Tag: Chaitra Kundapura

  • ಹಾಲಶ್ರೀ ಬಂಧಿಸಲು ಅರ್ಚಕರ ವೇಷದಲ್ಲಿ ಫೀಲ್ಡ್‌ಗಿಳಿದಿದ್ದ ಅಧಿಕಾರಿಗಳು!

    ಹಾಲಶ್ರೀ ಬಂಧಿಸಲು ಅರ್ಚಕರ ವೇಷದಲ್ಲಿ ಫೀಲ್ಡ್‌ಗಿಳಿದಿದ್ದ ಅಧಿಕಾರಿಗಳು!

    ಬೆಂಗಳೂರು: ಕೋಟಿ ಕೋಟಿ ವಂಚನೆ ಪ್ರಕರಣದ ಚೈತ್ರಾ ವಂಚನೆಯ ಕೂಟದಲ್ಲಿದ್ದ ಎ3 ಆರೋಪಿ ಹಾಲಶ್ರೀ (Halashree) ಕೊನೆಗೂ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಹಾಲಶ್ರೀ ಬಂಧನಕ್ಕೆ ಮಡಿತೊಟ್ಟು ಅಖಾಡಕ್ಕೆ ಇಳಿದಿದ್ದ ಸಿಸಿಬಿ ಪೊಲೀಸರ ಕಾರ್ಯಾಚರಣೆ ಬಲು ರೋಚಕವಾಗಿದೆ.

    ಎಂಟು ದಿನಗಳಿಂದ ಮೊಬೈಲ್ ಸ್ವಿಚ್ಡ್ ಆಫ್ ಮಾಡ್ಕೊಂಡು ತಲೆಮರೆಸಿಕೊಂಡಿದ್ದ ಹಾಲಶ್ರೀ ಹೈದರಾಬಾದ್ (Hyderabad) ಕಡೆಯಿಂದ ಉತ್ತರ ಭಾರತದ ಕಡೆ ಹೋಗಿರೋ ಮಾಹಿತಿ ಸಿಕ್ಕಿತ್ತು. ಹಾಲಶ್ರೀ ಮಠಗಳು, ದೇವಸ್ಥಾನಗಳಲ್ಲಿ ಇರಬಹುದೆಂಬ ಮಾಹಿತಿ ಆಧಾರದಲ್ಲಿ ಸಿಸಿಬಿಯ ಶಿವಕುಮಾರ್, ರಾಘವೇಂದ್ರ, ಸುರೇಶ್, ಅಣ್ಣಪ್ಪ ಅರ್ಚಕರ ವೇಷ ಹಾಕಿದ್ರು. ಶೃಂಗೇರಿ ದೇವಸ್ಥಾನದ ಅರ್ಚಕರ ರೀತಿ ಮಡಿಬಟ್ಟೆ ಧರಿಸಿ ಫೀಲ್ಡ್ ಗೆ ಇಳಿದಿದ್ರು.

    ನಾಲ್ವರು ಅರ್ಚಕರ ವೇಷದಲ್ಲಿ ಪ್ರತಿಯೊಂದು ದೇವಸ್ಥಾನ, ಮಠಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸೋ ನಾಟಕವಾಡಿದ್ರು. ಒಂದೊಂದೇ ಮಠ, ದೇವಸ್ಥಾನ ಮುಗಿಸಿ ಒಡಿಶಾದ ಪೂರಿ ಜಗನ್ನಾಥ್ ದೇವಸ್ಥಾನಕ್ಕೆ ಪೊಲೀಸರು ಹೋಗಿದ್ದರು. ಈ ವೇಳೆ ಪೂರಿ ಜಗನ್ನಾಥ್ ದೇವಸ್ಥಾನದಲ್ಲಿ ಹಾಲಶ್ರೀ ಇರೋದು ಪತ್ತೆಯಾಗಿತ್ತು. ನಾವು ಶೃಂಗೇರಿಯಿಂದ ಬಂದಿದ್ದೀವಿ, ಗಣೇಶ ಹಬ್ಬಕ್ಕೆ ವಿಶೇಷ ಪೂಜೆ ಮಾಡಿಸಬೇಕು ಅಂತ ಹೇಳಿದ್ರು. ಇದನ್ನೂ ಓದಿ: ಸಿಎಂ ನೇತೃತ್ವದಲ್ಲಿ ದೆಹಲಿಯಲ್ಲಿ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ: ಡಿಕೆಶಿ

    ಈ ಮಾತನ್ನು ಕೇಳಿಸಿಕೊಂಡ ಹಾಲಶ್ರೀ ತಕ್ಷಣ ದೇವಸ್ಥಾನ ತೊರೆದು ಒಡಿಸ್ಸಾದ (Odisha) ಭುವನೇಶ್ವರದಿಂದ ಬಿಹಾರದ (Bihar) ಭೋದ್ಗಯ್‍ಗೆ ರೈಲು ಟಿಕೆಟ್ ಬುಕ್ ಮಾಡಿದ್ರು. ಭುವನೇಶ್ವರ ರೈಲ್ವೆ ನಿಲ್ದಾಣಕ್ಕೆ ಪೊಲೀಸರು ಬರಬಹುದು ಅಂತಾ ಶಂಕಿಸಿ ಅಲ್ಲಿಂದ 25 ಕಿ.ಮೀ. ಇರುವ ಕಟಕ್ ರೈಲ್ವೆ ನಿಲ್ದಾಣಕ್ಕೆ (Katak Railway Station) ಬಸ್‍ನಲ್ಲಿ ಪಯಾಣಿಸಿದ್ರು. ಅಷ್ಟೊತ್ತಿಗೆ ಕಟಕ್ ರೈಲ್ವೆ ನಿಲ್ದಾಣದ ಪೊಲೀಸರಿಗೆ ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ರು. ಕಟಕ್ ರೈಲ್ವೆ ನಿಲ್ದಾಣಕ್ಕೆ ಹಾಲಶ್ರೀ ಬರ್ತಿದ್ದಂತೆ ಒಡಿಸ್ಸಾ ಪೊಲೀಸರು ಬಂಧಿಸಿದ್ರು.

