Tag: Chaitra Kundapura

  • ನನ್ನ ಪತಿ ಒಂಥರಾ ಮಾನಸಿಕ ಅಸ್ವಸ್ಥ, ಆಸ್ತಿಗಾಗಿ ಹಿರಿಯ ಮಗಳ ಸಂಚು: ಚೈತ್ರಾ ತಾಯಿ

    ನನ್ನ ಪತಿ ಒಂಥರಾ ಮಾನಸಿಕ ಅಸ್ವಸ್ಥ, ಆಸ್ತಿಗಾಗಿ ಹಿರಿಯ ಮಗಳ ಸಂಚು: ಚೈತ್ರಾ ತಾಯಿ

    ಉಡುಪಿ: ನನ್ನ ಪತಿ ಒಂಥರಾ ಮಾನಸಿಕ ಅಸ್ವಸ್ಥ, ಅವರಿಗೆ ಸರಿಯಾಗಿ ಮಾತನಾಡಲು ಬರುವುದಿಲ್ಲ. ರಾತೋರಾತ್ರಿ ಮನೆ ಬಿಟ್ಟು ಹೋಗುತ್ತಾರೆ. ಕೆಲವೊಮ್ಮೆ ಏನೇನೋ ಮಾತನಾಡುತ್ತಾರೆ ಎಂದು ಬಿಗ್‍ಬಾಸ್ (Bigg Boss Kannada 11) ಖ್ಯಾತಿಯ ಚೈತ್ರಾ ಕುಂದಾಪುರ (Chaitra Kundapura) ಅವರ ತಾಯಿ ರೋಹಿಣಿ ಹೇಳಿಕೊಂಡಿದ್ದಾರೆ. ಈ ಮೂಲಕ ಬಾಲಕೃಷ್ಣ ನಾಯ್ಕ್ ಹೇಳಿಕೆಗೆ ಅವರು ತಿರುಗೇಟು ಕೊಟ್ಟಿದ್ದಾರೆ.

    ವೀಡಿಯೋ ಬಿಡುಗಡೆ ಮಾಡಿರುವ ರೋಹಿಣಿ, ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು ಎಂದಿದ್ದ ಪತಿಯ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಈ ವೇಳೆ, ನನ್ನ ಪತಿ ಕುಟುಂಬದ ಜವಾಬ್ದಾರಿ ಇಲ್ಲದ ವ್ಯಕ್ತಿ. ಮನೆಯ ಯಾವ ಕಷ್ಟಕ್ಕೂ ಅವರು ಸ್ಪಂದಿಸಿದವರಲ್ಲ. ಯಾವ ಮನೆಯ ಜವಾಬ್ದಾರಿಯನ್ನೂ ಅವರು ತೆಗೆದುಕೊಂಡವರಲ್ಲ. ಕೆಲಸ ಮಾಡುತ್ತೇನೆ ಎಂದು ಎಲ್ಲೆಲ್ಲೋ ಹೋಗುತ್ತಾರೆ. ದುಡಿದ ಹಣವನ್ನು ದೊಡ್ಡ ಮಗಳಿಗೆ ಕೊಡುತ್ತಾರೆ. ನನ್ನ ದೊಡ್ಡ ಮಗಳು ಆಸ್ತಿಗೋಸ್ಕರ ತಂದೆಗೆ ಈ ರೀತಿ ಮಾತನಾಡಲು ಹೇಳಿಕೊಟ್ಟಿದ್ದಾಳೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ನನ್ನನ್ನು ಜಗಲಿಯಲ್ಲಿ ಬಿಟ್ಟು ಮನೆಗೆ ಬೀಗ ಹಾಕ್ಕೊಂಡು ಬಿಗ್ ಬಾಸ್‌ಗೆ ಹೋಗಿದ್ದಳು- ಚೈತ್ರಾ ಕುಂದಾಪುರ ತಂದೆ ಕಿಡಿ

    ಮಕ್ಕಳಿಗೆ ಓದಿಸುವಾಗ ಸಹಾಯ ಮಾಡಿಲ್ಲ, ಕೆಲಸಕ್ಕೆ ಹಾಕು ಎನ್ನುತ್ತಿದ್ದರು. ಮೂರು ಹೆಣ್ಣು ಮಕ್ಕಳಿಗೂ ವಿದ್ಯಾಭ್ಯಾಸ ನೀಡಿದವರಲ್ಲ. ಆ ಕಾಲದಲ್ಲಿ 2 ಲಕ್ಷ ರೂ. ಮನೆ ಕಟ್ಟಿದ್ದರು. ಆ ಮನೆ ಬಿದ್ದು ಹೋಗಿದೆ. ನಾನು ಚೂರುಪಾರು ಹಣ ದೊಡ್ಡ ಮಗಳ ಗಂಡನ ಸೊಸೈಟಿಯಲ್ಲಿ ಇಟ್ಟಿದ್ದೆ. ಆ ಹಣವನ್ನೂ ನನ್ನ ಗಂಡ ದೊಡ್ಡ ಮಗಳಿಗೆ ಕೊಟ್ಟಿದ್ದಾರೆ. ನಮ್ಮ ಭೂಮಿ ಬೇಕು ಎಂದು ದೊಡ್ಡ ಮಗಳು ಈಗ ಬೆನ್ನು ಬಿದ್ದಿದ್ದಾಳೆ. ಅವಳ ಮನೆಗೆ ಸಹಾಯ ಮಾಡಲು, ಚೈತ್ರಾ ಜಾಗ ಬರೆದುಕೊಟ್ಟಿದ್ದಾಳೆ. 25 ಲಕ್ಷ ರೂ. ಸಾಲ ನಾವೇ ಮಾಡಿಕೊಟ್ಟಿದ್ದೇವೆ ಎಂದಿದ್ದಾರೆ.

