Tag: Chaluvaraya Swamy

  • ಮಂಡ್ಯದಲ್ಲಿ ಇಂದಿನಿಂದ 5 ದಿನ ಫಲಪುಷ್ಪ ಪ್ರದರ್ಶನ – ಪ್ರತಿ ದಿನ ರಾತ್ರಿ 10 ಗಂಟೆವರೆಗೆ ಪ್ರವೇಶ

    ಮಂಡ್ಯದಲ್ಲಿ ಇಂದಿನಿಂದ 5 ದಿನ ಫಲಪುಷ್ಪ ಪ್ರದರ್ಶನ – ಪ್ರತಿ ದಿನ ರಾತ್ರಿ 10 ಗಂಟೆವರೆಗೆ ಪ್ರವೇಶ

    ಮಂಡ್ಯ: ಸಕ್ಕರೆ ನಾಡಿನಲ್ಲಿ ಇಂದಿನಿಂದ ಐದು ದಿನಗಳ ಕಾಲ ನಡೆಯುವ ಫಲಪುಷ್ಪ ಪ್ರದರ್ಶನ (Flower Show) ಹಾಗೂ ಮಧುರ ವಸ್ತ್ರೋತ್ಸವಕ್ಕೆ ಸಚಿವ ಎನ್.ಚಲುವರಾಯಸ್ವಾಮಿ (Chaluvaraya Swamy) ಅವರು ಚಾಲನೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ. ಉದ್ಯಾನವನದಲ್ಲಿ ಆಕರ್ಷಕ ಬಣ್ಣದ ನಾನಾ ಜಾತಿಯ ಹೂಗಳಿಂದ ಹಲವಾರು ಕಲಾಕೃತಿಗಳು ಅರಳಿ ನಿಂತಿದ್ದು, ಜನರನ್ನು ಕೈಬೀಸಿ ಕರೆಯುತ್ತಿದೆ. ಆಕರ್ಷಕ ಸೆಲ್ಫಿ ಪಾಯಿಂಟ್‌ಗಳಲ್ಲಿ ಪುಷ್ಪ ಪ್ರಿಯರು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬೀಳುತ್ತಿದ್ದಾರೆ. ಮತ್ತೊಂದೆಡೆ 9 ಲಕ್ಷ ವಿವಿಧ ಬಣ್ಣದ ಸೇವಂತಿಗೆ ಮತ್ತು ಗುಲಾಬಿ ಹೂವುಗಳಿಂದ ಪ್ರವಾಸಿ ತಾಣ, ದೇವಾಲಯಗಳ ನಿರ್ಮಾಣವಾಗಿದ್ದು, ಕಣ್ಮನ ಸೆಳೆಯುತ್ತಿದೆ.

    ಮತ್ತೊಂದು ಬದಿಯಲ್ಲಿ ವಿವಿಧ ತರಕಾರಿ ಬೆಳೆಗಳು, ಕೈತೋಟ ಆಹಾರ ಬೆಳೆಗಳು ಮತ್ತು ತರಕಾರಿ ಬೆಳೆಗಳು ಹಾಗೂ ವಿವಿಧ ಅಭಿವೃದ್ಧಿ ಇಲಾಖೆ ಕಾರ್ಯಕ್ರಮಗಳ ಸಮಗ್ರ ಮಾಹಿತಿಯನ್ನು ಇಲ್ಲಿ ನೀಡಲಾಗುತ್ತಿದೆ. ಇದನ್ನೂ ಓದಿ: ಅಮೆರಿಕದ ಇತಿಹಾಸದಲ್ಲೇ ಬೃಹತ್‌ ಗಡಿಪಾರು ಕಾರ್ಯಾಚರಣೆ – 538 ಅಕ್ರಮ ವಲಸಿಗರು ಅರೆಸ್ಟ್‌, ನೂರಾರು ಮಂದಿ ಗಡಿಪಾರು

    ಪ್ರತಿ ದಿನ ಬೆಳಗ್ಗೆ 10 ರಿಂದ ರಾತ್ರಿ 10 ಗಂಟೆ ವರೆಗೆ ಪ್ರವೇಶ
    5 ದಿನಗಳ ಕಾಲ ನಡೆಯಲಿರುವ ಫಲಪುಷ್ಪ ಪ್ರದರ್ಶನಕ್ಕೆ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಯಸ್ಕರಿಗೆ ಟಿಕೆಟ್ ದರ 30 ರೂ. ಟಿಕೆಟ್‌ ದರ ಇರಲಿದ್ದು, 6-12 ವರ್ಷದ ಮಕ್ಕಳಿಗೆ 20 ರೂ. ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ಮಕ್ಕಳಿಗೆ ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ಇರಲಿದೆ.

    ಪ್ರಮುಖ ಆಕರ್ಷಣೆಗಳಿವು:
    ಫಲಪುಷ್ಪ ಪ್ರದರ್ಶನದಲ್ಲಿ ವಿವಿಧ ಬಣ್ಣದ 9 ಲಕ್ಷ ಸೇವಂತಿಗೆ ಹೂವು, ಬಗೆ ಬಗೆಯ ಬಣ್ಣದ ಗುಲಾಬಿ ಬಳಸಿ ಪ್ರಸಿದ್ಧ ದೇವಾಲಯ ಹಾಗೂ ಪ್ರವಾಸಿ ತಾಣಗಳನ್ನು ನಿರ್ಮಿಸಿರುವುದು ಪ್ರಮುಖ ಆಕರ್ಷಣೆಯಾಗಿದೆ. ಇದರೊಂದಿಗೆ ಯುವ ಜನತೆಯನ್ನು ಸೆಳೆಯಲು ಹತ್ತು ಸ್ಥಳಗಳಲ್ಲಿ ಸೆಲ್ಫಿ ಪಾಯಿಂಟ್, ಹೂವಿನ ಆಕೃತಿಯ ಕ್ಷಯ ರೋಗ ಕುರಿತು ಜಾಗೃತಿ, ನರೇಗಾ ಯೋಜನೆಯ ಮಾಹಿತಿಯೊನ್ನೊಳಗೊಂಡ ಸ್ಥಬ್ಥ ಚಿತ್ರ, ಆಕರ್ಷಕ ಅಡಿನಿಯಂ ಗಿಡಗಳು, ಬೋನ್ಸಾಯ್ ಗಿಡಗಳು, ವಿವಿಧ ತರಕಾರಿ ಹಣ್ಣುಗಳನ್ನು ಬಳಸಿ ಕಲಾಕೃತಿಗಳನ್ನ ಕೆತ್ತನೆ ಮಾಡಲಾಗಿದೆ.

    ವಿಶೇಷ ಆಕರ್ಷಣೆಗಳಿವು:
    40 ಬಗೆಯ ವಿವಿಧ ಜಾತಿಯ ಹೂವುಗಳ ಅಲಂಕಾರಿಕ ಕುಂಡಗಳ ಜೋಡಣೆ, 1.50 ಲಕ್ಷ ವಿವಿಧ ಜಾತಿಯ ಅಲಂಕಾರಿಕ ಗಿಡಗಳಾದ ಪೆಟೊನಿಯಾ, ಸಾಲ್ವಿಯಾ, ಅಂಟಿರೈನಂ, ಸೆಲೋಶಿಯಾ, ಮಾರಿಗೋಲ್ಡ್, ಜೀನಿಯಾ, ಸೇವಂತಿಗೆ, ಪಾಯ್ನಿಸೆಟಿಯಾಗಳು ಗಮನ ಸೆಳೆಯುತ್ತಿವೆ. ಇದನ್ನೂ ಓದಿ: ಬಿಜೆಪಿ ಹೈಕಮಾಂಡ್ ಸ್ಟ್ರಾಂಗ್ ಇದೆ, ಆದಷ್ಟು ಬೇಗ ಬಿಜೆಪಿ ಕಿತ್ತಾಟಕ್ಕೆ ಅಂತ್ಯ: ಮುರುಗೇಶ್ ನಿರಾಣಿ

