Tag: CET

  • ಪಿಜಿ ವೈದ್ಯಕೀಯ: ಆನ್ ಲೈನ್ ಅರ್ಜಿ ಸಲ್ಲಿಕೆಗೆ ಅ.17 ಕೊನೆಯ ದಿನ – ಕೆಇಎ

    ಪಿಜಿ ವೈದ್ಯಕೀಯ: ಆನ್ ಲೈನ್ ಅರ್ಜಿ ಸಲ್ಲಿಕೆಗೆ ಅ.17 ಕೊನೆಯ ದಿನ – ಕೆಇಎ

    ಬೆಂಗಳೂರು: 2025-26ನೇ ಸಾಲಿಗೆ ರಾಜ್ಯದ ಪಿಜಿ ವೈದ್ಯಕೀಯ ಪದವಿ/ಡಿಪ್ಲೊಮಾ ಕೋರ್ಸುಗಳಿಗೆ ಸೇರಲು ಆಸಕ್ತರಾದ ನೀಟ್ ಪಿಜಿ- 2025ರಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಅ.17ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತಿಳಿಸಿದೆ.

    ಅರ್ಜಿ ಸಲ್ಲಿಸಿ, ಅರ್ಜಿ ಶುಲ್ಕ ಪಾವತಿಸಲು ಅ.17ರ ಬೆಳಿಗ್ಗೆ 11ರವರೆಗೆ ಅವಕಾಶವಿರುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಮಂಗಳವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ:  IPS ಅಧಿಕಾರಿ ಪೂರನ್‌ ಆತ್ಮಹತ್ಯೆ ಕೇಸ್‌ ತನಿಖೆ ಮಾಡುತ್ತಿದ್ದ ಪೊಲೀಸ್‌ ಅಧಿಕಾರಿ ಕೂಡ ಸೂಸೈಡ್‌

     

    ಬಿ.ಎಸ್ಸಿ.ನರ್ಸಿಂಗ್, ಫಾರ್ಮ, ಬಿಪಿಟಿ:
    ಯುಜಿಸಿಇಟಿ 2025ರ ಬಿ.ಎಸ್ಸಿ.ನರ್ಸಿಂಗ್, ಬಿ-ಫಾರ್ಮ, ಫಾರ್ಮ-ಡಿ ಮತ್ತು ಬಿಪಿಟಿ ಕೋರ್ಸುಗಳಿಗೆ ಅಂತಿಮ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ (ಕನ್ಫರ್ಮೇಷನ್ ಸ್ಲಿಪ್) ಡೌನ್ ಲೋಡ್ ಮಾಡಿಕೊಂಡು ಅ.16ರ ಸಂಜೆ 5.30ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಇದನ್ನೂ ಓದಿ: ಫೋನ್‌ ಟ್ಯಾಪಿಂಗ್‌ ಕೇಸ್;‌ ಅಲೋಕ್‌ ಕುಮಾರ್‌ ವಿರುದ್ಧದ ತನಿಖಾ ಆದೇಶ ರದ್ದು – ಸರ್ಕಾರಕ್ಕೆ ಭಾರೀ ಹಿನ್ನಡೆ

    ಇದಕ್ಕಾಗಿ ಅಭ್ಯರ್ಥಿಗಳು ಅ.16ರ ಸಂಜೆ 4ರೊಳಗೆ ಶುಲ್ಕ ಪಾವತಿಸಿ, ಸಂಜೆ 5ರೊಳಗೆ ಕನ್ಫರ್ಮೇಷನ್ ಸ್ಲಿಪ್ ಡೌನ್ ಲೋಡ್ ಮಾಡಿಕೊಳ್ಳಬೇಕು ಎಂದೂ ಅವರು ತಿಳಿಸಿದ್ದಾರೆ.

  • ಸಿಇಟಿ ಛಾಯ್ಸ್ ಆಯ್ಕೆ, ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ: ಕೆಇಎ

    ಸಿಇಟಿ ಛಾಯ್ಸ್ ಆಯ್ಕೆ, ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ: ಕೆಇಎ

    ಬೆಂಗಳೂರು: ಎಂಜಿನಿಯರಿಂಗ್, ಆಯುಷ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಸೂಕ್ತ ಛಾಯ್ಸ್ ಆಯ್ಕೆ ಮಾಡುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಸೆ.3ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.

    ಶುಲ್ಕ ಪಾವತಿ ನಂತರ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.4ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನ ಭೂಕಂಪ – ಸಾವಿನ ಸಂಖ್ಯೆ 800ಕ್ಕೆ ಏರಿಕೆ: 2000ಕ್ಕೂ ಹೆಚ್ಚು ಜನರಿಗೆ ಗಾಯ

    ಛಾಯ್ಸ್-1 ಮತ್ತು ಛಾಯ್ಸ್-2 ಆಯ್ಕೆ ಮಾಡಿದವರು ಶುಲ್ಕ ಹಾಗೂ ಛಾಯ್ಸ್-3 ಆಯ್ಕೆ ಮಾಡಿದವರು ಕಾಷನ್ ಡೆಪಾಸಿಟ್ ಪಾವತಿಗೆ ಸೆ.3 ಕೊನೆ ದಿನ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: Vote Chori | ಮೋದಿ ವಿರುದ್ಧ ರಾಹುಲ್ ಹೈಡ್ರೋಜನ್ ಬಾಂಬ್

    ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಮತ್ತು ಪ್ರವೇಶ ಪ್ರಕ್ರಿಯೆ ವೇಳಾಪಟ್ಟಿ ಕುರಿತು ಸದ್ಯದಲ್ಲೇ ಪ್ರತ್ಯೇಕ ಪ್ರಕಟಣೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Bengaluru Rains | ಕೆಲವೇ ನಿಮಿಷದ ಮಳೆಗೆ ಬೆಂಗಳೂರಲ್ಲಿ ಭಾರಿ ಅವಾಂತರ – ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

  • CET: ನೋಂದಣಿ ಸಂಖ್ಯೆ ನಮೂದಿಸುವಲ್ಲಿ ದೋಷ – ಕೆಇಎ

    CET: ನೋಂದಣಿ ಸಂಖ್ಯೆ ನಮೂದಿಸುವಲ್ಲಿ ದೋಷ – ಕೆಇಎ

    – ಅಂಕ ದಾಖಲಿಸಲು ಮೇ 26ರಿಂದ ಅವಕಾಶ

    ಬೆಂಗಳೂರು: ಸರಿಯಾಗಿ ನೋಂದಣಿ ಸಂಖ್ಯೆಯನ್ನು ನಮೂದಿಸದ ಕಾರಣದಿಂದ ಸಿಇಟಿ-2025ರ ಫಲಿತಾಂಶ (CET 2025 Result) ಪ್ರಕಟವಾಗದೇ ಇರುವ ಅಭ್ಯರ್ಥಿಗಳಿಗೆ ತಮ್ಮ ಅಂಕಗಳನ್ನು ದಾಖಲಿಸಲು ಅವಕಾಶ ನೀಡುವ ಸಲುವಾಗಿ ಮೇ 26ರಿಂದ ಆನ್‌ಲೈನ್ ಲಿಂಕ್ ತೆರೆಯಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

    ಸಿಇಟಿ-2025ರ ಫಲಿತಾಂಶವನ್ನು ಕೆಇಎ ಶನಿವಾರ ಪ್ರಕಟಿಸಿದ್ದು, ಕೆಲವು ಅಭ್ಯರ್ಥಿಗಳು ಹಿಂದಿನ ವರ್ಷದಲ್ಲಿ 2ನೇ ಪಿಯು/12ನೇ ತರಗತಿ ಪರೀಕ್ಷೆಗಳಲ್ಲಿ ತಾವು ತೇರ್ಗಡೆಯಾಗಿದ್ದರೂ ಫಲಿತಾಂಶ ಪ್ರಕಟವಾಗಿಲ್ಲ ಎಂದು ಮನವಿಗಳನ್ನು ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಶನಿವಾರ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಕೇಸ್, ಆತಂಕಪಡಬೇಕಿಲ್ಲ: ದಿನೇಶ್ ಗುಂಡೂರಾವ್

    ಸಿಇಟಿ-2025ರ ಫಲಿತಾಂಶವನ್ನು ಪ್ರಕಟಿಸುವ ಮೊದಲು 2ನೇ ಪಿಯು/12ನೇ ತರಗತಿ ಅಂಕಗಳನ್ನು ಆಯಾ ಮಂಡಳಿಗಳಿಂದಲೇ ಪಡೆಯಲಾಗುವುದು ಎಂದು ಸೂಚಿಸಲಾಗಿತ್ತು ಮತ್ತು ಅಭ್ಯರ್ಥಿಗಳು ಸರಿಯಾದ ನೋಂದಣಿ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯ ಎಂದು ಸೂಚಿಸಲಾಗಿತ್ತು. ಆದರೂ ಕೆಲವು ಅಭ್ಯರ್ಥಿಗಳು ನೋಂದಣಿ ಸಂಖ್ಯೆಯನ್ನು ಸರಿಯಾಗಿ ನಮೂದಿಸಿರಲಿಲ್ಲ. ಹೀಗಾಗಿ ಅಂತಹ ಅಭ್ಯರ್ಥಿಗಳ ಫಲಿತಾಂಶ ಪ್ರಕಟಿಸಲು ಸಾಧ್ಯವಾಗಿಲ್ಲ ಎಂದು ಪ್ರಸನ್ನ ವಿವರಿಸಿದ್ದಾರೆ. ಇದನ್ನೂ ಓದಿ: ಪ್ರತಿ ರಾಜ್ಯದಲ್ಲಿ ಒಂದು ವಿಶ್ವದರ್ಜೆಯ ಪ್ರವಾಸಿ ತಾಣ ಅಭಿವೃದ್ಧಿಪಡಿಸಿ: ಮೋದಿ ಕರೆ

