Tag: Chaitra Kundapur

  • ಚೈತ್ರಾ ಪ್ರಕರಣಕ್ಕೂ ಇಂದಿರಾ ಕ್ಯಾಂಟೀನ್ ಬಿಲ್‌ಗೂ ಸಂಬಂಧ ಇಲ್ಲ: ಗೋವಿಂದ ಬಾಬು

    ಚೈತ್ರಾ ಪ್ರಕರಣಕ್ಕೂ ಇಂದಿರಾ ಕ್ಯಾಂಟೀನ್ ಬಿಲ್‌ಗೂ ಸಂಬಂಧ ಇಲ್ಲ: ಗೋವಿಂದ ಬಾಬು

    ಬೆಂಗಳೂರು: ಚೈತ್ರಾ ಕುಂದಾಪುರ (Chaitra Kundapur) ವಂಚನೆ ಪ್ರಕರಣಕ್ಕೂ ಇಂದಿರಾ ಕ್ಯಾಂಟೀನ್‌ಗೂ (Indira Canteen) ಯಾವುದೇ ಸಂಬಂಧ ಇಲ್ಲ. ನನ್ನ ಉದ್ಯಮದಲ್ಲಿ ಇಂದಿರಾ ಕ್ಯಾಂಟೀನ್ ಕೇವಲ 10%. ಉಳಿದ 90% ಖಾಸಗಿ ಉದ್ಯಮದ್ದಾಗಿದೆ. ಇಂದಿರಾ ಕ್ಯಾಂಟೀನ್ ಬಿಲ್ ಬಗ್ಗೆ ನಾವು ಎಂದಿಗೂ ಅವರೊಂದಿಗೆ ಮಾತಾಡಿರಲಿಲ್ಲ ಎಂದು ಪ್ರಕರಣದ ದೂರುದಾರರಾದ ಉದ್ಯಮಿ, ಚೆಫ್ ಟ್ಯಾಕ್ ಕಂಪನಿಯ ಮಾಲೀಕ ಗೋವಿಂದ ಬಾಬು ಪೂಜಾರಿ (Govinda Babu Poojari) ಹೇಳಿಕೆ ನೀಡಿದ್ದಾರೆ.

    ದೂರವಾಣಿ ಕರೆ ಮೂಲಕ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ವಿಚಾರ ಇಲ್ಲಿ ಬರಲ್ಲ. ಅವರು ಮೋಸ ಮಾಡಿರುವುದು ರಾಜಕೀಯ ವಿಚಾರವಾಗಿ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸತ್ಯಾಸತ್ಯತೆ ಹೊರಗೆ ಬರಲಿ. ನನ್ನ ಬಳಿಯಿರೋ ಎಲ್ಲಾ ದಾಖಲೆಗಳನ್ನೂ ಕೊಡುತ್ತಿದ್ದೇನೆ. ಅವರು ನಮಗೆ ಪ್ಲ್ಯಾನ್ ಮಾಡಿ ಮೋಸ ಮಾಡಿದ್ದಾರೆ. ಅವರು ಯಾವ ಪಕ್ಷದವರೇ ಆಗಿರಲಿ, ಇನ್ನೊಂದು ಬಾರಿ ಇಂತಹ ಮೋಸ ಆಗಬಾರದು. ಇಂತಹವರಿಗೆ ಶಿಕ್ಷೆ ಆಗಲೇ ಬೇಕು ಎಂದಿದ್ದಾರೆ. ಇದನ್ನೂ ಓದಿ: ಎಲ್ಲಾ ದೊಡ್ಡೋರ ಹೆಸರೆಲ್ಲ ಹೊರಗಡೆ ಬರುತ್ತೆ: ಚೈತ್ರಾ ಕುಂದಾಪುರ

    ಸಿಸಿಬಿಗೆ ಎಲ್ಲಾ ರೀತಿಯ ದಾಖಲೆಗಳನ್ನು ನೀಡಿದ್ದೇನೆ. ಸಿಸಿ ಕ್ಯಾಮೆರಾ, ವೀಡಿಯೋ, ಆಡಿಯೋ ಎಲ್ಲಾ ನೀಡಿದ್ದೇನೆ. ನನ್ನ ಬಳಿ ಇನ್ನೂ ಸಾಕ್ಷಿಗಳಿವೆ, ಅವುಗಳನ್ನೂ ನೀಡಲಿದ್ದೇನೆ. ನಾನು ಬೆಳಗ್ಗಿನಿಂದ ರಾತ್ರಿವರೆಗೂ ದುಡಿದ ಹಣ, ಲಾಭವನ್ನೆಲ್ಲಾ ಒಟ್ಟುಗೂಡಿಸಿ 10 ಕೋಟಿ ರೂ. ನೀಡಿದ್ದೇನೆ. ಹೀಗಾಗಿ ಈ ಪ್ರಕರಣದಲ್ಲಿ ನಾನು ಯಾವುದೇ ಕಾರಣಕ್ಕೂ ಹಿಂದೆ ಸರಿಯೋ ಮಾತೇ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಸುಲಭವಾಗಿ ಸಿಕ್ಕ 50 ಲಕ್ಷಕ್ಕೆ ಚೈತ್ರಾ ಫಿದಾ – 3.5 ಕೋಟಿಗೆ ಶುರುವಾದ ಪ್ಲಾನ್ 5 ಕೋಟಿಗೆ ಏರಿದ್ದೇ ರೋಚಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಲ್ಲಾ ದೊಡ್ಡೋರ ಹೆಸರೆಲ್ಲ ಹೊರಗಡೆ ಬರುತ್ತೆ: ಚೈತ್ರಾ ಕುಂದಾಪುರ

    ಎಲ್ಲಾ ದೊಡ್ಡೋರ ಹೆಸರೆಲ್ಲ ಹೊರಗಡೆ ಬರುತ್ತೆ: ಚೈತ್ರಾ ಕುಂದಾಪುರ

    ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ವಂಚಿಸಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ (Chaitra Kundapur) ರೋಚಕ ವಿಚಾರವನ್ನು ಬಹಿರಂಗ ಪಡಿಸಿದ್ದಾಳೆ. ಮಹಿಳಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ (CCB) ಕಚೇರಿಗೆ ಕರೆ ತಂದ ವೇಳೆ ಸ್ವಾಮೀಜಿ ಬಂಧನದ ನಂತರ ದೊಡ್ಡವರ ಹೆಸರುಗಳು ಬಯಲಾಗಲಿದೆ ಎಂದಿದ್ದಾಳೆ.

    ಇಂದಿರಾ ಕ್ಯಾಂಟಿನ್ ಬಿಲ್ ವಿಚಾರವಾಗಿ ಈ ರೀತಿ ಷಡ್ಯಂತ್ರ ಮಾಡಿ ನನ್ನನ್ನು ಸಿಲುಕಿಸಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ. ಎ ಒನ್ ಆರೋಪಿಯಾಗಿರಲಿ ನಾನು, ಆದರೂ ಮುಂದೆ ಸತ್ಯ ಹೊರ ಬರಲಿದೆ ಎಂದು ಹೇಳಿಕೊಂಡಿದ್ದಾಳೆ. ಈ ಮೂಲಕ ಸ್ವಾಮಿಜಿ ಅಭಿನವ ಹಾಲಾಶ್ರಿ ಬಂಧನದ ಬಳಿಕ ಪ್ರಕರಣದಲ್ಲಿ ಮತ್ತಷ್ಟು ವಿಚಾರಗಳು ಹೊರ ಬರಲಿವೆ ಎಂಬ ಸೂಚನೆ ನೀಡಿದ್ದಾಳೆ ಆರೋಪಿ ಚೈತ್ರಾ. ಇದನ್ನೂ ಓದಿ: ಸುಲಭವಾಗಿ ಸಿಕ್ಕ 50 ಲಕ್ಷಕ್ಕೆ ಚೈತ್ರಾ ಫಿದಾ – 3.5 ಕೋಟಿಗೆ ಶುರುವಾದ ಪ್ಲಾನ್ 5 ಕೋಟಿಗೆ ಏರಿದ್ದೇ ರೋಚಕ

    ಇದಕ್ಕೆ ಪ್ರತಿಕ್ರಿಯಿಸಿರುವ ಗೋವಿಂದ ಬಾಬು ಅವರು ಈ ಪ್ರಕರಣಕ್ಕೂ ಇಂದಿರಾ ಕ್ಯಾಂಟಿನ್ ಬಿಲ್ ವಿಚಾರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಬಯಲಾಗ್ತಿದ್ದಂತೆ ಬಿಜೆಪಿ ಟೀಕಿಸಿದ ಕಾಂಗ್ರೆಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೇಶ ದ್ರೋಹಿಗಳಂದ್ರೆ ಕಾಂಗ್ರೆಸ್ಸಿಗರು, ಕಾಂಗ್ರೆಸ್ ಅಂದ್ರೆನೆ ದೇಶ ದ್ರೋಹ: ಚೈತ್ರಾ ಕುಂದಾಪುರ

    ದೇಶ ದ್ರೋಹಿಗಳಂದ್ರೆ ಕಾಂಗ್ರೆಸ್ಸಿಗರು, ಕಾಂಗ್ರೆಸ್ ಅಂದ್ರೆನೆ ದೇಶ ದ್ರೋಹ: ಚೈತ್ರಾ ಕುಂದಾಪುರ

    ಗದಗ: ದೇಶ ದ್ರೋಹಿಗಳಂದ್ರೆ ಕಾಂಗ್ರೆಸ್ಸಿಗರು, ಕಾಂಗ್ರೆಸ್ ಅಂದ್ರೆನೆ ದೇಶ ದ್ರೋಹ ಎಂದು ಹಿಂದೂ ಫೈಯರ್ ಬ್ಯಾಂಡ್ ಚೈತ್ರಾ ಕುಂದಾಪುರ ವಿವಾದಾತ್ಮಕ ಹೇಳಿಕೆ ನೀಡಿದರು.

    ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 995 ರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಬಹಿರಂಗ ಸಮಾವೇಶ ಭಾಷಣದಲ್ಲಿ ಮಾತನಾಡಿದ ಅವರು, ದೇಶ ದ್ರೋಹಕ್ಕೆ ಇನ್ನೊಂದು ಪರ್ಯಾಯ, ಸಮಾನಾರ್ಥಕ ಪದ ಇದ್ರೆ ಅದು ಕಾಂಗ್ರೆಸ್ ಮಾತ್ರ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಡಬಲ್ ಎಂಜಿನ್ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ ಇದು: ಸಿದ್ದು ಕಿಡಿ

    ಉಕ್ರೇನ್ ದೇಶದಿಂದ ಭಾರತಕ್ಕೆ ಆಗಮಿಸಿದ ವಿದ್ಯಾರ್ಥಿಗಳ ಪೈಕಿ ಕೆಲವು ವಿದ್ಯಾರ್ಥಿಗಳು ಭಾರತಕ್ಕೆ ಗಟ್ಸ್ ಇಲ್ಲ ಎಂಬ ಹೇಳಿಕೆಗೆ ಸಹ ಅಸಮಾಧಾನ ವ್ಯಕ್ತಪಡಿಸಿದರು. ಉಕ್ರೇನ್ ದೇಶದಲ್ಲಿ ಸಿಲುಕಿದ ವಿದ್ಯಾರ್ಥಿಗಳನ್ನು ಕಷ್ಟಪಟ್ಟು ಭಾರತಕ್ಕೆ ಕರೆತರಲಾಗ್ತಿದೆ. ನಮ್ಮ ಮಕ್ಕಳು ವಿದ್ಯೆ ಪಡೀದೆ ಖಾಲಿ ಕೂತರೂ ಪರವಾಗಿಲ್ಲ. ವಿದೇಶಿ ಅರ್ಧ ಡಿಗ್ರಿ ಪಡಿದು ರಾಷ್ಟ್ರಕ್ಕೆ ಕೃತಘ್ನರಾಗುವ ದೇಶದ್ರೋಹಿಗಳನ್ನು ಹುಟ್ಟಿಸಬಾರದು. ಏನೂ ಓದದವರು, ಲಾರಿ, ಆಟೋ ಚಾಲಕರು ತಮ್ಮ ವಾಹನದ ಮೇಲೆ ‘ಮೇರಾ ಭಾರತ್ ಮಹಾನ್’, ‘ಭಾರತ ಮಾತಾಕಿ ಜೈ’ ಎಂದು ಬರೆದುಕೊಂಡಿರುತ್ತಾರೆ ಎಂದು ವಿವರಿಸಿದರು.

