ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಫಲಿತಾಶ ಜುಲೈ 30 ರಂದು ಪ್ರಕಟವಾಗಲಿದೆ.
ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ಸುಮಾರು 2 ಲಕ್ಷ ವಿದ್ಯಾರ್ಥಿಗಳು ಜೂನ್ 16, 17, 18 ರಂದು ನಡೆದಿದ್ದ ಪರೀಕ್ಷೆಗೆ ಹಾಜರಾಗಿದ್ದರು.

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಫಲಿತಾಶ ಜುಲೈ 30 ರಂದು ಪ್ರಕಟವಾಗಲಿದೆ.
ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ಸುಮಾರು 2 ಲಕ್ಷ ವಿದ್ಯಾರ್ಥಿಗಳು ಜೂನ್ 16, 17, 18 ರಂದು ನಡೆದಿದ್ದ ಪರೀಕ್ಷೆಗೆ ಹಾಜರಾಗಿದ್ದರು.

ಬೆಂಗಳೂರು: ವೃತ್ತಿಪರ ಕೋರ್ಸುಗಳಿಗೆ ನಡೆಸುತ್ತಿರುವ ಸಿಇಟಿ ಪರೀಕ್ಷೆ ಮೊದಲ ದಿನ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮೊದಲ ದಿನ 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ ಮತ್ತು 2,080,32 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ. ನೋಂದಣಿ ಮಾಡಿಕೊಂಡಿರುವ ಒಟ್ಟು 2,16,559 ವಿದ್ಯಾರ್ಥಿಗಳಿಗೆ ಹೋಲಿಸಿದರೆ ಕ್ರಮವಾಗಿ ಶೇ.80.95 ಹಾಗೂ ಶೇ.96.06 ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ರೈಲು ಸಂಚಾರಕ್ಕೆ ಜೂನ್ 20ರಂದು ಹಸಿರು ನಿಶಾನೆ

ಈ ಬಾರಿ ಪರೀಕ್ಷೆಯಲ್ಲಿ ನೀಟ್ ಮಾದರಿಯಲ್ಲಿ ನಿಯಮ ಜಾರಿ ಮಾಡಲಾಗಿತ್ತು. ರಾಜ್ಯದ ಎಲ್ಲಾ ಕೇಂದ್ರಗಳಲ್ಲೂ ಸುಸೂತ್ರವಾಗಿ ಪರೀಕ್ಷೆ ನಡೆದಿದೆ. ಹಿಜಬ್ ಸೇರಿದಂತೆ ಯಾವುದೇ ವಿಷಯಗಳಿಗೆ ವಿವಾದಗಳು ಆಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮೆಟ್ರೋ ಸಂಚಾರ ರಾತ್ರಿ 1.30ರ ವರೆಗೂ ವಿಸ್ತರಣೆ – ಯಾಕೆ ಗೊತ್ತೇ?
ಎರಡನೇ ದಿನವಾದ ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಶನಿವಾರದಂದು ಹೊರನಾಡು ಮತ್ತು ಗಡಿನಾಡು ಕನ್ನಡ ವಿದ್ಯಾರ್ಥಿಗಳಿಗೆ ಆಯ್ದ 6 ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಬೆಂಗಳೂರು: ಇಂದಿನಿಂದ 3 ದಿನಗಳ ಕಾಲ ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಹಲವು ಪರೀಕ್ಷೆಗಳ ಅಕ್ರಮ ಹಿನ್ನೆಲೆಯಲ್ಲಿ ಸಿಇಟಿಯಲ್ಲೂ ಅಕ್ರಮಗಳನ್ನು ತಡೆಯಲು ನೀಟ್ ಮಾದರಿಯ ನಿಯಮ ಜಾರಿ ಮಾಡಲಾಗಿದೆ. ಅಷ್ಟೇ ಅಲ್ಲದೇ ಸಿಇಟಿ ಪರೀಕ್ಷೆಗೆ ಭಾರೀ ಟಫ್ ರೂಲ್ಸ್ ಜಾರಿ ಮಾಡಲಾಗಿದೆ.

ಪರೀಕ್ಷಾ ಕೇಂದ್ರಕ್ಕೆ ಹಿಜಬ್ ನಿಷೇಧಿಸಲಾಗಿದ್ದು, ಇದರ ಜೊತೆಗೆ ತಲೆ ಮತ್ತು ಕಿವಿ ಮುಚ್ಚಿಕೊಳ್ಳುವ ವಸ್ತ್ರ ಧರಿಸಬಾರದು. ವಿದ್ಯಾರ್ಥಿಗಳು ಹಾಫ್ ಶರ್ಟ್ ಮಾತ್ರ ಧರಿಸಬೇಕು. ಜೊತೆಗೆ ವಾಚ್ ಧರಿಸುವಂತಿಲ್ಲ. ಕೋವಿಡ್ ಮಾರ್ಗಸೂಚಿಯನ್ನು ಪರೀಕ್ಷಾ ಕೇಂದ್ರಕ್ಕೆ ಬರುವ ಪ್ರತಿಯೊಬ್ಬರೂ ಅನುಸರಿಸಬೇಕು. ಅಷ್ಟೇ ಅಲ್ಲದೇ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದೆ.

