ಬೆಂಗಳೂರು: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ (Annapoorneshwari Police Station) ಶಾಮಿಯಾನ ಹಾಕಿದ್ದರ ಹಿಂದಿನ ನಿಜವಾದ ಕಾರಣ ರಿವೀಲ್ ಆಗಿದೆ.
ನಟ ದರ್ಶನ್ (Challenging Star Darshan), ಗೆಳತಿ ಪವಿತ್ರಾ ಗೌಡ (Pavithra Gowda) ಸಹಿತ ರೇಣುಕಾಸ್ವಾಮಿ (Renukaswamy Case) ಕಿಡ್ನಾಪ್ ಹಾಗೂ ಕೊಲೆ ಪ್ರಕರಣದ 15 ಮಂದಿ ಆರೋಪಿಗಳು ಅನ್ನಪೂರ್ಣೇಶ್ವರಿ ನಗರ ಪೊಲಿಸ್ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ನಡುವೆ ನಿನ್ನೆ (ಗುರುವಾರ) ಏಕಾಏಕಿ ಪೊಲೀಸ್ ಠಾಣೆಯ ಆವರಣದ ಗೋಡೆಗೆ ಶಾಮಿಯಾನ ಹಾಕಲಾಗಿತ್ತು. ಈ ವಿಚಾರ ಈಗ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಈ ಬೆನ್ನಲ್ಲೇ ಇದೀಗ ದರ್ಶನ್ & ಗ್ಯಾಂಗ್‍ಗೆ ವಿಐಪಿ ಟ್ರೀಟ್‍ಮೆಂಟ್ ಹಿಂದಿನ ಸೀಕ್ರೆಟ್ ಬಯಲಾಗಿದೆ. ಶಾಮಿಯಾನದ ಸೈಡ್ ವಾಲ್ ಹಾಕಿಸಿದ್ದು ನಟ ದರ್ಶನ್‍ಗಾಗಿಯೇ ಎಂಬುದು ಇದರ ಹಿಂದಿನ ಸತ್ಯವಾಗಿದೆ. ಪೊಲೀಸರ ಮುಂದೆ ದರ್ಶನ್ ಮನವಿ ಹಿನ್ನೆಲೆಯಲ್ಲಿ ಪೊಲೀಸರು ಈ ಕೆಲಸ ಮಾಡಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ದರ್ಶನ್ ಇರೋ ಪೊಲೀಸ್ ಠಾಣೆ ಬಳಿ 144 ಸೆಕ್ಷನ್- ವಾಹನ ಸವಾರರ ಪರದಾಟ
ದರ್ಶನ್ ಹೇಳಿದ್ದೇನು..?: ಸಾರ್ ನನಗೆ ಒಂದೇ ಕಡೆ ಕುಳಿತು ಇರಲು ಆಗುತ್ತಿಲ್ಲ. ನಾನು ವಾಕ್ ಮಾಡಬೇಕು ನನ್ನ ಕೈಲಿ ಆಗ್ತಿಲ್ಲ. ನಾನು ಬಾಡಿ ರಿಲ್ಯಾಕ್ಸ್ ಮಾಡಬೇಕು. ಸಿಗರೇಟ್ ಇಲ್ಲವಾದ್ರೆ ನನಗೆ ಕೈ ನಡುಗುತ್ತೆ. ನೀವು ಪದೇ ಪದೇ ಪ್ರಶ್ನೆ ಮಾಡುತ್ತಲೇ ಇದ್ದೀರಿ. ನಾನು ಎಷ್ಟು ಸಲ ಹೇಳಲಿ ನನಗೆ ಏನು ಗೊತ್ತಿಲ್ಲ ಅಂತಾ. ಪದೇ ಪದೇ ಅದೇ ಪ್ರಶ್ನೆ ಕೇಳ್ತೀರಿ ಎಂದು ಪೊಲೀಸರ ಮುಂದೆ ದರ್ಶನ್ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.
ಒಟ್ಟಿನಲ್ಲಿ ಠಾಣೆ ಒಳಗೆ ತಿರುಗಾಡಲು ಜಾಗ ಇಲ್ಲ ಅದಕ್ಕೆ ಸೈಡ್ ವಾಲ್ ಹಾಕಿಸಿದ್ದಾರೆ ಎಂದು ಮಾಹಿತಿ ಲಭಿಸಿದೆ.
