Tag: CET Exam

  • ಗುರುವಾರದಿಂದ CET ಪರೀಕ್ಷೆ- ಹಿಜಬ್, ವಾಚ್ ನಿಷೇಧ, ಮಾಸ್ಕ್, ಹಾಫ್ ಶರ್ಟ್ ಕಡ್ಡಾಯ

    ಗುರುವಾರದಿಂದ CET ಪರೀಕ್ಷೆ- ಹಿಜಬ್, ವಾಚ್ ನಿಷೇಧ, ಮಾಸ್ಕ್, ಹಾಫ್ ಶರ್ಟ್ ಕಡ್ಡಾಯ

    ಬೆಂಗಳೂರು: ನಾಳೆಯಿಂದ ಸಿಇಟಿ ಪರೀಕ್ಷೆ ಪ್ರಾರಂಭವಾಗಲಿದೆ. ಪರೀಕ್ಷೆಗೆ ಕೆಇಎ ಸಕಲ ಸಿದ್ಧತೆ ಮಾಡಿಕೊಂಡಿದ್ದು, ನೀಟ್ ಮಾದರಿಯಲ್ಲಿ ಕಠಿಣ ಮಾರ್ಗಸೂಚಿಗಳನ್ನ ಜಾರಿ ಮಾಡ್ತಿದೆ. ಇಡೀ ಪರೀಕ್ಷಾ ವ್ಯವಸ್ಥೆ ವೀಡಿಯೋ ಚಿತ್ರೀಕರಣವಾಗಲಿದೆ.

    ನಾಳೆಯಿಂದ 3 ದಿನಗಳ ಕಾಲ ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದೆ. ಈ ಬಾರಿ 2,16,525 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ. ರಾಜ್ಯದ 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರಿನ 87 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

    ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ಜೂನ್ 18 ರಂದು ನಡೆಯಲಿದ್ದು, 1708 ವಿದ್ಯಾರ್ಥಿಗಳು ನೋಂದಣಿ ಆಗಿದ್ದಾರೆ. ಇವರಿಗೆ ಗಡಿಭಾಗದ ಜಿಲ್ಲೆಗಳಾದ ಬೆಂಗಳೂರು, ಬೀದರ್, ಬೆಳಗಾವಿ, ವಿಜಯಪುರ, ಬಳ್ಳಾರಿ, ಮಂಗಳೂರಿನಲ್ಲಿ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆಗೆ 486 ವೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, 972 ವಿಶೇಷ ತಪಾಸಣೆ ದಳ ಸೇರಿ 20 ಸಾವಿರ ಅಧಿಕಾರಿಗಳು ಪರೀಕ್ಷಾ ಕೆಲಸ ನಿರ್ವಹಣೆ ಮಾಡಲಿದ್ದಾರೆ. ಇದನ್ನೂ ಓದಿ: ಹಿಂದಿ ಭಾಷೆ ಬರುವ ಶಾಲಾ, ಕಾಲೇಜು ಮಕ್ಕಳಿಗಷ್ಟೇ ಪ್ರವಾಸ ಭಾಗ್ಯ- ಶಿಕ್ಷಣ ಇಲಾಖೆ ಆದೇಶ

    ಸಿಇಟಿ ಪರೀಕ್ಷೆಗೆ ನೀಟ್ ಮಾದರಿಯ ನಿಯಮ ಜಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಹಿಜಾಬ್ ನಿಷೇಧ ಮಾಡಲಾಗಿದೆ. ತಲೆ ಮತ್ತು ಕಿವಿ ಮುಚ್ಚಿಕೊಳ್ಳುವ ವಸ್ತ್ರ ಧರಿಸಬಾರದು. ವಿದ್ಯಾರ್ಥಿಗಳು ಆಫ್ ಶರ್ಟ್ ಮಾತ್ರ ಹಾಕಬೇಕು. ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳು ಪರೀಕ್ಷಾ ಕೇಂದ್ರಕ್ಕೆ ನಿಷೇಧ ಮಾಡಲಾಗಿದೆ. ಕೈ ಗಡಿಯಾರವನ್ನು ಪರೀಕ್ಷಾ ಕೇಂದ್ರಕ್ಕೆ ನಿಷೇಧ ಮಾಡಲಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿದೆ. 70% ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಎಲ್ಲಿ ಸಿಸಿ ಟಿವಿ ಇರೋದಿಲ್ಲವೋ ಅಲ್ಲಿ ವೀಡಿಯೋ ಚಿತ್ರೀಕರಣ ಮಾಡಲಾಗುತ್ತದೆ. ಖಜಾನೆಯಿಂದ ಪರೀಕ್ಷಾ ಕೇಂದ್ರದವರೆಗೂ ವೀಡಿಯೋ ಚಿತ್ರೀಕರಣಕ್ಕೆ ನಿರ್ಧಾರ ಮಾಡಲಾಗಿದೆ.

    ಪ್ರಶ್ನೆ ಪತ್ರಿಕೆ ಕನ್ನಡ ಮತ್ತು ಇಂಗ್ಲೀಷ್ ಎರಡು ಭಾಷೆಯಲ್ಲಿ ಇರಲಿದೆ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ಜೊತೆ ಆಧಾರ್ ಕಾರ್ಡ್, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ ಯಾವುದಾದರೂ ಒಂದು ಸೂಕ್ತ ಗುರುತಿನ ಪತ್ರ ವಿದ್ಯಾರ್ಥಿಗಳು ತರಬೇಕು. ಪರೀಕ್ಷೆಯ ಮೊದಲ ದಿನವಾದ ನಾಳೆ ಜೀವಶಾಸ್ತ್ರ ಮತ್ತು ಗಣಿತ ಪರೀಕ್ಷೆಗಳು ನಡೆಯಲಿದ್ದು, ಜೂನ್ 17 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದ ಪರೀಕ್ಷೆಗಳು ನಡೆಯಲಿವೆ.

    Live Tv

  • ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ: ಅಶ್ವಥ್ ನಾರಾಯಣ

    ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ: ಅಶ್ವಥ್ ನಾರಾಯಣ

    ಬೆಂಗಳೂರು: ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಅಗಸ್ಟ್ 28, 29 ಮತ್ತು 30ರಂದು ರಾಜ್ಯದಲ್ಲೆಡೆ ನಡೆಯಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್‍ನಾರಾಯಣ್ ಶುಕ್ರವಾರ ಎಲ್ಲ ಸಿದ್ಧತೆಗಳನ್ನು ಖುದ್ದು ಪರಿಶೀಲಿಸಿದರು.

    ಈ ಸಂಬಂಧ ನಗರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ಬಳಿಕ ಮಲ್ಲೇಶ್ವರದ 18ನೇ ಕ್ರಾಸ್ ನಲ್ಲಿರುವ ಸರ್ಕಾರಿ ಪಿಯು ಕಾಲೇಜಿಗೆ ತೆರಳಿ ಪರೀಕ್ಷಾ ಸಿದ್ಧತೆಗಳನ್ನು ನೇರವಾಗಿ ವೀಕ್ಷಿಸಿದರು.

    ಕಳೆದ ವರ್ಷದಂತೆ ಈ ವರ್ಷವೂ ಕೋವಿಡ್ ಸವಾಲಿನ ನಡುವೆಯೇ ಸಿಇಟಿ ನಡೆಯುತ್ತಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕೆಗಳನ್ನು ಸಚಿವರು ಪರಿಶೀಲನೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ನಡೆಯುತ್ತಿದ್ದು, ಕೋವಿಡ್ ಒತ್ತಡವನ್ನು ಮನಸ್ಸಿನಿಂದ ತೆಗೆದು ಹಾಕಿ ವಿದ್ಯಾರ್ಥಿಗಳು ಧೈರ್ಯ, ಸಂತೋಷದಿಂದ ಪರೀಕ್ಷೆ ಬರೆಯಬೇಕು. ಇದನ್ನು ಸಿಇಟಿ ಪರೀಕ್ಷೋತ್ಸವ ಎಂದು ಕರೆಯಲು ಬಯಸುತ್ತೇನೆ ಎಂದರು.  ಇದನ್ನೂ ಓದಿ: ಈ ಸರ್ಕಾರದಲ್ಲಿ ಹೆಣ್ಮಕ್ಕಳು ಮಾತ್ರವಲ್ಲ ಗಂಡು ಮಕ್ಕಳೂ ಸೇಫ್ ಅಲ್ಲ ಡಿಕೆಶಿ

    ಮಹತ್ವದ ಅಂಶವೆಂದರೆ ಕೋವಿಡ್ ಕಾರಣದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದ್ದು, ಸಿಇಟಿ ಅಂಕದ ಆಧಾರದ ಮೇಲೆಯೇ ರ್ಯಾಂಕ್ ನಿರ್ಧಾರ ಮಾಡಲಾಗುವುದು ಎಂದರು.

    ರಾಜ್ಯದಲ್ಲಿ ಒಟ್ಟು 2,01,816 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ ಕೋವಿಡ್ ಪಾಸಿಟಿವ್ ಇರುವ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. 12 ಸೋಂಕಿತ ವಿದ್ಯಾರ್ಥಿಗಳ ಪೈಕಿ 10 ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಹಾಗೂ ಕೋಲಾರ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಬ್ಬರು ಸಿಇಟಿ ಬರೆಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಹೊರಗಡೆ ನಾಯಿಗಳಿದೆ ಎಂದು ಮಕ್ಕಳನ್ನು ಆಚೆ ಬಿಡದೇ ಇರಬೇಕೇ: ಎಚ್.ಕೆ.ಕುಮಾರಸ್ವಾಮಿ

    ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲೇ ಇವೆ. ಉಳಿದ ಜಿಲ್ಲೆಗಳಲ್ಲಿ ಒಟ್ಟು 444 ಕೇಂದ್ರಗಳಿವೆ. ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಅಗಸ್ಟ್ 30ರಂದು ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುವುದು. ಈ ಕೇಂದ್ರಗಳಲ್ಲಿ 1,682 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

    ಒಂದು ಕೊಠಡಿಯಲ್ಲಿ 24 ಅಭ್ಯರ್ಥಿಗಳು ಪರೀಕ್ಷೆ ಬರೆಯುವಂತೆ, ಪ್ರತಿ ಬೆಂಚಿನಲ್ಲಿ ಇಬ್ಬರು ಅಭ್ಯರ್ಥಿಗಳು ಕುಳಿತುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಎರಡು ಬೆಂಚ್ ನಡುವೆ ಮೂರು ಅಡಿ ಅಂತರ ಕಾಪಾಡಿಕೊಳ್ಳಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕ್ರಮ ವಹಿಲಾಗಿದೆ.

    ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನರ್, ಹ್ಯಾಂಡ್ ಸ್ಯಾನಿಟೈಸರ್ ಅಳವಡಿಸಲಾಗಿದೆ. ಬೆಂಗಳೂರಿನಲ್ಲಿರುವ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಬಿಬಿಎಂಪಿ ವತಿಯಿಂದ ಸ್ಯಾನಿಟೈಸ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ 100 ಮಾಸ್ಕ್ ಗಳನ್ನು ಸ್ವಯಂ ಸೇವಾ ಸಂಸ್ಥೆಯಿಂದ ಎರಡು ದಿನ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.

    ವಾರಾಂತ್ಯದ ಕರ್ಫ್ಯೂ ಇರುವ ಗಡಿ ಜಿಲ್ಲೆಗಳಲ್ಲಿ ಅಭ್ಯರ್ಥಿಗಳು ಮತ್ತು ಪೋಷಕರು ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಲು ಅನುಕೂಲವಾಗಲು ಸಿಇಟಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪರಿಗಣಿಸಿ ಅವಕಾಶ ನೀಡಲು ಎಲ್ಲ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯವಾಗಿ ಕೇರಳ ಮತ್ತು ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ಬಹಳಷ್ಟು ಎಚ್ಚರಿಕೆ ವಹಿಸಲಾಗಿದೆ. ಇದನ್ನೂ ಓದಿ: ಮಾಜಿ ಗಂಡನ ಹೇಳಿಕೆಯಿಂದ ಚೀನಾದ ಖ್ಯಾತ ನಟಿಗೆ ಬಿತ್ತು 340 ಕೋಟಿ ರೂ. ದಂಡ

    ಉಳಿದಂತೆ ಪರೀಕ್ಷೆಗೆ ಅಗತ್ಯವಾದ ಎಲ್ಲ ವ್ಯವಸ್ಥೆಗಳನ್ನೂ ಸಮರ್ಪಕವಾಗಿ ಮಾಡಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಗಳ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಮಾಡಿದೆ.

    ಪರೀಕ್ಷೆ ವೇಳಾಪಟ್ಟಿ:
    ಆಗಸ್ಟ್ 28ರಂದು ಶನಿವಾರ ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ. ಆಗಸ್ಟ್ 29ರಂದು ಭಾನುವಾರ ಬೆಳಗ್ಗೆ 10.30ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. 30ರಂದು ಭಾನುವಾರ ಬೆಳಗ್ಗೆ 11.30ರಿಂದ 12.50 ರವರೆಗೆ ಹೊರನಾಡು, ಗಡಿನಾಡ ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯುತ್ತದೆ.

    ಅಭ್ಯರ್ಥಿಗಳು http://kea.kar.nic.in ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬೇಕು. ಅದರಲ್ಲಿ ಮುದ್ರಿತವಾಗಿರುವ ಸೂಚನೆಗಳನ್ನು ಪಾಲಿಸಿ, ಅದರಲ್ಲಿ ನಮೂದಿಸಲಾದ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು. ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳು, ಉತ್ತರಗಳು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಮುದ್ರಿತವಾಗಿರುತ್ತವೆ. ವಿದ್ಯಾರ್ಥಿಗಳು ಸೂಕ್ಷ್ಮವಾಗಿ ಗಮನಿಸಬೇಕು.

    ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ
    ಕಳೆದ ವರ್ಷದಂತೆ ಈ ವರ್ಷವೂ ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿದ್ದರೆ, ಅಂಥವರಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಎಸ್‍ಒಪಿ ಪ್ರಕಾರ ಅವರಿಗೆ ಪ್ರತಿ ಜಿಲ್ಲೆಯಲ್ಲೂ ಪರೀಕ್ಷೆ ಬರೆಸಲಾಗುವುದು. ಯಾರೇ ವಿದ್ಯಾರ್ಥಿಗಳು ಸೋಂಕಿತರಿದ್ದರೆ ಧೈರ್ಯವಾಗಿ ಪರೀಕ್ಷೆ ಬರೆಯಲು ಅವಕಾಶ ಇದೆ. ಅಗತ್ಯವಾದ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿಯೂ ಅರೆವೈದ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

    ಒಟ್ಟು 530 ವೀಕ್ಷಕರು, 1060 ವಿಶೇಷ ಜಾಗೃತ ದಳದ ಸದಸ್ಯರು, 530 ಪ್ರಶ್ನೆ ಪತ್ರಿಕೆ ಪಾಲಕರು, ಸುಮಾರು 8,409 ಕೊಠಡಿ ಮೇಲ್ವಿಚಾರಕರು ಹಾಗೂ ಒಟ್ಟು 20,415 ಅಧಿಕಾರಿಗಳು, ಸಿಬ್ಬಂದಿ ಪರೀಕ್ಷೆ ಕರ್ತವ್ಯ ನಿರ್ವಹಿಸಲಿದ್ದಾರೆ. ಪರೀಕ್ಷಾ ದಿನಗಳಂದು ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಿಗೆ, ಖಜಾನೆಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.

    ಆನ್ ಲೈನ್ ಮೂಲಕ ದಾಖಲೆಗಳ ಸಲ್ಲಿಕೆ
    ಕಳೆದ ವರ್ಷದಂತೆ ಈ ವರ್ಷವೂ ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗಳು ಸಿಇಟಿ ಅರ್ಜಿಯಲ್ಲಿ ಕೋರಿರುವ ಮೀಸಲಾತಿಗೆ ಅಗತ್ಯ ದಾಖಲೆಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದರು.

