ಬೆಂಗಳೂರು: ಕರ್ನಾಟಕದ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದು ತಿಂಗಳು ಕಳೆಯುತ್ತಾ ಬಂದಿದೆ. ಆದ್ರೆ ಮಂಡ್ಯದ ಚುನಾವಣೆ ಕಾವು ಮಾತ್ರ ಇದೂವರೆಗೂ ಕಡಿಮೆ ಆಗಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ ಬಂಡಾಯ ನಾಯಕರು ಹಾಗೂ ದಳಪತಿಗಳ ನಡುವಿನ ವಾಕ್ಸಮರ ಮುಂದುವರಿದಿದೆ. ಎರಡೂ ದೋಸ್ತಿಗಳ ಒಬ್ಬರ ಮೇಲೊಬ್ಬರ ಆರೋಪಗಳು ಮಾಡುತ್ತಾ ಬಹಿರಂಗವಾಗಿಯೇ ಹೇಳಿಕೆಯನ್ನು ನೀಡುತ್ತಿದ್ದಾರೆ.
ಕಳೆದೆರಡು ದಿನಗಳಿಂದ ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಮತ್ತು ಜೆಡಿಎಸ್ ಶಾಸಕರಾದ ಸುರೇಶ್ ಗೌಡ ಹಾಗೂ ನಾರಾಯಣಗೌಡರ ನಡುವೆ ಶೀತಲ ಸಮರವೇ ನಡೆದಿದೆ. ಜೆಡಿಎಸ್ ಕಾರ್ಯಕರ್ತರನ್ನು ಕೆರಳಿಸಲು ಸುರೇಶ್ ಗೌಡ ಮತ್ತು ನಾರಾಯಣಗೌಡ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆಂಬ ಅನುಮಾನ ಸಿದ್ದರಾಮಯ್ಯರಿಗೆ ಬಂದಿದೆ ಅಂತೆ. ಚುನಾವಣಾ ಫಲಿತಾಂಶದ ಬಳಿಕ ಏನು ಬೇಕಾದರೂ ಆಗಬಹುದು. ಇಲ್ಲಿದ್ದರೆ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲೇಬೇಕಾಗುತ್ತದೆ. ಹಾಗಾಗಿ ಫಲಿತಾಂಶ ಬರೋವರೆಗೂ ಮಂಡ್ಯ ಅತೃಪ್ತ ಕಾಂಗ್ರೆಸ್ ಮುಖಂಡರಿಗೆ ವಿದೇಶ ಪ್ರವಾಸಕ್ಕೆ ತೆರಳುವಂತೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ.
ಲೋಕಸಭಾ ಚುನಾವಣೆ ಫಲಿತಾಂಶ ಬರೋವರೆಗೂ ತಾಳ್ಮೆ ಕಾಯ್ದುಕೊಳ್ಳಲು ಇರುವಂತೆ ಸಿದ್ದರಾಮಯ್ಯನವರು ಸೂಚನೆ ನೀಡಿದ ಬೆನ್ನಲ್ಲೆ ಚಲುವರಾಯಸ್ವಾಮಿ ಮೂರ್ನಾಲ್ಕು ದಿನಗಳವರೆಗೆ ದುಬೈ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು: ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬೆನ್ನಲ್ಲೇ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅವರೊಂದಿಗೆ ಡಿನ್ನರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮಾಜಿ ಸಚಿವ ಚಲುವರಾಯಸ್ವಾಮಿ ಅವರು ಇಂದು ಕೆಪಿಸಿಸಿ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಸುಮಲತಾ ಅವರ ಭೇಟಿಯ ಕುರಿತು ದಿನೇಶ್ ಗುಂಡೂರಾವ್ ಅವರಿಗೆ ವಿವರಣೆ ನೀಡಿ ಸ್ಪಷ್ಟನೆ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಇಂದು ಚಲುವರಾಯ ಸ್ವಾಮಿ ಅವರಿಗೆ ತುರ್ತು ಬುಲಾವ್ ನೀಡಿದ್ದರು. ಇದರಂತೆ ಚಲುವರಾಯ ಸ್ವಾಮಿ ಅವರು ಕಚೇರಿಗೆ ಆಗಮಿಸಿದ್ದರು. ಈ ವೇಳೆ ಸಚಿವ ಜಮೀರ್ ಅಹಮ್ಮದ್ ಅವರು ಹಾಜರಿದ್ದರು.
ಚಲುವರಾಯಸ್ವಾಮಿ ಸಮರ್ಥನೆ: ಈ ವೇಳೆ ಸುಮಲತಾ ಅವರ ಭೇಟಿಯ ಬಗ್ಗೆ ದಿನೇಶ್ ಗುಂಡೂರಾವ್ ಅವರು ವಿವರಣೆ ಪಡೆದಿದ್ದಾರೆ. ಸುಮಲತಾ ಜೊತೆ ಅವರ ಭೇಟಿ ಯಾಕೆ? ಸಭೆಗೆ ಹೋಗಿದ್ದ ಕಾರಣವೇನು? ಸಭೆಯಲ್ಲಿ ಏನೆಲ್ಲಾ ಚರ್ಚೆ ನಡೆದಿತ್ತು? ಎಂದು ಪ್ರಶ್ನೆ ಮಾಡಿದ್ದಾರೆ. ದಿನೇಶ್ ಗುಂಡೂರಾವ್ ಅವರ ಪ್ರಶ್ನೆಗಳಿಗೆ ಉತ್ತರಿಸಿರುವ ಚಲುವರಾಯ ಸ್ವಾಮಿ ಅವರು, ಚುನಾವಣೆ ಬಳಿಕ ನಾವು ಸುಮಲತಾ ಅವರನ್ನ ಭೇಟಿ ಮಾಡಿದ್ದರಲ್ಲಿ ತಪ್ಪು ಏನಿದೆ? ಅಲ್ಲದೇ ಪಕ್ಷ ವಿರೋಧಿ ಚಟುವಟಿಕೆ ಹೇಗೆ ಆಗುತ್ತೆ? ಅಂದು ಇಂಡವಾಳು ಸಚ್ಚಿದಾನಂದ ಅವರ ಹುಟ್ಟುಹಬ್ಬ ಇತ್ತು. ಈ ಕಾರಣದಿಂದ ಸಭೆಗೆ ಹಾಜರಾಗಿದ್ದು, ಸಭೆಯಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಚುನಾವಣೆಯ ಆರಂಭದಿಂದಲೂ ನಾವು ಜೆಡಿಎಸ್‍ನಿಂದ ದೂರವೇ ಉಳಿದಿದ್ದೇವೆ. ಈ ಬಗ್ಗೆ ನಿಮ್ಮ ಗಮನಕ್ಕೂ ಮೊದಲೇ ತಂದಿದ್ದೇವೆ. ಏನು ಸಮಸ್ಯೆ ಆಗಿತ್ತು ಎನ್ನುವುದನ್ನು ತಿಳಿಸಿದ್ದೇವೆ. ನಾವು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಸುಮಲತಾ ಪರ ನಾವು ಚುನಾವಣೆಯಲ್ಲಿ ಕೆಲಸ ಮಾಡಿಲ್ಲ ಎಂದು ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.
ಈ ವೇಳೆ ಸಿಎಂ ಹೈಕಮಾಂಡ್‍ಗೆ ದೂರು ನೀಡಿರುವ ಬಗ್ಗೆ ದಿನೇಶ್ ಗುಂಡೂರಾವ್ ಪ್ರಸ್ತಾಪ ಮಾಡಿದ್ದು, ಇದಕ್ಕೂ ಉತ್ತರಿಸಿದ ಚಲುವರಾಯಸ್ವಾಮಿ ಅವರು, ಮಂಡ್ಯದಲ್ಲಿ ಕುಮಾರಸ್ವಾಮಿ ಏನಾದ್ರು ಕಾಂಗ್ರೆಸ್ ಪಕ್ಷವನ್ನ ಬೆಳೆಸ್ತಾರಾ? ನಾವೇ ತಾನೇ ಪಕ್ಷದ ಕಾರ್ಯಕರ್ತರಿಗೆ ಉತ್ತರ ಕೊಡಬೇಕು. ಅದಕ್ಕೆ ಜೆಡಿಎಸ್‍ನಿಂದ ಅಂತರ ಕಾಯ್ದುಕೊಂಡಿದ್ದೆವು ಅಷ್ಟೇ ಎಂದು ತಿಳಿಸಿದ್ದಾರೆ.
ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ ಅವರು, ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿ ವಿಡಿಯೋ ಬಗ್ಗೆ ವಿವರಣೆ ನೀಡಿದ್ದೇವೆ. ನಮ್ಮದು ರಾಷ್ಟ್ರೀಯ ಪಕ್ಷವದ್ದರಿಂದ ಮುಂದೇ ಏನು ಮಾಡಬೇಕು ಎಂದು ನಾಯಕರು ತೀರ್ಮಾನ ಮಾಡುತ್ತಾರೆ. ಆದರೆ ವಿಡಿಯೋ ಈಗ ಏಕೆ ಬಿಡುಗಡೆ ಆಗಿದೆ ಎನ್ನುವುದು ತಿಳಿದಿಲ್ಲ. ಪೊಲೀಸರಿಗೆ ಯಾರು ಒತ್ತಡ ಹಾಕಿದ್ದರೋ, ಪೊಲೀಸರು ಹೋಟೆಲ್ ಅವರ ಮೇಲೆ ಏನು ಒತ್ತಡ ಹಾಕಿದ್ದರೋ? ಚುನಾವಣೆ ಮುನ್ನ ವಿಡಿಯೋ ಬಿಡುಗಡೆ ಆಗಿದ್ದರೆ ಹೆಚ್ಚಿನ ಪ್ರಭಾವ ಉಂಟಾಗುತಿತ್ತು. ಇದರೆ ಪ್ರಭಾವ ಏನು ಇಲ್ಲ ಎಂದು ಹೇಳಿದರು.
ಇದೇ ವೇಳೆ ಶಾಸಕ ಸುರೇಶ್ ಗೌಡ ಅವರ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿ, ನಾನು 25 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಯಾರ ವಿರುದ್ಧವೂ ಕ್ಷುಲ್ಲಕವಾಗಿ ಮಾತನಾಡಿಲ್ಲ. ನಾಗಮಂಗಲ ಕ್ಷೇತ್ರದಲ್ಲಿ ಸೋತಿದ್ದೇವೆ, ಗೆದ್ದಿದ್ದೇವೆ ನಾನು ಎಂದೂ ಆ ರೀತಿ ಒಬ್ಬರ ವಿರುದ್ಧ ಕೀಳು ಮಟ್ಟದ ಪದ ಬಳಕೆ ಮಾಡಲ್ಲ. ಅವರು ಮಾತನಾಡಿಕೊಳ್ಳಲಿ ಬಿಡಿ. ನಾವು ಸುಮಲತಾ ಪರ ಕೆಲಸ ಮಾಡಿಲ್ಲ, ಅಂತರ ಕಾಯ್ದುಕೊಂಡಿದ್ದೇವೆ. ಮೈತ್ರಿ ಅಭ್ಯರ್ಥಿ ವಿಚಾರದಲ್ಲೂ ಮೌನವಹಿಸಿದ್ದೇವೆ ಬಿಟ್ಟರೆ ನಾವು ಎಲ್ಲೂ ಅಪಪ್ರಚಾರ ಮಾಡಿಲ್ಲ ಎಂದರು.
ಮಂಡ್ಯ; ಜಿಲ್ಲೆಯಲ್ಲಿ ಕೆಲವು ಕಾಂಗ್ರೆಸ್ ನಾಯಕರು ಹೆಂಗಸನ್ನು ಮುಂದಿಟ್ಟುಕೊಂಡು ಶಿಖಂಡಿ ರಾಜಕೀಯ ಮಾಡುತ್ತಿದ್ದಾರೆ ಎಂದು ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್‍ಗೌಡ ಅವರು ಆಕ್ರೋಶ ಹೊರಹಾಕಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಬಾರಿ ಮಂಡ್ಯದ ಲೋಕಸಭಾ ಚುನಾವಣೆಯಲ್ಲಿ ಮೂಲ ಕಾಂಗ್ರೆಸಿಗರು ಮಾತ್ರ ಮೈತ್ರಿ ಧರ್ಮ ಪಾಲಿಸಿದ್ದಾರೆ. ಯಾರು ಇತ್ತೀಚೆಗೆ ಕಾಂಗ್ರೆಸ್‍ಗೆ ವಲಸೆ ಹೋಗಿದ್ದಾರೋ ಅವರಲ್ಲಿ ಬಹುತೇಕ ಶೇ.80 ರಷ್ಟು ಜನರು ಮೈತ್ರಿ ಧರ್ಮ ಪಾಲನೆ ಮಾಡಿಲ್ಲ. ಅವರೆಲ್ಲರೂ ನಮ್ಮ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧವಾಗಿ ಕೆಲಸ ಮಾಡಿದ್ದಾರೆ ಎಂದು ದೂರಿದರು.
ಮೂಲ ಕಾಂಗ್ರೆಸಿಗರಾದ ಆತ್ಮಾನಂದ ಮತ್ತು ಜಿಲ್ಲಾಧ್ಯಕ್ಷ ಗಂಗಾಧರ್ ಸೇರಿದಂತೆ ಹಲವರು ಈ ಬಾರಿ ತಟಸ್ಥರಾಗಿರಲಿಲ್ಲ ತಮ್ಮ ಶಕ್ತಿ ಮೀರಿ ಮೈತ್ರಿ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದಾರೆ. ಅವರು ಈ ಬಾರಿ ಬಹಿರಂಗವಾಗಿಯೇ ನನ್ನ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದಾರೆ. ಇತ್ತೀಚೆಗೆ ಹೋದವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ತಿಳಿಯದೆ ಬ್ಲಾಕ್ ಮೇಲ್ ರಾಜಕಾರಣ ಮಾಡಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿಗೆ ಸುಮಲತಾ ಪರವಾಗಿ ಹಲವಾರು ಕಾಂಗ್ರೆಸ್ ನಾಯಕರು ಈ ಬಾರಿ ಚುನಾವಣೆ ಮಾಡಿದ್ದಾರೆ. ಒಂದಂತು ಸತ್ಯ ಇದೆರಲ್ಲದರ ಹಿಂದೆ ಯಾರದೋ ಪ್ರಬಲ ವ್ಯಕ್ತಿಯ ಕೈವಾಡ ವಿದೆ ಎಂದು ಅನುಮಾನ ವ್ಯಕ್ತಪಡಿಸಿದರು.
ಮಂಡ್ಯ: ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಶಿವರಾಮೇಗೌಡರಿಗೆ ಸಹಕಾರ ನೀಡಲು ಆಗಲ್ಲ ಎಂದು ಗಲಾಟೆ ಮಾಡುತ್ತಿದ್ದ ಬೆಂಬಲಿಗರ ವಿರುದ್ಧ ಅಸಮಾಧಾನಗೊಂಡು ಮಾಜಿ ಸಚಿವ ಚಲುವರಾಯಸ್ವಾಮಿ ಆಕ್ರೋಶದಿಂದ ಮೈಕ್ ಎಸೆದ ಘಟನೆ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ.
ಜೆಡಿಎಸ್ ಪಕ್ಷದ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸದ ಚಲುವರಾಯಸ್ವಾಮಿ ಇಂದು ನಾಗಮಂಗಲದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಕರೆದಿದ್ದರು. ಸಭೆಗೆ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡರು ಕೂಡ ಆಗಮಿಸಿದ್ದರು. ಸಭೆಯಲ್ಲಿ ವರಿಷ್ಠರ ಮಾತಿನಂತೆ ಜೆಡಿಎಸ್ ಪಕ್ಷಕ್ಕೆ ಸಹಕಾರ ನೀಡಿ ಎನ್ನುತ್ತಿದ್ದಂತೆ ಜೋರು ಧ್ವನಿಯಲ್ಲಿ ಆಕ್ರೋಶ ಹೊರಹಾಕಿದ ಕಾಂಗ್ರೆಸ್ ಕಾರ್ಯಕರ್ತರು ಅದು ನಮ್ಮಿಂದ ಸಾಧ್ಯವಿಲ್ಲ ಎಂದು ಸಿಟ್ಟು ಹೊರಹಾಕಿದರು. ಈ ವೇಳೆ ಸುಮ್ಮನಿರಿ ಎಂದು ಎಷ್ಟೇ ಹೇಳಿದರು ಬೆಂಬಲಿಗರು ತಮ್ಮ ಮಾತು ಕೇಳದಿದ್ದಾಗ ಚಲುವರಾಯಸ್ವಾಮಿ ಸಿಟ್ಟಿನಿಂದ ಮೈಕ್ ಕೆಳಕ್ಕೆ ಎಸೆದು ಅಸಮಾಧಾನ ಹೊರಹಾಕಿದರು.
ಕಾರ್ಯಕರ್ತರನ್ನು ಸಮಾಧಾನ ಮಾಡಿದ ಚಲುವರಾಯಸ್ವಾಮಿ ಜೆಡಿಎಸ್ ಪಕ್ಷದಿಂದ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಆಗುತ್ತಿರುವ ತೊಂದರೆ ಬಗ್ಗೆ ನನಗೂ ಅರಿವಿದೆ. ನಮ್ಮ ವಿಷಯದಲ್ಲಿ ಜೆಡಿಎಸ್ ನಡೆದುಕೊಳ್ಳುತ್ತಿರುವುದು ರಾಜ್ಯದ ಅಧ್ಯಕ್ಷರು ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ. ಹೀಗಾಗಿ ಸಿದ್ದರಾಮಯ್ಯ ಭರವಸೆ ಕೊಟ್ಟಿದ್ದಾರೆ. ಹಳೆಯ ಮೈಸೂರಿನವರಿಗೆ ಸಮನ್ವಯ ಸಮಿತಿ ಕರೆದು ಮಾತನಾಡುತ್ತೇನೆ. ಅದು ಆದ ನಂತರವೂ ಮುಂದುವರಿದರೆ ಕಡೆಗಣಿಸಲು ಸಾಧ್ಯವಿಲ್ಲ. ಹಾಗಾಗಿ ನಾಗಮಂಗಲದಿಂದ ಆರಂಭಿಸಿ ಏಳು ತಾಲೂಕುಗಳಲ್ಲಿ ಸಭೆ ನಡೆಸಲಾಗುವುದು. ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕಿ ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು.
ಚುನಾವಣೆಯ ಬಳಿಕ ಜೆಡಿಎಸ್ ನಲ್ಲಿ ಬದಲಾವಣೆ ಆಗದಿದ್ರೆ ಮುಂದಿನ ಚುನಾವಣೆ ಬಹಳ ದೂರವಿಲ್ಲ. ಆಗ ನಿರ್ಧಾರ ತೆಗೆದುಕೊಳ್ಳೋಣ. ಒಮ್ಮೆ ಸಪೋರ್ಟ್ ಮಾಡಿ ಪರಿಸ್ಥಿತಿ ನೋಡೋಣ ಎಂದು ಕಾರ್ಯಕರ್ತರನ್ನು ಸಮಾಧಾನ ಮಾಡಿದ್ರು. ಇದೇ ವೇಳೆ ಸಚಿವ ಪುಟ್ಟರಾಜು ತಮ್ಮ ವಿರುದ್ಧ ನೀಡಿದ್ದ ಡೆಡ್ ಹಾರ್ಸ್ ಹೇಳಿಕೆ ನೆನಪಿಸಿಕೊಂಡ ಚಲುವರಾಯಸ್ವಾಮಿ, ಅವರು ಹೇಳಿದ್ದು ಸತ್ಯ. ನಮ್ಮ ಜನ ನಮ್ಮನ್ನು ರಕ್ಷಣೆ ಮಾಡಿಕೊಳ್ಳದಿದ್ದಾಗ ಬೇರೆಯವರನ್ನು ಯಾಕೆ ದೂರಬೇಕು. ಕನಕಪುರದಲ್ಲಿ ಡಿಕೆ.ಶಿವಕುಮಾರ್ ಬೇಕು ಅನ್ನುವ ರೀತಿ ನೀವು ನಾಗಮಂಗಲದಲ್ಲಿ ಚಲುವರಾಯಸ್ವಾಮಿ ಬೇಕು ಎನ್ನಬೇಕಿತ್ತು. ಹಾಗೇ ನಡೆದುಕೊಂಡಿದ್ರೆ ಪುಟ್ಟರಾಜು ಯಾಕೆ ಡೆಡ್ ಹಾರ್ಸ್ ಅಂತಿದ್ರು. ನಾನು ಶಿವರಾಮೇಗೌಡ ಅಥವಾ ಕುಮಾರಸ್ವಾಮಿ ಅವರಿಂದ ನಿರೀಕ್ಷೆ ಇಟ್ಟುಕೊಂಡು ಚುನಾವಣೆ ಮಾಡುತ್ತಿಲ್ಲ. ಪಕ್ಷ ಹೇಳಿದಂತೆ ಚುನಾವಣೆ ಮಾಡುತ್ತಿದ್ದೇವೆ ಅಷ್ಟೆ. ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಮಂಡ್ಯ: ಬಸ್ ದರ ಏರಿಕೆ ವಿಚಾರವಾಗಿ ರಾಷ್ಟ್ರೀಯ ನಾಯಕರು ಅಷ್ಟೊಂದು ತುಚ್ಛವಾಗಿ ಹೇಳಿರಲ್ಲ, ಮಾಧ್ಯಮದವರು ಉಪ್ಪು ಖಾರ ಸೇರಿಸಿ ಹೇಳಿದ್ದಾರೆ ಎಂದು ಟೀಕಿಸಿ ತೈಲ ಬೆಲೆ ಏರಿಕೆಯಾದರೆ ನೀರಲ್ಲಿ ಓಡಿಸಲಾಗುತ್ತಾ ಎಂಬ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಗೆ ಮಾಜಿ ಸಚಿವ ಚಲುವರಾಯಸ್ವಾಮಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ತೈಲ ಬೆಲೆ ಏರಿಕೆ ವಿರೋಧಿಸಿ ಬಂದ್‍ನಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ ವೇಳೆ ಮಾತನಾಡಿದ ಅವರು ತೈಲ ಬೆಲೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಬೆಂಗಳೂರು ಮೈಸೂರು ಹೆದ್ದಾರಿ ಸೇರಿದಂತೆ ಮಂಡ್ಯ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೇಂದ್ರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಇದನ್ನು ಓದಿ:ದರ ಇಳಿಸಿ ಅಂದ್ರೆ ನೀರಲ್ಲಿ ಬಸ್ ಓಡಿಸುವುದಕ್ಕೆ ಸಾಧ್ಯವಾಗುತ್ತಾ..?- ಎಚ್‍ಡಿಡಿ
ಡಿಕೆ ಶಿವಕುಮಾರ್ ಅವರ ವಿಚಾರಕ್ಕೆ ಪ್ರತಿಕ್ರಿಯಿಸಿ ಕರ್ನಾಟಕದಲ್ಲಿ ಪ್ರಭಾವಿ ನಾಯಕರಾಗಿದ್ದು, ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಅವರ ಮೇಲೆ ಐಟಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಐಟಿ ದಾಳಿ ಸರ್ಕಾರದ ಮೇಲೂ ಪರಿಣಾಮ ಬೀರಲ್ಲ. ಡಿಕೆ ಶಿವಕುಮಾರ್ ಮೇಲೂ ಪರಿಣಾಮ ಬೀರಲ್ಲ. ಬಿಜೆಪಿ ಅನೇಕ ಕಡೆ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಆತಂಕ ಬೇಡ. ನಾವೆಲ್ಲರೂ ಡಿಕೆ ಶಿವಕುಮಾರ್ ಜೊತೆ ಇದ್ದೇವೆ. ಅವರೂ ಕೂಡ ಐಟಿ ದಾಳಿಯನ್ನು ಸಮರ್ಥವಾಗಿ ಎದುರಿಸುತ್ತಾರೆ ಎಂದರು.
ಪ್ರಧಾನಿ ವಿರುದ್ಧವೂ ಹರಿಹಾಯ್ದ ಅವರು ಮೋದಿ ನೀಡಿದ ಒಂದೊಂದು ಭರವಸೆಯೂ ಹುಸಿಯಾಗಿದೆ. ಆರು ತಿಂಗಳಲ್ಲಿ ಚುನಾವಣೆ ಇರುವುದರಿಂದ ಇಲ್ಲದ್ದನ್ನು ಗಿಮಿಕ್ ಮಾಡುತ್ತಿದ್ದಾರೆ ಎಂದು ದೂರಿದರು.
ಪ್ರತಿಭಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕೆಲವೊಂದು ಅಂಗಡಿಗಳನ್ನು ಬಲವಂತವಾಗಿ ಬಾಗಿಲು ಹಾಕಿಸಿದ್ದು ಸಾರ್ವಜನಿಕ ಟೀಕೆಗೆ ಗುರಿಯಾಗಿದೆ.
ಮಂಡ್ಯ: ಶಾಸಕ ಚಲುವರಾಯಸ್ವಾಮಿ ನಿಮಗೆ ಗೊತ್ತಿಲ್ಲ ಇನ್‍ಕಮ್ ಟ್ಯಾಕ್ಸ್ ಸವಾಸ, ನನಗೆ ಗೊತ್ತಿದೆ ಎಂದು ನಗುನಗುತ್ತಲೇ ಸಾವಿರಾರು ಜನರೆದುರು ಐಟಿ ಸಂಕಷ್ಟವನ್ನು ಇಂಧನ ಸಚಿವ ಡಿಕೆ.ಶಿವಕುಮಾರ್ ಬಿಚ್ಚಿಟ್ಟಿದ್ದಾರೆ.
ನಾಗಮಂಗಲದಲ್ಲಿ ಶುಕ್ರವಾರ ಚಲುವರಾಯಸ್ವಾಮಿ ಪರವಾಗಿ ಸಮಾವೇಶದಲ್ಲಿ ಪಾಲ್ಗೊಂಡ ಅವರು, ತಾವೆದುರಿಸಿದ ಐಟಿ ಸಂಕಷ್ಟವನ್ನು ಬಹಿರಂಗಪಡಿಸಿದ್ದಾರೆ. ಚಲುವರಾಯಸ್ವಾಮಿ ಸಮಾರಂಭ ಮಾಡುವ ಕಷ್ಟ ಹೇಳಿಕೊಂಡು, ಪದೇ ಪದೇ ಸಭೆ ಮಾಡಿ ಎಂದು ಕೇಳಬೇಡಿ ಅಂತಾ ಭಾಷಣ ಮಾಡುತ್ತಿದ್ದರು.
ಈ ವೇಳೆ ಚಲುವರಾಯಸ್ವಾಮಿ ಇದ್ದಲ್ಲಿಗೆ ಎದ್ದು ಬಂದ ಡಿಕೆಶಿ ಪದೇ ಪದೇ ಸಭೆ ಮಾಡಲು ಆಗಲ್ಲ. ನೀವು ಕಾಂಗ್ರೆಸ್ ಚಿಹ್ನೆ ಹಾಕಿಕೊಂಡು ಓಡಾಡಿದರೂ ಚಲುವರಾಯಸ್ವಾಮಿ ಲೆಕ್ಕಕ್ಕೆ ಬರೀತಾರೆ. ಐಟಿ ಸಂಕಷ್ಟ ನನಗೆ ಗೊತ್ತಿದೆ ಎಂದು ನಗು ನಗುತ್ತಲೇ ಡಿ.ಕೆ. ಶಿವಕುಮಾರ್ ಕಾರ್ಯಕರ್ತರೆದುರು ತಮ್ಮ ಕಷ್ಟ ಹೇಳಿಕೊಂಡಿದ್ದಾರೆ.