Tag: chamarajapete maidan

  • ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣರಾಜೋತ್ಸವಕ್ಕೆ ಗ್ರೀನ್‌ ಸಿಗ್ನಲ್: ಲಹರಿ ವೇಲು ಸಂತಸ

    ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣರಾಜೋತ್ಸವಕ್ಕೆ ಗ್ರೀನ್‌ ಸಿಗ್ನಲ್: ಲಹರಿ ವೇಲು ಸಂತಸ

    ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನದಲ್ಲಿ (Chamarajapet Maidan) ಕಂದಾಯ ಇಲಾಖೆ ವತಿಯಿಂದ ಗಣರಾಜೋತ್ಸವ (Republic Day) ಆಚರಣೆಗೆ ಗ್ರೀನ್ ಸಿಗ್ನಲ್ ಬೆನ್ನಲ್ಲೆ ಲಹರಿ ಸಂಸ್ಥೆ ಮುಖ್ಯಸ್ಥ ಲಹರಿ ವೇಲು (Lahari Velu) ಸಂತಸ ವ್ಯಕ್ತಪಡಿಸಿದ್ದಾರೆ.

    ‘ಪಬ್ಲಿಕ್ ಟಿವಿ’ (Public TV) ಜೊತೆ ಮಾತಾನಾಡಿದ ಲಹರಿ ವೇಲು, ಚಾಮರಾಜಪೇಟೆ ಆಟದ ಮೈದಾನದಲ್ಲಿ 75 ವರ್ಷಗಳ ಬಳಿಕ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಿದ್ದೆವು. ಅದರ ಬಳಿಕ ಗಣೇಶೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಆಚರಣೆಗೆ ಸಾಧ್ಯ ಆಗಿರಲಿಲ್ಲ. ಸದ್ಯ ಸರ್ಕಾರ ಈ ಬಾರಿ ಗಣರಾಜೋತ್ಸವ ಆಚರಣೆಗೆ ಮುಂದಾಗಿರೋದು ಸಂತಸದ ವಿಚಾರ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮೊದಲು ಕ್ಷೇತ್ರ ಹುಡುಕಿಕೊಳ್ಳಲಿ, ಆಮೇಲೆ JDS ಬಗ್ಗೆ ಮಾತಾಡಲಿ – ಸಿ.ಎಂ ಇಬ್ರಾಹಿಂ

    ಚಾಮರಾಜಪೇಟೆ ಸ್ಥಳೀಯ ನಿವಾಸಿಯಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಕಂದಾಯ ಸಚಿವರಿಗೆ ಮತ್ತು ಸ್ಥಳೀಯ ಸಂಸದರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದು ಇನ್ಮುಂದೆ ಕೂಡ ಮುಂದುವರೆಯಬೇಕು. ಚಾಮರಾಜಪೇಟೆ ಜನ ಶಾಂತಿಯುತವಾಗಿ ಯಾವುದೇ ಕಾರ್ಯಕ್ರಮಗಳಾದ್ರು ಸಹಕಾರ ನೀಡುತ್ತಾರೆ ಎಂದು ಹೇಳಿದ್ದಾರೆ.

    ಮುಂಬರುವ ದಿನಗಳಲ್ಲಿ ರಾಮನವಮಿ ಸೇರಿದಂತೆ ಇನ್ನೂ ಹಲವು ಕಾರ್ಯಕ್ರಮಗಳನ್ನ ಮಾಡಲಿದ್ದೇವೆ. ಗಣರಾಜೋತ್ಸವ ವಿಚಾರವಾಗಿ ಕಂದಾಯ ಇಲಾಖೆ ಯಾವುದೇ ಸಲಹೆ, ಸಹಕಾರ ಕೇಳಿದ್ರೂ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜ.23ರಂದು ಬೆಂಗ್ಳೂರಿನ 300 ಕಡೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ – ಸರ್ಕಾರದ ವಿವೇಚನೆಗೆ ಬಿಟ್ಟ ಹೈಕೋರ್ಟ್‌

    ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ – ಸರ್ಕಾರದ ವಿವೇಚನೆಗೆ ಬಿಟ್ಟ ಹೈಕೋರ್ಟ್‌

    ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಯೋದು ಬಹುತೇಕ ಖಚಿತವಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠದ ಮಧ್ಯಂತರ ತೀರ್ಪನ್ನು ಮಾರ್ಪಾಡು ಮಾಡಿರುವ ವಿಭಾಗೀಯ ಪೀಠ, ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವ ನಿರ್ಧಾರವನ್ನು ಸರ್ಕಾರಕ್ಕೆ ಬಿಟ್ಟಿದೆ.

    ಆಗಸ್ಟ್ 31ರಿಂದ ನಿರ್ದಿಷ್ಟ ಅವಧಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶ ನೀಡಬಹುದು. ಗಣೇಶೋತ್ಸವ ಮಾಡಬಹುದು. ಆದರೆ ಈ ಬಗ್ಗೆ ಅನುಮತಿ ನೀಡೋದು ಬಿಡೋದು ಸರ್ಕಾರದ ವಿವೇಚನೆಗೆ ಬಿಟ್ಟಿದ್ದೇವೆ ಎಂದು ಹೈಕೋರ್ಟ್ ಆದೇಶ ನೀಡಿದೆ. ಗಣೇಶೋತ್ಸವಕ್ಕೆ ಒಂದು ದಿನ ಮಾತ್ರ ಅವಕಾಶ ನೀಡಬಹುದು ಎಂದು ಪೊಲೀಸ್ ಇಲಾಖೆ ಶಿಫಾರಸ್ಸು ಮಾಡಿದೆ. ಕೋರ್ಟ್ ಕೂಡ ಇದೇ ವಿಚಾರವನ್ನು ಪ್ರಸ್ತಾಪ ಮಾಡಿದೆ. ಇದನ್ನೂ ಓದಿ: ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್- ಹೈಕೋರ್ಟ್ ಆದೇಶದ ಬೆನ್ನಲ್ಲೇ ಕಣ್ಣೀರಿಟ್ಟ ಯಶವಂತ್

    ಪಾರ್ಟಿದಾರರು ಸುಪ್ರೀಂಕೋರ್ಟ್ ಮೊರೆ ಹೋಗಬಹುದು ಎಂದು ಕೂಡ ಹೈಕೋರ್ಟ್ ತಿಳಿಸಿದೆ. ಆದರೆ ನಾಳೆಯಿಂದ ಗುರುವಾರದವರೆಗೆ ಕೋರ್ಟ್ ರಜೆ ಇರುವ ಕಾರಣ, ವಕ್ಫ್ ಬೋರ್ಡ್ ಮೇಲ್ಮನವಿ ಸಲ್ಲಿಸುವ ಸಾಧ್ಯತೆಗಳು ಕಡಿಮೆ ಇವೆ. ಚಾಮರಾಜಪೇಟೆ ಮೈದಾನ ಮಾಲೀಕತ್ವ ವಿಚಾರವಾಗಿ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠದ ಮೊರೆ ಹೋಗಿತ್ತು.ಇದನ್ನೂ ಓದಿ: ಹೆಚ್‌ಡಿಕೆ ರಾಜಕೀಯ ಸ್ಟಂಟ್ ಮಾಡಿದರೆ ಉಪಯೋಗವೇನು – ಸಚಿವ ಸುಧಾಕರ್ ಪ್ರಶ್ನೆ

    karnataka highcourt

    ಒಂದು ದಿನದ ಮಟ್ಟಿಗಾದ್ರೂ ಗಣೇಶೋತ್ಸವಕ್ಕೆ ಅನುಮತಿಸಿ. ಈ ಬಗ್ಗೆ ಅರ್ಜಿಗಳು ಬರುತ್ತಿವೆ. ಅವುಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಎಲ್ಲಾ ಸಮುದಾಯಗಳನ್ನು ಸಮಾನವಾಗಿ ಕಾಣಬೇಕಿದೆ. ಎರಡು ಸಮುದಾಯಗಳ ಹಿತಾಸಕ್ತಿ ಪರಿಗಣಿಸಿ ತೀರ್ಪು ನೀಡಬೇಕು ಎಂದು ಎಜಿ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದ್ರು. ಇದಕ್ಕೆ ಹೈಕೋರ್ಟ್ ಕೂಡ ಸ್ಪಂದಿಸಿತು. ಹೈಕೋರ್ಟ್ ತೀರ್ಪಿಗೆ ಸಚಿವ ಅಶೋಕ್ ಸಂತಸ ವ್ಯಕ್ತಪಡಿಸಿದ್ದಾರೆ. ಕೋರ್ಟ್ ತೀರ್ಪು ಪರಿಶೀಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

    ನಾಳೆ ಸಿಎಂ ಬೊಮ್ಮಾಯಿ ಸಭೆ ನಡೆಸಿ, ಕಾನೂನು ಸುವ್ಯವಸ್ಥೆಗೆ ಅನುಗುಣವಾಗಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸರ್ಕಾರ ಒಂದು ದಿನದ ಮಟ್ಟಿಗೆ ಗಣೇಶೋತ್ಸವಕ್ಕೆ ಅನುಮತಿ ನೀಡುವ ಸಾಧ್ಯತೆಗಳು ಹೆಚ್ಚಿವೆ. ಚಾಮರಾಜಪೇಟೆ ನಾಗರೀಕರ ಒಕ್ಕೂಟ ಮತ್ತು ಹಿಂದೂ ಸಂಘಟನೆಗಳು ಈ ಬೆಳವಣಿಗೆಯಿಂದ ಖುಷಿ ಆಗಿವೆ. ಕೋರ್ಟ್ ಆದೇಶ ಪೊಲೀಸ್ ಆಯುಕ್ತರು ಈದ್ಗಾ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ – ಅಧಿಕೃತ ಆದೇಶ

    ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ – ಅಧಿಕೃತ ಆದೇಶ

    ಬೆಂಗಳೂರು: 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಾದಿತ ಚಾಮರಾಜಪೇಟೆ ಆಟದ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ಮಾಡುವ ಬಗ್ಗೆ ಅಧಿಕೃತ ಆದೇಶ ಹೊರಬಿದ್ದಿದೆ.

    ಸರ್ವೇ ನಂಬರ್ 40, ಗುಟ್ಟಹಳ್ಳಿ, ಚಾಮರಾಜಪೇಟೆ ಬಡಾವಣೆ ಸ್ವತ್ತಿನ ಸಂಖ್ಯೆ 147ರ ಆಟದ ಮೈದಾನದಲ್ಲಿ ಧ್ವಜಾರೋಹಣ ನೆರೆವೇರಿಸಲಾಗುವುದು ಎಂದು ಬೆಂಗಳೂರು ಉತ್ತರ ಉಪವಿಭಾಗದ ಅಧಿಕಾರಿ ಆದೇಶ ಹೊರಡಿಸಿದ್ದಾರೆ. ಚಾಮರಾಜಪೇಟೆ ಮೈದಾನವನ್ನು ಈದ್ಗಾ ಮೈದಾನ ಎಂದು ಸರ್ಕಾರ ಎಲ್ಲಿಯೂ ಉಲ್ಲೇಖಿಸಿಲ್ಲ. ಇದನ್ನೂ ಓದಿ: ರಾಜ್ಯದಲ್ಲಿ ಶುರುವಾಯ್ತು ಹರ್ ಘರ್ ತಿರಂಗಾ ಹವಾ – ತಿರಂಗಾ ನಡೆಗೆ ಚಾಲನೆ ನೀಡಿದ ಪ್ರಹ್ಲಾದ್ ಜೋಶಿ

    ಪ್ರಸ್ತುತ ದಿನಗಳಲ್ಲಿ ಈದ್ಗಾ ಮೈದಾನ ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಮೈದಾನ ತಮಗೆ ಸೇರಿದ್ದು ಎಂದು ವಕ್ಫ್‌ ಬೋರ್ಡ್‌ ವಾದಿಸುತ್ತಿದೆ. ಆದರೆ ಇದು ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಹೇಳುತ್ತಿದೆ.

    ಈದ್ಗಾ ಮೈದಾನ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಹಿಂದೂಪರ ಸಂಘಟನೆಗಳು, ಮೈದಾನದಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಪಟ್ಟು ಹಿಡಿದಿವೆ. ಅಲ್ಲದೇ ಸ್ವಾತಂತ್ರ್ಯ ದಿನಾಚರಣೆ ವೇಳೆಯೂ ಧ್ವಜಾರೋಹಣಕ್ಕೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಇತ್ತ ಮುಸ್ಲಿಮರು ಕೂಡ ನಾವು ಧ್ವಜಾರೋಹಣ ಮಾಡುತ್ತೇವೆ ಎಂದು ಹೇಳಿದ್ದರು. ಇದಕ್ಕೆ ಅವಕಾಶ ಕಲ್ಪಿಸಿದರೆ ಶಾಂತಿಭಂಗವಾಗುವ ಭೀತಿಯಿಂದಾಗಿ ಸರ್ಕಾರದ ನೇತೃತ್ವದಲ್ಲೇ ಧ್ವಜಾರೋಹಣ ನಡೆಸಲು ಕ್ರಮಕೈಗೊಳ್ಳಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯರಿಂದ ನಾವು ರಾಷ್ಟ್ರಭಕ್ತಿ ಪಾಠ ಕಲಿಯೋ ಅವಶ್ಯಕತೆ ಇಲ್ಲ: ಆರಗ ಜ್ಞಾನೇಂದ್ರ

    ವಿವಾದಿತ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]