    ಹೀಗೆ ಆನ್ ಲೈನ್ ಮೂಲಕ ಸಲ್ಲಿಸಿರುವ ದಾಖಲೆಗಳನ್ನು ಆನ್ ಲೈನ್ ಮೂಲಕವೇ ಪರಿಶೀಲನೆ ಮಾಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ವಿವರವಾದ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ ನಲ್ಲಿ ಪ್ರಕಟಿಸಲಾಗುವುದು. ಜೊತೆಗೆ ವಿಶೇಷ ವರ್ಗದ ಅಭ್ಯರ್ಥಿಗಳಿಗೆ ದಾಖಲಾತಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗುವುದು. ಎಲ್ಲ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿರುವ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲೂ ಅಂತಿಮ ಅವಕಾಶವನ್ನು ನೀಡಲಾಗುತ್ತಿದೆ. ಅದಕ್ಕಾಗಿ ಒಂದು ವಾರ ಕಾಲಾವಕಾಶ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

  • ನಾಳೆಯಿಂದ ಸಿಇಟಿ ಪರೀಕ್ಷೆ – ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

    ನಾಳೆಯಿಂದ ಸಿಇಟಿ ಪರೀಕ್ಷೆ – ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

    ಬೆಂಗಳೂರು: ರಾಜ್ಯಾದ್ಯಂತ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ರಾಜ್ಯದ 530 ಕೇಂದ್ರಗಳಲ್ಲಿ ಆಗಸ್ಟ್ 28ರಿಂದ 30ರವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದೆ. ರಾಜ್ಯದ 530 ಕೇಂದ್ರಗಳಲ್ಲಿ ಪರೀಕ್ಷೆಗೆ ಭರದ ಸಿದ್ಧತೆ ನಡೆಸಲಾಗಿದ್ದು, ರಾಜ್ಯದ 6 ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ.

    ಕೋವಿಡ್ ಮಾರ್ಗಸೂಚಿ ಅನುಸರಿಸಿ ಸಿಇಟಿ ಪರೀಕ್ಷೆ ನಡೆಸಲಾಗುತ್ತಿದ್ದು, 530 ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಆಗಸ್ಟ್ 28ರಂದು ಜೀವಶಾಸ್ತ್ರ ಮತ್ತು ಗಣಿತ. ಆಗಸ್ಟ್ 29ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ, ಆಗಸ್ಟ್ 30ರಂದು ಹೊರನಾಡು ಮತ್ತು ಗಡಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಿಗದಿ ಮಾಡಲಾಗಿದೆ. ಈ ಪರೀಕ್ಷೆಗೆ 1,682 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ?: ಶ್ರುತಿ

    ಪರೀಕ್ಷೆ ದಿನಗಳಂದು ಗೃಹ ಇಲಾಖೆಯು ಸೂಕ್ತ ಪೊಲೀಸ್ ವ್ಯವಸ್ಥೆ ಮಾಡಿದ್ದು, 530 ವೀಕ್ಷಕರು, 1,060 ವಿಶೇಷ ಜಾಗೃತ ದಳದ ಸದಸ್ಯರನ್ನು ಆಯೋಜಿಸಲಾಗಿದೆ. ಜೊತೆಗೆ 530 ಪ್ರಶ್ನೆಪತ್ರಿಕೆ ಪಾಲಕರು, 8,409 ಕೊಠಡಿ ಮೇಲ್ವಿಚಾರಕರು ಹಾಗೂ 20,415 ಅಧಿಕಾರಿ ವರ್ಗದ ಸಿಬ್ಬಂದಿಯನ್ನು ಈ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ.

    ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ನಡಯಲಿದೆ. 530 ಪರೀಕ್ಷಾ ಕೇಂದ್ರಗಳ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲಿದ್ದು, ಉಳಿದ 444 ಕೇಂದ್ರಗಳು ಇನ್ನುಳಿದ ಜಿಲ್ಲೆಗಳಲ್ಲಿವೆ. ಇದನ್ನೂ ಓದಿ: ಅರಗ ಜ್ಞಾನೇಂದ್ರ ನೆಗೆಟಿವ್ ಆಗಿ ಹೇಳಿಕೆ ಕೊಟ್ಟಿಲ್ಲ: ಪೂರ್ಣಿಮಾ ಶ್ರೀನಿವಾಸ್