    ಅಪ್ಪನ ಬಳಿ ಸಹಿ ಪಡೆದು ಜಾಗ ಒಳ ಹಾಕಲು ಹಿರಿಯ ಮಗಳು ಗಾಯಿತ್ರಿ ಸಂಚು ಮಾಡಿದ್ದಾಳೆ. ಇದಕ್ಕಾಗಿ, ಅಮ್ಮ ಮೋಸ ಮಾಡಿದಳು ಎಂದು ಹೇಳಿಕೊಂಡು ಬರುತ್ತಿದ್ದಾಳೆ. ಅವರು ಮದುವೆಗೆ ಬರದ ಹಾಗೆ ಅವಳು ತಡೆದಿದ್ದಾಳೆ. ಕುಂದಾಪುರದವರೆಗೆ ಬಂದವರನ್ನು ಮನೆಗೆ ಕರೆದುಕೊಂಡು ಹೋಗಿದ್ದಾಳೆ. ಮರ್ಯಾದೆ ತೆಗೆಯಲು ಈ ರೀತಿ ಮಾಡಿದ್ದಾಳೆ. ಅವರಿಗೆ ಮದುವೆಗೆ ಬರಬೇಕು ಎಂದು ಬಹಳ ಇಷ್ಟ ಇತ್ತು. ಅವರೇ ಹೋಗಿ ಮದುವೆ ಕಾಗದವನ್ನು ಹಿರಿಯರ ಮನೆಗೆ ಕೊಟ್ಟು ಬಂದಿದ್ದರು. ಮನೆ ಪೇಂಟಿಂಗ್ ಕೂಡ ನಿಂತು ಮಾಡಿಸಿದ್ದರು. ಮದುವೆಗೆ ಬರುತ್ತೇನೆ ಎಂದು ಹೇಳಿದವರನ್ನು ಮಗಳು ತಡೆದಿದ್ದಾಳೆ. ಆಸ್ತಿಗಾಗಿ ನಾನು ಸಹಿ ಹಾಕಿಲ್ಲ ಎಂದು ಹೀಗೆ ಮಾಡುತ್ತಿದ್ದಾಳೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಚೈತ್ರ & ಆಕೆಯ ಪತಿ ಇಬ್ಬರೂ ಕಳ್ಳರು- ಮಗಳ ಮದುವೆಗೆ ತಂದೆ ಆಕ್ಷೇಪ

  • Exclusive: ಕೊನೆಗೂ ಭಾವಿ ಪತಿಯನ್ನು ಪರಿಚಯಿಸಿದ ಚೈತ್ರಾ‌ ಕುಂದಾಪುರ

    Exclusive: ಕೊನೆಗೂ ಭಾವಿ ಪತಿಯನ್ನು ಪರಿಚಯಿಸಿದ ಚೈತ್ರಾ‌ ಕುಂದಾಪುರ

    ಬಿಗ್ ಬಾಸ್ (Bigg Boss) ಖ್ಯಾತಿಯ ಚೈತ್ರಾ ಕುಂದಾಪುರ (Chaitra Kundapura) ಮೇ 9ರಂದು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

    ಕಾಲೇಜಿನಲ್ಲಿ ಓದುತ್ತಿದ್ದಾಗ ಶ್ರೀಕಾಂತ್ ಕಶ್ಯಪ್ ಪರಿಚಯವಾಗಿತ್ತು. ಜಗಳದಿಂದ ಶುರುವಾದ ಸ್ನೇಹ ಈಗ ಹಸೆಮಣೆ ಏರಲು ಮುನ್ನುಡಿ ಬರೆದಿದೆ. ಆ್ಯನಿಮೇಷನ್ ಕೋರ್ಸ್ ಮಾಡಿದ್ದ ಶ್ರೀಕಾಂತ್ ಕಶ್ಯಪ್ ಸುದ್ದಿವಾಹಿನಿವೊಂದರಲ್ಲಿ ಚೈತ್ರಾ ಜೊತೆ ಕೆಲಸ ಮಾಡಿದ್ದರು. ಇದೀಗ ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸದಲ್ಲಿ ಶ್ರೀಕಾಂತ್ ತೊಡಗಿಸಿಕೊಂಡಿದ್ದಾರೆ. ಸತತ 12 ವರ್ಷಗಳ ಪ್ರೀತಿಗೆ ಮದುವೆ ಮುದ್ರೆ ಒತ್ತಲು ಈ ಜೋಡಿ ಸಜ್ಜಾಗಿದೆ.

    ನಮ್ಮದು 12 ವರ್ಷಗಳ ಪ್ರೀತಿ. ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದೆ. ಗುರುಹಿರಿಯರ ಸಮ್ಮತಿಯ ಮೇರೆಗೆ ಪ್ರೀತಿಸಿದ ಹುಡುಗನೊಂದಿಗೆ ಮೇ 9ರಂದು ಕುಂದಾಪುರದಲ್ಲಿ ಮದುವೆ ಆಗುತ್ತಿದ್ದೇನೆ. ಈಗಾಗಲೇ ಮೆಹಂದಿ ಸೇರಿದಂತೆ ಮದುವೆ ಶಾಸ್ತ್ರಗಳು ಆರಂಭ ಆಗಿದೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನಿಸಿದ್ದೇವೆ. ದೇವಸ್ಥಾನವೊಂದರಲ್ಲಿ ಸರಳವಾಗಿ ಮದುವೆಯಾಗುತ್ತಿದೆ. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.

    ಇತ್ತೀಚೆಗೆ ‘ಮಜಾ ಟಾಕೀಸ್’ ಶೋಗೆ ಬಿಗ್ ಬಾಸ್ ಸ್ಪರ್ಧಿಗಳಾದ ಧರ್ಮ ಕೀರ್ತಿರಾಜ್, ಅನುಷಾ ರೈ ಹಾಗೂ ಚೈತ್ರಾ ಎಂಟ್ರಿ ಕೊಟ್ಟಿದ್ದರು. ಚೈತ್ರಾ ಕುಂದಾಪುರ ಅವರಿಗೆ ಮದುವೆ ಫಿಕ್ಸ್ ಅಗಿದೆ ಎನ್ನುತ್ತಲೇ ಸೃಜನ್ ಲೋಕೇಶ್ ಮಾತು ಶುರು ಮಾಡಿದ್ದರು. ಚೈತ್ರಾಗೆ ಸೃಜನ್ ಲವ್ ಅಥವಾ ಅರೇಂಜ್ಡ್ ಮ್ಯಾರೇಜಾ ಎಂಬ ಪ್ರಶ್ನಿಸಿದ್ದರು. ಇದಕ್ಕೆ ಎರಡು ಎಂದು ಚೈತ್ರಾ ಉತ್ತರ ನೀಡಿದ್ದರು. ಈ ಮಧ್ಯೆ ಅವರದ್ದು 12 ವರ್ಷದ ಲವ್ ಸ್ಟೋರಿ ಎಂಬ ಅನುಷಾ ರೈ ಮಾತಿಗೆ, ಚೈತ್ರಾ ಯೆಸ್ ಕಾಲೇಜಿನಲ್ಲಿ ಲವ್ ಶುರುವಾಗಿದ್ದು ಅನ್ನೋ ವಿಚಾರವನ್ನು ರಿವೀಲ್ ಮಾಡಿದ್ದರು.

