Tag: chain accident

  • ಬೆಂಗಳೂರು-ಸೇಲಂ ಹೈವೆಯಲ್ಲಿ ಸರಣಿ ಅಪಘಾತ – 7 ವರ್ಷದ ಮಗು ಸೇರಿ ಮೂವರು ಸಾವು

    ಬೆಂಗಳೂರು-ಸೇಲಂ ಹೈವೆಯಲ್ಲಿ ಸರಣಿ ಅಪಘಾತ – 7 ವರ್ಷದ ಮಗು ಸೇರಿ ಮೂವರು ಸಾವು

    ಚೆನ್ನೈ: ಬೆಂಗಳೂರು-ಸೇಲಂ ಹೆದ್ದಾರಿಯಲ್ಲಿ (Bengaluru-Salem Highway) ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ 7 ವರ್ಷದ ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ.

    ತಮಿಳುನಾಡಿನ (Tamil Nadu) ಕೃಷ್ಣಗಿರಿ ಜಿಲ್ಲೆಯ ಬೆಂಗಳೂರು-ಸೇಲಂ ಹೆದ್ದಾರಿಯಲ್ಲಿ ವಾಹನ ದಟ್ಟಣೆಯ ಹಿನ್ನೆಲೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಮಗು ಸೇರಿ ಮೂವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಫೈಲ್ಸ್ – ಸಮಾಧಿಯೊಳಗಿನ `ಸತ್ಯ’ ಹೇಳುತ್ತಾ ಅಸ್ಥಿಪಂಜರ?

    2 ಟ್ರಕ್, 2 ಕಾರು ಹಾಗೂ 1 ಬೈಕ್ ಒಂದಕ್ಕೊಂದು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ 2 ಟ್ರಕ್‌ಗಳ ನಡುವೆ 2 ಕಾರು ಹಾಗೂ ಬೈಕ್ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 7 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: Tamil Nadu | ಪತಿಯೊಂದಿಗೆ ಜಗಳ – ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯನ್ನು ಇರಿದು ಕೊಂದ ಗಂಡ

    ಸ್ಥಳಕ್ಕಾಗಮಿಸಿದ ಕೃಷ್ಣಗಿರಿ ಪೊಲೀಸರು (Krishnagiri Police) ಪರಿಶೀಲನೆ ನಡೆಸಿದರು. ಬಳಿಕ ಅಪಘಾತವಾದ ವಾಹನಗಳನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.

  • ಪೀಣ್ಯ ಫ್ಲೈಓವರ್ ಮೇಲೆ ಸರಣಿ ಅಪಘಾತ – ಟ್ರಾಫಿಕ್ ಜಾಮ್

    ಪೀಣ್ಯ ಫ್ಲೈಓವರ್ ಮೇಲೆ ಸರಣಿ ಅಪಘಾತ – ಟ್ರಾಫಿಕ್ ಜಾಮ್

    ಬೆಂಗಳೂರು: ಶಾಸಕರ ಜನ್ಮದಿನದ ಬ್ಯಾನರ್ ತೆರವುಗೊಳಿಸುವ ವೇಳೆ ಪೀಣ್ಯ ಫ್ಲೈಓವರ್ ಮೇಲೆ ಸರಣಿ ವಾಹನಗಳ ಅಪಘಾತವಾಗಿದೆ.

    ಬೆಂಗಳೂರಿನಿಂದ ತುಮಕೂರು ಕಡೆ ವಾಹನಗಳು ಹೋಗುವಂತಹ ಸಂದರ್ಭದಲ್ಲಿ ಶಾಸಕ ವಿಶ್ವನಾಥ್ ಹುಟ್ಟು ಹಬ್ಬಕ್ಕೆ ಹಾಕಿದ್ದ ಬ್ಯಾನರ್‍ನನ್ನು ಹೈವೇ ಪ್ಯಾಟ್ರೋಲಿಂಗ್ ಸಿಬ್ಬಂದಿ ತೆರವುಗೊಳಿಸುತ್ತಿದ್ದರು. ಆ ವಾಹನವನ್ನು ತಪ್ಪಿಸಲು ಹೋಗಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ವಾಹನಗಳು ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಒಪ್ಪಿಗೆಯಿಲ್ಲದೆ ಮದುವೆಯಾಗಿದ್ದ ಅಳಿಯ, ಮಗಳನ್ನ ಕುಡುಗೋಲಿನಿಂದ ಕೊಚ್ಚಿ ಕೊಂದ ತಂದೆ 

    ಘಟನೆಯಲ್ಲಿ ಸುಮಾರು ಹತ್ತು ಕಾರುಗಳು ಜಖಂಗೊಂಡಿದ್ದು, ಕಾರಿನಲ್ಲಿದ್ದ ಅಜ್ಜಿಗೆ ಗಂಭೀರ ಗಾಯವಾಗಿದೆ. ಪ್ರಸ್ತುತ ಸ್ಥಳಕ್ಕೆ ಭೇಟಿ ಕೊಟ್ಟ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸರಣಿ ಅಪಘಾತ: ಬಿಎಂಟಿಸಿ, ಟೆಂಪೋ ನಡುವೆ ಸಿಲುಕಿದ ಆಟೋ

    ಸರಣಿ ಅಪಘಾತ: ಬಿಎಂಟಿಸಿ, ಟೆಂಪೋ ನಡುವೆ ಸಿಲುಕಿದ ಆಟೋ

    ಬೆಂಗಳೂರು: ಮೈಸೂರು ರಸ್ತೆನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಹಾಗೂ ಟೆಂಪೋ ನಡುವೆ ಆಟೋ ಸಿಲುಕಿಕೊಂಡಿದೆ.

    ಇಂದು ಮುಂಜಾನೆ ಮೈಸೂರು ರಸ್ತೆಯ ಸ್ಯಾಟ್‍ಲೈಟ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬಿಎಂಟಿಸಿ ಹಾಗೂ ಟೆಂಪೋ ನಡುವೆ ಆಟೋ ಸಿಲುಕಿದೆ.

    ಸರಣಿ ಅಪಘಾತದಲ್ಲಿ ಸಿಲುಕಿದ ಆಟೋ ಸಂಪೂರ್ಣ ಜಖಂ ಆಗಿದ್ದು, ಸ್ಥಳೀಯರು ಆಟೋ ಚಾಲಕನ ರಕ್ಷಣೆಗೆ ಹರಸಾಹಸ ಪಟ್ಟಿದ್ದಾರೆ. ಅರ್ಧಗಂಟೆಗಳ ಕಾಲ ಹರಸಾಹಸದ ಬಳಿಕ ಆಟೋ ಚಾಲಕನನ್ನು ಹೊರತೆಗೆಯಲಾಗಿದೆ. ಇದನ್ನೂ ಓದಿ:  ಇಂದು ಶಿಕ್ಷಕ, ಪದವೀಧರ ಕ್ಷೇತ್ರಕ್ಕೆ ಮತದಾನ: 1 ಮತಕ್ಕೆ 10 ಸಾವಿರ ರೂ.?

    ಗಂಭೀರಗಾಯಗೊಂಡ ಆಟೋ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸರು ಅಪಘಾತವಾದ ನಾಲ್ಕು ವಾಹನಗಳನ್ನು ತೆರವು ಮಾಡುತ್ತಿದ್ದಾರೆ. ನಡುರಸ್ತೆಯಲ್ಲಿ ಅಪಘಾತ ಆಗಿದ್ದು, ಮೈಸೂರು ರೋಡ್ ಫುಲ್ ಟ್ರಾಫಿಕ್ ಜಾಮ್ ಆಗಿದೆ.

    ಬ್ಯಾಟರಾಯನಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

  • ನೆಲಮಂಗಲದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ

    ನೆಲಮಂಗಲದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ

    ನೆಲಮಂಗಲ: ದಟ್ಟವಾದ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಬೆಳಗ್ಗೆ ಸರಣಿ ಅಪಘಾತ ನಡೆದಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಟಿ.ಬೇಗೂರು ಬಳಿ ನಡೆದಿದೆ.

    ದಟ್ಟವಾದ ಮಂಜು ಕವಿದಿದ್ದ ವೇಳೆ ಲಾರಿಯೊಂದು ಬ್ರೇಕ್ ಹಾಕಿದ್ದರಿಂದ ಹಿಂದುಗಡೆಯಿಂದ ಬರುತ್ತಿದ್ದ ಎರಡು ಬಸ್, ಎರಡು ಕಾರು, ಎರಡು ಲಾರಿ ಮತ್ತು ಒಂದು ಜೀಪ್ ಕೂಡ ಅಪಘಾತಕ್ಕೆ ಒಳಗಾಗಿವೆ. ಈ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ದೂರ ಟ್ರಾಫಿಕ್ ಜಾಮ್ ಆಗಿ ಸಂಚಾರ ಅಸ್ತವ್ಯಸ್ತವಾಯಿತು. ಇದನ್ನೂ ಓದಿ:  ಹಗಲು ಹೊತ್ತಿನಲ್ಲೇ ಬ್ಯಾಂಕ್ ದರೋಡೆ – ಸಿಬ್ಬಂದಿ ಹತ್ಯೆ

    ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇನ್ನೂ ಅಪಘಾತದಲ್ಲಿ 9 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಚಾಲಕನೊಬ್ಬ ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದಾನೆ.

    ಭೀಕರ ಅಪಘಾತದಿಂದಾಗಿ ಕ್ಯಾಂಟರ್ ನಲ್ಲಿದ್ದ ಈರುಳ್ಳಿ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿದೆ. ನೆಲಮಂಗಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ:  ಗ್ಯಾಂಗ್ ವಾರ್ ದ್ವೇಷಕ್ಕೆ ಇಬ್ಬರು ಮಕ್ಕಳು ಸೇರಿ 8 ಮಂದಿ ಬಲಿ