Tag: chaluvarayaswamy

  • ಇಂದಿನಿಂದ ನಾಲ್ಕು ದಿನ ಶ್ರೀರಂಗಪಟ್ಟಣ ದಸರಾ ಉತ್ಸವ

    ಇಂದಿನಿಂದ ನಾಲ್ಕು ದಿನ ಶ್ರೀರಂಗಪಟ್ಟಣ ದಸರಾ ಉತ್ಸವ

    ಮಂಡ್ಯ: ಇತ್ತ ವಿಶ್ವವಿಖ್ಯಾತ ಮೈಸೂರು ದಸರಾ ಕಳೆಗಟ್ಟಿದೆ. ಈ ಬೆನ್ನಲ್ಲೇ ಇಂದಿನಿಂದ ಮಂಡ್ಯದ ಶ್ರೀರಂಗಪಟ್ಟಣ ದಸರಾ (Srirangapatna Dasara) ಉತ್ಸವಕ್ಕೂ ಚಾಲನೆ ಸಿಗಲಿದೆ.

    ಇಂದಿನಿಂದ 4 ದಿನಗಳ ಕಾಲ ನಡೆಯಲಿರುವ ಈ ಉತ್ಸವಕ್ಕೆ ನಟ, ನಿರ್ದೇಶಕ ಟಿ.ಎಸ್ ನಾಗಾಭರಣ ಅವರು ಮಧ್ಯಾಹ್ನ 2:30 ರಿಂದ 3 ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿ ಉದ್ಘಾಟನೆ ನೆರವೇರಿಸಲಿದ್ದಾರೆ. ಶ್ರೀರಂಗಪಟ್ಟಣದ ಕಿರಂಗೂರು ಬಳಿ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ನೆರವೇರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಇದನ್ನೂ ಓದಿ: ದಸರೆ ಹಬ್ಬ ಮಾತ್ರ ಅಲ್ಲ, ಎಲ್ಲರನ್ನು ಒಳಗೊಳ್ಳುವ ಸಮನ್ವಯದ ಮೇಳ: ಬಾನು ಮುಷ್ತಾಕ್‌

    ಇದಾದ ಬಳಿಕ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ಜಂಬೂಸವಾರಿಗೂ ಚಾಲನೆ ನೀಡಲಾಗುತ್ತದೆ. ಶ್ರೀರಂಗಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಂಬೂಸವಾರಿ ಮೆರವಣಿಗೆ ಸಾಗಲಿದೆ. ಮೈಸೂರು ದಸರಾಕ್ಕೆ ಆಗಮಿಸಿರುವ ಮಹೇಂದ್ರ ಆನೆ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದ್ದಾನೆ. ಇಲ್ಲಿನ ಬನ್ನಿ ಮಂಟಪದಿಂದ ಶುರುವಾಗಿ ಶ್ರೀರಂಗನಾಥ ದೇವಾಲಯದ ವರೆಗೆ ಮೆರವಣಿಗೆ ಸಾಗಲಿದೆ.

    ಇನ್ನೂ ಜಂಬೂ ಸವಾರಿಗೆ ವಿವಿಧ ಕಲಾತಂಡಗಳ ಸಾಂಸ್ಕೃತಿಕ ವೈಭವ ಮೆರುಗು ನೀಡಲಿದೆ. ಬ್ಯಾಂಡ್, ಪೂಜಾ ಕುಣಿತ, ವೀರಗಾಸೆ, ನಗಾರಿ, ಜಡೆ ಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಹಾಗೂ ಸ್ತಬ್ಧ ಚಿತ್ರಗಳ ಮೆರವಣಿ ನಡೆಯಲಿದೆ. ಇದನ್ನೂ ಓದಿ: ದಸರಾ ವಿಶೇಷ | ಮೈಸೂರು ಸಿಂಗರಿಸಿದ ದೀಪಾಲಂಕಾರ, ಆಹಾರ ಮೇಳಕ್ಕೆ ಚಾಲನೆ

    ಸಂಜೆ 6 ಗಂಟೆ ವೇಳೆಗೆ ಶ್ರೀರಂಗನಾಥಸ್ವಾಮಿ ದೇವಾಲಯ ಬಳಿಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, ಸಚಿವ ಚಲುವರಾಯಸ್ವಾಮಿ, ಶಾಸಕ ರಮೇಶ್ ಬಂಡಿಸಿದ್ದೇಗೌಡ ಸೇರಿ ಪ್ರಮುಖ ಗಣ್ಯರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: Photo Gallery | ಹೂವು ಚೆಲುವೆಲ್ಲಾ ತನ್ನದೆನ್ನುತ್ತಿದೆ.. ಸಂಗೀತ ಝೇಂಕಾರ ಮನಮುಟ್ಟುತ್ತಿದೆ – ದಸರಾ ಸೊಬಗು ಕಣ್ತುಂಬಿಕೊಳ್ಳಿ

  • ಬಿಜೆಪಿಯವರು ಮದ್ದೂರು ಬಂದ್ ಮಾಡಿದ್ದೇ ಶಾಂತಿ ಕದಡೋಕೆ: ಚಲುವರಾಯಸ್ವಾಮಿ

    ಬಿಜೆಪಿಯವರು ಮದ್ದೂರು ಬಂದ್ ಮಾಡಿದ್ದೇ ಶಾಂತಿ ಕದಡೋಕೆ: ಚಲುವರಾಯಸ್ವಾಮಿ

    ಬೆಂಗಳೂರು: ಮದ್ದೂರು (Maddur) ಈಗ ಶಾಂತವಾಗಿದೆ. ಬಿಜೆಪಿ (BJP) ಅವರು ಬಂದ್ ಮಾಡಿದ್ದೇ ಶಾಂತಿ ಕದಡೋಕೆ ಎಂದು ಸಚಿವ ಚಲುವರಾಯಸ್ವಾಮಿ (Chaluvarayaswamy) ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

    ಮದ್ದೂರು ಗಲಾಟೆ (Maddur Stone Pelting) ವಿಚಾರಕ್ಕೆ ವಿಧಾನಸೌಧದದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗ ಎಲ್ಲವೂ ಶಾಂತವಾಗಿದೆ. ಆರಂಭದಲ್ಲಿ ಆದ ಘಟನೆ ಬಗ್ಗೆ ನಾವು ಕ್ರಮ ತೆಗೆದುಕೊಂಡಿದ್ದೇವೆ. ಘಟನೆಗೆ ಕಾರಣರಾದವರನ್ನು ಬಂಧಿಸಲಾಗಿದೆ. ಯಾವುದೇ ಮುಲಾಜಿಲ್ಲದೇ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಆದರೂ ಬಿಜೆಪಿಯವರು ಬಂದ್ ಮಾಡಿದ್ದಾರೆ. ಅವರು ವಾತಾವರಣವನ್ನು ಕಲುಷಿತ ಮಾಡಲು ಹೀಗೆ ಮಾಡಿದ್ರಾ? ಇವರ ಉದ್ದೇಶ ಕೋಮು ಸಂಘರ್ಷ ಸೃಷ್ಟಿ ಮಾಡೋಕೆ ಮಾಡಿದ್ರಾ ಅಂತಾ ಅವರೇ ಯೋಚನೆ ಮಾಡಲಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಂಗಮೇಶ್ ಈ ಜನ್ಮದಲ್ಲೇ ಇಸ್ಲಾಂಗೆ ಹೋಗಿಬಿಡಲಿ: ಯತ್ನಾಳ್ ತರಾಟೆ

    ನಾವು ಕ್ರಮ ತೆಗೆದುಕೊಳ್ಳಲು ನಿಧಾನ ಮಾಡಿದ್ರೆ ಅವರು ಮಾಡಿದ್ದರಲ್ಲಿ ಅರ್ಥ ಇದೆ. ಕ್ರಮ ತೆಗೆದುಕೊಂಡ ಮೇಲೂ ಬಾಯಿಗೆ ಬಂದ ಹಾಗೆ ವೇದಿಕೆಯಲ್ಲಿ ನಿಂತು ಮಾತನಾಡುತ್ತಿದಾರೆ ಅಂದ್ರೆ ಮಂಡ್ಯ ಜಿಲ್ಲೆಯ ಶಾಂತಿ ಕದಡಲು ತಾನೇ?ಮಳವಳ್ಳಿ ಬಂದ್ ಏನಾಗಿದೆ? ಒಂದು ಅಂಗಡಿ ಮುಚ್ಚಿಲ್ಲ. ಬಿಜೆಪಿ ಅವರು ಮಂಡ್ಯಗೆ ಇಂತಹ ವಿಷಯಕ್ಕೆ ಬರಬೇಡಿ. ಇಂತಹ ವಿಷಯಗಳನ್ನ ಇಟ್ಟುಕೊಂಡು ಅಶಾಂತಿ ನಿರ್ಮಾಣ ಮಾಡೋಕೆ ಬರಬೇಡಿ ಎಂದು ಹರಿಹಾಯ್ದರು. ಇದನ್ನೂ ಓದಿ: ಸಿ.ಟಿ ರವಿ ದ್ವೇಷ ಭಾಷಣ ಮಾಡಿದ್ದಕ್ಕೆ FIR ದಾಖಲು – ರಾಮಲಿಂಗಾರೆಡ್ಡಿ ಸಮರ್ಥನೆ

    ಸಿ.ಟಿ ರವಿ ಮೇಲೆ ಎಫ್‌ಐಆರ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿ.ಟಿ ರವಿ ಮಂತ್ರಿ ಆಗಿದ್ದವರು. ಕಾಲು ಮುರಿಯುತ್ತೀವಿ, ಕೈ ಮುರಿತೀವಿ ಅಂದರೆ ಹೇಗೆ? ಸಿ.ಟಿ ರವಿ ಇನ್ನು ಕಲಿಯೋ ಹಾಗೇ ಕಾಣುತ್ತಿಲ್ಲ. ಕಾನೂನು ಇರೋದು ಕ್ರಮ ತೆಗೆದುಕೊಳ್ಳೋಕೆ. ಘಟನೆ ಆಗಿರೋದು ಸತ್ಯ, ಕ್ರಮ ಆಗಿದೆ. ಇದು ಪೂರ್ವ ನಿಯೋಜನೆನಾ ಅಲ್ಲವಾ ಎಂದು ತನಿಖೆ ಆಗಬೇಕು. ನಮ್ಮ ಹುಡುಗರ ಮೇಲೆ ಕ್ರಮ ಆಗಲಿ ಅಂತ ಆ ಸಮುದಾಯದವರು ಹೇಳಿದ್ದಾರೆ. ಬುಧವಾರ ಗಣೇಶ ವಿಸರ್ಜನೆಯಲ್ಲಿ ಎಲ್ಲರೂ ಸಹಕಾರ ಕೊಟ್ಟಿದ್ದಾರೆ. ಮಸೀದಿ ಮುಂದೆಯೇ ಹೋಗಿದ್ದಾರೆ ಎಂದರು. ಇದನ್ನೂ ಓದಿ: Forest Martyrs Day | ಹುತಾತ್ಮರಿಗೆ 50 ಲಕ್ಷ ರೂ. ಪರಿಹಾರ: ಈಶ್ವರ್ ಖಂಡ್ರೆ

  • ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯ ಉಳಿಸಿ: ಅಶೋಕ್

    ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯ ಉಳಿಸಿ: ಅಶೋಕ್

    – ಅನುದಾನ ವಿಚಾರವಾಗಿ ಟೀಕೆ

    ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ (Siddaramaiah) ಇನ್ನೆಷ್ಟು ಸಿನ ಈ ಭಂಡ ಬಾಳು, ರಾಜೀನಾಮೆ (Resign) ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ (R Ashok) ಟೀಕಿಸಿದ್ದಾರೆ.

    ಅನುದಾನಕ್ಕಾಗಿ (Grant) ಸಚಿವ ಚಲುವರಾಯಸ್ವಾಮಿ (Chaluvarayaswamy) ಸಿಎಂಗೆ ಮನವಿ ವಿಚಾರದ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು ಮುಖ್ಯಮಂತ್ರಿಗಳ ಬಳಿ ಅಂಗಲಾಚಬೇಕು ಅಂದರೆ ಕರ್ನಾಟಕ ಸರ್ಕಾರ ಎಷ್ಟು ದಿವಾಳಿ ಆಗಿದೆ ಅನ್ನುವುದನ್ನ ನೀವೇ ಊಹಿಸಿಕೊಳ್ಳಿ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಯುವತಿಯನ್ನು ಪ್ರೀತಿಸಿ, ಮದುವೆಯಾಗಿ ಕಿರುಕುಳ ಆರೋಪ – ಮಾಜಿ ಕಾರ್ಪೊರೇಟರ್ ದಂಪತಿ, ಪುತ್ರನ ವಿರುದ್ಧ FIR

    ಎಕ್ಸ್‌ನಲ್ಲಿ ಏನಿದೆ?
    ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರು ‘ಅನುದಾನಕ್ಕಾಗಿ ಮುಖ್ಯಮಂತ್ರಿಗಳ ಕಾಲಿಗೆ ಬೀಳಬೇಕು’ ಎನ್ನುತ್ತಾರೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರಾದ ಬಸವರಾಜ ರಾಯರೆಡ್ಡಿ ಅವರು ‘ನಿಮಗೆ ರಸ್ತೆ ಬೇಕಾದ್ರೆ ಗ್ಯಾರೆಂಟಿ ಯೋಜನೆ ಬಂದ್ ಮಾಡ್ತೀವಿ’ ಎನ್ನುತ್ತಾರೆ. ಶಾಸಕ ಗವಿಯಪ್ಪನವರಂತೂ ಪಾಪ ಒಂದು ಹೆಜ್ಜೆ ಮುಂದೆ ಹೋಗಿ ‘ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ವಿಧಾನಸೌಧದ ಮುಂದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ’ ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಸಹೋದರಿ ಮೇಲೆ ಮೊಟ್ಟೆ ಎಸೆತ

    ಇನ್ನು ಶಾಸಕರಾದ ಬಿ.ಆರ್. ಪಾಟೀಲರು, ರಾಜು ಕಾಗೆ ಅವರು ಸೇರಿದಂತೆ ಅನೇಕ ಶಾಸಕರು ಅನುದಾನವಿಲ್ಲದೆ ತಮ್ಮ ಕ್ಷೇತ್ರಗಳಲ್ಲಿ ತಲೆ ಎತ್ತಿಕೊಂಡು ಓಡಾಡಲೂ ಆಗುತ್ತಿಲ್ಲ ಅಂತಾರೆ. ಈ ಬಗ್ಗೆ ಸೂಪರ್ ಸಿಎಂ ಸುರ್ಜೆವಾಲಾ ಅವರಿಗೆ ದೂರು ಕೊಟ್ಟಿರುವುದನ್ನ ಮಾಧ್ಯಮಗಳು ಬಿತ್ತರಿಸಿವೆ. ಇನ್ನೆಷ್ಟು ದಿನ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ – ನೋಯ್ಡಾದಲ್ಲಿ ಆರೋಪಿ ಅರೆಸ್ಟ್

  • Video | ಗೊಬ್ಬರ ಕೇಳಿದ್ದಕ್ಕೆ ಕೃಷಿ ಸಚಿವ ಕೆಂಡಾಂಮಡಲ – ರೈತನಿಗೆ ಗದರಿದ ಚಲುವರಾಯಸ್ವಾಮಿ

    Video | ಗೊಬ್ಬರ ಕೇಳಿದ್ದಕ್ಕೆ ಕೃಷಿ ಸಚಿವ ಕೆಂಡಾಂಮಡಲ – ರೈತನಿಗೆ ಗದರಿದ ಚಲುವರಾಯಸ್ವಾಮಿ

    ಮಂಡ್ಯ: ಕಾರ್ಯಕ್ರಮದ ನಡುವೆ ರಸಗೊಬ್ಬರ ಕೇಳಿದ್ದಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ (Chaluvarayaswamy) ಅವರು ವೇದಿಕೆಯಲ್ಲೇ ಕೆಂಡಾಮಂಡರಾದ ಪ್ರಸಂಗ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆಯಿತು.

    ಬಿತ್ತಿನೆ ರಾಗಿ ವಿತರಣೆ ಕಾರ್ಯಕ್ರಮದಲ್ಲಿ ಸಚಿವರು ಭಾಷಣ ಮಾಡುತ್ತಿದ್ದರು. ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳ ಕುರಿತು ಭಾಷಣ ಮಾಡುತ್ತಿದ್ದ ವೇಳೆ, ರೈತರೊಬ್ಬರು (Farmer) ಮೊದಲು ರಸಗೊಬ್ಬರ ಕೊಡುವಂತೆ ಕೇಳಿದರು. ಅಲ್ಲದೇ ಮಾತಿಗೆ ಮಾತು ಬೆಳೆಸಿ ಸಚಿವರ ಜೊತೆಗೆ ರೈತ ವಾಗ್ವಾದಕ್ಕೆ ಇಳಿದಿದ್ದರು. ಈ ವೇಳೆ ಕೋಪಗೊಂಡ ಸಚಿವರು ರೈತನಿಗೆ ವೇದಿಕೆಯಲ್ಲೇ ನಿಂತು ಗದರಿದರು. ಮಾತು ಕೇಳಲು ಇಷ್ಟ ಇಲ್ಲದಿದ್ರೆ ಹತ್ತಿ ಕೊಡಿ, ಇಲ್ಲ ಅಂದ್ರೆ ಟವೆಲ್ ಸುತ್ತಿಕೊಳ್ಳಲಿ. ನಾನು ಇಲ್ಲಿ ಚೌಕಾಸಿ ಮಾಡೋದಕ್ಕೆ ಬಂದಿಲ್ಲ. ಕರೆಕ್ಟಾಗಿ ಕೇಳಿದ್ರೆ ನಾನು ಕರೆಕ್ಟಾಗಿ ಹೇಳ್ತೀನಿ. ಪ್ರತೀ ಮನೆಗೆ ತಿಂಗಳಿಗೆ 2 ಸಾವಿರ ಕೊಡ್ತಿದ್ದೀವಿ. ವರ್ಷಕ್ಕೆ ನಾಗಮಂಗಲಕ್ಕೆ 200 ಕೋಟಿ ಕೊಡ್ತಿದ್ದೀವಿ. ತಾಲ್ಲೂಕು ಪಂಚಾಯತಿ ಬಿಲ್ಡಿಂಗ್ ಕಟ್ಟಿದ್ದು ಯಾರು? ನಾಗಮಂಗಲಕ್ಕೆ ಕೆಇಬಿ ಆಫೀಸ್ ತಂದಿದ್ದು ಯಾರು? ಎಂದೆಲ್ಲ ರೈತನ ಮೇಲೆ ಗದರಿದರು.

    ಈ ಕುರಿತ ವಿಡಿಯೋ ಇಲ್ಲಿದೆ…

  • ಕೇಂದ್ರದಿಂದ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ: ಚಲುವರಾಯಸ್ವಾಮಿ

    ಕೇಂದ್ರದಿಂದ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ: ಚಲುವರಾಯಸ್ವಾಮಿ

    ಬೆಂಗಳೂರು: ಕೇಂದ್ರ ಸರ್ಕಾರದಿಂದ (Central Government) ಯೂರಿಯಾ ಪೂರೈಕೆಯಲ್ಲಿ ಕೊರತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿತರಣೆಯಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿಭಾಯಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗೊಂದಲಗಳು ಬಗೆಹರಿಯಲಿವೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ (N Chaluvarayaswamy) ಸ್ಪಷ್ಟಪಡಿಸಿದ್ದಾರೆ.

    ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ 3 ಮುಂಗಾರು ಹಂಗಾಮಿನಲ್ಲಿ ಇದೇ ಸರ್ಕಾರ ಅಧಿಕಾರದಲ್ಲಿದೆ. ನಾನೇ ಕೃಷಿ ಸಚಿವನಾಗಿ ಇದ್ದೇನೆ. ಈವರೆಗೆ ಉಂಟಾಗದ ಸಮಸ್ಯೆ ಈಗೇಕೆ ಎಂಬುದನ್ನು ವಿಶ್ಲೇಷಿಸಬೇಕಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸಿ: ಜೋಶಿ ಮನವಿ

    ರಾಜ್ಯಕ್ಕೆ ಪೂರೈಕೆಯಾಗಬೇಕಾಗಿದ್ದ ಯೂರಿಯಾ ರಸಗೊಬ್ಬರದಲ್ಲಿ ಈ ಬಾರಿ 1.36 ಲಕ್ಷ ಮೆಟ್ರಿಕ್ ಟನ್ ಕೊರತೆಯಾಗಿದೆ. ಇದೇ ಈ ಎಲ್ಲಾ ಸಮಸ್ಯೆ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ನ್ಯಾ. ವರ್ಮಾ ನಡೆ ವಿಶ್ವಾಸ ಮೂಡಿಸುವುದಿಲ್ಲ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

    ಈ ಬಾರಿ ಮುಂಗಾರು ಬೇಗ ಪ್ರಾರಂಭವಾಗಿ ಉತ್ತಮ ಮಳೆಯಾಗಿದ್ದು, 2 ಲಕ್ಷ ಹೆಕ್ಟೇರ್ ಹೆಚ್ಚುವರಿ ಮುಸುಕಿನ ಜೋಳ ಬಿತ್ತನೆ ಕೂಡ ಯೂರಿಯಾ ಬೇಡಿಕೆಯ ಹಠಾತ್ ಏರಿಕೆಗೆ ಕಾರಣವಾಗಿದೆ ಎಂದಿದ್ದಾರೆ.

    ರಾಜ್ಯದಲ್ಲಿ ಅಕ್ರಮ ಸಾಗಾಟ, ಯೂರಿಯಾ (Urea) ದುರ್ಬಳಕೆ ಬಗ್ಗೆ ವಿಲಕ್ಷಣ ದಳ ಚುರುಕಾಗಿ ಕಾರ್ಯನಿರ್ವಹಿಸುತ್ತಿದ್ದು, ಅಕ್ರಮಗಳಿಗೆ ಕಡಿವಾಣ ಹಾಕಿದೆ. ವಿರೋಧ ಪಕ್ಷದ ಮುಖಂಡರು ಮಾಧ್ಯಮಕ್ಕೆ ತಿಳಿಸಿರುವಂತೆ ಕರ್ನಾಟಕ ರಾಜ್ಯವು ನೆರೆ ದೇಶಗಳಾದ ಶ್ರೀಲಂಕಾ ಮತ್ತು ಬಾಂಗ್ಲಾದೇಶದೊಂದಿಗೆ ಯಾವುದೇ ಗಡಿಯನ್ನು ಹಂಚಿಕೊಂಡಿರುವುದಿಲ್ಲ. ಈ ಹೇಳಿಕೆಯು ಹಾಸ್ಯಾಸ್ಪದವಾಗಿದೆ. ವಿರೋಧ ಪಕ್ಷದ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದ ಮೇಲೆ ಟ್ರಂಪ್‌ ತೆರಿಗೆ ಸಮರ : ಆ.1 ರಿಂದಲೇ 25% ಸುಂಕ

    ರಸಗೊಬ್ಬರಗಳ ಪೂರೈಕೆ ಕಾಪು ದಾಸ್ತಾನಿಗೆ ಇರಿಸಲಾಗಿದ್ದ ಗ್ಯಾರಂಟಿ ಹಣ ಕಡಿತಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಆದರೆ ಈ ಹಿಂದೆ ಇದ್ದದ್ದು ಬಿಜೆಪಿ ಸರ್ಕಾರ, ಅವರೇ ನಿಗದಿಪಡಿಸಿದ್ದ 400 ಕೋಟಿ ರೂ. ಹಣವನ್ನು ನಾವು ಯಥಾಸ್ಥಿತಿಯಲ್ಲಿ ಮುಂದುವರೆಸಿದ್ದೇವೆ. ಇನ್ನೂ 600 ಕೋಟಿ ರೂ. ಹೆಚ್ಚುವರಿ ಹಣ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ. ಪ್ರತಿಯಾಗಿ ಬಿಜೆಪಿ ನಾಯಕರು ಗೊಬ್ಬರ ಒದಗಿಸಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

    ರಾಜ್ಯದಲ್ಲಿ ದಾವಣಗೆರೆ, ಗದಗ, ಕೊಪ್ಪಳ, ಧಾರವಾಡ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಯೂರಿಯಾ ಕೊರತೆ ಸ್ವಲ್ಪ ಕಂಡುಬಂದಿರುವುದು ನಿಜ. ಆದರೆ ಅದನ್ನು ನಿಭಾಯಿಸಲಾಗುತ್ತಿದೆ. ಹೆಚ್ಚುವರಿ ದಾಸ್ತಾನು ಬೇರೆ ಜಿಲ್ಲೆಗಳಿಂದ ವರ್ಗಾವಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ದೀಪಾವಳಿ ಧಮಾಕ, ಕಾಂಗ್ರೆಸ್‌ನಲ್ಲಿ ಕ್ರಾಂತಿ : ವಿಜಯೇಂದ್ರ

    ರಸಗೊಬ್ಬರ ಅದರಲ್ಲೂ ಮುಖ್ಯವಾಗಿ ಯೂರಿಯಾ ಮತ್ತು ಡಿಎಪಿ ಪೂರೈಕೆ ಕೋರಿ ಜುಲೈ 7ರಂದು ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಆ ನಂತರ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸಹ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಲಾಗಿದೆ ಎಂದಿದ್ದಾರೆ.

    ಕೇಂದ್ರ ರಸಗೊಬ್ಬರ ಖಾತೆ ಸಚಿವರ ಭೇಟಿಗಾಗಿ ಸಮಯಾವಕಾಶ ಕೋರಿ ಪತ್ರ ಬರೆಯಲಾಗಿದೆ. ಅವಕಾಶ ಸಿಕ್ಕರೆ ಭೇಟಿ ಮಾಡಿ, ರಾಜ್ಯದ ಪರಿಸ್ಥಿತಿ ವಿವರಿಸಿ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

  • ಬಿಜೆಪಿಯವರಿಗೆ ಧಮ್ಮು-ತಾಕತಿದ್ರೆ ಕೇಂದ್ರದಿಂದ ಯೂರಿಯಾ ಕೊಡಿಸಲಿ – ಚಲುವರಾಯಸ್ವಾಮಿ

    ಬಿಜೆಪಿಯವರಿಗೆ ಧಮ್ಮು-ತಾಕತಿದ್ರೆ ಕೇಂದ್ರದಿಂದ ಯೂರಿಯಾ ಕೊಡಿಸಲಿ – ಚಲುವರಾಯಸ್ವಾಮಿ

    ಬೆಂಗಳೂರು: ರಾಜ್ಯದಲ್ಲಿ ಯೂರಿಯಾ ಕೊರತೆ ಆಗದಂತೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿದೆ. ಬಿಜೆಪಿಯವರು ರಾಜಕೀಯ ಮಾಡೋದು ಬಿಟ್ಟು ಧೈರ್ಯವಿದ್ದರೆ ಕೇಂದ್ರ ಸರ್ಕಾರದಿಂದ (Central Govt) ಯೂರಿಯಾ ಕೊಡಿಸಲಿ ಎಂದು ಬಿಜೆಪಿ (BJP) ನಾಯಕರ ವಿರುದ್ಧ ಕೃಷಿ ಸಚಿವ ಚಲುವರಾಯಸ್ವಾಮಿ (Chaluvarayaswamy) ವಾಗ್ದಾಳಿ ನಡೆಸಿದರು.

    ರಾಜ್ಯದಲ್ಲಿ ಯೂರಿಯಾ ಕೊರತೆ ಅಂತ ಬಿಜೆಪಿ ಪ್ರತಿಭಟನೆ ಮಾಡ್ತಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಬಹಳ ಸ್ಪಷ್ಟವಾಗಿ ಎಲ್ಲೆಲ್ಲಿ ಯೂರಿಯಾ ಸರಬರಾಜು ಆಗಿದೆ ಎಂದು ಹೇಳಿದ್ದೇನೆ. ಡಿಸಿ, ಸೆಕ್ರೆಟರಿ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಬಿಜೆಪಿಯವರಿಗೆ ಮಾತಡೋಕೆ ಬೇರೆ ವಿಷಯ ಇಲ್ಲ ಅದಕ್ಕೆ ಪ್ರತಿಭಟನೆ ಅಂತಿದ್ದಾರೆ. ಇವರಿಗೆ ಕೇಂದ್ರಕ್ಕೆ ಹೋಗಿ ಹೇಳೋ ಧಮ್ ಇಲ್ಲ. ನಾನು ಎಲ್ಲ ಎಂಪಿಗಳಿಗೆ ಹಾಗೂ ಕೇಂದ್ರ ಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದೇನೆ. ಸಿಎಂ ಅವರು ಕೂಡ ಪತ್ರ ಬರೆದಿದ್ದಾರೆ. ಇನ್ನೂ ಏನು ಮಾಡಬೇಕಂತೆ ವಿಜಯೇಂದ್ರ, ಅಶೋಕ್‌ಗೆ ತಿರುಗೇಟು ನೀಡಿದರು.ಇದನ್ನೂ ಓದಿ:ಚೆಸ್‌ ವಿಶ್ವಕಪ್‌ | ಅನುಭವಿ ಕೊನೆರು ಹಂಪಿಗೆ ಸೋಲು, 19ರ ದಿವ್ಯಾ ದೇಶಮುಖ್‌ ಚಾಂಪಿಯನ್‌

    ಕೇಂದ್ರವೇ ನಮಗೆ ಯೂರಿಯಾ ಒದಗಿಸುತ್ತದೆ. ಹೀಗಾಗಿ ನಾವು ಇದರಲ್ಲಿ ರಾಜಕೀಯ ಮಾಡಲು ಹೋಗಿರಲಿಲ್ಲ. ಇವರು ರಾಜಕೀಯವಾಗಿ ಮಾತಾಡಿದ್ರೆ ನಾವೇನು ಮಾಡೋಕೆ ಆಗಲ್ಲ. ರಾಜ್ಯದ ಒಬ್ಬ ಮಂತ್ರಿಗಾದರೂ ಕೇಂದ್ರಕ್ಕೆ ಪತ್ರ ಬರೆಯುವ ಧಮ್ ಇದ್ಯಾ? ರಾಜ್ಯದ ರೈತರಿಗೆ ರಸಗೊಬ್ಬರ ಕೊಡುತ್ತಿದ್ದೇವೆ. ಕೊಪ್ಪಳದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜೊತೆಗೆ ಮಾತಾಡಿದ್ದೇನೆ. ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ನೋಡಿಕೊಳ್ಳುತ್ತಿದ್ದಾರೆ. ರೈತರ ಸಮಸ್ಯೆಗಳ ಮೇಲೆಯೂ ರಾಜಕಾರಣ ಮಾಡ್ತಿದ್ದಾರೆ. ಇದಕ್ಕೆ ಏನೂ ಮಾಡಲು ಆಗಲ್ಲ. ರೈತರ ಪರ ನಾವಿದ್ದೇವೆ. ಕೇಂದ್ರದಿಂದ ಬರಬೇಕಾದ ಬಾಕಿ ಯೂರಿಯಾ ಬರಲು ಎಲ್ಲಾ ಪ್ರಯತ್ನ ಮಾಡ್ತಿದ್ದೇವೆ. ಬಿಜೆಪಿಯವರಿಗೆ ಧಮ್ಮು, ತಾಕತ್ತಿದ್ರೆ ಕೇಂದ್ರದ ಮೇಲೆ ಒತ್ತಡ ಹಾಕಲಿ ಅಂತ ಕಿಡಿಕಾರಿದರು.

    ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಆಗ್ತಿದೆ ಎಂಬ ಬಿಜೆಪಿ ಅರೋಪಕ್ಕೆ ತಿರುಗೇಟು ಕೊಟ್ಟ ಅವರು, ಇಲ್ಲದೆ ಇರೋದನ್ನ ಹೇಳಿದ್ರೆ ನಾವು ಏನು ಮಾಡೋಕೆ ಆಗಲ್ಲ. ವಿಜಿಲೆನ್ಸ್ ಇದೆ, ಸಾವಿರಾರು ರೀಟೈಲ್ ಸೆಂಟರ್ ಇವೆ. ಇಂತಹದ್ದು ಕಂಡು ಬಂದ್ರೆ ಬ್ಲಾಕ್ ಲಿಸ್ಟ್ಗೆ ಸೇರಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

    ಕೇಂದ್ರ ಸರ್ಕಾರ ಎಂಟು ಮೆಟ್ರಿಕ್ ಟನ್ ಯೂರಿಯಾ ಕೊಟ್ಟಿದೆ. ಆರು ಮೆಟ್ರಿಕ್ ಟನ್ ಎಲ್ಲಿ ಹೋಯ್ತು ಎಂಬ ವಿಜಯೇಂದ್ರ ಆರೋಪಕ್ಕೆ ತಿರುಗೇಟು ಕೊಟ್ಟ ಅವರು, ವಿಜಯೇಂದ್ರಗೆ ಬುದ್ಧಿ ಇದ್ಯಾ? ಹಳೆಯ ಬ್ಯಾಲೆನ್ಸ್ ಯಾವುದು ಇದೆ ಅಂತ ವಿಜಯೇಂದ್ರಗೆ ಗೊತ್ತಿಲ್ಲ. ಪಾಪ ಅವರಿಗೆ ಅನುಭವದ ಕೊರತೆ ಇದೆ. ನಮ್ಮ ಅಶೋಕಣ್ಣನಿಗೆ ಎಲ್ಲಾ ಗೊತ್ತಿದೆ. ಅಧಿಕಾರ ಮಾಡಿದ ಅನುಭವ ಇದೆ. ಪಾಪ ಅವರಿಗೆ ಮಾತಾಡೋಕೆ ಬರಲ್ಲ. ಎಂಟೂವರೇ ಲಕ್ಷದಲ್ಲಿ ಆರು ಲಕ್ಷ ಯೂರಿಯಾ ಬಂದಿದೆ. ಇನ್ನೂ ಒಂದೂವರೇ ಲಕ್ಷ ಯೂರಿಯಾ ಬರಬೇಕಿದೆ. ನಾನು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಜೊತೆ ಮಾತಾಡಿದ್ದೇನೆ. ಇಲ್ಲಿ ಇರೋರಿಗೆ ಅದರ ಬಗ್ಗೆ ಗೊತ್ತಿಲ್ಲ. ಕೇಂದ್ರದ ಜೊತೆ ಮಾತನಾಡಿ ಬಾಕಿ ಇರುವ ಯೂರಿಯಾವನ್ನ ಕೊಡಿಸಲಿ ಎಂದು ವಿಜಯೇಂದ್ರಗೆ ಸವಾಲ್ ಹಾಕಿದರು.ಇದನ್ನೂ ಓದಿ: ಮಜಾವಾದಿ ಸಿದ್ದರಾಮಯ್ಯ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು – ಜೆಡಿಎಸ್

  • ಮತಗಳ್ಳತನದ ಬಗ್ಗೆ ಮಂಡ್ಯದ ಡಿಟೇಲ್ಸ್ ನೋಡಿ ಹೇಳ್ತೀನಿ: ಚಲುವರಾಯಸ್ವಾಮಿ

    ಮತಗಳ್ಳತನದ ಬಗ್ಗೆ ಮಂಡ್ಯದ ಡಿಟೇಲ್ಸ್ ನೋಡಿ ಹೇಳ್ತೀನಿ: ಚಲುವರಾಯಸ್ವಾಮಿ

    – ಮಂಡ್ಯದಲ್ಲಿ ಮೋದಿ ಮುಖ ನೋಡಿ ವೋಟ್ ಹಾಕಿದ್ದಾರೆ

    ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನದ ಬಗ್ಗೆ ನನಗೆ ನಮ್ಮ ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಹೇಳಿದ್ದಾರೆ. ನಾನು ಮಂಡ್ಯದ (Mandya) ಡಿಟೇಲ್ಸ್ ನೋಡಿಲ್ಲ. ನೋಡಿದ ಮೇಲೆ ಹೇಳ್ತೀನಿ ಎಂದು ಸಚಿವ ಚಲುವರಾಯಸ್ವಾಮಿ (Chaluvarayaswamy) ಹೇಳಿದ್ದಾರೆ.

    ವಿಕಾಸಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಮತಗಳ್ಳತನದ ಬಗ್ಗೆ ಒಟ್ಟಾರೆಯಾಗಿ ಹೇಳಿದ್ದಾರೆ. ಜಿಲ್ಲಾವಾರು ಹೇಳಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತಗಳು ಬಿಜೆಪಿ ಅಭ್ಯರ್ಥಿ ಇಲ್ಲದ ಕಡೆ ಕಾಂಗ್ರೆಸ್, ಜೆಡಿಎಸ್‌ಗೆ ಹೋಗಬಹುದು. ಪಾರ್ಲಿಮೆಂಟ್ ಚುನಾವಣೆಯಲ್ಲಿ ಹಾಗೆ ಆಗಲ್ಲ. ಸಂಪೂರ್ಣವಾಗಿ ಬಿಜೆಪಿ ಮತದಾರರು ಪಾರ್ಲಿಮೆಂಟ್ ಚುನಾವಣೆಯಲ್ಲಿ ಮೋದಿ ಮುಖ ನೋಡಿ ಮತ ಹಾಕ್ತಾರೆ. ನಮ್ಮ ಮಂಡ್ಯದಲ್ಲಿ ಮತ ಹಾಕಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಮಹದಾಯಿಗೆ ಕೇಂದ್ರ ಅನುಮತಿ ನೀಡಲ್ಲ ಎಂದಿದ್ದು ಗೋವಾ ಸಿಎಂ ವೈಯಕ್ತಿಕ ಹೇಳಿಕೆ – ಜೋಶಿ ಸ್ಪಷ್ಟನೆ

    ಕುಮಾರಸ್ವಾಮಿ (H D Kumaraswamy) ಇದನ್ನು ಒಪ್ತಾರೋ ಇಲ್ವೋ? ಚುನಾವಣೆ ಆಗಿದೆ, ಮಂತ್ರಿ ಆಗಿದ್ದಾರೆ. ನಮ್ಮ ನಾಯಕರು ತನಿಖೆ ನಡೆಸಿ ಹೇಳಿದ ಮೇಲೆ ನಮ್ದು ಅದೇ. ನಮಗೆ ಅನುಮಾನ ಇದೆ ಎಂದು ಹೇಳಿದ್ದಾರೆ.

  • ಸ್ವಾಮೀಜಿಗಳು ಹೇಳಿಕೆ‌ ನೀಡುವುದು ಅವರ ವೈಯಕ್ತಿಕ ಅಭಿಪ್ರಾಯ – ರಂಭಾಪುರಿ ಶ್ರೀ ಹೇಳಿಕೆಗೆ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ

    ಸ್ವಾಮೀಜಿಗಳು ಹೇಳಿಕೆ‌ ನೀಡುವುದು ಅವರ ವೈಯಕ್ತಿಕ ಅಭಿಪ್ರಾಯ – ರಂಭಾಪುರಿ ಶ್ರೀ ಹೇಳಿಕೆಗೆ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ

    ನವದೆಹಲಿ: ಸ್ವಾಮೀಜಿಗಳು ಹೇಳಿಕೆ‌ ನೀಡುವುದು ಅವರ ವೈಯಕ್ತಿಕ ಅಭಿಪ್ರಾಯ, ಅರ್ಶಿವಾದ ಮಾಡುವುದಾಗಲಿ ಅಥವಾ ಅಭಿಪ್ರಾಯ ತಿಳಿಸುವುದು ಅದು ಅವರ ವೈಯಕ್ತಿಕವಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ (Chaluvarayaswamy) ಹೇಳಿದರು.

    ಡಿಕೆ ಶಿವಕುಮಾರ್ (D.K.Shivakumar) ಮುಖ್ಯಮಂತ್ರಿಯಾಗಲಿ ಎಂದು ರಂಭಾಪುರಿ ಶ್ರೀ (Rambhapuri Swamiji) ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷದಲ್ಲಿ ಆ ರೀತಿ ಪ್ರಶ್ನೆಯೇ ಇಲ್ಲ‌. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಬಹಳ ಅನ್ಯೋನ್ಯವಾಗಿದ್ದಾರೆ. ಬಹಳ ಕಷ್ಟ ಪಟ್ಟು ಪಕ್ಷ ಅಧಿಕಾರಕ್ಕೆ ತಂದಿದ್ದಾರೆ. ನಾನು ಕೂಡ ನೋಡಿದ್ದೇನೆ. ಅವರು ಪ್ರತಿ ಹಂತದಲ್ಲೂ ಮತ್ತೆ ಸರ್ಕಾರ ತರಬೇಕು. ಜನಪರ ಕೆಲಸ ಮಾಡಬೇಕು ಎಂದು ಕೆಲಸ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಬಿಹಾರ ಮತದಾರರ ಪಟ್ಟಿ ನವೀಕರಣ: ಜುಲೈ 10 ರಂದು ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

    ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಏನೇ ತೀರ್ಮಾನ ಆದರೂ ಹೈಕಮಾಂಡ್ ಜೊತೆಗೆ ಮಾತಾಡಿ ತೀರ್ಮಾನ ಮಾಡೋ ಥರ ಇಟ್ಟುಕೊಂಡಿದ್ದಾರೆ. ಸ್ವಾಮಿಜಿ ಅವರ ಅಭಿಪ್ರಾಯ ಅದು ಅವರ ವೈಯಕ್ತಿಕ. ಬಹಳ ಹಿಂದಿನಿಂದಲೂ ಬಹಳಷ್ಟು ಜನರು ಅಭಿಪ್ರಾಯ ಹೇಳಿದ್ದಾರೆ. ನೀವು ಯಾಕೆ ಹೇಳಿದ್ದೀರಿ ಅಂತಾ ನಾವು ಕೇಳಲು ಆಗುತ್ತಾ? ಡಿಕೆ ಶಿವಕುಮಾರ್ ಕೇಳಲು ಆಗುತ್ತಾ ಅಥವಾ ಸಿದ್ದರಾಮಯ್ಯನವರನ್ನು ಕೇಳಲು ಆಗುತ್ತಾ? ಸ್ವಾಮೀಜಿಗಳು ನಮಗೆ ಗುರುಗಳ ಸ್ಥಾನದಲ್ಲಿ ಇದ್ದಾರೆ. ಅವರ ಅಭಿಪ್ರಾಯ ಅಷ್ಟೇ ಇದು. ಹೆಚ್ಚು ಚರ್ಚೆ ಅಗತ್ಯ ಇಲ್ಲ ಎಂದು ತಿಳಿಸಿದರು.

    ಗ್ಯಾರಂಟಿ ಬೇಕಾ ರಸ್ತೆ ಬೇಕಾ ಎಂಬ ಬಸವರಾಜ್ ರಾಯರೆಡ್ಡಿ ಹೇಳಿಕೆ ವಿಚಾರವಾಗಿ ಮಾತನಾಡಿ, ಗ್ಯಾರಂಟಿನೂ ಆಗುತ್ತೆ ರಸ್ತೆನೂ ಆಗುತ್ತೆ. ಅದ್ಯಾಕೆ ಅವರು ಮಾತಾಡಿದ್ದಾರೋ ನನಗೆ ಗೊತ್ತಿಲ್ಲ. ಮೊನ್ನೆ 50 ಕೋಟಿ ಕೊಟ್ಟಿದ್ದಾರೆ. ಅಲ್ಲದೇ, ಇಲಾಖೆಗಳಲ್ಲೂ ಅನುದಾನ ಕೊಟ್ಟಿದ್ದಾರೆ. ಆರ್‌ಡಿಪಿಆರ್ PWD ಇಲಾಖೆಯಲ್ಲೂ ಕೊಟ್ಟಿದ್ದಾರೆ. ರಾಯರೆಡ್ಡಿ ಹಿರಿಯ ಶಾಸಕರು. ಅವರು ಯಾಕೆ ಹೀಗೆ ನನಗೆ ಗೊತ್ತಿಲ್ಲ. ಹೈಕಮಾಂಡ್ ಸೂಚನೆ ಮೇರೆಗೆ ಸುರ್ಜೇವಾಲ ಸಭೆ ನಡೆಸುತ್ತಿದ್ದಾರೆ. ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಖಲಿಸ್ತಾನಿ ಭಯೋತ್ಪಾದಕ ಹ್ಯಾಪಿ ಪಾಸಿಯಾ ಭಾರತಕ್ಕೆ ಹಸ್ತಾಂತರ ಪ್ರಕ್ರಿಯೆ ಶುರು

  • ಮಂಡ್ಯದಲ್ಲಿ 3.80 ಕೋಟಿ ವೆಚ್ಚದಲ್ಲಿ ಬಾಬು ಜಗಜೀವನರಾಂ ಭವನ ನಿರ್ಮಾಣ: ಚಲುವರಾಯಸ್ವಾಮಿ

    ಮಂಡ್ಯದಲ್ಲಿ 3.80 ಕೋಟಿ ವೆಚ್ಚದಲ್ಲಿ ಬಾಬು ಜಗಜೀವನರಾಂ ಭವನ ನಿರ್ಮಾಣ: ಚಲುವರಾಯಸ್ವಾಮಿ

    – ಅಖಿಲ‌ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 2.53 ಕೋಟಿ ರೂ. ಉಳಿತಾಯ

    ಮಂಡ್ಯ: ಜಿಲ್ಲೆಯಲ್ಲಿ (Mandya) 3.80 ಕೋಟಿ ವೆಚ್ಚದಲ್ಲಿ ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಂ ಭವನ (Babu Jagjivanram Bhavan) ನಿರ್ಮಾಣ ಮಾಡಲಾಗುವುದು. ಅನುದಾನ ಕೊರತೆ ಉಂಟಾದರೆ ಹೆಚ್ಚುವರಿ ಅನುದಾನ ಪಡೆದು ಭವನವನ್ನು ನಿರ್ಮಾಣ ಮಾಡುತ್ತೇವೆ ಎಂದು ಸಚಿವ ಎನ್.ಚಲುವರಾಯಸ್ವಾಮಿ (Chaluvarayaswamy) ಹೇಳಿದ್ದಾರೆ.

    ಮಂಡ್ಯದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಡಾ.ಬಾಬು ಜಗಜೀವನ ರಾಂ ಅವರ 118ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ವೇಳೆ ನಮ್ಮ ದೇಶ ನಿರ್ಮಾಣದಲ್ಲಿ ಬಹು ಮುಖ್ಯ ಪಾತ್ರ ನಿರ್ವಹಿಸಿದ ಮಹಾನೀಯರ ಕುರಿತು ಯುವ ಪೀಳಿಗೆಗೆ ಅರಿವು ಮೂಡಿಸುವ ಸಲುವಾಗಿ ಅನೇಕ ಸಾಧಕರ ಜಯಂತಿಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದಿದ್ದಾರೆ.

    ಸರ್ಕಾರ ಜಾರಿಗೆ ತಂದ 5 ಗ್ಯಾರಂಟಿ ಯೋಜನೆಯ ವಿಚಾರವಾಗಿ, ಗ್ಯಾರಂಟಿಯಿಂದ ರಾಜ್ಯದ ಪ್ರತಿ ಮನೆಗೂ 5,000 ರೂ. ತಲುಪುತ್ತಿದೆ. ಹಾಲಿನ ಮೇಲಿನ ಹೆಚ್ಚುವರಿಯಾಗಿ ನಿಗದಿಸಿರುವ 4 ರೂ. ರೈತರಿಗೆ ನೀಡಲಾಗುತ್ತಿದೆ. ಸಾರ್ವಜನಿಕರು ಯಾರ ಆಡಳಿತ ಅವಧಿಯಲ್ಲಿ ದೇಶದ ಅಭಿವೃದ್ಧಿ ಹಾಗೂ ಜನರಿಗೆ ಶಕ್ತಿಯನ್ನು ತುಂಬುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಅರ್ಥ ಮಾಡಿಕೊಂಡಾಗ ಮಾತ್ರ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಾಧ್ಯ ಎಂದು ಹೇಳಿದ್ದಾರೆ.

    – 2.53 ಕೋಟಿ ರೂ. ಉಳಿತಾಯ

    87ನೇ ಅಖಿಲ‌ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 2.53 ಕೋಟಿ ರೂ. ಉಳಿತಾಯ ಮಾಡಲಾಗಿದೆ. ಸರ್ಕಾರದಿಂದ ಬಿಡುಗಡೆಯಾದ 30 ಕೋಟಿ ರೂ. ಹಣದಲ್ಲಿ 29,65,07,226/- ರೂ. ವೆಚ್ಚವಾಗಿದ್ದು, ರೂ 34,92,774/- ಸರ್ಕಾರಕ್ಕೆ ಆದ್ಯಾರ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

    ವಾಣಿಜ್ಯ ಮಳಿಗೆಗಳ ಬಾಡಿಗೆ- 17,52,000/ ರೂ., ಪುಸ್ತಕ ಮಳಿಗೆಯ ಬಾಡಿಗೆ- 16,04,000 ರೂ., ನೊಂದಣಿ ಶುಲ್ಕ- 39,95,400 ರೂ., ಹೆಚ್.ಆರ್ ಎಂ.ಎಸ್ ವ್ಯಾಪ್ತಿಗೆ ಬಾರದ ಸರ್ಕಾರಿ ನೌಕರರ ಒಂದು ದಿನದ ಸಂಬಳದ ದೇಣಿಗೆ- 23,11,944 ರೂ.-, ಹೆಚ್.ಆರ್ ಎಂ.ಎಸ್ ವ್ಯಾಪ್ತಿಗೆ ಬರುವ ಸರ್ಕಾರಿ ನೌಕರರ ಒಂದು ದಿನದ ಸಂಬಳದ ದೇಣಿಗೆ- 1,08,05,048/ ರೂ. -, ಎಂ.ಡಿಸಿ.ಸಿ ಬ್ಯಾಂಕ್- 10 ಲಕ್ಷ ರೂ. ಎಂ.ಆರ್.ಎನ್ ನಿರಾಣಿ ಫೌಂಡೇಷನ್ 5 ಲಕ್ಷ ರೂ. ಸೇರಿ ಒಟ್ಟು 2,53,61,166/ ರೂ. ಉಳಿತಾಯವಾಗಿದೆ ಎಂದಿದ್ದಾರೆ.

    ಕನ್ನಡ ಭವನ ನಿರ್ಮಾಣ 87ನೇ ಅಖಿಲ‌ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಜಿಲ್ಲೆಯಲ್ಲಿ ಯಶಸ್ವಿಯಾಗಿ ಸಂಘಟಿಸಿದ ನೆನಪಿಗಾಗಿ ಕನ್ನಡ ಭವನ ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು, ದೇಣಿಗೆ ರೂಪದಲ್ಲಿ ಸಮಗ್ರಹವಾಗಿ ಉಳಿತಾಯವಾಗಿರುವ 2.5 ಕೋಟಿ ರೂ. ಹಣವನ್ನು ವೆಚ್ಚ ಮಾಡಲು ಯೋಜಿಸಲಾಗಿದೆ. ಕನ್ನಡ ಭವನ ನಿರ್ಮಾಣಕ್ಕೆ ಬೇಕಿರುವ ಹೆಚ್ವುವರಿ ಅನುದಾನವನ್ನು ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ‌ ಮಾಡಲಾಗುವುದು ಎಂದಿದ್ದಾರೆ.

    ಜಿಲ್ಲಾಧಿಕಾರಿ ಡಾ: ಕುಮಾರ್‌ ಅವರು ಮಾತನಾಡಿ, 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲಾ ಸಮಿತಿಗಳಿಂದ ಒಟ್ಟು ರೂ 29,65,07,226 ಅನುದಾನವನ್ನು ಬಳಕೆ ಮಾಡಲಾಗಿದೆ. ಯಾವೆಲ್ಲ ಕೆಲಸಗಳಿಗೆ ಎಷ್ಟು ವೆಚ್ಚವಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

  • ಒತ್ತುವರಿ ತೆರವು ವಿಚಾರ; ನಾವು ಕುಮಾರಸ್ವಾಮಿ ರಾಜೀನಾಮೆ ಕೇಳಲ್ಲ: ಚಲುವರಾಯಸ್ವಾಮಿ ಟಾಂಗ್

    ಒತ್ತುವರಿ ತೆರವು ವಿಚಾರ; ನಾವು ಕುಮಾರಸ್ವಾಮಿ ರಾಜೀನಾಮೆ ಕೇಳಲ್ಲ: ಚಲುವರಾಯಸ್ವಾಮಿ ಟಾಂಗ್

    ಬೆಂಗಳೂರು: ಕುಮಾರಸ್ವಾಮಿ (HD Kumaraswamy) ಎಲ್ಲರ ರಾಜೀನಾಮೆ ಅವರು ಕೇಳ್ತಿದ್ರಲ್ವಾ? ಆದರೆ ನಾನು ಅವರ ರಾಜೀನಾಮೆ ಕೇಳಲ್ಲ ಎಂದು ಸಚಿವ ಚಲುವರಾಯಸ್ವಾಮಿ (Chaluvarayaswamy) ಟಾಂಗ್ ಕೊಟ್ಟಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಕುಮಾರಸ್ವಾಮಿ ಬಗ್ಗೆ ಒಂದು ಮಾಹಿತಿ ಲಭಿಸಿದೆ. ಬಿಡದಿ ತೋಟದ ಮನೆಯನ್ನು ಸರ್ವೆ ಮಾಡಿ, ಮಾರ್ಕಿಂಗ್ ಮಾಡಿ, ಅಕ್ರಮ ಆಗಿದ್ದರೆ ತೆರವು ಮಾಡಿ ಎಂದು ಕೋರ್ಟ್ ಹೇಳಿದೆ ಎಂದರು. ಇದನ್ನೂ ಓದಿ: ಮಿಡ್ಲ್ ಫಿಂಗರ್ ತೋರಿಸಿ ಅಸಭ್ಯ ವರ್ತಿಸಿದ್ದಾರೆ, ರೇವಣ್ಣನನ್ನು ಬಂಧಿಸಿ – ಕೈ ಕಾರ್ಯಕರ್ತೆ ನಂದಿನಿ

    ಕುಮಾರಸ್ವಾಮಿ ಅವರು ಸಚಿವರಾಗಿ ಕೆಲಸ ಮಾಡಲಿ. ಅವರ ಥರ ನನಗೆ ಹೊಟ್ಟೆ ಉರಿ ಇಲ್ಲ. ರಾಜೀನಾಮೆ ಕೇಳಲ್ಲ ಎಂದು ಹೇಳಿದರು. ಇದನ್ನೂ ಓದಿ: ಜಾರ್ಜ್ ಸೊರೊಸ್‌ಗೆ ಇಡಿ ಶಾಕ್‌ – ಓಪನ್ ಸೊಸೈಟಿ ಫೌಂಡೇಶನ್‌ ಕಚೇರಿ ಮೇಲೆ ದಾಳಿ