ (Bengaluru) ಬಂದಿದ್ದಾರೆ. ಮಗುವಿನ ಸಂಬಂಧಿಕರು, ಸ್ನೇಹಿತರ ಸಮ್ಮುಖದಲ್ಲಿ ಹರಿಶ್ಚಂದ್ರಘಾಟ್‍ನಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಪತಿಗೆ ಮಗು ತೋರಿಸಲು ಇಷ್ಟವಿಲ್ಲದಿದ್ದರಿಂದ ಪ್ರಜ್ಞೆ ತಪ್ಪಿಸಲು ದಿಂಬಿನಿಂದ ಒತ್ತಿ ಹಿಡಿದೆ: ತಪ್ಪೊಪ್ಪಿಕೊಂಡ ಸೇಠ್

    ಮೃತ ಮಗುವಿನ ಅಂತ್ಯಸಂಸ್ಕಾರದ ಬಳಿಕ ವೆಂಕಟರಮಣ ಅವರನ್ನು ಗೋವಾ ಪೊಲೀಸರು (Goa Police) ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅವರ ಬಳಿ ಸುಚನಾ ಹಾಗೂ ಪುತ್ರ ಚಿನ್ಮಯ್ ಬಗ್ಗೆ ಪೊಲೀಸರು ಮಾಹಿತಿ ಪಡೆಯುವ ಸಾಧ್ಯತೆ ಇದೆ. ಮಗುವಿನ ಹತ್ಯೆಗೂ ಮುನ್ನ ವೀಡಿಯೋ ಕಾಲ್ ಮಾಡಿದ್ದ ವೆಂಕಟರಮಣ ಅವರು ಮಗುವಿನೊಂದಿಗೆ ಮಾತಾಡಿದ್ದರು ಎಂದು ತಿಳಿದು ಬಂದಿದೆ.

    ಸುಚನಾ ಹಾಗೂ ವೆಂಕಟರಮಣ ವಿಚ್ಛೇದನ ಕೋರಿ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ವಾರಕ್ಕೊಮ್ಮೆ ತಂದೆ ಬಳಿ ಮಗನ ಭೇಟಿಗೆ ಕೋರ್ಟ್ ಸೂಚಿಸಿತ್ತು. ಕೋರ್ಟ್ ಸೂಚನೆಯಂತೆ ಕಳೆದ ಭಾನುವಾರ ವೀಡಿಯೋ ಕಾಲ್‍ನಲ್ಲಿ ಮಗನ ಜೊತೆ ವೆಂಕಟರಮಣ ಅವರು ಮಾತಾಡಿದ್ದರು. ಮಗು ಹಾಗೂ ತಂದೆ ಭೇಟಿಯಾಗುವುದು ಸುಚನಾಗೆ ಇಷ್ಟವಿರಲಿಲ್ಲ. ಇದೇ ಕಾರಣಕ್ಕೆ ವೆಂಕಟರಮಣಗೆ ಮಗ ಸಿಗಬಾರದೆಂಬ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಕೊನೆಯ ಬಾರಿ ವೀಡಿಯೋ ಕಾಲ್‍ನಲ್ಲಿ ಮಾತಾಡಿದ್ದೆನು ಎಂಬ ಬಗ್ಗೆ ಪೊಲೀಸರು ಮಾಹಿತಿ ಪಡೆಯುವ ಸಾಧ್ಯತೆ ಇದೆ.

    ಏನಿದು ಪ್ರಕರಣ?: ಸ್ವಂತ ಮಗುವನ್ನೇ ತಾಯಿಯೊಬ್ಬಳು ಹತ್ಯೆಗೈದು ಸೂಟ್‍ಕೇಸ್‍ನಲ್ಲಿ ಶವವಿಟ್ಟುಕೊಂಡು ತೆರಳುತ್ತಿದ್ದ ವೇಳೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಠಾಣೆ ಪೊಲೀಸರು ಬಂಧಿಸಿದ್ದರು.

    ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ ಮತ್ತು ಸಿಇಓ ಸುಚನಾ ಸೇಠ್ ವಿರುದ್ಧ ಗೋವಾದ ಹೋಟೆಲ್‍ನಲ್ಲಿ ಮಗುವನ್ನು ಹತ್ಯೆ ಮಾಡಿರುವ ಆರೋಪ ಕೇಳಿಬಂದಿತ್ತು. ಸುಚನಾ ಸೇಠ್ ಅವರು ಶನಿವಾರ ತನ್ನ ಮಗನೊಂದಿಗೆ ಉತ್ತರ ಗೋವಾದ ಕ್ಯಾಂಡೋಲಿಮ್‍ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆಗೆ ಭೇಟಿ ನೀಡಿದ್ದರು. ಸೋಮವಾರ ಹೋಟೆಲ್ ತೊರೆಯುವಾಗ ಒಬ್ಬಂಟಿಯಾಗಿದ್ದರು. ತಾನು ಬೆಂಗಳೂರಿಗೆ ಟ್ಯಾಕ್ಸಿ ಕಾಯ್ದಿರಿಸುವಂತೆ ಹೋಟೆಲ್ ಸಿಬ್ಬಂದಿಯನ್ನ ಕೇಳಿದ್ದಾಳೆ. ಅವರು ವಿಮಾನ ಸೌಲಭ್ಯ ಇರುವ ಸಲಹೆ ನೀಡಿದರೂ ಟ್ಯಾಕ್ಸಿ ತೆಗೆದುಕೊಳ್ಳುವಂತೆ ಆಕೆ ಒತ್ತಾಯಿಸಿದ್ದಾಳೆ ಎಂದು ಸಿಬ್ಬಂದಿ ತಿಳಿಸಿದ್ದರು.

    ಆಕೆ ಹೋಟೆಲ್‍ನಿಂದ ಹೊರಗೆ ಹೋದ ಬಳಿಕ ಮಗು ಇಲ್ಲದಿದ್ದನ್ನು ಸಿಬ್ಬಂದಿ ಗಮನಿಸಿದ್ದರು. ಅಲ್ಲದೇ ಆಕೆ ತಂಗಿದ್ದ ಹೋಟೆಲ್ ಶುಚಿಗೊಳಿಸಲು ಹೋದಾಗ ರಕ್ತದ ಕಲೆಗಳು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಗೋವಾ ಪೊಲೀಸರು ಹೋಟೆಲ್ ಸಿಬ್ಬಂದಿ ಕರೆಸಿದ್ದ ಟ್ಯಾಕ್ಸಿ ಡ್ರೈವರ್ ಸಂಪರ್ಕಿಸಿ ಆಕೆಯೊಂದಿಗೆ ಮಾತನಾಡಲು ಹೇಳಿದ್ದಾರೆ. ಆಕೆಯ ಮಗನ ಬಗ್ಗೆ ಕೇಳಿದಾಗ ಅವನು ಸ್ನೇಹಿತನೊಂದಿಗೆ ಇರುವುದಾಗಿ ಹೇಳಿಕೊಂಡಿದ್ದಳು. ಆತನ ವಿಳಾಸವನ್ನೂ ನೀಡಿದ್ದಳು. ಪೊಲೀಸರು ಆ ವಿಳಾಸವನ್ನ ಪರಿಶೀಲಿಸಿದಾಗ ಅದು ನಕಲಿಯಾಗಿತ್ತು. ನಂತರ ಟ್ಯಾಕ್ಸಿ ಡ್ರೈವರ್‌ಗೆ ಹೈವೆಬಳಿ ಪೊಲೀಸರು ಕಂಡಾಕ್ಷಣ ಟ್ಯಾಕ್ಸಿ ನಿಲ್ಲಿಸುವಂತೆ ತಿಳಿಸಿದ್ದಾರೆ.

