Tag: Chaluvaraya Swamy

  • ಸಿಎಂ ಡಿನ್ನರ್ ಮೀಟಿಂಗ್ ಯಾಕೆ ಅಂತ ಗೊತ್ತಿಲ್ಲ: ಚೆಲುವರಾಯಸ್ವಾಮಿ

    ಸಿಎಂ ಡಿನ್ನರ್ ಮೀಟಿಂಗ್ ಯಾಕೆ ಅಂತ ಗೊತ್ತಿಲ್ಲ: ಚೆಲುವರಾಯಸ್ವಾಮಿ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಡಿನ್ನರ್ ಮೀಟಿಂಗ್ (Dinner Meeting) ಕರೆದಿರೋದು ಯಾಕೆ ಅಂತ ನನಗೆ ಗೊತ್ತಿಲ್ಲ ಎಂದು ಸಚಿವ ಚೆಲುವರಾಯಸ್ವಾಮಿ (Chaluvaraya Swamy) ತಿಳಿಸಿದ್ದಾರೆ.

    ಸಚಿವರಿಗೆ ಸಿಎಂ  ಸಿದ್ದರಾಮಯ್ಯ ಅವರು ಅ.13ರ ರಾತ್ರಿ ಔತಣಕೂಟಕ್ಕೆ ಆಹ್ವಾನ ನೀಡಿದ ವಿಚಾರವಾಗಿ ವಿಧಾನಸೌಧದಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ಈ ವೇಳೆ, ನನಗೆ ಏನು ವಿಷಯ ಅಂತ ಗೊತ್ತಿಲ್ಲ. ಇದಕ್ಕೂ ಮುನ್ನ ಎರಡ್ಮೂರು ಸಭೆ ಬಾರಿ ಕರೆದಿದ್ದಾರೆ.ಈ ವೇಳೆ ಸರ್ಕಾರದ ಕಾರ್ಯಕ್ರಮ, ಅಭಿವೃದ್ಧಿ, ಪಕ್ಷದ ಸಂಘಟನೆ, ಸ್ಥಳೀಯ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದರು. ಈಗಲೂ ಅದೇ ಇರಬಹುದು. ಆದ್ರೆ ಸಂಪುಟ ಪುನರ್‌ಚನೆ ಬೇರೆ. ಇದಕ್ಕೂ ಅದಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಂಪುಟ ಪುನರ್‌ಚನೆ ವದಂತಿ ಬೆನ್ನಲ್ಲೇ ಮೂವರು ಸಚಿವರಿಂದ ಬ್ರೇಕ್‌ಫಾಸ್ಟ್‌ ಮೀಟಿಂಗ್‌

    ಸಂಪುಟ ಪುನರ್‌ಚನೆ ಎಲ್ಲವೂ ಪಕ್ಷ ಮತ್ತು ಸಿಎಂ ಅವರಿಗೆ ಬಿಟ್ಟಿದ್ದು. ಅವರಿಗೆ ಸಂಬಂಧಿಸಿದ್ದು. ಖಾತೆ ಬದಲಾವಣೆ, ಸಂಪುಟ ಪುನಾರಚನೆ, ಹೊಸಬರನ್ನ ತೆಗೆದುಕೊಳ್ಳೋದು ಸಿಎಂ ಅವರಿಗೆ ಬಿಟ್ಟಿದ್ದು. ಎರಡೂವರೆ ವರ್ಷ ಆದ್ಮೇಲೆ ಬೇರೆಯವರಿಗೆ ಅವಕಾಶ ನೀಡಬೇಕು ಅಂತ ಹೇಳ್ತಾರೆ. ಸಚಿವರ ಮೌಲ್ಯಮಾಪನ ಅಂತ ಏನಿಲ್ಲ. ಎಲ್ಲರಿಗೂ ಅವಕಾಶ ನೀಡಬೇಕಾಗುತ್ತದೆ. ಎಲ್ಲರಿಗೂ ಸಚಿವರು ಆಗೋ ಆಸೆ ಇರುತ್ತದೆ ಹೈಕಮಾಂಡ್‌ ಹಾಗೂ ಸಿಎಂ ಈ ಬಗ್ಗೆ ನಿರ್ಧಾರ ಮಾಡುತ್ತಾರೆ ಎಂದರು. ಇದನ್ನೂ ಓದಿ: ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ಸಿಗಲಿದೆ: ನಾರಾಯಣಸ್ವಾಮಿ

     

  • ಮಂಡ್ಯ | ಸೆ.25ರಿಂದ ನಾಲ್ಕು ದಿನ ಶ್ರೀರಂಗಪಟ್ಟಣ ದಸರಾ

    ಮಂಡ್ಯ | ಸೆ.25ರಿಂದ ನಾಲ್ಕು ದಿನ ಶ್ರೀರಂಗಪಟ್ಟಣ ದಸರಾ

    ಮಂಡ್ಯ: ಈ ಬಾರಿ ಸೆಪ್ಟೆಂಬರ್ 25 ರಿಂದ 28 ರಿಂದ 4 ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ (Srirangapatna Dasara) ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಗಳು ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಸಚಿವ ಎನ್.ಚಲುವರಾಯಸ್ವಾಮಿ (Chaluvaraya Swamy) ತಿಳಿಸಿದ್ದಾರೆ.

    ಇಂದು ಮಂಡ್ಯ (Mandya) ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮದ ಮೆರವಣಿಗೆಗೆ ಸೆಪ್ಟೆಂಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ಚಾಲನೆ ನೀಡಲಾಗುವುದು. ಕಾರ್ಯಕ್ರಮಗಳು ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

    ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಿ
    ಶ್ರೀರಂಗಪಟ್ಟಣ ದಸರಾ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಕಾರ್ಯಕ್ರಮಗಳಲ್ಲಿ ನಮ್ಮ ಇತಿಹಾಸ ಹಾಗೂ ಸಂಸ್ಕೃತಿಗಳ ಹಿನ್ನೆಲೆ ಹೊಂದಿರಲಿದೆ. ಮಹಿಳೆಯರು, ಮಕ್ಕಳು, ಯುವಕರು, ವೃದ್ಧರು ಸೇರಿದಂತೆ ವಿವಿಧ ವಯೋಮಿತಿಗಳ ಜನರು ಭಾಗವಹಿಸುವ ರೀತಿ ಕಾರ್ಯಕ್ರಮಗಳನ್ನು ಅಧಿಕಾರಿಗಳು ವೈವಿದ್ಯಮಯವಾಗಿ ರೂಪಿಸಿ ದಸರಾ ಕಾರ್ಯಕ್ರಮಗಳನ್ನು ಯಾವುದೇ ಲೋಪವಿಲ್ಲದಂತೆ ಅಚ್ಚುಕಟ್ಟಾಗಿ ಸಂಘಟಿಸಿ ಎಂದು ಹೇಳಿದರು.

    ಮೆರವಣಿಗೆಗೆ ಚಾಲನೆ ನೀಡುವ ಕಿರಂಗೂರು ಬನ್ನಿಮಂಟಪದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಕೈಗೊಂಡು ಸಿದ್ಧತೆಗಳನ್ನು ಪ್ರಾರಂಭಿಸಿ. ಯೋಗ ದಸರಾದಲ್ಲಿ ಯೋಗ ಪ್ರದರ್ಶನದೊಂದಿಗೆ ಯೋಗ ಸ್ಪರ್ಧೆಗಳನ್ನು ಸಹ ಆಯೋಜಿಸಿ. ಶಿಕ್ಷಣ ಇಲಾಖೆ ಅವರು ಯೋಗ ಸ್ಪರ್ಧೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಾಲಾ ಕಾಲೇಜುಗಳಿಗೆ ಮಾಹಿತಿ ನೀಡಿ ಎಂದರು.

  • ಬಾಗಲಕೋಟೆಯ ತೋಟಗಾರಿಕೆ ವಿವಿ ಮುಚ್ಚೋದಿಲ್ಲ- ಚೆಲುವರಾಯಸ್ವಾಮಿ

    ಬಾಗಲಕೋಟೆಯ ತೋಟಗಾರಿಕೆ ವಿವಿ ಮುಚ್ಚೋದಿಲ್ಲ- ಚೆಲುವರಾಯಸ್ವಾಮಿ

    ಬೆಂಗಳೂರು : ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯವನ್ನು (Bagalkote Horticulture University) ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ (Chaluvaraya Swamy) ಸ್ಪಷ್ಟಪಡಿಸಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಹನುಮಂತ ನಿರಾಣಿ ಪ್ರಶ್ನೆ ಕೇಳಿದ್ರು. ಸರ್ಕಾರ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯವನ್ನ ಸಮಗ್ರ ವಿವಿ ಮಾಡಲು ಸರ್ಕಾರ ಹೊರಟಿದೆ .ಮಂಡ್ಯದಲ್ಲಿ ಸಮಗ್ರ ವಿವಿ ಮಾಡಲು ಸರ್ಕಾರ ಹೊರಟಿದೆ. ಈ ಮೂಲಕ ಬಾಗಲಕೋಟೆ ವಿವಿ ಮುಚ್ಚುವ ಹುನ್ನಾರ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಬಾಗಲಕೋಟೆ ತೋಟಗಾರಿಕೆ ವಿವಿಯನ್ನು ಮುಚ್ಚಬಾರದು, ಮಂಡ್ಯಗೆ ಬದಲಾವಣೆ ಮಾಡಬಾರದು ಅಂತ ಒತ್ತಾಯ ಮಾಡಿದರು.  ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌| ಯಾರದ್ದೋ ಫೋಟೋ ತೋರಿಸಿ ಪುತ್ರಿ ಎಂದು ಸುಳ್ಳು ಹೇಳಿದ ಸುಜಾತ ಭಟ್‌!

     

    ಇದಕ್ಕೆ ಸಚಿವ ಚೆಲುವರಾಯಸ್ವಾಮಿ ಉತ್ತರ ನೀಡಿ, ಸಮಗ್ರ ವಿವಿ ಮಾಡುವ ಹಿನ್ನೆಲೆಯಲ್ಲಿ ವಿಜಯ್ ಭಾಸ್ಕರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ‌. ಇನ್ನು ವರದಿ ಬಂದಿಲ್ಲ. ವರದಿ ಬಂದ ಮೇಲೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಬಾಗಲಕೋಟೆ ತೋಟಗಾರಿಕೆ ವಿವಿಯನ್ನ ಮುಚ್ಚುವುದಿಲ್ಲ ಮತ್ತು ವಿಲೀನ ಮಾಡುವುದಿಲ್ಲ. ಯಾವುದೇ ಕಡೆ ಶಿಫ್ಟ್ ಕೊಡೋದು ಇಲ್ಲ ಎಂದು ಹೇಳಿದರು.

  • ಕೇಂದ್ರದಿಂದ 1.50 ಲಕ್ಷ ಟನ್‌ ರಸಗೊಬ್ಬರ ಕೊರತೆಯಾಗಿದೆ – ಸಚಿವ ಚಲುವರಾಯಸ್ವಾಮಿ

    ಕೇಂದ್ರದಿಂದ 1.50 ಲಕ್ಷ ಟನ್‌ ರಸಗೊಬ್ಬರ ಕೊರತೆಯಾಗಿದೆ – ಸಚಿವ ಚಲುವರಾಯಸ್ವಾಮಿ

    ಬೆಂಗಳೂರು: ನಮಗೆ ಒಟ್ಟು 6 ಲಕ್ಷದ 88 ಸಾವಿರ ಟನ್ ರಸಗೊಬ್ಬರ (Fertiliser) ಸಪ್ಲೈ ಆಗಬೇಕಿತ್ತು. ಅದರಲ್ಲಿ 5 ಪಕ್ಷದ 27 ಸಾವಿರ ಟನ್ ಸಪ್ಲೈ ಆಗಿದೆ. ಉಳಿದ 1 ಲಕ್ಷದ 50 ಸಾವಿರ ಟನ್ ಬರಬೇಕಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ (Chaluvaraya Swamy) ಹೇಳಿದರು.

    ಕಳೆದ ಒಂದೂವರೆ ತಿಂಗಳಿಂದ ಮಳೆ ಚೆನ್ನಾಗಿ ಆಗ್ತಿದೆ ಮುಂಗಾರು ಬೇಗ ಆರಂಭವಾಗಿದೆ ಡ್ಯಾಮ್‌ಗಳು ಬೇಗ ತುಂಬಿದ್ದರಿಂದ ಸ್ವಲ್ಪ ಸಮಸ್ಯೆ ಆಗಿದೆ. ಜೊತೆಗೆ 2 ಲಕ್ಷ ಹೆಕ್ಟೇರ್ ಜಾಸ್ತಿ ಬೇಸಾಯದ ಏರಿಯಾ ಜಾಸ್ತಿ ಆಗಿದೆ. ಈ ಕಾರಣಗಳಿಂದ ರಸಗೊಬ್ಬರಕ್ಕೆ (Fertiliser) ಬೇಡಿಕೆ ಹೆಚ್ಚಾಗಿದೆ. ಟೀಕೆ ಟಿಪ್ಪಣಿಗಿಂತ ಹೆಚ್ಚಾಗಿ ರೈತರ ಸಮಸ್ಯೆ ಬಗೆಹರಿಸಬೇಕು ಅಂತ ಮುಖ್ಯಮಂತ್ರಿಗಳಿಗೆ ನಾನೇ ಮನವಿ ಮಾಡಿದೆ ಪತ್ರ ಬರೆಯಿರಿ ಅಂತ ಹೇಳಿದೆ. ಆದರೆ ಈ ಸಂದರ್ಭವನ್ನು ಉಪಯೋಗಿಸಿಕೊಂಡು ಜೋಶಿಯವರು ಮಾತನಾಡುತ್ತಿದ್ದಾರೆ ಅಂತ ಅಸಮಾಧಾನ ಹೊರಹಾಕಿದ್ರು.

    ಇರಾನ್‌ನ ಯುದ್ಧದ ಕಾರಣಕ್ಕೆ ಯೂರಿಯಾ ಸಪ್ಲೈ ಬರ್ತಿಲ್ಲ
    ನಾನೇ ಜೋಶಿಯವರಿಗೆ (Pralhad Joshi) ಪತ್ರ ಬರೆದಿದ್ದೇನೆ. ರಾಜ್ಯದ ಎಲ್ಲಾ ಸಂಸದರಿಗೂ ಹಾಗೂ ರಾಜ್ಯ ಪ್ರತಿನಿಧಿಸುವ ಸಚಿವರಿಗೆ ಪತ್ರ ಬರೆದಿದ್ದೇನೆ. ಆದ್ರೆ ಅದರ ಕಡೆ ಗಮನ ಹರಿಸದೇ ಸಿದ್ದರಾಮಯ್ಯರ ಬಗ್ಗೆ ಟೀಕೆ ಮಾಡಿದ್ದಾರೆ. ಜೋಶಿಯವರು ಕೃಷಿ ವಿಚಾರದಲ್ಲಿ ಹೀಗೆಲ್ಲಾ ರಾಜಕಾರಣ ಮಾಡ್ತಾರೆ ಅಂತ ನಾನು ಅಂದುಕೊಂಡಿರಲಿಲ್ಲ. ರಸಗೊಬ್ಬರವನ್ನ ಟೈಮ್ ಟು ಟೈಮ್ ಕೊಡ್ತಾರೆ. ನಾವು ಕಳೆದ ಬಾರಿ ಹೆಚ್ಚು ದಾಸ್ತಾನು ಮಡಿಕೊಳ್ಳುತ್ತಿದ್ದೆವು. ಆದರೆ ಕೇಂದ್ರ ಸರ್ಕಾರದಲ್ಲಿ 2-3 ಪ್ರಾಬ್ಲಂ ಇದೆ. ಇರಾನ್‌ನ ಯುದ್ಧದ ಕಾರಣಕ್ಕೆ ಯೂರಿಯಾ ಸಪ್ಲೈ ಬರ್ತಿಲ್ಲ, ಚೀನಾದಿಂದ ಸಂಪೂರ್ಣ ಸ್ಥಗಿತವಾಗಿದೆ. ರಾಷ್ಟ ಮಟ್ಟದಲ್ಲಿ ಉತ್ಪಾದನೆ ಕಡಿಮೆ ಆಗಿದೆ. ಇದೆಲ್ಲ ಕೇಂದ್ರ ಸರ್ಕಾರದವರೆ ಕೊಡಬೇಕು ಅಂತ ಹೇಳಿದರು. ಇದನ್ನೂ ಓದಿ: ಬೆಂಗಳೂರಿನ ಧನುಷ್ ಬಾಬುಗೆ ಏಷ್ಯನ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ

    ನಾವು ಟೀಕೆ ಟಿಪ್ಪಣಿಗೆ ಹೋಗಲಿಲ್ಲ. ಹಳೇ ಬ್ಯಾಲೆನ್ಸ್ ಸೇರಿ ತಗೆದುಕೊಂಡು ರೈತರಿಗೆ ಕೊಡುವ ಪ್ರಯತ್ನ ಮಾಡುತ್ತಿದ್ದೇವೆ. ರೈತರಿಗೆ ನ್ಯಾನೋ ಯೂರಿಯಾ ಬಳಸಲು ಸಹಾ ಹೇಳಿದ್ದೇವೆ. ಅವರು ಸಹ ಹೋಗಿ ನಡ್ಡಾ ಅವರ ಜೊತೆ ಕುಳಿತು ಎಷ್ಟು ಸಾಧ್ಯವೋ ಅಷ್ಟು ಬೇಗ ಸಪ್ಲೈ ಕೊಡಿ ಅಂತ ಹೇಳೋದು ಬಿಟ್ಟು ಟೀಕೆ ಟಿಪ್ಪಣಿ ಮಾಡಿದರೆ ಹೇಗೆ? ಅಂತ ಪ್ರಶ್ನಿಸಿದರು. ಇದನ್ನೂ ಓದಿ: ಶಿವಲಿಂಗೇಗೌಡ್ರು ನಮ್ಮನೆಗೆ, ಸಿಎಂ ಮನೆಗೆ ತಿರುಗಿ 4 ಜೊತೆ ಚಪ್ಪಲಿ ಸವೆಸಿದ್ದಾರೆ: ಡಿ.ಕೆ ಶಿವಕುಮಾರ್

    ನನಗೂ ರಾಜಕೀಯವಾಗಿ 35 ವರ್ಷ ಆಗಿದೆ. ನಾನು ಟೀಕೆ ಮಾಡಬಹುದು, ಆದ್ರೆ ನನ್ನದು ರೈತರ ಇಲಾಖೆ ಟೀಕೆ ಮುಖ್ಯ ಅಲ್ಲ ರೈತರ ಸಮಸ್ಯೆ ಬಗೆಹರಿಸಬೇಕು. ರೈತರು ಆತಂಕ ಪಡಬೇಕಿಲ್ಲ. ಯಾವ್ಯಾವಾಗ ಏನು ಬೇಕೋ ಅದನ್ನ ತಲುಪಿಸುತ್ತೇವೆ. ಎಲ್ಲರೂ ಸಮಾಧಾನದಿಂದ ಇರಿ, 2 ದಿನ ಬರುವುದು ತಡವಾದ್ರೆ 3ನೇ ದಿನ 4ನೇ ದಿನ ತರಿಸಿಕೊಡ್ತೇವೆ. ಜೊತೆಗೆ ನ್ಯಾನೋ ಯೂರಿಯಾ ಸಹ ಇಳುವರಿಗೆ ಒಳ್ಳೆಯದು ರೈತರು ಯಾವುದೆ ಘರ್ಷಣೆ ಮಾಡಿಕೊಳ್ಳುವುದು ಬೇಡ ಅಂತ ಸಲಹೆ ನೀಡಿದರು. ಇದನ್ನೂ ಓದಿ: ನಾವು ಬಿಜೆಪಿಯವರಿಗಿಂತ ಜಾಸ್ತಿ ಕೆಲಸ ಮಾಡಿದ್ದೇವೆ – ಪುತ್ರನ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

  • 2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ

    2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ

    – ಮಾವು ಮಾರುಕಟ್ಟೆ ಮಧ್ಯಪ್ರವೇಶ; ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ: ಚಲುವರಾಯಸ್ವಾಮಿ

    ಬೆಂಗಳೂರು: ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ದಾವಿಸಿದೆ. ರಾಜ್ಯದಲ್ಲಿ ಮಾವಿನ‌ (Mangoes) ಬೆಲೆ ಕುಸಿತದ ಹಿನ್ನೆಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರವೂ ಸಕಾರಾತ್ಮಕ ಸಮ್ಮತಿ ನೀಡಿದೆ.

    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂ. ಗಳಂತೆ ಒಟ್ಟು‌ 4 ರೂ. ವ್ಯತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮಕೈಗೊಳ್ಳಲು ಸಿದ್ಧತೆ ನಡೆಸಿವೆ. ಇಂದು ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ (Chaluvaraya Swamy) ವಿಡಿಯೋ‌ ಸಂವಾದದ ಮೂಲಕ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಾವು ಬೆಳೆಗಾರರ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟರು. ಇದನ್ನೂ ಓದಿ: ಹೆಲ್ಪ್‌ಲೈನ್‌ ಹೆಸರಲ್ಲಿ ವಂಚನೆ ಆರೋಪ – ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ ಎಫ್‌ಐಆರ್

    2025-26ನೇ ಸಾಲಿನ ಮಾರುಕಟ್ಟೆ ಋತುವಿನಲ್ಲಿ ಮಾವಿಗೆ PDPS ಯೋಜನೆಯ ಅನುಷ್ಠಾನಕ್ಕೆ ಸಚಿವ ಚಲುವರಾಯಸ್ವಾಮಿ ಮಾಡಿದ ಮನವಿಗೆ ಕೇಂದ್ರ ಕೃಷಿ ಸಚಿವರೂ ಸಹ ಸಮ್ಮತಿ ನೀಡಿದರು.

    2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸೋಮವಾರ ಈ‌ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ‌ಇದೆ. ಈ‌ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೃಷಿ ಮತ್ತು ತೋಟಗಾರಿಕೆ ಇಲಾಖೆ‌ ಅಧಿಕಾರಿಗಳು ಹಾಜರಿದ್ದರು. ಇದನ್ನೂ ಓದಿ: ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ: ಸಚಿವ ವೆಂಕಟೇಶ್

    ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲೊಂದಾಗಿದೆ. 2025-26ನೇ ಋತುವಿನಲ್ಲಿ 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ. ಈ ಬಾರಿ ಅಂದಾಜು 8 ರಿಂದ 10 ಲಕ್ಷ ಟನ್ ಮಾವು ಉತ್ಪಾದನೆಯಾಗಿದೆ. ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರಮುಖ ಮಾವು ಬೆಳೆ ಪ್ರದೇಶಗಳಾಗಿವೆ. ಕರ್ನಾಟಕದಲ್ಲಿ, ಮಾವಿನ ಕೊಯ್ಲು ಮೇ ನಿಂದ ಜುಲೈ ವರೆಗೆ ನಡೆಯುತ್ತದೆ. ಈ ಅವಧಿಯಲ್ಲಿ, ಮಾರುಕಟ್ಟೆ ಬೆಲೆಗಳಲ್ಲಿ ಗಮನಾರ್ಹ ಏರಿಳಿತಗಳನ್ನು ಗಮನಿಸಲಾಗಿದೆ.

    2025ರ ಮೇ ತಿಂಗಳಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾವಿನ ಹಣ್ಣಿನ ಮಾದರಿ ಬೆಲೆಗಳು ಕ್ವಿಂಟಾಲ್‌ಗೆ 1,200 ರೂ. ನಿಂದ 2,500 ರೂ. ವರೆಗೆ ಇತ್ತು. ಶ್ರೀನಿವಾಸಪುರ ಮಾರುಕಟ್ಟೆಯಲ್ಲಿ ತೋತಾಪುರಿ ವರಿಟೆಯ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳು ಪ್ರತಿ ಕ್ವಿಂಟಾಲ್‌ಗೆ 450-550 ರೂ.ಗೆ ಕುಸಿದಿದೆ. ಕರ್ನಾಟಕ ಕೃಷಿ ಬೆಲೆ ಆಯೋಗವು ಮಾವಿನ A1 + FL ಕೃಷಿ ವೆಚ್ಚವನ್ನು ಕ್ವಿಂಟಲ್‌ಗೆ 3,460 ರೂ. ಮತ್ತು C-3 ವೆಚ್ಚಕ್ಕೆ 5,466 ರೂ. ಎಂದು ಶಿಫಾರಸು ಮಾಡಿದೆ. ಈ ನಿಟ್ಟಿನಲ್ಲಿ ಜೂ.11 ರಂದು ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಯಿತು. ಜೂ.13 ರಂದು ಸ್ಪಷ್ಟೀಕರಣಗಳಿಗೆ ಉತ್ತರವನ್ನು ನೀಡಲಾಯಿತು. ತೋಟಗಾರಿಕೆ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ಮಾವು ಅಭಿವೃದ್ಧಿ ಮಂಡಳಿಯನ್ನು PDPS ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದ ಸಂಸ್ಥೆಯಾಗಿ ಗೊತ್ತುಪಡಿಸಲಾಗಿದೆ.

  • ಜೆಡಿಎಸ್ ಯಾವತ್ತೂ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲ್ಲ: ಚಲುವರಾಯಸ್ವಾಮಿ

    ಜೆಡಿಎಸ್ ಯಾವತ್ತೂ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲ್ಲ: ಚಲುವರಾಯಸ್ವಾಮಿ

    – ರೇವಣ್ಣ, ಸೂರಜ್, ಪ್ರಜ್ವಲ್ ಯಾರ ನೇತೃತ್ವದಲ್ಲಿ ಬೇಕಾದ್ರೂ ಪಕ್ಷ ಕಟ್ಟಲಿ

    ಬೆಂಗಳೂರು: ಜೆಡಿಎಸ್ ಯಾವತ್ತೂ ಸ್ವಂತ ಬಲದಿಂದ ಅಧಿಕಾರಕ್ಕೆ ಬರೋಕೆ ಸಾಧ್ಯವೇ ಇಲ್ಲ ಎಂದು ಹೆಚ್‌ಡಿಕೆಗೆ ಸಚಿವ ಚಲುವರಾಯಸ್ವಾಮಿ (Chaluvaraya Swamy), ಕೇಂದ್ರ ಸಚಿವ ಹೆಚ್‌ಡಿಕೆಗೆ ತಿರುಗೇಟು ನೀಡಿದ್ದಾರೆ.

    2028 ಅಧಿಕಾರಕ್ಕೆ ಬರುತ್ತೇವೆ ಎಂಬ ಕುಮಾರಸ್ವಾಮಿ (H D Kumaraswamy) ಹೇಳಿಕೆಗೆ ವಿಕಾಸಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ನಮ್ಮನ್ನ ಹೊಗಳೋದಿಲ್ಲ. ಅವರು ವಿಪಕ್ಷದಲ್ಲಿ ಇದ್ದಾರೆ. ಅವರಿಗೆ ಅಧಿಕಾರ ಕೊಟ್ಟಾಗ ಏನು ಮಾಡಲಿಲ್ಲ. 2018ರಲ್ಲಿ ಪೂರ್ಣ ಪ್ರಮಾಣದ ಬಹುಮತ ಬಾರದೇ ಹೋದರೆ, ಪಕ್ಷ ವಿಸರ್ಜನೆ ಮಾಡ್ತೀನಿ ಅಂದ್ರು, ಮಾಡಿದ್ರಾ? 2023ರಲ್ಲೂ ಅದೇ ಹೇಳಿದ್ರು. ನಾನು ಯಾರ ಜೊತೆ ಮೈತ್ರಿಗೆ ಹೋಗಲ್ಲ ಅಂದ್ರು. ಜೆಡಿಎಸ್ ಪಕ್ಷ ಬಿಜೆಪಿ, ಕಾಂಗ್ರೆಸ್‌ನ್ನು ಓವರ್ ಟೇಕ್ ಮಾಡಿ ಅಧಿಕಾರಕ್ಕೆ ಬರಲು ಆಗುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಶಬರಿಮಲೆ ಬೆಟ್ಟ ಇಳಿಯುವಾಗ ಹೃದಯಾಘಾತ – 18 ವರ್ಷದ ಅಯ್ಯಪ್ಪ ಭಕ್ತ ಸಾವು

    ಬಿಜೆಪಿ, ಜೆಡಿಎಸ್‌ನ್ನು (JDS) ಜನ ತಿರಸ್ಕಾರ ಮಾಡಿದ್ದಾರೆ. ಅವರಿಗೆ ಯಾವತ್ತು ಬಹುಮತ ಬಂದಿಲ್ಲ. ಬಹುಮತ ಬಾರದೇ ಇರೋರು ಮಾತಾಡೋದು ಗಾಳಿಯಲ್ಲಿ ಗುಂಡು ಹೊಡೆಯುವ ಹೇಳಿಕೆ ಅಲ್ವಾ? ಕುಮಾರಸ್ವಾಮಿ ಅವರು ಏನೇ ಹೇಳಿದ್ರು ನೀವು ಹಾಕ್ತೀರಾ. ಕುಮಾರಸ್ವಾಮಿ ನಾಯಕತ್ವ ಬಂದ ಮೇಲೆ ಯಾವತ್ತು ಬಹುಮತ ಬಂದಿಲ್ಲ ಎಂದಿದ್ದಾರೆ. ಇದನ್ನೂ ಓದಿ: 3 ದಿನದೊಳಗೆ ಉತ್ತರಿಸಿ – ಕಾಂತಾರ ತಂಡಕ್ಕೆ ನೋಟಿಸ್

    ಕುಮಾರಸ್ವಾಮಿ ಗೆಲ್ಲೋಕೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರು. ಉಪ ಚುನಾವಣೆಯಲ್ಲಿ ನಮಗೆ ಜನ ಆಶೀರ್ವಾದ ಮಾಡಿದ್ರು. ಎಂಪಿ ಎಲೆಕ್ಷನ್‌ನಲ್ಲಿ 9 ಸ್ಥಾನ ಜಾಸ್ತಿ ಮಾಡಿಕೊಂಡಿದ್ದೇವೆ. ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಯಾರು ಮಾತಾಡಿಲ್ಲ. ಅವರನ್ನು ಯಾರು ಕಾಂಗ್ರೆಸ್‌ಗೆ ಕರೆದಿಲ್ಲ. ಕುಮಾರಸ್ವಾಮಿ ಅರೋಗ್ಯ ಚೆನ್ನಾಗಿ ಇರಲಿ. ಆರೋಗ್ಯಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ಅವರ ತಂದೆ ಸಕ್ರಿಯವಾಗಿ ಇದ್ದಾರೆ. ಹೀಗಿದ್ರು ರಾಜ್ಯದಲ್ಲಿ ಜೆಡಿಎಸ್ ಶಕ್ತಿ ಕ್ಷೀಣವಾಗಿದೆ ಎಂದು ತಿಳಿಸಿದ್ದಾರೆ.

    ನಿಖಿಲ್ ಕುಮಾರಸ್ವಾಮಿ (Nikhil Kumaraswamy) ನೇತೃತ್ವದ ಪಕ್ಷ ಕಟ್ಟುತ್ತೇನೆ ಎಂದರೆ ಕಟ್ಟಲಿ. ರೇವಣ್ಣ, ಸೂರಜ್, ಪ್ರಜ್ವಲ್ ಯಾರ ನೇತೃತ್ವದಲ್ಲಿ ಬೇಕಾದರೂ ಪಕ್ಷ ಕಟ್ಟಲಿ. ಅದು ಅವರ ಪಕ್ಷದ ವಿಚಾರ. ಅವರಲ್ಲಿ ಆ ಕುಟುಂಬ ಹೇಳಿದ್ದೇ ನಡೆಯೋದು. ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್‌ನ್ನು ಟೀಕೆ ಮಾಡುವ ನೈತಿಕತೆ ಇಲ್ಲ. ಕುಮಾರಸ್ವಾಮಿ ಯಾವ ಗ್ಯಾರಂಟಿ ಕೊಡೋಕೆ ಆಗಲಿಲ್ಲ. ಕುಮಾರಸ್ವಾಮಿ ಸಾಲಮನ್ನಾ ಮಾಡಿದ್ದು, ಇನ್ನೂ 8 ಸಾವಿರ ಕೋಟಿ ರೂ. ಬಾಕಿ ಇದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಜನಗಣತಿಗೆ ಕೇಂದ್ರದಿಂದ ಅಧಿಸೂಚನೆ – ಸರ್ಕಾರದ ನಿರ್ಧಾರ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

    ಸಿದ್ದರಾಮಯ್ಯ (Siddaramaiah) ಅವರು ಘೋಷಣೆ ಮಾಡಿದ್ರೆ, ಅದೇ ವರ್ಷ ಜಾರಿ ಮಾಡ್ತೇವೆ. ಅವರು ಯಾವ ನೈತಿಕತೆಯಿಂದ ನಮ್ಮ ಪಕ್ಷವನ್ನ ಟೀಕೆ ಮಾಡ್ತಾರೆ ಗೊತ್ತಿಲ್ಲ. ನಮ್ಮ ಪಕ್ಷ ಸದೃಢವಾಗಿದೆ. ನಮ್ಮ ನಾಯಕತ್ವ ಗಟ್ಟಿಯಾಗಿದೆ. ಜೆಡಿಎಸ್ ರಾಮನಗರದಲ್ಲಿ ಝೀರೋ ಲೆವೆಲ್‌ಗೆ ಬಂದಿದೆ. ತಮ್ಮ ಮಗನನ್ನ ಗೆಲ್ಲಿಸಿಕೊಳ್ಳುವ ಸ್ಥಿತಿಗೆ ಬಂದಿದ್ದಾರೆ. ಜೆಡಿಎಸ್‌ಗೆ ಹಿನ್ನಡೆ ಆಗಿದೆ. ಕುಮಾರಸ್ವಾಮಿ ಅಸ್ಥಿತ್ವ ಉಳಿಸಿಕೊಳ್ಳೋಕೆ ಮಾತಾಡ್ತಾರೆ ಅಷ್ಟೆ. ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಶೂಟಿಂಗ್ ಮುಗಿಸಿದ ಸತೀಶ್ ನೀನಾಸಂ, ಸಪ್ತಮಿ ನಟನೆಯ ʻದಿ ರೈಸ್ ಆಫ್ ಅಶೋಕʼ

    ಬೆಲೆ ಏರಿಕೆ ಮಾಡಿ ಗ್ಯಾರಂಟಿ ಕೊಡೋದಾಗಿದ್ರೆ ನಾನು ಕೊಡ್ತಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಟೀ ಅಂಗಡಿ, ಬಟ್ಟೆ ಅಂಗಡಿ ಎಲ್ಲದ್ರಲ್ಲೂ ಪ್ರತಿ ವರ್ಷ ಜಾಸ್ತಿ ಮಾಡ್ತಾರೆ. ಸಂಬಳ ಜಾಸ್ತಿ ಮಾಡಿದ್ದೇವೆ. ಬೆಲೆ ಏರಿಕೆ ಮಾಡದೇ ಸರ್ಕಾರ ನಡೆಸಲು ಆಗುವುದಿಲ್ಲ. ಮನಮೋಹನ್ ಸಿಂಗ್ ಇದ್ದಾಗ ಪೆಟ್ರೋಲ್, ಡಿಸೇಲ್ ಎಷ್ಟಿತ್ತು? ಈಗ ಎಷ್ಟಾಗಿದೆ. ಏನಾದ್ರು ಟೀಕೆ ಮಾಡೋದಾದ್ರೆ ಮಾಹಿತಿ ಇಟ್ಟುಕೊಂಡು ಟೀಕೆ ಮಾಡಿ. ಟೀಕೆ ಮಾಡಬೇಕೆಂದು ಟೀಕೆ ಮಾಡೋದು ಸರಿಯಲ್ಲ ಗುಡುಗಿದ್ದಾರೆ.

    ಸರ್ಕಾರ ಮಾತು ಕೊಟ್ಟಂತೆ ಗ್ಯಾರಂಟಿ ಕೊಟ್ಟಿದ್ದೇವೆ. ಕುಮಾರಸ್ವಾಮಿ ಏನು ಮಾಡಿದ್ದಾರೆ ಹೇಳಲಿ. ಟ್ಯಾಕ್ಸ್ ಜಾಸ್ತಿ ಮಾಡಿರೋದು ರೊಟೀನ್ ವಿಷಯ. ಆಗಾಗ ಮಾಡ್ತಿರಬೇಕು. ಹಾಸನ, ಮಂಡ್ಯ, ರಾಮನಗರ ಏನು ಅಭಿವೃದ್ಧಿ ಆಗಿದೆ ಕುಮಾರಸ್ವಾಮಿ ಹೇಳಲಿ. ಅವರು ರಾಜಕೀಯ ಹಾಗೂ ಅಭಿವೃದ್ಧಿ ವಿಚಾರದಲ್ಲೂ ಅವರು ಹಿಂದೆ ಬಿದ್ದಿದ್ದಾರೆ. ಹೀಗಿರುವಾಗ ಕಾಂಗ್ರೆಸ್ ಅನ್ನು ಯಾಕೆ ಟೀಕೆ ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಾವಿನಲ್ಲಿ ವಿಪಕ್ಷಗಳು ರಾಜಕೀಯ ಮಾಡೋದು ಬಿಡಲಿ: ಚಲುವರಾಯಸ್ವಾಮಿ

    ಒಂದು ಪಕ್ಷವೇ ಕುಟುಂಬಕ್ಕೆ ಮಾಡಿಕೊಂಡಿರೋ ಪಕ್ಷ ಜೆಡಿಎಸ್. ಇಡೀ ಕುಟುಂಬ ಅವರ ಪಕ್ಷ ಆವರಿಸಿಕೊಂಡಿದೆ. ಅವರ ಮನೆಯಲ್ಲಿ ಎಷ್ಟು ಜನ ಇದ್ದಾರೆ ನಿಂತುಕೊಳ್ಳಿ. ನಮಗೇನು ಹೊಟ್ಟೆ ಉರಿ ಇಲ್ಲ ಅಂತ ಟಾಂಗ್ ಕೊಟ್ಟಿದ್ದಾರೆ.

  • ಸಾವಿನಲ್ಲಿ ವಿಪಕ್ಷಗಳು ರಾಜಕೀಯ ಮಾಡೋದು ಬಿಡಲಿ: ಚಲುವರಾಯಸ್ವಾಮಿ

    ಸಾವಿನಲ್ಲಿ ವಿಪಕ್ಷಗಳು ರಾಜಕೀಯ ಮಾಡೋದು ಬಿಡಲಿ: ಚಲುವರಾಯಸ್ವಾಮಿ

    ಬೆಂಗಳೂರು: ಸಾವಿನಲ್ಲೂ ವಿಪಕ್ಷಗಳು ರಾಜಕೀಯ ಮಾಡೋದು ಬಿಡಬೇಕು ಎಂದು ಬಿಜೆಪಿ, ಜೆಡಿಎಸ್ ನಾಯಕರಿಗೆ ಸಚಿವ ಚಲುವರಾಯಸ್ವಾಮಿ (Chaluvaraya Swamy) ತಿರುಗೇಟು ನೀಡಿದ್ದಾರೆ.

    ಚಿನ್ನಸ್ವಾಮಿ ಕಾಲ್ತುಳಿತ (Chinnaswamy Stampede) ಘಟನೆ ಖಂಡಿಸಿ, ಮಂಗಳವಾರ ಬಿಜೆಪಿ ಪ್ರತಿಭಟನೆ ಮಾಡ್ತಿರೋ ವಿಚಾರವಾಗಿ ಮಾತನಾಡಿದ ಅವರು, ಚಿನ್ನಸ್ವಾಮಿ ಘಟನೆ ಬಗ್ಗೆ ದುಃಖ ಇದೆ. ಈ ಪ್ರಕರಣವು ಇಡೀ ಸರ್ಕಾರಕ್ಕೆ ನೋವು ತಂದಿದೆ. ಎಲ್ಲಿ ತಪ್ಪಾಗಿದೆ ಅಂತ ಕ್ರಮ ಆಗಿದೆ. 25 ಲಕ್ಷ ರೂ. ಪರಿಹಾರ ಕೊಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಭೀಮಾತೀರದ ನಕಲಿ ಎನ್‌ಕೌಂಟರ್ ಕೇಸ್ – ಜು.1ಕ್ಕೆ ವಿಚಾರಣೆ ಮುಂದೂಡಿಕೆ

    ಏನೇ ಫೆಲ್ಯೂರ್ ಆದ್ರೂ ಸರ್ಕಾರದ ಜವಾಬ್ದಾರಿ ಆಗುತ್ತದೆ. ಅಹಮದಾಬಾದ್ ವಿಮಾನ ಅಪಘಾತಕ್ಕೆ (Ahmedabad Plane Crash) ಯಾರು ಜವಾಬ್ದಾರಿ ತೆಗೆದುಕೊಳ್ತಾರೆ. ಉತ್ತರಪ್ರದೇಶದ ಕುಂಭಮೇಳದಲ್ಲಿ ಸಾವಾಗಿದಕ್ಕೆ ಯಾರು ಜವಾಬ್ದಾರಿ ತೆಗೆದುಕೊಂಡಿದ್ರು. ನಾವು ಅಭಿವೃದ್ಧಿ ಕೆಲಸ ಮಾಡ್ತಿದ್ದೇವೆ. ಬಿಜೆಪಿ ಅವರಿಗೆ ಏನು ಇಲ್ಲ. ಅದಕ್ಕೆ ಪ್ರತಿಭಟನೆ ಮಾಡ್ತಾರೆ. ಅವರು ಪ್ರತಿಭಟನೆ ಮಾಡಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: 2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಲಕ್ಷ್ಮಣ್ ಸವದಿ

    ಕಾಲ್ತುಳಿತ ಘಟನೆ ನಾವು ಒಪ್ಪಲ್ಲ. ಮುಂದೆ ಹೀಗೆ ಆಗದಂತೆ ಏನು ಮಾಡಬೇಕೋ ಅದನ್ನ ಸರ್ಕಾರ ಮಾಡುತ್ತದೆ. ಅನೇಕ ಕಡೆ ಇಂತಹ ಘಟನೆ ನಡೆದಿದೆ. ರಾಜ್ ಕುಮಾರ್ ಸಾವಿನ ಸಮಯದಲ್ಲಿ ಕಾಲ್ತುಳಿತ ಆಗಿದ್ದಾಗ ಕುಮಾರಸ್ವಾಮಿ ಹೊಣೆ ಹೊತ್ತರಾ? ವಿಪಕ್ಷಗಳು ಸಾವಿನಲ್ಲೂ ರಾಜಕೀಯ ಮಾಡ್ತಾರೆ ಅಂತ ನನಗೆ ಗೊತ್ತಿರಲಿಲ್ಲ ಎಂದು ಕಿಡಿಕಾರಿದ್ದಾರೆ.

  • ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲು ಸಿದ್ಧ – ಚಲುವರಾಯಸ್ವಾಮಿ ಸವಾಲ್‌ಗೆ ಹೆಚ್‌ಡಿಕೆ ಪ್ರತಿಕ್ರಿಯೆ

    ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲು ಸಿದ್ಧ – ಚಲುವರಾಯಸ್ವಾಮಿ ಸವಾಲ್‌ಗೆ ಹೆಚ್‌ಡಿಕೆ ಪ್ರತಿಕ್ರಿಯೆ

    – ಚಲುವರಾಯಸ್ವಾಮಿಯನ್ನ ಮಂತ್ರಿ ಮಾಡಲು 50 ಜನ ಶಾಸಕರನ್ನ ಸೇರಿಸಿದ್ದು ನಾನು ಎಂದ ಕೇಂದ್ರ ಸಚಿವ

    ಮಂಡ್ಯ: ನಾನು ಸಿಎಂ ಆಗುವಾಗ ಚಲುವರಾಯಸ್ವಾಮಿ (Chaluvaraya Swamy) ನೋಡಿಕೊಂಡು ಎಂಎಲ್‌ಎಗಳು ಬಂದ್ರಾ? ಅಥವಾ ನನ್ನ ನೋಡಿಕೊಂಡು ಬಂದ್ರಾ? ಅನ್ನೋದಕ್ಕೆ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಸಿದ್ಧ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

    ಕುಮಾರಸ್ವಾಮಿ ಸಿಎಂ (Chief Minister) ಆಗಲು ನಾನು ಕಾರಣ ಇಲ್ಲ ಎಂದರೆ ಧರ್ಮಸ್ಥಳಕ್ಕೆ ಬಂದು ಆಣೆ-ಪ್ರಮಾಣ ಮಾಡಲಿ ಎಂದು ಸಚಿವ ಚಲುವರಾಯಸ್ವಾಮಿ ಸವಾಲು ಹಾಕಿದ್ದ ವಿಚಾರಕ್ಕೆ ಮಂಡ್ಯದಲ್ಲಿ ಮಾತನಾಡಿದ ಅವರು, ನಾನು ಆಣೆ ಮಾಡಲು ತಯಾರಿದ್ದೇನೆ. ನಾನು ಸಿಎಂ ಆಗುವಾಗ ಚಲುವರಾಯಸ್ವಾಮಿ ನೋಡಿ ಎಂಎಲ್‌ಎಗಳು ಬಂದ್ರಾ ಏನು ಅಂತ. ಇದು ಸುಳ್ಳು ಚಲುವರಾಯಸ್ವಾಮಿಯನ್ನ ಮಂತ್ರಿ ಮಾಡಲು ಶ್ರಮ ಹಾಕಿದ್ದೇನೆ ಎಂದು ತಿಳಿಸಿದ್ದಾರೆ.

    ತಾನು ಮಂತ್ರಿ ಆಗಲು ಚಲುವರಾಯಸ್ವಾಮಿ ಮಧ್ಯರಾತ್ರಿ ಮೂರು ಗಂಟೆವರೆಗೆ ನನ್ನನ್ನ ಬಿಟ್ಟಿಲ್ಲ. ಅವರನ್ನ ಮಂತ್ರಿ ಮಾಡಲು 50 ಜನ ಶಾಸಕರನ್ನು ಸೇರಿಸಿದ್ದೆ. ನಾನು ಪಟ್ಟಿರುವ ಶ್ರಮವನ್ನು ಚಲುವರಾಯಸ್ವಾಮಿ ಮರೆಯಬಾರದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಇದನ್ನೂ ಓದಿ: 64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ – ಹಲವು ಮಹತ್ವದ ನಿರ್ಣಯ ಸಾಧ್ಯತೆ

    ಇನ್ನೂ ಚಲುವರಾಯಸ್ವಾಮಿಗೆ ಇರುವ ಚಟಗಳು ನನಗೆ ಇಲ್ಲ, ಮಂಡ್ಯದಲ್ಲಿ (Mandya) ಕೇಳಿದ್ರೆ ಚಲುವರಾಯಸ್ವಾಮಿ ಚಟಗಳ ಬಗ್ಗೆ ಹೇಳುತ್ತಾರೆ. ಚಲುವರಾಯಸ್ವಾಮಿ ಎಷ್ಟು ಮನೆ ಹಾಳು ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ‌ ಎಂದು ವಾಗ್ದಾಳಿ ನಡೆಸಿದ್ದಾರೆ.  ಇದನ್ನೂ ಓದಿ: 2ನೇ ವಿಮಾನ ನಿಲ್ದಾಣಕ್ಕೆ ಬಿಡದಿಯಲ್ಲಿ 5,000 ಎಕ್ರೆ ಜಮೀನು ಕೊಟ್ರೆ ಆಗುತ್ತಾ? ಯಾರ ಒತ್ತಡ ಅನ್ನೋದು ಗೊತ್ತಿಲ್ಲ: ಪರಮೇಶ್ವರ್

    ಆಣೆ-ಪ್ರಮಾಣಕ್ಕೆ ಆಹ್ವಾನ:
    ಇದಕ್ಕೂ ಮುನ್ನ ಮಂಡ್ಯದಲ್ಲಿ ಮಾತನಾಡಿದ್ದ ಸಚಿವ ಚಲುವರಾಯಸ್ವಾಮಿ, ಕುಮಾರಸ್ವಾಮಿ ಅವರನ್ನು ಮೊದಲ ಬಾರಿಗೆ ಸಿಎಂ ಮಾಡಲು ನಾನು ಶ್ರಮಪಟ್ಟಿದ್ದೇನೆ. ಒಂದು‌ ವೇಳೆ ನಾನು ಶ್ರಮಪಡದೇ ಅವರ ಸ್ವಂತ ಶ್ರಮದಿಂದ ಸಿಎಂ ಆಗಿದ್ದೇನೆ ಎನ್ನುವುದಾದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ ಎಂದು ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ್ದರು.

    ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಸಿಎಂ ಆಗುವಾಗ ನಾನು ಎಲ್ಲರನ್ನೂ ಒಗ್ಗೂಡಿಸಿದ್ದೇನೆ. ಸ್ವತಃ ದೇವೇಗೌಡರೇ (HD Devegowda) ನನ್ನ ಈ ವಿಚಾರವಾಗಿ ಬೈದಿದ್ದಾರೆ. ನಾನು ಕುಮಾರಸ್ವಾಮಿ ಸಿಎಂ ಆಗಲು ಶ್ರಮ ಪಟ್ಟಿದ್ದೇನೆ. ನಾವು ಅವರೊಟ್ಟಿಗೆ ರಾತ್ರಿ ಎಲ್ಲಾ ಇದ್ದಿದ್ದು, ಅವರನ್ನು ಸಿಎಂ‌ ಮಾಡಲು ಹೊರತು ಬೇರೆಯಾವ ವಿಚಾರಕ್ಕೂ ಅಲ್ಲ. ನಾನು ಅವರನ್ನು ಸಿಎಂ ಮಾಡಲು ಶ್ರಮ ಪಟ್ಟಿಲ್ಲ ಎನ್ನುವುದಾದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ ಅಂತ ಆಹ್ವಾನ ನೀಡಿದ್ದರು. ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ ರಿಸಲ್ಟ್: ಪಾಸಾದವರಿಗೆ ವಿಶ್ ಮಾಡಿ, ಫೇಲ್ ಆದವರಿಗೆ ಧೈರ್ಯ ತುಂಬಿದ ಸಿಎಂ

    ಮುಂದುವರೆದು‌.. ನನ್ನಿಂದ ಅವರ ಆರೋಗ್ಯ ಹಾಳಾಗಿಲ್ಲ. ಅವರ ವೈಯಕ್ತಿಕ ಸಮಸ್ಯೆಗಳಿಂದ ನಿದ್ದೆ ಮಾಡದೇ ಅವರ ಆರೋಗ್ಯ ಹಾಳಾಗಿದೆ. ಅವರ ಚಟಗಳ ಬಗ್ಗೆ ಆತ್ಮಸಾಕ್ಷಿ ಮಾಡಿಕೊಳ್ಳಲಿ. ಬೇಕಿದ್ದರೆ ಅವರು ಹಾಗೂ ನಾನು ಇಬ್ಬರೇ ಕೂತು ಸ್ವಚರಿತ್ರೆಗಳ ಬಗ್ಗೆ ಬಹಿರಂಗ ಚರ್ಚೆ ಮಾಡೋಣ ಬರಲು ಹೇಳಿ ಎಂದು ಚಲುವರಾಯಸ್ವಾಮಿ ಪಂಥ್ವಾಹನ ನೀಡಿದ್ದರು.  ಇದನ್ನೂ ಓದಿ: ಪಂಜಾಬ್‌ ಬಿಜೆಪಿ ನಾಯಕನ ಮನೆಯಲ್ಲಿ ಸ್ಫೋಟ ಕೇಸ್‌ – ಬಂಧಿತ ಆರೋಪಿಗೆ ಲಾರೆನ್ಸ್‌ ಬಿಷ್ಣೋಯ್‌ ಲಿಂಕ್‌

  • ಚೆನ್ನಾಗಿರುವ ರಸ್ತೆಗಳಲ್ಲೂ ಆಕ್ಸಿಡೆಂಟ್ ಆಗುತ್ತೆ, ಎಚ್ಚರಿಕೆಯಿಂದ ಪ್ರಯಾಣಿಸಿ: ಚಲುವರಾಯಸ್ವಾಮಿ

    ಚೆನ್ನಾಗಿರುವ ರಸ್ತೆಗಳಲ್ಲೂ ಆಕ್ಸಿಡೆಂಟ್ ಆಗುತ್ತೆ, ಎಚ್ಚರಿಕೆಯಿಂದ ಪ್ರಯಾಣಿಸಿ: ಚಲುವರಾಯಸ್ವಾಮಿ

    ಮಂಡ್ಯ: ಚೆನ್ನಾಗಿರುವ ರಸ್ತೆಗಳಲ್ಲೂ ಆಕ್ಸಿಡೆಂಟ್ ಆಗುತ್ತಿವೆ. ಹೀಗಾಗಿ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾವಣೆ ಮಾಡಬೇಕು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (Chaluvaraya Sw amy) ಸಾರ್ವಜನಿಕರಲ್ಲಿ ಮನವಿ ಮಾಡಿದರು.

    ವಿಸಿ ನಾಲೆಗೆ ಕಾರು ಪಲ್ಟಿಯಾಗಿ (VC Canal car Overturn) ಮೂವರು ಸಾವನ್ನಪ್ಪಿರುವ ವಿಚಾರವಾಗಿ ಮೇಲುಕೋಟೆಯಲ್ಲಿ ಮಾತನಾಡಿ, ಮೃತರ ಕುಟುಂಬಕ್ಕೆ ಶಾಸಕ ಗಣಿಗ ರವಿ ವೈಯಕ್ತಿಕವಾಗಿ ಪರಿಹಾರ ನೀಡಿದ್ದಾರೆ. ಹೆಚ್ಚಿನ ಪರಿಹಾರ ಕೊಡಿಸಲು ಸಿಎಂ ಬಳಿ ಮಾತನಾಡಿ ಪ್ರಯತ್ನ ಮಾಡುತ್ತೇನೆ. ಕೆಟ್ಟಿರುವ ರಸ್ತೆಗಳಲ್ಲೂ ಆಕ್ಸಿಡೆಂಟ್ ಆಗುತ್ತವೆ. ಚೆನ್ನಾಗಿರುವ ರಸ್ತೆಗಳಲ್ಲೂ ಆಕ್ಸಿಡೆಂಟ್ ಆಗುತ್ತಿವೆ. ಆದ್ದರಿಂದ ಯುವಕರು ಸ್ವಲ್ಪ ಎಚ್ಚರಿಕೆಯಿಂದ ಪ್ರಯಾಣ ಮಾಡಬೇಕು ಎಂದು ಸಲಹೆ ನೀಡಿದರು.

    ಪ್ರಾಣ ಹಾನಿಯಾದಾಗ ಎಷ್ಟೇ ಪರಿಹಾರ ಕೊಟ್ಟರು ಸಹ ಆ ಕುಟುಂಬಕ್ಕೆ ನೆಮ್ಮದಿ ಸಿಗಲು ಸಾಧ್ಯವಿಲ್ಲ. ಯುವಕರೆಲ್ಲರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಮಾತಿನ ಭರದಲ್ಲಿ ಪೂಜಾ ಹೆಗ್ಡೆ ಯಡವಟ್ಟು- ಹಿಗ್ಗಾಮುಗ್ಗಾ ಟ್ರೋಲ್ ಆದ ನಟಿ

    ವಿಸಿ ನಾಲೆಗೆ ತಡೆಗೋಡೆ ನಿರ್ಮಾಣ ಮಾಡದ ವಿಚಾರವಾಗಿ ಪ್ರತಿಕ್ರಿಯಿಸಿ, ಈಗಾಗಲೇ ಎಸ್ಟಿಮೆಂಟ್ ಸಿದ್ದವಾಗಿದೆ. ಆ ಜಾಗದಲ್ಲಿ ರಸ್ತೆ ಹಾಗೂ ತಡೆಗೋಡೆ ನಿರ್ಮಾಣ ಮಾಡಲಾಗುತ್ತದೆ. ಗುತ್ತಿಗೆದಾರರು ತಡ ಮಾಡಿದ್ದಾರೆ. ಹಾಗಾಗಿ ತಕ್ಷಣ ಕೆಲಸ ಶುರು ಮಾಡುವಂತೆ ಹೇಳುತ್ತೇವೆ. ಉಳಿದೆಲ್ಲ ಕಡೆ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಈ ಹಿಂದೆ ಪಾಂಡವಪುರದ ಬಳಿ ಅಪಘಾತ ಆಗಿತ್ತು. ಅಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಎಲ್ಲೆಲ್ಲಿ ಮುಖ್ಯವಾಗಿ ತಡೆಗೋಡೆ ಆಗಬೇಕೊ ಅಲ್ಲೆಲ್ಲ ಮಾಡುವಂತೆ ಹೇಳಿದ್ದೇನೆ. ಈ ತಿಂಗಳೊಳಗೆ ಮಂಜೂರಾತಿ ನೀಡಲು ಡಿಸಿಗೆ ತಿಳಿಸಿದ್ದೇನೆ ಎಂದರು. ಇದನ್ನೂ ಓದಿ: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮದುವೆ – ಯಾರು ಈ ಪೂನಂ ಗುಪ್ತಾ?

  • ಖೋ ಖೋ ವಿಶ್ವಕಪ್ ವಿಜೇತರಿಗೆ ಸಿಎಂ ಸನ್ಮಾನ – ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಬಹುಮಾನ

    ಖೋ ಖೋ ವಿಶ್ವಕಪ್ ವಿಜೇತರಿಗೆ ಸಿಎಂ ಸನ್ಮಾನ – ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಬಹುಮಾನ

    ಬೆಂಗಳೂರು: 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ (Kho Kho World Cup) ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಿದೆ.

    ಇದೇ ವೇಳೆ ಎರಡೂ ವಿಭಾಗದಲ್ಲಿ ಭಾರತ ವಿಶ್ವ ಚಾಂಪಿಯನ್ ಆಗಲು ಕಾರಣರಾದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರಿನ ತಿ.ನರಸೀಪುರದ ಕುರುಬೂರಿನ ಚೈತ್ರಾ (Chaitra) ಅವರನ್ನು ಸರ್ಕಾರ ಗೌರವಿಸಿತು. ಇದನ್ನೂ ಓದಿ: Kho Kho World Cup | ಭಾರತಕ್ಕೆ ಡಬಲ್‌ ಧಮಾಕ – ಮಹಿಳೆಯರು, ಪುರುಷರ ತಂಡಕ್ಕೆ ಖೋ ಖೋ ವಿಶ್ವಕಪ್‌ ಕಿರೀಟ

    ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಕ್ರೀಡಾಪಟುಗಳಿಗೆ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಬಹುಮಾನ ಸಹ ಘೋಷಿಸಿದರು. ಇದನ್ನೂ ಓದಿ: ಖೋ ಖೋ ವಿಶ್ವಕಪ್; ಎಂಕೆ ಗೌತಮ್, ಚೈತ್ರಾರನ್ನು ಗೌರವಿಸಿದ ಹೆಚ್‌ಡಿಕೆ

    ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ (Chaluvaraya Swamy) ಮತ್ತು ಒಲಿಂಪಿಕ್ಸ್‌ ಅಸೋಸಿಯೇಷನ್ ಅಧ್ಯಕ್ಷರೂ ಆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು. ಇದನ್ನೂ ಓದಿ: IPL 2025 | ಲಕ್ನೋ ಸೂಪರ್‌ ಜೈಂಟ್ಸ್‌ಗೆ ರಿಷಬ್‌ ನೂತನ ಸಾರಥಿ