Tag: Chaluvaraya Swamy

  • ಮತ್ತೆ ಮುಜುಗರ ಭೀತಿ – ಮಾಧ್ಯಮಗಳನ್ನು ಹೊರಗಿಟ್ಟು ನಾಗಮಂಗಲದಲ್ಲಿ ಶಾಂತಿ ಸಭೆಗೆ ಪ್ಲ್ಯಾನ್‌

    ಮತ್ತೆ ಮುಜುಗರ ಭೀತಿ – ಮಾಧ್ಯಮಗಳನ್ನು ಹೊರಗಿಟ್ಟು ನಾಗಮಂಗಲದಲ್ಲಿ ಶಾಂತಿ ಸಭೆಗೆ ಪ್ಲ್ಯಾನ್‌

    ಮಂಡ್ಯ: ನಾಗಮಂಗಲದಲ್ಲಿ (Nagamangala) ಇಂದು ಶಾಂತಿ ಸಭೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಈ ಸಭೆಗೆ ಮಾಧ್ಯಮಗಳನ್ನ (Media) ನಿರ್ಬಂಧಿಸಲು ಪ್ಲ್ಯಾನ್‌ ಮಾಡಲಾಗಿದೆ. ಈ ಮೂಲಕ ಓಲೈಕೆ ರಾಜಕಾರಣಕ್ಕೆ ಸರ್ಕಾರ ಮುಂದಾಗಿದ್ಯಾ ಎಂಬ ಪ್ರಶ್ನೆ ಎದ್ದಿದೆ.

    ಜಿಲ್ಲಾಡಳಿತ, ಉಸ್ತುವಾರಿ ಸಚಿವರ ಈ ನಡೆ‌ ಮತ್ತೆ ಅನುಮಾನಕ್ಕೆ ಕಾರಣವಾಗಿದೆ. ಸಭೆಯಲ್ಲಿ ವಸ್ತು ಸ್ಥಿತಿ ಬಯಲಾಗಬಹುದು ಎಂಬ ಭಯ‌ಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲು ಜಿಲ್ಲಾಡಳಿತ ಮುಂದಾಗಿದ್ಯಾ ಎಂಬ ಪ್ರಶ್ನೆ  ಎದ್ದಿದೆ. ಇದನ್ನೂ ಓದಿ: ನಾಗಮಂಗಲ ಕೋಮು ಗಲಭೆ ತಡೆಯೋ ಅವಕಾಶವಿದ್ರೂ ವಿಫಲವಾದ ಇಲಾಖೆಗಳು

     

    ಯಾಕೆ ನಿರ್ಬಂಧ?
    ಗುರುವಾರ ನಾಗಮಂಗಲಕ್ಕೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ (Chaluvaraya Swamy) ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬಂಧಿತರ ಕುಟುಂಬಸ್ಥರು ಚಲುವರಾಯಸ್ವಾಮಿಗೆ ಫುಲ್ ಕ್ಲಾಸ್‌ ತೆಗೆದುಕೊಂಡಿದ್ದರು.‌ ಕಲ್ಲು, ಪೆಟ್ರೋಲ್ ಬಾಂಬ್ ಎಸೆದವರನ್ನು ಬಂಧಿಸಿಲ್ಲ‌‌. ತಪ್ಪನ್ನೇ ಮಾಡದ ಅಮಾಯಕರನ್ನು ಯಾಕೆ ಬಂಧಿಸಿದ್ದೀರಿ? ಇಷ್ಟೊಂದು ಒಲೈಕೆ ರಾಜಕರಾಣ ಯಾಕೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಜನರು ಪ್ರಶ್ನೆಗಳಿಗೆ ಉತ್ತರ ನೀಡಲು ವಿಫಲರಾದ ಚಲುವರಾಯಸ್ವಾಮಿಗೆ ಭಾರೀ ಮುಜುಗರವಾಗಿತ್ತು.

    ಇಂದು ನಡೆಯುವ ಸಭೆಯಲ್ಲಿ ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಜನರು ಮತ್ತೆ ತರಾಟೆ ತೆಗೆದುಕೊಳ್ಳುವ ಸಾಧ್ಯತೆ‌ಯಿದೆ. ಬಂಧಿತ ಕುಟುಂಬಸ್ಥರು ಸಹ ಸಚಿವರ ವಿರುದ್ದ ಆಕ್ರೋಶ ವ್ಯಕ್ತಪಡಿಸುವುದು ಖಚಿತ. ಆ ಮುಜುಗರ ತಪ್ಪಿಸಿಕೊಳ್ಳಲು ಮಾಧ್ಯಮಗಳನ್ನ ಸಭೆಯಿಂದ ದೂರ ಇಡಲು ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

     

  • ನಾಗಮಂಗಲ ಗಲಭೆ | ಎಲ್ಲರನ್ನೂ A1 ಮಾಡಲು ಅಗುತ್ತಾ?: ಬಿಜೆಪಿ ನಾಯಕರಿಗೆ ಚಲುವರಾಯಸ್ವಾಮಿ ತಿರುಗೇಟು

    ನಾಗಮಂಗಲ ಗಲಭೆ | ಎಲ್ಲರನ್ನೂ A1 ಮಾಡಲು ಅಗುತ್ತಾ?: ಬಿಜೆಪಿ ನಾಯಕರಿಗೆ ಚಲುವರಾಯಸ್ವಾಮಿ ತಿರುಗೇಟು

    ಬೆಂಗಳೂರು: ಎಲ್ಲರನ್ನೂ ಎ1 ಮಾಡಲು ಆಗುತ್ತಾ ಎಂದು ಕೃಷಿ ಸಚಿವ, ನಾಗಮಂಗಲ ಶಾಸಕ ಚಲುವರಾಯಸ್ವಾಮಿ (Chaluvaraya Swamy) ಪ್ರಶ್ನಿಸಿ ಬಿಜೆಪಿ (BJP) ನಾಯಕರಿಗೆ ತಿರುಗೇಟು ನೀಡಿದ್ದಾರೆ.

    ನಾಗಮಂಗಲ ಗಲಭೆ (Nagamangala Violence) ಬಗ್ಗೆ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಗಣೇಶನನ್ನು ಕೂರಿಸಿದವರನ್ನು ಎ1 ಮಾಡಿದ್ದಾರೆ. ಎ1 ಆರೋಪಿಯನ್ನಾಗಿ ಒಬ್ಬರನ್ನೇ ಮಾಡಲು ಆಗುವುದು ಎಂದು ತಿಳಿಸಿದರು. ಇದನ್ನೂ ಓದಿ: ನಾಗಮಂಗಲ ಗಲಭೆ| ಕೇಸ್‌ನಲ್ಲಿ ಹಿಂದೂಗಳು ಟಾರ್ಗೆಟ್ – ಬಿಜೆಪಿ ಆಕ್ರೋಶ

     

    ಸಿಸಿಟಿವಿ ವಿಡಿಯೋ ಗಮನಿಸಿ ಪೊಲೀಸರು ಎರಡು ಕೋಮಿನವರನ್ನ ಬಂಧಿಸಿದ್ದಾರೆ. ಒಂದು ವೇಳೆ ಬಂಧನಕ್ಕೆ ಒಳಗಾದವರು ಗಲಭೆಯಲ್ಲಿ ಭಾಗಿಯಾಗದೇ ಇದ್ದರೆ ಚಾರ್ಚ್ ಶೀಟ್ ಹಾಕುವಾಗ ಅವರ ಹೆಸರನ್ನ ತೆಗೆಯಬೇಕು ಎಂದು ಆದೇಶ ಮಾಡಿದ್ದೇವೆ ಎಂದರು.

    ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, ಅವರಿಗೆ ಸಂಸದರಾಗಿ ಏನು ಕೆಲಸ ಮಾಡಬೇಕು ಅದನ್ನು ಮಾಡುವುದಕ್ಕೆ ಹೇಳಿ. ಸುಮ್ನೆ ಏನೇನೋ ಮಾತನಾಡುತ್ತಾರೆ. ಅವರ ಹೇಳಿಕೆಗಳಿಗೆ ನಾನು ಉತ್ತರಿಸಬಾರದು ಅಂತಾ ನಿರ್ಧಾರ ಮಾಡಿದ್ದೇನೆ ಎಂದು ಹೇಳಿದರು.

     

  • ತಪ್ಪಿತಸ್ಥರ ವಿರುದ್ಧ ಕ್ರಮ, ಬಂಧನ ಆಗುತ್ತೆ: ಗಣೇಶ ವಿಸರ್ಜನೆ ಗಲಾಟೆ ಬಗ್ಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

    ತಪ್ಪಿತಸ್ಥರ ವಿರುದ್ಧ ಕ್ರಮ, ಬಂಧನ ಆಗುತ್ತೆ: ಗಣೇಶ ವಿಸರ್ಜನೆ ಗಲಾಟೆ ಬಗ್ಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

    ಮಂಡ್ಯ: ತಪ್ಪು ಮಾಡಿರುವವರ ವಿರುದ್ಧ ಕ್ರಮ ಆಗುತ್ತದೆ. ಪೊಲೀಸರು ಪ್ರಕರಣ ತನಿಖೆ ನಡೆಸಿ ಆರೋಪಿಗಳ ಬಂಧನ ಮಾಡ್ತಾರೆ ಎಂದು ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದರು.

    ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಆದ ಗಲಾಟ ಕುರಿತು ಮಾತನಾಡಿ, ಪರಿಸ್ಥಿತಿ ಈ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದೆ. 144 ಸೆಕ್ಷನ್‌ ಕೂಡ ಜಾರಿಯಲ್ಲಿದೆ. ಯಾವುದೇ ಆಸ್ತಿ ನಷ್ಟ, ಪ್ರಾಣಹಾನಿಯಾಗದಂತೆ ನೋಡಿಕೊಳ್ಳಿ. ಪರಿಸ್ಥಿತಿ ನಿಯಂತ್ರಣಕ್ಕೆ ಸೂಚನೆ ಕೊಟ್ಟಿದ್ದೇವೆ. ಆ ಕೆಲಸ ಆಗ್ತಿದೆ ಎಂದು ಸಚಿವರು ತಿಳಿಸಿದರು.

    ನಾನು 40 ವರ್ಷಗಳಿಂದ ಶಾಸಕನಾಗಿದ್ದೇನೆ. ಹಿಂದೆ ಬೇರೆ ಕಾರಣಕ್ಕೆ ಹಿಂದೂ-ಮುಸ್ಲಿಂ ಗಲಾಟೆ ಆಗಿತ್ತು. ಆದರೆ ಈ ರೀತಿ ಘಟನೆ ಆಗಿರಲಿಲ್ಲ. ಬಹಳ ವರ್ಷಗಳಿಂದ ಹೀಗಾಗಿರಲಿಲ್ಲ. ದುರದೃಷ್ಟವಶಾತ್‌ ಈ ಘಟನೆ ಆಗಿದೆ. ಪ್ರಕರಣ ನಿಯಂತ್ರಣಕ್ಕೆ ತರುವ ಕೆಲಸ ಆಗುತ್ತಿದೆ. ಯಾವುದೇ ಅನಾಹುತ ಆಗದಂತೆ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಕ್ರಮವಹಿಸಲಿದೆ ಎಂದರು.

  • ಚಲುವರಾಯಸ್ವಾಮಿ ನನಗೆ ಎದುರಾಳಿಯೇ? ಆತನ ಬಗ್ಗೆ ಚರ್ಚೆ ಅಪ್ರಸ್ತುತ: ಹೆಚ್‌ಡಿಕೆ

    ಚಲುವರಾಯಸ್ವಾಮಿ ನನಗೆ ಎದುರಾಳಿಯೇ? ಆತನ ಬಗ್ಗೆ ಚರ್ಚೆ ಅಪ್ರಸ್ತುತ: ಹೆಚ್‌ಡಿಕೆ

    ರಾಮನಗರ: ಸಚಿವ ಚಲುವರಾಯಸ್ವಾಮಿ (Chaluvaraya Swamy) ನನಗೇನು ಎದುರಾಳಿನಾ, ಅವರ ಬಗ್ಗೆ ಚರ್ಚೆ ಅಪ್ರಸ್ತುತ ಎಂದು ಮಾಜಿ ಸಿಎಂ ಕುಮಾರಸ್ವಾಮಿ (H.D. Kumaraswamy) ತಿರುಗೇಟು ನೀಡಿದ್ದಾರೆ.

    ಚಲುವರಾಯಸ್ವಾಮಿ ಸ್ಪರ್ಧೆಯ ಕುರಿತು ಬಿಡದಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನ್ನ ಸೋಲಿನ ಬಗ್ಗೆ ಮಾತನಾಡುವವರು ಇವರೇಕೆ ಸೋತಿದ್ರು. ಮಂತ್ರಿ ಆಗಿದ್ದರೂ ಕೂಡಾ ಚಲುವರಾಯಸ್ವಾಮಿ ಸೋತಿದ್ರಲ್ಲ. ಈಗ ದೇವೇಗೌಡರ ಮುಖ ನೋಡಿಕೊಂಡು ಸುಮ್ಮನಿದ್ದೀನಿ ಅಂದ್ರಲ್ಲಾ? ಇಲ್ಲ ಅಂದರೆ ಏನು ಮಾಡ್ತಿದ್ರಿ. ನಿಮ್ಮ ಮಾತಿನ ಅರ್ಥ ಏನು. ನಾನು ಅವರನ್ನು ತುಂಬಾ ಹತ್ತಿರದಿಂದ ನೋಡಿದ್ದೀನಿ. ಅವರು ನನಗೇನು ಎದುರಾಳಿನಾ? ಅವರ ಬಗ್ಗೆ ಚರ್ಚೆ ಅಪ್ರಸ್ತುತ. ಅದೇನು ಮಾಡ್ತಿರೋ ಮಾಡಿ ನೋಡೊಣ ಎಂದು ಚಲುವರಾಯಸ್ವಾಮಿಗೆ ಹೆಚ್‌ಡಿಕೆ ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ರಾಷ್ಟ್ರ ವಿಭಜನೆಯ ಮಾತೇ ಅಪರಾಧ – ಸುರೇಶ್ ದೇಶದ ಕ್ಷಮೆ ಕೋರಲಿ ಸುನೀಲ್‍ಕುಮಾರ್

    ರಾಮಕೃಷ್ಣ ಹೆಗಡೆ ಮತ್ತು ಜೆ.ಹೆಚ್.ಪಟೇಲರನ್ನು ಹೊರಹಾಕಿದ್ದು ಹೆಚ್‌ಡಿಕೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಅವರನ್ನ ಹೊರಹಾಕಿದ್ನಾ? ರಾಮಕೃಷ್ಣ ಹೆಗಡೆಯವರು ನಮ್ಮ ಪಕ್ಷದಲ್ಲಿದಾಗ, ಆಗಿನ್ನೂ ನಾನು ಚಿಕ್ಕ ಹುಡುಗ. ಚಲುವರಾಯಸ್ವಾಮಿ ಅವರಿಗೆ ಇಷ್ಟೂ ಗೊತ್ತಿಲ್ವಾ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಹುಲ್ ಭಾರತ್ ಜೋಡೋ ಅಂತಾರೆ, ಸುರೇಶ್ ತೋಡೋ ಅಂತಾರೆ – ಕಾಂಗ್ರೆಸ್‍ಗೆ ಬುದ್ಧಿ ಭ್ರಮಣೆ ಎಂದ ರವಿಕುಮಾರ್

    ಕಾಂಗ್ರೆಸ್‌ನಲ್ಲೂ ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ ಎಂಬ ಕಾಂಗ್ರೆಸ್‌ನ ಮಾಜಿ ಸಚಿವ ಎಂ.ಸಿ.ಶಿವರಾಂ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ 40 ಪರ್ಸೆಂಟ್ ಇತ್ತು. ಕಾಂಗ್ರೆಸ್‌ನಲ್ಲಿ 59 ಪರ್ಸೆಂಟ್ ಇದೆ ಅಂತ ಮಾಜಿ ಸಚಿವರು ಹೇಳಿದ್ದಾರೆ. ಬಿಜೆಪಿಗಿಂತಲೂ ಕಾಂಗ್ರೆಸ್‌ನಲ್ಲಿ ಪರ್ಸೆಂಟ್ ಜಾಸ್ತಿ ಇದೆ ಅಂತ ತಲೆ ಚಚ್ಚಿಕೊಂಡಿದ್ದಾರೆ. ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣನ ನಮ್ಮ ಮಾರ್ಗದರ್ಶರು ಅಂತಿದರು. ಆದರೆ ಅವರೇ ಬಾಣಲಿಯಿಂದ ಬೆಂಕಿಗೆ ಬಿದ್ದಾಹಾಗಾಗಿದೆ ಅಂತ ಹೇಳಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಮುಂದಿನ ಪೀಳಿಗೆ ಬಗ್ಗೆ ಆಲೋಚನೆ ಮಾಡ್ತಾರೆ.. ಅದಕ್ಕೆ ಉಚಿತ ಕೊಡುಗೆ ಕೊಟ್ಟಿಲ್ಲ: ವಿಜಯೇಂದ್ರ

    ಇದನ್ನೆಲ್ಲಾ ಕುಮಾರಸ್ವಾಮಿ ಪ್ರಶ್ನೆ ಮಾಡಿದರೆ ಅವರಿಗೆ ಅಸಹನೆ, ಮೆಂಟಲ್ ಬ್ಯಾಲೆನ್ಸ್ ತಪ್ಪಿದೆ ಅಂತಾರೆ. ಪ್ರತಿನಿತ್ಯ ವರ್ಗಾವಣೆ ಮಾಡೋ ಕೆಲಸವೇ ಆಗಿದೆ. ನಿನ್ನೆ ಸಿದ್ದರಾಮಯ್ಯ ಮೋದಿ ಬಗ್ಗೆ ಕಮೆಂಟ್ ಮಾಡಿದ್ದಾರೆ. ಮೊದಲು ನಿಮ್ಮ ಸ್ಥಿತಿ ನೋಡಿಕೊಳ್ಳಿ ಎಂದು ಬಿಡದಿಯಲ್ಲಿ ಹೆಚ್‌ಡಿಕೆ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:  ಗ್ಯಾರಂಟಿ ರದ್ದು ಹೇಳಿಕೆ; ‘ಕೈ’ ಶಾಸಕನ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್‌ ದೂರು

  • ಬಿಜೆಪಿಯಂತೆ 28 ಸ್ಥಾನವನ್ನೂ ಗೆಲ್ತೀವಿ ಎನ್ನಲ್ಲ, 20 ಕ್ಷೇತ್ರ ಗೆಲ್ಲುವ ಗುರಿ ಇದೆ: ಚಲುವರಾಯಸ್ವಾಮಿ

    ಬಿಜೆಪಿಯಂತೆ 28 ಸ್ಥಾನವನ್ನೂ ಗೆಲ್ತೀವಿ ಎನ್ನಲ್ಲ, 20 ಕ್ಷೇತ್ರ ಗೆಲ್ಲುವ ಗುರಿ ಇದೆ: ಚಲುವರಾಯಸ್ವಾಮಿ

    – ಸಿಎಂ ಮನೆಯಲ್ಲಿ ರಾತ್ರಿ ನಡೆದಿತ್ತು ಡಿನ್ನರ್ ಮೀಟಿಂಗ್

    ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Elections 2024) ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಚುರುಕಾಗಿದೆ. ಚುನಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಮನೆಯಲ್ಲಿ ಸಚಿವರು ಜೊತೆ ಡಿನ್ನರ್ ಮೀಟಿಂಗ್ ನಡೆದಿದೆ. ಈ ಬಗ್ಗೆ ಸಚಿವ ಚಲುವರಾಯಸ್ವಾಮಿ (Chaluvaraya Swamy) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಚುನಾವಣೆ ವಿಚಾರವಾಗಿ ಪಕ್ಷದ ತಂತ್ರಗಳ ಬಗ್ಗೆ ಮಾತನಾಡಲು ಕರೆದಿದ್ದರು ಎಂದಿದ್ದಾರೆ.

    ಪಕ್ಷ ಏನು ಹೇಳುತ್ತೊ ಅದನ್ನು ಉಸ್ತುವಾರಿ ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕು. 28 ಕ್ಷೇತ್ರಗಳನ್ನು ತುಂಬಾ ಗಂಭೀರವಾಗಿ ತೆಗೆದುಕೊಳ್ತೀವಿ. ಬಿಜೆಪಿ ರೀತಿ ನಾವು 28ಕ್ಕೆ 28 ಗೆಲ್ಲುತ್ತೀವಿ ಎಂದು ಹೇಳುವುದಿಲ್ಲ. 20 ಕ್ಷೇತ್ರಗಳಲ್ಲಿ ನಾವು ಗೆಲ್ಲಬೇಕೆಂಬ ಗುರಿ ಇದೆ. 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾತ್ರಿ ರೈಲಿನಲ್ಲಿ ಪ್ರಯಾಣಿಸುವಾಗ ಮೊಬೈಲ್ ಸೌಂಡ್ ಜಾಸ್ತಿ ಮಾಡಿದ್ರೆ, ಜೋರಾಗಿ ಮಾತಾಡಿದ್ರೆ ಬೀಳುತ್ತೆ ಕೇಸ್

    ಚುನಾವಣೆಗೆ ಸಚಿವರ ಸ್ಪರ್ಧೆ ವಿಚಾರ ಚರ್ಚೆಯಾಗಿಲ್ಲ. ರಾಜ್ಯದ ನಾಯಕರು ಹಾಗೂ ಹೈಕಮಾಂಡ್ ಏನು ಹೇಳುತ್ತೊ ಹಾಗೆ ಕೆಲಸ ಮಾಡುತ್ತೇವೆ. ಎಲ್ಲರೂ ಜವಾಬ್ದಾರಿ ತೆಗೆದುಕೊಳ್ಳುವುದಾಗಿ ಒಪ್ಪಿಕೊಂಡಿದ್ದೇವೆ. ಇನ್ನೂ ನಿಗಮಮಂಡಳಿ ವಿಚಾರವಾಗಿ ಯಾವುದೇ ಅಸಮಾಧಾನ ಇಲ್ಲ. ಚುನಾವಣೆ ಕಡೆಗಷ್ಟೇ ನಮ್ಮ ಗಮನ ಇದೆ. ಈ ಬಗ್ಗೆ ಸ್ಥಳೀಯವಾಗಿ ಏನು ಮಾಡಬೇಕು ಎಂದು ಚರ್ಚಿಸುತ್ತೇವೆ. ಅನುಷ್ಠಾನ ಸಮಿತಿ ಬಗ್ಗೆ 4 ಸಾವಿರ ಜನ ನಾಮಿನೇಷನ್ ಮಾಡ್ತಿದ್ದೇವೆ. ಕಾರ್ಯಕರ್ತರಿಗೆ ಏನು ಸ್ಥಾನಮಾನ ಕೊಡ್ಬೇಕು ಅದನ್ನು ನಾವು ಕೊಡುತ್ತೇವೆ ಎಂದಿದ್ದಾರೆ.

    ಮಂಡ್ಯದ ಕೆರಗೋಡು ವಿಚಾರವಾಗಿ, ಬಿಜೆಪಿ ಚುನಾವಣೆಗೋಸ್ಕರ ಅಲ್ಲಿ ಭಕ್ತಿ ತೋರಿಸುತ್ತಿದೆ. ನಾವು ಶಾಶ್ವತವಾಗಿ ಭಕ್ತಿ ತೋರಿಸುತ್ತೇವೆ. ನಮ್ಮ ಮಂಡ್ಯ ಜಿಲ್ಲೆಯಲ್ಲಿ ಇದೆಲ್ಲ ನಡೆಯಲ್ಲ. ಮಂಡ್ಯದ ಅಭಿವೃದ್ಧಿಗಷ್ಟೇ ನಾವು ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

    ಸಂಸದೆ ಸುಮಲತಾ ಅವರು, ಕಾಂಗ್ರೆಸ್ ಸೇರ್ಪಡೆ ಆಗ್ತಾರಾ ಎಂಬ ಪತ್ರಕರ್ತರ ಪ್ರಶ್ನೆಗೆ, ಬಿಜೆಪಿ ಟಿಕೆಟ್ ಕೇಳೋಕೆ ಹೋಗ್ತೀವಿ ಎಂದು ಹೇಳಿದ್ದರು. ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಅವರ ಬಗ್ಗೆ ಗೌರವ ಇದೆ ಎಂದಿದ್ದಾರೆ. ಇದನ್ನೂ ಓದಿ: ಮಕ್ಕಳು ಬೈಕ್‌ ಓಡಿಸಿದ್ದಕ್ಕೆ ಪೋಷಕರಿಗೆ ಬಿತ್ತು ದಂಡ; 23 ಕಾಲೇಜುಗಳ 800 ವಾಹನಗಳಿಗೆ ಫೈನ್‌

  • ಕುಮಾರಸ್ವಾಮಿ-ಅಶೋಕ್‌ರಿಂದ ಮಂಡ್ಯದಲ್ಲಿ ಬೆಂಕಿ ಹಚ್ಚಲು ಸಾಧ್ಯವಿಲ್ಲ: ಚೆಲುವರಾಯಸ್ವಾಮಿ

    ಕುಮಾರಸ್ವಾಮಿ-ಅಶೋಕ್‌ರಿಂದ ಮಂಡ್ಯದಲ್ಲಿ ಬೆಂಕಿ ಹಚ್ಚಲು ಸಾಧ್ಯವಿಲ್ಲ: ಚೆಲುವರಾಯಸ್ವಾಮಿ

    – ಸುಮಲತಾ ಬಿಜೆಪಿಯಿಂದ ಟಿಕೆಟ್‌ ಪಡೆಯೋಕೆ ಪರವಾಗಿ ಮಾತಾಡ್ತಿದ್ದಾರೆ ಎಂದ ಸಚಿವ

    ಬೆಂಗಳೂರು: ಬಿಜೆಪಿ-ಜೆಡಿಎಸ್‌ನವರು ಮಂಡ್ಯಕ್ಕೆ ಬೆಂಕಿ ಹಚ್ಚೋ ಪ್ರಯತ್ನ ಮಾಡ್ತಿದ್ದಾರೆ. ಆದರೆ ಮಂಡ್ಯದಲ್ಲಿ ಬೆಂಕಿ ಹಚ್ಚೋಕೆ ಸಾಧ್ಯವಿಲ್ಲ ಅಂತ ಸಚಿವ ಚೆಲುವರಾಯಸ್ವಾಮಿ (Chaluvaraya Swamy) ತಿರುಗೇಟು ನೀಡಿದ್ದಾರೆ.

    ಕೆರಗೋಡು ಹನುಮಧ್ವಜ ವಿವಾದ (Hanuman Flag Controversy) ಘಟನೆ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾವು ಹಿಂದೂ ವಿರೋಧಿ ಅಲ್ಲ, ಯಾವುದೇ ಧ್ವಜದ ವಿರೋಧಿಗಳೂ ಅಲ್ಲ. ಪಂಚಾಯತಿಯಲ್ಲಿ ರಾಷ್ಟ್ರ ಧ್ವಜ, ನಾಡ ಧ್ವಜಕ್ಕೆ ಅನುಮತಿ ಕೊಟ್ಟಿದ್ದರು, ಆದ್ರೆ ಬೇರೆ ಧ್ವಜ ಹಾರಿಸಿದ್ದಾರೆ. ಪಂಚಾಯತಿಯಲ್ಲಿ ನಿರ್ಣಯವನ್ನ ವಜಾ ಮಾಡಿದ್ದಾರೆ. ಜ.26ರಂದು ರಾಷ್ಟ್ರಧ್ವಜ ಹಾರಿಸಿ ಸಂಜೆ ಇಳಿಸಿದ್ದಾರೆ. ಮಂಡ್ಯದಲ್ಲಿ ಅನೇಕ ಜನರು ಶಾಂತಿ ಹಾಳುಮಾಡೋಕೆ ಬರೋದು ಬೇಡ, ಮಂಡ್ಯದ ನೆಮ್ಮದಿ ಹಾಳು ಮಾಡಬೇಡಿ ಅಂತ ಕೇಳಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಲು ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

    ಬಿಜೆಪಿ-ಜೆಡಿಎಸ್ ಅವರು ಜನರನ್ನ ಪ್ರವೋಕ್ ಮಾಡ್ತಿದ್ದಾರೆ. ಕುಮಾರಸ್ವಾಮಿ (HD Kumaraswamy) ಮತ್ತು ಅಶೋಕ್ (R Ashok) ತೀಟೆ ಮಾಡೋಕೆ ಹೋಗ್ತಿದ್ದಾರೆ. ಮಂಡ್ಯದಲ್ಲಿ ಇದು ನಡೆಯಲ್ಲ. ಬಂದ್ ಬೇಡ ಅಂತ ಜನರೇ ಮನವಿ ಮಾಡಿದ್ದಾರೆ. ಮಂಡ್ಯಕ್ಕೆ ಬೆಂಕಿ ಹಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ ಅಂತ ಕುಮಾರಸ್ವಾಮಿ, ಅಶೋಕ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೆರಗೋಡು ಹನುಮ ಧ್ವಜ ತೆರವಿಗೆ ಆಕ್ರೋಶ- ಮಂಡ್ಯದಲ್ಲಿ ಕಲ್ಲು ತೂರಾಟ, ಲಾಠಿಚಾರ್ಜ್

    ತಾಲೂಕು ಪಂಚಾಯ್ತಿ ಇಒ, ದಾಖಲಾತಿ ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ. ಗೊಂದಲಗಳು ಆದಾಗ EO ದಾಖಲಾತಿ ತೆಗೆದುಕೊಂಡು ಹೋಗಿದ್ದಾರೆ. ಅವರು ತಮ್ಮ ಕಚೇರಿಗೇ ದಾಖಲಾತಿ ಪುಸ್ತಕ ತೆಗೆದುಕೊಂಡು ಹೋಗಿದ್ದಾರೆ, ಮನೆಗೆ ತೆಗೆದುಕೊಂಡು ಹೋಗಿಲ್ಲ ಎಂದು ಸಿಟ್ಟಾಗಿ ಹಾರಿಕೆ ಉತ್ತರ ನೀಡಿದ್ದಾರೆ. ಇದನ್ನೂ ಓದಿ: ಜಾತಿ, ಧರ್ಮಗಳ ನಡುವೆ ಕಿತ್ತಾಟ ನಡೆಯುವಂತಹ ವಾತಾವರಣ ಸೃಷ್ಟಿಸಿರೋದು ಬೇಸರ: ಸುಮಲತಾ

    ಕೆರಗೋಡು ಘಟನೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಗೆ ಆಗ್ತಿದೆ ಎಂಬ ಸಂಸದೆ ಸುಮಲತಾರ ಹೇಳಿಕೆ ವಿಚಾರಕ್ಕೆ ‌ಪ್ರತಿಕ್ರಿಯಿಸಿ, ಸುಮಲತಾ ಅವರು ಮಂಡ್ಯ ಜನರಿಗೆ ಸಲಹೆ ಮಾಡೋದು ಬೇಡ. ಬಿಜೆಪಿಯಿಂದ ಟಿಕೆಟ್ ಪಡೆಯೋಕೆ ಬಿಜೆಪಿ ಪರವಾಗಿ ಮಾತಾಡ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಕೆರಗೋಡಿನಲ್ಲಿ ತಾರಕಕ್ಕೇರಿದ ಹನುಮ ಧ್ವಜ ಸಂಘರ್ಷ- ಫೆ.9ಕ್ಕೆ ಮಂಡ್ಯ ಬಂದ್‍ಗೆ ಕರೆ

    ದೇವೇಗೌಡರಿಂದ ಬೆಳೆದು ದೇವೇಗೌಡರ ವಿರುದ್ಧ ಮಾತಾಡೋದು ಸರಿಯಲ್ಲ ಎಂಬ ಪುಟ್ಟರಾಜು ಹೇಳಿಕೆಗೆ ಉತ್ತರಿಸಿದ ಸಚಿವರು, ನನ್ನ ಇತಿಹಾಸವನ್ನ ಅವನು ಓದೋಕೆ ಹೇಳಿ ಮೊದಲು. ನಾನು ಹೇಗೆ ಬಂದೆ ಅಂತ ಅವನು ತಿಳಿದುಕೊಳ್ಳಲಿ. ಮಂಡ್ಯಕ್ಕೆ ದೇವೇಗೌಡರ ಕೊಡುಗೆ ಏನು? ದೇವೇಗೌಡರಿಗೆ ಮಂಡ್ಯದ ಕೊಡುಗೆ ಏನು? ಅಂತ ತಿಳಿದುಕೊಳ್ಳಲಿ ಎಂದು ಪುಟ್ಟರಾಜು ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

  • ನನ್ನ ಕುಟುಂಬದ ಆಸ್ತಿ ತನಿಖೆ ಮಾಡಿಸಲಿ: ಚೆಲುವರಾಯಸ್ವಾಮಿಗೆ ಕುಮಾರಸ್ವಾಮಿ ಸವಾಲ್

    ನನ್ನ ಕುಟುಂಬದ ಆಸ್ತಿ ತನಿಖೆ ಮಾಡಿಸಲಿ: ಚೆಲುವರಾಯಸ್ವಾಮಿಗೆ ಕುಮಾರಸ್ವಾಮಿ ಸವಾಲ್

    ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಇದೆ. ನನ್ನ ಆಸ್ತಿಯನ್ನು (Property) ತನಿಖೆ (Investigation) ಮಾಡಿಸಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಹೆಸರು ಹೇಳದೆ ಪರೋಕ್ಷವಾಗಿ ಸಚಿವ ಚೆಲುವರಾಯಸ್ವಾಮಿಗೆ (N. Chaluvaraya Swamy) ಸವಾಲ್ ಹಾಕಿದ್ದಾರೆ.

    ಕುಮಾರಸ್ವಾಮಿ ಆಸ್ತಿ ತನಿಖೆ ಮಾಡಿಸಿ ಎಂಬ ಚೆಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ನನ್ನ ಸ್ನೇಹಿತರೊಬ್ಬರು, ನನ್ನ ಆಸ್ತಿ ತನಿಖೆ ಮಾಡುವ ಭಯಕ್ಕೆ ಬಿಜೆಪಿ ಜೊತೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಈಗ ತನಿಖೆ ಮಾಡಿ ಎಂದು ಹೇಳುತ್ತಿದ್ದಾರೆ. ನಾನು ಈಗಲೂ ಸಿದ್ಧ. ನನ್ನ ಆಸ್ತಿ ತನಿಖೆ ಮಾಡಿಸಿ. ನಿಮ್ಮದೆ ಸರ್ಕಾರ ಇದೆ. ಸಿಎಂಗೆ ಹೇಳಿ ಯಾವ ತನಿಖೆ ಬೇಕೋ ಮಾಡಿಸಿ ಎಂದರು. ಇದನ್ನೂ ಓದಿ: ಐದು ಹೆಸರು ಎಂದರೆ ವರ್ಗ ಏನಯ್ಯ – ಮಗನ ವೈರಲ್ ವೀಡಿಯೋಗೆ ಸಿಎಂ ಪ್ರತಿಕ್ರಿಯೆ

    ನನ್ನ ಆಸ್ತಿ ತನಿಖೆ ಆಗಲಿ. ಅದರ ಜೊತೆ ಮಾಕಳಿ ಗ್ರಾಮದ ಮೂರೂವರೆ ಎಕರೆ ಕೆರೆ ಜಾಗ ಸರ್ವೆ ನಂಬರ್ 13 ಕೆರೆನೇ ಮಾಯ ಆಗಿದೆ. ಆ ಕೆರೆ ಜಾಗ ನಾನು ನುಂಗಿ ಹಾಕಿದ್ದೀನಾ? ಆ ಕೆರೆ ನುಂಗಿ ಹಾಕಿದ್ದು ಯಾರು? ಇದು ತನಿಖೆ ಆಗಲಿ ಅಂತ ಚೆಲುವರಾಯಸ್ವಾಮಿ ವಿರುದ್ಧ ಕುಮಾರಸ್ವಾಮಿ ಬಾಂಬ್ ಸಿಡಿಸಿದರು. ಇದನ್ನೂ ಓದಿ: ಮಾಜಿ ಎಂಎಲ್‌ಎ ರಾಜಕೀಯವಾಗಿ ಭಾಗಿಯಾಗೋದು ಅಪರಾಧವಲ್ಲ: ಯತೀಂದ್ರ ಪರ ಚಲುವರಾಯಸ್ವಾಮಿ ಬ್ಯಾಟಿಂಗ್

    1962ರಲ್ಲಿ ದೇವೇಗೌಡರು ರಾಜಕೀಯಕ್ಕೆ ಬಂದರು. ಒಬ್ಬರು ಕಾರ್ಪೋರೇಟರ್, ಜಿಲ್ಲಾ ಪಂಚಾಯತಿ ಸದಸ್ಯ ಮಾಡಿರೋ ಹಣ ನಾನು ಮಾಡಿಲ್ಲ. ನಾನು ಸಿನಿಮಾದಲ್ಲಿ ದುಡಿದು 45 ಎಕರೆ ಜಾಗ ತೆಗೆದುಕೊಂಡಿದ್ದೇನೆ. ನನ್ನ ಜೊತೆ 24 ಗಂಟೆ ಇದ್ದವರೇ ಇವರು. ಬಲಗೈನಲ್ಲಿ ತೆಗೆದುಕೊಂಡು ಎಡಗೈನಲ್ಲಿ ದಾನ ಮಾಡಿದ್ದೇನೆ. ರಾಜಕೀಯಕ್ಕೆ ನಾನು ಹಣ ಮಾಡಿಲ್ಲ. ಪಕ್ಷ ಉಳಿಸೋಕೆ ನಾನು ಮಾಡಿದ್ದೇನೆ. ನಾನು ಇವರ ರೀತಿ ದುಡ್ಡು ಮಾಡಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಡಿಕೆಶಿಯನ್ನು ಸಿಎಂ ಮಾಡ್ತೀವಿ ಅಂತ ಕುಮಾರಸ್ವಾಮಿ ಹೇಳಿದ್ದರೆ ನಾವು ಖಂಡಿತಾ ಬರುತ್ತಿದ್ದೆವು: ಎಸ್‌ಟಿಎಸ್

    ನಾನು 100% ಶುದ್ಧ ಇಲ್ಲ. ಇವತ್ತಿನ ರಾಜಕೀಯ ಅಧಿಕಾರ ದುಡ್ಡು ಇಲ್ಲದೆ ನಡೆಯಲ್ಲ. ಇದನ್ನು ಓಪನ್ ಆಗಿ ಹೇಳಿದ್ದೇನೆ. ಆದರೆ ಇವರ ರೀತಿ ಸರ್ಕಾರದ ಆದೇಶ ಮಾರಾಟಕ್ಕೆ ಇಟ್ಟಿಲ್ಲ. ಚುನಾವಣೆ ಬಂದಾಗ ನಾನು ಭಿಕ್ಷೆ ಬೇಡಿದ್ದೇನೆ. ಆದರೆ ನಾನು ಅಧಿಕಾರ ದುರ್ಬಳಕೆ ಮಾಡಿಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಲಂಚಕ್ಕೆ ಶಾಸಕರ ಪ್ರೋತ್ಸಾಹ? – ಶರಣು ಸಲಗರ್ ಆಡಿಯೋ ವೈರಲ್

  • ಮಾಜಿ ಎಂಎಲ್‌ಎ ರಾಜಕೀಯವಾಗಿ ಭಾಗಿಯಾಗೋದು ಅಪರಾಧವಲ್ಲ: ಯತೀಂದ್ರ ಪರ ಚಲುವರಾಯಸ್ವಾಮಿ ಬ್ಯಾಟಿಂಗ್

    ಮಾಜಿ ಎಂಎಲ್‌ಎ ರಾಜಕೀಯವಾಗಿ ಭಾಗಿಯಾಗೋದು ಅಪರಾಧವಲ್ಲ: ಯತೀಂದ್ರ ಪರ ಚಲುವರಾಯಸ್ವಾಮಿ ಬ್ಯಾಟಿಂಗ್

    ಮಂಡ್ಯ: ಒಬ್ಬ ಮಾಜಿ ಎಂಎಲ್‌ಎ ರಾಜಕೀಯವಾಗಿ ಭಾಗಿಯಾಗೋದು ಹಾಗೂ ಸಾರ್ವಜನಿಕ ಸೇವೆಯಲ್ಲಿ ಇರೋದು ಅಪರಾಧವಲ್ಲ ಎನ್ನುವ ಮೂಲಕ ಸಚಿವ ಚಲುವರಾಯಸ್ವಾಮಿ (Chaluvaraya Swamy) ಯತೀಂದ್ರ (Yathindra Siddaramaiah) ಪರ ಬ್ಯಾಟಿಂಗ್ ಮಾಡಿದ್ದಾರೆ.

    ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಬೇರೆ ಅವರ ಕುಟುಂಬದಲ್ಲಿ ರಾಜಕೀಯ ಮಾಡುವಾಗ ಓಡಾಡುತ್ತಾ ಇರಲಿಲ್ವಾ? ಯತೀಂದ್ರ ಒಬ್ಬರು ಮಾಜಿ ಎಂಎಲ್‌ಎ, ಖಾಲಿ ಮನುಷ್ಯ ಅಲ್ಲ. ಸಿದ್ದರಾಮಯ್ಯ ಅವರು ವರುಣಾದಲ್ಲಿ ನಿಂತ ಕಾರಣ ಅವರು ನಿಲ್ಲಲು ಆಗಲಿಲ್ಲ. ಮೈಸೂರು ಜಿಲ್ಲೆಯಲ್ಲಿ, ಪಕ್ಷದಲ್ಲಿ ಯತೀಂದ್ರ ಪ್ರಮುಖವಾದ ಲೀಡರ್. ಮಾಜಿ ಎಂಎಲ್‌ಎಗಳು ಕೆಲಸ ಮಾಡೋದನ್ನು ತಪ್ಪು ಎನ್ನೋದಕ್ಕೆ ಆಗುತ್ತಾ? ಇಂತವರು ಲಿಸ್ಟ್ ಆಗಬೇಕು ಎನ್ನುವ ನೇಚರ್ ಯತೀಂದ್ರ ಅವರದಲ್ಲ ಎಂದರು.

    ವೀಡಿಯೋದಲ್ಲಿ ಯಾವ ವಿಚಾರ ಹೇಳಿದ್ರೋ ಏನೋ ಗೊತ್ತಿಲ್ಲ. ಯಾರು ಆ ವೀಡಿಯೋ ಕಟ್ ಆಂಡ್ ಪೇಸ್ಟ್ ಮಾಡಿದ್ರೋ ಗೊತ್ತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಕೆಲವರು ಕಟ್ ಆಂಡ್ ಪೇಸ್ಟ್ ಮಾಡುತ್ತಾರೆ. ಮಾತಾಡಿದ ರೀತಿ ಬೇರೆ ಇರುತ್ತೆ, ತೋರಿಸೋದು ಬೇರೆ ಇರುತ್ತೆ. ಯತೀಂದ್ರ ಒಬ್ಬರು ಒಳ್ಳೆಯ ವ್ಯಕ್ತಿ ಎಂದು ಹೇಳಿದರು. ಇದನ್ನೂ ಓದಿ: ಅಪ್ಪ-ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ

    ತಂದೆಯ ಬಳಿ ಯತೀಂದ್ರ ಆ ರೀತಿ ಮಾತಾಡೋದು ಎಲ್ಲಿಯೂ ನಾನು ನೋಡಿಲ್ಲ. ರಾಜಕೀಯವಾಗಿ ಭಾಗಿಯಾಗೋದು, ಸಾರ್ವಜನಿಕ ಸೇವೆಯಲ್ಲಿ ಇರೋದು ಅಪರಾಧವಲ್ಲ. ವರುಣಾ ಅಲ್ಲ ಇಡೀ ರಾಜ್ಯದಲ್ಲಿ ಕೆಲಸ ಮಾಡಲಿ ಬಿಡಿ, ಅದ್ರಲ್ಲಿ ತಪ್ಪೇನಿದೆ? ನಮ್ಮ ಕಾಂಗ್ರೆಸ್ ಮುಖಂಡರು ಕೆಲ ಸಮಸ್ಯೆ ಗಮನಕ್ಕೆ ತಂದರೆ ತಪ್ಪೇನಿದೆ? ನಮ್ಮಲ್ಲೂ ಕೆಲ ಕಡೆ ಪಿಡಿಒ ಸರಿ ಇಲ್ಲ, ಬೇರೆ ಹಾಕಿ ಎನ್ನುತ್ತಾರೆ. ಅದನ್ನು ನಾವು ತಪ್ಪು ಎನ್ನೋದಕ್ಕೆ ಆಗುತ್ತಾ? ಸಲಹೆ ಕೊಡುವುದರಲ್ಲಿ ತಪ್ಪೇನಿಲ್ಲ ಎನ್ನುವ ಮೂಲಕ ಯತೀಂದ್ರ ಸಿದ್ದರಾಮಯ್ಯರನ್ನು ಸಚಿವ ಚಲುವರಾಯಸ್ವಾಮಿ ಸಮರ್ಥನೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸಿಎಂ ಪುತ್ರನ ಎಡವಟ್ಟು – ಯತೀಂದ್ರ ಹೇಳಿದ ಮಹದೇವ್ ಯಾರು?

  • ಹೆಚ್‌ಡಿಕೆ ಅಧಿಕಾರದಲ್ಲಿದ್ದಾಗ ಏನೂ ಮಾಡಿಲ್ಲ, ಈಗ ಫ್ರೀಯಾಗಿದ್ದರೆ ಯಾತ್ರೆ ಮಾಡಲಿ: ಚಲುವರಾಯಸ್ವಾಮಿ ಲೇವಡಿ

    ಹೆಚ್‌ಡಿಕೆ ಅಧಿಕಾರದಲ್ಲಿದ್ದಾಗ ಏನೂ ಮಾಡಿಲ್ಲ, ಈಗ ಫ್ರೀಯಾಗಿದ್ದರೆ ಯಾತ್ರೆ ಮಾಡಲಿ: ಚಲುವರಾಯಸ್ವಾಮಿ ಲೇವಡಿ

    ರಾಯಚೂರು: ಪಾಪ ಹೆಚ್‌ಡಿ ಕುಮಾರಸ್ವಾಮಿ (HD Kumaswamy) ಅವರು ಬರಗಾಲ ಹಿನ್ನೆಲೆ ಯಾತ್ರೆ ಮಾಡಲೇಬೇಕು. ಅವರು ಅಧಿಕಾರದಲ್ಲಿದ್ದಾಗ ಏನೂ ಮಾಡಲು ಆಗಲಿಲ್ಲ. ಲೋಕಸಭಾ ಚುನಾವಣೆ ಸಮಯದಲ್ಲಿ ಯಜಮಾನ್ರು ಫ್ರೀಯಾಗಿದ್ದಾರಲ್ಲಾ, ಸುತ್ತಾಡಲಿ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ (Chaluvaraya Swamy) ಲೇವಡಿ ಮಾಡಿದ್ದಾರೆ.

    ರಾಯಚೂರಿನಲ್ಲಿ (Raichur) ಮಾತನಾಡಿದ ಚೆಲುವರಾಯಸ್ವಾಮಿ, ಹೆಚ್‌ಡಿಕೆ ಸಿಎಂ ಆಗಿದ್ದಾಗ ಕೋಆಪರೇಟಿವ್‌ನಲ್ಲಿ ಸಾಲ ಮನ್ನಾ ಎಂದು ಹಲವಾರು ಕಂಡೀಷನ್ ಹಾಕಿದ್ರು. ಹಣಕಾಸು ಇಲಾಖೆಯಿಂದ ಒಂದು ರೂಪಾಯಿ ಬಿಡುಗಡೆ ಆಗಲಿಲ್ಲ. ಬೊಮ್ಮಾಯಿ ಬಂದಾಗ ಏನೋ ಸ್ವಲ್ಪ ಮಾಡಿದ್ದಾರೆ ಎಂದು ಹೇಳಿದರು.

    ರೈತರು ಯಾರು ಸಾಲ ತಗೊಳಂಗಿಲ್ಲಾ ಅವರೆಲ್ಲಾ ಸುಸ್ತಿಯಲ್ಲಿದ್ದಾರೆ. ರೈತರ ಸಮಸ್ಯೆಗಳೆಲ್ಲಾ ಹೆಚ್‌ಡಿಕೆಗೆ ಗೊತ್ತಿದೆ. ಲೋಕಸಭಾ ಚುನಾವಣೆ ಬಂದಿದೆ, ಓಡಾಡಲಿ. ಅವರು ಒಳ್ಳೆಯ ಸಲಹೆಗಳನ್ನು ಕೊಟ್ಟರೆ ತೆಗೆದುಕೊಳ್ಳೋಣ. ಹಿಂದೆ 2 ಬಾರಿ ಅಧಿಕಾರದಲ್ಲಿದ್ದಾಗ ಯಜಮಾನ್ರು ಏನು ಮಾಡಿದ್ದಾರೆ ಅನ್ನೋದನ್ನು ನೋಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಅಧಿಕಾರಿ ಹತ್ಯೆಗೆ ಸರ್ಕಾರದ ವೈಫಲ್ಯವೇ ಕಾರಣ: ಹೆಚ್‌ಡಿಕೆ

    ಸಿಎಂ ಕುರ್ಚಿ ವಿಚಾರದ ಬಗ್ಗೆ ಯಾರು ಯಾವಾಗ ಏನು ಅಂತ ನಿರ್ಧಾರ ಮಾಡೋದಕ್ಕೆ ಕಾಂಗ್ರೆಸ್ ಪಕ್ಷವಿದೆ. ಕುಮಾರಸ್ವಾಮಿಯವರಿಗೆ ಚಿಂತೆ ಬೇಡ. ಹೆಚ್‌ಡಿಕೆ ಹೇಳಿಕೆಗೆ ಕಾಂಗ್ರೆಸ್ ಸೇರ್ಪಡೆಯಾಗಿ ಅಂತ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕುಮಾರಸ್ವಾಮಿ ಈಗಾಗಲೇ ಬಿಜೆಪಿಗೆ ಹೋಗಿದ್ದಾರೆ. ಬಿಜೆಪಿಯಲ್ಲಿ ಅವರಿಗೆ ಸರಿಯಾದ ಮಾನ್ಯತೆ ಸಿಗದೇ ಇದ್ದರೆ ಈ ಕಡೆ ತಿರುಗಿ ನೋಡ್ತಾರೆ ಅಂತ ಕಾಣುತ್ತೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಇದನ್ನೂ ಓದಿ: ಗೋಮಾಂಸ ರಫ್ತು ಮಾಡುವುದರಲ್ಲಿ ಭಾರತಕ್ಕೆ 2ನೇ ಸ್ಥಾನ, ಇದರ ಶ್ರೇಯಸ್ಸು ಮೋದಿಗೆ ಸಲ್ಲಬೇಕು: ಲಾಡ್ ಟೀಕೆ

  • 2 ಬಾರಿ ಸಿಎಂ ಆದರೂ ಕುಮಾರಸ್ವಾಮಿ ಪಕ್ಷ ಉಳಿಸಿಕೊಳ್ಳಲಿಲ್ಲ: ಚೆಲುವರಾಯಸ್ವಾಮಿ

    2 ಬಾರಿ ಸಿಎಂ ಆದರೂ ಕುಮಾರಸ್ವಾಮಿ ಪಕ್ಷ ಉಳಿಸಿಕೊಳ್ಳಲಿಲ್ಲ: ಚೆಲುವರಾಯಸ್ವಾಮಿ

    ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) 2 ಬಾರಿ ಸಿಎಂ ಆಗಿಯೇ ಪಕ್ಷವನ್ನು ಉಳಿಸಿಕೊಳ್ಳಲು ಆಗಿಲ್ಲ. ಈಗ ಮೈತ್ರಿ ಅಂತ ಮಾತಾಡಿ ಪಕ್ಷ ಉಳಿಸಿಕೊಳ್ಳೋ ಪ್ರಯತ್ನ ಮಾಡ್ತಿದ್ದಾರೆ ಎಂದು ಸಚಿವ ಚೆಲುವರಾಯಸ್ವಾಮಿ (Chaluvaraya Swamy) ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ವಿರುದ್ಧ ಲೇವಡಿ ಮಾಡಿದ್ದಾರೆ.

    ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅರನ್ನು ನಮ್ಮ ಬ್ರದರ್ ಅಂತ ಲೇವಡಿ ಮಾಡಿದ್ರು. ಮೈತ್ರಿ ಬಗ್ಗೆ ಸ್ವಲ್ಪ ದಿನ ಕಾದು ನೋಡಿ ಏನಾಗಲಿದೆ ಅಂತ. ಬಿಜೆಪಿ ಮತ್ತು ಜೆಡಿಎಸ್ ಎರಡೂ ಕಡೆ ಅಸಮಾಧಾನ ಸ್ಫೋಟ ಆಗಿದೆ. ಎರಡೂ ಕಡೆ ಶಾಸಕರು ದೋಸ್ತಿಗೆ ರಾಗ ತೆಗೆದಿದ್ದಾರೆ. ಇನ್ನೂ ಕೆಲ ಕಾಲ ನೋಡೋಣ ಎಂದು ಕುಟುಕಿದರು.

    ಮೈತ್ರಿ ಬಗ್ಗೆ ಬಹಳ ಸ್ಪೀಡ್ ಆಗಿರೋದು ನಮ್ಮ ಬ್ರದರ್ ಮಾತ್ರ. 2 ಬಾರಿ ಸಿಎಂ ಮಾಡಿದಾಗಲೇ ಪಕ್ಷದ ಅಸ್ಥಿತ್ವ ಉಳಿಸಿಕೊಳ್ಳಲು ಆಗಲಿಲ್ಲ. ಈಗ ಪಕ್ಷ ಉಳಿಸಿಕೊಳ್ಳೋ ಪ್ರಯತ್ನ ಮಾಡ್ತಿದ್ದಾರೆ ಅಂತ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಆಫೀಸ್‌ಗೆ ಬಂದು ಚೈತ್ರಾ ಆ್ಯಂಡ್ ಟೀಂನಿಂದ ಆತ್ಮಹತ್ಯೆ ಬೆದರಿಕೆ: ಗೋವಿಂದ್ ಆಪ್ತ ರಕ್ಷಿತ್

    ಕುಮಾರಸ್ವಾಮಿ ಬ್ರದರ್ ಮತ್ತು ಬೊಮ್ಮಾಯಿ ಇಬ್ಬರೇ ಮೈತ್ರಿಯಾಗಲಿ ಅಂತ ಮಾತಾಡ್ತಿರೋದು. ಯಡಿಯೂರಪ್ಪ ಮಾತ್ರ ನೋಡೋಣ ಏನಾಗಲಿದೆ ಅಂತಿದ್ದಾರೆ. ಮುಂದೆ ಏನಾಗುತ್ತದೆ ನೋಡೋಣ ಎಂದರು. ಇನ್ನು ಮಾಜಿ ಸಚಿವ ಯೋಗೇಶ್ವರ್ ಕೂಡ ಮೈತ್ರಿಯಾಗಲಿ ಅನ್ನೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯೋಗೇಶ್ವರ್‌ಗೂ ಈಗ ಮೈತ್ರಿ ಅನಿವಾರ್ಯ ಇದೆ. ಅವರು ನನ್ನ ಸ್ನೇಹಿತರು. ಅವರಿಗೆ ಒಳ್ಳೆಯದಾಗಲಿ ಎಂದರು. ಇದನ್ನೂ ಓದಿ: ಹಿಂದೂಪರ ಕಾರ್ಯಕರ್ತರ ವಿರುದ್ಧ ಕೇಸ್‌ ಎಂಬ ಆರೋಪಕ್ಕೂ, ಚೈತ್ರಾ ಪ್ರಕರಣಕ್ಕೂ ಸಂಬಂಧ ಇಲ್ಲ: ಜಿ.ಪರಮೇಶ್ವರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]