Tag: Chandan Shetty

  • ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಎನ್ನುತ್ತಾ ಬಂತು ಮೋಷನ್ ಪೋಸ್ಟರ್

    ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಎನ್ನುತ್ತಾ ಬಂತು ಮೋಷನ್ ಪೋಸ್ಟರ್

    ರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬಂದಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರ ಚಿತ್ರೀಕರಣ ಶುರುವಾದಂದಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಾ ಬಂದಿದೆ. ಅತ್ಯಂತ ಕ್ರಿಯಾಶೀಲವಾಗಿ ಪ್ರೇಕ್ಷಕರನ್ನು ತಲುಪಿಕೊಳ್ಳುವ ನಿಟ್ಟಿನಲ್ಲಿ ನಿರ್ದೇಶಕರ ಪಟ್ಟುಗಳೆಲ್ಲವೂ ಫಲ ಕೊಟ್ಟಿವೆ. ಇದೀಗ ಅದೇ ಹಾದಿಯಲ್ಲಿ ಸಾಗಿ ಬಂದಿರುವ ಚಿತ್ರತಂಡ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದೆ.

    ಈ ಸಿನಿಮಾ ಶೀರ್ಷಿಕೆ ಕೇಳಿದರೇನೇ ಒಟ್ಟಾರೆ ಕಥಾನಕದ ಬಗೆಗೊಂದು ಸುಳಿವು ಸಿಗುತ್ತದೆ. ಆದರೆ, ಅಂಥಾ ಯಾವ ಅಂದಾಜಿಗೂ ನಿಲುಕದ ಸ್ವರೂಪದಲ್ಲಿ ಈ ಸಿನಿಮಾವನ್ನು ರೂಪಿಸಿರುವ ಭರವಸೆ ನಿರ್ದೇಶಕ ಅರುಣ್ ಅಮುಕ್ತ (Arun Amukta) ಅವರಲ್ಲಿದೆ. ಈ ಹಿಂದೆ ಟೈಟಲ್ ಲಾಂಚ್ ಅನ್ನೂ ಸಹ ಪ್ರೇಕ್ಷಕರನ್ನು ಸೆಳೆಯುವಂತೆ ಮಾಡಿದ್ದ ಚಿತ್ರತಂಡ, ಇಂದು ಬೆಳಗ್ಗೆ ಪೋಸ್ಟರ್ ಹಾಗೂ ಸಂಜೆ ಮೋಷನ್ ಪೋಸ್ಟರ್ ಬಿಡುಗಡೆಗೊಳಿಸಿದೆ. ಇದರ ಸುತ್ತ ಈಗೊಂದಷ್ಟು ನಿರೀಕ್ಷೆ ಮತ್ತು ಚರ್ಚೆ ಹುಟ್ಟಿಕೊಂಡಿದೆ.

    ಇದುವರೆಗೂ ಈ ಸಿನಿಮಾದ ಪಾತ್ರವರ್ಗ ಕಾಣಿಸಿರಲಿಲ್ಲ. ಈ ಪೋಸ್ಟರ್ ಹಾಗೂ ಮೋಷನ್ ಪೋಸ್ಟರ್ ಮೂಲಕ ಕೆಲ ಪಾತ್ರಗಳ ದರ್ಶನವಾಗಿದೆ. ಇದರಲ್ಲಿ ಚಂದನ್ ಶೆಟ್ಟಿ (Chandan Shetty), ಭಾವನಾ ಅಪ್ಪು, ಅಮರ್, ಮನಸ್ವಿ, ವಿವಾನ್ ಸುನಿಲ್ ಪುರಾಣಿಕ್, ಅರವಿಂದ ರಾಜ್ ಪ್ರಶಾಂತ್ ಸಂಬರ್ಗಿ ಮುಂತಾದವರು ನಟಿಸಿದ್ದಾರೆ. ಇದರಲ್ಲಿ ನಾಲ್ಕು ಪಾತ್ರಗಳು ಈ ಪೋಸ್ಟರ್ ನಲ್ಲಿ ಕಾಣಿಸಿಕೊಂಡಿವೆ. ಅಂದಹಾಗೆ ಇದೊಂದು ಟೀನೇಜ್ ಕಲ್ಟ್ ಸಿನಿಮಾ. ಈಗಾಗಲೇ ಕಾಲೇಜು ಕೇಂದ್ರಿತವಾದ ಒಂದಷ್ಟು ಸಿನಿಮಾಗಳು ತೆರೆಗಂಡು ಗೆದ್ದಿವೆ. ಆ ಸಾಲಿನಲ್ಲಿ ಈ ಚಿತ್ರವನ್ನೂ ದಾಖಲಾಗುವಂತೆ ಮಾಡುವ ನಿಟ್ಟಿನಲ್ಲಿ ಚಿತ್ರತಂಡ ಶ್ರಮ ವಹಿಸುತ್ತಿದೆ.

    ಸುಬ್ರಮಣ್ಯ ಕುಕ್ಕೆ ಮತ್ತು ಶಿವಲಿಂಗೇಗೌಡ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭಣವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ.

     

    ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಮಾಡಲಿದ್ದಾರೆ. ವಿಶೇಷವೆಂದರೆ, ಇದುವರೆಗೂ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಚಂದನ್ ಶೆಟ್ಟಿ ಪಾತ್ರವನ್ನು ಗೌಪ್ಯವಾಗಿಡಲಾಗಿದೆ. ಶಿವರಾತ್ರಿಯಂದು ಚಂದನ್ ಶೆಟ್ಟಿ ಪಾತ್ರ ಪರಿಚಯ ಮಾಡಲಿರೋ ಮೋಷನ್ ಪೋಸ್ಟರ್ ಲಾಂಚ್ ಆಗಲಿದೆ. ಇದೀಗ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಚಿತ್ರೀಕರಣದ ಅಂತಿಮ ಘಟ್ಟದಲ್ಲಿದೆ.

  • ಶೂಟಿಂಗ್ ಸ್ಪಾಟ್ ನಲ್ಲೇ ಮದುವೆ ವಾರ್ಷಿಕೋತ್ಸವ ಆಚರಿಸಿದ ಚಂದನ್

    ಶೂಟಿಂಗ್ ಸ್ಪಾಟ್ ನಲ್ಲೇ ಮದುವೆ ವಾರ್ಷಿಕೋತ್ಸವ ಆಚರಿಸಿದ ಚಂದನ್

    ದುವೆ ವಾರ್ಷಿಕೋತ್ಸವವನ್ನು (Wedding Anniversary) ಈ ಬಾರಿ ಶೂಟಿಂಗ್ ಸ್ಪಾಟ್ ನಲ್ಲಿ ಆಚರಿಸಿಕೊಂಡಿದ್ದಾರೆ ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ (Niveditha Gowda) ದಂಪತಿ. ಈ ಜೋಡಿ ಇದೇ ಮೊದಲಬಾರಿಗೆ ಬೆಳ್ಳಿತೆರೆಯ ಮೇಲೂ ಜೋಡಿಯಾಗಿ ಕಾಣಿಸಿಕೊಂಡಿದ್ದು, ಚಿತ್ರಕ್ಕೆ ಕ್ಯಾಂಡಿ ಕ್ರಶ್ ಎಂದು ಹೆಸರಿಡಲಾಗಿದೆ.

    ಸೈಕೋಥ್ರಿಲ್ಲರ್ ಕಥಾಹಂದರ ಹೊಂದಿರುವ ಆ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ (Puneeth Srinivas) ಅವರು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಪುನೀತ್ ಶ್ರೀನಿವಾಸ್ ಕನ್ನಡ  ಚಿತ್ರರಂಗಕ್ಕೆ ಹೊಸಬರೇನಲ್ಲ, ಶಿವಣ್ಣ, ಸುದೀಪ್ ರಂಥ  ಸ್ಟಾರ್ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ  ನಂದಕಿಶೋರ್ ಅವರಬಳಿ ಅಧ್ಯಕ್ಷದಿಂದ ಟಗರು ಚಿತ್ರದವರೆಗೆ (ತೆಲುಗು ಸಿನಿಮಾ ಸೇರಿ) ಸುಮಾರು  12 ವರ್ಷಗಳ ಕಾಲ ಕೆಲಸ ಮಾಡಿ ನಿರ್ದೇಶನದ ಪಾಠ ಕಲಿತು ಇದೀಗ ಮೊದಲಬಾರಿಗೆ  ನಿರ್ದೇಶನಕ್ಕಿಳಿದಿದ್ದಾರೆ.

    ಅವರು ತಮ್ಮ  ಪ್ರಥಮ ಪ್ರಯತ್ನದಲ್ಲೇ ವಿಭಿನ್ನ ಕಾನ್ಸೆಪ್ಟ್ ಮೂಲಕ ತಮ್ಮ ಹೊಸ ಜರ್ನಿಯನ್ನು  ಆರಂಭಿಸಿದ್ದು, ಶ್ರೀ ಚೌಡೇಶ್ಬರಿ ಸಿನಿ ಕ್ರಿಯೇಶನ್ಸ್ ಮೂಲಕ ಎಲ್.ಮೋಹನ್ ಕುಮಾರ್ ಅವರು ದೊಡ್ಡ ಮಟ್ಟದ ಬಂಡವಾಳ ಹೂಡಿದ್ದಾರೆ.

     

    ಎಂ.ಎಸ್.ತ್ಯಾಗರಾಜ್ ಅವರ ಸಂಗೀತ ಸಂಯೋಜನೆ, ಕರುಣಾಕರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಬೆಂಗಳೂರು ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಸದ್ಯ ರೊಮ್ಯಾಂಟಿಕ್ ಗೀತೆಯೊಂದರ ಶೂಟ್ ಮಾಡುತ್ತಿದ್ದಾರೆ ನಿರ್ದೇಶಕರು.

  • ಹೊಸ ವರ್ಷಕ್ಕೆ ‘ಮಾಮ’ನ ನೆನಪಿಸಿಕೊಂಡ ಚಂದನ್ ಶೆಟ್ಟಿ

    ಹೊಸ ವರ್ಷಕ್ಕೆ ‘ಮಾಮ’ನ ನೆನಪಿಸಿಕೊಂಡ ಚಂದನ್ ಶೆಟ್ಟಿ

    ರ್ನಾಟಕದ ಜನಪ್ರಿಯ RAPPER ಚಂದನ್ ಶೆಟ್ಟಿ ಅಪಾರ ಅಭಿಮಾನಿ ಸಮೂಹವನ್ನು ಹೊಂದಿದ್ದಾರೆ. ಪ್ರತಿವರ್ಷ ಡಿಸೆಂಬರ್ ತಿಂಗಳ ಕೊನೆಯಲ್ಲಿ ಚಂದನ್ ಶೆಟ್ಟಿ ಒಂದಲ್ಲಾ ಒಂದು ಸುಪ್ರಸಿದ್ದ ಹಾಡನ್ನು ಬಿಡುಗಡೆ ಮಾಡುತ್ತಲೇ ಬಂದಿದ್ದಾರೆ. ಡಿಸೆಂಬರ್ ತಿಂಗಳಲ್ಲೇ ಬಿಡುಗಡೆಯಾಗುವ ಚಂದನ್ ಶೆಟ್ಟಿ (Chandan Shetty) ಅವರ ಹಾಡಿಗಾಗಿ ಕಾಯುವ ಅಭಿಮಾನಿಗಳ ದೊಡ್ಡ ದಂಡೇ ಇದೆ. ಈ ಬಾರಿ ಕೂಡ ಚಂದನ್ ಶೆಟ್ಟಿ, WHAT TO DO MAMA? ಎಂಬ ಅಪ್ಪಟ ದೇಸಿ ಶೈಲಿಯ ಟಪಂಗುಚಿ ಹಾಡನ್ನು ಈ ವರ್ಷದ ಕೊನೆಗೆ ಬಿಡುಗಡೆ ಮಾಡಿದ್ದಾರೆ ತಮ್ಮದೇ ಆದ ಯೂಟ್ಯೂಬ್ ಚಾನಲ್ ನಲ್ಲಿ.

    ಈ ಹಾಡು ಹದಿಹರೆಯದ ಹುಡುಗರಿಗೆ ಹೇಳಿ ಮಾಡಿಸಿದ ಹಾಡು. ಹುಡುಗರ ಪ್ರಾಬ್ಲಮ್ ಗಳನ್ನು ಬಿಂಬಿಸುವ ಹಾಡಿದು. ‘ಪ್ರಾಬ್ಲಮ್ ಪ್ರಾಬ್ಲಮ್ ಪ್ರಾಬ್ಲಮ್ ವಾಟ್ ಟು ಡು ಮಾಮ?’ ಎಂದೇ ಹಾಡು ಆರಂಭವಾಗುತ್ತದೆ. ಇಷ್ಟು ದಿನ ಬಿಡುಗಡೆಯಾಗಿರುವ ಚಂದನ್ ಶೆಟ್ಟಿ ಅವರ RAP ಸಾಂಗ್ಸ್ ಹೆಚ್ಚಾಗಿ ಪಬ್ ಗಳ ಮೇಲೆ  ಕೇಂದ್ರಿಕೃತವಾಗಿತ್ತು. ಆದರೆ ಈ ಹಾಡು ಪಕ್ಕಾ ಲೋಕಲ್ ಸ್ಟೈಲ್ ನಲ್ಲಿ ಮೂಡಿಬಂದಿದೆ. ಕಂಠೀರವ ಸ್ಟುಡಿಯೋದಲ್ಲಿ ಬಾರ್ ಸೆಟ್ ಹಾಕಿ ಈ ಹಾಡನ್ನು ಚಿತ್ರೀಕರಣ ಮಾಡಲಾಗಿದೆ. ಚಂದನ್ ಶೆಟ್ಟಿ ಈ ಹಾಡಿನಲ್ಲಿ ಪಕ್ಕಾ ಲೋಕಲ್ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ.  ಖ್ಯಾತ ನಟ ರಂಗಾಯಣ ರಘು ಅವರು ಚಂದನ್ ಶೆಟ್ಟಿ ಅವರ ಸೋದರಮಾವನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಜನಪ್ರಿಯ ರಿಯಾಲಿಟಿ ಶೋ ಗಿಚ್ಚಿ ಗಿಲಿಗಿಲಿಯ ಕಲಾವಿದರಾದ ರಾಘವೇಂದ್ರ, ಆರ್ ಜೆ ವಿಕ್ಕಿ, ಹುಲಿ ಕಾರ್ತಿಕ್, ನಿತಿನ್ ಅಮಿನ್, ಶಿಡ್ ಶ್ಯಾಡೋ ಶಿವ, ಎನ್ ಸಿ ಅಯ್ಯಪ್ಪ ಮುಂತಾದವರು ಈ ಅದ್ದೂರಿ RAP ಸಾಂಗ್ ನಲ್ಲಿ ನಟಿಸಿದ್ದಾರೆ.

    ಇಷ್ಟು ದಿನ ಚಂದನ್ ಶೆಟ್ಟಿ ಅವರ ಸುಪ್ರಸಿದ್ದ RAP ಸಾಂಗ್ಸ್ ಗಳನ್ನು ಬೇರೆಬೇರೆ ನಿರ್ಮಾಪಕರು ನಿರ್ಮಾಣ ಮಾಡುತ್ತಿದ್ದರು. ಇದೇ ಮೊದಲ ಬಾರಿಗೆ ಚಂದನ್ ಶೆಟ್ಟಿ ಅವರೆ ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ.  ವಿಜಯ್ ಈಶ್ವರ್ ಅವರ ಜೊತೆಗೂಡಿ ಹಾಡನ್ನು ಬರೆದಿದ್ದಾರೆ. ರಿಯಾಲಿಟಿ ಶೋ ನಲ್ಲಿ ಜನಪ್ರಿಯರಾಗಿರುವ ಮುರುಗ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಉದಯಲೀಲ ಛಾಯಾಗ್ರಹಣ, ಸತೀಶ್ ಚಂದ್ರ ಸಂಕಲನ ಹಾಗೂ ದಿವಾಕರ್ ಅವರ ಕಲಾ ನಿರ್ದೇಶನ ಈ ಹಾಡಿಗಿದೆ.

     

    ಚಂದನ್ ಶೆಟ್ಟಿ ಅವರೆ ಸಂಗೀತ ಸಂಯೋಜಿಸಿ, ಹಾಡಿ ಹಾಗೂ ನಿರ್ದೇಶನವನ್ನೂ ಮಾಡಿರುವ ಈ ಹಾಡು ಕ್ರಿಸ್ ಮಸ್ ಹಬ್ಬದ ಸಂದರ್ಭದಲ್ಲಿ ಮತ್ತು ಹೊಸವರ್ಷದ (New Year) ಆಗಮನದ ಸಮಯದಲ್ಲಿ ಬಿಡುಗಡೆಯಾಗುತ್ತಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗುವುದಂತೂ ಖಂಡಿತ.

  • ಮಹಿಳಾ ಪ್ರಧಾನ ಸಿನಿಮಾದಲ್ಲಿ ನಿವೇದಿತಾ ಗೌಡ

    ಮಹಿಳಾ ಪ್ರಧಾನ ಸಿನಿಮಾದಲ್ಲಿ ನಿವೇದಿತಾ ಗೌಡ

    ದೇ ಮೊದಲ ಬಾರಿಗೆ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ (Nivedita Gowda) ದಂಪತಿ ಹಿರಿತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಕುರಿತು ಮಾತನಾಡಿರುವ ನಿವೇದಿತಾ, ಈ ಹಿಂದೆಯೂ ಸಿನಿಮಾದಲ್ಲಿ ನಟಿಸುವಂತೆ ಆಫರ್ ಬಂದಿತ್ತು. ಆಗ ನಾನಿನ್ನೂ ಓದುತ್ತಿದ್ದೆ. ಹಾಗಾಗಿ ಒಪ್ಪಿಕೊಳ್ಳಲಿಲ್ಲ. ಈಗ ಒಪ್ಪಿಕೊಂಡಿದ್ದೇನೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ನನ್ನ ವೃತ್ತಿ ಬದುಕಿಗೆ ಒಳ್ಳೆಯ ವೇದಿಕೆಯನ್ನು ಒದಗಿಸಲಿದೆ ಎಂದಿದ್ದಾರೆ.

    ಸೈಕೋಥ್ರಿಲ್ಲರ್ ಕಥಾಹಂದರ ಹೊಂದಿರುವ ಆ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ (Puneeth Srinivas) ಅವರು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇವರೇ ದಂಪತಿಗೆ ಕತೆ ಒಪ್ಪಿಸಿ ಚಿತ್ರ ಮಾಡಲು ಮುಂದಾಗಿದ್ದಾರೆ.

    ಪುನೀತ್ ಶ್ರೀನಿವಾಸ್ ಕನ್ನಡ  ಚಿತ್ರರಂಗಕ್ಕೆ ಹೊಸಬರೇನಲ್ಲ, ಶಿವಣ್ಣ, ಸುದೀಪ್ ರಂಥ  ಸ್ಟಾರ್ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ  ನಂದಕಿಶೋರ್ ಅವರಬಳಿ ಅಧ್ಯಕ್ಷದಿಂದ ಟಗರು ಚಿತ್ರದವರೆಗೆ (ತೆಲುಗು ಸಿನಿಮಾ ಸೇರಿ) ಸುಮಾರು  12 ವರ್ಷಗಳ ಕಾಲ ಕೆಲಸ ಮಾಡಿ ನಿರ್ದೇಶನದ ಪಾಠ ಕಲಿತು ಇದೀಗ ಮೊದಲಬಾರಿಗೆ  ನಿರ್ದೇಶನಕ್ಕಿಳಿಯುತ್ತಿದ್ದಾರೆ.

    ಅವರು ತಮ್ಮ  ಪ್ರಥಮ ಪ್ರಯತ್ನದಲ್ಲೇ ವಿಭಿನ್ನ ಕಾನ್ಸೆಪ್ಟ್ ಮೂಲಕ ತಮ್ಮ ಹೊಸ ಜರ್ನಿಯನ್ನು  ಆರಂಭಿಸುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರಕ್ಕೆ  ಶ್ರೀ ಚೌಡೇಶ್ವರಿ ಸಿನಿ ಕ್ರಿಯೇಶನ್ಸ್ ಮೂಲಕ ಎಲ್.ಮೋಹನ್ ಕುಮಾರ್ ಅವರು ದೊಡ್ಡ ಮಟ್ಟದ ಬಂಡವಾಳ ಹೂಡುತ್ತಿದ್ದಾರೆ.

     

    ಎಂ.ಎಸ್.ತ್ಯಾಗರಾಜ್ ಅವರ ಸಂಗೀತ ಸಂಯೋಜನೆ, ಕರುಣಾಕರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಮುಂದಿನ ತಿಂಗಳಿಂದ ಆರಂಭಿಸಿ ಬಹುತೇಕ ಬೆಂಗಳೂರು ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆಸುವ ಯೋಜನೆ ಚಿತ್ರತಂಡಕ್ಕಿದೆ. ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಹಾಗೂ ಮುಹೂರ್ತದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ನಿರ್ದೇಶಕ ಪುನೀತ್ ತಿಳಿಸಿದ್ದಾರೆ.

  • ತೆರೆಯ ಮೇಲೂ ಚಂದನ್ ಶೆಟ್ಟಿ ಹಾಗೂ ನಿವೇದಿತಾ

    ತೆರೆಯ ಮೇಲೂ ಚಂದನ್ ಶೆಟ್ಟಿ ಹಾಗೂ ನಿವೇದಿತಾ

    ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ (Niveditha Gowda) ದಂಪತಿ ಇದೇ ಮೊದಲಬಾರಿಗೆ ಬೆಳ್ಳಿತೆರೆಯ ಮೇಲೂ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.  ಸೈಕೋಥ್ರಿಲ್ಲರ್ ಕಥಾಹಂದರ ಹೊಂದಿರುವ ಆ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ (Puneeth Srinivas) ಅವರು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

    ಪುನೀತ್ ಶ್ರೀನಿವಾಸ್ ಕನ್ನಡ  ಚಿತ್ರರಂಗಕ್ಕೆ ಹೊಸಬರೇನಲ್ಲ, ಶಿವಣ್ಣ, ಸುದೀಪ್ ರಂಥ  ಸ್ಟಾರ್ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ  ನಂದಕಿಶೋರ್ ಅವರಬಳಿ ಅಧ್ಯಕ್ಷದಿಂದ ಟಗರು ಚಿತ್ರದವರೆಗೆ (ತೆಲುಗು ಸಿನಿಮಾ ಸೇರಿ) ಸುಮಾರು  12 ವರ್ಷಗಳ ಕಾಲ ಕೆಲಸ ಮಾಡಿ ನಿರ್ದೇಶನದ ಪಾಠ ಕಲಿತು ಇದೀಗ ಮೊದಲಬಾರಿಗೆ  ನಿರ್ದೇಶನಕ್ಕಿಳಿಯುತ್ತಿದ್ದಾರೆ.

    ಅವರು ತಮ್ಮ  ಪ್ರಥಮ ಪ್ರಯತ್ನದಲ್ಲೇ ವಿಭಿನ್ನ ಕಾನ್ಸೆಪ್ಟ್ ಮೂಲಕ ತಮ್ಮ ಹೊಸ ಜರ್ನಿಯನ್ನು  ಆರಂಭಿಸುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರಕ್ಕೆ  ಶ್ರೀ ಚೌಡೇಶ್ಬರಿ ಸಿನಿ ಕ್ರಿಯೇಶನ್ಸ್ ಮೂಲಕ ಎಲ್.ಮೋಹನ್ ಕುಮಾರ್ ಅವರು ದೊಡ್ಡ ಮಟ್ಟದ ಬಂಡವಾಳ ಹೂಡುತ್ತಿದ್ದಾರೆ.

    ಎಂ.ಎಸ್.ತ್ಯಾಗರಾಜ್ ಅವರ ಸಂಗೀತ ಸಂಯೋಜನೆ, ಕರುಣಾಕರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಮುಂದಿನ ತಿಂಗಳಿಂದ ಆರಂಭಿಸಿ  ಬಹುತೇಕ ಬೆಂಗಳೂರು ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆಸುವ ಯೋಜನೆ ಚಿತ್ರತಂಡಕ್ಕಿದೆ. ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಹಾಗೂ ಮಹೂರ್ತದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ನಿರ್ದೇಶಕ ಪುನೀತ್ ತಿಳಿಸಿದ್ದಾರೆ.

  • Bigg Boss Kannada10 : ಬಿಗ್ ಬಾಸ್ ಶುರುವಾಗುವ ಮುನ್ನವೇ ಶಾಕ್ ಕೊಟ್ಟ ಕಿಚ್ಚ ಸುದೀಪ್

    Bigg Boss Kannada10 : ಬಿಗ್ ಬಾಸ್ ಶುರುವಾಗುವ ಮುನ್ನವೇ ಶಾಕ್ ಕೊಟ್ಟ ಕಿಚ್ಚ ಸುದೀಪ್

    ಇಂದಿನಿಂದ ಬಿಗ್ ಬಾಸ್ ಸೀಸನ್ 10 (Bigg Boss Kannada) ಶುರುವಾಗಿದೆ. ಬಿಗ್ ಬಾಸ್ ಮನೆಯನ್ನು ಪರಿಚಯಿಸುವ ಮೂಲಕ ಸುದೀಪ್ (Sudeep) ಈ ಸೀಸನ್ ಅನ್ನು ಶುರು ಮಾಡಿದರು. ಈ ಮನೆಯಲ್ಲಿ ಚಂದನ್ ಶೆಟ್ಟಿ ಅವರು ನೃತ್ಯ ಮಾಡಿ, ಈ ಬಾರಿ ಸ್ಪರ್ಧೆಗಳು ಯಾರೆಲ್ಲ ಇರಲಿದ್ದಾರೆ ಎಂದು ಪ್ರಶ್ನೆ ಮಾಡಿದರು. ಆದರೆ, ಸುದೀಪ್ ಅಸಲಿ ಆಟ ಬೇರೆನೇ ಇದೆ ಎಂದು ಹೇಳುವ ಮೂಲಕ ಕಲರ್ ಫುಲ್ ವೇದಿಕೆಗೆ ಬಂದರು. ಆದರೆ, ಈ ಬಾರಿ ಸ್ಪರ್ಧಿಗಳಿಗೆ ಮೊದಲ ಬಾರಿಗೆ ಶಾಕ್ ನೀಡಿದರು.

    ಪ್ರತಿ ಬಾರಿಯೂ ವಾಹಿನಿಯು ಆಯ್ಕೆ ಮಾಡಿದ ಸ್ಪರ್ಧಿಗಳನ್ನು ವೇದಿಕೆಯ ಮೇಲೆ ಕರೆಯಿಸಿಕೊಂಡು ಅವರೊಂದಿಗೆ ಮಾತುಕತೆಯಾಡಿ, ಆನಂತರ ದೊಡ್ಮನೆ ಒಳಗೆ ಕಳುಹಿಸಿ ಕೊಡುವುದು ವಾಡಿಕೆಯಾಗಿತ್ತು. ಆದರೆ, ಈ ಬಾರಿ ವಿಭಿನ್ನ ರೀತಿಯಲ್ಲಿ ಸ್ಪರ್ಧಿಗಳನ್ನು ಕಳುಹಿಸಿಕೊಡುವ ಕುರಿತು ಮಾತನಾಡಿದರು ಸುದೀಪ್. ಈ ಮೂಲಕ ಸ್ಪರ್ಧಿಗಳಿಗೆ ಶಾಕ್ ನೀಡಿದರು ಕಿಚ್ಚ ಸುದೀಪ್. ಇದನ್ನೂ ಓದಿ:‘ಜವಾನ್’ ಕಲೆಕ್ಷನ್ 1103.27 ಕೋಟಿ ರೂಪಾಯಿ: ಅಧಿಕೃತ ಘೋಷಣೆ

    ಹಿಂದಿನ ಸೀಸನ್ ಗಳಲ್ಲಿ ವಿನ್ ಆದಂತಹ ನಟಿ ಶ್ರುತಿ (Shruti), ಪ್ರಥಮ್ (Pratham) , ಚಂದನ್ ಶೆಟ್ಟಿ (Chandan Shetty) ಮತ್ತು ಮಂಜು ಪಾವಡ (Manju Pavagad)ಈ ನಾಲ್ವರನ್ನು ವೇದಿಕೆಯ ಮೇಲೆ ಕರೆದು, ವೇದಿಕೆಗೆ ಬರುವ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಹೋಗಬೇಕೋ ಅಥವಾ ಬೇಡವೋ ಎಂದು ವೋಟು ಮಾಡಲು ತಿಳಿಸಿದರು. ಈ ನಾಲ್ವರು ವೋಟ್ ಮಾಡಿದ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಹೋಗುತ್ತಾರೆ ಎಂದು ಸುದೀಪ್ ಪ್ರಕಟಿಸಿ ಶಾಕ್ ನೀಡಿದ್ದಾರೆ.

     

    ಸದ್ಯ ಈ ನಾಲ್ವರು ನಿರ್ಣಾಕರ ಸ್ಥಾನದಲ್ಲಿ ಕುಳಿತುಕೊಂಡು ಸ್ಪರ್ಧಿಗಳನ್ನು ಎದುರು ನೋಡುತ್ತಿದ್ದಾರೆ. ಯಾರು ಆಯ್ಕೆ ಆಗುತ್ತಾರೆ, ಯಾರು ಮನೆ ಹೊರಗೆ ಹೋಗುತ್ತಾರೆ ಎನ್ನುವುದು ಸದ್ಯಕ್ಕೆ ಸಸ್ಪನ್ಸ್. ಆದರೂ, ಕೆಲವರ ಹೆಸರನ್ನು ಪ್ರೋಮೋ ಮೂಲಕ ಬಿಗ್ ಬಾಸ್ ಹೊರಗೆ ಹಾಕಿದೆ. ಈ ಬಾರಿ JioCinema 24hr ನೇರ ಪ್ರಸಾರಕ್ಕೂ ವ್ಯವಸ್ಥೆ ಮಾಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದನ್ ಶೆಟ್ಟಿ-ನಿವೇದಿತಾ  ಜೋಡಿಯ ಹೊಸ ಹೆಜ್ಜೆ ‘ನಾದ ಯೋಗಿ’

    ಚಂದನ್ ಶೆಟ್ಟಿ-ನಿವೇದಿತಾ ಜೋಡಿಯ ಹೊಸ ಹೆಜ್ಜೆ ‘ನಾದ ಯೋಗಿ’

    ಸಂಗೀತ ನಿರ್ದೇಶಕ, ಗಾಯಕ ಹಾಗೂ ಈಗ ನಾಯಕನಾಗೂ ಚಂದನ್ ಶೆಟ್ಟಿ (Chandan Shetty) ಜನಪ್ರಿಯ. ಕಳೆದ ಎಂಟು ವರ್ಷಗಳ ಹಿಂದೆ ಚಂದನ್ ಶೆಟ್ಟಿ ತಮ್ಮ ಹುಟ್ಟುಹಬ್ಬದ ದಿನ ತಮ್ಮ ಮೊದಲ ಹಾಡು ಬಿಡುಗಡೆ ಮಾಡಿದ್ದರು‌. ಈ ಬಾರಿಯ ಹುಟ್ಟುಹಬ್ಬದಂದು ನಾದಯೋಗಿ (Nada Yogi) ಎಂಬ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ.

    ಈ ನೂತನ ಯೂಟ್ಯೂಬ್ ಚಾನಲ್ ಗೆ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ (Nivedita Gowda) ಚಾಲನೆ ನೀಡಿದರು.  ಗಣಪತಿ ಹಬ್ಬದ ಸಂದರ್ಭದಲ್ಲಿ ಗಣಪತಿಯನ್ನು ಕುರಿತಾದ ‘ಗಂ ಗಣಪತಿ’ ಹಾಡಿನೊಂದಿಗೆ ಚಾನಲ್ ಆರಂಭವಾಗಿದೆ. ಈ ಕುರಿತು ಚಂದನ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    ಕಳೆದ ಎಂಟು ವರ್ಷಗಳ ಹಿಂದೆ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ  ಮೊದಲ ಹಾಡು ಬಿಡುಗಡೆಯಾಗಿತ್ತು. ಈಗ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದಾರೆ. ನಾದ ಯೋಗಿ ಎಂಬ ಹೊಸ ಯೂಟ್ಯೂಬ್ ಚಾನಲ್ ಅನ್ನು ಜೀರೋ ಸಬ್ ಸ್ಕ್ರೈಬರ್ ನೊಂದಿಗೆ ಆರಂಭಿಸಿದ್ದಾರೆ. ಈ ಚಾನಲ್ ಬರೀ ಭಕ್ತಿಗೀತೆಗಳಿಗೆ ಮೀಸಲು ಆಗಿರಲಿದೆ. ಇದನ್ನೂ ಓದಿ: ಗಣೇಶ ಹಬ್ಬಕ್ಕೆ’ಕೆಂದಾವರೆ’ ಫಸ್ಟ್ ಲುಕ್ ರಿಲೀಸ್- ಹೊಸಬರ ತಂಡಕ್ಕೆ ಅಶ್ವಿನಿ ಪುನೀತ್ ಸಾಥ್

    ಈಗಿನ ಯುವಜನತೆಗೆ ಆಧ್ಯಾತ್ಮಿಕತೆಯನ್ನು ಪರಿಚಯಿಸುವ ಸಲುವಾಗಿ ನಾದಯೋಗಿ ಚಾನಲ್ ಅನ್ನು ಆರಂಭಿಸಿದ್ದೇನೆ. ಇದಕ್ಕೆ ನನಗೆ ಮೈಸೂರಿನ ಅರ್ಜುನ್ ಅವದೂತರು ಪ್ರೇರಣೆ. ಇದರ ಮೊದಲ ಗೀತೆಯಾಗಿ ಗಂ ಗಣಪತಿ ಎಂಬ ಹಾಡನ್ನು ಬಿಡುಗಡೆ ಮಾಡಿದ್ದೇವೆ‌. ಮುಂದೆ ಕೂಡ ಹನುಮ, ಶಿವ ಸೇರಿದಂತೆ ಅನೇಕ ದೇವರುಗಳ ಹಾಡುಗಳನ್ನು ಬಿಡುಗಡೆ ಮಾಡುತ್ತೇವೆ‌. ಈಗ ಬಿಡುಗಡೆಯಾಗಿರುವ ಗಣಪತಿ ಹಾಡಿನಲ್ಲಿ ನಲವತ್ತೆಂಟು ಗಣಪತಿ ನಾಮಗಳಿದೆ. ನನ್ನ ತಮ್ಮ ಪುನೀತ್ ಅದ್ಭುತವಾಗಿ ಈ ಹಾಡಿನ ವಿಡಿಯೋ ಮಾಡಿದ್ದಾನೆ. ನಾನೇ ಹಾಡಿದ್ದೇ‌ನೆ. ಮುಂದೆ ನಾದ ಯೋಗಿಯಲ್ಲಿ ಸಾಕಷ್ಟು ಪ್ರತಿಭೆಗಳಿಗೆ ಅವಕಾಶ ನೀಡಲಾಗುವುದು ಎಂದು ಚಂದನ್ ಶೆಟ್ಟಿ ತಿಳಿಸಿದರು‌.

    ಚಂದನ್ ಶೆಟ್ಟಿ ಅವರ ನೂತನ ಪ್ರಯತ್ನಕ್ಕೆ  ಶುಭಕೋರಲು ನಿರ್ಮಾಪಕರಾದ ಸಂಜಯ್ ಗೌಡ, ಗೋವಿಂದರಾಜು, ನವರಸನ್ ಮುಂತಾದ ಗಣ್ಯರು ಆಗಮಿಸಿ ಶುಭ ಕೋರಿದರು. ಪುನೀತ್ ಶೆಟ್ಟಿ ಅವರು ಹಾಡಿನ ಬಗ್ಗೆ ಮಾತನಾಡಿದರು. ಸಮಾರಂಭದ ನಂತರ ಕೇಕ್ ಕಟ್ ಮಾಡುವ ಮೂಲಕ ಚಂದನ್ ಶೆಟ್ಟಿ ಅವರ ಹುಟ್ಟುಹಬ್ಬ ಆಚರಿಸಲಾಯಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟ್ರೆಂಡಿಂಗ್ ಬಗ್ಗೆಯೇ ಹಾಡು ಮಾಡಿದ ‘ಸೂತ್ರಧಾರಿ’ ಚಂದನ್ ಶೆಟ್ಟಿ

    ಟ್ರೆಂಡಿಂಗ್ ಬಗ್ಗೆಯೇ ಹಾಡು ಮಾಡಿದ ‘ಸೂತ್ರಧಾರಿ’ ಚಂದನ್ ಶೆಟ್ಟಿ

    ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸುತ್ತಿರುವ ‘ಸೂತ್ರಧಾರಿ’ ಚಿತ್ರದ  ‘ಡ್ಯಾಶ್’ ಸಾಂಗ್ ಈಗಾಗಲೇ ಹದಿನೇಳು ಮಿಲಿಯನ್ ವೀಕ್ಷಣೆಯಾಗಿ ಜನರ ಮನ ಗೆದ್ದಿದೆ. ಈಗ ಸೂತ್ರಧಾರಿ (Sutradhari) ಚಿತ್ರಕ್ಕಾಗಿ ವಿಜಯ್ ಈಶ್ವರ್ ಬರೆದಿರುವ ‘ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ‌. ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ನಿರ್ದೇಶಿಸಿರುವ ಈ ಹಾಡಿಗೆ ಚಂದನ್ ಶೆಟ್ಟಿ ಹಾಗೂ ಅಪೂರ್ವ ಹೆಜ್ಜೆ ಹಾಕಿದ್ದಾರೆ. ಈ ಹಾಡಿನ ಬಗ್ಗೆ ಹಾಡು ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

    ಕಳೆದ ಡಿಸೆಂಬರ್ ನಲ್ಲಿ ಬಿಡುಗಡೆಯಾದ ನಮ್ಮ ಚಿತ್ರದ ‘ಡ್ಯಾಶ್ ಸಾಂಗ್ ಭರ್ಜರಿ ಯಶಸ್ಸು ಕಂಡಿದೆ. ಈಗ ಈ ಹಾಡು ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್ ವೀಕ್ಷಣೆಯಾಗಿದೆ. ಇಂತಹ ಜನಪ್ರಿಯ ಹಾಡು ಬರೆದುಕೊಟ್ಟ ವಿಜಯ್ ಈಶ್ವರ್ (Vijay Eshwar) ಅವರಿಗೆ, ಸಂಗೀತ ನೀಡಿ, ಹಾಡಿ, ಅಭಿನಯಿಸಿರುವ ಚಂದನ್ ಶೆಟ್ಟಿ ಸೇರಿದಂತೆ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ. ಇನ್ನೊಂದು ಹಾಡು ಮುಗಿದರೆ, ಚಿತ್ರೀಕರಣ ಮುಕ್ತಾಯವಾಗುತ್ತದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುತ್ತೇನೆ ಎಂದು ನಿರ್ಮಾಪಕ ನವರಸನ್ (Navarasan) ತಿಳಿಸಿದರು‌.

    ಸೂತ್ರಧಾರಿ ಸಿನಿಮಾದ ಡ್ಯಾಶ್ ಹಾಡು ಭರ್ಜರಿ ಹಿಟ್ ಆಗಿರುವ ಹಿನ್ನೆಲೆಯಲ್ಲಿ ಅದನ್ನು ಮೀರಿಸುವ ಮತ್ತೊಂದು ಹಾಡು ಕೊಡುವ ಜವಾಬ್ದಾರಿ ನನ್ನಗಿತ್ತು. ಈಗ ವಿಜಯ್ ಈಶ್ವರ್ ಬರೆದಿರುವ ‘ಏನ್ ಮಾಡ್ಬೇಕು’ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಈ ಹಾಡು ಕೂಡ ಎಲ್ಲರ ಮನ ಗೆಲ್ಲುತ್ತದೆ ಎನ್ನುತ್ತಾರೆ ಚಿತ್ರದ ನಾಯಕ, ಸಂಗೀತ ನಿರ್ದೇಶಕ ಹಾಗೂ ಗಾಯಕ ಚಂದನ್ ಶೆಟ್ಟಿ.

    ಸೂತ್ರಧಾರಿ ಬಗ್ಗೆ ಸಂಪೂರ್ಣ ವಿವರವನ್ನು ನಿರ್ದೇಶಕ ಕಿರಣ್ ಕುಮಾರ್ ನೀಡಿದರು. ನಾಯಕಿ ಅಪೂರ್ವ, ನಟರಾದ ಪ್ರಶಾಂತ್ ನಟನ, ಗಿರೀಶ್, ಗಣೇಶ್ ನಾರಾಯಣ್ ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೇದಿತಾ ಚಂದನ್ ಶೆಟ್ಟಿ, ನಿರ್ಮಾಪಕರಾದ ಸಂಜಯ್ ಗೌಡ, ಚೇತನ್ ಗೌಡ, ರಾಜೇಶ್, ಗೋವಿಂದರಾಜು ಹಾಗೂ ನಿರ್ದೇಶಕ ಮಹೇಶ್ ಕುಮಾರ್ ಸೂತ್ರಧಾರಿ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದನ್ ಶೆಟ್ಟಿ ನಟನೆಯ ಚಿತ್ರಕ್ಕೆ ವಿಭಿನ್ನ ಟೈಟಲ್ : ವಿದ್ಯಾರ್ಥಿಗಳಿಂದ ಅನಾವರಣ

    ಚಂದನ್ ಶೆಟ್ಟಿ ನಟನೆಯ ಚಿತ್ರಕ್ಕೆ ವಿಭಿನ್ನ ಟೈಟಲ್ : ವಿದ್ಯಾರ್ಥಿಗಳಿಂದ ಅನಾವರಣ

    ಗಾಯಕ ಚಂದನ್ ಶೆಟ್ಟಿ (Chandan Shetty) ಸಿನಿಮಾ ನಾಯಕನಾಗಿ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಇಂಥದ್ದೊಂದು ಸುಳಿವನ್ನು ಕೆಲ ದಿನಗಳ ಹಿಂದೆ ಚಿತ್ರತಂಡವೇ ಬಿಟ್ಟುಕೊಟ್ಟಿತ್ತು. ಒಂದು ಪ್ರೋಮೋ ಮೂಲಕ ಕುತೂಹಲವನ್ನು ಕಾಯ್ದಿಟ್ಟುಕೊಳ್ಳುವ ಪ್ರಯತ್ನವನ್ನೂ ಮಾಡಲಾಗಿತ್ತು. ಕಡೆಗೂ ಆ ಸಿನಿಮಾ ಟೈಟಲ್ ಬಿಡುಗಡೆಗೊಂಡಿದೆ. ಇದೊಂದು ಕಾಲೇಜಿನ ಸುತ್ತ ಘಟಿಸುವ ಸಿನಿಮಾವಾಗಿದ್ದರಿಂದ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyere ) ಎಂಬ ಶಿರ್ಷಿಕೆಯನ್ನಿಡಲಾಗಿದೆ (Title). ಅದನ್ನು ವಿದ್ಯಾರ್ಥಿಗಳೇ ಬಿಡುಗಡೆಗೊಳಿಸಿ ಸಂಭ್ರಮಿಸಿದ್ದಾರೆ.

    ಇದು ಯುವ ನಿರ್ದೇಶಕ ಅರುಣ್ ಅಮುಕ್ತ (Arun Amukta) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚಿತ್ರ. ಈ ಹಿಂದೆ ಶ್ರೀಮುರುಳಿ ನಾಯಕನಾಗಿ ನಟಿಸಿದ್ದ `ಲೂಸ್ ಗಳು’ ಎಂಬ ಚಿತ್ರವನ್ನು ನಿರ್ದೇಶಿಸಿದ್ದವರು ಅರುಣ್. ಅವರೀಗ ಈ ದಿನಮಾನದ ಟ್ರೆಂಡಿಗೆ ತಕ್ಕಂತೆ, ಹೊಸಾ ಬಗೆಯ ಕಥಾನಕದೊಂದಿಗೆ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರವನ್ನು ರೂಪಿಸಲು ಮುಂದಾಗಿದ್ದಾರಂತೆ. ಈ ಶೀರ್ಷಿಕೆಯ ಅನಾವರಣದ ವಿಚಾರದಲ್ಲಿಯೇ ಚಿತ್ರತಂಡ ಒಂದಷ್ಟು ಕ್ರಿಯಾಶೀಲ ನಡೆಯನ್ನು ಅನುಸರಿಸಿದೆ. ರಾಜ್ಯದ ನಾನಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸ್ವತಃ ಈ ಶೀರ್ಷಿಕೆ ಬಿಡುಗಡೆಗೊಳಿಸಿ, ಸಾಮಾಜಿಕ ಜಾಲತಾಣಗಳ ಮೂಲಕ ಅದನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

    ಕಿರಿಕ್ ಪಾರ್ಟಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಂತಹ ಚಿತ್ರಗಳು ದೊಡ್ಡ ಪ್ರಮಾಣದಲ್ಲಿಯೇ ಗೆಲುವು ದಾಖಲಿಸಿದ್ದವು. ಆ ನಂತರ ಒಂದಷ್ಟು ವರ್ಷಗಳ ಕಾಲ ಆ ಶೈಲಿಯ ಸಿನಿಮಾಗಳು ಬಂದಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ, ಡೇರ್ ಡೆವಿಲ್ ಮುಸ್ತಫಾದಂತಹ ಕಾಲೇಜು ಕೇಂದ್ರಿತ ಕಥನಗಳು ಸೂಪರ್ ಹಿಟ್ ಆಗಿವೆ. ಈ ಮೂಲಕ ಆ ಬಗೆಯ ಸಿನಿಮಾಗಳ ಕೊರತೆ ಒಂದು ಮಟ್ಟಿಗೆ ನೀಗಿದಂತಾಗಿದೆ. ಈ ಸಾಲಿನಲ್ಲಿ ದೊಡ್ಡ ಗೆಲುವನ್ನು ತಮ್ಮದಾಗಿಸಿಕೊಳ್ಳುವ ಕನಸು, ಭರವಸೆಯೊಂದಿಗೆ, ಅರುಣ್ ಅಮುಕ್ತ ಸಾರಥ್ಯದಲ್ಲಿ ಈ ತಂಡ ಅಖಾಡಕ್ಕಿಳಿದಿದೆ. ಅಂದಹಾಗೆ, ಈ ಬಗೆಯ ಸಿನಿಮಾಗಳ ಸಾಲಿನಲ್ಲಿ ಭಿನ್ನವಾಗಿ ನಿಲ್ಲುವಂಥಾ ಅನೇಕ ಅಂಶಗಳು ಈ ಚಿತ್ರದಲ್ಲಿರಲಿವೆ ಎಂಬುದು ಚಿತ್ರತಂಡದ ಮಾತು.

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರವನ್ನು ಭಿನ್ನವಾಗಿ ಕಟ್ಟಿಕೊಡಲು ಚಿತ್ರತಂಡ ತಯಾರಾಗಿದೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ.

     

    ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಇನ್ನುಳಿದ ಒಂದಷ್ಟು ಮಹತ್ವದ ಸುದ್ದಿಗಳು ಹಂತ ಹಂತವಾಗಿ ಪ್ರೇಕ್ಷಕರನ್ನು ತಲುಪಿಕೊಳ್ಳಲಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದನ್ ಶೆಟ್ಟಿ ಹೊಸ ಚಿತ್ರದ ಟೈಟಲ್ ಅನಾವರಣ: ವರಮಹಾಲಕ್ಷ್ಮಿ ಹಬ್ಬಕ್ಕೆ ಸರ್ಪ್ರೈಸ್

    ಚಂದನ್ ಶೆಟ್ಟಿ ಹೊಸ ಚಿತ್ರದ ಟೈಟಲ್ ಅನಾವರಣ: ವರಮಹಾಲಕ್ಷ್ಮಿ ಹಬ್ಬಕ್ಕೆ ಸರ್ಪ್ರೈಸ್

    ಗಾಯಕನಾಗಿ ಪ್ರವರ್ಧಮಾನಕ್ಕೆ ಬಂದು, ಆ ವಲಯದಲ್ಲಿಯೇ ಒಂದಷ್ಟು ಖ್ಯಾತಿ ಪಡೆದಿರುವವರು ಚಂದನ್ ಶೆಟ್ಟಿ (Chandan Shetty). ತಮ್ಮ ವೃತ್ತಿಯಲ್ಲಿ ಬಹು ಬೇಡಿಕೆ ಚಾಲ್ತಿಯಲ್ಲಿರುವಾಗಲೇ ಚಂದನ್ ನಟನೆಯತ್ತ ಮುಖ ಮಾಡಿದ್ದಾರೆ. ಅವರು ನಾಯಕ ನಟನಾಗಿ ನಟಿಸಿರುವ ಒಂದೆರಡು ಸಿನಿಮಾಗಳು ಅಂತಿಮ ಘಟ್ಟದಲ್ಲಿರುವಾಗಲೇ ಚಂದನ್ ಮತ್ತೊಂದು ಸಿನಿಮಾಗೆ (New Movie) ಸಹಿ ಮಾಡಿದ್ದಾರೆ. ಯುವ ನಿರ್ದೇಶಕ ಅರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬರಲಿರೋ ಈ ಚಿತ್ರದ ಟೈಟಲ್ ಇದೇ 25ರಂದು ಅಂದರೆ, ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಅನಾವರಣಗೊಳ್ಳಲಿದೆ.

    ಇದೇ ಹದಿನೆಂಟನೇ ತಾರೀಕಿನಂದು ಚಿತ್ರತಂಡ ಟೈಟಲ್ ಪ್ರೋಮೋ ಒಂದನ್ನು ಬಿಡುಗಡೆಗೊಳಿಸಿದೆ. ಅದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆಗಳೂ ಸಿಕ್ಕಿವೆ. ಈ ಮೂಲಕವೇ ಸದರಿ ಚಿತ್ರದ ಶೀರ್ಷಿಕೆ ಏನಿರಬಹುದೆಂಬ ಕುತೂಹಲವೂ ಮೂಡಿದೆ. ಒಂದು ಪ್ರತಿಭಾನ್ವಿತ ಯುವ ತಂಡ, ಒಂದೊಳ್ಳೆ ಕಥೆಯ ಮೂಲಕ ಈ ಸಿನಿಮಾದೊಂದಿಗೆ ಚಂದನ್ ಪ್ರೇಕ್ಷಕರ ಮುಂದೆ ಬರುವ ಲಕ್ಷಣಗಳೂ ದಟ್ಟವಾಗಿವೆ. ಒಟ್ಟಾರೆ ಸಿನಿಮಾ ಹೇಗಿರಬಹುದೆಂಬ ಸಣ್ಣ ಸೂಚನೆ ಈ ಟೈಟಲ್ ಜೊತೆಗೇ ಅನಾವರಣಗೊಳ್ಳುವ ನಿರೀಕ್ಷೆಗಳಿವೆ. ಇದನ್ನೂ ಓದಿ:ಉರ್ಫಿಗೆ ಕೊಲೆ ಬೆದರಿಕೆ: ವ್ಯಕ್ತಿಯ ಹೆಸರು ಬಹಿರಂಗ ಪಡಿಸಿದ ನಟಿ

    ಈ ಹಿಂದೆ ಶ್ರೀಮುರಳಿ ನಾಯಕನಾಗಿ ನಟಿಸಿದ್ದ `ಲೂಸ್ ಗಳು’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದವರು ಅರುಣ್ ಅಮುಕ್ತ (Arun Mukta). ಮೂಲತಃ ಆಡ್ ಫಿಲಂ ಮೇಕರ್ ಆಗಿರುವ ಅರುಣ್, ಚಿತ್ರರಂಗದಲ್ಲಿ ಹತ್ತಾರು ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದಾರೆ. ಅಷ್ಟೆಲ್ಲ ಅನುಭವಗಳನ್ನು ಒಗ್ಗೂಡಿಸಿಕೊಂಡು ಒಂದೊಳ್ಳೆ ಕಥೆಯೊಂದಿಗೆ ಈ ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿದ್ದಾರಂತೆ. ಸದ್ಯದ ಮಟ್ಟಿಗೆ ಇದೊಂದು ಟೀನೇಜ್ ಡ್ರಾಮಾ ಆಗಿರಲಿದೆ ಎಂಬ ಸಣ್ಣ ಸುಳಿವು ಚಿತ್ರತಂಡದ ಕಡೆಯಿಂದ ಸಿಕ್ಕಿದೆಯಷ್ಟೇ.

     

    ಈ ಚಿತ್ರದ ತಾರಾಗಣದಲ್ಲಿ ಚಂದನ್ ಶೆಟ್ಟಿ ಜೊತೆಗೆ ಅಮರ್ (Amar), ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ತಾಂತ್ರಿಕ ವರ್ಗವೂ ಸೇರಿದಂತೆ, ಬಹುಮುಖ್ಯವಾದ ಇನ್ನೊಂದಷ್ಟು ವಿಚಾರಗಳನ್ನು ಹಂತ ಹಂತವಾಗಿ ಪ್ರೇಕ್ಷಕರ ಮುಂದಿಡಲು ಚಿತ್ರತಂಡ ತೀರ್ಮಾನಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]