Tag: champions trophy

  • ಕೇವಲ 1 ಪಂದ್ಯವಾಡಿ 869 ಕೋಟಿ ನಷ್ಟ – ಭಾರೀ ಸಂಕಷ್ಟದಲ್ಲಿ ಪಾಕ್‌ ಬೋರ್ಡ್‌

    ಕೇವಲ 1 ಪಂದ್ಯವಾಡಿ 869 ಕೋಟಿ ನಷ್ಟ – ಭಾರೀ ಸಂಕಷ್ಟದಲ್ಲಿ ಪಾಕ್‌ ಬೋರ್ಡ್‌

    ಇಸ್ಲಾಮಾಬಾದ್‌: ಐಸಿಸಿ ಚಾಂಪಿಯನ್ಸ್‌ ಟ್ರೋಫಿಯನ್ನು (ICC Champions Trophy) ಆಯೋಜಿಸಿ ಪಾಕಿಸ್ತಾನ (Pakistan) 85 ಮಿಲಿಯನ್‌ ಡಾಲರ್‌ (ಅಂದಾಜು 869 ಕೋಟಿ ರೂ.) ನಷ್ಟ ಅನುಭವಿಸಿದೆ ಎಂದು ವರದಿಯಾಗಿದೆ.

    ಚಾಂಪಿಯನ್ಸ್‌ ಟ್ರೋಫಿಗಾಗಿ ಸಾಲ ಮಾಡಿ ಮೈದಾನವನ್ನು ನವೀಕರಿಸಿದ್ದ ಪಾಕಿಸ್ತಾನ ಈಗ ಟೂರ್ನಿ ಆಯೋಜಿಸಿ ಭಾರೀ ಸಂಕಷ್ಟಕ್ಕೆ ತುತ್ತಾಗಿದೆ.

    ಪಾಕಿಸ್ತಾನ ಕಳೆದ 29 ವರ್ಷಗಳಿಂದ ಯಾವುದೇ ಐಸಿಸಿ ಕೂಟವನ್ನು ಆಯೋಜಿಸಿರಲಿಲ್ಲ. 2021 ರಲ್ಲಿ ಚಾಂಪಿಯನ್ಸ್‌ ಟ್ರೋಫಿ ಆಯೋಜಿಸುವ ಹಕ್ಕನ್ನು ಪಾಕಿಸ್ತಾನ ಪಡೆದುಕೊಂಡಿತ್ತು.

    ಚಾಂಪಿಯನ್ಸ್ ಟ್ರೋಫಿಗಾಗಿ ಲಾಹೋರ್, ಕರಾಚಿ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳನ್ನು ನವೀಕರಿಸಿತ್ತು. ಈ ನವೀಕರಣಕ್ಕೆ ಆರಂಭದಲ್ಲಿ 383 ಕೋಟಿ ರೂ. ಬಜೆಟ್‌ ಮಾಡಿತ್ತು. ಆದರೆ ನಿರೀಕ್ಷೆ ಮೀರಿ 178 ಕೋಟಿ ರೂ. ಏರಿಕೆಯಾದ ಕಾರಣ ಬಜೆಟ್‌ 561 ಕೋಟಿ ರೂ.ಗೆ ತಲುಪಿತು. ಇಷ್ಟೇ ಅಲ್ಲದೇ ಇತರ ಸಿದ್ಧತೆಗಳಿಗಾಗಿ ಇನ್ನೂ 347 ಕೋಟಿ ರೂ. ಖರ್ಚು ಮಾಡಿತ್ತು.

    ಟೂರ್ನಿಯಲ್ಲಿ ಕೇವಲ ಒಂದೇ ಒಂದು ಪಂದ್ಯವನ್ನು ಪಾಕಿಸ್ತಾನ ತವರಿನಲ್ಲಿ ಆಡಿತ್ತು. ನ್ಯೂಜಿಲೆಂಡ್‌ ವಿರುದ್ಧದ ಪಂದ್ಯ ಸೋತಿದ್ದರೆ ಬಾಂಗ್ಲಾದೇಶದೊಂದಿಗಿನ ಪಂದ್ಯ ಮಳೆಯಿಂದ ರದ್ದಾಗಿತ್ತು. ಇನ್ನು ಭಾರತದ (Team India) ಎಲ್ಲಾ ಪಂದ್ಯಗಳು ದುಬೈನಲ್ಲಿ (Dubai) ನಡೆದಿತ್ತು. ಭಾರತದ ಜೊತೆಗಿನ ಪಂದ್ಯದಲ್ಲೂ ಪಾಕಿಸ್ತಾನ ಸೋತಿತ್ತು. ಇದನ್ನೂ ಓದಿ: ಜಿಯೋ ಗ್ರಾಹಕರಿಗೆ ಮಾತ್ರ ಐಪಿಎಲ್‌ ವೀಕ್ಷಣೆ ಉಚಿತ! – ಎಷ್ಟು ರಿಚಾರ್ಜ್‌ ಮಾಡಿದ್ರೆ ಫ್ರೀ?

    ಐಸಿಸಿಗೆ ಹೆಚ್ಚು ಆದಾಯ ಬರುವುದೇ ಭಾರತದ ಪಂದ್ಯದಿಂದ. ಭಾರತದ ಪಂದ್ಯಗಳು ದುಬೈನಲ್ಲಿ ನಡೆದ ಕಾರಣ ಪಾಕಿಸ್ತಾನಕ್ಕೆ ಬಲವಾದ ಪೆಟ್ಟು ಬಿದ್ದಿತ್ತು. ಇದರ ಜೊತೆ ಪಾಕ್‌ ಲೀಗ್‌ನಲ್ಲಿ ಹೊರ ಬಿದ್ದ ಕಾರಣ ಪ್ರೇಕ್ಷಕರು ಪಂದ್ಯ ವೀಕ್ಷಿಸಲು ಮೈದಾನಕ್ಕೆ ಬರಲಿಲ್ಲ. ಟಿಕೆಟ್ ಮಾರಾಟ ಮತ್ತು ಹೋಸ್ಟಿಂಗ್ ಹಕ್ಕುಗಳಿಂದ ಪಾಕಿಸ್ತಾನ ಕೇವಲ 52 ಕೋಟಿ ರೂ. ಗಳಿಸಿದೆ ಎಂದು ವರದಿಯಾಗಿದೆ.

    ಈ ನಷ್ಟವನ್ನು ತುಂಬಲು ಪಾಕಿಸ್ತಾನ ಈಗ ಹಲವು ಕ್ರಮಗಳನ್ನು ಕೈಗೊಂಡಿದೆ. ರಾಷ್ಟ್ರೀಯ T20 ಚಾಂಪಿಯನ್‌ಶಿಪ್‌ಗಾಗಿ ಪಂದ್ಯ ಶುಲ್ಕವನ್ನು 90% ರಷ್ಟು ಕಡಿಮೆ ಮಾಡಲು ಮತ್ತು ಮೀಸಲು ಆಟಗಾರರ ಪಾವತಿಗಳನ್ನು 87.5% ರಷ್ಟು ಕಡಿಮೆ ಮಾಡಲು ಆಡಳಿತ ಮಂಡಳಿ ನಿರ್ಧರಿಸಿದೆ.

    ಆಟಗಾರರಿಗೆ 5 ಸ್ಟಾರ್ ವಸತಿ ಸೌಕರ್ಯಗಳನ್ನು ನೀಡಲಾಗುತ್ತಿತ್ತು. ಇನ್ನು ಮುಂದೆ ಎಕಾನಮಿ ದರ್ಜೆಯ ಹೋಟೆಲ್‌ನಲ್ಲಿ ಆಟಗಾರರು ತಂಗಬೇಕಾಗುತ್ತದೆ. ಅಷ್ಟೇ ಅಲ್ಲದೇ ಮುಂದಿನ ಕ್ರಿಕೆಟ್‌ ಪಂದ್ಯಗಳ ಟಿಕೆಟ್‌ ಬೆಲೆಯನ್ನು ಎರಡು ಪಟ್ಟು ಹೆಚ್ಚಿಲು ಚಿಂತನೆ ನಡೆಸಿದೆ.

  • ಚಾಂಪಿಯನ್ಸ್ ಟ್ರೋಫಿ ಗೆದ್ದು ತವರಿಗೆ ಬಂದ ಕ್ಯಾಪ್ಟನ್ ರೋಹಿತ್‌ಗೆ ಭರ್ಜರಿ ಸ್ವಾಗತ

    ಚಾಂಪಿಯನ್ಸ್ ಟ್ರೋಫಿ ಗೆದ್ದು ತವರಿಗೆ ಬಂದ ಕ್ಯಾಪ್ಟನ್ ರೋಹಿತ್‌ಗೆ ಭರ್ಜರಿ ಸ್ವಾಗತ

    ಮುಂಬೈ: ನ್ಯೂಜಿಲೆಂಡ್ ವಿರುದ್ಧ ಸೆಣಸಾಡಿ ಚಾಂಪಿಯನ್ಸ್ ಟ್ರೋಫಿ (Champions  Trophy) ತಮ್ಮದಾಗಿಸಿಕೊಂಡ ಟೀಂ ಇಂಡಿಯಾ (Team India) ಆಟಗಾರರು ತವರು ಸೇರಿದ್ದಾರೆ. ಅದೇ ರೀತಿ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾಗೆ (Rohit Sharma) ಅದ್ಧೂರಿ ಸ್ವಾಗತ ದೊರೆಯಿತು.

    ಸೋಮವಾರ ರಾತ್ರಿ 8 ಗಂಟೆಯ ಸುಮಾರಿಗೆ ರೋಹಿತ್ ಶರ್ಮಾ ಮುಂಬೈ ಏರ್‌ಪೋರ್ಟ್‌ಗೆ ಬಂದಿಳಿದರು. ನೀಲಿ ಜೀನ್ಸ್ ಪ್ಯಾಂಟ್, ಕಪ್ಪು ಬಣ್ಣದ ಟಿ -ಶರ್ಟ್ ತೊಟ್ಟ ರೋಹಿತ್ ಶರ್ಮಾ ತಲೆಯ ಮೇಲೆ ನೀಲಿ ಬಣ್ಣದ ಕ್ಯಾಪ್ ಧರಿಸಿದ್ದರು. ಏರ್‌ಪೋರ್ಟ್‌ನಿಂದ ಹೊರ ಬರುತ್ತಲೇ ಅಭಿಮಾನಿಗಳತ್ತ ಕೈ ಬೀಸಿದ ರೋಹಿತ್ ನಗು ಮುಖದಿಂದ ತಮ್ಮ ಕಾರು ಏರಿದರು. ಇವರನ್ನು ಕಂಡು ಅಭಿಮಾನಿಗಳು ಘೋಷಣೆಗಳನ್ನು ಕೂಗಿದರು. ಇದನ್ನೂ ಓದಿ: ಝೀರೋ ಬ್ಯಾಲೆನ್ಸ್ ಇದ್ದ ರನ್ಯಾ ಅಕೌಂಟ್‌ಗೆ 2 ದಿನದಲ್ಲಿ 10 ಲಕ್ಷ ಹಣ!

     

    View this post on Instagram

     

    A post shared by Mumbai Indians (@mumbaiindians)

    ಮುಂಬೈ ಇಂಡಿಯನ್ಸ್ ತನ್ನ ಸಾಮಾಜಿಕ ತಾಣ ಎಕ್ಸ್‌ನಲ್ಲಿ ಈ ಕುರಿತ ಒಂದು ವೀಡಿಯೋ ಪೋಸ್ಟ್ ಮಾಡಿದೆ. ಈ ವೀಡಿಯೋದಲ್ಲಿ ರೋಹಿತ್ ಶರ್ಮಾ ವಿಮಾನ ನಿಲ್ದಾಣದಿಂದ ಹೊರ ಬರುತ್ತಲೆ ಅಭಿಮಾನಿಗಳು ಅವರ ಹೆಸರನ್ನು ಘೋಷಣೆ ಕೂಗಿ ಜೈಕಾರ ಹಾಕುವ ಮೂಲಕ ಭರ್ಜರಿ ಸ್ವಾಗತ ಕೋರಿದರು. ವಿಮಾನ ನಿಲ್ದಾಣದಿಂದ ಹೊರಬಂದ ನಂತರ, ರೋಹಿತ್ ಅಭಿಮಾನಿಗಳಿಗೆ ಕೈ ಬೀಸುತ್ತಾ ತಮ್ಮ ರೇಂಜ್ ರೋವರ್ ಕಾರಿನಲ್ಲಿ ಕುಳಿತು ಮನೆಗೆ ಹೊರಟರು. ಇದನ್ನೂ ಓದಿ: ಕೊಪ್ಪಳ ಗ್ಯಾಂಗ್‌ರೇಪ್ ಪ್ರಕರಣ – ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

    ಇನ್ನು ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಕೂಡ ಸೋಮವಾರ ರಾತ್ರಿ 7 ಗಂಟೆಯ ಸುಮಾರಿಗೆ ನವದೆಹಲಿಗೆ ಬಂದಿಳಿದರು. ಈ ವೇಳೆ ಅವರಿಗೂ ಅದ್ಧೂರಿ ಸ್ವಾಗತ ಕೋರಲಾಯಿತು. ಬಳಿಕ ಗೌತಮ್ ಗಂಭೀರ್ ತಮ್ಮ ಮನೆಕಡೆ ಹೊರಟರು. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ವಿರೋಧ

    ನ್ಯೂಜಿಲೆಂಡ್ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ ಮುಡಿಗೇರಿಸಿಕೊಂಡಿದೆ. 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ. ಇದನ್ನೂ ಓದಿ: Hassan| ಅತ್ತೆ-ಸೊಸೆ ಜಗಳ; ಕೆರೆಗೆ ಹಾರಿ ತಾಯಿ, ಮಗ ಆತ್ಮಹತ್ಯೆ

    ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಗರಿಷ್ಠ ರನ್ ಬಾರಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಗಿಟ್ಟಿಸಿಕೊಂಡ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಚಾಂಪಿಯನ್ಸ್ ಟ್ರೋಫಿಯಲ್ಲಿ ವಿಶೇಷ ಸಾಧನೆಗೆ ಪಾತ್ರರಾದರು. ಇದನ್ನೂ ಓದಿ: ನಲ್ಲೂರು ಮಠ ವರ್ಸಸ್ ಬಡಾಮಕಾನ್ ತೆರವು ವಿವಾದ – ಜಿಲ್ಲಾ ವಕ್ಫ್ ಅಧಿಕಾರಿ ಅಮಾನತು

  • ಐಸಿಸಿಯ ಟೂರ್ನಿಯ 24 ಪಂದ್ಯಗಳ ಪೈಕಿ 23 ರಲ್ಲಿ ಗೆಲುವು – ಇದು ರೋ’ಹಿಟ್‌’ ಕ್ಯಾಪ್ಟನ್ಸಿ ಟ್ರ್ಯಾಕ್‌ ರೆಕಾರ್ಡ್‌

    ಐಸಿಸಿಯ ಟೂರ್ನಿಯ 24 ಪಂದ್ಯಗಳ ಪೈಕಿ 23 ರಲ್ಲಿ ಗೆಲುವು – ಇದು ರೋ’ಹಿಟ್‌’ ಕ್ಯಾಪ್ಟನ್ಸಿ ಟ್ರ್ಯಾಕ್‌ ರೆಕಾರ್ಡ್‌

    ದುಬೈ: ತನ್ನ ಬ್ಯಾಟಿಂಗ್‌ ಬಗ್ಗೆ ಟೀಕೆ ಮಾಡಿದವರಿಗೆ ರೋಹಿತ್‌ ಶರ್ಮಾ (Rohit Sharma) ಇಂದು ಭರ್ಜರಿ ಬ್ಯಾಟಿಂಗ್‌ ಮೂಲಕ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೇ ಐಸಿಸಿ ಟೂರ್ನಿಗಳಲ್ಲೂ (ICC Tournament) ತಾನೊಬ್ಬ ಸಮರ್ಥ ನಾಯಕ ಎಂದು ತೋರಿಸಿಕೊಟ್ಟಿದ್ದಾರೆ.

    ರೋಹಿತ್‌ ಶರ್ಮಾ ನೇತೃತ್ವದಲ್ಲಿ 2023 ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ (ICC World Cup) ಭಾರತ ಲೀಗ್‌ ಹಂತ 9 ಪಂದ್ಯಗಳನ್ನು ಗೆದ್ದಿತ್ತು. ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ 70 ರನ್‌ಗಳಿಂದ ಗೆದ್ದಿದ್ದ ಭಾರತ ಅಹಮಾದಾಬಾದ್‌ನಲ್ಲಿ ನಡೆದ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮಾತ್ರ ಸೋತಿತ್ತು.

     

    2024 ರಲ್ಲಿ ವೆಸ್ಟ್‌ ಇಂಡಿಸ್‌ ಮತ್ತು ಅಮೆರಿಕದಲ್ಲಿ ಟಿ20 (T20) ಟೂರ್ನಿ ನಡೆದಿತ್ತು. ಈ ಟೂರ್ನಿಯ ಎಲ್ಲಾ 9 ಪಂದ್ಯಗಳನ್ನು ಗೆದ್ದು ಭಾರತ ಚಾಂಪಿಯನ್‌ ಆಗಿ ಹೊರ ಹೊಮ್ಮಿತ್ತು. ಇದನ್ನೂ ಓದಿ: 140 ಕೋಟಿ ಭಾರತೀಯರ ಕನಸು ನನಸು – ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ!

    ಈಗ ಪಾಕಿಸ್ತಾನ ಆಯೋಜಿಸಿದ ಚಾಂಪಿಯನ್ಸ್‌ ಟ್ರೋಫಿಯಲ್ಲೂ (Champions Trophy 2025) ಭಾರತ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಲೀಗ್‌ನ ಎಲ್ಲಾ 3 ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ನಲ್ಲಿ ಬಲಿಷ್ಠ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಫೈನಲ್‌ನಲ್ಲಿ ನ್ಯೂಜಿಲೆಂಡ್‌ ತಂಡವನ್ನು ಸೋಲಿಸಿ ಮೂರನೇ ಬಾರಿ ಚಾಂಪಿಯನ್ಸ್‌ ಟ್ರೋಫಿಯನ್ನು ಎತ್ತಿಕೊಂಡಿದೆ.

    ಐಸಿಸಿ ಏಕದಿನ ವಿಶ್ವಕಪ್‌ನ 10 ಪಂದ್ಯ, ಟಿ20 ವಿಶ್ವಕಪ್‌ನ 9 ಪಂದ್ಯ, ಚಾಂಪಿಯನ್ಸ್‌ ಟ್ರೋಫಿಯ ಎಲ್ಲಾ 5 ಪಂದ್ಯಗಳನ್ನು ರೋಹಿತ್‌ ನೇತೃತ್ವದಲ್ಲೇ ಭಾರತ ಜಯಗಳಿಸಿದೆ. ಈ ಮೂಲಕ ಐಸಿಸಿ ಟೂರ್ನಿಯ ಒಟ್ಟು 24 ಪಂದ್ಯಗಳ ಪೈಕಿ 23 ಪಂದ್ಯಗಳನ್ನು ರೋಹಿತ್‌ ಜಯಗಳಿಸಿದ್ದಾರೆ.

    2022 ರಲ್ಲಿ ರೋಹಿತ್‌ ನೇತೃತ್ವದಲ್ಲೇ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಭಾರತ ಸೆಮಿಫೈನಲ್‌ ವರೆಗೆ ಬಂದಿತ್ತು. ಲೀಗ್‌ನ 5 ಪಂದ್ಯಗಳ ಪೈಕಿ 4 ರಲ್ಲಿ ಜಯಗಳಿಸಿದ್ದ ಭಾರತ ಸೆಮಿಯಲ್ಲಿ ಇಂಗ್ಲೆಂಡ್‌ ವಿರುದ್ಧ ಸೋತು ಟೂರ್ನಿಯಿಂದ ನಿರ್ಗಮಿಸಿತ್ತು.

    ಇಂದಿನ ಪಂದ್ಯದಲ್ಲಿ 76 ರನ್‌(83 ಎಸೆತ, 7 ಬೌಂಡರಿ, 3 ಸಿಕ್ಸ್‌) ಹೊಡೆದು ಭಾರತಕ್ಕೆ ಕಪ್‌ ತಂದುಕೊಡುವಲ್ಲಿ ಪ್ರಧಾನ ಪಾತ್ರ ವಹಿಸಿದ್ದ ರೋಹಿತ್‌ ಶರ್ಮಾ ಅವರಿಗೆ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.

  • ಬ್ಯೂಟಿ ಜೊತೆ ಚಹಲ್‌ ಫೈನಲ್‌ ಪಂದ್ಯ ವೀಕ್ಷಣೆ – ಯಾರಿದು ಯುವತಿ?

    ಬ್ಯೂಟಿ ಜೊತೆ ಚಹಲ್‌ ಫೈನಲ್‌ ಪಂದ್ಯ ವೀಕ್ಷಣೆ – ಯಾರಿದು ಯುವತಿ?

    ದುಬೈ: ಟೀಂ ಇಂಡಿಯಾ (Team India) ಸ್ಪಿನ್ನರ್‌ ಯಜುವೇಂದ್ರ ಚಹಲ್‌ (Yuzvendra Chahal) ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ನ್ಯೂಜಿಲೆಂಡ್‌ (New Zealand) ವಿರುದ್ಧ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ (Champions Trophy Final) ಪಂದ್ಯವನ್ನು ಯುವತಿ ಜೊತೆ ಕುಳಿತುಕೊಂಡು ವೀಕ್ಷಿಸುತ್ತಿದ್ದಾರೆ.

    ನೃತ್ಯ ಸಂಯೋಜಕಿ ಧನಶ್ರೀ ವರ್ಮಾ (Dhanashree Verma) ಮತ್ತು ಚಹಲ್‌ ಈಗ ಬೇರ್ಪಟ್ಟಿದ್ದಾರೆ. ಡಿವೋರ್ಸ್‌ ಪಡೆದ ನಂತರ ಚಹಲ್‌ ಮತ್ತೇ ಡೇಟಿಂಗ್‌ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.

     

    ಚಹಲ್‌ ಗ್ಯಾಲರಿಯಲ್ಲಿ ಆರ್‌ಜೆ ಮಹ್ವಾಶ್ ಜೊತೆ ಕುಳಿತಿದ್ದಾರೆ. ಚಹಲ್- ಆರ್.ಜೆ ಮಹ್ವಾಶ್ ಅವರ ಫುಲ್ ವೈರಲ್ ಆಗಿರುವ ಫೋಟೋಗಳಿಗೆ ನೆಟ್ಟಿಗರು ವಿಧ ವಿಧವಾದ ಕಮೆಂಟ್‌ ಮಾಡುತ್ತಿದ್ದಾರೆ.

    ಕೆಲ ದಿನಗಳ ಹಿಂದೆ ಮಹ್ವಾಶ್ ಜೊತೆ ಚಹಲ್‌ ಕಾಣಿಸಿಕೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್‌ ಆದ ಬೆನ್ನಲ್ಲೇ ಗಾಸಿಪ್‌ಗಳು ಎದ್ದಿದ್ದವು. ಈ ಗಾಸಿಪ್‌ಗಳನ್ನು ಮಹ್ವಾಶ್‌ ತಳ್ಳಿ ಹಾಕಿದ್ದರು. ಹೀಗಿದ್ದರೂ ಈಗ ಮತ್ತೆ ಚಹಲ್‌ ಜೊತೆ ಮಹ್ವಾಶ್ ಕಾಣಿಸಿಕೊಂಡಿದ್ದಾರೆ.‌ ಇದನ್ನೂ ಓದಿ: 4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ – ಮುಂಬೈ ಕೋರ್ಟ್‌ನಲ್ಲಿ ಏನಾಯ್ತು?

     

    ಯಜುವೇಂದ್ರ ಚಹಲ್ಮತ್ತು ನಟಿ ಧನಶ್ರೀ (Dhanashree Verma) ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ. ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನ (Divorce) ವಿಚಾರಣೆ ನಡೆಯಿತು. ಚಹಲ್ ಮತ್ತು ಧನಶ್ರೀ ಇಬ್ಬರೂ ಬೆಳಿಗ್ಗೆ 11 ಗಂಟೆಯಿಂದ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯವು ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ಅವರಿಗೆ ಸೂಚಿಸಿತು. ಅಲ್ಲಿ ಅವರು ಪರಸ್ಪರ ಒಪ್ಪಿಗೆಯ ಮೂಲಕ ಡಿವೋರ್ಸ್‌ ಪಡೆಯುತ್ತೇವೆ ಎಂದು ತಿಳಿಸಿದ್ದರು.

    ತಮ್ಮ ವಿಚ್ಛೇದನದ ಹಿಂದಿನ ಕಾರಣದ ಬಗ್ಗೆ ಪ್ರಶ್ನಿಸಿದಾಗ, ಚಹಲ್ ಮತ್ತು ಧನಶ್ರೀ ‘ಹೊಂದಾಣಿಕೆಯ ಸಮಸ್ಯೆ’ ಕಾರಣವನ್ನು ನೀಡಿದ್ದರು. ಪ್ರಕರಣವನ್ನು ಪರಿಶೀಲಿಸಿದ ನಂತರ ಮತ್ತು ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಂಡ ನಂತರ ನ್ಯಾಯಾಧೀಶರು ಸಂಜೆ 4:30ಕ್ಕೆ ಅಧಿಕೃತವಾಗಿ ಅವರ ವಿಚ್ಛೇದನ ತೀರ್ಪು ಪ್ರಕಟಿಸಿದರು.

     

  • ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಬಳಿಕ ಜಡೇಜಾ ನಿವೃತ್ತಿ?

    ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಬಳಿಕ ಜಡೇಜಾ ನಿವೃತ್ತಿ?

    ದುಬೈ: ಆಲ್‌ರೌಂಡರ್‌ ರವೀಂದ್ರ ಜಡೇಜಾ (Ravindra Jadeja) ಅವರು ಚಾಂಪಿಯನ್ಸ್‌ ಟ್ರೋಫಿ (Champions Trophy) ಫೈನಲ್‌ ಪಂದ್ಯದ ಬಳಿಕ ನಿವೃತ್ತಿ ಹೇಳುತ್ತಾರಾ ಹೀಗೊಂದು ಅನುಮಾನವನ್ನು ಕ್ರಿಕೆಟ್‌ ಅಭಿಮಾನಿಗಳು ಈಗ ವ್ಯಕ್ತಪಡಿಸುತ್ತಿದ್ದಾರೆ.

    ನ್ಯೂಜೆಲೆಂಡ್‌ ಬ್ಯಾಟಿಂಗ್‌ ಮುಗಿದ ಬಳಿಕ ಮೈದಾನದಲ್ಲಿ ವಿರಾಟ್‌ ಕೊಹ್ಲಿ(Virat Kohli) ಮತ್ತು ರವೀಂದ್ರ ಜಡೇಜಾ ಪರಸ್ಪರ ಅಪ್ಪಿಕೊಂಡರು. ಇಬ್ಬರು ಅಪ್ಪಿಕೊಳ್ಳುವ ವೇಳೆ ಜಡೇಜಾ ಭಾವುಕರಾಗಿದ್ದರು. ಹೀಗಾಗಿ ಈ ಪಂದ್ಯದ ಬಳಿಕ ಜಡೇಜಾ ನಿವೃತ್ತಿ ಹೇಳಬಹುದು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.

    ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ವಿಶ್ವಕಪ್‌ ಗೆದ್ದ ಬಳಿಕ ಜಡೇಜಾ ಟಿ20 ಕ್ರಿಕೆಟಿಗೆ ನಿವೃತ್ತಿ ಹೇಳಿದ್ದರು. ಇದನ್ನೂ ಓದಿ: IND vs NZ | ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಬಳಿಕ ರೋಹಿತ್‌ ಶರ್ಮಾ ನಿವೃತ್ತಿ…?

    ಇಂದಿನ ಪಂದ್ಯದಲ್ಲಿ ಜಡೇಜಾ 10 ಓವರ್‌ ಎಸೆದು 30 ರನ್‌ ನೀಡಿ 1 ವಿಕೆಟ್‌ ಪಡೆದಿದ್ದಾರೆ. ಎಡಗೈ ಬ್ಯಾಟ್ಸ್‌ಮನ್‌ ಟಾಮ್ ಲ್ಯಾಥಮ್ ಅವರನ್ನು ಎಲ್‌ಬಿಗೆ ಕೆಡವುವಲ್ಲಿ ಜಡೇಜಾ ಯಶಸ್ವಿಯಾಗಿದ್ದರು.

    ಸದ್ಯ ಐಸಿಸಿ ಟೆಸ್ಟ್‌ ಆಲ್‌ರೌಂಡರ್‌ ಶ್ರೇಯಾಂಕ ಪಟ್ಟಿಯಲ್ಲಿ ಜಡೇಜಾ 400 ರೇಟಿಂಗ್‌ ಪಡೆದು ಮೊದಲ ಸ್ಥಾನದಲ್ಲಿದ್ದರೆ ಏಕದಿನದಲ್ಲಿ 2013 ರೇಟಿಂಗ್‌ ಪಡೆದು 9ನೇ ಸ್ಥಾನದಲ್ಲಿದ್ದಾರೆ.

     

  • ಚಾಂಪಿಯನ್ಸ್‌ ಟ್ರೋಫಿ ಫೈನಲಿಗೆ ಭಾರತ – ದಾಖಲೆ ಬರೆದ ರೋಹಿತ್‌ ಶರ್ಮಾ

    ಚಾಂಪಿಯನ್ಸ್‌ ಟ್ರೋಫಿ ಫೈನಲಿಗೆ ಭಾರತ – ದಾಖಲೆ ಬರೆದ ರೋಹಿತ್‌ ಶರ್ಮಾ

    ದುಬೈ: ಚಾಂಪಿಯನ್ಸ್‌ ಫೈನಲ್‌ಗೆ ಟೀಂ ಇಂಡಿಯಾ (Team India) ಪ್ರವೇಶಿಸಿದ್ದು ಭಾರತದ ಪರ ರೋಹಿತ್‌ ಶರ್ಮಾ (Rohit Sharma) ದಾಖಲೆ ಬರೆದಿದ್ದಾರೆ.

    ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌, ವಿಶ್ವಕಪ್‌, ಟಿ20, ಚಾಂಪಿಯನ್ಸ್‌ ಟ್ರೋಫಿ (ICC Champions Trophy) ಫೈನಲ್‌ವರೆಗೆ ಟೀಂ ಇಂಡಿಯಾವನ್ನು ಮುನ್ನಡೆಸಿದ ಏಕೈಕ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್‌ ಶರ್ಮಾ ಪಾತ್ರವಾಗಿದ್ದಾರೆ.

    ಇಂದು ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ (Australia) 264 ರನ್‌ಗಳಿಗೆ ಆಲೌಟ್‌ ಆಗಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಭಾರತ 48.1 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 267 ರನ್‌ ಹೊಡೆಯುವ ಮೂಲಕ ಫೈನಲ್‌ ಪ್ರವೇಶಿಸಿತು.  ಇದನ್ನೂ ಓದಿ: ಬಲಿಷ್ಠ ಆಸ್ಟ್ರೇಲಿಯಾ ಬಗ್ಗು ಬಡಿದು ಫೈನಲ್‌ ಪ್ರವೇಶಿಸಿದ ಭಾರತ

     

    ಲಾಹೋರ್‌ನಲ್ಲಿ ಬುಧವಾರ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್‌ ಮಧ್ಯೆ ಎರಡನೇ ಸೆಮಿಫೈನಲ್‌ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ವಿಜೇತರಾದವರು ಭಾನುವಾರ ದುಬೈ ಮೈದಾನದಲ್ಲೇ ಭಾರತವನ್ನು ಎದುರಿಸಲಿದೆ.

    4 ಫೈನಲ್‌ ಪಂದ್ಯಗಳು:

    2023 – ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ನಲ್ಲಿ ಭಾರತವನ್ನು ಆಸ್ಟ್ರೇಲಿಯಾ 209 ರನ್‌ಗಳಿಂದ ಮಣಿಸಿತ್ತು. ಇದನ್ನೂ ಓದಿ: ಮೈದಾನದಲ್ಲೇ ಕುಲದೀಪ್‌ಗೆ ಕೊಹ್ಲಿ, ರೋಹಿತ್‌ ಕ್ಲಾಸ್‌!

    2023 – ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಭಾರತವನ್ನು 6 ವಿಕೆಟ್‌ಗಳಿಂದ ಸೋಲಿಸಿ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಸೋತಿತ್ತು.

     

    2024 – ವೆಸ್ಟ್‌ ಇಂಡಿಸ್‌ನಲ್ಲಿ ನಡೆದ ಟಿ20 ಫೈನಲ್‌ನಲ್ಲಿ ಭಾರತ ದಕ್ಷಿಣ ಆಫ್ರಿಕಾದ ವಿರುದ್ಧ 7 ರನ್‌ಗಳ ರೋಚಕ ಜಯ ಸಾಧಿಸಿತ್ತು. ಈ ಮೂಲಕ ಎರಡನೇ ಬಾರಿ ಟಿ20 ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿತ್ತು.

    2025 – ದುಬೈನಲ್ಲಿ ನಡೆದ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾದ ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿ ಫೈನಲ್‌ ಪ್ರವೇಶಿಸಿದೆ.

     

  • ಬಲಿಷ್ಠ ಆಸ್ಟ್ರೇಲಿಯಾ ಬಗ್ಗು ಬಡಿದು ಫೈನಲ್‌ ಪ್ರವೇಶಿಸಿದ ಭಾರತ

    ಬಲಿಷ್ಠ ಆಸ್ಟ್ರೇಲಿಯಾ ಬಗ್ಗು ಬಡಿದು ಫೈನಲ್‌ ಪ್ರವೇಶಿಸಿದ ಭಾರತ

    ದುಬೈ: ಬಲಿಷ್ಠ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿದ ಭಾರತ (Team India)  ಚಾಂಪಿಯನ್ಸ್‌ ಟ್ರೋಫಿ (Champions Trophy) ಫೈನಲ್‌ ಪ್ರವೇಶಿಸಿದೆ. ಈ ಮೂಲಕ 2023ರ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ ಸೋಲಿಗೆ ಸೇಡು ತೀರಿಸಿತು.

    ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ 264 ರನ್‌ಗಳಿಗೆ ಆಲೌಟ್‌ ಆಗಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಭಾರತ 48.1 ಓವರ್‌ಗಳಲ್ಲಿ 267 ರನ್‌ ಹೊಡೆಯುವ ಮೂಲಕ ಫೈನಲ್‌ ಪ್ರವೇಶಿಸಿತು. ತಾಳ್ಮೆಯ ಆಟವಾಡಿ ಭಾರತ ಫೈನಲ್‌ ಪ್ರವೇಶಿಸುವಲ್ಲಿ ಪ್ರಧಾನ ಪಾತ್ರ ವಹಿಸಿದ್ದ ವಿರಾಟ್‌ ಕೊಹ್ಲಿಗೆ ಅರ್ಹವಾಗಿಯೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.  ಇದನ್ನೂ ಓದಿ: ಸಚಿನ್‌ ದಾಖಲೆ ಬ್ರೇಕ್‌ – ವಿಶ್ವದಾಖಲೆ ಬರೆದ ಕೊಹ್ಲಿ

    ವಿರಾಟ್‌ ಕೊಹ್ಲಿ 84 ರನ್‌ (98 ಎಸೆತ, 5 ಬೌಂಡರಿ), ಶ್ರೇಯಸ್‌ ಅಯ್ಯರ್‌ 45 ರನ್‌(62 ಎಸೆತ, 3 ಬೌಂಡರಿ), ಕೆಎಲ್‌ ರಾಹುಲ್‌ ಔಟಾಗದೇ 42 ರನ್‌ (34 ಎಸೆತ, 2 ಬೌಂಡರಿ, 2 ಸಿಕ್ಸ್‌), ಹಾರ್ದಿಕ್‌ ಪಾಂಡ್ಯ 28 ರನ್‌ (24 ಎಸೆತ, 1 ಬೌಂಡರಿ, 3 ಸಿಕ್ಸ್‌) ಹೊಡೆಯುವ ಮೂಲಕ  ಭಾರತದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದರು. ಇದನ್ನೂ ಓದಿ: ಚಾಂಪಿಯನ್ಸ್‌ ಟ್ರೋಫಿ ಫೈನಲಿಗೆ ಭಾರತ – ದಾಖಲೆ ಬರೆದ ರೋಹಿತ್‌ ಶರ್ಮಾ


    ಎರಡನೇ ಸೆಮಿಫೈನಲ್‌  ಪಂದ್ಯ ಮಂಗಳವಾರ ನ್ಯೂಜಿಲೆಂಡ್‌ ಮತ್ತು ದಕ್ಷಿಣ ಆಫ್ರಿಕಾ ಮಧ್ಯೆ ನಡೆಯಲಿದೆ. ಈ ಪಂದ್ಯದಲ್ಲಿ ವಿಜೇತರಾದವರು ಭಾನುವಾರ ದುಬೈ ಮೈದಾನದಲ್ಲಿ ಭಾರತವನ್ನು ಎದುರಿಸಲಿದ್ದಾರೆ.

    ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ ಪರವಾಗಿ ನಾಯ ಸ್ವೀವ್‌ ಸ್ಮಿತ್‌ 73 ರನ್‌( 4 ಬೌಂಡರಿ, 1 ಸಿಕ್ಸ್‌), ಅಲೆಕ್ಸ್‌ ಕ್ಯಾರಿ 61 ರನ್‌( 57ಎಸೆತ, 8 ಬೌಂಡರಿ, 1 ಸಿಕ್ಸ್‌) ಹೊಡೆದರು.

    ಮೊಹಮ್ಮದ್‌ ಶಮಿ 3 ವಿಕೆಟ್‌, ವರುಣ್‌ ಚಕ್ರವರ್ತಿ ಮತ್ತು ಜಡೇಜಾ ತಲಾ 2 ವಿಕೆಟ್‌, ಹಾರ್ದಿಕ್‌ ಪಾಂಡ್ಯ, ಅಕ್ಷರ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

  • ಮೈದಾನದಲ್ಲೇ ಕುಲದೀಪ್‌ಗೆ ಕೊಹ್ಲಿ, ರೋಹಿತ್‌ ಕ್ಲಾಸ್‌!

    ಮೈದಾನದಲ್ಲೇ ಕುಲದೀಪ್‌ಗೆ ಕೊಹ್ಲಿ, ರೋಹಿತ್‌ ಕ್ಲಾಸ್‌!

    ದುಬೈ: ಆಸ್ಟ್ರೇಲಿಯಾ (Australia) ವಿರುದ್ಧ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಸೆಮಿಫೈನಲ್‌ ಪಂದ್ಯದ ವೇಳೆ ಸ್ಪಿನ್ನರ್‌ ಕುಲದೀಪ್‌ ಯಾದವ್‌ಗೆ (Kuldeep Yadav) ವಿರಾಟ್‌ ಕೊಹ್ಲಿ (Virat Kohli) ಮತ್ತು ರೋಹಿತ್‌ ಶರ್ಮಾ (Rohit Sharma) ಮೈದಾನದಲ್ಲೇ ಕ್ಲಾಸ್‌ ಮಾಡಿದ ವಿಡಿಯೋ ಈಗ ವೈರಲ್‌ ಆಗಿದೆ.

    ಕುಲದೀಪ್‌ ಯಾದವ್‌ ಇನ್ನಿಂಗ್ಸ್‌ 32 ಓವರ್‌ ಎಸೆಯುತ್ತಿದ್ದರು. 5ನೇ ಎಸೆತವನ್ನು ಸ್ಟ್ರೈಕ್‌ನಲ್ಲಿದ್ದ ಸ್ಮಿತ್‌ ಡೀಪ್‌ ಸ್ಕ್ಯಾರ್‌ ಲೆಗ್‌ ಕಡೆ ಹೊಡೆದು ಓಡಿದರು.


    ಬಾಲ್‌ ಕೊಹ್ಲಿ ಕೈ ಸೇರಿತು. ಕೂಡಲೇ ಕೊಹ್ಲಿ ಬೌಲರ್‌ ಎಂಡ್‌ನಲ್ಲಿದ್ದ ಕುಲದೀಪ್‌ ಯಾದವ್‌ಗೆ ಚೆಂಡು ಎಸೆದರು. ಆದರೆ ಕುಲದೀಪ್‌ ಯಾದವ್‌ ಚೆಂಡು ಹಿಡಿಯಲು ಪ್ರಯತ್ನಿಸದೇ ಬಿಟ್ಟರು.  ಕೂಡಲೇ ಮಿಡ್‌ ಆಫ್‌ನಲ್ಲಿದ್ದ ರೋಹಿತ್‌ ಶರ್ಮಾ ಚೆಂಡನ್ನು ಹಿಡಿದರು.

    ಒಂದು ವೇಳೆ ರೋಹಿತ್‌ ಶರ್ಮಾ ಕವರ್‌ ಮಾಡದೇ ಇದ್ದರೆ ಸ್ಮಿತ್‌ ಇನ್ನೊಂದು ರನ್‌ ಓಡುವ ಸಾಧ್ಯತೆ ಇತ್ತು. ಸುಲಭವಾಗಿ ಹಿಡಿಯುವ ಚೆಂಡನ್ನು ಹಿಡಿಯದ್ದಕ್ಕೆ ವಿರಾಟ್‌ ಕೊಹ್ಲಿ ಗರಂ ಆದರು. ನಂತರ ರೋಹಿತ್‌ ಶರ್ಮಾ ಸಹ ಕ್ಲಾಸ್‌ ತೆಗೆದುಕೊಂಡರು.

    ಇಂದಿನ ಪಂದ್ಯದಲ್ಲಿ 8 ಓವರ್‌ ಎಸೆದ ಕುಲದೀಪ್‌ ಯಾದವ್‌ 44 ರನ್‌ ನೀಡಿದರು. ಆದರೆ ವಿಕೆಟ್‌ ಪಡೆಯಲು ವಿಫಲರಾದರು.

  • ಇಂದು ಭಾರತ Vs ಆಸೀಸ್‌ ಸೆಮಿಸ್‌ ಹಣಾಹಣಿ – 2023ರ ವಿಶ್ವಕಪ್‌ ಸೋಲಿನ ಸೇಡು ತೀರಿಸಿಕೊಳ್ಳುವುದೇ ರೋಹಿತ್‌ ಪಡೆ?

    ಇಂದು ಭಾರತ Vs ಆಸೀಸ್‌ ಸೆಮಿಸ್‌ ಹಣಾಹಣಿ – 2023ರ ವಿಶ್ವಕಪ್‌ ಸೋಲಿನ ಸೇಡು ತೀರಿಸಿಕೊಳ್ಳುವುದೇ ರೋಹಿತ್‌ ಪಡೆ?

    – ಮತ್ತೆ ಭಾರತಕ್ಕೆ ʻಹೆಡ್ಡೇಕ್‌ʼ ಆಗುತ್ತಾ?

    ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಇನ್ನೇನು ಅಂತಿಮಘಟ್ಟ ತಲುಪಿದೆ. ಇಂದು ನಡೆಯಲಿರೋ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಟೀಂ ಇಂಡಿಯಾ (Team India) ಹಾಗೂ ಆಸ್ಟ್ರೇಲಿಯಾ (Australia) ಮುಖಾಮುಖಿಯಾಗಲಿವೆ.

    ಮಧ್ಯಾಹ್ನ 2:30ಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, 2023ರ ಏಕದಿನ ವಿಶ್ವಕಪ್‌ ಫೈನಲ್‌ ಸೋಲಿಗೆ ಭಾರತ ಸೇಡು ತೀರಿಸಿಕೊಳ್ಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. ಚಾಂಪಿಯನ್ಸ್‌ ಟ್ರೋಫಿಯಲ್ಲಿ (champions trophy) ಈವರೆಗೆ ಭಾರತ ಮತ್ತು ಆಸೀಸ್‌ ನಡುವೆ 4 ಪಂದ್ಯಗಳು ನಡೆದಿದ್ದು, 2 ರಲ್ಲಿ ಭಾರತ, 1ರಲ್ಲಿ ಆಸ್ಟ್ರೇಲಿಯಾ ಗೆದ್ದರೆ, 2009ರಲ್ಲಿ ಒಂದು ಪಂದ್ಯ ಮಳೆಗೆ ಬಲಿಯಾಗಿತ್ತು. ಇದನ್ನೂ ಓದಿ: ವರುಣ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ಬರ್ನ್‌ – ಭಾರತಕ್ಕೆ 44 ರನ್‌ಗಳ ಭರ್ಜರಿ ಜಯ

    ಪಿಚ್‌ ರಿಪೋರ್ಟ್‌ ಹೇಗಿದೆ?
    ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಬಳಸಿದ ಪಿಚ್‌ನಲ್ಲಿಯೇ ಈ ಪಂದ್ಯ ನಡೆಯಲಿದೆ. ಇನ್ನೂ ದುಬೈನ ಯಾವುದೇ ಅಂಗಳದಲ್ಲಿ ಪಂದ್ಯ ನಡೆದರೂ, ಪಂದ್ಯ ಸಾಗಿದಂತೆ ಪಿಚ್‌ ನಿಧಾನಗೊಳ್ಳುತ್ತದೆ. ಹೀಗಾಗಿ ಸ್ಪಿನ್‌ ಮಾಂತ್ರಿಕರು ಹೆಚ್ಚು ಪರಿಣಾಮಕಾರಿಯಾಗಲಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಟೀಂ ಇಂಡಿಯಾ ನಾಲ್ವರು ಸ್ಪಿನ್ನರ್‌ಗಳನ್ನ ಕಣಕ್ಕಿಳಿಸೋ ಸಾಧ್ಯತೆಯಿದೆ. ವರುಣ್ ಚಕ್ರವರ್ತಿ ಜೊತೆಗೆ ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಕಣಕ್ಕಿಳಿಯೋದು ಫಿಕ್ಸ್ ಆಗಿದೆ. ಸ್ಪೀಡ್ ಗನ್ ಮೊಹಮ್ಮದ್ ಶಮಿ ಜೊತೆಗೆ ಹಾರ್ದಿಕ್ ಪಾಂಡ್ಯ ವೇಗದ ಬೌಲಿಂಗ್‌ನಲ್ಲಿ ಜೊತೆಯಾಗಲಿದ್ದಾರೆ.

    ಇಬ್ಬನಿಯ ಸಮಸ್ಯೆ ಇಲ್ಲದಿರುವ ಕಾರಣ, ಟಾಸ್‌ ಗೆಲ್ಲುವ ತಂಡ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸುವ ಸಾಧ್ಯತೆ ಹೆಚ್ಚು. 270-280 ರನ್‌ ಗೆಲ್ಲುವ ಸ್ಕೋರ್‌ ಆಗಬಹುದು. ಆದ್ರೆ ಸದ್ಯ ಟೀಂ ಇಂಡಿಯಾ ಮೊದಲು ಬ್ಯಾಟ್‌ ಮಾಡಿದ್ರೆ 300 ರನ್‌ ಅಥವಾ ಮೊದಲು ಬೌಲಿಂಗ್‌ ಮಾಡಿದ್ರೆ ಆಸೀಸ್‌ ತಂಡವನ್ನು 250 ರನ್‌ಗಳಿಗೆ ಕಟ್ಟಿಹಾಕುವ ಯೋಚನೆಯಲ್ಲಿದೆ. ಸದ್ಯ ಸತತ 13 ಬಾರಿ ಟಾಸ್‌ ಸೋತಿರುವ ಟೀಂ ಇಂಡಿಯಾ ಈಬಾರಿಯಾದ್ರೂ ಟಾಸ್‌ ಗೆಲ್ಲುತ್ತಾ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ರೋಹಿತ್‌ ಶರ್ಮಾ ದಪ್ಪಗಿದ್ದಾರೆ – ಕಾಂಗ್ರೆಸ್‌ ವಕ್ತಾರೆ ಪೋಸ್ಟ್, ವಿವಾದದ ಬೆನ್ನಲ್ಲೇ ಪಕ್ಷದಿಂದ ಛೀಮಾರಿ

    ಇನ್ನೂ ಟೀಂ ಇಂಡಿಯಾ ಬ್ಯಾಟರ್‌ಗಳು ಫಾರ್ಮ್‌ನಲ್ಲಿ ಇರೋದ್ರಿಂದ ಆಸೀಸ್ ವಿರುದ್ಧ ರನ್ ಶಿಖರ ಕಟ್ಟುವ ಸಾಧ್ಯತೆಯಿದೆ. ಹಿಟ್‌ಮ್ಯಾನ್ ರೋಹಿತ್ ಶರ್ಮಾ, ಶುಭಮನ್ ಗಿಲ್, ಆರಂಭದಲ್ಲಿ ಬಿಗ್ ಇನ್ನಿಂಗ್ಸ್ ಕಟ್ಟಬೇಕಿದೆ. 3ನೇ ಕ್ರಮಾಂಕದಲ್ಲಿ ಕೊಹ್ಲಿ, 4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ್ರೆ, ಕನ್ನಡಿಗ ಅಕ್ಷರ್‌ ಪಟೇಲ್‌, ಕೆ.ಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಮ್ಯಾಚ್ ಫಿನಿಶರ್‌ಗಳಾಗಿ ಕಣಕ್ಕಿಳಿಯಲು ಕಾದುಕುಳಿತಿದ್ದಾರೆ. ಇದನ್ನೂ ಓದಿ: ಬೆತ್ ಮೂನಿ ಸ್ಫೋಟಕ ಬ್ಯಾಟಿಂಗ್‌ – ಯುಪಿ ವಿರುದ್ಧ ಗುಜರಾತ್‌ಗೆ 81 ರನ್‌ಗಳ ಭರ್ಜರಿ ಜಯ

    ʻಭಾರತಕ್ಕೆ ಹೆಡ್ಡೇಕ್‌ʼ
    ಟೀಂ ಇಂಡಿಯಾದಂತೆ ಆಸ್ಟ್ರೇಲಿಯಾ ಕೂಡ ಸಾಲಿಡ್ ಫಾರ್ಮ್‌ನಲ್ಲಿದೆ. ಅದ್ರಲ್ಲೂ ಐಸಿಸಿ ಟ್ರೋಫಿ ಟೂರ್ನಿಗಳಾದ್ರೆ, ಕಾಂಗರೂಗಳು ಎದುರಾಳಿ ತಂಡಗಳನ್ನು ಬೇಟೆಯಾಡೋದ್ರಲ್ಲಿ ಅನುಮಾನವೇ ಇಲ್ಲ. ಎಷ್ಟೇ ಟಾರ್ಗೆಟ್ ಆಗಿರಲಿ, ಎಂತಹದ್ದೇ ಸಂದರ್ಭ ಇರಲಿ, ಆಸೀಸ್ ಆಟಗಾರರು ವೀರಾವೇಶದಿಂದ ಹೋರಾಡ್ತಾರೆ. ಇತ್ತೀಚೆಗೆ ಇಂಗ್ಲೆಂಡ್‌ ವಿರುದ್ಧ ನಡೆದ ಪಂದ್ಯವೂ ಇದಕ್ಕೆ ಸಾಕ್ಷಿಯಾಗಿದೆ. ಬುಮ್ರಾ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿರುವ ಭಾರತ ತಂಡಕ್ಕೆ ಟ್ರಾವಿಸ್‌ ಹೆಡ್‌ ಮತ್ತೆ ಕಾಡುತ್ತಾರಾ? ಅಥವಾ ಶಮಿ ಸಾರಥ್ಯ ಬೌಲಿಂಗ್‌ ಪಡೆ ಬಹುಬೇಗನೆ ವಿಕೆಟ್‌ ಪಡೆದು ಪೆವಿಲಿಯನ್‌ಗಟ್ಟುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

    ವಿಶ್ವಕಪ್ ಸೋಲಿಗೆ ತಿರುಗೇಟು ಕೊಡುತ್ತಾ ಟೀಂ ಇಂಡಿಯಾ..?
    ಇನ್ನೂ ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ 2023ರ ವಿಶ್ವಕಪ್ ಫೈನಲ್ ಪಂದ್ಯದ ಸೋಲು ಮರೆಯೋದಕ್ಕೆ ಸಾಧ್ಯವಿಲ್ಲ. ಒಂದೂವರೆ ವರ್ಷಗಳ ನಂತರ ಮತ್ತೊಂದು ಐಸಿಸಿ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿ ಎದುರಾಗ್ತಿವೆ. ಆಸ್ಟ್ರೇಲಿಯಾವನ್ನು ಸೋಲಿಸಿ ಸೇಡು ತೀರಿಸಿಕೊಳ್ಳೋಕೆ ಇದೊಂದು ಒಳ್ಳೆಯ ಅವಕಾಶ. ರೋಹಿತ್ ಶರ್ಮಾ ಪಡೆ ಆಸೀಸ್‌ನ್ನು ಸೋಲಿಸಿ ಸೇಡು ತೀರಿಸಿಕೊಳ್ಳುತ್ತದೆ ಎಂದು ಟೀಂ ಇಂಡಿಯಾ ಕ್ರಿಕೆಟ್ ಪ್ರೇಮಿಗಳು ನಿರೀಕ್ಷಿಸಿದ್ದಾರೆ.

  • Champions Trophy: ದಾಖಲೆ ಬರೆದು ಸೆಮಿ ಪ್ರವೇಶಿಸಿದ ಭಾರತ

    Champions Trophy: ದಾಖಲೆ ಬರೆದು ಸೆಮಿ ಪ್ರವೇಶಿಸಿದ ಭಾರತ

    ದುಬೈ: ಈ ಬಾರಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ(ICC Champions Trophy) ಭಾರತ ದಾಖಲೆ ಬರೆದಿದೆ. ಲೀಗ್‌ನಲ್ಲಿ ನಡೆದ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದ ಏಕೈಕ ತಂಡ ಎಂಬ ಹೆಗ್ಗಳಿಕೆಗೆ ಭಾರತ (Team India) ಪಾತ್ರವಾಗಿದೆ.

    ದುಬೈನಲ್ಲಿ ಬಾಂಗ್ಲಾ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದ್ದ ಭಾರತ ಪಾಕಿಸ್ತಾನದ (Pakistan) ವಿರುದ್ಧವೂ 6 ವಿಕೆಟ್‌ಗಳ ಜಯ ಸಾಧಿಸಿತ್ತು. ಈಗ ನ್ಯೂಜಿಲೆಂಡ್‌ (New Zealand) ವಿರುದ್ಧ 44 ರನ್‌ಗಳ ಜಯ ಸಾಧಿಸಿದೆ. ಈ ಮೂಲಕ ಹ್ಯಾಟ್ರಿಕ್‌ ಗೆಲುವಿನೊಂದಿಗೆ ಸೆಮಿ ಫೈನಲ್‌ ಪ್ರವೇಶಿಸಿದೆ. ಇದನ್ನೂ ಓದಿ: ವರುಣ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ಬರ್ನ್‌ – ಭಾರತಕ್ಕೆ 44 ರನ್‌ಗಳ ಭರ್ಜರಿ ಜಯ

    ಗ್ರೂಪ್‌ ಬಿ ನಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಪಂದ್ಯ ಮಳೆಯಿಂದ ರದ್ದಾಗಿತ್ತು. ಹೀಗಾಗಿ ಎರಡು ತಂಡಗಳಿಗೆ ತಲಾ ಒಂದೊಂದು ಅಂಕವನ್ನು ಹಂಚಲಾಗಿತ್ತು.

    ಭಾರತ 6 ಅಂಕ ಸಂಪಾದಿಸಿದ್ದರೆ ದಕ್ಷಿಣ ಆಫ್ರಿಕಾ 5 ಅಂಕ ಸಂಪಾದಿಸಿ ಮೊದಲ ಸ್ಥಾನದಲ್ಲಿದೆ. ನ್ಯೂಜಿಲೆಂಡ್‌ ಮತ್ತು ಆಸ್ಟ್ರೇಲಿಯಾ ತಲಾ 4 ಅಂಕ ಸಂಪಾದಿಸಿದೆ.

    ಮಂಗಳವಾರ ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ಮೊದಲ ಸೆಮಿಫೈನಲ್‌ ಪಂದ್ಯ ದುಬೈನಲ್ಲಿ ನಡೆದರೆ ಬುಧವಾರ ದಕ್ಷಿಣ ಆಫ್ರಿಕಾ (South Africa) ಮತ್ತು ನ್ಯೂಜಿಲೆಂಡ್‌ ಮಧ್ಯೆ ಎರಡನೇ ಸೆಮಿಫೈನಲ್‌ ನಡೆಯಲಿದೆ. ಭಾನುವಾರ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯ ನಡೆಯಲಿದೆ.