    ನಂತರ ಟ್ಯಾಕ್ಸಿ ಚಾಲಕ ರಾಷ್ಟ್ರೀಯ ಹೆದ್ದಾರಿ-4ರ ಬಳಿಯ ಐಮಂಗಲ ಠಾಣೆ ಪೊಲೀಸರಿಗೆ ಆಕೆಯನ್ನ ಒಪ್ಪಿಸಿದ್ದ. ಬಳಿಕ ಟ್ಯಾಕ್ಸಿ ತಪಾಸಣೆ ಮಾಡಿದ ಐಮಂಗಲ ಪೊಲೀಸರಿಗೆ ಟ್ಯಾಕ್ಸಿ ಡಿಕ್ಕಿಯಲ್ಲಿದ್ದ ಸೂಟ್‍ಕೇಸ್‍ನಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಈ ಸಂಬಂಧ ಗೋವಾ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಪಾರ್ಟ್‌ಮೆಂಟ್‌‌ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಗ್ಳೂರಿನ CEO ಸಿಕ್ಕಿಬಿದ್ದ ರೋಚಕ ಕಥೆ ಓದಿ

  • ಅಪಾರ್ಟ್‌ಮೆಂಟ್‌‌ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಗ್ಳೂರಿನ CEO ಸಿಕ್ಕಿಬಿದ್ದ ರೋಚಕ ಕಥೆ ಓದಿ

    ಅಪಾರ್ಟ್‌ಮೆಂಟ್‌‌ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಗ್ಳೂರಿನ CEO ಸಿಕ್ಕಿಬಿದ್ದ ರೋಚಕ ಕಥೆ ಓದಿ

    ಪಣಜಿ: ತನ್ನ ಸ್ವಂತ 4 ವರ್ಷದ ಮಗನನ್ನು ಕೊಂದು ಅಪಾರ್ಟ್‌ಮೆಂಟ್‌‌ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಗಳೂರಿನ CEO ಸುಚನಾ ಸೇಠ್‌ (Suchana Seth) ಸಿಕ್ಕಿಬಿದ್ದ ರೋಚಕ ಕಥೆ ಇಲ್ಲಿದೆ.

    ಜನವರಿ 6 ರಂದು ಸುಚನಾ ಸೇಠ್, ಉತ್ತರ ಗೋವಾದ (Goa) ಕ್ಯಾಂಡೋಲಿಮ್‌ನಲ್ಲಿ ತನ್ನ ಮಗನೊಂದಿಗೆ ಸರ್ವಿಸ್‌ ಅಪಾರ್ಟ್‌ಮೆಂಟ್‌ (Service Apartment) ಒಂದರಲ್ಲಿ ಬಾಡಿಗೆಗೆ ಇದ್ದಳು. ಒಂದೆರಡು ದಿನ ಅಲ್ಲಿಯೇ ತಂಗಿದ್ದ ಸೇಠ್, ತಾನು ಯಾವುದೋ ಕೆಲಸಕ್ಕಾಗಿ ಬೆಂಗಳೂರಿಗೆ (Bengaluru) ಹೋಗಬೇಕೆಂದಿರುವೆ ಎಂದು ಅಪಾರ್ಟ್‌ಮೆಂಟ್ ಸಿಬ್ಬಂದಿಗೆ ತಿಳಿಸಿ ಟ್ಯಾಕ್ಸಿಗೆ (Taxi) ವ್ಯವಸ್ಥೆ ಮಾಡುವಂತೆ ಕೇಳಿಕೊಂಡಿದ್ದಾಳೆ.

    ಈ ವೇಳೆ ಅಲ್ಲಿನ ಸಿಬ್ಬಂದಿ, ದುಬಾರಿ ಟ್ಯಾಕ್ಸಿಯನ್ನು ಬಾಡಿಗೆಗೆ ತೆಗೆದುಕೊಳ್ಳುವ ಬದಲು ಬೆಂಗಳೂರಿಗೆ ವಿಮಾನದಲ್ಲಿ (Flight) ಹೋಗುವಂತೆ ಸೂಚಿಸಿದ್ದಾರೆ. ಆಗ ಸೇಠ್‌, ತಾನು ಟ್ಯಾಕ್ಸಿಯಲ್ಲಿಯೇ ಹೋಗಬೇಕು ಎಂದು ಹಠಕ್ಕೆ ಬಿದ್ದಳು. ಹೀಗಾಗಿ ಜನವರಿ 8 ರಂದು ಆಕೆಗೆ ವಾಹನದ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಳು.

    ಇತ್ತ ಸೇಠ್ ಹೊರಗಡೆ ಬರುತ್ತಿದ್ದಂತೆಯೇ ಅಪಾರ್ಟ್‌ಮೆಂಟ್ ಸಿಬ್ಬಂದಿ ಆಕೆ ತಂಗಿದ್ದ ಕೊಠಡಿಯನ್ನು‌ ಕ್ಲೀನ್‌ ಮಾಡಲು ಹೋಗಿದ್ದಾರೆ. ಈ ವೇಳೆ ಟವೆಲ್‌ನಲ್ಲಿ ರಕ್ತದ ಕಲೆಗಳು ಇರುವುದು ಕಂಡುಬಂದಿದೆ. ಕೂಡಲೇ ಸಿಬ್ಬಂದಿ ಅಪಾರ್ಟ್‌ಮೆಂಟ್‌ನ ಆಡಳಿತ ಮಂಡಳಿಗೆ ವಿಷಯ ಮುಟ್ಟಿಸಿದ್ದಾರೆ. ಅವರು ಕಲಾಂಗುಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ತನ್ನ ಮುದ್ದಿನ ಪುತ್ರನನ್ನು ಕೊಂದ ಸುಚನಾ ಸೇಠ್‌ ಯಾರು?

    ಸೇಠ್‌ ಅಪಾರ್ಟ್‌ಮೆಂಟ್‌ನಿಂದ ಹೊರಬಂದಾಗ ಆಕೆಯ ಪುತ್ರ ಕಾಣಲಿಲ್ಲ. ಕೈಯಲ್ಲಿ ಭಾರವಾದ ಸೂಟ್‌ಕೇಸ್‌ ಹಿಡಿದುಕೊಂಡು ಹೋಗಿರುವುದಾಗಿ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದಾರೆ. ಹೀಗಾಗಿ ಪೊಲೀಸರು ಅಪಾರ್ಟ್‌ ಮೆಂಟ್‌ಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪೊಲೀಸರು, ಆಕೆಗೆ ಕರೆ ಮಾಡಿ ಕರೆದು ರಕ್ತದ ಕಲೆಗಳು ಮತ್ತು ಕಾಣೆಯಾದ ಮಗನ ಬಗ್ಗೆ ಕೇಳಿದರು. ಈ ವೇಳೆ ಆಕೆ, ಪೀರಿಯೆಡ್ಸ್‌ ಆಗಿದ್ದು, ಅದರ ಕಲೆಗಳು ಉಂಟಾಗಿವೆ ಎಂದು ಸುಳ್ಳು ಹೇಳುವ ಮೂಲಕ ಬಚಾವ್‌ ಆಗಲು ಯತ್ನಿಸಿದ್ದಾಳೆ.

    ಇನ್ನು ಮಗನ ಬಗ್ಗೆ ಕೇಳಿದ್ದಕ್ಕೆ ಆತ ದಕ್ಷಿಣ ಗೋವಾದ ಮಾರ್ಗೋ ಪಟ್ಟಣದಲ್ಲಿ ತನ್ನ ಸ್ನೇಹಿತನೊಂದಿಗೆ ಇದ್ದಾನೆ ಎಂದು ಹೇಳುತ್ತಾ ಅಲ್ಲಿನ ವಿಳಾಸವನ್ನು ನೀಡಿದ್ದಾಳೆ. ಪೊಲೀಸರು ತಕ್ಷಣವೇ ಫಟೋರ್ಡಾ ಪೊಲೀಸರ ಸಹಾಯವನ್ನು ಪಡೆದರು (ಮಾರ್ಗೋವ್ ಬಳಿ) ಮತ್ತು ಆಕೆ ನೀಡಿದ ವಿಳಾಸ ನಕಲಿ ಎಂಬುದನ್ನು ತಿಳಿದುಕೊಂಡರು. ಇತ್ತ ಸೇಠ್‌ ಕರೆದೊಯ್ಯುತ್ತಿದ್ದ ಟ್ಯಾಕ್ಸಿ ಡ್ರೈವರ್‌ಗೆ ಇನ್ಸ್‌ಪೆಕ್ಟರ್ ಕರೆಮಾಡಿ ಬೆಂಗಳೂರಿಗೆ ಹೋಗಬೇಡ, ಬದಲಾಗಿ ಹತ್ತಿರದ ಪೊಲೀಸ್‌ ಠಾಣೆ ಕಡೆ ಹೋಗುವಂತೆ ಸೂಚಿಸಿದ್ದಾರೆ. ಅಂತೆಯೇ ಆತ ಚಿತ್ರದುರ್ಗದ ಐಮಂಗಲ ಪೊಲೀಸ್‌ ಠಾಣೆಯತ್ತ ತನ್ನ ವಾಹನವನ್ನು ತಿರುಗಿಸಿದ್ದಾನೆ.

    ಚಿತ್ರದುರ್ಗದ ಪೊಲೀಸರು ಮಹಿಳೆಯ ಬ್ಯಾಗ್ ಅನ್ನು ಪರಿಶೀಲಿಸಿದಾಗ ಅದರಲ್ಲಿ ಮಗುವಿನ ಶವ ಪತ್ತೆಯಾಗಿದೆ. ನಂತರ ಕಲಾಂಗಗುಟ್ ಪೊಲೀಸ್ ತಂಡವು ಚಿತ್ರದುರ್ಗಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದು ಗೋವಾಕ್ಕೆ ಕರೆತರಲಾಯಿತು. ಸದ್ಯ ಜಕಾರ್ತದಲ್ಲಿರುವ ಆರೋಪಿಯ ಪತಿ ವೆಂಕಟ್ ರಾಮನ್ ಅವರಿಗೆ ಘಟನೆಯ ಬಗ್ಗೆ ಪೊಲೀಸರು ಮಾಹಿತಿ ನೀಡಿರುವುದಾಗಿ ಕ್ಯಾಲಂಗುಟ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪರೇಶ್ ನಾಯ್ಕ್ ಘಟನೆಯ ಬಗ್ಗೆ ವಿವರಿಸಿದ್ದಾರೆ.

  • ತನ್ನ ಮುದ್ದಿನ ಪುತ್ರನನ್ನು ಕೊಂದ ಸುಚನಾ ಸೇಠ್‌ ಯಾರು?

    ತನ್ನ ಮುದ್ದಿನ ಪುತ್ರನನ್ನು ಕೊಂದ ಸುಚನಾ ಸೇಠ್‌ ಯಾರು?

    ಪಣಜಿ: ಗೋವಾದಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಕೊಂದ ಆರೋಪದ ಮೇಲೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟಪ್ ಕಂಪನಿಯ CEO 39 ವರ್ಷದ ಸುಚನಾ ಸೇಠ್ ಳನ್ನು (Suchana Seth) ಬಂಧಿಸಲಾಗಿದೆ. ಪುತ್ರನ ಮೃತದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿಸಿ ಗೋವಾದಿಂದ ಕರ್ನಾಟಕದ ಕಡೆ ಪ್ರಯಾಣಿಸುವಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಈ ಕ್ರೂರ ವರ್ತನೆ ತೋರಿದ ಸುಚನಾ ಸೇಠ್‌ ಯಾರು ಎಂಬುದನ್ನು ನೋಡೋಣ.

    The Mindful AI Labನ ಸಿಇಒ ಆಗಿರುವ ಸುಚನಾ ಸೇಠ್, ಕಳೆದ ನಾಲ್ಕು ವರ್ಷಗಳಿಂದ ಈ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಳು. ಈ ಸಂಸ್ಥೆಯು ಕೃತಕ ಬುದ್ಧಿಮತ್ತೆಯ ಸುಧಾರಣೆಯತ್ತ ಗಮನ ಕೇಂದ್ರೀಕರಿಸಿತ್ತು. 2021 ರ ಎಐ ಎಥಿಕ್ಸ್‌ನಲ್ಲಿ ಟಾಪ್ 100 ಬ್ರಿಲಿಯಂಟ್ ಮಹಿಳೆಯರಲ್ಲಿ ಈಕೆಯೂ ಒಬ್ಬಳಾಗಿದ್ದಾಳೆ. ಇದನ್ನೂ ಓದಿ: ಗೋವಾದಲ್ಲಿ ಹೆತ್ತ ಮಗುವನ್ನೇ ಹತ್ಯೆಗೈದ ಬೆಂಗ್ಳೂರಿನ CEO – ಸೂಟ್‌ಕೇಸ್‌ನಲ್ಲಿ ಶವವಿಟ್ಕೊಂಡು ಹೋಗುವಾಗ ಅರೆಸ್ಟ್

    AI ನೀತಿಶಾಸ್ತ್ರ ತಜ್ಞ ಮತ್ತು ಡೇಟಾ ವಿಜ್ಞಾನಿಯಾಗಿದ್ದು, ಡೇಟಾ ಸೈನ್ಸ್ ತಂಡಗಳಿಗೆ ಮಾರ್ಗದರ್ಶನ ನೀಡುವಲ್ಲಿ 12 ವರ್ಷಗಳ ಅನುಭವವನ್ನು ಹೊಂದಿದ್ದಾಳೆ. ಸುಚನಾ ಸೇಟ್ ಬರ್ಕ್ ಮನ್ ಕ್ಲೈನ್ ಸೆಂಟರ್ ನ ಅಂಗಸಂಸ್ಥೆಯಾಗಿ ಎರಡು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದಳು. ಅಲ್ಲಿ ಅವರು ಕೃತಕ ಬುದ್ಧಿಮತ್ತೆ ನಿರ್ವಹಣೆಯ ಮೌಲ್ಯಗಳಿಗೆ ಕೊಡುಗೆ ನೀಡಿದ್ದಳು. ಇದಲ್ಲದೆ ಮೆಸ್ಸಾಚುಸ್ಸೆಟ್ಸ್ ನ ಬೋಸ್ಟನ್ ನಲ್ಲಿ ಜವಾಬ್ದಾರಿಯುತ ಯಂತ್ರ ಕಲಿಕೆಯನ್ನೂ ನಡೆಸಿದ್ದಳು.