    Manipur elections 2022: Congress releases third list of candidates

    ಜಗತ್ತಿನ ಯಾವುದೇ ಯೂನಿವರ್ಸಿಟಿ ಕಲಿಸದ ರಾಷ್ಟ್ರ ಪ್ರೇಮ ಅವರಲ್ಲಿದೆ. ಆದರೆ ಬೇರೆ ದೇಶಕ್ಕೆ ಹೋಗಿ ಅರ್ಧ ಡಿಗ್ರಿ ತೆಗೆದುಕೊಂಡು ಬಂದವರು ದೇಶ ಸರಿ ಇಲ್ಲ ಅಂತಿದ್ದಾರೆ. ತಾಯಿ ಭಾರತಿಗೆ ಕೃತಜ್ಞರಾಗಿರುವುದನ್ನ ಕಲೆತರೆ ಮಾತ್ರ ಶಿಕ್ಷಣಕ್ಕೆ ಬೆಲೆ ಇರುತ್ತೆ. ಅನ್ನ ಕೊಟ್ಟ ಭೂಮಿಯನ್ನ ಮಾರಿ ಮಕ್ಕಳನ್ನು ವಿದೇಶಕ್ಕೆ ಕಳುಹಿಸಿದ್ದಾರೆ. ಹೀಗೆ ಶಿಕ್ಷಣ ಪಡೆದು ದೇಶಕ್ಕೆ ವಾಪಾಸ್ ಆಗುವ ಮಕ್ಕಳು ಭಾರತ ಸರಿ ಇಲ್ಲ ಅಂತಾರೆ. ನಮ್ಮ ಮಕ್ಕಳು ಡಿಗ್ರಿ ಪಡೆಯದಿದ್ರೂ ಪರವಾಗಿಲ್ಲ. ಇಂಥ ಮಕ್ಕಳನ್ನ ಹುಟ್ಟಿಸಬಾರದು ಎಂದು ಆಕ್ರೋಶ ಹೊರಹಾಕಿದರು.

    ಶಿವಮೊಗ್ಗ ಹರ್ಷ ಹತ್ಯೆ ಬಗ್ಗೆ ಮಾತನಾಡಿದ ಅವರು, ಹರ್ಷ ಕೊಲೆ ಮಾಡಿದ ಸಮುದಾಯದ ಬಗ್ಗೆ ನಿಜವಾದ ಭಾವನೆ ಏನೆಂಬುದು ಈಗ ಸಮಾಜಕ್ಕೆ ಅರ್ಥವಾಗ್ತಿದೆ. ಹಿಂದೂ ರಕ್ತದ ಮೇಲೆ ಇರುವ ಸರ್ಕಾರವಿದು. ಆ ಹಿಂದೂ ರಕ್ತಕ್ಕೆ ಉತ್ತರ ಜೊತೆಗೆ ಸೂಕ್ತ ನ್ಯಾಯ ಕೊಡಿಸಬೇಕು. ಈ ಬಗ್ಗೆ ಗಂಡೆದೆ ತೋರಿಸಬೇಕು ಎಂದರು.

    ಮುಸ್ಲಿಂರನ್ನು ಡಿಕೆಶಿ ಬ್ರದರ್ಸ್ ಅಂತಾರೆ, ಹಾಗಾಗಿ ಡಿಕೆಶಿ ಬದರ್ಸ್‍ಗಳೆ ಹರ್ಷನನ್ನು ಕೊಂದದ್ದು. ಡಿಕೆಶಿ ಬ್ರದರ್ಸ್ ಗಳ ಪಾಪದಲ್ಲಿ ಡಿಕೆಶಿಗೂ ಪಾಲಿದೆ ಎಂದು ಭಾವಿಸುತ್ತೇನೆ ಎಂದರು. ಇದನ್ನೂ ಓದಿ: ಅರ್ಧಗಂಟೆ ಸಮಯ ಸಿಕ್ಕರೆ ಅಷ್ಟರಲ್ಲೇ ಭಯದಿಂದ ಅಡುಗೆ ಮಾಡಿ ತಿನ್ನುತ್ತಿದ್ದೆವು: ವಿದ್ಯಾರ್ಥಿನಿ ಅಕ್ಷಿತಾ

    ಈ ಕಾರ್ಯಕ್ರಮದಲ್ಲಿ ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತರು, ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶಿವಾಜಿ ಸೇನೆ ಕಾರ್ಯಕರ್ತರು ಸೇರಿದಂತೆ ಅನೇಕ ಸಾರ್ವಜನಿಕರು ಪಾಲ್ಗೊಂಡಿದ್ದರು.

  • ಚೈತ್ರಾ ಕುಂದಾಪುರ ಬೀದಿ ಹೆಣವಾಗಬೇಕು: ಮಂಗಳೂರು ಮುಸ್ಲಿಮ್ಸ್ ಪೋಸ್ಟ್

    ಚೈತ್ರಾ ಕುಂದಾಪುರ ಬೀದಿ ಹೆಣವಾಗಬೇಕು: ಮಂಗಳೂರು ಮುಸ್ಲಿಮ್ಸ್ ಪೋಸ್ಟ್

    ಮಂಗಳೂರು: ದುರ್ಗಾವಾಹಿನಿ ಭಯೋತ್ಪಾದಕಿ ಚೈತ್ರಾ ಕುಂದಾಪುರ ಬೀದಿ ಹೆಣವಾಗಬೇಕೆಂದು ಮಂಗಳೂರು ಮುಸ್ಲಿಮ್ಸ್ ಹೆಸರಿನಲ್ಲಿರುವ ಫೇಸ್‍ಬುಕ್ ಖಾತೆ ಪೋಸ್ಟ್ ಮಾಡಿದೆ.

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬುಧವಾರ ಹಿಂದೂ ಜಾಗರಣ ವೇದಿಕೆ ಮತ್ತು ಚೈತ್ರಾ ಕುಂದಾಪುರ ನಡುವಿನ ತಿಕ್ಕಾಟದ ಕುರಿತಂತೆ ಮುಂಗಳೂರು ಮುಸ್ಲಿಮ್ಸ್, ಈ ಮಾರಾಮಾರಿ ಚೈತ್ರಾ ಕುಂದಾಪುರ ಬೀದಿ ಹೆಣವಾಗುವ ತನಕ ಹೋಗಲಿ ಎಂದು ಅಲ್ಲಾಹುನಲ್ಲಿ ಬೇಡಿ ಕೊಳ್ಳುತ್ತೇನೆ ಎಂದು ವಿವಾದಾತ್ಮಕ ಪೋಸ್ಟ್ ಪ್ರಕಟಿಸಿದೆ.

    ಪೋಸ್ಟ್ ನಲ್ಲಿ ಏನಿದೆ?
    ದುರ್ಗಾವಾಹಿನಿ ಭಯೋತ್ಪಾದಕಿ ಚೈತ್ರಾ ಕುಂದಾಪುರ ಬೆಂಬಲಿಗರಿಂದ ಹಿಂದೂ ಜಾಗರಣ ವೇದಿಕೆಯ ಗುರುಪ್ರಸಾದ್ ಪೂಂಜಾ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ನಿನ್ನ ಅಹಂಕಾರಕ್ಕೆ ಇಲ್ಲಿಂದಲೇ ಅಂಕುಶ ಬೀಳಲಿ. ಹಿಂದುತ್ವವಾದಿಗಳೇ ನೀವೇ ಇವಳ ಕೈ ಕಾಲು ಮುರಿಯಿರಿ ನಿಮಗೆ ನಮ್ಮ ಬೆಂಬಲವಿದೆ. ದೇವಸ್ಥಾನದ ಆಸ್ತಿಯ ವಿಷಯಕ್ಕೆ ಸಂಬಂಧಿಸಿ ಅಧಿಕ ಪ್ರಸಂಗ ಮಾಡಿದ 3 ಕಾಸಿನ ಬೀದಿ ಹೆಣ್ಣು ನಾಯಿಗೆ ಅಡ್ಡ ಗಟ್ಟಿ ತರಾಟೆಗೆ ತೆಗೆದುಕೊಂಡಾಗ ಬಿದ್ದ ಒದೆಗಳು ನೋಡಿ ಬಹಳ ಸಂತೋಷವಾಗಿದೆ.

    ಚೈತ್ರಾಳಿಗೆ ಬಿದ್ದ ಒದೆಗಳಿಂದ ಕೆರಳಿದ ಚೈತ್ರಾ ಸಂಗಡಿಗರು ತಮ್ಮ ವಾಹನದಲ್ಲಿ ಬಿಚ್ಚಿಟ್ಟಿದ್ದ ಮಾರಾಕಾಯುಧಗಳಿಂದ ದೇಶ ದ್ರೋಹಿ ಹಿಂದುತ್ವವಾದಿ ಭಯೋತ್ಪಾದಕರ ಇನ್ನೊಂದು ಸಂಘಟನೆಯಾದ ಹಿಂದೂ ಜಾಗರಣ ವೇದಿಕೆಯ ಗುರುಪ್ರಸಾದ್ ಪೂಂಜಾ ಅವರ ಮೇಲೆ ದಾಳಿ ಮಾಡಿದ್ದಾರೆ. ಈ ಮಾರಾಮಾರಿ ಚೈತ್ರಾ ಕುಂದಾಪುರ ಬೀದಿ ಹೆಣವಾಗುವ ತನಕ ಹೋಗಲಿ ಎಂದು ಅಲ್ಲಾಹುನಲ್ಲಿ ಬೇಡಿ ಕೊಳ್ಳುತ್ತೇನೆ ಎಂದು ಬರೆಯಲಾಗಿದೆ.

