ಈ ಹಿಂದೆ ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ಬಾನು ಮುಷ್ತಾಕ್ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಪಿಐಎಲ್ ಅರ್ಜಿಯನ್ನು ವಜಾಗೊಳಿಸಿತ್ತು. ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿತ್ತು. ಆದರೆ ಸುಪ್ರೀಂ ಸಹ ಅರ್ಜಿ ವಜಾಗೊಳಿಸಿ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿತ್ತು. ಇದನ್ನೂ ಓದಿ: Mysuru Dasara | ನೀಲಿ ಜರಿ ಸೀರೆಯಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿ
ಇದೀಗ ಎಲ್ಲಾ ಅಡೆತಡೆಗಳನ್ನು ಎದುರಿಸಿ ಬಾನು ಮುಷ್ತಾಕ್ ನಾಡಹಬ್ಬ ಮೈಸೂರು ದಸರಾಗೆ ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಅಲ್ಲದೇ ತಾಯಿ ಚಾಮುಂಡೇಶ್ವರಿಗೆ ಸಂಪ್ರದಾಯ ಬದ್ಧವಾಗಿ ಪೂಜೆ ಸಲ್ಲಿಸುವ ಮೂಲಕ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.
ಮೈಸೂರು: ನಟ ಕಿಚ್ಚ ಸುದೀಪ್ (Kiccha Sudeep) ಪತ್ನಿ ಸಮೇತರಾಗಿ ಮೈಸೂರಿನಲ್ಲಿರುವ ಚಾಮುಂಡಿ ಬೆಟ್ಟಕ್ಕೆ (Chamundi Betta) ಭೇಟಿ ನೀಡಿದ್ದಾರೆ.
ಸುದೀಪ್ ದಂಪತಿ ಜೊತೆ ಬಿಗ್‌ಬಾಸ್ ಸ್ಪರ್ಧಿ ವಿನಯ್ ಗೌಡ (Vinay Gowda), ಪತ್ನಿ ಅಕ್ಷತಾ ಹಾಗೂ ಪುತ್ರ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಈ ವೇಳೆ ಕಿಚ್ಚ ಸುದೀಪ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಇದನ್ನೂ ಓದಿ: ಅತ್ತೆಯ ಕಣ್ಗಳನ್ನು ದಾನ ಮಾಡಿದ ಮೆಗಾಸ್ಟಾರ್ ಚಿರಂಜೀವಿ
ಇತ್ತೀಚೆಗಷ್ಟೆ ಅಗಲಿದ್ದ ತಾಯಿಯ ಹುಟ್ಟುಹಬ್ಬವನ್ನು ಶನಿವಾರ ಗಿಡ ನೆಡುವ ಮೂಲಕ ಸುದೀಪ್ ವಿಶೇಷವಾಗಿ ಆಚರಿಸಿದ್ದರು. ಅಲ್ಲದೇ ಇದೇ ಸೆಪ್ಟೆಂಬರ್ 2 ರಂದು ಸುದೀಪ್ ಕೂಡ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ.
ಮೈಸೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದು ಸಂಜೆ ನಾಡದೇವವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನಿ ಮೋದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವರು ಸಾಥ್ ನೀಡಿದರು.
ಸುತ್ತೂರು ಮಠದಲ್ಲಿನ ಕಾರ್ಯಕ್ರಮ ಮುಗಿಸಿದ ಮೋದಿ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಂತೆ ಮೋದಿ ಅವರನ್ನು ನೋಡಲು ಮಾರ್ಗದುದ್ದಕ್ಕೂ ಜನ ಕಾದು ಕುಳಿತಿದ್ದರು. ಎಲ್ಲರತ್ತ ಕೈ ಬೀಸುತ್ತಾ ತೆರಳಿದ ಮೋದಿ ಚಾಮುಂಡೇಶ್ವರಿ ದೇಗುಲ ಪ್ರವೇಶಿಸಿದರು.
ಚಾಮುಂಡೇಶ್ವರಿ ದೇಗುಲ ಪ್ರೇವಶ ದ್ವಾರದಲ್ಲಿರುವ ಗಣಪತಿಗೆ ಪೂಜೆ ಸಲ್ಲಿಸಿದ ಮೋದಿ ಒಳ ಪ್ರವೇಶಿಸಿದರು. ಈ ವೇಳೆ ಅರ್ಚಕರು ಶಾಲು ಹೊದಿಸಿ ಪ್ರಧಾನಿಯನ್ನು ಸ್ವಾಗತಿಸಿದರು. ನಾಡದೇವತೆಗೆ ಪಾರ್ಥನೆ ಸಲ್ಲಿಸಿದ ಮೋದಿ ಕುಂಕುಮಾರ್ಚನೆ ಪೂಜೆ ನೆರವೇರಿಸಿದರು. ದೇವಸ್ಥಾನದ ಗರ್ಭಗುಡಿ ಎದುರು ಕುಳಿತು ಪೂಜೆ ನೆರವೇರಿಸಿದರು. ಇದೇ ವೇಳೆ ಮೋದಿ ನಾಡದೇವತೆ ಎದರು ಸಂಕಲ್ಪ ಮಾಡಿದರು. ಬಳಿಕ ಗರ್ಭಗುಡಿಗೆ ಸುತ್ತು ಹಾಕಿದ ಮೋದಿ, ಚಾಮುಂಡಿ ತಾಯಿ ಪಾದಕ್ಕೆ ನಮಸ್ಕರಿಸಿದರು. ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿ ಹೊರಬಂದ ಮೋದಿ ದೇಗುಲಕ್ಕೆ ಕಾಣಿಕೆ ಹಾಕಿದರು.
ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ: ಬಾಂಬ್ ನಿಷ್ಕ್ರಿಯದಳ, ಶ್ವಾನದಳದಿಂದ ದೇವಸ್ಥಾನದ ಸುತ್ತ ಹಾಗೂ ರಸ್ತೆ ಅಕ್ಕಪ್ಕದಲ್ಲಿ ಪರಿಶೀಲನೆ ನಡೆಸಲಾಗಿತ್ತು. ಸಂಸದ ಪ್ರತಾಪ್‌ಸಿಂಹ ನೇತೃತ್ವದಲ್ಲಿ ಅಂಗಡಿ ಮುಂಗಟ್ಟುಗಳ ಬಳಿಯೂ ತಪಾಸಣೆ ನಡೆಸಲಾಗಿತ್ತು.
ಹಬ್ಬದ ವಾತಾವರಣ: ಪ್ರಧಾನಿ ಭೇಟಿ ನೀಡುತ್ತಿರುವ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ತಾಯಿ ಚಾಮುಂಡೇಶ್ವರಿಗೆ ಕೆಂಪು, ಬೀಳಿ ಹಾಗೂ ಚಿನ್ನದ ಬಣ್ಣದಿಂದ ಕೂಡಿದ್ದ ಸೀರೆಯಲ್ಲಿ ಅಲಂಕರಿಸಲಾಗಿತ್ತು.
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕೇಂದ್ರಬಿಂದು ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಈ ಬಾರಿ ಚಾಮುಂಡಿಬೆಟ್ಟದಿಂದ ಅಲಂಕೃತ ವಾಹನದಲ್ಲಿ ವಿವಿಧ ಕಲಾತಂಡಗಳ ಜೊತೆಗೆ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತಿದೆ.
ವಿಜಯದಶಮಿಯ ದಿನವಾದ ಶುಕ್ರವಾರ ಬೆಳಗ್ಗೆ 8:00 ಗಂಟೆಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಟಾಂಗಾದಲ್ಲಿ ಆಗಮಿಸಿದ ಸೋಮಶೇಖರ್
ಚಾಮುಂಡೇಶ್ವರಿ ಉತ್ಸವ ಮೂರ್ತಿ ತರುವ ಅಲಂಕೃತ ವಾಹನದೊಂದಿಗೆ ನಾದಸ್ವರ ತಂಡ, ಪೊಲೀಸ್ ಬ್ಯಾಂಡ್, ಅಶ್ವದಳ, ಭಜನಾ ತಂಡ, ವೇದಘೋಷ, ಚಂಡೆ, ನವದುರ್ಗೆಯರು ಸಾಗಲಿದ್ದು, ತಾವರಕಟ್ಟೆ, ಇಟ್ಟಿಗೆಗೂಡು, ಹಾಡಿರ್ಂಚ್ ವೃತ್ತದ ಮೂಲಕ ಅರಮನೆ ಪ್ರವೇಶಿಸಲಾಗುತ್ತದೆ.
ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್. ನಾಗೇಂದ್ರ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಮೈಸೂರು ಮಹಾನಗರ ಪಾಲಿಕೆಯ ಸದಸ್ಯರುಗಳು, ಮತ್ತಿತರ ಗಣ್ಯರು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ನಾಡಿನೆಲ್ಲೆಡೆ ಆಯುಧಪೂಜೆಯ ಸಂಭ್ರಮ – ರಾಜವಂಶಸ್ಥರ ಆಯುಧಗಳಿಗೆ ಪೂಜೆ ಸಲ್ಲಿಸಲಿರುವ ಯದುವೀರ್
– ಸತ್ಯ ಯಾವುದು ಎಂದು ತೀರ್ಮಾನವಾಗಿದೆ – ನಮ್ಮಂತ ರಾಜಕಾರಣಿಗಳಿಗೆ ಇದು ಪಾಠ
ಮೈಸೂರು: ಮಾಜಿ ಸಚಿವ, ವಿಧಾನಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಅವರಿಗೆ ನ್ಯಾಯ ದೇವತೆ ಶಿಕ್ಷೆ ನೀಡಿದ್ದಾಳೆ ಎಂದು ಜೆಡಿಎಸ್ ಶಾಸಕ ಸಾರಾ ಮಹೇಶ್ ಹೇಳಿದ್ದಾರೆ.
ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಸಾರಾ ಮಹೇಶ್ ಆಗಮಿಸಿ ದೇವಿಯ ದರ್ಶನ ಪಡೆದರು. ಬಳಿಕ ಕ್ಷೇತ್ರವನ್ನು ಸಾಕ್ಷಿಯಾಗಿಸಿದ್ದಕ್ಕೆ 1,001 ರೂ. ತಪ್ಪು ಕಾಣಿಕೆ ಹಾಕಿದರು. ಬಳಿಕ ಮಾತನಾಡಿದ ಅವರು, ಪ್ರಸಂಗ ನಡೆದ ಸರಿಯಾಗಿ ಒಂದು ವರ್ಷಕ್ಕೆ ನ್ಯಾಯ ದೇವತೆ ತೀರ್ಪು ಕೊಟ್ಟಿದ್ದಾಳೆ ಎಂದು ತಿಳಿಸಿದರು.
ನಾನು ದೇವಾಲಯದಲ್ಲಿ ಕಣ್ಣೀರಿಟ್ಟು ತಪ್ಪು ಯಾರದ್ದು ಸರಿಯಾರದ್ದು ಎಂದು ನೀನೇ ತೋರಿಸು ತಾಯಿ ಎಂದು ಕೇಳಿದ್ದೆ. ಪ್ರಸಂಗ ನಡೆದ ಸರಿಯಾಗಿ ಒಂದು ವರ್ಷಕ್ಕೆ ನ್ಯಾಯ ದೇವತೆ ತೀರ್ಪು ಕೊಟ್ಟಿದ್ದಾಳೆ. ತಪ್ಪು ಮಾಡಿದ್ದರೂ ಭಂಡತನದಿಂದ ಶಕ್ತಿ ದೇವತೆ ಮುಂದೆ ಕೂತರೆ ಏನಾಗುತ್ತದೆ ಎಂಬುದಕ್ಕೆ ಇದು ಉದಾಹರಣೆಯಾಗಿದ್ದು ನಮ್ಮಂತ ರಾಜಕಾರಣಿಗಳಿಗೆ ಪಾಠ ಎಂದು ಪ್ರತಿಕ್ರಿಯಿಸಿದರು.
ಅಂದು ಏನಾಗಿತ್ತು?
ಕಳೆದ ವರ್ಷ ವಿಶ್ವಾಸ ಮತ ನಿರ್ಣಯ ಚರ್ಚೆಯ ವೇಳೆ ವಿಧಾನಸಭೆಯಲ್ಲಿ ಮಾತನಾಡಿದ್ದ ಸಾರಾ ಮಹೇಶ್, ವಿಶ್ವನಾಥ್ ಎಷ್ಟು ಕೋಟಿಗೆ ಸೇಲಾಗಿದ್ದಾರೆ ಎಂಬುದನ್ನು ತಿಳಿಸಬೇಕು. ಪತ್ರಕರ್ತರ ಮಧ್ಯಸ್ಥಿಕೆ ಮೂಲಕ 28 ಕೋಟಿ ರೂ. ವ್ಯವಹಾರ ಕುದುರಿಸಿದ್ದಾರೆ ಎಂಬ ಮಾಹಿತಿ ಇದೆ ಎಂದು ಬಾಂಬ್ ಸಿಡಿಸಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ನಾಯಕರ ನಡುವೆ ಆರೋಪ ಪ್ರತ್ಯಾರೋಪ ನಡೆದು ಕೊನೆಗೆ ಆಣೆ ಪ್ರಮಾಣದ ಹಂತವರೆಗೆ ಬಂತು. ಆಣೆ ಪ್ರಮಾಣ ಮಾಡಲು ಚಾಮುಂಡಿ ಬೆಟ್ಟಕ್ಕೆ ಬರಬೇಕೆಂದು ವಿಶ್ವನಾಥ್ ಸಾ.ರಾ. ಮಹೇಶ್‌ಗೆ ಸವಾಲು ಹಾಕಿದ್ದರು. ಈ ಕಾರಣಕ್ಕಾಗಿ ಅಕ್ಟೋಬರ್ 17 ರಂದು ಇಬ್ಬರು ಚಾಮುಂಡಿ ಬೆಟ್ಟಕ್ಕೆ ಬಂದಿದ್ದರು.
ಆರಂಭದಲ್ಲಿ ಬೆಳಗ್ಗೆ ವಿಶ್ವನಾಥ್ ದೇವಾಲಯಕ್ಕೆ ಬಂದಿದ್ದರು. ವಿಶ್ವನಾಥ್ ಹೊರ ಬಂದ ಬಳಿಕ ಸಾರಾ ಮಹೇಶ್ ಒಳ ಪ್ರವೇಶಿಸಿದ್ದರು. ಈ ವೇಳೆ ಸಾರಾ ಮಹೇಶ್ ತೆರಳಿದ ವಿಚಾರ ಕೇಳಿ ವಿಶ್ವನಾಥ್ ಒಂದು ಗಂಟೆಗಳ ಕಾಲ ಕಾದು ಕುಳಿತರು. ಮಹೇಶ್ ಅವರು ಬಾರದ ಕಾರಣ ವಿಶ್ವನಾಥ್ ಮಾಜಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿ ತೆರಳಿದ್ದರು. ವಿಶ್ವನಾಥ್ ಹೋದ ನಂತರ ಸಾರಾ ಮಹೇಶ್ ದೇವಾಲಯದಿಂದ ಹೊರ ಬಂದರು.
ಈ ವೇಳೆ ಪ್ರತಿಕ್ರಿಯಿಸಿದ್ದ ವಿಶ್ವನಾಥ್ ನನ್ನ ಮಾತನ್ನು ತಿರುಚಬೇಡಿ. ನಾನು ಆಣೆ ಪ್ರಮಾಣ ಮಾಡಲು ದೇವಸ್ಥಾನಕ್ಕೆ ಬಂದಿಲ್ಲ. ನನಗೆ ಹಣ ಕೊಟ್ಟವರನ್ನು ನೋಡಲು ಹಾಗೂ ಆರೋಪ ಮಾಡಿದವರಿಗಾಗಿ ಕಾಯುತ್ತಿದ್ದೇನೆ ಎಂದು ಪ್ರತಿಕ್ರಿಯಿಸಿದ್ದರು.
ಕಣ್ಣೀರು ಹಾಕಿ ಆಣೆ ಮಾಡಿದ್ದ ಸಾರಾ ಮಹೇಶ್, ನನ್ನ ಮೇಲೆ ವಿಶ್ವನಾಥ್ ವೈಯಕ್ತಿಕ ಆರೋಪ ಮಾಡಿದ್ದಾರೆ. ಈ ಆರೋಪವನ್ನು ಸಾಬೀತುಪಡಿಸಿದ್ರೆ ನಾನು ಕ್ಷಮೆಯಾಚಿಸುವೆ ಎಂದಿದ್ದರು.
ಮೈಸೂರು: ಸೋಮವಾರದಿಂದ ಚಾಮುಂಡಿ ಬೆಟ್ಟದಲ್ಲಿನ ಚಾಮುಂಡೇಶ್ವರಿ ದೇವಿಯ ದರ್ಶನ ಆರಂಭವಾಗಿದೆ. ಹೀಗಾಗಿ ಇಂದು ಚಾಮುಂಡಿ ಬೆಟ್ಟದಲ್ಲಿ ಎರಡನೇ ದಿನದ ದರ್ಶನ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ರಾಜವಂಶಸ್ಥ ಯದುವೀರ್ ದಂಪತಿ ಭೇಟಿ ನೀಡಿದ್ದಾರೆ.
ಸುಮಾರು 70 ದಿನಗಳ ನಂತರ ಯದುವೀರ್ ದಂಪತಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ನಂತರ ಯದುವೀರ್ ಮತ್ತು ಪತ್ನಿ ತ್ರಿಶಿಕಾ ಕುಮಾರಿ ದೇವಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಯದುವೀರ್, ಲಾಕ್‍ಡೌನ್ ಸಂದರ್ಭದಲ್ಲಿ ನಮ್ಮ ಜೀವನದಲ್ಲಿ ತುಂಬಾ ಬದಲಾವಣೆಯಾಗಿದೆ. ಈಗ ಲಾಕ್‍ಡೌನ್ ಸಡಿಲಿಕೆಯಿಂದ ಎಲ್ಲ ದೇವಾಲಯಗಳು ಓಪನ್ ಆಗಿದೆ. ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ ಕೊರೊನಾ ವಿರುದ್ಧ ಹೋರಾಟ ಮಾಡಬೇಕಿದೆ. ಎಲ್ಲರೂ ಸರಿಯಾಗಿ ಸರ್ಕಾರ ನಿಯಮ ಪಾಲಿಸಿ. ಕೊರೊನಾ ವಿರುದ್ಧ ಗೆಲ್ಲೋಣ ಎಂದು ಹೇಳಿದರು.
ಆಷಾಢ ಪೂಜೆಯನ್ನು ದೊಡ್ಡ ಮಟ್ಟದಲ್ಲಿ ಮಾಡುವುದು ಕಷ್ಟವಾಗುತ್ತದೆ ಎಂಬುದು ನನ್ನ ಅಭಿಪ್ರಾಯ. ಇಲ್ಲಿನ ವಿಧಿ-ವಿಧಾನಗಳಿಗೆ ನಾವು ಮೊದಲು ಆದ್ಯತೆ ಕೊಡಬೇಕು. ಜೊತೆಗೆ ಜನರ ಆರೋಗ್ಯವೂ ನಮಗೆ ಮುಖ್ಯವಾಗಿದೆ. ಹೀಗಾಗಿ ಜನರ ಸುರಕ್ಷತೆಯನ್ನು ಕಾಪಾಡಿಕೊಂಡು ದೇವಸ್ಥಾನದ ವಿಧಿ-ವಿಧಾನಗಳನ್ನು ಅನುಸರಿಸುವುದು ಉತ್ತಮ ಎಂದು ಹೇಳಿದರು.
– ನೆರೆ ಸಂತ್ರಸ್ತರಿಗೆ ಮನೆ ವಿತರಣೆ ವಿಚಾರಕ್ಕೆ ಸಚಿವರ ಪ್ರತಿಕ್ರಿಯೆ
– ಕೃಷ್ಣನ ಲೆಕ್ಕ ಹೋಗಿ ರಾಮನ ಲೆಕ್ಕ ಮಾತ್ರ ಉಳಿದಿದೆ
ಮೈಸೂರು: ಚಾಮುಂಡಿಬೆಟ್ಟದ ಚಾಮುಂಡಿ ತಾಯಿಗೆ ಚಿನ್ನದ ರಥ ನಿರ್ಮಾಣ ವಿಚಾರ ಈ ಬಾರಿಯ ಬಜೆಟ್‍ನಲ್ಲಿ ನಿರ್ಧಾರವಾಗುವ ವಿಶ್ವಾಸ ಇದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರೊಂದಿಗೆ ಮಾತನಾಡಿದ್ದೇನೆ. ಚಿನ್ನದ ರಥ ನಿರ್ಮಾಣ ಮಾಡುವುದಕ್ಕೆ ಬಜೆಟ್‍ನಲ್ಲಿ ಅನುದಾನ ಕೊಡಿಸುವ ಭರವಸೆಯನ್ನು ಅವರು ನೀಡಿದ್ದಾರೆ. ಸಪ್ತಪದಿ ಯೋಜನೆ ಅನುಷ್ಠಾನಕ್ಕೂ ನಮ್ಮ ಸರ್ಕಾರ ಸಿದ್ಧವಾಗಿದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಯೋಜನೆ ಅನುಷ್ಠಾನಕ್ಕೆ ಜಿಲ್ಲಾಡಳಿತ ಕ್ರಮವಹಿಸಲಿದೆ ಎಂದರು.
ಇನ್ನೊಂದು ತಿಂಗಳಲ್ಲಿ ಚಾಮುಂಡಿಬೆಟ್ಟ ಕಾಮಗಾರಿ ಪೂರ್ಣವಾಗಲಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಅಂಗಡಿ ಮಳಿಗೆ ನೀಡುತ್ತೇವೆ. ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ವ್ಯವಸ್ಥೆ ಮಾಡುತ್ತೇವೆ. ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿ ಶ್ರಮ ಹಾಕಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.
ರಾಜ್ಯದ ನೆರೆ ಸಂತ್ರಸ್ತರಿಗೆ ಮನೆ ವಿತರಣೆ ವಿಚಾರದಲ್ಲಿ ಕೃಷ್ಣನ ಲೆಕ್ಕ ಹೋಗಿ ರಾಮನ ಲೆಕ್ಕ ಮಾತ್ರ ಉಳಿದಿದೆ. ರಾಜ್ಯದಲ್ಲಿ 3.5. ಲಕ್ಷ ಮನೆ ವಿತರಣೆಗೆ ಎಲ್ಲ ಸಿದ್ಧತೆ ನಡೆದಿದೆ. ಮೊದಲ ಹಂತದಲ್ಲಿ 15 ಲಕ್ಷ ಮನೆಗಳ ವಿತರಣೆ ಅರ್ಜಿ ಬಂದಿತ್ತು. ಆಧಾರ್, ಬಿಪಿಎಲ್, ಎಪಿಎಲ್ ಕಾರ್ಡುಗಳನ್ನ ಲಿಂಕ್ ಮಾಡಿದ್ವಿ. ಆ ನಂತರ 15 ಲಕ್ಷದಿಂದ 6 ಲಕ್ಷಕ್ಕೆ ಬಂತು. ಇದೀಗ 3.5 ಲಕ್ಷ ನಿಜವಾದ ಸಂತ್ರಸ್ತರಿಗೆ ಮನೆ ವಿತರಣೆ ಸಿದ್ಧತೆ ನಡೆದಿದೆ. ಜೂನ್ ಅಂತ್ಯದ ಒಳಗೆ ಎಲ್ಲರಿಗೂ ಮನೆ ವಿತರಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಕಾಮಗಾರಿ ಪರಿಶೀಲನೆ:
ಸಚಿವ ವಿ.ಸೋಮಣ್ಣ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ಚಾಮುಂಡಿಬೆಟ್ಟದಲ್ಲಿ ಜಿಲ್ಲಾಡಳಿತ ನಿರ್ಮಾಣ ಮಾಡುತ್ತಿರುವ ಅಂಗಡಿ ಮಳಿಗೆ ಕಾಮಗಾರಿ ಪರಿಶೀಲನೆ ಮಾಡಿದರು. ಬಹುಮಹಡಿ ಪಾರ್ಕಿಂಗ್ ಸಮೀಪದಲ್ಲೇ ಸಾಮೂಹಿಕ ಅಂಗಡಿ ಮಳಿಗೆ ನಿರ್ಮಾಣವಾಗುತ್ತಿದ್ದು, ಈ ಕಾಮಗಾರಿ ತುರ್ತಾಗಿ ಪೂರ್ಣಗೊಳಿಸುವಂತೆ ಸಚಿವರು ಸೂಚಿಸಿದರು. ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಪಾಲಿಕೆ ಆಯುಕ್ತರ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಯಿತು. ಇನ್ನೊಂದು ತಿಂಗಳಲ್ಲಿ ಕೆಲಸ ಮುಗಿಸುವಂತೆ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಹಿಯಾಗಿ ಹೊಸ ವರ್ಷ ಸ್ವಾಗತಿಸಲಾಯಿತು. ಮೈಸೂರಿನ ವಿಜಯನಗರದ ಎರಡನೇ ಹಂತದಲ್ಲಿನ ಯೋಗನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ಲಾಡು ವಿತರಿಸಿ ಹೊಸವರ್ಷ ಸ್ವಾಗತಿಸಲಾಯಿತು.
ಭಕ್ತರಿಗೆ ಒಟ್ಟಾರೆ 2 ಲಕ್ಷ ಲಾಡು ವಿತರಿಸಲಾಯಿತು. ಬದೇವಾಲಯದಲ್ಲಿ ಬೆಳಗಿನ ಜಾವ 4.30ರಿಂದ ಪೂಜಾ ಕೈಂಕರ್ಯಗಳು ನಡೆದಿದ್ದು, ಪೂಜೆ ನಂತರ ನೈವೇದ್ಯ ಪ್ರಸಾದವಾಗಿ ಭಕ್ತರಿಗೆ ಲಾಡು ವಿತರಿಸಲಾಯಿತು. ಮುಂಜಾನೆಯಿಂದ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಎಲ್ಲ ಭಕ್ತರಿಗು ಲಾಡು ವಿತರಿಸಲಾಯಿತು.
ಹೊಸ ವರ್ಷದ ಮೊದಲ ದಿನದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರ ಹರಿದು ಬಂದಿದೆ. ಭಕ್ತರು ನಾಡದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಹೊಸ ವರ್ಷ ಸ್ವಾಗತಿಸಿದರು. ಮುಂಜಾನೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಸರತಿ ಸಾಲಿನಲ್ಲಿ ನಿಂತು ವರ್ಷದ ಮೊದಲ ದಿನ ದೇವಿಯ ದರ್ಶನ ಪಡೆದು ಪುನೀತರಾದರು.
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಭೇಟಿಯಾಗಿದ್ದು, ಇತ್ತ ಗೌಡರು ಬರುತ್ತಿದ್ದಂತೆಯೇ ಮಾಜಿ ಸಚಿವ ಜಿ.ಟಿ.ದೇವೇಗೌಡ ಎಸ್ಕೇಪ್ ಆಗಿದ್ದಾರೆ.
ಹೌದು. ಇಂದು ಡಿಕೆಶಿ ಬೆಟ್ಟಕ್ಕೆ ಬಂದಾಗ ಅವರೊಂದಿಗೆ ಜಿಟಿಡಿ ಕೂಡ ದೇವಾಲಯಕ್ಕೆ ಬಂದಿದ್ದಾರೆ. ಅಲ್ಲದೆ ಡಿಕೆಶಿ ಜೊತೆಯಲ್ಲಿ ಪೂಜೆಯಲ್ಲಿಯೂ ಭಾಗಿಯಾಗಿದ್ದರು. ಆದರೆ ದೇವೇಗೌಡರು ಬರುತ್ತಿದ್ದಂತೆಯೇ ಜಿಟಿಡಿ ಬೆಟ್ಟದಿಂದ ವಾಪಸ್ ಆಗಿದ್ದಾರೆ ಎನ್ನಲಾಗಿದೆ.
ನಾನು ಪ್ರತಿ ಶುಕ್ರವಾರ ಬರುತ್ತೇನೆ. ಡಿಕೆಶಿಯವರು ಚಾಮುಂಡಿ ಭಕ್ತರು. ಕಳೆದ ಬಾರಿ ಬೆಳ್ಳಿ ಆನೆ ಕೊಟ್ಟಿದ್ದರು. ಹೀಗಾಗಿ ಈ ಬಾರಿಯೂ ಬಂದು ದರ್ಶನ ಮಾಡಿದ್ದಾರೆ. ನಾನು ಇದೇ ಸಂದರ್ಭದಲ್ಲಿ ಬಂದಿದ್ದು ಕಾಕತಾಳಿಯ ಅಷ್ಟೇ ಎಂದು ಚಾಮುಂಡಿಬೆಟ್ಟದಲ್ಲಿ ಜಿಟಿಡಿ ಮಾಧ್ಯಮಕ್ಕೆ ಪ್ರತಿಕ್ರಿಯಸಿದರು. ಇದನ್ನೂ ಓದಿ: ಡಿಕೆಶಿಗೆ ದೇವರು ಒಳ್ಳೆಯದು ಮಾಡಲಿ: ರಮೇಶ್ ಜಾರಕಿಹೊಳಿ
ಇತ್ತ ಡಿಕೆಶಿ ಹೆಗಲ ಮೇಲೆ ಕೈ ಇಟ್ಟು ದೇವೇಗೌಡರು ಮಾತನಾಡಿಸಿದ್ದಾರೆ. ಈ ವೇಳೆ ಡಿಕೆಶಿ ಗೌಡರ ಕಾಲು ಮುಟ್ಟಿ ನಮಸ್ಕಾರ ಮಾಡುವ ಮೂಲಕ ಮಾಜಿ ಪ್ರಧಾನಿಯ ಆಶೀರ್ವಾದ ಪಡೆದುಕೊಂಡಿದ್ದಾರೆ. ಆದರೆ ಚಾಮುಂಡಿ ಬೆಟ್ಟಕ್ಕೆ ಬಂದಿದ್ದ ಜಿಟಿ ದೇವೇಗೌಡರು ಹೆಚ್‍ಡಿಡಿಯನ್ನು ಭೇಟಿಯಾಗದೆ ತೆರಳಿರುವುದು ಕುತೂಹಲ ಮೂಡಿಸಿದೆ.
ಹೆಚ್.ಡಿ ದೇವೇಗೌಡರು ಕೂಡ ಇಂದು ಪತ್ನಿ ಸಮೇತರವಾಗಿ ಬಂದು ಚಾಮುಂಡಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. 15 ನಿಮಿಷಕ್ಕೂ ಹೆಚ್ಚು ಕಾಲ ದೇಗುಲದ ಗರ್ಭಗುಡಿಯ ಎದುರು ಪ್ರಾರ್ಥನೆ ಸಲ್ಲಿಸಿದ್ದಾರೆ.
ಇದೇ ವೇಳೆ ಜೆಡಿಎಸ್ ನಾಯಕರಾದ ಮಾಜಿ ಸಚಿವ ಡಿಸಿ ತಮ್ಮಣ್ಣ, ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡರು ಡಿಕೆಶಿ ಮಾವನ ಮನೆಗೆ ಆಗಮಿಸಿ ಡಿಕೆಶಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
– ಚಾಮುಂಡಿ ಬೆಟ್ಟ ಟೂರಿಸ್ಟ್ ಸ್ಪಾಟಾ ಅಥವಾ ಧಾರ್ಮಿಕ ಕೇಂದ್ರವೇ?
– ಸಮಾಜದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನ ಕೊಟ್ಟಿದ್ದೇವೆ ಎಂದರು.
ಮೈಸೂರು: ನಮ್ಮಲ್ಲಿ ವ್ಯವಸಾಯ ಹಾಳಾಗುವುದಕ್ಕೂ ರಾಜಕಾರಣಿಗಳು ಎಂದು ಎಸ್.ಎಲ್ ಭೈರಪ್ಪ ಹೇಳಿದ್ದಾರೆ.
ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಉದ್ಘಾಟನಾ ಭಾಷಣ ಮಾಡಿದ ಅವರು, ಹಳ್ಳಿ ಕಡೆಯಲ್ಲಿ ಸ್ಪಲ್ಪ ತಂಪು ಇರುವಾಗ ಹೊಲದ ಕೆಲಸ ಮಗಿಸುತ್ತಾರೆ. ಆದರೆ ಚುನಾವಣೆ ಬಂದ ಮೇಲೆ ಆ ವ್ಯವಸ್ಥೆ ಬಹುತೇಕ ಕಡೆ ಮರೆಯಾಗಿದೆ. ಕಾಯಕ ನಿಷ್ಠೆ ಕಡಿಮೆಯಾಗುತ್ತಿದೆ. ಆದ್ದರಿಂದ ನಮ್ಮಲ್ಲಿ ವ್ಯವಸಾಯ ಹಾಳಾಗುತ್ತಿರುವುದಕ್ಕೆ ರಾಜಕಾರಣಿಗಳು ಕಾರಣ ಎಂದು ಹೇಳಿದರು. ಇದನ್ನೂ ಓದಿ: ಸಾಹಿತಿ ಎಸ್.ಎಲ್ ಭೈರಪ್ಪ ಅವರಿಗೆ ಅಗೌರವ
ಬಸವಣ್ಣನವರು ಕಾಯಕ ನಿಷ್ಠೆ, ಜಾತಿ ವಿನಾಶ ಬಗ್ಗೆ ಮಾತಾಡಿದರು. ಅನ್ಯ ಜಾತಿ ನಡುವೆ ಮದುವೆ ಮಾಡಿದರು. ಜಾತಿ ವಿನಾಶದ ಕಲ್ಪನೆ ಬಹಳ ಒಳ್ಳೆಯದು. ಆದರೆ ಅವತ್ತಿನ ಕಾಲಕ್ಕೆ ಜನ ಅದನ್ನು ಒಪ್ಪಿಕೊಳ್ಳುವ ಸ್ಥಿತಿ ಇರಲಿಲ್ಲ. ಅವತ್ತು ಸಮಾಜ ಅದಕ್ಕೆ ಪಕ್ವ ಇರಲಿಲ್ಲ. ಆಗ ಗಂಡು ಹೆಣ್ಣಿನ ನಡುವೆ ಆರ್ಥಿಕ ಸಮಾನತೆ ಬಂದಿದೆ. ಈಗ ಜಾತಿ ಮೀರಿ ಪ್ರೀತಿಸಿ ಮದುವೆಗಳು ನಡೆಯುತ್ತಿವೆ. ಬಸವಣ್ಣನವರ ಜಾತಿ ವಿನಾಶದ ತತ್ವ ಪರಿಪಾಲನೆಗೆ ಈಗ ಕಾಲ ಪಕ್ವ ಆಗಿದೆ. ಹಾಗಂತ ಬಲವಂತವಾಗಿ ಅಂತರ್ಜಾತಿ ವಿವಾಹ ಮಾಡಿಸುತ್ತೇನೆ ಎಂದು ಯಾರು ಹೋಗಬಾರದು. ಸಾಹಿತಿಗಳು ಬಸವಣ್ಣನವರು ಆಲೋಚನೆ ಜಾರಿಗೆ ತರುವುದಕ್ಕೆ ಪ್ರಯತ್ನ ಮಾಡಬೇಕು. ಅದನ್ನು ಬಿಟ್ಟು ಲಿಂಗಾಯತ, ವೀರಶೈವ ಎಂದು ಚರ್ಚೆಗೆ ಇಳಿಯಬಾರದು ಎಂದು ಕಿವಿ ಮಾತು ಹೇಳಿದರು.
ಚಾಮುಂಡಿ ಬೆಟ್ಟಕ್ಕೆ ಬರೋದು ದೇವರ ದರ್ಶನಕ್ಕೋ ಶಾಂಪಿಂಗ್‍ಗೋ? ಚಾಮುಂಡಿ ಬೆಟ್ಟ ಟೂರಿಸ್ಟ್ ಸ್ಪಾಟಾ ಅಥವಾ ಧಾರ್ಮಿಕ ಕೇಂದ್ರವಾ? ಶಾಂಪಿಂಗ್ ಮಾಡಲು ಮೈಸೂರು ನಗರದ ಒಳಗೆ ವ್ಯವಸ್ಥೆ ಇಲ್ವಾ ಎಂದು ಪ್ರಶ್ನಿಸಿದರು. ಶಾಂತಿಯಿಂದ ದೇವರನ್ನು ಪ್ರಾರ್ಥಿಸಲು ಅನುಕೂಲವಾಗಲಿ, ಮನಸ್ಸಿಗೆ ಶಾಂತಿ ಸಿಗಲಿ ಎಂದು ದೇವಸ್ಥಾನ, ಗುಡಿಗಳನ್ನು ಮಾಡಿದ್ದಾರೆ. ಆದರೆ ಈಗ ಹಲವಾರು ಕಡೆ ಧಾರ್ಮಿಕ ಕ್ಷೇತ್ರಗಳನ್ನು ಪ್ರವಾಸಿ ತಾಣವಾಗಿ ಮಾಡಿಬಿಟ್ಟಿದ್ದಾರೆ. ವಾಣಿಜ್ಯ ಮಳಿಗೆಗಳು, ಅದು, ಇದು ಎಂದು ಸಾಕಷ್ಟು ಅಂಗಡಿಗಳು, ಪ್ರವಾಸಿಗರು ಬರುತ್ತಾರೆ. ಈ ಗಲಾಟೆಯ ಮಧ್ಯೆ ಶಾಂತಿ ಎಲ್ಲಿ ಸಿಗುತ್ತೆ ಎಂದು ಚಾಮುಂಡಿ ಬೆಟ್ಟದಲ್ಲಿ ಹೊಸ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಭೈರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಕೆಲವರು ನೀವು ವಿಚಾರವಾದಿಗಳು ದೇವರ ಮೇಲೆ ನಂಬಿಕೆ ಇಲ್ಲ ಎಂದಿದ್ದರು. ಆದರೆ ದೇವರ ಮೇಲೆ ನಂಬಿಕೆ ಇಲ್ಲ ಎಂದು ನಾನು ಎಂದೂ ಹೇಳಿಲ್ಲ. ದೇವರು ಇದ್ದನಾ? ಇಲ್ಲವಾ? ಎಂದು ತಿಳಿಸಲು ಒಂದು ಬಾಲಕ ಹಾಗೂ ಸೂಜಿಯ ಕಥೆ ಹೇಳಿದರು. ಬಳಿಕ ದೇವರಿಗೆ ಎಂದು ಲಿಂಗ ಭೇದ ಮಾಡಬಾರದು. ದೇವರು ಇದ್ದಾನೆಯೇ? ಇದ್ದಾಳೇಯೇ? ಎನ್ನುವುದಕ್ಕಿಂತ ದೇವರು ಇದೇಯೇ ಎಂದು ಕೇಳಬೇಕಿದೆ. ವಿಚಾರವಾದಿಗಳಿಗೆ ಕೇಳಿದರೆ ಇಲ್ಲ ಎಂದು ಹೇಳುತ್ತಾರೆ. ವಿಚಾರವಾದಿಗಳು ದೇವರು ಇಲ್ಲ ಅನ್ನೋದು ಉದ್ಧಟತನದ ಮಾತು ಎಂದು ದಸರಾ ಉದ್ಘಾಟಿಸಿ, ಭೈರಪ್ಪ ಅವರು ದೇವರ ಬಗ್ಗೆ ಉಲ್ಲೇಖಿಸಿದರು.
ನಮ್ಮ ಸಂಸ್ಕೃತಿಯಲ್ಲಿ ಹೆಣ್ಣು ದೇವತೆ ಪ್ರಧಾನವಾದದ್ದು, ಪ್ರತಿ ಊರಲ್ಲೂ ಗ್ರಾಮದೇವತೆ ಇರುತ್ತೆ. ಹೆಣ್ಣನ್ನು ದೇವರ ರೂಪದಲ್ಲಿ ನೋಡುತ್ತೇವೆ ಎನ್ನುವುದು ಇದರ ಅರ್ಥ. ಮೊದಲು ತಾಯಿಗೆ ನಮಸ್ಕರಿಸಿ ನಂತರ ತಂದೆಗೆ ನಮಸ್ಕರಿಸುವ ಪದ್ಧತಿ ಇದೆ. ಆದರೂ, ನಮ್ಮ ದೇಶದಲ್ಲಿ ಹೆಣ್ಣಿಗೆ ಗೌರವ ಇಲ್ಲ ಎಂದು ಕೆಲವರು ಹೇಳುತ್ತಾರೆ. ಹೆಣ್ಣನ್ನು ತುಳಿಯುವ ಸಮಾಜವಿದು ಎಂದು ವಿನಾಃಕಾರಣ ಹೇಳುತ್ತಾರೆ. ಆದರೆ ನಮ್ಮಲ್ಲಿ ಪುರುಷ ದಬ್ಬಾಳಿಕೆ ಇಲ್ಲ. ನಮ್ಮ ಸಮಾಜದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನ ಕೊಟ್ಟಿದ್ದೇವೆ ಎಂದರು.
ಇದೇ ವೇಳೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶವಿಲ್ಲ ಎಂಬ ವಿಚಾರವಾಗಿ ಮಾತನಾಡಿ, ಅದು ಆ ದೇವಸ್ಥಾನದ ಆಚಾರ-ವಿಚಾರ. ಇದನ್ನು ಪ್ರಶ್ನಿಸಿ ಕೆಲವು ವಿಚಾರವಾದಿಗಳು ನ್ಯಾಯಾಲಯಕ್ಕೆ ಹೋದರು. ಕೆಲವರು ಬಲವಂತವಾಗಿ ಕೆಲ ಮಹಿಳೆಯರನ್ನು ದೇವಸ್ಥಾನದ ಒಳಗೆ ನುಗ್ಗಿಸಿದರು. ಆ ನುಗ್ಗಿಸಿದ ಮಹಿಳೆಯರಲ್ಲಿ ಒಬ್ಬ ಮುಸ್ಲಿಂ ಇದ್ದರು. ನಂತರ, ಆಕೆಗೆ ಆ ಧರ್ಮದಿಂದ ಹೊರಗೆ ಹಾಕ್ತಿವಿ ಎಂದು ಎಚ್ಚರಿಸಿದ್ದರು. ಸರ್ಕಾರ ಧಾರ್ಮಿಕ ವಿಚಾರಕ್ಕೆ ಏಕೆ ಹೋಗಬೇಕು? ಸಮಾನತೆ ಕಲ್ಪನೆ ಯಾವತ್ತೂ ಒಂದೇ ಥರದಲ್ಲಿ ಇರುವುದಿಲ್ಲ ಎಂದು ಹೇಳಿದರು.