    The Minduful AI Lab ಅನ್ನು ಸ್ಥಾಪಿಸುವುದಕ್ಕೂ ಮುನ್ನ ಬೆಂಗಳೂರಿನ ಬೂಮರಾಂಗ್ ಕಾಮರ್ಸ್ ಸಂಸ್ಥೆಯಲ್ಲಿ ಹಿರಿಯ ದತ್ತಾಂಶ ಎಂಜಿನಿಯರ್ ಆಗಿದ್ದಳು. ಕೋಲ್ಕತ್ತಾ ವಿಶ್ವವಿದ್ಯಾಲಯದಿಂದ ಖಗೋಳ ಭೌತವಿಜ್ಞಾನದೊಂದಿಗೆ ಪ್ಲಾಸ್ಮಾ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನೂ ಸುಚನಾ ಸೇಠ್ ಪಡೆದಿದ್ದಾಳೆ.

    2020ರಲ್ಲಿ ತನ್ನ ಪತಿಯಿಂದ ಸುಚನಾ ಸೇಠ್‌ ವಿಚ್ಛೇದನ ಪಡೆದಿದ್ದಳು. ಆ ಬಳಿಕ ಪ್ರತಿ ರವಿವಾರ ತಮ್ಮ ಪುತ್ರನನ್ನು ನೋಡಲು ಸುಚನಾ ಸೇಠ್ ಪತಿಗೆ ಕೋರ್ಟ್ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಒಂದು ವೇಳೆ ಪತಿಯು ತನ್ನ ಪುತ್ರನನ್ನು ಭೇಟಿಯಾಗಲು ಪ್ರಾರಂಭಿಸಿದರೆ, ಆತನ ಮೇಲೆ ಪತಿ ಹಿಡಿತ ಸಾಧಿಸಬಹುದು ಎಂದು ಸುಚನಾ ಭಯಭೀತಳಾಗಿದ್ದಳು. ಹೀಗಾಗಿ ತನ್ನ ಪುತ್ರನನ್ನು ಭೇಟಿಯಾಗಲು ಪತಿ ಬರುವುದಕ್ಕೂ ಮುಂಚಿತವಾಗಿಯೇ ಆತನನ್ನು ಕೊಲೆ ಮಾಡಿದ್ದಾಳೆ ಎಂದು ತಿಳಿದು ಬಂದಿದೆ.

    ಸುಚನಾ ಪಶ್ಚಿಮ ಬಂಗಾಳ ಮೂಲದವಳಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದಾಳೆ. ಸುಚನಾ ಪತಿ ಕೇರಳದವರಾಗಿದ್ದು, ಪ್ರಸ್ತುತ ಇಂಡೋನೇಷ್ಯಾದಲ್ಲಿದ್ದಾರೆ. ಅವರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಉತ್ತರ) ನಿಧಿನ್ ವಲ್ಸನ್ ತಿಳಿಸಿದ್ದಾರೆ.

    ಪ್ರಕರಣ ಸಂಬಂಧ ಸುಚನಾ ಸೇಠ್ ಳನ್ನು ಭಾನುವಾರ ರಾತ್ರಿ ಚಿತ್ರದುರ್ಗದಲ್ಲಿ ಗೋವಾ ಪೊಲೀಸರು ಬಂಧಿಸಿದ್ದಾರೆ. ಪುತ್ರನ ಹತ್ಯೆಯ ಹಿಂದಿನ ಉದ್ದೇಶ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

  • ಭ್ರಷ್ಟಾಚಾರಕ್ಕೆ ಡಿಸಿಗಳು, ಸಿಇಒಗಳು ಆಸ್ಪದ ಕೊಡಬೇಡಿ: ಡಿಕೆಶಿ ಎಚ್ಚರಿಕೆ

    ಭ್ರಷ್ಟಾಚಾರಕ್ಕೆ ಡಿಸಿಗಳು, ಸಿಇಒಗಳು ಆಸ್ಪದ ಕೊಡಬೇಡಿ: ಡಿಕೆಶಿ ಎಚ್ಚರಿಕೆ

    ಬೆಂಗಳೂರು: ಭ್ರಷ್ಟಾಚಾರಕ್ಕೆ (Corruption) ಆಸ್ಪದ ನೀಡದಂತೆ ಡಿಸಿಗಳು (DC) ಹಾಗೂ ಸಿಇಒಗಳಿಗೆ (CEO) ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಎಚ್ಚರಿಕೆ ನೀಡಿದ್ದಾರೆ.

    ವಿಧಾನಸೌಧದಲ್ಲಿ ನಡೆದ ಡಿಸಿಗಳು, ಸಿಇಓಗಳ ಸಭೆಯಲ್ಲಿ ಮಾತನಾಡಿದ ಅವರು, ಡಿಸಿಗಳು, ಸಿಇಒಗಳಿಗೆ ಬದ್ಧತೆಯ ಪಾಠ ಮಾಡಿದರು. ಡಿಸಿಗಳು, ಸಿಇಒಗಳು ಸರ್ಕಾರದ ಮುಖ್ಯ ಭಾಗ. ನಿಮ್ಮ ಕಾರ್ಯವೈಖರಿ ಸರ್ಕಾರದ ಹಣೆಬರಹ ನಿರ್ಧರಿಸುತ್ತದೆ. ನೀವು ಸರಿಯಾಗಿ ಕೆಲಸ ಮಾಡದಿದ್ದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದರು. ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ, ರೆವೆನ್ಯೂ ಇನ್ಸ್ಪೆಕ್ಟರ್‌ಗಳು, ಪಿಡಿಒಗಳ ಕಾರ್ಯವೈಖರಿ ಸರ್ಕಾರದ ವರ್ಚಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ಅದರ ಬಗ್ಗೆ ಗಮನ ಹರಿಸಿ. ವೈಯಕ್ತಿಕ ಅಜೆಂಡಾ ಇಟ್ಟುಕೊಂಡು ಕೆಲಸ ಮಾಡೋದು ಬೇಡ ಎಂದರು. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸೋ ಕೆಲಸ ಮಾಡಿ: ಡಿಸಿ, ಸಿಇಒಗಳಿಗೆ ಸಿಎಂ ಸೂಚನೆ

    ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಉತ್ತಮ ಸಹಕಾರ ನೀಡಿದ್ದೀರಿ. ಅದಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. 70% ರಷ್ಟು ಅಧಿಕಾರಿಗಳು ಜಿಲ್ಲಾ ಮತ್ತು ತಾಲೂಕು ಕೇಂದ್ರದಲ್ಲಿ ಉಳಿದುಕೊಂಡು ಕೆಲಸ ಮಾಡುತ್ತಿಲ್ಲ. ಇದರಿಂದ ಅವರು ಜನರಿಗೆ ಸರಿಯಾಗಿ ಸಿಗುತ್ತಿಲ್ಲ. ಇದರಿಂದಲೂ ಸರ್ಕಾರಕ್ಕೆ ಕೆಟ್ಟ ಹೆಸರು. ಸರ್ಕಾರದ ಕೈಪಿಡಿ ನಿಯಮಗಳನ್ನು ಪಾಲಿಸಿ. ಅಧಿಕಾರಿಗಳಿಗೆ ಸಿಇಒಗಳು ಬದ್ಧತೆ ನಿಗದಿ ಮಾಡಬೇಕು ಎಂದು ಸೂಚನೆ ನೀಡಿದರು. ಇದನ್ನೂ ಓದಿ: ಗಣೇಶ ಹಬ್ಬಕ್ಕೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ- ಡಿಸಿ, ಸಿಇಓಗಳಿಗೆ ಸಿಎಂ ಸೂಚನೆ

    15 ದಿನದೊಳಗೆ ಅಧಿಕಾರಿಗಳು ಕೆಲಸದ ಕೇಂದ್ರ ಸ್ಥಳದಲ್ಲಿ ವಾಸ್ತವ್ಯ ಹೂಡಿರುವ ವಿಳಾಸದ ಡೈರಿ ಮಾಡಿ ಸಾರ್ವಜನಿಕರ ಗಮನಕ್ಕೆ ತರಬೇಕು. ಕೇಂದ್ರ ಸ್ಥಳದಲ್ಲಿ ಉಳಿಯಲು ಆಗದವರು ಜಾಗ ಖಾಲಿ ಮಾಡಬೇಕು. ಭ್ರಷ್ಟಾಚಾರಕ್ಕೆ ಆಸ್ಪದ ಕೊಡಬೇಡಿ. ಆರ್‌ಟಿಐ ದುರ್ಬಳಕೆಗೂ ಅವಕಾಶ ಕೊಡಬೇಡಿ. ನಿಮ್ಮ ಮೇಲೆ ಹೆಚ್ಚು ನಿರೀಕ್ಷೆ ಇದೆ. ನರೇಗಾ ಹಣ ಸದ್ಬಳಕೆ ಮಾಡಿ. ಸಮರ್ಪಕ ಬಳಕೆಗೆ ಕ್ರಿಯಾ ಯೋಜನೆ ತಯಾರಿಸಿ. ಕಾಲಮಿತಿಯೊಳಗೆ ಅನುಷ್ಠಾನಕ್ಕೆ ತನ್ನಿ ಎಂದು ಹೇಳಿದರು. ಇದನ್ನೂ ಓದಿ: ದಲಿತ ಕುಟುಂಬಕ್ಕೆ ಧಮ್ಕಿ ಆರೋಪ – ವೀಡಿಯೋ ಫೇಕ್ ಎಂದ ಡಿ ಸುಧಾಕರ್

    ಸಿಎಸ್‌ಆರ್ ಫಂಡ್ ಸದ್ಬಳಕೆಗೆ ಶ್ರಮಿಸಿ. ಮೂರು ಗ್ರಾಮ ಪಂಚಾಯ್ತಿಗೆ ಒಂದು ಪಬ್ಲಿಕ್ ಮಾದರಿ ಶಾಲೆ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಸಿಎಸ್‌ಆರ್ ಫಂಡ್‌ನಿಂದ ಕಟ್ಟಡ ಕಟ್ಟಿಕೊಡುತ್ತಾರೆ. ಪಬ್ಲಿಕ್ ಶಾಲೆಗಳ ಆಡಳಿತ ಮಂಡಳಿ ದತ್ತು ತೆಗೆದುಕೊಂಡು ಬೋಧನೆಗೆ ವ್ಯವಸ್ಥೆ ಮಾಡಿಕೊಡಲಿವೆ. ರಾಜ್ಯದ ಕೆಲವು ಉದ್ಯಮಗಳು ಸಿಎಸ್‌ಆರ್ ಫಂಡ್ ಅನ್ನು ಬೇರೆ ರಾಜ್ಯಗಳಿಗೆ ತೆಗೆದುಕೊಂಡು ಹೋಗುತ್ತಿವೆ. ಅದನ್ನು ತಡೆದು ನಮ್ಮಲ್ಲೇ ಬಳಕೆ ಮಾಡಲು ನೀವೆಲ್ಲರೂ ನಿಗಾ ವಹಿಸಬೇಕು ಎಂದರು. ಇದನ್ನೂ ಓದಿ: ಅನಿಷ್ಟ ಸರ್ಕಾರದ ವಿರುದ್ಧ ಹೋರಾಟಕ್ಕೆ ಮೈತ್ರಿ ಅನಿವಾರ್ಯ: ಬೊಮ್ಮಾಯಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟ್ವಿಟ್ಟರ್‌ಗೆ ಹೊಸ ಸಿಇಒ – ಅಧಿಕೃತವಾಗಿ ಘೋಷಿಸಿದ ಮಸ್ಕ್

    ಟ್ವಿಟ್ಟರ್‌ಗೆ ಹೊಸ ಸಿಇಒ – ಅಧಿಕೃತವಾಗಿ ಘೋಷಿಸಿದ ಮಸ್ಕ್

    ವಾಷಿಂಗ್ಟನ್: ಕಳೆದ ವರ್ಷ 44 ಶತಕೋಟಿ ಡಾಲರ್‌ಗೆ ಟ್ವಿಟ್ಟರ್ (Twitter) ಅನ್ನು ಖರೀದಿಸಿದ್ದ ಟೆಸ್ಲಾ ಸಿಇಒ ಎಲೋನ್ ಮಸ್ಕ್ (Elon Musk) ಕೊನೆಗೂ ಮೈಕ್ರೋಬ್ಲಾಗಿಂಗ್ ಸೈಟ್‌ಗೆ ಹೊಸ ಸಿಇಒ (Twitter CEO) ಅನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಎನ್‌ಬಿಸಿ ಯುನಿವರ್ಸಲ್ ಜಾಹೀರಾತು ವಿಭಾಗದ ಮಾಜಿ ಮುಖ್ಯಸ್ಥೆ ಲಿಂಡಾ ಯಾಕರಿನೊ (Linda Yaccarino) ಅವರನ್ನು ಮಸ್ಕ್ ಟ್ವಿಟ್ಟರ್‌ನ ಹೊಸ ಸಿಇಒ ಆಗಿ ನೇಮಿಸಿದ್ದಾರೆ.

     

    ನಾನು ಲಿಂಡಾ ಯಾಕರಿನೋ ಅವರನ್ನು ಟ್ವಿಟ್ಟರ್‌ನ ಹೊಸ ಸಿಇಒ ಆಗಿ ಸ್ವಾಗತಿಸಲು ಉತ್ಸುಕನಾಗಿದ್ದೇನೆ. ಯಾಕರಿನೊ ಪ್ರಾಥಮಿಕವಾಗಿ ವ್ಯಾಪಾರ ಕಾರ್ಯಾಚರಣೆಗಳ ಮೇಲೆ ಗಮನಹರಿಸಿದರೆ, ನಾನು ಉತ್ಪನ್ನ ವಿನ್ಯಾಸ ಹಾಗೂ ಹೊಸ ತಂತ್ರಜ್ಞಾನದ ಮೇಲೆ ಗಮನಹರಿಸುತ್ತೇನೆ ಎಂದು ಮಸ್ಕ್ ತಿಳಿಸಿದ್ದಾರೆ.

