Tag: Chandan Shetty

  • ಬೆಡ್‌ರೂಮ್ ಫೋಟೋ ಶೇರ್ ಮಾಡಿ ಟ್ರೋಲ್ ಆದ ನಿವೇದಿತಾ ಗೌಡ

    ಬೆಡ್‌ರೂಮ್ ಫೋಟೋ ಶೇರ್ ಮಾಡಿ ಟ್ರೋಲ್ ಆದ ನಿವೇದಿತಾ ಗೌಡ

    ‘ಬಿಗ್ ಬಾಸ್’ ಬೆಡಗಿ ನಿವೇದಿತಾ ಗೌಡ (Niveditha Gowda) ಅವರು ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಡಿವೋರ್ಸ್ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟೀವ್ ಆಗಿರುವ ನಟಿ ಈಗ ಬೆಡ್‌ರೂಮ್ ಫೋಟೋಶೂಟ್‌ವೊಂದನ್ನು ಶೇರ್ ಮಾಡಿದ್ದಾರೆ. ಇದನ್ನೂ ಓದಿ:ತೆಲುಗು ನಟ ನಾರಾ ರೋಹಿತ್ ಜೊತೆ ಸಿರೀಶ ಲೆಲ್ಲಾ ನಿಶ್ಚಿತಾರ್ಥ

    ಕೇಸರಿ ಬಣ್ಣದ ಲೆಹೆಂಗಾ ಧರಿಸಿರುವ ಕೆಲ ಫೋಟೋಗಳನ್ನು ನಟಿ ಶೇರ್ ಮಾಡಿದ್ದಾರೆ. ಬೆಡ್ ಮೇಲೆ ಕುಳಿತು ವಿವಿಧ ಭಂಗಿಯಲ್ಲಿ ನಟಿ ಪೋಸ್ ನೀಡಿದ್ದಾರೆ. ಎದೆಯ ಸೀಳು ಕಾಣುವಂತೆ ಬೋಲ್ಡ್ ಆಗಿ ಪೋಸ್ ಕೊಟ್ಟಿರುವ ನಿವೇದಿತಾ ಲುಕ್‌ಗೆ ಬಗೆ ಬಗೆಯ ಕಾಮೆಂಟ್ ಜೊತೆಗೆ ಸಿಕ್ಕಾಪಟ್ಟೆ ಟ್ರೋಲ್ ಆಗ್ತಿದೆ.

    ನಿಮಗೆ ಡಿವೋರ್ಸ್ ಆಗಿದೆ ಅನ್ನೋದು ನೆನಪಿದ್ಯಾ? ಎಂದೆಲ್ಲಾ ನಟಿಗೆ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಆದರೆ ಈ ಯಾವ ಕಾಮೆಂಟ್‌ಗಳಿಗೂ ತಲೆಕೆಡಿಸಿಕೊಳ್ಳದೇ ನಟಿ ಸೈಲೆಂಟ್ ಆಗಿದ್ದಾರೆ.

    ಇನ್ನೂ ಚಂದನ್ ಶೆಟ್ಟಿ (Chandan Shetty) ಜೊತೆ ‘ಮುದ್ದು ರಾಕ್ಷಸಿ’ (Muddu Rakshasi) ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಇದರ ರಿಲೀಸ್‌ಗೆ ನಟಿ ಎದುರು ನೋಡ್ತಿದ್ದಾರೆ. ಸೃಜನ್ ಲೋಕೇಶ್ ನಟನೆಯ ‘ಜಿಎಸ್‌ಟಿ’ (GST) ಸಿನಿಮಾದಲ್ಲಿ ನಿವೇದಿತಾ ನಟಿಸಿದ್ದಾರೆ.

  • ಟ್ರೋಲ್‌ಗೆ ಡೋಂಟ್ ಕೇರ್- ಮತ್ತೆ ಬಾತ್‌ರೂಮ್ ರೀಲ್ಸ್ ಶೇರ್ ಮಾಡಿದ ನಿವೇದಿತಾ ಗೌಡ

    ಟ್ರೋಲ್‌ಗೆ ಡೋಂಟ್ ಕೇರ್- ಮತ್ತೆ ಬಾತ್‌ರೂಮ್ ರೀಲ್ಸ್ ಶೇರ್ ಮಾಡಿದ ನಿವೇದಿತಾ ಗೌಡ

    ಚಂದನ್ ಶೆಟ್ಟಿ (Chandan Shetty) ಜೊತೆಗಿನ ಡಿವೋರ್ಸ್ (Divorce) ನಂತರ ನಿವೇದಿತಾ ಗೌಡ (Niveditha Gowda) ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಟ್ರೋಲ್‌ಗೆ (Troll) ಡೋಂಟ್ ಕೇರ್ ಎನ್ನುತ್ತಾ ಮತ್ತೊಂದು ಬಾತ್‌ರೂಮ್ ರೀಲ್ಸ್ ಅನ್ನು ನಟಿ ಶೇರ್ ಮಾಡಿದ್ದಾರೆ.

    ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ನಟಿ, ಮತ್ತಷ್ಟು ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ. ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿರುವ ನಿವೇದಿತಾ ಈಗ ಕಿವಿ ಮೇಲೆ ಫ್ಲವರ್ ಇಟ್ಟುಕೊಂಡು ಬಾತ್‌ರೂಮ್‌ನಲ್ಲಿ ರೀಲ್ಸ್ ಮಾಡಿದ್ದಾರೆ. ಟ್ರೋಲ್ ಮಾಡುವವರಿಗೆ, ನೆಗೆಟಿವ್ ಕಾಮೆಂಟ್ ಮಾಡುವವರಿಗೆ ತಲೆಕೆಡಿಸಿಕೊಳ್ಳದೆ ಹೊಸ ರೀಲ್ಸ್‌ನಲ್ಲಿ ನಟಿ ಮಿಂಚಿದ್ದಾರೆ.

    ನಟಿಯ ರೀಲ್ಸ್ ನೋಡಿ ಮುಂದಿನ ನಿಮ್ಮ ಕರಿಮಣಿ ಮಾಲೀಕ ಯಾರು? ಎಂದೆಲ್ಲಾ ನೆಟ್ಟಿಗರು ಕಾಲೆಳೆದಿದ್ದಾರೆ. ಈ ರೀಲ್ಸ್ ಸೋಶಿಯಲ್ ಮೀಡಿಯಾದಲ್ಲಿ 6 ಮಿಲಿಯನ್‌ಗೂ ಅಧಿಕ ವಿವ್ಸ್ ಪಡೆದಿದೆ. ಇದನ್ನೂ ಓದಿ:ರಿಷಬ್ ಶೆಟ್ಟಿ ಫ್ಯಾಮಿಲಿ ಟೈಮ್- ಪತ್ನಿ ಜೊತೆ ಬೋಟಿಂಗ್ ಮಾಡಿದ ನಟ

    ಅಂದಹಾಗೆ, ಚಂದನ್ ಶೆಟ್ಟಿ ಜೊತೆ ‘ಮುದ್ದು ರಾಕ್ಷಸಿ’ ಸಿನಿಮಾ, ಸೃಜನ್ ಲೋಕೇಶ್ ಜೊತೆ ‘ಜಿಎಸ್‌ಟಿ’ ಸಿನಿಮಾದಲ್ಲಿ ನಿವೇದಿತಾ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

  • ಡಿವೋರ್ಸ್ ಬಳಿಕ ನಿವಿ ಫುಲ್ ಆ್ಯಕ್ಟೀವ್- ಕೆಟ್ಟ ಕಾಮೆಂಟ್ಸ್ ಬಗ್ಗೆ ತಲೆಕೆಡಿಸಿಕೊಳ್ಳದೆ ರೀಲ್ಸ್ ಮಾಡಿದ ನಟಿ

    ಡಿವೋರ್ಸ್ ಬಳಿಕ ನಿವಿ ಫುಲ್ ಆ್ಯಕ್ಟೀವ್- ಕೆಟ್ಟ ಕಾಮೆಂಟ್ಸ್ ಬಗ್ಗೆ ತಲೆಕೆಡಿಸಿಕೊಳ್ಳದೆ ರೀಲ್ಸ್ ಮಾಡಿದ ನಟಿ

    ರ‍್ಯಾಪರ್ ಚಂದನ್ ಶೆಟ್ಟಿ (Chandan Shetty) ಜೊತೆಗಿನ ಡಿವೋರ್ಸ್ (Divorce) ಬಳಿಕ ನಿವೇದಿತಾ ಗೌಡ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟೀವ್ ಆಗಿದ್ದಾರೆ. ಮತ್ತಷ್ಟು ಹಾಟ್ ಆಗಿರುವ ನಿವೇದಿತಾ ಹೊಸ ರೀಲ್ಸ್‌ಗಳ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಶೇರ್ ಮಾಡಿರುವ ರೀಲ್ಸ್‌ನಲ್ಲಿ ನಟಿಯ ಅವತಾರ ನೋಡಿ ನೆಟ್ಟಿಗರು ಕಾಲೆಳೆದಿದ್ದಾರೆ.

    ಬಿಗ್ ಬಾಸ್, ಗಿಚ್ಚಿ ಗಿಲಿಗಿಲಿ ಶೋ ನಂತರ ಹೊಸ ಹೊಸ ಫೋಟೋಶೂಟ್‌ಗಳಲ್ಲಿ ನಿವೇದಿತಾ (Niveditha Gowda) ಕಾಣಿಸಿಕೊಳ್ಳುತ್ತಿದ್ದಾರೆ. ಇಂಗ್ಲಿಷ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸಖತ್ ಹಾಟ್ ಆಗಿ ಕಾಣಿಸಿಕೊಂಡಿರುವ ನಟಿಗೆ ಪಾಸಿಟಿವ್ ಮತ್ತು ನೆಗೆಟಿವ್ ಕಾಮೆಂಟ್ ವ್ಯಕ್ತವಾಗಿದೆ. ಮೊದಲು ಬಾತ್‌ರೂಮ್‌ನಿಂದ ಆಚೆ ಬನ್ನಿ ಎಂದೆಲ್ಲಾ ನಟಿಗೆ ನೆಟ್ಟಿಗರು ಟೀಕಿಸಿದ್ದಾರೆ.

    ಅಂದಹಾಗೆ, ಚಂದನ್ ಶೆಟ್ಟಿ ಮುದ್ದುರಾಕ್ಷಸಿ, ಸೃಜನ್ ಲೋಕೇಶ್ ನಿರ್ದೇಶನದ ‘ಜಿಎಸ್‌ಟಿ’ ಚಿತ್ರದಲ್ಲಿಯೂ ನಿವೇದಿತಾ ನಟಿಸಿದ್ದಾರೆ. ಎರಡು ಸಿನಿಮಾಗಳ ರಿಲೀಸ್‌ಗೆ ನಟಿ ಎದುರು ನೋಡ್ತಿದ್ದಾರೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣಗೆ ಅಪಘಾತ: ಜೀವನ ಕ್ಷಣಿಕ ಎಂದ ‘ಪುಷ್ಪ’ ನಟಿ

    ಇನ್ನೂ 2020ರ ಫೆ.26ರಂದು ಚಂದನ್ ಮತ್ತು ನಿವೇದಿತಾ ಮೈಸೂರಿನಲ್ಲಿ ಮದುವೆಯಾದರು. ಈ ವರ್ಷ ಜೂನ್ 20ರಂದು ಡಿವೋರ್ಸ್ ಘೋಷಣೆ ಮಾಡಿದರು. ದಾಂಪತ್ಯ ಅಂತ್ಯವಾಗಿರುವ ಬಗ್ಗೆ ಚಂದನ್ ಮತ್ತು ನಿವೇದಿತಾ ಅಧಿಕೃತವಾಗಿ ತಿಳಿಸಿದರು.

  • ನಿವಿ ಈಗ ಚಂದನ್‌ನ ಮುದ್ದು ರಾಕ್ಷಸಿ

    ನಿವಿ ಈಗ ಚಂದನ್‌ನ ಮುದ್ದು ರಾಕ್ಷಸಿ

    ರಿಯಲ್ ಲೈಫ್ ಜೋಡಿಯಾಗಿದ್ದ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ (Niveditha Gowda) ಮೊದಲ ಬಾರಿಗೆ ಜೊತೆಯಾಗಿ ಅಭಿನಯಿಸಿದ್ದ ಚಿತ್ರಕ್ಕೆ ಇಟ್ಟಿದ್ದ ‘ಕ್ಯಾಂಡಿ ಕ್ರಶ್’ ಟೈಟಲ್ ಇದೀಗ ಬದಲಾಗಿದೆ. ಪುನೀತ್ ಶ್ರೀನಿವಾಸ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಸೈಕೋ ಥ್ರಿಲ್ಲರ್ ಕಥಾಹಂದರ ಹೊಂದಿದ ಚಿತ್ರದ ತಾತ್ಕಾಲಿಕ ಟೈಟಲ್ ಆಗಿದ್ದ ‘ಕ್ಯಾಂಡಿ ಕ್ರಶ್’ (Candy Crush) ಇದೀಗ ಮುದ್ದು ರಾಕ್ಷಸಿ ಎಂದು ಬದಲಾಯಿಸಲಾಗಿದೆ.

    ಶ್ರೀಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ಅವರು ಈ ಚಿತ್ರವನ್ನು ಬಿಗ್ ಬಜೆಟ್‌ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಮೊದಲ ಬಾರಿಗೆ ಒಟ್ಟಿಗೆ ನಟಿಸಿದ್ದಾರೆ. ಇದನ್ನೂ ಓದಿ:Toxic: ಯಶ್ ಚಿತ್ರದಲ್ಲಿ 7.8 ಅಡಿ ಎತ್ತರದ ನಟ ಸುನೀಲ್ ಕುಮಾರ್ ಎಂಟ್ರಿ

    ಪುನೀತ್ ಶ್ರೀನಿವಾಸ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಬಹುತೇಕ ಶೂಟಿಂಗ್ ನಡೆಸಲಾಗಿದೆ. ಮುದ್ದುರಾಕ್ಷಸಿ ಒಂದು ವಿಭಿನ್ನ ರೊಮ್ಯಾಂಟಿಕ್ ಲವ್ ಸ್ಟೋರಿ ಜೊತೆಗೆ ಸೈಕೋ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾಗಿದ್ದು, ಚಿತ್ರದ ಈ ಶೀರ್ಷಿಕೆಯೇ ವಿಶೇಷವಾಗಿದೆ. ಮುದ್ದು ರಾಕ್ಷಸಿ ಚಿತ್ರದ ಹಾಡುಗಳಿಗೆ ಎಂ.ಎಸ್.ತ್ಯಾಗರಾಜ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಲ್ಲದೆ ಎ.ಕರುಣಾಕರ್ ಅವರು ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

  • ‘ಜೇಮ್ಸ್’ ನಿರ್ದೇಶಕನ ಜೊತೆ ಚಂದನ್ ಶೆಟ್ಟಿ ಟೆಂಪಲ್ ರನ್

    ‘ಜೇಮ್ಸ್’ ನಿರ್ದೇಶಕನ ಜೊತೆ ಚಂದನ್ ಶೆಟ್ಟಿ ಟೆಂಪಲ್ ರನ್

    ಸ್ಯಾಂಡಲ್‌ವುಡ್‌ನಲ್ಲಿ ನಾಯಕ ನಟನಾಗಿ ಮಿಂಚುತ್ತಿರುವ ‘ಬಿಗ್ ಬಾಸ್’ (Bigg Boss) ಖ್ಯಾತಿಯ ಚಂದನ್ ಶೆಟ್ಟಿ (Chandan Shetty) ಇದೀಗ ‘ಜೇಮ್ಸ್’ (James) ನಿರ್ದೇಶಕ ಚೇತನ್ ಕುಮಾರ್ ಜೊತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ:ನಮ್ಮದು, ನಿರ್ಮಾಪಕರದ್ದು ಒಪ್ಪಂದಗಳು ಕಾನೂನಾತ್ಮಕವಾಗಿದೆ- 50 ಲಕ್ಷ ಕಮಿಷನ್ ಆರೋಪಕ್ಕೆ ಎಪಿ ಅರ್ಜುನ್ ಸ್ಪಷ್ಟನೆ

    ನಿರ್ದೇಶಕ ಚೇತನ್ ಕುಮಾರ್ (Chethan Kumar) ಜೊತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಚಂದನ್ ಶೆಟ್ಟಿ ಭೇಟಿ ನೀಡಿದ ಬೆನ್ನಲ್ಲೇ ಇಬ್ಬರೂ ಜೊತೆಯಾಗಿ ಸಿನಿಮಾ ಮಾಡ್ತಿದ್ದಾರಾ ಎಂಬ ಕುತೂಹಲ ಮೂಡಿದೆ. ಈ ಸುದ್ದಿ ನಿಜನಾ? ಮುಂದಿನ ದಿನಗಳಲ್ಲಿ ಸಿನಿಮಾ ಮಾಡ್ತಾರಾ? ಈ ಬಗ್ಗೆ ಗುಡ್‌ ನ್ಯೂಸ್‌ ಸಿಗುತ್ತಾ ಎಂದು ಕಾದುನೋಡಬೇಕಿದೆ.

    ಅಂದಹಾಗೆ, ಚೇತನ್ ಕುಮಾರ್ ಸದ್ಯ ‘ಗಟ್ಟಿಮೇಳ’ (Gattimela) ನಟ ರಕ್ಷ್‌ಗೆ ನಿರ್ದೇಶನ ಮಾಡಿದ್ದಾರೆ. ಇತ್ತ ಚಂದನ್ ಶೆಟ್ಟಿ ನಾಯಕನಾಗಿ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ತಿದ್ದಾರೆ. ನಿವೇದಿತಾ ಗೌಡ ಜೊತೆಗಿನ ‘ಕ್ಯಾಂಡಿ ಕ್ರಶ್’ ಸಿನಿಮಾ ಸೇರಿದಂತೆ ಹಲವು ಚಿತ್ರಗಳಿವೆ.

  • ಜುಲೈ19ರಂದು ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಬಿಡುಗಡೆ-ದುಬೈನಲ್ಲಿ ಪ್ರೀಮಿಯರ್ ಶೋಗೆ ಮೆಚ್ಚುಗೆ

    ಜುಲೈ19ರಂದು ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಬಿಡುಗಡೆ-ದುಬೈನಲ್ಲಿ ಪ್ರೀಮಿಯರ್ ಶೋಗೆ ಮೆಚ್ಚುಗೆ

    ಗಾಗಲೇ ಟೀಸರ್, ಹಾಡುಗಳು ಮತ್ತು ಎರಡು ಟ್ರೈಲರ್‌ನಿಂದ ಗಮನಸೆಳೆದಿರುವ ಅರುಣ್ ಅಮುಕ್ತ ರಚಿಸಿ-ನಿರ್ದೇಶಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare Film) ಚಿತ್ರವು ಇದೇ ಶುಕ್ರವಾರ (ಜು.19) ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ, ಇತ್ತೀಚೆಗೆ ದುಬೈನಲ್ಲಿ ಚಿತ್ರದ ಪ್ರೀಮಿಯರ್ ಶೋ ನಡೆದಿತ್ತು. ಈ ಚಿತ್ರ ನೋಡಿರುವ ಅನಿವಾಸಿ ಕನ್ನಡಿಗರು ಚಿತ್ರವನ್ನು ಮೆಚ್ಚಿಕೊಂಡಿರುವುದಷ್ಟೇ ಅಲ್ಲ, ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

    ಈ ವಿಷಯವನ್ನು ಹಂಚಿಕೊಳ್ಳುವುದಕ್ಕೆ ಇತ್ತೀಚೆಗೆ ಚಿತ್ರತಂಡದವರು ಮಾಧ್ಯಮಗೋಷ್ಠಿ ಆಯೋಜಿಸಿ, ಚಿತ್ರದ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಚಂದನ್ ಶೆಟ್ಟಿ, ಸುನೀಲ್ ಪುರಾಣಿಕ್, ಅರವಿಂದ್ ರಾವ್, ಪ್ರಶಾಂತ್ ಸಂಬರ್ಗಿ, ದುಬೈನಲ್ಲಿ ಚಿತ್ರ ಬಿಡುಗಡೆ ಮಾಡಿರುವ OMG Movies ಮಮತಾ ಸೆಂಧಿಲ್, ಅಮರ್, ಮನೋಜ್, ಮನಸ್ವಿ ಸೇರಿದಂತೆ ಚಿತ್ರತಂಡದ ಹಲವರು ಹಾಜರಿದ್ದರು. ಇದನ್ನೂ ಓದಿ:‘ಘಟಶ್ರಾದ್ಧ’ ಚಿತ್ರದ ನಿರ್ಮಾಪಕ ಸದಾನಂದ ಸುವರ್ಣ ನಿಧನ

    ಈ ಸಂದರ್ಭದಲ್ಲಿ ಮಾತನಾಡಿದ ಚಂದನ್ ಶೆಟ್ಟಿ, ಇದು ಬಿಡುಗಡೆಯಾಗುತ್ತಿರುವ ನನ್ನ ಮೊದಲ ಚಿತ್ರ. ಈ ಚಿತ್ರವನ್ನು ಜನ ಒಪ್ಪುತ್ತಾರಾ? ನನ್ನ ಅಭಿನಯ ಇಷ್ಟವಾಗುತ್ತದಾ? ಎಂಬ ಭಯ ಇತ್ತು. ಈಗ ಒಂದು ಮಟ್ಟಕ್ಕೆ ರಿಲ್ಯಾಕ್ಸ್ ಆಗಿದ್ದೀನಿ. ಅದಕ್ಕೆ ಕಾರಣ ದುಬೈನಲ್ಲಿ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ. ಅಲ್ಲಿ ಸಾಕಷ್ಟು ಕನ್ನಡಿಗರು ಚಿತ್ರ ನೋಡಿದರು. ಅವರು ಎಲ್ಲ ಸಿನಿಮಾಗಳನ್ನು ಅಷ್ಟು ಸುಲಭವಾಗಿ ಒಪ್ಪುವುದಿಲ್ಲ. ಇಡೀ ಚಿತ್ರಮಂದಿರ ತುಂಬಿತ್ತು. ಚಿತ್ರ ಮುಗಿದ ಮೇಲೆ ಎಲ್ಲರೂ ಒಳ್ಳೆಯ ಅಭಿಪ್ರಾಯಗಳನ್ನು ಹೇಳಿದ್ದಾರೆ. ಅವರಿಗೆ ನಾನು ಸದಾ ಚಿರಋಣಿ. ಈ ತಂಡದ ಭಾಗವಾಗಿರುವುದಕ್ಕೆ ನಾನು ನಿಜಕ್ಕೂ ಅದೃಷ್ಟವಂತ ಎಂದರೆ ತಪ್ಪಿಲ್ಲ. ನಮ್ಮ ನಿರ್ಮಾಪಕರು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದೆ, ಎಲ್ಲದಕ್ಕೂ ಬಹಳ ಸಹಕಾರ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ನಾನು ಹೀರೋ ಎನ್ನುವುದಕ್ಕಿಂತ, ಅಮರ್, ಭಾವನಾ, ಮನಸ್ವಿ, ಸಿಂಚನಾ ಮತ್ತು ಮನೋಜ್ ಪ್ರಮುಖ ಪಾತ್ರಧಾರಿಗಳು. ಅವರೆಲ್ಲಾ ತುಂಬಾ ಚೆನ್ನಾಗಿ ನಟಿಸಿದ್ದಾರೆ. ಈ ಚಿತ್ರದ ನಿಜವಾದ ಹೀರೋ ನಿರ್ದೇಶಕರು. ಒಂದೊಳ್ಳೆಯ ಕಥೆಯನ್ನು ಅವರು ಈ ಚಿತ್ರದ ಮೂಲಕ ಹೇಳಿದ್ದಾರೆ. ಮಕ್ಕಳು ಮತ್ತು ಅವರ ಪೋಷಕರು ಇಬ್ಬರೂ ಕೂತು ಒಟ್ಟಿಗೆ ನೋಡುವಂಥ ಚಿತ್ರ ಇದು. ಎಲ್ಲರೂ ಬಂದು ಚಿತ್ರ ನೋಡಿ ಎಂದರು.

    ಅರುಣ್ ಅಮುಕ್ತ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುವುದಷ್ಟೇ ಅಲ್ಲ, ಚಿತ್ರವನ್ನು ತಾವೇ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಮಗೆ ಯಾವ ಅಭಿಮಾನಿಗಳಿಲ್ಲ. ನಮ್ಮ ಚಿತ್ರ ನೋಡುವುದಕ್ಕೆ ಬರುವವರೇನಿದ್ದರೂ ಟ್ರೈಲರ್‌ ಮತ್ತು ಹಾಡುಗಳನ್ನು ನೋಡಿ ಬರಬೇಕು. ನಮ್ಮ ಪ್ರೇಕ್ಷಕರೇನಿದ್ದರೂ ಇವತ್ತಿನ ಯುವಜನತೆ. ಅವರಿಗೆ ಚಿತ್ರ ತಲುಪಿಸಬೇಕು. ಹೇಗೆ ತಲುಪಿಸಬೇಕು ಎಂಬುದರ ಕುರಿತು ನನಗೆ ಕೆಲವು ಯೋಚನೆಗಳಿದ್ದವು. ಹಾಗಾಗಿ, ನಾನೇ ಈ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾದೆ. ಸುಮಾರು 140 ಕೇಂದ್ರಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇನೆ. ಚಿತ್ರದ ಟ್ರೈಲರ್‌ ಮತ್ತು ಹಾಡು ನೋಡಿ, ಕೆಲವು ಚಿತ್ರಮಂದಿರದವರು ಕರೆದು ಚಿತ್ರ ಪ್ರದರ್ಶಿಸುವ ಅವಕಾಶ ಕೊಟ್ಟಿದ್ದಾರೆ. ಆಮೇಲೆ ನೋಡೋಣ ಎಂದು ಕಾಯದೇ ಮೊದಲ ದಿನವೇ ಬಂದು ಚಿತ್ರ ನೋಡಿ’ ಎಂದು ಕರೆನೀಡಿದರು.

    ದುಬೈನಲ್ಲಿ ಚಿತ್ರ ಬಿಡುಗಡೆ ಮಾಡಿರುವ ಮಮತಾ ಸೆಂಧಿಲ್ ಮಾತನಾಡಿ, ಇದಕ್ಕೂ ಮುನ್ನ ‘ಕಾಟೇರ’ ಚಿತ್ರವನ್ನು ಬಿಡಗುಡೆ ಮಾಡಿದ್ದೆವು. ಇದು ನಮ್ಮ ಎರಡನೆಯ ಚಿತ್ರ. ನೋಡಿದವರೆಲ್ಲರೂ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಬೇರೆ ದೇಶಗಳಲ್ಲೂ ಚಿತ್ರ ಬಿಡುಗಡೆ ಮಾಡುವುದಕ್ಕೆ ಅಲ್ಲಿನ ಕನ್ನಡಿಗರು ಕೇಳುತ್ತಿದ್ದು, ಮುಂದಿನ ದಿನಗಳಲ್ಲಿ ಆಸ್ಟ್ರೇಲಿಯಾ ಮುಂತಾದ ಕಡೆ ಚಿತ್ರ ಬಿಡುಗಡೆ ಮಾಡುತ್ತಿರುವುದಾಗಿ ಹೇಳಿದರು.

    ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವನ್ನು ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ. ಶಿವಲಿಂಗೇಗೌಡ ನಿರ್ಮಿಸಿದ್ದಾರೆ. ತಮ್ಮ ಮೊದಲ ಪ್ರಯತ್ನಕ್ಕೆ ಕನ್ನಡಿಗರ ಪ್ರೋತ್ಸಾಹ, ಬೆಂಬಲವಿರಲಿ ಎಂದು ನಿರ್ಮಾಪಕರು ಇದೇ ಸಂದರ್ಭದಲ್ಲಿ ಕೇಳಿಕೊಂಡರು.

    ಸುನೀಲ್ ಪುರಾಣಿಕ್, ಅರವಿಂದ್ ರಾವ್, ಪ್ರಶಾಂತ್ ಸಂಬರ್ಗಿ, ಅಮರ್, ಮನೋಜ್, ಮನಸ್ವಿ ಮುಂತಾದವರು ಮಾತನಾಡಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬಂದು ಚಿತ್ರವನ್ನು ನೋಡಿ ಹರಸಿ-ಹಾರೈಸುವುದಕ್ಕೆ ಮನವಿ ಮಾಡಿದರು.

  • ಯಾವುದೇ ಕಳಂಕ ಇಲ್ಲದೆ ನಿರಪರಾಧಿಯಾಗಿ ದರ್ಶನ್ ಆಚೆ ಬರಲಿ: ಚಂದನ್ ಶೆಟ್ಟಿ

    ಯಾವುದೇ ಕಳಂಕ ಇಲ್ಲದೆ ನಿರಪರಾಧಿಯಾಗಿ ದರ್ಶನ್ ಆಚೆ ಬರಲಿ: ಚಂದನ್ ಶೆಟ್ಟಿ

    ಟ ದರ್ಶನ್ (Actor Darshan) ಪ್ರಕರಣದ ಕುರಿತು ಈಗಾಗಲೇ ಹಲವು ನಟ, ನಟಿಯರು ಮಾತನಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ (Renukaswamy Murder Case) ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಇದೀಗ ಈ ಪ್ರಕರಣ ಬಗ್ಗೆ ಚಂದನ್ ಶೆಟ್ಟಿ (Chandan Shetty) ಮೌನ ಮುರಿದಿದ್ದಾರೆ. ದರ್ಶನ್ ಯಾವುದೇ ಕಳಂಕ ಇಲ್ಲದೆ ಆಚೆ ಬರಲಿ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:‘ಮ್ಯಾಕ್ಸ್’ ಆಟ ಶುರು- ಮಾಸ್‌ ಆಗಿ ಎಂಟ್ರಿ ಕೊಟ್ಟ ಕಿಚ್ಚ ಸುದೀಪ್

    ಸಾಮಾಜಿಕ ಜಾಲತಾಣದಿಂದ ಮಾಡಿದ ಕಾಮೆಂಟ್‌ನಿಂದ ಈ ಘಟನೆ ನಡೆದಿದೆ. ಅದು ಹತೋಟಿಗೆ ಬರಬೇಕಾಗಿದೆ. ಇದನ್ನು ಇಷ್ಟು ಸುಲಭವಾಗಿ ಬಿಟ್ಟು ಬಿಡುವ ಹಾಗಿಲ್ಲ ಸೀರಿಯನ್ ಆಗಿ ಕ್ರಮ ತೆಗೆದುಕೊಳ್ಳಬೇಕು. ಆ ಘಟನೆ ಬಗ್ಗೆ ನಾನು ಮಾತನಾಡೋಲ್ಲ. ಆದರೆ ಅದರ ಪರಿಣಾಮದ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ ಚಂದನ್ ಶೆಟ್ಟಿ.

    ಈ ಬಗ್ಗೆ ನಮ್ಮ ಸರ್ಕಾರ ಮತ್ತು ಪೊಲೀಸರು ಗಮನ ಹರಿಸಬೇಕಿದೆ. ಪ್ರತಿ ಪೊಲೀಸ್ ಸ್ಟೇಷನ್‌ನಲ್ಲೂ ಈಗ ಸೈಬರ್ ಸ್ಟೇಷನ್ ಓಪನ್ ಆಗಿದೆ. ಇಂತಹ ಕೆಟ್ಟ ಕಾಮೆಂಟ್‌ನಿಂದ ಸಾಕಷ್ಟು ಜನ ಹೆಣ್ಣು ಮಕ್ಕಳು ನೊಂದಿದ್ದಾರೆ. ಹೈ ಪ್ರೊಫೈಲ್ ವ್ಯಕ್ತಿ ಅಂತಲ್ಲ. ಸಾಮಾನ್ಯ ಜನರು ಈ ಸಮಸ್ಯೆ ಎದುರಿಸುತ್ತಿದ್ದಾರೆ ಎಂದಿದ್ದಾರೆ. ಫೇಕ್ ಅಕೌಂಟ್ ಮಾಡಿ ಕೆಟ್ಟ ಮೆಸೇಜ್ ಮಾಡುತ್ತಿರುತ್ತಾರೆ. ಟಿಕ್ ಟಾಕ್ ಬ್ಯಾನ್ ಮಾಡಿದಂತೆ ಹೀಗೆ ಮೆಸೇಜ್ ಮಾಡೋರ ಮೇಲೆ ಕೂಡ ಕ್ರಮ ತೆಗೆದುಕೊಳ್ಳಬೇಕು. ಕೆಟ್ಟ ಚಟುವಟಿಕೆ ನಿಲ್ಲಬೇಕು ಎಂದು ಖಡಕ್ ಆಗಿ ಚಂದನ್ ಮಾತನಾಡಿದ್ದಾರೆ.

    ಸದ್ಯ ಈ ಕೇಸ್ ಕೋರ್ಟ್‌ನಲ್ಲಿದೆ. ಏನಾಗುತ್ತೆ ನಾವು ಕಾಯ್ತಿದ್ದೀವಿ. ಯಾವುದೇ ಕಳಂಕ ಇಲ್ಲದೆ ದರ್ಶನ್ ನಿರಪರಾಧಿಯಾಗಿ ಆಚೆ ಬರಲಿ ಅನ್ನೋದು ನನ್ನ ಆಶಯ. ಈ ಘಟನೆ ನೋಡಿ ಇವತ್ತು ಎಲ್ಲರೂ ಎಚ್ಚೆತ್ತುಕೊಳ್ಳಬೇಕಿದೆ ಎಂದು ಚಂದನ್‌ ಶೆಟ್ಟಿ ಮಾತನಾಡಿದ್ದಾರೆ.

  • ಬಿ ಸೈಡ್ ಟ್ರೈಲರ್ ಮೂಲಕ ಬೆರಗಾಗಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು!

    ಬಿ ಸೈಡ್ ಟ್ರೈಲರ್ ಮೂಲಕ ಬೆರಗಾಗಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು!

    ರುಣ್ ಅಮುಕ್ತ ನಿರ್ದೇಶನದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidhyarthi Vidyarthiniyare) ಚಿತ್ರ ಇದೇ ತಿಂಗಳ 19ರಂದು ತೆರೆಗಾಣುತ್ತಿದೆ. ಈಗಾಗಲೇ ಸೈಡ್ ಎ ಟ್ರೈಲರ್ ಮೂಲಕ ಈ ಸಿನಿಮಾ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಇದೀಗ ಬಿಡುಗಡೆಯ ಹೊಸ್ತಿಲಿನಲ್ಲಿ ಸೈಡ್ ಬಿ ಟ್ರೈಲರ್ ಲಾಂಚ್ ಆಗಿದೆ. ಜಬರ್ದಸ್ತ್ ಶೈಲಿಯಲ್ಲಿ ಮೂಡಿ ಬಂದಿರುವ ಈ ಟ್ರೈಲರ್ ಕಂಡವರೆಲ್ಲ ಅಕ್ಷರಶಃ ಥ್ರಿಲ್ ಆಗಿದ್ದಾರೆ. ಶೀರ್ಷಿಕೆ ನೋಡಿದವರು ಒಂದು ಸಿದ್ಧಸೂತ್ರದ ಕಲ್ಪನೆ ಮೂಡಿಸಿಕೊಂಡಿದ್ದರು. ಆದರೆ, ಈ ಸಿನಿಮಾ ಅದೆಲ್ಲವನ್ನೂ ಮೀರಿಕೊಂಡ ರಗಡ್ ಕಥೆಯನ್ನೊಳಗೊಂಡಿದೆ ಎಂಬುದನ್ನು ಸೈಡ್ ಬಿ ಟ್ರೈಲರ್ ಸಾಕ್ಷೀಕರಿಸಿದೆ. ಇದನ್ನೂ ಓದಿ:ದರ್ಶನ್‌ ಪ್ರಕರಣ: ಆರೋಪಿ ಸ್ಥಾನದಲ್ಲಿರುವವರಿಗೆ ನಾವು ಸಪೋರ್ಟ್ ಮಾಡಿಲ್ಲ- ಡಾಲಿ

    ನಿರ್ದೇಶಕ ಅರುಣ್ ಅಮುಕ್ತ ಇದೊಂದು ಭಿನ್ನ ಕಥಾನಕ ಎಂಬ ಸುಳಿವು ಬಿಟ್ಟುಕೊಟ್ಟಿದ್ದರು. ಈಗ ಸದರಿ ಟ್ರೈಲರ್ ಅದನ್ನು ಸಾಬೀತುಪಡಿಸಿದೆ. ಈ ಮೂಲಕ ಒಂದಿಡೀ ಸಿನಿಮಾದ ಝಲಕ್ಕುಗಳು ಸ್ಪಷ್ಟವಾಗಿ ಜಾಹೀರಾಗಿವೆ. ಕಾಲೇಜು ಕಹಾನಿಯ ಸುತ್ತಾ, ಮೈನವಿರೇಳಿಸೋ ಸಸ್ಪೆನ್ಸ್ ಥ್ರಿಲ್ಲರ್, ಕ್ರೈಂನೊಂದಿಗೆ ಈ ಸಿನಿಮಾ ರೂಪುಗೊಂಡಿರೋದೂ ಸ್ಪಷ್ಟವಾಗಿದೆ. ನೋಡಿದವರೆಲ್ಲ ಇದೊಂದು ಪ್ರಾಮಿಸಿಂಗ್ ಟ್ರೈಲರ್ ಅನ್ನೋ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾ ನೋಡಲೇಬೇಕೆಂಬ ತುಡಿತ ಮೂಡಿಸುವಷ್ಟು ಪರಿಣಾಮಕಾರಿಯಾಗಿ ಈ ಟ್ರೈಲರ್ ಅನ್ನು ರೂಪಿಸಲಾಗಿದೆ.

    ಈವರೆಗೂ ಒಂದಷ್ಟು ಹಾಡುಗಳ ಮೂಲಕವೇ ಪ್ರಧಾನವಾಗಿ ಈ ಸಿನಿಮಾ ಸೆಳೆದುಕೊಂಡಿತ್ತು. ಇದೀಗ ತೆರೆಗಾಣುವ ಕಡೇ ಘಳಿಗೆಯಲ್ಲಿ ಬಿ ಸೈಡ್ ಟ್ರೈಲರ್ ಮೂಲಕ ಚಿತ್ರತಂಡ ಮೋಡಿ ಮಾಡಿದೆ. ಈ ಮೂಲಕ ಪಾತ್ರಗಳ ಚಹರೆಗಳೆಲ್ಲ ಜಾಹೀರಾಗಿವೆ. ಒಂದು ವೇಳೆ ಟ್ರೈಲರ್‌ನಲ್ಲಿ ಕಾಣಿಸಿರುವ ಬಿಗುವಿನಲ್ಲಿಯೇ ಒಂದಿಡೀ ಸಿನಿಮಾ ಮೂಡಿ ಬಂದಿದ್ದರೆ ಗೆಲುವು ಗ್ಯಾರೆಂಟಿ ಎಂಬಂಥಾ ವಿಶ್ಲೇಷಣೆಗಳೂ ಕೇಳಿ ಬರುತ್ತಿವೆ. ರ್ಯಾಪರ್ ಚಂದನ್ ಶೆಟ್ಟಿಯ ಪಾತ್ರವೂ ನೋಡುಗರ ಗಮನ ಸೆಳೆದಿದೆ. ಇಲ್ಲಿ ಅವರಿಗೆ ಅಪರೂಪದ ಪಾತ್ರವೊಂದು ಸಿಕ್ಕಿರುವ ಸುಳಿವೂ ಕೂಡಾ ಪ್ರೇಕ್ಷಕರನ್ನು ತಲುಪಿದೆ. ನಿಖರವಾಗಿ ಹೇಳಬೇಕೆಂದರೆ, ನಿರ್ದೇಶಕ ಅರುಣ್ ಅಮುಕ್ತ ವಿದ್ಯಾರ್ಥಿ ವಿದ್ಯಾರ್ಥಿನಿಯರ ಜೊತೆ ಮೋಡಿ ಮಾಡುವ ಎಲ್ಲ ಲಕ್ಷಣಗಳೂ ದಟ್ಟವಾಗಿ ಗೋಚರಿಸುತ್ತಿವೆ.

    ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ (Chandan Shetty), ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ದುಬೈನಲ್ಲಿ ಚಂದನ್ ಶೆಟ್ಟಿ ನಟನೆಯ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಪ್ರೀಮಿಯರ್ ಶೋ

    ದುಬೈನಲ್ಲಿ ಚಂದನ್ ಶೆಟ್ಟಿ ನಟನೆಯ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಪ್ರೀಮಿಯರ್ ಶೋ

    ರುಣ್ ಅಮುಕ್ತ ನಿರ್ದೇಶನದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidhyarthi Vidhyathiniyare) ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಇದೇ ತಿಂಗಳ 19ರಂದು ಈ ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ. ಅದೇ ದಿನ ನೆರೆಯ ಕೇರಳದಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರೇಕ್ಷಕರನ್ನು ಮುಖಾಮುಖಿಯಾಗಲಿದ್ದಾರೆ. ಈ ತಿಂಗಳು ಬಿಡುಗಡೆಗೊಳ್ಳುತ್ತಿರೋ ಚಿತ್ರಗಳ ಸಾಲಿನಲ್ಲಿ ಈ ಸಿನಿಮಾ ಸೃಷ್ಟಿಸಿರುವ ಕ್ರೇಜ್ ಮತ್ತು ಪ್ರೇಕ್ಷಕರನ್ನು ಆವರಿಸಿಕೊಂಡಿರುವ ರೀತಿಯೆಲ್ಲವೂ ವಿಶೇಷವಾಗಿದೆ. ಈಗಾಗಲೇ ಕಾಲೇಜು ಬೇಸಿನ ಈ ಸಿನಿಮಾ ಭಿನ್ನ ಜಾಡಿನಲ್ಲಿ ರೂಪುಗೊಂಡಿದೆ ಎಂಬ ವಿಚಾರ ಪ್ರೇಕ್ಷಕರೆಲ್ಲರಿಗೂ ಮನದಟ್ಟಾಗಿದೆ. ಇದೀಗ ಬಿಡುಗಡೆಯ ಹೊಸ್ತಿಲಿನಲ್ಲಿ ಚಿತ್ರತಂಡ ಮತ್ತೊಂದಷ್ಟು ಖುಷಿಯ ಸಂಗತಿಗಳನ್ನು ಹೊತ್ತು ತಂದಿದೆ. ಇದನ್ನೂ ಓದಿ:ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೂ ನನ್ನ ದಾರಿಗೆ ಏನೇ ಎದುರಾದರೂ ಹೆದರಲ್ಲ: ಯುವ ಪತ್ನಿ ಶ್ರೀದೇವಿ

    ಚಿತ್ರತಂಡ ಹಂಚಿಕೊಂಡಿರೋ ಮಾಹಿತಿಯ ಪ್ರಕಾರ ಹೇಳೋದಾದರೆ, ಬಿಡುಗಡೆಗೂ ಮುನ್ನವೇ ವಿದ್ಯಾರ್ಥಿ ವಿದ್ಯಾರ್ಥಿನಿಯರ ಹವಾ ಸಾಗರದಾಚೆಗೂ ಹಬ್ಬಿಕೊಳ್ಳಲಿದೆ. ಜುಲೈ 14ರಂದು ದುಬೈನಲ್ಲಿ ಈ ಚಿತ್ರದ ಪ್ರೀಮಿಯರ್ ಶೋ ನಡೆಯಲಿದೆ. ಪ್ರತಿಷ್ಠಿತ ಒಎಂಜಿ ಕಂಪೆನಿ ದುಬೈನಲ್ಲಿ ಈ ಚಿತ್ರದ ವಿತರಣಾ ಹಕ್ಕು ಪಡೆದುಕೊಂಡಿದೆ. ಇದಕ್ಕೆ ಬೇಕಾದ ಎಲ್ಲ ತಯಾರಿಗಳನ್ನೂ ಚಿತ್ರತಂಡ ಮಾಡಿಕೊಳ್ಳುತ್ತಿದೆ. ಇದು ವಿದ್ಯಾರ್ಥಿ ವಿದ್ಯಾರ್ಥಿನಿಯರು ರೂಪುಗೊಂಡಿರುವ ರೀತಿ ಮತ್ತು ಅದರ ಕಂಟೆಂಟಿನ ಗಟ್ಟಿತನಕ್ಕೊಂದು ಉದಾಹರಣೆ. ನಿಖರವಾಗಿ ಹೇಳುವುದಾದರೆ, ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಈ ತಿಂಗಳ ಬಹುಮುಖ್ಯ ಚಿತ್ರವಾಗಿ ದಾಖಲಾಗಿದೆ. ಈಗಿರುವ ಕ್ರೇಜ್ ನೋಡುತ್ತಿದ್ದರೆ ದೊಡ್ಡ ಮಟ್ಟದಲ್ಲಿ ಗೆಲ್ಲುವ ಲಕ್ಷಣಗಳೂ ದಟ್ಟವಾಗಿವೆ.

    ಇದು ರ‍್ಯಾಪರ್ ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸಿರುವ ಚಿತ್ರ. ಈಗಿನ ಯುವ ಸಮೂಹವನ್ನು ಆವರಿಸಿಕೊಳ್ಳುವಂಥಾ ಕಥೆಯೊಂದಿಗೆ ಅರುಣ್ ಅಮುಕ್ತ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರಂತೆ. ಸದ್ಯದ ಮಟ್ಟಿಗೆ ಎಲ್ಲವೂ ಪಾಸಿಟಿವ್ ಆಗಿದೆ. ಆದರೆ, ಇಂಥಾ ಚಿತ್ರಗಳ ಬೆನ್ನಿಗೆ ಕನ್ನಡದ ತಾರೆಯರು, ತಂತ್ರಜ್ಞರು, ಕಲಾವಿದರೆಲ್ಲ ನಿಲ್ಲುವ ಅವಶ್ಯಕತೆ ಇದೆ. ಸ್ಟಾರ್ ಹೀರೋಗಳು ಇಂಥಾ ಸಿನಿಮಾಗಳಿಗೆ ಪ್ರೋತ್ಸಾಹ ನೀಡೋದು ಈವತ್ತಿನ ಸನ್ನಿವೇಷದ ತುರ್ತು. ಯಾಕೆಂದರೆ, ಈಗೊಂದಷ್ಟು ತಿಂಗಳಿಂದ ಹೇಳಿಕೊಳ್ಳುವಂಥಾ ಗೆಲುವು ದಕ್ಕದೆ ಕನ್ನಡ ಚಿತ್ರರಂಗ ಬಸವಳಿದಿದೆ. ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಥರದ ಸಿನಿಮಾಗಳು ಗೆದ್ದರೆ, ದೊಡ್ಡ ದೊಡ್ಡ ಸಿನಿಮಾಗಳ ಹಾದಿಯೂ ಸುಗಮವಾಗುತ್ತೆ. ಚಿತ್ರರಂಗದ ಉಳಿವಿನ ದೃಷ್ಟಿಯಿಂದ ಇಂಥಾ ಚಿತ್ರಗಳ ಗೆಲುವು ಅನಿವಾರ್ಯ.

    ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ, ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ಡಿವೋರ್ಸ್ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ನಿವೇದಿತಾ ಆ್ಯಕ್ಟೀವ್

    ಡಿವೋರ್ಸ್ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ನಿವೇದಿತಾ ಆ್ಯಕ್ಟೀವ್

    ‘ಬಿಗ್ ಬಾಸ್’ (Bigg Boss) ಬೆಡಗಿ ನಿವೇದಿತಾ ಗೌಡ ಅವರು (Niveditha Gowda) ಚಂದನ್‌ ಶೆಟ್ಟಿ (Chandan Shetty) ಜೊತೆಗಿನ ಡಿವೋರ್ಸ್ (Divorce) ಬಳಿಕ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಮತ್ತೊಂದು ರೀಲ್ಸ್ ಶೇರ್ ಮಾಡಿ ನಟಿ ಹೆಜ್ಜೆ ಹಾಕಿದ್ದಾರೆ. ಇದು ಸೋಷಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ.

    ಕೆಂಪು ಬಣ್ಣದ ಡ್ರೆಸ್ ಧರಿಸಿ ಲವಲವಿಕೆಯಿಂದ ನಟಿ ಹಾಡೊಂದಕ್ಕೆ ರೀಲ್ಸ್ ಮಾಡಿದ್ದಾರೆ. ಇದನ್ನು ನಟಿ ಶೇರ್ ಮಾಡ್ತಿದ್ದಂತೆ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬಂದಿದೆ. ನಿವೇದಿತಾ ರೀಲ್ಸ್‌ಗೆ ನೆಟ್ಟಿಗನೊಬ್ಬ ಶೆಡ್ ನೆನಪಾಗ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಪೈಪೋಟಿಗಿಳಿದು ಜಾಕೆಟ್ ಬಿಚ್ಚಿದ ‘ಪುಷ್ಪ 2’ ನಟಿ


    ಜೂನ್ 7ರಂದು ಕಾನೂನು ಬದ್ಧವಾಗಿ ಪರಸ್ಪರ ಒಪ್ಪಂದದಿಂದ ಸಂಬಂಧ ಕೊನೆಗೊಳಿಸುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಚಂದನ್ ಮತ್ತು ನಿವೇದಿತಾ ಅನೌನ್ಸ್ ಮಾಡಿದ್ದರು. ಇಂದು, ನಾನು ಮತ್ತು ನಿವೇದಿತಾ ಮದುವೆಯಾಗಿ ನಾಲ್ಕು ವರ್ಷಗಳ ನಂತರ ಕಾನೂನುಬದ್ಧವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಸ್ವಂತ ಸಂತೋಷ ಮತ್ತು ಬೆಳವಣಿಗೆಯ ಮೇಲೆ ಕೇಂದ್ರೀಕರಿಸುವುದು ಮುಖ್ಯ ಎಂದು ಅರ್ಥಮಾಡಿಕೊಳ್ಳುವ ಮೂಲಕ ನಾವು ನಮ್ಮ ಮದುವೆಯನ್ನು ಉತ್ತಮ ರೀತಿಯಲ್ಲಿ ಕೊನೆಗೊಳಿಸುತ್ತಿದ್ದೇವೆ. ಈ ಕಷ್ಟದ ಸಮಯದಲ್ಲಿ ನಾವು ಮಾಧ್ಯಮಗಳು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ಬೆಂಬಲವನ್ನು ಕೇಳುತ್ತೇವೆ. ನಾವು ನಮ್ಮ ದಾರಿಯಲ್ಲಿ ಹೋಗುತ್ತಿದ್ದರೂ ಸಹ, ನಾವು ಇನ್ನೂ ಪರಸ್ಪರ ಬಲವಾದ ಸ್ನೇಹ ಮತ್ತು ಗೌರವವನ್ನು ಹೊಂದಿದ್ದೇವೆ. ಈ ಸವಾಲಿನ ಅವಧಿಯಲ್ಲಿ ನಿಮ್ಮ ಬೆಂಬಲ ನಮ್ಮಿಬ್ಬರ ಮೇಲಿರಲಿ ಎಂದು ಪೋಸ್ಟ್ ಮಾಡಿದ್ದರು.

    ಅಂದಹಾಗೆ, ಇಬ್ಬರೂ ಜೊತೆಯಾಗಿ ‘ಕ್ಯಾಂಡಿ ಕ್ರಶ್’ (Candy Crush) ಚಿತ್ರದ ಮೂಲಕ ಬರುತ್ತಿದ್ದಾರೆ. ಇನ್ನೂ ಕೆಲ ದಿನಗಳ ಚಿತ್ರೀಕರಣ ಬಾಕಿದ್ದು, ಚಿತ್ರತಂಡಕ್ಕೆ ಚಂದನ್ ಮತ್ತು ನಿವೇದಿತಾ ಸಾಥ್ ನೀಡುತ್ತಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಸಿನಿಮಾ ರಿಲೀಸ್ ಆಗಲಿದೆ.