Tag: Chadchan

  • ವಿಜಯಪುರ | SBI ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಗಳು ಅರೆಸ್ಟ್‌

    ವಿಜಯಪುರ | SBI ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಗಳು ಅರೆಸ್ಟ್‌

    ವಿಜಯಪುರ: ಜಿಲ್ಲೆಯ ಚಡಚಣ ಶಾಖೆಯ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣದ (Bank Robbery Case) ಆರೋಪಿಗಳನ್ನ ಬಂಧಿಸುವಲ್ಲಿ ವಿಜಯಪುರ ಪೋಲಿಸರು ಯಶಸ್ವಿಯಾಗಿದ್ದರೆ.

    ಒಟ್ಟು ನಾಲ್ವರು ಆರೋಪಿಗಳನ್ನ ಪೊಲೀಸರು (Chadchan Police) ಬಂಧಿಸಿದ್ದಾರೆ. ಬಿಹಾರ ರಾಜ್ಯದ ರಾಕೇಶ ಕುಮಾರ್‌ ಸಹಾನಿ, ರಾಜಕುಮಾರ ಪಾಸ್ವಾನ, ರಕ್ಷಕ ಕುಮಾರ್ ಮಾತೋ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿರೆಲ್ಲರೂ 21, 22 ವಯಸ್ಸಿನ ಯುವಕರು. ಇದನ್ನೂ ಓದಿ: ವಿಜಯಪುರ| ಎಸ್‌ಬಿಐ ಬ್ಯಾಂಕ್ ದರೋಡೆ ಕೇಸ್ – 3 ತಿಂಗಳು ರಜೆಯಲ್ಲಿದ್ದ ಸೆಕ್ಯುರಿಟಿ ಗಾರ್ಡ್‌; ಚಿನ್ನಾಭರಣ ಇಟ್ಟ ಗ್ರಾಹಕರು ಕಂಗಾಲು

    Robbery of Rs 8 crore cash 50 kg gold jewellery at gunpoint to SBI staff chadchana Vijayapur

    ಈಗ ಬಂಧಿಸ‌ಲಾ ಮೂವರು ಆರೋಪಿಗಳು ಅಕ್ರಮವಾಗಿ ಪಿಸ್ತೂಲ್ ಪೂರೈಕೆ ಹಾಗೂ ಕೃತ್ಯಕ್ಕೆ ಸಹಕಾರ ನೀಡಿದ್ದರು. ಮತ್ತೋರ್ವ ಆರೋಪಿ ಮಹಾರಾಷ್ಟ್ರ ರಾಜ್ಯದ ಪ್ರಮುಖ ಆರೋಪಿಯಾಗಿದ್ದು, ಅ.7ರಂದೇ ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿತ್ತು. ಆದ್ರೆ ಆತನ ಹೆಸರನ್ನ ಬಹಿರಂಗಪಡಿಸಿಲ್ಲ.

    ಬ್ಯಾಂಕ್‌ ದರೋಡೆ ಪ್ರಕರಣದಲ್ಲಿ ಈವರೆಗೆ 9.1 ಕೆಜಿ ಚಿನ್ನ, 86,31,220 ರೂ. ನಗದು ಜಪ್ತಿ ಮಾಡಲಾಗಿದೆ. ಚಡಚಣ ಬ್ಯಾಂಕ್ ದರೋಡೆಯಲ್ಲಿ ಒಟ್ಟು ನಾಲ್ವರ ಬಂಧನವಾಗಿದ್ದು, ತನಿಖೆ ಮುಂದುವರೆದಿದೆ ಅಂತಾ ಎಡಿಜಿಪಿ ಆರ್ ಹಿತೇಂದ್ರ ಹಾಗೂ ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ 

    vijayapura SBI bank robbery

    ಏನಿದು ಕೇಸ್‌?
    ಜಿಲ್ಲೆಯ ಚಡಚಣ ಎಸ್‌ಬಿಐ ಬ್ಯಾಂಕ್‌ನಲ್ಲಿ 1 ಕೋಟಿ ರೂ. ನಗದು, 12 ರಿಂದ 13 ಕೆ.ಜಿ ಚಿನ್ನ ದರೋಡೆಯಾಗಿದೆ. ಸಾಲಕ್ಕಾಗಿ ಅಡವಿಟ್ಟಿದ್ದ 12-13 ಕೆಜಿ ಚಿನ್ನ ದರೋಡೆಯಾಗಿರುವುದಾಗಿ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಪ್ರಾಥಮಿಕ ಮಾಹಿತಿ ನೀಡಿದ್ದರು.