    ವರದಿಗಳ ಪ್ರಕಾರ ಯಾಕರಿನೊ ಕಾರ್ಪ್ ಎಂಟರ್‌ಟೈನ್‌ಮೆಂಟ್ ಹಾಗೂ ಮಾಧ್ಯಮ ವಿಭಾಗದ ಜಾಹೀರಾತು ವ್ಯವಹಾರವನ್ನು ಆಧುನೀಕರಿಸುವಲ್ಲಿ ಕೆಲಸ ಮಾಡಿದ್ದಾರೆ. ಟ್ವಿಟ್ಟರ್‌ನ ಹೊಸ ಸಿಇಒ ಆಗಲು ಮಾತುಕತೆ ನಡೆಸಿದ ಬಳಿಕ ಅವರು ಶುಕ್ರವಾರ ಬೆಳಗ್ಗೆ ಎನ್‌ಬಿಸಿಯಲ್ಲಿ ತನ್ನ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದನ್ನೂ ಓದಿ: ಮಲಗಿದ್ದಾಗಲೂ ಮೈಕ್ರೋಫೋನ್ ಆನ್! – ವಾಟ್ಸಪ್‌ನ ನಂಬಬೇಡಿ ಎಂದ ಮಸ್ಕ್

    ಎಲೋನ್ ಮಸ್ಕ್ ಟ್ವಿಟ್ಟರ್‌ಗೆ ಹೊಸ ಸಿಇಒ ಹುಡುಕುತ್ತಿದ್ದುದಾಗಿ ಹಲವು ತಿಂಗಳುಗಳ ಹಿಂದೆಯೇ ಹೇಳಿದ್ದರು. ಯಾರಾದರೂ ಮೂರ್ಖತನ ಹೊಂದಿದವರು ಟ್ವಿಟ್ಟರ್ ಸಿಇಒ ಹುದ್ದೆ ವಹಿಸಿಕೊಂಡ ತಕ್ಷಣ ನಾನು ರಾಜೀನಾಮೆ ನೀಡುತ್ತೇನೆ ಎಂದು ಹಾಸ್ಯವನ್ನೂ ಆಡಿದ್ದರು.

    ಮಸ್ಕ್ ಟ್ವಿಟ್ಟರ್ ಅನ್ನು ಸ್ವಾಧೀನಪಡಿಸಿಕೊಂಡ ಬಳಿಕ ಹಲವು ಬದಲಾವಣೆಗಳನ್ನು ತಂದಿದ್ದಾರೆ. ಕಳೆದ ವರ್ಷ ಅಕ್ಟೊಬರ್ ನಂತರ ಕಂಪನಿಯ ಸುಮಾರು 80% ಉದ್ಯೋಗಿಗಳಿಗೆ ಗೇಟ್‌ಪಾಸ್ ನೀಡಿದ್ದರು. ಮಾತ್ರವಲ್ಲದೇ ಉದ್ಯೋಗಿಗಳಿಗೆ ಹೆಚ್ಚುವರಿ ಸಮಯ ಕೆಲಸ ಮಾಡುವಂತೆ ಆದೇಶಿಸಲಾಗಿದೆ. ಇತ್ತೀಚೆಗೆ ಟ್ವಿಟ್ಟರ್ ಖಾತೆಗಳಲ್ಲಿ ಬಳಕೆದಾರರು ಬ್ಲೂ ಟಿಕ್ ಪಡೆಯಲು ಪಾವತಿಸುವ ಕ್ರಮವನ್ನು ಜಾರಿಗೆ ತರಲಾಗಿದೆ. ಇದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದನ್ನೂ ಓದಿ: ಬೆಂಗಳೂರು ಬಳಿ ಭಾರೀ ಮೊತ್ತಕ್ಕೆ ಜಾಗ ಖರೀದಿಸಿದ ಆಪಲ್‌ ಐಫೋನ್‌ ತಯಾರಕ ಫಾಕ್ಸ್‌ಕಾನ್‌

  • ಭಾರತ ಮೂಲದ ನೀಲ್ ಮೋಹನ್ YouTubeನ ಹೊಸ CEO

    ಭಾರತ ಮೂಲದ ನೀಲ್ ಮೋಹನ್ YouTubeನ ಹೊಸ CEO

    ವಾಷಿಂಗ್ಟನ್: ವಿಶ್ವದಲ್ಲೇ ಅತಿ ದೊಡ್ಡ ಆನ್‌ಲೈನ್ ವೀಡಿಯೋ ಪ್ಲಾಟ್‌ಫಾರ್ಮ್ ಎನಿಸಿಕೊಂಡಿರುವ ಯೂಟ್ಯೂಬ್‌ಗೆ (YouTube) ಹೊಸ ಸಿಇಒ (CEO) ಆಗಿ ಭಾರತ ಮೂಲದ ನೀಲ್ ಮೋಹನ್ (Neal Mohan) ನೇಮಕಗೊಂಡಿದ್ದಾರೆ.

    ಕಳೆದ 9 ವರ್ಷಗಳಿಂದ ಯೂಟ್ಯೂಬ್ ಸಿಇಒ ಆಗಿ ಕಾರ್ಯನಿರ್ವಹಿಸಿದ್ದ ಸುಸಾನ್ ವೊಜ್ಸಿಕಿ (Susan Wojcicki) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಅವರ ಸ್ಥಾನವನ್ನು ಈಗ ನೀಲ್ ಮೋಹನ್ ವಹಿಸಿಕೊಳ್ಳಲಿದ್ದಾರೆ. 54 ವರ್ಷದ ಸುಸಾನ್ ತಮ್ಮ ಕುಟುಂಬ ಹಾಗೂ ವೈಯಕ್ತಿಕ ಜೀವನಕ್ಕೆ ಇದೀಗ ಹೆಚ್ಚಿನ ಆದ್ಯತೆ ನೀಡುವ ಸಲುವಾಗಿ ತಮ್ಮ ಸ್ಥಾನದಿಂದ ಕೆಳಗಿಳಿಯಲು ಮುಂದಾಗಿರುವುದಾಗಿ ತಿಳಿಸಿದ್ದಾರೆ.

