Tag: CET Exam

  • ಸಿಇಟಿ ಎಕ್ಸಾಂ QR ಕೋಡ್ ಸ್ಕ್ಯಾನ್ ಯಶಸ್ವಿ – ಹೆಚ್.ಪ್ರಸನ್ನ

    ಸಿಇಟಿ ಎಕ್ಸಾಂ QR ಕೋಡ್ ಸ್ಕ್ಯಾನ್ ಯಶಸ್ವಿ – ಹೆಚ್.ಪ್ರಸನ್ನ

    ಬೆಂಗಳೂರು: ಏ.15 ರಿಂದ ರಾಜ್ಯಾದ್ಯಂತ ನಡೆಯುತ್ತಿರುವ ಸಿಇಟಿ (CET ) ಪರೀಕ್ಷೆಯಲ್ಲಿ ಬಳಸಿದ ಕ್ಯೂಆರ್ ಕೋಡ್ (QR Code) ಸ್ಕ್ಯಾನ್ ಯಶಸ್ವಿಯಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examination Authority) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ಹೇಳಿದರು.

    ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಯುತ್ತಿರುವ ಬೆಂಗಳೂರಿನ (Bengaluru) ಮಲ್ಲೇಶ್ವರದ 18ನೇ ಅಡ್ಡರಸ್ತೆಯ ಸರ್ಕಾರಿ ಪಿಯು ಕಾಲೇಜಿನ ಕೇಂದ್ರಕ್ಕೆ ಹೆಚ್.ಪ್ರಸನ್ನ ಅವರು ಗುರುವಾರ ಭೇಟಿ ನೀಡಿ, ಖುದ್ದು ಪರಿಶೀಲಿಸಿದರು.ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಎಫೆಕ್ಟ್‌; ಕಾರಿನ ಮೇಲೆ ಬಿದ್ದ ಮರದ ಕೊಂಬೆ – ಬೈಕ್‌ ಸವಾರ ಜಸ್ಟ್‌ ಮಿಸ್‌

    ಕೆಇಎ (KEA) ಅಭಿವೃದ್ಧಿಪಡಿಸಿರುವ ಹಾಗೂ ಇದೇ ಮೊದಲ ಬಾರಿಗೆ ಜಾರಿಗೆ ತಂದಿರುವ ಕ್ಯೂಆರ್ ಕೋಡ್ ಮೂಲಕ ಮುಖ ಚಹರೆ ಪತ್ತೆ ವ್ಯವಸ್ಥೆಯನ್ನು ಪರಿಶೀಲಿಸಿದರು. ಸ್ವತಃ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ವಿದ್ಯಾರ್ಥಿಗಳ ಭಾವಚಿತ್ರ ತೆಗೆದು ನೈಜತೆ ತುಲನೆಮಾಡಿದರು.

    ಈ ಕುರಿತು ಮಾತನಾಡಿದ ಅವರು, ಈ ವ್ಯವಸ್ಥೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದ್ದು, ಎಲ್ಲ ಅಭ್ಯರ್ಥಿಗಳ ನೈಜತೆಯನ್ನು ಇದರ ಮೂಲಕವೇ ಪರಿಶೀಲಿಸಿ, ಅಭ್ಯರ್ಥಿಗಳನ್ನು ಒಳಗೆ ಬಿಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೆಇಎ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಹಾಜರಿದ್ದರು.ಇದನ್ನೂ ಓದಿ: ಖಾಸಗಿ ಶಾಲೆಗಳ ದಾಖಲಾತಿಗೆ ಸರ್ಕಾರದಿಂದ ರೂಲ್ಸ್ – ಪೋಷಕರ ಸಂದರ್ಶನ, ಮನಸೋ ಇಚ್ಛೆ ಫೀಸ್‌ಗೆ ಬ್ರೇಕ್

  • ಇಂದಿನಿಂದ 3 ದಿನ ಸಿಇಟಿ ಪರೀಕ್ಷೆ – ನಕಲಿ ಅಭ್ಯರ್ಥಿಗಳ ಕಡಿವಾಣಕ್ಕೆ ಕ್ಯೂಆರ್ ಸ್ಕ್ಯಾನ್ ಕಣ್ಗಾವಲು

    ಇಂದಿನಿಂದ 3 ದಿನ ಸಿಇಟಿ ಪರೀಕ್ಷೆ – ನಕಲಿ ಅಭ್ಯರ್ಥಿಗಳ ಕಡಿವಾಣಕ್ಕೆ ಕ್ಯೂಆರ್ ಸ್ಕ್ಯಾನ್ ಕಣ್ಗಾವಲು

    -ಇದೇ ಮೊದಲ ಬಾರಿಗೆ ಕ್ಯೂಆರ್ ಸ್ಕ್ಯಾನ್ ತಂತ್ರಜ್ಞಾನ ಬಳಕೆ

    ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಸಿಇಟಿ (CET) ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಇದೇ ಮೊದಲ ಬಾರಿಗೆ ನಕಲಿ ಅಭ್ಯರ್ಥಿಗಳ ಕಡಿವಾಣಕ್ಕಾಗಿ ಕ್ಯೂ ಆರ್ ಸ್ಕ್ಯಾನ್ (QR Scan) ಕಣ್ಗಾವಲಿನಲ್ಲಿ ಪರೀಕ್ಷೆ ನಡೆಸಲಿದೆ.

    ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಕೆಇಎ, ಮೊದಲ ಬಾರಿಗೆ ಪರೀಕ್ಷಾ ಅಕ್ರಮ ತಡೆಗೆ ಹೊಸ ತಂತ್ರಜ್ಞಾನ ಬಳಕೆ ಮಾಡಿಕೊಂಡು ಕ್ರಮಕ್ಕೆ ಮುಂದಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕ್ಯೂಆರ್ ಸ್ಕ್ಯಾನ್ ಮಾಡಿದ ನಂತರವೇ ವಿದ್ಯಾರ್ಥಿಗಳನ್ನು ಎಕ್ಸಾಂ ಹಾಲ್‌ಗೆ ಕಳುಹಿಸಲಾಗುವುದು. ಈ ಮೂಲಕ ಡೂಪ್ಲಿಕೇಟ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ತಪ್ಪಿಸಲು ಮಾಸ್ಟರ್ ಪ್ಲ್ಯಾನ್ ಮಾಡಿದೆ.ಇದನ್ನೂ ಓದಿ: ಸ್ನೇಹಿತರ ಕ್ರೆಡಿಟ್ ಕಾರ್ಡ್‍ನಿಂದ ಲಕ್ಷ ಲಕ್ಷ ಸಾಲ – ಲೋನ್ ಕಟ್ಟು ಎಂದ್ರೆ ಲಾಸ್ಟ್ ಆಪ್ಷನ್ ಅಂತ ವಿಷ ಕುಡಿದ!

    ಸಿಇಟಿ ಪರೀಕ್ಷೆಯಿಂದ ಹಿಡಿದು ದಾಖಲಾತಿಯಾಗುವವರೆಗೂ ಕೆಇಎ ಕಣ್ಗಾವಲಿನಲ್ಲಿ ವಿದ್ಯಾರ್ಥಿಗಳು ಇರಲಿದ್ದು, ಸೀಟ್ ಬ್ಲಾಕ್ ಸೇರಿದಂತೆ ಇನ್ನಿತರ ಅಕ್ರಮ ತಡೆಗೆ ಹೊಸ ತಂತ್ರಜ್ಞಾನ ಬಳಸಲು ನಿರ್ಧರಿಸಿದೆ.

    ಏನಿದು ಕ್ಯೂಆರ್ ಸ್ಕ್ಯಾನ್?
    > ಪ್ರತಿ ಕೇಂದ್ರದಲ್ಲೂ ವಿದ್ಯಾರ್ಥಿಗಳಿಗೆ ಕ್ಯೂಆರ್ ಸ್ಕ್ಯಾನ್ ಮೂಲಕ ತಪಾಸಣೆ.
    > ಪ್ರತಿ ಕೇಂದ್ರದ ಮುಖ್ಯಸ್ಥರಿಗೆ ಕ್ಯೂಆರ್ ಸ್ಕ್ಯಾನ್ ಮಾಡಲು ಆಪ್ ವ್ಯವಸ್ಥೆ ಮಾಡಲಾಗಿರುತ್ತದೆ.
    > ಕ್ಯೂಆರ್ ಸ್ಕ್ಯಾನ್‌ನಲ್ಲಿ ಮೊದಲೇ ವಿದ್ಯಾರ್ಥಿ ಮಾಹಿತಿಯನ್ನು ಕೆಇಎ ಅಪ್‌ಲೋಡ್ ಮಾಡಿರುತ್ತದೆ.
    > ವಿದ್ಯಾರ್ಥಿಗಳನ್ನ ಸ್ಕ್ಯಾನ್ ಮಾಡಿದ ಕೂಡಲೇ ವಿದ್ಯಾರ್ಥಿಯ ಸಂಪೂರ್ಣ ಮಾಹಿತಿ ಕೆಇಎಗೆ ತಲುಪುತ್ತದೆ.
    > ಒಂದು ವೇಳೆ ಬೇರೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮುಂದಾದರೆ ಇದರಿಂದ ಪತ್ತೆ ಹಚ್ಚಬಹುದು.
    > ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಸ್ಕ್ಯಾನ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗುತ್ತದೆ.
    > ಯಾರದ್ದೋ ಪರೀಕ್ಷೆಯನ್ನು ಇನ್ಯಾರೋ ಬರೆಯುವುದನ್ನು ತಡೆಯುವ ಉದ್ದೇಶದಿಂದ ಈ ವ್ಯವಸ್ಥೆ ಜಾರಿ ಮಾಡಲಾಗಿದೆ.
    > ಸೀಟು ಹಂಚಿಕೆಯಾಗಿ ಕಾಲೇಜುಗಳಿಗೆ ಪ್ರವೇಶ ಆಗುವ ಸಂದರ್ಭದಲ್ಲಿ ಕೂಡ ಅಭ್ಯರ್ಥಿಯ ಭಾವಚಿತ್ರವನ್ನು ಹೋಲಿಕೆ ಮಾಡಿಯೇ ಪ್ರವೇಶ ನೀಡುವ ವ್ಯವಸ್ಥೆ.
    > ನಕಲಿ ಅಭ್ಯರ್ಥಿಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಈ ವ್ಯವಸ್ಥೆ ಜಾರಿಗೆ ಕೆಇಎ ಕ್ರಮ.ಇದನ್ನೂ ಓದಿ: ವಕ್ಫ್‌ ಸದ್ಬಳಕೆ ಆಗಿದ್ದರೆ ಮುಸ್ಲಿಮರು ಪಂಕ್ಚರ್‌ ಹಾಕುತ್ತಿರಲಿಲ್ಲ: ಮೋದಿ

     

  • ನಾಳೆಯಿಂದ ಸಿಇಟಿ ಪರೀಕ್ಷೆ – ವಿದ್ಯಾರ್ಥಿಗಳಿಗೆ ಡ್ರೆಸ್‌ಕೋಡ್ ಬಿಡುಗಡೆ

    ನಾಳೆಯಿಂದ ಸಿಇಟಿ ಪರೀಕ್ಷೆ – ವಿದ್ಯಾರ್ಥಿಗಳಿಗೆ ಡ್ರೆಸ್‌ಕೋಡ್ ಬಿಡುಗಡೆ

    ಬೆಂಗಳೂರು: ರಾಜ್ಯದ್ಯಾಂತ ನಾಳೆಯಿಂದ ಸಿಇಟಿ (CET) ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಡ್ರೆಸ್‌ಕೋಡ್ ಬಿಡುಗಡೆ ಮಾಡಿದೆ.

    ವಿದ್ಯಾರ್ಥಿಗಳು ಕಡ್ಡಾಯವಾಗಿ ಡ್ರೆಸ್‌ಕೋಡ್ (Dresscode) ಪಾಲನೆ ಮಾಡುವಂತೆ ಕೆಇಎ ಸೂಚನೆ ನೀಡಿದೆ. ಅಲ್ಲದೇ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯನ್ನು ಮಾಡಿದೆ. ಇದನ್ನೂ ಓದಿ: ಮೋದಿ ಪ್ರಧಾನಿಯಾಗಬೇಕೆಂದು ಬರಿಗಾಲಲ್ಲಿ ನಡೆದಾಡುವ ಪ್ರತಿಜ್ಞೆ – 14 ವರ್ಷದ ಕನಸು ಕೊನೆಗೂ ನನಸು

    ಸಿಇಟಿ ಎಕ್ಸಾಂ ರೂಲ್ಸ್
    * ವೆಬ್ ಕಾಸ್ಟಿಂಗ್ ಮೂಲಕ ಎಲ್ಲ 775 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇಡುವ ವ್ಯವಸ್ಥೆ.
    * ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ.
    * ಪರೀಕ್ಷೆಗೆ ಒಂದೂವರೆ ಗಂಟೆ ಮುಂಚೆ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಹಾಜರಾಗಬೇಕು.
    * ಪೊಲೀಸ್/ ಗೃಹ ರಕ್ಷಕ ದಳದ ಸಿಬ್ಬಂದಿ ಅಭ್ಯರ್ಥಿಗಳ ತಪಾಸಣೆ ಬಳಿಕವೇ ಪರೀಕ್ಷಾ ಕೇಂದ್ರಕ್ಕೆ ತೆರಳಲು ಅವಕಾಶ.
    * ಕನಿಷ್ಠ ಒಂದೂವರೆ ಗಂಟೆ ಮುಂಚೆಯೇ ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಬಂದು ತಪಾಸಣೆಗೆ ಒಳಗಾಗಬೇಕು.
    * ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಕೋಡ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗುತ್ತದೆ.
    * ಯಾರದ್ದೋ ಪರೀಕ್ಷೆಯನ್ನು ಇನ್ಯಾರೋ ಬರೆಯುವುದನ್ನು ತಡೆಯುವ ಸಲುವಾಗಿ ವ್ಯವಸ್ಥೆ ಜಾರಿ. ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಲಾರಿ ಮುಷ್ಕರ – ರಸ್ತೆಗಿಳಿಯಲ್ಲ 6 ಲಕ್ಷ ಲಾರಿಗಳು

    ಡ್ರೆಸ್ ಕೋಡ್‌ನಲ್ಲೇನಿದೆ?
    * ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ವಸ್ತ್ರ ಸಂಹಿತೆ.
    * ಪುರುಷ/ಮಹಿಳಾ ಅಭ್ಯರ್ಥಿಗಳು ಅರ್ಧ ತೋಳಿನ ಬಟ್ಟೆ ಧರಿಸಬೇಕು.
    * ಸಾಧ್ಯವಾದಷ್ಟು ಕಾಲರ್ ಇಲ್ಲದಿರುವುದನ್ನು ಹಾಕಿಕೊಂಡು ಬಂದರೆ ಉತ್ತಮ.
    * ಪುರುಷರು, ಜೇಬು ಇಲ್ಲದ/ಕಡಿಮೆ ಜೇಬುಗಳಿರುವ ಸರಳ ಪ್ಯಾಂಟ್ ಧರಿಸಬೇಕು.
    * ಕುರ್ತಾ ಪೈಜಾಮ/ಜೀನ್ಸ್ ಪ್ಯಾಂಟ್‌ಗೆ ಅವಕಾಶ ಇಲ್ಲ.
    * ಶೂ ಕೂಡ ನಿಷೇಧ.
    * ಮೊಬೈಲ್, ಪೆನ್‌ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಂಪೂರ್ಣ ನಿಷೇಧ.

  • ಗುಡ್ ಫ್ರೈಡೆ ದಿನ ನಿಗಿದಿಯಾಗಿರೋ ಸಿಇಟಿ ಪರೀಕ್ಷೆ ಮುಂದೂಡಿ: ಐವಾನ್ ಡಿಸೋಜಾ

    ಗುಡ್ ಫ್ರೈಡೆ ದಿನ ನಿಗಿದಿಯಾಗಿರೋ ಸಿಇಟಿ ಪರೀಕ್ಷೆ ಮುಂದೂಡಿ: ಐವಾನ್ ಡಿಸೋಜಾ

    ಬೆಂಗಳೂರು: ಗುಡ್ ಫ್ರೈಡೆ (Good Friday) ದಿನ ನಿಗದಿಯಾಗಿರುವ ಸಿಇಟಿ ಪರೀಕ್ಷೆಯನ್ನ (CET Exam) ಮುಂದೂಡುವಂತೆ ಕಾಂಗ್ರೆಸ್ ‌ಸದಸ್ಯ ಐವಾನ್ ಡಿಸೋಜಾ (Ivan D’Souza) ವಿಧಾನ ಪರಿಷತ್‌ನಲ್ಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪ ಮಾಡಿದ ಅವರು, ಏಪ್ರಿಲ್ 16,17,18 ರಂದು ಸಿಇಟಿ ಪರೀಕ್ಷೆ ನಿಗದಿಯಾಗಿದೆ. ಏ.18 ಗುಡ್ ಫ್ರೈಡೆ ಕ್ರೈಸ್ತರ ಪವಿತ್ರ ದಿನ. ಗುಡ್ ಫ್ರೈಡೆ ಸರ್ಕಾರಿ ರಜೆ ಇದ್ದರೂ, ಸಿಇಟಿ ಪರೀಕ್ಷೆ ನಿಗದಿ ಮಾಡಲಾಗಿದೆ. ಅನೇಕ ಕ್ರೈಸ್ತ ಸಂಘಗಳು, ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. ಕ್ರೈಸ್ತ ವಿದ್ಯಾರ್ಥಿಗಳು ಎಕ್ಸಾಂ ಬರೆಯಲು ಅರ್ಜಿ ಹಾಕಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಏ.18 ರಂದು ನಿಗದಿಯಾಗಿರೋ ಪರೀಕ್ಷೆ ಮುಂದೂಡಬೇಕು ಎಂದು ಆಗ್ರಹಿಸಿದ್ದಾರೆ.

    ಈ ವಿಚಾರಕ್ಕೆ ಉನ್ನತ ಶಿಕ್ಷಣ ‌ಸಚಿವರಿಂದ ಉತ್ತರ ಕೊಡಿಸುವುದಾಗಿ ಸರ್ಕಾರದ ಪರವಾಗಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

  • ಏ.16, 17ರಂದು ಸಿಇಟಿ ಪರೀಕ್ಷೆ: ಕೆಇಎ

    ಏ.16, 17ರಂದು ಸಿಇಟಿ ಪರೀಕ್ಷೆ: ಕೆಇಎ

    ಬೆಂಗಳೂರು: ಏ.16 ಮತ್ತು 17ಕ್ಕೆ ಸಿಇಟಿ ಪರೀಕ್ಷೆ (CET Exam) ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತ ಘೋಷಣೆ ಮಾಡಿದೆ.

    ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ (MC Sudhakar) ದಿನಾಂಕ ಘೋಷಣೆ ಮಾಡಿದ್ದಾರೆ. ಸಿಇಟಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ.23 ರಿಂದ ಫೆ.21ರವರೆಗೆ ಅವಕಾಶವಿದೆ ಎಂದು ಕೆಇಎ ತಿಳಿಸಿದೆ. ಇದನ್ನೂ ಓದಿ: ಬೀದರ್ ದರೋಡೆಯ ಸುತ್ತ ಅನುಮಾನದ ಹುತ್ತ – ಇದು ಇದು ಪ್ರೀ ಪ್ಲಾನ್ ಎಂದ ಮೃತನ ಸಹೋದರಿ

     

    ಸಿಇಟಿ ವೇಳಾಪಟ್ಟಿ:
    ಏಪ್ರಿಲ್ 16:
    ಬೆಳಿಗ್ಗೆ 10:30- ಭೌತಶಾಸ್ತ್ರ
    ಮಧ್ಯಾಹ್ನ 2:30- ರಸಾಯನಶಾಸ್ತ್ರ

    ಏಪ್ರಿಲ್ 17:
    ಬೆಳಿಗ್ಗೆ 10:30 -ಗಣಿತ
    ಮಧ್ಯಾಹ್ನ 2:30- ಜೀವಶಾಸ್ತ್ರ

    ಏಪ್ರಿಲ್ 18:
    ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

  • ಗುರುವಾರದಿಂದ ಸಿಇಟಿ ಪರೀಕ್ಷೆ ಆರಂಭ- ವಿದ್ಯಾರ್ಥಿಗಳಿಗೆ ಕಡ್ಡಾಯ ಮಾರ್ಗಸೂಚಿ

    ಗುರುವಾರದಿಂದ ಸಿಇಟಿ ಪರೀಕ್ಷೆ ಆರಂಭ- ವಿದ್ಯಾರ್ಥಿಗಳಿಗೆ ಕಡ್ಡಾಯ ಮಾರ್ಗಸೂಚಿ

    ಬೆಂಗಳೂರು: ಎಂಜಿನಿಯರಿಂಗ್‌, ಕೃಷಿ ವಿಜ್ಞಾನ, ವೆಟರಿನರಿ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಿರ್ಣಾಯಕವಾದ ಸಾಮಾನ್ಯ ಪ್ರವೇಶ ಪರೀಕ್ಷೆ (CET Exam) ರಾಜ್ಯಾದ್ಯಂತ ಗುರುವಾರದಿಂದ ಪ್ರಾರಂಭವಾಗಲಿದೆ.

    ಒಟ್ಟು 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಬಾರಿ 3,49,637 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ಈ ಕುರಿತು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗಳು ಬಿಗಿಭದ್ರತೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಸಿಇಟಿ ಕರ್ತವ್ಯಕ್ಕೆ ಒಟ್ಟಾರೆ 20,300 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.

    ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 167 ಪರೀಕ್ಷಾ ಕೇಂದ್ರಗಳಿದ್ದು, ಈ ಬಾರಿ 648 ವಿಶೇಷ ಚೇತನ ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ ಒಂದು ಲಕ್ಷದಷ್ಟು ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು,ಇದಕ್ಕೆ ವ್ಯಾಪಕ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗುರುವಾರ ಜೀವಶಾಸ್ತ್ರ ಮತ್ತು ಗಣಿತ ಹಾಗೂ ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 2.30ಕ್ಕೆ ಆರಂಭವಾಗುವ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಸಾಕಷ್ಟು ಮುಂಚಿತವಾಗಿಯೇ ಹಾಜರಿರಬೇಕು. ಬೆಳಗ್ಗೆ 10.40 ಮತ್ತು ಮಧ್ಯಾಹ್ನ 2.40ಕ್ಕೆ ಮೂರನೇ ಬಾರಿಗೆ ಬೆಲ್‌ ಬಾರಿಸಿದ ಬಳಿಕ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

    ಇಂಗ್ಲಿಷ್‌ ಮತ್ತು ಕನ್ನಡ ಎರಡರಲ್ಲೂ ಪ್ರಶ್ನೆಪತ್ರಿಕೆ ಇರಲಿದೆ. ಒಂದು ವೇಳೆ ಅಭ್ಯರ್ಥಿಗಳಿಗೆ ಏನಾದರೂ ಗೊಂದಲ ಉಂಟಾದಲ್ಲಿ ಇಂಗ್ಲಿಷ್‌ ಆವೃತ್ತಿಯನ್ನೇ ಅಂತಿಮವೆಂದು ಪರಿಗಣಿಸಬೇಕು. ಈ ವಿಚಾರದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಪ್ರಶ್ನೆಗಳಿಗೆ ಅವಕಾಶ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ 18 ಕೋಟಿ ಪತ್ತೆ – ಎಸ್‌ಬಿಐ ಬ್ಯಾಂಕ್‌ಗೆ ಹಣ ರವಾನೆ

    ಕಲಬುರಗಿ ಮುಂತಾದ ಉತ್ತರ ಕರ್ನಾಟಕದ ಭಾಗಗಳ ಕೆಲವು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಗೊಂದಲವನ್ನು ಬಗೆಹರಿಸಿದ್ದು, ಸಾಧ್ಯವಾದಷ್ಟೂ ವಿದ್ಯಾರ್ಥಿಗಳಿಗೆ ಅವರ ಸಮೀಪದ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಬೇಸಿಗೆಯ ಝಳ ಇರುವುದರಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು, ಎನ್‌ಸಿಸಿ ಮತ್ತು ಎನ್‌ಎಸ್‌ಎಸ್‌ ಕೆಡೆಟ್‌ಗಳು ಪರೀಕ್ಷೆಯು ಸುಗಮವಾಗಿ ನಡೆಯಲು ಸಹಕರಿಸಲಿದ್ದಾರೆ. ಒಂದು ಪರೀಕ್ಷಾ ಕೊಠಡಿಯಲ್ಲಿ 16 ಆವೃತ್ತಿಗಳ ಪ್ರಶ್ನೆ ಪತ್ರಿಕೆಗಳು ಇರಲಿದ್ದು, ನಕಲು ಮಾಡಲು ಅವಕಾಶ ಆಗದಂತೆ ಯೋಜನೆ ರೂಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಕೂಡ ಇರಲಿದೆ ಎಂದು ತಿಳಿಸಿದರು.

    ಇದೇ 20ರಂದು ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ಕೇಂದ್ರಗಳಲ್ಲಿ ಹೊರನಾಡು ಮತ್ತು ಗಡಿನಾಡು ಕನ್ನಡ ಅಭ್ಯರ್ಥಿಗಳಿಗೆ ಬೆಳಗ್ಗೆ 11.30ರಿಂದ 12.30ರವರೆಗೆ ಕನ್ನಡ ಪರೀಕ್ಷೆ ನಡೆಯಲಿದೆ. ಈ ಸಲ ಒಟ್ಟು 1,545 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲಿದ್ದಾರೆ ಅಂತ ಮಾಹಿತಿ ನೀಡಿದ್ರು.

    ಪರೀಕ್ಷೆ ಬರೆಯೋ ವಿದ್ಯಾರ್ಥಿಗಳಿಗೆ ಕೆಲ ಮಾರ್ಗಸೂಚಿಗಳು ಹೀಗಿವೆ.
    * ಪ್ರವೇಶಪತ್ರ ಮತ್ತು ಗುರುತಿನ ಪತ್ರದೊಂದಿಗೆ ಬರುವುದು ಕಡ್ಡಾಯ.
    * ನೀಲಿ ಅಥವಾ ಕಪ್ಪು ಬಣ್ಣದ ಪೆನ್‌ ಮಾತ್ರ ಬಳಸತಕ್ಕದ್ದು.
    * ತುಂಬು ತೋಳಿನ ಅಂಗಿ ಧರಿಸಿಕೊಂಡು ಬರುವಂತಿಲ್ಲ.
    * ಮೊಬೈಲ್‌, ಬ್ಲೂಟೂತ್‌, ಟ್ಯಾಬ್ಲೆಟ್‌, ಕೈಗಡಿಯಾರ, ಕ್ಯಾಲುಕುಲೇಟರ್‌, ನೋಟ್ ಪ್ಯಾಡ್‌, ಐ-ಪಾಡ್‌, ಇಯರ್‌ ಫೋನ್‌ ಇತ್ಯಾದಿಗಳನ್ನು ತರುವಂತಿಲ್ಲ.
    * ಒಮ್ಮೆ ಉತ್ತರವನ್ನು ಗುರುತು ಮಾಡಿದ ಬಳಿಕ ಅದನ್ನು ಅಳಿಸಲು ಅವಕಾಶವಿರುವುದಿಲ್ಲ.
    * ಓಎಂಆರ್‌ ಶೀಟ್‌ನಲ್ಲಿ ಪ್ರವೇಶಪತ್ರ ಸಂಖ್ಯೆ, ಪ್ರಶ್ನೆಪತ್ರಿಕೆಯ ವರ್ಶನ್‌ ಕೋಡ್‌ ನಮೂದಿಸುವುದು ಕಡ್ಡಾಯ.
    * ಓಎಂಆರ್‌ ಶೀಟ್‌ನ ಕೆಳಭಾಗದಲ್ಲಿ ಅಭ್ಯರ್ಥಿಗಳು ಮರೆಯದೆ ಸಹಿ ಮಾಡಬೇಕು.
    * ಓಎಂಆರ್‌ ಶೀಟ್‌ನಲ್ಲಿರುವ ಟೈಮಿಂಗ್‌ ಮಾರ್ಕ್‌ ಮೇಲೆ ಏನನ್ನೂ ಬರೆಯುವುದಾಗಲಿ, ಗೀಚುವುದಾಗಲಿ ಮಾಡಬೇಡಿ.

  • ಏಪ್ರಿಲ್ 20, 21 ರಂದು ಸಿಇಟಿ ಪರೀಕ್ಷೆ – ಜನವರಿ 10 ರಿಂದ ಅರ್ಜಿ ಸಲ್ಲಿಕೆ ಆರಂಭ: ಕೆಇಎ

    ಏಪ್ರಿಲ್ 20, 21 ರಂದು ಸಿಇಟಿ ಪರೀಕ್ಷೆ – ಜನವರಿ 10 ರಿಂದ ಅರ್ಜಿ ಸಲ್ಲಿಕೆ ಆರಂಭ: ಕೆಇಎ

    ಬೆಂಗಳೂರು: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ 2024-25 ರಲ್ಲಿ ಪ್ರವೇಶಾತಿ ಬಯಸುವವರಿಗಾಗಿ ಮುಂಬರುವ ಏಪ್ರಿಲ್‌ 20 (ಶನಿವಾರ) ಮತ್ತು 21ರಂದು (ಭಾನುವಾರ) ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ಜನವರಿ 10 ರಿಂದ ನಿಗದಿತ ಶುಲ್ಕದೊಂದಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

    ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿದ್ದು, ಏ.20ರ ಬೆಳಗ್ಗೆ 10:30ರಿಂದ ಜೀವಶಾಸ್ತ್ರ, ಮಧ್ಯಾಹ್ನ 2:30ರಿಂದ ಗಣಿತ, 21ರಂದು ಬೆಳಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ತಲಾ 60 ಅಂಕಗಳಿಗೆ ನಡೆಯಲಿದೆ. ಹಾಗೆಯೇ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.19ರ ಶುಕ್ರವಾರದಂದು ಬೆಂಗಳೂರು, ಬೀದರ್‌, ಬೆಳಗಾವಿ, ಬಳ್ಳಾರಿ, ವಿಜಯಪುರ ಮತ್ತು ಮಂಗಳೂರು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

    ನ್ಯಾಚುರೋಪಥಿ ಮತ್ತು ಯೋಗ, ಬಿ.ಫಾರ್ಮಾ, ಫಾರ್ಮಾ-ಡಿ, ದ್ವಿತೀಯ ವರ್ಷದ ಬಿ.ಫಾರ್ಮಾ, ಕೃಷಿ ಕೋರ್ಸುಗಳು, ಪಶು ಸಂಗೋಪನೆ, ಬಿ.ಎಸ್ಸಿ (ನರ್ಸಿಂಗ್), ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ‌ಕೋರ್ಸುಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಗೂ ಈ ಸೂಚನೆ ಅನ್ವಯಿಸುತ್ತದೆ ಎಂದು ಮಾಹಿತಿ ನೀಡಿದ್ದಾರೆ.

    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಸರಿಯಾದ ಆರ್‌.ಡಿ. ಸಂಖ್ಯೆ, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಕಲ್ಯಾಣ ಕರ್ನಾಟಕ (371ಜೆ) ಪ್ರಮಾಣಪತ್ರಕ್ಕೆ ಸಂಬಂಧಿಸಿದ ಅಗತ್ಯ ವಿವರಗಳನ್ನು ದಾಖಲಿಸಬೇಕು. ತಪ್ಪಿದಲ್ಲಿ, ಇಂಥವರು ಅರ್ಜಿ ಸಲ್ಲಿಕೆ ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

    ಬಿಇಗೆ ನೇರ ಪ್ರವೇಶ: ಏ.18ರಂದು ಸಿಇಟಿ
    ಎಂಜಿನಿಯರಿಂಗ್‌ನ 3ನೇ ಸೆಮಿಸ್ಟರ್‌ಗೆ ನೇರ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏ.18ರಂದು ಸಿಇಟಿ ನಡೆಸಲಾಗುವುದು. ಇಂಥವರು ಅರ್ಜಿ ತುಂಬಲು ಸದ್ಯದಲ್ಲೇ ಪೋರ್ಟಲ್‌ ತೆರೆಯಲಾಗುವುದು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

    ಇದೇ ರೀತಿಯಲ್ಲಿ ಎಂಬಿಎ, ಎಂಸಿಎ, ಎಂ.ಇ, ಎಂ.ಟೆಕ್‌, ಎಂ.ಆರ್ಕ್‌ ಕೋರ್ಸುಗಳಿಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏ.18 ಮತ್ತು 19ರಂದು ಪಿಜಿಸಿಇಟಿ ನಡೆಸಲಾಗುವುದು. ಇವರಿಗೂ ಸಹ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಪೋರ್ಟಲ್‌ ತೆರೆಯಲಾಗುವುದು ಎಂದು ಅವರು ಹೇಳಿದ್ದಾರೆ.

