Tag: Chandrasekhar Rao

  • ಹೊಸ ರಾಷ್ಟ್ರೀಯ ಪಕ್ಷ ಘೋಷಿಸಲಿರುವ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್

    ಹೊಸ ರಾಷ್ಟ್ರೀಯ ಪಕ್ಷ ಘೋಷಿಸಲಿರುವ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್

    ನವದೆಹಲಿ: 2024ರ ಲೋಕಸಭೆ ಚುನಾವಣೆ (Lok Sabha Elections) ಸನಿಹವಾಗುತ್ತಿರುವ ಹಿನ್ನೆಲೆ ಹಲವು ರಾಜಕೀಯ ಪಕ್ಷಗಳು ತಂತ್ರಗಾರಿಕೆ ಆರಂಭಿಸಿದ್ದು, ಇದರ ಭಾಗವಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (K Chandrasekhar Rao) ಹೊಸ ರಾಷ್ಟ್ರೀಯ ಪಕ್ಷವನ್ನು ಘೋಷಿಸಲಿದ್ದಾರೆ ಎಂದು ಮೂಲಗಳು ಖಚಿತ ಪಡಿಸಿವೆ.

    ಅಕ್ಟೋಬರ್ 5 ರಂದು ಸಂಜೆ ಏಳು ಗಂಟೆಗೆ ಹೊಸ ಪಕ್ಷದ ಹೆಸರನ್ನು ಘೋಷಣೆ ಮಾಡಲಿದ್ದು, ಡಿಸೆಂಬರ್ 9 ರಂದು ದೆಹಲಿಯಲ್ಲಿ (NewDelhi) ದೊಡ್ಡ ಕಾರ್ಯಕ್ರಮ ಆಯೋಜಿಸುವ ಮೂಲಕ ತಮ್ಮ ರಾಷ್ಟ್ರೀಯ ಅಜೆಂಡಾವನ್ನು ಚಂದ್ರಶೇಖರ್ ರಾವ್ ಜನರಿಗೆ ತಿಳಿಸಲಿದ್ದಾರೆ. ಇದನ್ನೂ ಓದಿ: ಸೇನೆ ಸೇರಿದ ಭಾರತದ ಮೊದಲ ಲಘು ಯುದ್ಧ ಹೆಲಿಕಾಪ್ಟರ್ – ಏನಿದರ ವಿಶೇಷತೆ?

    ಮೂಲಗಳ ಪ್ರಕಾರ ತೆಲಂಗಾಣ ರಾಷ್ಟ್ರ ಸಮಿತಿ (TRS) ಅನ್ನು ಭಾರತೀಯ ರಾಷ್ಟ್ರ ಸಮಿತಿ (BRS) ಆಗಿ ಮರು ನಾಮಕರಣ ಮಾಡಲು ಚಂದ್ರಶೇಖರ್ ರಾವ್ ಪಕ್ಷದ ಇತರೆ ನಾಯಕರಿಂದ ಅನುಮತಿ ಪಡೆದುಕೊಂಡಿದ್ದಾರೆ. ಪಕ್ಷದ ಹೆಸರು ಮಾತ್ರ ಬದಲಾಗಲಿದ್ದು, ಚಿಹ್ನೆ ಹಾಗೂ ಧ್ವಜ ಮುಂದುವರಿಯಲಿದೆ. ಇದನ್ನೂ ಓದಿ : ನಮ್ಮ ಇಲಾಖೆಯಲ್ಲಿರುವ ಕಳ್ಳ ಅಧಿಕಾರಿಗಳಿಗೆ ನಾನೇ ಬಾಸ್‌ ಎಂದಿದ್ದ ಕೃಷಿ ಸಚಿವ ರಾಜೀನಾಮೆ