    ಮೇ 26ರಿಂದ ತೆರೆಯಲಾಗುವ ಲಿಂಕ್‌ನಲ್ಲಿ ಅಭ್ಯರ್ಥಿಗಳು 2ನೇ ಪಿಯು/12ನೇ ತರಗತಿ ಅಂಕಗಳನ್ನು ನೋಂದಣಿ ಸಂಖ್ಯೆಯೊಂದಿಗೆ ದಾಖಲಿಸಬೇಕು ಮತ್ತು ಅಂಕಪಟ್ಟಿಯನ್ನು ಅಪ್‌ಲೋಡ್ ಮಾಡಬೇಕು. ಅಭ್ಯರ್ಥಿಗಳು ದಾಖಲಿಸುವ ಅಂಕಗಳನ್ನು ಆಯಾ ಪರೀಕ್ಷಾ ಮಂಡಳಿಯಿಂದ ಪರಿಶೀಲಿಸಿ ಧೃಡೀಕರಿಸಿದ ನಂತರವೇ ಸ್ಪಾಟ್ ರಾಂಕ್ (Rank) ಅನ್ನು ಮೇ 29ರಿಂದ ನೀಡಲು ಕ್ರಮವಹಿಸಲಾಗುವುದು. ಸ್ಪಾಟ್ ರಾಂಕ್ ಪಡೆಯಲು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಬರುವ ಅವಶ್ಯಕತೆ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: `ಪಬ್ಲಿಕ್ ಟಿವಿ’ಯ ಒಂದು ಕರೆಯಿಂದ ಸರ್ಕಾರಿ ಶಾಲೆಗೆ ಮರುಜೀವ ನೀಡಿದ ಪ್ರಣವ್ ಫೌಂಡೇಶನ್..!

  • CET ದಾಖಲೆ ಪರಿಶೀಲನೆ – ಜಮ್ಮು ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶ, ಆತಂಕ ಬೇಡ: ಕೆಇಎ

    CET ದಾಖಲೆ ಪರಿಶೀಲನೆ – ಜಮ್ಮು ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶ, ಆತಂಕ ಬೇಡ: ಕೆಇಎ

    ಬೆಂಗಳೂರು: ಗಡಿ ಭಾಗದಲ್ಲಿನ ಸೇನಾ ಉದ್ವಿಗ್ನತೆಯಿಂದ ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳಿಗೆ (Jammu And Kashmir Students) ಯುಜಿಸಿಇಟಿ-25 ಪ್ರವೇಶ ಸಲುವಾಗಿ ನಡೆಸುವ ಮೂಲ ದಾಖಲೆಗಳ ಪರಿಶೀಲನೆಗೆ ಮತ್ತೊಮ್ಮೆ ಅವಕಾಶ ನೀಡಲಾಗುವುದು. ಈ ವಿಷಯದಲ್ಲಿ ಆತಂಕ ಬೇಡ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.

    ಪ್ರಸಕ್ತ ಸಾಲಿನ ಸಿಇಟಿ ಸಲುವಾಗಿ ಜಮ್ಮು ಕಾಶ್ಮೀರದ ಒಟ್ಟು 204 ಮಂದಿ ಪರೀಕ್ಷೆ (CET Exam) ಬರೆದಿದ್ದು, ಅವರಲ್ಲಿ ಇದುವರೆಗೂ ಕೇವಲ 52 ಮಂದಿ ಮಾತ್ರ ದಾಖಲೆ ಪರಿಶೀಲನೆ ಮಾಡಿಸಿಕೊಂಡಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಶಕ್ತಿಶಾಲಿ ಅಸ್ತ್ರಗಳಿಂದಲೇ ಪಾಕ್‌ಗೆ ಶತಕೋಟಿ ಲಾಸ್‌ – ದಿವಾಳಿಯತ್ತ ʻಭಿಕಾರಿಸ್ತಾನʼ

    ಗಡಿ ಭಾಗದಲ್ಲಿ ಪರಿಸ್ಥಿತಿಯ ಅರಿವು ಇರುವ ಕಾರಣಕ್ಕೆ ಅವರಿಗೆ ಮತ್ತೊಂದು ಅವಕಾಶ ನೀಡಲಾಗುವುದು. ಒಂದು ವೇಳೆ 10- 15 ದಿನಗಳ‌ ನಂತರವೂ ಪರಿಸ್ಥಿತಿ ಸುಧಾರಿಸದೇ ಇದ್ದರೆ ವಿಡಿಯೋ ಸಂವಾದದ ಮೂಲಕವೇ ದಾಖಲೆಗಳ ಪರಿಶೀಲನೆ ಮಾಡಲಾಗುವುದು. ಒಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವಾಯುನೆಲೆಯ ಮೇಲೆ ಭಾರತ ದಾಳಿ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಅಲ್ಲೋಲ ಕಲ್ಲೋಲ

    ಈ ಕುರಿತು ಈ ಎಲ್ಲ ಅಭ್ಯರ್ಥಿಗಳಿಗೆ ಪ್ರತ್ಯೇಕ ಸಂದೇಶ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‌ ತತ್ತರ – ಇಸ್ಲಾಮಾಬಾದ್‌ನಲ್ಲಿ 48 ಗಂಟೆಗಳವರೆಗೆ ಪೆಟ್ರೋಲ್ ಪಂಪ್‌ಗಳು ಬಂದ್‌

  • ಜನಿವಾರ ವಾರ್‌ | ಭೌತಶಾಸ್ತ್ರ, ರಸಾಯನಶಾಸ್ತ್ರ ಸರಾಸರಿ ಅಂಕ ಪರಿಗಣಿಸಿ ಗಣಿತಕ್ಕೆ ಮಾರ್ಕ್ಸ್‌ ನೀಡಿ

    ಜನಿವಾರ ವಾರ್‌ | ಭೌತಶಾಸ್ತ್ರ, ರಸಾಯನಶಾಸ್ತ್ರ ಸರಾಸರಿ ಅಂಕ ಪರಿಗಣಿಸಿ ಗಣಿತಕ್ಕೆ ಮಾರ್ಕ್ಸ್‌ ನೀಡಿ

    ಬೀದರ್‌: ಜನಿವಾರ (Janivara) ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆಯಿಂದ (CET) ವಂಚಿತನಾಗಿದ್ದ ಸುಚಿವ್ರತ್ ಕುಲಕರ್ಣಿ ಭೌತಶಾಸ್ತ್ರ (Physics) ಮತ್ತು ರಸಾಯನಶಾಸ್ತ್ರ (Chemistry) ವಿಷಯದ ಸರಾಸರಿ ಅಂಕಗಳನ್ನು ಆಧಾರವಾಗಿ ಪರಿಗಣಿಸಿ ಗಣಿತ ಅಂಕ ನೀಡುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಅವರಿಗೆ  ಪತ್ರ ಬರೆದಿದ್ದಾನೆ.

    ಸುಚಿವ್ರತ್ ಕುಲಕರ್ಣಿಗೆ ಉನ್ನತ ಶಿಕ್ಷಣ ಇಲಾಖೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡುವುದು ಅಥವಾ ಹಾಲಿ ಬರೆದಿರುವ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದ ಪರೀಕ್ಷೆಯಲ್ಲಿ ಪಡೆದ ಅಂಕದ ಆಧಾರದ ಮೇಲೆ ನೀಡುವ ಗಣಿತ ವಿಷಯದ ಅಂಕ ನಿಗದಿ ಮಾಡುವ ಆಯ್ಕೆ ನೀಡಿತ್ತು. ಈ ಆಯ್ಕೆಯ ಪೈಕಿ ಸುಚಿವ್ರತ್ ಎರಡನೇ ಆಯ್ಕೆಯನ್ನು ಆರಿಸಿಕೊಳ್ಳುವುದಾಗಿ ಹೇಳಿದ್ದಾನೆ.

     

    ಪತ್ರದಲ್ಲಿ ಏನಿದೆ?
    ನಾನು ಸುಚಿವ್ರತ್ ಕುಲಕರ್ಣಿ ಬೀದರ್ ನಿವಾಸಿಯಾಗಿದ್ದೇನೆ. ಏ.17 ರಂದು ಬೀದರ್ ನಗರದ ಸಾಯಿಸ್ಫೂರ್ತಿ ಪಿಯುಸಿ ಕಾಲೇಜಿನಲ್ಲಿರುವ ಕೇಂದ್ರಕ್ಕೆ ನಾನು ಸಿಇಟಿ ಗಣಿತ (Mathematics) ಪರೀಕ್ಷೆ ಬರೆಯಲು ಹೋಗಿರುತ್ತೇನೆ. ಆದರೆ ಈ ವೇಳೆ ಅಲ್ಲಿದ್ದ ಸಿಬ್ಬಂದಿ ನಾನು ತೊಟ್ಟಿದ್ದ ಜನಿವಾರ ತೆಗೆಯುವಂತೆ ಹೇಳಿದ್ದರು. ನಾನು ಬ್ರಾಹ್ಮಣ ಸಮಾಜದ ವಿದ್ಯಾರ್ಥಿಯಾಗಿದ್ದು ಜನಿವಾರ ತೆಗೆಯಲು ಸಾಧ್ಯವಿಲ್ಲ. ‌ಮೇಲಾಗಿ KEA ಪರೀಕ್ಷಾ ನಿಯಮದಲ್ಲಿ ಸಹ ಜನಿವಾರ ತೆಗೆಯುವ ಸೂಚನೆ ಇಲ್ಲ. ಜನಿವಾರ ತೆಗೆಯುವುದು ಅಥವಾ ತೆಗೆಸುವುದು ಧರ್ಮ ಅವಮಾನವಾಗಿದೆ.‌ ನಾನು ಜನಿವಾರ ತೆಗೆಯುವುದಿಲ್ಲ ಎಂದು ಹೇಳಿರುತ್ತೇನೆ. ಆಗ ಸಿಬ್ಬಂದಿಗಳು ನಾನು ಜನಿವಾರ ತೆಗೆಯದಿದ್ದಕ್ಕೆ ಪ್ರವೇಶ ಪರೀಕ್ಷೆ ಬರೆಯಲು ಅವಕಾಶ ನೀಡದೇ ವಾಪಸ್ ಕಳಿಸಿದ್ದಾರೆ.

    ಪರೀಕ್ಷಾ ಕೇಂದ್ರದವರ ಈ ಕ್ರಮ ತಪ್ಪು ಹಾಗೂ KEA ನಿಯಮದ ವಿರುದ್ಧವಿದೆ ಎಂದು ಹೇಳಿ ಎಲ್ಲೆಡೆ ಬೃಹತ್ ಪ್ರತಿಭಟನೆ ನಡೆದವು. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ನನ್ನ ಮೇಲಿನ ಅನ್ಯಾಯ ಸರಿಪಡಿಸಲು ಹೇಳಿತು. ಪುನಃ ಸಿಇಟಿ ಗಣಿತ ವಿಷಯದ ಪರೀಕ್ಷೆ ಬರೆಯಲು ಅಥವಾ ಈಗಾಗಲೇ ಬರೆದಿದ್ದ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಸರಾಸರಿ ಅಂಕಗಳ ಆಧಾರದಲ್ಲಿ ಗಣಿತ ವಿಷಯದ ಪರೀಕ್ಷೆಯ ಮೌಲ್ಯಮಾಪನ ಮಾಡಿ ಅಂಕ ನೀಡುವ ಘೋಷಣೆ ಮಾಡಿರುತ್ತದೆ.

    ಸರ್, ನಾನು ಮತ್ತು ನನ್ನ ಪಾಲಕರು ಸಮಾಲೋಚನೆ ಮಾಡಿ ಸರ್ಕಾರದ ಆಯ್ಕೆಯಲ್ಲಿ ಒಂದನ್ನು ಒಪ್ಪಿರುತ್ತೇವೆ‌. ನನ್ನ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯದ ಸರಾಸರಿ ಅಂಕಗಳನ್ನು ಆಧಾರವಾಗಿ ಪರಿಗಣಿಸಿ ಗಣಿತ ವಿಷಯದ ಅಂಕ ನೀಡುವಂತೆ ಈ ಮೂಲಕ ಕೋರಲಾಗಿದೆ‌. ನನ್ನ ನಿರ್ಧಾರ ತಮಗೆ ತಿಳಿಸಿರುತ್ತೇನೆ. ನನಗೆ ಈ ಅವಕಾಶ ನೀಡಿ ನ್ಯಾಯ ಒದಗಿಸಿದ ಕರ್ನಾಟಕ ಸರ್ಕಾರಕ್ಕೆ ನಾನು ಮತ್ತು ನನ್ನ ಪರಿವಾರದವರಿಗೆ ಹೃತ್ಪೂರ್ವಕ ಧನ್ಯವಾದಗಳು ಸಲ್ಲಿಸುತ್ತೇವೆ. ನನ್ನ ಪರವಾಗಿ ಧ್ವನಿ ಎತ್ತಿದ ಎಲ್ಲರಿಗೂ ವಂದಿಸುತ್ತೇನೆ.

  • ಜನಿವಾರ ವಾರ್‌ – ಬೀದರ್‌ ಪ್ರಾಂಶುಪಾಲ, ಎಸ್‌ಡಿಎ ಕೆಲಸದಿಂದಲೇ ವಜಾ

    ಜನಿವಾರ ವಾರ್‌ – ಬೀದರ್‌ ಪ್ರಾಂಶುಪಾಲ, ಎಸ್‌ಡಿಎ ಕೆಲಸದಿಂದಲೇ ವಜಾ

    ಬೀದರ್‌ : ಜನಿವಾರ ಧರಿಸಿದ್ದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನೀಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಯಿ ಸ್ಪೂರ್ತಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಮತ್ತು ಎಸ್‌ಡಿಎ ಸಿಬ್ಬಂದಿಯನ್ನು ಕೆಲಸದಿಂದಲೇ ವಜಾ ಮಾಡಲಾಗಿದೆ.

    ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಬೀದರ್‌ ಜಿಲ್ಲಾಧಿಕಾರಿ ಪ್ರಾಂಶುಪಾಲ ಚಂದ್ರಶೇಖರ್ ಬಿರಾದರ್‌ ಮತ್ತು ಎಸ್‌ಡಿಎ ಸತೀಶ ಪವಾರ್ ಅವರನ್ನು ಅಮಾನತು ಮಾಡುವಂತೆ ಸೂಚಿಸಿದ್ದರು. ಡಿಸಿಯಿಂದ ಆದೇಶ ಬಂದ ಬೆನ್ನಲ್ಲೇ ಕಾಲೇಜು ಆಡಳಿತ ಮಂಡಳಿ ಇಬ್ಬರನ್ನು ಕೆಲಸದಿಂದ ವಜಾ ಮಾಡಿದೆ.

    ಖಾಸಗಿ ಕಾಲೇಜು ಆಗಿರುವ ಕಾರಣ ಶಾಲಾ ಆಡಳಿತ ಮಂಡಳಿಗೆ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಮತ್ತು ಶಿಕ್ಷಣ ‌ಇಲಾಖೆ ಸೂಚಿಸಿತ್ತು. ಸಾಯಿ ಸ್ಪೂರ್ತಿ ಪದವಿ ಪೂರ್ವ ಕಾಲೇಜ್‌ ಇಬ್ಬರನ್ನು ತಕ್ಷಣದಿಂದಲೇ ವಜಾ ಮಾಡಿದೆ.

  • ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡಿದ್ದು ಸರಿಯಲ್ಲ : ನಿಖಿಲ್ ಖಂಡನೆ

    ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡಿದ್ದು ಸರಿಯಲ್ಲ : ನಿಖಿಲ್ ಖಂಡನೆ

    ಬೆಂಗಳೂರು: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ (CET Exam) ಅವಕಾಶ ಕೊಡದ ಪ್ರಕರಣವನ್ನ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಖಂಡಿಸಿದ್ದಾರೆ.

    ಘಟನೆ ಬಗ್ಗೆ ಜೆಪಿ ಭವನದಲ್ಲಿ ಮಾತನಾಡಿದ ಅವರು, ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ.ಈ ಘಟನೆಯನ್ನ ನಾನು ಖಂಡಿಸುತ್ತೇನೆ. ಜನಿವಾರ ಹಾಕಿಕೊಂಡು ಕಾಪಿ ಹೊಡೆಯೋಕೆ ಆಗುತ್ತಾ?ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ?ಜನಿವಾರ ಇದ್ದರೆ ಏನು ಸಮಸ್ಯೆ ಅಂತ ಪ್ರಶ್ನೆ ಮಾಡಿದರು. ಇದನ್ನೂ ಓದಿ: ಜಾತಿಗಣತಿ ವರದಿ ಚರ್ಚೆಗೆ ಕೂಡಲೇ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆಯಬೇಕು: ನಿಖಿಲ್ ಕುಮಾರಸ್ವಾಮಿ

     

    ಸ್ಮಾರ್ಟ್ ವಾಚ್, ಎಲೆಕ್ಟ್ರಿಕ್ ವಸ್ತು ಅಂತಹದ್ದನ್ನ ಬೇಕಿದ್ರೆ ನೀವು ತೆಗೆಸಬೇಕು ಸರಿ. ಆದರೆ ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡೋದು ಸರಿಯಲ್ಲ. ಈ ಘಟನೆಗೆ ಕಾರಣವಾಗಿರೋರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಅವರಿಗೆ ಬುದ್ದಿವಾದ ಹೇಳಬೇಕು. ಮುಂದೆ ಇಂತಹ ಘಟನೆ ಆಗದಂತೆ ಕ್ರಮವಹಿಸಬೇಕು ಅಂತ ಆಗ್ರಹ ಮಾಡಿದರು. ಇದನ್ನೂ ಓದಿ: ಮಾಜಿ ಡಾನ್ ಮುತ್ತಪ್ಪ ರೈ ಆಸ್ತಿ ಎಷ್ಟಿದೆ? – ವಿವಾದ ಹುಟ್ಟಿಕೊಂಡಿದ್ದು ಯಾವಾಗ?

  • ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ಕೂರಿಸದ ಪ್ರಕರಣ – ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ FIR

    ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ಕೂರಿಸದ ಪ್ರಕರಣ – ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ FIR

    ಶಿವಮೊಗ್ಗ: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ಕೂರಿಸದ ಪ್ರಕರಣದಲ್ಲಿ ಸಿಇಟಿ ಪರೀಕ್ಷೆಯ (CET Exam) ಅಧಿಕಾರಿ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

    ಏಪ್ರಿಲ್ 16 ರಂದು ನಡೆದಿದ್ದ ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ (Brahmins Students) ಜನಿವಾರವನ್ನು ಕತ್ತರಿಸಿದ್ದಾರೆ. ಆದರೆ ಪರೀಕ್ಷಾ ವಿಚಾರದಲ್ಲಿ ಜನಿವಾರ ಕತ್ತರಿಸಬೇಕೆಂಬ ನಿಯಮವಿಲ್ಲ. ಕಾಲೇಜಿನ ಭದ್ರತಾ ಸಿಬ್ಬಂದಿ ಜನಿವಾರ ಕತ್ತರಿಸಿ ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ನಟರಾಜ್ ಭಾಗವತ್ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ನೋ ಎಂಟ್ರಿ – ಬೀದರ್ ವಿದ್ಯಾರ್ಥಿಗೆ ನ್ಯಾಯ ಕೊಡಿಸಲು ಕೆಇಎ ಸಿದ್ಧತೆ

    ಜನಿವಾರ ತೆಗೆಸಿದ್ದರಿಂದ ಬ್ರಾಹ್ಮಣ ಸಮುದಾಯಕ್ಕೆ ಅಪಮಾನವಾಗಿದೆ. ಇದರಿಂದ ಸಿಇಟಿ ಪರೀಕ್ಷೆಯ ಭದ್ರತೆ ನೋಡಿಕೊಳ್ಳುತ್ತಿರುವ ಅಧಿಕಾರಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಕಳೆದ ರಾತ್ರಿ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಪರೀಕ್ಷಾ ಸಿಬ್ಬಂದಿ ಜನಿವಾರ ತೆಗೆಯಬೇಕು ಅಂದಿದ್ದು ತಪ್ಪು, ಅಂತಹ ಯಾವುದೇ ಮಾರ್ಗಸೂಚಿ ಇಲ್ಲ: ಕೆಇಎ

  • ಜನಿವಾರ ತೆಗೆಸಿದ್ದು ತಪ್ಪು – ಡಿ.ಸಿ ವರದಿ ಕೇಳಿದ ಕೆಇಎ

    ಜನಿವಾರ ತೆಗೆಸಿದ್ದು ತಪ್ಪು – ಡಿ.ಸಿ ವರದಿ ಕೇಳಿದ ಕೆಇಎ

    ಬೆಂಗಳೂರು: ಜನಿವಾರ ಹಾಕಿಕೊಂಡಿದ್ದಾರೆ ಎನ್ನುವ ಕಾರಣಕ್ಕೆ ಬೀದರ್‌ನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಬರೆಯಲು ನಿರಾಕರಿಸಿದ್ದು ಹಾಗೂ ಶಿವಮೊಗ್ಗದಲ್ಲಿ ಜನಿವಾರ (Janivara Row) ತೆಗೆಸಿ ಪರೀಕ್ಷೆಗೆ ಅವಕಾಶ ನೀಡಿದ ಎರಡೂ ಪ್ರತ್ಯೇಕ ಪ್ರಕರಣಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದೆ.

    ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ಅವರು ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಪತ್ರ ಬರೆದು, ಸಮಗ್ರ ವರದಿ ನೀಡುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಸಿಇಟಿ ಪರೀಕ್ಷೆಗೆ ಜನಿವಾರ ತೆಗೆಸಿದ ಪ್ರಕರಣ – ಸಿದ್ದರಾಮಯ್ಯ ಕ್ಷಮೆ ಕೇಳಲಿ, ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿ: ಆರ್.ಅಶೋಕ್

    ವಸ್ತ್ರ ಸಂಹಿತೆಯಲ್ಲಿ ಎಲ್ಲಿಯೂ ಜನಿವಾರ ತೆಗೆಸಬೇಕೆಂದು ಹೇಳಿರಲಿಲ್ಲ. ಆದರೂ ಎರಡು ಕೇಂದ್ರಗಳಲ್ಲಿ ಈ ರೀತಿಯ ಅಧಿಕ ಪ್ರಸಂಗ ಮಾಡಿರುವುದು ಖಂಡನೀಯ. ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

    ಜನಿವಾರದ ಕಾರಣಕ್ಕೆ ಬೀದರ್‌ನ ವಿದ್ಯಾರ್ಥಿ ಗಣಿತ ಪರೀಕ್ಷೆ ಬರೆದಿಲ್ಲ. ಹೀಗಾಗಿ ಆ ವಿದ್ಯಾರ್ಥಿ ನಿಯಮ ಪ್ರಕಾರ ಎಂಜಿನಿಯರಿಂಗ್‌ ರ‍್ಯಾಂಕ್ ಪಡೆಯಲು ಅರ್ಹನಾಗುವುದಿಲ್ಲ. ಅವನದಲ್ಲದ ತಪ್ಪಿಗೆ ಅವನಿಗೆ ಶಿಕ್ಷೆ ವಿಧಿಸುವುದು ಸರಿಯಲ್ಲ. ಹೀಗಾಗಿ ವಿದ್ಯಾರ್ಥಿಗೆ ಅನ್ಯಾಯವಾಗದ ಹಾಗೆ ಏನೆಲ್ಲ ಮಾಡಬಹುದು ಎಂಬುದನ್ನು ಉನ್ನತ ಶಿಕ್ಷಣ ಸಚಿವರ ಜತೆ ಚರ್ಚಿಸಿ, ಸೂಕ್ತವಾದ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜನಿವಾರದಿಂದ ನೇಣು ಹಾಕೊಂಡ್ರೆ ಏನ್ ಮಾಡೋದು – ವಿದ್ಯಾರ್ಥಿಗೆ ಉಡಾಫೆಯಾಗಿ ಪ್ರಶ್ನಿಸಿದ್ದ ಕಾಲೇಜು ಸಿಬ್ಬಂದಿ

    ಜಿಲ್ಲಾ ಮಟ್ಟದಲ್ಲಿ ಸಿಇಟಿ ನಡೆಸುವ ಸಂಪೂರ್ಣ ಜವಾಬ್ದಾರಿ ಆಯಾ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳದ್ದಾಗಿರುತ್ತದೆ. ಯಾವ ರೀತಿ ಮಾಡಬೇಕು, ಯಾವುದಕ್ಕೆಲ್ಲ ನಿಷೇಧ ಇತ್ಯಾದಿ ವಿಷಯಗಳ ಬಗ್ಗೆ ಮೊದಲೇ ತರಬೇತಿ ಕೂಡ ನೀಡಲಾಗಿರುತ್ತದೆ. ಜತೆಗೆ ಲಿಖಿತವಾಗಿಯೂ ತಿಳಿಸಲಾಗುತ್ತದೆ. ಆದರೂ ಈ ರೀತಿ ಮಾಡಿರುವುದು ನೋವಿನ ಸಂಗತಿ. ಯಾವುದೇ ಧರ್ಮ/ಜಾತಿಯವರಿಗೆ ಘಾಸಿಯಾಗುವ ಯಾವ ತೀರ್ಮಾನವನ್ನೂ ಕೆಇಎ ಕೈಗೊಳ್ಳುವುದಿಲ್ಲ. ನಮ್ಮದೇನಿದ್ದರೂ ವಿದ್ಯಾರ್ಥಿ ಕೇಂದ್ರಿತ ತೀರ್ಮಾನ ಎಂದು ಸ್ಪಷ್ಟಪಡಿಸಿದ್ದಾರೆ.