  • ಚೈತ್ರಾ & ಗ್ಯಾಂಗ್‍ನಿಂದ ಟಿಕೆಟ್ ವಂಚನೆ ಪ್ರಕರಣ- ಗೋವಿಂದ ಬಾಬು ಪೂಜಾರಿ ಹೊಸ ಹೈಡ್ರಾಮಾ

    ಚೈತ್ರಾ & ಗ್ಯಾಂಗ್‍ನಿಂದ ಟಿಕೆಟ್ ವಂಚನೆ ಪ್ರಕರಣ- ಗೋವಿಂದ ಬಾಬು ಪೂಜಾರಿ ಹೊಸ ಹೈಡ್ರಾಮಾ

    ಬೆಂಗಳೂರು: ಚೈತ್ರಾ ಕುಂದಾಪುರ (Chaitra Kundapura) ಹಾಗೂ ಟೀಂ ನಿಂದ ವಂಚನೆ ಪ್ರಕರಣ ಸಂಬಂಧ ದೂರುದಾರ ಸಿಸಿಬಿ ಪೊಲೀಸರ ತನಿಖೆಗೆ ಸ್ಪಂದಿಸದೇ ಇರೋದು ಬೆಳಕಿಗೆ ಬಂದಿದೆ. ಐದು ಕೋಟಿ ಹಣದ ಮೂಲದ ಬಗ್ಗೆ ದಾಖಲಾತಿ ಇನ್ನೂ ನೀಡದಿರೋದರ ಬಗ್ಗೆ ಸಿಸಿಬಿಯಿಂದ ನೋಟಿಸ್ (CCB Notice) ನೀಡಲಾಗಿದೆ.

    ಉದ್ಯಮಿ ಗೋವಿಂದಬಾಬು ಪೂಜಾರಿಗೆ (GovindaBabu Poojary) ಚೈತ್ರಾ ಹಾಗೂ ಗ್ಯಾಂಗ್ ವಂಚನೆ ಪ್ರಕರಣದಲ್ಲಿ ಮತ್ತಷ್ಟು ವಿಚಾರಗಳು ಹೊರಬರುತ್ತಿವೆ. ಪ್ರಕರಣದಲ್ಲಿ ಎಲ್ಲಾ ಆರೋಪಿಗಳು ಜೈಲು ಸೇರಿದ್ರೆ, ಇತ್ತ ದಾಖಲಾತಿ ನೀಡೋದಾಗಿ ಹೇಳಿದ್ದ ಉದ್ಯಮಿ ಸಿಸಿಬಿ ಕಡೆ ತಲೆ ಹಾಕುತ್ತಿಲ್ಲವಂತೆ. ಹಣ ನೀಡಿರೋದ್ರ ಬಗ್ಗೆ ವಂಚನೆ ಬಗ್ಗೆ 10 ಕ್ಕೂ ಹೆಚ್ಚು ವೀಡಿಯೊಗಳಿರೋದಾಗಿ ಹೇಳಿದ್ದ ಉದ್ಯಮಿ, ಇದೀಗ ಕೇವಲ ಐದು ವೀಡಿಯೋಗಳನ್ನಷ್ಟೆ ಸಿಸಿಬಿಗೆ ನೀಡಿದ್ದಾರೆ.

    ಐದು ಕೋಟಿ ಹಣವನ್ನ ಲೋನ್ ಪಡೆದು ಕೊಟ್ಟಿರೋದಾಗಿ ಹೇಳಿದ್ದ ಉದ್ಯಮಿ, ಈವರೆಗೂ ಹಣದ ಮೂಲದ ಡಾಕ್ಯುಮೆಂಟ್ಸ್ ನೀಡ್ತಿಲ್ಲ. ಲೋನ್ ಪಡೆದಿದ್ರೆ ಅದ್ರ ದಾಖಲಾತಿ ಸಲ್ಲಿಸಿ ಅಂತಾ ಸಿಸಿಬಿ ಪೊಲೀಸರು ಹೇಳಿದ್ರೂ ನೋ ಯೂಸ್. ದಾಖಲಾತಿ ಸಮೇತ ವಿಚಾರಣೆಗೆ ಬರುವಂತೆ ಎರಡು ಬಾರಿ ನೋಟಿಸ್ ನೀಡಿದರೂ ಉದ್ಯಮಿ ಗೋವಿಂದ ಬಾಬು ಪೂಜಾರಿ ಸಿಸಿಬಿ ಕಡೆ ತಲೆ ಹಾಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

    ಕೇಸ್ ಮಾಡಿಸುವಾಗ ಇದ್ದ ಉತ್ಸಾಹ ಕೇಸ್ ಮುಕ್ತಾಯವಾಗುವ ಹಂತಕ್ಕೆ ಬಂದಾಗ ಇಲ್ಲದಂತೆ ಕಾಣ್ತಿದೆ. ಎವಿಡೆನ್ಸ್ ಕೊಟ್ಟು ಹಣದ ಮೂಲ ತಿಳಿಸಿದ್ರೆ ಕೇಸ್ ಮುಗಿದು ಪೊಲೀಸ್ರು ಚಾರ್ಜ್ ಶೀಟ್‍ಗೆ ತಯಾರಿ ಮಾಡ್ಕೊಂಡಿರೋರು. ಇದೀಗ ಉದ್ಯಮಿಯ ಅಸಹಕಾರದಿಂದ ಕೇಸ್ ಕುಂಟುತ್ತಾ ಸಾಗ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೈತ್ರಾ& ಗ್ಯಾಂಗ್‍ನ ಸಿಸಿಬಿ ಕಸ್ಟಡಿ ಅಂತ್ಯ- ಮತ್ತೆ ಕಸ್ಟಡಿಗಾ?, ಪರಪ್ಪನ ಅಗ್ರಹಾರಕ್ಕಾ?

    ಚೈತ್ರಾ& ಗ್ಯಾಂಗ್‍ನ ಸಿಸಿಬಿ ಕಸ್ಟಡಿ ಅಂತ್ಯ- ಮತ್ತೆ ಕಸ್ಟಡಿಗಾ?, ಪರಪ್ಪನ ಅಗ್ರಹಾರಕ್ಕಾ?

    ಬೆಂಗಳೂರು: ಚೈತ್ರಾ ಕುಂದಾಪುರ (Chaitra Kundapura) & ಗ್ಯಾಂಗ್‍ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ 7 ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ  (CCB) ಕೋರ್ಟಿಗೆ ಹಾಜರುಪಡಿಸಲಿದ್ದಾರೆ.

    ಚೈತ್ರಾ ಕುಂದಾಪುರ, ಗಗನ್ ಕಡೂರು, ರಮೇಶ್, ಚೆನ್ನನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಸೇರಿ 7 ಆರೋಪಿಗಳನ್ನ ಪೊಲೀಸರು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಹೊರತುಪಡಿಸಿ ಎಲ್ಲಾ ಬಂಧಿತ ಆರೋಪಿಗಳು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಇದನ್ನೂ ಓದಿ: ಅಭಿನವ ಹಾಲಶ್ರೀಗೆ ಸೇರಿದ ಎಲ್ಲಾ ಬ್ಯಾಂಕ್ ದಾಖಲೆ ಪರಿಶೀಲನೆ

    ಏಳು ಆರೋಪಿಗಳ ವಿಚಾರಣೆ ಬಹುತೇಕ ಅಂತ್ಯವಾದ ಹಿನ್ನೆಲೆ ಮತ್ತೆ ಕಸ್ಟಡಿಗೆ ಕೇಳದಿರಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳನ್ನ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸುವ ಸಾಧ್ಯತೆ ಇದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೈತ್ರಾ ಕುಂದಾಪುರ ಇನ್ ಟೆನ್ಶನ್- ವಂಚಕಿಗೆ ಹೆಚ್ಚಾಗ್ತಿದ್ಯಂತೆ ಕೊರಗು!

    ಚೈತ್ರಾ ಕುಂದಾಪುರ ಇನ್ ಟೆನ್ಶನ್- ವಂಚಕಿಗೆ ಹೆಚ್ಚಾಗ್ತಿದ್ಯಂತೆ ಕೊರಗು!

    ಬೆಂಗಳೂರು: ಬಹು ಕೋಟಿ ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ (Chaitra Kundapura)  & ಗ್ಯಾಂಗ್‍ನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೆ ಸಿಸಿಬಿ ಕಸ್ಟಡಿಯಲ್ಲಿರೋ ಚೈತ್ರಾಗೆ ಭವಿಷ್ಯದ ಬಗ್ಗೆ ಚಿಂತೆ ಶುರುವಾಗಿದೆ.

    ಹಿಂದೂ ಪರ ಭಾಷಣ ಮಾಡಿ ನೇಮ್ ಫೇಮ್ ಗಳಿಸಿದ್ದ ಚೈತ್ರಾಗೀಗ, ಅದನ್ನ ಮರಳಿ ಹೇಗೆ ಸಂಪಾದಿಸಬೇಕು ಅನ್ನೋ ಅಲೋಚನೆ ಶುರು ಆಗಿದೆಯಂತೆ. ವಂಚನೆ ಪ್ರಕರಣದಿಂದ ಚೈತ್ರಾ ಬಗ್ಗೆ ಸಮಾಜದಲ್ಲಿ ಕೆಟ್ಟ ಅಭಿಪ್ರಾಯ ಮೂಡಿದೆ.

    ತಮ್ಮ ಭಾಷಣದಿಂದ ಹತ್ತಾರು ಜನರ ವಿಶ್ವಾಸ ಹಾಗೂ ಸಾವಿರಾರು ಚಪ್ಪಾಳೆ ಗಿಟ್ಟಿಸಿಕೊಳ್ತಿದ್ದ ಚೈತ್ರಾಗೆ ಪ್ರಕರಣ ಬೆಳಕಿಗೆ ಬಂದಾಗಿಂದ ಐಷಾರಾಮಿ ಕಾರು, ಹಣ ಹೋಗಿರೋದರ ಬಗ್ಗೆ ಚಿಂತೆ ಇಲ್ವಂತೆ. ಬರೀ ಸ್ಟೇಜ್ ಕಾರ್ಯಕ್ರಮ ಭಾಷಣ (Speech) ಜನರ ಚಪ್ಪಾಳೆ, ಜೈಕಾರ ಸಿಗುತ್ತೋ ಇಲ್ವೋ ಅನ್ನೋದರ ಬಗ್ಗೆ ಹೆಚ್ಚು ಚಿಂತಿಗಿಡಾಗಿದ್ದಾರೆ ಎಂದು ಸಿಸಿಬಿ (CCB) ಮೂಲಗಳು ತಿಳಿಸಿದೆ. ಇದನ್ನೂ ಓದಿ: ಚೈತ್ರಾ ಹೇಳಿದಂತೆ ಕೇಳಿದ್ದೀನಿ – ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಹಾಲಶ್ರೀ

    ಮೊದಲೆಲ್ಲ ದೊಡ್ಡ ದೊಡ್ಡ ನಾಯಕರ ಜೊತೆಗೆ ಚೈತ್ರಾ ಸ್ಟೇಜ್ ಹಂಚಿಕೊಳ್ತಿದ್ರು, ಇನ್ನು ಮುಂದೆ ಅಂತಹ ಅವಕಾಶದಿಂದ ವಂಚಿತಳಾಗುವ ಬಗ್ಗೆ ಕೊರಗು ಹೆಚ್ಚಾಗಿದೆಯಂತೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೈತ್ರಾ ಹೇಳಿದಂತೆ ಕೇಳಿದ್ದೀನಿ – ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಹಾಲಶ್ರೀ