    ವಿವಿಧ ಜಿಲ್ಲೆಗಳ ಕೈಮಗ್ಗ, ನೇಕಾರರ ಸಹಕಾರ ಸಂಘಗಳು ಭಾಗವಹಿಸಿದ್ದು, ಕೈಮಗ್ಗ ನೇಕಾರರಿಂದ ತಯಾರಿಸಿರುವ ಹತ್ತಿ, ರೇಷ್ಮೆ, ಮೊಳಕಾಲ್ಮೂರು ರೇಷ್ಮೆ ಸೀರೆ, ಚಿಂತಾಮಣಿ ರೇಷ್ಮೆ ಸೀರೆ, ಕಾಟನ್ ಸೀರೆ, ಪಂಚೆ, ಬೆಡ್‌ಶೀಟ್, ಟವಲ್, ಲುಂಗಿ ಹಾಗೂ ಇತರೆ ಕೈ ಮಗ್ಗ ಉತ್ಪನ್ನಗಳನ್ನು ಶೇ.20 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಇದನ್ನೂ ಓದಿ: ಇಂಗ್ಲಿಷ್ ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಮಕ್ಕಳು – ಸಕಲೇಶಪುರದಲ್ಲಿ ನಾಪತ್ತೆಯಾದವರು ಬೆಂಗಳೂರಲ್ಲಿ ಪತ್ತೆ 

    ಅಲ್ಲದೇ ಕೃಷಿ ಇಲಾಖೆ, ಮೀನುಗಾರಿಕೆ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಪಶು ಸಂಗೋಪನೆ ಇಲಾಖೆ, ಆರೋಗ್ಯ ಇಲಾಖೆ, ಕೈಗಾರಿಕೆ ಮತ್ತು ಖಾದಿ ಮತ್ತು ಗ್ರಾಮೋದ್ಯೋಗ ವತಿಯಿಂದ ಕಲಾಕೃತಿಗಳನ್ನು ಹಾಗೂ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಗುತ್ತಿದೆ.

  • ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದ್ರು ಸ್ವಾಗತ: ಚೆಲುವರಾಯಸ್ವಾಮಿ

    ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದ್ರು ಸ್ವಾಗತ: ಚೆಲುವರಾಯಸ್ವಾಮಿ

    ಬೆಂಗಳೂರು: ಕಾಂಗ್ರೆಸ್ (Congress) ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರು ರಾಜ್ಯ ನಾಯಕರು ಮತ್ತು ಹೈಕಮಾಂಡ್ ನಾಯಕರು ಚರ್ಚೆ ಮಾಡಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ತಾರೆ ಎಂದು ಸಚಿವ ಚೆಲುವರಾಯಸ್ವಾಮಿ (Chaluvaraya Swamy) ಹೇಳಿದ್ದಾರೆ.

    ಸತೀಶ್ ಜಾರಕಿಹೊಳಿ, ರಾಜಣ್ಣರನ್ನ ಹಣಿಯಲು ಬಿಜೆಪಿ ನಾಯಕ ಶ್ರೀರಾಮುಲುರನ್ನ (Sriramulu) ಕಾಂಗ್ರೆಸ್‌ಗೆ ತರಲು ಡಿ.ಕೆ ಶಿವಕುಮಾರ್ ಪ್ರಯತ್ನ ಮಾಡ್ತಿದ್ದಾರೆ ಎಂಬ ಜನಾರ್ದನ ರೆಡ್ಡಿಯವರ ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರು, ಯಾರನ್ನೂ ತುಳಿಯಲು ಸಾಧ್ಯವಿಲ್ಲ. ಸತೀಶ್ ಜಾರಕಿಹೋಳಿ ಹಿರಿಯ ನಾಯಕರು. ಶ್ರೀರಾಮುಲು ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್‌ಗೆ ಬರ್ತಾರೆ ಅಂತ ಇತ್ತು. ಒಬ್ಬರನ್ನ ತುಳಿದು ರಾಜಕೀಯ ಮಾಡೋದು ಕಾಂಗ್ರೆಸ್ ನಲ್ಲಿ ಇಲ್ಲ. ಇದು ನಡೆಯೋದು ಬಿಜೆಪಿಯಲ್ಲಿ ಮಾತ್ರ ಎಂದಿದ್ದಾರೆ.

    ಜನಾರ್ದನ ರೆಡ್ಡಿಗೆ ಮೊದಲು ಅವರ ಪಕ್ಷ ಸರಿ ಮಾಡಿಕೊಳ್ಳೋಕೆ ಹೇಳಿ. ಮೊದಲು ಯತ್ನಾಳ್, ಜಾರಕಿಹೊಳಿಯನ್ನು ಸರಿ ಮಾಡಿ, ಅಮೇಲೆ ಮಾತಾಡಲಿ. ನಿತ್ಯ ವಿಜಯೇಂದ್ರ ಬಗ್ಗೆ ಮಾತಾಡ್ತಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳೋಕೆ ಬಿಜೆಪಿ ಹೈಕಮಾಂಡ್‌ಗೆ ಆಗಿಲ್ಲ. ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ಸ್ಟ್ರಾಂಗ್ ಇದೆ. ಅಲ್ಲದೇ ಎಐಸಿಸಿ ಭದ್ರವಾಗಿದೆ‌. ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ನಾವು ಸುಮ್ಮನೆ ಇದ್ದೇವೆ. ಮೊದಲು ಬಿಜೆಪಿ ತಟ್ಟೆ ಸರಿ ಮಾಡಿಕೊಳ್ಳಲಿ. ಅಮೇಲೆ ನಮ್ಮ ತಟ್ಟೆಗೆ ಬನ್ನಿ ಎಂದು ಕಿಡಿಕಾರಿದ್ದಾರೆ.

    ಜನಾರ್ದನ ರೆಡ್ಡಿ ಯಾಕೆ ಹೀಗೆ ಮಾತಾಡಿದ್ರೋ ಗೊತ್ತಿಲ್ಲ. ಲೋಕಸಭೆ ಉಪ ಚುನಾವಣೆ ಸಮಯದಲ್ಲಿ ಅನೇಕರು ಕಾಂಗ್ರೆಸ್‌ಗೆ ಬರ್ತಾರೆ ಎಂಬ ಸುದ್ದಿ ಇತ್ತು. ಆದಾದ ಮೇಲೆ 3 ಉಪ ಚುನಾವಣೆ ಗೆದ್ದ ಬಳಿಕ ಅನೇಕ ಬಿಜೆಪಿ, ಜೆಡಿಎಸ್ ಸಾಕಷ್ಟು ಜನ ಬರೋದಕ್ಕೆ ಸಿದ್ಧರಿದ್ದಾರೆ. ಯಾರನ್ನ ಸೇರಿಸಿಕೊಳ್ಳಬೇಕು ಎಂದು ಪಕ್ಷದ ನಾಯಕರು ಹೈಕಮಾಂಡ್ ತೀರ್ಮಾನ ಮಾಡುತ್ತೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ನಮಗೆ ಯಾರ ಅವಶ್ಯಕತೆ ಇಲ್ಲ, 136 ಶಾಸಕರು ಇದ್ದೇವೆ. ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಹೈಕಮಾಂಡ್, ಸಿಎಂ, ಡಿಸಿಎಂ ತೀರ್ಮಾನ ಮಾಡ್ತಾರೆ ಎಂದಿದ್ದಾರೆ.

  • ಹೆಚ್‌ಡಿಕೆಯೇ ಕಾರು ಬೇಡ ಎಂದಿದ್ರು: ಚಲುವರಾಯಸ್ವಾಮಿ ಬಾಂಬ್‌ | ಏನಿದು ಕಾರ್‌ ಕಿರಿಕ್‌?

    ಹೆಚ್‌ಡಿಕೆಯೇ ಕಾರು ಬೇಡ ಎಂದಿದ್ರು: ಚಲುವರಾಯಸ್ವಾಮಿ ಬಾಂಬ್‌ | ಏನಿದು ಕಾರ್‌ ಕಿರಿಕ್‌?

    ಮಂಡ್ಯ: ರಾಜಕೀಯ ಹಾಗೂ ವೈಯಕ್ತಿಕ ಜೀವನದಲ್ಲಿ ಕುಚುಕುಗಳ ರೀತಿ ಇದ್ದ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹಾಗೂ ಚಲುವರಾಯಸ್ವಾಮಿ (Chaluvaraya Swamy) ಇದೀಗ ಬದ್ಧ ವೈರಿಗಳಾಗಿ ಬದಲಾಗಿದ್ದಾರೆ. ಇಬ್ಬರ ನಡುವೆ ಈಗ ಒಂದಲ್ಲ ಒಂದು ವಿಚಾರಕ್ಕೆ ಮಾತಿನ ಯುದ್ಧ ನಡೆಯುತ್ತಿದೆ. ಇದೀಗ ಕಾರಿನ (Car) ವಿಚಾರಕ್ಕೆ ಇಬ್ಬರ ನಡುವೆ ವಾಕ್ ಸಮರ ಆರಂಭವಾಗಿದೆ.

    ಎರಡು ದಿನಗಳ ಹಿಂದೆ ಕೇಂದ್ರ ಸಚಿಚ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಾರು ವಿಚಾರದ ಬಗ್ಗೆ ಗಂಭೀರ ಆರೋಪ ಮಾಡಿದ್ದರು. ನಾನು ಒಬ್ಬ ಕೇಂದ್ರ ಸಚಿವನಾಗಿದ್ದರೂ ರಾಜ್ಯ ಸರ್ಕಾರ ದ್ವೇಷದ ರಾಜಕೀಯ ಮಾಡಿಕೊಂಡು ಶಿಷ್ಟಾಚಾರ (Protocol) ಪಾಲನೆ ಮಾಡುತ್ತಿಲ್ಲ ಎಂದು ದೂರಿದ್ದರು.

    ನಾನು ದೆಹಲಿಯಿಂದ (Delhi) ಬೆಂಗಳೂರಿಗೆ (Bengaluru) ಬಂದಾಗ ಪೋಟೋಕಾಲ್ ಪ್ರಕಾರ ಕಾರನ್ನು ಕಳಿಸಿಲ್ಲ. ಕೊನೆಗೆ ನಾನು ನನ್ನ ಇಲಾಖೆಯಾದ ಬೃಹತ್ ಕೈಗಾರಿಕೆ ಇಲಾಖೆಯ ಕಾರನ್ನು ತರಿಸಿಕೊಂಡು ಓಡಾಡುತ್ತಿದ್ದೇನೆ ಎಂದಿದ್ದರು. ಕಾಂಗ್ರೆಸ್‌ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ದೂರಿದ್ದರು.

    ಚಲುವರಾಯಸ್ವಾಮಿ ಹೇಳಿದ್ದೇನು?
    ಕುಮಾರಸ್ವಾಮಿ ಈ ಹೇಳಿಕೆಯ ಬೆನ್ನಲ್ಲೇ ಸಚಿವ ಚಲುವರಾಯಸ್ವಾಮಿ ಇನ್ನೊಂದು ಬಾಂಬ್‌ನ್ನು ಸಿಡಿಸಿದ್ದಾರೆ. ಕುಮಾರಸ್ವಾಮಿ ನನಗೆ ಕಾರು ಕೊಟ್ಟಿಲ್ಲ ಎಂದು ಹೇಳಿರೋದು ನೋಡಿದ್ರೆ ಅದನ್ನು ಕೇಳಲು ಆಗುತ್ತಿಲ್ಲ. ಕುಮಾರಸ್ವಾಮಿ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಬಳಸುತ್ತಿದ್ದ ಕಾರನ್ನು ನನಗೆ ಬೇಡ ಅಂದಿದ್ದಾರೆ. ನಾವು ಏನು ಮಾಡಲು ಸಾಧ್ಯ, ಸುಮಲತಾ ಬಳಸುತ್ತಿದ್ದ ಕಾರನ್ನು ಕುಮಾರಸ್ವಾಮಿ ಏಕೆ ಬೇಡ ಎಂದಿದ್ದಾರೆ ಗೊತ್ತಿಲ್ಲ. ನಾವು ಕಾರು ಕೊಡಲ್ಲ ಎಂದು ಹೇಳಿಲ್ಲ, ಅವರೇ ಕಾರು ಬೇಡ ಎಂದಿದ್ದಾರೆ ಎನ್ನುವ ಮೂಲಕ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಜನ ಕೋವಿಡ್‌ ವಿರುದ್ಧ ಹೋರಾಡುತ್ತಿರುವಾಗ ʻಶೀಷ್‌ ಮಹಲ್‌ʼ ನವೀಕರಣ – ಮೋದಿ ಮತ್ತೆ ಕಿಡಿ

     

    ನಮಗೂ ಸಹ ಹೊಸ ಕಾರು ಬರಲು ಒಂದು ವರ್ಷವಾಗಿದೆ. ಅಲ್ಲಿಯವರೆಗೆ ಹಿಂದೆ ಉಪಯೋಗಿಸುತ್ತಿದ್ದ ಸಚಿವರ ಕಾರನ್ನು ನಾನು ಬಳಸುತ್ತಿದ್ದೆ. ನಾನು ಸಂಸದನಾದ ಬಳಿಕ ಒಂದು ವರ್ಷ ಅಂಬರೀಶ್ ಅವರ ಕಾರನ್ನು ಬಳಸಿದ್ದೆ. ಆ ಮೇಲೆ ನನಗೆ ಹೊಸ ಕಾರು ಬಂತು. ಹೊಸ ಸಂಸದರಿಗೆ ಹಳೆ ಕಾರನ್ನು ಮೊದಲು ನೀಡುವುದು ವಾಡಿಕೆ. ಬಳಿಕ ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಪಡೆದು ಹೊಸ ಕಾರು ಖರೀದಿಸಿ ಕೊಡಲಾಗುತ್ತದೆ. ಆದರೆ ಕುಮಾರಸ್ವಾಮಿ ನೋಡಿದರೆ ಸುಮಲತಾ ಅಂಬರೀಶ್ ಬಳಸಿದ ಕಾರನ್ನು ಬೇಡ ಅಂದಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ.

    ಕುಮಾರಸ್ವಾಮಿ ಸುಮಲತಾ ಅಂಬರೀಶ್ ಬಳಸಿದ ಕಾರನ್ನು ಅವರ ಮೇಲಿನ ಮುನಿಸಿನಿಂದ ಬೇಡಾ ಎಂದು ಹೇಳಿದ್ರಾ? ಅಥವಾ ರಾಜ್ಯ ಸರ್ಕಾರ ಪ್ರೋಟೋಕಾಲ್ ಪಾಲನೆ ಮಾಡದೇ ಇರುವುದನ್ನು ಮುಚ್ಚಿಕೊಳ್ಳಲು ಚಲುವರಾಯಸ್ವಾಮಿ ಹೀಗೆ ಮಾತಾಡಿದ್ದರಾ ಎಂಬ ಪ್ರಶ್ನೆಗೆ ಉತ್ತರ ಸಿಗಬೇಕಿದೆ.

  • 87ನೇ ಕನ್ನಡ ಸಾಹಿತ್ಯ ಸಮ್ಮೇಳನ – ಮಂಡ್ಯಕ್ಕೆ ಸಮ್ಮೇಳನಾಧ್ಯಕ್ಷರ ಆಗಮನ, ಗಣ್ಯರಿಂದ ಸ್ವಾಗತ

    87ನೇ ಕನ್ನಡ ಸಾಹಿತ್ಯ ಸಮ್ಮೇಳನ – ಮಂಡ್ಯಕ್ಕೆ ಸಮ್ಮೇಳನಾಧ್ಯಕ್ಷರ ಆಗಮನ, ಗಣ್ಯರಿಂದ ಸ್ವಾಗತ

    – ಮಂಡ್ಯದಲ್ಲಿ ಕನ್ನಡ ಭಾಷೆ ಅನ್ಯ ಭಾಷೆ ಪ್ರಭಾವಕ್ಕೆ ಒಳಗಾಗಿಲ್ಲ: ಗೊ.ರು.ಚನ್ನಬಸಪ್ಪ

    ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ಜರುಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (87th Kannada Sahitya Sammelana) ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ ಹಿನ್ನೆಲೆ ಇಂದು (ಗುರುವಾರ) ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ (Go. Ru. Channabasappa) ಅವರು ಮಂಡ್ಯಕ್ಕೆ ಆಗಮಿಸಿದ್ದಾರೆ.

    ಮಂಡ್ಯಕ್ಕೆ ಆಗಮಿಸುತ್ತಿದ್ದಂತೆ ಸಚಿವ ಎನ್. ಚಲುವರಾಯಸ್ವಾಮಿ (Chaluvaraya Swamy), ಶಾಸಕರಾದ ಗಣಿಗ ಪಿ.ರವಿಕುಮಾರ್, ರಮೇಶ್ ಬಂಡಿಸಿದ್ದೇಗೌಡ, ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ, ಡಿಸಿ ಡಾ. ಕುಮಾರ್‌ ಅವರು ಸಮ್ಮೇಳನಾಧ್ಯಕ್ಷರನ್ನು ಸ್ವಾಗತಿಸಿದರು. ಇದೇ ವೇಳೆ ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ಬಳಿಕ ಚನ್ನಬಸಪ್ಪನವರು ಡಿಸಿ ಡಾ.ಕುಮಾರ್ ನಿವಾಸಕ್ಕೆ ತೆರಳಿದರು.

    ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಮ್ಮೇಳನಾಧ್ಯಕ್ಷ ಗೊ.ರು ಚನ್ನಬಸಪ್ಪ, ಕನ್ನಡ ತವರು ನೆಲದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಖುಷಿ ತಂದಿದೆ. ಮಂಡ್ಯದಲ್ಲಿ ಕನ್ನಡ ಭಾಷೆ ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಿಲ್ಲ. ಆದ್ರೆ ಕನ್ನಡ ಹಲವು ಸಮಸ್ಯೆಗಳನ್ನ ಎದುರಿಸುತ್ತಿದೆ. ಇದರ ಬಗ್ಗೆ ಚಿಂತನೆ ಆಗಬೇಕು. ಆಧುನಿಕತೆಯ ಪ್ರಭಾವ ಕನ್ನಡದ ಮೇಲಿನ ಅಭಿಮಾನ ಕಡಿಮೆಯಾಗಲು ಕಾರಣ ಎಂದರು.

    ಮಂಡ್ಯ ಜನರ ಪ್ರೀತಿ ವಿಶ್ವಾಸ ಕಂಡು ಕಣ್ತುಂಬಿಕೊಂಡಿದ್ದೇನೆ. ಎಲ್ಲ ಕಾರ್ಯಕಲಾಪದಲ್ಲಿ ಕನ್ನಡ ಬಂಧುಗಳು ಭಾಗವಹಿಸಬೇಕು. ನನ್ನನ್ನ ಪ್ರೀತಿಯಿಂದ ಆಯ್ಕೆ ಮಾಡಿದ್ದಾರೆ. ಇಂತಹ ಉತ್ಸವದಲ್ಲಿ ಅಧ್ಯಕ್ಷ ಸ್ಥಾನ ಅಲಂಕರಿಸುವುದು ಹೆಮ್ಮೆಯ ವಿಚಾರ, ನಿಜಕ್ಕೂ ತುಂಬಾ ಸಂತೋಷವಾಗಿದೆ. ಈ ಬಾರಿ ಸಮಕಾಲಿನ ಸಮಸ್ಯೆ ಬಗ್ಗೆ ಗೋಷ್ಠಿಗಳು ನಡೆಯಲಿವೆ. ನಾನು ಅಧ್ಯಕ್ಷನಾಗಿ ಮಾಡುವುದು ಏನು ಇಲ್ಲ. ಕಸಾಪ ಅಧ್ಯಕ್ಷರು ಕೇಳಿದರೆ ಸಲಹೆ ಕೊಡಬಹುದು ಎಂದು ನುಡಿದರು.

    ಶುಕ್ರವಾರದಿಂದ ಮಂಡ್ಯದಲ್ಲಿ 87ನೇ ನುಡಿ ಜಾತ್ರೆ:
    87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಮಂಡ್ಯ ಸಜ್ಜಾಗಿದೆ. ಮೂರು ದಶಕಗಳ ಬಳಿಕ ಮಂಡ್ಯದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನ ಸಕಲ ಸಿದ್ಧತೆಯಲ್ಲಿ ಮಂಡ್ಯ ಜಿಲ್ಲಾಡಳಿತ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ತೊಡಗಿದೆ.

    ಮಂಡ್ಯದ ಹೊರ ವಲಯದಲ್ಲಿರುವ ಸ್ಯೋಂಜೋ ಆಸ್ಪತ್ರೆಯ ಹಿಂಭಾದ 130 ಎಕರೆ ಪ್ರದೇಶದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇಲ್ಲಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಲೇ 80 ಎಕರೆ ಪ್ರದೇಶದಲ್ಲಿ 3 ವಿವಿಧ ವೇದಿಕೆಗಳ ನಿರ್ಮಾಣ ಮಾಡಲಾಗಿದೆ. ಕೆಆರ್‌ಎಸ್ ಡ್ಯಾಂ ಮಾದರಿಯಲ್ಲಿ ಪ್ರಧಾನ ವೇದಿಕೆಯ ಮುಖ್ಯ ದ್ವಾರ ಸಿದ್ಧಪಡಿಸಿದ್ದು ನೋಡುಗರ ಗಮನ ಸೆಳೆಯುತ್ತಿದೆ. ಪ್ರಧಾನ ವೇದಿಕೆಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡಲಾಗಿದೆ. ಇಲ್ಲಿ 50,000ಕ್ಕೂ ಅಧಿಕ ಮಂದಿ ಕೂರಲು ಆಸಗಳ ವ್ಯವಸ್ಥೆ ಮಾಡಲಾಗಿದೆ. ಮಳೆ ಹಾಗೂ ಬಿಸಿಲಿನಿಂದ ರಕ್ಷಣೆಗಾಗಿ ಜರ್ಮನ್ ಟೆಂಟ್ ಹಾಕಲಾಗಿದೆ. ವೇದಿಕೆ ಸೇರಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕನ್ನಡ ಬಾವುಟಗಳು ರಾರಾಜಿಸುತ್ತಿವೆ.

    ಇನ್ನೂ ಸಾಹಿತ್ಯಾಸಕ್ತರಿಗಾಗಿ 450 ಪುಸ್ತಕ ಮಳಿಗೆಗಳು ನಿರ್ಮಾಣವಾಗಿದ್ದು, 350ಕ್ಕೂ ಹೆಚ್ಚು ವಾಣಿಜ್ಯ ಸ್ಟಾಲ್‌ಗಳು ರೆಡಿಯಾಗಿವೆ. ಸಾಹಿತ್ಯ ಸಮ್ಮೇಳನಕ್ಕೆ ರಂಗು ತರಲು ಮಂಡ್ಯ ನಗರದಲ್ಲಿ ದಸರಾ ಮಾದರಿಯ ದೀಪಾಲಂಕಾರವನ್ನು ಸಹ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಸಮ್ಮೇಳನದ ಅಧ್ಯಕ್ಷ ಗೋ.ರು.ಚನ್ನಬಸಪ್ಪ ಅವರನ್ನು ಸುಮಾರು 6 ಕಿಮೀ ಜಾನಪದ ಕಲಾತಂಡಗಳ ಮೆರವಣಿಗೆ ಮೂಲಕ ಸಮ್ಮೇಳದ ವೇದಿಕೆಗೆ ಕರೆಯಲಾಗುತ್ತದೆ. ನಂತರ ಸಿಎಂ ಸಿದ್ದರಾಮಯ್ಯ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ.

    4,000 ಪೊಲೀಸ್ ಭದ್ರತೆ
    ಮೂರು ದಿನಗಳ ಕನ್ನಡ ನುಡಿ ಜಾತ್ರೆ ಉತ್ಸವಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ದಕ್ಷಿಣ ವಲಯ ಡಿಐಜಿ ಡಾ.ಬೋರಲಿಂಗಯ್ಯ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. 14 ಜಿಲ್ಲೆಗಳಿಂದ ಸುಮಾರು 4,000 ಅಧಿಕಾರಿಗಳು ಹಾಗೂ ಸಿಬ್ಬಂದಿ ಭದ್ರತೆಗೆ ನೇಮಕ ಮಾಡಲಾಗಿದೆ. ಎಸ್ಪಿ 4, ಎಎಸ್ಪಿ 6, ಡಿವೈಎಸ್‌ಪಿ 21, ಪಿಐ 63, ಪಿಎಸ್‌ಐ 190, ಎಎಸ್‌ಐ 215, ಪಿಸಿ 1700, ಮಹಿಳಾ ಪೇದೆ 165, ಗೃಹರಕ್ಷಕ ದಳ 1,000, ಕೆಎಸ್ಆರ್‌ಪಿ 12, ಡಿಎಆರ್ 13 ನಿಯೋಜಿಸಲಾಗಿದೆ.

  • ಮಂಡ್ಯದಲ್ಲಿ ನುಡಿ ಜಾತ್ರೆ – ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ

    ಮಂಡ್ಯದಲ್ಲಿ ನುಡಿ ಜಾತ್ರೆ – ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ

    ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಗರಿ ಮಂಡ್ಯದಲ್ಲಿ (Mandya) ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ ಹಿನ್ನೆಲೆ ಸಮ್ಮೇಳನಕ್ಕೆ ಬರುವವರಿಗೆ ಭರ್ಜರಿ ಭೋಜನದ (Dinner) ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

    ಉಪಾಹಾರ ಹಾಗೂ ಊಟ ನೀಡಲು 140 ಕೌಂಟರ್‌ಗಳನ್ನು ತೆರೆಯಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರಿಗೂ ಒಂದೇ ಮೆನುವನ್ನು ಈಗಾಗಲೇ ಸಿದ್ಧ ಮಾಡಲಾಗಿದೆ. ನೂರಾರು ಬಾಣಸಿಗರು (Chefs) ಹಾಗೂ ಸಾವಿರಾರು ಸಹಾಯಕರಿಂದ ಖಾದ್ಯಗಳು ತಯಾರಿಯಾಗುತ್ತಿವೆ. ಇದನ್ನೂ ಓದಿ:  87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಸಿದ್ಧ – ʻನುಡಿ ಜಾತ್ರೆಯ ಸ್ವರ ಯಾತ್ರೆʼ

    ಈಗಾಗಲೇ ಸಿಹಿ ತಿನಿಸು ತಯಾರಿಕೆ ಕಾರ್ಯ ಆರಂಭವಾಗಿದ್ದು ಹೋಳಿಗೆ, ಮೈಸೂರು ಪಾಕ್  (Mysuru Pak), ಬರ್ಫಿ, ಲಾಡುಗಳನ್ನು ಬಾಣಸಿಗರು ತಯಾರು ಮಾಡಿದ್ದಾರೆ. ಇದನ್ನೂ ಓದಿ: ಸಕ್ಕರೆನಾಡು ಮಂಡ್ಯ ಕೇಸರಿಮಯ – ಹನುಮ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ

    ಶುಕ್ರವಾರದಿಂದ ಮೆನು ಪ್ರಕಾರ ಊಟ ರೆಡಿಯಾಗಲಿದ್ದು, ಮಂಡ್ಯ ಶೈಲಿಯಲ್ಲಿ ಈ ಬಾರಿ ಊಟ ಇರಲಿದೆ. ಜೊತೆಗೆ ರಾಜ್ಯದ ಪ್ರಮುಖ ಊಟದ ಮೆನು ಸಹ ಇರಲಿದೆ. ಮೂರು ದಿನವೂ ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ.

  • 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಸಿದ್ಧ – ʻನುಡಿ ಜಾತ್ರೆಯ ಸ್ವರ ಯಾತ್ರೆʼ

    87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಸಿದ್ಧ – ʻನುಡಿ ಜಾತ್ರೆಯ ಸ್ವರ ಯಾತ್ರೆʼ

    ಮಂಡ್ಯ: 3ನೇ ಬಾರಿಗೆ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (87th Kannada Sahitya Sammelana) ಇತಿಹಾಸ ಸೃಷ್ಟಿಸಲಿದೆ. ಹಲವು ಹೊಸತನಗಳಿಗೆ ಸಾಕ್ಷಿಯಾಗುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ (Chaluvaraya Swamy) ಅವರು ಹೇಳಿದ್ದಾರೆ

    ಮಂಡ್ಯ (Mandya) ನಗರದ ಹೊರವಲಯದಲ್ಲಿರುವ ಸ್ಯಾಂಜೋ ಆಸ್ಪತ್ರೆ ಹಿಂಭಾಗದಲ್ಲಿ ನಿರ್ಮಿಸುತ್ತಿರುವ ವೇದಿಕೆಗಳ ಸಿದ್ಧತಾ ಕಾರ್ಯಗಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು. ಇದನ್ನೂ ಓದಿ: ವಕ್ಫ್ ವಿಚಾರದಲ್ಲಿ ರಕ್ಷಿಸಲು ಕಾಂಗ್ರೆಸ್ ನಾಯಕರು ವಿಜಯೇಂದ್ರ ಸಂಬಂಧಿಗಳೇ?: ಎಂಪಿ ರೇಣುಕಾಚಾರ್ಯ

    70-80 ಎಕರೆ ಪ್ರದೇಶದಲ್ಲಿ ಪ್ರಧಾನ ವೇದಿಕೆ, ಎರಡು ಸಮಾನಾಂತರ ವೇದಿಕೆ, 60 ಎಕರೆ ಪ್ರದೇಶದಲ್ಲಿ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ. 55 ವಸ್ತುಪ್ರದರ್ಶನ ಮಳಿಗೆಗಳು, 350 ವಾಣಿಜ್ಯ ಮಳಿಗೆಗಳು, 450 ಪುಸ್ತಕ ಮಳಿಗೆಗಳು ಕೂಡ ತಲೆ ಎತ್ತಿವೆ. ಊಟಕ್ಕೆ 100 ಕೌಂಟರ್, ನೋಂದಾಯಿತ ಪ್ರತಿನಿಧಿಗಳಿಗೆ 40 ಕೌಂಟರ್‌ಗಳನ್ನ ತೆರೆಯಲಾಗಿದ್ದು ಎಲ್ಲರಿಗೂ ಒಂದೇ ಊಟದ ಮೆನು ಇರಲಿದೆ ಎಂದು ಮಾಹಿತಿ ನೀಡಿದರು.

    ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆಹಾರದ ಗುಣಮಟ್ಟ ಪರೀಕ್ಷೆ ಮಾಡಿ ವರದಿ ಪಡೆಯಲಾಗುತ್ತದೆ. ನೀರನ್ನು ಸಹ ಪರೀಕ್ಷಿಸಲಾಗುತ್ತದೆ. ಸ್ವಚ್ಛತೆಗೆ 250 ಸಿಬ್ಬಂದಿಯನ್ನ ನೇಮಿಸಲಾಗಿದೆ. 150ಕ್ಕೂ ಹೆಚ್ಚು ವಿವಿಧ ಸ್ಥಳಗಳಲ್ಲಿ ಶೌಚಾಲಯ ನಿರ್ಮಿಸಲಾಗಿದೆ. 6,000 ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರೆಶ್, ಪೇಸ್ಟ್, ಸೋಪು, ಬೆಡ್ ಶಿಟ್ ಒಳಗೊಂಡ ಲೇದರ್ ಬ್ಯಾಗ್‌ನಲ್ಲಿ ವಸತಿ ಮತ್ತು ಸಮ್ಮೇಳನದ ಕಿಟ್ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

    7 ತಾಲೂಕು ಕೇಂದ್ರಗಳಿಂದ ಉಚಿತ ಬಸ್‌ ವ್ಯವಸ್ಥೆ:
    ಸಮ್ಮೇಳನಕ್ಕೆ ಆಗಮಿಸುವ 7 ತಾಲೂಕು ಕೇಂದ್ರಗಳಿಂದ 15 ಉಚಿತ ಬಸ್ (Free Bus) ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಮಂಡ್ಯ ನಗರದಿಂದ ಕೂಡ ಬಸ್‌ಗಳು ಸಮ್ಮೇಳನದ ಸ್ಥಳಕ್ಕೆ ಉಚಿತವಾಗಿ ಕರೆತರಲಿವೆ. ಮೂರು ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್ ಸ್ಥಳದಿಂದ ಕೂಡ ಉಚಿತ ಸಾರಿಗೆ ವಾಹನದ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಬೆಂಗಳೂರಿನಿಂದ 30 ನಿಮಿಷಕ್ಕೆ ಒಂದು ವಿಶೇಷ ಬಸ್ ಸಂಚರಿಸಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಚಿಕಿತ್ಸೆಗಾಗಿ ಅಮೆರಿಕಗೆ ಹೊರಡುವ ಮುನ್ನ ಶಿವಣ್ಣರನ್ನು ನೋಡಲು ಬಂದ ಪೂರ್ಣಿಮಾ ಕುಟುಂಬ

    ಸಮ್ಮೇಳನಾಧ್ಯಕ್ಷರಾದ ಗೊ.ರು ಚನ್ನಬಸಪ್ಪ ಅವರು ಗುರುವಾರ ಸಂಜೆ ಮಂಡ್ಯಕ್ಕೆ ಆಗಮಿಸಲಿದ್ದು ಅವರನ್ನು ಬರಮಾಡಿಕೊಳ್ಳಲಾಗುವುದು. ಡಿ.20ರ ಶುಕ್ರವಾರ ಬೆಳಗ್ಗೆ 6ಕ್ಕೆ ಧ್ವಜಾರೋಹಣ ನೆರವೇರಲಿದೆ. 7 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯಲ್ಲಿ ಹಗಲುವೇಷ, ಮಹಿಳಾ ವೀರಗಾಸೆ, ಗೊರವರ ಕುಣಿತ, ಕಂಸಾಳೆ, ಕರಗ, ಸುಗ್ಗಿ ಕುಣಿತ, ಕೋಲಾಟ ಒಳಗೊಂಡಂತೆ ಪೂರ್ಣಕುಂಭ ಹೊತ್ತ 300 ಮಹಿಳೆಯರು ಹಾಗೂ 50ಕ್ಕೂ ಹೆಚ್ಚು ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಮೆರವಣಿಗೆಗೆ ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌ ಚಾಲನೆ ನೀಡಲಿದ್ದಾರೆ ಎಂದರು.

    ಕಾರ್ಯಕ್ರಮಗಳಿಗೆ ಮೂರು ವೇದಿಕೆಗಳನ್ನು ನಿರ್ಮಿಸಲಾಗುತ್ತಿದೆ. ಪ್ರಧಾನ ವೇದಿಕೆಯಲ್ಲಿ ಸಮ್ಮೇಳನಾಧ್ಯಕ್ಷರ ಜೊತೆಗಿನ ಸಂವಾದವೂ ಸೇರಿದಂತೆ ‌11 ಗೋಷ್ಠಿಗಳು, 2 ಸಮಾನಾಂತರ ವೇದಿಕೆಗಳಲ್ಲಿ 20 ಗೋಷ್ಠಿಗಳು ಆಯೋಜನೆಗೊಂಡಿವೆ. ಸಮ್ಮೇಳನದ ಅಂಗವಾಗಿ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ವಿರುದ್ಧ ಮುಡಾ ಹಗರಣಕ್ಕೆ ಟ್ವಿಸ್ಟ್‌ – ದೂರು ಹಿಂಪಡೆಯಲು ಸ್ನೇಹಮಯಿ ಕೃಷ್ಣಗೆ ಆಮಿಷ ಆರೋಪ

    ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರ, ಅಂಬೇಡ್ಕರ್ ಭವನ, ಸಮಾನಾಂತರ ವೇದಿಕೆ ಮತ್ತು ಪ್ರಧಾನ ವೇದಿಕೆಗಳಲ್ಲಿ ಸ್ಥಳೀಯ ಕಲಾವಿದರ ಕಾರ್ಯಕ್ರಮಗಳು ನಡೆಯಲಿವೆ. ʻನುಡಿ ಜಾತ್ರೆಯ ಸ್ವರ ಯಾತ್ರೆʼ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಡಿ.20ರ ಮೊದಲ ದಿನ ಸಾಧುಕೋಕಿಲ (Sadhu kokila) ಮತ್ತು ರಾಜೇಶ್ ಕೃಷ್ಣನ್ (Rajesh Krishnan) ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಡಿ.21ರಂದು ಅರ್ಜುನ್ ಜನ್ಯ (Arjun Janya) ಮತ್ತು ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಡಿ.22ರಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಪೊಲೀಸ್ ಬ್ಯಾಂಡ್ ಇರಲಿದೆ ಎಂದು ವಿವರಿಸಿದರು.

    ಚೆಸ್ಕಾಂ ವತಿಯಿಂದ ನಗರದಲ್ಲಿ ವಿದ್ಯುತ್ ಅಲಂಕಾರ ಮಾಡಲಾಗುತ್ತಿದೆ. ನಾಡುನುಡಿಗೆ ಸೇವೆ ಸಲ್ಲಿಸಿದ 170 ಮಂದಿ ಸಾಧಕರನ್ನು ಸನ್ಮಾನಿಸಲಾಗುತ್ತಿದೆ. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣಾರ್ಥ 87 ಪುಸ್ತಕಗಳನ್ನು ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ ʻಬೆಲ್ಲದಾರತಿʼ ಹೆಸರಿನ ಸ್ಮರಣ ಸಂಚಿಕೆ ಕೂಡ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗೆ ಹೋಗಬಾರದವ್ವ ಅಂತ ಮಹಿಳೆಯರು ಮಾತಾಡ್ಕೊಳ್ತಿದ್ದಾರೆ – ಆರ್‌. ಅಶೋಕ್‌

  • ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಸಚಿವ ಚಲುವರಾಯಸ್ವಾಮಿ

    ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಸಚಿವ ಚಲುವರಾಯಸ್ವಾಮಿ

    ರಾಯಚೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ದಂಪತಿ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ಗುರು ರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನ ದರ್ಶನ ಪಡೆದರು.

    ಗುರು ರಾಯರ ಮೂಲವೃಂದಾವನಕ್ಕೆ ಎನ್.ಚಲುವರಾಯಸ್ವಾಮಿ ದಂಪತಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ದಂಪತಿಗೆ ಆಶಿರ್ವಚನ ನೀಡಿದರು. ಮಂತ್ರಾಕ್ಷತೆ ನೀಡಿ ಶ್ರೀಗಳು ಆಶಿರ್ವದಿಸಿದರು.

    ರಾಯಚೂರು ಕೃಷಿ ವಿವಿಯಲ್ಲಿ ಆಯೋಜಿಸಿರುವ ಕೃಷಿ ಮೇಳಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಕೃಷಿ ಸಚಿವ, ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದು ರಾಯಚೂರು ಕಡೆ ಪ್ರಯಾಣ ಬೆಳೆಸಿದರು.

  • ಪೂರ್ವಜನ್ಮದ ಪುಣ್ಯದಿಂದ ಮಂತ್ರಿ ಆಗಿದ್ದೇವೆ – ಸಚಿವ ಚೆಲುವರಾಯಸ್ವಾಮಿ

    ಪೂರ್ವಜನ್ಮದ ಪುಣ್ಯದಿಂದ ಮಂತ್ರಿ ಆಗಿದ್ದೇವೆ – ಸಚಿವ ಚೆಲುವರಾಯಸ್ವಾಮಿ

    – ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಡಬಾರದು ಎಂದು ತೀರ್ಮಾನಿಸಿದ್ದೇನೆ ಎಂದ ಸಚಿವ

    ಹಾಸನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಹೇಳಿಕೆಗೆ ಪ್ರತಿಕ್ರಿಯೆ ಕೊಡಬಾರದು ಎಂದು ತೀರ್ಮಾನಿಸಿದ್ದೇನೆ. ಸತ್ಯ ಇದ್ದರೆ ಪ್ರತಿಕ್ರಿಯಿಸುವುದು ಒಳ್ಳೆಯದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ (Chaluvarayaswamy) ಹೇಳಿದ್ದಾರೆ.

    ಚನ್ನರಾಯಪಟ್ಟಣದಲ್ಲಿ ಮಾಜಿ ಎಂಎಲ್‌ಸಿ ಎಂ.ಎ.ಗೋಪಾಲಸ್ವಾಮಿ ಅವರ ಹುಟ್ಟು ಹಬ್ಬದ ಅಂಗವಾಗಿ ಏರ್ಪಡಿಸಿದ್ದ ಆಲ್ ಇಂಡಿಯಾ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸತ್ಯ ಇಲ್ಲದಿದ್ದಾಗ ನಾವೂ ಅವರ ತರಹ ಆಗಿಬಿಡ್ತೀವಿ. ಇಲ್ಲದಿದ್ದರೆ ಚೆಲುವರಾಯಸ್ವಾಮೀನೂ, ಕುಮಾರಸ್ವಾಮಿ ತರಹ ಆಗೋದ್ನಲ್ಲಾ ಅಂತಾರೆ ಜನ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಹಾಸನದಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ- ವಾಹನ ಸವಾರರ ಪರದಾಟ

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿ, ಮಂತ್ರಿ ಆಗೋದು ಅಪರೂಪ. ಪೂರ್ವಜನ್ಮದ ಪುಣ್ಯದಿಂದ ಆಗಿದ್ದೇವೆ. ಅವರು ಎರಡು ಜನ ಗೆದ್ದು ಮಂತ್ರಿಯಾಗಿದ್ದಾರೆ. ಅವರಿಗೆ ಸಾಕಷ್ಟು ಕೆಲಸ ಇರುತ್ತೆ. ರಾಷ್ಟ್ರದಲ್ಲಿ ಮಂತ್ರಿಯಾಗಿರುವವರು ಶನಿವಾರ, ಭಾನುವಾರ ಇಲ್ಲಿಗೆ ಬಂದು ಬರೀ ಬಯ್ಯುವುದರಿಂದ ಅರ್ಥ ಇರದು ಎಂದು ಕುಟುಕಿದರು. ಸಿದ್ದರಾಮಯ್ಯ ಅವರು ಆರ್ಡಿನರಿ ಲೀಡರ್ ಅಲ್ಲ. ಸಣ್ಣಪುಟ್ಟ ವ್ಯತ್ಯಾಸ ಅಥವಾ ಯಾರೋ ಮಾಡಿದ ನಿರ್ಧಾರಕ್ಕೆ ಅವರನ್ನೇ ಹೊಣೆ ಮಾಡುವುದು ಅಪರಾಧ. ಕುಮಾರಸ್ವಾಮಿ ಹದಿನಾಲ್ಕು ತಿಂಗಳು ಸಿಎಂ ಆಗಿದ್ದಾಗ ಏನು ಮಾಡಿದ್ರು ಒಮ್ಮೆ ತಿರುಗಿ ನೋಡಲಿ ಎಂದರು. ಇದನ್ನೂ ಓದಿ: ಮಾಡಿರುವ ತಪ್ಪುಗಳು, ಹಗರಣವನ್ನು ಹೊರ ತೆಗೆಯುತ್ತೇವೆಂದು ಬಿಜೆಪಿಯವರಿಗೆ ಭಯ – ಜಿ. ಪರಮೇಶ್ವರ್

    ನಮ್ಮ ಸರ್ಕಾರ ಬಂದು 14 ತಿಂಗಳಾಗಿವೆ. ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಸೇರಿ ಹಲವು ಕೆಲಸ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡರು. ಕೆಲವರನ್ನು ನೆಗ್ಲೆಟ್ ಮಾಡುವುದು ಅನಿವಾರ್ಯ. ನಮ್ಮ ಜೊತೆಯಲ್ಲಿರುವವರು ನಾವು ತಪ್ಪು ಮಾಡಿದ್ರೂ, ಒಳ್ಳೆಯದನ್ನೂ ಹೇಳಿದ್ರೂ ಚೆಪ್ಪಾಳೆ ಹೊಡೀತಾರೆ, ಹಾಗಾಗಿ ಕುಮಾರಸ್ವಾಮಿಗೆ ಖುಷಿ ಆಗಿದೆ ಎಂದರು. ಇದನ್ನೂ ಓದಿ: Bengaluru Rains | ಎಲೆಕ್ಟ್ರಾನಿಕ್ ಸಿಟಿ ಮತ್ತೆ ಜಲಾವೃತ – ಸಣ್ಣ ಮಳೆಗೆ ತತ್ತರಿಸಿದ ಐಟಿಬಿಟಿ ಮಂದಿ

    ಕುಮಾರಸ್ವಾಮಿ, ಯಡಿಯೂರಪ್ಪ (B S Yediyurappa), ಬೊಮ್ಮಾಯಿ ಮೂರು ಜನ ಮುಖ್ಯಮಂತ್ರಿ ಆಗಿದ್ರು, ಅವರು ಕೊಟ್ಟ ಕಾರ್ಯಕ್ರಮದಿಂದ ರೊಚ್ಚಿಗೆದ್ದು ಜನ ಅವರನ್ನು ತಿರಸ್ಕರಿಸಿ ನಮಗೆ 136 ಜನ ಗೆಲ್ಲಿಸಿ ಕೊಟ್ಟಿದ್ದಾರೆ. 30 ವರ್ಷದಲ್ಲಿ 115 ಶಾಸಕರು ಒಂದೇ ಪಕ್ಷದಿಂದ ಆಯ್ಕೆಯಾಗಿಲ್ಲ. ನಾವು 136 ಜನ ಗೆದ್ದಿದ್ದರೂ ಸರ್ಕಾರ ತೆಗೆಯಲು ಒದ್ದಾಡುತ್ತಿದ್ದಾರೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ನಮ್ಮ ಮೆಟ್ರೋದಿಂದ ಮತ್ತೊಂದು ಗುಡ್‌ನ್ಯೂಸ್ – ಹೊಸ ವರ್ಷದಿಂದ್ಲೇ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ರೈಲು!

    ಜಾತಿಗಣತಿ ಜಾರಿ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೆಲ ಸತ್ಯನಾ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತನಾಡುವುದು ಕಷ್ಟ. ಸಮಯ ನೋಡಿ ಮಾತಾಡಬೇಕು. ಜಾತಿ ಗಣತಿ ವರದಿ ಜಾರಿಯಿಂದ ಆಗಬಾರದ್ದು ಏನೂ ಆಗಲ್ಲ. ಒಕ್ಕಲಿಗರು, ಲಿಂಗಾಯತರು ಜಾರಿ ಮಾಡುವುದು ಬೇಡ ಎಂದು ಅರ್ಜಿ ಕೊಟ್ಟಿದ್ದಾರೆ. ಆದರೆ ನನ್ನ ಪ್ರಕಾರ ಯಾರಿಗೂ ಅನ್ಯಾಯ ಆಗಲ್ಲ. ವರದಿ ಕ್ಯಾಬಿನೆಟ್‌ನಲ್ಲಿ ಸಲ್ಲಿಕೆ ಆಗುತ್ತೆ. ಅಲ್ಲಿ ಚರ್ಚೆ ಆಗುತ್ತೆ. ಅಂತಿಮವಾಗಿ ಸಿಎಂ ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಯಾವ ಸಮಾಜಕ್ಕೂ ಅನ್ಯಾಯ ಆಗುವ ಅವಕಾಶ ಆಗಲ್ಲ ಎಂದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೇಸ್ ಅರೆಬಿಯನ್ ನೈಟ್ಸ್ ಕಥೆಯಂತಿದೆ: ದರ್ಶನ್ ಪರ ಸಿ.ವಿ ನಾಗೇಶ್ ವಾದ ಹೇಗಿತ್ತು?

  • ನಾಗಮಂಗಲದ ಕೋಮು ಗಲಭೆಗೆ ಕೇರಳ ಲಿಂಕ್ – ಕೇರಳ ಮುಸ್ಲಿಮರ ಕೈವಾಡ ಇದ್ಯಾ? – ವಿಶ್ವ ಹಿಂದೂ ಪರಿಷತ್‌ ಆರೋಪ ಏನು?

    ನಾಗಮಂಗಲದ ಕೋಮು ಗಲಭೆಗೆ ಕೇರಳ ಲಿಂಕ್ – ಕೇರಳ ಮುಸ್ಲಿಮರ ಕೈವಾಡ ಇದ್ಯಾ? – ವಿಶ್ವ ಹಿಂದೂ ಪರಿಷತ್‌ ಆರೋಪ ಏನು?

    – FIRನಲ್ಲಿರೋ 74 ಆರೋಪಿಗಳ ಪೈಕಿ ಇಬ್ಬರು ಕೇರಳದವರು!

    ಮಂಡ್ಯ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟದಿಂದ (Nagamangala Violence) ನಿಗಿನಿಗಿ ಕೆಂಡವಾಗಿದ್ದ ನಾಗಮಂಗಲ ಈಗ ಸಹಜ ಸ್ಥಿತಿಗೆ ಮರಳಿದೆ. ಸಚಿವ ಚಲುವನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆದ ಶಾಂತಿಸಭೆ ಯಶಸ್ವಿಯಾಗಿದೆ. ಅಲ್ಲದೇ ಭಾನುವಾರ (ಇಂದು) ನಿಷೇಧಾಜ್ಞೆ ತೆರವಾಗಿದೆ. ಈ ನಡುವೆ ಕೋಮು ಗಲಭೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬೆಳಿಗೆ ಬಂದಿದೆ.

    ನಾಗಮಂಗಲದ ಕೋಮು ಗಲಭೆಗೆ ಕೇರಳ ಲಿಂಕ್ (Kerala Link) ಇರೋದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೇ ನಿಷೇಧಿತ ಪಿಎಫ್‌ಐ (PFI) ಸಂಘಟನೆ ಸದಸ್ಯರೂ ಈ ಗಲಭೆ ಹಿಂದಿದ್ದಾರೆ, ಕೃತ್ಯಕ್ಕೆ ಮೊದಲೇ ಪ್ಲ್ಯಾನ್‌ ಮಾಡಿದ್ದರು ಎಂಬ ಶಂಕೆಯೂ ವ್ಯಕ್ತವಾಗಿದೆ. ಇದನ್ನೂ ಓದಿ: ಭಾನುವಾರದ ಬಾಡೂಟ; ಆಂಧ್ರ ಶೈಲಿಯ ತಲೆಮಾಂಸದ ಸಾಂಬಾರ್ ಮಾಡೋದು ಹೇಗೆ?

    ಈ ಅನುಮಾನಕ್ಕೆ ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿರುವ ಆ ಎರಡು ಹೆಸರುಗಳು ಕಾರಣವಾಗಿದೆ. ಹೌದು. ಎಫ್‌ಐಆರ್‌ನಲ್ಲಿರುವ 74 ಆರೋಪಿಗಳ ಪೈಕಿ ಇಬ್ಬರು ಕೇರಳದವರಾಗಿದ್ದಾರೆ. ಪ್ರಕರಣದ 44ನೇ ಆರೋಪಿ ಯೂಸೂಫ್‌, 61ನೇ ಆರೋಪಿ ನಾಸೀರ್‌ ಇಬ್ಬರೂ ಕೇರಳ ರಾಜ್ಯದ ಮಲ್ಲಪುರಂ ನಿವಾಸಿಗಳು ಎಂದು ತಿಳಿದುಬಂದಿದೆ. ಇದನ್ನೂ ಓದಿ: Kolkata Horror | ಸಾಕ್ಷಿ ನಾಶ, FIR ದಾಖಲಿಸಲು ವಿಳಂಬ; ಸಂದೀಪ್‌ ಘೋಷ್‌ ಸೇರಿ ಸಿಬಿಐನಿಂದ ಇಬ್ಬರ ಬಂಧನ

    ಈ ನಡುವೆ ಆರೋಪಿಗಳಿಬ್ಬರೂ ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯರು ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ. ಗಲಭೆ ನಡೆಸಲು ಪೂರ್ವ ತಯಾರಿ ನಡೆದಿದೆ. ಗಲಾಟೆ ನಡೆದ ದಿನ ಮೆಡಿಕಲ್‌ನಲ್ಲಿ 200 ಮಾಸ್ಕ್ ಖರೀದಿ ಮಾಡಲಾಗಿದೆ. ಪೆಟ್ರೋಲ್ ಬಾಂಬ್ ಬಳಕೆಯಲ್ಲೂ ಕೇರಳ ಮುಸ್ಲಿಮರ ಕೈವಾಡದ ಇದೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನ ಎನ್‌ಐಎ ನಡೆಸಬೇಕು ಎಂದು ವಿಹೆಚ್‌ಪಿ ಆಗ್ರಹಿಸಿದೆ. ಇದನ್ನೂ ಓದಿ: ಪ್ರಧಾನಿ ಹುದ್ದೆಗೆ ಬೆಂಬಲಿಸುವ ಆಫರ್‌ ಬಂದಿತ್ತು, ನಾನೇ ತಿರಸ್ಕರಿಸಿದೆ: ನಿತಿನ್‌ ಗಡ್ಕರಿ

  • ನಿಗಿ ನಿಗಿ ಕೆಂಡವಾಗಿದ್ದ ನಾಗಮಂಗಲ ಶಾಂತ – ಸಚಿವ ಚಲುವರಾಯಸ್ವಾಮಿ ಶಾಂತಿಸಭೆ ಸಕ್ಸಸ್

    ನಿಗಿ ನಿಗಿ ಕೆಂಡವಾಗಿದ್ದ ನಾಗಮಂಗಲ ಶಾಂತ – ಸಚಿವ ಚಲುವರಾಯಸ್ವಾಮಿ ಶಾಂತಿಸಭೆ ಸಕ್ಸಸ್

    – ನಿಷೇಧಾಜ್ಞೆ ತೆರವು, ಗಣೇಶ ವಿಸರ್ಜನೆಗೆ ಅವಕಾಶ

    ಮಂಡ್ಯ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟದಿಂದ ನಿಗಿನಿಗಿ ಕೆಂಡವಾಗಿದ್ದ ನಾಗಮಂಗಲ (Nagamangala Violence) ಈಗ ಸಹಜ ಸ್ಥಿತಿಗೆ ಮರಳಿದೆ. ಎರಡೂ ಸಮುದಾಯದ ಮುಖಂಡರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಚಲುವನಾರಾಯಣಸ್ವಾಮಿ (Chaluvarayaswamy) ನೇತೃತ್ವದಲ್ಲಿ ನಡೆದ ಶಾಂತಿಸಭೆ ಯಶಸ್ವಿಯಾಗಿದೆ. ಅಲ್ಲದೇ ಭಾನುವಾರ (ಇಂದು) ನಿಷೇಧಾಜ್ಞೆ ಮುಕ್ತಾಯವಾಗಲಿದ್ದು, ಇಂದಿನಿಂದ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆಗೆ ಅವಕಾಶ ನೀಡಲಾಗಿದೆ.

    ಬುಧವಾರ ರಾತ್ರಿ ನಾಗಮಂಗಲದಲ್ಲಿ ಗಣೇಶ ಮೂರ್ತಿ (Ganesha Idol) ವಿಸರ್ಜನೆ ವೇಳೆ ಕಲ್ಲು ತೂರಾಟದಿಂದಾಗಿ ಗಲಭೆ ಉಂಟಾಗಿ ಅಂದು ರಾತ್ರಿ ಜಾರಿಗೊಳಿಸಿದ್ದ ನಿಷೇಧಾಜ್ಞೆ ತೆರವಾಗಲಿದೆ. ನಿನ್ನೆ ನಾಗಮಂಗಲದ ಸಮುದಾಯ ಭವನದಲ್ಲಿ ಉಭಯ ಸಮುದಾಯದ ಮುಖಂಡರೊಂದಿಗೆ ಸಚಿವ ಚಲುವರಾಯಸ್ವಾಮಿ ಶಾಂತಿಸಭೆ ನಡೆಸಿದ್ರು. ಘಟನೆಗೆ ಕಾರಣವಾದ ಕಿಡಿಗೇಡಿಗಳನ್ನು ಚಾರ್ಜ್‌ಶೀಟ್‌ನಲ್ಲಿ ಸೇರಿಸಿದ ಅಮಾಯಕರನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ರು. ಅಲ್ಲದೇ ನಾಗಮಂಗಲದ ಉಳಿದ ಗಣೇಶ್ ಮೂರ್ತಿಗಳನ್ನು ಶಾಂತಿಯುವಾಗಿ ವಿಸರ್ಜನೆ ಮಾಡಲು ಸಹಕರಿಸಬೇಕೆಂದು ಮನವಿ ಮಾಡಿದ್ರು.

    ಶಾಂತಿಸಭೆ ಯಶಸ್ವಿಯ ಬಳಿಕ ಇಂದಿನಿಂದ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆಗೆ ಅವಕಾಶ ನೀಡಲಾಯಿತು. ಎಂದಿನಂತೆ ಸಂಭ್ರಮದಿಂದ ಆಚರಣೆಗೆ ಅನುಮತಿ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮೆರವಣಿಗೆ ವೇಳೆ ಬಿಗಿ ಭದ್ರತೆಗೆ ಸೂಚಿಸಲಾಗಿದೆ. ಈ ಹಿಂದೆ ನಡೆಯುತ್ತಿದ್ದ ರಸ್ತೆಗಳಲ್ಲಿ 7 ಗಣಪತಿಗಳ ವಿಸರ್ಜನೆ ಮೆರವಣಿಗೆ ಅನುವು ಮಾಡಿಕೊಡಬೇಕೆಂದು ಎರಡು ಸಮುದಾಯದ ಮುಖಂಡರಿಗೆ ಮನವಿ ಮಾಡಲಾಗಿದೆ. ಇದಕ್ಕೆ ಎಲ್ಲಾ ಮುಖಂಡರು ಸಮ್ಮತಿದ್ದಾರೆ.

    ಗಣೇಶ ವಿಸರ್ಜನೆ ಮೆರವಣಿಗೆ ಬಳಿಕ ಪ್ರತಿವರ್ಷದಂತೆ ಸೌಮ್ಯಕೇಶ್ವರ ದೇವಸ್ಥಾನದ ಕಲ್ಯಾಣಿಯಲ್ಲಿ ವಿಸರ್ಜನೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಅದ್ರೆ ನಾಳೆ ಈದ್ ಮಿಲಾದ್ ಹಬ್ಬ ಆಚರಣೆ ಇದ್ದ ಕಾರಣ ಅಂದು ಮಾತ್ರ ಗಣಪತಿ ವಿಸರ್ಜನೆ ಮಾಡಲು ಅನುಮತಿ ನೀಡಿಲ್ಲ. ಎರಡು ಕೋಮುಗಳ ಮಧ್ಯೆ ಮತ್ತೆ ಘರ್ಷಣೆ ಆಗೋ ಸಾಧ್ಯತೆ ಇರುತ್ತೆ ಅನ್ನೋ ಕಾರಣದಿಂದ ಶಾಂತಿ ಸುವ್ಯವಸ್ಥೆ ಕಾರಣಕ್ಕೆ ಅನುಮತಿ ಕೊಟ್ಟಿಲ್ಲ.

    ಒಟ್ಟಿನಲ್ಲಿ ಗಲಭೆಯಿಂದ ಸಹಜಸ್ಥಿತಿಯತ್ತ ಮರಳಿದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಯಾವುದೇ ಅವಘಡ ನಡೆಯದಂತೆ ಪೊಲೀಸರು ಮುನ್ನಚ್ಚೆರಿಕೆ ಬಿಗಿ ಭದ್ರತೆ ಮಾಡಿದ್ದಾರೆ.