Tag: Chandanawana

  • ‘ದಸರಾ’ ಟೈಟಲ್ ವಿವಾದ: ತೆಲುಗು ಚಿತ್ರದ ವಿರುದ್ಧ ಚಲನಚಿತ್ರ ಮಂಡಳಿ ಮೆಟ್ಟಿಲೇರಿದ ಶರ್ಮಿಳಾ ಮಾಂಡ್ರೆ

    ‘ದಸರಾ’ ಟೈಟಲ್ ವಿವಾದ: ತೆಲುಗು ಚಿತ್ರದ ವಿರುದ್ಧ ಚಲನಚಿತ್ರ ಮಂಡಳಿ ಮೆಟ್ಟಿಲೇರಿದ ಶರ್ಮಿಳಾ ಮಾಂಡ್ರೆ

    ಚಂದನವನದ ನಟಿ, ನಿರ್ಮಾಪಕಿ ಶರ್ಮಿಳಾ ಮಾಂಡ್ರೆ ತಮ್ಮ ಪ್ರೊಡಕ್ಷನ್ ಹೌಸ್‍ನಲ್ಲಿ ನಿರ್ಮಾಣ ಮಾಡುತ್ತಿರುವ ‘ದಸರಾ’ ಸಿನಿಮಾ ಟೈಟಲ್‍ನನ್ನು ತೆಲುಗು ಸಿನಿಮಾ ಸಹ ಇಟ್ಟುಕೊಂಡಿದೆ. ಇದರಿಂದ ನಮ್ಮ ಸಿನಿಮಾಗೆ ತೊಂದರೆಯಾಗುವುದೆಂದು ಬೇಸರಗೊಂಡ ಚಿತ್ರತಂಡ ನ್ಯಾಯಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲೇರಿದ್ದಾರೆ.

    ‘ದಸರಾ’ ಸಿನಿಮಾ ಮುಖ್ಯಪಾತ್ರದಲ್ಲಿ ಸತೀಶ್ ನೀನಾಸಂ ಕಾಣಿಸಿಕೊಳ್ಳುತ್ತಿದ್ದು, ಈ ಸಿನಿಮಾದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಪ್ರಸ್ತುತ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ನೆಡೆಯುತ್ತಿದೆ. ಈ ವೇಳೆ ತೆಲುಗು ಸಿನಿಮಾ ‘ದಸರ’ ಹೆಸರಿನಲ್ಲಿ ಕಳೆದ ವಾರವಷ್ಟೆ ಸಿನಿಮಾ ಪೋಸ್ಟರ್ ರಿಲೀಸ್ ಮಾಡಿತ್ತು. ತನ್ನ ಮೊದಲ ನಿರ್ಮಾಣದಲ್ಲಿ ಈ ರೀತಿ ಆಗುತ್ತಿರುವುದಕ್ಕೆ ಶರ್ಮಿಳಾ ಬೇಸರಗೊಂಡಿದ್ದು, ನ್ಯಾಯಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕನ್ನಡದ ‘ದಸರಾ’ ವರ್ಸಸ್ ತೆಲುಗಿನ ‘ದಸರಾ’: ಯಾರಿಗೆ ಸಿಗತ್ತೆ ದಸರಾ ಟೈಟಲ್?

    ಈ ಮನವಿ ಪತ್ರದಲ್ಲಿ ಶರ್ಮಿಳಾ, ನಾನು ನನ್ನ ನಿರ್ಮಾಣದ ಮೊದಲ ಸಿನಿಮಾ ‘ದಸರ’ ಟೈಟಲ್ 2020 ರ ಸೆಪ್ಟೆಂಬರ್ ತಿಂಗಳಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೊಂದಣಿ ಮಾಡಿಸಿದ್ದೆ. ಅದಕ್ಕೆ ಸಂಬಂಧಿಸಿದ ದಾಖಲೆಗಳು ನನ್ನ ಬಳಿ ಇದೆ. ಈಗ ಸಿನಿಮಾದ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ನಡುವೆ ಸುಧಾಕರ್ ಚೆರುಕುರಿ ಎಸ್‍ಎಲ್‍ವಿ ಬ್ಯಾನರ್ ಅಡಿಯಲ್ಲಿ ‘ದಸರ’ ಹೆಸರಿನ ಸಿನಿಮಾದ ಟೀಸರ್ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಇದರಿಂದ ನಮಗೆ ಸಮಸ್ಯೆ ಆಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    ನಮ್ಮ ಸಿನಿಮಾದ ಹೆಸರನ್ನು ನಾವು ಈಗಾಗಲೇ ಬಹಿರಂಗಗೊಳಿಸಿದ್ದೇವೆ. ಅದೇ ಹೆಸರಿನಿಂದ ಸಿನಿಮಾದ ಪ್ರಚಾರ ಸಹ ಮಾಡಿದ್ದೇವೆ. ಈಗ ಅದೇ ಹೆಸರಿನಲ್ಲಿ ತೆಲುಗು ನಿರ್ಮಾಪಕರು ತಮ್ಮ ಸಿನಿಮಾವನ್ನು ಕನ್ನಡ ಭಾಷೆಯಲ್ಲಿ ಬಿಡುಗಡೆ ಮಾಡಿದರೆ ನಮ್ಮ ಸಿನಿಮಾಕ್ಕೆ ಸಮಸ್ಯೆ ಆಗುತ್ತದೆ. ನಮ್ಮ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಮೇಲೆಯೂ ಹೊಡೆತ ಬೀಳುತ್ತದೆ ಎಂದು ವಿನಂತಿಸಿಕೊಂಡಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿದ ಉಪ್ಪಿ – ಫೋಟೋ ವೈರಲ್

    ತೆಲುಗಿನ ನಿರ್ಮಾಪಕರು ತಮ್ಮ ಸಿನಿಮಾದ ಹೆಸರನ್ನು ಕನಿಷ್ಟ ಪಕ್ಷ ಕನ್ನಡ ಡಬ್ಬಿಂಗ್ ವರ್ಷನ್‍ನಲ್ಲಿಯಾದರೂ ಬದಲಾಯಿಸುವಂತೆ ಸೂಚಿಸಿ ಎಂದು ಕೇಳಿಕೊಂಡಿದ್ದಾರೆ.

    ತೆಲುಗಿನ ‘ದಸರಾ’ ಸಿನಿಮಾದಲ್ಲಿ ನಟ ನಾನಿ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಸಿನಿಮಾದ ಪೋಸ್ಟರ್ ಹಾಗೂ ಟೀಸರ್ ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ಹಳ್ಳಿ ಹೈದನ ಪಾತ್ರದಲ್ಲಿ ನಾನಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾವು ತೆಲುಗು, ಕನ್ನಡ, ತಮಿಳು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

  • 36 ವರ್ಷದ ಕನಸನ್ನ ನನಸು ಮಾಡಿಕೊಂಡ ಕಿಚ್ಚ

    36 ವರ್ಷದ ಕನಸನ್ನ ನನಸು ಮಾಡಿಕೊಂಡ ಕಿಚ್ಚ

    ಬೆಂಗಳೂರು: ಚಂದನವನದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ತಮ್ಮ 36 ವರ್ಷದ ಕನಸನ್ನು ಇಂದು ನನಸು ಮಾಡಿಕೊಂಡಿದ್ದಾರೆ.

    ಎಲ್ಲರಿಗೂ ತಿಳಿದಿರುವಂತೆ ಸುದೀಪ್ ಅವರಿಗೆ ಕ್ರಿಕೆಟ್ ಎಂದರೆ ತುಂಬಾ ಇಷ್ಟ. ಅದರಲ್ಲಿಯೂ ಕ್ರಿಕೆಟ್ ನಲ್ಲಿ ಕಪಿಲ್ ದೇವ್ ಎಂದರೆ ಅವರಿಗೆ ಬಹಳ ಅಚ್ಚುಮೆಚ್ಚು ಎಂದು ಅವರೇ ಹೇಳಿಕೊಂಡಿದ್ದಾರೆ. ಈ ಬಗ್ಗೆ ಕಿಚ್ಚ ಇನ್‍ಸ್ಟಾಗ್ರಾಮ್ ನಲ್ಲಿ ಕಪಿಲ್ ಅವರ ಜೊತೆ ಫೋಟೋವನ್ನು ಕ್ಲಿಕಿಸಿಕೊಂಡು ಆ ಫೋಟೋವನ್ನು ಶೇರ್ ಮಾಡಿದ್ದು, ನಾನು ಸುಮಾರು 36 ವರ್ಷಗಳಿಂದ ಕಾಯುತ್ತಿದ್ದ ಚಿತ್ರವಿದು. ನನ್ನ ಕನಸನ್ನು ನನಸು ಮಾಡಿದ್ದಕ್ಕೆ ಧನ್ಯವಾದ ಕಪಿಲ್ ಸರ್. ನೀವು ನಮ್ರತೆಯ ಪ್ರತಿರೂಪ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ನಾನು ಅತ್ತಾಗ ಕಪಿಲ್‍ದೇವ್ ಕಣ್ಣನ್ನು ಒರೆಸಿ ಎತ್ತಿಕೊಂಡಿದ್ದರು: ಸುದೀಪ್

     

    View this post on Instagram

     

    A post shared by KicchaSudeepa (@kichchasudeepa)

    ಈ ಫೋಟೋ ನೋಡಿದ ಇವರ ಅಭಿಮಾನಿಗಳು ಸಖತ್ ಖುಷಿಯಾಗಿದ್ದು, ನೀವು ನಮ್ಮ ಹೆಮ್ಮೆ ಎಂದು ಬರೆದು ಕಾಮೆಂಟ್ ಮಾಡುತ್ತಿದ್ದಾರೆ.

    ರಣವೀರ್ ನಟನೆಯ ’86’ ಸಿನಿಮಾ ಕನ್ನಡದಲ್ಲಿ ಬಿಡುಗಡೆಯಾಗುತ್ತಿದ್ದು, ಈ ಸಿನಿಮಾವನ್ನು ಕನ್ನಡದಲ್ಲಿ ಕಿಚ್ಚ ವಿತರಿಸುತ್ತಿದ್ದಾರೆ. ಈ ಹಿನ್ನೆಲೆ ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ನಡೆಸಲಾಯಿತು. ಈ ವೇಳೆ ಕಪಿಲ್ ಕುರಿತು ಮಾತನಾಡಿದ ಸುದೀಪ್, ತುಂಬಾ ವರ್ಷಗಳ ಹಿಂದೆ ನಾನು 87-88 ರಲ್ಲಿ ವೆಸ್ಟ್ ಇಂಡಿಸ್ ಜೊತೆ ಆಡುವಾಗ ಕಪಿಲ್ ಸರ್ ನೋಡೋಕೆ ಹೋಗಿದ್ದೆ. ಅಲ್ಲಿ ಅವರ ಜೊತೆ ಫೋಟೋ ಕೇಳಿದೆ. ಆದ್ರೆ ನನ್ನ ಬ್ಯಾಡ್ ಲಕ್ ಕ್ಯಾಮೆರಾ ವರ್ಕ್ ಆಗಿಲ್ಲ. ಆಗ ನಾನು ಅಳ್ತಾ ಇದ್ದೆ. ಅವಾಗ ನನ್ನ ಕಣ್ಣನ್ನು ಒರೆಸಿ ನನ್ನನ್ನು ಎತ್ತುಕೊಂಡಿದ್ದರು. ಆದರೆ ಈಗ ಇವರ ಸಿನಿಮಾ ವಿತರಣೆ ಮಾಡುವ ಭಾಗ್ಯ ನನಗೆ ಸಿಕ್ಕಿದೆ ಎಂದು ಭಾವುಕರಾಗಿದ್ದರು.

    ನನಗೆ ಕಪಿಲ್ ತುಂಬಾ ಇಷ್ಟ. ಆ ದಿನ ನನಗೆ ತುಂಬಾ ವಿಶೇಷ, ನನಗೆ ಅವರು ಹೀರೋ ಆದವರು. ತುಂಬಾ ವರ್ಷ ಅವರ ಜೊತೆ ಫೋಟೋಗಾಗಿ ತುಂಬಾ ವೇಟ್ ಮಾಡಿದ್ದೀನಿ. ನಾನು ಪ್ರೀತಿ ಮಾಡುವ ಗೇಮ್, ಆಡೋಕೆ ಸಿಕ್ಕಿರೋ ಗೇಮ್ ಕ್ರಿಕೆಟ್. ಕನ್ನಡಕ್ಕೆ 83 ಸಿನಿಮಾ ಅರ್ಪಿಸುತ್ತಿರುವುದಕ್ಕೆ ನನಗೆ ಖುಷಿಯಾಗಿದೆ ಎಂದಿದ್ದರು. ಇದನ್ನೂ ಓದಿ: ಮತ್ತೊಮ್ಮೆ ನಾವು ಕ್ಯೂಟ್ ಜೋಡಿಗಳು ಎಂದು ತೋರಿಸಿಕೊಟ್ಟ ಯಶ್, ರಾಧಿಕಾ

    ಈ ಸುದ್ದಿಗೋಷ್ಠಿಗೆ ಕಪಿಲ್ ಅವರು ಬಂದಿದ್ದು, ಅವರ ಜೊತೆ ಫೋಟೋ ತೆಗೆಸಿಕೊಂಡು ಕಿಚ್ಚ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.

  • ಅವನು ಇನ್ನೂ ನನ್ನ ಮಡಿಲಲ್ಲಿ, ಆಲೋಚನೆಗಳಲ್ಲಿ ಶಾಶ್ವತವಾಗಿದ್ದಾನೆ: ರಾಘವೇಂದ್ರ ರಾಜ್‍ಕುಮಾರ್

    ಅವನು ಇನ್ನೂ ನನ್ನ ಮಡಿಲಲ್ಲಿ, ಆಲೋಚನೆಗಳಲ್ಲಿ ಶಾಶ್ವತವಾಗಿದ್ದಾನೆ: ರಾಘವೇಂದ್ರ ರಾಜ್‍ಕುಮಾರ್

    ಬೆಂಗಳೂರು: ಅವನು ಇನ್ನೂ ನನ್ನ ಮಡಿಲಲ್ಲಿ ಮತ್ತು ನನ್ನ ಆಲೋಚನೆಗಳಲ್ಲಿ ಶಾಶ್ವತವಾಗಿದ್ದಾನೆ ಎಂದು ತಮ್ಮನನ್ನು ನೆನೆದು ರಾಘವೇಂದ್ರ ರಾಜ್‍ಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ವಿಶೇಷ ಫೋಟೋವನ್ನು ಶೇರ್ ಮಾಡಿದ್ದಾರೆ.

    ಪುನೀತ್ ರಾಜ್‍ಕುಮಾರ್ ನಿಧನರಾಗಿ ಇವತ್ತಿಗೆ 6ನೇ ದಿನ. ಇಂದಿಗೂ ಎಷ್ಟೋ ಜನರಿಗೆ ಅವರಿಲ್ಲ ಎಂಬುದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ತಮ್ಮನನ್ನು ಮಗನಂತೆ ನೋಡುತ್ತಿದ್ದ ರಾಘವೇಂದ್ರ ರಾಜ್‍ಕುಮಾರ್ ಮತ್ತು ಶಿವಣ್ಣ ಈ ವಿಷಯ ತಿಳಿದು ಕುಸಿದು ಹೋಗಿದ್ದರು. ಈಗ ರಾಘವೇಂದ್ರ ರಾಜ್‍ಕುಮಾರ್ ಫೇಸ್ ಬುಕ್ ನಲ್ಲಿ ತಮ್ಮನೊಂದಿಗಿನ ವಿಶೇಷ ಫೋಟೋವನ್ನು ಹಾಕಿದ್ದು, ಅವನು ಇನ್ನೂ ನನ್ನ ಮಡಿಲಲ್ಲಿ ಮತ್ತು ನನ್ನ ಆಲೋಚನೆಗಳಲ್ಲಿ ಶಾಶ್ವತವಾಗಿದ್ದಾನೆ. ಲವ್ ಯೂ ಮಗನೇ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಸಾಲುಗಳನ್ನು ನೋಡಿದರೆ, ಅಪ್ಪು ಎಷ್ಟೇ ದೊಡ್ಡವನಾದರೂ ಅವನು ಇನ್ನು ನನಗೆ ಮಗುವೇ ಎನ್ನುವ ರೀತಿ ರಾಘವೇಂದ್ರ ಅವರು ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಅಪ್ಪು ಜೊತೆಗಿನ ಲಾಸ್ಟ್ ಸೆಲ್ಫಿ ಶೇರ್ ಮಾಡಿದ ರಾಘಣ್ಣ

    ರಾಘವೇಂದ್ರ ಅವರು, ಅವರ ಮತ್ತು ಅಪ್ಪುವಿನ ಚಿಕ್ಕ ವಯಸ್ಸಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು, ಈ ಫೋಟೋದಲ್ಲಿ ಅಪ್ಪು ತನ್ನ ಮುಗ್ಧ ನಗುವಿನೊಂದಿಗೆ ರಾಘವೇಂದ್ರ ರಾಜ್‍ಕುಮಾರ್ ಅವರ ತೊಡೆಯ ಮೇಲೆ ಕುಳಿತುಕೊಂಡು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.

    ರಾಘವೇಂದ್ರ ಅವರು ಇತ್ತೀಚೆಗೆ ಅಪ್ಪುವಿನೊಂದಿಗೆ ತೆಗೆದುಕೊಂಡಂತಹ ಸೆಲ್ಫಿ ಫೋಟೋವನ್ನು ಪೋಸ್ಟ್ ಮಾಡಿದ್ದು, ಜೊತೆಗೆ ಭಾವುಕ ನುಡಿಗಳನ್ನು ಕೂಡ ಬರೆದುಕೊಂಡಿದ್ದರು. ಇತ್ತೀಚಿಗೆ ನನಗೆ ದಾದಾಸಾಹೇಬ್ ಫಾಲ್ಕೆ ಎಂಎಸ್‍ಕೆ ಟ್ರಸ್ಟ್ ವತಿಯಿಂದ ಜೀವನ ಸಾಧನೆ ಪ್ರಶಸ್ತಿ ಬಂದಿತ್ತು. ಅದು ಅಪ್ಪುಗೆ ಎಲ್ಲಿಲ್ಲದ ಸಂತಸವನ್ನು ತಂದುಕೊಟ್ಟಿತ್ತು. ನನ್ನನ್ನು ತಕ್ಷಣ ಭೇಟಿ ಮಾಡಿ ರಾಘಣ್ಣ ನೀವು ಕೂಡ ಈ ಮೂರ್ತಿಯ ಹಾಗೆಯೇ ಅಪ್ಪಾಜಿಯವರ ಮೂರ್ತಿಯನ್ನು ಮಾಡಿ ಎಂದಿನಂತೆ ಡಾಕ್ಟರ್ ರಾಜಕುಮಾರ್ ಟ್ರಸ್ಟ್ ವತಿಯಿಂದ ನೀಡುವ ಪ್ರಶಸ್ತಿಯನ್ನು ಇದೇ ರೂಪದಲ್ಲಿ ಮಾಡೋಣ ಎಂದು ಹೇಳಿದನು. ಅಪ್ಪು ನಿನ್ನ ಆಲೋಚನೆಗೆ ನನ್ನದೊಂದು ನಮನ. ಲವ್ ಯು ಮಗನೇ ಎಂದು ರಾಘವೇಂದ್ರ ರಾಜ್‍ಕುಮಾರ್ ಅವರು ಬರೆದುಕೊಂಡು ಅಪ್ಪುನನ್ನು ನೆನಪು ಮಾಡಿಕೊಂಡಿದ್ದರು. ಇದನ್ನೂ ಓದಿ:    ಅಪ್ಪು ಕೊನೆ ಕ್ಷಣದ ವಿಡಿಯೋ ಲಭ್ಯ

  • ಗಿಣಿರಾಮನ ರಾಣಿಗೆ ಮೋಹಕ ತಾರೆ ಕೊಟ್ರು ಕಾಂಪ್ಲಿಮೆಂಟ್

    ಗಿಣಿರಾಮನ ರಾಣಿಗೆ ಮೋಹಕ ತಾರೆ ಕೊಟ್ರು ಕಾಂಪ್ಲಿಮೆಂಟ್

    ಬೆಂಗಳೂರು: ‘ಗಿಣಿರಾಮ’ ಖ್ಯಾತಿಯ ನಟಿ ನಯನಾ ನಾಗರಾಜ್ ಪೋಸ್ಟ್ ಗೆ ಮೋಹಕ ತಾರೆ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಮಾಡಿದ್ದಾರೆ.

    ನಯನಾ ನಟನೆಯ ಜೊತೆಗೆ ಒಳ್ಳೆಯ ಭರತನಾಟ್ಯ ಕಲಾವಿದೆ ಮತ್ತು ಉತ್ತಮ ಸಿಂಗರ್ ಸಹ ಆಗಿದ್ದಾರೆ. ಈ ಹಿನ್ನೆಲೆ ಇನ್‍ಸ್ಟಾಗ್ರಾಮ್ ನಲ್ಲಿ ನಯನಾ ಸಿನಿಮಾ ಅಥವಾ ಭಕ್ತಿಗೀತೆಗಳನ್ನು ಹಾಡಿ ಪೋಸ್ಟ್ ಮಾಡುತ್ತಿರುತ್ತಾರೆ. ಈಗ ಇನ್‍ಸ್ಟಾದಲ್ಲಿ ರಮ್ಯಾ ಅವರ ‘ಅಮೃತಧಾರೆ’ ಸಿನಿಮಾದ ‘ನೆನಪಿದೆಯೇ ಮೊದಲ ನೋಟ’ ಹಾಡನ್ನು ಹಾಡಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಸ್ವತಃ ರಮ್ಯಾ ಅವರೇ ‘ನೀವು ತುಂಬಾ ಚೆನ್ನಾಗಿ ಹಾಡುತ್ತೀರ ಎಂದು ಕಮೆಂಟ್ ಮಾಡಿದ್ದಾರೆ.

    ನಯನಾ ಇದನ್ನು ನೋಡಿ ಫುಲ್ ಖುಷ್ ಆಗಿದ್ದು, ನಾನು ಇದನ್ನು ನಿರೀಕ್ಷೆಯನ್ನು ಮಾಡಿರಲಿಲ್ಲ. ಇದು ನನಗೆ ತುಂಬಾ ದೊಡ್ಡದು ಎಂದು ನಯನಾ ರಿಪ್ಲೈ ಮಾಡಿದ್ದಾರೆ. ಇದನ್ನು ನೋಡಿ ಅವರ ಅಭಿಮಾನಿಗಳು ರಮ್ಯಾ ಅವರ ಕಮೆಂಟ್‍ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ‘ಪುಷ್ಪ’ ಸಾಂಗ್ ನಲ್ಲಿ ಪಡ್ಡೆ ಹೈಕ್ಳ ನಿದ್ದೆ ಕೆಡಿಸಿದ ರಶ್ಮಿಕಾ

    ಒಬ್ಬ ನಟಿ ಇನ್ನೊಂದು ನಟಿಯನ್ನು ಹೊಗಳುವುದು ಕಷ್ಟ ಆದರೆ ಇಲ್ಲಿ ಸ್ಟಾರ್ ನಟಿ ಆದ ರಮ್ಯಾ ನಯನಾ ಅವರ ಪೋಸ್ಟ್ ಗೆ ಕಾಮೆಂಟ್ ಮಾಡಿದ್ದಾರೆ. ನಯನಾ ಅವರು ಬಾರಿ ನಟನೆ ಮಾತ್ರವಲ್ಲದೇ ನೃತ್ಯ, ಸಂಗೀತದಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅದು ಅಲ್ಲದೇ ಇವರು ಕಿರುತೆರೆಯಲ್ಲಿಯೂ ಸಖತ್ ಫೇಮಸ್ ಆಗಿದ್ದು, ಬಿಗ್ ಬಾಸ್ ಮಿನಿ ಸೀಸನ್ ನಲ್ಲಿಯೂ ಭಾಗವಹಿಸಿದ್ದರು.

  • ನಾನು ಫುಲ್ ಥ್ರಿಲ್ ಆಗಿದ್ದೇನೆ ಅಂದ್ರು ಡಿಂಪಲ್ ಕ್ವೀನ್ ರಚಿತಾ

    ನಾನು ಫುಲ್ ಥ್ರಿಲ್ ಆಗಿದ್ದೇನೆ ಅಂದ್ರು ಡಿಂಪಲ್ ಕ್ವೀನ್ ರಚಿತಾ

    ಬೆಂಗಳೂರು: ನಾನು ಫುಲ್ ಥ್ರಿಲ್ ಆಗಿದ್ದೇನೆ ಎಂದು ಚಂದನವನದ ಡಿಂಪಲ್ ಕ್ವೀನ್ ರಚಿತಾ ರಾಮ್ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಆ ವೀಡಿಯೋ ನೋಡಿದ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ.

    ಆ ಪೋಸ್ಟ್‍ನಲ್ಲಿ ಏನಿದೆ?
    ರಚಿತಾ ರಾಮ್ ಅವರ ಸಹೋದರಿ ನಿತ್ಯ ರಾಮ್ ಮದುವೆಯಾಗಿ ವಿದೇಶಕ್ಕೆ ಹೋಗಿದ್ದರು. ಇದರಿಂದ ರಚಿತಾ ತನ್ನ ಸಹೋದರಿಯನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಮತ್ತೆ ಇವರಿಬ್ಬರು ಒಂದಾಗಿದ್ದಾರೆ. ರಚಿತಾ ತಮ್ಮ ಇನ್‍ಸ್ಟಾಗ್ರಾಮ್ ನಲ್ಲಿ, ನಾನು ಎಷ್ಟು ಥ್ರಿಲ್ ಆಗಿದ್ದೇನೆ ಎಂದು ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ. ಮತ್ತೆ ನಾವಿಬ್ಬರು ಒಂದಾಗಿದ್ದೇವೆ. ಈ ಖುಷಿಯಿಂದ ನನ್ನ ಹೃದಯ ಕರಗಿದೆ ಎಂದು ಬರೆದು ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಮಾದಕ ನೋಟದಿಂದ ನಿದ್ದೆಗೆಡಿಸಿದ ನಟಿ ಶುಭ್ರ ಅಯ್ಯಪ್ಪ

     

    View this post on Instagram

     

    A post shared by Rachita Ram (@rachita_instaofficial)

    ಈ ವೀಡಿಯೋದಲ್ಲಿ ರಚಿತಾ ಮತ್ತು ನಿತ್ಯ ತುಂಬಾ ಕ್ಯೂಟ್ ಆಗಿ ಕಾಣುತ್ತಿದ್ದು, ವೈ ದಿಸ್ ಕೊಲವೆರಿ ಡಿ ಸಾಂಗ್ ಗೆ ಇಬ್ಬರು ಕ್ಯೂಟ್ ಆಗಿ ಎಕ್ಸ್ ಪ್ರೆಶನ್ ಕೊಟ್ಟಿದ್ದಾರೆ. ಇದನ್ನೂ ಓದಿ:   ಹಾಗಲಕಾಯಿಂದ ಮಾಡಿ ರುಚಿಯಾದ ಪಲ್ಯ

     

    View this post on Instagram

     

    A post shared by Rachita Ram (@rachita_instaofficial)

    ಇತ್ತೀಚೆಗೆ ರಚಿತಾ ನಟನೆಯ ‘ಲವ್ ಯೂ ರಚ್ಚು’ ಸಿನಿಮಾದ ಚಿತ್ರೀಕರಣದ ವೇಳೆ ಫೈಟರ್ ವಿವೇಕ್ ವಿದ್ಯುತ್ ಅವಘಡದಿಂದ ಸಾವನ್ನಪ್ಪಿದ್ದರು. ಈ ದುರಂತಕ್ಕೆ ಚಿತ್ರತಂಡದ ನಿರ್ಲಕ್ಷ್ಯವೇ ಕಾರಣ ಎಂದು ರಚಿತಾ ಮತ್ತು ಚಿತ್ರತಂಡವನ್ನು ಬಿಡದಿ ಪೊಲೀಸರು ವಿಚಾರಣೆಯನ್ನು ಸಹ ಮಾಡಿದ್ದರು. ಪ್ರಸ್ತುತ ಚಿತ್ರತಂಡಕ್ಕೆ ನ್ಯಾಯಾಲಯ ಜಾಮೀನು ನೀಡಿದೆ.