    ಚೈತ್ರಾ ಹೇಳಿದಂತೆ ಕೇಳಿದ್ದೀನಿ – ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಹಾಲಶ್ರೀ

    ಬೆಂಗಳೂರು: ಚೈತ್ರಾ (Chaitra Kundapura) ಅಂಡ್‌ ಗ್ಯಾಂಗ್‌ನ ವಂಚನೆ ಪ್ರಕರಣ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದೆ. ಸ್ವಾಮೀಜಿ ಬಂಧನದ ಬಳಿಕ ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಗಿದಿದ್ದು, ಅಭಿನವ ಹಾಲಶ್ರೀ ಸಿಸಿಬಿ ತನಿಖಾಧಿಕಾರಿ (CCB Investigation Officer) ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.

    ಉದ್ಯಮಿ ಗೋವಿಂದ ಬಾಬು ಪೂಜಾರಿಯಿಂದ (Govind Babu Poojari) ಹಣ ಪಡೆದಿದ್ದು ನಿಜ. ಎಂಎಎಲ್‌ಎ ಟಿಕೆಟ್ ವಿಚಾರವಾಗಿ (BJP MLA Ticket Scam) ಹಣ ಪಡೆದಿದ್ದೆ, ಆದರೆ ಟಿಕೆಟ್ ಸಿಗಲಿಲ್ಲವಾದ್ದರಿಂದ ಹಣ ವಾಪಸ್ ಕೊಡೋದಾಗಿ ಹೇಳಿದ್ದೆ. ಈಗಾಗಲೆ 50 ಲಕ್ಷ ಹಣ ವಾಪಸ್‌ ಕೊಟ್ಟಿದ್ದೇನೆ. ಉಳಿದ ಹಣ ಮಠದಲ್ಲಿದೆ ಅಂತ ಸ್ವಾಮೀಜಿ ಅಧಿಕಾರಿಗಳ ಮುಂದೆ ಸತ್ಯ ಬಾಯ್ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಅಲ್ಲದೇ ಈ ಪ್ರಕರಣದಲ್ಲಿ ನನ್ನದೇನೂ ತಪ್ಪಿಲ್ಲ, ಚೈತ್ರಾ ಹೇಳಿದಂತೆ ಕೇಳಿದ್ದೀನಿ. ತಪ್ಪಿಗೆ ನಾನೇ ಹೊಣೆಯಾಗಿದ್ದು, ಬೇರೆ ಯಾರೂ ಈ ಕೇಸ್ ನಲ್ಲಿ ಇಲ್ಲ ಅಂತಾ ಅಭಿನವ ಹಾಲಶ್ರೀ ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಇದನ್ನೂ  ಓದಿ: ಕಾವೇರಿ ವಿಚಾರದಲ್ಲಿ ಸುಪ್ರೀಂ ತೀರ್ಪು ಕರ್ನಾಟಕಕ್ಕೆ ಗಾಯದ ಮೇಲೆ ಬರ ಎಳೆದಂತಾಗಿದೆ: ಸಿ.ಟಿ.ರವಿ

    ಈ ನಡುವೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಪಡೆಯಲು ಹೋಗಿ 5 ಕೋಟಿ ರೂ. ಕಳೆದುಕೊಂಡಿರುವುದಾಗಿ ದೂರು ನೀಡಿರುವ ಗೋವಿಂದ ಬಾಬು ಪೂಜಾರಿ ವಿರುದ್ಧವೇ ಈಗ ಜಾರಿ ನಿರ್ದೇಶನಾಲಯದಲ್ಲಿ (ಇಡಿ) ದೂರು ದಾಖಲಾಗಿದೆ. 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ. ಅವರು ನಗದು ರೂಪದಲ್ಲಿ ನೀಡಿರುವುದು ಅಪರಾಧವಾಗಿದ್ದು ಅವರ ವಿರುದ್ಧ ತನಿಖೆ ನಡೆಸಬೇಕೆಂದು ಕೋರಿ ವಕೀಲ ನಟರಾಜ ಶರ್ಮಾ (Nataraj Sharma) ದೂರು ನೀಡಿದ್ದಾರೆ. ಇದನ್ನೂ  ಓದಿ: ಎರಡು ಸಲ ನೀರು ಬಿಟ್ಟು ಈಗ ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ: ಬೊಮ್ಮಾಯಿ ಆಕ್ರೋಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2 ತಿಂಗಳ ಹಿಂದೆಯೇ ಚೈತ್ರಾ ಕುಂದಾಪುರ ವಿಚಾರ ನನ್ನ ಗಮನಕ್ಕೆ ಬಂದಿತ್ತು: ಶರಣ್ ಪಂಪ್‍ವೆಲ್

    2 ತಿಂಗಳ ಹಿಂದೆಯೇ ಚೈತ್ರಾ ಕುಂದಾಪುರ ವಿಚಾರ ನನ್ನ ಗಮನಕ್ಕೆ ಬಂದಿತ್ತು: ಶರಣ್ ಪಂಪ್‍ವೆಲ್

    ಮಂಗಳೂರು: ಚೈತ್ರಾ ಕುಂದಾಪುರ (Chaitra Kundapura) ಪ್ರಕರಣವು ಎರಡು ತಿಂಗಳ ಹಿಂದೆಯೇ ನನ್ನ ಗಮನಕ್ಕೆ ಬಂದಿತ್ತು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ (Sharan Pumpwell) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಜ್ರದೇಹಿ ಮಠದ ಸ್ವಾಮೀಜಿಗಳು ನನ್ನೊಂದಿಗೆ ಈ ವಿಚಾರವನ್ನ ಹಂಚಿಕೊಂಡಿದ್ರು. ನಿಮ್ಮ ಪಾತ್ರ ಇಲ್ಲವೆಂದ ಮೇಲೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಸ್ವಾಮೀಜಿಯವರಿಗೆ ಹೇಳಿದ್ದೆ. ಈ ರೀತಿ ಪ್ರಕರಣಗಳು ಎಲ್ಲಿ ಕೂಡ ಆಗಬಾರದು ಎಂದು ಹೇಳಿದರು.

