Tag: CET

  • ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ಅಂಕ ಮಾತ್ರ ಪರಿಗಣನೆ, ಶೀಘ್ರ ತೀರ್ಮಾನ: ಡಿಸಿಎಂ ಅಶ್ವತ್ಥನಾರಾಯಣ್ ಸ್ಪಷ್ಟನೆ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ಅಂಕ ಮಾತ್ರ ಪರಿಗಣನೆ, ಶೀಘ್ರ ತೀರ್ಮಾನ: ಡಿಸಿಎಂ ಅಶ್ವತ್ಥನಾರಾಯಣ್ ಸ್ಪಷ್ಟನೆ

    ಬೆಂಗಳೂರು: ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಪರೀಕ್ಷೆ ಇಲ್ಲದೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ, ನೀಟ್ ಅಂಕಗಳನ್ನು ಮಾತ್ರ ಪರಿಗಣಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶ್‌ ಕುಮಾರ್‌ ಕೊಟ್ಟಿರುವ ಸಲಹೆ ಬಗ್ಗೆ ಸದ್ಯದಲ್ಲೇ ಪರಿಶೀಲನೆ ನಡೆಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಹೇಳಿದರು.

    ಸುರೇಶ್‌ ಕುಮಾರ್‌ ಅವರು ಉತ್ತಮ ಸಲಹೆ ನೀಡಿದ್ದಾರೆ. ಎಂಜಿನಿಯರಿಂಗ್ & ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಇಂತಿಷ್ಟು ಅಂಕಗಳನ್ನು ಪಡೆಯಬೇಕಾಗಿತ್ತು. ಈಗ ಆ ಅಂಕ ಪರಿಗಣಿಸುವ ಬದಲು ಸಿಇಟಿ Rank ಪರಿಗಣಿಸುವ ಸಲಹೆಯನ್ನು ಅವರು ನೀಡಿದ್ದಾರೆ. ಈ ಬಗ್ಗೆ ಸಂಬಂಧಿತ ಅಧಿಕಾರಿಗಳು, ಉನ್ನತ ಶಿಕ್ಷಣ ತಜ್ಞರ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ಮೃಗಾಲಯಗಳನ್ನು ಉಳಿಸಿ ಬೆಳೆಸಿ, ಪ್ರಾಣಿಗಳನ್ನು ದತ್ತು ಪಡೆಯಿರಿ: ದರ್ಶನ್ ಮನವಿ

    ಅಲ್ಲದೆ, ಈ ಬದಲಾವಣೆ ಮಾಡಬೇಕಾದರೆ ಕಾಯ್ದೆಯ ತಿದ್ದುಪಡಿಯನ್ನೂ ಮಾಡಬೇಕು. ಈ ಬಗ್ಗೆ ಕಾನೂನು ತಜ್ಞರು ಹಾಗೂ ಮುಖ್ಯಮಂತ್ರಿಗಳ ಜತೆಯೂ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದರು.

  • ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಪರಿಗಣಿಸಿ- ಡಿಸಿಎಂಗೆ ಸುರೇಶ್ ಕುಮಾರ್ ಮನವಿ

    ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಪರಿಗಣಿಸಿ- ಡಿಸಿಎಂಗೆ ಸುರೇಶ್ ಕುಮಾರ್ ಮನವಿ

    ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯು ಫಲಿತಾಂಶ ಘೋಷಣಾ ಪ್ರಕ್ರಿಯೆಯಲ್ಲಿ ಆಯಾ ವಿದ್ಯಾರ್ಥಿಗಳ ಪ್ರಥಮ ಪಿಯುಸಿ ಹಾಗೂ ಎಸ್‍ಎಸ್‍ಎಲ್‍ಸಿ ಅಂಕಗಳನ್ನು ಮಾನದಂಡಗಳಾಗಿ ಪರಿಗಣಿಸಲಾಗುತ್ತಿದ್ದು, ವೃತ್ತಿಪರ ಕೋರ್ಸ್‍ಗೆ ಪ್ರವೇಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಪಿಯುಸಿ ಫಲಿತಾಂಶ ಪರಿಗಣಿಸಿ ವೇಟೇಜ್ ನೀಡುವ ಪ್ರಕ್ರಿಯೆಯನ್ನು ಕೈಬಿಟ್ಟು, ಕೇವಲ ಸಿ.ಇ.ಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ರ್ಯಾಂಕಿಂಗ್‍ಗೆ ಪರಿಗಣಿಸುವ ತೀರ್ಮಾನವನ್ನು ತೆಗೆದುಕೊಳ್ಳಬೇಕಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಉಪಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವತ್ಥನಾರಾಯಣ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

    ಪತ್ರದಲ್ಲಿ ಏನಿದೆ?

    ದಿನಾಂಕ 04.06.2021ರಂದು ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಪಡಿಸುವ ತೀರ್ಮಾನವನ್ನು ನಾವು ತೆಗೆದುಕೊಂಡಿದ್ದೇವೆ. ಕೋವಿಡ್ ಪ್ರಸರಣದ ತೀವ್ರತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಗಳ ನಡುವೆ ಸಮತೋಲನ ತರಲು ಈ ರೀತಿಯ ನಿರ್ಧಾರವು ಅವಶ್ಯಕವಾಗಿತ್ತು. ಹೀಗಾಗಿ ಈ ನಿರ್ಧಾರ ಮಾಡಲಾಗಿದೆ. ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ತೇರ್ಗಡೆ ಮಾಡುವ ನಿರ್ಧಾರದ ಹಿಂದೆ ನಾವು ನಿರ್ದಿಷ್ಟವಾದ ತರ್ಕವನ್ನು ಅನುಸರಿಸಿದ್ದೇವೆ. ಈ ವಿದ್ಯಾರ್ಥಿಗಳ ಮೊದಲ ಪಿಯುಸಿ ಅಂಕಗಳಲ್ಲದೇ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನೂ ಪರಿಗಣಿಸಿ ಅದಕ್ಕೆ ಸಮನಾದ ಸೂಕ್ತ ಮೌಲ್ಯವನ್ನು ಸೇರ್ಪಡಿಸಿ ಗ್ರೇಡಿಂಗ್ ಫಲಿತಾಂಶವನ್ನು ನೀಡಲು ಸಹ ನಿರ್ಧಾರ ಮಾಡಿದ್ದೇವೆ. ಅಲ್ಲದೇ ಯಾವುದೇ ವಿದ್ಯಾರ್ಥಿಯು ತನ್ನ ಫಲಿತಾಂಶದ ಬಗ್ಗೆ ತೃಪ್ತಿ ಹೊಂದದೇ ಇದ್ದಲ್ಲಿ ಕ್ಲಪ್ತ ಸಮಯದಲ್ಲಿ ನಡೆಸಲಾಗುವ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದಾಗಿದೆಯೆಂದೂ ಘೋಷಿಸಿದ್ದೇವೆ. ಇಂದಿನ ಸಂದರ್ಭದಲ್ಲಿ ಇದಕ್ಕಿಂತ ಪ್ರಸ್ತುತವಾದ ನಿರ್ಧಾರವನ್ನು ತೆಗೆದುಕೊಳ್ಳುವುದು ಕಷ್ಟ ಸಾಧ್ಯವಾಗಿರುತ್ತದೆ. ಇದನ್ನೂ ಓದಿ:ದ್ವಿತೀಯ ಪಿಯುಸಿ ಪಾಸ್‍ಗೆ ಹೊಸ ಮಾನದಂಡ ಪ್ರಕಟ – ಪಬ್ಲಿಕ್ ಟಿವಿ ಸಲಹೆ ಸ್ವೀಕರಿಸಿದ ಶಿಕ್ಷಣ ಇಲಾಖೆ

    ಸಾಮಾನ್ಯವಾಗಿ ದ್ವಿತೀಯ ಪಿಯು ಅಂಕಗಳನ್ನು ಸಿಇಟಿ ಪರೀಕ್ಷೆಗೆ ಪರಿಗಣಿಸಿ ಸೂಕ್ತ ವೇಟೇಜ್ ಕಲ್ಪಿಸುವ ಮೂಲಕ ಫಲಿತಾಂಶವನ್ನು ಘೋಷಿಸಲಾಗುತ್ತದೆ. ಈ ಬಾರಿಯ ಗ್ರೇಡಿಂಗ್ ಫಲಿತಾಂಶವು ವಿದ್ಯಾರ್ಥಿಗಳ ಪ್ರತಿಭೆಯನ್ನು ಖಚಿತವಾಗಿ ವ್ಯಕ್ತಪಡಿಸಿದರೂ ಅವರಿಗೆ ಅದನ್ನು ನಿರಾಕರಿಸಿ ಇನ್ನೊಮ್ಮೆ ಪರೀಕ್ಷೆ ಬರೆಯುವ ಅವಕಾಶವನ್ನು ಕಲ್ಪಿಸಲಿದೆ. ಹಾಗಾಗಿ, ಈ ಬಾರಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಸಿಇಟಿ ಪರೀಕ್ಷೆಗೆ ಗಣನೆಗೆ ತೆಗೆದುಕೊಳ್ಳುವಾಗ, ಈ ಫಲಿತಾಂಶವನ್ನು ಪ್ರಶ್ನಿಸಿ ಇನ್ನೊಮ್ಮೆ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಅನನುಕೂಲವಾಗಬಹುದು ಎಂಬುದನ್ನು ಗಮನಿಸಬೇಕಾಗುತ್ತದೆ.ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಈ ಬಾರಿಗೆ ಸೀಮಿತಗೊಂಡಂತೆ ತಮ್ಮ ಇಲಾಖೆಯು ನಡೆಸಲು ಉದ್ದೇಶಿಸಿರುವ ವೃತ್ತಿಪರ ಕೋರ್ಸ್ ದಾಖಲಾತಿಗೆ ಸಂಬಂಧಿಸಿದ ಸಿಇಟಿ ಪರೀಕ್ಷೆಗೆ ವೇಟೇಜ್ ನೀಡುವ ಪ್ರಕ್ರಿಯೆಯನ್ನು ತಾವು ಕೈಬಿಟ್ಟು, ಕೇವಲ ಸಿಇಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ರ್ಯಾಂಕಿಂಗ್‍ಗೆ ಪರಿಗಣಿಸುವ ತೀರ್ಮಾನವನ್ನು ತೆಗೆದುಕೊಳ್ಳಬೇಕಾಗಿ ತಮ್ಮನ್ನು ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.

  • ಸಿಇಟಿ ಪರೀಕ್ಷೆ ಮುಂದೂಡಿಕೆ

    ಸಿಇಟಿ ಪರೀಕ್ಷೆ ಮುಂದೂಡಿಕೆ

    ಬೆಂಗಳೂರು: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಮುಂದೂಡಿ, ದಿನಾಂಕವನ್ನು ಮರು ನಿಗದಿ ಮಾಡಿದೆ.

    ಸೋಂಕು ಹೆಚ್ಚಳವಾಗುತ್ತಿರುವ ಕಾರಣ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಮುಂದೂಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.

    ಈ ಹಿಂದೆ ಸಿಇಟಿ ಪರೀಕ್ಷೆಯನ್ನು ಜುಲೈ 7 ಮತ್ತು 8ರಂದು ನಡೆಸಲು ತೀರ್ಮಾನಿಸಲಾಗಿತ್ತು, ಆದರೆ ಇದೀಗ ಸಿಇಟಿ ಪರೀಕ್ಷೆಯನ್ನು ಮುಂದೂಡಿ, ಆಗಸ್ಟ್ 28 ಮತ್ತು 29ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.

    ಪರಿಷ್ಕ್ರತ ಪಟ್ಟಿಯಂತೆ ಆಗಸ್ಟ್ 28ರಂದು ಜೀವಶಾಸ್ತ್ರ, ಗಣಿತ ಪರೀಕ್ಷೆ ನಡೆಯಲಿದೆ. ಆಗಸ್ಟ್ 29ರಂದು ಭೌತಶಾಸ್ತ್ರ ಮತ್ತು ರಾಸಾಯನ ಶಾಸ್ತ್ರ ಪರೀಕ್ಷೆಗಳು ನಡಡೆಯಲಿದೆ. ಇದೇ ವೇಳೆ ಜುಲೈ 9ರಂದು ಗಡಿನಾಡು, ಹೊರನಾಡು ಕನ್ನಡಿಗರಿಗೆ ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಆ ಪರೀಕ್ಷೆಯು ಆಗಸ್ಟ್ 30 ರಂದು ನಡೆಯಲಿದೆ.

  • ಸಿಇಟಿ, ನೀಟ್ ಜತೆಗೆ ಜೆಇಇ ವಿದ್ಯಾರ್ಥಿಗಳಿಗೂ ಆನ್‍ಲೈನ್ ಕೋಚಿಂಗ್; ಗೆಟ್-ಸೆಟ್ ಗೋ ವ್ಯವಸ್ಥೆಗೆ ಸಿಎಂ ಚಾಲನೆ

    ಸಿಇಟಿ, ನೀಟ್ ಜತೆಗೆ ಜೆಇಇ ವಿದ್ಯಾರ್ಥಿಗಳಿಗೂ ಆನ್‍ಲೈನ್ ಕೋಚಿಂಗ್; ಗೆಟ್-ಸೆಟ್ ಗೋ ವ್ಯವಸ್ಥೆಗೆ ಸಿಎಂ ಚಾಲನೆ

    ಬೆಂಗಳೂರು: ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ, ನೀಟ್ ಜತೆಗೆ ಜೆಇಇ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ಕೋಚಿಂಗ್ ನೀಡಲಾಗುವ ಗೆಟ್-ಸೆಟ್ ಗೋ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

    ವಿಧಾನಸೌಧದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಗೆಟ್-ಸೆಟ್ ಗೋ? (GetCETgo) ವ್ಯವಸ್ಥೆಗೆ ಚಾಲನೆ ಕೊಟ್ಟರಲ್ಲದೆ “ಈವರೆಗೆ ಸಿಇಟಿ ಮತ್ತು ನೀಟ್‍ಗೆ ಮಾತ್ರ ತರಬೇತಿ ನೀಡಲಾಗುತ್ತಿತ್ತು. ಈ ವರ್ಷದಿಂದ ಹೆಚ್ಚುವರಿಯಾಗಿ ಜೆಇಇ ವಿದ್ಯಾರ್ಥಿಗಳಿಗೂ ಆನ್‍ಲೈನ್ ತರಬೇತಿ ಕೊಡಲಾಗುವುದು. ಈ ಸೌಲಭ್ಯವನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು” ಎಂದರು.

    ಉನ್ನತ ಶಿಕ್ಷಣ ಇಲಾಖೆ ಕೈಗೊಂಡಿರುವ ಈ ಉಪ ಕ್ರಮದಿಂದ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಜತೆಗೆ ಸಮಗ್ರ ಕಲಿಕಾ ವ್ಯವಸ್ಥೆ (ಎಲ್‍ಎಂಎಸ್) ಕೂಡ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ. ಈ ನಿಟ್ಟಿನಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಅವರ ಕೈಗೊಂಡ ಕ್ರಮಗಳು ಮೆಚ್ವುವಂತಹದ್ದು ಎಂದು ಮುಖ್ಯಮಂತ್ರಿಗಳು ಹೇಳಿದರು.

    ವರ್ಷಪೂರ್ತಿ ಗೆಟ್ ಸೆಟ್ ಗೋ:
    ಈ ಸಂದರ್ಭದಲ್ಲಿ ಗೆಟ್ ಸೆಟ್ ಗೋ ಬಗ್ಗೆ ಸಮಗ್ರ ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು; “ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಬರುವ ಶೈಕ್ಷಣಿಕ ವರ್ಷದಿಂದ ಇಡೀ ವರ್ಷಪೂರ್ತಿ ಗೆಟ್ ಸೆಟ್ ಗೋ ಮೂಲಕ ಕೋಚಿಂಗ್ ವ್ಯವಸ್ಥೆ ಇರುತ್ತದೆ” ಎಂದರು.

    ಐಐಟಿಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳ ಪ್ರಮಾಣವನ್ನು ಹೆಚ್ಚಿಸುವ ಗುರಿಯೊಂದಿಗೆ ಈ ಹೆಜ್ಜೆ ಇಡಲಾಗುತ್ತಿದೆ. ಜೆಇಇ, ನೀಟ್ ಪರೀಕ್ಷೆಗಳಲ್ಲಿ ಕನ್ನಡ ವಿದ್ಯಾರ್ಥಿಗಳು ಹೆಚ್ಚು ರ‍್ಯಾಂಕ್‌ಗಳನ್ನು  ಪಡೆಯುವ ನಿಟ್ಟಿನಲ್ಲಿ ಇದು ಸಹಕಾರಿ ಆಗಲಿದೆ. ಜತೆಗೆ ಯಾವ ವಿದ್ಯಾರ್ಥಿಯೂ ಆರ್ಥಿಕ ಮುಗ್ಗಟ್ಟಿಗೆ ಸಿಲುಕದಂತೆ ವರ್ಷವಿಡೀ ಗೆಟ್ ಸೆಟ್ ಗೋ ಮೂಲಕ ಅಧ್ಯಯನ ಮಾಡಬಹುದು ಎಂದು ಡಿಸಿಎಂ ಹೇಳಿದರು.

    ಕಲಿಕೆ ಸುಲಭ ಮತ್ತು ಸರಳ:
    ಕಲಿಕೆ, ಪರಿಷ್ಕರಣೆ ಹಾಗೂ ಪರೀಕ್ಷೆ ಪರಿಕಲ್ಪನೆಯಲ್ಲಿ ಗೆಟ್ ಸೆಟ್ ಗೋ ಕೋಚಿಂಗ್ ವ್ಯವಸ್ಥೆ ರೂಪಿಸಲಾಗಿದ್ದು, ಇದರಲ್ಲಿ ನೀಟ್, ಜೆಇಇ, ಸಿಇಟಿ ಪರೀಕ್ಷಾರ್ಥಿಗಳಿಗೆ ಅತ್ಯಗತ್ಯವಾದ ಅಧ್ಯಯನ ಸಾಮಗ್ರಿಯ ಜತೆಗೆ ವಿಡಿಯೋಗಳು, ಪಠ್ಯ ಸಾರಾಂಶ, ಸಂವಾದಾತ್ಮಕ ಪರೀಕ್ಷೆಗಳು ಇರುತ್ತವೆ. ಇಡೀ ದೇಶದಲ್ಲಿಯೇ ವಿದ್ಯಾರ್ಥಿಗಳಿಗಾಗಿ ಇಂಥ ಉಪಕ್ರಮ ಕೈಗೊಂಡ ಮೊದಲ ರಾಜ್ಯ ಕರ್ನಾಟಕ ಆಗಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

    ಆಕ್ಸೆಸ್ ಹೇಗೆ?
    ಗೆಟ್ ಸೆಟ್ ಗೋ ಆನ್‍ಲೈನ್ ಫ್ಲಾಟ್‍ಫಾರಂಗೆ ಸುಲಭವಾಗಿ ಪ್ರವೇಶ ಪಡೆಯಬಹುದು. ಕರ್ನಾಟಕವೂ ಸೇರಿದಂತೆ ಸಿಇಟಿ ಬರೆಯಲಿಚ್ಚಿಸುವ ದೇಶದ ಯಾವ ವಿದ್ಯಾರ್ಥಿ ಬೇಕಾದರೂ ತನ್ನ ವಿವರಗಳನ್ನು ನಮೂದಿಸಿ ಆಕ್ಸಿಸ್ ಮಾಡಬಹುದು. ವೆಬ್‍ಸೈಟ್, ಯುಟ್ಯೂಬ್ ಅಥವಾ ಗೆಟ್ ಸೆಟ್ ಗೋ ಆಪ್ ಮೂಲಕ ಕೋಚಿಂಗ್ ಪಡೆಯಬಹುದು. ಈ ಆಪ್ ಅಂಡ್ರಾಯಿಡ್, ಐಓಎಸ್‍ನಲ್ಲೂ ಲಭ್ಯ. ಇದಕ್ಕೆ ಗೂಗಲ್ ಆಪ್ ಸ್ಟೋರ್ ನಲ್ಲಿ  4.3 ರೇಟಿಂಗ್ ಇದೆ. ವಿದ್ಯಾರ್ಥಿಗಳು getcetgo.in ವೆಬ್ ಪೋರ್ಟ್, ಗೂಗಲ್ ಪ್ಲೇಸ್ಟೋರ್ ಆಂಡ್ರಾಯ್ಡ್ ಆಪ್  getcetgo ಮೂಲಕ ಮಾಹಿತಿ ಪಡೆಯಬಹುದು ಹಾಗೂ ತಮ್ಮ ವಿವರಗಳನ್ನು ದಾಖಲಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದು ಡಿಸಿಎಂ ತಿಳಿಸಿದರು.

    ಕಳೆದ ವರ್ಷ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದ ದೀಕ್ಷಾ ಸಂಸ್ಥೆಯವರೇ ಈ ವರ್ಷವೂ ತರಬೇತಿ ನೀಡುತ್ತಿದ್ದು, ವಿದ್ಯಾರ್ಥಿ ಮತ್ತು ಪೋಷಕರು ಇನ್ನೂ ಕೋವಿಡ್ ಸಂಕಷ್ದದಿಂದ ಹೊರಬಾರದ ಹಿನ್ನೆಲೆಯಲ್ಲಿ ಸರಕಾರ ಗೆಟ್-ಸೆಟ್ ಗೋ ಕಾರ್ಯಕ್ರಮವನ್ನು ಮುಂದುವರಿಸಲು ನಿರ್ಧರಿಸಿದೆ. ಸಿಇಟಿ, ನೀಟ್ ಜತೆಗೆ ಜೆಇಇ ಪರೀಕ್ಷೆಗೂ ತಯಾರಿ ನಡೆಸುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕವೇ ಅತ್ಯುತ್ತಮ ಕೋಚಿಂಗ್ ನೀಡಲಾಗುವುದು ಎಂದು ಅವರು ತಿಳಿಸಿದರು.

    ಕಾಲೇಜುಗಳು ಸ್ಥಗಿತ ಇಲ್ಲ
    ಯಾವುದೇ ಕಾರಣಕ್ಕೂ ಆರಂಭವಾಗಿರುವ ಕಾಲೇಜುಗಳನ್ನು ಸ್ಥಗಿತ ಮಾಡುವುದಿಲ್ಲ. ಈಗಾಗಲೇ ಒಂದು ವರ್ಷ ವ್ಯರ್ಥವಾಗಿರುವುದು ಸಾಕು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

    ಬಿಎಂಎಸ್ ಕಾಲೇಜ್ ಸೇರಿ ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟೀವ್ ಬಂದಿದೆ ಎಂದು ಸುದ್ದಿಗಾರರು ಕೇಳಿದೆ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, “ವಿದ್ಯಾರ್ಥಿಗಳಿಗೆ ಆಫ್‍ಲೈನ್ ಕ್ಲಾಸ್ ಕಡ್ಡಾಯವಲ್ಲ, ಆಫ್‍ಲೈನ್ ಅಥವಾ ಆನ್‍ಲೈನ್‍ನಲ್ಲೂ ಹಾಜರಾಗಬಹುದು. ಆದರೆ, ಹಾಜರಾತಿ ಕಡ್ಡಾಯ. ಆಯಾ ಶಿಕ್ಷಣ ಸಂಸ್ಥೆಗಳು ಇನ್ನೂ ಉತ್ತಮವಾಗಿ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಬೇಕು. ಪರಿಣಾಮಕಾರಿಯಾಗಿ ಪರೀಕ್ಷೆ ಮಾಡಬೇಕು. ಸ್ಯಾನಿಟೈಸೇಷನ್, ಮಾಸ್ಕ್, ದೈಹಿಕ ಅಂತರ ಕಾಪಾಡಿಕೊಳ್ಳುವತ್ತ ಹೆಚ್ಚು ನಿಗಾ ಇಡಬೇಕು” ಎಂದು ಸಲಹೆ ಮಾಡಿದರು.

    ಯಾವುದೇ ಕಾರಣಕ್ಕೂ ಶೈಕ್ಷಣಿಕ ವರ್ಷ ವ್ಯತ್ಯಯ ಆಗಬಾರದು. ಪರಿಸ್ಥಿತಿಯನ್ನು ಎದುರಿಸಲು ಎಲ್ಲ ತಯಾರಿಯನ್ನು ಎಲ್ಲ ಶಿಕ್ಷಣ ಸಂಸ್ಥೆಗಳು ಮಾಡಿಕೊಳ್ಳಬೇಕು. ಈಗಾಗಲೇ ವ್ಯಾಕ್ಸಿನ್ ಬಂದಿದೆ. ಎರಡನೇ ಅಲೆ ಎದ್ದಿದೆ ಎನ್ನುವ ಕಾರಣಕ್ಕೆ ಆಫ್‍ಲೈನ್ ತರಗತಿಗಳನ್ನು ಸ್ಥಗಿತ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು.

    ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.ಸುರೇಶ್ ಕುಮಾರ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರನಾಯಕ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖ್ಯಸ್ಥ ವೆಂಕಟರಾಜು ಮುಂತಾದವರು ಉಪಸ್ಥಿತಿರಿದ್ದರು.

  • ಜುಲೈ 7, 8ರಂದು ವೃತ್ತಿಪರ ಕೋರ್ಸುಗಳ ಸಿಇಟಿ ಪರೀಕ್ಷೆ

    ಜುಲೈ 7, 8ರಂದು ವೃತ್ತಿಪರ ಕೋರ್ಸುಗಳ ಸಿಇಟಿ ಪರೀಕ್ಷೆ

    ಬೆಂಗಳೂರು: ಪ್ರಸಕ್ತ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜುಲೈ 7 ಮತ್ತು 8ರಂದು ನಡೆಯಲಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಶನಿವಾರ ಪ್ರಕಟಿಸಿದ್ದಾರೆ.

    ವೇಳಾಪಟ್ಟಿ ಹೀಗಿದೆ:
    7-7-2021 ಬುಧವಾರ- ಬೆಳಗ್ಗೆ 10.30ರಿಂದ 11.50: ಜೀವವಿಜ್ಞಾನ
    7-7-2021 ಬುಧವಾರ- ಮಧ್ಯಾಹ್ನ 2.30ರಿಂದ 3.50: ಗಣಿತ
    8-7-2021 ಗುರುವಾರ- ಬೆಳಗ್ಗೆ 10.30ರಿಂದ 11.50: ಭೌತ ವಿಜ್ಞಾನ
    8-7-2021 ಗುರುವಾರ- ಮಧ್ಯಾಹ್ನ 2.30ರಿಂದ 3.50: ರಸಾಯನವಿಜ್ಞಾನ
    9-7-2021 ಶುಕ್ರವಾರ- ಬೆಳಗ್ಗೆ 11.30ರಿಂದ 12.30: ಕನ್ನಡ (ಬೆಂಗಳೂರಿನಲ್ಲಿ ಮಾತ್ರ)

    ಕನ್ನಡ ಪರೀಕ್ಷೆಯನ್ನು ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳು ಬರೆಯಲಿದ್ದಾರೆ ಎಂದ ಡಿಸಿಎಂ ಅವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುವೈದ್ಯ, ಯೋಗ ಮತ್ತು ನ್ಯಾಚುರೋಪಥಿ, ಬಿ ಫಾರ್ಮ, ಫಾರ್ಮ-ಡಿ ಸೇರಿ ಇನ್ನಿತರೆ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಆಯೋಜಿಸಿದೆ.

    ರಾಜ್ಯದಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ, ಸಿಬಿಎಸ್‍ಸಿ 12ನೇ ತರಗತಿ ಪರೀಕ್ಷೆ ಹಾಗೂ ಇತರೆ ರಾಜ್ಯಗಳ ಸಿಇಟಿ ಪರೀಕ್ಷೆಗಳ ವೇಳಾಪಟ್ಟಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರಾಜ್ಯದ ಸಿಇಟಿ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

    ರಾಜ್ಯದ ದ್ವಿತೀಯ ಪಿಯಸಿ ಪರೀಕ್ಷೆ ಮೇ 24ರಿಂದ ಜೂನ್ 10ರವರೆಗೆ, ಸಿಬಿಎಸ್‍ಸಿ 12ರ ತರಗತಿ ಪರೀಕ್ಷೆ ಮೇ 4ರಿಂದ ಜೂನ್ 2ರವರೆಗೆ, ಪಶ್ಚಿಮ ಬಂಗಾಳದ ಸಿಇಟಿ ಜುಲೈ 11ರಂದು, ಜೆಇಇ (ಮೇನ್) ಫೆಬ್ರವರಿ 23ರಿಂದ ಮೇ 28ರವರೆಗೆ, ನೀಟ್ ಪರೀಕ್ಷೆ ಜುಲೈನಲ್ಲಿ, ಜೆಇಇ (ಅಡ್ವಾನ್ಸ್) ಜುಲೈ 3, ಗೋವಾ ಸಿಇಟಿ ಮೇ ನಾಲ್ಕನೇ ವಾರದಲ್ಲಿ, ರಾಜ್ಯದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜೂನ್ 14ರಿಂದ ಜೂನ್ 25ರವರೆಗೆ ನಡೆಯಲಿದೆ. ಈ ಎಲ್ಲ ವೇಳಾಪಟ್ಟಿಗಳನ್ನು ಗಣನೆಗೆ ತೆಗೆದುಕೊಂಡು ರಾಜ್ಯದ ಸಿಇಟಿ ಪರೀಕ್ಷೆ ವೇಳಾಪಟ್ಟಿ ತಯಾರಾಗಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

  • ಸಿಇಟಿ ಕೌನ್ಸೆಲಿಂಗ್- ಜ.15ರವರೆಗೆ ಕಾಲಾವಕಾಶ ಕೋರಿ ಎಐಸಿಟಿಇಗೆ ಡಿಸಿಎಂ ಪತ್ರ

    ಸಿಇಟಿ ಕೌನ್ಸೆಲಿಂಗ್- ಜ.15ರವರೆಗೆ ಕಾಲಾವಕಾಶ ಕೋರಿ ಎಐಸಿಟಿಇಗೆ ಡಿಸಿಎಂ ಪತ್ರ

    ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಖಾಲಿ ಇರುವ ಸೀಟ್ ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ಮಾಡುವ ಅಗತ್ಯ ಇದ್ದು, ಜನವರಿ 15ರವರೆಗೆ ಅವಕಾಶ ನೀಡಬೇಕು ಎಂದು ಕೋರಿ ಉನ್ನತ ಶಿಕ್ಷಣ ಇಲಾಖೆಯು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅಧ್ಯಕ್ಷರಿಗೆ ಪತ್ರ ಬರೆದಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

    ಈ ಕುರಿತು ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು, ಉಳಿದಿರುವ ವೃತ್ತಿಪರ ಕೋರ್ಸ್ ಗಳ ಸೀಟ್ ಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತೊಂದು ಸಲ, ಕೊನೆಯದಾಗಿ ಅವಕಾಶ ನೀಡಬೇಕೆಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಇದರ ಜೊತೆಗೆ ಕರ್ನಾಟಕ ಅನುದಾನರಹಿತ ಖಾಸಗಿ ಶೈಕ್ಷಣಿಕ ಕಾಲೇಜುಗಳ ಸಂಸ್ಥೆ (ಕೆಯುಪಿಇಸಿಎ) ಕೂಡ ಇಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್ ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜನವರಿ 15ರವರೆಗೆ ಕಾಲಾವಕಾಶ ವಿಸ್ತರಿಸಲು ಕೋರಿದೆ. ಈ ಅಂಶಗಳನ್ನು ಗಮನದಲ್ಲಿರಿಸಿಕೊಂಡು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪತ್ರ ಬರೆಯಲಾಗಿದೆ ಎಂದು ವಿವರಿಸಿದ್ದಾರೆ.

    ಈ ಹಿಂದಿನ ಅನುಮತಿಯ ಪ್ರಕಾರ ವೃತ್ತಿಪರ ಕೋರ್ಸ್ ಗೆ ಪ್ರವೇಶ ಪಡೆಯಲು ಡಿ.31 ಕೊನೇಯ ದಿನವಾಗಿದೆ. ಆದರೆ ಯುಜಿ ಸಿಇಟಿ ಮಾಪ್ ಅಪ್ ಸುತ್ತಿನಲ್ಲಿ ಇಂಜಿನಿಯರಿಂಗ್ ಸೀಟ್ ಪಡೆದಿದ್ದ ಕೆಲ ವಿದ್ಯಾರ್ಥಿಗಳು, ಸೀಟ್ ಹಿಂಪಡೆದು ಶುಲ್ಕ ಮರುಪಾವತಿಸುವಂತೆ ಆಗ್ರಹಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ಸೋಮವಾರ ಪೋಷಕರೊಂದಿಗೆ ಪ್ರತಿಭಟನೆ ನಡೆಸಿದ್ದರು.

    ಈ ವೇಳೆ ಇಂಜಿನಿಯರಿಂಗ್ ಬದಲು ಆಯುಷ್, ಬಿಎಸ್ಸಿ, ಬಿ.ಕಾಂ. ಅಥವಾ ಇನ್ನಿತರ ಕೋರ್ಸ್ ಓದಲು ಇಚ್ಛಿಸುತ್ತೇವೆ. ಆಯುಷ್ ಕೋರ್ಸ್ ಗಳಿಗೆ ಇನ್ನೂ ಕೌನ್ಸೆಲಿಂಗ್ ನಡೆಸಿಲ್ಲ. ಆದ್ದರಿಂದ ಇಂಜಿನಿಯರಿಂಗ್ ಸೀಟ್ ಹಿಂದಕ್ಕೆ ಪಡೆದರೆ ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿಗಳು ಹೇಳಿದ್ದರು.

  • ಸಿಇಟಿಯಲ್ಲಿ ಪುತ್ತೂರು ವಿವೇಕಾನಂದ ವಿದ್ಯಾರ್ಥಿ ಗೌರೀಶ್ ಕಜಂಪಾಡಿಗೆ 9ನೇ ರ‍್ಯಾಂಕ್

    ಸಿಇಟಿಯಲ್ಲಿ ಪುತ್ತೂರು ವಿವೇಕಾನಂದ ವಿದ್ಯಾರ್ಥಿ ಗೌರೀಶ್ ಕಜಂಪಾಡಿಗೆ 9ನೇ ರ‍್ಯಾಂಕ್

    ಮಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ವೃತ್ತಿಪರ ಕೋರ್ಸುಗಳಿಗೆ ನಡೆಸಿದ 2020 ನೇ ಸಾಲಿನ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಹೊರ ಬಿದ್ದಿದೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಗೌರೀಶ್ ಕಜಂಪಾಡಿ ಅವರಿಗೆ ಎಂಜಿನಿಯರಿಂಗ್‍ನಲ್ಲಿ ರಾಜ್ಯಕ್ಕೆ 9ನೇ ರ‍್ಯಾಂಕ್ ಹಾಗೂ ಫಾರ್ಮಾದಲ್ಲಿ 10ನೇ ರ‍್ಯಾಂಕ್ ಲಭಿಸಿದೆ.

    ಇವರು ಪೆರ್ಲದ ಬಾಲರಾಜ್ ಹಾಗೂ ರಾಜನಂದಿನಿ ಕಜಂಪಾಡಿ ಇವರ ಪುತ್ರ. ಗೌರೀಶ್ 99.864 ಅಂಕಗಳೊಂದಿಗೆ ಜಿಇಇ 2020ರ ದಕ್ಷಿಣ ಕನ್ನಡದ ಟಾಪರ್ ಹಾಗೂ ಕೆವಿಪಿವೈ 2019 ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದ 454 ನೇ ರ‍್ಯಾಂಕ್ ಸಾಧನೆ ಮಾಡಿದ್ದಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ. ಇದನ್ನೂ ಓದಿ: ಸಿಇಟಿ ಫಲಿತಾಂಶ ಪ್ರಕಟ – ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳ ವಿವರ ಇಲ್ಲಿದೆ

    ಬೆಂಗಳೂರಿನ ಆರ್‌ವಿ ಪಿಯು ಕಾಲೇಜಿನ ರಕ್ಷಿತ್ ಎಂ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಎಂಜಿನಿಯರಿಂಗ್ ವಿಭಾಗದ ರ‍್ಯಾಂಕ್ ವಿಜೇತರ ಪಟ್ಟಿ ಇಂತಿದೆ.
    1. ರಕ್ಷಿತ್ ಎಂ- ಆರ್‌ವಿವಿ ಕಾಲೇಜ್ ಬೆಂಗಳೂರು
    2. ಶುಭನ – ಶ್ರೀ ಚೈತ್ಯನ್ಯ ಟೆಕ್ನೋ ಸ್ಕೂಲ್ ಬೆಂಗಳೂರು
    3. ಎಂ ಶಶಾಂಕ್ ಬಾಲಾಜಿ – ಬೇಸ್ ಪಿಯು ಕಾಲೇಜ್ ಹುಬ್ಬಳ್ಳಿ
    4. ಶಶಾಂಕ್ ಪಿ – ಎಕ್ಸ್ ಪರ್ಟ್ ಪಿಯು ಕಾಲೇಜ್, ಮಂಗಳೂರು
    5. ಸಂದೀಪ್ ನಾಸ್ಕರ್ – ಹೊರ ರಾಜ್ಯದ ವಿದ್ಯಾರ್ಥಿ
    6. ನಕುಲ್ ಅಭಯ್ – ವಿದ್ಯಾನಿಕೇತನ ಕಾಲೇಜ್, ಹುಬ್ಬಳ್ಳಿ
    7. ಎಸ್.ಶ್ರೀನಿವಾಸ್ – ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ಬೆಂಗಳೂರು
    8. ಅದ್ವೈತ್ ಪ್ರಸಾದ್ – ಏರ್‍ಫೋರ್ಸ್ ಸ್ಕೂಲ್ ಹೆಬ್ಬಾಳ, ಬೆಂಗಳೂರು
    9. ಗೌರೀಶ. ಕಜಂಪಾಡಿ – ವಿವೇಕಾನಂದ ಕಾಲೇಜ್, ಪುತ್ತೂರು
    10 ದೀಪ್ತೀ ಎಸ್. ಪಾಟೀಲ್ – ಬೇಸ್ ಪಿಯು ಕಾಲೇಜ್, ಬೆಂಗಳೂರು

    ಬಿ ಫಾರ್ಮಾ
    1. ಸಾಯಿ ವಿವೇಕ್.ಪಿ – ನಾರಾಯಣ ಇ-ಟೆಕ್ನೋ ಶಾಲೆ, ಬೆಂಗಳೂರು
    2. ಸಂದೀಪನ್ ನಸ್ಕರ್ – ಹೊರ ರಾಜ್ಯ
    3. ಪವನ್ ಎಸ್. ಗೌಡ – ನಾರಾಯಣ ಪಿಯು ಕಾಲೇಜ್, ಬೆಂಗಳೂರು
    4. ಆರ್ಯನ್ ಮಹಲಿಂಗಪ್ಪ ಚನ್ನಲ್ – ಪ್ರಗತಿ ಪಬ್ಲಿಕ್ ಸೆಕ್ಟರ್ ಸ್ಕೂಲ್ ಕೋಟ
    5. ಸಂಜನಾ ಕೆ. – ಬಿಎಎಸ್‍ಇ ಪಿಯು ಕಾಲೇಜ್, ಮೈಸೂರು
    6. ಎಂ.ಶಶಾಂಕ್ ಬಾಲಾಜಿ – ಬಿಎಎಸ್‍ಇ ಪಿಯು ಕಾಲೇಜ್, ಹುಬ್ಬಳ್ಳಿ
    7. ಅರ್ನವ್ ಅಯ್ಯಪ್ಪ ಪಿ.ಪಿ. – ಆಳ್ವಾಸ್ ಪಿಯು ಕಾಲೇಜ್ ಮೂಡುಬಿದ್ರೆ, ದಕ್ಷಿಣ ಕನ್ನಡ
    8. ವರುಣ್ ಗೌಡ ಎ.ಬಿ. – ಎಕ್ಸ್ ಪರ್ಟ್ ಪಿಯು ಕಾಲೇಜ್, ಮಂಗಳೂರು
    9. ಎಂ.ಡಿ. ಅರ್ಬಾಜ್ ಅಹ್ಮದ್ – ಶಾಹೀನ್ ಇಂಡಿಪೆಂಡೆಂಟ್ ಪಿಯು ಕಾಲೇಜ್, ಬೀದರ್
    10. ಗೌರೀಶ್ ಕಜಂಪಡಿ – ವಿವೇಕಾನಂದ ಪಿಯು ಕಾಲೇಜ್ ಪುತ್ತೂರು, ದಕ್ಷಿಣ ಕನ್ನಡ

  • ಸಿಇಟಿ ಫಲಿತಾಂಶ ಪ್ರಕಟ – ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳ ವಿವರ ಇಲ್ಲಿದೆ

    ಸಿಇಟಿ ಫಲಿತಾಂಶ ಪ್ರಕಟ – ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳ ವಿವರ ಇಲ್ಲಿದೆ

    ಬೆಂಗಳೂರು: ಕೋವಿಡ್‌ 19 ಮಧ್ಯೆ ನಡೆದ ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಬೆಂಗಳೂರಿನ ಆರ್‌ವಿ ಪಿಯು ಕಾಲೇಜಿನ ರಕ್ಷಿತ್‌ ಎಂ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ.

    ಫಲಿತಾಂಶ ಪ್ರಕಟಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಅಶ್ವಥ್‌ ನಾರಾಯಣ್,‌ ಈ ಬಾರಿ ಆನ್ ಲೈನ್ ನಲ್ಲಿ ಕೌನ್ಸಿಲಿಂಗ್ ನಡೆಯುತ್ತದೆ. ವಿದ್ಯಾರ್ಥಿಗಳ ಆನ್ ಲೈನ್ ನಲ್ಲಿ ದಾಖಲಾತಿ ಅಪ್ ಲೋಡ್ ಮಾಡಬೇಕು. ಸೆಪ್ಟೆಂಬರ್ 2 ರಿಂದ ಸೆಪ್ಟೆಂಬರ್ 2 ರಿಂದ ದಾಖಲಾತಿ ಸಲ್ಲಿಕೆ ಮತ್ತು ಕೌನ್ಸಿಲಿಂಗ್ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

    ರ‍್ಯಾಂಕ್ ವಿಜೇತರ ಪಟ್ಟಿ
    ಎಂಜಿನಿಯರಿಂಗ್‌ ವಿಭಾಗ
    1. ರಕ್ಷಿತ್‌ ಎಂ – ಆರ್‌ವಿ ಕಾಲೇಜ್‌ ಬೆಂಗಳೂರು
    2. ಶುಭನ – ಶ್ರೀ ಚೈತ್ಯನ್ಯ ಟೆಕ್ನೋ ಸ್ಕೂಲ್‌ ಬೆಂಗಳೂರು
    3. ಎಂ ಶಶಾಂಕ್‌ ಬಾಲಾಜಿ – ಬೇಸ್‌ ಪಿಯು ಕಾಲೇಜ್‌ ಹುಬ್ಬಳ್ಳಿ
    4. ಶಶಾಂಕ್‌ ಪಿ – ಎಕ್ಸ್‌ಪರ್ಟ್‌ ಪಿಯು ಕಾಲೇಜ್‌, ಮಂಗಳೂರು
    5. ಸಂದೀಪ್‌ ನಾಸ್ಕರ್‌ – ಹೊರ ರಾಜ್ಯದ ವಿದ್ಯಾರ್ಥಿ
    6. ನಕುಲ್‌ ಅಭಯ್‌ – ವಿದ್ಯಾನಿಕೇತನ ಕಾಲೇಜ್‌, ಹುಬ್ಬಳ್ಳಿ
    7. ಎಸ್‌.ಶ್ರೀನಿವಾಸ್‌ – ಶ್ರೀ ಚೈತನ್ಯ ಟೆಕ್ನೋ ಸ್ಕೂಲ್‌ ಬೆಂಗಳೂರು
    8. ಅದ್ವೈತ್‌ ಪ್ರಸಾದ್‌ – ಏರ್‌ಫೋರ್ಸ್‌ ಸ್ಕೂಲ್‌ ಹೆಬ್ಬಾಳ, ಬೆಂಗಳೂರು
    9. ಗೌರೀಶ. ಕಜಂಪಾಡಿ – ವಿವೇಕಾನಂದ ಕಾಲೇಜ್‌, ಪುತ್ತೂರು
    10 ದೀಪ್ತೀ ಎಸ್‌. ಪಾಟೀಲ್‌ – ಬೇಸ್‌ ಪಿಯು ಕಾಲೇಜ್‌, ಬೆಂಗಳೂರು

    ಬಿಎಸ್‌ಸಿ ಆಗ್ರಿಕಲ್ಚರ್‌
    1. ವರುಣ್‌ ಗೌಡ- ಎಕ್ಸ್‌ಪರ್ಟ್‌ ಪಿಯು ಕಾಲೇಜ್‌ , ಮಂಗಳೂರು
    2. ಸಂಜನಾ ಕೆ – ಬೇಸ್‌ ಪಿಯು ಕಾಲೇಜ್‌ ಮೈಸೂರು
    3. ಲೋಕೇಶ್‌ ಜೋಗಿ ಬಿ ಜೋಗಿ- ರಾಮಕೃಷ್ಣ ವಿದ್ಯಾ ಶಾಲಾ ಪಿಯು ಕಾಲೇಜ್‌
    4. ಅರ್ಣವ್‌ ಅಯ್ಯಪ್ಪ – ಆಳ್ವಾಸ್‌ ಕಾಲೇಜ್‌, ಮೂಡಬಿದರೆ
    5. ಪ್ರಜ್ವಲ್‌ ಕಶ್ಯಪ್‌ – ವಿದ್ಯಾಮಂದಿರ ಇಂದು ಪಿಯು ಕಾಲೇಜ್‌, ಬೆಂಗಳೂರು
    6. ಚಿನ್ಮಯ್‌ ಎಸ್‌. ಭಾರಧ್ವಾಜ್‌ – ಸರ್‌ ಎಂವಿ ಪಿಯು ಕಾಲೇಜ್‌, ದಾವಣಗೆರೆ
    7. ಪವನ್‌ ಎಸ್‌ ಗೌಡ – ನಾರಾಯಣ ಕಾಲೇಜ್‌ ಬೆಂಗಳೂರು
    8. ಮಯೂರ್‌ ಎಸ್‌ – ಮಾಸ್ಟರ್ಸ್‌ ಪಿಯು ಕಾಲೇಜ್‌ ಹಾಸನ
    9. ಎಚ್‌. ಗೌರೀಶ್‌ – ಎಕ್ಸ್‌ಪರ್ಟ್‌ ಪಿಯು ಕಾಲೇಜ್‌ ಮಂಗಳೂರು
    10. ಜತೀನ್‌ ಎಲ್‌ ಡಿ – ಸಿಲ್ವರ್‌ ವ್ಯಾಲಿ ಪಬ್ಲಿಕ್‌ ಸ್ಕೂಲ್‌ ಬೆಂಗಳೂರು.

    ಪಶು ವೈದ್ಯಕೀಯ ವಿಭಾಗ
    1. ಸಾಯಿ ವಿವೇಕ್ ಪಿ – ನಾರಾಯಣ ಇ-ಟೆಕ್ನೋ ಸ್ಕೂಲ್, ಬೆಂಗಳೂರು
    2. ಅರ್ಯನ್ ಮಹಾಲಿಂಗಪ್ಪ ಚನ್ನಾಲ್ –  ಪ್ರಗತಿ ಪಬ್ಲಿಕ್ ಸೆಕಂಡರಿ ಸ್ಕೂಲ್, ಕೋಟಾ
    3. ಸಂಜನಾ ಕೆ –  ಬಿಎಎಸ್‍ಇ ಪಿಯು ಕಾಲೇಜ್, ಮೈಸೂರು
    4. ಪವನ್.ಎಸ್.ಗೌಡ -ನಾರಾಯಣ ಪಿಯು ಕಾಲೇಜ್, ಬೆಂಗಳೂರು
    5. ಅರ್ಣವ್ ಅಯ್ಯಪ್ಪ ಪಿ.ಪಿ – ಆಳ್ವಾಸ್ ಪಿಯು ಕಾಲೇಜ್, ಮೂಡುಬಿದ್ರೆ, ದಕ್ಷಿಣ ಕನ್ನಡ
    6. ಎಂಡಿ ಅರ್ಬಾಜ್ ಅಹ್ಮದ್ – ಶಹೀನ್ ಇಂಡಿಪೆಂಡೆಂಟ್ ಪಿಯು ಕಾಲೇಜ್, ಬೀದರ್
    7. ವರುಣ್ ಗೌಡ ಎಬಿ – ಎಕ್ಸ್‌ಪರ್ಟ್‌ಪಿಯು ಕಾಲೇಜ್, ಮಂಗಳೂರು
    8. ಸುಮನ್ ಕೆ.ಎಸ್ – ನಾರಾಯಣ ಪಿಯು ಕಾಲೇಜ್, ಬೆಂಗಳೂರು
    9. ಕಾರ್ತಿಕ್ ರೆಡ್ಡಿ -ಶಹೀನ್ ಇಂಡಿಪೆಂಡೆಂಟ್ ಪಿಯು ಕಾಲೇಜ್, ಬೀದರ್
    10. ತೇಜಸ್ ಭಟ್ ಕೆ – ಶಾರದಾ ಇಂಡಿಪೆಂಡೆಂಟ್ ಪಿಯು ಕಾಲೇಜ್, ದಕ್ಷಿಣ ಕನ್ನಡ

    ಬಿ ಫಾರ್ಮಾ
    1. ಸಾಯಿ ವಿವೇಕ್.ಪಿ – ನಾರಾಯಣ ಇ-ಟೆಕ್ನೋ ಶಾಲೆ, ಬೆಂಗಳೂರು
    2. ಸಂದೀಪನ್ ನಸ್ಕರ್ – ಹೊರ ರಾಜ್ಯ
    3. ಪವನ್ ಎಸ್. ಗೌಡ – ನಾರಾಯಣ ಪಿಯು ಕಾಲೇಜ್, ಬೆಂಗಳೂರು
    4. ಆರ್ಯನ್ ಮಹಲಿಂಗಪ್ಪ ಚನ್ನಲ್ – ಪ್ರಗತಿ ಪಬ್ಲಿಕ್ ಸೆಕ್ಟರ್ ಸ್ಕೂಲ್ ಕೋಟ
    5. ಸಂಜನಾ ಕೆ. – ಬಿಎಎಸ್‍ಇ ಪಿಯು ಕಾಲೇಜ್, ಮೈಸೂರು
    6. ಎಂ.ಶಶಾಂಕ್ ಬಾಲಾಜಿ – ಬಿಎಎಸ್‍ಇ ಪಿಯು ಕಾಲೇಜ್, ಹುಬ್ಬಳ್ಳಿ
    7. ಅರ್ನವ್ ಅಯ್ಯಪ್ಪ ಪಿ.ಪಿ. – ಆಳ್ವಾಸ್ ಪಿಯು ಕಾಲೇಜ್ ಮೂಡುಬಿದ್ರೆ, ದಕ್ಷಿಣ ಕನ್ನಡ
    8. ವರುಣ್ ಗೌಡ ಎ.ಬಿ. – ಎಕ್ಸ್‍ಪರ್ಟ್ ಪಿಯು ಕಾಲೇಜ್, ಮಂಗಳೂರು
    9. ಎಂ.ಡಿ. ಅರ್ಬಾಜ್ ಅಹ್ಮದ್ – ಶಾಹೀನ್ ಇಂಡಿಪೆಂಡೆಂಟ್ ಪಿಯು ಕಾಲೇಜ್, ಬೀದರ್
    10. ಗೌರೀಶ್ ಕಜಂಪಡಿ – ವಿವೇಕಾನಂದ ಪಿಯು ಕಾಲೇಜ್ ಪುತ್ತೂರು, ದಕ್ಷಿಣ ಕನ್ನಡ

    ನ್ಯಾಚುರೋಪಥಿ ಆ್ಯಂಡ್ ಯೋಗಿಕ್ ಸೈನ್ಸ್
    1. ಅರ್ಣವ್ ಅಯ್ಯಪ್ಪ ಪಿ.ಪಿ – ಆಳ್ವಾಸ್ ಪಿಯು ಕಾಲೇಜ್, ಮೂಡುಬಿದ್ರೆ, ದಕ್ಷಿಣ ಕನ್ನಡ
    2. ಸಂಜನಾ ಕೆ – ಬಿಎಎಸ್‍ಇ ಪಿಯು ಕಾಲೇಜ್, ಮೈಸೂರು
    3. ಸಾಯಿ ವಿವೇಕ್ ಪಿ- ನಾರಾಯಣ ಇ-ಟೆಕ್ನೋ ಸ್ಕೂಲ್, ಬೆಂಗಳೂರು
    4. ಕಾರ್ತಿಕ್ ರೆಡ್ಡಿ – ಶಹೀನ್ ಇಂಡಿಪೆಂಡೆಂಟ್ ಪಿಯು ಕಾಲೇಜ್, ಬೀದರ್
    5. ವರುಣ್ ಗೌಡ ಎಬಿ – ಎಕ್ಸ್‌ಪರ್ಟ್‌ರ್ಟ್ ಪಿಯು ಕಾಲೇಜ್, ಮಂಗಳೂರು
    6. ಪವನ್.ಎಸ್.ಗೌಡ – ನಾರಾಯಣ ಪಿಯು ಕಾಲೇಜ್, ಬೆಂಗಳೂರು
    7. ಪ್ರಜ್ವಲ್ ಕಶ್ಯಪ್ – ವಿದ್ಯಾಮಂದಿರ ಇಂಡಿಪೆಂಡೆಂಟ್ ಪಿಯು ಕಾಲೇಜು, ಬೆಂಗಳೂರು
    8. ಲೋಕೇಶ್ ಬಿ.ಜೋಗಿ – ಶ್ರೀ ರಾಮಕೃಷ್ಣ ವಿದ್ಯಾಶಾಲಾ ಪಿಯು ಕಲೇಜ್, ಮೈಸೂರು
    9. ಆರ್ಯನ್ ಮಹಾಲಿಂಗಪ್ಪ ಚನ್ನಾಲ್ – ಪ್ರಗತಿ ಪಬ್ಲಿಕ್ ಸೆಕಂಡರಿ ಸ್ಕೂಲ್, ಕೋಟಾ
    10. ಎಂಡಿ ಅರ್ಬಾಜ್ ಅಹ್ಮದ್ – ಶಹೀನ್ ಇಂಡಿಪೆಂಡೆಂಟ್ ಪಿಯು ಕಾಲೇಜ್, ಬೀದರ್

  • ಇನ್ನು ಮುಂದೆ ಕೇಂದ್ರದ ಹುದ್ದೆಗಳಿಗೆ ಒಂದೇ ಪರೀಕ್ಷೆ

    ಇನ್ನು ಮುಂದೆ ಕೇಂದ್ರದ ಹುದ್ದೆಗಳಿಗೆ ಒಂದೇ ಪರೀಕ್ಷೆ

    – ನಾನ್‌ ಗೆಜೆಟೆಡ್‌ ಹುದ್ದೆಗಳಿಗೆ ಏಕರೂಪದ ಸಿಇಟಿ
    – ಮೂರು ವರ್ಷಗಳವರೆಗೆ ಅಂಕಗಳಿಗೆ ಮಾನ್ಯತೆ
    – ದೇಶದ ವಿವಿಧ ಭಾಷೆಗಳಲ್ಲಿ ಪರೀಕ್ಷೆ

    ನವದೆಹಲಿ: ಇನ್ನು ಮುಂದೆ ಕೇಂದ್ರ ಸರ್ಕಾರದ ಹುದ್ದೆ ಪಡೆಯಲು ಹಲವು ಪರೀಕ್ಷೆಗಳನ್ನು ಬರೆಯಬೇಕಿಲ್ಲ. ಒಂದೇ ಪರೀಕ್ಷೆ ಬರೆಯುವ ಮೂಲಕ ವಿವಿಧ ಇಲಾಖೆಯ ಹುದ್ದೆಯನ್ನು ಪಡೆಯಬಹುದು.

    ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕ್ಯಾಬಿನೆಟ್‌ ಸಭೆಯಲ್ಲಿ ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್‌ಆರ್‌ಎ) ರಚನೆಗೆ ಅನುಮೋದನೆ ನೀಡಿದೆ. ಈ ವರ್ಷದ ಬಜೆಟ್‌ನಲ್ಲಿ ಎನ್‌ಆರ್‌ಎ ರಚಿಸಲಾಗುವುದು ಎಂದು ಸರ್ಕಾರ ತಿಳಿಸಿತ್ತು.

     

    ಕೇಂದ್ರ ಸರ್ಕಾರ ಇಲಾಖೆ ಮತ್ತು ಸಾರ್ವಜನಿಕ ವಲಯದಲ್ಲಿರುವ ಬ್ಯಾಂಕುಗಳ ನಾನ್‌ ಗೆಜೆಟೆಡ್‌ ಹುದ್ದೆಗಳನ್ನು ಬಯಸುವ ಮಂದಿಗೆ ಸುಲಭವಾಗಲು ಸರ್ಕಾರ ಎನ್‌ಆರ್‌ಎ ಸ್ಥಾಪನೆಗೆ ಮುಂದಾಗಿದೆ.

     

     

     

    ಯಾಕೆ ಈ ಪರೀಕ್ಷೆ?
    ಪ್ರಸ್ತುತ, ಸರ್ಕಾರಿ ಉದ್ಯೋಗಗಳನ್ನು ಬಯಸುವ ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಬಹು ನೇಮಕಾತಿ ಏಜೆನ್ಸಿಗಳು ನಡೆಸುವ ಪ್ರತ್ಯೇಕ ಪರೀಕ್ಷೆಗಳಿಗೆ ಹಾಜರಾಗಬೇಕಾಗುತ್ತದೆ. ಅಷ್ಟೇ ಅಲ್ಲದೇ ಅಭ್ಯರ್ಥಿಗಳು ಅನೇಕ ನೇಮಕಾತಿ ಏಜೆನ್ಸಿಗಳಿಗೆ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಮತ್ತು ವಿವಿಧ ಪರೀಕ್ಷೆಗಳಿಗೆ ಹಾಜರಾಗಲು ದೂರದ ಪ್ರಯಾಣ ಮಾಡಬೇಕಾಗುತ್ತದೆ. ಇದನ್ನು ತಪ್ಪಿಸಲು ಒಂದೇ ಸಿಇಟಿ ಪರೀಕ್ಷೆಯನ್ನು ರಾಷ್ಟ್ರೀಯ ನೇಮಕಾತಿ ಸಂಸ್ಥೆ ನಡೆಸಲಿದೆ. ಸಿಇಟಿ ಅಂಕ ಮೂರು ವರ್ಷಗಳವರೆಗೆ ಮಾನ್ಯವಾಗಿರುತ್ತದೆ, ಪ್ರಯತ್ನಗಳಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಸರ್ಕಾರ ತಿಳಿಸಿದೆ.

     

    ಯಾವೆಲ್ಲ ಪರೀಕ್ಷೆ?
    ಎನ್‌ಆರ್‌ಎ ಮೂರು ಹಂತದ ಪದವೀಧರ, ಹೈಯರ್ ಸೆಕೆಂಡರಿ (12 ನೇ ಪಾಸ್) ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ಮೆಟ್ರಿಕ್ಯುಲೇಟ್ (10 ನೇ ಪಾಸ್) ಅಭ್ಯರ್ಥಿಗಳಿಗೆ ತಲಾ ಪ್ರತ್ಯೇಕ ಸಿಇಟಿಯನ್ನು ನಡೆಸಿ ಅಂಕ ನೀಡುತ್ತದೆ.

    ಪ್ರಸ್ತುತ ನೇಮಕಾತಿಯನ್ನು ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ), ರೈಲ್ವೆ ನೇಮಕಾತಿ ಮಂಡಳಿಗಳು (ಆರ್‌ಆರ್‌ಬಿಎಸ್‌) ಮತ್ತು ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್‌ ಸೆಲೆಕ್ಷನ್‌( ಐಬಿಪಿಎಸ್) ಮಾಡುತ್ತದೆ. ಈಗ ಇವುಗಳು ನಡೆಸುವ ಪರೀಕ್ಷೆಗಳನ್ನು ಎನ್‌ಆರ್‌ಎ ನಡೆಸಲಿದೆ.

    ಈ ಎಲ್ಲ ಪರೀಕ್ಷೆಗಳ ಸಂಬಂಧಿಸಿದ ಪಠ್ಯಗಳು ಒಂದೇ ಆಗಿರಲಿದೆ. ಸಿಇಟಿ ಪರೀಕ್ಷೆ ದೇಶದ ಹಲವು ಭಾಷೆಗಳಲ್ಲಿ ನಡೆಯಲಿದೆ. ಎನ್‌ಆರ್‌ಎ ಸ್ಥಾಪನೆಗೆ ಕೇಂದ್ರ ಸರ್ಕಾರ 1,517.57 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ.

     

     

     

  • ಕಾಂಗ್ರೆಸ್ ನಾಯಕಿ ಮಗಳ ಸಾವು – ಯುವತಿ ತಂದೆಯಿಂದ ದೂರು ದಾಖಲು

    ಕಾಂಗ್ರೆಸ್ ನಾಯಕಿ ಮಗಳ ಸಾವು – ಯುವತಿ ತಂದೆಯಿಂದ ದೂರು ದಾಖಲು

    ಚಿಕ್ಕಬಳ್ಳಾಪುರ: ಕಾಂಗ್ರೆಸ್ ನಾಯಕಿ ಮಮತಾ ಮೂರ್ತಿ ಮಗಳ ಅನುಮಾನಸ್ಪದ ಸಾವು ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗೆ ಮೃತ ಯುವತಿಯ ತಂದೆ ವೆಂಕಟೇಶ್ ಮೂರ್ತಿ ದೂರು ನೀಡಿದ್ದಾರೆ.

    ವೆಂಕಟೇಶ್ ಮೂರ್ತಿ ದೂರಿನಲ್ಲೇನಿದೆ?
    ನನ್ನ ಮಗಳಾದ ನಿಹಾರಿಕಾ ನೇಣು ಬಿಗಿದುಕೊಂಡು ಆತಹತ್ಯೆಗೆ ಶರಣಾಗಿದ್ದಾಳೆ. ಮಗಳು ಸಿಇಟಿ ಹಾಗೂ ನೀಟ್ ಪರೀಕ್ಷೆಗೆ ತಯಾರಾಗುತ್ತಿದ್ದಳು. ಬೆಳಗಿನ ಜಾವ 3.30ರ ಸಮಯದಲ್ಲಿ ನನ್ನ ಮಗಳು ಒದಿಕೊಳ್ಳುವುದಾಗಿ ಕೋಣೆಗೆ ಹೋಗಿದ್ದಳು. ತದನಂತರ 4.20ರ ಸಮಯದಲ್ಲಿ ನನ್ನ ಪತ್ನಿ ಹಣ್ಣು ಕೊಡಲು ರೂಂ ಬಳಿ ತೆರಳಿದಾಗ ಬಾಗಿಲು ತೆಗೆಯದೆ ಒಳಭಾಗದಲ್ಲಿ ಲಾಕ್ ಮಾಡಿಕೊಂಡಿರುತ್ತಾಳೆ.

    ಇತ್ತೀಚೆಗೆ ನೀಟ್ ಪರೀಕ್ಷೆ ನಡೆಯದೆ ಮೂಂದೂಡುತ್ತಿದ್ದರಿಂದ ಬೇಸರ ಮಾಡಿಕೊಂಡು ಹಾಗೂ ಸಿಇಟಿ ಫಲಿತಾಂಶದಲ್ಲಿ ಕಡಿಮೆ ಅಂಕ ಬರುವ ಆತಂಕದಿಂದ ತನ್ನಷ್ಟಕ್ಕೆ ತಾನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನನ್ನ ಮಗಳ ಸಾವಿಗೆ ಬೇರೆ ಯಾವುದೇ ಕಾರಣವಿಲ್ಲ ಅಂತ ಮೃತ ಯುವತಿಯ ತಂದೆ ಶಿಡ್ಲಘಟ್ಟ ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶ್ ಮೂರ್ತಿ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಇಂದು ಬೆಳಗ್ಗೆ ನನ್ನ ಹೆಂಡತಿ ಕರೆ ಮಾಡಿ ಬಾಗಿಲು ತೆರೆಯದ ವಿಷಯ ತಿಳಿಸಿದಾಗ ನಾನು ಶಿಡ್ಲಘಟ್ಟ ಪ್ರವಾಸಿ ಮಂದಿರದಿಂದ ಮನೆಗೆ ಬಂದೆ. ಬಾಗಿಲು ಒಡೆದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ತದನಂತರ ಅಲ್ಪ ಸ್ವಲ್ಪ ಉಸಿರಾಡುತ್ತಿದ್ದನ್ನ ಕಂಡು ಚಿಕಿತ್ಸೆಗಾಗಿ ಮಗಳನ್ನ ಅಂಬ್ಯುಲೆನ್ಸ್ ಮೂಲಕ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆ ಗೆ ಕರೆದುಕೊಂಡು ಹೋದೆ. ಆದರೆ ಮಾರ್ಗ ಮಧ್ಯೆ ಮಗಳು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು ಅಂತ ದೂರಿನಲ್ಲಿ ಉಲ್ಲೇಖಿಸಿಲಾಗಿದೆ.

    ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಬಳ್ಳಾಪುರ ನಗರ ಪೊಲೀಸರು ಮೃತದೇಹವನ್ನ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆ ಶವಾಗಾರದಿಂದ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.