Tag: chandigarh

  • 3 ಆ್ಯಪ್‍ಗಳನ್ನು ರಚಿಸಿ ಗಿನ್ನಿಸ್ ದಾಖಲೆ ಮಾಡಿದ 12 ವರ್ಷದ ಪೋರ

    3 ಆ್ಯಪ್‍ಗಳನ್ನು ರಚಿಸಿ ಗಿನ್ನಿಸ್ ದಾಖಲೆ ಮಾಡಿದ 12 ವರ್ಷದ ಪೋರ

    ಚಂಡೀಗಢ: 12 ವರ್ಷದ ಪೋರ ಹರಿಯಾಣದಲ್ಲಿ ಮೂರು ಆ್ಯಪ್‍ಗಳನ್ನು ರಚಿಸುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾನೆ.

    ಝಜ್ಜರ್‌ನ ಜವಾಹರ್ ನವೋದಯ ವಿದ್ಯಾಲಯದಲ್ಲಿ 8ನೇ ತರಗತಿಯ ವಿದ್ಯಾರ್ಥಿ ಕಾರ್ತಿಕೇಯ ಜಖರ್ ಯಾವುದೇ ಮಾರ್ಗದರ್ಶನವಿಲ್ಲದೆ ಮೂರು ಕಲಿಕೆಯ ಅಪ್ಲಿಕೇಶನ್‍ಗಳನ್ನು ಅಭಿವೃದ್ಧಿಪಡಿಸಿದ್ದಾನೆ. ಈ ಮೂಲಕ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‍ನಲ್ಲಿ ತನ್ನ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ. ಇದನ್ನೂ ಓದಿ: ಸಿದ್ದರಾಮೋತ್ಸವ ನಂತರ ಮುನಿಸು ಮರೆತು ಒಂದಾದ ಸಿದ್ದು, ಡಿಕೆ – ಜಂಟಿ ರೋಡ್ ಶೋ 

    ಕಾರ್ತಿಕೇಯ ಈ ಕುರಿತು ಮಾತನಾಡಿದ್ದು, ನನ್ನ ತಂದೆ ಅಜಿತ್ ಸಿಂಗ್ ಅವರು ರೈತರಾಗಿದ್ದರು. ಕೋವಿಡ್ ಸಮಯದಲ್ಲಿ ಆನ್‍ಲೈನ್ ತರಗತಿಗಳಿಗೆ ಸುಮಾರು 10,000 ರೂ. ವೆಚ್ಚದ ಮೊಬೈಲ್ ಫೋನ್ ಖರೀದಿಸಿ ಮಹನಿಗೆ ಕೊಟ್ಟಿದ್ದರು. ಆದರೆ ಫೋನ್‍ನಲ್ಲಿ ಕೆಲವು ಕೋಡಿಂಗ್ ಸಮಸ್ಯೆ ಇತ್ತು. ಈ ಹಿನ್ನೆಲೆ ಯೂ ಟ್ಯೂಬ್ ನೋಡಿ ನಾನು ಫೋನ್ ಸಮಸ್ಯೆಯನ್ನು ನಿಭಾಯಿಸಿದ್ದಾನೆ ಎಂದು ತಿಳಿಸಿದ್ದಾನೆ.

    ಈ ಹಿನ್ನೆಲೆ ನಾನು ನನ್ನ ಅಧ್ಯಯನವನ್ನು ಮುಂದುವರಿಸಿದೆ. ನಿರತರ ಅಧ್ಯಯನದಿಂದ ನಾನು ಮೂರು ಅಪ್ಲಿಕೇಶನ್‍ಗಳನ್ನು ಸಿದ್ಧಪಡಿಸಿದ್ದೇನೆ. ಮೊದಲ ಅಪ್ಲಿಕೇಶನ್ ಲುಸೆಂಟ್ ಜಿ.ಕೆ ಎಂಬ ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದೆ. ಎರಡನೇ ಅಪ್ಲಿಕೇಶನ್ ರಾಮ್ ಕಾರ್ತಿಕ್ ಲರ್ನಿಂಗ್ ಸೆಂಟರ್ ಆಗಿದ್ದು, ಅದು ಕೋಡಿಂಗ್ ಮತ್ತು ಗ್ರಾಫಿಕ್ ಡಿಸೈನಿಂಗ್ ಕಲಿಸುತ್ತದೆ. ಮೂರನೇ ಅಪ್ಲಿಕೇಶನ್ ಡಿಜಿಟಲ್ ಶಿಕ್ಷಣ ಕುರಿತು ಇದೆ ಎಂದು ವಿವರಿಸಿದ್ದಾನೆ. ಇದನ್ನೂ ಓದಿ:  ವರಮಹಾಲಕ್ಷ್ಮಿ ಪೂಜೆ ಮಾಡಿ ಸಾಮರಸ್ಯಕ್ಕೆ ಸಾಕ್ಷಿಯಾದ ಮುಸ್ಲಿಂ ಕುಟುಂಬ 

    ಈ ಅಪ್ಲಿಕೇಶನ್‍ಗಳು 45,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ತರಬೇತಿಯನ್ನು ನೀಡುತ್ತಿವೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಡಿಜಿಟಲ್ ಇಂಡಿಯಾ ಅಭಿಯಾನಕ್ಕೆ ಒತ್ತು ನೀಡಿದ್ದರಿಂದ ನನಗೆ ಪ್ರೇರಣೆ ಸಿಕ್ಕಿದೆ. ನಾನು ದೇಶಕ್ಕಾಗಿ ಸೇವೆ ಸಲ್ಲಿಸಲು ಬಯಸುತ್ತೇನೆ ಎಂದು ಹೇಳಿದ್ದಾನೆ.

    Live Tv
    [brid partner=56869869 player=32851 video=960834 autoplay=true]

  • ಡ್ರೋನ್‌ಗೆ ಗುಂಡು -ಸೇನೆಯ ದಾಳಿಗೆ  ಮರಳಿ ಪಾಕಿಗೆ ಓಡಿ ಹೋಯ್ತು

    ಡ್ರೋನ್‌ಗೆ ಗುಂಡು -ಸೇನೆಯ ದಾಳಿಗೆ ಮರಳಿ ಪಾಕಿಗೆ ಓಡಿ ಹೋಯ್ತು

    ಚಂಡೀಗಢ: ಪಠಾಣ್‍ಕೋಟ್‍ನಲ್ಲಿ ಪತ್ತೆಯಾದ ಪಾಕಿಸ್ತಾನದ ಡ್ರೋನ್ ಮೇಲೆ ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಸಿಬ್ಬಂದಿ ಗುಂಡು ಹಾರಿಸಿ ಓಡಿಸಿದ್ದಾರೆ.

    ಶನಿವಾರ ಮಧ್ಯರಾತ್ರಿ ಭಾರತ-ಪಾಕಿಸ್ತಾನದ ಗಡಿಯಲ್ಲಿ ಭದ್ರತಾ ಪಡೆಗಳು ಗಡಿ ಒಳಗೆ ಬಂದ ಪಾಕಿಸ್ತಾನದ ಡ್ರೋನ್ ಓಡಿಸಿದ್ದು, ಪಠಾಣ್‍ಕೋಟ್‍ನ ಬಮಿಯಾಲ್ ಗಡಿಯಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಬಿಎಸ್‍ಎಫ್ ಅಧಿಕಾರಿಗಳು ಪ್ರತಿಕ್ರಿಯಿಸಿ ಮಧ್ಯರಾತ್ರಿಯ ವೇಳೆಗೆ ಪಾಕಿಸ್ತಾನದಿಂದ ಡ್ರೋನ್ ಬಂದಿತ್ತು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಸಿನ್ಹಾ ಧ್ವನಿ ಕೇಳಿದ್ದೇವೆ, ಆದರೆ ಮುರ್ಮು ಧ್ವನಿಯನ್ನು ಇಲ್ಲಿವರೆಗೂ ಕೇಳಿಲ್ಲ: ತೇಜಸ್ವಿ ಯಾದವ್ ಕಿಡಿ 

    ದಿಂಡಾ ಪೋಸ್ಟ್ ಬಳಿ ಪಾಕಿಸ್ತಾನಿ ಡ್ರೋನ್ ಅನ್ನು ಬಿಎಸ್‍ಎಫ್ ಸಿಬ್ಬಂದಿ ನೋಡಿದ್ದಾರೆ. ನಾವು ಡ್ರೋನ್‍ಗೆ 46 ಸುತ್ತು ಗುಂಡು ಹಾರಿಸಿದ್ದೇವೆ. ಅದು ಪಾಕಿಸ್ತಾನಕ್ಕೆ ಪಲಾಯನ ಮಾಡುವಂತೆ ಮಾಡಿದ್ದೇವೆ. ಇನ್ನು ಮುಂದೆ ಇಂತಹ ಯಾವುದೇ ಬೆದರಿಕೆಗಳನ್ನು ಪತ್ತೆಹಚ್ಚಲು ಪೊಲೀಸರು ಗಡಿಯಲ್ಲಿ ಶೋಧ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಕಳೆದ ತಿಂಗಳು, ಜಮ್ಮುವಿನ ಅಂತರಾಷ್ಟ್ರೀಯ ಗಡಿಯ ಬಳಿ ಪಾಕಿಸ್ತಾನದಿಂದ ಬರುತ್ತಿದ್ದ ಡ್ರೋನ್‍ಗೆ ಬಿಎಸ್‍ಎಫ್ ಪಡೆಗಳು ಗುಂಡು ಹಾರಿಸಿ ಓಡಿ ಹೋಗುವಂತೆ ಮಾಡಿದ್ದರು. ಮತ್ತೆ ಇದೇ ರೀತಿಯ ಘಟನೆ ಸಂಭವಿಸಿದೆ. ಇದನ್ನೂ ಓದಿ:  ಭಾರೀ ಮಳೆಗೆ ಬೆಳಗಾವಿಯ 13 ಸೇತುವೆಗಳು ಜಲಾವೃತ – ಮತ್ತೆ ಪ್ರವಾಹ ಭೀತಿ 

    Live Tv
    [brid partner=56869869 player=32851 video=960834 autoplay=true]

  • ನಾಳೆ ಪಂಜಾಬ್ ಸಿಎಂ 2ನೇ ಮದುವೆ – ಮತ್ತೆ ಹಸೆಮಣೆ ಏರಲಿದ್ದಾರೆ ಭಗವಂತ್ ಮಾನ್

    ನಾಳೆ ಪಂಜಾಬ್ ಸಿಎಂ 2ನೇ ಮದುವೆ – ಮತ್ತೆ ಹಸೆಮಣೆ ಏರಲಿದ್ದಾರೆ ಭಗವಂತ್ ಮಾನ್

    ಚಂಡೀಗಢ: ಆಮ್ ಆದ್ಮಿ ಪಕ್ಷದ ಪಂಜಾಬ್ ಸಿಎಂ ಭಗವಂತ್ ಮಾನ್ ನಾಳೆ 2ನೇ ಬಾರಿಗೆ ಹಸೆಮಣೆ ಏರಲು ಸಜ್ಜಾಗಿದ್ದು, ಮತ್ತೆ ದಾಂಪತ್ಯ ಜೀವಕ್ಕೆ ಕಾಲಿಡುತ್ತಿದ್ದಾರೆ.

    ಭಗವಂತ್ ಮಾನ್ ಡಾ.ಗುರುಪ್ರೀತ್ ಕೌರ್ ಅವರನ್ನು ವರಿಸಲಿದ್ದು, ಚಂಡೀಗಢದಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದೆ. ಸರಳವಾಗಿ ನಡೆಯುವ ಸಮಾರಂಭದಲ್ಲಿ ಕುಟುಂಬಸ್ಥರು, ಹತ್ತಿರದ ಸಂಬಂಧಿಗಳು ಹಾಗೂ ವಿಶೇಷ ಆಹ್ವಾನಿತರು ಪಾಲ್ಗೊಳ್ಳಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹ ಮಾನ್ ಅವರ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಅಭಿವೃದ್ಧಿ ಮತ್ತು ಹಿಂದುತ್ವಕ್ಕಾಗಿ ಬಿಜೆಪಿ ನಮ್ಮನ್ನು ಬೆಂಬಲಿಸಿದೆ – ಏಕನಾಥ್‌ ಶಿಂಧೆ

    48 ವರ್ಷ ವಯಸ್ಸಿನ ಮಾನ್ ಅವರು 2ನೇ ಬಾರಿಗೆ ಮದುವೆಯಾಗುತ್ತಿದ್ದಾರೆ. ತಮ್ಮ ಮೊದಲ ಪತ್ನಿ ಇಂದರ್‌ಪ್ರೀತ್ ಕೌರ್‌ನಿಂದ ವಿಚ್ಛೇದನ ಪಡೆದಿದ್ದಾರೆ. ಮಾನ್ ಅವರಿಗೆ ಇಬ್ಬರು ಮಕ್ಕಳಿದ್ದು, ಮೊದಲ ಪತ್ನಿಯೊಂದಿಗೆ ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ. ಕಳೆದ ಮಾರ್ಚ್ 16ರಂದು ಮಾನ್ ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಬರ್ತ್‍ಡೇ ಪಾರ್ಟಿ ಹಣಕ್ಕೆ ಕಿತ್ತಾಟ – 3ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿಗಳು, ಓರ್ವ ಸಾವು

    ಬರ್ತ್‍ಡೇ ಪಾರ್ಟಿ ಹಣಕ್ಕೆ ಕಿತ್ತಾಟ – 3ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿಗಳು, ಓರ್ವ ಸಾವು

    ಚಂಡೀಗಢ: ಬರ್ತ್‍ಡೇ ಪಾರ್ಟಿ ಮಾಡಲು ಹಣಕ್ಕಾಗಿ ಪ್ರಾರಂಭವಾದ ಜಗಳ ಒಬ್ಬನ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಜಲಂಧರ್‌ನಲ್ಲಿ ನಡೆದಿದೆ.

    ನಡೆದಿದ್ದೇನು?
    ಜಲಂಧರ್‌ನ ಹಾಸ್ಟೆಲ್‍ವೊಂದರಲ್ಲಿ ಸ್ನೇಹಿತನ ಹುಟ್ಟುಹಬ್ಬಕ್ಕೆ ತಯಾರಿ ಮಾಡಿಕೊಳ್ಳಲಾಗಿತ್ತು. ಇತರ ಸ್ನೇಹಿತರ ಬಳಿ ಹಣವನ್ನು ಸಂಗ್ರಹ ಮಾಡಲಾಗುತ್ತಿತ್ತು. ಇಬ್ಬರು ವಿದ್ಯಾರ್ಥಿಗಳ ನಡುವೆ ಗೊಂದಲ ಉಂಟಾಗಿ ಜಗಳ ಪ್ರಾರಂಭವಾಗಿದೆ. ಈ ವೇಳೆ ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಇಬ್ಬರು ಕೆಳಗೆ ಬಿದ್ದಿದ್ದಾರೆ. ಪರಿಣಾಮ ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವನ ಸ್ಥಿತಿಯೂ ಚಿಂತಾಜನಕವಾಗಿದೆ. ಇದನ್ನೂ ಓದಿ:  ಮಳೆ ಬಂದ್ರೆ ನೆಂದು ಹೋಗ್ತೇವೆ, ಸರಿಯಾದ ಶಾಲಾ ಕೊಠಡಿ ಕಟ್ಟಿಸಿಕೊಡಿ: ವಿದ್ಯಾರ್ಥಿಗಳ ಮನವಿ 

    ಯಾರಿದು?
    ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಕಿಶನ್ ಕುಮಾರ್ ಯಾದವ್ ಮತ್ತು ಅಮನ್ ಇಬ್ಬರು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಇವರಿಬ್ಬರು ಬಿಹಾರದವರಾಗಿದ್ದು, ಬಿಎಸ್‍ಸಿ ಮೂರನೇ ವರ್ಷ ವ್ಯಾಸಂಗ ಮಾಡುತ್ತಿದ್ದರು.

    Jalandhar: 2 Students Fall Off Hostel Building During Fight Over Bday Party Contribution; 1 Dead, Other Critical

    ಎಡಿಸಿಪಿ ಜಸ್ಕಿರಂಜಿತ್ ಎಸ್ ತೇಜಾ ಈ ಕುರಿತು ಮಾತನಾಡಿದ್ದು, ಬರ್ತ್‍ಡೇ ಪಾರ್ಟಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದೆ. ಈ ವೇಳೆ ಮಹಡಿ ಮೇಲಿನಿಂದ ಇಬ್ಬರು ವಿದ್ಯಾರ್ಥಿಗಳು ಬಿದ್ದಿದ್ದಾರೆ. ಒಬ್ಬ ಮೃತಪಟ್ಟರೆ, ಇನ್ನೊಬ್ಬ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಸ್ಪತ್ರೆಗೆ ದಾಖಲಾಗಿರುವ ಯುವಕನ ವಿರುದ್ಧ ಐಪಿಸಿ ಸೆಕ್ಷನ್ 304 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

    Live Tv

  • ನವಜೋತ್ ಸಿಂಗ್ ಸಿಧುಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

    ನವಜೋತ್ ಸಿಂಗ್ ಸಿಧುಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

    ಚಂಡೀಗಢ: ಪಟಿಯಾಲ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಪ್ರಭಾವಿ ನಾಯಕ ನವಜೋತ್ ಸಿಂಗ್ ಸಿಧು ಇಂದು ಮಧ್ಯಾಹ್ನ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

    34 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪಟಿಯಾಲ ಕೇಂದ್ರೀಯ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು, ಚಂಡೀಗಢದ PGIMER ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ವಾರಣಾಸಿ ಬಾಂಬ್ ಬ್ಲಾಸ್ಟ್‌ ಹಂತಕನಿಗೆ ಮರಣದಂಡನೆ – 16 ವರ್ಷಗಳ ಬಳಿಕ ಶಿಕ್ಷೆ

    ಸಿಧು ಅವರನ್ನು ಬಿಗಿ ಭದ್ರತೆಯಲ್ಲಿ ಪಟಿಯಾಲ ಕಾರಾಗೃಹದಿಂದ PGIMER ಆಸ್ಪತ್ರೆಗೆ ಕರೆತರಲಾಯಿತು. ಆರೋಗ್ಯ ಪರೀಕ್ಷೆ ಬಳಿಕ ಅವರನ್ನು ದಾಖಲು ಮಾಡಿಕೊಳ್ಳಲಾಗಿದ್ದು, ಅವರನ್ನು ಮತ್ತಷ್ಟು ಆರೋಗ್ಯ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಹೇಳಲಾಗಿದೆ.

    1988ರಲ್ಲಿ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.  ಇದನ್ನೂ ಓದಿ: ಭಾರತ ಮತಾಂಧರನ್ನು ಪ್ರಶಂಸಿಸುವುದಿಲ್ಲ: ಪಾಕ್ ಪ್ರಧಾನಿಗೆ ಭಾರತ ಸರ್ಕಾರ ತೀವ್ರ ತರಾಟೆ

    ಅದರಂತೆ ಮೇ 20ರಂದು ಸ್ಥಳೀಯ ನ್ಯಾಯಾಲಯಕ್ಕೆ ಶರಣಾದ ಅವರನ್ನು ಪಟಿಯಾಲ ಕಾರಾಗೃಹದಲ್ಲಿಡಲಾಗಿದೆ. ಕಾರಾಗೃಹದಲ್ಲಿ ಅವರನ್ನು ಗುಮಾಸ್ತನ ಕೆಲಸಕ್ಕೆ ಈಚೆಗಷ್ಟೇ ನೇಮಿಸಲಾಗಿತ್ತು. ಇದಾದ ಬಳಿಕ 2 ವಾರಗಳ ಹಿಂದಷ್ಟೇ ಅವರಿಗೆ ಪಟಿಯಾಲದಲ್ಲಿರುವ ರಾಜೇಂದ್ರ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು.

  • ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶ ನನಗಿಲ್ಲ: ಸಿಧು ಮೂಸೆ ವಾಲಾ ತಂದೆ

    ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶ ನನಗಿಲ್ಲ: ಸಿಧು ಮೂಸೆ ವಾಲಾ ತಂದೆ

    ಚಂಡೀಗಢ: ಪಂಜಾಬಿ ಗಾಯಕ ಮತ್ತು ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಅವರ ಪೋಷಕರು ಶನಿವಾರ ಚಂಡೀಗಢದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಸಿಧು ಮೂಸೆ ವಾಲಾ ರಾಜಕೀಯಕ್ಕೆ ಪ್ರವೇಶ ಮಾಡುತ್ತಿದ್ದಾರೆ ಎಂದು ಹರಿದಾಡುತ್ತಿರುವ ಗಾಸಿಪ್‌ಗಳಿಗೆ ಬ್ರೇಕ್‌ ಹಾಕಿದ್ದಾರೆ.

    ಅಮಿತ್ ಶಾ ಅವರನ್ನು ಭೇಟಿಯಾಗುತ್ತಿದ್ದಂತೆ ಸಿಧು ಮೂಸ್ ವಾಲಾ ಅವರ ತಂದೆ ಮಗನ ಹತ್ಯೆ ಖಂಡಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ರಾಜಕೀಯಕ್ಕೆ ಬರುತ್ತೇನೆ ಎಂಬ ವಿಚಾರವಾಗಿ ಸಾಕಷ್ಟು ವದಂತಿಗಳಿದೆ. ಆದರೆ ಅವುಗಳನ್ನು ಯಾರೂ ನಂಬಬೇಡಿ. ಇತ್ತೀಚೆಗಷ್ಟೇ ನನ್ನ ಮಗನನ್ನು ಕಳೆದುಕೊಂಡಿದ್ದೇನೆ. ಚುನಾವಣೆಗೆ ಸ್ಪರ್ಧಿಸುವ ಯಾವ ಉದ್ದೇಶವನ್ನೂ ನಾನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವೀಡಿಯೋದಲ್ಲಿ ಸಿಧು ಮೂಸೆ ವಾಲಾ ಅವರ ತಂದೆ ಅಮಿತ್ ಶಾ ಅವರ ಮುಂದೆ ಕಣ್ಣೀರು ಹಾಕುತ್ತಾ ತಮ್ಮ ಎರಡು ಕೈಗಳನ್ನು ಜೋಡಿಸಿ ಮಾತನಾಡುತ್ತಿರುವುದನ್ನು ಕಾಣಬಹುದಾಗಿದೆ.

    ಈ ಮುನ್ನ ಪಂಜಾಬಿ ಗಾಯಕನ ಹತ್ಯೆ ಕುರಿತಂತೆ ಕೇಂದ್ರೀಯ ಸಂಸ್ಥೆಗಳು ತನಿಖೆ ನಡೆಸುವಂತೆ ಮೂಸೆ ವಾಲಾ ಕುಟುಂಬಸ್ಥರು ಅಮಿತ್ ಶಾ ಅವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದರು ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ. ಇದನ್ನೂ ಓದಿ: 424 ವಿಐಪಿಗಳಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದ ಪಂಜಾಬ್ ಸರ್ಕಾರ

    ಸಿಧು ಮೂಸೆ ವಾಲಾ ಅವರನ್ನು ಮೇ 29ರಂದು ಮಾನ್ಸಾ ಬಳಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು 424 ಮಂದಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆಯುವ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದರು. ಅದರಲ್ಲಿ ಮೂಸೆ ವಾಲಾ ಕೂಡ ಒಬ್ಬರಾಗಿದ್ದರು. ಅವರ ಭದ್ರತೆಯನ್ನು ಹಿಂತೆಗೆದುಕೊಂಡ ಒಂದು ದಿನದ ನಂತರ ಈ ಘಟನೆ ಸಂಭವಿಸಿತ್ತು. ಇದನ್ನೂ ಓದಿ:  ಸಿಧು ಮೂಸೆ ವಾಲಾ ಹತ್ಯೆ: ತನಿಖೆ ವೇಳೆ ಶಾಕಿಂಗ್ ವಿಚಾರ ಬಯಲು

    ಮೂಸೆ ವಾಲಾ ಅವರು ಮಾನ್ಸಾ ಬಳಿಯ ಮೂಸ್ ವಾಲಾ ಗ್ರಾಮಕ್ಕೆ ಸೇರಿದವರಾಗಿದ್ದು, ಕಳೆದ ಕೆಲವು ವರ್ಷಗಳಲ್ಲಿ ಅನೇಕ ಸೂಪರ್ ಹಿಟ್ ಹಾಡುಗಳಿಗೆ ಧ್ವನಿಯಾಗಿದ್ದರು. ಮೂಸೆ ವಾಲಾ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಭಾರೀ ಅಬ್ಬರದ ನಡುವೆ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದರು.

  • ಭದ್ರತೆ ವಾಪಸ್: ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಗುಂಡಿಕ್ಕಿ ಹತ್ಯೆ

    ಭದ್ರತೆ ವಾಪಸ್: ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಗುಂಡಿಕ್ಕಿ ಹತ್ಯೆ

    ಚಂಡೀಗಢ: ಪಂಜಾಬಿ ಗಾಯಕ ಮತ್ತು ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಅವರನ್ನು ಭಾನುವಾರ ಮಾನ್ಸಾ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

    ಪಂಜಾಬ್‍ನಲ್ಲಿ ಸಿಎಂ ಭಗವಂತ್ ಮಾನ್ ಅವರು 424 ಮಂದಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆಯುವ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದರು. ಅದರಲ್ಲಿ ಮೂಸೆ ವಾಲಾ ಕೂಡ ಒಬ್ಬರಾಗಿದ್ದರು. ಅವರ ಭದ್ರತೆಯನ್ನು ಹಿಂತೆಗೆದುಕೊಂಡ ಒಂದು ದಿನದ ನಂತರ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ: 424 ವಿಐಪಿಗಳಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದ ಪಂಜಾಬ್ ಸರ್ಕಾರ

    ನಡೆದಿದ್ದೇನು?
    ಜವಾಹರ್ ಕೆ ಗ್ರಾಮದ ದೇವಸ್ಥಾನದ ಬಳಿ ಮೂಸೆ ವಾಲಾ ಅವರು ತಮ್ಮ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಕಿಡಿಗೇಡಿಗಳು ಅವರ ಕಾರಿನ ಮೇಲೆ 10 ಬಾರಿ ಗುಂಡು ಹಾರಿಸಿದ್ದಾರೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಮಾನ್ಸಾದ ಸಿವಿಲ್ ಆಸ್ಪತ್ರೆಯಲ್ಲಿ ಕರೆದುಕೊಂಡು ಹೋಗಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗದೆ ಮೂಸೆ ವಾಲಾ ಸಾವನ್ನಪ್ಪಿದ್ದಾರೆ.

    ಸುದ್ದಿ ತಿಳಿದು ಭಗವಂತ್ ಮಾನ್ ಅವರು ಶಾಕ್ ಆಗಿದ್ದು, ಈ ಕುರಿತು ಟ್ವೀಟ್ ಮಾಡಿದ್ದಾರೆ. ಟ್ವೀಟ್‍ನಲ್ಲಿ, ಸಿದ್ದು ಮೂಸೆ ವಾಲಾ ಅವರ ಭೀಕರ ಹತ್ಯೆಯಿಂದ ನಾನು ಆಘಾತಗೊಂಡಿದ್ದೇನೆ, ತೀವ್ರ ದುಃಖಿತನಾಗಿದ್ದೇನೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡಲಾಗುವುದಿಲ್ಲ. ನನ್ನ ಪ್ರಾರ್ಥನೆ ಅವರ ಕುಟುಂಬ ಮತ್ತು ಪ್ರಪಂಚದಾದ್ಯಂತದ ಅವರ ಅಭಿಮಾನಿಗಳೊಂದಿಗೆ ಇವೆ. ಎಲ್ಲರೂ ಶಾಂತವಾಗಿರಲು ನಾನು ಮನವಿ ಮಾಡುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಯೋಗದಿಂದ ಸ್ಥಿತಪ್ರಜ್ಞೆ, ಸಮಯಪ್ರಜ್ಞೆ, ಸಾತ್ವಿಕತೆಯಿರುವ ಆರೋಗ್ಯಕರ ಸಮಾಜ ನಿರ್ಮಾಣ: ಸಿಎಂ 

    ಮೂಸ್ ವಾಲಾ ಅವರು ಮಾನ್ಸಾ ಬಳಿಯ ಮೂಸ್ ವಾಲಾ ಗ್ರಾಮಕ್ಕೆ ಸೇರಿದವರು. ಕಳೆದ ಕೆಲವು ವರ್ಷಗಳಲ್ಲಿ ಅನೇಕ ಸೂಪರ್‌ಹಿಟ್ ಹಾಡುಗಳಿಗೆ ಧ್ವನಿಯಾಗಿದ್ದರು. ಮೂಸ್ ವಾಲಾ ಅವರು ಕಳೆದ ವರ್ಷ ನವೆಂಬರ್‍ನಲ್ಲಿ ಭಾರೀ ಅಬ್ಬರದ ನಡುವೆ ಕಾಂಗ್ರೆಸ್‍ಗೆ ಸೇರಿದ್ದರು.

  • ಮಹಿಳೆಯ ಮೇಲೆ ಅತ್ಯಾಚಾರಗೈದು 1,25,000 ರೂ. ವಂಚಿಸಿದ ಅರ್ಚಕ

    ಮಹಿಳೆಯ ಮೇಲೆ ಅತ್ಯಾಚಾರಗೈದು 1,25,000 ರೂ. ವಂಚಿಸಿದ ಅರ್ಚಕ

    ಚಂಡೀಗಢ: ದೇವಸ್ಥಾನದ ಅರ್ಚಕನೊಬ್ಬ ಮಹಿಳೆ ಮೇಲೆ ಅತ್ಯಾಚಾರಗೈದು ಒಂದು ಲಕ್ಷ 15 ಸಾವಿರ ರೂ. ಹಾಗೂ ಚಿನ್ನಾಭರಣ ವಂಚಿಸಿರುವ ಘಟನೆ ಹರಿಯಾಣದ ಹಿಸಾರ್‌ನಲ್ಲಿ ನಡೆದಿದೆ.

    ಅರ್ಚಕ ನರೇಶ್ ಅತ್ಯಾಚಾರಗೈದ ಆರೋಪಿ. ಆತ ಸಂತ್ರಸ್ತೆಯ ನೆರೆಹೊರೆಯಲ್ಲಿ ವಾಸವಾಗಿದ್ದು, ಅಲ್ಲಿಯೇ ಸಮೀಪದಲ್ಲೇ ಮನೆಯೊಂದನ್ನು ಖರೀದಿಸಿದ್ದನು. ಈ ವೇಳೆ ಸಂತ್ರಸ್ತೆಯ ಮನೆಗೆ ಆಗಾಗ ಭೇಟಿ ನೀಡಲು ಆರಂಭಿಸಿದ್ದನು. ಇದನ್ನೂ ಓದಿ: ವಿವಾಹಿತೆಯ ಅನುಮಾನಾಸ್ಪದ ಸಾವು

    BRIBE

    ಆರೋಪಿಯು ಒಂದು ದಿನ ಮಹಿಳೆ ಮತ್ತು ಅವರ ಅತ್ತೆಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿದ್ದನು. ಈ ವೇಳೆ ನಿಮ್ಮ ಕುಟುಂಬ ಸಂಕಷ್ಟದಲ್ಲಿದೆ ಪೂಜೆಯಿಂದ ನೋವು ನಿವಾರಣೆಯಾಗುತ್ತದೆ ಎಂದಿದ್ದನು. ಆ ನಂತರ ಮಹಿಳೆಯ ಮನೆಗೆ ಅವನ ಭೇಟಿ ಹೆಚ್ಚಾಯಿತು. ಒಂದು ದಿನ ಆತ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿ ಅಶ್ಲೀಲ ವೀಡಿಯೋ ಕೂಡ ಮಾಡಿದ್ದನು. ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ತಮ್ಮನನ್ನೇ ಚಾಕುವಿನಿಂದ ಇರಿದು ಕೊಂದ ಅಣ್ಣ

    ಮಹಿಳೆಯ ಪತಿ ಸಿಆರ್‍ಪಿಎಫ್‍ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬೇರೆ ರಾಜ್ಯದಲ್ಲಿ ನಿಯೋಜಿಸಲಾಗಿದೆ. ಇದರ ಲಾಭ ಪಡೆದ ಅರ್ಚಕ ಅವರ ಮೇಲೆ ಅತ್ಯಾಚಾರ ಎಸಗಿದ್ದಾನೆ. ಗಲಾಟೆ ಮಾಡಿದರೆ, ದೂರು ಕೊಟ್ಟರೆ ಸಾಯಿಸುತ್ತೇನೆ ಅಂತ ಕೂಡಾ ಹೆದರಿಸಿದ್ದನು. ತನ್ನಲ್ಲಿರುವ ಆ ಅಶ್ಲೀಲ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಒಂದು ಲಕ್ಷ 15 ಸಾವಿರ ರೂ. ಹಾಗೂ ಚಿನ್ನಾಭರಣವನ್ನೂ ವಂಚಿಸಿದ್ದನು ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

    ಈ ಕುರಿತು ಆರೋಪಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಈ ಪ್ರಕರಣದಲ್ಲಿ ಅತ್ಯಾಚಾರ ಸೇರಿದಂತೆ ಇತರೆ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ವಾಮಾಚಾರದ ಭಯವನ್ನೂ ತೋರಿಸಿ ರೂಪಾಯಿ ಸುಲಿಗೆ ಮಾಡಿದ್ದಾರೆ. ಈ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಂದು ಹಿಸಾರ್‍ನ ಆಜಾದ್ ನಗರ ಪೊಲೀಸ್ ಠಾಣೆ ಪ್ರಭಾರಿ ಸದಾನಂದ್ ಆಜಾದ್ ತಿಳಿಸಿದ್ದಾರೆ.

    ಘಟನೆಯು ಹಿಸಾರ್‌ನ ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

     

  • ಸಬ್‍ಇನ್ಸ್‌ಪೆಕ್ಟರ್ ಮೇಲೆ ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿ

    ಸಬ್‍ಇನ್ಸ್‌ಪೆಕ್ಟರ್ ಮೇಲೆ ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿ

    ಚಂಡೀಗಢ: ಸಬ್‍ಇನ್ಸ್‌ಪೆಕ್ಟರ್ ಗಸ್ತು ತಿರುಗುತ್ತಿದ್ದ ವೇಳೆ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ ಹರಿಯಾಣದ ಯುಮುನಾನಗರದಲ್ಲಿ ನಡೆದಿದೆ.

    ಯಮುನಾನಗರದ ರಾಡೌರ್ ಪ್ರದೇಶದಲ್ಲಿ ಸಬ್‍ಇನ್ಸ್‌ಪೆಕ್ಟರ್ ಸತೀಶ್ ಕಾಂಬೋಜ್ ತಮ್ಮ ತಂಡದೊಂದಿಗೆ ಗಸ್ತು ತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬಸ್ ನಿಲ್ದಾಣದ ಬಳಿ ಸತೀಶ್ ಅವರು ಗಸ್ತು ತಿರುಗುತ್ತಿದ್ದರು. ಈ ವೇಳೆ ಬ್ಯಾಂಕ್‍ನ ಹೊರಗೆ ಬೈಕ್‍ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ನಿಂತಿರುವುದು ಅವರ ಗಮನಕ್ಕೆ ಬಂದಿದೆ. ಆದರೆ ಪೊಲೀಸರ ತಂಡವನ್ನು ಕಂಡ ಇಬ್ಬರು ಯುವಕರು ರದೌರಿ ರಸ್ತೆಯತ್ತ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಮಗಳ ಲಿವಿಂಗ್ ಟುಗೆದರ್ ಸಂಬಂಧಕ್ಕೆ ತಾಯಿ ವಿರೋಧ – ಪ್ರಿಯಕರನಿಂದ ತಾಯಿ ಹತ್ಯೆ

    police (1)

    ಅನುಮಾನಗೊಂಡ ಪೊಲೀಸ್ ತಂಡವು ದುಷ್ಕರ್ಮಿಗಳನ್ನು ಬೆನ್ನಟ್ಟಿದ್ದು, ರಾಡೌರಿ ರಸ್ತೆಯಲ್ಲಿರುವ ಎಫ್‍ಸಿಐ ಗೋಡೌನ್‍ಗಳ ಬಳಿ ಬೈಕ್ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಮುಸುಕುಧಾರಿ ಯುವಕರು ಬೈಕ್ ನಿಲ್ಲಿಸುವ ಬದಲು ಎಸ್‍ಐ ಸತೀಶ್ ಕಾಂಬೋಜ್ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ್ದಾರೆ.

    ಬೈಕ್ ಸವಾರರು ಸ್ಥಳದಿಂದ ಪರಾರಿಯಾಗಿದ್ದು, ಸತೀಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸಿಎಂ ಪೋಸ್ಟ್‌ಗಾಗಿ 2,500 ಕೋಟಿ ರೂ. ಬೇಡಿಕೆ ವಿಚಾರ- ತನಿಖೆಗೆ ಡಿಕೆಶಿ ಒತ್ತಾಯ

    ಮತ್ತೊಂದೆಡೆ ದಾಳಿಕೋರರನ್ನು ಬಂಧಿಸುವುದಾಗಿ ಭರವಸೆ ನೀಡಿದ ಸುರೀಂದರ್ ಪಾಲ್ ಸಿಂಗ್, ಎಸ್ಪಿ ಸ್ವತಃ ಘಟನಾ ಸ್ಥಳವನ್ನು ಪರಿಶೀಲಿಸಿ ಜಿಲ್ಲೆಯಾದ್ಯಂತ ರಸ್ತೆಗಳನ್ನು ನಿರ್ಬಂಧಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

  • ನಕಲಿ ಐಎಫ್‍ಎಸ್ ಅಧಿಕಾರಿ ಅರೆಸ್ಟ್- 4 ಪಾಸ್‍ಪೋರ್ಟ್‍ಗಳು ವಶ

    ನಕಲಿ ಐಎಫ್‍ಎಸ್ ಅಧಿಕಾರಿ ಅರೆಸ್ಟ್- 4 ಪಾಸ್‍ಪೋರ್ಟ್‍ಗಳು ವಶ

    ಚಂಡೀಗಢ: ಅಮೃತಸರದ ರಾಮ್‍ಬಾಗ್ ಪೊಲೀಸರು ನಕಲಿ ಭಾರತೀಯ ವಿದೇಶಾಂಗ ಸೇವೆ (ಐಎಫ್‍ಎಸ್) ಅಧಿಕಾರಿಯನ್ನು ಗುರುವಾರ ಬಂಧಿಸಿದ್ದಾರೆ.

    ಕಾರ್ನಾಕ್ ವರ್ಮಾ ಬಂಧಿತ ಆರೋಪಿ. ಈತ ನಕಲಿ ಐಎಫ್‍ಎಸ್ ಅಧಿಕಾರಿಯಂತೆ ನಟಿಸಿ ಪಾಸ್‍ಪೋರ್ಟ್ ವೆರಿಫಿಕೇಷನ್‍ಗೆ ಬಂದ ಜನರಿಗೆ ಬೆದರಿಕೆ ಹಾಕುತ್ತಿದ್ದನು. ಅವನ ಕಾರನ್ನು ಚೆಕ್ ಪೋಸ್ಟನಲ್ಲಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿಯಿಂದ ನಾಲ್ಕು ಪಾಸ್‍ಪೋರ್ಟ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದ ಮೊದಲ ಕಿಡ್ನಿ ಕಸಿಮಾಡಲು ಅನುಮತಿ ಪಡೆದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ

    ಆರೋಪಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ವ್ಯಕ್ತಿಯ ವಿರುದ್ಧ ಹೆಚ್ಚಿನ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಮರ್ಯಾದಾ ಹತ್ಯೆ – ತಹಶೀಲ್ದಾರ್ ಕಚೇರಿಯಲ್ಲೇ ಚಾಕುವಿನಿಂದ ಇರಿದು ವ್ಯಕ್ತಿ ಬರ್ಬರ ಕೊಲೆ