Tag: Chandrashekar Kambara

  • ಕಂಬಾರ ಪತ್ನಿ ನಿಧನ- ಕಂಬನಿ ಮಿಡಿದ ಬೊಮ್ಮಾಯಿ

    ಕಂಬಾರ ಪತ್ನಿ ನಿಧನ- ಕಂಬನಿ ಮಿಡಿದ ಬೊಮ್ಮಾಯಿ

    ಬೆಂಗಳೂರು: ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರರ ಪತ್ನಿ ಸತ್ಯಭಾಮ ಚಂದ್ರಶೇಖರ್ ಕಂಬಾರರವರು ಇಂದು ನಿಧನ ಹೊಂದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ  ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರ ಧರ್ಮ ಪತ್ನಿ ಶ್ರೀಮತಿ ಸತ್ಯಭಾಮ ಕಂಬಾರ ಅವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಸತ್ಯಭಾಮ ಅವರು ಚಂದ್ರಶೇಖರ ಕಂಬಾರ ಅವರ ಪ್ರೇರಣಾ ಶಕ್ತಿಯಾಗಿದ್ದು, ಅವರಿಗೆ ಅಪಾರವಾದ ಓದಿನ ಹವ್ಯಾಸವಿತ್ತು. ಹೀಗಾಗಿ ಅವರು ಸಾಹಿತ್ಯ ಕ್ಷೇತ್ರದಲ್ಲಿನ ಬೆಳವಣಿಗೆ ಕುರಿತು ಆಸಕ್ತಿ ಹೊಂದಿದ್ದರು. ಅವರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕಂಬಾರ ಕುಟುಂಬದ ಸದಸ್ಯರಿಗೆ ನೀಡಲಿ ಅಂತ ಕೋರುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.

    ಚಂದ್ರಶೇಖರ್ ಕಂಬಾರ್ ಪತ್ನಿ ಸತ್ಯಭಾಮ (76) ಇಂದು ಬೆಳಿಗ್ಗೆ 6:15ಕ್ಕೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯಭಾಮ ಕಳೆದ ಜನವರಿ 3 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

  • ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿಯ ದೃಷ್ಟಿ ತೆಗೆದ ಮಂಜಮ್ಮ ಜೋಗತಿ!

    ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿಯ ದೃಷ್ಟಿ ತೆಗೆದ ಮಂಜಮ್ಮ ಜೋಗತಿ!

    ನವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕರ್ನಾಟಕದ ಹಲವರಿಗೆ ಮಂಗಳವಾರ 2021ನೇ ಸಾಲಿನ ಪದ್ಮಶ್ರೀ, ಪದ್ಮವಿಭೂಷಣ, ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೋಗತಿ ನೃತ್ಯದ ಮೂಲಕ ಮನೆಮಾತಾಗಿರುವ ಮಂಜಮ್ಮ ಜೋಗತಿ ಅವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ದೃಷ್ಟಿ ತೆಗೆದು ಗಮನ ಸೆಳೆದರು.

    ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರು ದೃಷ್ಟಿ ತೆಗೆಯುವಾಗ ರಾಷ್ಟ್ರಪತಿಗಳು ಸಂತೋಷದಿಂದ ನಗೆ ಬೀರಿದರು. ನಂತರ ಮಂಜಮ್ಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದನೆ ತಿಳಿಸಿದರು. ಪದ್ಮಶ್ರೀ ಪ್ರಶಸ್ತಿ ಪಡೆದ ಮೊದಲ ತೃತೀಯಲಿಂಗಿ ಎಂಬ ಹೆಗ್ಗಳಿಕೆಗೂ ಮಂಜಮ್ಮ ಜೋಗತಿ ಪಾತ್ರರಾಗಿದ್ದಾರೆ. ಇದನ್ನೂ ಓದಿ: ನ.11 ಕ್ಕೆ ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆಗೆ ಸರ್ಕಾರ ಆದೇಶ

    2021ರ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ ದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‍ನಲ್ಲಿ ನಡೆಯಿತು. ಕರ್ನಾಟಕದ ಖ್ಯಾತ ವೈದ್ಯ ಡಾ. ಬಿ.ಎಂ.ಹೆಗ್ಡೆ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಗಾಯಕ ದಿವಂಗತ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರ ಪದ್ಮವಿಭೂಷಣ ನೀಡಲಾಯಿತು. ಪ್ರಶಸ್ತಿಯನ್ನು ಎಸ್‌ಪಿಬಿ ಪರವಾಗಿ ಪುತ್ರ ಚರಣ್‌ ಸ್ವೀಕರಿಸಿದರು. ಇದನ್ನೂ ಓದಿ: ಹಾಟ್ ಬೆಡಗಿ ಪೂನಂ ಪಾಂಡೆ ಆಸ್ಪತ್ರೆಗೆ ದಾಖಲು

    ಸಾಹಿತಿ ಚಂದ್ರಶೇಖರ ಕಂಬಾರರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಹಿತ್ಯ ಮತ್ತು ಸಮಾಜ ಸೇವೆಗಾಗಿ ಎಲ್‌.ಎಸ್.ಕಶ್ಯಪ್ ಅವರಿಗೂ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿಗಳು ಪ್ರದಾನ ಮಾಡಿದರು.

  • ಗಮನಿಸಿ, ಮತದಾನದ ಅವಧಿ 1 ಗಂಟೆ ವಿಸ್ತರಣೆ

    ಗಮನಿಸಿ, ಮತದಾನದ ಅವಧಿ 1 ಗಂಟೆ ವಿಸ್ತರಣೆ

    ಬೆಂಗಳೂರು: ಮೇ 12 ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಸಂಜೆ 6 ಘಂಟೆವರೆಗೂ ಮತದಾನಕ್ಕೆ ಅವಕಾಶ ಇರಲಿದೆ ಎಂದು ಸುದ್ದಿಗೋಷ್ಠಿ ನಡೆಸಿದ ರಾಜ್ಯ ಚುನಾವಣಾ ಆಯುಕ್ತ ಸಂಜೀವ್‍ಕುಮಾರ್ ಹೇಳಿದ್ದಾರೆ.

    ಬೆಳಗ್ಗೆ 7 ಘಂಟೆಯಿಂದ ಸಂಜೆ 6 ಘಂಟೆವರೆಗೂ ಮತದಾನಕ್ಕೆ ಅವಕಾಶ ಇರಲಿದೆ. ಈ ಹಿಂದಿನ ಚುನಾವಣೆಗಳಲ್ಲಿ ಸಂಜೆ 5 ಘಂಟೆಗೆ ಮತದಾನ ಪ್ರಕ್ರಿಯೆ ಮುಕ್ತಾಯವಾಗುತಿತ್ತು ಎಂದು ತಿಳಿಸಿದರು.

    ಮತದಾನದ ಜಾಗೃತಿಗೆ ಸಾಹಿತಿ ಚಂದ್ರಶೇಖರ ಕಂಬಾರ, ನಟ ಪುನೀತ್, ನಟಿ ಪ್ರಣಿತ ಅವರನ್ನ ಚುನಾವಣಾ ರಾಯಭಾರಿಯಾಗಿ ಆಯ್ಕೆ ಮಾಡಿರೋದಾಗಿ ತಿಳಿಸಿದರು.

    ಇದುವರೆಗೆ 155 ನಾಮಪತ್ರ ಸಲ್ಲಿಕೆಯಾಗಿದೆ. ರಾಜ್ಯದ ವಿವಿಧೆಡೆ 34 ಕೋಟಿ ರೂ. ಹಣವನ್ನು ಸೀಜ್ ಮಾಡಲಾಗಿದೆ. ಇವತ್ತು ದೇವನಹಳ್ಳಿಯಲ್ಲಿ 52 ಲಕ್ಷ, ಹೂವಿನಹಡಗಲಿ ಬಳಿ 10 ಲಕ್ಷ ಮೌಲ್ಯದ ಬಂಗಾರ ಹಾಗೂ 1.58 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ ಎಂದು ವಿವರಿಸಿದ್ದಾರೆ.

  • ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ ಆಯ್ಕೆ

    ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ ಆಯ್ಕೆ

    ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಚಂದ್ರಶೇಖರ ಕಂಬಾರ ಅವರು ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಕಂಬಾರ ಅವರು ಆಯ್ಕೆಯಾದರು.

    ಚಲಾವಣೆಯಾದ ಒಟ್ಟು 89 ಮತಗಳಲ್ಲಿ ಕಂಬಾರರು 56 ಮತ ಗಳಿಸಿದರೆ, ಒರಿಯಾ ಸಾಹಿತಿ ಪ್ರತಿಭಾ ರಾಯ್ ಅವರಿಗೆ 29 ಮತ ಹಾಗೂ ಮಹಾರಾಷ್ಟ್ರದ ಸಾಹಿತಿ ಬಾಲಚಂದ್ರ ನೆಮಾಡೆ ಅವರಿಗೆ 4 ಮತಗಳು ಬಿದ್ದವು.

    ಉಪಾಧ್ಯಕ್ಷರಾಗಿ ಮಾಧವ ಕೌಶಿಕ್ ಆಯ್ಕೆಯಾಗಿದ್ದಾರೆ. ಚುನಾಯಿತರ ಆಡಳಿತ ಅವಧಿ ಐದು ವರ್ಷಗಳಾಗಿರುತ್ತದೆ.