    ಚೈತ್ರಾ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಚೈತ್ರಾ ಕುಂದಾಪುರ ನಮ್ಮ ಸಂಘಟನೆಯವರಲ್ಲ. ಉತ್ತಮ ವಾಗ್ಮಿ ಎಂಬ ಕಾರಣಕ್ಕೆ ಭಾಷಣಕ್ಕೆ ಕರೆಸಿಕೊಳ್ಳುತ್ತಿದ್ದೆವು. ಇಂತಹ ಘಟನೆಗಳಿಗೆ ನಮ್ಮ ಸಂಘಟನೆ ಆಸ್ಪದ ಕೊಡೋದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮೀನು ಮಾರುತ್ತಿದ್ದ ಅಮ್ಮನಿಗೆ ಸರ್ಪ್ರೈಸ್ ಕೊಟ್ಟ ಮಗ- ಕಣ್ಣೀರಾಕಿದ ತಾಯಿ!

    ಲವ್ ಜಿಹಾದ್, ಗೋಹತ್ಯೆ, ಮತಾಂತರ ವಿರುದ್ಧ ರಾಜ್ಯಾದ್ಯಂತ ಶೌರ್ಯ ಜಾಗರಣ ರಥಯಾತ್ರೆ ನಡೆಯಲಿದ್ದು, ಸೆಪ್ಟೆಂಬರ್ 25 ಕ್ಕೆ ಚಿತ್ರದುರ್ಗದಲ್ಲಿ ಚಾಲನೆ ಸಿಗಲಿದೆ. ಅಕ್ಟೋಬರ್ 10 ರಂದು ಉಡುಪಿಯಲ್ಲಿ ಸಮಾರೋಪ ನಡೆಯಲಿದೆ. 2 ಸಾವಿರ ಇರುವ ಬಜರಂಗದಳ ಘಟಕವನ್ನು 5 ಸಾವಿರ ಮಾಡೋ ಗುರಿ ಇದಾಗಿದೆ. ಹಿಂದೂ ದೇವಾಲಯಗಳು, ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಜೊತೆಗೆ ವಿವಿಧ ಉದ್ದೇಶದಿಂದ ಈ ರಥಯಾತ್ರೆ ಕೈಗೊಳ್ಳಲಾಗಿದೆ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಟ್ಟೆ ಅಂಗಡಿ ಹೆಸ್ರಲ್ಲಿ ವಂಚನೆ ಆರೋಪ- ಚೈತ್ರಾ ವಿಚಾರಣೆಗೆ ಒಪ್ಪಿಸುವಂತೆ ಕೋಟ ಪೊಲೀಸರ ಮನವಿ

    ಬಟ್ಟೆ ಅಂಗಡಿ ಹೆಸ್ರಲ್ಲಿ ವಂಚನೆ ಆರೋಪ- ಚೈತ್ರಾ ವಿಚಾರಣೆಗೆ ಒಪ್ಪಿಸುವಂತೆ ಕೋಟ ಪೊಲೀಸರ ಮನವಿ

    – ಬಾಡಿ ವಾರೆಂಟ್ ನೀಡುವಂತೆ ಬೆಂಗಳೂರು ಕೋರ್ಟ್ ಮೊರೆ

    ಉಡುಪಿ: ನಕಲಿ ನಾಯಕರನ್ನು ಸೃಷ್ಟಿಸಿ, ಕೋಟಿ ಕೋಟಿ ಲೂಟಿ ಮಾಡಿದ ಪ್ರಕರಣದ ತನಿಖೆಯನ್ನು ಸಿಸಿಬಿ ನಡೆಸುತ್ತಿದೆ. ಚೈತ್ರಾ ಕುಂದಾಪುರ (Chaitra Kundapura) ಕಂಪ್ಲೀಟ್ ಗ್ಯಾಂಗ್ ಕಸ್ಟಡಿಯಲ್ಲಿದ್ದು ಮೋಸದ ಕಥೆಯನ್ನು ಬಿಚ್ಚಿಡುತ್ತಿದೆ. ಈ ನಡುವೆ ಉಡುಪಿ (Udupi) ಜಿಲ್ಲಾ ನ್ಯಾಯಾಲಯದ ಮೂಲಕ ಬೆಂಗಳೂರು ಕೋರ್ಟಿಗೆ ಮನವಿ ರವಾನೆಯಾಗಿದೆ.

    ಚೈತ್ರಾ ಮತ್ತು ಲೂಟಿ ಗ್ಯಾಂಗ್ ಅಂದರ್ ಆಗಿದೆ. ಒಂದೂವರೆ ಕೋಟಿ ರೂಪಾಯಿ ಅಬೇಸ್ ಮಾಡಿದ್ದ ಹಾಲಾಶ್ರೀ ಸ್ವಾಮೀಜಿ ಕೂಡ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಪೆÇಲೀಸರ ತನಿಖೆಯಲ್ಲಿ ಹಣ ಪೀಕಿಸುವ ಸಂಪೂರ್ಣ ಕಥೆ ಬಯಲಾಗಲಿದೆ. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಕೋಟ ಪೊಲೀಸ್ ಠಾಣೆಯಲ್ಲಿ (Kota Police Station) ಚೈತ್ರಾ ಮೇಲೆ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ಮೇಲೆ ಮತ್ತೊಂದು FIR – ಸನಾತನ ಧರ್ಮ ಬಟ್ಟೆ ಮಳಿಗೆ ಪ್ರಕರಣದಲ್ಲೂ ವಂಚನೆ

    ಹಲವು ವರ್ಷಗಳ ಹಿಂದಿನ ಗೆಳೆಯ ಸುದೀನ್ ಕೋಡಿ (Sudeen Kodi) ತನಗಾದ ಮೋಸಕ್ಕೆ ನ್ಯಾಯ ಕೊಡಿಸಿ ಎಂದು ಠಾಣೆಯ ಮೆಟ್ಟಿಲು ಹತ್ತಿದರು. ಈ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಈ ಪ್ರಕರಣದ ವಿಚಾರಣೆಗೆ ಮುಂದಾಗಿರೋ ಉಡುಪಿ ಕೋಟ ಠಾಣೆಯ ಪೊಲೀಸರು ಚೈತ್ರಾಳನ್ನ ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಅದಕ್ಕಾಗಿ ಬಾಡಿ ವಾರೆಂಟ್ ನೀಡುವಂತೆ ಬೆಂಗಳೂರು 1st ACMM ಕೋರ್ಟ್‍ಗೆ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯ ಮೂಲಕ ಮನವಿ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಹಾಲಶ್ರೀ ಮಠಕ್ಕೆ 54 ಲಕ್ಷ ಹಣ ತಂದಿಟ್ಟ ಮೈಸೂರಿನ ವಕೀಲ

    2018 ರಿಂದ 2023ರ ವರೆಗೆ ಹಂತ ಹಂತವಾಗಿ 5 ಲಕ್ಷ ರೂಪಾಯಿ ಚೈತ್ರಾ ಕುಂದಾಪುರ, ಸುದೀನ್ ಅವರಿಂದ ಪಡೆದುಕೊಂಡಿದ್ದರು. ಬಟ್ಟೆ ಅಂಗಡಿ ಹಾಕಿ ಕೊಡುವುದಾಗಿ ಮೋಸ ಮಾಡಿದ್ದರು. ಈ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಪೊಲೀಸರು ಚೈತ್ರಾ ವಿಚಾರಣೆ ಮಾಡಬೇಕಾಗಿದೆ. ಸುದೀನ್ ದೂರಿನ ಹಿನ್ನೆಲೆ ನ್ಯಾಯಾಲಯಕ್ಕೆ ಬಾಡಿವಾರೆಂಟ್ ಮೂಲಕ ಚೈತ್ರಾ ವಿಚಾರಣೆಗೆ ಉಡುಪಿ ಪೊಲೀಸರು ಮನವಿ ಮಾಡಿದ್ದಾರೆ.

    ಸಿಸಿಬಿ ವಿಚಾರಣೆ ಮುಗಿದ ಬಳಿಕ ಬಾಡಿವಾರೆಂಟ್ ಪಡೆಯುವ ಪ್ರಕ್ರಿಯೆ ಶುರು ಆಗಲಿದೆ. ಅದಕ್ಕೂ ಮುನ್ನ ಬೈಂದೂರು, ಕುಂದಾಪುರ, ಬ್ರಹ್ಮಾವರ, ಉಡುಪಿ ತಾಲೂಕಿನಲ್ಲಿ ಸಹಜ ಪಕ್ರಿಯೆ ನಡೆಯಬೇಕಿದೆ. ಮತ್ತೆರಡು ಪ್ರಕರಣ ಬಿದ್ದರೂ ಆಶ್ಚರ್ಯ ಇಲ್ಲ ಎಂದು ಚೈತ್ರಾ ಕುಂದಾಪುರ ಆಪ್ತರಾಗಿದ್ದವರು ಮಾಹಿತಿ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಈಗಾಗ್ಲೇ 50 ಲಕ್ಷ ಕೊಟ್ಟಿದ್ದು, ಉಳಿದ ಹಣವನ್ನೂ ವಾಪಸ್ ಮಾಡ್ತೀನಿ: ಹಾಲಶ್ರೀ ಹೈಡ್ರಾಮಾ

    ಈಗಾಗ್ಲೇ 50 ಲಕ್ಷ ಕೊಟ್ಟಿದ್ದು, ಉಳಿದ ಹಣವನ್ನೂ ವಾಪಸ್ ಮಾಡ್ತೀನಿ: ಹಾಲಶ್ರೀ ಹೈಡ್ರಾಮಾ

    ಬೆಂಗಳೂರು: ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿ ಹಾಲಶ್ರೀ (Halashree) ಇಂದು ಸಿಸಿಬಿ ಅಧಿಕಾರಿಗಳ ಮುಂದೆ ಹೈಡ್ರಾಮಾ ಮಾಡಿದ್ದಾರೆ.

    ಗೋವಿಂದ ಬಾಬು ಪೂಜಾರಿಗೆ (Govinda Babu Poojary) ನಾನು ಈಗಾಗಲೇ 50 ಲಕ್ಷ ಕೊಟ್ಟಿದ್ದು, ಉಳಿದ ಹಣವನ್ನೂ ವಾಪಸ್ ಮಾಡ್ತೀನಿ ಎಂದು ಹೇಳಿದ್ದಾರೆ. ಗೋವಿಂದಬಾಬುರನ್ನು ಪರಿಚಯ ಮಾಡಿಸಿದರು. ಅವರು ನನಗೆ ಹಣ ಕೊಟ್ಟಿದ್ದಾರೆ. ಟಿಕೆಟ್ ಕೊಡಿಸ್ತೀನಿ ಅಂತ ನಾನು ಹಣ ಪಡೆದಿಲ್ಲ. ನನಗೆ ಕೊಟ್ಟಿರೋ ಹಣ ವಾಪಸ್ ಕೊಟ್ಟು ಬಿಡ್ತೀನಿ ಎಂದು ವಿಚಾರಣೆ ವೇಳೆ ನಾಟಕ ಶುರುಮಾಡಿದ್ದಾರೆ.

    ಈಗಾಗಲೇ 50 ಲಕ್ಷ ಹಣವನ್ನು ಗೋವಿಂದ ಬಾಬು ಅವರಿಗೆ ವಾಪಸ್ ಕೊಟ್ಟಿದ್ದೀನಿ. ದೂರು ಕೊಡುವ ಹಿಂದಿನ ದಿನವೂ ಹಣ ಕೊಡ್ತೀನಿ ಅಂತ ಹೇಳಿದ್ದೆ. ನನ್ನ ಹಣಕ್ಕೆ ಮಾತ್ರ ನಾನು ಜವಾಬ್ದಾರಿ, ಬೇರೆಯವರ ಹಣ ಗೊತ್ತಿಲ್ಲ. ಟಿಕೆಟ್ (BJP Ticekt) ವಿಚಾರವೂ ನನಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ನುಣುಚಿಕೊಳ್ಳುವ ಪ್ರಯತ್ನವನ್ನು ಹಾಲಶ್ರೀ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಅಭಿನವ ಹಾಲಶ್ರೀ ನೇತೃತ್ವದಲ್ಲಿ ಗೋವಿಂದ್ ಬಾಬು ಪೂಜಾರಿ ಬಯೋಪಿಕ್

    ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಾಲಶ್ರೀ ನಾಪತ್ತೆಯಾಗಿದ್ದರು. ಒಡಿಶಾದಲ್ಲಿ ಮಾರುವೇಷದಲ್ಲಿ ತಲೆಮರೆಸಿಕೊಂಡಿದ್ದ ಹಾಲಶ್ರೀಯನ್ನು ರೈಲ್ವೆ ಪೊಲೀಸರ ನೆರವಿನಿಂದ ಬಂಧಿಸಿ ಬೆಂಗಳೂರಿಗೆ ವಾಪಸ್ ಕರೆತರಲಾಗಿತ್ತು. ಸಿಸಿಬಿ ಪೊಲೀಸರು (CCB Police) ಇಂದು 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರು ಪಡಿಸಿದರು.

    ಆರೋಪಿಯನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಸಿಸಿಬಿ, ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಈ ವೇಳೆ ಹಾಲಶ್ರೀ ಪರ ವಕೀಲ ಅರುಣ್ ಶ್ಯಾಂ ಕೂಡ ಹಾಜರಿದ್ದರು. ಪೊಲೀಸ್ ಕಸ್ಟಡಿಗೆ ಆಕ್ಷೇಪ ವ್ಯಕ್ತಪಡಿಸಿ, ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಆರೋಪಿಗೆ ಜಾಮೀನು ನೀಡದಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ವಕೀಲರು ಆಕ್ಷೇಪಿಸಿದರು. ತನಿಖೆ ನಡೆಯುವ ಮಧ್ಯೆ ಜಾಮೀನು ನೀಡಬಾರದು. ಸಾಕ್ಷಿ ನಾಶವಾಗುತ್ತದೆ ಎಂದು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಯನ್ನು 10 ದಿನ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಧ್ಯರಾತ್ರಿವರೆಗೂ ಟೆಕ್ನಿಕಲ್ ಸೆಲ್‍ನಲ್ಲಿ ಹಾಲಶ್ರೀ ವಿಚಾರಣೆ- ಇಂದು ಕೋರ್ಟ್ ಮುಂದೆ ಹಾಜರು

    ಮಧ್ಯರಾತ್ರಿವರೆಗೂ ಟೆಕ್ನಿಕಲ್ ಸೆಲ್‍ನಲ್ಲಿ ಹಾಲಶ್ರೀ ವಿಚಾರಣೆ- ಇಂದು ಕೋರ್ಟ್ ಮುಂದೆ ಹಾಜರು

    ಬೆಂಗಳೂರು: ವಂಚಕಿ ಚೈತ್ರಾ ಕುಂದಾಪುರ ಡೀಲ್ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು (Abhinava Halashree) ಕೊನೆಗೂ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

    ಕಟಕ್ ರೈಲ್ವೇ ನಿಲ್ದಾಣದಲ್ಲಿ ಬಂಧಿಸಿ ಹಾಲಶ್ರೀಯನ್ನ ಬೆಂಗಳೂರಿಗೆ ಕರೆತರಲಾಗಿತ್ತು. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದಾರೆ. ಅಭಿನವ ಹಾಲಶ್ರೀಗೆ 36 ವರ್ಷವಾಗಿರೋದ್ರಿಂದ ಬಿಪಿ, ಶುಗರ್, ಅಸ್ತಮಾ ಸಮಸ್ಯೆಯಿಲ್ಲ. ಎಲ್ಲವೂ ನಾರ್ಮಲ್ ಇದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ನಂತರ ಮಧ್ಯರಾತ್ರಿಯವರೆಗೂ ಟೆಕ್ನಿಕಲ್ ಸೆಲ್‍ನಲ್ಲಿ ವಿಚಾರಣೆ ನಡೆಸಿದ್ದಾರೆ.

    ವಿಚಾರಣೆ ವೇಳೆ ತನಿಖಾಧಿಕಾರಿಗಳಿಗೆ ಹಾಲಶ್ರೀ ಸ್ಪಂದಿಸಿದ್ದು, ಚೈತ್ರಾ, ಗಗನ್ ಇಬ್ಬರ ಬಗ್ಗೆಯೂ ಉತ್ತರಿಸಿದ್ದಾರೆ. ಒಟ್ಟಿನಲ್ಲಿ ಹಣಕಾಸಿನ ವ್ಯವಹಾರದ ಬಗ್ಗೆ ಹಾಲಶ್ರೀ ಸಿಸಿಬಿ ಅಧಿಕಾರಿಗಳ (CCB Officers) ಮುಂದೆ ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಹಾಲಶ್ರೀ ಬಂಧಿಸಲು ಅರ್ಚಕರ ವೇಷದಲ್ಲಿ ಫೀಲ್ಡ್‌ಗಿಳಿದಿದ್ದ ಅಧಿಕಾರಿಗಳು!

    ಇಂದು ಬೆಂಗಳೂರಿನ ಎಸಿಎಂಎಂ ಕೋರ್ಟ್‍ಗೆ ಹಾಲಶ್ರೀಯನ್ನು ಸಿಸಿಬಿ ಹಾಜರುಪಡಿಸಲಿದ್ದು, ಕೋರ್ಟಿಗೆ ಹಾಜರುಪಡಿಸಿದ ನಂತರ ಕಸ್ಟಡಿಗೆ ಪಡೆಯುವ ಸಾಧ್ಯತೆಗಳಿವೆ. ಹೀಗಾಗಿ ಅದಕ್ಕೆ ಬೇಕಾಗಿರುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಕಸ್ಟಡಿಗೆ ಪಡೆದ ಬಳಿಕ ಸಿಸಿಬಿ ಮಹಜರು ಪ್ರಕ್ರಿಯೆ ನಡೆಸಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]