  • ಸಿಇಟಿ ಕೀ ಉತ್ತರ ಪ್ರಕಟ: ಕೆಇಎ

    ಸಿಇಟಿ ಕೀ ಉತ್ತರ ಪ್ರಕಟ: ಕೆಇಎ

    ಬೆಂಗಳೂರು: ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಗುರುವಾರ ಮುಗಿದಿದ್ದು, ಶುಕ್ರವಾರವೇ ಎಲ್ಲ ನಾಲ್ಕು ವಿಷಯಗಳ 16 ವರ್ಷನ್‌ಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

    ಭೌತವಿಜ್ಞಾನ, ರಸಾಯನವಿಜ್ಞಾನ, ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಕೀ ಉತ್ತರಗಳನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳು ಇದ್ದಲ್ಲಿ ಏ.22ರ ಸಂಜೆ 5 ಗಂಟೆ ಒಳಗೆ ಆನ್‌ಲೈನ್‌ ಮೂಲಕ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಆಕ್ಷೇಪಣೆ ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್‌ ಕೋಡ್‌, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು ಪಿಡಿಎಫ್‌ ರೂಪದಲ್ಲಿ ಸಲ್ಲಿಸಬೇಕು. ಈ ಮಾಹಿತಿ ಸರಿ ಇಲ್ಲದಿದ್ದಲ್ಲಿ ಅಂತಹ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.  ಇದನ್ನೂ ಓದಿ: ದೆಹಲಿಯಲ್ಲಿ ಯುವಕನ ಬರ್ಬರ ಕೊಲೆ – ಲೇಡಿ ಡಾನ್‌ ಜಿಕ್ರಾ ತಂಡದಿಂದ ಕೃತ್ಯ

     

    ತಿದ್ದುಪಡಿಗೆ ಅವಕಾಶ
    ತಮ್ಮ ಸಿಇಟಿ ಅರ್ಜಿಯಲ್ಲಿ ಇನ್ನೂ ಏನಾದರೂ ತಪ್ಪುಗಳಿದ್ದು, ಅವುಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಇಚ್ಛಿಸುವವರಿಗೆ ಮೇ 2ರವರೆಗೂ ಅವಕಾಶ ನೀಡಲಾಗಿದೆ. ಮೀಸಲಾತಿ, ವಿಶೇಷ ಪ್ರವರ್ಗ, ಶೈಕ್ಷಣಿಕ ವಿವರಗಳು, ಕ್ಲಾಸ್‌ ಕೋಡ್‌ (ಎ, ಬಿ, ಸಿ, ಡಿ, ಇ, ಎಫ್‌, ಜಿ, ಎಚ್‌, ಐ, ಜೆ, ಕೆ, ಎಲ್‌, ಎಂ, ಎನ್‌, ಓ, ಝೆಡ್‌) ಇತ್ಯಾದಿ ತಪ್ಪಾಗಿದ್ದರೆ ಅವುಗಳನ್ನು ಸರಿ ಮಾಡಿಕೊಳ್ಳಬಹುದು ಎಂದು ಪ್ರಸನ್ನ ತಿಳಿಸಿದ್ದಾರೆ.

    ಅಭ್ಯರ್ಥಿಗಳ ಹೆಸರು, ತಂದೆ/ತಾಯಿ ಹೆಸರು, ಜನ್ಮ ದಿನಾಂಕ, 10ನೇ ತರಗತಿ ಹಾಗೂ 12ನೇ ತರಗತಿಯ ನೋಂದಣಿ ಸಂಖ್ಯೆ ಇತ್ಯಾದಿ ಮಾಹಿತಿಗಳು ತಪ್ಪಾಗಿ ನಮೂದು ಮಾಡಿದ್ದಲ್ಲಿ ದಾಖಲೆ ಸಮೇತ ಪ್ರಾಧಿಕಾರಕ್ಕೆ ಬಂದು ಮನವಿ ಸಲ್ಲಿಸಬೇಕು ಎಂದು ಅವರು ಸೂಚಿಸಿದ್ದಾರೆ. ಇದನ್ನೂ ಓದಿ: ಇಬ್ಬರು ಗಂಡು ಮಕ್ಕಳನ್ನು ಕೊಂದು ಐದನೇ ಮಹಡಿಯಿಂದ ಜಿಗಿದ ಮಹಿಳೆ

    ಕೃಷಿಕರ ಕೋಟಾದಡಿ ಪ್ರಾಯೋಗಿಕ ಪರೀಕ್ಷೆ ಬರೆಯಲು ಸಿಇಟಿ ಅರ್ಜಿಯಲ್ಲಿ ನಮೂದಿಸದೇ ಇದ್ದಲ್ಲಿ ಏ.20ರೊಳಗೆ ತಿದ್ದುಪಡಿ ಮಾಡಿಕೊಳ್ಳಬೇಕು. ಹೊಸದಾಗಿ ಕೃಷಿಕರ ಕೋಟಾ ನಮೂದಿಸಿದವರು ಏ.21ರಂದು ತಮ್ಮ ದಾಖಲೆಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.