Tag: chamarajpete

  • ಹಸುಗಳ ಮೇಲೆ ಕ್ರೌರ್ಯ ಎಸಗುತ್ತಿರುವ ಕುರಿತು ತನಿಖೆಗೆ ಸೂಚನೆ – ಪರಮೇಶ್ವರ್

    ಹಸುಗಳ ಮೇಲೆ ಕ್ರೌರ್ಯ ಎಸಗುತ್ತಿರುವ ಕುರಿತು ತನಿಖೆಗೆ ಸೂಚನೆ – ಪರಮೇಶ್ವರ್

    ಬೆಂಗಳೂರು: ಹಸುಗಳ ಮೇಲೆ ಕ್ರೌರ್ಯ ಮೆರೆಯುತ್ತಿರುವ ವ್ಯಕ್ತಿಗಳ ಹಿನ್ನಲೆಗಳನ್ನು ಪರಿಶೀಲನೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ.

    ಹೊನ್ನಾವರದಲ್ಲಿ ಹಸು ಕೊಂದಿರುವ ಪ್ರಕರಣ ಮತ್ತು ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಪ್ರಕರಣ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಇಂತಹ ಘಟನೆ ಆಗದಂತೆ ಏನಾದರೂ ಉಪಾಯ ಕಂಡು ಹಿಡಿಯಬೇಕಾಗಿದೆ. ಇಂದು ಬೆಳಗ್ಗೆ ಹಿರಿಯ ಅಧಿಕಾರಿಗಳ ಜೊತೆ ಗಂಭೀರವಾಗಿ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಯಾರು ಈ ರೀತಿಯ ಮನಸ್ಥಿತಿಯವರು ಇದ್ದಾರೋ ಅಂತಹವರನ್ನ ಪತ್ತೆ ಹಚ್ಚಬೇಕು. ಇಂತಹ ಕೃತ್ಯಗಳು ಸಂಘಟನೆಯಿಂದ ಮಾಡ್ತಾ ಇರೋದಾ? ಏಕಾಂಗಿಯಾಗಿ ಮಾಡಿರೋದಾ? ಯಾರಾದ್ರು ಪ್ರಚೋದನೆಯಿಂದ ಆಗ್ತಿದೆಯಾ? ಎಂದು ತನಿಖೆಗೆ ಸೂಚನೆ ನೀಡಿದ್ದೇನೆ. ಇದರ ಬಗ್ಗೆ ಪರಿಶೀಲನೆ ಮಾಡಿ ಇದಕ್ಕೆ ಕಡಿವಾಣ ಹಾಕುವ ಕೆಲಸ ಮಾಡ್ತೀವಿ ಎಂದು ತಿಳಿಸಿದರು.ಇದನ್ನೂ ಓದಿ: ಬ್ಯಾಂಕ್‌-ATMಗಳು ಸರ್ಕಾರ ಕೊಟ್ಟ ಮಾರ್ಗಸೂಚಿ ಪಾಲನೆ ಮಾಡಬೇಕು – ಪರಮೇಶ್ವರ್

    ಇನ್ನೂ ಇದೇ ವೇಳೆ, ಸೆಂಟ್ರಲ್ ಜೈಲು ವಿಭಜನೆ ಕುರಿತು ಮಾತನಾಡಿ, ವಿಭಜನೆ ಮಾಡುವ ಪ್ರಸ್ತಾಪ ಸದ್ಯ ಸರ್ಕಾರದ ಮುಂದೆ ಇಲ್ಲ. ಯಾವುದೇ ಪ್ರಪೋಸಲ್ ಇಲ್ಲ. ಆದರೆ ಬಂಧಿಖಾನೆಗಳನ್ನು ಬಿಗಿ ಮಾಡಬೇಕು ಎಂದು ನಿರ್ಧರಿಸಿದ್ದೇವೆ. ಸೆಕ್ಯುರಿಟಿಯನ್ನು ಮತ್ತಷ್ಟು ಜಾಸ್ತಿ ಮಾಡಬೇಕು ಎಂದು ಚರ್ಚೆ ಆಗಿದೆ. ಬಂಧಿಖಾನೆಗಳಿಗೆ ಸಿಬ್ಬಂದಿ ನೇಮಕ ಮಾಡಿ ಬಹಳ ವರ್ಷಗಳು ಆಗಿವೆ. ಹೀಗಾಗಿ ನೇಮಕಾತಿಗೆ ಈಗಾಗಲೇ ಪ್ರಪೋಸಲ್ ಕಳಿಸಿದ್ದೇವೆ. ಬಂಧೀಖಾನೆಗಳನ್ನು ಮತ್ತಷ್ಟು ಬಿಗಿ ಮಾಡುವ ಸಂಬಂಧ ಗೃಹ ಇಲಾಖೆ ಕ್ರಮ ತೆಗೆದುಕೊಳ್ಳಲಿದೆ ಎಂದರು.

    ಇದೇ ವೇಳೆ ಮೈಕ್ರೋ ಫೈನಾನ್ಸ್ ಬಡ್ಡಿ ದಬ್ಬಾಳಿಕೆಗೆ ಕಡಿವಾಣ ಹಾಕಲು ಕಾನೂನು ತರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾನೂನು ತರುವ ವಿಚಾರ ನನ್ನ ವ್ಯಾಪ್ತಿಗೆ ಬರೋದಿಲ್ಲ. ಈ ವಿಷಯ ಆರ್ಥಿಕ ಇಲಾಖೆಗೆ ಬರುತ್ತದೆ. ನಮ್ಮ ಬಳಿ ಅನ್ಯಾಯ ಆದಾಗ ದೂರು ಕೊಟ್ಟಾಗ ಕೇಸ್ ನಮ್ಮ ಬಳಿ ಬರುತ್ತದೆ. ಆಗ ನಮ್ಮ ವ್ಯಾಪ್ತಿಗೆ ಬರುತ್ತದೆ. ಇದಕ್ಕೆ ಕಡಿವಾಣ ಹಾಕೋದು ಆರ್ಥಿಕ ಇಲಾಖೆಗೆ ವ್ಯಾಪ್ತಿಗೆ ಬರುತ್ತದೆ. ಕಾನೂನು ಮಾಡೋದು ಕಾನೂನು ಇಲಾಖೆಗೆ ಬರುತ್ತದೆ ಎಂದು ಹೇಳಿದರು.ಇದನ್ನೂ ಓದಿ: ಕೆಲಸಕ್ಕೆ ಬರಲ್ಲ ಎಂದಿದ್ದಕ್ಕೆ ಕಾರ್ಮಿಕರ ಮೇಲೆ ಮನಬಂದಂತೆ ಥಳಿತ

  • ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಅನುಮತಿ ಸೂಕ್ತ ಸಮಯದಲ್ಲಿ ನಿರ್ಧಾರ: ಅಶೋಕ್

    ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಅನುಮತಿ ಸೂಕ್ತ ಸಮಯದಲ್ಲಿ ನಿರ್ಧಾರ: ಅಶೋಕ್

    ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಅನುಮತಿ ಕೊಡುವ ಬಗ್ಗೆ ಸೂಕ್ತ ಸಮಯದಲ್ಲಿ, ಸೂಕ್ತ ಕಾಲದಲ್ಲಿ, ಸೂಕ್ತ ನಿರ್ಧಾರ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್‌. ಅಶೋಕ್ ತಿಳಿಸಿದರು.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಇದೊಂದು ಸೂಕ್ಷ್ಮ ವಿಚಾರವಾಗಿದೆ. ಅನುಮತಿ ಬೇಕು ಅಂತ ಈವರೆಗೂ ನನಗೆ ಯಾವುದೇ ಮನವಿಗಳು ಬಂದಿಲ್ಲ. ಡಿಸಿಗೆ ಮನವಿ ಕೊಟ್ಟಿದ್ದರೆ ಅವರು ಆ ಬಗ್ಗೆ ಸೂಕ್ತ ಸೂಚನೆ ಕೊಡುತ್ತಾರೆ ಎಂದು ತಿಳಿಸಿದರು.

    75 ವರ್ಷಗಳ ಬಳಿಕ ಮೊದಲ ಬಾರಿಗೆ ಅಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡುವ ನಿರ್ಧಾರ ಮಾಡಲಾಯಿತು. ಗಣರಾಜೋತ್ಸವ ಕೂಡಾ ಮಾಡುತ್ತೇವೆ. ಮುಂದೆ ಕನ್ನಡ ರಾಜ್ಯೋತ್ಸವ ಮಾಡಲು ಆದೇಶ ಹೊರಡಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡ್ತೀವಿ – ಅಶೋಕ್ ಘೋಷಣೆ

    ಗಣೇಶೋತ್ಸವದ ಬಗ್ಗೆ ನಾನು ಕೂಡ ಗಂಭೀರವಾಗಿ ಆಲೋಚನೆ ಮಾಡುತ್ತಿದ್ದೇನೆ. ಕಾನೂನು ಸುವ್ಯವಸ್ಥೆ ಬಹಳ ಪ್ರಮುಖ. ಗಣೇಶ ಕೂರಿಸುವ ಸಂಬಂಧ ಇಂದು ಪೊಲೀಸರು, ಬಿಬಿಎಂಪಿ ಅಧಿಕಾರಿಗಳು ಸಭೆ ಮಾಡ್ತಿದ್ದಾರೆ. ಚಾಮರಾಜಪೇಟೆ ಗಣೇಶೋತ್ಸವ ವಿಚಾರ ಗಂಭೀರವಾಗಿ ಚಿಂತನೆ ಮಾಡಬೇಕಿದೆ ಎಂದರು.

    ಅಧಿಕಾರಿಗಳಿಂದ ಈಗಾಗಲೇ ನಾನು ಮಾಹಿತಿ ಪಡೆದಿದ್ದೇನೆ. ಯಾವ ಸಂದರ್ಭದಲ್ಲಿ ಏನು ಕ್ರಮ ತಗೊಬೇಕು ಎಂದು ಸೂಕ್ತ ನಿರ್ಧಾರ ಮಾಡುತ್ತೇವೆ. ಸೂಕ್ತ ಕಾಲ, ಸೂಕ್ತ ಸಮಯ ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ಅನುಮತಿ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ತುಮಕೂರಿನ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

    Live Tv
    [brid partner=56869869 player=32851 video=960834 autoplay=true]

  • ಪತ್ನಿ ಆಸೆ ಈಡೇರಿಸಲು ಯಜಮಾನನನ್ನೇ ಕೊಂದ!

    ಪತ್ನಿ ಆಸೆ ಈಡೇರಿಸಲು ಯಜಮಾನನನ್ನೇ ಕೊಂದ!

    ಚಾಮರಾಜಪೇಟೆ: ಬೆಂಗಳೂರಿನಲ್ಲಿ ವೃದ್ಧ ಜುಗರಾಜ್ ಜೈನ್ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

    ವೃದ್ಧನ ಮನೆಯಲ್ಲಿ ಕೆಲಸ ಮಾಡ್ತಿದ್ದ ಬಿಜೊರಾಮ್, ಹೆಂಡತಿಯ ಕಾಟಕ್ಕೆ ಬೇಸತ್ತು ಜುಗರಾಜ್ ಜೈನ್ ಅವರನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. 15 ಸಾವಿರ ರೂ.ಗೆ ಕೆಲಸ ಮಾಡ್ತಿದ್ದ ಬಿಜೊರಾಮ್‍ಗೆ ಪತ್ನಿ ಹಣ ತರುವಂತೆ ಪ್ರತಿದಿನ ಪೀಡಿಸ್ತಿದ್ಲು. ಇದರಿಂದ ಬೇಸತ್ತಿದ್ದ ಬಿಜೊರಾಮ್ ಪ್ಲಾನ್ ಮಾಡಿ ಓಂಪ್ರಕಾಶ್ ಮಹೇಂದ್ರ ಜೊತೆ ಸೇರಿ ವೃದ್ಧನ ಕೊಲೆ ಮಾಡಿದ್ದಾನೆ. ಇದನ್ನೂ ಓದಿ:  ದೇವಸ್ಥಾನದಲ್ಲಿ ಅರ್ಚಕರ ಶವ ಪತ್ತೆ, ವಿಗ್ರಹ ನಾಪತ್ತೆ 

    ಜುಗರಾಜ್ ಜೈನ್ ಅವರನ್ನು ಕೊಲೆ ಮಾಡಿದ ಬಳಿಕ ಚೀಲದಲ್ಲಿ ಚಿನ್ನ, ಹಣ ತುಂಬಿಕೊಂಡು ಚಿತ್ರದುರ್ಗ, ಹುಬ್ಬಳ್ಳಿ ಮೂಲಕ ಗೋವಾಗೆ ಎಸ್ಕೇಪ್ ಆಗಿ, ಅಲ್ಲಿಂದ ರಾಜಸ್ಥಾನಕ್ಕೆ ಹೋಗಿದ್ರು. ಆದರೆ, ಪೊಲೀಸರು ಬೇಟೆಯಾಡಿ 8.75 ಕೆಜಿ ಚಿನ್ನ, 4 ಕೆಜಿ ಬೆಳ್ಳಿ, 53 ಲಕ್ಷ ನಗದನ್ನು ವಶಕ್ಕೆ ಪಡೆದಿದ್ದಾರೆ.

  • ಈದ್ಗಾ ಮೈದಾನ ವಿವಾದ- ಇಕ್ಕಟ್ಟಿಗೆ ಸಿಲುಕಿದ ಚಾಮರಾಜಪೇಟೆ ಪೊಲೀಸರು

    ಈದ್ಗಾ ಮೈದಾನ ವಿವಾದ- ಇಕ್ಕಟ್ಟಿಗೆ ಸಿಲುಕಿದ ಚಾಮರಾಜಪೇಟೆ ಪೊಲೀಸರು

    ಬೆಂಗಳೂರು: ಈದ್ಗಾ ಮೈದಾನ ವಿವಾದ ವಿಚಾರವಾಗಿ ಸಾಲು ಸಾಲು ಸಂಘಟನೆಗಳಿಂದ ಇಂದು ಅರ್ಜಿ ಹಾಕಲು ಸಿದ್ಧತೆ ಮಾಡಿಕೊಂಡಿದೆ. ಇದರಿಂದಾಗಿ ಚಾಮರಾಜಪೇಟೆ ಪೊಲೀಸರು ಇಕ್ಕಟ್ಟಿಗೆ ಸಿಲುಕಿದಂತೆ ಆಗಿದೆ.

    ಈಗಾಗಲೇ ಈದ್ಗಾ ಮೈದಾನ ಬಿಬಿಎಂಪಿಯ ಆಟದ ಮೈದಾನವಾಗಿದೆ. ಆದರೆ ಇಲ್ಲಿ ಸಾರ್ವಜನಿಕ ಚಟುವಟಿಕೆಗೆ ನಿಷೇಧ ಹೇರಿ, ಒಂದು ಸಮೂದಾಯಕ್ಕೆ ಮಾತ್ರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ ಎಂದು ಕೆಲ ಹಿಂದೂಪರ ಸಂಘಟನೆಗಳು ಧ್ವನಿ ಎತ್ತಿದ್ದವು.

    ಈ ವಿಚಾರ ದೊಡ್ಡದಾಗುತ್ತಿದ್ದಂತೆ ಸೋಮವಾರ ಬಿಬಿಎಂಪಿ ವಿಶೇಷ ಆಯುಕ್ತ ಹರೀಶ್ ಕುಮಾರ್, ಚಾಮರಾಜಪೇಟೆ ಈದ್ಗಾ ಮೈದಾನವು ಆಟದ ಮೈದಾನವಾಗಿದ್ದು, ಬಿಬಿಎಂಪಿ ಆಸ್ತಿ ಆಗಿದೆ. ಕೋರ್ಟ್ ನಿರ್ದೇಶನದ ಪ್ರಕಾರ ವರ್ಷದಲ್ಲಿ 2 ಬಾರಿ ಪ್ರಾರ್ಥನೆಗೆ ಅವಕಾಶ ಕೊಡಲಾಗುತ್ತಿದೆ. ಕೋರ್ಟ್ ನೀಡಿರುವ 2 ಅವಧಿ ಬಿಟ್ಟು ಅವಕಾಶ ಕೇಳಿದ್ದರೆ ಬೇರೆ ಚಟುವಟಿಕೆಗೆ ಅವಕಾಶ ಕೊಡಲಾಗುತ್ತದೆ. ಆದರೆ ಕೋಮು ಸೌಹರ್ದತೆ ಹಾಳಾಗುವ ವಿಚಾರ ಹಾಗೂ ಕಾನೂನು ವಿಚಾರ ತೊಂದರೆ ಆದರೆ ಕೂಡಲೇ ಪೊಲೀಸ್ ಮೊರೆ ಹೋಗುತ್ತೇವೆ ಎಂದು ಸ್ಪಷ್ಟನೆ ನೀಡಿದ್ದರು.

    ಬಿಬಿಎಂಪಿಯಿಂದ ಈ ಹೇಳಿಕೆ ಬರುತ್ತಿದ್ದಂತೆ ಧಾರ್ಮಿಕ, ರಾಷ್ಟ್ರೀಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಹಲವು ಹಿಂದೂ ಸಂಘಟನೆಗಳು ಹಾಗೂ ಕನ್ನಡ ಪರ ಸಂಘಟನೆಗಳು ಅರ್ಜಿ ಸಲ್ಲಿಸಲಿದೆ.

    ಇಕ್ಕಟ್ಟಿನಲ್ಲಿ ಪೊಲೀಸರು: ಬಿಬಿಎಂಪಿಯಿಂದ ಅನುಮತಿ ಕೊಟ್ಟರೆ, ಪೊಲೀಸ್ ಠಾಣೆಯಿಂದ ಅನುಮತಿ ಕೊಡುವುದಾ ಬೇಡ್ವಾ ಎಂಬುದರ ಬಗ್ಗೆ ಗೊಂದಲ ಇದೀಗ ಉಂಟಾಗಿದ್ದು, ಇದರಿಂದಾಗಿ ಚಾಮರಾಜಪೇಟೆ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಬಗ್ಗೆ ಅಲ್ಲಿನ ಪೊಲೀಸರು ವಲಯದ ಡಿಸಿಪಿ ಹಾಗೂ ಪೊಲೀಸ್ ಕಮಿಷನರ್ ಜೊತೆ ಚರ್ಚೆ ಮಾಡಲಿದ್ದಾರೆ.

    ವಿವಾದದ ಬೆನ್ನಲ್ಲೇ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೈದಾನದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು, ಮೈದಾನದ ಸುತ್ತಮುತ್ತ ಪೊಲೀಸ್ ವಾಹನಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಈದ್ಗಾ ಮೈದಾನ ಆಟದ ಮೈದಾನ, ಬಿಬಿಎಂಪಿ ಆಸ್ತಿ: ಹರೀಶ್ ಕುಮಾರ್

    ಈಗಾಗಲೇ ಈದ್ಗಾ ಮೈದಾನದಲ್ಲಿ ಹಿಂದೂ ಧಾರ್ಮಿಕ ಆಚರಣೆಗಳಿಗೆ ಅವಕಾಶ ಕೊಡದಿದ್ದರೆ, ಈದ್ಗಾ ಮೈದಾನವನ್ನು ನೆಲಸಮ ಮಾಡುತ್ತೇವೆ ಎಂದು ವಿಶ್ವ ಸನಾತನ ಪರಿಷತ್ ಸಂಘದ ಅಧ್ಯಕ್ಷ ಎಸ್. ಭಾಸ್ಕರನ್ ಎಚ್ಚರಿಸಿದ್ದರು. ಕೋರ್ಟ್ ಆದೇಶವಿದ್ದರೂ ಧಾರ್ಮಿಕ ಆಚರಣೆಗೆ ಪೊಲೀಸರು ಅವಕಾಶ ಕೊಡುತ್ತಿಲ್ಲ. ಮುಸ್ಲಿಂ ಸಮುದಾಯದವರು ಹಿಂದೂಗಳ ಧಾರ್ಮಿಕ ಆಚರಣೆಗೆ ವಿರೋಧಿಸುತ್ತಿಲ್ಲ. ಆದರೆ, ಕ್ಷೇತ್ರದ ಶಾಸಕರು ಪೊಲೀಸರ ಮೂಲಕ ಅಡ್ಡಿ ಪಡಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಜಮೀರ್ ವಿರುದ್ಧ ಕಿಡಿಕಾರಿದ್ದರು. ಇದನ್ನೂ ಓದಿ: ಮಸೀದಿ ಆಯ್ತು ಈಗ ಈದ್ಗಾ ಮೈದಾನ – ಏನಿದು ವಿವಾದ? ಹಿಂದೂಗಳ ವಾದವೇನು? ಬಿಬಿಎಂಪಿ ದಾಖಲೆಯಲ್ಲಿ ಏನಿದೆ?

    ಜೊತೆಗೆ ಕೋರ್ಟ್‍ನಿಂದ ಆದೇಶ ಬಂದರೂ, ಈ ಜಾಗದಲ್ಲಿ ರಾಷ್ಟ್ರಧ್ವಜವನ್ನಾಗಲಿ, ನಾಡಧ್ವಜವನ್ನಾಗಿ ಹಾರಿಸಲು ಪೆÇಲೀಸರು ಬಿಟ್ಟಿಲ್ಲ. ಮುಸ್ಲಿಂ ಸಮುದಾಯಕ್ಕೆ ಹಾಗೂ ಈ ಮೈದಾನಕ್ಕೆ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಲಯ ಹೇಳಿದರೂ, ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಪಾಲಿಕೆಯ ಕಂದಾಯ ಅಧಿಕಾರಿಗಳನ್ನು ಹೆದರಿಸಿ, ಈದ್ಗಾ ಮೈದಾನವನ್ನು ಖಾತೆ ಮಾಡಿಸಿದ್ದಾರೆ ಅಂತ ಹಿಂದೂ ಸಂಘಟನೆಯ ಕೆಲವರು ಆರೋಪಿಸಿದ್ದರು.

  • ಪಾದರಾಯನಪುರದಿಂದ ಚಿಕ್ಕಬಳ್ಳಾಪುರಕ್ಕೆ ಬಂದವ್ರ ವಿರುದ್ಧ ಪ್ರಕರಣ ದಾಖಲು

    ಪಾದರಾಯನಪುರದಿಂದ ಚಿಕ್ಕಬಳ್ಳಾಪುರಕ್ಕೆ ಬಂದವ್ರ ವಿರುದ್ಧ ಪ್ರಕರಣ ದಾಖಲು

    ಚಿಕ್ಕಬಳ್ಳಾಪುರ: ಭಾರತ್ ಲಾಕ್ ಡೌನ್ ಉಲ್ಲಂಘಿಸಿ ಬೆಂಗಳೂರಿನ ಪಾದರಾಯನಪುರ ಸೇರಿದಂತೆ ಜಯನಗರ, ಚಾಮರಾಜಪೇಟೆಯಿಂದ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮರಾಠಿಪಾಳ್ಯಕ್ಕೆ ಆಗಮಿಸಿದ ಐವರ ಮೇಲೆ ಪ್ರಕರಣ ದಾಖಲಾಗಿದೆ.

    ಪಾದರಾಯನಪುರದಲ್ಲಿ ಗಲಾಟೆ ಪ್ರಕರಣದ ನಂತರ ಕದ್ದುಮುಚ್ಚಿ ಪಾದರಾಯನಪುರ ಹಾಗೂ ಚಾಮರಾಜಪೇಟೆಯ ತಲಾ ಇಬ್ಬರು ಹಾಗೂ ಜಯನಗರದ ಓರ್ವ ಸೇರಿ ಐದು ಮಂದಿ ಆಟೋ ಮೂಲಕ ಮರಾಠಿಪಾಳ್ಯದ ಸಂಬಂಧಿಕರ ಮನೆಗೆ ಆಗಮಿಸಿದ್ರು. ಈ ವೇಳೆ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು 5 ಮಂದಿಯನ್ನ ವಶಕ್ಕೆ ಪಡೆದು ಕ್ವಾರಂಟೈನ್ ಮಾಡಿದ್ದಾರೆ. ಈ ಐದು ಮಂದಿ ವಿರುದ್ಧವೂ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಇದೇ ಗೌರಿಬಿದನೂರು ತಾಲೂಕು ಡಿ ಪಾಳ್ಯ ಗ್ರಾಮದ 4 ಮಂದಿ ಹಿಂದೂಪುರಕ್ಕೆ ಹೋಗಿ ಕೊರೊನಾ ಸೋಂಕಿನಿಂದ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ವಾಪಾಸ್ಸಾಗಿದ್ರು. ಹೀಗಾಗಿ ಮಾಹಿತಿ ತಿಳಿದ ಪೊಲೀಸರ 4 ಮಂದಿಯನ್ನ ಕ್ವಾರಂಟೈನ್ ಗೆ ಓಳಪಡಿಸಿದ್ರು. ಈ 4 ಮಂದಿಯ ಗಂಟಲ ದ್ರವದ ಡೆಸ್ಟ್ ಮಾಡಿಸಿದ್ದು ನೆಗೆಟಿವ್ ಬಂದಿದೆ.

    ಲಾಕ್ ಡೌನ್ ಉಲ್ಲಂಘಿಸಿ ನೆರೆಯ ರಾಜ್ಯಕ್ಕೆ ಹೋಗಿ ಬಂದ ಹಿನ್ನೆಲೆಯಲ್ಲಿ 4 ಮಂದಿ ವಿರುದ್ಧ ಕೂಡ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟು 9 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 168, 169, 170 ಅಡಿ ಪ್ರಕರಣ ದಾಖಲಿಸಲಾಗಿದೆ.