    ಶುಲ್ಕ ವಾಪಸ್ ಸರಿಯಾದ ಬ್ಯಾಂಕ್‌ ವಿವರಕ್ಕೆ ಮನವಿ
    2023ರಲ್ಲಿ ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಬಯಸಿ ನಂತರ ಸೀಟು ರದ್ದುಪಡಿಸಿಕೊಂಡಿರುವ ಅಥವಾ ಹೆಚ್ಚುವರಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳಿಗೆ ಪ್ರಾಧಿಕಾರವು ಆ ಬಾಬ್ತಿನ ಮೊತ್ತವನ್ನು ಹಿಂದಿರುಗಿಸುತ್ತಿದೆ. ಆದರೆ ಕೆಲವರ ಅರ್ಜಿಗಳಲ್ಲಿ ಬ್ಯಾಂಕ್‌ ವಿವರಗಳು ತಪ್ಪಾಗಿದ್ದು, ಅಂಥವರ ಹೆಸರುಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಇಂಥವರು ಡಿ.31ರೊಳಗೆ ಸರಿಯಾದ ವಿವರ ನಮೂದಿಸಬೇಕು.

  • CET Results: ಎಂಜಿನಿಯರಿಂಗ್‌ನಲ್ಲಿ ವಿಘ್ನೇಶ್‌, BNYS ನಲ್ಲಿ ಪ್ರತೀಕ್ಷಾ ಫಸ್ಟ್‌ – ಟಾಪ್‌ ರ‍್ಯಾಂಕ್‌ ವಿದ್ಯಾರ್ಥಿಗಳ ಪಟ್ಟಿ ಇಲ್ಲಿದೆ

    CET Results: ಎಂಜಿನಿಯರಿಂಗ್‌ನಲ್ಲಿ ವಿಘ್ನೇಶ್‌, BNYS ನಲ್ಲಿ ಪ್ರತೀಕ್ಷಾ ಫಸ್ಟ್‌ – ಟಾಪ್‌ ರ‍್ಯಾಂಕ್‌ ವಿದ್ಯಾರ್ಥಿಗಳ ಪಟ್ಟಿ ಇಲ್ಲಿದೆ

    ಬೆಂಗಳೂರು: ಸಿಇಟಿ ಪರೀಕ್ಷೆಯ (CET Exam) ಫಲಿತಾಂಶ ಪ್ರಕಟಗೊಂಡಿದ್ದು ಎಂಜಿನಿಯರಿಂಗ್‌ (Engineering) ವಿಭಾಗದಲ್ಲಿ ಬೆಂಗಳೂರಿನ ಮಲ್ಲಸಂದ್ರದ ಶ್ರೀ ಕುಮಾರನ್ಸ್‌ ಕಾಲೇಜಿನ ವಿಘ್ನೇಶ್‌ ನಟರಾಜ್‌ ಕುಮಾರ್‌ ಪ್ರಥಮ ರ‍್ಯಾಂಕ್‌ ಪಡೆದರೆ ಬೆಂಗಳೂರಿನ ಆರ್‌ವಿ ಕಾಲೇಜಿನ ಅರುಣ್‌ ಕೃಷ್ಣಮೂರ್ತಿ ದ್ವಿತೀಯ ರ‍್ಯಾಂಕ್‌ ಪಡೆದಿದ್ದಾರೆ.

    ಉನ್ನತ ಶಿಕ್ಷಣ ಸಚಿವ ಡಾ.ಎಂಸಿ ಸುಧಾಕರ್ ಫಲಿತಾಂಶ ಪ್ರಕಟ ಮಾಡಿದರು. ಈ ವೇಳೆ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯ ಉಪಸ್ಥಿತರಿದ್ದರು.

    ಒಟ್ಟಾರೆ 2,61,610 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಕೆ ಮಾಡಿದ್ದರು ಈ ಪೈಕಿ 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.ಪರೀಕ್ಷೆ ಬರೆದವರ ಪೈಕಿ ಎಂಜಿನಿಯರಿಂಗ್ ಕೋರ್ಸ್ 203381 ವಿದ್ಯಾರ್ಥಿಗಳು ರ‍್ಯಾಂಕ್‌ ಪಡೆದಿದ್ದಾರೆ. ಕೃಷಿ ವಿಜ್ಞಾನ ಕೋರ್ಸ್ 164187 ವಿದ್ಯಾರ್ಥಿಗಳಿಗೆ ರ‍್ಯಾಂಕ್‌ ನೀಡಲಾಗಿದೆ. ಪಶುಸಂಗೋಪನೆ ಕೋರ್ಸ್ 1,66,756 ರ‍್ಯಾಂಕ್‌, ಯೋಗ, ನ್ಯಾಚುರೋಪತಿ ಕೋರ್ಸ್ 1,66,746 ರ‍್ಯಾಂಕ್‌, ಬಿ ಫಾರ್ಮ್ ಕೋರ್ಸ್ 2,06,191 ರ‍್ಯಾಂಕ್‌, ಫಾರ್ಮ್ ಡಿ ಕೋರ್ಸ್ ನಲ್ಲಿ 2,06,340 ವಿದ್ಯಾರ್ಥಿಗಳು ರ‍್ಯಾಂಕ್‌ಪಡೆದಿದ್ದಾರೆ. ನರ್ಸಿಂಗ್ ಕೋರ್ಸ್‌ನಲ್ಲಿ 1,66,808 ವಿದ್ಯಾರ್ಥಿಗಳಿಗೆ ರ‍್ಯಾಂಕ್‌ ನೀಡಲಾಗಿದೆ.

    ಈ ಬಾರಿ ಗಣಿತ ಮತ್ತು ಭೌತಶಾಸ್ತ್ರ ವಿಷಯಕ್ಕೆ ಒಂದೊಂದು ಗ್ರೇಸ್ ಅಂಕ ನೀಡಲಾಗಿದೆ. ಒಂದು ವಾರದಲ್ಲಿ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಮುಗಿಯಲಿದ್ದು, ಶೀಘ್ರವಾಗಿ ಸೀಟು ಮ್ಯಾಟ್ರಿಕ್ಸ್ ಬಿಡುಗಡೆ ಮಾಡಿ, ಸೀಟು ಹಂಚಿಕೆ ಪ್ರಕ್ರಿಯೆ ಶುರು ಮಾಡುವುದಾಗಿ ಸಚಿವರು ತಿಳಿಸಿದರು.

    ವಿದ್ಯಾರ್ಥಿಗಳು ಅರ್ಜಿ ತುಂಬಲು ಸಹಾಯವಾಗಲು ವಿಶೇಷ ಆಪ್ ತರುವುದಾಗಿ ಸಚಿವರು ತಿಳಿಸಿದ್ದಾರೆ. ಕಳೆದ ವರ್ಷದ ಶುಲ್ಕಕ್ಕೆ ಈ ಬಾರಿ 10% ಶುಲ್ಕ ಹೆಚ್ಚಳಕ್ಕೆ ಕಳೆದ ಸರ್ಕಾರ ಅನುಮತಿ ನೀಡಿದೆ.ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ.

    ಸಿಇಟಿ ರಾಂಕ್ ನಲ್ಲಿ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳು ಸಿಂಹಪಾಲು ಪಡೆದಿದ್ದಾರೆ. ಎಂಜಿನಿಯರಿಂಗ್ ವಿಭಾಗದಲ್ಲಿ ಟಾಪ್ 10 ರಲ್ಲಿ 8 ರ‍್ಯಾಂಕ್‌ ಬೆಂಗಳೂರಿನ ಕಾಲೇಜಿನ ವಿದ್ಯಾರ್ಥಿಗಳು ಪಡೆದಿದ್ದಾರೆ.ಯೋಗ, ನ್ಯಾಚುರೋಪತಿಯಲ್ಲಿ 5 ರ‍್ಯಾಂಕ್‌ಬೆಂಗಳೂರು, ಬಿಎಸ್ಸಿ ಕೃಷಿಯಲ್ಲಿ 5 ರ‍್ಯಾಂಕ್‌ ಬೆಂಗಳೂರು, ಪಶು ವೈದ್ಯಕೀಯ ಕೋರ್ಸ್ ನಲ್ಲಿ ಟಾಪ್ 6 ರ‍್ಯಾಂಕ್‌, ಬಿ ಫಾರ್ಮ್ ಕೋರ್ಸ್ ನಲ್ಲಿ 7 ರ‍್ಯಾಂಕ್‌ ಹಾಗೂ ಫಾರ್ಮ್ ಡಿ ಕೋರ್ಸ್ ನಲ್ಲಿ 7 ಮತ್ತು ಬಿಎಸ್ಸಿ ನರ್ಸಿಂಗ್ ನಲ್ಲಿ 6 ರ‍್ಯಾಂಕ್‌ಗಳನ್ನು ಬೆಂಗಳೂರು ವಿದ್ಯಾರ್ಥಿಗಳು ಪಡೆದಿದ್ದಾರೆ.

    ವಿದ್ಯಾರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಮೂಲಕ ಫಲಿತಾಂಶ ವೀಕ್ಷಿಸಬಹುದು.

    ಎಂಜಿನಿಯರಿಂಗ್ ಟಾಪ್ 3 ರ‍್ಯಾಂಕ್‌
    1.ವಿವಿಘ್ನೇಶ್‌ ನಟರಾಜ್‌ ಕುಮಾರ್ (ಶ್ರೀ ಕುಮಾರನ್ಸ್‌, ಮಲ್ಲಸಂದ್ರ)
    2.ಅರ್ಜುನ್ ಕೃಷ್ಣಸ್ವಾಮಿ (ಆರ್.ವಿ ಕಾಲೇಜು, ಜಯನಗರ, ಬೆಂಗಳೂರು)
    3.ಸಮೃದ್ದ ಶೆಟ್ಟಿ (ವಿದ್ಯಾನಿಕೇತನ ಪಿಯು ಕಾಲೇಜು, ಹುಬ್ಬಳ್ಳಿ)

    ಬಿಎನ್‍ವೈಎಸ್ ಟಾಪ್ 3 ರ‍್ಯಾಂಕ್‌
    1. ಪ್ರತೀಕ್ಷಾ. ಆರ್ ( ಶ್ರೀ ಕುಮಾರನ್ಸ್‌, ಪದ್ಮನಾಭನಗರ, ಬೆಂಗಳೂರು)
    2. ಭೈರೇಶ್, ಎಸ್‍ಎಚ್ (ಎಕ್ಸ್‌ಪರ್ಟ್‌ ಕಾಲೇಜು, ಮಂಗಳೂರು)
    3. ಶ್ರೀಜಾನ್. ಎಂ.ಎಚ್.( ಬೇಸ್ ಪಿಯು ಕಾಲೇಜು, ಹುಬ್ಬಳ್ಳಿ

    ಬಿಎಸ್‍ಸಿ ಕೃಷಿ ಟಾಪ್ 3 ರ‍್ಯಾಂಕ್‌
    1. ಭೈರೇಶ್. ಎಸ್‍ಎಚ್(ಎಕ್ಸ್‌ಪರ್ಟ್‌ ಕಾಲೇಜು, ಮಂಗಳೂರು)
    2. ಅನುರಾಗ್ ರಂಜನ್( ಪ್ರಮಾಣ ಕಾಲೇಜು, ರಾಯಚೂರು)
    3. ಕಾರ್ತಿಕ್ ಮನೋಹರ್(ಲೇಡಿ ಅನುಸೂಯ ಅಕಾಡೆಮಿ, ರಾಜಸ್ಥಾನ)

     

    ಬಿವಿಎಸ್‍ಸಿ ಪಶು ವಿಜ್ಞಾನ ಟಾಪ್ 3 ರ‍್ಯಾಂಕ್‌
    1. ಮಾಳವಿಕ ಕಪೂರ್ (ಮಹೇಶ್ ಪಿಯು ಕಾಲೇಜ್, ಚಾಮರಾಜಪೇಟೆ, ಬೆಂಗಳೂರು)
    2. ಪ್ರತೀಕ್ಷಾ( ಶ್ರೀ ಕುಮಾರನ್ಸ್‌, ಪದ್ಮನಾಭನಗರ, ಬೆಂಗಳೂರು)
    3. ಚಂದನ್ ಗೌಡ(ಮಹೇಶ್ ಪಿಯು ಕಾಲೇಜ್, ಚಾಮರಾಜಪೇಟೆ, ಬೆಂಗಳೂರು)

    ಬಿ ಫಾರ್ಮಾ ಟಾಪ್ 3 ರ‍್ಯಾಂಕ್‌
    1. ಪ್ರತೀಕ್ಷಾ (ಶ್ರೀ ಕುಮಾರನ್ಸ್‌, ಪದ್ಮನಾಭನಗರ, ಬೆಂಗಳೂರು)
    2. ಮಾಳವಿಕ ಕಪೂರ್ (ಮಹೇಶ್‌ ಪಿಯು ಕಾಲೇಜ್‌, ಚಾಮರಾಜಪೇಟೆ, ಬೆಂಗಳೂರು)
    3. ಮಾಧವ ಸೂರ್ಯ( ನಾರಾಯಣ ಇ ಟೆಕ್ನೋ ಸ್ಕೂಲ್‌, ಮಾರತ್‌ಹಳ್ಳಿ, ಬೆಂಗಳೂರು)

    ಬಿಎಸ್‍ಸಿ ನರ್ಸಿಂಗ್‌ ಟಾಪ್ 3 ರ‍್ಯಾಂಕ್‌
    1.ಮಾಳವಿಕ ಕಪೂರ್ (ಮಹೇಶ್‌ ಪಿಯು ಕಾಲೇಜ್‌, ಚಾಮರಾಜಪೇಟೆ, ಬೆಂಗಳೂರು)
    2. ಪ್ರತೀಕ್ಷಾ (ಶ್ರೀ ಕುಮಾರನ್ಸ್‌, ಪದ್ಮನಾಭನಗರ, ಬೆಂಗಳೂರು)
    3.ಚಂದನ್ ಗೌಡ. (ಮಹೇಶ್ ಪಿಯು ಕಾಲೇಜ್, ಚಾಮರಾಜಪೇಟೆ, ಬೆಂಗಳೂರು)

     

     

  • ಮೇ 20, 21 ರಂದು ಸಿಇಟಿ ಪರೀಕ್ಷೆ – ಪ್ರಮಾಣವಚನ ಹಿನ್ನೆಲೆ ಟ್ರಾಫಿಕ್ ಆತಂಕ

    ಮೇ 20, 21 ರಂದು ಸಿಇಟಿ ಪರೀಕ್ಷೆ – ಪ್ರಮಾಣವಚನ ಹಿನ್ನೆಲೆ ಟ್ರಾಫಿಕ್ ಆತಂಕ

    ಬೆಂಗಳೂರು: ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ (CET Exam) ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಯನ್ನು ನಡೆಸುತ್ತಿದೆ.

    ಈ ಬಾರಿ ಸಿಇಟಿ ಪರೀಕ್ಷೆ ರಾಜ್ಯದ 592 ಕೇಂದ್ರಗಳಲ್ಲಿ ನಡೆಯಲಿದೆ. ಬೆಂಗಳೂರಿನಲ್ಲೇ (Bengaluru) 121 ಪರೀಕ್ಷಾ ಕೇಂದ್ರಗಳಿದ್ದು, ಉಳಿದ ಜಿಲ್ಲೆಗಳಲ್ಲಿ 471 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

    ರಾಜ್ಯಾದ್ಯಂತ ಪರೀಕ್ಷೆಗೆ 2,61,610 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 592 ಅಬ್ಸವರ್ಸ್‌ಗಳು, 1,184 ವಿಶೇಷ ಸ್ಕ್ವಾಡ್ ಸಿಬ್ಬಂದಿ, 592 ಕಸ್ಟೋಡಿಯನ್, 10,900 ಇನ್ವಿಜಿಲೇಟರ್‌ಗಳು ಸೇರಿ 23,050 ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ನಿಯೋಜನೆಗೊಂಡಿದ್ದಾರೆ.

    ಮೇ 22ರ ಬೆಳಗ್ಗೆ 11:30ರಿಂದ 12:30ರ ವರೆಗೆ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಹಾಗೂ ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ. ಇದರಡಿ 2,084 ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಇದೇ 28ರಂದು ಹೊಸ ಸಂಸತ್ ಭವನ ಉದ್ಘಾಟಿಸಲಿದ್ದಾರೆ ಮೋದಿ

    ಬೆಂಗಳೂರು ಪರೀಕ್ಷಾ ಅಭ್ಯರ್ಥಿಗಳಿಗೆ ಟ್ರಾಫಿಕ್ ಆತಂಕ: ಸಿಇಟಿ ಪರೀಕ್ಷೆ ನಡೆಯಲಿರುವ ಮೊದಲ ದಿನ ಶನಿವಾರದಂದೇ ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

    ಈ ಹಿನ್ನೆಲೆ ರಾಜ್ಯ ಹಾಗೂ ರಾಜಧಾನಿಯ ಮೂಲೆ ಮೂಲೆಗಳಿಂದ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಬರುವ ಸಾಧ್ಯತೆ ಇರುವುದರಿಂದ ನಗರದಲ್ಲಿ ಟ್ರಾಫಿಕ್ ಆಗುವ ಸಾಧ್ಯತೆಯಿದೆ. ಇದೀಗ ಸಿಇಟಿ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿರುವ ಬೆಂಗಳೂರಿನ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಟ್ರಾಫಿಕ್ ಜಾಮ್‌ನ ಭೀತಿ ಎದುರಾಗಿದೆ. ಇದನ್ನೂ ಓದಿ: ಇಂದು ಮತ್ತೆ ದೆಹಲಿಯತ್ತ ಸಿದ್ದರಾಮಯ್ಯ, ಡಿಕೆಶಿ- ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್

  • ಮೊದಲ ದಿನ ಸಿಇಟಿ ಪರೀಕ್ಷೆ ಸುಗಮ: ಅಶ್ವಥ್ ನಾರಾಯಣ

    ಮೊದಲ ದಿನ ಸಿಇಟಿ ಪರೀಕ್ಷೆ ಸುಗಮ: ಅಶ್ವಥ್ ನಾರಾಯಣ

    ಬೆಂಗಳೂರು: ವೃತ್ತಿಪರ ಕೋರ್ಸುಗಳಿಗೆ ನಡೆಸುತ್ತಿರುವ ಸಿಇಟಿ ಪರೀಕ್ಷೆ ಮೊದಲ ದಿನ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ.

    ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮೊದಲ ದಿನ 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ ಮತ್ತು 2,080,32 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ. ನೋಂದಣಿ ಮಾಡಿಕೊಂಡಿರುವ ಒಟ್ಟು 2,16,559 ವಿದ್ಯಾರ್ಥಿಗಳಿಗೆ ಹೋಲಿಸಿದರೆ ಕ್ರಮವಾಗಿ ಶೇ.80.95 ಹಾಗೂ ಶೇ.96.06 ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ರೈಲು ಸಂಚಾರಕ್ಕೆ ಜೂನ್ 20ರಂದು ಹಸಿರು ನಿಶಾನೆ

    ASHWATH NARAYAN 1

    ಈ ಬಾರಿ ಪರೀಕ್ಷೆಯಲ್ಲಿ ನೀಟ್ ಮಾದರಿಯಲ್ಲಿ ನಿಯಮ ಜಾರಿ ಮಾಡಲಾಗಿತ್ತು. ರಾಜ್ಯದ ಎಲ್ಲಾ ಕೇಂದ್ರಗಳಲ್ಲೂ ಸುಸೂತ್ರವಾಗಿ ಪರೀಕ್ಷೆ ನಡೆದಿದೆ. ಹಿಜಬ್ ಸೇರಿದಂತೆ ಯಾವುದೇ ವಿಷಯಗಳಿಗೆ ವಿವಾದಗಳು ಆಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮೆಟ್ರೋ ಸಂಚಾರ ರಾತ್ರಿ 1.30ರ ವರೆಗೂ ವಿಸ್ತರಣೆ – ಯಾಕೆ ಗೊತ್ತೇ?

    ಎರಡನೇ ದಿನವಾದ ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಶನಿವಾರದಂದು ಹೊರನಾಡು ಮತ್ತು ಗಡಿನಾಡು ಕನ್ನಡ ವಿದ್ಯಾರ್ಥಿಗಳಿಗೆ ಆಯ್ದ 6 ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

    Live Tv