    ವಿದ್ಯಾರ್ಥಿಗಳು ಅನುಸರಿಸಬೇಕಾದ ನಿಯಮಗಳು:
    ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಪ್ರವೇಶ ಪತ್ರದ ಜೊತೆಗೆ ಕಡ್ಡಾಯವಾಗಿ ಮಾನ್ಯತೆ ಇರುವ ಕಾಲೇಜಿನ ಗುರುತಿನ ಚೀಟಿ ದ್ವಿತೀಯ ಪಿಯುಸಿ ಪ್ರವೇಶ ಪತ್ರ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್ ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಇವುಗಳಲ್ಲಿ ಯಾವುದಾದರೂ ಒಂದನ್ನು ತೆಗೆದುಕೊಂಡು ಹೋಗಬೇಕು.

  • ಇಂದಿನಿಂದ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಾರಂಭ

    ಇಂದಿನಿಂದ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಾರಂಭ

    – ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ

    ಬೆಂಗಳೂರು: ಕೊರೊನಾ ಎರಡನೇ ಅಲೆ ಮಧ್ಯೆ ಶಿಕ್ಷಣ ಇಲಾಖೆ 2021ನೇ ಸಾಲಿನ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಾರಂಭ ಮಾಡಿದೆ. ಇಂದಿನಿಂದ ಜುಲೈ 10ರ ವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

    ಆಗಸ್ಟ್ 28 ಮತ್ತು 29ರಂದು ಸಿಇಟಿ ಪರೀಕ್ಷೆ ನಡೆಸಲು ಕೆಇಎ ಈಗಾಗಲೇ ವೇಳಾಪಟ್ಟಿ ಪ್ರಕಟ ಮಾಡಿದೆ. ಹೀಗಾಗಿ ಇದೀಗ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಾಗಿದ್ದು, ಪರೀಕ್ಷೆ ಬರೆಯಲು ಆಸಕ್ತಿ ಇರುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    ಎಂಜಿನಿಯರಿಂಗ್, ಯೋಗ, ನ್ಯಾಚುರೋಪತಿ, ಬಿ-ಫಾರ್ಮ್, ಕೃಷಿ ವಿಜ್ಞಾನ, ವೆಟರಿನರಿ ಕೋರ್ಸ್ ಸೀಟು ಹಂಚಿಕೆಗೆ ರಾಜ್ಯ ಸರ್ಕಾರ ಸಿಇಟಿ ನಡೆಸುತ್ತದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೇಳಾಪಟ್ಟಿ ಹೀಗಿದೆ.

    ಕೆಇಎ ವೇಳಾಪಟ್ಟಿ
    – ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ- ಜೂನ್ 15 ರಿಂದ ಜುಲೈ 10ವರೆಗೆ
    – ಆನ್‍ಲೈನ್ ಮೂಲಕ ಶುಲ್ಕ ಪಾವತಿಗೆ ಕೊನೆ ದಿನ- ಜುಲೈ 13
    – ವಿಶೇಷ ಪ್ರವರ್ಗಗಳ ದಾಖಲಾತಿ ಸಲ್ಲಿಕೆ- ಜುಲೈ 14 ರಿಂದ ಜುಲೈ 20
    – ಆನ್‍ಲೈನ್ ಅರ್ಜಿ ಮಾಹಿತಿ ತಿದ್ದುಪಡಿ- ಜುಲೈ 19 ರಿಂದ ಜುಲೈ 22
    – ಸಿಇಟಿ ಪರೀಕ್ಷೆಗೆ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಳ್ಳುವುದು- ಆಗಸ್ಟ್ 13ರಿಂದ

  • ಸಿಇಟಿ ಫಲಿತಾಂಶ ಒಂದು ದಿನ ಮುಂದಕ್ಕೆ: ಅಶ್ವಥ್ ನಾರಾಯಣ್

    ಸಿಇಟಿ ಫಲಿತಾಂಶ ಒಂದು ದಿನ ಮುಂದಕ್ಕೆ: ಅಶ್ವಥ್ ನಾರಾಯಣ್

    ಬೆಂಗಳೂರು: ಸಿಇಟಿ ಫಲಿತಾಂಶವನ್ನು ಒಂದು ದಿನ ಮುಂದಕ್ಕೆ ಹಾಕಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

    ಕಳೆದ ಜುಲೈ 30 ಮತ್ತು 31ರಂದು ನಡೆದಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ (ಆಗಸ್ಟ್ 21) ಪ್ರಕಟಿಸಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

    ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಶುಕ್ರವಾರ ಮಧ್ಯಾಹ್ನ 12.30ಕ್ಕೆ ಫಲಿತಾಂಶವನ್ನು ಸಾರ್ವಜನಿಕರಿಗೆ ಲಭ್ಯವಾಗುವ ಹಾಗೆ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ. ಆಗಸ್ಟ್ 21 ಬೆಳಗ್ಗೆ 11 ಗಂಟೆಗೆ ಪತ್ರಿಕಾಗೋಷ್ಠಿ ಇರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    http://karresults.nic.in ಲಿಂಕ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

  • ಸಿಇಟಿ ಪರೀಕ್ಷೆ ಬೇಕೇ? ಗಂಭೀರವಾಗಿ ಪರಿಗಣಿಸಿ, ನಾಳೆ ನಿರ್ಧಾರ ತಿಳಿಸಿ – ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

    ಸಿಇಟಿ ಪರೀಕ್ಷೆ ಬೇಕೇ? ಗಂಭೀರವಾಗಿ ಪರಿಗಣಿಸಿ, ನಾಳೆ ನಿರ್ಧಾರ ತಿಳಿಸಿ – ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

    – ಸಿಇಟಿ ಪರೀಕ್ಷೆಯನ್ನು ರದ್ದುಗೊಳಿಸಿ
    – ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆ

    ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ ಸಿಇಟಿ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌) ಸಲ್ಲಿಕೆಯಾಗಿದ್ದು ನಾಳೆ ಈ ಪ್ರಕರಣ ಇತ್ಯರ್ಥವಾಗುವ ಸಾಧ್ಯತೆಯಿದೆ.

    ವಕೀಲರಾದ ಎಸ್.ಪಿ. ಪ್ರದೀಪ್ ಕುಮಾರ್, ಅಬ್ದುಲ್ಲಾ ಖಾನ್‌, ಎನ್‌ಎಸ್‌ಯುಐ ವಿದ್ಯಾರ್ಥಿಗಳು ಪಿಐಎಲ್‌ ಸಲ್ಲಿಸಿದ್ದು ಇಂದು ಅರ್ಜಿಯ ವಿಚಾರಣೆ ಮುಖ್ಯ ನ್ಯಾ. ಅಭಯ್‌ ಓಕಾ ಮತ್ತು ನ್ಯಾ. ಸಂದೇಶ್‌ ಅವರಿಂದ ಪೀಠದಲ್ಲಿ ನಡೆಯಿತು.

    ಕೋವಿಡ್‌ ಸಮಯದಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ವಕೀಲ ಅಬ್ದುಲ್ಲಾ ಖಾನ್‌ ಪೀಠದ ಗಮನಕ್ಕೆ ತಂದರು. ಈ ವೇಳೆ ರಾಜ್ಯದಲ್ಲಿ 6 ಸಾವಿರ ಕಂಟೈನ್ಮೆಂಟ್‌ ವಲಯಗಳಿವೆ. ಈ ವಲಯದಲ್ಲಿರುವ ವಿದ್ಯಾರ್ಥಿಗಳು ಪರೀಕ್ಷೆಯನ್ನು ಹೇಗೆ ಬರೆಯಬೇಕು ಈ ಬಗ್ಗೆ ಮಾಹಿತಿ ನೀಡಿ ಎಂದು ಸರ್ಕಾರವನ್ನು ಪ್ರಶ್ನಿಸಿದರು.

    ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ, ಈ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಮಾಡಲಾಗಿದೆ ಎಂದು ತಿಳಿಸಿದರು.

    ಅರ್ಜಿದಾರರು ಕೊನೆ ಕ್ಷಣದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಕೋವಿಡ್‌ 19 ಪ್ರಕರಣಗಳು ಭಾರೀ ಸಂಖ್ಯೆಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ನಡೆಸಬೇಕೇ? ಬೇಡವೇ ಎಂಬುದರ ಬಗ್ಗೆ ಕೂಡಲೇ ಸ್ಪಷ್ಟವಾದ ನಿರ್ಧಾರ ತೆಗೆದುಕೊಳ್ಳಬೇಕು. ಕೋವಿಡ್‌ನಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಿ ಹಾಕುವ ಸಾಧ್ಯತೆಯಿದೆ. ಹೀಗಾಗಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಬುಧವಾರ ಮಧ್ಯಾಹ್ನ 2:30ರ ಒಳಗಡೆ ತನ್ನ ನಿರ್ಧಾರವನ್ನು ತಿಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಸೂಚಿಸಿ ನಾಳೆಗೆ ವಿಚಾರಣೆಯನ್ನು ಮುಂದೂಡಿತು.

    ಅರ್ಜಿಯಲ್ಲಿ ಏನಿದೆ?
    ರಾಜ್ಯದಲ್ಲಿ 2020ನೇ ಸಾಲಿನ ಸಿಇಟಿ ಪರೀಕ್ಷೆ ಜುಲೈ 30, 31 ಹಾಗೂ ಆಗಸ್ಟ್ 1ಕ್ಕೆ ನಿಗದಿ ಪಡಿಸಿ ಮೇ 13ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಜುಲೈ 18ರಂದು ಪ್ರಾಧಿಕಾರ ಪರೀಕ್ಷಾ ಕೇಂದ್ರಗಳು ಯಾವ ರೀತಿ ತಯಾರಿ ನಡೆಸಬೇಕು ಎಂಬುದರ ಸಂಬಂಧವಾಗಿ ಮಾರ್ಗಸೂಚಿಯನ್ನು ಪ್ರಕಟಿಸಿದೆ.

    ಕೊರೊನಾ ವ್ಯಾಪಕವಾಗಿ ಹಬ್ಬುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸರಿಯಲ್ಲ. ಹೀಗಾಗಿ ಸಿಇಟಿ ಪರೀಕ್ಷೆಯನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು. ಪಿಯು ಅಂಕಗಳ ಆಧಾರದಲ್ಲಿ ವೃತ್ತಿ ಶಿಕ್ಷಣ ಕೋರ್ಸ್‍ಗಳಿಗೆ ಪ್ರವೇಶ ನೀಡಬೇಕೆಂದು ಅರ್ಜಿದಾರರು ಮನವಿ ಮಾಡಿಕೊಂಡಿದ್ದಾರೆ.

    ರಾಜ್ಯದಲ್ಲಿ ಕೊರೊನಾ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ 2020ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮುಂದೂಡಿ ನಂತರ ಪರೀಕ್ಞಾ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

    ಜುಲೈ 30 ರಂದು ಜೀವಶಾಸ್ತ್ರ, ಗಣಿತ ಜುಲೈ 31 ರಂದು ಭೌತಶಾಸ್ತ್ರ, ರಸಾಯನ ಶಾಸ್ತ್ರ ಪರೀಕ್ಷೆ ನಡೆದರೆ ಆಗಸ್ಟ್‌ ಒಂದರಂದು ಬೆಂಗಳೂರು ಕೇಂದ್ರದಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಪ್ರತಿ ದಿನ ಬೆಳಗ್ಗೆ ಮತ್ತು ಮಧ್ಯಾಹ್ನ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕನ್ನಡ ಭಾಷಾ ಪರೀಕ್ಷೆಯನ್ನು 50 ಅಂಕಗಳಿಗೆ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಡೆಸಲಾಗುತ್ತದೆ. ಇತರೆ ವಿಷಯಗಳ ಪರೀಕ್ಷೆಗಳನ್ನು 60 ಅಂಕಗಳಿಗೆ ನಡೆಸಲಾಗುತ್ತದೆ.

    ಮೊದಲನೇ ವರ್ಷದ / ಮೊದಲನೇ ಸೆಮಿಸ್ಟರ್ ನ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನದ ಕೋರ್ಸ್‌ಗಳು ಮತ್ತು ಬಿ-ಫಾರ್ಮಾ-ಡಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ.