ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾವು ಸ್ಪರ್ಧೆ ಮಾಡ್ತೀವಿ ಎಂಬ ಯತ್ನಾಳ್ ಟೀಂನ ಕುಮಾರ್ ಬಂಗಾರಪ್ಪ (Kumar Bangarappa) ಹೇಳಿಕೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ತಿರುಗೇಟು ಕೊಟ್ಟಿದ್ದಾರೆ.
ಬಿಜೆಪಿ (BJP) ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷ (BJP state president) ಸ್ಥಾನಕ್ಕೆ ಚುನಾವಣೆ ನಡೆದರೆ ಯಾರು ಬೇಕಾದ್ರು ಸ್ಪರ್ಧೆ ಮಾಡಲಿ. ಎಲ್ಲಿ ಚುನಾವಣೆ ಆಗುತ್ತದೆ. ಒಂದು ಚುನಾವಣೆ ಆದರೆ ಯಾರು ಬೇಕಾದ್ರು ಸ್ಪರ್ಧೆ ಮಾಡಬಹುದು. ಆದರಿಲ್ಲಿ ಚುನಾವಣೆ ಆಗೊಲ್ಲ. ಚುನಾವಣೆ ಆದರೆ ಸ್ಪರ್ಧೆ ಮಾಡ್ತೀವಿ ಅಂತ ಅವರು ಯಾಕೆ ಹೇಳಿದ್ರು ಅವರನ್ನೇ ಕೇಳಿ. ನಿನ್ನೆ ಇಲ್ಲ ಅಂದರು, ಇವತ್ತು ಸ್ಪರ್ಧೆ ಮಾಡ್ತೀವಿ ಅಂತ ಹೇಳೋಕೆ ಯಾರು ಪ್ರಚೋದನೆ ಮಾಡಿದ್ರು ಅಂತ ಅವರನ್ನ ಕೇಳಿ ಎಂದು ಕುಟುಕಿದರು. ಇದನ್ನೂ ಓದಿ: ಕಿಡಿಗೇಡಿಗಳು ಒಣಹುಲ್ಲಿಗೆ ಬೆಂಕಿ ಹಚ್ಚಿದ್ದರಿಂದ ಚಾಮುಂಡಿಬೆಟ್ಟದಲ್ಲಿ 35 ಎಕ್ರೆ ಅರಣ್ಯ ನಾಶವಾಗಿದೆ: ಡಿಸಿಎಫ್
– ಅಭಿವೃದ್ಧಿಶೂನ್ಯತೆ, ಒಳಜಗಳ, ಕಚ್ಚಾಟಗಳ ಕಾರಣಕ್ಕೆ ಪ್ರಚಾರದಲ್ಲಿರುವ ಸರ್ಕಾರ ಎಂದು ಟೀಕೆ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿಶೂನ್ಯತೆ ಮತ್ತು ಒಳಜಗಳ-ಕಚ್ಚಾಟಗಳ ಕಾರಣಕ್ಕೆ ಪ್ರಚಾರದಲ್ಲಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರ ಈ ಒಳ್ಳೆಯ ಕೆಲಸ ಮಾಡಿದೆ ಎಂದು ಮಾತನಾಡಬೇಕಿತ್ತು. ಪರಿಸ್ಥಿತಿ ಬದಲಾಗಿದೆ. ರಾಜ್ಯದ ಅನುಭವಿ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯ ಅವರು ಅಸಹಾಯಕರಾಗಿದ್ದಾರೆ. ಸರ್ಕಾರ ಗ್ಯಾರಂಟಿ ಹಣ ಕೊಟ್ಟಿಲ್ಲ, ಅಕ್ಕಿ ಸಿಕ್ಕಿಲ್ಲ. 2 ಸಾವಿರ ರೂ. ಆರು ತಿಂಗಳಿನಿಂದ ಬಂದಿಲ್ಲ. ಆರು ತಿಂಗಳಿನಿಂದ ವಂಚನೆ ಆಗಿದೆ ಎಂದು ಮಾತನಾಡುವ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು.
ಅಧಿಕಾರಕ್ಕಾಗಿ, ಮುಖ್ಯಮಂತ್ರಿ ಯಾರಾಗಬೇಕೆಂಬ ಕಚ್ಚಾಟ, ಕಿತ್ತಾಟ ಮುಂದುವರೆದಿದೆ. ಅದರಲ್ಲೂ ಇನ್ನೊಂದು ರೀತಿಯ ಪ್ರಚಾರದಲ್ಲಿ ಈ ಸರ್ಕಾರ ಇದೆ ಎಂದು ಅವರು ಆಕ್ಷೇಪಿಸಿದರು. ಬೆಟ್ಟಿಂಗ್ ದಂಧೆಯಲ್ಲಿ ಇವತ್ತು 3 ಜನರ ಪ್ರಾಣತ್ಯಾಗ ಆಗಿದೆ. ಆನ್‍ಲೈನ್ ಬೆಟ್ಟಿಂಗ್ ದಂಧೆ ಅವ್ಯಾಹತವಾಗಿ ರಾಜ್ಯದಲ್ಲಿ ನಡೆಯುತ್ತಿದೆ. ಇದರ ಕಡೆ ಗಮನ ಹರಿಸಲು ಸರ್ಕಾರಕ್ಕೆ ಸಮಯವೇ ಇಲ್ಲ. ಸರ್ಕಾರ ನಡೆಸುವವರೇ ಈ ದಂಧೆಯಲ್ಲಿ ಪಾಲುದಾರರು ಎಂದು ಬಹಳ ಜನರು ಮಾತನಾಡುತ್ತಿದ್ದಾರೆ ಎಂದು ಛಲವಾದಿ ತಿಳಿಸಿದರು.
ಸಮಗ್ರ ತನಿಖೆ ನಡೆಸಲು ಆಗ್ರಹ
ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲ್ಲೂಕಿನಲ್ಲಿ ಅಲೆಮಾರಿ ಸಮುದಾಯದ ಇಬ್ಬರು ಹೆಣ್ಮಕ್ಕಳು ಅಸುನೀಗಿದ್ದಾರೆ. ಅದು ಕೊಲೆ ಎಂದು ಆಪಾದನೆಗಳಿವೆ. ನಾನು ಎಸ್ಪಿಯವರಿಗೂ ಮಾತನಾಡಿದ್ದೇನೆ. ಇದರ ಸಮಗ್ರ ತನಿಖೆ ನಡೆಸಬೇಕಿದೆ ಎಂದು ಆಗ್ರಹಿಸಿದರು. ಈ ಸರ್ಕಾರವು ಜನರ ಪ್ರಾಣ, ಮಾನದ ವಿಚಾರದಲ್ಲಿ ಒಂದು ರೀತಿಯ ಆಟ ಆಡುತ್ತಿದೆ ಎಂದು ಟೀಕಿಸಿದರು.
ಪಾರ್ಕಿನ ಜಾಗ ಬೇರೆ ಉದ್ದೇಶಕ್ಕೆ ಕೊಡದಿರಿ
ಗುಲ್ಬರ್ಗದಲ್ಲಿ ಪಾರ್ಕಿಗಾಗಿ ಇಟ್ಟಿದ್ದ ಜಾಗವನ್ನು ಸಿದ್ಧಾರ್ಥ ವಿಹಾರ ಟ್ರಸ್ಟ್ ಪರಿವರ್ತನೆ ಮಾಡಿ ಕೊಡಿ ಎಂದು ಕೇಳಿದ ವಿಷಯವನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ. ಕಾನೂನಿನಡಿ ಆ ರೀತಿ ಮಾಡಲು ಆಗುವುದಿಲ್ಲ. ಅದು ಆಟದ ಮೈದಾನ, ಪಾರ್ಕ್‍ಗೆ ಇಟ್ಟಿದ್ದರೆ ಅದನ್ನು ವಾಣಿಜ್ಯ ಉದ್ದೇಶಕ್ಕೆ ಪರಿವರ್ತಿಸಲು ಅಸಾಧ್ಯ ಎಂದು ನುಡಿದರು. ಅದನ್ನು ಪರಿವರ್ತಿಸಬಾರದು ಎಂಬ ಅಭಿಪ್ರಾಯ ತಮ್ಮದೂ ಕೂಡ ಆಗಿದೆ ಎಂದು ಪ್ರಶ್ನೆಗೆ ಛಲವಾದಿ ನಾರಾಯಣಸ್ವಾಮಿ ಉತ್ತರ ಕೊಟ್ಟರು.
ಬೆಂಗಳೂರು: ರಾಜ್ಯದ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದೆ ಎಂದು ಆರೋಪಿಸಿ ವಿಪಕ್ಷ ನಾಯಕರು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಮತ್ತು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಈ ವಿನೂತನ ಮಾದರಿಯ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಆರ್.ಅಶೋಕ್ ಅವರು ‘ಸಿದ್ದು ಸರ್ಕಾರದಲ್ಲಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ’ ಎಂಬ ಘೋಷಣೆಯುಳ್ಳ ಭಿತ್ತಿಪತ್ರ ಹಿಡಿದಿದ್ದರು. ಛಲವಾದಿ ನಾರಾಯಣಸ್ವಾಮಿ ಅವರು ‘ನಿಷ್ಠಾವಂತ ಅಧಿಕಾರಿಗಳಿಗೆ ರಕ್ಷಣೆ ಕೊಡಿ’ ಎಂಬ ಭಿತ್ತಿಪತ್ರ ಹಿಡಿದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಈ ವೇಳೆ ಮಾತನಾಡಿದ ಅಶೋಕ್, ನಿಷ್ಠಾವಂತ ಅಧಿಕಾರಿಗಳು ಕೆಲಸ ಮಾಡಲು ಆಗದ ಪರಿಸ್ಥಿತಿ ಇದೆ. ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಬ್ ಇನ್‍ಸ್ಪೆಕ್ಟರ್ ಒಬ್ಬರು ಪ್ರಾಣ ಕಳಕೊಂಡಿದ್ದಾರೆ. ನಿರಂತರವಾಗಿ ಸರಣಿ ರೀತಿ ಆತ್ಮಹತ್ಯೆ ನಡೆಯುತ್ತಿದೆ. ಬೆದರಿಸುವ ಕೆಲಸ ಮುಂದುವರೆದಿದೆ ಎಂದು ಟೀಕಿಸಿದ್ದಾರೆ.
ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ಇದರ ಕುರಿತು ಚಕಾರ ಎತ್ತಿಲ್ಲ. ಸಿ.ಟಿ.ರವಿ ಅವರ ವಿಷಯದಲ್ಲಿ ಯಾಕೆ ಕಾನೂನು ರೀತಿ ಬಿಟ್ಟು ಕ್ರಮ ಕೈಗೊಂಡಿದ್ದೀರಿ? ನಿನ್ನೆಯ ಎರಡು ಪ್ರಮುಖ ಘಟನೆಗಳಲ್ಲಿ ಯಾರನ್ನು ಬಂಧಿಸಿದ್ದೀರಿ? 500- 600 ಜನ ಠಾಣೆ ಮೇಲೆ ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಹಿಂದೂಗಳಿಗೆ ಒಂದು ಕಾನೂನು, ಮುಸ್ಲಿಮರಿಗೆ ಇನ್ನೊಂದು ಕಾನೂನಿದೆಯೇ? ಸರ್ಕಾರ ಪೊಲೀಸರ ವಿರುದ್ಧ ಮಾತನಾಡಿದರೆ ಅವರ ಆತ್ಮಸ್ಥೈರ್ಯ ಉಳಿಯುವುದು ಹೇಗೆ ಎಂದು ಕಿಡಿಕಾರಿದ್ದಾರೆ.
ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಸರ್ಕಾರ ಹಾಗೂ ರಾಜ್ಯದ ಗಮನ ಸೆಳೆಯಲು ಈ ಪ್ರದರ್ಶನ ಮಾಡಿದ್ದೇವೆ. ವಿಪಕ್ಷ ನಾಯಕರ ಜವಾಬ್ದಾರಿ ನಿರ್ವಹಿಸುತ್ತಿದ್ದೇವೆ. ಸರ್ಕಾರ ಉತ್ತರ ಕೊಡುತ್ತಿಲ್ಲ. ನಾವೀಗ ಜನರಿಂದ ಉತ್ತರ ಬಯಸುವಂತಾಗಿದೆ. ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ಕಟ್ಟಿಸುವಾಗ ‘ಸರ್ಕಾರದ ಕೆಲಸ ದೇವರ ಕೆಲಸ’ ಎಂಬ ದೊಡ್ಡ ವಿಷಯವನ್ನಿಟ್ಟು ನಿರ್ಮಿಸಿದ್ದಾರೆ. ಹೆಣ್ಣೂ ಮಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವುದು ದೇವರ ಕೆಲಸವೇ? ನಾವು ಹೇಳಿದಂತೆ ನಡೆದುಕೊಳ್ಳದಿದ್ದರೆ ಲಾರಿ ಹತ್ತಿಸುತ್ತೇವೆ ಎಂದು ಬೆದರಿಸುವುದು ದೇವರ ಕೆಲಸವೇ? ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ನುಂಗಿದ್ದಾಗಿ ಹೇಳಿದಾಗ 87 ಕೋಟಿ ರೂ. ಮಾತ್ರ ನುಂಗಿದ್ದಾಗಿ ಹೇಳುವುದು ದೇವರ ಕೆಲಸವೇ? ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಗಳು ಬರೆದಿಟ್ಟ ಹೆಸರುಗಳನ್ನು ಮರೆಮಾಚಿದ್ದು ದೇವರ ಕೆಲಸವೇ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಶಾಸಕರ ಕುಟುಂಬವೇ ಆಯಾ ಕ್ಷೇತ್ರಗಳಲ್ಲಿ ದುಂಡಾವರ್ತಿಯಲ್ಲಿ ತೊಡಗಿರುವುದು ಶಾಸಕ ಸಂಗಮೇಶ್ವರ್ (Sangameshwar) ಅವರ ಪುತ್ರ ಬಸವೇಶ್ ವರ್ತನೆ ಮೂಲಕ ಹೊರಕ್ಕೆ ಬಂದಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ಆರೋಪಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಪುತ್ರ ಬಸವೇಶ್, ಹೆಣ್ಣುಮಗಳು, ಸರಕಾರಿ ಅಧಿಕಾರಿಯನ್ನು ಅವಾಚ್ಯ ಶಬ್ದಗಳಿಂದ ಬೈದ ವಿಡಿಯೋ ವೈರಲ್ ಆಗಿದೆ. ಅಲ್ಲದೇ ಅವರಿಗೆ ಬೆದರಿಕೆ ಹಾಕಿದ್ದು ವಿಡಿಯೋದಲ್ಲಿದೆ ಎಂದು ಛಲವಾದಿ ನಾರಾಯಣಸ್ವಾಮಿ ವಿವರಿಸಿದರು.
ಹೆಣ್ಮಕ್ಕಳಿಗೆ ಇದೇನಾ ಗೌರವ ಕೊಡುವುದು ಎಂದು ಬೇರೆಯವರನ್ನು ಮಾತನಾಡುತ್ತಾರೆ. ಈಗ ಸರಕಾರ ನಡೆಸುವ ಕಾಂಗ್ರೆಸ್ಸಿಗರು ಇದೇನಾ ಹೆಣ್ಮಕ್ಕಳಿಗೆ ಗೌರವ ಕೊಡುವುದು ಎಂದು ಪ್ರಶ್ನಿಸಿದರು. ಶಾಸಕರ ಪುತ್ರನನ್ನು ಯಾಕೆ ಬಂಧಿಸಿಲ್ಲ? ಅವರ ವಿರುದ್ಧ ಯಾಕೆ ಕಾನೂನು ಕ್ರಮ ಜರುಗಿಸಿಲ್ಲ ಎಂದು ಕೇಳಿದರು.
ಕಾಂಗ್ರೆಸ್ (Congress) ಎಂದರೆ ಕುಟುಂಬದ ಪಕ್ಷ. ಕುಟುಂಬದ ಎಲ್ಲರಿಗೂ ಅಧಿಕಾರ ಇರಬೇಕೆಂಬ, ದರ್ಪ ತೋರಬೇಕೆಂಬ ನಿಯಮ ಇವರದು. ಮಹಿಳಾ ನಿಂದನೆ ವಿಚಾರದಲ್ಲಿ ಸರ್ಕಾರ ಇಷ್ಟು ತಡ ಮಾಡಬಾರದಿತ್ತು ಎಂದ ಅವರು, ಬೇರೆಯವರು ಮಾಡಿದ್ದರೆ ಏನೆಲ್ಲ ಮಾಡುತ್ತಿದ್ದಿರಿ? ಏನೇನು ಗೂಬೆ ಕೂರಿಸುತ್ತಿದ್ದಿರಿ. ಹೆಣ್ಮಕ್ಕಳಿಗೆ ಈ ಸರಕಾರ ರಕ್ಷಣೆ ಕೊಡುತ್ತಿಲ್ಲ, ಎಷ್ಟು ಅತ್ಯಾಚಾರ ಆಗಿವೆ? ಎಷ್ಟು ಮಹಿಳೆಯರು ಪ್ರಾಣತ್ಯಾಗ ಮಾಡಿದ್ದಾರೆ? ಎಷ್ಟು ಬಾಣಂತಿಯರು ಇವತ್ತು ಜೀವ ಕಳೆದುಕೊಂಡಿದ್ದಾರೆ? ಕಾಂಗ್ರೆಸ್ಸಿಗರು ಅಧಿಕಾರ ಹಂಚಿಕೆಯಲ್ಲಿ ಇದ್ದಾರೆಯೇ ಹೊರತು ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಎಂದು ಛಲವಾದಿ ಟೀಕಿಸಿದರು.
ಬೆಂಗಳೂರು: ಗಾಡ್, ಗಾಡ್ಸ್ ಗ್ರೇಸ್, ಗಾಡ್ ಬ್ಲೆಸ್ ಯು ಎಂದು ಕೆಲವು ನಾಯಕರ ದೇಹದ ಮೇಲೆ ಬರೆದುದನ್ನು ಪ್ರತಿಭಟಿಸಿ ಸುಮಾರು 800 ಜನರು ಮೈಸೂರಿನಲ್ಲಿ (Mysuru) ಪೊಲೀಸ್ ಠಾಣೆಗೆ ನುಗ್ಗಿ ಡಿಸಿಪಿ ವ್ಯಾನ್‍ಗೆ ಬೆಂಕಿ ಹಚ್ಚಿದ್ದಾರೆ. ಸರ್ಕಾರ ಬದುಕಿದೆಯೇ? ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಇದೆ ಎಂದು ಒಪ್ಪಿಕೊಳ್ಳಬೇಕೇ? ಎಂದು ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲೂ ಪೊಲೀಸರ ಮೇಲೆ ಕಲ್ಲು ತೂರಲಾಗಿತ್ತು. ಕೇಸು ವಾಪಸ್ ಪಡೆಯಲಾಯಿತು. ಈ ಓಲೈಕೆ ಕಾರಣದಿಂದ ರಾಜ್ಯಕ್ಕೆ ಬೆಂಕಿ ಬೀಳುತ್ತಿದೆಯಲ್ಲವೇ? ಕಾಂಗ್ರೆಸ್ ನಾಯಕತ್ವ, ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಇದಕ್ಕೆ ಕಾರಣವಲ್ಲವೇ? ನಿಮ್ಮ ಓಲೈಕೆ ರಾಜ್ಯದ ಜನರನ್ನು ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಬಸ್ ಪ್ರಯಾಣ ದರ, ಮೆಟ್ರೋ ಪ್ರಯಾಣ ದರ ಹೆಚ್ಚಳದ ವಿಚಾರವಾಗಿ, ರಾಜ್ಯ ಸರ್ಕಾರವು ಬರಿಯ ಸುಳ್ಳು ಹೇಳುತ್ತಿದೆ. ಜನರ ಪೂರ್ತಿ ತಲೆ ಬೋಳಿಸಿದ್ದೀರಿ. ಇನ್ನೇನೂ ಬೋಳಿಸಲು ಹೊರಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಒಂದು ಕಾಸಿನ ಅಭಿವೃದ್ಧಿ ಇಲ್ಲ; ಅಭಿವೃದ್ಧಿಗೆ ಹಣವೂ ಇಲ್ಲ
ರಾಜ್ಯದಲ್ಲಿ ಒಂದು ಕಾಸಿನ ಅಭಿವೃದ್ಧಿ ಇಲ್ಲ, ಅಭಿವೃದ್ಧಿಗೆ ಹಣವೂ ಇಲ್ಲ. ಗ್ಯಾರಂಟಿಗಳ ಹೆಸರಿನಲ್ಲಿ ಇಡೀ ರಾಜ್ಯ ಲೂಟಿ ಮಾಡುತ್ತಿರುವಂತಿದೆ. ಎಲ್ಲದರ ಬೆಲೆ ಏರಿಸುತ್ತಿದ್ದಾರೆ. ಇಷ್ಟಾದರೂ ಅವರ ದರಿದ್ರ ತಪ್ಪಿಲ್ಲ. ಇದೊಂದು ದರಿದ್ರ ಸರ್ಕಾರ ಎಂದು ಜನರೇ ಹೇಳುತ್ತಿದ್ದಾರೆ. ಮಂತ್ರಿಗಳು, ಶಾಸಕರು ಸೇರಿ ಪುಂಡಾಟಿಕೆಯಲ್ಲಿ ತೊಡಗಿದ್ದಾರೆ. ಅಭಿವೃದ್ಧಿ ಆಗದುದನ್ನು ಮರೆಮಾಚಲು, ಗುಂಪುಗಾರಿಕೆ, ಅಧಿಕಾರ ದಾಹ, ಒಳಜಗಳ ಮರೆಮಾಚುವ ಉದ್ದೇಶದಿಂದ ಚರಿತ್ರೆ ತಿದ್ದುವ ಕೆಲಸ ನಡೆದಿದೆ. ರಾಮಾಯಣ, ವಾಲ್ಮೀಕಿ, ಕುಂಭಮೇಳ ಕುರಿತು ಮಾತನಾಡುತ್ತಿದ್ದು, ನಾಲಿಗೆ ಹೊಲಸು ಮಾಡಿಕೊಳ್ಳುತ್ತಿದ್ದಾರೆ. ಒಂದು ದಿನ ಮಾತ್ರೆ, ಇಂಜೆಕ್ಷನ್ ಕೊಡದ ಮಹದೇವಪ್ಪ ಅವರು ಡಾಕ್ಟರ್ ಆಗಿದ್ದಾರೆ. ಇತರರೂ ಪಿಹೆಚ್‍ಡಿ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಡಾಕ್ಟರ್ ಪ್ರಿಯಾಂಕ್ ಖರ್ಗೆ ಪಿಹೆಚ್‍ಡಿ ಮಾಡಿದ್ದಾರಾ? ಅವರ ಶಿಕ್ಷಣ ಎಲ್ಲರಿಗೂ ಗೊತ್ತಾಗಿದೆ. ವಾಲ್ಮೀಕಿ ರಾಮಾಯಣದ ಬಗ್ಗೆಯೂ ಹೇಳಿದ್ದಾರೆ. ಆ ರಾಮಾಯಣ ಬೇರೆಯಂತೆ, ಈ ರಾಮಾಯಣ ಬೇರೆ ಅಂತೆ. ಹನುಮಾನ್ ಚಾಲೀಸ ಗೊತ್ತಾ ಎಂದು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಅವರ ಕಚೇರಿ ಮುಂದೆ ಜನರು ವಿಷ ತೆಗೆದುಕೊಳ್ಳಲು ಹೋಗಿದ್ದರು. 400 ಕೋಟಿ ರೂ. ಬಾಕಿ ಸಂಬಂಧ ವೆಂಡರ್ಸ್ ಅಸೋಸಿಯೇಶನ್‍ನವರು ಪ್ರತಿಭಟನೆ ಮಾಡಲು ಮುಂದಾಗಿದ್ದರು. ದುಡ್ಡು ಕೊಡುವುದು ಬಿಟ್ಟು ಇವರು ರಾಮಾಯಣ ಕಲಿಸಲು ಹೋಗುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ವಾಲ್ಮೀಕಿ ನಿಗಮ ಬರಿದು ಮಾಡಿದ್ದಾರೆ. ನಾಲಿಗೆ ಬರುವಷ್ಟು ಆಚೆಗೆ ಹಾಕಿ ನೆಕ್ಕಿದ್ದಾರೆ. ಮಹರ್ಷಿ ವಾಲ್ಮೀಕಿಯವರ ಹೆಸರು ಹೇಳಲು ನಿಮಗೆ ಯೋಗ್ಯತೆ ಇದೆಯೇ? ಹಣ ದೋಚಿದ ನಿಮಗೆ ನಾಚಿಕೆ ಆಗುವುದಿಲ್ಲವೇ? ಕುಂಭಮೇಳದಲ್ಲಿ ಸ್ನಾನ ಮಾಡಿದರೆ ಬಡತನ ಹೋಗುತ್ತದೆಯೇಎಂದಿದ್ದೀರಿ. ಹಿಂದುತ್ವದಲ್ಲಿ ನಂಬಿಕೆ ಇಲ್ಲದ ನೀವು ಯಾಕೆ ರಾಮಾಯಣ, ಮಹಾಭಾರತದ ಬಗ್ಗೆ ಮಾತನಾಡುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಮತಾಂಧರ ವಿರುದ್ಧದ ಪ್ರಕರಣ ವಾಪಸ್‌ನಿಂದ ಪೊಲೀಸರ ಮೇಲೆ ಹಲ್ಲೆ ಮಾಡುವ ಧೈರ್ಯ: ಆರ್.ಅಶೋಕ್ ಕಿಡಿ
ಬೆಂಗಳೂರು: ಗಾಡ್, ಗಾಡ್ಸ್ ಗ್ರೇಸ್, ಗಾಡ್ ಬ್ಲೆಸ್ ಯು ಎಂದು ಕೆಲವು ನಾಯಕರ ದೇಹದ ಮೇಲೆ ಬರೆದುದನ್ನು ಪ್ರತಿಭಟಿಸಿ ಸುಮಾರು 800 ಜನರು ಮೈಸೂರಿನಲ್ಲಿ ಪೊಲೀಸ್ ಸ್ಟೇಶನ್‍ಗೆ ನುಗ್ಗಿ ಡಿಸಿಪಿ ವ್ಯಾನ್‍ಗೆ ಬೆಂಕಿ ಹಚ್ಚಿದ್ದಾರೆ. ರಾಜ್ಯದಲ್ಲಿ ಸರ್ಕಾರ ಬದುಕಿದೆಯೇ? ಕರ್ನಾಟಕದಲ್ಲಿ (Karnataka) ಕಾನೂನು- ಸುವ್ಯವಸ್ಥೆ ಇದೆ ಎಂದು ಒಪ್ಪಿಕೊಳ್ಳಬೇಕೇ ಎಂದು ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಕ್ರೋಶ ವ್ಯಕ್ತಪಡಿಸಿದರು.
ಕೆಜಿ ಹಳ್ಳಿ ಘಟನೆಯಲ್ಲಿ ಹತ್ತಾರು ವಾಹನ ಸುಟ್ಟು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಪೊಲೀಸರ ಮೇಲೆ ಕಲ್ಲು ತೂರಲಾಗಿತ್ತು. ಆದರೆ ನೀವು ಅನೇಕರನ್ನು ಕೇಸಿನಿಂದ ಬಿಡಲು ಮುಂದಾದಿರಿ ಎಂದು ಛಲವಾದಿ ಟೀಕಿಸಿದರು.
ಹುಬ್ಬಳ್ಳಿಯಲ್ಲೂ (Hubballi) ಪೊಲೀಸರ ಮೇಲೆ ಕಲ್ಲು ತೂರಲಾಗಿತ್ತು. ಕೇಸ್ ವಾಪಸ್ ಪಡೆಯಲಾಯಿತು. ಈ ಓಲೈಕೆ ಕಾರಣದಿಂದ ರಾಜ್ಯಕ್ಕೆ ಬೆಂಕಿ ಬೀಳುತ್ತಿದೆಯಲ್ಲವೇ? ಕಾಂಗ್ರೆಸ್ ನಾಯಕತ್ವ, ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಇದಕ್ಕೆ ಕಾರಣವಲ್ಲವೇ ಎಂದು ಪ್ರಶ್ನಿಸಿದರು. ನಿಮ್ಮ ಓಲೈಕೆ ರಾಜ್ಯದ ಜನರನ್ನು ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ ಎಂದು ಆಕ್ಷೇಪಿಸಿದರು.
ಬಸ್ ಪ್ರಯಾಣದರ, ಮೆಟ್ರೋ ಪ್ರಯಾಣದರ ಹೆಚ್ಚಳವನ್ನೂ ಅವರು ಖಂಡಿಸಿದರು. ರಾಜ್ಯ ಸರ್ಕಾರ ಬರಿ ಸುಳ್ಳು ಹೇಳುತ್ತಿದೆ. ಜನರ ಪೂರ್ತಿ ತಲೆ ಬೋಳಿಸಿದ್ದೀರಿ. ಇನ್ನೇನು ಬೋಳಿಸಲು ಹೊರಟಿದ್ದೀರಿ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಒಂದು ಕಾಸಿನ ಅಭಿವೃದ್ಧಿ ಇಲ್ಲ, ಅಭಿವೃದ್ಧಿಗೆ ಹಣವೂ ಇಲ್ಲ. ಗ್ಯಾರಂಟಿಗಳ ಹೆಸರಿನಲ್ಲಿ ಇಡೀ ರಾಜ್ಯದ ಲೂಟಿ ಮಾಡುತ್ತಿರುವಂತಿದೆ. ಎಲ್ಲದರ ಬೆಲೆ ಏರಿಸುತ್ತಿದ್ದಾರೆ. ಇಷ್ಟಾದರೂ ಅವರ ದರಿದ್ರ ತಪ್ಪಿಲ್ಲ. ಇದೊಂದು ದರಿದ್ರ ಸರ್ಕಾರ ಎಂದು ಜನರೇ ಹೇಳುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಟ್ರಂಪ್ ತೆರಿಗೆ ದರ ಇಫೆಕ್ಟ್ – 1 ಸಾವಿರ ಅಂಕ ಇಳಿಕೆ ಕಂಡ ಸೆನ್ಸೆಕ್ಸ್
ಮಂತ್ರಿಗಳು, ಶಾಸಕರು ಸೇರಿ ಪುಂಡಾಟಿಕೆಯಲ್ಲಿ ತೊಡಗಿದ್ದಾರೆ. ಅಭಿವೃದ್ಧಿ ಆಗದುದನ್ನು ಮರೆಮಾಚಲು, ಗುಂಪುಗಾರಿಕೆ, ಅಧಿಕಾರ ದಾಹ, ಒಳಜಗಳ ಮರೆಮಾಚುವ ಉದ್ದೇಶದಿಂದ ಚರಿತ್ರೆ ತಿದ್ದುವ ಕೆಲಸ ನಡೆದಿದೆ. ರಾಮಾಯಣ, ವಾಲ್ಮೀಕಿ, ಕುಂಭಮೇಳ ಕುರಿತು ಮಾತನಾಡುತ್ತಿದ್ದು, ನಾಲಿಗೆ ಹೊಲಸು ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು. ಒಂದು ದಿನ ಮಾತ್ರೆ, ಇಂಜೆಕ್ಷನ್ ಕೊಡದ ಮಹದೇವಪ್ಪ ಅವರೇನೋ ಡಾಕ್ಟರೇ ಆಗಿದ್ದಾರೆ. ಇತರರೂ ಪಿಎಚ್‍ಡಿ ಮಾಡುತ್ತಿದ್ದಾರೆ ಎಂದು ಛಲವಾದಿ ವ್ಯಂಗ್ಯವಾಡಿದರು.
ಡಾಕ್ಟರ್ ಪ್ರಿಯಾಂಕ್ ಖರ್ಗೆ ಪಿಎಚ್‍ಡಿ ಮಾಡಿದ್ದಾರಾ? ಅವರ ಶಿಕ್ಷಣ ಎಲ್ಲರಿಗೂ ಗೊತ್ತಾಗಿದೆ. ವಾಲ್ಮೀಕಿ ರಾಮಾಯಣದ ಬಗ್ಗೆಯೂ ಹೇಳಿದ್ದಾರೆ. ಆ ರಾಮಾಯಣ ಬೇರೆಯಂತೆ; ಈ ರಾಮಾಯಣ ಬೇರೆ ಅಂತೆ. ಹನುಮಾನ್ ಚಾಲೀಸ ಗೊತ್ತಾ ಎಂದು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಅವರ ಕಚೇರಿ ಮುಂದೆ ಜನರು ವಿಷ ತೆಗೆದುಕೊಳ್ಳಲು ಹೋಗಿದ್ದರು. 400 ಕೋಟಿ ಬಾಕಿ ಸಂಬಂಧ ವೆಂಡರ್ಸ್ ಅಸೋಸಿಯೇಶನ್‍ನವರು ಪ್ರತಿಭಟನೆ ಮಾಡಲು ಮುಂದಾಗಿದ್ದರು. ದುಡ್ಡು ಕೊಡುವುದು ಬಿಟ್ಟು ಇವರು ರಾಮಾಯಣ ಕಲಿಸಲು ಹೋಗುತ್ತಿದ್ದಾರೆ ಎಂದು ಆರೋಪಿಸಿದರು.
ವಾಲ್ಮೀಕಿ ನಿಗಮ ಬರಿದು ಮಾಡಿದ್ದಾರೆ. ನಾಲಿಗೆ ಬರುವಷ್ಟು ಆಚೆಗೆ ಹಾಕಿ ನೆಕ್ಕಿದ್ದಾರೆ. ಮಹರ್ಷಿ ವಾಲ್ಮೀಕಿಯವರ ಹೆಸರು ಹೇಳಲು ನಿಮಗೆ ಯೋಗ್ಯತೆ ಇದೆಯೇ? ಹಣ ದೋಚಿದ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಕೇಳಿದರು.
ಕುಂಭಮೇಳದಲ್ಲಿ ಸ್ನಾನ ಮಾಡಿದರೆ ಬಡತನ ಹೋಗುತ್ತದೆಯೇ ಎಂದು ಕೇಳಿದ್ದನ್ನೂ ಅವರು ಆಕ್ಷೇಪಿಸಿದರು. ಹಿಂದುತ್ವದಲ್ಲಿ ನಂಬಿಕೆ ಇಲ್ಲದ ನೀವು ಯಾಕೆ ರಾಮಾಯಣ, ಮಹಾಭಾರತದ ಬಗ್ಗೆ ಮಾತನಾಡುತ್ತೀರಿ ಎಂದು ಛಲವಾದಿ ಪ್ರಶ್ನೆಯನ್ನು ಮುಂದಿಟ್ಟರು.
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆಯಿಂದ ಜನರ ತಲೆ ಬೋಳಿಸುವ ಕಾರ್ಯಕ್ಕೆ ಕೈ ಹಾಕಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಕ್ಷೇಪ ವ್ಯಕ್ತಪಡಿಸಿದರು.
ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶನಿವಾರ ಕಾಂಗ್ರೆಸ್ ಶಾಸಕ ಹರಿಪ್ರಸಾದ್ ಅವರು, ಈ ಗ್ಯಾರಂಟಿಗಳು ಸಾಕು, ಅಭಿವೃದ್ಧಿ ಕಡೆಗೆ ಗಮನ ಕೊಡಿ ಎಂದಿದ್ದಾರೆ. ಇದೀಗ ಸರ್ಕಾರ ಮೆಟ್ರೋ ದರ ಏರಿಸಿದೆ. ಹಾಲಿನ ದರ ಏರಿಕೆ, ಸ್ಟಾಂಪ್ ಡ್ಯೂಟಿ ಹೆಚ್ಚಳ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ್ದು, ದವಸ ಧಾನ್ಯಗಳ ಬೆಲೆ ಗಗನಕ್ಕೆ ಏರಿದೆ. ಇಷ್ಟೆಲ್ಲ ಆದರೂ ಯಾವುದಕ್ಕೆ ದರ ಏರಿಸಬೇಕು ಎಂಬುದರಲ್ಲಿ ಸರ್ಕಾರ ಬ್ಯೂಸಿಯಾಗಿದೆ. ಈ ಸರ್ಕಾರ ಎಲ್ಲ ವಿಚಾರದಲ್ಲೂ ಕೈಚೆಲ್ಲಿ ಕುಳಿತಿದೆ. ಇವರಿಗೆ ಗ್ಯಾರಂಟಿ ಯಾವುದೇ ಕಾರಣಕ್ಕೂ ಅದನ್ನು ರದ್ದು ಮಾಡುವುದಿಲ್ಲ ಎಂಬ ವಾದ ಒಂದೆಡೆ, ಇನ್ನೊಂದೆಡೆ ಬೆಲೆ ಏರಿಕೆ ಮೂಲಕ ಜನರ ತಲೆ ಬೋಳಿಸುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.ಇದನ್ನೂ ಓದಿ: ಕೆಲಸದ ವಿಚಾರಕ್ಕೆ ಇಬ್ಬರು ಕಾರ್ಮಿಕರ ನಡುವೆ ಗಲಾಟೆ – ಚಾಕುವಿನಿಂದ ಇರಿದು ಓರ್ವನ ಹತ್ಯೆ
ಇದೇ ವೇಳೆ ರಾಜ್ಯಪಾಲರು ಕ್ಷುಲ್ಲಕ ಕಾರಣಕ್ಕಾಗಿ ಸುಗ್ರೀವಾಜ್ಞೆಯನ್ನು ವಾಪಸ್ ಕಳಿಸಿದ್ದಾರೆ ಎಂಬ ಉಗ್ರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿಲ್ಲಿ ಪೀಪಲ್ ಸ್ಟಾರ್ಟ್ ಸಿಲ್ಲಿ ಥಿಂಗ್ಸ್ ಓನ್ಲಿ ಎಂದರಲ್ಲದೆ, ಈ ಸರ್ಕಾರ ಬಂದಾಗಲೇ ಹೆಚ್ಚು ಕಡಿಮೆ ಸ್ಮಶಾನ ಸೇರುವ ಪರಿಸ್ಥಿತಿ ಬಂದಿದೆ. ಈ ಸರ್ಕಾರದ ಕೆಟ್ಟ ಹೆಸರು ಶೇ.99ಕ್ಕೆ ಹೋಗಿದೆ ಎಂದರು.
ಮಾನ್ಯ ರಾಜ್ಯಪಾಲರಿಗೆ, ಈ ಫೈನಾನ್ಸ್ ವಿಚಾರದಲ್ಲಿ ಅಥವಾ ಮೈಕ್ರೋ ಫೈನಾನ್ಸ್ ಮಾಡುವವರಿಗೂ ಇವರಿಗೂ ಏನು ಸಂಬಂಧ ಇರುತ್ತದೆ. ಬಹಳ ಕಾಲದಿಂದ ನಾವು ಕ್ರಮಕ್ಕೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದೇವೆ. ಇವತ್ತಿನವರೆಗೆ ಕ್ರಮ ಜರುಗಿಸಲು ಈ ಸರ್ಕಾರಕ್ಕೆ ಆಗಿಲ್ಲ. ಈಗ 10 ವರ್ಷಗಳ ಶಿಕ್ಷೆಯನ್ನು ಅದರಲ್ಲಿ ನಮೂದಿಸಿ ಕಳಿಸಿದ್ದಾರೆ. ಇಂತಹ ತೀರ್ಮಾನ ತೆಗೆದುಕೊಳ್ಳಲು ಅದು ಸದನದಲ್ಲಿ ಚರ್ಚೆ ಆಗಬೇಕಿತ್ತು. ಸದನದಲ್ಲಿ ಏನೂ ಚರ್ಚೆ ಆಗದೇ ನೀವು ಇಷ್ಟಾನುಸಾರ ಮಾಡುವುದು ಕಾನೂನುಬಾಹಿರ ಮತ್ತು ಅಸಾಂವಿಧಾನಿಕ ಕೂಡ. ಆದ್ದರಿಂದಲೇ ಅವರು ವಾಪಸ್ ಕಳಿಸಿದ್ದಾರೆ ಎಂದು ತಿಳಿಸಿದರು.ಇದನ್ನೂ ಓದಿ: ನಾಳೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡು ರಾಜ್ಯಪಾಲರಿಗೆ ಮರು ರವಾನೆ
ಬೆಂಗಳೂರು: ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಕರ್ನಾಟಕ ಬಿಜೆಪಿಗೆ ಶಕ್ತಿ ತುಂಬಿದಂತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ದೆಹಲಿ ಚುನಾವಣಾ ಫಲಿತಾಂಶವು ಮುಂದಿನ ಕರ್ನಾಟಕ, ತೆಲಂಗಾಣದ ಚುನಾವಣೆಗೆ ದಾರಿದೀಪವಾಗಲಿದೆ. ಇದು ದೇಶಕ್ಕೆ ಸಿಕ್ಕಿರುವ ಗೆಲುವು. ಡಿಕೆಶಿ ಗ್ಯಾರಂಟಿ ದೆಹಲಿಯಲ್ಲಿ ಠುಸ್ ಪಟಾಕಿ ಆಗಿದೆ ಎಂದು ವ್ಯಂಗ್ಯವಾಡಿದರು.ಇದನ್ನೂ ಓದಿ: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣಗೆ ಮದುವೆ ಆಮಂತ್ರಣ ನೀಡಿದ ಡಾಲಿ
ಕರ್ನಾಟಕದಲ್ಲಿ 5 ಗ್ಯಾರಂಟಿ ಕೊಟ್ಟು ಅಭಿವೃದ್ಧಿ ಇಲ್ಲವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದೇ ಕೇಜ್ರಿವಾಲ್ 25 ಉಚಿತಗಳನ್ನು ನೀಡಿದ್ದರು. ಅವರ ಸ್ಥಿತಿ ಏನಾಗಿದೆ? ಎಂದು ಪ್ರಶ್ನಿಸಿದರು. ಇದು ದೇಶಕ್ಕೆ ದಿಕ್ಸೂಚಿ ಎಂದು ತಿಳಿಸಿದರು.
ಇದೇ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ಮಾತನಾಡಿ, ಅರವಿಂದ್ ಕೇಜ್ರಿವಾಲ್ ಅವರ ದೆಹಲಿ ಸರ್ಕಾರ ಭ್ರಷ್ಟಾಚಾರಕ್ಕೆ ಬಲಿಯಾಗಿದೆ. ಬಿಜೆಪಿ ಇಡೀ ದೇಶದಲ್ಲಿ ಭ್ರಷ್ಟಾಚಾರದ ವಿಚಾರದಲ್ಲಿ ಒಂದೇ ಒಂದು ಆಪಾದನೆಯನ್ನೂ ಹೊತ್ತಿಲ್ಲ. ಕರ್ನಾಟಕದಲ್ಲಿ ನಮ್ಮ ವಿರುದ್ಧ ಶೇ.40 ಕಮೀಷನ್, ಪೇ ಸಿಎಂ ಮತ್ತಿತರ ಆರೋಪ ಮಾಡಿ ಚುನಾವಣಾ ತಂತ್ರ ಹೆಣೆದಿದ್ದ ಕಾಂಗ್ರೆಸ್ಸಿನದು ದೆಹಲಿಯಲ್ಲಿ ಶೂನ್ಯ ಸಂಪಾದನೆಯಾಗಿದೆ. ಈಗ ಅವರು ಖಾತೆ ತೆರೆದಿಲ್ಲ. ಆದರೆ ಕ್ಯಾತೆ ತೆಗೆಯುವುದನ್ನು ಬಿಡುವುದಿಲ್ಲ ಎಂದು ತಿಳಿಸಿದರು.
ಇನ್ನೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ (CT Ravi) ಅವರು ಮಾತನಾಡಿ, ಕೇಜ್ರಿವಾಲ್ ಪ್ರಾಮಾಣಿಕ ಅಲ್ಲ. ಭ್ರಷ್ಟ ಎಂಬುದು ಜನರಿಗೆ ಮನವರಿಕೆ ಆಗಿದೆ. ಸುಳ್ಳಿನ ಮುಖವಾಡ ಕಳಚಿಬಿದ್ದಿದೆ. ಕೇವಲ ನಕಾರಾತ್ಮಕ ಪ್ರಚಾರದಿಂದ ಚುನಾವಣೆ ಗೆಲ್ಲಲು ಅಸಾಧ್ಯ ಎಂದು ಕಾಂಗ್ರೆಸ್ ಅವಲೋಕನ ಮಾಡಿಕೊಳ್ಳಬೇಕಿದೆ. ಅಂಬೇಡ್ಕರರ ಸಂವಿಧಾನ, ಜನತೆಯ ಸಂವಿಧಾನ ಗೆದ್ದಿದೆ ಎಂದು ವಿಶ್ಲೇಷಿಸಿದರು.ಇದನ್ನೂ ಓದಿ: ದೆಹಲಿ ಚುನಾವಣೆಯಲ್ಲಿ ಸೋತ AAPಯನ್ನು ಕೌರವರಿಗೆ ಹೋಲಿಸಿದ ಸ್ವಾತಿ ಮಲಿವಾಲ್
ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ವಿಚಾರದಲ್ಲಿ ಮಾಜಿ ಪ್ರಧಾನಮಂತ್ರಿಗಳಾದ ಮಾನ್ಯ ಎಚ್.ಡಿ.ದೇವೇಗೌಡರು (HD Devegowda) ಪ್ರಸ್ತಾಪ ಮಾಡಿದ್ದು ಸರಿ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ನೀಡಿದರು. ಕರ್ನಾಟಕದಲ್ಲಿ ದಲಿತರ ದುರ್ಬಳಕೆ, ಅಧಿಕಾರಿಗಳ ಆತ್ಮಹತ್ಯೆ, ಭ್ರಷ್ಟಾಚಾರ ಮಿತಿ ಮೀರಿರುವುದು, 136 ಶಾಸಕರಿದ್ದರೂ ಅಭದ್ರತೆಯ ವಾತಾವರಣ ಸಂಬಂಧಿತ ದೇವೇಗೌಡರ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆಯವರು ಆಕ್ಷೇಪ ಎತ್ತಲು ಯಾವುದೇ ಕಾರಣ ಇಲ್ಲ. ದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ಸಿನ ವಿರುದ್ಧವಾಗಿ ಮಾನ್ಯ ಖರ್ಗೆಜೀ ಅವರೇ ಮಾತನಾಡಬೇಕಿತ್ತು ಎಂದು ಛಲವಾದಿ ಅಭಿಪ್ರಾಯಪಟ್ಟರು.