    ಉದ್ಯಮಿಗೆ ಕೋಟಿ ಕೋಟಿ ವಂಚನೆ ಕೇಸ್‍ನಲ್ಲಿ ಎ-3 ಹಾಲಶ್ರೀಯ ಬಂಧನವಾಗಿದೆ. ಈಗ ಇರೋದು ಒಂದೇ ಕುತೂಹಲ. ಅಂದು ಚೈತ್ರಾ (Chaitra Kundapur) ಸ್ವಾಮೀಜಿ ಅರೆಸ್ಟ್ ಬಳಿಕ ದೊಡ್ಡವರ ಹೆಸರು ಹೊರಗೆ ಬರುತ್ತೆ ಅಂತ ಹೇಳಿದ್ದಳು. ಇದೀಗ ಸಿಸಿಬಿ ಪೊಲೀಸ್ರು ಅಭಿನವ ಹಾಲಶ್ರೀ ಸ್ವಾಮೀಜಿ ಅರೆಸ್ಟ್ ಮಾಡಿದ್ದಾರೆ. ಇಂದು ಸ್ವಾಮೀಜಿಯನ್ನ ಕಸ್ಟಡಿಗೆ ಪಡೆದು ಅಧಿಕೃತವಾಗಿ ವಿಚಾರಣೆ ಆರಂಭಿಸಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬರ್ಮುಡಾ, ಟೀ ಶರ್ಟ್‍ನಲ್ಲಿ ಸಿಕ್ಕಿಬಿದ್ದ ಹಾಲಶ್ರೀ!

    ಬರ್ಮುಡಾ, ಟೀ ಶರ್ಟ್‍ನಲ್ಲಿ ಸಿಕ್ಕಿಬಿದ್ದ ಹಾಲಶ್ರೀ!

    ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗ್‍ನ ಎ3 ಆರೋಪಿ ಹಾಲಶ್ರೀ (Halashree) ಬಂಧನದ ವೇಳೆ ಖಾವಿ ತೊರೆದು ಬರ್ಮುಡಾ ಹಾಗೂ ಟೀ ಶರ್ಟ್ ಧರಿಸಿದ್ದರು.

    ಸಿಸಿಬಿ (CCB) ಪ್ರಕರಣ ದಾಖಲಿಸಿದಾಗಿನಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅಲ್ಲದೇ ಸಿಸಿಬಿ ಕುಣಿಕೆಯಿಂದ ಜಾರಿಕೊಳ್ಳಲು ಭಾರೀ ಪ್ಲಾನ್ ಮಾಡಿದ್ದು ಬೆಳಕಿಗೆ ಬಂದಿದೆ. ಹಾಲಶ್ರೀ ಜನರಿಗೆ ತಿಳಿಯದಂತೆ ಸಾಮಾನ್ಯರ ವೇಷದಲ್ಲಿ ರೈಲಿನಲ್ಲಿ ಸಂಚರಿಸುತ್ತಿದ್ದರು. ಕಾರು ಬಳಸಿದರೆ ಸುಲಭವಾಗಿ ಸಿಕ್ಕಿ ಹಾಕಿಕೊಳ್ಳುವ ಭಯದಲ್ಲಿ ಸಂಚಾರಕ್ಕೆ ರೈಲನ್ನು ಆಯ್ಕೆ ಮಾಡಿಕೊಂಡು ಕಾಶಿಗೆ ತೆರಳಲು ತಯಾರಿ ನಡೆಸಿದ್ದರು. ಇದನ್ನೂ ಓದಿ: ವೇಷ ಬದಲಿಸಿ ರೈಲಿನಲ್ಲಿ ಪ್ರಯಾಣ- ಹಾಲಶ್ರೀ ಸಿಕ್ಕಿಬಿದ್ದಿದ್ದು ಹೇಗೆ?

    ಮೈಸೂರು, ಹೈದ್ರಾಬಾದ್, ಪುರಿ ಗಂಜಮ್, ಕಟಕ್ ಮಾರ್ಗವಾಗಿ ಕಾಶಿಗೆ ತೆರಳಲು ಪ್ಲಾನ್ ಆಗಿತ್ತು. ಆದರೆ ಒಡಿಶಾದ (Odisha) ಕಟಕ್‍ನಲ್ಲಿ ಸಿಸಿಬಿ ಖೆಡ್ಡಾಕ್ಕೆ ಸ್ವಾಮೀಜಿ ಬಿದ್ದಿದ್ದಾರೆ. ಒಡಿಶಾ ಪೊಲೀಸರ ಸಹಾಯದಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆಯೇ ಸಿಸಿಬಿ ಬಂಧಿಸಿದೆ. ಆರೋಪಿ ಜೊತೆಯಲ್ಲಿದ್ದ ಮತ್ತೋರ್ವ ವ್ಯಕ್ತಿಯನ್ನು ಸಹ ಅಧಿಕಾರಿಗಳು ಬಂಧಿಸಿದ್ದಾರೆ.

    ಹಾಲಶ್ರೀ ಪೊಲೀಸರ ಕಣ್ಣು ತಪ್ಪಿಸಲು ಒಂದು ಕಡೆಯಿಂದ ಮತ್ತೊಂದು ಕಡೆಗೆ ರೈಲಿನಲ್ಲೇ ಪ್ರಯಾಣ ಮಾಡುತ್ತಿದ್ದರು. ಅಲ್ಲದೇ ನಾಲ್ಕು ಬೇಸಿಕ್ ಫೋನ್‍ಗಳು ಹಾಗೂ 4 ಸಿಮ್‍ಗಳ ಬಳಕೆ ಮಾಡುತ್ತಿದ್ದರು ಎಂಬ ವಿಚಾರ ಸಹ ಬೆಳಕಿಗೆ ಬಂದಿದೆ.

    ಪ್ರಕರಣದ ಎ1 ಆರೋಪಿ ಚೈತ್ರಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಬರುವಾಗ ಸ್ವಾಮೀಜಿ ಅರೆಸ್ಟ್ ಆದರೆ ಎಲ್ಲಾ ದೊಡ್ಡ ದೊಡ್ಡವರ ಹೆಸರು ಹೊರ ಬರುತ್ತದೆ ಎಂದು ಹೇಳಿದ್ದಳು. ಈ ವಿಚಾರ ಈಗ ಪ್ರಕರಣದಲ್ಲಿ ಸ್ಫೋಟಕ ತಿರುವು ಪಡೆಯುವ ಸಾಧ್ಯತೆ ಇದೆ. ಇದನ್ನೂ ಓದಿ: ತಲೆಮರೆಸಿಕೊಂಡಿದ್ದ ಹಾಲಶ್ರೀ ಒಡಿಸ್ಸಾದಲ್ಲಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೇಷ ಬದಲಿಸಿ ರೈಲಿನಲ್ಲಿ ಪ್ರಯಾಣ- ಹಾಲಶ್ರೀ ಸಿಕ್ಕಿಬಿದ್ದಿದ್ದು ಹೇಗೆ?

    ವೇಷ ಬದಲಿಸಿ ರೈಲಿನಲ್ಲಿ ಪ್ರಯಾಣ- ಹಾಲಶ್ರೀ ಸಿಕ್ಕಿಬಿದ್ದಿದ್ದು ಹೇಗೆ?

    – ಚೈತ್ರಾ ಕಲರ್ ಕಲರ್ ಕತೆಗೆ ಸಿಗಲಿದೆಯಾ ಕ್ಲೈಮ್ಯಾಕ್ಸ್?

    ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಅವರಿಗೆ ಕೋಟಿ ಕೋಟಿ ವಂಚಿಸಿ ತಲೆಮರೆಸಿಕೊಂಡಿದ್ದ ಹಾಲಶ್ರೀಯನ್ನು (Halashree) ಕೊನೆಗೂ ಬಂಧಿಸಲಾಗಿದೆ. ಸಿಸಿಬಿ (CCB) ಪ್ರಕರಣ ದಾಖಲಿಸಿದಾಗಿನಿಂದ ಆರೋಪಿ ನಾಪತ್ತೆಯಾಗಿದ್ದು, ಸಿಸಿಬಿ ಕುಣಿಕೆಯಿಂದ ಜಾರಿಕೊಳ್ಳಲು ಭಾರೀ ಪ್ಲಾನ್ ಮಾಡಿದ್ದು ಬೆಳಕಿಗೆ ಬಂದಿದೆ.

    ಹಾಲಶ್ರೀ ಜನರಿಗೆ ತಿಳಿಯದಂತೆ ಸಾಮಾನ್ಯರ ವೇಷದಲ್ಲಿ ರೈಲಿನಲ್ಲಿ ಸಂಚರಿಸುತ್ತಿದ್ದರು. ಕಾರು ಬಳಸಿದರೆ ಸುಲಭವಾಗಿ ಸಿಕ್ಕಿ ಹಾಕಿಕೊಳ್ಳುವ ಭಯದಲ್ಲಿ ಸಂಚಾರಕ್ಕೆ ರೈಲನ್ನೇ ಆಯ್ಕೆ ಮಾಡಿಕೊಂಡು ಈಶಾನ್ಯ ರಾಜ್ಯಕ್ಕೆ ತೆರಳುವ ಸಂಚು ರೂಪಿಸಿರುವುದು ಬಯಲಾಗಿದೆ. ಈ ಮೂಲಕ ಕಾಶಿಗೆ ತೆರಳಲು ತಯಾರಿ ನಡೆಸಿರುವುದು ತಿಳಿದು ಬಂದಿದೆ. ಇದನ್ನೂ ಓದಿ: ತಲೆಮರೆಸಿಕೊಂಡಿದ್ದ ಹಾಲಶ್ರೀ ಒಡಿಸ್ಸಾದಲ್ಲಿ ಅರೆಸ್ಟ್

    ಮೈಸೂರು, ಹೈದ್ರಾಬಾದ್, ಪುರಿ ಗಂಜಮ್, ಕಟಕ್ ಮಾರ್ಗವಾಗಿ ಕಾಶಿಗೆ ತೆರಳಲು ಪ್ಲಾನ್ ಆಗಿತ್ತು. ಆದರೆ ಒಡಿಸ್ಸಾದ (Odisha) ಕಟಕ್‍ನಲ್ಲಿ ಸಿಸಿಬಿ ಖೆಡ್ಡಾಕ್ಕೆ ಸ್ವಾಮೀಜಿ ಬಿದ್ದಿದ್ದಾರೆ. ಒಡಿಸ್ಸಾ ಪೊಲೀಸರ ಸಹಾಯದಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆಯೇ ಸಿಸಿಬಿ ಬಂಧಿಸಿದೆ. ಆರೋಪಿ ಜೊತೆಯಲ್ಲಿದ್ದ ಮತ್ತೋರ್ವ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.

    ಹಾಲಶ್ರೀ ಪೊಲೀಸರ ಕಣ್ಣು ತಪ್ಪಿಸಲು ಒಂದು ಕಡೆಯಿಂದ ಮತ್ತೊಂದು ಕಡೆಗೆ ರೈಲಿನಲ್ಲೇ ಪ್ರಯಾಣ ಮಾಡುತ್ತಿದ್ದರು. ಅಲ್ಲದೇ ನಾಲ್ಕು ಬೇಸಿಕ್ ಫೋನ್‍ಗಳು ಹಾಗೂ 4 ಸಿಮ್‍ಗಳ ಬಳಕೆ ಮಾಡುತ್ತಿದ್ದರು ಎಂಬ ವಿಚಾರ ಸಹ ಬೆಳಕಿಗೆ ಬಂದಿದೆ.

    ಇನ್ನೂ ಪ್ರಕರಣದ ಎ1 ಆರೋಪಿ ಚೈತ್ರಾ (Chaitra Kundapura) ಸಾಂತ್ವಾನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಬರುವಾಗ ಸ್ವಾಮೀಜಿ ಅರೆಸ್ಟ್ ಆದರೆ ಎಲ್ಲಾ ದೊಡ್ಡ ದೊಡ್ಡವರ ಹೆಸರು ಹೊರ ಬರುತ್ತದೆ ಎಂದು ಹಾಕಿದ್ದ ಬಾಂಬ್ ಈಗ ಸಿಡಿಯಲಿದೆಯೇ? ಎಂಬ ಕುತೂಹಲಕ್ಕೆ ದಾರಿ ಮಾಡಿ ಕೊಟ್ಟಿದೆ. ಸ್ವಾಮೀಜಿ ಈಗ ಯಾರ ಯಾರ ಹೆಸರು ಬಾಯಿ ಬಿಡಲಿದ್ದಾರೆ? ಯಾರೆಲ್ಲ ಪ್ರಕರಣದ ಹಿಂದೆ ಇದ್ದಾರೆ? ಎಂಬ ವಿಚಾರ ಇನ್ನಷ್ಟೇ ಹೊರಬರಬೇಕಿದೆ. ಇದನ್ನೂ ಓದಿ: ಕೋಟಿ ಕೋಟಿ ವಂಚನೆ ಪ್ರಕರಣ – ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಸಿಬಿ ಆಕ್ಷೇಪಣೆ ಸಾಧ್ಯತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಲೆಮರೆಸಿಕೊಂಡಿದ್ದ ಹಾಲಶ್ರೀ ಒಡಿಸ್ಸಾದಲ್ಲಿ ಅರೆಸ್ಟ್

    ತಲೆಮರೆಸಿಕೊಂಡಿದ್ದ ಹಾಲಶ್ರೀ ಒಡಿಸ್ಸಾದಲ್ಲಿ ಅರೆಸ್ಟ್

    ಭುವನೇಶ್ವರ್: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿ  (Fraud case) ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗ್‍ನ ಎ3 ಆರೋಪಿ ಅಭಿನವ ಹಾಲಶ್ರೀಯನ್ನು (Halashree)‌ ಸಿಸಿಬಿ ಒಡಿಸ್ಸಾದಲ್ಲಿ ಬಂಧಿಸಿದೆ.

    ಪ್ರಕರಣ ದಾಖಲಾದಾಗಿನಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಇದೀಗ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು, ಬೆಂಗಳೂರಿಗೆ ಕರೆತರಲಾಗುತ್ತಿದೆ. ಆರೋಪಿ ಬಂಧನಕ್ಕೆ ಸಿಸಿಬಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದರು. ಹೈದರಾಬಾದ್‍ನಲ್ಲಿ ಅಡಗಿದ್ದ ಮಾಹಿತಿ ಮೇರೆಗೆ ಅಲ್ಲಿಗೂ ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿತ್ತು. ಅಲ್ಲದೇ ಸ್ವಾಮೀಜಿ ಆಪ್ತರ ತೀವ್ರ ವಿಚಾರಣೆ ಕೂಡ ನಡೆಸಲಾಗಿತ್ತು. ಇದೀಗ ಒಡಿಸ್ಸಾದ ಹೋಟೆಲ್ ಒಂದರಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಕೋಟಿ ಕೋಟಿ ವಂಚನೆ ಪ್ರಕರಣ – ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಸಿಬಿ ಆಕ್ಷೇಪಣೆ ಸಾಧ್ಯತೆ

    ಆರೋಪಿ ಹಾಲಶ್ರೀ ಫೋನ್ ಬಳಸದೆ ಪದೇ ಪದೇ ಇರುವ ಸ್ಥಳ ಬದಲಾಯಿಸುತ್ತಿದ್ದು, ಬಂಧನಕ್ಕೆ ಸ್ವಲ್ಪ ಕಷ್ಟವಾಗಿತ್ತು. ಆದರೆ ಇದೀಗ ಆರೋಪಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವುದು ಖಚಿತವಾಗಿದೆ. ಸ್ವಾಮೀಜಿಗಾಗಿ ಪ್ರತ್ಯೇಕವಾಗಿ ಎರಡು ತಂಡಗಳು ಕಾರ್ಯಚರಣೆ ನಡೆಸುತ್ತಿದ್ದವು. ಇದನ್ನೂ ಓದಿ: ಚೈತ್ರಾ ಕುಂದಾಪುರ ಡೀಲ್ ಕೇಸ್- RSS ಕದ ತಟ್ಟಿದ್ದ ಗೋವಿಂದ ಪೂಜಾರಿ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಟಿ ಕೋಟಿ ವಂಚನೆ ಪ್ರಕರಣ – ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಸಿಬಿ ಆಕ್ಷೇಪಣೆ ಸಾಧ್ಯತೆ

    ಕೋಟಿ ಕೋಟಿ ವಂಚನೆ ಪ್ರಕರಣ – ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಸಿಬಿ ಆಕ್ಷೇಪಣೆ ಸಾಧ್ಯತೆ

    ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿ ಬಂಧನಕ್ಕೊಳಗಾಗಿರುವ ಚೈತ್ರಾ (Chaitra Kundapura) ಗ್ಯಾಂಗ್‍ನ ಎ3 ಆರೋಪಿ ಅಭಿನವ ಹಾಲಶ್ರೀ (Abhinava Halashri) ನಿರೀಕ್ಷಣಾ ಜಾಮೀನು ಅರ್ಜಿ ವಿಚಾರವಾಗಿ ಇಂದು (ಮಂಗಳವಾರ) ಸಿಸಿಬಿ (CCB) ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ.

    ಸದ್ಯ ತಲೆಮರೆಸಿಕೊಂಡಿರುವ ಹಾಲಶ್ರೀ, ಪ್ರಕರಣ ದಾಖಲಾಗಿ ಹತ್ತು ದಿನ ಕಳೆದರೂ ಪತ್ತೆಯಾಗಿಲ್ಲ. ಆರೋಪಿ ಬಂಧನಕ್ಕೆ ಸಿಸಿಬಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಬಂಧನಕ್ಕೆ ಅಧಿಕಾರಿಗಳ ತಂಡ ಹೈದರಾಬಾದ್‍ಗೆ ತೆರಳಿದೆ. ಅಲ್ಲದೇ ಸ್ವಾಮೀಜಿ ಆಪ್ತರನ್ನು ವಿಚಾರಣೆ ನಡೆಸಿ ಅಡಗಿರುವ ಸ್ಥಳದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ಡೀಲ್ ಕೇಸ್- RSS ಕದ ತಟ್ಟಿದ್ದ ಗೋವಿಂದ ಪೂಜಾರಿ!

    ಆರೋಪಿ ಹಾಲಶ್ರೀ ಫೋನ್ ಬಳಸದೆ ಪದೇ ಪದೇ ಇರುವ ಸ್ಥಳ ಬದಲಾಯಿಸುತ್ತಿರುವ ಮಾಹಿತಿ ಸಿಸಿಬಿಗೆ ದೊರೆತಿದೆ. ಇದೇ ಕಾರಣಕ್ಕೆ ಆರೋಪಿಯ ಆತ್ಮೀಯರು ಹಾಗೂ ಕೊನೆ ಕ್ಷಣದ ಕರೆ ಆಧಾರದ ಮೇಲೆ ತನಿಖೆ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ಚೈತ್ರಾ ಹೊರತು ಪಡಿಸಿ ಉಳಿದೆಲ್ಲಾ ಆರೋಪಿಗಳ ಹೇಳಿಕೆ ದಾಖಲಿಸಲಾಗಿದೆ. ಎಲ್ಲಾ ಆರೋಪಿಗಳು ಚೈತ್ರಾ ಹಾಗೂ ಗಗನ್ ವಿರುದ್ಧ ಬೆರಳು ಮಾಡಿದ್ದಾರೆ.

    ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಎ1 ಆರೋಪಿ ಚೈತ್ರಾ ಮೌನಕ್ಕೆ ಜಾರಿದ್ದು, ಸಿಸಿಬಿ ಅಧಿಕಾರಿಗಳ ಪ್ರಶ್ನೆಗೆ ಯಾವುದೇ ಉತ್ತರವನ್ನು ನೀಡುತ್ತಿಲ್ಲ. ಇದೇ ಕಾರಣಕ್ಕೆ 30 ಪ್ರಶ್ನೆಗಳನ್ನೊಳಗೊಂಡ ಪ್ರಶ್ನಾವಳಿಯನ್ನು ಸಿದ್ಧಪಡಿಸಿ ವಿಚಾರಣೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

    ಆರೋಪಿಗಳ ಮೊಬೈಲ್‍ಗಳಲ್ಲಿನ ಎಲ್ಲಾ ಸಂದೇಶಗಳು, ಕರೆಗಳು, ಫೋಟೋಗಳು ಹಾಗೂ ಕರೆಯ ಡೀಟೆಲ್ಸ್ ಡಿಲೀಟ್ ಆಗಿದ್ದು, ರಿಟ್ರೀವ್‍ಗೆ ಕೊಡಲಾಗಿತ್ತು. ಇಂದು ಕೆಲವು ಆರೋಪಿಗಳ ಮೊಬೈಲ್‍ನ ರಿಟ್ರೀವ್ ರಿಪೋರ್ಟ್ ಬರುವ ಸಾಧ್ಯತೆ ಇದ್ದು ತನಿಖೆಯಲ್ಲಿ ಮಹತ್ತರ ಸುಳಿವು ಸಿಗುವ ಸಾಧ್ಯತೆ ಇದೆ. ಇದನ್ನೂ ಓದಿ: CCB ಅಧಿಕಾರಿಗಳ ಮುಂದೆ ಮೌನಾಚರಣೆ – ಚೈತ್ರಾಳ ಮುಂದಿರುವ ಆ 30 ಪ್ರಶ್ನೆಗಳೇನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೈತ್ರಾ ಕುಂದಾಪುರ ಡೀಲ್ ಕೇಸ್- RSS ಕದ ತಟ್ಟಿದ್ದ ಗೋವಿಂದ ಪೂಜಾರಿ!

    ಚೈತ್ರಾ ಕುಂದಾಪುರ ಡೀಲ್ ಕೇಸ್- RSS ಕದ ತಟ್ಟಿದ್ದ ಗೋವಿಂದ ಪೂಜಾರಿ!

    ಬೆಂಗಳೂರು: ಚೈತ್ರಾ ಕುಂದಾಪುರ & ಗ್ಯಾಂಗ್‍ನಿಂದ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೊಸ ಹೋಗಿದ್ದ ಗೋವಿಂದ ಪೂಜಾರಿ ವಂಚನೆ ವಿಚಾರವಾಗಿ ಏಪ್ರಿಲ್ ತಿಂಗಳಲ್ಲೇ ಆರ್ ಎಸ್‍ಎಸ್ (RSS) ಕದ ತಟ್ಟಿದ್ದರಂತೆ.

    ಈ ವೇಳೆ ಆರ್‍ಎಸ್‍ಎಸ್ ನಾಯಕರು ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಲು ಹಿಂದೇಟು ಹಾಕಿದ್ದಾರೆ. ಅಲ್ಲದೆ ಚೈತ್ರಾ ಹಿಂದುತ್ವದ ಬಗ್ಗೆ ಭಾಷಣ ಮಾಡಿದ ಮಾತ್ರಕ್ಕೆ ವಂಚನೆ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಸಾಧ್ಯವಿಲ್ಲ ಎಂದಿದ್ದಾರಂತೆ. ಈ ರೀತಿ ವ್ಯವಹಾರಗಳು ಟಿಕೆಟ್ (BJP Ticket) ಕೊಡಿಸುವ ವಿಚಾರಗಳಲ್ಲಿ ಆರ್‍ಎಸ್‍ಎಸ್ ಹೀಗೆಲ್ಲ ಮಧ್ಯಪ್ರವೇಶ ಮಾಡಿಲ್ಲ ಎಂದಿದ್ರಂತೆ.

    ಹಣ ಕೊಟ್ಟು ಟಿಕೆಟ್ ಪಡೆಯಲು ಮುಂದಾಗಿದ್ದ ಗೋವಿಂದ ಪೂಜಾರಿಗೆ ನೀವೇ ಸಮಸ್ಯೆ ಬಗೆಹರಿಸಿಕೊಳ್ಳಿ. ಇಲ್ಲ ಬಿಜೆಪಿ ಅವ್ರ ಹತ್ರ ಮಾತಾಡಿ. ನಾವು ಮಾತ್ರ ಸಂಧಾನ ಮಾಡಿಸಲ್ಲ ಅಂತಾ ಆರ್ ಎಸ್‍ಎಸ್ ನಾಯಕರು ಹೇಳಿದ್ದಾರಂತೆ. ಒಂದು ವೇಳೆ ಬಿಜೆಪಿ ನಾಯಕರು ಬಗೆಹರಿಸದಿದ್ದರೆ ಕಾನೂನು ಇದೆ ಹೋಗಿ ಎಂದು ಸಂದೇಶ ಕೊಟ್ಟಿದ್ದಾರಂತೆ. ಇದನ್ನೂ ಓದಿ: CCB ಅಧಿಕಾರಿಗಳ ಮುಂದೆ ಮೌನಾಚರಣೆ – ಚೈತ್ರಾಳ ಮುಂದಿರುವ ಆ 30 ಪ್ರಶ್ನೆಗಳೇನು?

    ಇದೆಲ್ಲ ಕಹಾನಿ ನಡೆದು 4 ತಿಂಗಳ ಕಾಲ ಹಣ ವಾಪಸ್ ಪಡೆಯಲು ಗೋವಿಂದ ಪೂಜಾರಿ ನಾನಾ ಸರ್ಕಸ್ ನಡೆಸಿದ್ರಂತೆ. ಯಾವಾಗ ಬಿಜೆಪಿ ನಾಯಕರೂ ಸಂಧಾನಕ್ಕೆ ಡೋಂಟ್ ಕೇರ್ ಅಂದ್ರೋ ಆಗ ಗೋವಿಂದ ಪೂಜಾರಿ ಚೈತ್ರಾ& ಗ್ಯಾಂಗ್ ವಿರುದ್ಧ ದೂರು ಕೊಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • CCB ಅಧಿಕಾರಿಗಳ ಮುಂದೆ ಮೌನಾಚರಣೆ – ಚೈತ್ರಾಳ ಮುಂದಿರುವ ಆ 30 ಪ್ರಶ್ನೆಗಳೇನು?

    CCB ಅಧಿಕಾರಿಗಳ ಮುಂದೆ ಮೌನಾಚರಣೆ – ಚೈತ್ರಾಳ ಮುಂದಿರುವ ಆ 30 ಪ್ರಶ್ನೆಗಳೇನು?

    ಬೆಂಗಳೂರು: ಸಿಸಿಬಿ ಡ್ರಿಲ್ ತಪ್ಪಿಸಿಕೊಳ್ಳಲು ಬಾಯಲ್ಲಿ ನೊರೆ ಸೃಷ್ಟಿಸಿಕೊಂಡು ಮೂರ್ಛೆ ರೋಗದ ನಾಟಕವಾಡಿದ್ದ ವಂಚನೆ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರ (Chaitra Kundapura) ಆಸ್ಪತ್ರೆ ಎಪಿಸೋಡ್‌ಗೆ ಬ್ರೇಕ್ ಬಿದ್ದಿದೆ. 3 ದಿನಗಳಿಂದ ವಿಕ್ಟೋರಿಯಾ ಆಸ್ಪತ್ರ‍್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಚೈತ್ರಾಳನ್ನ ಸೋಮವಾರ ಡಿಸ್ಚಾರ್ಜ್ ಮಾಡಲಾಗಿದೆ.

    ಆಸ್ಪೆçಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಪೊಲೀಸರು ಸಿಸಿಬಿ (CCB Police) ಕಚೇರಿಗೆ ಕರೆದೊಯ್ದಿದ್ದರು. ಇದೀಗ ಚೈತ್ರಾ ಆರೋಗ್ಯವಾಗಿದ್ದರು ಕೂಡ ತನಿಖಾಧಿಕಾರಿಗಳ ಮುಂದೆ ಮೌನಂ ಸಮ್ಮತ್ತಿ ಲಕ್ಷಣಂ ಎಂಬಂತೆ ಚೈತ್ರಾ ಮೌನ್ಯಕ್ಕೆ ಜಾರಿದ್ದಾಳೆ. ತನಿಖಾಧಿಕಾರಿಗಳ ಮುಂದೆ ಜಪ್ಪಯ್ಯ ಅಂದರೂ ಬಾಯ್ಬಿಡ್ತಿಲ್ಲ. ತನಿಖಾಧಿಕಾರಿಗಳ ಪ್ರಶ್ನೆಗೆ ಮೌನವೇ ಚೈತ್ರಾಳ ಉತ್ತರವಾಗಿದ್ದು, ಸುಸ್ತಾಗಿರುವಂತೆ ನಾಟಕವಾಡಲು ಶುರು ಮಾಡಿಕೊಂಡಿದ್ದಾಳೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ಮೇಲೆ ಮತ್ತೊಂದು FIR – ಸನಾತನ ಧರ್ಮ ಬಟ್ಟೆ ಮಳಿಗೆ ಪ್ರಕರಣದಲ್ಲೂ ವಂಚನೆ

    ಚೈತ್ರಾ ಮೌನಕ್ಕೆ ಜಾರಿರೋದ್ರಿಂದ ಉತ್ತರಿಸುವಂತೆ ಪ್ರಶ್ನಾವಳಿಗಳನ್ನ ಪಟ್ಟ ಮಾಡಿ ಸಿಸಿಬಿ ಕೊಟ್ಟಿದೆ. ರಿಕವರಿ ಮಾಡಿದ ಹಣ ಹೊರತುಪಡಿಸಿ ಉಳಿದ ಹಣದ ಎಲ್ಲಿ? ಸ್ವಾಮೀಜಿಗೆ ಎಷ್ಟು ಹಣ ಕೊಟ್ಟಿದ್ದಿರಿ? ಹೀಗೆ 30ಕ್ಕೂ ಹೆಚ್ಚು ಪ್ರಶ್ನಾವಳಿಗಳನ್ನ ಮಾಡಿ ಚೈತ್ರಾಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಪ್ರಶ್ನಾವಳಿಗೂ ಸರಿಯಾಗಿ ಉತ್ತರ ಕೊಡಲು ನಿರಾಕರಿಸಿದ್ರೆ ಉಳಿದ ಆರೋಪಿಗಳ ಸಮ್ಮುಖದಲ್ಲಿ ವಿಚಾರಣೆ ಮಾಡಲು ಸಿಸಿಬಿ ತಯಾರಿ ಮಾಡಿಕೊಂಡಿದೆ. ಇದನ್ನೂ ಓದಿ: ಚೈತ್ರಾ ಕುಂದಾಪುರಗೆ ಪಿಟ್ಸ್ ಬಂದಿಲ್ಲ, ನೊರೆ ಅವರೇ ಮಾಡಿಕೊಂಡಿರೋದು: ಡಾ.ದಿವ್ಯಪ್ರಕಾಶ್

    ನಿನ್ನೆಯಷ್ಟೇ PMSSY ಆಸ್ಪತ್ರೆಯ ಸ್ಪೆಷಲ್ ಆಫೀಸರ್ ದಿವ್ಯ ಪ್ರಕಾಶ್ ಮಾತನಾಡಿ, ಎಲ್ಲ ತಪಾಸಣೆಯಲ್ಲೂ ನಾರ್ಮಲ್ ಇದೆ. ಇಸಿಜಿ ಕೂಡ ನಾರ್ಮಲ್ ಇದೆ. ನ್ಯೂರಾಲಾಜಿಸ್ಟ್, ಮನೋ ವೈದ್ಯರು ತಪಾಸಣೆ ಮಾಡಿದ್ದಾರೆ. ಎಲ್ಲರೂ ಕೂಡ ಸಮಸ್ಯೆ ಇಲ್ಲ. ಪಿಟ್ಸ್ ಬಗ್ಗೆ ಏನೂ ಕಂಡು ಬಂದಿಲ್ಲ, ನೊರೆಯನ್ನು ಅವರೇ ಸೃಷ್ಟಿ ಮಾಡಿಕೊಂಡಿದ್ದಾರೆ. ವೈದ್ಯರ ಸ್ಪಷ್ಟನೆ ಬಳಿಕ ಆಸ್ಪತ್ರೆ ಹಿಂಭಾಗದಿಂದ ಸಿಸಿಬಿ ಪೊಲೀಸರು ಚೈತ್ರಾಳನ್ನ ಸಿಸಿಬಿ ಕಚೇರಿಗೆ ಕರೆದೊಯ್ದಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 3 ದಿನಗಳ ಆಸ್ಪತ್ರೆ ನಾಟಕ ಬಂದ್ – ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್‌

    3 ದಿನಗಳ ಆಸ್ಪತ್ರೆ ನಾಟಕ ಬಂದ್ – ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್‌

    ಬೆಂಗಳೂರು: ವಿಚಾರಣೆ ಸಂದರ್ಭದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದು, ಕಳೆದ ಮೂರು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರಳನ್ನ (Chaitra Kundapura) ವಿಕ್ಟೋರಿಯಾ ಆಸ್ಪತ್ರೆಯಿಂದ (Victoria Hospital) ಡಿಸ್ಚಾರ್ಜ್‌ ಮಾಡಲಾಗಿದೆ.

    ಸತತ ವೈದ್ಯಕೀಯ ತಪಾಸಣೆ ನಂತರ ಎಲ್ಲಾ ವರದಿಗಳು ನಾರ್ಮಲ್‌ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಿದ್ದು, ಅಲ್ಲಿಂದ ನೇರವಾಗಿ ಪೊಲೀಸರು ಸಿಸಿಬಿ (CCB Police) ಕಚೇರಿಗೆ ಕರೆತಂದಿದ್ದಾರೆ. ಚೈತ್ರಾಳ ತಲೆ ಹಾಗೂ ಮುಖಕ್ಕೆ ಮಾಸ್ಕ್‌ ಕಟ್ಟಿಸಿ ಆಸ್ಪತ್ರೆ ಹಿಂಬಾಗಿಲಿನಿಂದ ಪೊಲೀಸರು ಕರೆ ತಂದಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರಗೆ ಪಿಟ್ಸ್ ಬಂದಿಲ್ಲ, ನೊರೆ ಅವರೇ ಮಾಡಿಕೊಂಡಿರೋದು: ಡಾ.ದಿವ್ಯಪ್ರಕಾಶ್

    ಇಂದಿನಿಂದಲೇ ವಿಚಾರಣೆ ನಡೆಸಲು ಎಲ್ಲಾ ಹಂತದ ಸಿದ್ಧತೆ ಮಾಡಿಕೊಂಡಿದ್ದಾರೆ. ಐದಾರು ದಿನಗಳ ಕಾಲ ಕಸ್ಟಡಿಯಲ್ಲಿ ವಿಚಾರಣೆ ನಡೆಸಿ, ನಂತರ ಸ್ಥಳ ಮಹಜರು ನಡೆಸಬೇಕು. ಬಳಿಕ ಉಳಿದ ಆರೋಪಿಗಳನ್ನೂ ಚೈತ್ರಾಳ ಮುಖಾಮುಖಿಯಾಗಿ ಕೂರಿಸಿ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಗಣೇಶ ಹಬ್ಬದಂದೇ ಇಸ್ರೋ ಗುಡ್‌ನ್ಯೂಸ್ – ಡೇಟಾ ಸಂಗ್ರಹಿಸಲು ಆರಂಭಿಸಿದ ಆದಿತ್ಯ L1

    ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರಳನ್ನ ಸಿಸಿಬಿ ಪೊಲೀಸರು ಸೆಪ್ಟೆಂಬರ್ 15 ರಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದರು. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಳು. ತಕ್ಷಣವೇ ಆಕೆಯನ್ನ ವಿಕ್ಟೋರಿಯಾ ಟ್ರಾಮಾ ಕೇರ್ ಸೆಂಟರ್‌ಗೆ ದಾಖಲಿಸಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೈತ್ರಾ ಕುಂದಾಪುರಗೆ ಪಿಟ್ಸ್ ಬಂದಿಲ್ಲ, ನೊರೆ ಅವರೇ ಮಾಡಿಕೊಂಡಿರೋದು: ಡಾ.ದಿವ್ಯಪ್ರಕಾಶ್

    ಚೈತ್ರಾ ಕುಂದಾಪುರಗೆ ಪಿಟ್ಸ್ ಬಂದಿಲ್ಲ, ನೊರೆ ಅವರೇ ಮಾಡಿಕೊಂಡಿರೋದು: ಡಾ.ದಿವ್ಯಪ್ರಕಾಶ್

    ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವ ವಿಚಾರದಲ್ಲಿ 5 ಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ (Chaitra Kundapura) ಆರೋಗ್ಯ ಚೆನ್ನಾಗಿದೆ ಎಂಬುದು ವೈದ್ಯಕೀಯ ತಪಾಸಣೆ ಬಳಿಕ ಸ್ಪಷ್ಟವಾಗಿದೆ.

    ಈ ಕುರಿತು ಮಾತನಾಡಿರುವ ವೈದ್ಯ ಡಾ.ದಿವ್ಯಪ್ರಕಾಶ್ (Dhivya Prakash), ಚೈತ್ರಾಳ ಆರೋಗ್ಯ ಎಲ್ಲಾ ತಪಾಸಣೆಯಲ್ಲೂ ನಾರ್ಮಲ್ ಇದೆ, ಇಸಿಜಿ ಕೂಡ ನಾರ್ಮಲ್ ಇದೆ. ನ್ಯೂರಾಲಾಜಿಸ್ಟ್, ಮನೋ ವೈದ್ಯರು ತಪಾಸಣೆ ಮಾಡಿದ್ದಾರೆ. ಎಲ್ಲೂ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ. ಇಂದೇ ಆಕೆಯನ್ನ ಡಿಸ್ಚಾರ್ಜ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸದ್ಯಕ್ಕೆ ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್‌ ಇಲ್ಲ: ಬಾಲಾಜಿ ಪೈ

    ಚೈತ್ರಾಳ ಬಾಯಲ್ಲಿ ನೊರೆ ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ಫಂಕ್ಷನಲ್ ಆಗಿ ಆಗಿರೋದು. ಅವರೇ ಅದನ್ನ ಮಾಡಿಕೊಂಡಿರೋದು. ಪಿಟ್ಸ್ ಏನೂ ಬಂದಿಲ್ಲ. ಬೆಳಗ್ಗೆ ಸಿಸಿಬಿ ಅಧಿಕಾರಿಗಳು ವಿಚಾರಿಸಿದ್ದಾರೆ, ಆರೋಗ್ಯ ಚೆನ್ನಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಪ್ರಕರಣ- ಇದುವರೆಗೂ 3 ಕೋಟಿಯಷ್ಟು ಮೌಲ್ಯದ ನಗದು, ಚಿನ್ನ ಜಪ್ತಿ

