Tag: Chamaraja Wadiyar

  • ಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು : ಯದುವೀರ್

    ಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು : ಯದುವೀರ್

    ಮೈಸೂರು: ಚಾಮುಂಡಿ ಬೆಟ್ಟ (Chamundi Hill) ನಮ್ಮ ಸಂಸ್ಥಾನಕ್ಕೆ ಸೇರಿದ್ದು ಎಂದು ಮೈಸೂರು ಸಂಸದ ಯದುವೀರ್‌ ಒಡೆಯರ್‌ (Yaduveer Krishnadatta Chamaraja Wadiyar) ಹೇಳಿದ್ದಾರೆ.

    ಕರ್ನಾಟಕ ಸರ್ಕಾರ (Karnataka Government) ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪಬ್ಲಿಕ್‌ ಟಿವಿ ಜೊತೆ ಅವರು ಮಾತನಾಡಿದರು. ಇದನ್ನೂ ಓದಿ: ಸಂಪನ್ಮೂಲದ ಗ್ಯಾರಂಟಿ ಇಲ್ಲದೇ ತಂದ ಗ್ಯಾರಂಟಿ ಯೋಜನೆಗಳನ್ನು ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ: ಅಶೋಕ್

     

    ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಾಧಿಕಾರದ ರಚನೆ ಅಗತ್ಯವಿಲ್ಲ. ದೇವಸ್ಥಾನದ (Temple) ಜೊತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು ಪರೋಕ್ಷವಾಗಿ ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂದು ಹೇಳಿದರು.

    ಶಿಲ್ಪಿ ಅರುಣ್ ಯೋಗಿರಾಜ್‌ (Arun Yogiraj) ಅವರಿಗೆ ಅಮೆರಿಕ ವೀಸಾ ನಿರಾಕರಣೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಅರುಣ್ ಜೊತೆ ಮಾತನಾಡಿದ್ದೇನೆ. ಯಾವ ಕಾರಣಕ್ಕೆ ವೀಸಾ ತಿರಸ್ಕೃತವಾಗಿದೆ ಎನ್ನುವುದು ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಪಡೆದು ಕೇಂದ್ರ ಸಚಿವರ ಜೊತೆಯೂ ಮಾತನಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಬಾಲ ರಾಮನ ಮೂರ್ತಿ ಕೆತ್ತಿದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಅಮೆರಿಕ ವೀಸಾ ನಿರಾಕರಣೆ

     

  • ಅಪ್ಪನ ದರ್ಬಾರ್ ನೋಡಿ ಕಿಲಕಿಲ ನಕ್ಕ ಆದ್ಯವೀರ

    ಅಪ್ಪನ ದರ್ಬಾರ್ ನೋಡಿ ಕಿಲಕಿಲ ನಕ್ಕ ಆದ್ಯವೀರ

    ಮೈಸೂರು: ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಖಾಸಗಿ ದರ್ಬಾರ್ ಬುಧವಾರ ಆರಂಭವಾಗಿದ್ದು, ಈ ವೇಳೆ ಮೊದಲ ಬಾರಿಗೆ ಖಾಸಗಿ ದರ್ಬಾರಿನಲ್ಲಿ ಭಾಗವಹಿಸಿದ್ದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪುತ್ರ ಆದ್ಯವೀರ ನರಸಿಂಹರಾಜ ಒಡೆಯರ್ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದರು. ಈ ವೇಳೆ ಅಪ್ಪನ ದರ್ಬಾರ್ ಕಂಡ ಆದ್ಯವೀರ ತನ್ನ ಮುದ್ದ ನಗುವಿನ ಎಲ್ಲರ ಗಮನ ಸೆಳೆದಿದ್ದಾರೆ.

    ಅರಮನೆಯ ಖಾಸಗಿ ದರ್ಬಾರಿನಲ್ಲಿ ಭಾಗವಹಿಸಿದ್ದ ಆದ್ಯವೀರ ಅವರ ಫೋಟೋ ಲಭ್ಯವಾಗಿದ್ದು, ತಾಯಿ ತ್ರಿಷಿಕಾ ಹಾಗೂ ರಾಜಮಾತೆ ಪ್ರಮೋದಾ ದೇವಿ ಅವರ ಆರೈಕೆಯಲ್ಲಿದ್ದರು. ಪೂಜಾ ವಿಧಾನದಲ್ಲಿ ಪಾಲ್ಗೊಳ್ಳುವ ಮುನ್ನ ಅರಮನೆಗೆ ತಾಯಿಯೊಂದಿಗೆ ಆಗಮಿಸಿದ್ದ ಆದ್ಯವೀರ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಅಚ್ಚಯಿಂದಲೇ ಗಮನಿಸುತ್ತಿದ್ದರು. ಇತ್ತ ರಾಜಾಪೋಷಾಕಿನಲ್ಲಿ ಕಂಗೊಳಿಸುತ್ತಿರುವ ಯದುವೀರ್ ಅವರು ತಿಳಿ ನೀಲಿ ಬಣ್ಣ ಸಾಂಪ್ರದಾಯಿಕ ಮೈಸೂರಿನ ಪೇಟಾ, ಗುಲಾಬಿ ವರ್ಣದ ನಿಲುವಂಗಿ, ಪೈಜಾಮಾ ಧರಿಸಿದ್ದರು. ನಿಲುವಂಗಿಯ ಮೇಲೆ ಗಂಡಭೇರುಂಡ ರಾಜ ಲಾಂಛನ ರಾರಾಜಿಸುತ್ತಿತ್ತು. ಅಲ್ಲದೇ ಮುತ್ತಿನ ಹಾರ, ಸ್ವರ್ಣ ಹಾರ, ಸ್ವರ್ಣ ತೋಳು ಬಂದಿ, ಮುತ್ತು ರತ್ನ ಖಚಿತ ಉಂಗುರ ತೊಟ್ಟಿದ್ದರು.

    ಈ ಬಾರಿಯ ದಸರಾ ಐತಿಹಾಸಿಕವಾಗಿದ್ದು, ಯದುವಂಶದ ಆದ್ಯವೀರ ನರಸಿಂಹರಾಜ ಒಡೆಯರ್ ಕೂಡ ತಮ್ಮ ಮೊದಲ ದಸರಾ ಹಬ್ಬದಲ್ಲಿ ಭಾಗವಹಿಸಿದ್ದರು. ಡಿ. 6 2017ರಲ್ಲಿ ಜನಿಸಿದ್ದ ಆದ್ಯವೀರಿಗೆ ಇದೇ ಮೊದಲ ದಸರಾವಾಗಿದೆ. ಮೈಸೂರಿನ ಸಂಸ್ಥಾನದ ಯದುವಂಶಕ್ಕೆ ಸುಮಾರು 6 ದಶಕಗಳಿಂದ ಸಂತಾನ ಇರಲಿಲ್ಲ. ಆದರೆ ಕಳೆದ ವರ್ಷ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ದಂಪತಿಗೆ ಆದ್ಯವೀರ ಜನಿಸುವ ಮೂಲಕ ರಾಜಮನೆತನಕ್ಕೆ ಸಂತಾನ ಪ್ರಾಪ್ತಿಯಾಗಿತ್ತು. ಈ ಸಂತಸವನ್ನು ಇಡೀ ನಾಡಿನ ಜನತೆಯೂ ಸಂಭ್ರಮಿಸಿತ್ತು.

    ದಸರಾ ಆರಂಭಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಆದ್ಯವೀರ ನರಸಿಂಹರಾಜ ಒಡೆಯರ್ ಭಾಗಿಯಾಗುತ್ತಿರುವುದು ಖುಷಿ ತಂದಿದೆ. ನಮ್ಮ ಕುಟಂಬದ ಮತ್ತೊಬ್ಬ ಸದಸ್ಯ ಹಲವು ವರ್ಷಗಳ ನಂತರ ಪಾಲ್ಗೊಳ್ಳುತ್ತಿರುವುದು ಸಂತಸ ಇಮ್ಮಡಿಗೊಳಿಸಿದೆ. ದಸರಾದ ಸಿದ್ಧತೆಯಲ್ಲಿ ತೊಡಗಿಕೊಂಡಿರುವುದರಿಂದ ಆದ್ಯವೀರನನ್ನು ಗಮನಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv