Tag: Chamarajpet

  • ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಸಂಜೆ ನಿರ್ಧಾರ: ಸಿಎಂ ಬೊಮ್ಮಾಯಿ

    ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಸಂಜೆ ನಿರ್ಧಾರ: ಸಿಎಂ ಬೊಮ್ಮಾಯಿ

    ರಾಯಚೂರು: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಸಂಜೆ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ರಾಯಚೂರು ಕೃಷಿ ವಿವಿಯಲ್ಲಿ ಆಯೋಜಿಸಿರುವ ಸಿರಿಧಾನ್ಯ ಮೇಳಕ್ಕೆ ಬಸವರಾಜ್ ಬೊಮ್ಮಾಯಿ ಅವರು ಆಗಮಿಸಿದ್ದರು. ಈ ವೇಳೆ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಕುರಿತಂತೆ ಉನ್ನತ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಭೆ ನಡೆಯುತ್ತಿದೆ. ನಾನು ಈಗಲೇ ಏನೂ ಹೇಳುವುದಿಲ್ಲ, ಸದ್ಯ ಬೆಂಗಳೂರಿನಲ್ಲಿ ಸಭೆ ನಡೆಯುತ್ತಿದೆ. ಸಂಜೆ ಸಭೆ ಬಳಿಕ ನಾನು ಬೆಂಗಳೂರಿಗೆ ಹೋದ ಮೇಲೆ ಮುಂದಿನದನ್ನು ಹೇಳುತ್ತೇನೆ ಎಂದು ತಿಳಿಸಿದ್ದಾರೆ.

    ನಂತರ ಶಿಕ್ಷಣ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕುರಿತ ರುಪ್ಸಾ ಆರೋಪ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಶಿಕ್ಷಣ ಸಚಿವರು ಆರೋಪದಲ್ಲಿ ಯಾವುದೇ ಹುರುಳಿಲ್ಲ ಅಂತ ಹೇಳಿದ್ದಾರೆ. ನಾನು ಮತ್ತೆ ಅದಕ್ಕೆ ಸ್ಪಷ್ಟೀಕರಣ ಕೊಡುವ ಅಗತ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಮೆರಿಕದ ವಿರುದ್ಧ ಬೆಂಗಳೂರಿನಲ್ಲಿ ಚೀನಾ ಕಾರ್ಯಕ್ರಮ – ಸಿದ್ದರಾಮಯ್ಯ, ಮಹಾದೇವಪ್ಪ ಮುಖ್ಯ ಅತಿಥಿ

    ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿವಾದಾತ್ಮಕ ಹೇಳಿಕೆಗಳ ವಿಚಾರವಾಗಿ ಮಾತನಾಡಿ, ರಾಯಚೂರು ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ತೆಲಂಗಾಣ ಸಿಎಂ ಕೆಸಿಆರ್ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ. ತೆಲಂಗಾಣ ಇನ್ನೂ ಹಿಂದುಳಿದ ಪ್ರದೇಶವಾಗಿದೆ. ಮೊದಲು ಕೆಸಿಆರ್ ತೆಲಂಗಾಣ ಅಭಿವೃದ್ಧಿಗೆ ಮುಂದಾಗಬೇಕು. ಯಾವುದೇ ರಾಜ್ಯಕ್ಕೆ ನಮ್ಮ ಒಂದಿಂಚು ಜಾಗವನ್ನು ನಾವು ಬಿಟ್ಟುಕೊಡುವುದಿಲ್ಲ ಎಂದು ಗುಡುಗಿದ್ದಾರೆ.

    ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಕುರಿತು ಕಳೆದ ಬಾರಿ ದೆಹಲಿಗೆ ಹೋದಾಗ ಕೇಂದ್ರ ಆರೋಗ್ಯ ಸಚಿವರಿಗೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಬಗ್ಗೆ ಮಾತನಾಡಿದ್ದೇನೆ. 371 ಜೆ ಇರುವ ಭಾಗ, ಮಹತ್ವಾಕಾಂಕ್ಷೆ ಜಿಲ್ಲೆ, ಅಪೌಷ್ಟಿಕತೆ ಇರುವ ಜಿಲ್ಲೆಗೆ ಏಮ್ಸ್ ನಂತ ಸಂಸ್ಥೆ ಬೇಕು ಅಂತ ಮನವರಿಕೆ ಮಾಡಿ ಹೇಳಿದ್ದೇನೆ. ಅತೀ ಶೀಘ್ರದಲ್ಲಿ ಒಂದು ನಿರ್ಣಯ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 54 ವರ್ಷ, ಮಾಡಿರೋದು 164 + ಕಳ್ಳತನ – ಭೂಪನಿಗಿದ್ದಾರೆ ಮೂವರು ಹೆಂಡ್ತಿರು, 7 ಮಕ್ಳು

    ತುಮಕೂರಿನ ಶಿರಾ ಬಳಿ ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಬದಲಿ ವ್ಯವಸ್ಥೆ ಮಾಡಿದ್ದೇವೆ. ನಿಮ್ಹಾನ್ಸ್‌ನಲ್ಲಿ ಮೊದಲ ಪ್ರಾಶಸ್ತ್ಯದಲ್ಲಿ ಚಿಕಿತ್ಸೆ ನೀಡಲು ನಿಮ್ಹಾನ್ಸ್‌ ನಿರ್ದೇಶಕರಿಗೆ ತಿಳಿಸಿದ್ದೇನೆ. ಅವರ ಸಂಪೂರ್ಣ ವೆಚ್ಚ ನಾವೇ ಭರಿಸಲಿದ್ದೇವೆ. ಹಿಂದುಳಿದ ಭಾಗದ ಜನ ಗುಳೆ ಹೋಗುವುದನ್ನ ತಪ್ಪಿಸಲು ನೀರಾವರಿ ಅಭಿವೃದ್ಧಿಯಾಗಬೇಕಿದೆ. ಇಲ್ಲಿನ ಇಂಡಸ್ಟ್ರಿ ಸೆಂಟರ್ ವಿಸ್ತರಣೆ ಮಾಡುತ್ತೇವೆ. ಇಲ್ಲಿನ ಜನರಿಗೆ ಹೆಚ್ಚು ಉದ್ಯೋಗ ಸಿಗುವ ದೃಷ್ಟಿಯಲ್ಲಿ ಗಾರ್ಮೆಂಟ್ ಉದ್ಯಮ ಬೆಳೆಯಬೇಕಿದೆ. ಬಳ್ಳಾರಿ, ರಾಯಚೂರು, ಕಲಬುರಗಿ ವಿಶೇಷ ಅಭಿವೃದ್ಧಿಗೆ ಕ್ರಮ ವಹಿಸಿದ್ದೇವೆ. ಕಲಬುರಗಿಗೆ ಟೆಕ್ಸ್ ಟೈಲ್ ಪಾರ್ಕ್ ಶಿಫಾರಸು ಮಾಡಿದ್ದೇವೆ. ರಾಜ್ಯದ ಕಾರ್ಯಕ್ರಮದ ಅಡಿ ರಾಯಚೂರಿಗೆ ಗಾರ್ಮೆಂಟ್ ಇಂಡಸ್ಟ್ರಿ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದ್ದಾರೆ.

    ಕೃಷ್ಣ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವ ನಿಟ್ಟಿನಲ್ಲಿ 9 ಯೋಜನೆ ಕೈಗೆತ್ತಿಕೊಂಡಿದ್ದೇವೆ. ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಿಸುವ ಕುರಿತ ವಿಚಾರ ಸುಪ್ರೀಂಕೋರ್ಟ್‍ನಲ್ಲಿದೆ. ನೋಟಿಫಿಕೇಷನ್ ಬಂದ ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳುತ್ತೇವೆ. ಇದಕ್ಕಾಗಿ 1 ಲಕ್ಷ 30 ಸಾವಿರ ಹೆಕ್ಟೇರ್ ಭೂ ಸ್ವಾಧೀನ ಹಾಗೂ 22 ಹಳ್ಳಿಗಳ ಸ್ಥಳಾಂತರ ಮಾಡಬೇಕು. ಈಗಾಗಲೇ ಹಳ್ಳಿಗಳ ಸ್ಥಳಾಂತರ ಪ್ರಕ್ರಿಯೆ ಆರಂಭವಾಗಿದೆ. ಅದಕ್ಕೆ 5 ಸಾವಿರ ಕೋಟಿ ಬೇಕಾಗುತ್ತೆ ಅದನ್ನು ಒದಗಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಈದ್ಗಾ ಮೈದಾನದ ವಿವಾದ- ಸರ್ಕಾರದ ನಿರ್ಧಾರವೇ ಅಂತಿಮ: ಬೊಮ್ಮಾಯಿ

    ಈದ್ಗಾ ಮೈದಾನದ ವಿವಾದ- ಸರ್ಕಾರದ ನಿರ್ಧಾರವೇ ಅಂತಿಮ: ಬೊಮ್ಮಾಯಿ

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರ ನೀತಿ ನಿಯಮಗಳ ಪ್ರಕಾರ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

    ಈದ್ಗಾ ಮೈದಾನ ವಿವಾದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಅದು ಕಂದಾಯ ಇಲಾಖೆ ಜಾಗ ಅಂತ ನಿರ್ಧಾರ ಆಗಿದೆ. ಕಂದಾಯ ಇಲಾಖೆ ಜಾಗ ಅಂದರೆ ಅದು ಸರ್ಕಾರದ ಜಾಗ. ಸರ್ಕಾರದ ಜಾಗದಲ್ಲಿ ಸರ್ಕಾರದ ನೀತಿ ನಿಯಮಗಳ ಪ್ರಕಾರ ಅಲ್ಲಿ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಸ್ಪಷ್ಟವಾಗಿ ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ಸಿಗರ ಮನಸ್ಥಿತಿಯಲ್ಲಿ ಅತಂತ್ರವಿದೆ, ನಾನು ಮತ್ತಷ್ಟು ಗಟ್ಟಿಯಾಗಿದ್ದೇನೆ: ಬೊಮ್ಮಾಯಿ

    ಶಾಸಕ ಜಮೀರ್ ಅಹ್ಮದ್‍ರಿಂದ ಗಣೇಶೋತ್ಸವ ಮಾಡಲು ಬಿಡೊಲ್ಲ ಎಂಬ ಹೇಳಿಕೆಗೆ ತಿರುಗೇಟು ಕೊಟ್ಟ ಸಿಎಂ, ಜಮೀರ್ ಹೇಳಿಕೆಗೆ ಬೆಲೆ ಇಲ್ಲ. ಯಾರ್ ಏನೇ ಹೇಳಿದರು ಕಾನೂನು ಪ್ರಕಾರವೇ ಕಾರ್ಯಕ್ರಮಗಳು ನಡೆಯುತ್ತವೆ. ಸರ್ಕಾರದ ನೀತಿ ನಿಯಮದ ಪ್ರಕಾರ ಕಾರ್ಯಕ್ರಮ ನಡೆಯುತ್ತವೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಪ್ರಯಾಣಿಕರಿಗೆ ಗುಡ್ ನ್ಯೂಸ್- ಆ.15ರಂದು ಬಿಎಂಟಿಸಿ ಬಸ್‍ನಲ್ಲಿ ಫ್ರೀ ಪ್ರಯಾಣ

    Live Tv
    [brid partner=56869869 player=32851 video=960834 autoplay=true]

  • ಇದು ಸ್ವತಂತ್ರ ಭಾರತ, ಇಲ್ಲಿ ಪಾಳೇಗಾರಿಕೆ ನಡೆಸಲು ಜಮೀರ್ ಸಾದಿಕ್ ಪ್ರೋತ್ಸಾಹ ಇದ್ಯಾ : ಜಮೀರ್ ವಿರುದ್ಧ ಬಿಜೆಪಿ ಟ್ವೀಟ್

    ಇದು ಸ್ವತಂತ್ರ ಭಾರತ, ಇಲ್ಲಿ ಪಾಳೇಗಾರಿಕೆ ನಡೆಸಲು ಜಮೀರ್ ಸಾದಿಕ್ ಪ್ರೋತ್ಸಾಹ ಇದ್ಯಾ : ಜಮೀರ್ ವಿರುದ್ಧ ಬಿಜೆಪಿ ಟ್ವೀಟ್

    ಬೆಂಗಳೂರು: ಇದು ಸ್ವತಂತ್ರ ಭಾರತ. ಇಲ್ಲಿ ಪಾಳೇಗಾರಿಕೆ ನಡೆಸಲು ಜಮೀರ್ ಸಾದಿಕ್ ಅವರ ಪ್ರೋತ್ಸಾಹ ಇದೆಯೇ ಎಂದು ಮಾಜಿ ಸಚಿವ ಮತ್ತು ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಬಿಜೆಪಿ ಕಿಡಿಕಾರಿದೆ.

    ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಜಮೀರ್, ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ. ಆದರೆ ಸ್ವಾತಂತ್ರ್ಯೋತ್ಸವವನ್ನು ನಾವೇ ಅದ್ಧೂರಿಯಾಗಿ ಆಚರಿಸುತ್ತೇವೆ ಎಂದು ಹೇಳಿದ್ದರು. ಇದನ್ನೂ ಓದಿ: ಬಳ್ಳಾರಿಯಲ್ಲಿ ಶುರುವಾಗುತ್ತಾ ಮೈನಿಂಗ್ ಚಾಪ್ಟರ್ 2? – ಅನುಮತಿ ಕೇಳಿದ ರೆಡ್ಡಿ

    ಜಮೀರ್ ಅವರ ಈ ಹೇಳಿಕೆ ವಿರುದ್ಧ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಾಗ್ದಾಳಿ ನಡೆಸಿದೆ. ಈದ್ಗಾ ಮೈದಾನದಲ್ಲಿ ಇಷ್ಟು ದಿನ ಧ್ವಜಾರೋಹಣ ನಡೆಸಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಜಮೀರ್ ಅಹ್ಮದ್ ಖಾನ್ ಈಗ ಗಣೇಶೋತ್ಸವಕ್ಕೆ ವಿರೋಧಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಕೃಪಾಶೀರ್ವಾದದಿಂದ ಚಾಮರಾಜಪೇಟೆಯ ಈದ್ಗಾ ಮೈದಾನ ಅಂದಿನ ಲಾಲ್‍ಚೌಕ್ ಆಗಿ ಪರಿವರ್ತನೆ ಆಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

    ಗಣೇಶ ಹಬ್ಬ ಕೇವಲ ಒಂದು ಧರ್ಮಕ್ಕೆ ಸೀಮಿತವಾದ ಹಬ್ಬವಲ್ಲ. ಗಣೇಶೋತ್ಸವದ ಮೂಲಕ ತಿಲಕರು ಸ್ವಾತಂತ್ರ್ಯ ಕಿಚ್ಚು ಹಚ್ಚಿದ್ದರು. ರಾಷ್ಟ್ರೀಯ ಜೋಡಣೆಗೆ ಬಹುಮುಖ್ಯ ಪಾತ್ರ ವಹಿಸಿದ ಗಣೇಶ ಉತ್ಸವವನ್ನು ಮಾಡುವುದು ಬೇಡ ಎನ್ನಲು ಕಾಂಗ್ರೆಸ್ ನಾಯಕರು ಯಾರು ಎಂದು ಹರಿಹಾಯ್ದಿದ್ದಾರೆ.

    ರಿಪಬ್ಲಿಕ್ ಆಫ್ ಕನಕಪುರದ ಮಾದರಿಯಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರಿಪಬ್ಲಿಕ್ ಆಫ್ ಚಾಮರಾಜಪೇಟೆ ಕಟ್ಟಿಕೊಂಡಿದ್ದಾರಾ? ಇದು ಸ್ವತಂತ್ರ ಭಾರತ. ಇಲ್ಲಿ ಪಾಳೇಗಾರಿಕೆ ನಡೆಸಲು ಮೀರ್ ಸಾದಿಕ್ ಅವರ ಪ್ರೋತ್ಸಾಹ ಇದೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಿವ್ ಇನ್ ರಿಲೇಶನ್ ಶಿಪ್‍ನಲ್ಲಿದ್ದು, ಮದುವೆಗೆ ನೋ ಅಂದ – ಪ್ರಿಯಕರನ ಕತ್ತು ಸೀಳಿ ಸೂಟ್‍ಕೇಸ್‍ನಲ್ಲಿ ತುಂಬಿದ್ಲು

    ಮತ್ತೊಂದೆಡೆ ಜಮೀರ್ ಅವರ ಈ ಹೇಳಿಕೆ ಪ್ರಕಟವಾದ ಬೆನ್ನಲ್ಲೇ ಶ್ರೀರಾಮ ಸೇನೆ, ಅದು ಈದ್ಗಾ ಮೈದಾನವಲ್ಲ. ಅಲ್ಲಿರುವುದು ಬಿಬಿಎಂಪಿ ಆಟದ ಮೈದಾನ. ಗಣೇಶೋತ್ಸವವನ್ನು ಅಲ್ಲೇ ಮಾಡುತ್ತೇವೆ. ತಾಕತ್ತಿದ್ದರೆ ತಡೀರಿ ಎಂದು ಪೋಸ್ಟರ್ ಹಾಕಿದೆ. ಜಮೀರ್ ಹೇಳಿಕೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಈಗ ಈ ವಿಚಾರದ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಈದ್ಗಾ ಯಾರ ಪಿತ್ರಾರ್ಜಿತ ಆಸ್ತಿಯೂ ಅಲ್ಲ: ಮುತಾಲಿಕ್

    ಈದ್ಗಾ ಯಾರ ಪಿತ್ರಾರ್ಜಿತ ಆಸ್ತಿಯೂ ಅಲ್ಲ: ಮುತಾಲಿಕ್

    ಧಾರವಾಡ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿರುಗೇಟು ನೀಡಿದರು.

    ಧಾರವಾಡದಲ್ಲಿ ಮಾತನಾಡಿದ ಅವರು, ಈದ್ಗಾ ಮೈದಾನ ನಿಮ್ಮ ಆಸ್ತಿನೂ ಅಲ್ಲ, ನಿಮ್ಮ ಪಿತ್ರಾರ್ಜಿತ ಆಸ್ತಿನೂ ಅಲ್ಲ, ವಕ್ಫ್ ಬೋರ್ಡ್‍ಗೆ ಸೇರಿದ್ದೂ ಅಲ್ಲ, ಮುಸ್ಲಿಂ, ಹಿಂದೂಗಳಿಗೆ ಸೇರಿದ್ದೂ ಅಲ್ಲ. ಅದು ಸರ್ಕಾರದ ಜಾಗ, ಸರ್ಕಾರಿ ಜಾಗದಲ್ಲಿ ನೀವು ನಮಾಜ್ ಮಾಡುತ್ತಾ ಬಂದಿದ್ದೀರಿ. ವಿಧಿ ವಿಧಾನದ ಮೂಲಕ ವರ್ಷಕ್ಕೆ 2 ಬಾರಿ ನಮಾಜ್ ಮಾಡುತ್ತಾ ಬಂದಿದ್ದೀರಿ, ಹಾಗಾದರೆ ಗಣೇಶೋತ್ಸವಕ್ಕೆ ನಿಮ್ಮ ವಿರೋಧ ಯಾಕೆ ಎಂದು ಪ್ರಶ್ನಿಸಿದರು.

    ಶಾಸಕ ಜಮೀರ್ ಅಹ್ಮದ್ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ನೀವು ಕೇವಲ ಮುಸ್ಲಿಂ ವೋಟಿನ ಮೇಲೆ ಗೆದ್ದಿಲ್ಲ, ನೀವು ಮುಸ್ಲಿಂರಿಂದ ಮಾತ್ರ ಗೆದ್ದಿಲ್ಲ, ನೀವು ಮುಸ್ಲಿಂ ಶಾಸಕರಲ್ಲ, ನೀವು ಚಾಮರಾಜಪೇಟೆ ಶಾಸಕ, ನಿಮಗೆ ಹಿಂದೂಗಳೂ ವೋಟು ಹಾಕಿದ್ದಾರೆ ನೆನೆಪಿಟ್ಟುಕೊಳ್ಳಿ ಎಂದ ಅವರು, ಇನ್ನೊಮ್ಮೆ ನಿಮ್ಮಿಂದ ಇಂತಹ ಹೇಳಿಕೆ ಬರಬಾರದು. ಈಗ ಹೇಳಿರುವ ಹೇಳಿಕೆಯನ್ನು ನೀವು ವಾಪಸ್ ಪಡೆಯಬೇಕು, ಹಿಂದೂಗಳಿಗೆ ಕ್ಷಮೆ ಕೇಳಬೇಕು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಎಲೆಕ್ಟ್ರಿಕ್ ರಿಕ್ಷಾ ಚಾರ್ಜಿಂಗ್ ವೇಳೆ ವಿದ್ಯುತ್ ಶಾಕ್ – ವ್ಯಕ್ತಿ ಸಾವು

    ಅದೇ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡುತ್ತೇವೆ. ತಾಕತ್ತಿದ್ದರೆ ಅದನ್ನು ವಿರೋಧಿಸಿ. ನಿಮ್ಮ ಈ ಹೇಳಿಕೆಯಿಂದ ಅಶಾಂತಿ ಮತ್ತು ಗಲಭೆ ಸೃಷ್ಟಿ ಮಾಡುತ್ತಿದ್ದೀರಿ. ಮುಂಬರುವ ಚುನಾವಣೆಯಲ್ಲಿ ಜಮೀರ್‍ನನ್ನು ಹಿಂದೂಗಳು ಸೋಲಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಅವಧಿಯಲ್ಲಿ ದೇಶ ಸೋತಿತ್ತು – ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಗೆದ್ದಿದೆ: ಸುನಿಲ್ ಕುಮಾರ್

    Live Tv
    [brid partner=56869869 player=32851 video=960834 autoplay=true]

  • ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ, ಸ್ವಾತಂತ್ರ್ಯೋತ್ಸವ ಅದ್ಧೂರಿಯಾಗಿ ಆಚರಿಸುತ್ತೇವೆ: ಜಮೀರ್

    ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ, ಸ್ವಾತಂತ್ರ್ಯೋತ್ಸವ ಅದ್ಧೂರಿಯಾಗಿ ಆಚರಿಸುತ್ತೇವೆ: ಜಮೀರ್

    ಬೆಂಗಳೂರು: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಇಲ್ಲಿ ಅವಕಾಶ ಇಲ್ಲ. ಆದರೆ ಸ್ವಾತಂತ್ರ್ಯೋತ್ಸವವನ್ನು ನಾವೇ ಅದ್ಧೂರಿಯಾಗಿ ಆಚರಿಸುತ್ತೇವೆ ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದರು.

    ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಆಸ್ತಿ ಎಂಬ ಆದೇಶ ಬೆನ್ನಲ್ಲೇ ಚಾಮರಾಜಪೇಟೆ ಈದ್ಗಾ ಮೈದಾನಕ್ಕೆ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಜೊತೆಗೆ ಶಾಂತಿ ಸೌಹಾರ್ದತೆ ಕಾಪಾಡಲು ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೈದಾನಕ್ಕೆ ಶಾಸಕ ಜಮೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಈ ವೇಳೆ ಮಾತನಾಡಿದ ಅವರು, ಮೈದಾನದಲ್ಲಿ ಹೇಗೆ ಆಚರಣೆ ಮಾಡ್ಬೇಕು ಎಂಬುದರ ಬಗ್ಗೆ ಪರಿಶೀಲನೆ ನಡೆಸಲು ಬಂದಿದ್ದೇನೆ. 75ನೇ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇನ್ಮುಂದೆ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ ಇಲ್ಲಿ ನಡೆಯುತ್ತದೆ. ಆದರೆ ಯಾವುದೇ ಧಾರ್ಮಿಕ ಹಬ್ಬಗಳಿಗೆ ಇಲ್ಲಿ ಅವಕಾಶವಿಲ್ಲ. ಎಷ್ಟು ಜನ ಬೇಕಾದ್ರೂ ಸೇರಲಿ ಜತೆಯಾಗಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.

    ಇತ್ತೀಚೆಗಷ್ಟೇ ಈದ್ಗಾ ವಿವಾದದ ಬಗ್ಗೆ ವರ್ಕ್ಫ್ ಬೋರ್ಡ್ ಸಲ್ಲಿಸಿದ್ದ ಅರ್ಜಿಯನ್ನು ಬಿಬಿಎಂಪಿ ವಜಾ ಮಾಡಿದ್ದು, ಈದ್ಗಾ ಮೈದಾನ ಕಂದಾಯ ಇಲಾಖೆ ಆಸ್ತಿ ಎಂದು ಜಂಟಿ ಆಯುಕ್ತ ಶ್ರೀನಿವಾಸ್ ಆದೇಶ ಹೊರಡಿಸಿದ್ದರು. ಇದನ್ನೂ ಓದಿ: ಫಾಝಿಲ್ ಸ್ಮರಣಾರ್ಥ ರಕ್ತದಾನ ಶಿಬಿರ – ಜಿಲ್ಲೆಯ 4 ಕಡೆ ಬ್ಲಡ್ ಡೋನೇಟ್

    ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಅವರು, ಈ ಹಿಂದೆ ಚಾಮರಾಜಪೇಟೆ ಆಟದ ಮೈದಾನವನ್ನು ವರ್ಕ್ಫ್ ಬೋರ್ಡ್ ಹೆಸರಿಗೆ ಖಾತೆ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಅರ್ಜಿಯನ್ನು ವಜಾಗೊಳಿಸಿದ್ದು, ಬಿಬಿಎಂಪಿ ದಾಖಲೆಗಳಲ್ಲಿ ಈ ಆಸ್ತಿಯನ್ನು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಆಸ್ತಿಯೆಂದು ನಮೂದಿಸಲು ಸೂಚನೆ ನೀಡಿತ್ತು. ವರ್ಕ್ಫ್ ಬೋರ್ಡ್ ಆಸ್ತಿಯ ಬಗ್ಗೆ ಹಕ್ಕು ಸ್ಥಾಪಿಸಬೇಕಿದ್ದಲ್ಲಿ ಕಂದಾಯ ಇಲಾಖೆ ಬಳಿ ವ್ಯವಹರಿಸಬೇಕು ಎಂದು ತಿಳಿಸಿದ್ದರು. ಇದನ್ನೂ ಓದಿ: ಯುಪಿಯಲ್ಲಿ ಮತ್ತೆ ಜೆಸಿಬಿ ಘರ್ಜನೆ – ಬಿಜೆಪಿ ನಾಯಕನ ಅಕ್ರಮ ಕಟ್ಟಡ ನೆಲಸಮ

    Live Tv
    [brid partner=56869869 player=32851 video=960834 autoplay=true]

  • ಈದ್ಗಾ ಮೈದಾನ ಕಂದಾಯ ಇಲಾಖೆ ಆಸ್ತಿ- ವರ್ಕ್ಫ್ ಬೋರ್ಡ್ ಅರ್ಜಿ ವಜಾಗೊಳಿಸಿದ ಬಿಬಿಎಂಪಿ

    ಈದ್ಗಾ ಮೈದಾನ ಕಂದಾಯ ಇಲಾಖೆ ಆಸ್ತಿ- ವರ್ಕ್ಫ್ ಬೋರ್ಡ್ ಅರ್ಜಿ ವಜಾಗೊಳಿಸಿದ ಬಿಬಿಎಂಪಿ

    ಬೆಂಗಳೂರು: ಈದ್ಗಾ ವಿವಾದದ ಬಗ್ಗೆ ವರ್ಕ್ಫ್ ಬೋರ್ಡ್ ಸಲ್ಲಿಸಿದ್ದ ಅರ್ಜಿಯನ್ನು ಬಿಬಿಎಂಪಿ ವಜಾ ಮಾಡಿದ್ದು, ಈದ್ಗಾ ಮೈದಾನ ಕಂದಾಯ ಇಲಾಖೆ ಆಸ್ತಿ ಎಂದು ಜಂಟಿ ಆಯುಕ್ತ ಶ್ರೀನಿವಾಸ್ ಆದೇಶ ಹೊರಡಿಸಿದ್ದಾರೆ.

    ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ಈ ಹಿಂದೆ ಚಾಮರಾಜಪೇಟೆ ಆಟದ ಮೈದಾನವನ್ನು ವರ್ಕ್ಫ್ ಬೋರ್ಡ್ ಹೆಸರಿಗೆ ಖಾತೆ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಅರ್ಜಿಯನ್ನು ವಜಾಗೊಳಿಸಿದ್ದು, ಬಿಬಿಎಂಪಿ ದಾಖಲೆಗಳಲ್ಲಿ ಈ ಆಸ್ತಿಯನ್ನು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಆಸ್ತಿಯೆಂದು ನಮೂದಿಸಲು ಸೂಚನೆ ನೀಡಿದೆ. ವರ್ಕ್ಫ್ ಬೋರ್ಡ್ ಆಸ್ತಿಯ ಬಗ್ಗೆ ಹಕ್ಕು ಸ್ಥಾಪಿಸಬೇಕಿದ್ದಲ್ಲಿ ಕಂದಾಯ ಇಲಾಖೆ ಬಳಿ ವ್ಯವಹರಿಸಬೇಕು ಎಂದು ತಿಳಿಸಿದರು.

    ಈದ್ಗಾ ಮೈದಾನಕ್ಕೂ ವಕ್ಫ್ ಬೋರ್ಡ್‌ಗೂ ಯಾವುದೇ ಸಂಬಂಧ ಇಲ್ಲ. ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು ಎಂದು ಸ್ಪಷ್ಟಪಡಿಸಿದ ಅವರು, ವಕ್ಫ್ ಬೋರ್ಡ್ ಹಕ್ಕು ಸಾಧಿಸಲು ಯಾವುದೇ ದಾಖಲೆ ಇಲ್ಲ. ಇದರಿಂದಾಗಿ ಈ ಆಟದ ಮೈದಾನವನ್ನು ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆ ಎಂದು ನಮೂದಿಸಲು ಬಿಬಿಎಂಪಿ ಸೂಚನೆ ನೀಡಿದೆ. ಇಡೀ ಆಟದ ಮೈದಾನ ಇನ್ಮುಂದೆ ಕಂದಾಯ ಇಲಾಖೆಗೆ ಸೇರಿದ ಆಸ್ತಿಯಾಗಿದ್ದು, ದಾಖಲೆಗಳನ್ನು ಪರಿಶೀಲಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಜಾಗತಿಕ ಹೂಡಿಕೆದಾರರ ಸಮಾವೇಶ: ಟೋಕಿಯೋ ಕನ್ನಡ ಬಳಗಕ್ಕೆ ನಿರಾಣಿ ಆಹ್ವಾನ

    ಈದ್ಗಾ ಮೈದಾನ ಕಂದಾಯ ಇಲಾಖೆಯ ಸ್ವತ್ತು ಎಂದು ಆದೇಶ ಹಿನ್ನೆಲೆಯಲ್ಲಿ ಚಾಮರಾಜಪೇಟೆ ನಾಗರಿಕರ ವೇದಿಕೆಯಿಂದ ಜನರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು. ಈ ವಿಚಾರವಾಗಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ವೇದಿಕೆ ಸಂಚಾಲಕ ಮಾತನಾಡಿ, ಚಾಮರಾಜಪೇಟೆಗೆ ಇಂದು ಸ್ವಾತಂತ್ರ್ಯ ಸಿಕ್ಕಿದೆ. ಸರ್ಕಾರದ ಆದೇಶ ಹರ್ಷ ತಂದಿದೆ. ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಈದ್ಗಾ ಮೈದಾನದಲ್ಲಿ ಆಚರಣೆ ಮಾಡಲಾಗುತ್ತೆ. ಈ ಆದೇಶ ಚಾಮರಾಜಪೇಟೆಯ ಜನರ ಗೆಲುವಾಗಿದೆ ಎಂದ ಅವರು, 10ನೇ ನಾಲ್ವಡಿ ಕೃಷ್ಣರಾಜ ಒಡೆಯರ ಆಟದ ಮೈದಾನ ಎಂದು ಹೆಸರು ಇಡುವಂತೆ ಒತ್ತಾಯ ಮಾಡಿದರು. ಇದನ್ನೂ ಓದಿ: ಉಪರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಆಯ್ಕೆ

    Live Tv
    [brid partner=56869869 player=32851 video=960834 autoplay=true]

  • ಈದ್ಗಾ ಮೈದಾನ ವಿವಾದ – ದಾಖಲೆ ನೀಡಲು 2 ತಿಂಗಳು ಬೇಕೆಂದ ಮುಸ್ಲಿಂ ಮುಖಂಡರು

    ಈದ್ಗಾ ಮೈದಾನ ವಿವಾದ – ದಾಖಲೆ ನೀಡಲು 2 ತಿಂಗಳು ಬೇಕೆಂದ ಮುಸ್ಲಿಂ ಮುಖಂಡರು

    ಬೆಂಗಳೂರು: ಈದ್ಗಾ ವಿವಾದ ಸಂಬಂಧ ದಾಖಲೆ ಒದಗಿಸಲು ನೀಡಿದ ನೋಟಿಸ್‍ಗಳಿಗೆ ವಕ್ಫ್ ಬೋರ್ಡ್‌ನಿಂದ ಉತ್ತರ ದೊರಕಿಲ್ಲ. ಈಗ ಮತ್ತೊಮ್ಮೆ ಬಿಬಿಎಂಪಿ ದಾಖಲೆ ಕೊಡಲು ಅವಕಾಶ ನೀಡಿದೆ.

    ಪಶ್ಚಿಮ ವಿಭಾಗ ಜಂಟಿ ಆಯುಕ್ತ ಶ್ರೀನಿವಾಸ್, ವಕ್ಫ್ ಬೋರ್ಡ್ ಪರ ಮಾತನಾಡಲು ಹಾಜರಿದ್ದವರಿಗೆ ಆಗಸ್ಟ್ 3 ರಂದು ಕಡೆ ದಿನ. ಡೆಡ್‍ಲೈನ್ ಒಳಗೆ ದಾಖಲೆ ಒದಗಿಸುವಂತೆ ಸೂಚಿಸಿದ್ದಾರೆ. ಆದರೆ, ಮುಸ್ಲಿಂ ಮುಖಂಡರ ಪ್ರಕಾರ ದಾಖಲೆ ಕೊಡಲು ಕಾಲಾವಕಾಶ ಸಾಕಾಗಲ್ಲ. ಕನಿಷ್ಠ 2 ತಿಂಗಳು ಮತ್ತೊಮ್ಮೆ ಅವಕಾಶ ನೀಡಬೇಕಿತು ಎಂದು ವಾದ ಮುಂದಿಟ್ಟಿದ್ದಾರೆ. ವಾದ – ಪ್ರತಿವಾದಗಳ ನಂತರ ಆಗಸ್ಟ್ 3ಕ್ಕೆ ಆದರೂ ಈದ್ಗಾ ಆಸ್ತಿ ಯಾರದೆಂದು ಇತ್ಯರ್ಥ ಆಗುತ್ತಾ ಕಾದುನೋಡಬೇಕಿದೆ.  ಇದನ್ನೂ ಓದಿ: ಇಸ್ಲಾಂಗಿಂತ ದೊಡ್ಡ ಧರ್ಮವಿಲ್ಲ ಅಲ್ಲಾಹುಗಾಗಿ ಎಲ್ಲದಕ್ಕೂ ಸಿದ್ಧ – ಪಾಕ್‍ಗೆ ತೆರಳಲು ಸಿದ್ಧರಾಗಿದ್ರು ಶಂಕಿತ ಉಗ್ರರು

    ಕೆಲವು ದಿನಗಳ ಹಿಂದೆಯಷ್ಟೇ ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ಸಮುದಾಯದ ಜನರು ಬಕ್ರೀದ್ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದರಿಂದಾಗಿ ಈದ್ಗಾ ಮೈದಾನ ಇತ್ತೀಚಿಗೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇಲ್ಲಿ ಆಟ ಆಡಲು, ಪ್ರಾರ್ಥನೆ ಸಲ್ಲಿಸಲು ನಮಗೂ ಅವಕಾಶ ನೀಡಿ ಅಂತ ಹಿಂದೂ ಪರ ಸಂಘಟನೆಗಳು ಆಗ್ರಹಿಸಿದ್ದವು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಈ ಮೈದಾನವನ್ನು ಆಟದ ಮೈದಾನ ಅಂತ ಘೋಷಿಸಿತ್ತು. ಇದನ್ನೂ ಓದಿ: ಗಿಲ್, ಚಹಲ್ ಆಟಕ್ಕೆ ದಕ್ಕಿದ ಜಯ – ವೆಸ್ಟ್ ಇಂಡೀಸ್‍ನಲ್ಲಿ ಚೊಚ್ಚಲ ಬಾರಿಗೆ ಕ್ಲೀನ್ ಸ್ವೀಪ್ ಸಾಧಿಸಿದ ಭಾರತ

    ಹಲವು ದಶಕಗಳಿಂದ ಈದ್ಗಾ ಜಮೀನಿನ ವಿವಾದವಿದೆ. ಹಿಂದೆ ಮೈಸೂರಿನ ರಾಜಮನೆತನದ ಒಡೆಯರ್ ಕುಟುಂಬದಿಂದ 10 ಎಕರೆಗೂ ಹೆಚ್ಚು ಭೂಮಿಯನ್ನು ಮುಸ್ಲಿಂ ಸಮುದಾಯಕ್ಕೆ ಸ್ಮಶಾನಕ್ಕಾಗಿ ಹಾಗೂ ಈದ್ಗಾಗಾಗಿ ನೀಡಲಾಗಿತ್ತು. ಈದ್ಗಾ ಮುಸ್ಲಿಂ ಸಮುದಾಯಕ್ಕೆ ವರ್ಷಕ್ಕೆ ಎರಡು ಬಾರಿ ಈದ್ ಪ್ರಾರ್ಥನೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಕರ್ನಾಟಕ ವಕ್ಫ್ ಬೋರ್ಡ್ 1965 ರಲ್ಲಿ ಈದ್ಗಾ ಮೈದಾನವನ್ನು ತನ್ನ ವಶದಲ್ಲಿರುವಂತೆ ಗೆಜೆಟ್ ಮಾಡಿತು. ಇದನ್ನು ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ (ಸಿಎಂಎ) ನಡೆಸುತ್ತದೆ.

    ದಶಕಗಳ ನಂತರ, ಸುದೀರ್ಘ ಕಾನೂನು ಹೋರಾಟ ನಡೆಯಿತು ಮತ್ತು 1964ರಲ್ಲಿ, ಸುಪ್ರೀಂ ಕೋರ್ಟ್ ಈ ಭೂಮಿ ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್(ಸಿಎಂಎ)ಗೆ ಸೇರಿದೆ ಎಂದು ಇತ್ಯರ್ಥಪಡಿಸಿತು. ನಂತರ ಈದ್ಗಾ ಮೈದಾನಕ್ಕೆ ಬದಲಿ ಜಾಗ ವ್ಯವಸ್ಥೆ ಮಾಡಲಾಯಿತು. ಬದಲಿ ಜಾಗವನ್ನು ಗೋರಿಪಾಳ್ಯದ ಬಡ ಈದ್ಗಾದಲ್ಲಿ ಕೊಟ್ಟಿದ್ದರು. ಮುಸ್ಲಿಂ ಸಮುದಾಯದವರು ಈದ್ಗಾ ಮೈದಾನವನ್ನು ಉಪಯೋಗಿಸುತ್ತಾರೆ ಎಂಬುದು ಈಗಿನ ಆರೋಪವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬಂದ್‌ ಯಶಸ್ವಿಯಾದ ಬೆನ್ನಲ್ಲೇ ಮತ್ತಷ್ಟು ಹೆಚ್ಚಾಗುತ್ತಿದೆ ಈದ್ಗಾ ಮೈದಾನದ ಕಿಚ್ಚು

    ಬಂದ್‌ ಯಶಸ್ವಿಯಾದ ಬೆನ್ನಲ್ಲೇ ಮತ್ತಷ್ಟು ಹೆಚ್ಚಾಗುತ್ತಿದೆ ಈದ್ಗಾ ಮೈದಾನದ ಕಿಚ್ಚು

    ಬೆಂಗಳೂರು: ಈದ್ಗಾ ಮೈದಾನ ಉಳಿವಿಗಾಗಿ ಚಾಮರಾಜಪೇಟೆ ಬಂದ್ ಯಶಸ್ವಿಯಾದ ಬೆನ್ನಲ್ಲೇ ಈ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಮುಂದಾಗಿದೆ.

    ಈದ್ಗಾ ಮೈದಾನ ಬಿಬಿಎಂಪಿ ಸ್ವತ್ತೆಂದು ಘೋಷಣೆ ಆಗುವ ತನಕ ಜಗ್ಗುವುದಿಲ್ಲ ಎಂದಿರುವ ಒಕ್ಕೂಟಗಳು ಸರ್ಕಾರದ ಮೇಲೆ ಹೇಗೆ ಒತ್ತಡ ಹೇರಬೇಕು ಎಂಬುದರ ಬಗ್ಗೆ ಇಂದು ಸಂಜೆ ಚಾಮರಾಜಪೇಟೆಯಲ್ಲಿ ಸಭೆ ಆಯೋಜಿಸಿದೆ. ಇದನ್ನೂ ಓದಿ: ಈದ್ಗಾ ಮೈದಾನ ವಿವಾದ – ಚಾಮರಾಜಪೇಟೆ ಬಂದ್ ಯಶಸ್ವಿ

    2-3 ದಿನದೊಳಗೆ ನೂರಾರು ಬೈಕ್ ಗಳ ಮೂಲಕ ರ್‍ಯಾಲಿ ಮಾಡುವ ಮೂಲಕ ಬಿಬಿಎಂಪಿ ಹಾಗೂ ನಗರಾಭಿವೃದ್ಧಿ ಇಲಾಖೆ ಮುತ್ತಿಗೆ ಹಾಕಲು ಚಿಂತನೆ ನಡೆದಿದೆ. ಮತ್ತೊಂದೆಡೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ ಮೋಹನ್ ಮೇಲೆ ಒತ್ತಡ ಹಾಕಿ ಸಿಎಂ ಬೊಮ್ಮಾಯಿ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿಗೆ ಅವಕಾಶ ಕೊಡಿಸುವಂತೆ ಒಕ್ಕೂಟ ಪಟ್ಟು ಹಿಡಿದಿದೆ.

    ಹಲವು ವಿಷಯಗಳ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದ್ದು ಎಲ್ಲ ಸದಸ್ಯರ ಅಭಿಪ್ರಾಯ ಪಡೆದು ಮುಂದಿನ ಹೋರಾಟದ ರೂಪುರೇಷೆಯ ಬಗ್ಗೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ ತೀರ್ಮಾನ ತೆಗೆದುಕೊಳ್ಳಲಿದೆ.

    Live Tv
    [brid partner=56869869 player=32851 video=960834 autoplay=true]

  • ನಷ್ಟದ ವರದಿ ಬಂದ ಮೇಲೆ ಕೇಂದ್ರಕ್ಕೆ ಪರಿಹಾರ ಕೇಳುವ ವಿಚಾರದಲ್ಲಿ ತೀರ್ಮಾನ: ಸಿಎಂ

    ನಷ್ಟದ ವರದಿ ಬಂದ ಮೇಲೆ ಕೇಂದ್ರಕ್ಕೆ ಪರಿಹಾರ ಕೇಳುವ ವಿಚಾರದಲ್ಲಿ ತೀರ್ಮಾನ: ಸಿಎಂ

    ಮೈಸೂರು: ಪ್ರವಾಹದಲ್ಲಿ ಸಂಭವಿಸಿದ ನಷ್ಟದ ವರದಿ ಬಂದ ಮೇಲೆ ಕೇಂದ್ರಕ್ಕೆ ಪರಿಹಾರ ಕೇಳುವ ವಿಚಾರದಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

    ನೆರೆ ಪ್ರವಾಹ ಪ್ರದೇಶಗಳಿಗೆ ಭೇಟಿ ಕೊಡುತ್ತಿರುವ ಬೊಮ್ಮಾಯಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಇಡೀ ರಾಜ್ಯ ಸರ್ಕಾರ ರಸ್ತೆಗಿಳಿದು ಕೆಲಸ ಮಾಡುತ್ತಿದೆ. ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ-ತಮ್ಮ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ನೆರೆ ಹಾನಿ ಪ್ರದೇಶಕ್ಕೆ ಹೋಗುತ್ತಿಲ್ಲ ಎಂಬುದು ಸುಳ್ಳು. ನನ್ನ ಹಾದಿಯಾಗಿ ಎಲ್ಲ ಸಚಿವರುಗಳು ಕೆಲಸ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ಕೊಟ್ಟರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಸಂಸದರ ಬೇಡಿಕೆಗೆ ಮಣಿದ್ರಾ ಉದ್ಧವ್? 

    ರಾಜ್ಯದಲ್ಲಿ ನೆರೆ ಹಾನಿ ವಿಚಾರ, ಇಂದು ಸಂಜೆಯೊಳಗಡೆ ಮೊದಲ ಹಂತದ ನಷ್ಟದ ಅಧಿಕೃತ ಅಂಕಿ ಅಂಶ ಬಿಡುಗಡೆ ಮಾಡಲಾಗುತ್ತೆ. ನಷ್ಟದ ವರದಿ ಬಂದ ಮೇಲೆ ಕೇಂದ್ರಕ್ಕೆ ಪರಿಹಾರ ಕೇಳುವ ವಿಚಾರದಲ್ಲಿ ತೀರ್ಮಾನ ಮಾಡುತ್ತೇವೆ. ಸದ್ಯಕ್ಕೆ 750 ಕೋಟಿ ರೂ. ಎನ್‍ಡಿಆರ್‌ಎಫ್ ಹಣ ನಮ್ಮಲ್ಲಿ ಇದೆ ಎಂದು ತಿಳಿಸಿದರು.

    ಅನೇಕ ಕಡೆಗಳಲ್ಲಿ ಭೂ ಕುಸಿತವಾಗಿದೆ. ರಸ್ತೆಗಳು ಹಾಳಾಗಿದೆ, ಮನೆ ಹಾನಿ, ಪ್ರಾಣ ಹಾನಿಯೂ ಉಂಟಾಗಿದೆ. ಎಲ್ಲದರ ಬಗ್ಗೆ ವರದಿ ಸಿದ್ಧವಾಗುತ್ತಿದೆ. ಸಂಜೆಯೊಳಗಡೆ ಅಧಿಕೃತ ಮಾಹಿತಿ ಪ್ರಕಟವಾಗುತ್ತೆ ಎಂದರು.

    ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಉತ್ತರಿಸಿದ ಅವರು, ಆರು ತಿಂಗಳ ಹಿಂದೆಯೇ ಅಧ್ಯಕ್ಷರ ಬದಲಾವಣೆಗೆ ಕೋರ್ ಕಮಿಟಿಯಲ್ಲಿ ತೀರ್ಮಾನ ಮಾಡಿದ್ದೇವೆ. ಒಂದುವರೆ ವರ್ಷ ಪೂರೈಸಿರುವ ಅಧ್ಯಕ್ಷರುಗಳು ರಾಜೀನಾಮೆ ಸೂಚನೆ ನೀಡಿದ್ದೇವೆ. ಒಂದುವರೆ ವರ್ಷ ಅಧಿಕಾರ ಪೂರೈಸಿರುವವರ ಪಟ್ಟಿ ತಯಾರಿಸಿದ್ದೇವೆ. ಶೀಘ್ರದಲ್ಲೇ ಅದರ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ:  ಉದಯಪುರ ಹತ್ಯೆ ಬಗ್ಗೆ ಪೋಸ್ಟ್ – ಬಾಲಕಿಗೆ ಕೊಲೆ, ಅತ್ಯಾಚಾರ ಬೆದರಿಕೆ ಹಾಕಿದ ಜಮ್ಮು, ಕಾಶ್ಮೀರದ ವ್ಯಕ್ತಿ 

    ಬೆಂಗಳೂರಿನ ಚಾಮರಾಜಪೇಟೆ ಬಂದ್‌ ವಿಚಾರವನ್ನು ಸ್ಥಳೀಯ ಅಧಿಕಾರಿಗಳೇ ನೋಡಿಕೊಳ್ಳುತ್ತಾರೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ನಿಯಮ ಮೀರಿ ಚಾಮರಾಜಪೇಟೆ ಬಂದ್ ಮಾಡಿದ್ರೆ ಕಠಿಣ ಕ್ರಮ: ಪೊಲೀಸರ ಎಚ್ಚರಿಕೆ

    ನಿಯಮ ಮೀರಿ ಚಾಮರಾಜಪೇಟೆ ಬಂದ್ ಮಾಡಿದ್ರೆ ಕಠಿಣ ಕ್ರಮ: ಪೊಲೀಸರ ಎಚ್ಚರಿಕೆ

    ಬೆಂಗಳೂರು: ಒಂದು ವೇಳೆ ನಿಯಮ ಮೀರಿ ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ ಬಂದ್ ಮಾಡಿದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಚಾಮರಾಜಪೇಟೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

    ಜುಲೈ-12 ರಂದು ಚಾಮರಾಜಪೇಟೆ ಬಂದ್‍ಗೆ ಕರೆ ನೀಡಲಾಗಿದೆ. ಆದರೆ ಈ ಬಂದ್‍ಗೆ ಚಾಮರಾಜಪೇಟೆಯಲ್ಲಿ ಅನುಮತಿಯಿಲ್ಲ. ಈ ಹಿನ್ನೆಲೆ ಪೊಲೀಸರು ಚಾಮರಾಜಪೇಟೆ ಒಕ್ಕೂಟ ಸಂಘಟನೆಗಳಿಗೆ ಪತ್ರ ಬರೆದಿದ್ದು, ರ‍್ಯಾಲಿ, ಮುಷ್ಕರ, ಮೆರವಣಿಗೆ ಅಥವಾ ಒತ್ತಾಯ ಪೂರ್ವಕ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವಂತಿಲ್ಲ. ಪ್ರತಿಭಟನೆ, ರ‍್ಯಾಲಿ ನಡೆಸುವುದಕ್ಕೆ ಕೇವಲ ಫ್ರೀಡಂ ಪಾರ್ಕ್‍ನಲ್ಲಿ ಮಾತ್ರ ಅವಕಾಶವಿದೆ ಎಂದು ಸೂಚನೆ ಕೊಟ್ಟಿದ್ದಾರೆ.

    ಒಂದು ವೇಳೆ ನಿಯಮ ಮೀರಿ ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ ಬಂದ್ ಮಾಡಿದರೆ ಸೂಕ್ತ ಕ್ರಮ ತೆಗೆದುಕೊಳ್ಳಾಗುತ್ತೆ ಎಂದು ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಇದನ್ನೂ ಓದಿ: ಜುಲೈ 12ಕ್ಕೆ ಚಾಮರಾಜಪೇಟೆ ಬಂದ್ – ಬೆಂಬಲ ನೀಡಲು ಮುಸ್ಲಿಂ ವ್ಯಾಪಾರಿಗಳು ನಿರಾಕರಣೆ

    ಬಂದ್ ಯಾಕೆ?
    ಈದ್ಗಾ ಮೈದಾನ ವಕ್ಫ್ ಬೋರ್ಡ್‍ಗೆ ಸೇರಿದ್ದು ಎಂಬ ಪಾಲಿಕೆಯ ಹೇಳಿಕೆ ಖಂಡಿಸಿ ಜುಲೈ 12ಕ್ಕೆ ಚಾಮರಾಜಪೇಟೆ ಬಂದ್‍ಗೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಕರೆ ನೀಡಿದೆ.

    ಈದ್ಗಾ ಮೈದಾನ ಸರ್ಕಾರದ ಆಸ್ತಿ. ವರ್ಷಕ್ಕೆ ಎರಡು ಬಾರಿ ಮಾತ್ರ ಇಲ್ಲಿ ನಮಾಜ್ ಮಾಡಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಹೀಗಿದ್ದರೂ ಈದ್ಗಾ ಮೈದಾನ ವಕ್ಫ್ ಬೋರ್ಡ್‍ಗೆ ಸೇರಿದೆ ಎಂದು ಹೇಳಿ ಗೊಂದಲ ಮೂಡಿಸುತ್ತಿದೆ. ಶಾಸಕ ಜಮೀರ್ ಹೇಳಿದಂತೆ ಕೆಲಸ ಮಾಡುತ್ತಿದೆ. ಇದು ಆಟದ ಮೈದಾನವಾಗಿಯೇ ಇರಬೇಕು ಎಂದು ಆಗ್ರಹಿಸಿ ನಾಗರಿಕರು ಬಂದ್‍ಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಜು.12ಕ್ಕೆ ಬೆಂಗಳೂರಿನ ಚಾಮರಾಜಪೇಟೆ ಬಂದ್‌

    Live Tv
    [brid partner=56869869 player=32851 video=960834 autoplay=true]