    ಇದೇ ವೇಳೆ ಪಿಟ್ಸ್ ಇತ್ತ ಎಂಬ ವಿಚಾರಕ್ಕೆ ಉತ್ತರಿಸಿದ ವೈದ್ಯರು, ಪಿಟ್ಸ್ ಪತ್ತೆ ಮಾಡೋದಕ್ಕೆ ಎಂಆರ್‌ಐ ಸ್ಕ್ಯಾನಿಂಗ್ ಮಾಡಿದ್ದೀವಿ. ಇಇಜಿ ಸ್ಕ್ಯಾನಿಂಗ್ ಕೂಡ ಮಾಡಿದ್ದೇವೆ ಎಲ್ಲಾ ನಾರ್ಮಲ್ ಇದೆ. ಸದ್ಯಕ್ಕೆ ಪಿಟ್ಸ್ ಕಂಡು ಬಂದಿಲ್ಲ. ನ್ಯೂರಾಲಾಜಿಸ್ಟ್ ಕೆಲವು ಮಾತ್ರೆ ಕೊಟ್ಟಿದ್ದಾರೆ ಎಂದು ವಿವರಿಸಿದ್ದಾರೆ.

    ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರಳನ್ನ ಸಿಸಿಬಿ ಪೊಲೀಸರು ಸೆಪ್ಟೆಂಬರ್ 15 ರಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದರು. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಳು. ತಕ್ಷಣವೇ ಆಕೆಯನ್ನ ವಿಕ್ಟೋರಿಯಾ ಟ್ರಾಮಾ ಕೇರ್ ಸೆಂಟರ್‌ಗೆ ದಾಖಳಿಸಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೈತ್ರಾ ಕುಂದಾಪುರ ಡೀಲ್ ಕೇಸ್- ಗೋವಿಂದ ಪೂಜಾರಿ ವಿರುದ್ಧ ಗಗನ್ ದೂರು

    ಚೈತ್ರಾ ಕುಂದಾಪುರ ಡೀಲ್ ಕೇಸ್- ಗೋವಿಂದ ಪೂಜಾರಿ ವಿರುದ್ಧ ಗಗನ್ ದೂರು

    ಉಡುಪಿ: ಚೈತ್ರಾ ಕುಂದಾಪುರ (Chaitra Kundapura) 5 ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧ ದಿನಕ್ಕೊಂದು ತಿರುವು ಪಡೆಯುತ್ತಿರುವ ಬೆನ್ನಲ್ಲೇ ಉದ್ಯಮಿ ಗೋವಿಂದ ಪೂಜಾರಿ ವಿರುದ್ಧ ಗಗನ್ (Gagan Kadoor) ಪೊಲೀಸ್ ಠಾಣೆ ಮಟ್ಟಿಲೇರಿದ್ದಾನೆ.

    ದೂರಿನ ಪತ್ರ ಬರೆದು ಗಗನ್, ಚಿಕ್ಕಮಗಳೂರು ಜಿಲ್ಲೆ ಕಡೂರು ಠಾಣೆಗೆ ರವಾನಿಸಿದ್ದಾನೆ. ನನಗೂ ಪತ್ನಿಗೂ ಗೋವಿಂದ ಬಾಬು ಪೂಜಾರಿಯಿಂದ ಜೀವಬೆದರಿಕೆ ಇದೆ ಎಂದು ಪತ್ರದಲ್ಲಿ ತಿಳಿಸಿದ್ದಾನೆ.

    ಪತ್ರದಲ್ಲೇನಿದೆ..?: ಕಡೂರು ನಿವಾಸಿಯಾಗಿರುವ ನಾನು ಹಲವು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಕೆಲಸ ನಿರ್ವಹಿಸುತ್ತಿದ್ದು ರಾಜಕೀಯವಾಗಿ ಹಾಗೂ ಸಾಮಾಜಿಕ ತೊಡಗಿಸಿಕೊಂಡಿದ್ದೇನೆ. ನನಗೆ ಕಳೆದ ಕೆಲವು ವರ್ಷಗಳಿಂದ ಗೋವಿಂದ ಬಾಬು ಪೂಜಾರಿ ಎನ್ನುವ ಬೈಂದೂರು ಮೂಲದ ಉದ್ಯಮಿ ಪರಿಚಯವಿದ್ದ ನನ್ನನ್ನು ಆತ್ಮೀಯವಾಗಿ ನೋಡಿಕೊಳ್ಳುತ್ತಿದ್ದರು. ಕಳೆದ 4-5 ತಿಂಗಳ ಹಿಂದೆ ನನ್ನ ಮದುವೆಯ ಸಂದರ್ಭದಲ್ಲಿ ನಾನು ಮದುವೆ ಆಮಂತ್ರಣ ನಿಡಲು ಬೆಂಗಳೂರಿನಲ್ಲಿರುವ ಅವರ ಕಚೇರಿಗೆ ತೆರಳಿದ್ದಾಗ ಅವರು ಮದುವೆಯ ಖರ್ಚಿಗೆಂದು 50 ಸಾವಿರ ರೂ. ನೀಡಿದ್ದರು. ಇದನ್ನೂ ಓದಿ: ಗೋವಿಂದ ಬಾಬು ಪೂಜಾರಿಗೆ ಬೈದಿದ್ದೇನೆ: ಸೂಲಿಬೆಲೆ ಫಸ್ಟ್ ರಿಯಾಕ್ಷನ್

    ಆ ಹಣವನ್ನು ಸಕಾಲದಲ್ಲಿ ನನಗೆ ಹಿಂದಿರುಗಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ನಾನು ಅವರ ಬಳಿ ಸಮಯವಕಾಶ ಕೇಳುತ್ತಿದ್ದೆ. ಆದರೆ ಅವರು ನನ್ನ ಗೆಳತಿಗೆ ಕರೆ ಮಾಡಿ ನನ್ನ ಹಾಗೂ ನನ್ನ ಹೆಂಡತಿಯನ್ನು ಎತ್ತಾಕ್ಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ನನ್ನ ಗೆಳತಿಯೊಂದಿಗೆ ಮಾತನಾಡಿರುವ ಕಾಲ್ ರೆಕಾರ್ಡ್ ಸಾಕ್ಷಿಯಾಗಿ ಒದಗಿಸಿರುತ್ತೇನೆ. ಹೀಗಾಗಿ ನನಗೂ ನನ್ನ ಹೆಂಡ್ತಿಗೂ ಸೂಕ್ತ ರಕ್ಷಣೆ ಹಾಗೂ ಗೋವಿಂದ ಬಾಬು ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಗಗನ್ ವಿನಂತಿಸಿದ್ದಾನೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]