ನೀಟ್ ಮಾದರಿಯಲ್ಲಿ ಪರೀಕ್ಷೆಗೆ ನಿಯಮ ಜಾರಿಯಾಗಿದ್ದು, ಮೊದಲ ದಿನ ಜೀವಶಾಸ್ತ್ರ ಮತ್ತು ಗಣಿತ ವಿಷಯಗಳ ಪರೀಕ್ಷೆ ಬೆಳಗ್ಗೆ 10.30ಕ್ಕೆ ನಡೆಯಲಿದೆ. ಬೆಂಗಳೂರಿನಲ್ಲಿ 87 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಇದನ್ನೂ ಓದಿ: ಯುಪಿಯಲ್ಲಿ ಬುಲ್ಡೋಜರ್ ಘರ್ಜನೆ- ಇಂದು ಸುಪ್ರೀಂ ಕೋರ್ಟ್ ವಿಚಾರಣೆ

ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಲು ಪೊಲೀಸರನ್ನು ನಿಯೋಜಿಸಲಾಗಿದೆ. ಅಷ್ಟೇ ಅಲ್ಲದೇ ಖಜಾನೆಯಿಂದ ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ತಲುಪುವವರೆಗೂ ವೀಡಿಯೋ ಚಿತ್ರೀಕರಣವನ್ನು ಮಾಡಲಾಗುವುದು. ಇದನ್ನೂ ಓದಿ: ಕೊಳವೆ ಬಾವಿ ತೋಡಿಸಿಕೊಡಿ ಅಂತಾ ಮತಪೆಟ್ಟಿಗೆಗೆ ಪತ್ರ ಹಾಕಿರುವ ಯುವಕ!

ಬೆಂಗಳೂರು: ಜೆಇಇ, ನೀಟ್ ಮತ್ತು ಸಿಇಟಿಯಂತಹ ಕಠಿಣ ಪ್ರವೇಶ ಪರೀಕ್ಷೆಗಳನ್ನು ತೆಗೆದುಕೊಳ್ಳಲಿರುವ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಆಸಕ್ತ ವಿದ್ಯಾರ್ಥಿಗಳಿಗೆ ಉಚಿತ ನೆರವು ನೀಡುವ ಮೂರನೇ ವರ್ಷದ ಗೆಟ್-ಸೆಟ್-ಗೋ (GetCETgo) ಆನ್ ಲೈನ್ ತರಬೇತಿ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಬುಧವಾರ ಚಾಲನೆ ನೀಡಿದರು.
ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾಲತಾಣ (www.getcetgo.in) ಅನಾವರಣಗೊಳಿಸಿ ಮಾತನಾಡಿದ ಅಶ್ವತ್ಥನಾರಾಯಣ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳು ಡಿಜಿಲರ್ನ್ ಎಜುಟೆಕ್ ಸಂಸ್ಥೆಯ ಜತೆಗೂಡಿ ರೂಪಿಸಿರುವ ಈ ವಿದ್ಯಾರ್ಥಿ ಸ್ನೇಹಿ ಉಪಕ್ರಮದ ಲಾಭ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಥಮ ಪಿಯುಸಿಯಿಂದಲೇ ಸಿಗುವಂತೆ ಮಾಡಲಾಗುವುದು. ಈ ಸಂಬಂಧ ಕಂಪನಿಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದರು.

ಜಾಲತಾಣದ ಜತೆಗೆ ಆ್ಯಪ್ ಮೂಲಕವೂ ಈ ಪ್ರಯೋಜನ ಪಡೆಯಬಹುದಾಗಿದ್ದು, ಇದನ್ನು ಗೂಗಲ್ ಪ್ಲೇಸ್ಟೋರ್‌ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು ಅಲ್ಲದೆ, ಯೂಟ್ಯೂಬ್ ಮೂಲಕವೂ ಇದರ ವಿಡಿಯೋಗಳನ್ನು ವೀಕ್ಷಿಸಬಹುದು. ಇದು ಪರಿಣಾಮಕಾರಿ ಕಲಿಕೆಯನ್ನು ಸುಲಭಗೊಳಿಸಿದ್ದು, ಕಳೆದ ಎರಡು ವರ್ಷಗಳಲ್ಲಿ ಈ ವೇದಿಕೆ 3.50 ಲಕ್ಷಕ್ಕೂ ಹೆಚ್ಚು ಲಾಗ್‌ಇನ್ ಕಂಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ವೇದಿಕೆಯಲ್ಲೇ ಕೊಳ್ಳೇಗಾಲ ಟಿಕೆಟ್ ಫೈನಲ್ ಮಾಡಿದ ಬಿಎಸ್‌ವೈ- ಯಾರು ಅಭ್ಯರ್ಥಿ?
ಗೆಟ್ ಸೆಟ್ ಗೋ ಜಾಲತಾಣದಲ್ಲಿ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಒಮ್ಮೆ ನೋಂದಾಯಿಸಿಕೊಂಡರೆ ಓದಿನ ಪುನರ್ಮನನಕ್ಕೆ ಅನುಕೂಲವಾಗುವ ವೀಡಿಯೋಗಳು, ಸಾರರೂಪದ ಪಿಪಿಟಿಗಳು, ಅಭ್ಯಾಸ ಪ್ರಶ್ನೆಗಳು, ಅಧ್ಯಾಯವಾರು ಪರೀಕ್ಷೆಗಳು, ಅಣಕು ಪರೀಕ್ಷೆಗಳು ಎಲ್ಲವೂ ಉಚಿತವಾಗಿ ಸಿಗುತ್ತವೆ. ಜತೆಗೆ ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆಯನ್ನು ಎದುರಿಸಿ, ತಮ್ಮ ಅಂಕ ಮತ್ತು ಸ್ಥಾನಗಳನ್ನು ತಿಳಿದುಕೊಳ್ಳಬಹುದು ಎಂದು ಹೇಳಿದರು.

ಎರಡು ವರ್ಷಗಳ ಹಿಂದೆ ಕೊರೊನಾ ಕಾಣಿಸಿಕೊಂಡಾಗ ಈ ಉಪಕ್ರಮವನ್ನು ಆರಂಭಿಸಲಾಯಿತು. ಈಗ ಭೌತಿಕ ತರಗತಿಗಳು ನಡೆಯುತ್ತಿದ್ದರೂ ಈ ನೆರವನ್ನು ವಿಸ್ತರಿಸಲಾಗುತ್ತಿದ್ದು, ಆನ್‌ಲೈನ್ ಕಲಿಕೆ ವರದಾನವಾಗಿದೆ. ಇದರಿಂದಾಗಿ ರಾಜ್ಯದ ಹೆಚ್ಚಿನ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಅಧ್ಯಯನಕ್ಕೆ ಪ್ರತಿಷ್ಠಿತ ಸಂಸ್ಥೆಗಳಿಗೆ ಪ್ರವೇಶ ಪಡೆಯುವುದು ಸಾಧ್ಯವಾಗಿದೆ. ಎರಡು ವರ್ಷಗಳಲ್ಲಿ 3.6 ಲಕ್ಷ ವಿದ್ಯಾರ್ಥಿಗಳು ಈ ವೀಡಿಯೋಗಳನ್ನು ವೀಕ್ಷಿಸಿದ್ದಾರೆ ಎಂದು ಅಶ್ವತ್ಥನಾರಾಯಣ ತಿಳಿಸಿದರು. ಇದನ್ನೂ ಓದಿ: ಅಭಿಷೇಕ್ ಅವರ ಅಪ್ಪನ ಮಗ, ಚುನಾವಣೆ ಸ್ಪರ್ಧೆ ಬಗ್ಗೆ ಅವನೇ ನಿರ್ಧರಿಸುತ್ತಾನೆ: ಸುಮಲತಾ
ಕಾರ್ಯಕ್ರಮದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ ಪ್ರದೀಪ್, ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎನ್ ರವಿಚಂದ್ರನ್ ಉಪಸ್ಥಿತರಿದ್ದರು.

ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗೆ ದಿನಾಂಕ ಪ್ರಕಟ ಮಾಡಲಾಗಿದೆ. ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ವೇಳಾಪಟ್ಟಿ ಪ್ರಕಟಿಸಿದ್ದಾರೆ.
ಜೂನ್ 16, 17, 18ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಏಪ್ರಿಲ್ 5ರಿಂದ ಆನ್‍ಲೈನ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಏಪ್ರಿಲ್ 20ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಏಪ್ರಿಲ್ 22ವರೆಗೆ ಶುಲ್ಕ ಪಾವತಿಗೆ ಕೊನೆದಿನ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.

ಜೂನ್ 16 ರಂದು ಜೀವಶಾಸ್ತ್ರ ಹಾಗೂ ಗಣಿತ ವಿಷಯಗಳ ಪರೀಕ್ಷೆ ನಡೆಯಲಿದೆ. ಜೂನ್ 17 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿವೆ. ಜೂನ್ 18ರಂದು ಗಡಿನಾಡು ಮತ್ತು ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ ಎಂದರು. ಇದನ್ನೂ ಓದಿ: SSLC ಪರೀಕ್ಷೆಗೆ ಬರೆಯಲು ಬಂದ 6 ನಕಲಿ ವಿದ್ಯಾರ್ಥಿಗಳು ಪೊಲೀಸರ ವಶ
ಮೇ 2ರಿಂದ 6ರವರೆಗೂ ವಿದ್ಯಾರ್ಥಿಗಳು ಅರ್ಜಿಯಲ್ಲಿನ ಲೋಪ ಸರಿಪಡಿಸಲು ಅವಕಾಶ ನೀಡಲಾಗಿದೆ. ಮೇ 30ರಿಂದ ಪರೀಕ್ಷೆ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಬಾಗಲಕೋಟೆಯಲ್ಲಿ ಹಿಜಬ್‍ಗಾಗಿ ಪರೀಕ್ಷೆ ಕೈ ಬಿಟ್ಟ ವಿದ್ಯಾರ್ಥಿನಿ

ಬೆಂಗಳೂರು: ಇಂದು ರಾಜ್ಯದಲ್ಲಿ ಸಿಇಟಿ ಫಲಿತಾಂಶ ಪ್ರಕಟಗೊಂಡಿದೆ. ಅಗ್ರಿಕಲ್ಚರ್, ಎಂಜಿನಿಯರಿಂಗ್ ಸೇರಿ ಎಲ್ಲಾ 5 ವಿಭಾಗದಲ್ಲೂ ಮೈಸೂರಿನ ಮೇಘನ್ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ.

2021ನೇ ಸಾಲಿನ ಸಿಇಟಿ ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ಪ್ರಕಟಿಸಿದರು. ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ಸಣ್ಣ ಮಳೆಗೆ ನದಿಯಂತಾದ ಬೆಂಗಳೂರು ರಸ್ತೆ

ಈ ವರ್ಷ 6 ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದು, ಗಣಿತ 3 ಅಂಕ ಮತ್ತು ಭೌತಶಾಸ್ತ್ರ 3 ಗ್ರೇಸ್ ಮಾರ್ಕ್ಸ್ ನೀಡಲಾಗಿದೆ. ಮುಂದಿನ ವರ್ಷದ ವ್ಯಾಸಂಗಕ್ಕೆ ಸಿಇಟಿ ಫಲಿತಾಂಶವನ್ನು ಆಧರಿಸಿ ಮೂಲ ದಾಖಲಾಗಿ ಪರಿಶೀಲನೆಗೆ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಸೌಲಭ್ಯ ಕೇಂದ್ರ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 30 ರಿಂದ ದಾಖಲಾತಿ ಪರಿಶೀಲನೆ ಪ್ರಾರಂಭಿಸಲಾಗುವುದು. ಅಭ್ಯರ್ಥಿಗಳು ಹತ್ತಿರದ ಕೇಂದ್ರಕ್ಕೆ ಹೋಗಿ ದಾಖಲಾತಿ ನೀಡಬೇಕು ಎಂದು ಮಾಹಿತಿ ಹಂಚಿಕೊಂಡರು.

ಮೈಸೂರಿನ ಮೇಘನ್, ಎಂಜಿನಿಯರಿಂಗ್, ಅಗ್ರಿಕಲ್ಚರ್, ಯೋಗ ಮತ್ತು ನ್ಯಾಚುರೋಪತಿ, ಪಶು ಸಂಗೋಪನೆ, ಕೃಷಿ, ಬಿ. ಫಾರ್ಮ್, ಐದು ವಿಭಾಗದಲ್ಲೂ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನ ಹಲವು ಶಾಸಕರು ಬಿಜೆಪಿಗೆ ಬರ್ತಾರೆ: ಬಿಎಸ್‍ವೈ
ಎಂಜಿನಿಯರಿಂಗ್‍ನಲ್ಲಿ ಪ್ರೇಮಾಂಕುರ್ ಚಕ್ರಬರ್ತಿ ಬೆಂಗಳೂರು ಪಡೆದರೆ, ಯೋಗ- ನ್ಯಾಚಿರೋಪತಿಯಲ್ಲಿ ವರುಣ್ ಆದಿತ್ಯಾ ಬೆಂಗಳೂರು, ಕೃಷಿಯಲ್ಲಿ ರೀಥಮ್ ಮಂಗಳೂರು, ಪಶು ಸಂಗೋಪನೆಯಲ್ಲಿ ವರುಣ್ ಅದಿತ್ಯಾ ಬೆಂಗಳೂರು ಮತ್ತು ಬಿ. ಫಾರ್ಮ್‍ನಲ್ಲಿ ಪ್ರೇಮಾಂಕುರ್ ಚಕ್ರಬರ್ತಿ ಬೆಂಗಳೂರು ದ್ವೀತಿಯ ರ್‍ಯಾಂಕ್ ಪಡೆದಿದ್ದಾರೆ.
ಆಗಸ್ಟ್ 28 ರಿಂದ 30 ರವರೆಗೆ ಪರೀಕ್ಷೆ ನಡೆದಿತ್ತು. ಈ ಬಾರಿ 2,01,834 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ರು. 1,93,447 ಅಭ್ಯರ್ಥಿಗಳು ಪರೀಕ್ಷೆ ಹಾಜರಾಗಿದ್ದರು. 12 ಕೋವಿಡ್ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆದಿದ್ದರು. ಎಂಜಿನಿಯರ್ 1,83,231 ವಿದ್ಯಾರ್ಥಿಗಳಿಗೆ ರ್‍ಯಾಂಕ್ ಬಂದರೆ, ಕೃಷಿಯಲ್ಲಿ 1,52,518 ವಿದ್ಯಾರ್ಥಿಗಳು, ಪಶು ಸಂಗೋಪನೆಯಲ್ಲಿ 1,55,770 ವಿದ್ಯಾರ್ಥಿಗಳು, ಯೋಗ- ನ್ಯಾಚೋರೋಪತಿಯಲ್ಲಿ 1,55,910 ವಿದ್ಯಾರ್ಥಿಗಳು ಮತ್ತು ಬಿ ಫಾರ್ಮ್, ಪಾರ್ಮ್ ಡಿಯಲ್ಲಿ- 1,86,638 ರ್‍ಯಾಂಕ್ ಬಂದಿದೆ.
ಎಂಜಿನಿಯರ್
1. ಮೇಘನ್ (ಮೈಸೂರು)
2. ಪ್ರೇಮಾಂಕುರ್ ಚಕ್ರಬರ್ತಿ( ಬೆಂಗಳೂರು)
3. ಬಿ.ಡಿ.ಅನುರುದ್( ಬೆಂಗಳೂರು)
ಬಿಎನ್‍ವೈಎಸ್ ರಾಂಕ್
1. ಮೇಘನ್( ಮೈಸೂರು)
2. ವರುಣ್ ಆದಿತ್ಯಾ( ಬೆಂಗಳೂರು)
3. ರೀಥಮ್( ಮಂಗಳೂರು)
ಬಿಎಸ್ಸಿ- ಕೃಷಿ
1. ಮೇಘನ್ – ಮೈಸೂರು
2. ರೀಥಮ್- ಮಂಗಳೂರು
3. ಆದಿತ್ಯಾ ಪ್ರಭಾಸ್- ಬೆಂಗಳೂರು
ಬಿ.ವಿ.ಎಸ್.ಸಿ(ಪಶು ಸಂಗೋಪನೆ)
1. ಮೇಘನ್- ಮೈಸೂರು
2. ವರುಣ್ ಅದಿತ್ಯಾ-ಬೆಂಗಳೂರು
3. ರೀಥಮ್- ಮಂಗಳೂರು
ಬಿ ಫಾರ್ಮ್
1. ಮೇಘನ್- ಮೈಸೂರು
2. ಪ್ರೇಮಾಂಕುರ್ ಚಕ್ರಬರ್ತಿ- ಬೆಂಗಳೂರು
3. ಬಿ.ಎಸ್. ಅನುರುದ್ – ಬೆಂಗಳೂರು
60 ಕ್ಕೆ 55 ಕ್ಕೂ ಹೆಚ್ಚು ಅಂಕ ಪಡೆದವರು:
ಭೌತಶಾಸ್ತ್ರ – 26
ರಸಾಯನಶಾಸ್ತ್ರ- 217
ಗಣಿತ – 199
ಜೀವಶಾಸ್ತ್ರ- 5,235
60 ಕ್ಕೆ 60 ಅಂಕ ಪಡೆದವರು:
ಭೌತಶಾಸ್ತ್ರ -0
ರಸಾಯನಶಾಸ್ತ್ರ-3
ಗಣಿತ – 6
ಜೀವಶಾಸ್ತ್ರ- 50
ಪರೀಕ್ಷೆ ಬರೆದವರು ವಿವರ:
ಒಟ್ಟು ಪರೀಕ್ಷೆ ಬರೆದವರು – 1,93,447
ಹುಡುಗರು – 95,462
ಹುಡುಗಿಯರು – 97,985

ಬೆಂಗಳೂರು: ಇದೇ ಸೆಪ್ಟೆಂಬರ್ 20ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (CET) ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್‍ನಾರಾಯಣ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಳೆದ ಅಗಸ್ಟ್ 28-29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪ್ರಕ್ರಿಯೆಯನ್ನು ಯಾವುದೇ ಗೊಂದಲ-ಸಮಸ್ಯೆ ಇಲ್ಲದೆ ಪೂರ್ಣಗೊಳಿಸಲಾಗುವುದು. ಸಕಾಲಕ್ಕೆ ಫಲಿತಾಂಶ ನೀಡುವುದೂ ಸೇರಿ ನಿಗದಿತ ವೇಳಾಪಟ್ಟಿಯಂತೆ ಕೌನ್ಸಿಲಿಂಗ್ ಮುಗಿಸಲಾಗುವುದು. ಯಾವುದೇ ಕಾರಣಕ್ಕೂ ಶೈಕ್ಷಣಿಕ ವರ್ಷ ಹಳಿತಪ್ಪಲು ಬಿಡುವುದಿಲ್ಲ ಎಂದರು.

ಎಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಈ ಬಗ್ಗೆ ಮುಂದಿನ ವಾರ ಸಭೆ ಇದೆ. ಅದರಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಲ್ಲಿಟ್ಟುಕೊಂಡು ಎಲ್ಲ ಅಂಶಗಳ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಖಾಸಗಿ ಪದವಿ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳ ಮಾಡುತ್ತಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಗಮನ ಸೆಳೆದಾಗ ಉತ್ತರಿಸಿದ ಸಚಿವರು, ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶವೇ ಇಲ್ಲ. ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸಿ ಕಾಲೇಜು ನಡೆಸುವುದು ಸರಿಯಲ್ಲ, ಗುಣಮಟ್ಟದ ಶಿಕ್ಷಣ ಕೊಡುವುದಷ್ಟೇ ಸರಕಾರದ ಉದ್ದೇಶ. ಈ ಬಗ್ಗೆ ದೂರುಗಳು ಬಂದರೆ ಗಮನ ಹರಿಸಿ ಆಯಾ ಕಾಲೇಜುಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲೇ ದಾಖಲಾಗಬೇಕು. ಅಲ್ಲಿ ಕಡಿಮೆ ಶುಲ್ಕದಲ್ಲಿ ಪದವಿ ನೀಡಲಾಗುವುದು. ಅದರಲ್ಲೂ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ಸೌಲಭ್ಯವಿದೆ. ಕೆಲ ಖಾಸಗಿ ಸಂಸ್ಥೆಗಳು ಉದ್ದೇಶಪೂರ್ವಕವಾಗಿ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿವೆ. ಆ ಬಗ್ಗೆ ಕ್ರಮ ವಹಿಸಲಾಗುವುದು. ಪದವಿ ಕಾಲೇಜುಗಳಿಗೆ ಶುಲ್ಕ ನಿಗದಿ ಮಾಡಲು ಸರಕಾರದ ಮಟ್ಟದಲ್ಲಿ ಸಮಿತಿ ಇಲ್ಲ. ಹೀಗಾಗಿ ಕೆಲ ಕಾಲೇಜುಗಳು ಇದನ್ನೇ ದುರುಪಯೋಗ ಮಾಡಿಕೊಳ್ಳುತ್ತಿವೆ. ಸಮಿತಿ ಇಲ್ಲ ಎಂದ ಮಾತ್ರಕ್ಕೆ ದುಬಾರಿ ಶುಲ್ಕ ವಿಧಿಸುವ ಹಾಗಿಲ್ಲ ಎಂದ ಸಚಿವರು, ಪದವಿ ಕಾಲೇಜುಗಳಿಗೆ ಅಕ್ಟೋಬರ್ 1 ರವರೆಗೂ ದಾಖಲು ಆಗಬಹುದು. ಅದಕ್ಕೆ ಅವಕಾಶ ನೀಡಲಾಗಿದೆ ಎಂದರು.

ಸಿದ್ದರಾಮಯ್ಯ ಅವರಿಗೆ ಅಧಿವೇಶನದಲ್ಲಿ ಉತ್ತರ:
ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಮಾಧ್ಯಮಗಳ ಮೂಲಕ, ವಿವಿಧ ವೇದಿಕೆಗಳಲ್ಲಿ ಉತ್ತರ ನೀಡಲಾಗಿದೆ. ಇದರ ಜೊತೆಗೆ ಅವರಿಗೆ ವಿಧಾನಮಂಡಲ ಅಧಿವೇಶನದಲ್ಲೂ ಸಮಗ್ರವಾಗಿ ಉತ್ತರ ಕೊಡಲಾಗುವುದು. ಕೇವಲ ರಾಜಕೀಯದ ಉದ್ದೇಶ ಇಟ್ಟುಕೊಂಡು ವಿರೋಧ ಮಾಡುವವರಿಗೆ ಏನೂ ಮಾಡಲಾಗದು. ನೀತಿಯ ಬಗ್ಗೆ ಸಮಾಜದಲ್ಲಿ ಅಪನಂಬಿಕೆ ಮೂಡಿಸಲು ವಿರೋಧ ಪಕ್ಷಗಳು ಹೀಗೆ ಆರೋಪ ಮಾಡುತ್ತಿವೆ. ಇದು ಕೇವಲ ಒಂದು ಒಳ್ಳೆಯ ಕಾರ್ಯಕ್ರಮದ ವಿರುದ್ಧ ಅಪಪ್ರಚಾರ ಮಾಡುವ ಹುನ್ನಾರವಷ್ಟೇ ಎಂದು ದೂರಿದರು.

ಹೊಸ ಶಿಕ್ಷಣ ನೀತಿಯ ಪ್ರಕ್ರಿಯೆಗಳು ಪ್ರಾರಂಭವಾಗಿ 7 ವರ್ಷಗಳೇ ಆಗಿದ್ದು, ಪ್ರಸಕ್ತ ವರ್ಷದಿಂದ ಜಾರಿ ಮಾಡಲಾಗುತ್ತಿದೆ. ಶಿಕ್ಷಣದ ವ್ಯವಸ್ಥೆಯಲ್ಲಿ ಇರುವ ನ್ಯೂನತೆಗಳನ್ನು ಸರಿಪಡಿಸಲು ಇದನ್ನು ತರಲಾಗಿದೆ. ಸಾಕಷ್ಟು ಪೂರ್ವಸಿದ್ಧತೆ, ಚರ್ಚೆ, ತಯಾರಿ ಮಾಡಿಕೊಂಡೇ ಶಿಕ್ಷಣ ನೀತಿಯನ್ನು ಜಾರಿ ಮಾಡಲಾಗುತ್ತಿದೆಯೇ ಹೊರತು ಆತುರಾತುರವಾಗಿ ತರುತ್ತಿರುವುದಲ್ಲ ಎಂದು ಸಚಿವರು ಸ್ಪಷ್ಟ ಮಾತುಗಳಲ್ಲಿ ತಿಳಿಸಿದರು. ಇದನ್ನೂ ಓದಿ: ನಾವು ಕಾಶ್ಮೀರಿ ಮುಸ್ಲಿಮರಿಗಾಗಿ ದನಿ ಎತ್ತುತ್ತೇವೆ: ತಾಲಿಬಾನ್

ಸಿದ್ದರಾಮಯ್ಯ ಅವರು ಓರ್ವ ಹಿರಿಯ ರಾಜಕಾರಣಿ. ಇಂಥ ಪ್ರಕ್ರಿಯೆಗಳೆಲ್ಲ ಹೇಗೆ ನಡೆಯುತ್ತವೆ ಎನ್ನುವುದು ಅವರಿಗೆ ಗೊತ್ತಿಲ್ಲದೆ ಇಲ್ಲ. ಕೇವಲ ಅವರು ರಾಜಕಾರಣ ಮಾಡುತ್ತಿದ್ದಾರೆ. ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ ಬಳಿಕ ಅನುಷ್ಠಾನ ಮಾಡಲಾಗುತ್ತಿದೆ. ಸಂಪುಟದಲ್ಲೂ ಚರ್ಚಿಸಿ ಒಪ್ಪಿಗೆ ಪಡೆಯಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಸಂಪೂರ್ಣವಾಗಿ ವಿದ್ಯಾರ್ಥಿ ಕೇಂದ್ರಿತ. ಮಕ್ಕಳ ಅಭಿವೃದ್ಧಿಗೆ ಪೂರಕವಾಗಿದೆ. ಈ ಬಗ್ಗೆ ಎಲ್ಲಿ ಬೇಕಾದರೂ ಚರ್ಚೆ ಮಾಡಲು ನಾವು ತಯಾರಿದ್ದೇವೆ ಎಂದು ಸಚಿವರು ತಿಳಿಸಿದರು.

ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ-2021 ಪರೀಕ್ಷೆ ಬರೆಯಲು ಆನ್‍ಲೈನ್ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 16ರವರೆಗೆ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಡಿಸಿಎಂ ಅವರು, ಅರ್ಜಿ ಸಲ್ಲಿಕೆಯ ಜೊತೆಗೆ ಶುಲ್ಕ ಪಾವತಿಯನ್ನು ಜುಲೈ 19ರವರೆಗೂ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಸಿಇಟಿ ವಿದ್ಯಾರ್ಥಿಗಳಿಗೆ ಕೋವಿಡ್ ರಕ್ಷಕ-ಪರೀಕ್ಷಾ ಪ್ರಾಧಿಕಾರಕ್ಕೆ 2 ಲಕ್ಷ ಸರ್ಜಿಕಲ್ ಮಾಸ್ಕ್ – ಡಿಸಿಎಂಗೆ ಹಸ್ತಾಂತರ

ಪೋಷಕರು ಮತ್ತು ವಿದ್ಯಾರ್ಥಿಗಳು ಮನವಿ ಮಾಡಿದ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ವಿಶೇಷ ವರ್ಗದ ಪ್ರಮಾಣ ಪತ್ರಗಳನ್ನು ಸಲ್ಲಿಸಲು ಜುಲೈ 14ರಿಂದ 20ರವರೆಗೆ ಅವಕಾಶ ನೀಡಲಾಗಿದೆ. ಎನ್‍ಸಿಸಿ, ಕ್ರೀಡೆ, ರಕ್ಷಣೆ, ರಕ್ಷಣೆ (ನಿವೃತ್ತ), ಸ್ಕೌಟ್ಸ್ ಮತ್ತು ಗೈಡ್ಸ್ ವರ್ಗಗಳನ್ನು ಕ್ಲೇಮ್ ಮಾಡುವ ಅಭ್ಯರ್ಥಿಗಳು ನಿಗದಿಪಡಿಸಿರುವ ತಮಗೆ ಹತ್ತಿರವಾದ ಯಾವುದಾದರೂ ಕೇಂದ್ರಕ್ಕೆ ತೆರಳಿ ಪ್ರಮಾಣ ಪತ್ರಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ http://kea.kar.nic.in ವೆಬ್‍ತಾಣಕ್ಕೆ ಭೇಟಿ ನೀಡಿ ವಿವರ ಪಡೆಯಬಹುದು ಎಂದು ಡಿಸಿಎಂ ತಿಳಿಸಿದ್ದಾರೆ.

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ರೈನ್ ಬೋ ಆಸ್ಪತ್ರೆ ಹಾಗೂ ಎಇಎಸ್ (Advanced Educational Services) ಸಂಸ್ಥೆ ಸೇರಿ ಈ ವರ್ಷ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಬರೆಯುವ ವಿದ್ಯಾರ್ಥಿಗಳಿಗೆ ಕೋವಿಡ್ ರಕ್ಷಣೆಗಾಗಿ 2 ಲಕ್ಷ ಸರ್ಜಿಕಲ್ ಮಾಸ್ಕ್‍ಗಳನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರಕ್ಕೆ ಕೊಡುಗೆಯಾಗಿ ನೀಡಿವೆ.
ಬೆಂಗಳೂರಿನಲ್ಲಿಂದು ಈ ಸಂಸ್ಥೆಗಳ ಉನ್ನತ ಪ್ರತಿನಿಧಿಗಳು ಸಾಂಕೇತಿಕವಾಗಿ ಸರ್ಜಿಕಲ್ ಮಾಸ್ಕ್ ಗಳನ್ನು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರಿಗೆ ಹಸ್ತಾಂತರ ಮಾಡಿದರು.
Advanced Educational Services ಹಾಗೂ @RCH_India ಸಹಯೋಗದೊಂದಿಗೆ CET ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗಾಗಿ 1ಲಕ್ಷ ಮಾಸ್ಕ್ ಕೊಡುಗೆ ನೀಡಿದ್ದಾರೆ. ಅಭಿನಂದನೆಗಳು!
CET ಪರೀಕ್ಷೆ ನಡೆಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ.
ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೇ ಪರೀಕ್ಷೆಗೆ ತಯಾರಾಗಿ. pic.twitter.com/j84FTHBAYE
— Dr. C.N. Ashwath Narayan (@drashwathcn) June 29, 2021
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ಖಾಸಗಿ ಆಸ್ಪತ್ರೆಗಳು ಹಾಗೂ ಸಂಘ ಸಂಸ್ಥೆಗಳು ಕೋವಿಡ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿವೆ. ಇದು ಅತ್ಯಂತ ಸಂತಸದ ಸಂಗತಿ. ಅದರಲ್ಲೂ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರೈನ್ ಬೋ ಆಸ್ಪತ್ರೆ, ಬ್ರೈಟ್ ರೈಟ್ ಹಾಗೂ ಎಇಎಸ್ (Advanced Educational Services) ಸಂಸ್ಥೆಗಳು ಸರ್ಜಿಕಲ್ ಮಾಸ್ಕ್ ಗಳನ್ನು ದಾನ ಮಾಡಿರುವುದು ಸಾರ್ಥಕ ಕಾರ್ಯ ಎಂದರು.

ಪರೀಕ್ಷೆ ಕಾಲದಲ್ಲಿ ವಿದ್ಯಾರ್ಥಿಗಳು ಸೋಂಕಿನಿಂದ ಪಾರಾಗಲು ಈ ಮಾಸ್ಕ್ ಗಳು ಪರಿಣಾಮಕಾರಿಯಾಗಿ ನೆರವಾಗುತ್ತವೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಎಇಎಸ್ ಸಂಸ್ಥಾಪಕ ನಿರ್ದೇಶಕಿ ದೀಪ್ತಿ ಅಶೋಕ್, ರೈನ್ ಬೋ ಮಕ್ಕಳ ಆಸ್ಪತ್ರೆ ಹಾಗೂ ಬ್ರೈಟ್ ರೈಟ್‍ನ ಉಪಾಧ್ಯಕ್ಷ ಅಕ್ಷಯ್ ಓಲೇಟಿ ಮುಂತಾದವರು ಸಂದರ್ಭದಲ್ಲಿ ಹಾಜರಿದ್ದರು. ಇದನ್ನೂ ಓದಿ: ಸಂಚಾರಿ ವಿಜಯ್‍ಗೆ ಗೌರವ ಸಲ್ಲಿಸಿದ ಅಮೆರಿಕದ ಫ್ರಾಂಕ್ಲಿನ್ ಥಿಯೇಟರ್

ಬೆಂಗಳೂರು: ವೃತ್ತಿಪರ ಕೋರ್ಸ್ ಸೀಟು ಹಂಚಿಕೆಗೆ ಈ ವರ್ಷ ಕೇವಲ ಸಿಇಟಿ ಪರೀಕ್ಷೆಯ ಅಂಕಗಳೇ ಮಾನದಂಡವನ್ನಾಗಿ ಪರಿಗಣಿಸಲು ಉನ್ನತ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಸಿಇಟಿ ಪರೀಕ್ಷೆ ಸಂಬಂಧ ಇಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಅಶ್ವತ್ಥನಾರಾಯಣ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು. ಸೀಟು ಹಂಚಿಕೆಗೆ ಈ ವರ್ಷ ಪಿಯುಸಿಯ ಶೇ.50 ಅಂಕ ಪರಿಗಣಿಸದೇ ಇರಲು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

ನಿಗದಿಯಂತೆ ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಕೋವಿಡ್ ಪ್ರಕರಣಗಳು ಜಾಸ್ತಿಯಾದರೆ ಮಾತ್ರ ದಿನಾಂಕವನ್ನು ಮುಂದೂಡಲು ಇಲಾಖೆ ಮುಂದಾಗಿದೆ. ಇದನ್ನೂ ಓದಿ : ಜಿಲ್ಲಾ ಪ್ರವಾಸಕ್ಕೂ ಮುನ್ನವೇ ಸಿಎಂ ಅನ್‍ಲಾಕ್ ಘೋಷಣೆ?
ಸಭೆಯಲ್ಲಿ ಸಿಇಟಿ ಪರೀಕ್ಷೆ ಬರೆಯಲು ಇದ್ದ ಅರ್ಹತೆ ಅಂಕಗಳ ಮಾನದಂಡ ಬದಲಾವಣೆಗೂ ನಿರ್ಧಾರ ಮಾಡಲಾಗಿದೆ. ಈ ವರ್ಷ ಗ್ರೇಡ್ ಆಧಾರದಲ್ಲಿ ಪಿಯುಸಿ ಫಲಿತಾಂಶ ನೀಡುತ್ತಿರುವ ಕನಿಷ್ಠ ಅಂಕಗಳ ಮಾನದಂಡ ನಿಯಮ ಸಡಿಲಿಕೆ ಮಾಡಲಾಗಿದ್ದು ವಿಜ್ಞಾನ ವಿಭಾಗದ ಎಲ್ಲಾ ವಿದ್ಯಾರ್ಥಿಗಳಿಗೂ ಸಿಇಟಿ ಬರೆಯಲು ಅವಕಾಶ ನೀಡಲಾಗಿದೆ.

ಪಿಯುಸಿಯಲ್ಲಿ ಪಾಸ್ ಆದ ವಿದ್ಯಾರ್ಥಿಗಳು ಸಿಇಟಿ ಬರೆಯಲು ಕನಿಷ್ಠ ಶೇ.40-45 ಅಂಕ ಕಡ್ಡಾಯವಾಗಿ ಪಡೆಯಬೇಕಿತ್ತು. ಈ ಅಂಕಗಳನ್ನು ಪಡೆಯದೇ ಇದ್ದಲ್ಲಿ ಸಿಇಟಿ ಬರೆಯಲು ಅರ್ಹತೆ ಪಡೆಯುತ್ತಿರಲಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಓಬಿಸಿ, ಸಾಮಾನ್ಯ ವಿದ್ಯಾರ್ಥಿಗಳಿಗೆ ಕನಿಷ್ಠ ಅಂಕ ನಿಯಮ ನಿಗದಿ ಮಾಡಲಾಗಿತ್ತು.
ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಆಯುಕ್ತ ಪ್ರದೀಪ್, ಕೆಇಎ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
ಮೊದಲನೇ ವರ್ಷದ/ ಮೊದಲನೇ ಸೆಮಿಸ್ಟರ್ ನ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನದ ಕೋರ್ಸ್‍ಗಳು ಮತ್ತು ಬಿ-ಫಾರ್ಮಾ-ಡಿ ಕೋರ್ಸ್‍ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ.