Tag: chamaraja pete

  • ಪ್ರಪ್ರಥಮ ಬಾರಿಗೆ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ

    ಪ್ರಪ್ರಥಮ ಬಾರಿಗೆ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ

    ಬೆಂಗಳೂರು: ಪ್ರಪ್ರಥಮ ಬಾರಿಗೆ ಚಾಮರಾಜಪೇಟೆ (Chamarajapete) ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಯಿತು. ಸಮಯಕ್ಕೆ ಸರಿಯಾಗಿ ಬೆಳಿಗ್ಗೆ 8ಕ್ಕೆ ಧ್ವಜಾರೋಹಣ ನೆರವೇರಿಸಲಾಯಿತು. ಕಂದಾಯ ಇಲಾಖೆಯಿಂದಲೇ ಸ್ವಾತಂತ್ರ್ಯ ದಿನಾಚರಣೆಯ ರೀತಿಯಲ್ಲಿ ಕಾರ್ಯಕ್ರಮ ನಡೆಯಿತು.

    ಧ್ವಜರೋಹಣವನ್ನು ಬೆಂಗಳೂರು ಉತ್ತರ ಅಸಿಸ್ಟೆಂಟ್ ಕಮೀಷನರ್ ಡಾ.ಶಿವಣ್ಣ ನೆರವೇರಿಸಿದರು. ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್ (PC Mohan), ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ (Zameer Ahmed) ಉಪಸ್ಥಿತರಿದ್ದರು. 100ಕ್ಕೂ ಅಧಿಕ ಶಾಲ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬ್ಯಾಂಡ್ ಸೆಟ್, ಕಂಸಾಳೆ ಸೇರಿದಂತೆ ಹಲವು ವಿಶೇಷತೆಗಳು ನೋಡುಗರ ಕಣ್ಮನ ಸೆಳೆಯಿತು. ಸಂತ ತೆರೆಸ ಬಾಲಕಿಯರ ಶಾಲೆ, ಚಾಮರಾಜಪೇಟೆ ಬಾಲಕಿಯರ ಶಾಲೆ, ಸರ್ಕಾರಿ ಕನ್ನಡ, ಆಂಗ್ಲ ಪ್ರಾಥಮಿಕ ಶಾಲೆ ಸೇರಿದಂತೆ 5 ಶಾಲೆಗಳಿಂದ ಮಕ್ಕಳು ಭಾಗಿಯಾಗಿದ್ದರು.ಇದನ್ನೂ ಓದಿ: 74ನೇ ಗಣರಾಜ್ಯೋತ್ಸವಕ್ಕೆ ಕರ್ತವ್ಯಪಥ ಸಜ್ಜು- ಪರೇಡ್‍ನಲ್ಲಿ ಮಿಂಚಲಿದೆ ಕರ್ನಾಟಕ ಟ್ಯಾಬ್ಲೋ

    ಚಾಮರಾಜಪೇಟೆ ನಾಗರೀಕರಿಂದ ಜೈಕಾರ: ಸನಾತನ ಹಿಂದೂಧರ್ಮಕ್ಕೆ ಜೈ ಮತ್ತು ಭಾರತಮಾತೆಗೆ ಜೈಕಾರವನ್ನು ಕಾರ್ಯಕ್ರಮದ ವೇಳೆ ಚಾಮರಾಜಪೇಟೆ ನಾಗರೀಕರು ಕೂಗಿದರು.

    ಸಿಸಿಟಿವಿ ಮಾನಿಟರಿಂಗ್: ಕಾರ್ಯಕ್ರಮ ಮುಗಿದ ನಂತರ ಮೈದಾನದಿಂದ ನಿರ್ಗಮಿಸಲು ಸೂಚನೆ ನೀಡಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರೂ ಸಜ್ಜಾಗಿದ್ದರು. ಸಿಸಿಟಿವಿ ಅಳವಡಿಸಿ ಮಾನಿಟರಿಂಗ್ ಮಾಡುವುದಕ್ಕೆ ಕೊಠಡಿ ಸಜ್ಜು ಮಾಡಲಾಗಿತ್ತು. ಒಟ್ಟಿನಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

    ಸರ್ಕಾರಕ್ಕೆ ಮತ್ತೆ ಈದ್ಗಾ ವಿವಾದ ಟೆನ್ಷನ್- ಜ. 21ರೊಳಗೆ ನಿಲುವು ಪ್ರಕಟಿಸಲು ಡೆಡ್‍ಲೈನ್

    ಚಾಮರಾಜಪೇಟೆ ನಾಗರೀಕರ ಒಕ್ಕೂಟಕ್ಕೆ ಸಿಕ್ಕ ಜಯ: ಇದು ಚಾಮರಾಜಪೇಟೆ ನಾಗರೀಕರ ಒಕ್ಕೂಟ ಹಾಗೂ ಹಿಂದೂ ಸಂಘಟನೆಗಳ ಹೋರಾಟಕ್ಕೆ ದಕ್ಕಿದ ಪ್ರತಿಫಲವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗುತ್ತಿದ್ದು, ಧ್ವಜಾರೋಹಣ ಮಾತ್ರವಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವಕಾಶಕ್ಕೆ ಒಕ್ಕೂಟ ಒತ್ತಾಯ ಮಾಡಿದ್ದರು. ನಮ್ಮ ದೇಶದ ಹಬ್ಬವನ್ನು ಆಚರಿಸಲು ಯಾಕೆ ಹಿಂದೇಟು ಹಾಕಬೇಕು ಎಂದು ಪ್ರಶ್ನೆ ಕೇಳಿದ್ದರು. ಸೂಕ್ಷ್ಮ ಪ್ರದೇಶವಾಗಿರುವುದರಿಂದ ಇತರ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಈ ಮೊದಲು ಎನ್ನಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶಾಸಕ ಜಮೀರ್ ಕಚೇರಿಯಲ್ಲಿ ಅದ್ಧೂರಿ ಗಣೇಶೋತ್ಸವ..!

    ಶಾಸಕ ಜಮೀರ್ ಕಚೇರಿಯಲ್ಲಿ ಅದ್ಧೂರಿ ಗಣೇಶೋತ್ಸವ..!

    ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಕಚೇರಿಯಲ್ಲಿಯೇ ಅದ್ದೂರಿಯಾಗಿ ಗಣೇಶೋತ್ಸವವನ್ನು ಆಚರಿಸಲಾಗಿದೆ.

    ಚಾಮರಾಜಪೇಟೆ ವರ್ತಕರ ಬೀದಿಯಲ್ಲಿರುವ ಶಾಸಕರ ಕಚೇರಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ತಿರುಮಲ ತಿರುಪತಿ ಸೆಟಪ್ ನಲ್ಲಿ ಗಣಪನನ್ನು ಪ್ರತಿಷ್ಠಾಪಿಸಲಾಗಿದ್ದು, ಅಂದಾಜು 3.5 ಲಕ್ಷ ರೂ. ವೆಚ್ಚ ವ್ಯಯಿಸಲಾಗಿದೆ.

    ಈ ಗಣೇಶ ಮೂರ್ತಿ 3 ಅಡಿ ಎತ್ತರವಿದೆ. ಬೆಳಗ್ಗೆ 10:30ರ ಸುಮಾರಿಗೆ ಪೂಜಾ ಕೈಂಕರ್ಯ ನೆರವೇರಿದೆ. ಬಳಿಕ ಸುಮಾರು 3 ಸಾವಿರಕ್ಕೂ ಅಧಿಕ ಭಕ್ತಾದಿಗಳಿಗೆ ಸ್ವತಃ ಜಮೀರ್ ಅವರೇ ಪ್ರಸಾದ ವಿತರಣೆ ಮಾಡಿದ್ದಾರೆ. ಇದನ್ನೂ ಓದಿ: ತೇಲುವ ಫ್ರೀಜರ್ ಸಹಾಯದಿಂದ 11 ದಿನ ಸಮುದ್ರದಲ್ಲೇ ಜೀವ ಉಳಿಸಿಕೊಂಡ

    ಇಂದು ಸಂಜೆ ಅದ್ದೂರಿ ಮೆರವಣಿಗೆ ನಡೆದಿದ್ದು, ಮಾಜಿ ಪಾಲಿಕೆ ಸದಸ್ಯರಾದ ಅಲ್ತಾಫ್ ಖಾನ್, ಚಂದ್ರಶೇಖರ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಯಡಿಯೂರು ಲೇಕ್ ನಲ್ಲಿ ಮೂರ್ತಿ ವಿಸರ್ಜನೆ ಮಾಡಲಾಗಿದೆ. ಭಕ್ತಾದಿಗಳಿಗೆ ಲಡ್ಡು ಮತ್ತು ಖರ್ಜಿಕಾಯಿ ಪ್ರಸಾದವಾಗಿ ನೀಡಲಾಗಿದೆ.

    Live Tv
    [brid partner=56869869 player=32851 video=960834 autoplay=true]