ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ತಾಯಿ ಚಾಮುಂಡಿಯ ಮುಡಿ ಉತ್ಸವ ಶುಕ್ರವಾರ ರಾತ್ರಿ ನೇರವೇರಿತು.
ಮುಡಿ ಉತ್ಸವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಮೈಸೂರು ಮಹಾರಾಜರು ಉಡುಗೊರೆಯಾಗಿ ಕೊಟ್ಟಿರುವ ವಜ್ರ ವೈಡೂರ್ಯ ಸೇರಿದಂತೆ ಎಲ್ಲಾ ಆಭರಣಗಳನ್ನ ತಾಯಿಗೆ ಹಾಕಿ ಮುಡಿ ಉತ್ಸವ ಮಾಡಲಾಯಿತು.
ವಜ್ರಾಭರಣಗಳಿಂದ ಚಾಮುಂಡಿ ತಾಯಿ ಉತ್ಸವ ಮೂರ್ತಿ ಕಂಗೊಳಿಸಿತು. ಚಾಮುಂಡಿ ತಾಯಿಯ ಉತ್ಸವ ಮೂರ್ತಿಯನ್ನು ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಣೆ ಹಾಕಿಸಿ ನಂತರ ಮಹಾಮಂಗಳಾರತಿ ಮಾಡಿ ಮುಡಿ ಉತ್ಸವಕ್ಕೆ ತೆರೆ ಎಳೆಯಲಾಯಿತು.
ಮುಡಿ ಉತ್ಸವ ದಿನದಂದು ವರ್ಷಕ್ಕೆ ಒಂದು ಬಾರಿ ಮಾತ್ರ ಎಲ್ಲಾ ಆಭರಣಗಳನ್ನ ಚಾಮುಂಡಿ ತಾಯಿಗೆ ಧರಿಸಿ ವಿಶೇಷ ಪೂಜೆ ಮಾಡಲಾಗುತ್ತದೆ.
ಬೆಂಗಳೂರು/ಮೈಸೂರು: ಚಾಮುಂಡೇಶ್ವರಿ ದೇವಾಲಯದ (Chamundeshwari Temple) ಪಾವಿತ್ರ‍್ಯತೆಗೆ ಧಕ್ಕೆಯಾದರೆ ‘ಧರ್ಮಸ್ಥಳ ಚಲೋ’ ಮಾದರಿಯಲ್ಲಿ ‘ಚಾಮುಂಡೇಶ್ವರಿ ಚಲೋ’ (Chamundeshwari Chalo) ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಚಾಮುಂಡಿ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರಕ್ಕೆ ಚಾಮುಂಡೇಶ್ವರಿ ತಾಯಿ ಒಳ್ಳೆಯ ಬುದ್ಧಿಯನ್ನು ನೀಡಲಿ. ಹಿಂದೂಗಳ ಶ್ರದ್ಧಾ ಕೇಂದ್ರವನ್ನು ಟಾರ್ಗೆಟ್ ಮಾಡುವ ಮನಸ್ಥಿತಿಯನ್ನು ನಿವಾರಿಸಲಿ. ಹಿಂದೂಗಳ ಧಾರ್ಮಿಕ ಕೇಂದ್ರ ಯಾವಾಗಲೂ ರಕ್ಷಣೆಯಾಗಬೇಕು, ಪವಿತ್ರವಾಗಿ ಇರಬೇಕು. ಹಿಂದೂಗಳ ಭಾವನೆಗೆ ಧಕ್ಕೆಯಾಗಬಾರದು ಎಂದು ತಾಯಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದರು. ಇದನ್ನೂ ಓದಿ: ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ: ಕ್ಯಾ.ಬ್ರಿಜೇಶ್ ಚೌಟ
ಮೈಸೂರಿನ ಒಡೆಯರ್ ರಾಜವಂಶಸ್ಥರು ನೂರಾರು ವರ್ಷಗಳಿಂದಲೂ ದಸರಾ ಆಚರಿಸಿಕೊಂಡು ಬಂದಿದ್ದಾರೆ. ಇಂತಹ ಪವಿತ್ರವಾದ ಹಬ್ಬವನ್ನು ಕಾಂಗ್ರೆಸ್ ಸರ್ಕಾರ ಅಪವಿತ್ರ ಮಾಡಬಾರದು. ಇದು ಹಿಂದೂಗಳ ದೇವಾಲಯ ಅಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅಂದಮೇಲೆ ಇದು ಯಾರದ್ದು? ಇವರಿಗೆ ಧೈರ್ಯವಿದ್ದರೆ ಮಸೀದಿ ಮುಂದೆ ಹೋಗಿ ಇದು ಮುಸ್ಲಿಮರದ್ದಲ್ಲ ಎಂದು ಹೇಳಲಿ. ಶಬರಿಮಲೆ ಅಯ್ಯಪ್ಪ, ತಿರುಪತಿ ನಂತರ ಧರ್ಮಸ್ಥಳ ಹಾಗೂ ಚಾಮುಂಡೇಶ್ವರಿ ದೇವಾಲಯಗಳನ್ನು ಗುರಿ ಮಾಡಲಾಗಿದೆ ಎಂದು ದೂರಿದರು. ಇದನ್ನೂ ಓದಿ: ಚಿನ್ನಯ್ಯನನ್ನು ಬಾಡಿಗಾರ್ಡ್ ಎಂದಿದ್ರು, ದೆಹಲಿಗೆ ಅವ್ರು ಕರೆದುಕೊಂಡು ಹೋಗಿದ್ರು: ಸುಜಾತ ಭಟ್
ಚುನಾವಣೆ ಸಮಯದಲ್ಲಿ ಮುಸ್ಲಿಮರ ಮೂಗಿಗೆ ತುಪ್ಪ ಸವರಲಿ. ಅದನ್ನು ಬಿಟ್ಟು ಈ ಸಮಯದಲ್ಲಿ ಓಲೈಕೆ ಮಾಡಲಾಗುತ್ತಿದೆ. ಧರ್ಮಸ್ಥಳಕ್ಕೆ ನಾವೆಲ್ಲರೂ ಹೋಗಿ ಧರ್ಮಸ್ಥಳ ಚಲೋ ಮಾಡಲಿದ್ದೇವೆ. ಚಾಮುಂಡೇಶ್ವರಿ ದೇವಾಲಯಕ್ಕೆ ಧಕ್ಕೆಯಾದರೆ ಆಗ ಚಾಮುಂಡೇಶ್ವರಿ ಚಲೋ ಎಂದು ಹೋರಾಟ ಮಾಡುತ್ತೇವೆ. ಅಯೋಧ್ಯೆಯನ್ನು ಉಳಿಸಲು 500 ವರ್ಷ ಹೋರಾಡಿದ್ದೇವೆ. ಟೂಲ್ ಕಿಟ್ ಸಂಸ್ಕೃತಿ ಮುಂದುವರಿಸಿದರೆ ಕಾಂಗ್ರೆಸ್‌ನ ಅವನತಿ ಆರಂಭವಾಗಲಿದೆ ಎಂದರು. ಇದನ್ನೂ ಓದಿ: ಭಾರತ & ಚೀನಾ ಸ್ನೇಹಿತರಾಗಿರುವುದೇ ಉತ್ತಮ ಆಯ್ಕೆ: ಕ್ಸಿ ಜಿನ್‌ಪಿಂಗ್
– ಇದೇ ನನ್ನ ಮಾತಿನ ಸತ್ವ, ವಿವಾದ ಮಾಡೋದು ಬಿಜೆಪಿ ತತ್ವ ಎಂದ ಡಿಸಿಎಂ
ಬೆಂಗಳೂರು: ಚಾಮುಂಡೇಶ್ವರಿ (Chamundeshwari) ಕೇವಲ ಹಿಂದೂಗಳ ಆಸ್ತಿ ಅಲ್ಲ. ದಸರಾ (Dasara) ಧಾರ್ಮಿಕ ಆಚರಣೆ ಅಲ್ಲ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಇದೀಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ನಮ್ಮ ನಾಡ ದೇವತೆ ಚಾಮುಂಡೇಶ್ವರಿ. ಚಾಮುಂಡಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ ಎಂದಿದ್ದಾರೆ.ಇದನ್ನೂ ಓದಿ: ಗಣೇಶ ವಿಸರ್ಜನೆಗೆ ಬಿಬಿಎಂಪಿಯಿಂದ 41 ಕೆರೆ, 489 ತಾತ್ಕಾಲಿಕ ಸಂಚಾರಿ ಕಲ್ಯಾಣಿ ವ್ಯವಸ್ಥೆ
ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ ಪ್ರಾರ್ಥನೆ ಮಾಡುತ್ತಾರೆ. ಎಲ್ಲರ ನೋವನ್ನು ದೂರ ಮಾಡುವವಳು ನಮ್ಮ ದುರ್ಗಾ ದೇವಿ. ನಾಡಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ, ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜವಂಶಸ್ಥರೇ ಅನುಮತಿ ನೀಡಿ ಸಾಕ್ಷಿಯಾಗಿದ್ದಾರೆ. ನಾಡಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು. ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ನಮ್ಮ ನಾಡ ಹಬ್ಬ – ದಸರಾ
ನಮ್ಮ ನಾಡ ದೇವತೆ – ಚಾಮುಂಡೇಶ್ವರಿ
ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ… pic.twitter.com/AiG8RrMrVZ
ಮಂಗಳವಾರ (ಆ.26) ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತವಾದ ವಿಚಾರದ ಬಗ್ಗೆ ಮಾತನಾಡಿದ್ದ ಅವರು, ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಎಲ್ಲಾ ಧರ್ಮದವರಿಗೂ ಇದೆ. ಚಾಮುಂಡೇಶ್ವರಿ ಹಿಂದೂಗಳ ಆಸ್ತಿಯಲ್ಲ. ಎಲ್ಲಾ ಸಮುದಾಯದವರು ಚಾಮುಂಡೇಶ್ವರಿಗೆ ಹೋಗ್ತಾರೆ. ಅದು ಅವರ ನಂಬಿಕೆ. ನಾವು ಮಸೀದಿ, ಚರ್ಚೆಗೆ ಹೋಗ್ತೀವಿ, ಬಸ್ತಿ, ಜೈನ್ ಟೆಂಪಲ್, ಗುರುದ್ವಾರಗೆ ಹೋಗ್ತೀವಿ. ಗುರುದ್ವಾರಕ್ಕೆ ಹೋಗೋದು ತಪ್ಪಿಸೋಕೆ ಅಗುತ್ತಾ? ಹಿಂದೂ ಟೆಂಪಲ್‌ಗೆ ಅವರನ್ನ ಬರೋದು ತಪ್ಪಿಸೋಕೆ ಆಗುತ್ತಾ? ಯಾರ್ ಬೇಕಾದ್ರು ಹೋಗಬಹುದು ಎಂದಿದ್ದರು.ಇದನ್ನೂ ಓದಿ: ಐಪಿಎಲ್‌ಗೆ ಗುಡ್‌ಬೈ ಹೇಳಿದ ಅಶ್ವಿನ್
ನಟ ದರ್ಶನ್ (Darshan) ಬುಧವಾರ ಸಂಜೆ ದಿಢೀರ್ ಮೈಸೂರಿಗೆ (Mysuru) ಆಗಮಿಸಿ ಚಾಮುಂಡಿ ದೇವಿ (Chamundi Hills) ದರ್ಶನ ಪಡೆದಿದ್ದಾರೆ. ಈ ಹಿಂದೆ ಆಷಾಢ ಶುಕ್ರವಾರಕ್ಕೆ ಕುಟುಂಬದ ಜೊತೆ ಆಗಮಿಸಿದ್ದ ದರ್ಶನ್ ಇದೀಗ ಏಕಾಂಗಿಯಾಗಿ ಆಗಮಿಸಿ ತಾಯಿ ಚಾಮುಂಡಿ ಪಾದಕ್ಕೆರಗಿದ್ದಾರೆ.
ಸಾಮಾನ್ಯವಾಗಿ ದರ್ಶನ್ ಆಷಾಢ ಮಾಸದ ಶುಕ್ರವಾರ ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ಹೊರತಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಡೋದಿಲ್ಲ. ಆದರೀಗ ಶ್ರಾವಣ ಮಾಸದ ಬುಧವಾರ ದಿಢೀರ್ ಚಾಮುಂಡಮ್ಮನ ಆಶೀರ್ವಾದ ಬೇಡಿರುವುದು ವಿಶೇಷ. ಸದ್ಯದಲ್ಲೇ ದರ್ಶನ್‌ಗೆ ನೀಡಿರುವ ಜಾಮೀನಿನ ರದ್ದು ಕೋರಿ ಸಲ್ಲಿಸಲಾದ ಅರ್ಜಿಯ ಆದೇಶ ಹೊರಬೀಳುತ್ತೆ. ಇದೇ ಆತಂಕದಲ್ಲೇ ಇರುವ ದರ್ಶನ್ ನೆಮ್ಮದಿಗಾಗಿ ದೇವಾನ್ ದೇವತೆಗಳ ಮೊರೆ ಹೋಗುತ್ತಿದ್ದಾರೆ ಅನ್ನೋ ಮಾತು ಕೇಳಿಬರುತ್ತಿದೆ.
ಇಷ್ಟಲ್ಲದೇ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಗಳ ಬಂಧನವಾಗಿದ್ದು, ಅವರು ದರ್ಶನ್ ಅಭಿಮಾನಿಗಳು ಎಂದು ತನಿಖೆಯಲ್ಲಿ ಬಯಲಾಗುತ್ತಿದೆ. ಇದು ದರ್ಶನ್ ಹೆಸರಿಗೆ ಮತ್ತೆ ಕಳಂಕ ತಂದಿಟ್ಟಿದೆ. ಇದೆಲ್ಲದರ ಚಿಂತೆಯಲ್ಲಿರುವ ದರ್ಶನ್, ದಿಢೀರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದಿದ್ದಾರೆ ಅನ್ನೋದು ಚರ್ಚೆ. ಇದನ್ನೂ ಓದಿ: ಮನೆಯ ಟೆರೆಸ್ ಪೂರ್ತಿ ಸಮಂತಾ ಚಿತ್ರ ಬಿಡಿಸಿದ ಅಭಿಮಾನಿ!
ರಾಮನಗರ: ಇಂದು ಭೀಮನ ಅಮಾವಾಸ್ಯೆ (Bhimana Amavasya) ಹಿನ್ನೆಲೆ ಚನ್ನಪಟ್ಟಣ (Channapatna) ತಾಲೂಕಿನ ಗೌಡಗೆರೆ ಚಾಮುಂಡೇಶ್ವರಿ ದೇವಾಲಯದಲ್ಲಿ (Gowdagere Chamundeshwari Temple) ವಿಶೇಷ ಪೂಜೆ ನೆರವೇರಿಸಲಾಯಿತು.
ಕ್ಷೇತ್ರದ ಧರ್ಮದರ್ಶಿಗಳಾದ ಮಲ್ಲೇಶ್ ಗುರೂಜಿ ನೇತೃತ್ವದಲ್ಲಿ ಇಂದು ಮುಂಜಾನೆಯಿಂದಲೇ ವಿವಿಧ ಅಭಿಷೇಕ, ಹಾಲರವಿ ಸೇರಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಬಳಿಕ ಮಧ್ಯಾಹ್ನ 12:30ಕ್ಕೆ ಚಾಮುಂಡೇಶ್ವರಿ ರಥೋತ್ಸವ ನಡೆಸಲಾಯಿತು. ಶಾಸಕ ಸಿ.ಪಿ.ಯೋಗೇಶ್ವರ್ ರಥೋತ್ಸವಕ್ಕೆ ಚಾಲನೆ ನೀಡಿ ಕುಟುಂಬ ಸಮೇತ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಯುಕೆ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ – ಭಾರತಕ್ಕೆ ಏನು ಲಾಭ?
– ಬೆಳ್ಳಂಬೆಳಗ್ಗೆ ದೇವಿ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ
ಮೈಸೂರು: ಆಷಾಢ ಮಾಸದ ಹಿನ್ನೆಲೆ ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿಯ (Chamundeshwari) ದರ್ಶನ ಪಡೆಯಲು ರಾಜ್ಯ ಸೇರಿದಂತೆ ದೇಶದ ಇತರೆ ಭಾಗಗಳಿಂದಲೂ ಸಹ ಭಕ್ತರು ಮೈಸೂರಿಗೆ (Mysuru) ಆಗಮಿಸುತ್ತಾರೆ. ಶುಕ್ರವಾರ ಇಂದು ಮೂರನೇ ಆಷಾಢ ಮಾಸದ ಸಂಭ್ರಮ ಅದ್ಧೂರಿಯಾಗಿ ನೆರವೇರುತ್ತಿದ್ದು, ತಾಯಿ ಚಾಮುಂಡೇಶ್ವರಿ ಗಜ ಲಕ್ಷ್ಮಿ ಮತ್ತು ನಾಗ ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.
ಚಾಮುಂಡಿ ಬೆಟ್ಟಕ್ಕೆ ತೆರಳಲು ಲಲಿತ ಮಹಲ್ ಪಾರ್ಕಿಂಗ್ ಸ್ಥಳದಿಂದ ಶುಕ್ರವಾರ (ಇಂದು) ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮೈಸೂರು ನಗರ ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕಲಬುರಗಿ | ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ಕಾಲ್ತುಳಿತ – ಮಹಿಳೆ ಸಾವು
ಮೈಸೂರು: ನಗರದಲ್ಲಿ ಆಷಾಢ ಶುಕ್ರವಾರ (Ashada Shukravara) ಸಂಭ್ರಮ ಮನೆ ಮಾಡಿದೆ. ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ (Chamundeshwari Hills) ಅಪಾರ ಸಂಖ್ಯೆಯಲ್ಲಿ ಭಕ್ತಸಾಗರ ಹರಿದುಬಂದಿದೆ.
ಈ ಬಾರಿ 300 ರೂ., 2000 ರೂ. ಟಿಕೆಟ್ ಹಾಗೂ ಧರ್ಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 2000 ರೂ. ಟಿಕೆಟ್‌ಗೆ ಪ್ರಸಾದ ಕಿಟ್ ಸಹ ನೀಡಲಾಗುವುದು. ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನಿರ್ಬಂಧ ಆಗಿದೆ.
ಲಲಿತ್ ಮಹಲ್ ಹೆಲಿಪ್ಯಾಡ್‌ನಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಮೆಟ್ಟಿಲು ಮೂಲಕ ಬರುವ ಭಕ್ತರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆ ಇದೆ. ಇದನ್ನೂ ಓದಿ: 1 ಲಕ್ಷ ಕ್ಯೂಸೆಕ್ ಒಳ ಹರಿವು – ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ
ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಪುತ್ರ ಸೂರಜ್ ರೇವಣ್ಣ ಅವರು ಸಹ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಂದ ಹೊರಬಂದ ನಟ ದರ್ಶನ್ (Darshan) ಎಂಟು ತಿಂಗಳ ನಂತರ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದ ಕಾರಣ ಅರ್ಧಕ್ಕೆ ನಿಂತು ಹೋಗಿದ್ದ ‘ಡೆವಿಲ್’ ಚಿತ್ರದ (Devil Cinema) ಚಿತ್ರೀಕರಣ ಮೈಸೂರಿನಲ್ಲಿ (Mysuru) ಇಂದಿನಿಂದ ಶುರುವಾಗಿದೆ. ಈ ಹಿನ್ನೆಲೆ ಚಿತ್ರೀಕರಣ ಆರಂಭಕ್ಕೂ ಮುನ್ನ ದರ್ಶನ್ ದೇವರ ಮೊರೆ ಹೋಗಿದ್ದಾರೆ.
8 ತಿಂಗಳ ಬಳಿಕ ‘ಡೆವಿಲ್’ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿರುವ ದರ್ಶನ್ ಶೂಟಿಂಗ್‌ಗೂ ಮುನ್ನ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಚಾಮುಂಡಿ ಬೆಟ್ಟದಿಂದ ನೇರವಾಗಿ ಸರ್ಕಾರಿ ಅತಿಥಿ ಗೃಹಕ್ಕೆ ದರ್ಶನ್ ಆಗಮಿಸಿದ್ದಾರೆ. ಇದನ್ನೂ ಓದಿ: ನಟಿ ರನ್ಯಾ ಬೆನ್ನಲ್ಲೇ ಮತ್ತಿಬ್ಬರು ಸ್ಯಾಂಡಲ್‌ವುಡ್ ನಟಿಯರಿಗೆ ಮಾಸ್ಟರ್ ಸ್ಟ್ರೋಕ್
ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಆರೋಪ ಹೊರಿಸಿ ರೂಪಾ ಅವರು ದೂರು ನೀಡಿದ್ದರು. ದೂರಿನ ಹಿನ್ನೆಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಚಾಮುಂಡೇಶ್ವರಿ ದೇವಿಯ ಹರಕೆ ಸೀರೆಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಸ್ನೇಹಮಯಿ ಕೃಷ್ಣ ದೂರಿದ್ದರು. ಈ ಸಂಬಂಧ ವೀಡಿಯೋ ಕೂಡ ಹರಿಬಿಟ್ಟಿದ್ದರು. ವ್ಯಕ್ತಿಯೊಬ್ಬರು ಬೆಟ್ಟದಲ್ಲಿ ಗಂಟೊಂದರಲ್ಲಿ ಸೀರೆಗಳನ್ನು ತುಂಬಿಕೊಂಡು ಸಾಗಿಸಿದ್ದಾರೆಂದು ಆರೋಪಿಸಲಾಗಿತ್ತು. ಇದನ್ನೂ ಓದಿ: ಚಾಮುಂಡಿ ದೇವಿಗೆ ಕೊಟ್ಟ ಹರಕೆ ಸೀರೆ ಕಾಳಸಂತೆಯಲ್ಲಿ ಮಾರಾಟ ಆರೋಪ – ಸ್ನೇಹಮಯಿ ಕಷ್ಣ ದೂರು
ಇದಕ್ಕೆ ಪ್ರತಿಕ್ರಿಯಿಸಿದ ರೂಪಾ ಅವರು ಆರೋಪವನ್ನು ಅಲ್ಲಗಳೆದಿದ್ದಾರೆ. ಅದು ಸೀರೆಗಳಲ್ಲ. ಕಡತಗಳನ್ನು ಗಂಟು ಹಾಕಿ ಸಾಗಿಸಿರುವುದು ಎಂದು ಸ್ಪಷ್ಟಪಡಿಸಿದ್ದರು.