    ಕೆಸಿಆರ್ ನೇತೃತ್ವದ ಬಿಆರ್‌ಎಸ್ ಪಕ್ಷವು ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ಇತರ ಕೆಲವು ರಾಜ್ಯಗಳ 100 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಇದು ವಿವಿಧ ರಾಜಕೀಯ ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಬಹುದು. ಕೆಲವು ರಾಜಕೀಯ ಪಕ್ಷಗಳು ಬಿಆರ್‌ಎಸ್‍ನೊಂದಿಗೆ ವಿಲೀನಗೊಳ್ಳಬಹುದು ಮತ್ತು ರಾಷ್ಟ್ರ ಮಟ್ಟದಲ್ಲಿ ಬಿಆರ್‌ಎಸ್‍ನೊಂದಿಗೆ ಕೆಲಸ ಮಾಡಲು ಸಿದ್ಧರಿರುವ ಇತರ ನಾಯಕರೂ ಪಕ್ಷ ಸೇರಬಹುದು ಎಂದು ಮೂಲಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • ತೃತೀಯ ರಂಗ ರಚನೆಗೆ ದೇವೇಗೌಡರ ಜೊತೆ ಚಂದ್ರಶೇಖರ್ ರಾವ್ ಚರ್ಚೆ

    ತೃತೀಯ ರಂಗ ರಚನೆಗೆ ದೇವೇಗೌಡರ ಜೊತೆ ಚಂದ್ರಶೇಖರ್ ರಾವ್ ಚರ್ಚೆ

    ಬೆಂಗಳೂರು: ದೇಶದಲ್ಲಿ ತೃತೀಯ ರಂಗದ ಸದ್ದು ಮತ್ತೊಮ್ಮೆ ಪ್ರಾರಂಭವಾಗಿದೆ. ಇದಕ್ಕೆ ವೇದಿಕೆ ಎಂಬಂತೆ ಇಂದು ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು.

    ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿ ಸುಮಾರು ಎರಡೂವರೆ ಗಂಟೆಗಳಿಗೂ ಹೆಚ್ಚು ಕಾಲ ಇಬ್ಬರು ನಾಯಕರು ಚರ್ಚೆ ನಡೆಸಿದರು. ಚರ್ಚೆಯಲ್ಲಿ ತೃತೀಯ ರಂಗದ ಬಗ್ಗೆ ಚರ್ಚೆ ಆಗಿರೋದನ್ನ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಒಪ್ಪಿಕೊಂಡರು. ಇದನ್ನೂ ಓದಿ: ಹಣಕಾಸಿನ ವಿಷಯಕ್ಕೆ ಗೆಳೆಯನನ್ನೆ ಕೊಲೆ ಮಾಡಿಸಿದ ಕಿಡಿಗೇಡಿ 

    ಸಭೆ ಬಳಿಕ ಮಾತನಾಡಿದ ಚಂದ್ರಶೇಖರ್ ರಾವ್, ದೇಶದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಯುವ ಶಕ್ತಿ ದೇಶದಲ್ಲಿದೆ. ದೇಶದಲ್ಲಿ ಹಲವು ಸಂಪನ್ಮೂಲಗಳಿವೆ. ಇವತ್ತಿಗೂ ಹಲವು ಸಮಸ್ಯೆ ಬಗ್ಗೆ ಚರ್ಚೆಯಾಗಿಲ್ಲ. ಈ ಬಗ್ಗೆ ಚರ್ಚೆ ಮಾಡಲಾಗಿದೆ. ದೇಶದಲ್ಲಿ ರೈತರು, ದಲಿತರು, ಆದಿವಾಸಿಗಳು ಕಷ್ಟದಲ್ಲಿ ಇದ್ದಾರೆ. ಭರವಸೆಗಳನ್ನ ಸಾಕಷ್ಟು ಕೊಡಬಹುದು. ಆದರೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ ಅನ್ನೋದು ಮುಖ್ಯ ಎಂದು ಹೆಸರು ಹೇಳದೆ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಿಡಿಕಾರಿದರು.

    ಇವತ್ತು ದೇಶಕ್ಕೆ ಅಪಮಾನ ಮಾಡೋ ಕೆಲಸ ಆಗುತ್ತಿದೆ. ಸರ್ಕಾರ ಮಾಡೋದು ಮುಖ್ಯ ಅಲ್ಲ. ಸಮಸ್ಯೆ ಪರಿಹಾರ ಆಗಿದೆಯಾ ಅನ್ನೋದು ಮುಖ್ಯ. 75 ವರ್ಷಗಳ ಅಮೃತ ಮಹೋತ್ಸವದಲ್ಲಿ ನಾವು ಇದ್ದೇವೆ. ಆದರೂ ಕೂಡ ದೇಶ ನೀರಿನ ಸಮಸ್ಯೆ ಎದುರಿಸುತ್ತಿದೆ. ಅಷ್ಟೇ ಅಲ್ಲ ಅನೇಕ ಸಮಸ್ಯೆಗಳನ್ನ ಎದುರಿಸುತ್ತಿದೆ ಎಂದರು.

    ಕಾಂಗ್ರೆಸ್-ಬಿಜೆಪಿ ಸರ್ಕಾರ ಮಾಡೋದು ಮುಖ್ಯ ಅಲ್ಲ. ಉಜ್ವಲ ಭಾರತ ಆಗೋದು ನಮಗೆ ಮುಖ್ಯ. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡ್ತಿದ್ದೇವೆ. ಮಾಧ್ಯಮಗಳು ಈ ನಿಟ್ಟಿನಲ್ಲಿ ನಮ್ಮ ಜೊತೆ ಸಹಕಾರ ಕೊಡಿ. ಸೆನ್ಸೇಷನಲ್ ಸುದ್ದಿಗಳನ್ನ ಬಿಡಿ. ದೇಶದ ಧನಾತ್ಮಕ ದಾರಿಯಲ್ಲಿ ಹೋಗುವಂತ ನಿಟ್ಟಿನಲ್ಲಿ ಸುದ್ದಿಗಳನ್ನ ಕೊಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ:  ತಲೆಗೆ 25 ಲಕ್ಷ ಬಹುಮಾನ ಘೋಷಣೆಗೆಯಾಗಿದ್ದ ನಕ್ಸಲ್‌ ನಾಯಕ ಶವವಾಗಿ ಪತ್ತೆ 

    ದೇಶದಲ್ಲಿ ಇಂದು ಯಾವ ವರ್ಗಗಳು ಸಂತೋಷವಾಗಿ ಇಲ್ಲ. ಡಾಲರ್ ಬೆಲೆ ಇವತ್ತು ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟು ಕುಸಿದಿದೆ. ಇದೆಲ್ಲವೂ ಸರಿ ಹೋಗಬೇಕು. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡ್ತಿದ್ದೇವೆ. ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಭಾರತ ಬದಲಾವಣೆ ಖಂಡಿತ ಆಗಲಿದ್ದು, 2-3 ತಿಂಗಳಲ್ಲಿ ನಿಮಗೆ ಒಂದು ಉತ್ತಮ ಸುದ್ದಿಕೊಡ್ತೀವಿ ಎಂದು ತಿಳಿಸಿದರು.

  • ನಿರುದ್ಯೋಗ ತುರ್ತು ಪರಿಸ್ಥಿತಿಗೆ ಕರೆ ನೀಡಿ – ಸಿಎಂ ಕೆಸಿಆರ್‌ಗೆ ಕಾಂಗ್ರೆಸ್ ಒತ್ತಾಯ

    ನಿರುದ್ಯೋಗ ತುರ್ತು ಪರಿಸ್ಥಿತಿಗೆ ಕರೆ ನೀಡಿ – ಸಿಎಂ ಕೆಸಿಆರ್‌ಗೆ ಕಾಂಗ್ರೆಸ್ ಒತ್ತಾಯ

    ಹೈದರಾಬಾದ್: ಕಾಂಗ್ರೆಸ್ ಪಕ್ಷವು ತೆಲಂಗಾಣದಲ್ಲಿ ನಿರುದ್ಯೋಗ ತುರ್ತು ಪರಿಸ್ಥಿತಿಗೆ ಕರೆ ನೀಡಿದ್ದು, ರಾಜ್ಯದ ನಿರುದ್ಯೋಗ ಪರಿಸ್ಥಿತಿಯಿಂದ 40 ಲಕ್ಷ ಜನರು ಬಳಲುತ್ತಿದ್ದಾರೆ ಎಂದು ತಿಳಿಸಿದೆ.

    ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ವಕ್ತಾರ ಹಾಗೂ ತೆಲಂಗಾಣ ಕಾಂಗ್ರೆಸ್ ಹಿರಿಯ ನಾಯಕ ಡಾ.ದಾಸೋಜು ಶ್ರವಣ್ ಕುಮಾರ್ ಮಾತನಾಡಿ, ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ನಿರುದ್ಯೋಗ ಪರಿಸ್ಥಿತಿಯನ್ನು ಪರಿಹರಿಸಲು ಮತ್ತು ನಿವಾರಿಸಲು ಸ್ಪಷ್ಟವಾದ ಉಪಕ್ರಮಗಳನ್ನು ಅನ್ವೇಷಿಸಬೇಕು ಎಂದಿದ್ದಾರೆ.

    ರಾಜ್ಯದ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ನಿರ್ದಿಷ್ಟ ಕಾರ್ಯ ನೀತಿಗಳೊಂದಿಗೆ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸಲು ರಾಷ್ಟ್ರೀಯ ಮಟ್ಟದ ಕೈಗಾರಿಕೋದ್ಯಮಿಗಳು, ಶಿಕ್ಷಣ ತಜ್ಞರು, ಬುದ್ಧಿಜೀವಿಗಳು, ತಂತ್ರಜ್ಞರು ಮತ್ತು ನೀತಿ ನಿರೂಪಕರನ್ನು ಒಳಗೊಂಡ ಉನ್ನತ ಮಟ್ಟದ ಕಾರ್ಯಪಡೆಯನ್ನು ಸಂಘಟಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ಪಠಾಣ್ ಚಿತ್ರಕ್ಕಾಗಿ ಬಿಕಿನಿ ತೊಟ್ಟ ದೀಪಿಕಾ ಪಡುಕೋಣೆ: ಫೋಟೋ ಲೀಕ್

    ಖಾಸಗಿ ವಲಯದಲ್ಲೂ ಶೇ.95ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಮೀಸಲಿಡುವಂತೆ ಶಾಸನಬದ್ಧ ಕಾಯಿದೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯಿಂದ 40 ಲಕ್ಷ ಜನರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ : ಸೂಟ್‍ಕೇಸ್‍ನಲ್ಲಿ 40 ಕೆಜಿ ಹಸಿರು ಬಟಾಣಿ ತುಂಬಿ ಸಾಗಿಸಿದ ಐಪಿಎಸ್ ಅಧಿಕಾರಿ

  • ಕತ್ತೆ ಕದ್ದ ಆರೋಪದಡಿ ತೆಲಂಗಾಣ ಕಾಂಗ್ರೆಸ್ ಮುಖಂಡನ ಬಂಧನ

    ಕತ್ತೆ ಕದ್ದ ಆರೋಪದಡಿ ತೆಲಂಗಾಣ ಕಾಂಗ್ರೆಸ್ ಮುಖಂಡನ ಬಂಧನ

    ಹೈದರಾಬಾದ್: ತೆಲಂಗಾಣದ ಕರೀಂನಗರದಲ್ಲಿ ಕತ್ತೆ ಕದ್ದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿದ್ದಾರೆ. ಕುತೂಹಲಕಾರಿಯಾಗಿ ವಿಚಾರವೆಂದರೆ ಇತ್ತೀಚೆಗೆ ಕೆಸಿಆರ್ ವಿರುದ್ಧದ ನಡೆಸಿದ ಸಣ್ಣ ಪ್ರತಿಭಟನೆಯಲ್ಲಿ ಈ ಕತ್ತೆಯನ್ನೇ ಬಳಸಲಾಗಿದೆ ಎಂದು ಆರೋಪಿಸಲಾಗಿದೆ.

    ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಜನ್ಮದಿನದಂದು ಕತ್ತೆ ಜೊತೆ ಪ್ರತಿಭಟನೆ ನಡೆಸಿದ ತೆಲಂಗಾಣ ಎನ್‍ಎಸ್‍ಯುಐ ಅಧ್ಯಕ್ಷ ವೆಂಕಟ್ ಬಲ್ಮೂರ್ ಅವರನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಈ ಸಂಬಂಧ ಶುಕ್ರವಾರ ಕರೀಂನಗರದ ಜಮ್ಮುಕುಂಟಾ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡನ ವಿರುದ್ಧ ದೂರು ದಾಖಲಾಗಿದ್ದು, ಇನ್ನೂ 6 ಮಂದಿಯ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಅವರೆಲ್ಲರೂ ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಕುಟುಂಬ ಮಣಿಪುರವನ್ನು ಎಟಿಎಂ ಆಗಿ ಬಳಸಿದೆ: ಸ್ಮೃತಿ ಇರಾನಿ

    ಇದೀಗ ಪೊಲೀಸರು ಕಾನೂನುಬಾಹಿರ ಸಭೆ, ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ, ಕಳ್ಳತನ ಮತ್ತು ಪ್ರಾಣಿಗಳ ಮೇಲೆ ಕ್ರೌರ್ಯ ತೋರಿದ ಆರೋಪದಡಿ 7 ಮಂದಿಯ ಮೇಲೆ . ಭಾರತೀಯ ದಂಡ ಸಂಹಿತೆ (IPಅ) ಸೆಕ್ಷನ್ 143, 153, 504, 379 ರ ಅಡಿಯಲ್ಲಿ 149, ಐಟಿ ಕಾಯ್ದೆಯ ಸೆಕ್ಷನ್ 67 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ, 1960 ರ ಸೆಕ್ಷನ್ 11 ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ.

    ರಾಜ್ಯದಲ್ಲಿ ಸರ್ಕಾರಿ ಉದ್ಯೋಗಗಳ ಕೊರತೆಯ ವಿರುದ್ಧ ವೆಂಕಟ್ ಬಲ್ಮೂರ್ ಮತ್ತು ಇತರ ಆರೋಪಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕತ್ತೆಯ ಮೇಲೆ ಕೆಸಿಆರ್ ಫೋಟೋವನ್ನು ಹಾಕಿ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸಿ – ಅಂಜುಮನ್ ಸಂಸ್ಥೆಯಿಂದ ಮನವಿ

  • ತೆಲಂಗಾಣದಲ್ಲಿ ಮೇ 1ರವರೆಗೂ ನೈಟ್ ಕರ್ಫ್ಯೂ ಘೋಷಿಸಿದ ಸರ್ಕಾರ

    ತೆಲಂಗಾಣದಲ್ಲಿ ಮೇ 1ರವರೆಗೂ ನೈಟ್ ಕರ್ಫ್ಯೂ ಘೋಷಿಸಿದ ಸರ್ಕಾರ

    ಹೈದರಾಬಾದ್: ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆ ಇಂದಿನಿಂದ ಮೇ 1ರವರೆಗೂ ತೆಲಂಗಾಣ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿದೆ.

    ತೆಲಂಗಾಣ ಸರ್ಕಾರದ ಆದೇಶದಂತೆ ರಾತ್ರಿ 9 ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಕೊರೊನಾ ವೈರಸ್ ನಿಯಂತ್ರಿಸಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.

    ಈ ಹಿಂದೆ ತೆಲಂಗಾಣ ಹೈಕೋರ್ಟ್ ಕೂಡ ಕೋವಿಡ್-19 ಸೋಂಕನ್ನು ತಡೆಗಟ್ಟಲು ರಾತ್ರಿ ಹಾಗೂ ವಾರಾಂತ್ಯದಲ್ಲಿ ನೈಟ್ ಕರ್ಫ್ಯೂ ವಿಧಿಸುವಂತೆ ಸರ್ಕಾರಕ್ಕೆ ತಿಳಿಸಿತ್ತು. ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್‍ಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.