ದಲಿತರ ಪರವಾಗಿ ಮಾತನಾಡಲು ಅವರಿಗೆ ಬಾಯಿಯೇ ಬರುತ್ತಿಲ್ಲ. ಆದರೆ ದೇವೇಗೌಡರು (Devegowda) ದಲಿತ ಸಮುದಾಯಗಳ ಬಗ್ಗೆ ಆಗಿರುವ ಅನ್ಯಾಯ ಸರಿಪಡಿಸಲು ರಾಜ್ಯಸಭೆಯಲ್ಲಿ ಸಮಯೋಚಿತವಾಗಿ ಮಾತನಾಡಿದ್ದಾರೆ ಎಂದು ತಿಳಿಸಿದರು. ಇದೊಂದು ಭಂಡತನದ ಸರಕಾರ. ಮಾನ್ಯ ಮುಖ್ಯಮಂತ್ರಿಗಳು ಯಾವುದಕ್ಕೂ ಸಮರ್ಪಕ ಉತ್ತರ ಕೊಡುವುದಿಲ್ಲ ಎಂದು ಟೀಕಿಸಿದರು.
ವಾಲ್ಮೀಕಿ ನಿಗಮದಲ್ಲಿ 187 ಕೋಟಿ ನುಂಗಲಾಯಿತು. ಪರಿಶಿಷ್ಟ ಜಾತಿ- ಪರಿಶಿಷ್ಟ ವರ್ಗಗಳಿಗೆ ಇಟ್ಟಿದ್ದ ಹಣ 25 ಸಾವಿರ ಕೋಟಿ ರೂ. ಹಣವನ್ನು ಇದೇ ಕಾಂಗ್ರೆಸ್ ಸರಕಾರ ನುಂಗಿದೆ. ಖರ್ಗೆಯವರು ಇದರ ಬಗ್ಗೆ ಯಾಕೆ ಮಾತನಾಡಿಲ್ಲ ಎಂದು ಪ್ರಶ್ನಿಸಿದರು. ಇವತ್ತಿನ ವರೆಗೆ ಚಕಾರ ಎತ್ತಿಲ್ಲ. ನೀವು ಯಾರ ಪರ ಇದ್ದೀರಿ ಎಂದು ಕೇಳಿದರು. ಅದು 187 ಕೋಟಿ ಅಲ್ಲ; ಬರೀ 87 ಕೋಟಿ ಎಂದೇ ಮುಖ್ಯಮಂತ್ರಿಗಳು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಅಂದ ಮೇಲೆ ಸತ್ಯವನ್ನು ಒಪ್ಪಿಕೊಂಡರಲ್ಲವೇ? ಈ ಸತ್ಯ ಒಪ್ಪಿಕೊಳ್ಳಲು ಖರ್ಗೆಜೀ ಅವರಿಗೆ ಏನಾಗಿದೆ ಎಂದು ಪ್ರಶ್ನೆಯನ್ನು ಮುಂದಿಟ್ಟರು.
ಆತ್ಮಹತ್ಯೆ ಪತ್ರ ಬರೆದಿಟ್ಟು ಚಂದ್ರಶೇಖರ್ ಅವರು ತೀರಿಕೊಂಡರು. ಇನ್ನೂ ಅನೇಕರು ಪ್ರಾಣತ್ಯಾಗ ಮಾಡಿದ್ದಾರೆ. ಎಸ್‍ಐ ಪರಶುರಾಂ ಅವರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಮನೆಯವರಿಗೆ ಕೆಲಸ ಕೊಡುವುದಾಗಿ ಗೃಹಸಚಿವರೇ ತಿಳಿಸಿದ್ದರು. ಇಲ್ಲಿನವರೆಗೆ ಕೂಡ ಒಂದೇ ಒಂದು ನಯಾಪೈಸೆ ಕೊಟ್ಟಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಆಕ್ಷೇಪಿಸಿದರು.
ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಮಾತನಾಡಿದ ದೇವೇಗೌಡರು, ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿದ್ದಾರೆ. ಆದರೆ, ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದುಕೊಂಡಿದೆ. ಅದರಿಂದ ಉಪಯೋಗವೇನು? ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರಕಾರ ಎಂದು ಗುಡುಗಿದ್ದರು.
ಬೆಂಗಳೂರು: ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು (Freedom Fighters) ಮೂಲೆಗೆ ತಳ್ಳಿದ್ದು ಕಾಂಗ್ರೆಸ್ (Congress) ಪಕ್ಷ ಎಂದು ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಜನತೆಗೆ ಗಣರಾಜ್ಯೋತ್ಸವದ (Republic Day 2025) ಶುಭಾಶಯ ಕೋರಿದರು. ಅಂಬೇಡ್ಕರ್ ಬರೆದ ಸಂವಿಧಾನವನ್ನು ಅರ್ಪಿಸಿಕೊಂಡು 75 ವರ್ಷವಾಗಿದೆ. ಇಂದು 76ನೇ ವರ್ಷಕ್ಕೆ ಕಾಲಿಟ್ಟಿದ್ದೇವೆ. ದೇಶವನ್ನು ಅಭಿವೃದ್ಧಿ ಪಥದಲ್ಲಿ ನಡೆಸಲು ಗಟ್ಟಿಯಾದ ಸಂವಿಧಾನವನ್ನು ನೀಡಿದ ದಿನವನ್ನೇ ಗಣರಾಜ್ಯೋತ್ಸವವಾಗಿ ಆಚರಿಸುತ್ತಿದ್ದೇವೆ. ದೇಶವನ್ನು ಯಾವರೀತಿ ನಡೆಸಬೇಕು ಎನ್ನುವುದು ಸಂವಿಧಾನದಲ್ಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Kotekar Bank Robbery; ಕೇವಲ 4 ದಿನದಲ್ಲಿ ಪ್ರಕರಣ ಭೇದಿಸಿ ಎಲ್ಲಾ ಚಿನ್ನಾಭರಣ ವಶಕ್ಕೆ: ಗುಂಡೂರಾವ್
ಸಂವಿಧಾನ ನಿರ್ಮಾಣ ಮಾಡಿದ ದಿನವನ್ನು ನಕಲಿ ಗಾಂಧಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಬಂದ ನಂತರವೂ ಗಾಂಧಿ ಕುಟುಂಬದವರು ಅಧಿಕಾರವನ್ನು ತಮ್ಮಲ್ಲೇ ಇಟ್ಟುಕೊಂಡಿದ್ದಾರೆ. ಕಾಂಗ್ರೆಸ್‌ನಲ್ಲಿ ಕೇವಲ ಅಧಿಕಾರಿಕ್ಕಾಗಿ ಮಾತ್ರ ನಾನು ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಈ ಸರ್ಕಾರದಲ್ಲಿ ಲೂಟಿ, ಭ್ರಷ್ಟಾಚಾರ ಮಾತ್ರ ನಿರಂತರವಾಗಿ ನಡೆಯುತ್ತಲೇ ಬರುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: 76ನೇ ಗಣರಾಜ್ಯೋತ್ಸವದ ಸಂಭ್ರಮ – ರಾಷ್ಟ್ರಪತಿಯಿಂದ ಧ್ವಜಾರೋಹಣ