    ಐದಕ್ಕೂ ಹೆಚ್ಚು ಮಂದಿ ಮುಸುಕುಧಾರಿ ದರೋಡೆಕೋರರಿಂದ ಕೃತ್ಯ ನಡೆದಿತ್ತು. ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್‌ನಲ್ಲಿನ ಮ್ಯಾನೇಜರ್, ಕ್ಯಾಶಿಯರ್ ಹಾಗೂ ಇತರೆ ಸಿಬ್ಬಂದಿ ಕೈಕಾಲು ಕಟ್ಟಿ ಹಾಕಿ ಕೂಡಿ ಹಾಕಿ ದರೋಡೆ ನಡೆಸಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು. ಬ್ಯಾಂಕ್‌ನಲ್ಲಿದ್ದ ಸಿಸಿಟಿವಿ ಕ್ಯಾಮೆರಾ, ಹಾರ್ಡ್ ಡಿಸ್ಕ್ ವಶಕ್ಕೆ ಪಡೆದು ತೀವ್ರ ತಪಾಸಣೆ ನಡೆಸಿದ್ದರು. ಇದನ್ನೂ ಓದಿ: ಉ.ಕರ್ನಾಟಕದಲ್ಲಿ ಪ್ರವಾಹ – ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ

  • ವಿಜಯಪುರ| ಎಸ್‌ಬಿಐ ಬ್ಯಾಂಕ್‌ನಲ್ಲಿ ದರೋಡೆಯಾಗಿದ್ದ ಚಿನ್ನಾಭರಣ, ನಗದು ಮಹಾರಾಷ್ಟ್ರದಲ್ಲಿ ಪತ್ತೆ

    ವಿಜಯಪುರ| ಎಸ್‌ಬಿಐ ಬ್ಯಾಂಕ್‌ನಲ್ಲಿ ದರೋಡೆಯಾಗಿದ್ದ ಚಿನ್ನಾಭರಣ, ನಗದು ಮಹಾರಾಷ್ಟ್ರದಲ್ಲಿ ಪತ್ತೆ

    – ವಾಹನ ಬಿಟ್ಟು ಪರಾರಿಯಾಗಿದ್ದ ಗ್ರಾಮದಲ್ಲೇ ಬ್ಯಾಗ್ ಪತ್ತೆ

    ವಿಜಯಪುರ: ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ (SBI Bank Robbery) ಪ್ರಕರಣದಲ್ಲಿ ದೋಚಿದ್ದ ಚಿನ್ನಾಭರಣ ಪತ್ತೆ ಹಚ್ಚುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಸದ್ಯ ಚಿನ್ನಾಭರಣ, ನಗದಿನ ಬ್ಯಾಗ್ ಪತ್ತೆಯಾಗಿದೆ. ದರೋಡೆಗೆ ಬಳಿಸಿದ ವಾಹನದಲ್ಲೂ ಸ್ವಲ್ಪ ಹಣ, ಚಿನ್ನಾಭರಣ ಪತ್ತೆಯಾಗಿದೆ.

    ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಕಳೆದ 16 ರಂದು ಸಂಜೆ 6ರ ಸುಮಾರಿಗೆ ದರೋಡೆ ನಡೆದಿತ್ತು. ಐದು ಜನ ದರೋಡೆಕೋರರ ತಂಡ ಪಿಸ್ತೂಲ್ ತೋರಿಸಿ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಪರಾರಿಯಾಗುವ ವೇಳೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮಂಗಳವಾಡೆ ತಾಲೂಕಿನ ಹುಲ್ಲಜಂತಿ ಗ್ರಾಮದಲ್ಲಿ ದರೋಡೆಕೊರರ ವಾಹನ ಬೈಕ್ ಒಂದಕ್ಕೆ ಡಿಕ್ಕಿಯಾಗಿ ಗಲಾಟೆ ನಡೆದಿತ್ತು. ಆಗ ವಾಹನವನ್ನು ಅಲ್ಲೆ ಬಿಟ್ಟು ದರೋಡೆಕೋರರು ನಗದು, ಚಿನ್ನಾಭರಣದ ಬ್ಯಾಗ್ ತೆಗೆದುಕೊಂಡು ಪರಾರಿಯಾಗಿದ್ದರು. ಆಗ ವಾಹನದಲ್ಲಿ ಚಿನ್ನಾಭರಣದ ಪ್ಯಾಕೆಟ್ ಸಿಕ್ಕಿದ್ದವು. ಆದರೆ, ಇದೀಗ ಮತ್ತೊಂದು ಬ್ಯಾಗ್ ಪತ್ತೆಯಾಗಿದೆ. ಇದನ್ನೂ ಓದಿ: 1 ಕೋಟಿ ನಗದು, 20 ಕೆಜಿ ಚಿನ್ನ ಸೇರಿ 21 ಕೋಟಿ ದರೋಡೆಯಾಗಿದೆ – ಎಸ್ಪಿ ಲಕ್ಷ್ಮಣ ನಿಂಬರಗಿ

    ನಿನ್ನೆ ಮಧ್ಯಾಹ್ನ ಮಹಾರಾಷ್ಟ್ರ ಪೊಲೀಸರು ಹಾಗೂ ವಿಜಯಪುರ ಪೊಲೀಸರು ಹುಲ್ಲಜಂತಿ ಗ್ರಾಮದಲ್ಲಿ ಸಭೆ ನಡೆಸಿದ ಗ್ರಾಮಸ್ಥರಲ್ಲಿ ದರೋಡೆಕೋರನ ಹಾಗೂ ಕಳ್ಳತನ ಬ್ಯಾಗ್‌ಗಳ ಬಗ್ಗೆ ಮಾಹಿತಿ ನೀಡಲು ಮನವಿ ಮಾಡಿದ್ದರು. ಇದಾದ ನಂತರ ಪೊಲೀಸರು ಹುಲ್ಲಜಂತಿ ಗ್ರಾಮದ ತೀವ್ರ ಶೋಧ ಕಾರ್ಯ ಮಾಡಿದ್ದರು. ಸಂಜೆ 5 ಗಂಟೆ ಸುಮಾರಿಗೆ ಗ್ರಾಮದ ಒಂದು ಪಾಳುಬಿದ್ದ ಮನೆಯ ಮೇಲ್ಛಾವಣಿಯಲ್ಲಿ ಒಂದು ಬ್ಯಾಗ್ ಪತ್ತೆಯಾಗಿದೆ. ಬ್ಯಾಗ್‌ನಲ್ಲಿ 41.04 ಲಕ್ಷ ನಗದು, 6.54 ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ಇನ್ನು ಪೊಲೀಸರ 8 ತಂಡಗಳನ್ನು ಮಾಡಿ ತನಿಖೆಯನ್ನು ಮುಂದುವರಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟನೆ ನೀಡಿದ್ದಾರೆ.

  • ವಿಜಯಪುರ| ಎಸ್‌ಬಿಐ ಬ್ಯಾಂಕ್ ದರೋಡೆ ಕೇಸ್ – 3 ತಿಂಗಳು ರಜೆಯಲ್ಲಿದ್ದ ಸೆಕ್ಯುರಿಟಿ ಗಾರ್ಡ್‌; ಚಿನ್ನಾಭರಣ ಇಟ್ಟ ಗ್ರಾಹಕರು ಕಂಗಾಲು

    ವಿಜಯಪುರ| ಎಸ್‌ಬಿಐ ಬ್ಯಾಂಕ್ ದರೋಡೆ ಕೇಸ್ – 3 ತಿಂಗಳು ರಜೆಯಲ್ಲಿದ್ದ ಸೆಕ್ಯುರಿಟಿ ಗಾರ್ಡ್‌; ಚಿನ್ನಾಭರಣ ಇಟ್ಟ ಗ್ರಾಹಕರು ಕಂಗಾಲು

    – ಮಹಾರಾಷ್ಟ್ರಕ್ಕೆ ದರೋಡೆಕೋರರ ಗ್ಯಾಂಗ್ ಎಸ್ಕೇಪ್?

    ವಿಜಯಪುರ: ಚಡಚಣ ಎಸ್‌ಬಿಐ ಬ್ಯಾಂಕ್‌ನಲ್ಲಿ ದರೋಡೆಯಾಗಿದ್ದು, ದರೋಡೆಕೋರರು ಮಹಾರಾಷ್ಟ್ರಕ್ಕೆ ಎಸ್ಕೇಪ್ ಆಗಿರುವ ಶಂಕೆ ವ್ಯಕ್ತವಾಗಿದೆ. ಇತ್ತ ಬ್ಯಾಂಕ್‌ನಲ್ಲಿ ಠೇವಣಿ, ಚಿನ್ನಾಭರಣ ಇಟ್ಟ ಗ್ರಾಹಕರು ಕಂಗಾಲಾಗಿದ್ದಾರೆ.

    ಬ್ಯಾಂಕ್‌ನಲ್ಲಿ 1 ಕೋಟಿ ನಗದು, 12 ರಿಂದ 13 ಕೆ.ಜಿ ಚಿನ್ನ ದರೋಡೆಯಾಗಿದೆ. ಸಾಲಕ್ಕಾಗಿ ಅಡವಿಟ್ಟಿದ್ದ 12-13 ಕೆಜಿ ಚಿನ್ನ ದರೋಡೆಯಾಗಿರುವ ಸಾಧ್ಯತೆ ಇದೆ ಎಂದು ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಬ್ಯಾಂಕ್ ಮೂಲಗಳಿಂದ ಮಾಹಿತಿ ಸಿಗಬೇಕಿದೆ ಎಂದು ತಿಳಿಸಿದ್ದಾರೆ.

    ಐದಕ್ಕೂ ಅಧಿಕ ಮುಸುಕುಧಾರಿ ದರೋಡೆಕೋರರಿಂದ ಕೃತ್ಯ ನಡೆದಿದೆ. ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್‌ನಲ್ಲಿನ ಮ್ಯಾನೇಜರ್, ಕ್ಯಾಶಿಯರ್ ಹಾಗೂ ಇತರೆ ಸಿಬ್ಬಂದಿ ಕೈಕಾಲು ಕಟ್ಟಿ ಹಾಕಿ ಕೂಡಿ ಹಾಕಿ ದರೋಡೆ ನಡೆಸಲಾಗಿದೆ. ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಆಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಘಟನೆ ಕುರಿತು ಪೊಲೀಸ್ ಅಧಿಕಾರಿಗಳಿಗೆ ಮ್ಯಾನೇಜರ್ ಹಾಗೂ ಇತರರು ಮಾಹಿತಿ ನೀಡಿದ್ದಾರೆ. ಬ್ಯಾಂಕ್‌ನಲ್ಲಿದ್ದ ನಗದು ಹಣ, ಚಿನ್ನಾಭರಣಗಳ ಕುರಿತು ಮೇಲಧಿಕಾರಿಗಳು ಬಂದ ಬಳಿಕ ಮಾಹಿತಿ ನೀಡುವುದಾಗಿ ಮ್ಯಾನೇಜರ್ ಹೇಳಿದ್ದಾರೆ.

    ರಜೆಯಲ್ಲಿದ್ದ ಬ್ಯಾಂಕ್ ಸೆಕ್ಯುರಿಟಿ
    ಬ್ಯಾಂಕ್ ಸೆಕ್ಯುರಿಟಿ ಮೂರು ತಿಂಗಳಿಂದ ರಜೆಯಲ್ಲಿದ್ದಾರೆ. ಬ್ಯಾಂಕ್ ಪಕ್ಕದಲ್ಲೇ ಇರುವ ಎಟಿಎಂ ಸೆಕ್ಯುರಿಟಿಯನ್ನು ಕೂಡ ಒಳಗಡೆ ಲಾಕ್ ಮಾಡಿದ್ದರು. ಐದು ಜನ ದರೋಡೆಕೋರರು ಬಂದಿದ್ದರು. ಇಬ್ಬರು ಬ್ಯಾಂಕ್ ಹೊರಗಡೆ ನಿಂತರೆ, ಮೂವರು ಬ್ಯಾಂಕ್ ಒಳಗಡೆ ಹೋಗಿ ದರೋಡೆ ಮಾಡಿದ್ದಾರೆ. ಬ್ಯಾಂಕ್‌ಗೆ ಎಂಟ್ರಿ ಕೊಡ್ತಿದ್ದಂತೆ ಮೊದಲು ಪಿಸ್ತೂಲ್ ತೋರಿಸಿ ಬೆದರಿಸಿದ್ದಾರೆ. ನಂತರ ಬ್ಯಾಂಕ್‌ನ ಎಲ್ಲ ಸಿಬ್ಬಂದಿ ಹಾಗೂ ಎಟಿಎಂ ಸೆಕ್ಯುರಿಟಿಯನ್ನ ಒಂದು ಕೋಣೆಯಲ್ಲಿ ಕೂಡ ಹಾಕಿ, ಕೈ-ಕಾಲು ಕಟ್ಟಿ ದರೋಡೆ ಮಾಡಿದ್ದಾರೆ. ಹುಲ್ಲಜಂತಿ ಗ್ರಾಮದಲ್ಲಿ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಇದಕ್ಕೂ ಮುನ್ನ ಬ್ಯಾಂಕ್‌ಗೆ ಮೂರು ದಿನದಿಂದ ಭೇಟಿ ಕೊಟ್ಟಿದ್ದರು. ಆಗ ಮುಖಕ್ಕೆ ಮಾಸ್ಕ್ ಕಟ್ಟಿಕೊಂಡೆ ಬ್ಯಾಂಕ್‌ಗೆ ಎಂಟ್ರಿ ಕೊಟ್ಟಿದ್ದರು. ಮೂರು ದಿನಗಳಿಂದ ಬ್ಯಾಂಕ್ ಸಿಬ್ಬಂದಿ ಚಲನವಲನದ ಮೇಲೆ ಕಣ್ಣಿಟ್ಟಿದ್ದರು. ಈ ಮುಸುಕುಧಾರಿ ದರೋಡೆಕೋರರನ್ನು ಎಟಿಎಂ ಸೆಕ್ಯುರಿಟಿ ಗುರುತಿಸಿದ್ದಾರೆ.

    ಬ್ಯಾಂಕ್‌ನಲ್ಲಿದ್ದ ಸಿಸಿ ಕ್ಯಾಮೆರಾ, ಹಾರ್ಡ್ ಡಿಸ್ಕ್ ವಶಕ್ಕೆ ಪಡೆದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸುತ್ತಮುತ್ತಲ ಸಿಸಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ಖಾಕಿ ಪಡೆ ನಿರತವಾಗಿದೆ. ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಸ್ತು ನಡೆಸುತ್ತಿದ್ದಾರೆ. ಮಹಾರಾಷ್ಟ್ರ ಸಂಪರ್ಕಿಸುವ ಹಾಗೂ ಚಡಚಣದ ಇತರೆ ರಸ್ತೆಗಳಿಗೂ ನಾಕಾ ಬಂದಿ ಹಾಕಿದ್ದಾರೆ. ಮಹಾರಾಷ್ಟ್ರದ ದರೋಡೆಕೋರರ ಗ್ಯಾಂಗ್‌ನಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ದರೋಡೆಕೋರರಲ್ಲಿ ಓರ್ವ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಹುಲಜಂತಿ ಗ್ರಾಮದಲ್ಲಿ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಹುಲ್ಲಜಂತಿ ಗ್ರಾಮದಲ್ಲಿ ದರೋಡೆಕೋರರು ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ದರೋಡೆಕೋರನನ್ನು ಬೈಕ್ ಸವಾರ ಹಾಗೂ ಗ್ರಾಮಸ್ಥರು ಬೆನ್ನುಹತ್ತಿದ್ದರು. ಗ್ರಾಮದಲ್ಲೇ ವಾಹನ ಚಲಾಯಿಸಿ ರಸ್ತೆ ಬಂದ್ ಆದ ಕಾರಣ ಗ್ರಾಮಸ್ಥರ ಮಧ್ಯೆ ಲಾಕ್ ಆಗಿದ್ದರು. ಗ್ರಾಮಸ್ಥರಿಗೆ ಪಿಸ್ತೂಲ್ ತೋರಿಸಿ ವಾಹನ ಬಿಟ್ಟು ದರೋಡೆ ಮಾಡಿದ ನಗದು, ಚಿನ್ನಾಭರಣದ ಮೂಟೆ ಹೊತ್ತು ದರೋಡೆಕೋರರು ಪರಾರಿಯಾಗಿದ್ದಾರೆ. ಪರಾರಿಯಾಗಿರುವ ದರೋಡೆಕೋರರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ. ದರೋಡೆ ನಂತರ ದರೋಡೆಕೋರರು ಬೇರೆ ಬೇರೆಯಾಗಿ ಪರಾರಿಯಾಗಿದ್ದಾರೆ. ಪೊಲೀಸರು ಪರಿಶೀಲನೆ ಮುಂದುವರಿಸಿದ್ದಾರೆ.

    ಗ್ರಾಹಕರಲ್ಲಿ ಆತಂಕ
    ಬ್ಯಾಂಕ್‌ನಲ್ಲಿ ಚಿನ್ನಾಭರಣ ಇಟ್ಟ ಗ್ರಾಹಕರಲ್ಲಿ ಆತಂಕ ಮನೆ ಮಾಡಿದೆ. ದರೋಡೆಕೋರನ ಕೃತ್ಯಕ್ಕೆ ಹುಲಜಂತಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸದ್ಯ ವಾಹನ ಬಿಟ್ಟ ಸ್ಥಳ ಹಾಗೂ ಬ್ಯಾಂಕ್ ಹತ್ತಿರ ಪೊಲೀಸರ ಕಣ್ಗಾವಲು ಇಡಲಾಗಿದೆ. ವಾಹನ ಬಿಟ್ಟಲ್ಲಿ ಹಾಗೂ ಬ್ಯಾಂಕ್‌ನಲ್ಲಿ ಶ್ವಾನದಳ, ಬೆರಳಚ್ಚು ತಜ್ಞರಿಂದ ತಪಾಸಣೆ ನಡೆಸಿದ್ದಾರೆ.

    ಬ್ಯಾಂಕ್ ಲಾಕರ್‌ನಲ್ಲಿ ಚಿನ್ನಾಭರಣ ಇಟ್ಟ ಗ್ರಾಹಕರು ಕಂಗಾಲಾಗಿದ್ದಾರೆ. ‘ಲಾಕರ್‌ನಲ್ಲಿ 100 ಗ್ರಾಂ ಚಿನ್ನದ ಆಭರಣ, ಅರ್ಧ ಕೆಜಿ ಬೆಳ್ಳಿ ಇಟ್ಟಿದ್ದೆ. 40 ಗ್ರಾಂ ಚಿನ್ನಾಭರಣ ಪ್ಲಜ್ ಮಾಡಿ 2.5 ಲಕ್ಷ ಲೋನ್ ಪಡದಿದ್ದೆ. ಇದೀಗ ದರೋಡೆ ಸುದ್ದಿ ಕೇಳಿ ಆತಂಕ ಮೂಡಿದೆ ಎಂದು ಗ್ರಾಹಕ ಸಂಗಮೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

    ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಸುದ್ದಿ ಕೇಳುತ್ತಿದ್ದಂತೆ ಎಲ್ಲರೂ ಜಮಾಯಿಸುತ್ತಿದ್ದಾರೆ. ನಮ್ಮ ಚಿನ್ನಾಭರಣ ಹೋಗಿದೆಯಾ ಅನ್ನೋದರ ಬಗ್ಗೆ ಮಾಹಿತಿ ಪಡೆಯಲು ಗ್ರಾಹಕರು ಬಂದಿದ್ದಾರೆ. ಮತ್ತೊಂದು ಕಡೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಆರೋಪಿಗಳಿಗಾಗಿ ತಲಾಷ್ ನಡೆಸಿದ್ದಾರೆ.