ಬೆಂಗಳೂರು: ಕೊಲೆ ಪ್ರಕರಣವೊಂದರ ಸಂಬಂಧ ಸ್ಯಾಂಡಲ್‌ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (ChallengingStar Darshan) ಬಂಧನದ ಬೆನ್ನಲ್ಲೇ ಇದೀಗ ನಟಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಒಳಸಂಚು ಆರೋಪದ ಮೇಲೆ ನಟಿಯನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಪ್ರಕರಣ ಸಂಬಂಧ ಪವಿತ್ರಾ ಗೌಡ (Pavithra Gowda) ಹಾಗೂ ದರ್ಶನ್ ಇಬ್ಬರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರು: ಚಿತ್ರರಂಗ ನಮ್ಮ ಮನೆ ಇದ್ದಂತೆ. ಇಲ್ಲಿ ಯಾರೂ ದೊಡ್ಡವರಲ್ಲ, ಚಿಕ್ಕವರಲ್ಲ ಎಂದು ನಟಿ ರಕ್ಷಿತಾ ಪ್ರೇಮ್ ಅವರು ದರ್ಶನ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಚಾರದಲ್ಲಿ ನಿರ್ದೇಶಕ ಪ್ರೇಮ್ ಹೆಸರು ಥಳುಕು ಹಾಕಿಕೊಂಡಿದ್ದಕ್ಕೆ ಪ್ರೇಮ್ ಬೇಸರ ಹೊರಹಾಕಿದ ಬೆನ್ನಲ್ಲೇ ರಕ್ಷಿತಾ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇನ್‍ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿರುವ ರಕ್ಷಿತಾ, ಚಿತ್ರರಂಗದಲ್ಲಿ ಅವರವರ ಕೆಲಸವೇ ಅವರು ಏನೆಂಬುದನ್ನು ಗುರುತಿಸುತ್ತದೆ. ಇಲ್ಲಿ ಎಲ್ಲರನ್ನೂ ಪ್ರೀತಿಸುತ್ತೇವೆ ಹಾಗೆಯೇ ಎಲ್ಲರಿಗೂ ಗೌರವವನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.
ರಕ್ಷಿತಾ ಬರೆದುಕೊಂಡಿದ್ದೇನು..?
ಕನ್ನಡ ಚಿತ್ರರಂಗ ನಮ್ಮದು, ನಮ್ಮ ಮನೆ ಇದ್ದಂತೆ. ಇಲ್ಲಿ ಯಾರೂ ದೊಡ್ಡವರು ಚಿಕ್ಕವರಿಲ್ಲ. ಎಲ್ಲರೂ ಸಮಾನರು. ಆದರೆ ಅವರವರ ಕೆಲಸವೇ ಅವರು ಏನೆಂಬುದನ್ನು ಗುರುತಿಸುತ್ತದೆ. ಇಲ್ಲಿ ನಾವು ಎಲ್ಲರನ್ನೂ ಪ್ರೀತಿಸುತ್ತೇವೆ. ಹಾಗೆಯೇ ಎಲ್ಲರಿಗೂ ಗೌರ ಕೊಡುತ್ತೇವೆ. ಆದರೆ ಇಂತಹ ಘಟನೆಗಳು ನಡೆದಾಗ ಬೇಸರವಾಗುತ್ತದೆ. ಇಲ್ಲಿ ದುರದೃಷ್ಟಕರ ಕೆಲವೊಂದು ವಿಚಾರಗಳು ತೆರೆದುಕೊಳ್ಳುತ್ತಿರುವುದು ಮನಸ್ಸಿಗೆ ಬೇಸರವನ್ನು ಉಂಟುಮಾಡುತ್ತಿದೆ ಅಂತ ರಕ್ಷಿತಾ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದರ್ಶನ್ ಅವ್ರೇ ನನಗ್ಯಾವ ಕೊಂಬೂ ಬರ್ಲಿಲ್ಲ, ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ: ಪ್ರೇಮ್
ಪ್ರೇಮ್ ಹೇಳಿದ್ದೇನು..?
ಇನ್‍ಸ್ಟಾಗ್ರಾಂ ಖಾತೆಯಲ್ಲಿ, ನನಗೆ ಯಾವ ಕೊಂಬೂ ಬಂದಿಲ್ಲ. ಇನ್ನೊಬ್ರ ಬಗ್ಗೆ ಮಾತನಾಡಬೇಕಾದರೆ ಯೋಚಿಸಿ ಮಾತನಾಡಿ ಎಂದು ದರ್ಶನ್‍ಗೆ ಕಿವಿಮಾತು ಹೇಳಿ, ತಮ್ಮ ಹೆಸರು ಪ್ರಸ್ತಾಪಿಸಿದ್ದಕ್ಕೆ ನಿರ್ದೇಶಕ ಪ್ರೇಮ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಂದೇ ಸ್ಟಿಂಗ್ ಆಪರೇಷನ್ ಮಾಡಿದರೂ ನಾನು ಹೆದರಲ್ಲ: ದರ್ಶನ್
ದರ್ಶನ್ ಅವ್ರೆ, ನಾನು ಕರಿಯ ಸಿನಿಮಾ ಮಾಡ್ಬೇಕಾದ್ರೆ ಯಾವ್ ಪುಡಂಗುನೂ ಅಲ್ಲಾ ನಂಗ್ ಕೊಂಬು ಇರ್ಲಿಲ್ಲ.. ನಾನೊಬ್ಬ ಸಾಮಾನ್ಯ ನಿರ್ದೇಶಕ. ರಾಜಕುಮಾರ್ ರವರು, ಅಂಬರೀಷ್ ರವರು, ವಿಷ್ಣುವರ್ಧನ್ ರವರು ಹಾಗೂ ರಜನಿಕಾಂತ್ ರವರು ಒಬ್ಬ ಒಳ್ಳೆ ನಿರ್ದೇಶಕ ಅಂದು ಬೆನ್ನು ತಟ್ಟಿದ್ರು. ಇಡೀ ಕರ್ನಾಟಕ ಜನತೆ ಹರಸಿ ಹಾರೈಸಿ ಹ್ಯಾಟ್ರಿಕ್ ನಿರ್ದೇಶಕ ಅಂತ ಬಿರುದು ಕೊಟ್ಟಾಗ್ಲು ನನಗ್ ಕೊಂಬು ಬರ್ಲಿಲ್ಲ.. ನಾನು ನಂದೇ ಆದ್ ಸ್ಟೈಲ್ ನಲ್ಲಿ ಸಿನಿಮಾ ಮಾಡ್ಕೊಂಡು ಬಂದೋವ್ನು.. ಸುಮಾರು ನಿರ್ಮಾಪಕರುಗಳು ಹಾಗೂ ನಿಮ್ಮ ಅಭಿಮಾನಿಗಳು ಹಾಗೂ ನನ್ನ ಅಭಿಮಾನಿಗಳು ಪ್ರತಿ ಸಾರಿ ದರ್ಶನ್ ಹಾಗೂ ನಿಮ್ಮ ಕಾಂಬಿನೇಶನ್ ನಲ್ಲಿ ಯಾವಾಗ ಚಿತ್ರ ಮಾಡ್ತಿರಂತ ಕೇಳ್ತಾನೆಯಿದ್ರು. ಇದ್ರ ಬಗ್ಗೆ ನಿಮಗೂ ಗೊತ್ತು ನನಗು ಗೊತ್ತು. ಇಬ್ಬರು ಸೇರಿ ಸಿನಿಮಾ ಮಾಡೋದ್ರ ಬಗ್ಗೆ ಚೆರ್ಚೆ ಮಾಡಿದ್ವಿ. ನಾನು ನಮ್ ಬ್ಯಾನರ್ ನಲ್ ಸಿನಿಮಾ ಮಾಡಿ ಇಲ್ಲಾ ನಿಮ್ ಬ್ಯಾನರ್ ನಲ್ ಸಿನಿಮಾ ಮಾಡೋಣ ಅಂತ ಮತ್ತೆ ಚರ್ಚೆ ಮಾಡಿದ್ವಿ. ಆದರೆ ನನಗೆ ಉಮಾಪತಿಯವರು, ನೀವು ಹಾಗೂ ದರ್ಶನ್ ಸೇರಿ ನಂಗ್ ಸಿನಿಮಾ ಮಾಡ್ಕೊಡಿ ಅಂತ ಅಂದ್ರು. ಅದಿಕ್ಕೆ ನಾನು ಉಮಾಪತಿ ಅವ್ರನ್ನ ನಿಮಗೆ ಪರಿಚಯ ಮಾಡಿ.. ಇದನ್ನೂ ಓದಿ: ಇಂದ್ರಜಿತ್ ಅಪ್ಪನಿಗೆ ಹುಟ್ಟಿದವರಾಗಿದ್ರೆ ದಾಖಲೆ ರಿಲೀಸ್ ಮಾಡಲಿ: ದರ್ಶನ್ ನೇರ ಸವಾಲ್
ಮೂರು ಜನ ಸೇರಿ ಸಿನಿಮಾ ಮಾಡೋಣ ಅಂತ ಡಿಸೈಡ್ ಮಾಡಿದ್ವಿ.. ಆದ್ರೆ ನನ್ ದಿ ವಿಲ್ಲನ್ ಸಿನಿಮಾ ಲೇಟ್ ಆದ ಕಾರಣ ನಾನೇ ಉಮಾಪತಿಯವರಿಗೆ ದರ್ಶನ್ ಅವ್ರ ಡೇಟ್ ಇದ್ದ ಕಾರಣ ಬೇರೆ ನಿರ್ದೇಶಕರನ್ನ ಹಿಡಿದು ಸಿನಿಮಾ ಮಾಡಿ ಅಂತ ಹೇಳಿದ್ದೆ.. ನನ್ನ ಸಂಭಾವನೆಯನ್ನ ಉಮಾಪತಿಯವರಿಗೆ ವಾಪಸ್ ನೀಡಿ ರಾಬರ್ಟ್ ಸಿನಿಮಾ ಗೆ ಹಾರೈಸಿದವನು ನಾನು.. ಅದೇ ರೀತಿ ರಾಬರ್ಟ್ ಚಿತ್ರ ಹಿಟ್ ಆಯ್ತು, ಎಲ್ಲರ ಹಾಗೇ ನಾನು ಖುಷಿ ಪಟ್ಟೆ.. ಇದ್ರ ಮದ್ಯೆ ನನ್ ಹೆಸ್ರು ಯಾಕೆ.. ದರ್ಶನ್ ಅವ್ರೆ ನಿರ್ದೇಶಕ್ರು ಯಾವ್ ಪುಡಂಗಿಗಳು ಅಲ್ಲಾ, ಅವ್ರಿಗೆ ಕೊಂಬು ಇರಲ್ಲ.. ತೆರೆಮೇಲೆ ಒಬ್ಬ ನಟನನ್ನ ಹುಟ್ಟಾಕಿ ಅವ್ನಿಗ್ ಕೊಂಬು ಬರ್ಬೇಕಾದ್ರೆ ನಿರ್ದೇಶಕನ ಶ್ರಮ ಎಷ್ಟಿರುತ್ತೆಂತ ಪ್ರತಿಯೊಬ್ಬ ಕಲಾವಿದರಿಗೂ ಗೊತ್ತು ಅದು ನಿಮ್ಗೂ ಗೊತ್ತು.. ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ… Thank you for your kind words. ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಚಾರದಲ್ಲಿ ತನ್ನ ಹೆಸರು ಥಳುಕು ಹಾಕಿಕೊಂಡಿದ್ದಕ್ಕೆ ನಿರ್ದೇಶಕ ಪ್ರೇಮ್ ಪ್ರತಿಕ್ರಿಯೆ ನೀಡಿದ್ದಾರೆ. ಇನ್‍ಸ್ಟಾಗ್ರಾಂ ಖಾತೆಯಲ್ಲಿ, ನನಗೆ ಯಾವ ಕೊಂಬೂ ಬಂದಿಲ್ಲ. ಇನ್ನೊಬ್ರ ಬಗ್ಗೆ ಮಾತನಾಡಬೇಕಾದರೆ ಯೋಚಿಸಿ ಮಾತನಾಡಿ ಎಂದು ದರ್ಶನ್‍ಗೆ ಕಿವಿಮಾತು ಹೇಳಿ, ತಮ್ಮ ಹೆಸರು ಪ್ರಸ್ತಾಪಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Instagram ಪೋಸ್ಟ್ ನಲ್ಲೇನಿದೆ..?: ಕರಿಯ ಸಿನೆಮಾದಿಂದ ತೊಡಗಿ ವಿಲ್ಲನ್ ಸಿನೆಮಾದವರೆಗೆ ಏನಾಯಿತು ಎಂಬುದನ್ನು ಕೂಡಾ ಪ್ರೇಮ್ ವಿವರವಾಗಿ ಬರೆದುಕೊಂಡಿದ್ದಾರೆ. ಜೊತೆಗೆ ತನಗೆ ಹ್ಯಾಟ್ರಿಕ್ ನಿರ್ದೇಶಕ ಎಂಬ ಬಿರುದು ಬಂದಾಗಲೂ ನನಗೆ ಕೊಂಬು ಬರಲಿಲ್ಲ ಎಂದು ಬರೆದುಕೊಂಡಿದ್ದಾರೆ. ನಿರ್ದೇಶಕ ಪ್ರೇಮ್ ಅವರು ಇನ್‍ಸ್ಟಾಗ್ರಾಂ ಪೋಸ್ಟ್ ನಲ್ಲಿ ಹಾಕಿಕೊಂಡ ಬರಹದ ಪೂರ್ಣ ರೂಪ ಇಲ್ಲಿದೆ. ಇದನ್ನೂ ಓದಿ: ಇಂದೇ ಸ್ಟಿಂಗ್ ಆಪರೇಷನ್ ಮಾಡಿದರೂ ನಾನು ಹೆದರಲ್ಲ: ದರ್ಶನ್
ದರ್ಶನ್ ಅವ್ರೆ, ನಾನು ಕರಿಯ ಸಿನಿಮಾ ಮಾಡ್ಬೇಕಾದ್ರೆ ಯಾವ್ ಪುಡಂಗುನೂ ಅಲ್ಲಾ ನಂಗ್ ಕೊಂಬು ಇರ್ಲಿಲ್ಲ.. ನಾನೊಬ್ಬ ಸಾಮಾನ್ಯ ನಿರ್ದೇಶಕ. ರಾಜಕುಮಾರ್ ರವರು, ಅಂಬರೀಷ್ ರವರು, ವಿಷ್ಣುವರ್ಧನ್ ರವರು ಹಾಗೂ ರಜನಿಕಾಂತ್ ರವರು ಒಬ್ಬ ಒಳ್ಳೆ ನಿರ್ದೇಶಕ ಅಂದು ಬೆನ್ನು ತಟ್ಟಿದ್ರು. ಇಡೀ ಕರ್ನಾಟಕ ಜನತೆ ಹರಸಿ ಹಾರೈಸಿ ಹ್ಯಾಟ್ರಿಕ್ ನಿರ್ದೇಶಕ ಅಂತ ಬಿರುದು ಕೊಟ್ಟಾಗ್ಲು ನನಗ್ ಕೊಂಬು ಬರ್ಲಿಲ್ಲ.. ನಾನು ನಂದೇ ಆದ್ ಸ್ಟೈಲ್ ನಲ್ಲಿ ಸಿನಿಮಾ ಮಾಡ್ಕೊಂಡು ಬಂದೋವ್ನು.. ಸುಮಾರು ನಿರ್ಮಾಪಕರುಗಳು ಹಾಗೂ ನಿಮ್ಮ ಅಭಿಮಾನಿಗಳು ಹಾಗೂ ನನ್ನ ಅಭಿಮಾನಿಗಳು ಪ್ರತಿ ಸಾರಿ ದರ್ಶನ್ ಹಾಗೂ ನಿಮ್ಮ ಕಾಂಬಿನೇಶನ್ ನಲ್ಲಿ ಯಾವಾಗ ಚಿತ್ರ ಮಾಡ್ತಿರಂತ ಕೇಳ್ತಾನೆಯಿದ್ರು. ಇದ್ರ ಬಗ್ಗೆ ನಿಮಗೂ ಗೊತ್ತು ನನಗು ಗೊತ್ತು. ಇಬ್ಬರು ಸೇರಿ ಸಿನಿಮಾ ಮಾಡೋದ್ರ ಬಗ್ಗೆ ಚೆರ್ಚೆ ಮಾಡಿದ್ವಿ. ನಾನು ನಮ್ ಬ್ಯಾನರ್ ನಲ್ ಸಿನಿಮಾ ಮಾಡಿ ಇಲ್ಲಾ ನಿಮ್ ಬ್ಯಾನರ್ ನಲ್ ಸಿನಿಮಾ ಮಾಡೋಣ ಅಂತ ಮತ್ತೆ ಚರ್ಚೆ ಮಾಡಿದ್ವಿ. ಆದರೆ ನನಗೆ ಉಮಾಪತಿಯವರು, ನೀವು ಹಾಗೂ ದರ್ಶನ್ ಸೇರಿ ನಂಗ್ ಸಿನಿಮಾ ಮಾಡ್ಕೊಡಿ ಅಂತ ಅಂದ್ರು. ಅದಿಕ್ಕೆ ನಾನು ಉಮಾಪತಿ ಅವ್ರನ್ನ ನಿಮಗೆ ಪರಿಚಯ ಮಾಡಿ.. ಮೂರು ಜನ ಸೇರಿ ಸಿನಿಮಾ ಮಾಡೋಣ ಅಂತ ಡಿಸೈಡ್ ಮಾಡಿದ್ವಿ.. ಆದ್ರೆ ನನ್ ದಿ ವಿಲ್ಲನ್ ಸಿನಿಮಾ ಲೇಟ್ ಆದ ಕಾರಣ ನಾನೇ ಉಮಾಪತಿಯವರಿಗೆ ದರ್ಶನ್ ಅವ್ರ ಡೇಟ್ ಇದ್ದ ಕಾರಣ ಬೇರೆ ನಿರ್ದೇಶಕರನ್ನ ಹಿಡಿದು ಸಿನಿಮಾ ಮಾಡಿ ಅಂತ ಹೇಳಿದ್ದೆ.. ನನ್ನ ಸಂಭಾವನೆಯನ್ನ ಉಮಾಪತಿಯವರಿಗೆ ವಾಪಾಸ್ ನೀಡಿ ರಾಬರ್ಟ್ ಸಿನಿಮಾ ಗೆ ಹಾರೈಸಿದವನು ನಾನು.. ಅದೇ ರೀತಿ ರಾಬರ್ಟ್ ಚಿತ್ರ ಹಿಟ್ ಆಯ್ತು, ಎಲ್ಲರ ಹಾಗೇ ನಾನು ಖುಷಿ ಪಟ್ಟೆ.. ಇದ್ರ ಮದ್ಯೆ ನನ್ ಹೆಸ್ರು ಯಾಕೆ.. ದರ್ಶನ್ ಅವ್ರೆ ನಿರ್ದೇಶಕ್ರು ಯಾವ್ ಪುಡಂಗಿಗಳು ಅಲ್ಲಾ, ಅವ್ರಿಗೆ ಕೊಂಬು ಇರಲ್ಲ.. ತೆರೆಮೇಲೆ ಒಬ್ಬ ನಟನನ್ನ ಹುಟ್ಟಾಕಿ ಅವ್ನಿಗ್ ಕೊಂಬು ಬರ್ಬೇಕಾದ್ರೆ ನಿರ್ದೇಶಕನ ಶ್ರಮ ಎಷ್ಟಿರುತ್ತೆಂತ ಪ್ರತಿಯೊಬ್ಬ ಕಲಾವಿದರಿಗೂ ಗೊತ್ತು ಅದು ನಿಮ್ಗೂ ಗೊತ್ತು.. ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ… Thank you for your kind words. ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ..ಇದನ್ನೂ ಓದಿ: ಇಂದ್ರಜಿತ್ ಅಪ್ಪನಿಗೆ ಹುಟ್ಟಿದವರಾಗಿದ್ರೆ ದಾಖಲೆ ರಿಲೀಸ್ ಮಾಡಲಿ: ದರ್ಶನ್ ನೇರ ಸವಾಲ್
ಮಂಡ್ಯ: ಚಾಲೆಂಜಿಂಗ್ ಸ್ಟಾರ್‍ಗೆ ಇಂದು 44ನೇ ವರ್ಷದ ಹುಟ್ಟುಹಬ್ಬ ಸಂಭ್ರಮ. ಈ ಹಿನ್ನೆಲೆಯಲ್ಲಿ ನಟನ ಅಭಿಮಾನಿಯೋರ್ವ ಅರ್ಥ ಪೂರ್ಣವಾಗಿ ಆಚರಣೆ ಮಾಡಿದ್ದಾರೆ.
ಮಂಡ್ಯದ ವಿಕಾಸನ ಅನಾಥಶ್ರಮದಲ್ಲಿನ ಮಕ್ಕಳೊಂದಿಗೆ ಓಂಕಾರ್ ಎಂಬ ಅಭಿಮಾನಿ ಅರ್ಥ ಪೂರ್ಣವಾಗಿ ಆಚರಣೆ ಮಾಡಿದ್ದಾರೆ. ಅನಾಥಾಶ್ರಮದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ದರ್ಶನ್ ಅವರಿಗೆ ಓಂಕಾರ್ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಇದೇ ವೇಳೆ ಅಲ್ಲಿನ ಮಕ್ಕಳಿಗೆ ಕೇಕ್, ಸ್ವೀಟ್, ಹಣ್ಣು-ಹಂಪಲು ನೀಡಿದ್ದಲ್ಲದೇ ಬಿರಿಯಾನಿಯನ್ನು ಸಹ ಹಂಚಿದ್ದಾರೆ.
ಓಂಕಾರ್ ಅವರು ಮೂಲತಃ ಆಂಧ್ರಪ್ರದೇಶದ ಮೂಲದವರಾಗಿದ್ದು, ಕಳೆದ 15 ವರ್ಷಗಳಿಂದ ಮಂಡ್ಯದಲ್ಲಿ ನೆಲಸಿದ್ದಾರೆ. ಕ್ಷೌರಿಕ ವೃತ್ತಿ ಮಾಡುವ ಓಂಕಾರ್ ಅವರಿಗೆ ದರ್ಶನ್ ಎಂದರೆ ಎಲ್ಲಿಲ್ಲದ ಪ್ರೀತಿ. ದರ್ಶನ್ ಅವರ ಸಿನಿಮಾ ರಿಲೀಸ್ ಆದ ವೇಳೆ ಸಿನಿಮಾ ಕಟೌಟ್ ಹಾಕಿ ಹೂವಿನ ಹಾರ ಹಾಕುತ್ತಾರೆ. ಅಲ್ಲದೇ ಪ್ರತಿ ವರ್ಷ ದರ್ಶನ್ ಹುಟ್ಟುಹಬ್ಬದ ದಿನದಂದು ಸಮಾಜಮುಖಿ ಕೆಲಸ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಧಾರವಾಡ: ಚಾಲೆಜಿಂಗ್ ಸ್ಟಾರ್ ದರ್ಶನ ಇಂದು ಧಾರವಾಡದಲ್ಲಿದ್ದಾರೆ. ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನೆಲೆ ಬೆಂಗಳೂರಿನಲ್ಲಿನ ಸಿನಿಮಾ ಇಂಡಸ್ಟ್ರಿಯಲ್ಲಿ ಯಾವುದೇ ಚಿತ್ರಿಕರಣ ಇಲ್ಲದ ಕಾರಣ ದರ್ಶನ್ ಧಾರವಾಡ ಟೂರ್ ಹಮ್ಮಿಕೊಂಡಿದ್ದಾರೆ.
ಮಾಜಿ ಸಚಿವ ವಿನಯ ಕುಲಕರ್ಣಿ ಜೊತೆ ಹಲವು ವರ್ಷಗಳಿಂದ ದರ್ಶನ್ ಸ್ನೇಹ ಇದೆ. ಈ ಹಿನ್ನೆಲೆಯಲ್ಲಿ ಆಗಾಗ ದರ್ಶನ್ ಇಲ್ಲಿಗೆ ಭೇಟಿ ನೀಡುತ್ತಾ ಇರುತ್ತಾರೆ. ಧಾರವಾಡ ನಗರದ ಹೊರ ವಲಯದಲ್ಲಿರುವ ವಿನಯ ಕುಲಕರ್ಣಿ ಹಾಲಿನ ಡೈರಿಯಲ್ಲಿ ಇಳಿದುಕೊಂಡಿರುವ ದರ್ಶನ್, ಅಲ್ಲಿ ಚಕ್ಕಡಿ ಸವಾರಿ ಮಾಡಿದ್ದಾರೆ.
ಗುಡ್ಡಗಾಡು ಪ್ರದೇಶದಲ್ಲಿ ಈ ಡೈರಿ ಇರುವುದರಿಂದ ದರ್ಶನ್ ಅಲ್ಲಿ ಸ್ವಲ್ಪ ಸುತ್ತಾಡಿ ತಮ್ಮ ದಣಿವನ್ನ ಆರಿಸಿಕೊಂಡಿದ್ದಾರೆ. ಇಲ್ಲಿ ಬಂದಾಗೊಮ್ಮೆ ವಿನಯ ಡೈರಿಯಿಂದ ಅವರು ಹಸುಗಳನ್ನ ಕೂಡ ತೆಗೆದುಕೊಂಡು ಹೋಗಿದ್ದಾರೆ. ಅಲ್ಲದೇ ವಿನಯ ಕುಲಕರ್ಣಿ ಬಳಿ ಇರುವ ಕುದುರೆ ಸವಾರಿ ಕೂಡ ಮಾಡಿದ್ದಾರೆ.
ವಿನಯ ಕುಲಕರ್ಣಿ ಬಳಿ ನಾಲ್ಕಕ್ಕೂ ಹೆಚ್ಚು ಕುದುರೆ ಇವೆ. ಅದರಲ್ಲಿ ದರ್ಶನ್‍ಗೆ ಬಿಳಿ ಕುದುರೆ ಅಂದರೆ ಇಷ್ಟ ಅಂತೆ. ಹೀಗಾಗಿ ಅವರು ಬಿಳಿ ಕುದುರೆ ಸವಾರಿ ಮಾಡಿ ಹೋಗಿದ್ದೂ ಇದೆ.
ಮಂಡ್ಯ: ಲೋಕಸಭಾ ಕ್ಷೇತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಬ್ಬರದ ಪ್ರಚಾರ ಮುಂದುವರಿಸಿದ್ದು, ಇಂದು ತಿಥಿ ಸಿನಿಮಾದ ನಟ ಗಡ್ಡಪ್ಪರನ್ನು ಭೇಟಿ ಮಾಡಿದರು.
ಹೌದು. ನೊದೆಕೊಪ್ಪಲು ಗ್ರಾಮದಲ್ಲಿ ಗಡ್ಡಪ್ಪರನ್ನು ಭೇಟಿ ಮಾಡಿದ ನಟ, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ಮತ ಹಾಕುವಂತೆ ಮನವಿ ಮಾಡಿಕೊಂಡರು. ಅಲ್ಲದೆ ನೀವೇ ಸ್ಟಾರ್ ಎಂದು ಈಗ ಯಾವ ಸಿನಿಮಾ ಮಾಡುತ್ತಿದ್ದೀರಿ ಎಂದು ಕೇಳಿದ್ರು. ಜೊತೆಗೆ ಹಾರ ಹಾಕಿ ಸನ್ಮಾನ ಮಾಡಿದ್ರು.
ದರ್ಶನ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗಡ್ಡಪ್ಪ, ದರ್ಶನ್ ಭೇಟಿ ಮಾಡಿದ್ದು ಬಹಳ ಸಂತೋಷ ತಂದಿದೆ. ಸುಮಲತಾ ಪರ ಮತ ಹಾಕಲು ದರ್ಶನ್ ಹೇಳಿದ್ರು. ನಾನು ಸುಮಲತಾ ಅವರಿಗೇ ಮತ ಹಾಕೋದು. ನಮ್ಮೂರಲ್ಲಿ ಮುಕ್ಕಾಲು ಭಾಗ ಸುಮಲತಾರಿಗೆ ಮತ ಹಾಕುತ್ತಾರೆ. ಉಪೇಂದ್ರ ಕೂಡ ನಮ್ಮೂರಿಗೆ ಬಂದಿದ್ದರು. ಆಗ ಅವರು ಕೂಡ ಮತ ಹಾಕುವಂತೆ ಕೇಳಿಕೊಂಡಿದ್ದರು. ಆದ್ರೆ ನಾವೆಲ್ಲ ಸುಮಲತಾರಿಗೆ ವೋಟು ಹಾಕೋದು ಅಂದ್ರು.
ಒಟ್ಟಿನಲ್ಲಿ ಪ್ರಚಾರಕ್ಕೆ ನಾಲ್ಕು ದಿನ ಬಾಕಿ ಇರುವಂತೆ ದರ್ಶನ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಮುಂದುವರಿಸಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ರಾಗಿಮುದ್ದನಹಳ್ಳಿ, ಯಲಿಯೂರು, ಕೊತ್ತತ್ತಿ, ತಗ್ಗಹಳ್ಳಿ, ಕಿರಗಂದೂರು ಸೇರಿದಂತೆ 35 ಹಳ್ಳಿಗಳಲ್ಲಿ ದಚ್ಚು ರೋಡ್ ಶೋ ಕೈಗೊಂಡಿದ್ದಾರೆ. ಈ ವೇಳೆ ನೊದೆಕೊಪ್ಪಲು ಗ್ರಾಮದಲ್ಲಿ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪರನ್ನು ನಟ ಭೇಟಿ ಮಾಡಿದ್ರು.
ಇತ್ತ ಎರಡು ದಿನಗಳ ಶೂಟಿಂಗ್ ವಿರಾಮ ಬಳಿಕ ರಾಕಿಂಗ್ ಸ್ಟಾರ್ ಯಶ್ ಮತ್ತೆ ಮಂಡ್ಯ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ನಾಗಮಂಗಲ ತಾಲೂಕಿನ ಕೀಳಘಟ್ಟ, ಚಿಕ್ಕೋನಹಳ್ಳಿ, ಕೊಪ್ಪ, ಹೊಸಗಾವಿ, ದೇವಲಾಪುರ ಸೇರಿದಂತೆ 20 ಹಳ್ಳಿಗಳಲ್ಲಿ ಯಶ್ ಭರ್ಜರಿ ರೋಡ್ ಶೋ ಕೈಗೊಂಡಿದ್ದಾರೆ. ರಾತ್ರಿ ಬಂದು ತಟ್ಟುವವರನ್ನ ಸೇರಿಸಬೇಡಿ, ನಾವು ಹಗಲು ನಿಮ್ಮ ಮನಮುಟ್ಟೋ ಕೆಲಸ ಮಾಡ್ತಿದ್ದೀವಿ. ದಯವಿಟ್ಟು ಆಶೀರ್ವಾದ ಮಾಡಿ ಎಂದು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗೆ ಯಶ್ ಟಾಂಗ್ ಕೊಟ್ರು.