    ನೀಲ್ ಮೋಹನ್ ಯಾರು?: ಭಾರತ ಮೂಲದ ನೀಲ್ ಮೋಹನ್ ಅವರು ಈ ಹಿಂದೆ ಯೂಟ್ಯೂಬ್‌ನ ಮುಖ್ಯ ಉತ್ಪನ್ನಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. 2008ರಲ್ಲಿ ಯೂಟ್ಯೂಬ್‌ನ ಮಾತೃ ಕಂಪನಿಯಾಗಿರುವ ಗೂಗಲ್‌ಗೆ (Google) ಸೇರಿದ ಅವರು 15 ವರ್ಷಗಳ ಕಾಲ ವೊಜ್ಸಿಕಿ ಅವರ ಯೋಜನೆಗಳಿಗೆ ಸಹಕರಿಸಿದ್ದಾರೆ. ಡಿಸ್‌ಪ್ಲೇ ಹಾಗೂ ವೀಡಿಯೋ ಜಾಹೀರಾತುಗಳ ಹಿರಿಯ ಉಪಾಧ್ಯಕ್ಷರಾಗಿದ್ದ ಅವರು 2015ರಲ್ಲಿ ಯೂಟ್ಯೂಬ್‌ನ ಮುಖ್ಯ ಉತ್ಪನ್ನಾಧಿಕಾರಿಯಾಗಿ ನೇಮಕಗೊಂಡರು. ಇದನ್ನೂ ಓದಿ: Aero India 2023: ಇಂದು ಕೊನೆಯ ದಿನದ ಏರ್‌ಶೋ ಕಣ್ತುಂಬಿಕೊಳ್ಳಿ

    ನೀಲ್ ಮೋಹನ್ 1996 ರಲ್ಲಿ ಅಮೆರಿಕದ ಸ್ಟ್ಯಾಂಡ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಎಲೆಕ್ಟಿçಕಲ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನಂತರ 2005 ರಲ್ಲಿ ಸ್ಟ್ಯಾನ್‌ಫೋರ್ಡ್ ಯೂನಿವರ್ಸಿಟಿ ಗ್ರಾಜುಯೇಟ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ತಮ್ಮ ಎಂಬಿಎ ಮುಗಿಸಿದರು. ಯೂಟ್ಯೂಬ್ ಮಾತ್ರವಲ್ಲದೇ ಅವರು ಬಟ್ಟೆ ಮತ್ತು ಫ್ಯಾಶನ್ ಕಂಪನಿ ಸ್ಟಿಚ್ ಫಿಕ್ಸ್‌ಗೆ ಮಂಡಳಿಯ ನಿರ್ದೇಶಕರಾಗಿ ಸೇವೆಯನ್ನೂ ಸಲ್ಲಿಸಿದ್ದಾರೆ. 23 ಆಂಡ್‌ಮಿ ಜೈವಿಕ ತಂತ್ರಜ್ಞಾನ ಸಂಶೋಧನಾ ಕಂಪನಿಯ ನಿರ್ದೇಶಕರ ಮಂಡಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಉಕ್ರೇನ್ ಯುದ್ಧದಲ್ಲಿ ಮಡಿದ ಮಗನ ಹೆಸರಲ್ಲಿ ಮನೆ ನಿರ್ಮಿಸಿದ ತಂದೆ-ತಾಯಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜವಾಬ್ದಾರಿ ತೆಗೆದುಕೊಳ್ಳೋ ಮೂರ್ಖ ಸಿಕ್ಕ ತಕ್ಷಣ ಸಿಇಒ ಹುದ್ದೆಯಿಂದ ಕೆಳಗಿಯುತ್ತೇನೆ: ಮಸ್ಕ್

    ಜವಾಬ್ದಾರಿ ತೆಗೆದುಕೊಳ್ಳೋ ಮೂರ್ಖ ಸಿಕ್ಕ ತಕ್ಷಣ ಸಿಇಒ ಹುದ್ದೆಯಿಂದ ಕೆಳಗಿಯುತ್ತೇನೆ: ಮಸ್ಕ್

    ವಾಷಿಂಗ್ಟನ್: ಟ್ವಿಟ್ಟರ್ ಸಿಇಒ (Twitter CEO) ಎಲೋನ್ ಮಸ್ಕ್ (Elon Musk) ಇತ್ತೀಚೆಗೆ ತಾವು ತಮ್ಮ ಹುದ್ದೆಯನ್ನು ತೊರೆಯಬೇಕೇ ಅಥವಾ ಹೀಗೇ ಮುಂದುವರಿಯಬೇಕೇ ಎಂಬ ಬಗ್ಗೆ ಸಮೀಕ್ಷೆಯೊಂದರ ಮೂಲಕ ಬಳಕೆದಾರರ ಅಭಿಪ್ರಾಯವನ್ನು ಪಡೆದುಕೊಂಡಿದ್ದರು. ಸಮೀಕ್ಷೆಯಲ್ಲಿ ಮಸ್ಕ್‌ಗೆ ಟ್ವಿಟ್ಟರ್ ಸಿಇಒ ಸ್ಥಾನದಿಂದ ಕೆಳಗಿಳಿಯಲು ಹೆಚ್ಚಿನ ಬಳಕೆದಾರರು ಸೂಚಿಸಿದ್ದು, ಇದೀಗ ಮಸ್ಕ್ ತಾವು ಟ್ವಿಟ್ಟರ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವುದಾಗಿ ತಿಳಿಸಿದ್ದಾರೆ.

    ಎಲೋನ್ ಮಸ್ಕ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆದರೆ ತಾವು ಕೆಳಗಿಳಿಯಲು ಒಂದು ಷರತ್ತನ್ನೂ ನೀಡಿದ್ದಾರೆ. ನನ್ನ ಜವಾಬ್ದಾರಿ ತೆಗೆದುಕೊಳ್ಳಲು ಯಾರಾದರೂ ಮೂರ್ಖ ಸಿಕ್ಕ ತಕ್ಷಣವೇ ಟ್ವಿಟ್ಟರ್ ಸಿಇಒ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಬಳಿಕ ಕಂಪನಿಯ ಸಾಫ್ಟ್‌ವೇರ್ ಹಾಗೂ ಸರ್ವರ್ ತಂಡಗಳನ್ನು ಮುನ್ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

    ಕಳೆದ 2 ದಿನಗಳ ಹಿಂದೆ ಮಸ್ಕ್ ಸಮೀಕ್ಷೆಯನ್ನು ಪ್ರಾರಂಭಿಸಿದ್ದರು ಹಾಗೂ ಅದರ ಫಲಿತಾಂಶಕ್ಕೆ ಬದ್ಧನಾಗಿರುವುದಾಗಿ ಹೇಳಿದ್ದರು. ವೋಟ್ ಮಾಡುವಾಗ ಜಾಗರೂಕರಾಗಿರಿ. ಟ್ವಿಟ್ಟರ್ ಮುಖ್ಯಸ್ಥನಾಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದು ನಿಮ್ಮ ಕೈಯಲ್ಲಿದೆ ಎಂದು ಮಸ್ಕ್ ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಆಸ್ಪತ್ರೆಗಳು ಭರ್ತಿ, ಸ್ಮಶಾನದಲ್ಲಿ ಶವಗಳ ರಾಶಿ – ಚೀನಾದಲ್ಲಿ ಕೋವಿಡ್‌ ಸುನಾಮಿಗೆ ಕಾರಣ ಏನು?

    ಭಾನುವಾರ ಮಸ್ಕ್ ಸಮೀಕ್ಷೆಯ ಗಡುವು ಮುಗಿದಿದ್ದು, 1.7 ಕೋಟಿ ಮಂದಿ ವೋಟ್ ಮಾಡಿದ್ದಾರೆ. ವೋಟ್ ಮಾಡಿದ ಶೇ.57.5 ರಷ್ಟು ಬಳಕೆದಾರರು ಸಿಇಒ ಹುದ್ದೆಯನ್ನು ತೊರೆಯುವಂತೆ ಮಸ್ಕ್‌ಗೆ ಸೂಚಿಸಿದ್ದಾರೆ. ಶೇ.42.5 ರಷ್ಟು ಬಳಕೆದಾರರು ಟ್ವಿಟ್ಟರ್ ಸಿಇಒ ಸ್ಥಾನದಲ್ಲಿಯೇ ಮುಂದುವರಿಯಲು ತಿಳಿಸಿದ್ದಾರೆ. ತಮ್ಮ ಸ್ಥಾನದಿಂದ ಕೆಳಗಿಳಿಯಲು ಹೆಚ್ಚಿನವರು ಸೂಚಿಸಿರುವುದರಿಂದ ಮಸ್ಕ್ ಇದೀಗ ತಾವು ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳೀಬೇಕಾ? – ಸಮೀಕ್ಷೆಯ ಫಲಿತಾಂಶಕ್ಕೆ ಬದ್ಧನಾಗಿರುತ್ತೇನೆ ಎಂದ ಮಸ್ಕ್

    Live Tv
    [brid partner=56869869 player=32851 video=960834 autoplay=true]

  • ಟ್ವಿಟ್ಟರ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳೀಬೇಕಾ? – ಸಮೀಕ್ಷೆಯ ಫಲಿತಾಂಶಕ್ಕೆ ಬದ್ಧನಾಗಿರುತ್ತೇನೆ ಎಂದ ಮಸ್ಕ್

    ಟ್ವಿಟ್ಟರ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳೀಬೇಕಾ? – ಸಮೀಕ್ಷೆಯ ಫಲಿತಾಂಶಕ್ಕೆ ಬದ್ಧನಾಗಿರುತ್ತೇನೆ ಎಂದ ಮಸ್ಕ್

    ವಾಷಿಂಗ್ಟನ್: ಈಗಾಗಲೇ ಹಲವು ಸಮೀಕ್ಷೆಗಳನ್ನು ನಡೆಸಿ, ಅದರ ಫಲಿತಾಂಶಕ್ಕೆ ತಕ್ಕಂತೆ ನಡೆದುಕೊಂಡಿರುವ ಮಸ್ಕ್ ಇದೀಗ ತಾನು ಟ್ವಿಟ್ಟರ್ ಸಿಇಒ (Twitter CEO) ಸ್ಥಾನದಿಂದ ಕೆಳಗಿಳಿಯಬೇಕಾ ಎಂಬ ಪ್ರಶ್ನೆಯೊಂದಿಗೆ ಸಮೀಕ್ಷೆ ಪ್ರಾರಂಭಿಸಿದ್ದಾರೆ.

    ಹೌದು, ಇತ್ತೀಚೆಗಷ್ಟೇ ಟ್ವಿಟ್ಟರ್ ಅನ್ನು ಖರೀದಿಸಿದ ಬಿಲಿಯನೇರ್ ಎಲೋನ್ ಮಸ್ಕ್ (Elon Musk) ತಾವು ಅದರ ಸಿಇಒ ಸ್ಥಾನದಿಂದ ಕೆಳಗಿಳಿಯುವ ಬಗ್ಗೆ ಯೋಜನೆ ಮಾಡಿರುವುದು ತಿಳಿದುಬಂದಿದೆ. ಮಸ್ಕ್ ತಾವು ಟ್ವಿಟ್ಟರ್ ಸಿಇಒ ಸ್ಥಾನದಿಂದ ಕೆಳಗಿಳಿಯಬೇಕೇ? ಎಂದು ಪ್ರಶ್ನೆಯನ್ನು ಕೇಳಿ ಸಮೀಕ್ಷೆಗೆ ‘ಎಸ್’ ಹಾಗೂ ‘ನೋ’ ಗಳಲ್ಲಿ ಒಂದನ್ನು ಆಯ್ಕೆ ಮಾಡುವಂತೆ ಬಳಕೆದಾರರಲ್ಲಿ ಕೇಳಿದ್ದಾರೆ.

    ಮಸ್ಕ್ ಕೇವಲ ಸಮೀಕ್ಷೆಯನ್ನು ನಡೆಸದೇ ಇದರ ಫಲಿತಾಂಶಕ್ಕೆ ಬದ್ಧನಾಗಿರುವುದಾಗಿ ತಿಳಿಸಿದ್ದಾರೆ. ವೋಟ್ ಮಾಡುವಾಗ ಜಾಗರೂಕರಾಗಿರಿ. ಟ್ವಿಟ್ಟರ್ ಮುಖ್ಯಸ್ಥನಾಗಿ ನಾನು ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದು ನಿಮ್ಮ ಕೈಯಲ್ಲಿದೆ ಎಂದು ಮಸ್ಕ್ ಬಳಕೆದಾರರಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಇದನ್ನೂ ಓದಿ: ಹ್ಯಾಟ್ರಿಕ್ ವೀರ ಎಂಬಾಪೆಗೆ ಸಮಾಧಾನ ಹೇಳಿದ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್

    ಮಸ್ಕ್ ಟ್ವಿಟ್ಟರ್‌ನ ಸಿಇಒ ಆಗಿ ಹೆಚ್ಚು ಕಾಲ ಉಳಿಯಲು ಬಯಸುವುದಿಲ್ಲ ಎಂದು ಈ ಹಿಂದೆಯೇ ತಿಳಿಸಿದ್ದರು. ಮಾತ್ರವಲ್ಲದೇ ಮುಖ್ಯಸ್ಥ ಸ್ಥಾನಕ್ಕೆ ಬೇರೆಯವರನ್ನು ಹುಡುಕುತ್ತಿರುವ ಸುಳಿವನ್ನೂ ನೀಡಿದ್ದರು.

    ಟೆಸ್ಲಾ ಸಿಇಒ ಮೈಕ್ರೋ ಬ್ಲಾಗಿಂಗ್ ಸೈಟ್ ಅನ್ನು ವಹಿಸಿಕೊಂಡಾಗಿನಿಂದ ಕಂಪನಿಯಲ್ಲಿ ಮಾಡಿರುವ ಹಲವಾರು ಬದಲಾವಣೆಗಳಿಂದ ಭಾರೀ ಟೀಕೆಗೆ ಒಳಗಾಗಿದ್ದಾರೆ. ಅವುಗಳಲ್ಲಿ ಕಂಪನಿಯ ಅರ್ಧಕ್ಕಿಂತಲೂ ಹೆಚ್ಚು ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಿರುವುದು, ಹಿಂದೆ ನಿರ್ಬಂಧಿಸಿದ್ದ ಬಳಕೆದಾರರ ಖಾತೆಯನ್ನು ಮರಳಿ ತಂದಿರುವುದು ಸೇರಿವೆ. ಇದನ್ನೂ ಓದಿ: ಫಿಫಾ ವಿಶ್ವಕಪ್ 2026: ಕತಾರ್‌ಗೆ ಬೈ – ಹಾಯ್ ಹಲೋ ಅಮೆರಿಕ

    Live Tv
    [brid partner=56869869 player=32851 video=960834 autoplay=true]