    ಬುಧವಾರ ಏನಾಗಿತ್ತು?
    ಕಳೆದ ಎರಡು ತಿಂಗಳಿಂದ ವಿವಾದಕ್ಕೆ ಕಾರಣವಾಗಿದ್ದ ಸುಬ್ರಹ್ಮಣ್ಯ ಮಠ ಮತ್ತು ದೇವಸ್ಥಾನದ ಸಂಘರ್ಷ ಮೊನ್ನೆ ನವರಾತ್ರಿಯ ಮಧ್ಯೆ ಮಠದ ಸ್ವಾಮೀಜಿ ಉಪವಾಸ ಕುಳಿತಿದ್ದು ದೊಡ್ಡ ರಾದ್ಧಾಂತಕ್ಕೆ ಎಡೆ ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಹಾಗೆಯೇ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಚೈತ್ರಾ ಕುಂದಾಪುರ ಮತ್ತು ಸುಬ್ರಹ್ಮಣ್ಯದ ಹುಡುಗರ ಮಧ್ಯೆ ಭಾರೀ ವಾಕ್ಸಮರ ನಡೆದಿತ್ತು.

    ಆ ಕಡೆಯಿಂದ ಕುಂದಾಪುರಕ್ಕೆ ಬಂದರೆ ನೋಡಿಕೊಳ್ತೀನಿ ಅಂದಿದ್ರೆ, ಈ ಕಡೆಯಿಂದ ಸುಬ್ರಹ್ಮಣ್ಯಕ್ಕೆ ಬಂದರೆ ನೋಡ್ತೀವಿ ಅಂತಾ ಸವಾಲು ಕೂಡ ಆಗಿತ್ತು. ಇತ್ತ ವಾಟ್ಸಪ್ ಸವಾಲು ಸ್ವೀಕರಿಸಿದ ಚೈತ್ರಾ ಕುಂದಾಪುರದ ತನ್ನ ಹುಡುಗರನ್ನು ಕಟ್ಟಿಕೊಂಡು ಸ್ವಾಮೀಜಿಯನ್ನು ಕಾಣುವ ನೆಪದಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದಿದ್ದಳು.

    ಈ ವಿಚಾರ ತಿಳಿದು ಚೈತ್ರಾಳನ್ನು ಪ್ರಶ್ನೆ ಮಾಡಲು ಬಂದಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದಿದೆ. ಬಳಿಕ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಂಗಳದಲ್ಲಿಯೇ ಬೀದಿ ಕಾಳಗ ನಡೆದಿದೆ. ಚೈತ್ರಾ ಮತ್ತು ಹುಡುಗರು ರಾಡ್ ಹಿಡ್ಕೊಂಡು ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜ ಎಂಬಾತನ ಮೇಲೆ ಹಲ್ಲೆ ನಡೆಸಿದ್ದು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ವಿಚಾರ ತಿಳಿದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕಾಗಮಿಸಿ, ಲಾಠಿಚಾರ್ಜ್ ನಡೆಸಿ ಎರಡು ಗುಂಪನ್ನು ಚದುರಿಸಿದ್ದಾರೆ. ಸಂಜೆ ಹೊತ್ತಿಗೆ ಚೈತ್ರಾ ನಡೆಸಿದ ದರ್ಪ ಮತ್ತು ರಾಡಿನಲ್ಲಿ ಹಲ್ಲೆ ನಡೆಸಿದ್ದು ಸ್ಥಳೀಯರ ಮೊಬೈಲಿನಲ್ಲಿ ಸೆರೆಯಾಗಿದೆ. ತಲೆಗೆ ಗಂಭೀರ ಗಾಯಗೊಂಡ ಗುರುಪ್ರಸಾದ್ ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ ಲಾಠಿಚಾರ್ಜ್ ಮಾಡಿ ಗುಂಪು ಚದುರಿಸಿದ್ದ ಪೊಲೀಸರು 20 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv